Tag: mulki

  • ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲ ರಥೋತ್ಸವದ ವೇಳೆ ತೇರು ಮುರಿದು ಅವಘಡ

    ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲ ರಥೋತ್ಸವದ ವೇಳೆ ತೇರು ಮುರಿದು ಅವಘಡ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಸಮೀಪದ ಪ್ರಸಿದ್ಧ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲ (Bappanadu Sri Durga Parameshwari Temple) ರಥೋತ್ಸವ ವೇಳೆ ತೇರು ಮುರಿದು ಅವಘಡ ಸಂಭವಿಸಿದೆ.

    ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಉತ್ಸವದ ಅಂಗವಾಗಿ ನಡೆಯುತ್ತಿದ್ದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ತೇರಿನ (Chariot) ಮೇಲ್ಬಾಗ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರೂ ಅದೃಷ್ಟವಶಾತ್ ಪಾರಾಗಿದ್ದಾರೆ. ಜೊತೆಗೆ ಸಾರ್ವಜನಿಕರಿಗೂ ಯಾವುದೇ ಗಂಭೀರ ಅನಾಹುತಗಳಾಗಿಲ್ಲ. ಇದನ್ನೂ ಓದಿ: ಜನಿವಾರ ಹಾಕಿದ್ದಕ್ಕೆ ಸಿಇಟಿ ಪರೀಕ್ಷೆಗೆ ನೋ ಎಂಟ್ರಿ – ಬೀದರ್ ವಿದ್ಯಾರ್ಥಿಗೆ ನ್ಯಾಯ ಕೊಡಿಸಲು ಕೆಇಎ ಸಿದ್ಧತೆ

    ತಡರಾತ್ರಿ ರಾತ್ರಿ 1:45ರ ಸುಮಾರಿಗೆ ಘಟನೆ ಸಂಭವಿಸಿದ್ದು, ಇದರಿಂದ ಭಕ್ತ ಸಮೂಹದಲ್ಲೂ ಆತಂಕ ಸೃಷ್ಟಿಯಾಗಿದೆ. ಬಳಿಕ ಚಂದ್ರಮಂಡಲ ತೇರಿನಲ್ಲಿ ದೇವರ ಉತ್ಸವ ಮುಂದುವರಿಯಿತು. ಇದನ್ನೂ ಓದಿ: ರಾಹುಲ್ಲನನ್ನ ಬಿಟ್ಟು ಬದುಕಲ್ಲ – ಭಾವಿ ಅಳಿಯನೊಂದಿಗೆ ಒಟ್ಟಿಗೆ ಜೀವನ ನಡೆಲು ಮುಂದಾದ ಮಹಿಳೆ

  • Mangaluru| ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ

    Mangaluru| ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣ- ಇಬ್ಬರ ಬಂಧನ

    ಮಂಗಳೂರು: ಪತ್ನಿ, ಮಗುವನ್ನು ಕೊಂದು ಪತಿ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಇಬ್ಬರನ್ನು ಮುಲ್ಕಿ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಮೃತ ಕಾರ್ತಿಕ್ ತಾಯಿ ಶ್ಯಾಮಲಾ ಭಟ್, ಸಹೋದರಿ ಕಣ್ಮಣಿ ಬಂಧಿತರು. ಆತ್ಮಹತ್ಯೆಗೆ ಮೊದಲು ಕೌಟುಂಬಿಕ ಕಲಹದ ಬಗ್ಗೆ ಕಾರ್ತಿಕ್ ಭಟ್ ಡೆತ್ ನೋಟ್ ಬರೆದಿದ್ದ. ಈ ಹಿನ್ನೆಲೆಯಲ್ಲಿ ಕಾರ್ತಿಕ್ ಕುಟುಂಬದ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.

