Tag: Municipal Authorities

  • ಮಾನವೀಯತೆ ಮರೆತ ಅಥಣಿ ಪುರಸಭೆ ಅಧಿಕಾರಿಗಳು

    ಮಾನವೀಯತೆ ಮರೆತ ಅಥಣಿ ಪುರಸಭೆ ಅಧಿಕಾರಿಗಳು

    ಬೆಳಗಾವಿ: ನಗರದ ಅಥಣಿ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳ ನಿರ್ಲಕ್ಷ್ಯದಿಂದ ಜೀವದ ಹಂಗು ತೊರೆದು ಚರಂಡಿಗಳಿಗೆ ಇಳಿದು ಪೌರ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದಾರೆ.

    ಯಾವುದೇ ಸೇಫ್ಟಿ ಕಿಟ್ ಇಲ್ಲದೆ ಪೌರ ಕಾರ್ಮಿಕರು ಚರಂಡಿಗಳಲ್ಲಿ ಇಳಿದು ಕಾರ್ಯನಿರ್ವಹಿಸುತ್ತಿದ್ದಾರೆ. ಈಗಾಗಲೇ ರಾಜ್ಯಾದ್ಯಂತ ಹಲವು ಚರಂಡಿಗಳಲ್ಲಿ ಸಿಬ್ಬಂದಿ ಸಾವನ್ನಪ್ಪಿದ್ದರೂ ಅಥಣಿ ಪಟ್ಟಣದಲ್ಲಿ ಪುರಸಭೆ ಅಧಿಕಾರಿಗಳ ಎಚ್ಚೆತ್ತುಕೊಂಡಿಲ್ಲ. ಅಧಿಕಾರಿಗಳ ಅಚಾತುರ್ಯದಿಂದ ಜೀವದ ಹಂಗು ತೊರೆದು ಪೌರ ಕಾರ್ಮಿಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಹರ್ಷನ ಹತ್ಯೆ- ಡೀಟೈಲ್ಸ್ ಎಲ್ಲ ಹೇಳೋಕೆ ಆಗಲ್ಲ: ಆರಗ ಜ್ಞಾನೇಂದ್ರ

    ನೌಕರಿ ಖಾಯಂ ಆಸೆಗೆ ಬಿದ್ದು ಜೀವದ ಹಂಗು ತೊರೆದು ಅಧಿಕಾರಿಗಳ ದಿವ್ಯ ನಿರ್ಲಕ್ಷ್ಯದಿಂದ ಹ್ಯಾಂಡ್ ಗ್ಲೌಜ್, ಗಮ್ ಶೂಜ್, ಮಾಸ್ಕ್ ಏನೂ ಇಲ್ಲದೆ ಚರಂಡಿಯ ಆಳಕ್ಕೆ ಇಳಿದು ಪುರಸಭೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು, ಜನಾಕ್ರೋಶಕ್ಕೆ ಕಾರಣವಾಗಿದೆ. ಮಾನವೀಯತೆ ಮರೆತ ಪುರಸಭೆ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಸಾರ್ವಜನಿಕರು ಒತ್ತಾಯಿಸಿದ್ದಾರೆ.

  • ಮುಂಬೈನಲ್ಲಿ ಮಾಸ್ಕ್ ಕಡ್ಡಾಯ – ಧರಿಸದೇ ಹೊರಬಂದರೆ ಅರೆಸ್ಟ್

    ಮುಂಬೈನಲ್ಲಿ ಮಾಸ್ಕ್ ಕಡ್ಡಾಯ – ಧರಿಸದೇ ಹೊರಬಂದರೆ ಅರೆಸ್ಟ್

    – ಮನೆಯಲ್ಲಿ ತಯಾರಿಸಿದ ಮಾಸ್ಕ್ ಧರಿಸಬಹುದು
    – ಹೆಚ್ಚಾಗುತ್ತಿರುವ ಕೊರೊನಾ ತಡೆಗಟ್ಟಲು ಕ್ರಮ

    ಮುಂಬೈ: ಭಾರತದಲ್ಲಿ ಕೊರೊನಾ ವೈರಸ್ ನ ಹಾಟ್‍ಸ್ಪಾಟ್ ಆಗಿರುವ ಮುಂಬೈನಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ. ಒಂದೇ ವೇಳೆ ಮಾಸ್ಕ್ ಧರಿಸದೇ ಹೊರಬಂದರೆ ಅಂತವರನ್ನು ಅರೆಸ್ಟ್ ಮಾಡಲಾಗುವುದು ಎಂದು ಮಹಾನಗರ ಪಾಲಿಕೆ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.

    ಜನರು ಧರಿಸುವ ಮಾಸ್ಕ್ ಗಳು ಕೆಮಿಕಲ್ ಇರುವ ಉತ್ತಮ ಗುಣಮಟ್ಟದ್ದು ಆಗಿರಬಹುದು ಅಥವಾ ಮನೆಯಲ್ಲಿ ತಯಾರಿಸಿದ ತೊಳೆಯಬಹುದಾದ ಮಾಸ್ಕ್ ಗಳನ್ನಾದರು ಧರಿಸಬಹುದು. ಆದರೆ ಎಲ್ಲಾ ಸಾರ್ವಜನಿಕ ಸ್ಥಳಗಳು, ಕಚೇರಿಗಳು, ಸಭೆಗಳು ಮತ್ತು ವಾಹನಗಳ ಒಳಗೂ ಮಾಸ್ಕ್ ಗಳನ್ನು ಧರಿಸುವುದು ಕಡ್ಡಾಯವಾಗಿರುತ್ತದೆ ಎಂದು ಮುಂಬೈ ನಗರ ಪಾಲಿಕೆ ಆಯುಕ್ತ ಪ್ರವೀಣ್ ಪರದೇಶಿ ಆದೇಶಿಸಿದ್ದಾರೆ.

    ಈ ವಿಚಾರವಾಗಿ ಇಂದು ಮಾತನಾಡಿದ್ದ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು, ಜನರು ದಿನಬಳಕೆ ವಸ್ತುಗಳನ್ನು ಕೊಂಡುಕೊಳ್ಳಲು ತಮ್ಮ ಮನೆಗಳಿಂದ ಹೊರಗೆ ಹೋಗುವಾಗ ಮಾಸ್ಕ್ ಬಳಸಬೇಕೆಂದು ಒತ್ತಾಯಿಸಿದ್ದರು.

    ಈಗಾಗಲೇ ಚಂಡೀಗಢ, ನಾಗಾಲ್ಯಾಂಡ್ ಮತ್ತು ಒಡಿಶಾದಲ್ಲಿ ಅಲ್ಲಿನ ಅಧಿಕಾರಿಗಳು ಮಾಸ್ಕ್ ಧರಿಸುವುದನ್ನು ಕಡ್ಡಾಯ ಎಂದು ಆದೇಶ ಮಾಡಿದ್ದಾರೆ.

    2 ಕೋಟಿಗಿಂತ ಹೆಚ್ಚು ಜನಸಂಖ್ಯೆ ಹೊಂದಿರುವ ಮುಂಬೈ ಮತ್ತು ಅದರ ಉಪನಗರಗಳಲ್ಲಿ ಇಲ್ಲಿಯವರೆಗೆ 782 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ. ಇದರ ಜೊತೆಗೆ 50 ಜನರು ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂದು ಇಂದಿನ ಆರೋಗ್ಯ ಬುಲೆಟಿನ್ ನಲ್ಲಿ ವರದಿಯಾಗಿದೆ. ಈ ಅಂಕಿಅಂಶಗಳ ಮೂಲಕ ಮಹಾರಾಷ್ಟ್ರ ದೇಶದಲ್ಲೇ ಅತಿ ಹೆಚ್ಚು ಕೊರೊನಾ ಪ್ರಕರಣ ಹೊಂದಿರುವ ರಾಜ್ಯ ಎಂದು ಗುರುತಿಸಿಕೊಂಡಿದೆ.

    ಮಹಾರಾಷ್ಟ್ರದಲ್ಲಿ ಇನ್ನೊಂದು ಅಘಾತಕಾರಿ ಸಂಗತಿ ಎಂದರೆ, ಇಂದು ಕೂಡ ಹೆಚ್ಚು ಜನರು ವಾಸಿಸುವ ಧಾರವಿ ಸ್ಲಂನಲ್ಲಿ ಎರಡು ಹೊಸ ಕೊರೊನಾ ಪ್ರಕರಣಗಳು ಕಂಡು ಬಂದಿವೆ. ಈ ಮೂಲಕ ಏಷ್ಯಾದ ಅತೀ ದೊಡ್ಡ ಸ್ಲಂ ಆಗಿರುವ ಧಾರವಿಯಲ್ಲಿ ಸುಮಾರು 9 ಕೊರೊನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.