Tag: Multilingual Actor

  •  ಬಹುಭಾಷಾ ಚಿತ್ರನಟ ಕ್ಯಾಪ್ಟನ್ ಚಲಪತಿ ಚೌದ್ರಿ ವಿಧಿವಶ

     ಬಹುಭಾಷಾ ಚಿತ್ರನಟ ಕ್ಯಾಪ್ಟನ್ ಚಲಪತಿ ಚೌದ್ರಿ ವಿಧಿವಶ

    ರಾಯಚೂರು: ಅನಾರೋಗ್ಯ ಹಿನ್ನೆಲೆ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಬಹುಭಾಷಾ ಚಿತ್ರನಟ ಕ್ಯಾಪ್ಟನ್ ಚಲಪತಿ ಚೌದ್ರಿ(67) ನಿಧನರಾಗಿದ್ದಾರೆ. ಆರೋಗ್ಯದಲ್ಲಿ ಏರುಪೇರು ಉಂಟಾಗಿ ಚಿಕಿತ್ಸೆ ಫಲಕಾರಿಯಾಗದೆ ಇಹಲೋಕ ತ್ಯಜಿಸಿದ್ದಾರೆ. ಚೌದ್ರಿ ಅಗಲಿಕೆಗೆ ಸಿನಿಮಾರಂಗದ ಗಣ್ಯರು, ಅಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

    ಕನ್ನಡ, ತೆಲುಗು, ಹಿಂದಿ ಸೇರಿದಂತೆ 100ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಚೌದ್ರಿ ಅವರು ಪ್ರಸ್ತುತ ಧಾರವಾಹಿಗಳಲ್ಲಿ ನಟಿಸುತ್ತಿದ್ದರು. ಶಿವರಾಜ್ ಕುಮಾರ್, ಬಾಲಕೃಷ್ಣ, ಚಿರಂಜೀವಿ, ನಾಗಾರ್ಜುನ್ ಸೇರಿದಂತೆ ಅನೇಕ ಸ್ಟಾರ್ ನಟರ ಜೊತೆ ಚೌದ್ರಿ ನಟಿಸಿದ್ದಾರೆ. ಇದನ್ನೂ ಓದಿ: ಪೋಸ್ಟರ್‌ಗಳಲ್ಲಿ ಹುಲಿ ಚಿತ್ರಗಳನ್ನ ಹಾಕಿಬಿಟ್ರೆ ಮೈಸೂರು ಹುಲಿ ಆಗಿಬಿಡ್ತಾನಾ?: ಪ್ರತಾಪ್ ಸಿಂಹ 

    ಚೌದ್ರಿ ಅವರು ಪತ್ನಿ, ಇಬ್ಬರು ಮಕ್ಕಳು, ಮೊಮ್ಮಕ್ಕಳು ಸೇರಿ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ನಗರದ ಕೆ.ಎಂ.ಕಾಲೊನಿಯ ಸ್ವಗೃಹದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಗರದ ಬಿ.ಆರ್.ಬಿ ಕಾಲೇಜಿನ ಹತ್ತಿರ ಇರುವ ಮುಕ್ತಿಧಾಮದಲ್ಲಿ ಸಂಜೆ 4:30ಕ್ಕೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

  • ಕೈ, ಬಿಜೆಪಿ, ಜೆಡಿಎಸ್ ಎದುರು ಕೊನೆಗೂ ಸೋತಿದ್ದು ನಾವು ಏನು ಮಾಡೋಣ: ಪ್ರಕಾಶ್ ರೈ ಪ್ರಶ್ನೆ

    ಕೈ, ಬಿಜೆಪಿ, ಜೆಡಿಎಸ್ ಎದುರು ಕೊನೆಗೂ ಸೋತಿದ್ದು ನಾವು ಏನು ಮಾಡೋಣ: ಪ್ರಕಾಶ್ ರೈ ಪ್ರಶ್ನೆ

    ಬೆಂಗಳೂರು:ವಿಧಾನಸಭೆ ಚುನಾವಣೆಗೂ ಮುನ್ನ ಬಿಜೆಪಿ ಪಕ್ಷದ ವಿರುದ್ಧ ಕೋಮುವಾದಿ ಪಕ್ಷ ಎಂದು ಆರೋಪಿಸಿ ಪ್ರಚಾರ ನಡೆಸಿದ್ದ ಬಹು ಭಾಷಾ ನಟ ಪ್ರಕಾಶ್ ರೈ, ಇಂದಿನ ರಾಜಕೀಯ ನೇತರಾರರ ನಡೆ ಕಂಡು ಏನು ಮಾಡೋಣ ಎಂದು ಪ್ರಶ್ನಿಸಿದ್ದಾರೆ.

