Tag: Municipal Corporation

  • ವಾಲ್ಮೀಕಿ ಜಯಂತಿ ಬ್ಯಾನರ್ ಕಿತ್ತ ಬಳ್ಳಾರಿ ಪಾಲಿಕೆ – ರಸ್ತೆ ತಡೆ ನಡೆಸಿ ಪ್ರತಿಭಟನೆ

    ವಾಲ್ಮೀಕಿ ಜಯಂತಿ ಬ್ಯಾನರ್ ಕಿತ್ತ ಬಳ್ಳಾರಿ ಪಾಲಿಕೆ – ರಸ್ತೆ ತಡೆ ನಡೆಸಿ ಪ್ರತಿಭಟನೆ

    ಬಳ್ಳಾರಿ: ವಾಲ್ಮೀಕಿ ಜಯಂತಿ ನಿಮಿತ್ತ ನಗರದಲ್ಲಿ ಹಾಕಲಾಗಿದ್ದ ಬ್ಯಾನರ್ (Banner) ತೆರವು ಮಾಡಿದ್ದನ್ನು ಖಂಡಿಸಿ ವಾಲ್ಮೀಕಿ ಸಮುದಾಯದ (Valmiki Community) ಸದಸ್ಯರು ನಗರದ ಸಂಗಮ್ ಸರ್ಕಲ್‌ನಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದರು.

    ವಾಲ್ಮೀಕಿ ಜಯಂತಿ ಹಿನ್ನೆಲೆ ಮಹಾನಗರ ಪಾಲಿಕೆಯ (Ballari Municipal Corporation) ಪರವಾನಗಿ ಪಡೆದು ನಗರದ ಹಲವೆಡೆ ಬ್ಯಾನರ್ ಅಳವಡಿಕೆ ಮಾಡಲಾಗಿತ್ತು. ಆದರೆ ಬೆಳಗ್ಗೆ ಏಕಾಏಕಿ ನಗರದ 38 ಕಡೆಗಳಲ್ಲಿ ಹಾಕಲಾಗಿದ್ದ ಬ್ಯಾನರ್‌ಗಳನ್ನು ಕಿತ್ತು ಹಾಕಲಾಗಿದೆ ಎಂದು ಅಧಿಕಾರಿಗಳ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ:  ಜಾತಿಗಣತಿಯಲ್ಲಿ ತಾಂತ್ರಿಕ ಸಮಸ್ಯೆ – ಹಿಂದೂ ವ್ಯಕ್ತಿಯ ಆಧಾರ್‌ ನಂಬರ್‌ ಹಾಕಿದ್ರೆ ಮುಸ್ಲಿಂ ಹೆಸರು!

     

    ಅನುಮತಿ ಪಡೆದು ಬ್ಯಾನರ್ ಅವಳಡಿಕೆ ಮಾಡಲಾಗಿದ್ದರೂ ಅಧಿಕಾರಿಗಳು ಬ್ಯಾನರ್ ತೆರವು ಮಾಡಿದ್ದಾರೆ. ಅಧಿಕಾರಿಗಳು ಶಾಸಕ ಭರತ್ ರೆಡ್ಡಿ ಸೂಚನೆ ಮೇರೆಗೆ ಅಧಿಕಾರಿಗಳು ಬ್ಯಾನರ್‌ಗಳನ್ನ ತೆರವು ಮಾಡಿದ್ದಾರೆ ಎಂದು ಆರೋಪಿಸಿದ ಮುಖಂಡರು, ಬ್ಯಾನರ್ ತೆಗೆದ ಅಧಿಕಾರಿಗಳನ್ನ ಕೂಡಲೇ ಸಸ್ಪಂಡ್‌ ಮಾಡುವಂತೆ ಆಗ್ರಹಿಸಿದರು.

    ಘಟನಾ ಸ್ಥಳಕ್ಕೆ ಮಹಾನಗರ ಪಾಲಿಕೆ‌ ಆಯುಕ್ತ ಮಂಜುನಾಥ್ , ಎಸ್‌ಪಿ  ಶೋಭಾ‌‌ರಾಣಿ ದೌಡಾಯಿಸಿ, ಪರಿಸ್ಥಿತಿ ತಿಳಿಗೊಳಿಸುವ ಪ್ರಯತ್ನ ಮಾಡಿದರು. ಅಧಿಕಾರಿಗಳ ಸಮ್ಮುಖದಲ್ಲೇ ಸರ್ಕಾರಿ ವಾಲ್ಮೀಕಿ ಜಯಂತಿ ಬಹಿಷ್ಕರಿಸಿ , ಪ್ರತ್ಯೇಕ ಜಯಂತಿ ಮಾಡಲು ಪ್ರತಿಭಟನಕಾರರು ನಿರ್ಧರಿಸಿದರು.

  • ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

    ಗ್ರೇಟರ್ ಬೆಂಗಳೂರು | 5 ನಗರ ಪಾಲಿಕೆ ರಚಿಸಿ ರಾಜ್ಯ ಸರ್ಕಾರ ಆದೇಶ

    ಬೆಂಗಳೂರು: ಗ್ರೇಟರ್‌ ಬೆಂಗಳೂರು (Greater Bengaluru) ಪ್ರಾಧಿಕಾರದ ಅಡಿಯಲ್ಲಿ 5 ನಗರ ಪಾಲಿಕೆಗಳನ್ನ ರಚನೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದೆ. ಐದು ನಗರ ಪಾಲಿಕೆಗಳ ಗಡಿಯನ್ನು ಗುರುತಿಸಿ ಕರ್ನಾಟಕ ರಾಜ್ಯ ಪತ್ರದಲ್ಲಿ ಸರ್ಕಾರ ಆದೇಶ ಹೊರಡಿಸಿದೆ. ಜೊತೆಗೆ ಬಿಬಿಎಂಪಿ ಕೇಂದ್ರ ಕಚೇರಿಯನ್ನು ಗ್ರೇಟರ್‌ ಬೆಂಗಳೂರು ಪ್ರಾಧಿಕಾರ (GBA) ಕಚೇರಿಯನ್ನಾಗಿ ಮಾರ್ಪಾಡು ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿದೆ. ಇದನ್ನೂ ಓದಿ: ತರಾತುರಿಯಲ್ಲಿ ದೆಹಲಿಗೆ ತೆರಳಿದ ಡಿಕೆಶಿ – ಸಿಎಂ ಮುಜುಗರದ ಹೇಳಿಕೆಗಳಿಗೆ ಬೇಸತ್ರಾ ಡಿಸಿಎಂ?

    5 ನಗರ ಪಾಲಿಕೆಗಳ ಹೆಸರು
    1. ಬೆಂಗಳೂರು ಪಶ್ಚಿಮ ನಗರ ಪಾಲಿಕೆ
    2. ಬೆಂಗಳೂರು ದಕ್ಷಿಣ ನಗರ ಪಾಲಿಕೆ
    3. ಬೆಂಗಳೂರು ಉತ್ತರ ನಗರ ಪಾಲಿಕೆ
    4. ಬೆಂಗಳೂರು ಪೂರ್ವ ನಗರ ಪಾಲಿಕೆ
    5. ಬೆಂಗಳೂರು ಕೇಂದ್ರ ನಗರ ಪಾಲಿಕೆ

    ಆಗಸ್ಟ್‌ 1 ರಿಂದ ಆರಂಭ ಆಗುವ ಮುಂಗಾರು ಅಧಿವೇಶನದಲ್ಲಿ ಈ ಕುರಿತು ಚರ್ಚೆ ಮಾಡಿ, ಬಿಲ್‌ ಪಾಸ್‌ ಮಾಡಲು ಸರ್ಕಾರ ಸಿದ್ಧತೆ ನಡೆಸಿದೆ. ಅಲ್ಲದೇ ಪಾಲಿಕೆಗಳ ಬಗ್ಗೆ ಆಕ್ಷೇಪಣೆ ಇದ್ದರೆ, ಸಲಹೆ ನೀಡುವಂತೆ ಸಾರ್ವಜನಿಕರನ್ನು ಕೋರಿದೆ. ಇದನ್ನೂ ಓದಿ: 14 ವರ್ಷದ ಒಳಗಿನ ಹೆಣ್ಣು ಮಕ್ಕಳಿಗೆ ಹೆಚ್‌ಪಿವಿ ವ್ಯಾಕ್ಸಿನ್ – ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ

  • ಲೋಕಸಭಾ ಚುನಾವಣೆ ವೇಳೆ ಹಣ ದುರ್ಬಳಕೆ – ಹರಿಹರ ನಗರಸಭೆ ವ್ಯವಸ್ಥಾಪಕಿ ಸಸ್ಪೆಂಡ್

    ಲೋಕಸಭಾ ಚುನಾವಣೆ ವೇಳೆ ಹಣ ದುರ್ಬಳಕೆ – ಹರಿಹರ ನಗರಸಭೆ ವ್ಯವಸ್ಥಾಪಕಿ ಸಸ್ಪೆಂಡ್

    ದಾವಣಗೆರೆ: ಕಳೆದ ಲೋಕಸಭಾ ಚುನಾವಣೆ (Lok Sabha Elections) ವೇಳೆ ಹಣ ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ಹರಿಹರ ನಗರಸಭೆ ವ್ಯವಸ್ಥಾಪಕಿಯನ್ನು (Harihar Municipal Corporation) ಅಮಾನತುಗೊಳಿಸಲಾಗಿದೆ.

    ಹೆಚ್.ನಿರಂಜನಿ ಅಮಾನತಾದ ಅಧಿಕಾರಿಯಾಗಿದ್ದಾರೆ. ಇವರ ಮೇಲೆ ಕಳೆದ ಲೋಕಸಭಾ ಚುನಾವಣೆಯಲ್ಲಿ ಹಣ ದುರುಪಯೋಗ ಮಾಡಿರುವ ಆರೋಪವಿದೆ. ಅಲ್ಲದೇ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗದೇ ಇರುವುದು, ಸಾರ್ವಜನಿಕರ ಕೆಲಸ ಮಾಡದಿರುವುದು ಹಾಗೂ ಇನ್ನಿತರೆ ಕರ್ತವ್ಯ ಲೋಪ ಹಿನ್ನೆಲೆ ಜಿಲ್ಲಾಧಿಕಾರಿ ಜಿ.ಎಂ ಗಂಗಾಧರಸ್ವಾಮಿಯವರು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಅಬ್ದುಲ್ ರಹೀಂ ಹತ್ಯೆ| ಇಬ್ಬರು ಪರಿಚಯಸ್ಥರು ಸೇರಿ 15 ಮಂದಿ ವಿರುದ್ಧ ಎಫ್‌ಐಆರ್‌

