Tag: Mumbai Indians

  • ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

    ಮುಂಬೈ ವಿರುದ್ಧ ಪಂಜಾಬ್‌ಗೆ ಜಯ – ನಾಳೆ ಆರ್‌ಸಿಬಿ Vs ಕಿಂಗ್ಸ್‌ ಫೈನಲ್‌

    – ಶ್ರೇಯಸ್‌ ಅಯ್ಯರ್‌ ಸ್ಫೋಟಕ ಅರ್ಧಶತಕ
    – 2ನೇ ಬಾರಿ ಫೈನಲ್‌ ಪ್ರವೇಶಿಸಿದ ಪಂಜಾಬ್‌

    ಅಹಮಾದಾಬಾದ್‌: ಕ್ವಾಲಿಫೈಯರ್‌-2ನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ವಿರುದ್ಧ ರೋಚಕ 5 ವಿಕೆಟ್‌ಗಳ ಜಯ ಸಾಧಿಸುವ ಮೂಲಕ ಪಂಜಾಬ್‌ (Punjab Kings) ಐಪಿಎಲ್‌ ಫೈನಲ್‌ಗೆ (IPL Final) ಪ್ರವೇಶಿಸಿದೆ. 5 ಬಾರಿ ಚಾಂಪಿಯನ್ ಮುಂಬೈ ತಂಡವನ್ನು ಬಗ್ಗು ಬಡಿದ ಪಂಜಾಬ್‌ 2ನೇ ಬಾರಿ ಫೈನಲ್‌ಗೆ ತಲುಪಿದ್ದು ನಾಳೆ ಆರ್‌ಸಿಬಿಯನ್ನು (RCB) ಎದುರಿಸಲಿದೆ

    ಮಳೆಯಿಂದ 2 ಗಂಟೆ 15 ನಿಮಿಷ ತಡವಾಗಿ ಆರಂಭಗೊಂಡ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಬೀಸಿದ ಮುಂಬೈ 6 ವಿಕೆಟ್‌ ನಷ್ಟಕ್ಕೆ 203 ರನ್‌ ಗಳಿಸಿತು. ಸವಾಲಿನ ಮೊತ್ತವನ್ನು ಬೆನ್ನಟ್ಟಿದ ಪಂಜಾಬ್‌ ನಾಯಕ ಶ್ರೇಯಸ್‌ ಅಯ್ಯರ್‌ (Shreyas Iyer) ಅವರ ಸ್ಫೋಟಕ ಅರ್ಧಶತಕದ ನೆರವಿನಿಂದ ಇನ್ನೂ 6 ಎಸೆತ ಇರುವಂತೆಯೇ 5 ವಿಕೆಟ್‌ ನಷ್ಟಕ್ಕೆ 207 ರನ್‌ ಗಳಿಸಿ ಜಯ ಸಾಧಿಸಿತು.

    ಪ್ರಿಯಾಂಶ್‌ ಆರ್ಯ 20 ರನ್‌, ಪ್ರಭುಸಿಮ್ರಾನ್‌ ಸಿಂಗ್‌ 6 ರನ್‌, ಬುಮ್ರಾ ಮೊದಲ ಓವರ್‌ನಲ್ಲಿ 20 ರನ್‌ ಹೊಡೆದ ಜೋಶ್‌ ಇಂಗ್ಲಿಸ್‌ 38 ರನ್‌(21 ಎಸೆತ, 5 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದಾಗ ಪಂಜಾಬ್‌ ಸ್ಕೋರ್‌ 3 ವಿಕಟ್‌ ನಷ್ಟಕ್ಕೆ 72 ರನ್‌ ಗಳಿಸಿತ್ತು. ಇದನ್ನೂ ಓದಿ: ಮುಂಬೈ ಸಂಘಟಿತ ಬ್ಯಾಟಿಂಗ್‌ – ಪಂಜಾಬ್‌ಗೆ 204 ರನ್‌ ಗುರಿ

    ಒಂದು ಹಂತದಲ್ಲಿ ಸಂಕಷ್ಟದಲ್ಲಿದ್ದರೂ ಶ್ರೇಯಸ್‌ ಅಯ್ಯರ್‌ ಮತ್ತು ನೆಹಲ್‌ ವಧೇರಾ 47 ಎಸೆತಗಳಲ್ಲಿ 84 ರನ್‌ ಜೊತೆಯಾಟವಾಡಿ ತಂಡವನ್ನು ಪಾರು ಮಾಡಿದರು. ವಧೇರಾ 48 ರನ್‌(29 ಎಸೆತ, 4 ಬೌಂಡರಿ, 2 ಸಿಕ್ಸ್‌) ಹೊಡೆದು ಔಟಾದರೆ ನಾಯಕನ ಆಟವಾಡಿದ ಶ್ರೇಯಸ್‌ ಅಯ್ಯರ್‌ ಔಟಾಗದೇ 87 ರನ್‌(41 ಎಸೆತ, 5 ಬೌಂಡರಿ, 8 ಸಿಕ್ಸ್‌) ಹೊಡೆದು ತಂಡಕ್ಕೆ ಜಯವನ್ನು ತಂದುಕೊಟ್ಟರು. ಅತ್ಯುತ್ತಮ ಆಟವಾಡಿ ತಂಡವನ್ನು ಗೆಲ್ಲಿಸಿಕೊಟ್ಟ ಶ್ರೇಯಸ್‌ ಅಯ್ಯರ್‌ ಅರ್ಹವಾಗಿಯೇ ಪಂದ್ಯಶ್ರೇಷ್ಠ ಗೌರವಕ್ಕೆ ಪಾತ್ರರಾದರು.

     

    11 ವರ್ಷಗಳ ಬಳಿಕ ಫೈನಲ್‌:
    ಪಂಜಾಬ್ ಐಪಿಎಲ್‌ನಲ್ಲಿಎರಡನೇ ಬಾರಿ ಫೈನಲ್‌ ಪ್ರವೇಶಿಸಿದೆ. 11 ವರ್ಷಗಳ ಹಿಂದೆ 2014 ರಲ್ಲಿ ಕೋಲ್ಕತ್ತಾ ವಿರುದ್ಧ ಫೈನಲ್‌ನಲ್ಲಿ ಸೋತು ಪಂಜಾಬ್‌ ರನ್ನರ್‌ ಅಪ್‌ ಅಗಿತ್ತು.

  • ಇಂದು ಪಂಜಾಬ್‌-ಮುಂಬೈ ನಡ್ವೆ ಕ್ವಾಲಿಫೈಯರ್‌-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!

    ಇಂದು ಪಂಜಾಬ್‌-ಮುಂಬೈ ನಡ್ವೆ ಕ್ವಾಲಿಫೈಯರ್‌-2 ಕದನ – ಗೆದ್ದವರೊಂದಿಗೆ ಪ್ರಶಸ್ತಿಗಾಗಿ ಆರ್‌ಸಿಬಿ ಗುದ್ದಾಟ!

    ಅಹಮದಾಬಾದ್‌: ಪಂಜಾಬ್‌ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (Mumbai Indians) ನಡುವೆ ಇಂದು ಕ್ವಾಲಿಫೈಯರ್‌-2 ಕದನ ನಡೆಯಲಿದೆ. ಗೆದ್ದ ತಂಡ ಜೂನ್‌ 3ರಂದು ಆರ್‌ಸಿಬಿ (RCB) ವಿರುದ್ಧ ಟ್ರೋಫಿಗಾಗಿ ಗುದ್ದಾಡಲಿದೆ.

    ಇಂದು ಅಹಮದಾಬಾದ್‌ನಲ್ಲಿ 2ನೇ ಕ್ವಾಲಿಫೈಯರ್ (Qualifier 2 IPL) ಪಂದ್ಯ ನಡೆಯಲಿದ್ದು, ರಾತ್ರಿ 7:30ಕ್ಕೆ ಪಂದ್ಯ ಶುರುವಾಗಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ಫೈನಲ್‌ನಲ್ಲಿ ಆರ್‌ಸಿಬಿ ವಿರುದ್ಧ ಪ್ರಶಸ್ತಿ ಸುತ್ತಿನ ಕಾದಾಟ ನಡೆಸಲಿದೆ. ಈ ನಡುವೆ ಟ್ರೋಫಿ ಗೆಲ್ಲುವ ಲೆಕ್ಕಾಚಾರವೂ ಶುರುವಾಗಿದೆ. ಇದನ್ನೂ ಓದಿ: ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

    ಉಭಯ ತಂಡಗಳಲ್ಲಿ ಸ್ಟಾರ್ ಆಟಗಾರರು ಇದ್ದು ಪಂದ್ಯದ ಚಿತ್ರಣವನ್ನೇ ಬುಡಮೇಲು ಮಾಡುವ ಸಾಮರ್ಥ್ಯ ಹೊಂದಿವೆ. ಪಂಜಾಬ್‌ ಹಾಗೂ ಮುಂಬೈ ಒಟ್ಟಾರೆ ಐಪಿಎಲ್‌ನಲ್ಲಿ 33 ಬಾರಿ ಮುಖಾಮುಖಿ ಆಗಿವೆ. ಈ ವೇಳೆ ಮುಂಬೈ 17 ಪಂದ್ಯಗಳನ್ನು ಗೆದ್ದಿದೆ. ಪಂಜಾಬ್‌ 16 ಬಾರಿ ಗೆಲುವು ಸಾಧಿಸಿದೆ. ಆದ್ರೆ 11 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಪ್ಲೇ ಆಫ್‌ ಪ್ರವೇಶಿಸಿರುವ ಪಂಜಾಬ್‌ ಕಿಂಗ್ಸ್‌ ಬಲಿಷ್ಠ ಪಡೆಯನ್ನ ಹೊಂದಿದ್ದು, ಪ್ರಶಸ್ತಿಗೆ ಮುತ್ತಿಡುವ ಕನಸು ಕಂಡಿದೆ.

    ಇತ್ತ ಆರಂಭಿಕ 5 ಪಂದ್ಯಗಳಲ್ಲಿ ಸೋಲು ಕಂಡಿದ್ದ ಮುಂಬೈ ಇಂಡಿಯನ್ಸ್‌ ನಿರೀಕ್ಷೆಗೂ ಮೀರಿದ ಪ್ರದರ್ಶನದೊಂದಿಗೆ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟಿದೆ. ಎಲಿಮಿನೇಟರ್‌-1ನಲ್ಲಿ ಗುಜರಾತ್‌ ಟೈಟನ್ಸ್‌ ತಂಡವನ್ನ ಹೊರದಬ್ಬಿ, ಕ್ವಾಲಿಫೈಯರ್‌-2ಗೆ ಲಗ್ಗೆಯಿಟ್ಟಿದೆ. ಇದನ್ನೂ ಓದಿ: ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

    ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಈಗಾಗಲೇ 42 ಪಂದ್ಯಗಳಿಗೆ ಆತಿಥ್ಯ ವಹಿಸಿದೆ. ಈ ವೇಳೆ ಮೊದಲು ಹಾಗೂ ಎರಡನೇ ಬಾರಿಗೆ ಬ್ಯಾಟ್ ಮಾಡಿದ ತಂಡಗಳು ತಲಾ 21 ಬಾರಿ ಗೆದ್ದಿವೆ. ಈ ಮೈದಾನದಲ್ಲಿ 243 ರನ್‌ ಗರಿಷ್ಠ ಸ್ಕೋರ್ ಆಗಿದೆ. ಇನ್ನು ಈ ಅಂಗಳದಲ್ಲಿ 204 ರನ್‌ವರೆಗೆ ಚೇಸಿಂಗ್‌ ಆಗಿದೆ. ಈ ಆವೃತ್ತಿಯಲ್ಲಿ ಈಗಾಗಲೇ ಈ ಮೈದಾನದಲ್ಲಿ 7 ಪಂದ್ಯಗಳು ನಡೆದಿದ್ದು, ಬ್ಯಾಟಿಂಗ್ ಮೊದಲ ಬಾರಿಗೆ ತಂಡ 6 ಪಂದ್ಯಗಳನ್ನು ಗೆದ್ದಿದೆ.

