Tag: mumbai police

  • 200 ಜನರ ಕಳ್ಳಸಾಗಣೆ – ಬಾಂಗ್ಲಾದ ತೃತೀಯಲಿಂಗಿ ʻಗುರು ಮಾʼ ಮುಂಬೈನಲ್ಲಿ ಅರೆಸ್ಟ್‌

    200 ಜನರ ಕಳ್ಳಸಾಗಣೆ – ಬಾಂಗ್ಲಾದ ತೃತೀಯಲಿಂಗಿ ʻಗುರು ಮಾʼ ಮುಂಬೈನಲ್ಲಿ ಅರೆಸ್ಟ್‌

    ಮುಂಬೈ: ನಕಲಿ ದಾಖಲೆ (Fake Documents) ಬಳಸಿಕೊಂಡು ಕಳೆದ 30 ವರ್ಷಗಳಿಂದ ಭಾರತದಲ್ಲಿ ನೆಲೆಸಿದ್ದ ಬಾಂಗ್ಲಾದೇಶ (Bangladesh) ಮೂಲದ ತೃತೀಯಲಿಂಗಿಯನ್ನ ಮುಂಬೈನಲ್ಲಿ ಪೊಲೀಸರು ಬಂಧಿಸಲಾಗಿದೆ.

    ಬಂಧಿತ ಆರೋಪಿಯನ್ನ ಆರೋಪಿ ಬಾಬು ಅಯಾನ್ ಖಾನ್ ಅಲಿಯಾಸ್ ಜ್ಯೋತಿ, ಅಲಿಯಾಸ್ ‘ಗುರು ಮಾ’ (Guru Maa) ಎಂದು ಗುರುತಿಸಲಾಗಿದೆ. ಗುರು ಮಾ ಸುಮಾರು 200 ಬಾಂಗ್ಲಾ ಪ್ರಜೆಗಳನ್ನ ಭಾರತಕ್ಕೆ ಕಳ್ಳಸಾಗಣೆ ಮಾಡಿರುವುದಾಗಿ ತಿಳಿದುಬಂದಿದೆ. ಸದ್ಯ ಆರೋಪಿಯನ್ನು ಬಂಧಿಸಿರುವ ಮುಂಬೈ ಪೊಲೀಸರು (Mumbai Police) ತನಿಖೆ ಚುರುಕುಗೊಳಿಸಿದ್ದಾರೆ. ಕಳ್ಳಸಾಗಣೆ ಮಾಡಿರುವ ಸಂಖ್ಯೆ ಇನ್ನೂ ಹೆಚ್ಚಿರಬಹುದೆಂದು ಶಂಕಿಸಿದ್ದಾರೆ.

    300 ಅನುಯಾಯಿ ಹೊಂದಿದ್ದ ಆಧ್ಯಾತ್ಮಿಕ ನಾಯಕಿ:
    ಜ್ಯೋತಿ ಮುಂಬೈನಲ್ಲಿರುವ ಟ್ರಾನ್ಸ್ (Trans) ಜನರಿಗೆ ʻಗುರು ಮಾʼ ಎಂದು ತನ್ನನ್ನು ಪರಿಚಯಿಸಿಕೊಂಡಿದ್ದಳು. ತಾನೊಬ್ಬಳು ಆಧ್ಯಾತ್ಮಿಕ ನಾಯಕಿ ಎಂದು ಹೇಳಿಕೊಂಡಿದ್ದಳು. ಹೀಗಾಗಿ ವಿವಿಧ ನಗರಗಳಲ್ಲಿ ಆಕೆಗೆ 300 ಜನ ಅನುಯಾಯಿಗಳಿದ್ದರು. ಅಲ್ಲದೇ ತಾನು ಭಾರತೀಯ ಪ್ರಜೆ ಎಂದು ಹೇಳಿಕೊಂಡಿದ್ದಳು. ಅದಕ್ಕಾಗಿ ನಕಲಿ ಪ್ರಮಾಣ ಪತ್ರ, ಪ್ಯಾನ್‌ ಕಾರ್ಡ್‌, ಆಧಾರ್‌ ಕಾರ್ಡ್‌ಗಳನ್ನ ನಕಲು ಮಾಡಿದ್ದಳು. ಅಕ್ರಮ ವಲಸಿಗರ ವಿರುದ್ಧದ ಕಾರ್ಯಾಚರಣೆ ವೇಳೆ ಪೊಲೀಸರು ದಾಖಲೆಗಳನ್ನು ಪರಿಶೀಲಿಸಿದಾಗ ಆಕೆ ಬಳಿಕ ಇದ್ದ ದಾಖಲೆಗಳು ನಕಲಿ ಅನ್ನೋದು ಗೊತ್ತಾಗಿದೆ.

    ಕಳ್ಳಸಾಗಣೆ ಮಾಡ್ತಿದ್ದು ಹೇಗೆ?
    ತನಿಖಾಧಿಕಾರಿ ಮೂಲಗಳ ಪ್ರಕಾರ, ಗುರು ಮಾ, ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ ಗಡಿಯ ಮೂಲಕ ಭಾರತಕ್ಕೆ ಅಕ್ರಮವಾಗಿ ಕರೆತರುತ್ತಿದ್ದಳು. ಬಾಂಗ್ಲಾದಿಂದ ಕರೆತಂದು ಮುಂಬೈನ ಶಿವಾಜಿನಗರದಲ್ಲಿ ಬಾಡಿಗೆ ಮನೆಯಲ್ಲಿರಿಸಿದ್ದಳು. ಅವರಿಂದ ಪ್ರತಿ ತಿಂಗಳು 5 ರಿಂದ 10 ಸಾವಿರ ರೂ. ವರೆಗೂ ಬಾಡಿಗೆ ಪಡೆಯುತ್ತಿದ್ದಳು ಎಂದು ತಿಳಿದುಬಂದಿದೆ.

    ಮಹಾರಾಷ್ಟ್ರ ವಸತಿ ಮತ್ತು ಪ್ರದೇಶ ಅಭಿವೃದ್ಧಿ ಪ್ರಾಧಿಕಾರ (MHADA) ಅಡಿಯಲ್ಲಿ ನೋಂದಾಯಿಸಲ್ಪಟ್ಟಿದ್ದ ಫ್ಲ್ಯಾಟ್‌ ಹಾಗೂ ಮನೆಗಳನ್ನ ಅತಿಕ್ರಮಣ ಮಾಡಿಕೊಂಡು, ಅಲ್ಲಿಯೇ ಕಳ್ಳಸಾಗಣೆ ಮೂಲಕ ಕರೆತಂದವರನ್ನ ಬಾಡಿಗೆಗೆ ಇರಿದ್ದಳೆಂದು ಹೇಳಲಾಗಿದೆ. ಸದ್ಯ ಈ ಕುರಿತು ಮುಂಬೈ ಪೊಲೀಸರಿಂದ ಹೆಚ್ಚಿನ ತನಿಖೆ ನಡೆಯುತ್ತಿದೆ.

  • ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ – ನೋಯ್ಡಾದಲ್ಲಿ ಆರೋಪಿ ಅರೆಸ್ಟ್

    ಮುಂಬೈನಲ್ಲಿ ಬಾಂಬ್ ಸ್ಫೋಟಿಸುವುದಾಗಿ ಬೆದರಿಕೆ – ನೋಯ್ಡಾದಲ್ಲಿ ಆರೋಪಿ ಅರೆಸ್ಟ್

    ಲಕ್ನೋ: ಮುಂಬೈನಲ್ಲಿ (Mumbai) ಬಾಂಬ್ ಸ್ಫೋಟಿಸುವುದಾಗಿ (Bomb Blast) ಬೆದರಿಕೆ ಹಾಕಿದ್ದ ಆರೋಪಿಯನ್ನು ಮುಂಬೈ ಪೊಲೀಸರು  (Mumbai Police) ನೋಯ್ಡಾದಲ್ಲಿ (Noida) ಬಂಧಿಸಿದ್ದಾರೆ.