    ಹೊನ್ನಾಳಿಯ ಪುರಸಭೆಯ ಪ್ರಭಾರಿ ಮುಖ್ಯಾಧಿಕಾರಿಯಾಗಿದ್ದ ಅವಧಿಯಲ್ಲಿ ನಡೆದ ಲೋಕಸಭಾ ಚುನಾವಣೆಯ ವೇಳೆ ಹಣ ದುರುಪಯೋಗವಾಗಿದೆ. ಹರಿಹರ ನಗರಸಭೆಯ ವ್ಯವಸ್ಥಾಪಕರಾಗಿ ವರ್ಗಾವಣೆಗೊಂಡ ಅವಧಿಯಲ್ಲಿಯೂ ಪ್ರಭಾರಿ ಕಂದಾಯ ಅಧಿಕಾರಿಯಾಗಿ ಬಿ ಖಾತಾ ವಿತರಣೆಯಲ್ಲಿ, ದಾಖಲೆ ಕೊಠಡಿ ನಿರ್ವಹಣೆಯಲ್ಲಿನ ಕರ್ತವ್ಯ ಲೋಪದ ಮೇಲೆ ಅಮಾನತುಗೊಳಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿಗಳು ತಮ್ಮ ಆದೇಶದಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ರಹೀಂ ಹತ್ಯೆ| ಮಂಗಳೂರು-ಬಂಟ್ವಾಳ ರಸ್ತೆಯಲ್ಲಿರುವ ನೂರಾರು ಅಂಗಡಿಗಳು ಬಂದ್

  • ಕಲಬುರಗಿ | ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ಬೈರತಿ ಸುರೇಶ್‌ಗೆ ಮನವಿ

    ಕಲಬುರಗಿ | ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚುವರಿ ಅನುದಾನ ನೀಡುವಂತೆ ಬೈರತಿ ಸುರೇಶ್‌ಗೆ ಮನವಿ

    ಕಲಬುರಗಿ: ನಗರಕ್ಕೆ ಆಗಮಿಸಿದ ನಗರಾಭಿವೃದ್ಧಿ ಮತ್ತು ಪಟ್ಟಣ ಯೋಜನೆ ಸಚಿವರಾದ ಬೈರತಿ ಸುರೇಶ್‌ (Byrathi suresh) ಅವರನ್ನು ಕಲಬುರಗಿ ಮಹಾನಗರ ಪಾಲಿಕೆಯ (Kalaburagi Municipal Corporation) ಮೇಯರ್‌, ಉಪಮೇಯರ್‌ ಸೇರಿದಂತೆ ಹಾಗೂ ಸ್ಥಾಯಿ ಸಮಿತಿ ಸದಸ್ಯರು ಪುಷ್ಫಗುಚ್ಛ ನೀಡಿ ಸ್ವಾಗತಿಸಿದರು.

    ಮೇಯರ್‌ ಯಲ್ಲಪ್ಪ ಎಸ್.ನಾಯಕೋಡಿ, ಮಾಜಿ ಮೇಯರ್‌ ಸಯ್ಯದ್ ಅಹ್ಮದ್‌, ಸ್ಥಾಯಿ ಸಮಿತಿ ಅಧ್ಯಕ್ಷರಾದ ಪರವೀನ್ ಬೇಗಂ, ಶ. ಸಚಿನ ಶಿರವಾಳ, ಮುಹಮ್ಮದ್ ಅಜೀಮೊದ್ದಿನ್, ಇರ್ಫಾನಾ ಪರವೀನ್, ಲತಾ ರವೀಂದ್ರ ಕುಮಾರ, ಪಾಲಿಕೆಯ‌ ಸದಸ್ಯರು ಸಚಿವರನ್ನು ಸ್ವಾಗತಿಸಿ, ಮನವಿ ಸಲ್ಲಿಸಿದರು. ಇದನ್ನೂ ಓದಿ: ದೂರು ಕೊಡಲು ಬಂದ ಮಹಿಳೆಯೊಂದಿಗೆ ಅಸಭ್ಯ ವರ್ತನೆ – ಮಧುಗಿರಿ ಡಿವೈಎಸ್ಪಿ ಅಮಾನತು, ಬಂಧನ

    ಕಲಬುರಗಿ ನಗರದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಅನುದಾನದ ಬೇಡಿಕೆ ಇದ್ದು, ರಸ್ತೆಗಳು ಮತ್ತು ಒಳಚರಂಡಿಗಳಿಗೆ 70 ಕೋಟಿ ರೂ. ಅನುದಾನದ ಅಗತ್ಯವಿದೆ. ಅಲ್ಲದೇ ಕಲಬುರಗಿ ನಗರದ ಹೊರವಲಯದಲ್ಲಿ 4 ದಿಕ್ಕಿನಲ್ಲಿ ಘನತ್ಯಾಜ್ಯ ವಸ್ತು ನಿರ್ವಹಣೆ ಸಲುವಾಗಿ ಭೂಮಿ ಖರೀದಿಸುವುದಕ್ಕಾಗಿ 100 ಕೋಟಿ ರೂ., ಮಹಾನಗರ ಪಾಲಿಕೆಯ ಸಭಾಭವನ ಕಟ್ಟಡಕ್ಕಾಗಿ 20 ಕೋಟಿ ರೂ., ರಸ್ತೆ ಅಗಲೀಕರಣಕ್ಕಾಗಿ 20 ಕೋಟಿ ರೂ., ಸರಡಗಿ ನಾಲಾ ಡೈವರ್ಶನ ಕಾಮಗಾರಿಗಾಗಿ 10 ಕೋಟಿ ರೂ., ನೀರು ಸರಬರಾಜು ಯೋಜನೆಗಾಗಿ 190.4 ಕೋಟಿ ರೂ., ಒಳಚರಂಡಿ ವ್ಯವಸ್ಥೆಗಾಗಿ 350 ಕೋಟಿ ರೂ. ಅನುದಾನ, ಉದ್ಯಾನವನ ಅಭಿವೃದ್ಧಿಗಾಗಿ 100 ಕೋಟಿ ರೂ. ಅನುದಾನವನ್ನು ಕಲಬುರಗಿ ಮಹಾನಗರ ಪಾಲಿಕೆಗೆ ಬಿಡುಗಡೆ ಮಾಡುವಂತೆ ಕೋರಿ ಪ್ರಸ್ತಾವನೆ ಸಲ್ಲಿಸಲಾಯಿತು.