    2023ರ ಆವೃತ್ತಿಯಲ್ಲಿ ಇದೇ ಪಿಚ್‌ನಲ್ಲಿ ಚೆನ್ನೈ 15 ಓವರ್‌ಗಳಲ್ಲಿ 170 ರನ್‌ ಚೇಸ್‌ ಮಾಡಿ 5ನೇ ಬಾರಿ ಚಾಂಪಿಯನ್‌ ಆಗಿ ಹೊರಹೊಮ್ಮಿತ್ತು. ಇದನ್ನೂ ಓದಿ: RCB ಟ್ರೋಫಿ ಗೆದ್ದರೆ ಆ ದಿನವನ್ನ ʻಆರ್‌ಸಿಬಿ ಫ್ಯಾನ್ಸ್‌ ಹಬ್ಬʼದ ದಿನವನ್ನಾಗಿ ಘೋಷಿಸಿ – ಸಿಎಂಗೆ ವಿಶೇಷ ಪತ್ರ!

    ಸ್ಟಾರ್‌ ಬ್ಯಾಟರ್‌ಗಳೇ ಬಲ:
    ಮುಂಬೈ ಇಂಡಿಯನ್ಸ್ ತಂಡದಲ್ಲಿ ಸ್ಟಾರ್ ಆಟಗಾರರ ದಂಡೇ ಇದೆ. ರೋಹಿತ್ ಶರ್ಮಾ, ಜಾನಿ ಬೇರ್‌ಸ್ಟೋ ಇನಿಂಗ್ಸ್ ಆರಂಭಿಸಲಿದ್ದು, ದೊಡ್ಡ ಮೊತ್ತಕ್ಕೆ ಈ ಜೋಡ ಭದ್ರ ಅಡಿಪಾಯ ಒಡ್ಡುವ ಸಾಧ್ಯತೆಗಳಿವೆ. ಮಧ್ಯಮ ಕ್ರಮಾಂಕದಲ್ಲಿ ಬ್ಯಾಟ್ ಮಾಡುವ ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ ಈ ಬಾರಿ ಫಾರ್ಮ್‌ ಸಾಬೀತು ಮಾಡಿದ್ದಾರೆ. ಮೊದಲು ಬ್ಯಾಟ್‌ ಮಾಡುವ ತಂಡ ದೊಡ್ಡ ಮೊತ್ತ ಕಲೆಹಾಕಿದ್ರೆ ಗೆಲುವು ಸಾಧ್ಯತೆಯಿದೆ. ಜಸ್ಪ್ರಿತ್ ಬುಮ್ರಾ, ಟ್ರೆಂಟ್‌ ಬೌಲ್ಟ್‌, ಅಶ್ವನಿ ಕುಮಾರ್‌ ವೇಗದ ಬೌಲಿಂಗ್‌ನಲ್ಲಿ ತಂಡಕ್ಕೆ ನೆರವಾಗಲಿದ್ದು, ಮಿಚೆಲ್‌ ಸ್ಯಾಂಟ್ನರ್ ಸ್ಪಿನ್ ಜಾದು ಸಹ ವರ್ಕೌಟ್‌ ಆಗಲಿದೆ ಎಂದು ವಿಶ್ಲೇಷಕರು ಅಂದಾಜಿಸಿದ್ದಾರೆ. ಇನ್ನೂ ಪಂಜಾಬ್‌ನಲ್ಲೂ ಶ್ರೇಯಸ್‌ ಅಯ್ಯರ್‌, ಪ್ರಿಯಾಂಶ್‌ ಆರ್ಯ, ಸ್ಟೋಯಿನಿಸ್‌, ಶಶಾಂಕ್‌ ಸಿಂಗ್‌ ಅವರಂತಹ ಬ್ಯಾಟಿಂಗ್‌ ಪಡೆಯೇ ಇದೆ.

    ಮುಂಬೈ ಸಂಭಾವ್ಯ ಪ್ಲೇಯಿಂಗ್‌-11
    ರೋಹಿತ್ ಶರ್ಮಾ, ಜಾನಿ ಬೈರ್‌ಸ್ಟೋವ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ತಿಲಕ್ ವರ್ಮಾ, ಹಾರ್ದಿಕ್ ಪಾಂಡ್ಯ (ನಾಯಕ), ನಮನ್ ಧೀರ್, ಮಿಚೆಲ್ ಸ್ಯಾಂಟ್ನರ್, ರಾಜ್ ಬಾವಾ, ರಿಚರ್ಡ್ ಗ್ಲೀಸನ್/ರೀಸ್ ಟಾಪ್ಲೆ, ಜಸ್ಪ್ರೀತ್ ಬುಮ್ರಾ, ಟ್ರೆಂಟ್ ಬೌಲ್ಟ್, ಅಶ್ವನಿ ಕುಮಾರ್. ಇದನ್ನೂ ಓದಿ: IPL: ದೊಡ್ಡ ಅಂತರದ ಗೆಲುವು ಸಾಧಿಸಿ ಇತಿಹಾಸ ಬರೆದ ಆರ್‌ಸಿಬಿ – ಕೆಕೆಆರ್‌ ರೆಕಾರ್ಡ್‌ ಉಡೀಸ್‌

    ಪಂಜಾವ್‌ ಸಂಭಾವ್ಯ ಪ್ಲೇಯಿಂಗ್‌-11
    ಪ್ರಭ್‌ಸಿಮ್ರನ್‌ ಸಿಂಗ್, ಪ್ರಿಯಾಂಶ್ ಆರ್ಯ, ಜೋಶ್ ಇಂಗ್ಲಿಸ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್ (ನಾಯಕ), ನೆಹಲ್ ವಧೇರಾ, ಶಶಾಂಕ್ ಸಿಂಗ್, ಮಾರ್ಕಸ್ ಸ್ಟೊಯಿನಿಸ್, ಅಜ್ಮತುಲ್ಲಾ ಒಮರ್ಜಾಯ್, ಹರ್ಪ್ರೀತ್ ಬ್ರಾರ್, ಕೈಲ್ ಜೈಮಿಸನ್, ಯುಜುವೇಂದ್ರ ಚಾಹಲ್, ವಿಜಯಕುಮಾರ್ ವೈಶಾಖ್.

  • ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

    ರೋ’ಹಿಟ್‌’ ಆಟಕ್ಕೆ ಗಿಲ್‌ ಪಡೆ ಡಲ್‌; ಮುಂಬೈಗೆ 20 ರನ್‌ಗಳ ಜಯ – ಫೈನಲ್‌ ಸ್ಥಾನಕ್ಕೆ ಪಂಜಾಬ್‌ ವಿರುದ್ಧ ಫೈಟ್‌

    – ಗುಜರಾತ್‌ ಟೈಟನ್ಸ್‌ ಮನೆಗೆ

    ನ್ಯೂ ಚಂಡೀಗಢ: ರೋಹಿತ್‌ ಶರ್ಮಾ ಬ್ಯಾಟಿಂಗ್‌, ಮುಂಬೈ ಸಂಘಟಿತ ಬೌಲಿಂಗ್‌ಗೆ ಗುಜರಾತ್‌ ಟೈಟನ್ಸ್‌ ಮಕಾಡೆ ಮಲಗಿತು. ಎಲಿಮಿನೇಟರ್‌ ಪಂದ್ಯದಲ್ಲಿ ಗುಜರಾತ್‌ ವಿರುದ್ಧ ಮುಂಬೈ 20 ರನ್‌ಗಳ ಜಯ ಸಾಧಿಸಿತು. ಗಿಲ್‌ ಪಡೆ ಮನೆಗೆ ಹೋದರೆ, ಫೈನಲ್‌ ಸ್ಥಾನಕ್ಕಾಗಿ ಪಂಜಾಬ್‌ ವಿರುದ್ಧ ಮುಂಬೈ ಸೆಣಸಲಿದೆ.

    ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 20 ಓವರ್‌ಗೆ 5 ವಿಕೆಟ್‌ ನಷ್ಟಕ್ಕೆ 228 ರನ್‌ ಕಲೆಹಾಕಿತು. 229 ರನ್‌ಗಳ ಗುರಿ ಬೆನ್ನತ್ತಿದ ಗುಜರಾತ್‌ ನಿಗದಿತ ಓವರ್‌ಗೆ 6 ವಿಕೆಟ್‌ ಕಳೆದುಕೊಂಡು 208 ರನ್‌ ಗಳಿಸಿ 20 ರನ್‌ಗಳ ಸೋಲನುಭವಿಸಿತು.

    ಟಾಸ್‌ ಗೆದ್ದು ಮುಂಬೈ ಮೊದಲು ಬ್ಯಾಟಿಂಗ್‌ ಮಾಡಿತು. ರೋಹಿತ್‌ ಶರ್ಮಾ, ಜಾನಿ ಬೈರ್‌ಸ್ಟೋವ್ ಉತ್ತಮ ಆರಂಭ ನೀಡಿದರು. ಈ ಜೋಡಿ 7.2 ಓವರ್‌ಗೆ ಮೊದಲ ವಿಕೆಟ್‌ ನಷ್ಟಕ್ಕೆ 84 ರನ್‌ ಕಲೆಹಾಕಿತು. ಬೈರ್‌ಸ್ಟೋವ್‌ 22 ಬಾಲ್‌ಗೆ 3 ಸಿಕ್ಸರ್‌, 4 ಫೋರ್‌ಗಳೊಂದಿಗೆ 47 ರನ್‌ ಕಲೆಹಾಕಿದರು. ನಂತರ ಬಂದ ಸೂರ್ಯಕುಮಾರ್‌ ಯಾದವ್‌ 33 ರನ್‌ ಗಳಿಸಿ ನಿರ್ಗಮಿಸಿದರು. ಈ ನಡುವೆ ಜವಾಬ್ದಾರಿಯುತ ಆಟವಾಡಿದ ರೋಹಿತ್‌ 50 ಬಾಲ್‌ಗೆ 4 ಸಿಕ್ಸರ್‌, 9 ಫೋರ್‌ನೊಂದಿಗೆ 81 ರನ್‌ ಗಳಿಸಿ ತಂಡಕ್ಕೆ ಕೊಡುಗೆ ನೀಡಿದರು. ಹಿಟ್‌ ಮ್ಯಾನ್‌ನ ಎರಡು ಕ್ಯಾಚ್‌ ಕೈಚೆಲ್ಲಿದ್ದೇ ಗುಜರಾತ್‌ ಸೋಲಿಗೆ ಪ್ರಮುಖ ಕಾರಣವಾಯತಿಉ. ತಿಲಕ್‌ ವರ್ಮಾ 25, ಕ್ಯಾಪ್ಟನ್‌ ಹಾರ್ದಿಕ್‌ ಪಾಂಡ್ಯ (ಔಟಾಗದೇ) 22 ರನ್‌ ಗಳಿಸಿ ಮುಂಬೈ ಸವಾಲಿನ ಮೊತ್ತ ಪೇರಿಸಲು ನೆರವಾದರು.

