Tag: Mullai Mugilan

  • ನೋಂದಣಿ, ಮುದ್ರಾಂಕ ಶುಲ್ಕ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ – ಮುಲೈ ಮುಗಿಲನ್

    ನೋಂದಣಿ, ಮುದ್ರಾಂಕ ಶುಲ್ಕ ನೆರೆ ರಾಜ್ಯಗಳ ದರಗಳೊಂದಿಗೆ ಸಮೀಕರಿಸಿ ಪರಿಷ್ಕರಣೆ – ಮುಲೈ ಮುಗಿಲನ್

    ಬೆಂಗಳೂರು: ಕರ್ನಾಟಕ (Karnataka) ರಾಜ್ಯ ಸರ್ಕಾರವು ಆ.31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಶುಲ್ಕವು ನೆರೆಹೊರೆಯ ರಾಜ್ಯಗಳಲ್ಲಿರುವ ದರಗಳಿಗಿಂತ ಪ್ರಸ್ತುತ ಕಡಿಮೆ ಶುಲ್ಕ ಇದೆ. ಸದ್ಯ ಅದನ್ನು ಇತರೆ ರಾಜ್ಯಗಳ ಶುಲ್ಕಗಳೊಂದಿಗೆ ಸಮೀಕರಣ ಮಾಡಿ ಪರಿಷ್ಕರಿಸಲಾಗುತ್ತಿದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ (Mullai Mugilan) ತಿಳಿಸಿದ್ದಾರೆ.

    ಈ ಕುರಿತು ಪ್ರಕಟಣೆ ನೀಡಿರುವ ಅವರು, ಮುದ್ರಾಂಕ, ನೋಂದಣಿ ಹಾಗೂ ಇತರೆ ಸೆಸ್ ಸೇರಿ ಕರ್ನಾಟಕ ರಾಜ್ಯವು ಶೇ.6.6ರಷ್ಟು ವಿಧಿಸುತ್ತಿತ್ತು. ಇದೇ ಅವಧಿಯಲ್ಲಿ ಈ ಶುಲ್ಕವು ತಮಿಳುನಾಡು ರಾಜ್ಯದಲ್ಲಿ ಶೇ.9, ಕೇರಳ ಶೇ.10, ಆಂಧ್ರಪ್ರದೇಶ ಶೇ.7.5, ತೆಲಂಗಾಣ ರಾಜ್ಯಗಳು ಶೇ.7.5ರಷ್ಟು ಶುಲ್ಕ ಅನುಸರಿಸುತ್ತಿವೆ. ದಸ್ತಾವೇಜುಗಳ ಮೇಲಿನ ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳನ್ನು ಇತರೆ ರಾಜ್ಯಗಳೊಂದಿಗೆ ಸಮೀಕರಿಸಿಕೊಳ್ಳಲು, ಆಡಳಿತಾತ್ಮಕ ಪ್ರಕ್ರಿಯೆಗಳನ್ನು ಬಲಪಡಿಸಲು ಮತ್ತು ನಾಗರಿಕರಿಗೆ ಉತ್ತಮ ಹಾಗೂ ಪರಿಣಾಮಕಾರಿ ಸೇವೆಯನ್ನು ನೀಡಲು ರಾಜ್ಯ ಸರ್ಕಾರವು 2025ರ ಆ.31ರಿಂದ ಜಾರಿಗೆ ಬರುವಂತೆ ನೋಂದಣಿ ಶುಲ್ಕವನ್ನು ಶೇ.1 ರಿಂದ ಶೇ.2ರಷ್ಟು ಪರಿಷ್ಕರಿಸಿದೆ.ಇದನ್ನೂ ಓದಿ: ಪೊಲೀಸರು ಪದಕ ಪಡೆದಿರುವುದರ ಹಿಂದೆ ಶ್ರಮ, ಪ್ರಾಮಾಣಿಕತೆ, ಸಮಾಜದ ಸೇವೆ ಇದೆ: ಡಾ.ಜಿ ಪರಮೇಶ್ವರ್

    ಪರಿಷ್ಕೃತ ನೋಂದಣಿ ಶುಲ್ಕವನ್ನು ಸುಗಮವಾಗಿ ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬಹುದು. ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಅಪಾಯಿಂಟ್‌ಮೆಂಟ್ ಪಡೆದಿರುವವರು ಅಥವಾ ಶುಲ್ಕವನ್ನು ಪಾವತಿಸಿ ಅಪಾಯಿಂಟ್‌ಮೆಂಟ್ ಪಡೆಯದಿರುವವರು, ವ್ಯತ್ಯಾಸದ ಮೊತ್ತವನ್ನು ಇಲಾಖೆಯ ಅಧಿಕೃತ ಪೋರ್ಟಲ್ ಮೂಲಕ ಪಾವತಿಸಬೇಕು. ಮೊದಲು ಬಳಸಿದ ಲಾಗಿನ್ ಮೂಲಕವೇ ಈ ಪಾವತಿಯನ್ನು ಮಾಡಬೇಕು. ಅರ್ಜಿದಾರರಿಗೆ ನೆರವಾಗುವ ದೃಷ್ಟಿಯಿಂದ ಅಗತ್ಯ ಸೂಚನೆಗಳನ್ನು ಒಳಗೊಂಡ ಎಸ್‌ಎಂಎಸ್ ನೇರವಾಗಿ ಅವರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಕಳುಹಿಸಲಾಗುವುದು.