    ಬಿಹಾರ ಮೂಲದ ಅಶ್ವಿನ್ ಕುಮಾರ್ ಸುಪ್ರಾ (50) ಬಂಧಿತ ವ್ಯಕ್ತಿ. ಆರೋಪಿ ಅಶ್ವಿನ್ ಕುಮಾರ್ ನೋಯ್ಡಾದ ಮೊಬೈಲ್ ಫೋನ್ ಮತ್ತು ಸಿಮ್ ಕಾರ್ಡ್ ಬಳಸಿ ಬಾಂಬ್ ಬೆದರಿಕೆ ಹಾಕಿದ್ದಾನೆ. ತನಿಖೆಯ ಸಮಯದಲ್ಲಿ, ಬೆದರಿಕೆ ಹಾಕಲು ಬಳಸಲಾದ ಫೋನ್ ಮತ್ತು ಸಿಮ್ ಅನ್ನು ಸಹ ಅಪರಾಧ ವಿಭಾಗ ವಶಪಡಿಸಿಕೊಂಡಿದೆ. ಸದ್ಯ ಆರೋಪಿಯನ್ನು ಮುಂಬೈಗೆ ಕರೆದೊಯ್ಯಲಾಗುತ್ತಿದೆ. ಮುಂಬೈ ತಲುಪಿದ ಬಳಿಕ ಹೆಚ್ಚಿನ ವಿಚಾರಣೆ ನಡೆಯಲಿದೆ. ಇದನ್ನೂ ಓದಿ: 14 ಪಾಕಿಸ್ತಾನಿ ಉಗ್ರರು, 400 ಕೆಜಿ RDX, 34 ಮಾನವ ಬಾಂಬ್ ಸ್ಫೋಟ ನಡೆಯಲಿದೆ; ಮುಂಬೈಗೆ ಉಗ್ರ ಬೆದರಿಕೆ

    ಪಾಕಿಸ್ತಾನ ಲಷ್ಕರ್-ಎ-ಜಿಹಾದಿ ಸಂಘಟನೆಯ 14 ಉಗ್ರರು ಭಾರತ ಪ್ರವೇಶಿಸಿದ್ದಾರೆ. 400 ಕೆಜಿ ಆರ್‌ಡಿಎಕ್ಸ್ ಸ್ಫೋಟಿಸಿ ಜನರನ್ನ ಕೊಲ್ಲಲಿದ್ದಾರೆ. ಅಲ್ಲದೇ ನಗರಾದ್ಯಂತ 34 ವಾಹನಗಳಲ್ಲಿ ಮಾನವ ಬಾಂಬ್ ಸ್ಫೋಟಿಸಲಾಗುವುದು ಎಂದು ಆರೋಪಿ ಅಶ್ವಿನ್ ಕುಮಾರ್ ಮುಂಬೈ ಸಂಚಾರ ಪೊಲೀಸ್ ಠಾಣೆಗೆ ಸಂದೇಶ ಕಳುಹಿಸಿದ್ದ.

    ತನಿಖೆ ವೇಳೆ ಮೂರು ತಿಂಗಳು ಜೈಲಿಗೆ ಹೋಗಿದ್ದಕ್ಕೆ ಪ್ರತಿಕಾರ ತೀರಿಸಿಕೊಳ್ಳಲು ಪ್ರತಿಕಾರ ತೀರಿಸಿಕೊಳ್ಳಲು ಆರೋಪಿ ಹೀಗೆ ಬೆದರಿಕೆ ಹಾಕಿದ್ದಾನೆ. ಅಶ್ವಿನ್ ಕುಮಾರ್ ಮುಂಬೈ ಸಂಚಾರ ಪೊಲೀಸರಿಗೆ ಫಿರೋಜ್ ಎಂಬ ಮುಸ್ಲಿಂ ವ್ಯಕ್ತಿಯಂತೆ ನಟಿಸಿ ಬಾಂಬ್ ಬೆದರಿಕೆ ಕಳುಹಿಸಿದ್ದಾನೆ. ಫಿರೋಜ್ ಹೆಸರಿನ ಸ್ನೇಹಿತನ ಹೊಂದಿದ್ದ ಅಶ್ವಿನ್ ಕುಮಾರ್, ಹಣಕಾಸಿನ ವಿಚಾರಕ್ಕೆ ಫಿರೋಜ್ ಜೊತೆಗೆ ಜಗಳವಾಗಿತ್ತು ಈ ಹಿನ್ನಲೆ ಪೊಲೀಸರು, ಸ್ನೇಹಿತನ ಮೇಲೆ ಪ್ರತಿಕಾರ ತೀರಿಸಿಕೊಳ್ಳಲು ಫಿರೋಜ್ ಹೆಸರಿನಲ್ಲಿ ಸಂದೇಶ ಕಳುಹಿಸಿದ್ದ ಎಂದು ಪೊಲೀಸ್ ಮೂಲಗಳು ಹೇಳಿವೆ. ಇದನ್ನೂ ಓದಿ: ಮದುವೆ ಆಗೋದಾಗಿ ನಂಬಿಸಿ ಅತ್ಯಾಚಾರ ಆರೋಪ – ಎಸ್‌ಎಎಫ್ ಪೊಲೀಸ್ ಕಾನ್‌ಸ್ಟೆಬಲ್ ಅರೆಸ್ಟ್

  • ವಾಂಖೆಡೆಯಲ್ಲಿ 6.5 ಲಕ್ಷ ಮೌಲ್ಯದ 261 ಐಪಿಎಲ್ ಜೆರ್ಸಿ ಕಳವು – ಸೆಕ್ಯುರಿಟಿ ಗಾರ್ಡ್ ಅರೆಸ್ಟ್

    ವಾಂಖೆಡೆಯಲ್ಲಿ 6.5 ಲಕ್ಷ ಮೌಲ್ಯದ 261 ಐಪಿಎಲ್ ಜೆರ್ಸಿ ಕಳವು – ಸೆಕ್ಯುರಿಟಿ ಗಾರ್ಡ್ ಅರೆಸ್ಟ್

    – ಆರ್‌ಸಿಬಿ, ಸಿಎಸ್‌ಕೆ ಸೇರಿ ಹಲವು ಫ್ರ್ಯಾಂಚೈಸಿಗಳ ಜೆರ್ಸಿ ಕಳವು

    ಮುಂಬೈ: ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ (Wankhede Stadium) ಆರ್‌ಸಿಬಿ (RCB) ಸೇರಿ ವಿವಿಧ ಫ್ರಾಂಚೈಸಿಗಳ 6.5 ಲಕ್ಷ ರೂ. ಮೌಲ್ಯದ 261 ಜೆರ್ಸಿ ಕಳ್ಳತನವಾಗಿದೆ. ಈ ಹಿನ್ನೆಲೆ ಮುಂಬೈ ಪೊಲೀಸರು (Mumbai Police) ಕ್ರೀಡಾಂಗಣದ ಸೆಕ್ಯುರಿಟಿ ಗಾರ್ಡ್‌ನನ್ನು ಬಂಧಿಸಿದ್ದಾರೆ.

    ಕ್ರೀಡಾಂಗಣದ ಸೆಕ್ಯುರಿಟಿ ಗಾರ್ಡ್ ಆಗಿರುವ ಪೂರ್ವ ಮೀರಾ ರಸ್ತೆಯ ನಿವಾಸಿ ಫಾರೂಕ್ ಅಸ್ಲಂ ಖಾನ್ (46) ಬಂಧಿತ ಆರೋಪಿ. ಜೂ.13ರಂದು ವಾಂಖೆಡೆ ಕ್ರೀಡಾಂಗಣದಲ್ಲಿರುವ ಬಿಸಿಸಿಐನ (BCCI) ಅಧಿಕೃತ ಮಳಿಗೆಗೆ ಅನುಮತಿಯಿಲ್ಲದೇ ಪ್ರವೇಶಿಸಿದ್ದರಿಂದ ಎಫ್‌ಐಆರ್ (FIR) ದಾಖಲಾಗಿತ್ತು.ಇದನ್ನೂ ಓದಿ: ಧರ್ಮಸ್ಥಳ ಫೈಲ್ಸ್‌ | ನಿಗೂಢ ಸತ್ಯದ ಬೆನ್ನತ್ತಿದ SIT – ನೇತ್ರಾವತಿ ಸ್ನಾನಘಟ್ಟ ಬಳಿ ಶವಗಳ ಉತ್ಖನನ ಕಾರ್ಯ ಶುರು

    ಇತ್ತೀಚಿಗೆ ಬಿಸಿಸಿಐ ನಡೆಸುತ್ತಿದ್ದ ಲೆಕ್ಕಪರಿಶೋಧನೆ ವೇಳೆ ಸ್ಟಾಕ್ ಕಡಿಮೆಯಿರುವುದು ಪತ್ತೆಯಾಗಿದೆ. ಬಳಿಕ ಅಧಿಕಾರಿಗಳು ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಭದ್ರತಾ ಸಿಬ್ಬಂದಿ ಕಾಡ್ಬೋರ್ಡ್‌ ಪೆಟ್ಟಿಗೆಯೊಂದನ್ನು ಹೊತ್ತೊಯ್ಯುತ್ತಿರುವುದು ಬೆಳಕಿಗೆ ಬಂದಿದೆ. ನಂತರ ಜು.17ರಂದು ಬಿಸಿಸಿಐ ಉದ್ಯೋಗಿ ಹೇಮಾಂಗ್ ಭರತ್ ಕುಮಾರ್ ಅಮೀನ್ ಅವರು ಮೆರೈನ್ ಡ್ರೈವ್ ಪೊಲೀಸ್ ಠಾಣೆಯಲ್ಲಿ (Marine Drive Police Station) ದೂರು ದಾಖಲಿಸಿದ್ದರು.

    ದೂರಿನಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಮುಂಬೈ ಇಂಡಿಯನ್ಸ್, ಚೆನ್ನೈ ಸೂಪರ್ ಕಿಂಗ್ಸ್, ದೆಹಲಿ ಕ್ಯಾಪಿಟಲ್ಸ್ ಸೇರಿ ಇತರ ಐಪಿಎಲ್ ಫ್ರ್ಯಾಂಚೈಸಿಗಳ ಜೆರ್ಸಿಗಳನ್ನು ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿದ್ದರು. ದೂರಿನ ಆಧಾರದ ಮೇಲೆ ಪೊಲೀಸರು, 6.52 ಲಕ್ಷ ರೂ. ಮೌಲ್ಯದ 261 ಜೆರ್ಸಿಗಳನ್ನು ಕಳ್ಳತನ ಮಾಡಿರುವ ಆರೋಪದ ಮೇಲೆ 2023ರ ಬಿಎನ್‌ಎಸ್ ಸೆಕ್ಷನ್ 306ರ ಅಡಿಯಲ್ಲಿ ಸೆಕ್ಯುರಿಟಿ ಗಾರ್ಡ್ ವಿರುದ್ಧ ಎಫ್‌ಐಆರ್ ದಾಖಲಿಸಿದ್ದರು.

    ಆರೋಪಿಯನ್ನು ವಿಚಾರಣೆಗೊಳಪಡಿಸಿದಾಗ, ಬಿಸಿಸಿಐ ಕಚೇರಿಯಲ್ಲಿ ನವೀಕರಣ ಕಾರ್ಯ ನಡೆಯುತ್ತಿರುವುದರಿಂದ ಸ್ಟಾಕ್ ಕ್ಲಿಯೆರೆನ್ಸ್‌ಗಾಗಿ ಜೆರ್ಸಿಗಳು ಬಂದಿವೆ ಎಂದು ನನಗೆ ತಿಳಿಸಿದ್ದರು. ಜೊತೆಗೆ ಆನ್‌ಲೈನ್‌ನಲ್ಲಿ ಜೂಜಾಟದಿಂದಾಗಿ ಹಣವನ್ನೆಲ್ಲಾ ಕಳೆದುಕೊಂಡಿದ್ದೆ. ಇದೇ ಸಮಯದಲ್ಲಿ ಸಾಮಾಜಿಕ ಮಾಧ್ಯಮದ ಮೂಲಕ ಹರಿಯಾಣ ಮೂಲದ ಡೀಲರ್‌ನ ಪರಿಚಯವಾಗಿತ್ತು. ಹೀಗಾಗಿ ಹಣ ಬೇಕಿದ್ದರಿಂದ ಕೋರಿಯರ್ ಮೂಲಕ ಕಳುಹಿಸಿ ಜೆರ್ಸಿಗಳನ್ನು ಮಾರಾಟ ಮಾಡಿದೆ. ಜೊತೆಗೆ ಸ್ವಲ್ಪ ಚೌಕಾಸಿ ಮಾಡಿದ್ದೇನೆ ಎಂದು ತಿಳಿಸಿದ್ದಾನೆ. ಆದರೆ ಈ ಡೀಲ್‌ನಿಂದ ಎಷ್ಟು ಹಣಗಳಿಸಿದ್ದಾನೆ ಎನ್ನುವ ಮಾಹಿತಿಯನ್ನು ನಿರ್ದಿಷ್ಟವಾಗಿ ಆತ ಬಹಿರಂಗಪಡಿಸಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

    ಡೀಲರ್‌ನ್ನು ವಿಚಾರಣೆ ನಡೆಸಿದಾಗ, ಈ ಜೆರ್ಸಿಗಳು ಕಳ್ಳತನದ ಮಾಲು ಎಂದು ನನಗೆ ಗೊತ್ತಿರಲಿಲ್ಲ ಎಂದು ತಿಳಿಸಿದ್ದಾರೆ. ಸದ್ಯ ಪೊಲೀಸರು ಆರೋಪಿಯ ಬ್ಯಾಂಕ್ ಖಾತೆಯನ್ನು ಪರಿಶೀಲಿಸುತ್ತಿದ್ದಾರೆ ಎಂದು ತಿಳಿದುಬಂದಿದೆ.ಇದನ್ನೂ ಓದಿ: ಕಿರುತೆರೆಯ ಖ್ಯಾತ ನಟ ಚಂದನ್ ನಿರ್ದೇಶನದ ಚಿತ್ರಕ್ಕೆ ಕಿಚ್ಚನ ಕಂಠ

  • ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

    ʻದೃಶ್ಯಂʼ ಸಿನಿಮಾ ಸ್ಟೈಲ್‌ನಲ್ಲಿ ಕೊಲೆ – ಪ್ರಿಯಕರನ ಜೊತೆಗೂಡಿ ಗಂಡನನ್ನ ಕೊಂದು ಟೈಲ್ಸ್‌ ಕೆಳಗೆ ಹೂತಿದ್ದ ಪತ್ನಿ

    ಮುಂಬೈ: ಪ್ರೀತಿ ಎಂಬುದು ಮಾಯೆ.. ಈ ಪ್ರೀತಿಗೆ ಕಣ್ಣಿಲ್ಲ ಅಂತಾರೆ ನಿಜ, ಆದ್ರೆ ಕೆಲವೊಮ್ಮೆ ಪ್ರೀತಿಗೆ ಹೃದಯವೂ ಇರೋದಿಲ್ಲ, ಅದು ತನ್ನ ಪ್ರೇಮಿಯನ್ನ (Lovers) ಬಿಟ್ಟು ಉಳಿದವರಿಗಾಗಿ ಕಲ್ಲಿನಷ್ಟೇ ಕಠೋರವಾಗಿರುತ್ತೆ. ಇದಕ್ಕೆ ಮಹಾರಾಷ್ಟ್ರದಲ್ಲಿ ನಡೆದಿರುವ ಮತ್ತೊಂದು ಪ್ರಕರಣ ಸಾಕ್ಷಿಯಾಗಿದೆ.

    ಯೆಸ್.‌ ʻದೃಶ್ಯಂʼ ಸಿನಿಮಾ ಶೈಲಿಯಲ್ಲಿ ಮಹಾರಾಷ್ಟ್ರದ (Maharashtr) ಪಾಲ್ಘರ್ ಜಿಲ್ಲೆಯ ಖತರ್ನಾಕ್‌ ಮಹಿಳೆ, ಪ್ರಿಯಕರನೊಂದಿಗೆ ಸೇರಿ ಗಂಡನನ್ನೇ ಕೊಂದು ಶವವನ್ನ ತನ್ನ ಮನೆಯೊಳಗೆ ಹೂತಿಟ್ಟಿದ್ದ ಪ್ರಕರಣ ಬೆಳಕಿಗೆ ಬಂದಿದೆ. 35 ವರ್ಷದ ವಿಜಯ್‌ ಚವಾಣ್‌ ಕೊಲೆಯಾದ ವ್ಯಕ್ತಿ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಯುಎಇ ಅಪಾರ್ಟ್‌ಮೆಂಟ್‌ನಲ್ಲಿ ಕೇರಳದ ಮಹಿಳೆ ಶವವಾಗಿ ಪತ್ತೆ – ವರದಕ್ಷಿಣೆ ಕಿರುಕುಳ ಆರೋಪ

    ವರದಿಗಳ ಪ್ರಕಾರ, ವಿಜಯ್‌ ಚವಾಣ್‌ ಮುಂಬೈನಿಂದ (Mumbai) ಸುಮಾರು 70 ಕಿಮೀ ದೂರದಲ್ಲಿರುವ ನಲಸೋಪರ ಪೂರ್ವದ ಗಡ್ಗಪದ ಪ್ರದೇಶದಲ್ಲಿ ಪತ್ನಿ ಕೋಮಲ್ ಚವಾಣ್ (28) ಜೊತೆಗೆ ವಾಸವಿದ್ದ. ಆದ್ರೆ ಕಳೆದ 15 ದಿನಗಳಿಂದ ವಿಜಯ್‌ ನಾಪತ್ತೆಯಾಗಿದ್ದ. ಇದನ್ನೂ ಓದಿ: ಬಾಂಗ್ಲಾದೇಶದ ವಾಯುಪಡೆಯ ತರಬೇತಿ ವಿಮಾನ ದುರಂತ – ಪೈಲಟ್ ಸೇರಿ 16 ಜನ ಸಾವು

    ಸೋಮವಾರ ಚವಾಣ್‌ನನ್ನ ಹುಡುಕುತ್ತಿದ್ದ ಅವನ ಸಹೋದರರು ಕೋಮಲ್‌ ಮನೆಗೆ ಬಂದಿದ್ದರು. ಅಲ್ಲಿ ನೆಲಕ್ಕೆ ಹಾಕಿದ್ದ ಕೆಲ ಟೈಲ್ಸ್‌ಗಳ ಬಣ್ಣದಲ್ಲಿ ವ್ಯತ್ಯಾಸ ಕಂಡುಬಂದಿತ್ತು. ಇದರಿಂದ ಅನುಮಾನಗೊಂಡ ವಿಜಯ್‌ ಸಹೋದರರು ವ್ಯತ್ಯಾಸ ಕಂಡುಬಂದ ಟೈಲ್ಸ್‌ಗಳನ್ನ ನೆಲದಿಂದ ಕಿತ್ತರು. ಅದರ ಕೆಳಗೆ ಹೂತಿಟ್ಟಿದ್ದ ವೇಸ್ಟೇಜ್‌ನಿಂದ ಕೆಟ್ಟ ದುರ್ವಾಸನೆ ಬರುತಿತ್ತು. ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಪೊಲೀಸರು ಪರಿಶೀಲನೆ ನಡೆಸಿದ ಬಳಿಕ ಗಂಡನ ಶವ ಹೂತಿಟ್ಟಿದ್ದ ರಹಸ್ಯ ಬೆಳಕಿಗೆ ಬಂದಿತು.

    ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಪತ್ನಿಯನ್ನ ಬಂಧಿಸಿದ್ದಾರೆ. ಈ ಬೆನ್ನಲ್ಲೇ ಕೋಮಲ್‌ ತನ್ನ ನೆರೆಯ ಮೋನು ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವಿಷಯ ತಿಳಿದುಬಂದಿದೆ. ಈತನ ಜೊತೆಗೂಡಿಯೇ ಕೊಲೆ ಮಾಡಿರಬಹುದೆಂದು ಪೊಲೀಸರು ಶಂಕಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಶವಗಳ ಹೂತಿಟ್ಟ ಪ್ರಕರಣ SIT ಹೆಗಲಿಗೆ – ನಿಷ್ಪಕ್ಷಪಾತ ತನಿಖೆ ಬಗ್ಗೆ ಗೃಹ ಸಚಿವ ಪರಂ ಭರವಸೆ

  • ವೃದ್ಧಾಪ್ಯ ತಡೆಯುವ ಚಿಕಿತ್ಸೆಯೇ ಶೆಫಾಲಿ ಜರಿವಾಲಾಗೆ ಮುಳುವಾಯ್ತಾ?

    ವೃದ್ಧಾಪ್ಯ ತಡೆಯುವ ಚಿಕಿತ್ಸೆಯೇ ಶೆಫಾಲಿ ಜರಿವಾಲಾಗೆ ಮುಳುವಾಯ್ತಾ?

    ಮುಂಬೈ: ವೃದ್ಧಾಪ್ಯ ತಡೆಯುವ ಚಿಕಿತ್ಸೆಯೇ ನಟಿ ಶೆಫಾಲಿ ಜರಿವಾಲಾಗೆ (Shefali Jariwala) ಮುಳುವಾಯ್ತಾ ಎಂಬ ಪ್ರಶ್ನೆ ಎದ್ದಿದೆ

    ಹೌದು. 42 ವರ್ಷದ ನಟಿಯ ಹಠಾತ್ ಸಾವಿನ ಬಗ್ಗೆ ಮುಂಬೈ ಪೊಲೀಸರು (Mumbai Police) ತನಿಖೆ ಆರಂಭಿಸಿದ್ದಾರೆ. ತನಿಖೆಯ ವೇಳೆ ಹಲವಾರು ಸ್ಫೋಟಕ ವಿಚಾರಗಳು ಬೆಳಕಿಗೆ ಬಂದಿವೆ. ಖಾಲಿ ಹೊಟ್ಟೆಯಲ್ಲಿ ಮಾತ್ರೆ ಸೇವಿಸಿದ್ದರಿಂದ ಅವರ ಸ್ಥಿತಿ ಹದಗೆಟ್ಟಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಇದನ್ನೂ ಓದಿ: ಹನಿಮೂನ್ ಟ್ರಿಪ್‌ನಲ್ಲಿ ವೈಷ್ಣವಿ ಮಸ್ತ್ ಡ್ಯಾನ್ಸ್..ಫುಲ್ ಮಸ್ತಿ!

    ವೃದ್ಧಾಪ್ಯ ತಡೆಯುವ ಚಿಕಿತ್ಸೆ (Anti Aging Drug) ಪಡೆಯುತ್ತಿದ್ದ ಶೆಫಾಲಿ ಏಳೆಂಟು ವರ್ಷಗಳಿಂದ ಔಷಧಿಗಳನ್ನು ತಜ್ಞರ ಮಾರ್ಗದರ್ಶನದಲ್ಲಿ ಸೇವಿಸುತ್ತಿದ್ದರು. ಈ ಸಂಬಂಧ ಪ್ರತಿ ತಿಂಗಳು ಈ ಚಿಕಿತ್ಸೆ ಪಡೆಯುತ್ತಿದ್ದರು. ಇದನ್ನೂ ಓದಿ: ಶೆಫಾಲಿ ಸಾವಿನ ಬೆನ್ನಲ್ಲೇ ಪುನೀತ್ ಸಾವಿನ ಬಗ್ಗೆ ಚರ್ಚೆ

    ಕಳೆದ ಶುಕ್ರವಾರ ನಟಿ ಶೆಫಾನಿ ಮನೆಯಲ್ಲಿ ಪೂಜೆ ಆಯೋಜನೆಗೊಂಡಿತ್ತು. ಪೂಜೆ ಇರುವ ಕಾರಣ ಶೆಫಾನಿ ಉಪವಾಸ ವ್ರತ ಕೈಗೊಂಡಿದ್ದರು. ಆದರೆ ಅಂದು ವೃದ್ಧಾಪ್ಯ ತಡೆಯುವ ಔಷಧಿಯನ್ನು ಸೇವಿಸಿದ್ದರು. ರಾತ್ರಿ 10-11 ಗಂಟೆ ನಡುವೆ ಇದ್ದಕ್ಕಿದ್ದಂತೆ ಶೆಫಾಲಿ ಆರೋಗ್ಯದಲ್ಲಿ ಏರುಪೇರಾಗತೊಡಗಿತು. ರಕ್ತದೊತ್ತಡ ತೀವ್ರವಾಗಿ ಕಡಿಮೆಯಾಗಿ ದೇಹ ನಡುಗಲು ಆರಂಭಿಸಿ ಕೆಲ ಕ್ಷಣಗಳಲ್ಲಿ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ. ಅವರನ್ನು ಆಗ ತಕ್ಷಣವೇ ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ.

    ವಿಧಿ ವಿಜ್ಞಾನ ಪ್ರಯೋಗಾಲಯ ತಂಡ ನಟಿ ಪಡೆಯುತ್ತಿದ್ದ ವಿಟಮಿನ್ ಟಾಬ್ಲೆಟ್, ಗ್ಯಾಸ್ಟ್ರಿಕ್ ಮಾತ್ರೆ ಸೇರಿದಂತೆ ವಿವಿಧ ಔಷಧಿಗಳನ್ನು ಸಂಗ್ರಹಿಸಿದೆ. ಮರಣೋತ್ತರ ಪರೀಕ್ಷೆ ವರದಿ ಇನ್ನೂ ಪೊಲೀಸರ ಕೈ ಸೇರಿಲ್ಲ. ಮರಣೋತ್ತರ ಪರೀಕ್ಷೆ ವರದಿ ಮತ್ತು ಔಷಧಿಗಳ ಪರೀಕ್ಷೆಗಳ ವರದಿಯ ಬಳಿಕ ಶೆಫಾಲಿ ಜರಿವಾಲಾ ಸಾವಿಗೆ ನಿಖರ ಕಾರಣ ತಿಳಿಯಲಿದೆ.

  • ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ ಅಕ್ರಮ ಪ್ರವೇಶ – ಮಂಗಳೂರು ಯುವಕ ಅರೆಸ್ಟ್‌

    ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ ಅಕ್ರಮ ಪ್ರವೇಶ – ಮಂಗಳೂರು ಯುವಕ ಅರೆಸ್ಟ್‌

    ಮುಂಬೈ: ವಿದ್ಯಾರ್ಥಿ ಸೋಗಿನಲ್ಲಿ ಐಐಟಿ ಬಾಂಬೆ ಕ್ಯಾಂಪಸ್‌ಗೆ (IIT Bombay Campus) ಅಕ್ರಮ ಪ್ರವೇಶ ಮಾಡಿದ್ದ ಮಂಗಳೂರು ಯುವಕನನ್ನು ಮುಂಬೈ ಪೊಲೀಸರು (Mumbai Police) ಬಂಧಿಸಿರುವ ಘಟನೆ ನಡೆದಿದೆ. ಘಟನೆ ಬಳಿಕ ಭದ್ರತಾ ಲೋಪದ ಬಗ್ಗೆ ಕಳವಳ ಹುಟ್ಟಿಕೊಂಡಿದ್ದು, ಸಾರ್ವಜನಿಕರು ಪ್ರಶ್ನಿಸಿದ್ದಾರೆ.