    ಡೆತ್ ನೋಟ್‌ನಲ್ಲಿ ಏನಿತ್ತು?
    ನಮ್ಮ ಸಂಸಾರ ಹಾಳು ಮಾಡಿದ್ದೇ ತಂದೆ, ತಾಯಿ, ಸಹೋದರಿ. ಇಂತಹ ತಂದೆ, ತಾಯಿ ಯಾರಿಗೂ ಸಿಗಬಾರದು. ನಮ್ಮ ಅಂತ್ಯಸಂಸ್ಕಾರವನ್ನು ಅತ್ತೆ ಮಾವ ನಡೆಸಿಕೊಡಬೇಕು ಎಂದು ಡೆತ್ ನೋಟ್‌ನಲ್ಲಿ ಮೃತ ಕಾರ್ತಿಕ್ ಬರೆದುಕೊಂಡಿದ್ದ.

    ಪ್ರಿಯಾಂಕ ಪೋಷಕರು ಕಾರ್ತಿಕ್ ತಂದೆ ತಾಯಿ ಹಾಗೂ ಸಹೋದರಿ ವಿರುದ್ಧ ದೂರು ನೀಡಿದ್ದರು. ಕಾರ್ತಿಕ್ ಕೊಲೆ ಮಾಡುದಕ್ಕೆ ಸಾಧ್ಯವೇ ಇಲ್ಲ ಎಂದು ಅನುಮಾನ ವ್ಯಕ್ತಪಡಿಸಿದ್ದರು. ಅತ್ತೆ ಮಾವ ಕಿರುಕುಳದಿಂದಲೇ ಈ ದುರಂತ ನಡೆದಿದೆ. ಸೂಕ್ತ ತನಿಖೆ ನಡೆಸುವಂತೆ ಮೃತ ಪ್ರಿಯಾಂಕಾ ಪೋಷಕರು ಆಗ್ರಹಿಸಿದ್ದಾರೆ.

    ಪ್ರಕರಣ ಏನು?
    ಸಹಕಾರಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ (32) ತನ್ನ ಪತ್ನಿ ಪ್ರಿಯಾಂಕ (28) ಹಾಗೂ ಮಗು ಹೃದಯ್‌ನನ್ನು (4) ಹತ್ಯೆಗೈದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದ. ಪತ್ನಿಗೆ ಅತ್ತೆ ಮಾವನೊಂದಿಗೆ ಮನಸ್ತಾಪ ಇದ್ದ ಹಿನ್ನೆಲೆ ಕಾರ್ತಿಕ್ ಕುಟುಂಬ ಮನೆಯ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್‌ನಲ್ಲಿ ಹೋಟೆಲ್ ನಡೆಸಿಕೊಂಡಿದ್ದು, ಎಂದಿನಂತೆಯೇ ನ.9ರಂದು ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮಗುವನ್ನು ಕಾರ್ತಿಕ್ ಹತ್ಯೆ ಮಾಡಿದ್ದ. ಹತ್ಯೆಯ ಬಳಿಕ ಮಧ್ಯಾಹ್ನದ ವೇಳೆಗೆ ರೈಲಿಗೆ ತಲೆ ಕೊಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ.

  • Mangaluru| ಪತ್ನಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

    Mangaluru| ಪತ್ನಿ, ಮಗುವನ್ನು ಕೊಂದು ತಾನೂ ಆತ್ಮಹತ್ಯೆಗೆ ಶರಣಾದ ಪತಿ

    – ಸೊಸೆ, ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ಅತ್ತೆ – ಮಾವನಿಗೆ ಗೊತ್ತೇ ಇಲ್ಲ

    ಮಂಗಳೂರು: ಪತ್ನಿ ಹಾಗೂ ಮಗುವನ್ನು ಕೊಂದು ಪತಿ ತಾನೂ ಆತ್ಮಹತ್ಯೆಗೆ ಶರಣಾದ ಘಟನೆ ಮಂಗಳೂರು (Mangaluru) ಹೊರವಲಯದ ಪಕ್ಷಿಕೆರೆಯಲ್ಲಿ (Pakshikere) ನಡೆದಿದೆ.

    ಸಹಕಾರಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಕಾರ್ತಿಕ್ ಭಟ್ (32) ತನ್ನ ಪತ್ನಿ ಪ್ರಿಯಾಂಕ (28) ಹಾಗೂ ಮಗು ಹೃದಯ್‌ನನ್ನು (4) ಹತ್ಯೆಗೈದು ಬಳಿಕ ತಾನೂ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ. ಪತ್ನಿಗೆ ಅತ್ತೆ ಮಾವನೊಂದಿಗೆ ಮನಸ್ತಾಪ ಇದ್ದ ಹಿನ್ನೆಲೆ ಕಾರ್ತಿಕ್ ಕುಟುಂಬ ಮನೆಯ ಕೋಣೆಯಲ್ಲಿ ಪ್ರತ್ಯೇಕವಾಗಿ ವಾಸಿಸುತ್ತಿದ್ದರು. ಕಾರ್ತಿಕ್ ತಂದೆ ಜನಾರ್ದನ ಭಟ್ ಪಕ್ಷಿಕೆರೆ ಜಂಕ್ಷನ್‌ನಲ್ಲಿ ಹೋಟೆಲ್ ನಡೆಸಿಕೊಂಡಿದ್ದು, ಎಂದಿನಂತೆಯೇ ಶುಕ್ರವಾರವೂ ಹೋಟೆಲ್‌ಗೆ ತೆರಳಿದ್ದರು. ಈ ವೇಳೆ ಹೆಂಡತಿ ಮಗುವನ್ನು ಕಾರ್ತಿಕ್ ಹತ್ಯೆ ಮಾಡಿದ್ದ. ಹತ್ಯೆಯ ಬಳಿಕ ಮಧ್ಯಾಹ್ನದ ವೇಳೆಗೆ ರೈಲಿಗೆ ತಲೆ ಕೊಟ್ಟು ತಾನೂ ಆತ್ಮಹತ್ಯೆಗೆ ಶರಣಾಗಿದ್ದಾನೆ. ಇದನ್ನೂ ಓದಿ: ನಾಯಿ ಮರಿಯ ಶಬ್ದ ಕೇಳಲಾಗದೇ ಮೀರತ್‌ನಲ್ಲಿ 5 ನಾಯಿ ಮರಿಗಳಿಗೆ ಬೆಂಕಿ ಹಚ್ಚಿದ ಮಹಿಳೆಯರು: ಕೇಸ್ ದಾಖಲು

    ಮನಸ್ತಾಪದ ಹಿನ್ನೆಲೆ ಶುಕ್ರವಾರ ರಾತ್ರಿಯೂ ಮಗ, ಸೊಸೆ ಹಾಗೂ ಮೊಮ್ಮಗ ಕೋಣೆಯಲ್ಲಿಯೇ ಇದ್ದಾರೆಂದು ಮಾವ ಜನಾರ್ದನ ಭಟ್ ಭಾವಿಸಿ ಶನಿವಾರ ಕೂಡ ಎಂದಿನಂತೆಯೇ ಹೋಟೆಲ್‌ಗೆ ತೆರಳಿದ್ದರು. ಇತ್ತ ಕಾರ್ತಿಕ್ ಮೃತದೇಹ ಪತ್ತೆಯಾದ ಕಾರಣ ಆತನ ವಿಳಾಸ ಹುಡುಕಿಕೊಂಡು ಪೊಲೀಸರು ಮನೆಗೆ ಬಂದಿದ್ದಾರೆ. ಕೋಣೆಯ ಬಾಗಿಲು ತೆರೆದು ನೋಡಿದಾಗ ಪತ್ನಿ ಹಾಗೂ ಮಗುವಿನ ಮೃತದೇಹ ಪತ್ತೆಯಾಗಿದೆ. ಕಾರ್ತಿಕ್ ಪತ್ನಿ ಪ್ರಿಯಾಂಕ ಶಿವಮೊಗ್ಗ ಮೂಲದವರಾಗಿದ್ದರು. ಮಾತುಕತೆ ಇಲ್ಲದ ಕಾರಣ ಸೊಸೆ ಹಾಗೂ ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ಗೊತ್ತೇ ಆಗಿರಲಿಲ್ಲ. ಇದನ್ನೂ ಓದಿ: ಯೋಗ ಶಿಕ್ಷಕಿ ಜೀವಂತ ಸಮಾಧಿ ಕೇಸ್‌ | ಮರ್ಡರ್‌ ಮಾಡೋಕೆ 4 ಲಕ್ಷ ಸುಪಾರಿ, 1 ಲಕ್ಷ ಅಡ್ವಾನ್ಸ್ – ರಹಸ್ಯ ಸ್ಫೋಟ