    ಅಲ್ಲದೇ ಕಲಬುರಗಿ ಸ್ಥಳೀಯ ಪ್ರದೇಶದಲ್ಲಿ ಮಂಡಲ/ಗ್ರಾಮ ಪಂಚಾಯಿತಿಯಿಂದ ಹಸ್ತಾಂತರಗೊಂಡ ಮತ್ತು ಅನುಮೋದನೆಗೊಂಡ ವಿನ್ಯಾಸಗಳಲ್ಲಿಯ ನಿವೇಶನಗಳ ಕರವಸೂಲಿ, ಕಟ್ಟಡ ಪರವಾನಿಗೆ ಹಾಗೂ ಇನ್ನಿತರ ಎಲ್ಲಾ ಪ್ರಕ್ರಿಯೆಗಳನ್ನು ಪ್ರಾರಂಭಿಸಲು ಸೂಕ್ತ ಮಾರ್ಗದರ್ಶನ ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಅನುಮತಿ ನೀಡುವಂತೆ ಕೋರಲಾಯಿತು.

    ಕಲಬುರಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಟ್ಟಡ ಪರವಾನಿಗೆ ನೀಡಲು ಪ್ರಸ್ತುತ ಇರುವ ವಲಯ ನಿಯಮಾವಳಿಗಳನ್ನು ಪರಿಷ್ಕರಿಸಿ ಕಲಬುರಗಿ ನಗರದ ಬೆಳವಣಿಗೆಗಾಗಿ ಕಟ್ಟಡದ ಎತ್ತರ 15 ಮೀಟರ್ ವರೆಗೆ ಹಾಗೂ ಎಫ್‌ಎಆರ್ 4 (ಗರಿಷ್ಠ) ವರೆಗೆ ಹೆಚ್ಚಿಸುವಂತೆ ಕೋರಿ ಮನವಿ ಪತ್ರ ಸಲ್ಲಿಸಲಾಯಿತು. ಇದನ್ನೂ ಓದಿ: ಮಂಗಳೂರಿನಲ್ಲಿ NIA ಘಟಕ ಸ್ಥಾಪಿಸಿ – ದ.ಕ. ಸಮಗ್ರ ಅಭಿವೃದ್ಧಿಗೆ ಶಾಗೆ ಚೌಟ ಮನವಿ

  • ಮಹಾನಗರ ಪಾಲಿಕೆ ಸದಸ್ಯೆಯ ಪತಿ ಹತ್ಯೆ ಪ್ರಕರಣ – ನಾಪತ್ತೆಯಾದ ಐವರ ವಿರುದ್ಧ ಕೇಸ್

    ಮಹಾನಗರ ಪಾಲಿಕೆ ಸದಸ್ಯೆಯ ಪತಿ ಹತ್ಯೆ ಪ್ರಕರಣ – ನಾಪತ್ತೆಯಾದ ಐವರ ವಿರುದ್ಧ ಕೇಸ್

    ವಿಜಯಪುರ: ಮಹಾನಗರ ಪಾಲಿಕೆ (Municipal Corporation) ಸದಸ್ಯೆಯ ಪತಿ, ರೌಡಿಶೀಟರ್ ಹೈದರ್ ಅಲಿ ನದಾಫ್ ಹತ್ಯೆ (Murder) ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ವಿರುದ್ಧ ಜಲನಗರ‌ (Jalnagar) ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

    ನಗರದ ಶೇಖ್ ಅಹ್ಮದ್ ಸುನೇನ್‍ಸಾಬ್ ಮೋದಿ, ಎಸ್.ಎಸ್ ಖಾದ್ರಿ, ತನ್ವೀರ್‌ಪಿರ್, ಇಕ್ಬಾಲ್‍ಪೀರ್ ಪೀರ್‌ಜಾದ್, ವಾಜೀದ್‍ಪೀರ್ ಹಾಗೂ ಶಾನ್‍ವಾಜ್ ದಫೇದಾರ್ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು. ತನಿಖೆಯ ನಂತರ ಕೊಲೆಯ ನಿಖರ ಕಾರಣ ತಿಳಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ಶನಿವಾರ ಹಾಡ ಹಗಲೇ ದುಷ್ಕರ್ಮಿಗಳು ವಿಜಯಪುರ ನಗರದ ಚಾಂದಪುರ (Chandapura) ಕಾಲೋನಿಯಲ್ಲಿ ಗುಂಡು ಹಾರಿಸಿ ಹೈದರ್ ಅಲಿ ನದಾಫ್‍ನನ್ನು ಹತ್ಯೆಗೈದು ಪರಾರಿಯಾಗಿದ್ದರು. ಆರೋಪಿಗಳು ನದಾಫ್ ಮೇಲೆ ಆರು ಸುತ್ತು ಗುಂಡು ಹಾರಿಸಿದ್ದರು. ಪ್ರಕರಣ ನಡೆದ ಸ್ಥಳಕ್ಕೆ ಎಸ್ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ವೇಳೆ ಆರೋಪಿಗಳ ಬಂಧನಕ್ಕೆ ಸೂಕ್ತ ಕ್ರಮಕೈಗೊಳ್ಳುವುದಾಗಿ ಅವರು ತಿಳಿಸಿದ್ದರು.

    ಮೃತನ ಪತ್ನಿ ನಿಶಾತ್ ಹೈದರ್ ನದಾಫ್ ಅವರು ವಿಜಯಪುರದ (Vijayapura) ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆಯಾಗಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಬೆಂಬಲಿಗನ ಮನೆ ಮೇಲೆ ಐಟಿ ದಾಳಿ

  • ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ಹಾಡಹಗಲೇ ಗುಂಡೇಟು – ಮಹಾನಗರ ಪಾಲಿಕೆಯ ಸದಸ್ಯೆಯ ಪತಿಯ ಬರ್ಬರ ಹತ್ಯೆ

    ವಿಜಯಪುರ: ಮಹಾನಗರಪಾಲಿಕೆ (Municipal Corporation) ಸದಸ್ಯೆಯ ಪತಿಯ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿ ಹತ್ಯೆಗೈದ ಘಟನೆ ವಿಜಯಪುರದಲ್ಲಿ (Vijayapura) ಶನಿವಾರ ನಡೆದಿದೆ.

    ವಿಜಯಪುರದ ವಾರ್ಡ್ ನಂಬರ್ 19ರ ಪಾಲಿಕೆ ಸದಸ್ಯೆ ನಿಶಾತ್ ಹೈದರ್ ನದಾಫ್ ಅವರ ಪತಿ ರೌಡಿಶೀಟರ್ ಹೈದರ್ ನದಾಫ್ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ವ್ಯಕ್ತಿ. ನಗರದ ಚಾಂದಪುರ (Chandapur) ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ದುಷ್ಕರ್ಮಿಗಳು ನದಾಫ್ ಮೇಲೆ ಆರು ಸುತ್ತು ಗುಂಡು ಹಾರಿಸಿದ್ದು, ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಾಡಹಗಲೇ ಈ ಶೂಟೌಟ್ ನಡೆದಿದ್ದು ಜನರನ್ನು ಬೆಚ್ಚಿ ಬೀಳಿಸಿದೆ. ಇದನ್ನೂ ಓದಿ: ಸೇನಾ ವಾಹನದ ಮೇಲೆ ದಾಳಿ – ಓರ್ವ ಉಗ್ರನ ಹತ್ಯೆ

    ಘಟನೆ ಜಲನಗರ (Jalnagar) ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸ್ಥಳಕ್ಕೆ ಎಸ್ಪಿ ಆನಂದಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಾರಿಯಾಗಿರುವ ದುಷ್ಕರ್ಮಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ಮೃತನ ಕುಟಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಜಮೀನು ರಸ್ತೆ ವಿವಾದ, ಎರಡು ಕುಟುಂಬಗಳ ಮಾರಾಮಾರಿ – ಕೊಲೆಯಲ್ಲಿ ಅಂತ್ಯ

  • ಕಲಬುರಗಿ ಪಾಲಿಕೆ ವಿಜೇತನ ಸದಸ್ಯತ್ವ ಅಸಿಂಧು

    ಕಲಬುರಗಿ ಪಾಲಿಕೆ ವಿಜೇತನ ಸದಸ್ಯತ್ವ ಅಸಿಂಧು

    ಕಲಬುರಗಿ: ಜಿಲ್ಲೆಯ ಮಹಾನಗರ ಪಾಲಿಕೆಯ(Municipal Corporation) ವಾರ್ಡ್‌ ನಂ. 36ರ ವಿಜೇತ ಅಭ್ಯರ್ಥಿ ಆಯ್ಕೆ ಅಸಿಂಧುವಾಗಿದೆ ಎಂದು ಕಲಬುರಗಿ ಮೂರನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯ ಆದೇಶ ಹೊರಡಿಸಿದೆ.

    ಪಾಲಿಕೆ ವಿಜೇತ ಅಭ್ಯರ್ಥಿ ಶಂಭುಲಿಂಗ ಬಳಬಟ್ಟಿ ಆಯ್ಕೆ ಅಸಿಂಧುಗೊಂಡಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿ, ಶಂಭುಲಿಂಗ ಬಳಬಟ್ಟಿ ಜಯಗಳಿಸಿದ್ದರು. ಸುಳ್ಳು ಅಫಿಡವಿಟ್ ಸಲ್ಲಿಸಿದ್ದರಿಂದ ಆಯ್ಕೆ ಅಸಿಂಧುವಾಗಿದೆ. ನಾಮಪತ್ರ ಸಲ್ಲಿಕೆ ಮಾಡುವ ಸಂದರ್ಭದಲ್ಲಿ ಆಸ್ತಿ, ವಿದ್ಯಾರ್ಹತೆ ಸೇರಿದಂತೆ ಅನೇಕ ವಿಷಯಗಳ ಬಗ್ಗೆ ಮಾಹಿತಿ ನೀಡಿರಲಿಲ್ಲ. ಇದನ್ನು ಪ್ರಶ್ನಿಸಿ ಬಿಜೆಪಿಯ(BJP) ಅಭ್ಯರ್ಥಿ ಸೂರಜ್ ತಿವಾರಿ ನ್ಯಾಯಾಲಯಕ್ಕೆ ಮೊರೆ ಹೋಗಿದ್ದರು. ಇದನ್ನೂ ಓದಿ:  ಚಿಕ್ಕಮಗಳೂರಿನಲ್ಲಿ ಲವ್ ಜಿಹಾದ್ ಕೇಸ್ – ಮಗಳ ಮದ್ವೆಗೆ ನನ್ನ ಸಂಪೂರ್ಣ ಒಪ್ಪಿಗೆಯಿದೆ ಎಂದ ತಾಯಿ