    ಅಂತಿಮವಾಗಿ ಮುಂಬೈ 20 ಓವರ್‌ಗಳಿಗೆ 5 ವಿಕೆಟ್‌ ನಷ್ಟಕ್ಕೆ 228 ರನ್‌ ಕಲೆಹಾಕಿತು. ಗುಜರಾತ್‌ ಪರ ಪ್ರಸಿದ್ಧ್‌ ಕೃಷ್ಣ, ಸಾಯಿ ಕಿಶೋರ್‌ ತಲಾ 2 ವಿಕೆಟ್‌ ಕಿತ್ತರು. ಮೊಹಮ್ಮದ್‌ ಸಿರಾಜ್‌ 1 ವಿಕೆಟ್‌ ಪಡೆದರು.

    ಮುಂಬೈ ನೀಡಿದ 229 ರನ್‌ಗಳ ಗುರಿ ಬೆನ್ನತ್ತಿದ ಗುಜರಾತ್‌ ಟೈಟನ್ಸ್‌ಗೆ ಆರಂಭಿಕ ಆಘಾತ ಎದುರಾಯಿತು. ಮೊದಲ ಓವರ್‌ನಲ್ಲೇ ಕ್ಯಾಪ್ಟನ್‌ ಶುಭಮನ್‌ ಗಿಲ್‌ ವಿಕೆಟ್‌ ಒಪ್ಪಿಸಿ ಹೊರ ನಡೆದಿದ್ದು ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿತು. ಹೀಗಿದ್ದರೂ, ಜವಾಬ್ದಾರಿಯುತ ಆಟವಾಡಿದ ಸಾಯಿ ಸುದರ್ಶನ್‌ 49 ಬಾಲ್‌ಗೆ 10 ಫೋರ್‌, 1 ಸಿಕ್ಸರ್‌ನೊಂದಿಗೆ 80 ರನ್‌ ಗಳಿಸಿದರು. ಇವರ ಆಟ ತಂಡಕ್ಕೆ ಗೆಲುವಿನ ಭರವಸೆ ಮೂಡಿಸಿತ್ತು. ಈ ಮಧ್ಯೆ ಕುಸಾಲ್ ಮೆಂಡಿಸ್ 20 ರನ್‌ ಸಿಡಿಸಿ ಪೆವಿಲಿಯನ್‌ ಕಡೆ ನಡೆದರು. ಆಗ ಸಾಯಿ ಸುದರ್ಶನ್‌ಗೆ ವಾಷಿಂಗ್ಟನ್‌ ಸುಂದರ್‌ ಜೊತೆಯಾದರು. ಈ ಜೋಡಿ 44 ಬಾಲ್‌ಗಳಿಗೆ 84 ರನ್‌ಗಳ ಉತ್ತಮ ಜೊತೆಯಾಟ ನೀಡಿತು.

    ಆದರೆ, ಜಸ್ಪ್ರಿತ್‌ ಬುಮ್ರಾ ಎಸೆದ ಯಾರ್ಕರ್‌ಗೆ ಸುಂದರ್‌ ಕ್ಲೀನ್‌ ಬೌಲ್ಡ್‌ ಆಗಿ ಹೊರನಡೆದರು. ಅವರ ಬೆನ್ನಲ್ಲೇ ಸುದರ್ಶನ್‌ ಔಟಾಗಿದ್ದು, ತಂಡದ ಗೆಲುವಿನ ಭರವಸೆಯನ್ನು ನುಚ್ಚುನೂರು ಮಾಡಿತು. ಇನ್ನು ಶೆರ್ಫೇನ್ ರುದರ್ಫೋರ್ಡ್ (24), ರಾಹುಲ್‌ ತೆವಾಟಿಯಾ (16), ಶಾರುಖ್ ಖಾನ್ (13) ತಂಡವನ್ನು ಗೆಲುವಿನ ದಡ ಸೇರಿಸುವಲ್ಲಿ ವಿಫಲರಾದರು.

    ಟ್ರೆಂಟ್ ಬೌಲ್ಟ್ 2, ಜಸ್ಪ್ರಿತ್‌ ಬುಮ್ರಾ, ರಿಚರ್ಡ್ ಗ್ಲೀಸನ್, ಮಿಚೆಲ್ ಸ್ಯಾಂಟ್ನರ್, ಅಶ್ವನಿ ಕುಮಾರ್ ತಲಾ 1 ವಿಕೆಟ್‌ ಪಡೆದರು.

  • ಐಪಿಎಲ್‌ನಲ್ಲಿ ಎರಡೆರಡು ದಾಖಲೆ ಬರೆದ ಹಿಟ್‌ಮ್ಯಾನ್‌

    ಐಪಿಎಲ್‌ನಲ್ಲಿ ಎರಡೆರಡು ದಾಖಲೆ ಬರೆದ ಹಿಟ್‌ಮ್ಯಾನ್‌

    ನ್ಯೂ ಚಂಡೀಗಢ: ಇಲ್ಲಿ ನಡೆಯುತ್ತಿರುವ ಗುಜರಾತ್‌ ವಿರುದ್ಧದ ಎಲಿಮಿನೇಟರ್‌ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ ತಂಡದ ರೋಹಿತ್‌ ಶರ್ಮಾ (Rohit Sharma) ಐಪಿಎಲ್‌ ಇತಿಹಾಸದಲ್ಲಿ ಎರಡೆರಡು ದಾಖಲೆ ಬರೆದಿದ್ದಾರೆ.

    ರೋಹಿತ್ ಶರ್ಮಾ 7000 ರನ್ ಗಳಿಸಿದ್ದು, ಐಪಿಎಲ್‌ನಲ್ಲಿ (IPL 2025) ಅತಿ ಹೆಚ್ಚು ರನ್‌ ಗಳಿಸಿದ ಎರಡನೇ ಭಾರತೀಯ ಬ್ಯಾಟ್ಸ್‌ಮನ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಜೊತೆಗೆ 300 ಸಿಕ್ಸರ್‌ ಸಿಡಿಸಿದ ಮೊದಲ ಬ್ಯಾಟರ್‌ ಆಗಿ ಹಿಟ್‌ ಮ್ಯಾನ್‌ ಹೊರಹೊಮ್ಮಿದ್ದಾರೆ. ಅತಿ ಹೆಚ್ಚು ರನ್‌ ಗಳಿಸಿದವರ ಸಾಲಿನಲ್ಲಿ ಆರ್‌ಸಿಬಿ ತಂಡದ ವಿರಾಟ್‌ ಕೊಹ್ಲಿ ಮೊದಲ ಸ್ಥಾನದಲ್ಲಿದ್ದಾರೆ. ಇದನ್ನೂ ಓದಿ: ಈ ಸಲ ಆರ್‌ಸಿಬಿ ಕಪ್‌ ಗೆಲ್ಲದಿದ್ರೆ ಪತಿಗೆ ಡಿವೋರ್ಸ್‌ – ವೈರಲ್‌ ಆಯ್ತು ಅಭಿಮಾನಿಯ ಪೋಸ್ಟರ್‌

    ರೋಹಿತ್, ಡೆಕ್ಕನ್ ಚಾರ್ಜರ್ಸ್ ಮತ್ತು ಮುಂಬೈ ಪರ 271 ಪಂದ್ಯಗಳಲ್ಲಿ ಈ ರನ್ ಸಾಧನೆ ಮಾಡಿದ್ದಾರೆ. ಸರಾಸರಿ 30 ಕ್ಕಿಂತ ಕಡಿಮೆ, ಅತ್ಯಧಿಕ ಸ್ಕೋರ್ ಔಟಾಗದೆ 109 ರನ್‌ ಗಳಿಸಿದ್ದಾರೆ.

    ಐಪಿಎಲ್‌ನಲ್ಲಿ ಅತಿ ಹೆಚ್ಚು ರನ್‌ ಗಳಿಸಿ ಬ್ಯಾಟರ್‌ಗಳು
    ವಿರಾಟ್ ಕೊಹ್ಲಿ – 266 ಪಂದ್ಯಗಳಲ್ಲಿ 8618 ರನ್‌
    ರೋಹಿತ್ ಶರ್ಮಾ – 271 ಪಂದ್ಯಗಳಲ್ಲಿ 7000 ರನ್‌
    ಶಿಖರ್ ಧವನ್ – 222 ಪಂದ್ಯಗಳಲ್ಲಿ 6769 ರನ್
    ಡೇವಿಡ್ ವಾರ್ನರ್ – 184 ಪಂದ್ಯಗಳಲ್ಲಿ 6565‌ ರನ್
    ಸುರೇಶ್ ರೈನಾ – 205 ಪಂದ್ಯಗಳಲ್ಲಿ 5528‌ ರನ್

  • ಮುಂಬೈ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಜಯ – ನಂ.1 ಪಟ್ಟಕ್ಕೇರಿದ ಪಂಜಾಬ್‌ ಕಿಂಗ್ಸ್‌

    ಮುಂಬೈ ವಿರುದ್ಧ 7 ವಿಕೆಟ್‌ಗಳ ಭರ್ಜರಿ ಗೆಲುವು ಜಯ – ನಂ.1 ಪಟ್ಟಕ್ಕೇರಿದ ಪಂಜಾಬ್‌ ಕಿಂಗ್ಸ್‌

    ಜೈಪುರ: ಜೋಶ್ ಇಂಗ್ಲಿಸ್ (Josh Inglis), ಪ್ರಿಯಾಂಶ್‌ ಆರ್ಯ (Priyansh Arya) ಶತಕದ ಜೊತೆಯಾಟ ನೆರವಿನಿಂದ ಮುಂಬೈ ಇಂಡಿಯನ್ಸ್‌ ವಿರುದ್ಧ ಪಂಜಾಬ್‌ ಕಿಂಗ್ಸ್ 7 ವಿಕೆಟ್‌ಗಳ ಭರ್ಜರಿ ಗೆಲುವು ಕಂಡಿದೆ. ಈ ಮೂಲಕ ಅಂಕಪಟ್ಟಿಯಲ್ಲಿ ನಂ.1 ಸ್ಥಾನದೊಂದಿಗೆ ಪ್ಲೇ ಆಫ್‌ಗೆ ಲಗ್ಗೆಯಿಟ್ಟಿದೆ. 11 ವರ್ಷಗಳ ಬಳಿಕ ಶ್ರೇಯಸ್‌ ಅಯ್ಯರ್‌ ನಾಯಕತ್ವದಲ್ಲಿ ಪ್ಲೇ ಆಫ್‌ಗೆ ಎಂಟ್ರಿ ಕೊಟ್ಟ ಪಂಜಾಬ್‌ ಕಿಂಗ್ಸ್‌ (Punjab Kings) ಇದೇ ಮೊದಲಬಾರಿಗೆ ನಂ.1 ಸ್ಥಾನದೊಂದಿಗೆ ಪ್ಲೇ ಆಫ್‌ಗೆ ಅರ್ಹತೆ ಪಡೆದುಕೊಂಡಿದೆ.

    ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಕ್ರೀಸ್‌ಗಿಳಿದ ಮುಂಬೈ (Mumbai Indians) 20 ಓವರ್‌ಗಳಲ್ಲಿ 7 ವಿಕೆಟ್‌ ನಷ್ಟಕ್ಕೆ 184 ರನ್‌ ಗಳಿಸಿತ್ತು. ಸ್ಪರ್ಧಾತ್ಮಕ ಮೊತ್ತದ ಗುರಿ ಬೆನ್ನಟ್ಟಿದ ಪಂಜಾಬ್‌ 18.3 ಓವರ್‌ಗಳಲ್ಲಿ 3 ವಿಕೆಟ್‌ ನಷ್ಟಕ್ಕೆ 187 ರನ್‌ ಚಚ್ಚಿ ಗೆಲುವು ಸಾಧಿಸಿತು. ಈ ಪಂದ್ಯದ ಮುಕ್ತಾಯದೊಂದಿಗೆ ಉಭಯ ತಂಡಗಳೂ 18ನೇ ಆವೃತ್ತಿಯ ಲೀಗ್‌ ಸುತ್ತಿನ  ಪಂದ್ಯಗಳನ್ನು ಮುಕ್ತಾಯಗೊಳಿಸಿದವು.