    ಬಿಲಾಲ್ ಅಹ್ಮದ್ ಫಯಾಜ್ ಅಹ್ಮದ್ ತೇಲಿ ಬಂಧಿತ ಯುವಕ. ಜೂನ್‌ 17ರಂದು ಕಾಲೇಜು ಕ್ಯಾಂಪಸ್‌ನ ಭದ್ರತಾ ಸಿಬ್ಬಂದಿ ಆತನನ್ನ ಹಿಡಿದು ಪೊವೈ ಪೊಲೀಸರಿಗೆ ಒಪ್ಪಿಸಿದ್ದಾರೆ. ಬಳಿಕ ಈ ಸಂಬಂಧ ಕಾಲೇಜು ಆಡಳಿತ ಮಂಡಳಿ ದೂರು ನೀಡಿದೆ. ಇದನ್ನೂ ಓದಿ: ಜೈ ಹಿಂದ್‌.. ಜೈ ಭಾರತ್..‌: ಬಾಹ್ಯಾಕಾಶದಿಂದಲೇ ಶುಭಾಂಶು ಶುಕ್ಲಾ ಮೊದಲ ಸಂದೇಶ

    ಬೆಳಕಿಗೆ ಬಂದಿದ್ದು ಹೇಗೆ?
    ಪೊಲೀಸರು ಹೇಳುವಂತೆ, ಬಿಲಾಲ್‌ ಶಿಕ್ಷಣ ಸಂಸ್ಥೆಯ (Educational institution) ಪ್ರಮುಖ ಕಾರ್ಯಕ್ರಮವೊಂದಕ್ಕೆ ಬಂದಿದ್ದ, ಆದ್ರೆ ವಾಪಸ್‌ ಹೋಗಿರಲಿಲ್ಲ. ಮೊದಲು ಒಂದು ದಿನದ ಅಧ್ಯಯನಕ್ಕೆ ಕ್ಯಾಂಪಸ್‌ ಪ್ರವೇಶಿಸಿದವನು ಬಳಿಕ ಕ್ಯಾಂಪಸ್‌ನಲ್ಲಿಯೇ ಉಳಿದುಕೊಂಡು, ಉಪನ್ಯಾಸಗಳಿಗೆ ಹಾಜರಾಗಲು ಶುರು ಮಾಡಿದ್ದ. ಯಾವುದೇ ಮಾನ್ಯತಾ ದಾಖಲೆಗಳನ್ನು ಹೊಂದಿರದ ಬಿಲಾಲ್‌ ತರಗತಿಗಳಿಗೆ ಹಾಜರಾಗುತ್ತಿದ್ದ.

    ಒಮ್ಮೆ ತರಗತಿಯಲ್ಲಿದ್ದಾಗ ಪ್ರಾಧ್ಯಾಪಕರೊಬ್ಬರು ತನ್ನ ಗುರುತಿನ ಚೀಟಿ ತೋರಿಸುವಂತೆ ಕೇಳಿದ್ರು. ಆಗ ಅಕ್ರಮ ಪ್ರವೇಶ ಮಾಡಿರುವುದು, ಕ್ಯಾಂಪಸ್‌ನಲ್ಲೇ ಅಕ್ರಮವಾಗಿ ವಾಸ್ತವ್ಯ ಹೂಡಿರುವುದು ಬೆಳಕಿಗೆ ಬಂದಿತು. ನಂತರ ಆಡಳಿತ ಮಂಡಳಿ ಆತನನ್ನ ಪೊಲೀಸರಿಗೆ ಒಪ್ಪಿಸಿ, ದೂರು ದಾಖಲಿಸಿತು. ಇದನ್ನೂ ಓದಿ: ಕುಮಾವೂನ್ ವಿವಿ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಮೂರ್ಛೆ ಹೋದ ಜಗದೀಪ್ ಧನಕರ್

    ಮೂಲಗಳು ಹೇಳುವುದೇನು? 
    ಇದೇ ಜೂನ್‌ 2 ರಿಂದ 7ರ ವರೆಗೆ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಿದ್ದ ಬಿಲಾಲ್‌ ಬಳಿಕ ಸ್ವಲ್ಪ ಸಮಯ ಕಣ್ಮರೆಯಾಗಿದ್ದ. ಜೂನ್‌ 17ರಂದು ಮತ್ತೆ ಕ್ಯಾಂಪಸ್‌ನಲ್ಲಿ ಕಾಣಿಸಿಕೊಂಡಾಗ ಅನುಮಾನ ಬಂದು ಆತನನ್ನ ವಿಚಾರಿಸಲಾಯಿತು ಎಂದು ಸಂಸ್ಥೆ ಮೂಲಗಳು ತಿಳಿಸಿವೆ.

    ಸದ್ಯ ಆತನನ್ನ ಬಂಧಿಸಿರುವ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಸದ್ಯಕ್ಕೆ ಆತನ ಬಳಿ ಯಾವುದೇ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ. ಜೊತೆಗೆ ಅವನ ಮೂಲ ಉದ್ದೇಶ ಏನೆಂಬುದೂ ತಿಳಿದುಬಂದಿಲ್ಲ. ಅವನಿಗೆ ಕ್ಯಾಂಪಸ್‌ನಲ್ಲಿ ಯಾರಾದ್ರೂ ಸ್ನೇತರಿದ್ದಾರಾ? ಯಾರೊಂದಿಗೆ ಸಂಪರ್ಕದಲ್ಲಿದ್ದ ಎಂಬೆಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: Honeymoon Murder | ಕೊನೆಗೂ ತಮ್ಮಿಬ್ಬರ ಸಂಬಂಧ ಒಪ್ಪಿಕೊಂಡ ಸೋನಂ ರಘುವಂಶಿ – ರಾಜ್

  • ಮೊಬೈಲ್‌ನಲ್ಲಿ 13,500 ಅಶ್ಲೀಲ ಚಿತ್ರ – ಫೇಕ್ ಅಕೌಂಟ್‌ನಿಂದ ಮಹಿಳೆಯರ ಮಾನಹಾನಿ ಮಾಡ್ತಿದ್ದ ಕಾಮುಕ ಅರೆಸ್ಟ್

    ಮೊಬೈಲ್‌ನಲ್ಲಿ 13,500 ಅಶ್ಲೀಲ ಚಿತ್ರ – ಫೇಕ್ ಅಕೌಂಟ್‌ನಿಂದ ಮಹಿಳೆಯರ ಮಾನಹಾನಿ ಮಾಡ್ತಿದ್ದ ಕಾಮುಕ ಅರೆಸ್ಟ್

    -10 ನಕಲಿ ಖಾತೆ, 90ಕ್ಕೂ ಹೆಚ್ಚು ಇ-ಮೇಲ್ ಐಡಿ ಬಳಕೆ

    ಬಳ್ಳಾರಿ: ನಕಲಿ ಖಾತೆ ಸೃಷ್ಟಿಸಿ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡಿ ಮಹಿಳೆಯರ ಮಾನಹಾನಿ ಮಾಡ್ತಿದ್ದ ಕಾಮುಖನನ್ನು ಮುಂಬೈ ಪೊಲೀಸರು (Mumbai Police) ಸಂಡೂರಿನಲ್ಲಿ (Sandur) ಅರೆಸ್ಟ್ ಮಾಡಿದ್ದಾರೆ.

    ಶುಭಂ ಕುಮಾರ್ ಮನೋಜ್ ಪ್ರಸಾದ್ ಸಿಂಗ್ (25) ಬಂಧಿತ ಆರೋಪಿ. ದೆಹಲಿಯ ಕಂಪ್ಯೂಟರ್ ಸಾಫ್ಟ್‌ಸ್ಟಿಲ್ಸ್‌ನಲ್ಲಿ ಡಿಪ್ಲೋಮಾ ಪಡೆದಿದ್ದ ಆರೋಪಿ ಸಂಡೂರಿನ ಖಾಸಗಿ ಕಂಪನಿಯಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದ.ಇದನ್ನೂ ಓದಿ: ಬೆಂಗಳೂರಿನ 10 ಮೆಟ್ರೋ ಸ್ಟೇಷನ್‌ನಲ್ಲಿ ಅಮುಲ್‌ಗೆ ಪ್ರಮೋಷನ್ – ಕನ್ನಡಿಗರು ಕೆಂಡ

    ಮಹಿಳೆಯರ ಹೆಸರಿನಲ್ಲಿ ನಕಲಿ ಖಾತೆ ಸೃಷ್ಟಿಸಿ ಅದರಿಂದ ಬೆತ್ತಲೆ ಫೋಟೋ, ವಿಡಿಯೋ ಅಪ್ಲೋಡ್ ಮಾಡೋದೇ ಇವನ ಕೆಲಸವಾಗಿತ್ತು. ಈವರೆಗೂ ಒಟ್ಟು 10 ನಕಲಿ ಖಾತೆ ಹಾಗೂ 90ಕ್ಕೂ ಹೆಚ್ಚು ಇ-ಮೇಲ್ ಐಡಿ ಮಾಡಿಕೊಂಡಿದ್ದ. ಈ ಕುರಿತು ವಿದ್ಯಾರ್ಥಿನಿಯೊಬ್ಬಳು ದೂರು ದಾಖಲಿಸಿದ್ದಳು. ದೂರಿನ ಆಧಾರದ ಮೇಲೆ ಮುಂಬೈ ಪೊಲೀಸರು ಗೂಗಲ್‌ನಿಂದ ತಾಂತ್ರಿಕ ಮಾಹಿತಿಗಳನ್ನು ಕಲೆ ಹಾಕಿ ಆರೋಪಿ ಶುಭಂ ನನ್ನು ಸಂಡೂರಿನಲ್ಲಿ ಬಂಧಿಸಿದ್ದಾರೆ.

