ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರ ಮೇಲೆ ಮೊಟ್ಟೆ ಎಸೆತ ಪ್ರಕರಣದ ಮೂವರು ಆರೋಪಿಗಳಿಗೆ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಏನಿದು ಪ್ರಕರಣ?
ಲಗ್ಗೆರೆ ವಾರ್ಡ್‌ನಲ್ಲಿರುವ ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದಾಗ ಮೊಟ್ಟೆ ದಾಳಿ ನಡೆದಿತ್ತು. ಕೂಡಲೇ ದಾಳಿಕೋರರನ್ನ ಮುನಿರತ್ನ ಬೆಂಬಲಿಗರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ಈ ಸಂಬಂಧ ಕೇಸ್ ದಾಖಲಿಸಿಕೊಂಡಿದ್ದ ನಂದಿನಿ ಲೇಔಟ್ ಪೊಲೀಸರು ಮೂವರು ಆರೋಪಿಗಳನ್ನ ಬಂಧಿಸಿದ್ದರು. ಇಂದು ಮೂವರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಇದನ್ನೂ ಓದಿ: ನಕಲಿ ಕಾಂಗ್ರೆಸ್ ನೀತಿ ವಿರುದ್ಧ ನಾಳೆ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಧರಣಿ: ಬಿ.ವೈ.ವಿಜಯೇಂದ್ರ
ಮುನಿರತ್ನ ಡಿಸ್ಚಾರ್ಜ್:
ಮೊಟ್ಟೆ ದಾಳಿ ಬಳಿಕ ನಗರದ ಕೆ.ಸಿ ಜನರಲ್ ಆಸ್ಪತ್ರೆಗೆ ದಾಖಲಾಗಿದ್ದ ಶಾಸಕ ಮುನಿರತ್ನ, ವೈದ್ಯರ ಸೂಚನೆ ಮೇರೆಗೆ ಬುಧವಾರ ರಾತ್ರಿ ಆಸ್ಪತ್ರೆಯಲ್ಲೇ ಉಳಿದಿದ್ದರು. ಗುರುವಾರ (ಇಂದು) ಡಿಸ್ಚಾರ್ಜ್ ಆಗಿದ್ದಾರೆ. ಆಸ್ಪತ್ರೆಯಿಂದ ಹೊರಬರುತ್ತಿದ್ದಂತೆ ಮತ್ತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ. ಇದನ್ನೂ ಓದಿ: 2.5 ಕೋಟಿ ಚಿನ್ನಾಭರಣ ವಂಚನೆ ಕೇಸ್ – ನನಗೂ ಶ್ವೇತಾಗೂ ಸಂಬಂಧವಿಲ್ಲ: ಪವಿತ್ರಾಗೌಡ ಸ್ನೇಹಿತೆ ಸಮತಾ ಸ್ಪಷ್ಟನೆ
ಈ ದಾಳಿ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್, ಕುಸುಮಾ, ಹನುಮಂತರಾಯಪ್ಪ ಇದ್ದಾರೆ. ಪೊಲೀಸರು ಇಲ್ಲದಿದ್ರೆ ನನ್ನ ಕೊಲೆ ಆಗುತ್ತಿತ್ತು. ನೀವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕುಸುಮಾ ಶಾಸಕಿ ಆಗಬೇಕು ಎಂದು ಇತ್ತೀಚಿಗೆ ಕೆಲವರು ಧಮ್ಕಿ ಹಾಕ್ತಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ. ಇದನ್ನೂ ಓದಿ: ತಲೆಗೆ ಮೊಟ್ಟೆ ಏಟು – ಆಸ್ಪತ್ರೆಯಿಂದ ಮುನಿರತ್ನ ಡಿಸ್ಚಾರ್ಜ್
ಬೆಂಗಳೂರು: ರಾಜರಾಜೇಶ್ವರಿ ನಗರದ (RR Nagara) ಬಿಜೆಪಿ ಶಾಸಕ ಮುನಿರತ್ನ(Munirathna) ಅವರು ಮಲ್ಲೇಶ್ವರದ ಕೆಸಿ ಜನರಲ್ ಆಸ್ಪತ್ರೆಯಿಂದ (KC General Hospital) ಡಿಸ್ಚಾರ್ಜ್ ಆಗಿದ್ದಾರೆ.