    ಮಂಗಳೂರು ನಗರ ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾರ್ತಿಕ್ ತನ್ನ ಹೆಂಡತಿ ಹಾಗೂ ಮಗುವನ್ನು ಗ್ಲಾಸ್ ಪೀಸ್‌ನಿಂದ ಚುಚ್ಚಿ ಹತ್ಯೆ ಮಾಡಿದ್ದಾನೆ. ಶುಕ್ರವಾರ ಮಧ್ಯಾಹ್ನ ಕಾರ್ತಿಕ್ ಮೃತದೇಹ ಪತ್ತೆಯಾಗಿತ್ತು. ಇಂದು ಮಧ್ಯಾಹ್ನದ ವೇಳೆಗೆ ಕಾರ್ತಿಕ್ ಮನೆಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕಾರ್ತಿಕ್ ಕುಟುಂಬಕ್ಕೆ ಮೂರು ವರ್ಷದಿಂದ ತಂದೆ-ತಾಯಿ ಜೊತೆ ಮಾತುಕತೆ ಇರಲಿಲ್ಲ. ಶುಕ್ರವಾರ ರಾತ್ರಿ ಕಾರ್ತಿಕ್ ಕುಟುಂಬ ಹೊರಗೆ ಹೋಗಿರಬಹುದು ಎಂದು ಕಾರ್ತಿಕ್ ತಂದೆ ಭಾವಿಸಿದ್ದರು. ಇಂದು ಮಧ್ಯಾಹ್ನವೇ ಅವರಿಗೆ ವಿಷಯ ಗೊತ್ತಾಗಿದೆ ಎಂದರು. ಇದನ್ನೂ ಓದಿ: ಈ ಸರ್ಕಾರ ತೆಗೆಯೋವರೆಗೆ ಮನೆಯಲ್ಲಿ ಮಲಗಲ್ಲ – ಗುಡುಗಿದ ಗೌಡರು

    ಕಾರ್ತಿಕ್ ಇತ್ತೀಚಿಗೆ ಆರ್ಥಿಕ ಸಮಸ್ಯೆಯಿಂದ ಇರೋದು ಕೂಡಾ ಗೊತ್ತಾಗಿದೆ. ವಾಷ್‌ರೂಂನ ಕಿಟಕಿ ಗ್ಲಾಸ್ ಒಡೆದು ಪತ್ನಿ, ಮಗುವಿನ ಹತ್ಯೆ ಮಾಡಿದ್ದಾನೆ. ಇಬ್ಬರ ದೇಹದ ಬೇರೆ ಬೇರೆ ಭಾಗದಲ್ಲಿ ಗಾಯಗಳಾಗಿವೆ. ಕೋಣೆಯಲ್ಲೇ ಫ್ಯಾನ್‌ಗೆ ನೇಣುಹಾಕಲು ಯತ್ನಿಸಿದ್ದಾನೆ. ಬಳಿಕ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕಾರ್ತಿಕ್ ಕೃತ್ಯ ಎಸಗುವ ಮುನ್ನ ಸುಧೀರ್ಘ ಡೆತ್‌ನೋಟ್ ಬರೆದಿದ್ದಾನೆ. ತನ್ನ ಅಂತ್ಯಸಂಸ್ಕಾರ, ಆಸ್ತಿ ಯಾರ ಪಾಲಾಗಬೇಕೆಂದು ಡೆತ್ ನೋಟ್‌ನಲ್ಲಿದೆ. ತನ್ನ ತಂದೆ ತಾಯಿ ಅಂತ್ಯಸಂಸ್ಕಾರ ಮಾಡಬಾರದು ಎಂಬುವುದು ಉಲ್ಲೇಖಿಸಿದ್ದಾನೆ. ತಮ್ಮ ಸಾವಿಗೆ ಯಾರೂ ಕಾರಣ ಅಲ್ಲ ಎಂದು ಡೆತ್‌ನೋಟ್ ನಲ್ಲಿ ಬರೆದಿದ್ದಾನೆ. ಕಾರ್ತಿಕ್ ಪತ್ನಿ ಪ್ರಿಯಾಂಕ ಶಿವಮೊಗ್ಗ ಮೂಲದವರು. ಆಕೆಯ ಹೆತ್ತವರು ಬಂದ ಬಳಿಕ ಶವ ಪೋಸ್ಟ್ಮಾರ್ಟಂಗೆ ಕಳುಹಿಸಲು ವ್ಯವಸ್ಥೆ ಮಾಡಲಾಗುತ್ತದೆ ಎಂದು ಕಮೀಷನರ್ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಶಿವಮೊಗ್ಗ | ದೇವರ ಹುಂಡಿ ಹಣಕ್ಕೂ ಖನ್ನಾ ಹಾಕಿದ್ರಾ ಅಧಿಕಾರಿಗಳು?