    ತನಿಖೆ ವೇಳೆ, ಮಹಿಳೆಯರಿಗೆ ನಗ್ನವಾಗಿ ವಿಡಿಯೋ ಕರೆ ಮಾಡುವಂತೆ ಕಿರುಕುಳ ಕೊಡುತ್ತಿದ್ದ. ಮಹಿಳೆಯರು ಒಪ್ಪದೇ ಇದ್ದಾಗ ನಕಲಿ ಖಾತೆ ಸೃಷ್ಟಿ ಮಾಡಿ, ಮಾನಹಾನಿ ಮಾಡುತ್ತಿದ್ದ ಎಂದು ತಿಳಿದುಬಂದಿದೆ. ಜೊತೆಗೆ ಆರೋಪಿಯ ಮೊಬೈಲ್‌ನಿಂದ 13,500 ಮಹಿಳೆಯರ ಅಶ್ಲೀಲ ದೃಶ್ಯಗಳಿರುವ ಸ್ಕ್ರೀನ್ ಶಾಟ್‌ಗಳನ್ನು ರಿಕವರಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: KRS ಡ್ಯಾಂ ಭರ್ತಿಗೆ 11 ಅಡಿಯಷ್ಟೇ ಬಾಕಿ

     

  • ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಮುಂಬೈ ಪೊಲೀಸ್

    ಸಲ್ಮಾನ್ ಖಾನ್‌ಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿ ಮಾನಸಿಕ ಅಸ್ವಸ್ಥ: ಮುಂಬೈ ಪೊಲೀಸ್

    ಮುಂಬೈ: ಬಾಲಿವುಡ್ ಸೂಪರ್ ಸ್ಟಾರ್ ಸಲ್ಮಾನ್ ಖಾನ್ (Salman Khan) ಅವರನ್ನು ಕೊಲ್ಲುವುದಾಗಿ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಗುಜರಾತ್‌ನ (Gujarat) ವಡೋದರಾ ಜಿಲ್ಲೆಯಲ್ಲಿ ಪೊಲೀಸರು ಪತ್ತೆ ಹಚ್ಚಿದ್ದಾರೆ. 26 ವರ್ಷದ ಯುವಕನಾಗಿರುವ ಆರೋಪಿ ಮಾನಸಿಕವಾಗಿ ಅಸ್ವಸ್ಥನಾಗಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.

    ಮುಂಬೈ ಸಂಚಾರ ಪೊಲೀಸರ ವಾಟ್ಸಪ್ ಸಹಾಯವಾಣಿಗೆ ಸಲ್ಮಾನ್ ಖಾನ್ ಅವರಿಗೆ ಬೆದರಿಕೆ ಹಾಕಲಾದ ಸಂದೇಶ ಬಂದಿತ್ತು. ಸಲ್ಮಾನ್ ಅವರ ಕಾರನ್ನು ಬಾಂಬ್ ಇಟ್ಟು ಸ್ಫೋಟಿಸಲಾಗುವುದು ಮತ್ತು ಅವರ ಮನೆಗೆ ಪ್ರವೇಶಿಸಿದ ನಂತರ ಅವರ ಮೇಲೆ ದಾಳಿ ಮಾಡಲಾಗುವುದು ಎಂದು ಸಂದೇಶದಲ್ಲಿ ಹೇಳಲಾಗಿತ್ತು. ಇದನ್ನೂ ಓದಿ: ಮನೆಗೆ ನುಗ್ಗಿ, ಕಾರು ಸ್ಫೋಟಿಸಿ ಕೊಲೆ ಮಾಡುವುದಾಗಿ ನಟ ಸಲ್ಮಾನ್‌ ಖಾನ್‌ಗೆ ಬೆದರಿಕೆ

    ಸಲ್ಮಾನ್ ಖಾನ್‌ಗೆ ಈಗಾಗಲೇ ವೈ-ಪ್ಲಸ್ ಭದ್ರತೆ ನೀಡಲಾಗಿದೆ. ಆದರೆ ಈ ಬೆದರಿಕೆಯ ನಂತರ, ಮುಂಬೈನ ವರ್ಲಿ ಪೊಲೀಸರು ತಕ್ಷಣ ಕ್ರಮ ಕೈಗೊಂಡರು. ಪೊಲೀಸರು ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 351(2)(3)ರ ಅಡಿಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಕ್ರಿಮಿನಲ್ ಬೆದರಿಕೆ ಪ್ರಕರಣವನ್ನು ದಾಖಲಿಸಿದ್ದಾರೆ. ಅಲ್ಲದೆ, ಬಾಂದ್ರಾದಲ್ಲಿರುವ ಸಲ್ಮಾನ್ ಮನೆಯ ಹೊರಗೆ ಪೊಲೀಸರು ಭದ್ರತೆಯನ್ನು ಹೆಚ್ಚಿಸಿದ್ದಾರೆ. ಇದನ್ನೂ ಓದಿ: ಗಲಭೆಕೋರರಿಗೆ ದಂಡವೇ ಒಳ್ಳೆ ಚಿಕಿತ್ಸೆ: ಬಂಗಾಳ ಹಿಂಸಾಚಾರಕ್ಕೆ ಯೋಗಿ ಆದಿತ್ಯನಾಥ್‌ ಕಿಡಿ

    ಪ್ರಕರಣದ ತನಿಖೆ ಆರಂಭಿಸಿದಾಗ ವಡೋದರಾದ (Vadodara) ವಾಘೋಡಿಯಾ ತಾಲೂಕಿನಲ್ಲಿ ವಾಸಿಸುತ್ತಿರುವ ವ್ಯಕ್ತಿಯೊಬ್ಬರು ಈ ಬೆದರಿಕೆ ಕರೆಯನ್ನು ಕಳುಹಿಸಿದ್ದಾರೆ ಎಂದು ತಿಳಿದು ಬಂದಿತ್ತು. ಮುಂಬೈ ಪೊಲೀಸರ ತಂಡವು ವಾಘೋಡಿಯಾ ಪೊಲೀಸರೊಂದಿಗೆ ಆ ವ್ಯಕ್ತಿಯ ಮನೆಗೆ ತಲುಪಿದೆ ಎಂದು ವಡೋದರಾ ಪೊಲೀಸ್ ವರಿಷ್ಠಾಧಿಕಾರಿ ರೋಹನ್ ಆನಂದ್ ಹೇಳಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದಿಂದ ಬಂದು ಜಡ್ಜ್ ಮನೆಯಲ್ಲಿ ಕಳ್ಳತನ – 8 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದಿದ್ದ ಆರೋಪಿಗಳು ಅರೆಸ್ಟ್

    ಪ್ರಾಥಮಿಕ ತನಿಖೆಯಲ್ಲಿ ಈ 26 ವರ್ಷದ ಯುವಕ ಮಾನಸಿಕವಾಗಿ ಅಸ್ಥಿರನಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾನೆ ಎಂದು ತಿಳಿದುಬಂದಿದೆ. ಪೊಲೀಸರು, ಆತನನ್ನು ವಿಚಾರಣೆಗಾಗಿ ಮುಂಬೈಗೆ ಬರಲು ನೋಟಿಸ್ ನೀಡಿ, ವಾಪಸ್ ಮರಳಿದ್ದಾರೆ ಎಂದು ರೋಹನ್ ಆನಂದ್ ವಿವರಿಸಿದರು. ಇದನ್ನೂ ಓದಿ: ಶ್ರೀಲೀಲಾ ಜೊತೆ ಹೋಲಿಕೆ ಮಾಡಿದ್ದಕ್ಕೆ ನಿಧಿ ಅಗರ್ವಾಲ್ ತಿರುಗೇಟು

    ಸಲ್ಮಾನ್ ಖಾನ್ ಅವರಿಗೆ ಈ ಹಿಂದೆಯೂ ಹಲವು ಬಾರಿ ಜೀವ ಬೆದರಿಕೆ ಕರೆಗಳು ಬಂದಿದ್ದವು. ಕಳೆದ ವರ್ಷ ಏಪ್ರಿಲ್‌ನಲ್ಲಿ ಬಾಂದ್ರಾದಲ್ಲಿರುವ ಸಲ್ಮಾನ್ ಅವರ ಗ್ಯಾಲಕ್ಸಿ ಅಪಾರ್ಟ್ಮೆಂಟ್ ಹೊರಗೆ ಬೈಕ್‌ನಲ್ಲಿ ಬಂದ ಇಬ್ಬರು ವ್ಯಕ್ತಿಗಳು 4 ಗುಂಡುಗಳನ್ನು ಹಾರಿಸಿದ್ದರು. ಇದನ್ನೂ ಓದಿ: ‘ಕುಬೇರ’ ಚಿತ್ರದ ಪೋಸ್ಟರ್ ಔಟ್- ಧನುಷ್ ಸಿನಿಮಾ ಬಗ್ಗೆ ಸಿಕ್ತು ಅಪ್‌ಡೇಟ್

    ಇದಲ್ಲದೆ, ಲಾರೆನ್ಸ್ ಬಿಷ್ಣೋಯ್ (Lawrence Bishnoi) ಗ್ಯಾಂಗ್ ಕೂಡ ಸಲ್ಮಾನ್‌ಗೆ ಬೆದರಿಕೆ ಹಾಕಿತ್ತು. 1998ರಲ್ಲಿ ಕೃಷ್ಣಮೃಗವನ್ನು ಬೇಟೆಯಾಡಿದ ಆರೋಪ ಹೊತ್ತಿದ್ದ ಸಲ್ಮಾನ್, ಬಿಷ್ಣೋಯ್ ಸಮುದಾಯದ ಕ್ಷಮೆಯಾಚಿಸಬೇಕೆಂದು ಗ್ಯಾಂಗ್ ಕೇಳಿಕೊಂಡಿತ್ತು. ಈ ಬೆದರಿಕೆಗಳ ನಂತರ, ಮುಂಬೈ ಪೊಲೀಸರು ಸಲ್ಮಾನ್‌ಗೆ ವೈ-ಪ್ಲಸ್ ಭದ್ರತೆಯನ್ನು ನೀಡಿದ್ದರು.