ತಲೆಗೆ ಪೆಟ್ಟಾದ ಹಿನ್ನೆಲೆಯಲ್ಲಿ ಅಬ್ಸರ್‌ವೇಷನ್‌ನಲ್ಲಿ ಇರುವಂತೆ ವೈದ್ಯರು ಮುನಿರತ್ನ ಅವರಿಗೆ ಸೂಚಿಸಿದ್ದರು. ಬುಧವಾರದ ರಾತ್ರಿಯನ್ನು ಆಸ್ಪತ್ರೆಯಲ್ಲಿ ಕಳೆದಿದ್ದ ಮುನಿರತ್ನ ಗುರುವಾರ ಬೆಳಗ್ಗೆ ಡಿಸ್ಚಾರ್ಜ್ ಆಗಿದ್ದಾರೆ.
ಈ ಸಂದರ್ಭದಲ್ಲಿ ಮಾಧ್ಯಮಗಳು ಪ್ರಶ್ನೆ ಕೇಳಿದ್ದಕ್ಕೆ ಈಗ ನಾನು ಏನು ಹೇಳುವುದಿಲ್ಲ. ಬೆಳಗ್ಗೆ 11 ಗಂಟೆಗೆ ಸುದ್ದಿಗೋಷ್ಠಿ ನಡೆಸಿ ಎಲ್ಲವನ್ನೂ ಹೇಳುತ್ತೇನೆ ಎಂದು ತಿಳಿಸಿದರು.
ಗುರುವಾರ ಲಗ್ಗೆರೆ ವಾರ್ಡ್‌ನಲ್ಲಿರುವ ಲಕ್ಷ್ಮಿ ದೇವಿ ನಗರದಲ್ಲಿ ವಾಜಪೇಯಿ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮರಳಿ ಕಾರಿನತ್ತ ನಡೆದುಕೊಂಡು ಹೋಗುತ್ತಿದ್ದಾಗ ಮೊಟ್ಟೆ ದಾಳಿ ನಡೆದಿತ್ತು. ಕೂಡಲೇ ದಾಳಿಕೋರರನ್ನು ಮುನಿರತ್ನ ಬೆಂಬಲಿಗರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ದಾಳಿ ಹಿಂದೆ ಡಿಸಿಎಂ ಡಿಕೆ ಶಿವಕುಮಾರ್, ಮಾಜಿ ಸಂಸದ ಡಿಕೆ ಸುರೇಶ್, ಕುಸುಮಾ, ಹನುಮಂತರಾಯಪ್ಪ ಇದ್ದಾರೆ. ಪೊಲೀಸರು ಇಲ್ಲದಿದ್ರೆ ನನ್ನ ಕೊಲೆ ಆಗುತ್ತಿತ್ತು. ನೀವು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಕುಸುಮಾ ಶಾಸಕಿ ಆಗಬೇಕು ಎಂದು ಇತ್ತೀಚಿಗೆ ಕೆಲವರು ಧಮ್ಕಿ ಹಾಕ್ತಿದ್ದಾರೆ ಎಂದು ಮುನಿರತ್ನ ಆರೋಪಿಸಿದ್ದಾರೆ.
ಬೆಂಗಳೂರು: ಕಾಂಗ್ರೆಸ್ (Congress) ಸರ್ಕಾರ ಬಂದಾಗಿನಿಂದ ವಿರೋಧ ಪಕ್ಷದ ಶಾಸಕರ ಮೇಲೆ ದಬ್ಬಾಳಿಕೆ ಆಗುತ್ತಿದೆ. ಇದ್ಯಾವುದು ಸರ್ಕಾರದ ಕುಮ್ಮಕ್ಕು ಇಲ್ಲದೆ ಆಗಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (B.Y Vijayendra) ಕಿಡಿಕಾರಿದ್ದಾರೆ.
ಮೊಟ್ಟೆ ದಾಳಿಗೆ ಒಳಗಾಗಿ ಆಸ್ಪತ್ರೆಯಲ್ಲಿರುವ ಶಾಸಕ ಮುನಿರತ್ನರನ್ನು (Munirathna) ಭೇಟಿಯಾಗಿ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ, ಮುನಿರತ್ನ ಮೇಲಿನ ದಾಳಿ ಸಣ್ಣ ಪ್ರಕರಣದ್ದಲ್ಲ. ಅವರ ಮೇಲೆ ಷಡ್ಯಂತ್ರ ಬಹಳ ಕಾಲದಿಂದ ನಡೆಯುತ್ತಿದೆ. ಇದರಿಂದ ಕಾರ್ಯಕರ್ತರ ಮನಸ್ಸಿಗೆ ಬಹಳ ಬೇಜಾರಾಗಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.
ಸಿಟಿ ರವಿ ಪ್ರಕರಣದಲ್ಲಿ ಪೊಲೀಸರು ಹೇಗೆ ನಡೆಸಿಕೊಂಡಿದ್ದಾರೆ ಗೊತ್ತಿದೆ. ಈ ಸರ್ಕಾರ ಪೊಲೀಸರನ್ನ ಬಳಸಿಕೊಂಡು ದಬ್ಬಾಳಿಕೆ ಮಾಡುತ್ತಿದೆ. ಬೆದರಿಕೆ, ಒತ್ತಡ ಹಾಕಿ ಏನೂ ಮಾಡಲು ಆಗಲ್ಲ. ಜನಪ್ರತಿನಿಧಿಗಳನ್ನ ಬೆದರಿಸುವುದು ಅಕ್ಷಮ್ಯ ಅಪರಾಧ ಎಂದಿದ್ದಾರೆ.
ಮುನಿರತ್ನ ಅವರಿಗೆ ನೀಡಿದ್ದ ಗನ್ ಮ್ಯಾನ್ ವಾಪಸ್ ಪಡೆದಿದ್ದಾರೆ. ಅವರು ಜನಪ್ರತಿನಿಧಿ ಅಲ್ವಾ? ಮುನಿರತ್ನ ಅವರು ಗಟ್ಟಿಯಾಗಿದ್ದಾರೆ. ಅವರನ್ನ ಕುಗ್ಗಿಸುವ ಕೆಲಸ ಮಾಡಿದ್ದಾರೆ. ನಮ್ಮ ಶಾಸಕರ ವಿರುದ್ಧ ಷಡ್ಯಂತ್ರದ ವಿರುದ್ಧ ಬೆಂಬಲಕ್ಕೆ ನಿಲ್ಲುತ್ತೇನೆ ಎಂದು ಅವರು ಹೇಳಿದ್ದಾರೆ.
ಬೆಳಗಾವಿ: ಶಾಸಕ ಮುನಿರತ್ನ (Munirathna) ಅವರೇ ಗೂಂಡಾಗಳಿಂದ ಗಲಾಟೆ ಮಾಡಿಸಿ ನನ್ನ ಮೇಲೆ ಆರೋಪ ಬರುವಂತೆ ಮಾಡಲು ಮುಂದಾಗಿದ್ದಾರೆ ಎಂದು ಮಾಜಿ ಸಂಸದ ಡಿ.ಕೆ ಸುರೇಶ್ (D.K Suresh) ತಿರುಗೇಟು ನೀಡಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಈ ವೇಳೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿ.ಕೆ ಸುರೇಶ್, ಡಿಕೆ ಶಿವಕುಮಾರ್ ಅವರ ಕಡೆಯವರಿಂದ ದಾಳಿ ನಡೆದಿದೆ ಎಂಬ ಮುನಿರತ್ನ ಆರೋಪಕ್ಕೆ ತಿರುಗೇಟು ನೀಡಿದ್ದಾರೆ. ನನಗೆ ಆ ವಿಚಾರ ಗೊತ್ತಿಲ್ಲ. ಕಾಂಗ್ರೆಸ್ ಕಾರ್ಯಕರ್ತರಿಗೆ ಅವರೇ ಕೊಲೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದೆ ಎಂದು ಹೇಳಿದ್ದಾರೆ.
ಅವರ ವ್ಯಕ್ತಿತ್ವ ಏನು ಎಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಬಿಜೆಪಿಯವರಿಗಾಗಲಿ, ಬೇರೆಯವರಿಗಾಗಲಿ ನನ್ನ ವಿರುದ್ಧ ಮಾತಾಡುವ ನೈತಿಕತೆ ಇಲ್ಲ ಎಂದು ಕಿಡಿಕಾರಿದ್ದಾರೆ.
ಕುಸುಮ ಅವರನ್ನು ಎಂಎಲ್‌ಎ ಮಾಡುವ ನಿಟ್ಟಿನಲ್ಲಿ ಈ ರೀತಿ ಮಾಡ್ತಿದ್ದಾರೆ ಎಂಬ ಆರೋಪಕ್ಕೆ, ಬೆಂಗಳೂರಿಗೆ ಬಂದ ಮೇಲೆ ಮಾತಾಡ್ತೀನಿ ಎಂದು ಶಾಸಕರಿಗೆ ಹೇಳಿ ಎಂದು ತೆರಳಿದ್ದಾರೆ.
ಬೆಂಗಳೂರು: ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಲು ಡಿಕೆ ಸುರೇಶ್, ಡಿಕೆ ಶಿವಕುಮಾರ್ ಅವರ ಕಡೆಯವರಿಂದ ನನ್ನ ಮೇಲೆ ಆಸೀಡ್ ದಾಳಿ ನಡೆದಿದೆ ಎಂದು ರಾಜರಾಜೇಶ್ವರಿ ನಗರ ಶಾಸಕ ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ.
ಇಂದು ಲಗ್ಗೆರೆ ಬಳಿಕ ಲಕ್ಷ್ಮಿದೇವಿ ನಗರದಲ್ಲಿ ವಾಜಪೇಯಿಯವರ 100 ವರ್ಷದ ಹುಟ್ಟುಹಬ್ಬದ ಕಾರ್ಯಕ್ರಮದಲ್ಲಿ ಮುನಿರತ್ನ ಭಾಗಿಯಾಗಿದ್ದರು. ಈ ಕಾರ್ಯಕ್ರಮ ಮುಗಿಸಿ ತೆರಳುತ್ತಿದ್ದಾಗ ಮುನಿರತ್ನ ಮೇಲೆ ಕಲ್ಲು ಮತ್ತು ಮೊಟ್ಟೆ ದಾಳಿ ನಡೆದಿದೆ. ಕಾರಿನ ಗಾಜಿನ ಮೇಲೆಯೇ ಕಲ್ಲು ಬಿದ್ದಿದೆ. ಕೂಡಲೇ ಪೊಲೀಸರು ಮೊಟ್ಟೆ ಎಸೆದ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.
ಮೊಟ್ಟೆಯ ಒಳಗಡೆ ಆಸಿಡ್ ಹಾಕಿ ದಾಳಿ ಮಾಡಿದ್ದಾರೆ. ಗುಂಪು ದಾಳಿ ಮಾಡಿ ನನ್ನ ಕೊಲೆ ಮಾಡಲು ಮುಂದಾಗಿದ್ದಾರೆ. ಡಿಕೆ ಸುರೇಶ್ ಅವರಿಗೆ ಕುಸುಮಾ ಅವರನ್ನು ಶಾಸಕಿಯನ್ನಾಗಿ ಮಾಡಬೇಕು ಎಂಬ ಆಸೆ ಇದೆ. ಈ ಕಾರಣಕ್ಕೆ ನನ್ನ ಮೇಲೆ ದಾಳಿ ನಡೆದಿದೆ ಎಂದು ದೂರಿದರು.