  • ಕೂಲಿಯ ಹಣ ನೀಡದ ವೃದ್ಧೆಯನ್ನು ಬರ್ಬವಾಗಿ ಕೊಲೆಗೈದ

    ಕೂಲಿಯ ಹಣ ನೀಡದ ವೃದ್ಧೆಯನ್ನು ಬರ್ಬವಾಗಿ ಕೊಲೆಗೈದ

    ಮಂಗಳೂರು: ಕ್ಷುಲ್ಲಕ ಕಾರಣಕ್ಕೂ ದುಷ್ಕರ್ಮಿಗಳು ಹತ್ಯೆ ಎನ್ನುವುದಕ್ಕೆ ಮಂಗಳೂರಿನಲ್ಲಿ ನಡೆದ ಕೊಲೆಯೊಂದು ಸಾಕ್ಷಿಯಾಗಿದೆ. ಕೂಲಿಯ ಹಣ ನೀಡದ ವೃದ್ಧೆಯನ್ನು ವ್ಯಕ್ತಿಯೊಬ್ಬ ಬರ್ಬವಾಗಿ ಕೊಲೆಗೈದಿದ್ದಾನೆ.

    ಮಂಗಳೂರಿನ ಮೂಲ್ಕಿ ಸಮೀಪದ ಪರಂಕಿಲಯ ನಿವಾಸಿ ಶಾರದಾ ಶೆಟ್ಟಿ (75) ಕೊಲೆಯಾದ ವೃದ್ಧೆ. ಅದೇ ಗ್ರಾಮದ ನಿವಾಸಿ ತುಕರಾಮ ಶೆಟ್ಟಿ (54) ಕೊಲೆ ಮಾಡಿದ ಆರೋಪಿ. ತುಕರಾಮ ಶೆಟ್ಟಿ ಶನಿವಾರ ತಡರಾತ್ರಿಯೇ ಕೊಲೆಗೈದಿದ್ದ.

    ಶಾರದಾ ಶೆಟ್ಟಿ ಅವರು ಭಾನುವಾರ ಬೆಳಗ್ಗೆ ತಮ್ಮ ಮನೆಯ ಅಂಗಳದಲ್ಲಿ ಬರ್ಬರವಾಗಿ ಹತ್ಯೆಗೀಡಾಗಿ ರಕ್ತದ ಮಡುವಿನಲ್ಲಿ ಬಿದ್ದಿದ್ದರು. ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದರು. ಬಳಿಕ ಆರೋಪಿಯ ಬಂಧನಕ್ಕೆ ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

