Tag: Mumbai Airport

  • ಶಾರುಖ್‌ ಬ್ಯಾಗ್‌ನಲ್ಲಿ ದುಬಾರಿ ವಾಚ್‌ ಪತ್ತೆ – ಏರ್‌ಪೋರ್ಟ್‌ನಲ್ಲೇ 6.87 ಲಕ್ಷ ರೂ. ತೆರಿಗೆ ಕಟ್ಟಿದ ನಟ

    ಶಾರುಖ್‌ ಬ್ಯಾಗ್‌ನಲ್ಲಿ ದುಬಾರಿ ವಾಚ್‌ ಪತ್ತೆ – ಏರ್‌ಪೋರ್ಟ್‌ನಲ್ಲೇ 6.87 ಲಕ್ಷ ರೂ. ತೆರಿಗೆ ಕಟ್ಟಿದ ನಟ

    ಯುಎಇಯಿಂದ (UAE) ವಾಪಸ್‌ ಆಗುವಾಗ ಬ್ಯಾಗ್‌ನಲ್ಲಿ ದುಬಾರಿ ವಾಚ್‌ಗಳನ್ನು ಹೊಂದಿದ್ದ ಬಾಲಿವುಡ್‌ (Bollywood) ನಟ ಶಾರುಖ್‌ ಖಾನ್‌ (Shah Rukh Khan) ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ (Mumbai Airport) ಕಸ್ಟಮ್ಸ್‌ ಅಧಿಕಾರಿಗಳು ತಡೆದು ತೆರಿಗೆ ಕಟ್ಟಿಸಿಕೊಂಡು ಕಳುಹಿಸಿದ್ದಾರೆ.

    ಶಾರುಕ್‌ ಖಾನ್‌ ಅವರನ್ನು ಮುಂಬೈ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್‌ ಅಧಿಕಾರಿಗಳು ತಡೆದು ಸುಮಾರು ಒಂದು ಗಂಟೆ ಕಾಲ ಪರಿಶೀಲನೆ ನಡೆಸಿದರು. ಈ ವೇಳೆ ನಟನ ಬ್ಯಾಗ್‌ನಲ್ಲಿ ಸುಮಾರು 18 ಲಕ್ಷ ರೂ. ಮೌಲ್ಯದ ದುಬಾರಿ ವಾಚ್‌ಗಳು ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಆ ವಾಚ್‌ಗಳಿಗೆ 6.87 ಲಕ್ಷ ರೂ. ತೆರಿಗೆಯನ್ನು ಶಾರುಖ್‌ ಖಾನ್‌ ಪಾವತಿಸಿದ್ದಾರೆ. ಇದನ್ನೂ ಓದಿ: ಡೇರ್ ಡೆವಿಲ್ ಸ್ಟಂಟ್ ಮಾಡಿದ ನಟ ಪವನ್ – ಕೇಸ್ ದಾಖಲಿಸಿದ ಪೊಲೀಸರು

    ಸರಿಸುಮಾರು ಒಂದು ಗಂಟೆ ವಿಚಾರಣೆಯ ನಂತರ ಶಾರುಖ್ ಮತ್ತು ಮ್ಯಾನೇಜರ್‌ ಪೂಜಾ ದದ್ಲಾನಿ ಅವರನ್ನು ವಿಮಾನ ನಿಲ್ದಾಣದಿಂದ ಹೊರಡಲು ಅನುಮತಿ ನೀಡಲಾಯಿತು. ಆದರೆ ನಟನ ಅಂಗರಕ್ಷಕ ರವಿ ಮತ್ತು ಇತರ ಸಿಬ್ಬಂದಿ ವಿಮಾನ ನಿಲ್ದಾಣದಲ್ಲಿಯೇ ಉಳಿಯಬೇಕಾಯಿತು. ಅಂಗರಕ್ಷಕ ರವಿ, ಶಾರುಖ್‌ ಖಾನ್‌ ಅವರ ಕ್ರೆಡಿಟ್ ಕಾರ್ಡ್ ಬಳಸಿ 6,87,000 ರೂ. ತೆರಿಗೆಯನ್ನು ಠೇವಣಿ ಮಾಡಿ ನಂತರ ಅಲ್ಲಿಂದ ಹೊರಟರು.