ಇದು ಕಾಂಗ್ರೆಸ್ ಪ್ರೇರಿತ ಕೃತ್ಯವಾಗಿದ್ದು ಡಿಕೆ ಸುರೇಶ್, ಡಿಕೆ ಶಿವಕುಮಾರ್, ಕುಸುಮ ತಂದೆ ಹನುಮಂತರಾಯಪ್ಪ ಇದಕ್ಕೆ ನೇರ ಹೊಣೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯ ಮಾಡುತ್ತಿದ್ದಾರೆ. ಇತ್ತೀಚೆಗೆ ಕಲವರು ಮನೆಯ ಮುಂದೆಯೇ ಬಂದು ರಾಜೀನಾಮೆ ಕೊಡಿ. ಇಲ್ಲದೇ ಇದ್ದರೆ ನಿಮ್ಮನ್ನು ಕೊಲೆ ಮಾಡುತ್ತೇವೆ ಎಂದು ಬೆದರಿಕೆ ಹಾಕಿದ್ದರು ಎಂದು ತಿಳಿಸಿದರು.
ಕೋರ್ಟ್ ವಿಚಾರಣೆಗೆ ಹಾಜರಾಗುವ ಸಮಯದಲ್ಲಿ ವಕೀಲರ ಉಡುಪು ಧರಿಸಿದ್ದ ವ್ಯಕ್ತಿಯೊಬ್ಬರು ನನ್ನ ಬಳಿ ಬಂದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ. ಇಲ್ಲದೇ ಇದ್ದರೆ ನಿಮ್ಮ ಮೇಲೆ ಪೋಕ್ಸೋ ಕೇಸ್ ಹಾಕಲಾಗುವುದು ಎಂದು ಹೇಳಿದ್ದರು. ನಾನು ರಕ್ಷಣೆಗಾಗಿ ಗನ್ ಮ್ಯಾನ್ ಕೊಡಿ ಎಂದು ಸರ್ಕಾರಕ್ಕೆ ಕೇಳಿದ್ದೆ. ನನ್ನನ್ನು ಕೊಲೆ ಮಾಡಿಯಾದರೂ ಕುಸುಮಗೆ ಶಾಸಕ ಪಟ್ಟ ಕೊಡಿಸಬೇಕು ಎನ್ನುವುದು ಡಿಕೆ ಸುರೇಶ್ ಆಸೆ ಎಂದು ದೂರಿದರು.
ಈಗ ಮುನಿರತ್ನ ಅವರನ್ನು ಕೆಸಿ ಜನರಲ್ ಆಸ್ಪತ್ರಗೆ ದಾಖಲಾಗಿದ್ದಾರೆ. ಹಲವು ಸಂಖ್ಯೆಯ ಬಿಜೆಪಿ ಕಾರ್ಯಕರ್ತರು ಆಸ್ಪತ್ರೆ ಮುಂದೆ ಜಮಾಯಿಸಿದ್ದಾರೆ.
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ (Rape Case) ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ಮುನಿರತ್ನಗೆ (Munirathna) ಜಾಮೀನು ಸಿಕ್ಕಿದೆ.
ಬೆಂಗಳೂರಿನಲ್ಲಿರುವ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ಒಂದು ತಿಂಗಳ ಬಳಿಕ ಮುನಿರತ್ನಗೆ ಬಿಡುಗಡೆಯ ಭಾಗ್ಯ ಸಿಕ್ಕಿದೆ. 1 ಲಕ್ಷ ರೂ. ಬಾಂಡ್, ಇಬ್ಬರ ಶೂರಿಟಿ ನೀಡುವಂತೆ ಷರತ್ತು ವಿಧಿಸಿ ಬೇಲ್ ಕೊಟ್ಟಿದೆ.
ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ (BJP) ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಮುನಿರತ್ನ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಹಿತ್, ಕಿರಣ್, ಮಂಜುನಾಥ್‌ಗೆ ನಿರೀಕ್ಷಣಾ ಜಾಮೀನು ಸಿಕ್ಕಿತ್ತು.