    ನಿಧಾನಗತಿಯ ಬ್ಯಾಟಿಂಗ್‌ ಆರಂಭಿಸಿದ ಪಂಜಾಬ್‌ 4.2 ಓವರ್‌ಗಳಲ್ಲಿ 34 ರನ್‌ಗಳಿಗೆ ಮೊದಲ ವಿಕೆಟ್‌ ಕಳೆದುಕೊಂಡಿತ್ತು. ಆದ್ರೆ 2ನೇ ವಿಕೆಟ್‌ಗೆ ಜೋಶ್‌ ಇಂಗ್ಲಿಸ್‌ ಹಾಗೂ ಪ್ರಿಯಾಂಶ್‌ ಆರ್ಯ ಶತಕದ ಜೊತೆಯಾಟ ನೆರವಿನಿಂದ ಸುಲಭ ಗೆಲುವಿನತ್ತ ಮುನ್ನಡೆಯಿತು. 2ನೇ ವಿಕೆಟಿಗೆ ಈ ಜೋಡಿ 59 ಎಸೆತಗಳಲ್ಲಿ 109 ರನ್‌ ಗಳಿಸಿತು. ಈ ವೇಳೆ ಸ್ಪೋಟಕ ಬ್ಯಾಟಿಂಗ್‌ ನಡೆಸುತ್ತಿದ್ದ ಪ್ರಿಯಾಂಶ್‌ ಆರ್ಯ 35 ಎಸೆತಗಳಲ್ಲಿ 2 ಸಿಕ್ಸರ್‌, 9 ಬೌಂಡರಿ ಸಹಿತ 62 ರನ್‌ ಸಿಡಿಸಿ ಔಟಾಗುತ್ತಿದ್ದಂತೆ ಜೋಶ್‌ ಇಂಗ್ಲಿಷ್‌ ಆರ್ಭಟ ಮುಂದುವರಿಸಿದರು. ಇದಕ್ಕೆ ನಾಯಕ ಶ್ರೇಯಸ್‌ ಅಯ್ಯರ್‌ ಕೂಡ ಸಾಥ್‌ ನೀಡಿದ್ರು.

    ಇಂಗ್ಲಿಷ್‌ 48 ಎಸೆತಗಳಲ್ಲಿ 73 ರನ್‌ (42 ಎಸೆತ, 3 ಸಿಕ್ಸರ್‌, 9 ಬೌಂಡರಿ) ಚಚ್ಚಿದ್ರೆ, ಶ್ರೇಯಸ್‌ ಅಯ್ಯರ್‌ 16 ಎಸೆತಗಳಲ್ಲಿ ಅಜೇಯ 26 ರನ್‌, ನೇಹಾಲ್‌ ವಧೇರ ಅಜೇಯ 2 ರನ್‌ ಗಳಿಸಿ ಗೆಲುವಿನ ದಡ ಸೇರಿಸಿದ್ರು.

    ಇದಕ್ಕೂ ಮುನ್ನ ಬ್ಯಾಟಿಂಗ್ ಮಾಡಿದ ಮುಂಬೈ ಇಂಡಿಯನ್ಸ್ ಸ್ಫೋಟಕ ಆರಂಭ ಪಡೆಯಲು ವಿಫಲವಾಯಿತು. ಮೊದಲ ವಿಕೆಟ್​ಗೆ ರೋಹಿತ್​-ರ‍್ಯಾನ್‌ ರಿಕಲ್ಟನ್ ಜೋಡಿ 45 ರನ್​ಗಳ ಜೊತೆಯಾಟ ನೀಡಿತು. ರಿಕಲ್ಟನ್‌ 20 ಎಸೆತಗಳಲ್ಲಿ​ 5 ಬೌಂಡರಿಗಳ ಸಹಿತ 27 ರನ್​ಗಳಿಸಿ ಔಟಾದರು. ರೋಹಿತ್ ಶರ್ಮಾ ಕೂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಮತ್ತೆ ವಿಫಲರಾದರು. ರೋಹಿತ್‌ ಶರ್ಮಾ 21 ಎಸೆತಗಳಲ್ಲಿ 24 ರನ್​ಗಳಿಸಿ ಔಟಾದರು. ನಂತರ ಬಂದ ತಿಲಕ್ ವರ್ಮಾ ಕೇವಲ 1 ರನ್​ಗೆ ವಿಕೆಟ್ ಒಪ್ಪಿಸಿ ನಿರಾಶೆ ಮೂಡಿಸಿದರು. ಸ್ಪೋಟಕ ಪ್ರದರ್ಶನ ನೀಡುತ್ತಿದ್ದ ವಿಲ್ ಜಾಕ್ಸ್ ಕೂಡ 8 ಎಸೆತಗಳಲ್ಲಿ 17 ರನ್​ಗಳಿಸಿ ಔಟ್ ಆದರು.

    ಅಲ್ಪಮೊತ್ತಕ್ಕೆ ಕುಸಿಯುವ ಭೀತಿ ಎದುರಿಸಿದ್ದ ಮುಂಬೈಗೆ ನಾಯಕ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಚೇತರಿಕೆ ನೀಡಿದರು. ಇವರಿಬ್ಬರು 5ನೇ ವಿಕೆಟ್ ಜೊತೆಯಾಟದಲ್ಲಿ 23 ಎಸೆತಗಳಲ್ಲಿ 44 ರನ್​ಗಳಿಸಿದರು. ಪಾಂಡ್ಯ 15 ಎಸೆತಗಳಲ್ಲಿ ತಲಾ 2 ಬೌಂಡರಿ, 2 ಸಿಕ್ಸರ್ ಸೇರಿ 26 ರನ್​ಗಳಿಸಿದರು. ಕೊನೆಯಲ್ಲಿ ಅಬ್ಬರಿಸಿದ ಸೂರ್ಯಕುಮಾರ್ ಹಾಗೂ ನಮನ್ ಧೀರ್ ಜೋಡಿ 6ನೇ ವಿಕೆಟ್ ಜೊತೆಯಾಟದಲ್ಲಿ 17 ಎಸೆತಗಳಲ್ಲಿ 31 ರನ್​ ಸೇರಿಸಿದರು. ನಮನ್ 12 ಎಸೆತಗಳಲ್ಲಿ 2 ಸಿಕ್ಸರ್ ಸಹಿತ 20 ರನ್​ಗಳಿಸಿದರು. ಕೊನೆಯವರೆಗೂ ಹೋರಾಡಿದ ಸೂರ್ಯಕುಮಾರ್ ಯಾದವ್ 39 ಎಸೆತಗಳಲ್ಲಿ 6 ಬೌಂಡರಿ, 2 ಸಿಕ್ಸರ್​ಗಳ ಸಹಿತ 57 ರನ್​ಗಳಿಸಿ ಕೊನೆಯ ಎಸೆತದಲ್ಲಿ ಅರ್ಷ್‌ದೀಪ್‌ ಸಿಂಗ್‌ಗೆ ವಿಕೆಟ್ ಒಪ್ಪಿಸಿದರು.

    ಪಂಜಾಬ್ ಕಿಂಗ್ಸ್ ಪರ ಅರ್ಷ್‌ದೀಪ್‌ ಸಿಂಗ್, ಮಾರ್ಕೊ ಜಾನ್ಸನ್, ವೈಶಾಕ್ ವಿಜಯಕುಮಾರ್ ತಲಾ 2 ವಿಕೆಟ್‌ ಕಿತ್ತರೆ, ಹರ್ಪ್ರೀತ್‌ ಬ್ರಾರ್ 1 ವಿಕೆಟ್‌ ಪಡೆದರು.

  • IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

    IPL 2025 | ಕೊನೆಯಲ್ಲಿ ʻಸನ್‌ʼ ಸ್ಟ್ರೋಕ್‌ – ಮೊದಲೆರಡು ಸ್ಥಾನ ಕಳೆದುಕೊಂಡರೆ ಆರ್‌ಸಿಬಿಗೆ ಆಗುವ ನಷ್ಟವೇನು?

    ಲಕ್ನೋ: 18ನೇ ಆವೃತ್ತಿಯ ಐಪಿಎಲ್‌ (IPL 2025) ಆವೃತ್ತಿ ಇನ್ನೇನು ಮುಕ್ತಾಯ ಘಟಕ್ಕೆ ತಲುಪುತ್ತಿದೆ. ಲೀಗ್‌ ಸುತ್ತಿನಲ್ಲಿ ಉತ್ತಮ ಪ್ರದರ್ಶನ ಕಾಯ್ದುಕೊಂಡಿದ್ದ ಆರ್‌ಸಿಬಿಗೆ (RCB) ಕೊನೆಕೊನೆಯಲ್ಲಿ ಮರ್ಮಾಘಾತ ಆಗಿದೆ.

    ಸನ್‌ ರೈಸರ್ಸ್‌ ಹೈದರಾಬಾದ್‌ (SRH) ವಿರುದ್ಧದ ಸೋಲಿನಿಂದ ಇದೀಗ ಲೀಗ್‌ ಸುತ್ತಿನಲ್ಲಿ 2ನೇ ಸ್ಥಾನವನ್ನೂ ಕಳೆದುಕೊಳ್ಳುವ ಆತಂಕ ಎದುರಾಗಿದೆ. ಇದರಿಂದ ಟ್ರೋಫಿ ಗೆಲ್ಲುವ ಕನಸು ಕಂಡಿರುವ ಆರ್‌ಸಿಬಿಗೆ ದೊಡ್ಡ ನಷ್ಟ ಉಂಟಾಗುವ ಸಾಧ್ಯತೆ ಇದೆ. ಅದು ಹೇಗೆ ಅನ್ನೋದನ್ನ ತಿಳಿಯಬೇಕಿದ್ದರೆ ಮುಂದೆ ಓದಿ…

    18ನೇ ಆವೃತ್ತಿಯ ಐಪಿಎಲ್‌ ಪ್ಲೇ ಆಫ್‌ಗೆ ಗುಜರಾತ್‌, ಪಂಜಾಬ್‌, ಆರ್‌ಸಿಬಿ, ಮುಂಬೈ ತಂಡಗಳು ಈಗಾಗಲೇ ಲಗ್ಗೆಯಿಟ್ಟಿವೆ. ಈ ನಾಲ್ಕು ತಂಡಗಳಲ್ಲಿ ಈಗ ನಂ.1, ನಂ.2 ಪಟ್ಟಕ್ಕೆ ಹಣಾಹಣಿ ನಡೆಯುತ್ತಿದೆ. ಗುಜರಾತ್‌, ಆರ್‌ಸಿಬಿ, ಮುಂಬೈ ತಲಾ 13 ಪಂದ್ಯಗಳನ್ನಾಡಿದ್ದರೆ, ಪಂಜಾಬ್‌ ಕಿಂಗ್ಸ್‌ಗೆ ಮಾತ್ರ ಇನ್ನೂ 2 ಪಂದ್ಯಗಳು ಬಾಕಿಯಿವೆ.