    ಇದೀಗ ನ್ಯಾಯಾಲಯ(Court) ತೀರ್ಪನ್ನು ನೀಡಿದ್ದು, ಶಂಭುಲಿಂಗ ಆಯ್ಕೆಯನ್ನು ಅಸಿಂಧು ಎಂದು ಘೋಷಿಸಿದೆ. ಚುನಾವಣೆ ನಡೆದು ಹಲವು ತಿಂಗಳು ಕಳೆದರೂ ಈವರೆಗೂ ಮೇಯರ್‌ ಆಯ್ಕೆ ಆಗಿಲ್ಲ. ಇದನ್ನೂ ಓದಿ: ಕೋಳಿವಾಡ ಸಮಿತಿಯಿಂದ್ಲೇ ಬಾಗ್ಮನೆ ಒತ್ತುವರಿ ಬಯಲು

    Live Tv
    [brid partner=56869869 player=32851 video=960834 autoplay=true]

  • ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ

    ಮನೆಗೆ ನೀರು ನುಗ್ಗಿ ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ – 9 ಲಕ್ಷ ಪರಿಹಾರಕ್ಕೆ ಹೈಕೋರ್ಟ್ ಸೂಚನೆ

    ನವದೆಹಲಿ: ಸರಿಯಾದ ಚರಂಡಿಗಳನ್ನು ನಿರ್ಮಿಸಿ, ಮಳೆ ನೀರು ನಿಲ್ಲದಂತೆ ನೋಡಿಕೊಳ್ಳುವುದು ಮುನ್ಸಿಪಲ್ ಕಾರ್ಪೊರೇಷನ್‌ನ ಕರ್ತವ್ಯ. ಮಳೆ ನೀರು ಮನೆಗೆ ನುಗ್ಗಿ, ನಷ್ಟವಾದರೆ ಅದಕ್ಕೆ ಕಾರ್ಪೊರೇಷನ್ ಹೊಣೆ ಎಂದು ದೆಹಲಿ ಹೈಕೋರ್ಟ್ ಹೇಳಿದೆ. 12 ವರ್ಷ ಹಳೆಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಆದೇಶ ನೀಡಿದ ಕೋರ್ಟ್, ಅಧಿಕಾರಿಗಳ ವಿರುದ್ಧ ಚಾಟಿ ಬೀಸಿ 9 ಲಕ್ಷ ರೂ. ಪರಿಹಾರ ನೀಡುವಂತೆ ಸೂಚಿಸಿದೆ.

    2010 ರಲ್ಲಿ ದೆಹಲಿಯಲ್ಲಿ ಸುರಿದ ಭಾರೀ ಮಳೆಯಿಂದ ಚರಂಡಿ ನೀರು ಮನೆಗೆ ನುಗ್ಗಿ ಅಪಾರ ನಷ್ಟವಾಗಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಅಧಿಕಾರಿಗಳ ಕರ್ತವ್ಯ ಲೋಪ ಪ್ರಶ್ನಿಸಿ ಲೀಲಾ ಮಾಥುರ್ ಅವರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

    ಪಶ್ಚಿಮ ದೆಹಲಿಯಲ್ಲಿ ತಮ್ಮ ಮನೆ ನಿರ್ಮಿಸಿದಾಗ ಅದು ರಸ್ತೆಯ ಮಟ್ಟದಲ್ಲಿತ್ತು. ದೆಹಲಿ ಮುನ್ಸಿಪಲ್ ಕಾರ್ಪೊರೇಷನ್ ಹಲವು ಬಾರಿ ರಸ್ತೆ ಪುನರ್‌ನಿರ್ಮಾಣದ ನಂತರ ರಸ್ತೆಯ ಮಟ್ಟವು ಏರಿ, ಮನೆ ತಗ್ಗು ಪ್ರದೇಶದಲ್ಲಿ ಉಳಿಯುವಂತೆ ಅಧಿಕಾರಿಗಳು ಮಾಡಿದ್ದಾರೆ. ಇದರಿಂದ ಮಾನ್ಸೂನ್ ಮಳೆಯ ವೇಳೆ ಮನೆಗೆ ನೀರು ನುಗ್ಗಿದೆ. ಸಮಸ್ಯೆಯನ್ನು ಪರಿಹರಿಸಲು ಹಲವು ಬಾರಿ ಮನವಿ ಮಾಡಿದರೂ ಅಧಿಕಾರಿಗಳು ಗಮನ ಹರಿಸಲಿಲ್ಲ ಎಂದು ಅವರು ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ. ಇದನ್ನೂ ಓದಿ: SC-ST ಗ್ರಾಹಕರಿಗೆ ಉಚಿತ ವಿದ್ಯುತ್‌ ಅನುಷ್ಠಾನಕ್ಕೆ ಹೊಸ ಆ್ಯಪ್‌

    ಇದಕ್ಕೆ ಪ್ರತಿವಾದ ಮಂಡಿಸಿದ ದೆಹಲಿ ಮುನ್ಸಿಪಲ್ ಕಾರ್ಪೊರೇಷನ್, ನೀರಿನ ಚರಂಡಿಗಳು ಮುಚ್ಚಿಹೋಗಿರುವುದರಿಂದ ಎಂಸಿಡಿಯಿಂದ ಏನನ್ನೂ ಮಾಡಲು ಸಾಧ್ಯವಿಲ್ಲ. ಹೀಗಾಗಿ ಕರ್ತವ್ಯ ನಿರ್ವಹಿಸುವಲ್ಲಿ ಶೋಚನೀಯವಾಗಿ ಸಂಸ್ಥೆ ವಿಫಲವಾಗಿದೆ. ಒಂದರ ಮೇಲೊಂದರಂತೆ ರಸ್ತೆಗಳನ್ನು ಹಾಕಿದ್ದು, ಇದು ರಸ್ತೆಗಳ ಎತ್ತರವನ್ನು ಹೆಚ್ಚಿಸಿದೆ. ಎಂಸಿಡಿಯು ಈ ಪ್ರದೇಶದಲ್ಲಿ ಮಳೆ ನೀರು ಹರಿದು ಹೋಗಲು ಸರಿಯಾದ ಮಳೆ ನೀರಿನ ಚರಂಡಿಗಳಿವೆ ಎಂದು ಖಚಿತಪಡಿಸಿಲ್ಲ ಎಂದು ಕೋರ್ಟ್ ಗಮನಕ್ಕೆ ತಂದಿದೆ.

    ಪ್ರಕರಣ ವಿಚಾರಣೆ ಬಳಿಕ ಆದೇಶ ನೀಡಿದ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ನೇತೃತ್ವದ ದ್ವಿ ಸದಸ್ಯ ಪೀಠ, ನಾಗರಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಖರ ಉದ್ದೇಶಕ್ಕಾಗಿ ರಚಿತವಾದ ಮುನ್ಸಿಪಲ್ ಕಾರ್ಪೊರೇಷನ್ ಜವಾಬ್ದಾರಿಯಿಂದ ನುಣುಚಿಕೊಳ್ಳುವಂತಿಲ್ಲ. ಎಂಸಿಡಿ ತನ್ನ ಕಾರ್ಯವೈಖರಿಯಲ್ಲಿ ತೀವ್ರ ನಿರ್ಲಕ್ಷ್ಯ ವಹಿಸಿರುವುದರಿಂದ, ಮೇಲ್ಮನವಿದಾರರಿಗೆ ಸಂಪೂರ್ಣ ನ್ಯಾಯ ಒದಗಿಸಬೇಕು. ಹೀಗಾಗಿ ಪರಿಹಾರ ಹಣವನ್ನು 3 ಲಕ್ಷದಿಂದ 9 ಲಕ್ಷ ರೂ.ಗೆ ಏರಿಸಬೇಕು ಎಂದು ಕೋರ್ಟ್ ಆದೇಶ ನೀಡಿತು. ಇದನ್ನೂ ಓದಿ: ಮೈಸೂರು ಮೇಯರ್, ಉಪ ಮೇಯರ್ ಎಲೆಕ್ಷನ್: ಬಿಜೆಪಿ ಬಾಯಿಗೆ ಬಿತ್ತು ಡಬಲ್ ಲಡ್ಡು!

    Live Tv
    [brid partner=56869869 player=32851 video=960834 autoplay=true]

  • ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

    ದೆಹಲಿಯಲ್ಲೂ ಪ್ರಾರಂಭವಾಯ್ತು ಬುಲ್ಡೋಜರ್ ಸದ್ದು

    ನವದೆಹಲಿ: ಇತ್ತೀಚೆಗೆ ಹನುಮ ಜಯಂತಿ ವೇಳೆ ಹಿಂಸಾಚಾರಕ್ಕೆ ಸಾಕ್ಷಿಯಾಗಿದ್ದ ದೆಹಲಿಯ ಜಹಾಂಗೀರ್‌ಪುರಿಗೂ ಸರ್ಕಾರ ಬುಲ್ಡೋಜರ್ ಶಾಕ್ ನೀಡಿದ್ದು, ದೆಹಲಿಯಲ್ಲಿ ನಿರ್ಮಾಣ ಮಾಡಲಾಗಿರುವ ಅಕ್ರಮ ಕಟ್ಟಡಗಳನ್ನು ಬುಲ್ಡೋಜರ್ ಬಳಸಿ ಒಡೆದು ಹಾಕಲು ನಗರ ಪಾಲಿಕೆ ಆದೇಶ ನೀಡಿದೆ.

    ಹನುಮ ಜಯಂತಿಯಂದು ದೆಹಲಿಯಲ್ಲಿ ನಡೆದ ಜಹಾಂಗೀರ್‌ಪುರಿ ಹಿಂಸಾಚಾರದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಈ ಹಿನ್ನೆಲೆಯಲ್ಲಿ ದೆಹಲಿ ಉತ್ತರ ಮಹಾನಗರ ಪಾಲಿಕೆ ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದೆ. ಈ ಮನವಿಯಲ್ಲಿ ಏ.20 ಮತ್ತು 21ರಂದು ಅಕ್ರಮ ಕಟ್ಟಗಳನ್ನು ತೆರವುಗೊಳಿಸಲಾಗುತ್ತದೆ. ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ 400 ಪೊಲೀಸರ ಭದ್ರತೆ ಒದಗಿಸಬೇಕು ಎಂದು ಕೇಳಿಕೊಂಡಿದೆ.

    ಹಿಂಸಾಚಾರಕ್ಕೂ ಈ ಆದೇಶಕ್ಕೂ ನೇರ ಸಂಬಂಧ ಇಲ್ಲವಾದರೂ, ಇದು ದಾಳಿಕೋರರಿಗೆ ನೇರ ಸಂದೇಶ ನೀಡುವ ಉದ್ದೇಶ ಹೊಂದಿದೆ ಎನ್ನಲಾಗಿದೆ. ಇದನ್ನೂ ಓದಿ: ಅಂಗಡಿ ದೋಚಿದ ಖುಷಿಯಲ್ಲಿ ಡ್ಯಾನ್ಸ್ ಮಾಡಿದ ಕಳ್ಳ – ವೀಡಿಯೋ ವೈರಲ್

    ಘಟನೆಯಲ್ಲಿ 8 ಪೊಲೀಸ್ ಸಿಬ್ಬಂದಿ ಮತ್ತು ಒಬ್ಬ ನಾಗರಿಕ ಸೇರಿದಂತೆ ಒಂಬತ್ತು ಮಂದಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಒಟ್ಟು 23 ಜನರನ್ನು ಬಂಧಿಸಲಾಗಿದೆ ಮತ್ತು ಇಬ್ಬರು ಬಾಲಾಪರಾಧಿಗಳನ್ನು ಬಂಧಿಸಲಾಗಿದೆ.

    DELHI POLICE

    ದೆಹಲಿ ಪೊಲೀಸ್ ಕಮಿಷನರ್ ರಾಕೇಶ್ ಅಸ್ತಾನಾ ಮಾತನಾಡಿ, ತಪ್ಪಿತಸ್ಥರ ವಿರುದ್ಧ ವರ್ಗ, ಧರ್ಮ, ಸಮುದಾಯ ಮತ್ತು ಧರ್ಮವನ್ನು ಲೆಕ್ಕಿಸದೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು. ಇದನ್ನೂ ಓದಿ: ಚಹಾ ಅಂಗಡಿ ತೆರೆದು ಬದುಕು ಕಟ್ಟಿಕೊಂಡ ಅರ್ಥಶಾಸ್ತ್ರ ಪದವೀಧರೆ

  • ಕೋಲ್ಕತ್ತಾ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ವೇಳೆ ಬಾಂಬ್ ಸ್ಫೋಟ

    ಕೋಲ್ಕತ್ತಾ ಮುನ್ಸಿಪಲ್ ಕಾರ್ಪೋರೇಷನ್ ಚುನಾವಣೆ ವೇಳೆ ಬಾಂಬ್ ಸ್ಫೋಟ

    ಕೋಲ್ಕತ್ತಾ: ಮುನ್ಸಿಪಲ್ ಕಾರ್ಪೋರೇಷನ್‍ಗೆ ಚುನಾವಣೆ ನಡೆಯ ವೇಳೆ ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದ ಮತಗಟ್ಟೆಯ ಹೊರಗೆ ಕಚ್ಚಾ ಬಾಂಬ್ ಸ್ಫೋಟಗೊಂಡಿದೆ.

    ಈ ಘಟನೆಯಲ್ಲಿ ಮೂವರು ಮತದಾರರು ಗಾಯಗೊಂಡಿದ್ದಾರೆ. ಅವರಲ್ಲಿ ಒಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಗೊಂಡವರಲ್ಲಿ ಒಬ್ಬರು ಕಾಲು ಕಳೆದುಕೊಂಡಿದ್ದು, ಉಳಿದ ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ 11 ಗಂಟೆ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ. ಗಾಯಗೊಂಡ ಮೂವರು ಇದೇ ಕ್ಷೇತ್ರದದ ಮತದಾರರು ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ MES ಪುಂಡರ ಅಟ್ಟಹಾಸ – ಸಂಗೊಳ್ಳಿ ರಾಯಣ್ಣ ಪ್ರತಿಮೆಗೆ ಹಾನಿ, ಬಸ್ ಮೇಲೆ ಕಲ್ಲು ತೂರಾಟ

    ಘಟನೆಯ ಬಳಿಕ ದುಷ್ಕರ್ಮಿಗಳು ಪರಾರಿಯಾಗಿದ್ದು, ಆರೋಪಿಗಳನ್ನು ಪತ್ತೆ ಹಚ್ಚಲು ಸಿಸಿಟಿವಿ ದೃಶ್ಯವಾಳಿಗಳನ್ನು ಪರಿಶೀಲಿಸುತ್ತಿದ್ದೇವೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಇದನ್ನೂ ಓದಿ: ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಮರುಪ್ರತಿಷ್ಠಾಪನೆ

    ಮತದಾನದ ಹಿನ್ನೆಲೆಯಲ್ಲಿ ಕೋಲ್ಕತ್ತಾ ನಗರದಲ್ಲಿ 23,000 ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿದ್ದು, ಸುಮಾರು ಸಂಜೆ 5 ಗಂಟೆಯವರೆಗೆ ಮತದಾನ ನಡೆದಿತ್ತು