    ಶಾರುಖ್ ಜೊತೆಗೆ ಅವರ ಮ್ಯಾನೇಜರ್ ಪೂಜಾ ದದ್ಲಾನಿ, ಅಂಗರಕ್ಷಕ ರವಿ ಸೇರಿದಂತೆ ಅವರ ಸಿಬ್ಬಂದಿ ಯುನೈಟೆಡ್ ಅರಬ್ ಎಮಿರೇಟ್ಸ್‌ನಿಂದ ಮುಂಬೈಗೆ ಖಾಸಗಿ ಜೆಟ್‌ ಮೂಲಕ ಹಿಂತಿರುಗುತ್ತಿದ್ದಂತೆ ವಿಮಾನ ನಿಲ್ದಾಣದಲ್ಲಿ ನಿಲ್ಲಿಸಲಾಗಿತ್ತು. ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಖಾನ್ ಯುಎಇಗೆ ತೆರಳಿದ್ದರು. ಇದನ್ನೂ ಓದಿ: ಮಗು ಹುಟ್ಟಿದ ಒಂದೇ ತಾಸಿಗೆ ಹೆಸರಿಟ್ಟು ಸಂಭ್ರಮಿಸಿದ ನಟಿ ಬಿಪಾಶಾ ಬಸು

    Live Tv
    [brid partner=56869869 player=32851 video=960834 autoplay=true]

  • ಏರ್​ಪೋರ್ಟ್‌ನಲ್ಲಿ ಧಗಧಗ ಹೊತ್ತಿ ಉರಿದ ವಿಮಾನದ ಪುಶ್‍ಬ್ಯಾಕ್ ವಾಹನ

    ಏರ್​ಪೋರ್ಟ್‌ನಲ್ಲಿ ಧಗಧಗ ಹೊತ್ತಿ ಉರಿದ ವಿಮಾನದ ಪುಶ್‍ಬ್ಯಾಕ್ ವಾಹನ

    ಮುಂಬೈ: ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪುಶ್‍ಬ್ಯಾಕ್ ವಾಹನವೊಂದು(ವಿಮಾನವನ್ನು ಹಿಂದಕ್ಕೆ ತಳ್ಳುವ ವಾಹನ) ಹೊತ್ತಿ ಉರಿದ ಘಟನೆ ಮುಂಬೈ  ಏರ್​ಪೋರ್ಟ್‌ನಲ್ಲಿ ಇಂದು ನಡೆದಿದೆ.

    ವಿಮಾನಕ್ಕೆ ಪುಶ್‍ಬ್ಯಾಕ್ ನೀಡುತ್ತಿದ್ದ ವಾಹನ ವಿಮಾನದ ಬಳಿಯೇ ಧಗ ಧಗ ಹೊತ್ತಿ ಉರಿಯಿತು. ವಿಮಾನ ನಿಲ್ದಾಣದ ಅಧಿಕಾರಿಗಳು 10 ನಿಮಿಷದಲ್ಲಿ ಬೆಂಕಿ ನಂದಿಸಿ ಹತೋಟಿಗೆ ತಂದಿದ್ದಾರೆ. ಇದನ್ನೂ ಓದಿ: ನನ್ನನ್ನು ನೋಡಿದ್ರೆ ಕೊರೊನಾ ಇದೆ ಅಂತ ಅನ್ನಿಸುತ್ತಾ?: ಡಿ.ಕೆ. ಶಿವಕುಮಾರ್

    ಇಂದು ಮಧ್ಯಾಹ್ನ 1 ಗಂಟೆಗೆ ಈ ಘಟನೆ ನಡೆದಿದೆ.  Air India flight AI-647ಅನ್ನು ಹಿಂದಕ್ಕೆ ತಳ್ಳಲು ಹೊರಟಿದ್ದು, ವಿಮಾನದ ಬಳಿ ಬೆಂಕಿ ಹೊತ್ತಿಕೊಂಡಿದೆ. ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ. ಯಾವುದೇ ರೀತಿಯ ಗಾಯ ಅಥವಾ ಪ್ರಾಣಹಾನಿ ಆಗಿಲ್ಲ. ಇದನ್ನೂ ಓದಿ: ಹಿರಿಯ ಸಾಹಿತಿ, ರಾಷ್ಟ್ರಪ್ರಶಸ್ತಿ ವಿಜೇತ ಎನ್.ಎಸ್.ದೇವಿಪ್ರಸಾದ್ ನಿಧನ

    ಏರ್ ಇಂಡಿಯಾ ವಿಮಾನ ಮುಂಬೈನಿಂದ ಗುಜರಾತ್‍ನ ಜಾಮ್ ನಗರಕ್ಕೆ ತೆರಳುತ್ತಿತ್ತು. ಇದರಲ್ಲಿ 85 ಪ್ರಯಾಣಿಕರಿದ್ದರು ಎಂದು ತಿಳಿದು ಬಂದಿದೆ.

  • 200 ಕೋಟಿ ರೂ. ವಂಚನೆ ಪ್ರಕರಣ – ದೇಶ ತೊರೆಯದಂತೆ ಜಾಕ್ವೆಲಿನ್ ಗೆ ತಡೆ

    200 ಕೋಟಿ ರೂ. ವಂಚನೆ ಪ್ರಕರಣ – ದೇಶ ತೊರೆಯದಂತೆ ಜಾಕ್ವೆಲಿನ್ ಗೆ ತಡೆ

    ಮುಂಬೈ: ಸುಕೇಶ್ ಚಂದ್ರಶೇಖರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಾಯದಿಂದ ಸಮನ್ಸ್ ಪಡೆದಿದ್ದ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಅವರಿಗೆ ದೇಶ ತೊರೆಯದಂತೆ ವಲಸೆ ಅಧಿಕಾರಿಗಳು ಭಾನುವಾರ ಮುಂಬೈ ವಿಮಾನ ನಿಲ್ದಾಣದಲ್ಲಿ ತಡೆದಿದ್ದಾರೆ.