    ನಂ.2 ಸ್ಥಾನವೂ ಕಳೆದುಕೊಳ್ಳುತ್ತಾ ಆರ್‌ಸಿಬಿ?
    ಸದ್ಯ ಸನ್‌ ರೈಸರ್ಸ್‌ ವಿರುದ್ಧದ ಸೋಲಿನಿಂದ 3ನೇ ಸ್ಥಾನಕ್ಕೆ ಕುಸಿದಿರುವ ಆರ್‌ಸಿಬಿಗೆ ಮತ್ತೆ 1 ಅಥವಾ 2ನೇ ಸ್ಥಾನಕ್ಕೇರುವ ಅವಕಾಶವಿದೆ. ಮುಂದಿನ ಪಂದ್ಯದಲ್ಲಿ ಪಂಜಾಬ್‌ ಕಿಂಗ್ಸ್‌, ಡೆಲ್ಲಿ ಕ್ಯಾಪಿಟಲ್ಸ್‌ ವಿರುದ್ಧ ಸೋತು, ಮುಂಬೈ ವಿರುದ್ಧ ಕಡಿಮೆ ರನ್‌ ಅಂತರದಿಂದ ಗೆಲ್ಲಬೇಕು. ಗುಜರಾತ್‌ ಟೈಟಾನ್ಸ್‌ ಸಿಎಸ್‌ಕೆ ವಿರುದ್ಧ ಸೋಲಬೇಕು. ಇದೇ ವೇಳೆ ಮುಂಬೈ ಪಂಜಾಬ್‌ ವಿರುದ್ಧ ಕಡಿಮೆ ರನ್‌ ಅಂತರದಿಂದ ಸೋತು. ಆರ್‌ಸಿಬಿ ಲಕ್ನೋ ವಿರುದ್ಧ ಉತ್ತಮ ರನ್‌ ರೇಟ್‌ನಿಂದ ಗೆದ್ದರೆ, ಆಗ ಆರ್‌ಸಿಬಿ ಮೊದಲ ಅಥವಾ ಅಗ್ರಸ್ಥಾನಕ್ಕೇರುವ ಸಾಧ್ಯತೆಗಳಿವೆ. ಏಕೆಂದರೆ ನೆಟ್ ರನ್‌ರೇಟ್‌ನಲ್ಲಿ ಮುಂಬೈ ಇಂಡಿಯನ್ಸ್‌ ಎಲ್ಲರಿಗಿಂತ ಮುಂದಿದೆ. ಮುಂಬೈ +1.292 ನೆಟ್‌ರನ್‌ ರೇಟ್‌ ಹೊಂದಿದ್ದರೆ, ಗುಜರಾತ್‌ +0.602, ಪಂಜಾಬ್‌ +0.389, ಆರ್‌ಸಿಬಿ +0.255 ನೆಟ್‌ ರನ್‌ರೇಟ್‌ ಹೊಂದಿದೆ.

    ಮೊದಲೆರಡು ಸ್ಥಾನ ಕಸಿದರೆ ಆರ್‌ಸಿಬಿಗೆ ಆಗುವ ನಷ್ಟ ಏನು?
    ಸಾಮಾನ್ಯವಾಗಿ ಐಪಿಎಲ್‌ನಲ್ಲಿ ಮೊದಲ 2 ಸ್ಥಾನಗಳಲ್ಲಿರುವ ತಂಡಗಳಿಗೆ ಹೆಚ್ಚು ಲಾಭ. ಏಕೆಂದರೆ ಮೊದಲ ಕ್ವಾಲಿಫೈಯರ್‌ 1ನಲ್ಲಿ ಸೆಣಸಿದಾಗ ಗೆದ್ದ ತಂಡ ನೇರವಾಗಿ ಫೈನಲ್‌ ಪ್ರವೇಶಿಸಿದ್ರೆ, ಸೋತ ತಂಡಕ್ಕೆ ಮತ್ತೊಂದು ಅವಕಾಶ ಸಿಗಲಿದೆ. ಆದ್ರೆ 3 ಮತ್ತು 4ನೇ‌ ಸ್ಥಾನ ಪಡೆಯುವ ತಂಡಗಳಿಗೆ ಒಂದೊಂದೇ ಅವಕಾಶ ಇರುತ್ತದೆ. ಎಲಿಮಿನೇಟರ್‌ 1ನಲ್ಲಿ ಮೂರು ಮತ್ತು 4ನೇ ಸ್ಥಾನ ಪಡೆದ ತಂಡಗಳು ಸೆಣಸಲಿದ್ದು, ಸೋತ ತಂಡ ಮನೆಗೆ ಹೋಗಬೇಕಾಗುತ್ತದೆ. ಗೆದ್ದ ತಂಡ ಕ್ವಾಲಿಫೈಯರ್‌ 1ನಲ್ಲಿ ಸೋತ ತಂಡದ ಜೊತೆಗೆ ಕ್ವಾಲಿಫೈಯರ್‌-2ನಲ್ಲಿ ಸೆಣಸಬೇಕಾಗುತ್ತದೆ. ಕ್ವಾಲಿಫೈಯರ್‌ 2ನಲ್ಲಿ ಗೆದ್ದ ತಂಡ ಫೈನಲ್‌ ಪ್ರವೇಶಿಸಲಿದೆ. ಹೀಗಾಗಿ ಆರ್‌ಸಿಬಿಗೆ ಮೊದಲ 2 ಸ್ಥಾನಗಳಲ್ಲಿ ಕಾಯ್ದುಕೊಳ್ಳುತ್ತಾ ಅನ್ನೋದನ್ನ ಕಾದುನೋಡಬೇಕಿದೆ.

    ಆರ್‌ಸಿಬಿಗೆ ಹೀನಾಯ ಸೋಲು:
    ಇನ್ನೂ ಶುಕ್ರವಾರ ಸನ್‌ ರೈಸರ್ಸ್‌ ಹೈದರಾಬಾದ್‌ ವಿರುದ್ಧ ಲಕ್ನೋದ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಆರ್‌ಸಿಬಿ 42 ರನ್‌ಗಳ ಅಂತರದಿಂದ ಸೋಲು ಕಂಡಿದೆ. ಇದರೊಂದಿಗೆ ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೆ ಕುಸಿದಿದೆ.

    .

  • ರನ್‌ ಮಳೆಯಲ್ಲಿ ಕೊಚ್ಚಿ ಹೋಯ್ತು ರಾಜಸ್ಥಾನ – ಮೊದಲ ಸ್ಥಾನಕ್ಕೆ ಜಿಗಿದ ಮುಂಬೈ

    ರನ್‌ ಮಳೆಯಲ್ಲಿ ಕೊಚ್ಚಿ ಹೋಯ್ತು ರಾಜಸ್ಥಾನ – ಮೊದಲ ಸ್ಥಾನಕ್ಕೆ ಜಿಗಿದ ಮುಂಬೈ

    – ಸತತ 6 ಜಯ ಸಾಧಿಸಿ 14 ಅಂಕದೊಂದಿಗೆ ಇಂಡಿಯನ್ಸ್‌ ಕಮಾಲ್‌

    ಜೈಪುರ: ರಯಾನ್ ರಿಕೆಲ್ಟನ್, ರೋಹಿತ್‌ ಶರ್ಮಾ, ಸೂರ್ಯಕುಮಾರ್‌ ಯಾದವ್‌, ನಾಯಕ ಹಾರ್ದಿಕ್‌ ಪಾಂಡ್ಯ ಅವರ ರನ್‌ ಮಳೆಯ ಆಟದಿಂದ ರಾಜಸ್ಥಾನ ರಾಯಲ್ಸ್‌ ವಿರುದ್ಧ ಮುಂಬೈ ಇಂಡಿಯನ್ಸ್‌ 100 ರನ್‌ಗಳ ಭರ್ಜರಿ ಜಯ ಸಾಧಿಸಿದೆ.

    ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಮುಂಬೈ ಕೇವಲ 2 ವಿಕೆಟ್‌ ನಷ್ಟಕ್ಕೆ 217 ರನ್‌ ಹೊಡೆಯಿತು. ಕಠಿಣ ಸವಾಲನ್ನು ಪಡೆದ ರಾಜಸ್ಥಾನ 16.1 ಓವರ್‌ಗಳಲ್ಲಿ 117 ರನ್‌ ಗಳಿಸಿ ಆಲೌಟ್‌ ಆಗಿದೆ. ಸತತ 6 ಜಯದೊಂದಿಗೆ ಉತ್ತಮ ರನ್‌ ರೇಟ್‌ ಹೊಂದಿರುವ ಕಾರಣ ಮುಂಬೈ ಇಂಡಿಯನ್ಸ್‌ ಅಂಕಪಟ್ಟಿಯಲ್ಲಿ 14 ಅಂಕದೊಂದಿಗೆ ಮೊದಲ ಸ್ಥಾನಕ್ಕೆ ಏರಿದರೆ ಅಷ್ಟೇ ಅಂಕ ಪಡೆದಿರುವ ಆರ್‌ಸಿಬಿ ಎರಡನೇ ಸ್ಥಾನಕ್ಕೆ ಜಾರಿದೆ.

    ರಾಜಸ್ಥಾನ್‌ ತಂಡವು ಆರಂಭಿಕ ಹಂತದಲ್ಲೇ ಆಘಾತ ಅನುಭವಿಸಿತು. ಗುಜರಾತ್‌ ವಿರುದ್ಧ ಆಡಿದ ಕಳೆದ ಪಂದ್ಯದಲ್ಲಿ ಆರಂಭಿಕರಾದ ಯಶಸ್ವಿ ಜೆಸ್ವಾಲ್‌ ಹಾಗೂ ವೈಭವ್‌ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. ಅದೇ ಆಟದ ನಿರೀಕ್ಷೆಯಲ್ಲಿದ್ದ ಅಭಿಮಾನಿಗಳಿಗೆ ಇಂದು ಈ ಜೋಡಿ ನಿರಾಸೆ ಮೂಡಿಸಿತು. ಮೊದಲೇ ಓವರ್‌ನಲ್ಲೇ ದೀಪಕ್‌ ಚಹಾರ್‌ ಬೌಲಿಂಗ್‌ ದಾಳಿಗೆ ವೈಭವ್‌ ಸೂರ್ಯವಂಶಿ ಓಟಾಗಿ, ಪೆವಿಯನ್‌ನತ್ತ ಮುಖ ಮಾಡಿದರು. ಯಶಸ್ವಿ ಜೈಸ್ವಾಲ್‌ ಕೂಡಾ ಹೆಚ್ಚು ಹೊತ್ತು ಪೆವಿಲಿಯನ್‌ನಲ್ಲಿರದೇ ಬೋಲ್ಟ್‌ಗೆ ಕ್ಲೀನ್‌ ಬೋಲ್ಡ್‌ ಆದರು. ಅದಾಗಲೇ ರಾಜಸ್ಥಾನ ತಂಡ 2 ಓವರ್‌ಗೆ 18 ರನ್‌ನಷ್ಟಕ್ಕೆ 2 ವಿಕೆಟ್‌ ಕಳೆದುಕೊಂಡಿತ್ತು.

    ಬಳಿಕ ಬಂದ ನಿತೀಶ್‌ ರಾಣಾ ಕೂಡ 11 ಎಸೆತಗಳಲ್ಲಿ 9 ರನ್‌ ಗಳಿಸಿ ಓಟಾದರು. ಮಧ್ಯಮ ಕ್ರಮಾಂಕದಲ್ಲಿ ಯಾರು ಸಹ ಹೆಚ್ಚು ಹೊತ್ತು ಕ್ರೀಸ್‌ನಲ್ಲಿರಲಿಲ್ಲ. 8 ಎಸೆತಗಳಲ್ಲಿ 16 ರನ್‌ ಬಾರಿಸಿದ್ದ ತಂಡದ ನಾಯಕ ರಿಯಾನ್‌ ಪರಾಗ್‌ರನ್ನು ಜಸ್ಪ್ರೀತ್‌ ಬುಮ್ರಾ ವಿಕೆಟ್‌ ಕಿತ್ತು ಪೆವಿಲಿಯನ್‌ಗೆ ಕಳುಹಿಸಿದರು. ಬಳಿಕ ಬಂದ ಜುರೇಲ್‌ 11 ಎಸೆತಕ್ಕೆ 11ರನ್‌ ಕಲೆಹಾಕಿದರೆ, ಹೆಟ್ಮೆಯರ್‌ ಶೂನ್ಯಕ್ಕೆ ಓಟಾದರು.

    ಅಷ್ಟರಲ್ಲಾಗಲೇ 4 ಓವರ್‌ನಲ್ಲೇ ರಾಜಸ್ಥಾನ ತಂಡವು 5 ವಿಕೆಟ್‌ ಕಳೆದುಕೊಂಡಿತ್ತು. ಬಳಿಕ ಕ್ರೀಸ್‌ಗೆ ಬಂದ ಜೋಫ್ರಾ ಆರ್ಚರ್‌ 27 ಎಸೆತಗಳಲ್ಲಿ 30 ರನ್‌ ಬಾರಿಸಿ, ಮುಂಬೈ ಬೌಲರ್ಸ್‌ಗಳ ದಾಳಿಗೆ ಓಟಾದರು. ಬಳಿಕ ಬಂದ ಮಹೀಶ್‌ ತೀಕ್ಷಣ ಹಾಗೂ ಕುಮಾರ್‌ ಕಾರ್ತಿಕೇಯ ಒಂದಕ್ಕಿಗೆ ಮುಂಬೈ ಬೌಲರ್ಸ್‌ಗೆ ಶರಣಾದರು. ಮುಂಬೈ ಬೌಲರ್ಸ್‌ಗಳ ದಾಳಿಗೆ ಧೂಳಿಪಟವಾದ ರಾಜಸ್ಥಾನ ಬ್ಯಾಟರ್ಸ್‌ ರನ್‌ ಕದಿಯಲು ಪರದಾಡಿದರು

    ಮುಂಬೈ ಪರ ಬೋಲ್ಟ್‌ ಹಾಗೂ ಕರಣ್‌ ಶರ್ಮಾ ತಲಾ 3 ವಿಕೆಟ್‌ಕಿತ್ತರು. ಬುಮ್ರಾ 2 ವಿಕೆಟ್‌, ದೀಪಕ್‌ ಚಹಾರ್‌ ಹಾಗೂ ಹಾರ್ದಿಕ್‌ ಪಾಂಡ್ಯ ತಲಾ 1 ವಿಕೆಟ್‌ ಪಡೆದರು.

    ಟಾಸ್‌ ಸೋತು ಮೊದಲು ಬ್ಯಾಟ್ ಮಾಡಿದ ಮುಂಬೈ ಇಂಡಿಯನ್ಸ್ ತಂಡದ ಆರಂಭ ಉತ್ತಮವಾಗಿತ್ತು. ಆರಂಭಿಕರಾದ ರೋಹಿತ್ ಶರ್ಮಾ, ರಯಾನ್‌ ರಿಕಲ್ಟನ್‌ ಭರ್ಜರಿ ಜೊತೆಯಾಟವಾಡಿದ್ದು, ಈ ಜೋಡಿಯನ್ನು ಕಟ್ಟಿ ಹಾಕುವಲ್ಲಿ ಆರ್‌ಆರ್‌ ತಂಡದ ಬೌಲರ್‌ಗಳು ವಿಫಲರಾದರು.

    ಪವರ್ ಪ್ಲೇನಲ್ಲಿ ಇವರಿಬ್ಬರ ಜೊತೆಯಾಟವು ಸ್ಟೇಡಿಯಂನಲ್ಲಿ ಫ್ಯಾನ್ಸ್‌ ಹುಚ್ಚೆದ್ದು ಕುಣಿಯುವಂತೆ ಮಾಡಿತು. ಮುಂಬೈ ಇಂಡಿಯನ್ಸ್‌ ಮೊದಲ 6 ಓವರ್‌ಗಳಲ್ಲಿ ವಿಕೆಟ್‌ ನಷ್ಟವಿಲ್ಲದೆ 58 ರನ್‌ ಸಿಡಿಸಿತು. ಈ ಜೋಡಿಯನ್ನು ಕಟ್ಟಿಹಾಕಲು ರಾಜಸ್ಥಾನ್‌ ಬೌಲರ್ಸ್‌ ಪರದಾಡಿದರು.

    ರಯಾನ್‌ ರಿಕಲ್ಟನ್‌ ತಮ್ಮ ಅಮೋಘ ಬ್ಯಾಟಿಂಗ್ ಪ್ರದರ್ಶನವನ್ನು ಮುಂದುವರಿಸಿದ್ದು, 9ನೇ ಓವರ್‌ನಲ್ಲಿ ಕುಮಾರ್‌ ಕಾರ್ತಿಕೇಯ ಎಸೆದ ಐದನೇ ಎಸೆತಕ್ಕೆ ಸಿಕ್ಸರ್ ಬಾರಿಸುವ ಮೂಲಕ, 29 ಎಸೆತಗಳಲ್ಲಿ ಅರ್ಧಶತಕ ಸಿಡಿಸಿ ಸಂಭ್ರಮಿಸಿದರು. 71 ಎಸೆತಗಳಲ್ಲಿ 116 ರನ್‌ ಕಲೆ ಹಾಕಿದ ರೋಹಿತ್‌ ಹಾಗೂ ರಯಾನ್‌ ಜೊಡಿಯ ಓಟಕ್ಕೆ 11 ನೇ ಓವರ್‌ನಲ್ಲಿ ಮಹೀಶ್‌ ತೀಕ್ಷಣ್ ಬ್ರೇಕ್‌ ಹಾಕಿದರು. ರಯಾನ್‌ ರಿಕಲ್ಟನ್‌ 38 ಎಸೆತಗಳಲ್ಲಿ 61 ರನ್‌ (7 ಬೌಂಡರಿ, 3 ಸಿಕ್ಸರ್‌) ಸಿಡಿಸಿ ಓಟಾದರು.

    ಉತ್ತಮ ಫಾರ್ಮ್‌ನಲ್ಲಿದ್ದ ರೋಹಿತ್ ಶರ್ಮಾ ಮತ್ತೊಮ್ಮೆ ಅರ್ಧಶತಕ ಬಾರಿಸಿ ಮಿಂಚಿದರು. ಇವರು 36 ಎಸೆತಗಳಲ್ಲಿ 53 ರನ್‌ (9 ಬೌಂಡರಿ) ಬಾರಿಸಿ 12ನೇ ಓವರ್‌ನ 4ನೇ ಎಸೆತದಲ್ಲಿ ರಿಯಾನ್‌ ಪರಾಗ್‌ಗೆ ವಿಕಟ್‌ ಒಪ್ಪಿಸಿದರು. ಅದಾಗಲೇ ಮುಂಬೈ ತಂಡ 2 ವಿಕೆಟ್‌ ನಷ್ಟಕ್ಕೆ 123 ರನ್‌ ಕಲೆ ಹಾಕಿತ್ತು.

    ರೋಹಿತ್ ಶರ್ಮಾ ಔಟ್ ಆಗುತ್ತಿದ್ದಂತೆ ಕ್ರೀಸ್‌ಗೆ ಬಂದ ಹಾರ್ದಿಕ್ ಪಾಂಡ್ಯ ಹಾಗೂ ಸೂರ್ಯಕುಮಾರ್ ಯಾದವ್ ಜೋಡಿ ಆಧಾರವಾಯಿತು. ಈ ಜೋಡಿ ತಮ್ಮ ಪವರ್‌ ಫುಲ್‌ ಹೊಡೆತಗಳಿಂದ ಎದುರಾಳಿ ಬೌಲರ್‌ಗಳನ್ನು ಬೆಂಡೆತ್ತಿತು. ಈ ಜೋಡಿ ಕಟ್ಟಿ ಹಾಕುವುದು ರಾಜಸ್ಥಾನ ತಂಡಕ್ಕೆ ದೊಡ್ಡ ಸವಾಲಾಗಿತ್ತು.

    ಫಜಲ್‌ ಫರೂಕಿ ಅವರ 18ನೇ ಓವರ್ ಒಂದರಲ್ಲೇ 21 ರನ್‌ಗಳು ಹರಿದು ಬಂದಿದೆ. ಸೂರ್ಯಕುಮಾರ್ ಯಾದವ್ 23 ಎಸೆತಗಳಲ್ಲಿ 4 ಬೌಂಡರಿ, 3 ಸಿಕ್ಸರ್ ಸಹಾಯದಿಂದ ಅಜೇಯ 48 ರನ್‌ ಸಿಡಿಸಿದರು. ಹಾರ್ದಿಕ್ ಪಾಂಡ್ಯ 23 ಎಸೆತಗಳಲ್ಲಿ 6 ಬೌಂಡರಿ, 1 ಸಿಕ್ಸರ್‌ ಸೇರಿದಂತೆ ಅಜೇಯ 48 ರನ್‌ ಕಲೆ ಹಾಕಿದರು. ಮುಂಬೈ ಇಂಡಿಯನ್ಸ್ ತಂಡ 20 ಓವರ್‌ಗಳಲ್ಲಿ 2 ವಿಕೆಟ್‌ ನಷ್ಟಕ್ಕೆ 217 ರನ್‌ ಕಲೆಹಾಕಿತ್ತು. ರಾಜಸ್ಥಾನ್‌ ಬೌಲರ್ಸ್‌ಗಳಾದ ಮಹೀಶ್ ತೀಕ್ಷಣ್‌, ರಿಯಾನ್‌ ಪರಾಗ್‌ ತಲಾ ಒಂದು ವಿಕೆಟ್‌ ಕಬಳಿಸಿದರು.

    ಪಿಂಕ್‌ ಜೆರ್ಸಿ ಧರಿಸಿದ್ದ ರಾಜಸ್ಥಾನ್ ರಾಯಲ್ಸ್
    ವಿಶೇಷವಾಗಿ ಗ್ರಾಮೀಣ ಮಹಿಳೆಯರ ಉನ್ನತಿಗಾಗಿ ರಾಜಸ್ಥಾನ್ ರಾಯಲ್ಸ್ ಫ್ರಾಂಚೈಸಿ ಈ ಕ್ರಮ ಕೈಗೊಂಡಿದೆ. ಮಹಿಳಾ ಸಬಲೀಕರಣದ ಕಡೆಗೆ ತಮ್ಮ ಬದ್ಧತೆಯನ್ನು ಪ್ರದರ್ಶಿಸಲು ಫ್ರಾಂಚೈಸಿ ಈ ಕ್ರಮ ತೆಗೆದುಕೊಂಡಿದೆ. ಮುಂಬೈ ವಿರುದ್ಧದ ಪಂದ್ಯಕ್ಕೆ ರಾಜಸ್ಥಾನ ತಂಡದ ಆಟಗಾರರು ಗುಲಾಬಿ ಬಣ್ಣದ ಜೆರ್ಸಿಗಳನ್ನು ಧರಿಸಿ ಮೈದಾನಕ್ಕೆ ಪ್ರವೇಶಿಸಿದರು.

  • 161 ರನ್‌ಗೆ ಲಕ್ನೋ ಆಲೌಟ್‌ – ಮುಂಬೈಗೆ 54 ರನ್‌ಗಳ ಭರ್ಜರಿ ಜಯ

    161 ರನ್‌ಗೆ ಲಕ್ನೋ ಆಲೌಟ್‌ – ಮುಂಬೈಗೆ 54 ರನ್‌ಗಳ ಭರ್ಜರಿ ಜಯ

    – ಆರ್‌ಸಿಬಿ, ಡೆಲ್ಲಿ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದ ಪಾಂಡ್ಯ ಪಡೆ

    ಮುಂಬೈ: ಆರಂಭದಲ್ಲಿ ಮುಗ್ಗರಿಸಿ ನಂತರ ಸತತ ಗೆಲುವುಗಳೊಂದಿಗೆ ಮಿಂಚುತ್ತಿರುವ ಮುಂಬೈ ಇಂದು ಮತ್ತೊಂದು ಜಯವನ್ನು ಮುಡಿಗೇರಿಸಿಕೊಂಡಿದೆ. ಪಾಂಡ್ಯ ಪಡೆ ಲಕ್ನೋ ವಿರುದ್ಧ 54 ರನ್‌ಗಳ ಭರ್ಜರಿ ಗೆಲುವು ದಾಖಲಿಸಿದೆ. ಆ ಮೂಲಕ ಪಾಯಿಂಟ್‌ ಪಟ್ಟಿಯಲ್ಲಿ ಆರ್‌ಸಿಬಿ ಹಿಂದಿಕ್ಕಿ 2ನೇ ಸ್ಥಾನಕ್ಕೇರಿದೆ.

    ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟಿಂಗ್‌ ಮಾಡಿದ ಮುಂಬೈ 20 ಓವರ್‌ಗೆ 7 ವಿಕೆಟ್‌ ನಷ್ಟಕ್ಕೆ 215 ರನ್‌ ಗಳಿಸಿತು. 216 ರನ್‌ ಗುರಿ ಬೆನ್ನತ್ತಿದ ಲಕ್ನೋ ನಿಗದಿತ ಓವರ್‌ಗೆ 161 ರನ್‌ ಗಳಿಸಿ ಆಟೌಟ್‌ ಆಗಿ ಹೀನಾಯ ಸೋಲು ಕಂಡಿತು. ಇದನ್ನೂ ಓದಿ: ಭಾರತದಲ್ಲಿ ಪಟಾಕಿ ಸಿಡಿದರೂ, ಪಾಕಿಸ್ತಾನವನ್ನೇ ದೂಷಿಸುತ್ತಾರೆ: ಶಾಹಿದ್‌ ಅಫ್ರಿದಿ

    ಮುಂಬೈ ಬ್ಯಾಟರ್‌ಗಳು ಉತ್ತಮ ಪ್ರದರ್ಶನ ನೀಡಿದರು. ರಯಾನ್ ರಿಕೆಲ್ಟನ್ ಮತ್ತು ಸೂರ್ಯಕುಮಾರ್‌ ಯಾದವ್‌ ಅರ್ಧಶತಕ ಆಟದ ಮೂಲಕ ಗಮನ ಸೆಳೆದರು. ರಿಯಾನ್‌ 32 ಬಾಲ್‌ಗೆ 6 ಫೋರ್‌, 4 ಸಿಕ್ಸರ್‌ನೊಂದಿಗೆ 58 ಹಾಗೂ ಸೂರ್ಯಕುಮಾರ್‌ ಯಾದವ್‌ 28 ಬಾಲ್‌ಗೆ 4 ಫೋರ್‌, 4 ಸಿಕ್ಸರ್‌ನೊಂದಿಗೆ 54 ರನ್‌ ಗಳಿಸಿ ತಂಡಕ್ಕೆ ನೆರವಾದರು. ವಿಲ್‌ ಜಾಕ್ಸ್‌ 29, ನಮನ್ ಧೀರ್ (ಔಟಾಗದೇ) 25, ಕಾರ್ಬಿನ್ ಬಾಷ್ 20 ರನ್‌ಗಳೊಂದಿಗೆ ಮುಂಬೈ ಸವಾಲಿನ ಮೊತ್ತ ಪೇರಿಸಲು ಸಹಕಾರಿಯಾದರು.

    ಲಕ್ನೋ ಪರ ಮಯಾಂಕ್‌ ಯಾದವ್‌, ಆವೇಶ್‌ ಖಾನ್‌ ತಲಾ 2, ಪ್ರಿನ್ಸ್‌ ಯಾದವ್‌, ದಿಗ್ವೇಶ್‌ ರಾಥಿ, ರವಿ ಬಿಷ್ಣೋಯ್‌ ತಲಾ 1 ವಿಕೆಟ್‌ ಪಡೆದರು. ಇದನ್ನೂ ಓದಿ: ಈಡನ್‌ ಗಾರ್ಡನ್‌ನಲ್ಲಿ ಗೆದ್ದ ಮಳೆ – PBKS vs KKR ಪಂದ್ಯ ರದ್ದು, 4ನೇ ಸ್ಥಾನಕ್ಕೇರಿದ ಪಂಜಾಬ್‌

    ಮುಂಬೈ ನೀಡಿ 216 ರನ್‌ ಗುರಿ ನೀಡಿದ ಲಕ್ನೋ ಬ್ಯಾಟಿಂಗ್‌ನಲ್ಲಿ ಮುಗ್ಗಿರಿಸಿತು. 6 ಓವರ್‌ ಹೊತ್ತಿಗೆ ಪ್ರಮುಖ 3 ವಿಕೆಟ್‌ ಕಳೆದುಕೊಂಡು ಆಘಾತ ಅನುಭವಿಸಿತು. ಮಿಚೆಲ್‌ ಮಾರ್ಷ್‌ 34, ಆಯುಷ್‌ ಬದೋನಿ 35, ನಿಕೊಲಸ್‌ ಪೂರನ್‌ 27, ಡೇವಿಡ್‌ ಮಿಲ್ಲರ್‌ 24 ರನ್‌ ಗಳಿಸಿದರು.

    ಉಳಿದಂತೆ ಯಾವ ಬ್ಯಾಟರ್‌ ಕೂಡ ಉತ್ತಮ ಪ್ರದರ್ಶನ ತೋರುವಲ್ಲಿ ವಿಫಲರಾದರು. ಈ ಆವೃತ್ತಿಯಲ್ಲಿ ಅತಿ ಹೆಚ್ಚು ಮೊತ್ತಕ್ಕೆ ಬಿಕರಿಯಾಗಿರುವ ಕ್ಯಾಪ್ಟನ್ ರಿಷಬ್‌ ಪಂತ್‌‌ ಕಳೆಗುಂದಿದ್ದಾರೆ. ಪಂತ್ ಕೇವಲ 4 ರನ್‌ ಗಳಿಸಿ ಔಟಾಗಿದ್ದು,‌ ನಿರಾಸೆ ಮೂಡಿಸಿತು. ಲಕ್ನೋ ಬ್ಯಾಟರ್‌ಗಳನ್ನು ಪಾಂಡ್ಯ ಪಡೆ ಬೌಲರ್‌ಗಳು ಚೆಂಡಾಡಿದರು. ಕಳಪೆ ಬ್ಯಾಟಿಂಗ್‌ನಿಂದ ಲಕ್ನೋ ಅಂತಿಮವಾಗಿ 20 ಓವರ್‌ಗೆ 161 ರನ್‌ಗೆ ಆಲೌಟ್‌ ಆಯಿತು.

    ಮುಂಬೈ ಪರ ಜಸ್ಪ್ರಿತ್‌ ಬುಮ್ರಾ ಕಮಾಲ್‌ ಮಾಡಿದರು. ಪ್ರಮುಖ 4 ವಿಕೆಟ್‌ ಕಿತ್ತು ಮಿಂಚಿದರು. ಇವರ ಜೊತೆ ಜೊತೆಗೆ ಟ್ರೆಂಟ್‌ ಬೌಲ್ಟ್‌ ಕೂಡ 3 ವಿಕೆಟ್‌ ಕಬಳಿಸಿ ನಿರ್ಣಾಯಕ ಪಾತ್ರ ವಹಿಸಿದರು. ವಿಲ್‌ ಜಾಕ್ಸ್‌ 2, ಕಾರ್ಬಿನ್ ಬಾಷ್ 1 ವಿಕೆಟ್‌ ಪಡೆದರು.

  • IPL 2025 | ಸೂಪರ್‌ ಸಂಡೇನಲ್ಲಿ ಚೆನ್ನೈ Vs ಮುಂಬೈ ಮೆಗಾ ಫೈಟ್‌

    IPL 2025 | ಸೂಪರ್‌ ಸಂಡೇನಲ್ಲಿ ಚೆನ್ನೈ Vs ಮುಂಬೈ ಮೆಗಾ ಫೈಟ್‌

    ಮುಂಬೈ: ಐಪಿಎಲ್‌ (IPL 2025) ಇತಿಹಾಸದಲ್ಲಿ ತಲಾ ಐದು ಬಾರಿ ಚಾಂಪಿಯನ್‌ ಪಟ್ಟ ಗೆದ್ದು ಅತ್ಯಂತ ಯಶಸ್ವಿ ತಂಡಗಳಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ಹಾಗೂ ಮುಂಬೈ ಇಂಡಿಯನ್ಸ್ (CSK vs MI) 18ನೇ ಆವೃತ್ತಿ ಟೂರ್ನಿಯಲ್ಲಿ ತೀರಾ ಕಳಪೆ ಪ್ರದರ್ಶನ ನೀಡುತ್ತಿವೆ. ಉಭಯ ತಂಡಗಳು ಗೆಲುವಿಗಾಗಿ ಹಾತೊರೆಯುತ್ತಿದ್ದು, ಮಹತ್ವದ ಪಂದ್ಯದಲ್ಲಿ ಭಾನುವಾರ ಪರಸ್ಪರ ಮುಖಾಮುಖಿಯಾಗಲಿವೆ.

    ಇಂದು ಸಂಜೆ 7:30ಕ್ಕೆ ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede stadium) ಉಭಯ ತಂಡಗಳು ಮುಖಾಮುಖಿಯಾಗಲಿವೆ. ಇತ್ತಂಡಗಳು ಈವರೆಗೆ 38 ಪಂದ್ಯಗಳಲ್ಲಿ ಮುಖಾಮುಖಿಯಾಗಿದ್ದು, 18ರಲ್ಲಿ ಸಿಎಸ್‌ಕೆ, 20 ಪಂದ್ಯಗಳಲ್ಲಿ ಮುಂಬೈ ಗೆಲುವು ಸಾಧಿಸಿದೆ. ಪ್ರಸ್ತುತ ಆವೃತ್ತಿಯಲ್ಲಿ ಮುಂಬೈ ಆಡಿರುವ 7 ಪಂದ್ಯಗಳಲ್ಲಿ 3ರಲ್ಲಿ ಗೆದ್ದಿದ್ದರೆ, ಚೆನ್ನೈ ಸೂಪರ್‌ ಕಿಂಗ್ಸ್‌ ಕೇವಲ 2 ಪಂದ್ಯಗಳಲ್ಲಿ ಗೆದ್ದು ಕೊನೆಯ ಸ್ಥಾನದಲ್ಲಿದೆ.