    ಬಂಧಿತ ತುಕರಾಮ ಶೆಟ್ಟಿಯನ್ನು ವಿಚಾರಿಸಿದಾಗ, ನಾನು ಶಾರದಾ ಶೆಟ್ಟಿಯವರ ಮನೆಯ ಕೆಲವು ಕಾಮಗಾರಿಗಳನ್ನು ಮಾಡಿದ್ದೆ. ಆದರೆ ಅದರ ಹಣವನ್ನು ಅವರು ನೀಡಲಿಲ್ಲ. ಪದೇ ಪದೇ ಕೇಳಿದರೂ ನೀಡಲಿಲ್ಲ. ಹೀಗಾಗಿ ಶಮಿವಾರ ರಾತ್ರಿ ಶಾರದಾ ಶೆಟ್ಟಿ ಅವರ ಮನೆಗೆ ನುಗ್ಗಿ ಹತ್ಯೆ ಮಾಡಿದ್ದೇನೆ ಎಂದು ಬಾಯಿ ಬಿಟ್ಟಿದ್ದಾನೆ. ಈ ಸಂಬಂಧ ಮುಲ್ಕಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಜೈಲಿಗಟ್ಟಿದ್ದಾರೆ.

  • ತಾಕತ್ತಿದ್ದರೆ ಚುನಾವಣೆಗೆ ನಿಲ್ಲಲಿ- ಕರಿಂಜೆ ಸ್ವಾಮೀಜಿಗೆ ಏಕವಚನದಲ್ಲೇ ಸವಾಲೆಸೆದ ಶಾಸಕ ಅಭಯಚಂದ್ರ ಜೈನ್

    ತಾಕತ್ತಿದ್ದರೆ ಚುನಾವಣೆಗೆ ನಿಲ್ಲಲಿ- ಕರಿಂಜೆ ಸ್ವಾಮೀಜಿಗೆ ಏಕವಚನದಲ್ಲೇ ಸವಾಲೆಸೆದ ಶಾಸಕ ಅಭಯಚಂದ್ರ ಜೈನ್

    ಮಂಗಳೂರು: ಕಾಂಗ್ರೆಸ್ ಶಾಸಕ ಅಭಯಚಂದ್ರ ಜೈನ್ ಅವರು ಮೂಡಬಿದಿರೆಯ ಕರಿಂಜೆ ಮುಕ್ತಾನಂದ ಸ್ವಾಮೀಜಿ ಕುರಿತು ಪಕ್ಷದ ಕಾರ್ಯಕ್ರಮದಲ್ಲಿ ಏಕವಚನದಲ್ಲಿಯೇ ವಾಗ್ದಾಳಿ ಮಾಡಿದ್ದಾರೆ.

    ತುಳುವಿನಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕ ಜೈನ್, ಅವಾ ಯಾರೋ ಒಬ್ಬ ಕರಿಂಜೆ ಸ್ವಾಮೀಜಿ ಭಾಷಣದಲ್ಲಿ ಹೇಳಿದನಂತೆ. ಒಬ್ಬ ರಾಕ್ಷಸ ಮುಖ್ಯಮಂತ್ರಿ ಇದ್ದಾನೆ. ಒಬ್ಬ ರಾಕ್ಷಸ ಎಂಎಲ್‍ಎ ಇದ್ದಾನೆ ಅಂತ. ನನಗೆ ಬೈಯಲಿ, ಅದು ಬಿಟ್ಟು ಮುಖ್ಯಮಂತ್ರಿಗೆ ಇನ್ನೊಮ್ಮೆ ಬೈದರೆ ಅವನು ಎಷ್ಟು ದೊಡ್ಡ ಸ್ವಾಮೀಜಿ ಆದರೂ ಬಿಡುವುದಿಲ್ಲ. ಅವನಿಗೆ ಕಪ್ಪು ಬಾವುಟ ಹಿಡಿಯುವಂತೆ ನಾನು ಮಾಡ್ತೇನೆ ಅಂತ ಹೇಳಿದ್ರು.