    ಈಗಾಗಲೇ ದಸ್ತಾವೇಜುಗಳ ನೋಂದಣಿಗೆ ಸಲ್ಲಿಸಲಾಗಿರುವ ಹಾಗೂ ಪರಿಶೀಲನೆಯಲ್ಲಿರುವ ದಸ್ತಾವೇಜುಗಳಿಗೆ ನೋಂದಣಿ ಶುಲ್ಕವನ್ನು ಮರು ಲೆಕ್ಕ ಹಾಕಲಾಗುವುದು ಮತ್ತು ಪರಿಷ್ಕೃತ ಶೇಕಡ 2 ರಂತೆ ನೋಂದಣಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ. ಈ ವರ್ಗದ ಅರ್ಜಿದಾರರಿಗೆ ಪಾವತಿಯ ಪ್ರಕ್ರಿಯೆ ಪೂರ್ಣಗೊಳ್ಳುವ ಮೊದಲು ಪರಿಷ್ಕೃತ ನೋಂದಣಿ ಶುಲ್ಕದ ವಿವರವನ್ನು ತಿಳಿಸಲಾಗುವುದು.

    ಇಲಾಖೆಯು ದಸ್ತಾವೇಜುಗಳ ನೋಂದಣಿ ಪ್ರಕ್ರಿಯೆಯಲ್ಲಿ ವಿಳಂಬವಾಗುವುದನ್ನು ತಪ್ಪಿಸಲು ಎಲ್ಲಾ ಅರ್ಜಿದಾರರಿಗೆ ಮೇಲ್ಕಾಣಿಸಿದ ನವೀಕರಿಸಿದ ಕ್ರಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಲು ತಿಳಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಹಂತ ಹಂತವಾಗಿ ಅನುಸರಿಸಬಹುದಾದ ವಿವರವಾದ ಸೂಚನೆಗಳನ್ನು ಇಲಾಖೆಯ ಅಧಿಕೃತ ಪೋರ್ಟಲ್‌ನಲ್ಲಿ ಲಭ್ಯವಾಗುವಿರುವಂತೆ ಮಾಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.ಇದನ್ನೂ ಓದಿ: ಪೊಲೀಸರ ಸಾಮಾಜಿಕ ಬದ್ದತೆಯಿಂದ ಸಮಾಜದಲ್ಲಿ ಶಾಂತಿ ನೆಲೆಸಲು ಸಾಧ್ಯ – ಸಿದ್ದರಾಮಯ್ಯ

  • ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್

    ಬಿ.ಸಿ.ರೋಡ್‌ನಲ್ಲಿ ಪರಿಸ್ಥಿತಿ ಉದ್ವಿಗ್ನ – 48 ಗಂಟೆಗಳ ಕಾಲ ಮದ್ಯದಂಗಡಿ ಬಂದ್

    ಮಂಗಳೂರು: ಈದ್ ಮಿಲಾದ್ (Eid Milad) ಹಿನ್ನೆಲೆ ಮುಸ್ಲಿಂ ಯುವಕರಿಗೆ ಬೈಕ್ ರ‍್ಯಾಲಿಗೆ ಪೊಲೀಸರು ಅನುಮತಿ ನೀಡಿದ ಬಳಿಕ ಬಿ.ಸಿ.ರೋಡ್‌ನಲ್ಲಿ (BC Road) ಮತ್ತೆ ಉದ್ವಿಗ್ನ ಪರಿಸ್ಥಿತಿ ಎದುರಾಗಿದ್ದು, ಮದ್ಯದಂಗಡಿ ಬಂದ್ ಮಾಡುವುದಕ್ಕೆ ದ.ಕ.ಜಿಲ್ಲಾಧಿಕಾರಿ ಮುಲೈ ಮುಗಿಲನ್ (Mullai Muhilan) ಆದೇಶ ನೀಡಿದ್ದಾರೆ. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ದ.ಕ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮ ಕೈಗೊಂಡಿದೆ.