    ಈಗಾಗಲೇ ಉಭಯ ತಂಡಗಳು ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಎದುರಾಗಿದ್ದು, ಚೆನ್ನೈ ಜಯಭೇರಿ ಬಾರಿಸಿತ್ತು. ಅಲ್ಲದೇ ಚೆನ್ನೈ ಕಳೆದ 5 ಮುಖಾಮುಖಿಯಲ್ಲಿ ಎರಡೂ ಬಾರಿಯೂ ಮುಂಬೈಯನ್ನು ಸೋಲಿಸಿದೆ. ಹೀಗಾಗಿ ಈ ಪಂದ್ಯದಲ್ಲಿ ಸೇಡು ತೀರಿಸಿಕೊಳ್ಳಲು ಮುಂಬೈ ತಂಡ ಕಾಯುತ್ತಿದೆ. ನ್ನೈಗೆ ಹೋಲಿಸಿದ್ರೆ ಮುಂಬೈ ತಂಡ ಬಲಿಷ್ಠವಾಗಿದೆ.

    ರೋಹಿತ್ ಶರ್ಮಾ ಅವರು ಬ್ಯಾಟಿಂಗ್‌ ವೈಫಲ್ಯ ಅನುಭವಿಸುತ್ತಿದ್ದರು, ರಿಕಲ್ಟನ್‌, ತಿಲಕ್ ವರ್ಮಾ, ಸೂರ್ಯಕುಮಾರ್, ಹಾರ್ದಿಕ್ ಪಾಂಡ್ಯ ಮುಂತಾದವರು ಬ್ಯಾಟಿಂಗ್‌ನಲ್ಲಿ ಬಲ ತುಂಬುತ್ತಿದ್ದಾರೆ. ಇನ್ನೂ ಬೌಲಿಂಗ್‌ನಲ್ಲಿ ಜಸ್ಪ್ರೀತ್‌ ಬುಮ್ರಾ, ಟ್ರೆಂಟ್‌ ಬೌಲ್ಟ್‌, ಮಿಚೆಲ್‌ ಸ್ಯಾಂಟ್ನರ್‌ ತಂಡಗಳ ಕೈ ಹಿಡಿಯುವ ನಿರೀಕ್ಷೆಯಲ್ಲಿದೆ. ಅಲ್ಲದೇ ಉಭಯ ತಂಡಗಳಿಗೆ ಇದು ನಿರ್ಣಾಯಕ ಪಂದ್ಯ ಎನಿಸಿದ್ದು, ಯಾರು ಸೋತರು ಪ್ಲೇ ಆಫ್ಸ್‌ ಹಾದಿ ಬಹುತೇಕ ಬಂದ್‌ ಆಗುವ ಸಾಧ್ಯತೆಯಿದೆ ಎಂದು ಕ್ರಿಕೆಟ್‌ ವಿಶ್ಲೇಷಕರು ಅಂದಾಜಿಸಿದ್ದಾರೆ.

  • ಮುಂಬೈನಲ್ಲಿ ಸನ್‌ ಸ್ಟ್ರೋಕ್‌ – ಇಂಡಿಯನ್ಸ್‌ಗೆ 4 ವಿಕೆಟ್‌ಗಳ ಜಯ

    ಮುಂಬೈನಲ್ಲಿ ಸನ್‌ ಸ್ಟ್ರೋಕ್‌ – ಇಂಡಿಯನ್ಸ್‌ಗೆ 4 ವಿಕೆಟ್‌ಗಳ ಜಯ

    ಮುಂಬೈ: ಬೌಲಿಂಗ್‌ ಮತ್ತು ಬ್ಯಾಟಿಂಗ್‌ನಲ್ಲಿ ಸಂಘಟಿತ ಆಟವಾಡಿದ ಮುಂಬೈ ಇಂಡಿಯನ್ಸ್‌ (Mumbai Indians) ಹೈದರಾಬಾದ್‌ ಸನ್‌ ರೈಸರ್ಸ್‌ (Sunrisers Hyderabad)  ವಿರುದ್ಧ 4 ವಿಕೆಟ್‌ಗಳ ಜಯ ಸಾಧಿಸಿದೆ.

    ವಾಂಖೆಡೆ ಕ್ರೀಡಾಂಗಣದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 5 ವಿಕೆಟ್‌ ನಷ್ಟಕ್ಕೆ 162 ರನ್‌ ಹೊಡೆಯಿತು. ಸುಲಭದ ಸವಾಲನ್ನು ಬೆನ್ನಟ್ಟಿದ ಮುಂಬೈ 18.1 ಓವರ್‌ಗಳಲ್ಲಿ 6 ವಿಕೆಟ್‌ ನಷ್ಟಕ್ಕೆ 166 ರನ್‌ ಹೊಡೆಯುವ ಮೂಲಕ ಗೆಲುವು ಸಾಧಿಸಿತು.

    ಸತತ ಎರಡು ಪಂದ್ಯಗಳನ್ನು ಗೆದ್ದ ಮುಂಬೈ 6 ಅಂಕದೊಂದಿಗೆ 7ನೇ ಸ್ಥಾನದಲ್ಲೇ ಮುಂದುವರಿದರೆ ಸನ್‌ ರೈಸರ್ಸ್‌ 4 ಅಂಕದೊಂದಿಗೆ 9ನೇ ಸ್ಥಾನದಲ್ಲೇ ಮುಂದುವರಿದಿದೆ.

    ಮುಂಬೈ ಪರ ಆರಂಭಿಕ ಬ್ಯಾಟ್ಸ್‌ಮೆನ್‌ಗಳಾದ ರಿಯಾನ್‌ ರಿಕೆಲ್ಟನ್‌ 23 ಬಾಲ್‌ಗೆ 31 ರನ್‌ ಬಾರಿಸಿದರು. ರೋಹಿತ್‌ ಶರ್ಮಾ 26(16), ವಿಲ್‌ ಜಾಕ್ಸ್‌ 36(26) ಹಾಗೂ ಸೂರ್ಯ ಕುಮಾರ್‌ ಯಾದವ್‌ 26(15) ರನ್‌ ಹೊಡೆದು ಔಟಾದರು.

    ತಂಡದ ನಾಯಕ ಹಾರ್ದಿಕ್‌ ಪಾಂಡ್ಯ (Hardik Pandya) 9 ಬಾಲ್‌ 21 ರನ್‌ ಗಳಿಸಿ ವಿಕೆಟ್‌ ಒಪ್ಪಿಸಿದರು. ಬಳಿಕ ಕ್ರೀಸ್‌ನಲ್ಲಿದ್ದ ತಿಲಕ್‌ ವರ್ಮಾ ರನ್‌ಗಳಿಸಿ ಅಜೇಯರಾಗಿ ಉಳಿದರು. ಹೈದರಾಬಾದ್‌ ಬೌಲರ್‌ ಪ್ಯಾಟ್‌ ಕಮಿನ್ಸ್‌ 3 ವಿಕೆಟ್‌ ಹಾಗೂ ಇಶನ್‌ ಮಲಿಂಗ 2 ವಿಕೆಟ್‌ ಕಬಳಿಸಿದರು. ಹರ್ಷಲ್‌ ಪಟೇಲ್‌ 1 ವಿಕೆಟ್‌ ಕಿತ್ತರು.

    ಮೊದಲು ಬ್ಯಾಟ್‌ ಮಾಡಿದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಉತ್ತಮ ಆರಂಭ ಪಡೆದಿತ್ತು. ಆರಂಭಿಕ ಬ್ಯಾಟ್ಸ್‌ಮೆನ್‌ಗಳಾದ ಅಭಿಷೇಕ್‌ ಶರ್ಮಾ ಹಾಗೂ ಟ್ರಾವಿಸ್ ಹೆಡ್ ಜೋಡಿ 45 ಎಸೆತಗಳಲ್ಲಿ 59 ರನ್‌ ಜೊತೆಯಾಟವಾಡಿದರು.

    ಸಾಲು ಸಾಲು ಜೀವದಾನಗಳನ್ನು ಪಡೆದ ಅಭಿಷೇಕ್‌ ಶರ್ಮಾ 40 ರನ್‌ ಗಳಿಸಿ ಹಾರ್ದಿಕ್‌ ಪಾಂಡ್ಯಗೆ ವಿಕೆಟ್‌ ಒಪ್ಪಿಸಿದರು. ಇದೇ ಮೈದಾನದಲ್ಲಿ ಸೆಂಚುರಿ ಹೊಡೆದ ಇಶಾನ್‌ ಕಿಶನ್‌ ಕೇವಲ 2 ರನ್‌ ಗಳಿಸಿ ಔಟಾದರು. ಟ್ರಾವಿಸ್‌ ಹೆಡ್‌ 29 ಎಸೆತಗಳಲ್ಲಿ 28 ರನ್‌ ಹೊಡೆದು ವಿಕೆಟ್‌ ಒಪ್ಪಿಸಿದರು. ಬಳಿಕ ಕ್ರೀಸ್‌ಗಳಿದ ಆಲ್‌ರೌಂಡರ್‌ ನಿತೀಶ್ ಕುಮಾರ್ ರೆಡ್ಡಿ 1 ಬೌಂಡರಿಯೊಂದಿಗೆ 19 ರನ್‌ ಸಿಡಿಸಿ ಔಟ್ ಆದರು.

    ಪವರ್‌ ಪ್ಲೇ ಬಳಿಕ ರನ್‌ ಗಳಿಸಲು ಪರದಾಡಿದ ಹೈದರಾಬಾದ್ ತಂಡ ಡೆತ್‌ ಓವರ್‌ನಲ್ಲಿ ತನ್ನ ಬ್ಯಾಟಿಂಗ್‌ನಲ್ಲಿ ಕಮಾಲ್‌ ಮಾಡಿತು. 18ನೇ ಓವರ್‌ನಲ್ಲಿ ಹ್ಯಾನ್ರಿಕ್‌ ಕ್ಲಾಸೇನ್ ಆರ್ಭಟಕ್ಕೆ ಮುಂಬೈ ಬೌಲರ್‌ ಸುಸ್ತಾದರು. ಈ ಓವರ್‌ನಲ್ಲಿ ಹೆನ್ರಿಕ್‌ ಕ್ಲಾಸೆನ್‌ 2ಸಿಕ್ಸರ್‌, 2 ಬೌಂಡರಿ ಸೇರಿ 21 ರನ್ ಬಾರಿಸಿ ಅಬ್ಬರಿಸಿದರು.

    37 ರನ್‌(28 ಎಸೆತ, 3 ಬೌಂಡರಿ, 2 ಸಿಕ್ಸ್‌) ಹೊಡೆದ ಕ್ಲಾಸೆನ್‌ ಬುಮ್ರಾಗೆ ವಿಕೆಟ್‌ ಒಪ್ಪಿಸಿದರು.ಅನಿಕೇತ್‌ ವರ್ಮಾ ಅಜೇಯ 18 ರನ್‌, ಪ್ಯಾಟ್ ಕಮ್ಮಿನ್ಸ್ 8 ರನ್‌ ಬಾರಿಸಿ ಅಜೇಯರಾಗಿ ಉಳಿದರು. ಕೊನೆಯ ಓವರ್‌ನಲ್ಲಿ ಎಸ್‌ಆರ್‌ಹೆಚ್ ತಂಡ 22 ರನ್‌ ಹೊಡೆದಿತ್ತು.

    ಮುಂಬೈ ತಂಡದ ಪರ ವಿಲ್‌ ಜಾಕ್ಸ್‌ 3 ಓವರ್ ಬೌಲ್‌ ಮಾಡಿ 14 ರನ್‌ ನೀಡಿ 2 ವಿಕೆಟ್‌ ಕಬಳಿಸಿದರು. ಉಳಿದಂತೆ ಹಾರ್ದಿಕ್ ಪಾಂಡ್ಯ, ಟ್ರೆಂಟ್‌ ಬೌಲ್ಟ್‌, ಜಸ್ಪ್ರಿತ್ ಬುಮ್ರಾ ತಲಾ ಒಂದು ವಿಕೆಟ್‌ ಕಿತ್ತರು.