    ಕಾರ್ಯಕ್ರಮವೊಂದಕ್ಕೆ ದುಬೈಗೆ ತೆರಳುತ್ತಿದ್ದ ವೇಳೆ ಜಾಕ್ವೆಲಿನ್ ಅವರನ್ನು ತಡೆದು ಅಧಿಕಾರಿಗಳು ಬಂಧಿಸಿ, ಸಂಪೂರ್ಣ ವಿಚಾರಣೆ ನಡೆಸಿದ ಬಳಿಕ ಅವರನ್ನು ಬಿಟ್ಟಿದ್ದಾರೆ. ಅಲ್ಲದೇ ಮತ್ತೆ ಕರೆದಾಗ ವಿಚಾರಣೆಗೆ ಹಾಜರಾಗುವಂತೆ ದೆಹಲಿ ತನಿಖಾ ಸಂಸ್ಥೆ ತಿಳಿಸಿದೆ. 200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಜಾಕ್ವೆಲಿನ್ ವಿರುದ್ಧ ಇಡಿ ಹೊಸ ಲುಕ್ ಔಟ್ ನೋಟಿಸ್ ಜಾರಿ ಮಾಡಿದೆ. ಇದನ್ನೂ ಓದಿ: ಜಾಕ್ವೆಲಿನ್‌ಗೆ ಕಿಸ್ ಮಾಡುತ್ತಿರುವ ಸುಕೇಶ್ ಚಂದ್ರಶೇಖರ್ – ರೋಮ್ಯಾಂಟಿಕ್ ಫೋಟೋ ವೈರಲ್

    ಇತ್ತೀಚೆಗಷ್ಟೇ ಜಾಕ್ವೆಲಿನ್ ಫರ್ನಾಂಡಿಸ್, ಸುಕೇಶ್ ಚಂದ್ರಶೇಖರ್ ಜೊತೆಗಿರುವ ರೋಮ್ಯಾಂಟಿಕ್ ಫೋಟೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಫೋಟೋ ಹಲವಾರು ಅನುಮಾನಗಳಿಗೆ ಕಾರಣವಾಯಿತು. 200 ಕೋಟಿ ರೂ. ಅಕ್ರಮ ಹಣ ವರ್ಗಾವಣೆ ಆರೋಪಿ ಸುಕೇಶ್ ಚಂದ್ರಶೇಖರ್ ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯಕ್ಕೆ ತನಿಖಾ ಸಂಸ್ಥೆ ಚಾರ್ಜ್ ಶೀಟ್ ಸಲ್ಲಿಸಿದೆ. ಇದನ್ನೂ ಓದಿ: 7 ಬಿಳಿ ಕುದುರೆಗಳ ಜೊತೆ ಮಂಟಪಕ್ಕೆ ವಿಕ್ಕಿ ಕೊಡಲಿದ್ದಾರೆ ರಾಯಲ್ ಎಂಟ್ರಿ

    ಸುಕೇಶ್ ಚಂದ್ರಶೇಖರ್, ಉದ್ಯಮಿಗಳು, ರಾಜಕಾರಣಿಗಳು ಮತ್ತು ಸೆಲೆಬ್ರಿಟಿಗಳಿಗೆ ಬೆದರಿಕೆ ಹಾಕಿ ನೂರಾರು ಕೋಟಿ ಹಣ ಸುಲಿಗೆ ಮಾಡುತ್ತಿದ್ದ. ಅಲ್ಲದೇ ತಿಹಾರ್ ಜೈಲಿನಲ್ಲಿಯೇ ಇದ್ದುಕೊಂಡು ಉದ್ಯಮಿಯೊಬ್ಬರ ಪತ್ನಿಯಿಂದ 200 ಕೋಟಿ ಸುಲಿಗೆ ಹಣ ಸುಲಿಗೆ ಮಾಡಿರುವ ಆರೋಪ ಕೂಡ ಈತನ ಮೇಲಿದೆ. ಇನ್ನೂ ಸುಕೇಶ್ ಚಂದ್ರಶೇಖರ್ ಜೊತೆ ಜಾಕ್ವೆಲಿನ್ ಫರ್ನಾಂಡಿಸ್ ಹಣಕಾಸಿನ ವಹಿವಾಟುಗಳನ್ನು ನಡೆಸಿರುವ ಪುರಾವೆಗಳನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿದೆ.