Tag: mumbai teen girl

  • ಬಾಲಕಿ ಮೇಲೆ ಸ್ನೇಹಿತ ಸೇರಿ 6 ಮಂದಿಯಿಂದ ಸಾಮೂಹಿಕ ಅತ್ಯಾಚಾರ

    ಮುಂಬೈ: 16 ವರ್ಷದ ಬಾಲಕಿ ಮೇಲೆ (Teen Girl) ಮೂವರು ಅಪ್ರಾಪ್ತರು ಸೇರಿದಂತೆ ಆರು ಮಂದಿ ಸಾಮೂಹಿಕ ಅತ್ಯಾಚಾರ (Gang Rape) ಎಸಗಿರುವ ಘಟನೆ ಸೆಂಟ್ರಲ್‌ ಮುಂಬೈನ್‌ (Mumbai) ಲೋವರ್‌ ಪರೇಲ್‌ ಪ್ರದೇಶದಲ್ಲಿ ನಡೆದಿದೆ.

    ಶುಕ್ರವಾರ ರಾತ್ರಿ ಚಾಲ್‌ನಲ್ಲಿ ಘಟನೆ ನಡೆದಿದ್ದು, ಅಪ್ರಾಪ್ತರು ಹಾಗೂ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಮೂವರು ಅಪ್ರಾಪ್ತರನ್ನು ಡೋಂಗ್ರಿಯಲ್ಲಿರುವ ಬಾಲ ಮಂದಿರಕ್ಕೆ ರವಾನಿಸಲಾಗಿದೆ. ಇದನ್ನೂ ಓದಿ: ಇನ್ಮುಂದೆ ಕೇರಳ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ 60 ದಿನ ಹೆರಿಗೆ ರಜೆ

    ಆರೋಪಿಗಳಲ್ಲಿ ಒಬ್ಬ ಸಂತ್ರಸ್ತೆಯ ಸ್ನೇಹಿತನಾಗಿದ್ದು, ಇಬ್ಬರೂ ಇನ್ನೊಬ್ಬ ಸ್ನೇಹಿತನ ಹುಟ್ಟುಹಬ್ಬವನ್ನು ಆಚರಿಸಲು ಚಾಲ್‌ಗೆ ಹೋಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

    ಉಳಿದ ಐವರು ಆರೋಪಿಗಳೂ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡಿದ್ದರು. ನಂತರ ರಾತ್ರಿ ವೇಳೆ ಚಾಲ್ ನಿವಾಸಿಗಳು ಬಾಲಕಿಯ ಅಳಲು ಕೇಳಿ ಸ್ಥಳೀಯ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದ ಐವರ ಬಂಧನ

    ಬಾಲಕಿ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಭಾರತೀಯ ದಂಡ ಸಂಹಿತೆ ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅಧಿಕಾರಿ ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]