    ಈ ಕುರಿತು ತಮ್ಮ ಫೇಸ್‍ಬುಕ್ ಖಾತೆಯಲ್ಲಿ ಫೋಸ್ಟ್ ಮಾಡಿರುವ ಪ್ರಕಾಶ್ ರೈ, ನಮ್ಮ ಕ್ಷೇತ್ರದ ಪ್ರತಿನಿಧಿಗಳ ಮೇಲೆ ನಾವಿಟ್ಟ ನಂಬಿಕೆಯನ್ನು, ಇವರು ಇನ್ಯಾರಿಗೋ ಮಾರಿಕೊಳ್ಳುವುದನ್ನು ಬೇರೆ ದಾರಿಯಿಲ್ಲದೇ ಈ ರಾಜಕಾರಣಿಗಳ ಆಟವನ್ನು ನಾವು ಒಪ್ಪಿಕೊಳ್ಳವಂತೆ ಮಾಡಿದೆ. ಸದ್ಯ ನಮ್ಮ ಮೇಲೆ ಅಭಿಪ್ರಾಯ ಹೇರುವುದು ನಾವು ಪ್ರಶ್ನಿಸದಿದ್ದರೆ, ನಮ್ಮ ಈ ಅಸಹಾಯಕತೆಗೆ ಹಾಗೂ ಅಮಾಯಕತೆಯ ದುರುಪಯೋಗಕ್ಕೆ ಯಾರು ಕಾರಣವೆಂದು ನಾವು ಬೇಗ ಗೊತ್ತು ಮಾಡಿಕೊಳ್ಳದಿದ್ದರೆ ಮತ್ತೊಮ್ಮೆ ಸೋಲುವುದು ನಾವೇ ಎಂದು ಬರೆದುಕೊಂಡಿದ್ದಾರೆ.

    ಕರ್ನಾಟಕದ ಸಂವಿಧಾನಿಕ ಸರ್ಕಾರದ ರಚನೆಯ ಕಸರತ್ತು ಆರಂಭವಾಗಿದೆ. ಪ್ರಜೆಗಳಿಗೆ ಈ ಕುರಿತು ಸುದ್ದಿ ನೀಡಬೇಕಾಗುವುದರ ಬದಲು ಯಾರು, ಯಾವ ಪಕ್ಷಕ್ಕೆ ಪಕ್ಷಾಂತರ ಮಾಡಿದ್ದಾರೆ ಎಂಬ ಬ್ರೇಕಿಂಗ್ ಸುದ್ದಿ ಪಡೆಯುತ್ತಿದ್ದೇವೆ ಎಂದು ವ್ಯಂಗ್ಯವಾಡಿದ್ದಾರೆ.

    ಯಾರಿಗೂ ಬಹುಮತ ಬರದ ಚುನಾವಣೆಯ ಫಲಿತಾಂಶದ ನಂತರ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷಗಳು ಒಬ್ಬರನ್ನೊಬ್ಬರು ಕೊಳ್ಳುವ ಮಾರುವ ವ್ಯಾಪಾರಕ್ಕಿಳಿಯುತ್ತಾರೆ. ನಮ್ಮ ಅನುಮತಿಯಿಲ್ಲದೆ, ತಮ್ಮ ಶಕ್ತ್ಯಾನುಸಾರ ದಕ್ಕಿದ್ದನ್ನು ಹಂಚಿಕೊಂಡು, ಭಿನ್ನಾಭಿಪ್ರಾಯ ಮರೆತು, ವಿಧಾನಸೌಧದೊಳಗೆ ಒಂದಾಗಿ ಓಡಾಡುತ್ತ ಮುಂದಿನ ಚುನಾವಣೆಯವರೆಗೆ ಆರಾಮಾಗಿರುತ್ತಾರೆ ಎಂದು ಟೀಕೆ ಮಾಡಿದ್ದಾರೆ.

    ರಾಜ್ಯ ರಾಜಕಾರಣದ ಕುರಿತು ನಿರಂತರವಾಗಿ ಟೀಕೆ ಮಾಡುತ್ತಿರುವ ಪ್ರಕಾಶ್ ರೈ, ಕಳೆದ ಎರಡು ದಿನಗಳಿಂದ ನಡೆಯುತ್ತಿರುವ ರಾಜಕೀಯ ನಡೆಗಳ ಕುರಿತು ಹ್ಯಾಪಿ ವಿವೀಂಗ್ ಎಂಬ ಹೆಸರಿನೊಂದಿಗೆ ವ್ಯಂಗ್ಯವಾಡಿ ಟೀಕೆ ಮಾಡುತ್ತಿದ್ದಾರೆ.

    ಚುನಾವಣೆಗೂ ಮೊದಲು ಬಿಜೆಪಿ ಸರ್ಕಾರದ ವಿರುದ್ಧ ಸತತ ವಾಗ್ದಾಳಿ ನಡೆಸಿ ಬಿಜೆಪಿಗೆ ಮತ ನೀಡದಂತೆ ಪ್ರಕಾಶ್ ರೈ ಮನವಿ ಮಾಡಿದ್ದರು. ತಾವು ಯಾವುದೇ ಪಕ್ಷದ ಪರ ಪ್ರಚಾರ ನಡೆಸುತ್ತಿಲ್ಲ ಆದರೆ ಬಿಜೆಪಿ ವಿರುದ್ಧ ಪ್ರಚಾರ ನಡೆಸುತ್ತಿರುವುದಾಗಿ ತಿಳಿಸಿದ್ದರು. ಈ ವೇಳೆ ಮುಂದಿನ ಸರ್ಕಾರದ ರಚನೆ ಬಳಿಕವೂ ತಾವು ವಿರೋಧಿ ಸ್ಥಾನದಲ್ಲಿ ನಿಂತು ಜನರಿಗೆ ಪ್ರಶ್ನೆ ಕೇಳಲು ಪ್ರೇರಣೆ ನೀಡುವುದಾಗಿ ಹಾಗೂ ನಿರಂತರ ಕಾರ್ಯನಿರ್ವಹಿಸುವುದಾಗಿ ಹೇಳಿದ್ದರು.