  • ಏಕನಾಥ್‌ ಶಿಂಧೆ ʻದೇಶದ್ರೋಹಿʼ ಎಂದಿದ್ದ ಕಾಮೆಡಿಯನ್‌ ಕುನಾಲ್ ಕಮ್ರಾಗೆ 2ನೇ ಸಮನ್ಸ್‌

    ಏಕನಾಥ್‌ ಶಿಂಧೆ ʻದೇಶದ್ರೋಹಿʼ ಎಂದಿದ್ದ ಕಾಮೆಡಿಯನ್‌ ಕುನಾಲ್ ಕಮ್ರಾಗೆ 2ನೇ ಸಮನ್ಸ್‌

    – ನಿರ್ಮಲಾ ಸೀತಾರಾಮನ್‌ ವಿರುದ್ಧ‌ ಕಾಮ್ರಾ ವ್ಯಂಗ್ಯ – ವಿಡಿಯೋ ವೈರಲ್‌

    ಮುಂಬೈ: ಮಹಾರಾಷ್ಟ್ರ ಡಿಸಿಎಂ ಏಕನಾಥ್‌ ಶಿಂಧೆ (Eknath Shinde) ವಿರುದ್ಧ ʻದೇಶದ್ರೋಹಿʼ ಹೇಳಿಕೆ ನೀಡಿದ ಆರೋಪದ ಮೇಲೆ ಮುಂಬೈನಲ್ಲಿ ದಾಖಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಟ್ಯಾಂಡ್-ಅಪ್ ಕಾಮೆಡಿಯನ್ ಕುನಾಲ್ ಕಮ್ರಾ (Stand up comedian Kunal Kamra)ಗೆ ಪೊಲೀಸರು 2ನೇ ಸಮನ್ಸ್‌ ಜಾರಿಗೊಳಿಸಿದ್ದಾರೆ.

    ಶಿವಸೇನಾ ಶಾಸಕ ಮುರ್ಜಿ ಪಟೇಲ್‌ ಸಲ್ಲಿಸಿದ ದೂರಿನ ಮೇರೆಗೆ ಮುಂಬೈನ ಖಾರ್‌ ಪ್ರದೇಶದ ಪೊಲೀಸರು ಕಾಮ್ರಾಗೆ 2ನೇ ನೋಟಿಸ್‌ ಜಾರಿಮಾಡಿದ್ದು, ವಿಚಾರಣೆಗೆ ಹಾಜರಾಗಲು ಒಂದು ವಾರಗಳ ಕಾಲಾವಕಾಶ ನೀಡಿರುವುದಾಗಿ ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ತೆಲಂಗಾಣ | ನಿರ್ಮಾಣ ಹಂತದಲ್ಲಿದ್ದ 6 ಅಂತಸ್ತಿನ ಕಟ್ಟಡ ಕುಸಿತ – ಇಬ್ಬರು ಸಿಲುಕಿರುವ ಶಂಕೆ

    ಕುನಾಲ್‌ ಕಾಮ್ರಾ ಹೇಳಿದ್ದೇನು?
    ಮುಂಬೈನ (Mumbai) ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು. ಏಕನಾಥ್‌ ಶಿಂಧೆ – ಉದ್ದವ್ ಠಾಕ್ರೆ ನಡುವಿನ ರಾಜಕೀಯ ಉಲ್ಲೇಖಿಸುತ್ತಾ ಮೊದಲು ಶಿವಸೇನಾ ಬಿಜೆಪಿಯಿಂದ ಹೊರಬಂದಿತು, ನಂತರ ಶಿವಸೇನಾ ಶಿವಸೇನಾದಿಂದಲೇ ಹೊರಬಂದಿತು. ಎನ್‌ಸಿಪಿಯಿಂದ ಎನ್‌ಸಿಪಿ ಹೊರಬಂದಿತು. ಇವರೆಲ್ಲಾ ಒಂದು ಮತದಾರನಿಗೆ 9 ಬಟನ್‌ಗಳನ್ನು ನೀಡಿದ್ದಾರೆ. ಥಾಣೆಯು ರಾಜಕೀಯ ಭದ್ರಕೋಟೆಯಾಗಿದ್ದು, ಗದ್ದಾರ್‌ (ದ್ರೋಹಿ) ಆಳ್ವಿಕೆ ಎಂದು ಪರೋಕ್ಷವಾಗಿ ಹಾಡು ಹೇಳುತ್ತಾ ಟೀಕಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿತ್ತು. ಅಲ್ಲದೇ ಇದು ಮಹಾರಾಷ್ಟ್ರದಲ್ಲಿ ದೊಡ್ಡ ರಾಜಕೀಯ ಕೋಲಾಹಲ ಎಬ್ಬಿಸಿತ್ತು.

    ಇದರಿಂದ ರೊಚ್ಚಿಗೆದ್ದ ಶಿವಸೇನೆ ಶಿಂಧೆ ಬಣದ ಕಾರ್ಯಕರ್ತರು ಕಾರ್ಯಕ್ರಮ ನಡೆದ ಸ್ತಳದಲ್ಲಿ ದಾಂಧಲೆ ನಡೆಸಿದ್ದರು. ಈ ಆರೋಪದ ಮೇಲೆ ಶಿವಸೇನಾ ಪದಾಧಿಕಾರಿ ರಾಹುಲ್‌ ಕನಲ್‌ ಮತ್ತು 11 ಮಂದಿ ಇತರರನ್ನು ಬಂಧಿಸಿದ್ದಾರೆ. ದಾಂಧಲೆ ನಡೆಸಿದವರ ಪೈಕಿ 15-20 ಮಂದಿಯನ್ನು ಗುರುತಿಸುವ ಕೆಲಸ ಇನ್ನೂ ಆಗಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: `ಮಹಾ’ ಡಿಸಿಎಂ ʻದೇಶದ್ರೋಹಿʼ ಎಂದ ಕಾಮೆಡಿಯನ್ – ಕುನಾಲ್ ಕಮ್ರಾ ವಿರುದ್ಧ ಎಫ್‌ಐಆರ್‌

    ಸೀತಾರಾಮನ್‌ಗೆ ಸರ್ವಾಧಿಕಾರಿ ಎಂದು ಟೀಕೆ
    ಕುನಾಲ್ ಕಾಮ್ರಾ ಬುಧವಾರ ಹೊಸ ಪ್ಯಾರಡಿ ಹಾಡನ್ನು ಬಿಡುಗಡೆ ಮಾಡಿದ್ದರು. ಇದರಲ್ಲಿ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನ ಟೀಕಿಸಿದ್ದರು. ಬಿಜೆಪಿಯನ್ನ ʻಸರ್ವಾಧಿಕಾರಿʼ ಎಂದು ಆರೋಪಿಸಿದ್ದಾರೆ. ನಿರ್ಮಲಾ ಸೀತಾರಾಮನ್ ಅವರನ್ನ ಟೀಕಿಸಲು ಕಾಮ್ರಾ ʻಮಿಸ್ಟರ್ ಇಂಡಿಯಾʼ ಚಿತ್ರದ ʻಹವಾ ಹವಾಯಿʼ ಹಾಡಿನ ಪ್ಯಾರಡಿಯನ್ನ ಮಾಡಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿ, ಕಾಮೆಡಿಯನ್‌ ಇಬ್ಬರೂ ಸಂವಿಧಾನ ಓದಿಲ್ಲ – ಕಾಮ್ರಾ ವಿರುದ್ಧ ಕಾನೂನು ಕ್ರಮ: ಫಡ್ನವಿಸ್‌

    ʻಟ್ರಾಫಿಕ್ ಜಾಮ್ ಮಾಡಲು ಇವಳು ಬಂದಳು, ಸೇತುವೆ ಕೆಡವಲು ಇವಳು ಬಂದಳು, ಇದನ್ನ ಸರ್ವಾಧಿಕಾರ ಎನ್ನುತ್ತಾರೆ. ಜನರ ದುಡಿಮೆಯನ್ನ ಲೂಟಿ ಮಾಡಲು ಇವಳು ಬಂದಳು, ಸೀರೆ ಹುಟ್ಟೋ ಅಕ್ಕ ಬಂದಳು, ಸಂಬಳ ಕದಿಯಲು ಇವಳು ಬಂದಳು, ಮಧ್ಯಮ ವರ್ಗವನ್ನ ತುಳಿಯಲು ಇವಳು ಬಂದಳು, ಪಾಪ್‌ಕಾರ್ನ್ ತಿನ್ನಿಸಲು ಇವಳು ಬಂದಳು, ಇದನ್ನ ನಿರ್ಮಲಾ ತಾಯಿ ಎನ್ನುತ್ತಾರೆʼ ಎಂದು ಹಾಡಿದ್ದರು. ಇದು ಕಾಮ್ರಾ ವಿರುದ್ಧ ಮತ್ತಷ್ಟು ಆಕ್ರೋಶ ಹೆಚ್ಚಿಸಲು ಕಾರಣವಾಯಿತು.