    ಬಂಟ್ವಾಳ (Bantwal) ಪುರಸಭಾ ವ್ಯಾಪ್ತಿಯಲ್ಲಿ 48 ಗಂಟೆಗಳ ಕಾಲ ಮದ್ಯದಂಗಡಿ, ಶೇಂದಿ ಮಾರಾಟದ ಅಂಗಡಿಗಳ ಬಾಗಿಲು ಮುಚ್ಚುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದ್ದು, ಅಂಗಡಿಗಳ ಬಾಗಿಲುಗಳಿಗೆ ಅಬಕಾರಿ ಇಲಾಖೆಯ ಮೊಹರು ಬಿದ್ದಿದೆ. ಇದನ್ನೂ ಓದಿ: ಮಂಗಳವಾರ ಸಚಿವ ಸಂಪುಟ ಸಭೆ – ಇಂದೇ ಕಲಬುರಗಿ ತಲುಪಿದ ಸಿಎಂ

    ಬಜರಂಗದಳ ಹಾಗೂ ವಿಹೆಚ್‌ಪಿಯಿಂದ (VHP) ಬಿ.ಸಿ ರೋಡ್ ಚಲೋ ಕರೆ ಹಿನ್ನೆಲೆಯಲ್ಲಿ ಹಿಂದೂ ಸಂಘಟನೆಯ ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಸಿ ರೋಡ್‌ನಲ್ಲಿ ಜಮಾಯಿಸಿದ್ದರು. ಬಜರಂಗದಳ ಹಾಗೂ ವಿಹೆಚ್‌ಪಿಯ ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ ನಡೆದಿತ್ತು. ಪೊಲೀಸರು ಬಿಗಿ ಬಂದೋಬಸ್ತ್ನಲ್ಲಿ ಪರಿಸ್ಥಿತಿಯನ್ನು ನಿಯಂತ್ರಣಗೊಳಿಸುವಲ್ಲಿ ಯಶಸ್ವಿಯಾಗಿದ್ದರು. ಆದರೆ ಇದೀಗ ಮುಸ್ಲಿಂ ಯುವಕರ ಬೈಕ್ ರ‍್ಯಾಲಿಗೆ ಅನುಮತಿ ನೀಡಿದ್ದು, ಬೈಕ್ ರ‍್ಯಾಲಿ ವೇಳೆ ಮುಸ್ಲಿಂ ಯುವಕರು ಹಸಿರು ಬಾವುಟ ಹಾರಿಸಿರುವುದು ತ್ರೀವ ಆಕ್ರೋಶ ಉಂಟಾಗಿದೆ. ಮತ್ತೆ ಉದ್ವಿಗ್ನ ಪರಿಸ್ಥಿತಿ ತಲುಪಿದೆ. ಇದನ್ನೂ ಓದಿ: ಈದ್ ಮಿಲಾದ್ ಹೊತ್ತಲ್ಲೇ ರಾಜ್ಯದಲ್ಲಿ ಪ್ಯಾಲೆಸ್ತೀನ್ ಪ್ರೇಮ – ಚಿಕ್ಕಮಗಳೂರಲ್ಲಿ ಬಾವುಟ; 6 ಮಂದಿ ವಿರುದ್ಧ ಕೇಸ್

    ಉದ್ವಿಗ್ನಗೊಂಡಿದ್ದು ಯಾಕೆ?
    ನಾಗಮಂಗಲ (Nagamangala) ಗಲಭೆ ಖಂಡಿಸಿ ಸೆ.12ರಂದು ಮಂಗಳೂರಿನಲ್ಲಿ (Mangaluru) ನಡೆದಿದ್ದ ಪ್ರತಿಭಟನಾ ಭಾಷಣದಲ್ಲಿ ವಿಎಚ್‌ಪಿ ಮುಖಂಡ ಶರಣ್ ಪಂಪ್‌ವೆಲ್, ಸರ್ಕಾರ ಈದ್ ಮಿಲಾದ್ ಮೆರವಣಿಗೆ ತಡೆಯಬೇಕು. ಇಲ್ಲದಿದ್ದಲ್ಲಿ ಮತ್ತೆ ಇವರು ಗಲಭೆ ನಡೆಸ್ತಾರೆ ಎಂದಿದ್ದರು. ಇದಕ್ಕೆ ಪ್ರತಿರೋಧ ವ್ಯಕ್ತಪಡಿಸಿದ್ದ ಬಂಟ್ವಾಳ ಪುರಸಭೆಯ ಮಾಜಿ ಅಧ್ಯಕ್ಷ, ಕಾಂಗ್ರೆಸ್ ಮುಖಂಡ ಮಹಮ್ಮದ್ ಶರೀಫ್ ಹಾಗೂ ಆತನ ಸಹೋದರ ಹಸೀನಾರ್ ತಾಕತ್ ಇದ್ದರೆ ಸೋಮವಾರ ಬಿಸಿ ರೋಡ್‌ನ ಈದ್ ಮಿಲಾದ್ ಮೆರವಣಿಗೆಗೆ ಬನ್ನಿ ಅಂತ ಶರಣ್ ಪಂಪ್ ವೆಲ್‌ಗೆ ಸವಾಲ್ ಹಾಕಿ ಆಡಿಯೋ ಹರಿಯ ಬಿಟ್ಟಿದ್ದರು. ಆಡಿಯೋ ಹರಿ ಬಿಟ್ಟಿದ್ದ ಇಬ್ಬರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಸವಾಲು ಸ್ವೀಕರಿಸಿದ ಬಜರಂಗದಳ-ವಿಎಚ್‌ಪಿ ಇವತ್ತು ಬಿ.ಸಿ.ರೋಡ್ ಚಲೋ ಕರೆ ನೀಡಿತ್ತು. ಇದನ್ನೂ ಓದಿ: ವಿಶ್ವದ ಮೊದಲ ಖಾಸಗಿ ಬಾಹ್ಯಕಾಶ ನಡಿಗೆ ಯಶಸ್ವಿ – ನಾಲ್ವರು ಗಗನಯಾತ್ರಿಗಳು ಭೂಮಿಗೆ ವಾಪಸ್

  • ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಗಿರಿತಾಣ, ಶಿಖರಗಳಿಗೆ ಚಾರಣ ನಿಷೇಧ

    ಭಾರೀ ಮಳೆ ಹಿನ್ನೆಲೆ: ದಕ್ಷಿಣ ಕನ್ನಡದ ಗಿರಿತಾಣ, ಶಿಖರಗಳಿಗೆ ಚಾರಣ ನಿಷೇಧ

    ನದಿ‌, ಸಮುದ್ರ ತೀರದಲ್ಲಿ ಮೋಜು ಮಸ್ತಿಗೂ ತಡೆ: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ (Dakshina Kannada Rain) ಜಿಲ್ಲೆಯ ವಿವಿದೆಡೆ ಭೂ ಕುಸಿತ, ಗುಡ್ಡ ಕುಸಿತ ಪ್ರಕರಣಗಳು ಹೆಚ್ಚಾಗಿದೆ. ಹೀಗಾಗಿ ಇನ್ನಷ್ಟು ಪ್ರಾಕೃತಿಕ ವಿಕೋಪ ಸಂಭವಿಸುವ ಆತಂಕದ ಹಿನ್ನೆಲೆಯಲ್ಲಿ ಜಿಲ್ಲಾ ವ್ಯಾಪ್ತಿಯ ಗಿರಿತಾಣ, ಶಿಖರಗಳಲ್ಲಿ ಚಾರಣಕ್ಕೆ (Trekking prohibited) ಪ್ರವಾಸಿಗರು ತೆರಳದಂತೆ ನಿಷೇಧ ಹೇರಲಾಗಿದೆ.

    DAKSHINA-KANNADA-TREKKING-PROHIBITION

    ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ನಿಷೇಧ ಆದೇಶ ಹೊರಡಿಸಿದ್ದು, ಮಳೆಗಾಲ ಮುಗಿಯುವವರೆಗೆ ಹೋಮ್ ಸ್ಟೇ, ರೆಸಾರ್ಟ್ (Home Stay, Resorts) ಸೇರಿದಂತೆ ಅರಣ್ಯ ಇಲಾಖೆ ಏರ್ಪಡಿಸುವ ಟ್ರೆಕ್ಕಿಂಗ್, ಸಾಹಸ ಯಾತ್ರೆಗೂ ನಿಷೇಧ ಹೇರಲಾಗಿದೆ. ಇದರ ಜೊತೆಗೆ ನದಿ, ಸಮುದ್ರ ತೀರಕ್ಕೆ ಜನ ತೆರಳದಂತೆ ಸೂಚನೆ‌ ನೀಡಲಾಗಿದೆ. ಇದನ್ನೂ ಓದಿ: ಎಲ್.ಕೆ ಅಡ್ವಾಣಿ ಆರೋಗ್ಯ ಸ್ಥಿರ – ಆಸ್ಪತ್ರೆಯಿಂದ ಡಿಸ್ಚಾರ್ಜ್

    ನದಿ ಹಾಗೂ ಸಮುದ್ರ ತಟದಲ್ಲಿ ಈಜು ಮೋಜು-ಮಸ್ತಿ, ನೀರಿಗೆ ಇಳಿಯೋದು, ಮೀನು ಹಿಡಿಯುವುದು ಇತ್ಯಾದಿ ಚಟುವಟಿಕೆಗಳಿಗೂ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೊರಡಿಸಿರುವ ಆದೇಶದಲ್ಲಿ ತಿಳಿಸಿದ್ದಾರೆ.