    ತಾಕತ್ತಿದ್ದರೆ ಕರಿಂಜೆ ಸ್ವಾಮೀಜಿ ಚುನಾವಣೆಗೆ ನಿಲ್ಲಲಿ. ಅವನು ಸರ್ಕಾರಿ ಜಾಗ ಕಬಳಿಸಿದ್ದಾನೆ. ಅದನ್ನು ತನಿಖೆ ಮಾಡಬೇಕು ಅಂತ ಮುಂದಿನ ದಿನಗಳಲ್ಲಿ ಹೋರಾಟ ಮಾಡುತ್ತೇವೆ ಅಂತ ಏಕವಚನದಲ್ಲಿ ನಿಂದಿಸಿ ಸವಾಲೆಸೆದಿದ್ದಾರೆ.

    ಕಾಂಗ್ರೆಸ್ ಹಾಗೂ ಮುಖ್ಯಮಂತ್ರಿಗೆ ಬೈದ್ರೆ ನಾವು ಬಿಡಲ್ಲ. ದೊಡ್ಡ ಮಟ್ಟದ ಹೋರಾಟವೇ ಮಾಡುತ್ತೇವೆ. ಕಾಂಗ್ರೆಸ್ ಪಕ್ಷ ಯಾರಿಗೂ ಅನ್ಯಾಯ ಮಾಡಿಲ್ಲ. ಬದಲಾಗಿ ಬಡವರ ಧ್ವನಿಯಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಕಾಂಗ್ರೆಸ್ ಪಕ್ಷದ ಒಗ್ಗಟ್ಟು ಬಹಳ ಮುಖ್ಯವಾಗಿದೆ. ಈಗಾಗಲೇ ಕಾಂಗ್ರೆಸ್ ವಿರುದ್ಧ ಹಲವಾರು ಪಿತೂರಿಗಳು ನಡೆದಿದ್ದು, ಇದ್ಯಾವುದನ್ನೂ ನಾವು ಕೇರ್ ಮಾಡಲ್ಲ. ಅವುಗಳನ್ನೆಲ್ಲಾ ಎದುರಿಸುವ ಕೆಲಸ ಮಾಡುತ್ತೇವೆ ಅಂದ್ರು.

    ಪ್ರತಾಪ್ ಚಂದ್ರ ಶೆಟ್ಟಿ ಅವರು ಹಿರಿಯ ಕಾಂಗ್ರೆಸ್ ಎಂಎಲ್‍ಎ ಹಾಗೂ ಎಂಎಲ್ ಸಿ ಆಗಿದ್ದರು. ಪ್ರಾಮಾಣಿಕ ವ್ಯಕ್ತಿಯಾಗಿರೋ ಅವರು ಇಂದಿಗೂ ಕುಂದಾಪುರದಲ್ಲಿ ಹೋರಾಟ ಮಾಡುತ್ತಿದ್ದಾರೆ. ಹೀಗಾಗಿ ಅವರೇ ವಿಧಾನಪರಿಷತ್ ಸದಸ್ಯರಾಗಬೇಕು ಅಂತ ಅವರು ಒತ್ತಾಯಿಸಿದರು.

    ಕರಿಂಜೆ ಶ್ರೀ ಇತ್ತೀಚೆಗಷ್ಟೆ ಕಾರ್ಯಕ್ರಮವೊಂದರಲ್ಲಿ ರಾಕ್ಷಸ ಸಿಎಂ ಮತ್ತು ರಾಕ್ಷಸ ಎಂಎಲ್‍ಎ ಎಂಬ ಹೇಳಿಕೆ ನೀಡಿದ್ದರು. ಒಟ್ಟಿನಲ್ಲಿ ಇದೀಗ ಹಿಂದೂ ಸ್ವಾಮೀಜಿ ಬಗ್ಗೆ ಶಾಸಕ ಅಭಯಚಂದ್ರ ಹೇಳಿಕೆ ನೀಡಿರುವುದರ ವಿರುದ್ಧ ಹಿಂದೂಪರ ಸಂಘಟನೆಗಳು ತೀವ್ರ ಅಕ್ಷೇಪ ವ್ಯಕ್ತಪಡಿಸಿದ್ದು, ಬೃಹತ್ ಪ್ರತಿಭಟನೆಗೆ ನಿರ್ಧಾರ ನಡೆಸಿವೆ.