  • ರಾಹುಲ್‌ ಗಾಂಧಿ, ಕಾಮೆಡಿಯನ್‌ ಇಬ್ಬರೂ ಸಂವಿಧಾನ ಓದಿಲ್ಲ – ಕಾಮ್ರಾ ವಿರುದ್ಧ ಕಾನೂನು ಕ್ರಮ: ಫಡ್ನವಿಸ್‌

    ರಾಹುಲ್‌ ಗಾಂಧಿ, ಕಾಮೆಡಿಯನ್‌ ಇಬ್ಬರೂ ಸಂವಿಧಾನ ಓದಿಲ್ಲ – ಕಾಮ್ರಾ ವಿರುದ್ಧ ಕಾನೂನು ಕ್ರಮ: ಫಡ್ನವಿಸ್‌

    – ಕಿಚ್ಚು ಹೊತ್ತಿಸಿದ ಕಾಮ್ರಾ ʻದೇಶದ್ರೋಹಿʼ ಹೇಳಿಕೆ

    ಮುಂಬೈ: ಡಿಸಿಎಂ ಏಕನಾಥ್ ಶಿಂಧೆ ವಿರುದ್ಧ ಅವಹೇಳಕಾರಿ ಹೇಳಿಕೆ ನೀಡಿದ ಸ್ಟ್ಯಾಂಡ್-ಅಪ್ ಕಾಮೆಡಿಯನ್ ಕುನಾಲ್ ಕಮ್ರಾ ವಿರುದ್ಧ ಶಿವಸೇನಾ ಕಾರ್ಯಕರ್ತರು ಪ್ರಕರಣ ದಾಖಲಿಸಿದ್ದಾರೆ. ಈ ಬೆನ್ನಲ್ಲೇ ಪ್ರತಿಕ್ರಿಯೆ ನೀಡಿರುವ ಸಿಎಂ ದೇವೇಂದ್ರ ಫಡ್ನವಿಸ್‌ (Devendra Fadnavis) ಅವರು, ಕಾಮ್ರಾ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ಕಾಮ್ರಾ ಮಾಡಿದ್ದು ಕಾಮೆಡಿ ಅಲ್ಲ, ಶಿಂಧೆ ಅವರಿಗೆ ಮಾಡಿದ ಅವಮಾನ, ಅದಕ್ಕಾಗಿ ಅವರು ಕ್ಷಮೆ ಕೇಳಬೇಕು. ಇಂತಹ ಅಪಮಾನಗಳನ್ನು ಸಹಿಸಲಾಗಲ್ಲ. ಕಳೆದ ಚುನಾವಣೆಗಳು ದೇಶದ್ರೋಹಿಗಳು ಯಾರೆಂಬುದನ್ನು ಸಾಬೀತು ಮಾಡಿವೆ. ಹೀಗಿದ್ದಾಗ ಅಂತಹ ದೊಡ್ಡ ನಾಯಕನನ್ನು ದ್ರೋಹಿ (Traitor) ಎಂದು ಕರೆಯುವ ಹಕ್ಕು ಯಾರಿಗೂ ಇಲ್ಲ. ಕಾಮ್ರಾ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    ರಾಹುಲ್‌ ಗಾಂಧಿಯೂ ಸಂವಿಧಾನ ಓದಿಲ್ಲ:
    ಕುನಾಲ್‌ ಕಾಮ್ರಾ ಅವರು ರಾಹುಲ್ ಗಾಂಧಿ (Rahul Gandhi) ತೋರಿಸಿದ ಅದೇ ಕೆಂಪು ಸಂವಿಧಾನದ ಪುಸ್ತಕವನ್ನು ಪೋಸ್ಟ್ ಮಾಡಿದ್ದಾರೆ. ಇಬ್ಬರೂ ಸಂವಿಧಾನ ಓದಿಲ್ಲ. ಸಂವಿಧಾನವು ನಮಗೆ ಮಾತನಾಡುವ ಸ್ವಾತಂತ್ರ್ಯ ನೀಡಿದೆ, ಆದರೆ ಅದಕ್ಕೆ ಮಿತಿಗಳಿವೆ. ಈ ದೇಶದಲ್ಲಿ ಸ್ಟ್ಯಾಂಡ್‌ ಅಪ್‌ ಕಾಮಿಡಿ ಮಾಡಲು ಸ್ವಾತಂತ್ರ್ಯವಿದೆ, ಹಕ್ಕಿದೆ. ಹಾಗಂತ ಓರ್ವ ಉಪಮುಖ್ಯಮಂತ್ರಿಗಳ ಮಾನಹಾನಿ ಮಾಡುವುದನ್ನು ಸಹಿಸಲ್ಲ. 2024ರ ಚುನಾವಣೆಯಲ್ಲೇ ಮಹಾರಾಷ್ಟ್ರದ ಜನ ʻದೇಶದ್ರೋಹಿʼ ಯಾರೆಂದು ನಿರ್ಧರಿಸಿದ್ದಾರೆ ಎಂದು ಫಡ್ನವಿಸ್ ಹೇಳಿದ್ದಾರೆ.

    2024ರ ವಿಧಾನಸಭಾ ಚುನಾವಣೆಯಲ್ಲಿ ಜನ ನಮಗೆ ಮತ ನೀಡಿ ಬೆಂಬಲಿಸಿದ್ದಾರೆ, ದೇಶದ್ರೋಹಿಗಳನ್ನು ಮನೆಗೆ ಕಳುಹಿಸಿದ್ದಾರೆ. ಬಾಳಾಸಾಹೇಬ್ ಠಾಕ್ರೆಯವರ ಜನಾದೇಶ ಮತ್ತು ಸಿದ್ಧಾಂತವನ್ನು ಅವಮಾನಿಸಿದವರಿಗೆ ಜನರು ತಮ್ಮ ಸ್ಥಾನವನ್ನು ತೋರಿಸಿದ್ದಾರೆ. ಹಾಸ್ಯವನ್ನು ಸೃಷ್ಟಿಸಬಹುದು, ಆದರೆ ಅವಹೇಳನಕಾರಿ ಹೇಳಿಕೆಗಳನ್ನು ನೀಡುವುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಫಡ್ನವಿಸ್‌ ಆಕ್ರೋಶ ಹೊರಹಾಕಿದ್ದಾರೆ.

    ಕುನಾಲ್‌ ಕಾಮ್ರಾ ಹೇಳಿದ್ದೇನು?
    ಮುಂಬೈನ ಹ್ಯಾಬಿಟಾಟ್ ಕಾಮಿಡಿ ಕ್ಲಬ್‌ನಲ್ಲಿ ಕಾರ್ಯಕ್ರಮ ನೀಡುವಾಗ ಮಹಾರಾಷ್ಟ್ರದ ರಾಜಕೀಯ ವಿಭಜನೆಯ ಬಗ್ಗೆ ಮಾತನಾಡಿದ್ದರು. ಏಕನಾಥ್‌ ಶಿಂಧೆ – ಉದ್ದವ್ ಠಾಕ್ರೆ ನಡುವಿನ ರಾಜಕೀಯ ಉಲ್ಲೇಖಿಸುತ್ತಾ ಮೊದಲು ಶಿವಸೇನಾ ಬಿಜೆಪಿಯಿಂದ ಹೊರಬಂದಿತು, ನಂತರ ಶಿವಸೇನಾ ಶಿವಸೇನಾದಿಂದಲೇ ಹೊರಬಂದಿತು. ಎನ್‌ಸಿಪಿಯಿಂದ ಎನ್‌ಸಿಪಿ ಹೊರಬಂದಿತು. ಇವರೆಲ್ಲಾ ಒಂದು ಮತದಾರನಿಗೆ 9 ಬಟನ್‌ಗಳನ್ನು ನೀಡಿದ್ದಾರೆ. ಥಾಣೆಯು ರಾಜಕೀಯ ಭದ್ರಕೋಟೆಯಾಗಿದ್ದು, ಗದ್ದಾರ್‌ (ದ್ರೋಹಿ) ಆಳ್ವಿಕೆ ಎಂದು ಪರೋಕ್ಷವಾಗಿ ಹಾಡು ಹೇಳುತ್ತಾ ಟೀಕಿಸಿದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.