ಬೆಂಗಳೂರು: ರಾಜರಾಜೇಶ್ವರಿ ಕ್ಷೇತ್ರದ ಬಿಜೆಪಿ ಮುನಿರತ್ನ (Munirathna) ವಿರುದ್ಧ ದಾಖಲಾದ ಅತ್ಯಾಚಾರ (Rape) ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (Special MP/MLA Court) ನಿರೀಕ್ಷಣಾ ಜಾಮೀನು (Bail) ಮಂಜೂರು ಮಾಡಿದೆ.
ಸಮಾಜ ಸೇವಕಿಯಾಗಿ ಗುರುತಿಸಿಕೊಂಡು ಬಿಜೆಪಿಯಲ್ಲೂ ಸಕ್ರಿಯವಾಗಿದ್ದ ರಾಜರಾಜೇಶ್ವರಿ ನಗರದ ಸುಮಾರು 40 ವರ್ಷದ ಮಹಿಳೆಯ ದೂರಿನ ಆಧಾರದ ಮೇಲೆ ಕಗ್ಗಲೀಪುರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು.
ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ (Judicial Custody) ಒಪ್ಪಿಸಿದೆ.
ಇಂದಿಗೆ ಕಸ್ಟಡಿ ಅಂತ್ಯಗೊಂಡ ಹಿನ್ನೆಲೆಯಲ್ಲಿ ವಿಶೇಷ ತನಿಖಾ ತಂಡದ (SIT) ಪೊಲೀಸರು ಮುನಿರತ್ನ ಅವರನ್ನು ಕೋರ್ಟ್‌ಗೆ ಹಾಜರುಪಡಿಸಿದರು. ವಿಚಾರಣೆ ವೇಳೆ ಮತ್ತೆ ವಶಕ್ಕೆ ನೀಡುವಂತೆ ಎಸ್‌ಐಟಿ ಕೇಳದ ಹಿನ್ನೆಲೆಯಲ್ಲಿ ಕೋರ್ಟ್ ಅ.19ರವರೆಗೆ ನ್ಯಾಯಾಂಗ ಬಂಧನ ವಿಧಿಸಿತು.
ಈ ವೇಳೆ ಮನೆ ಊಟಕ್ಕೆ ಅನುಮತಿ ನೀಡುವಂತೆ ಮುನಿರತ್ನ ಪರ ವಕೀಲರು ಮನವಿ ಮಾಡಿದರು. ಈ ಮನವಿಗೆ ಕೋರ್ಟ್ ಜೈಲಾಧಿಕಾರಿಗಳಿಗೆ ಮನವಿ ಮಾಡಿ ಎಂದು ಸೂಚನೆ ನೀಡಿತು.
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ (Munirathna) ವಿರುದ್ಧದ ಮೂರು ಪ್ರಕರಣಗಳ ಕೇಸ್ ಫೈಲ್ ಅಧಿಕೃತವಾಗಿ ವಿಶೇಷ ತನಿಖಾ ತಂಡ (SIT) ವರ್ಗವಾಗಿದೆ. ಹೀಗಾಗಿ ಬಿಕೆ ಸಿಂಗ್ ನೇತೃತ್ವದ ಎಸ್‌ಐಟಿ, ನ್ಯಾಯಾಂಗ ಬಂಧನದಲ್ಲಿರುವ ಮುನಿರತ್ನ ಅವರನ್ನು ಬಾಡಿವಾರೆಂಟ್ ಮೂಲಕ ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಲು ಮುಂದಾಗಿದೆ.
ಈ ಮಧ್ಯೆ ಕಗ್ಗಲಿಪುರದಲ್ಲಿ ದಾಖಲಾಗಿರುವ ರೇಪ್ ಕೇಸ್ (Rape Case) ಸಂಬಂಧ ಮುನಿರತ್ನ ಸಲ್ಲಿಸಿರುವ ಜಾಮೀನು ಅರ್ಜಿಯ (Bail Plea) ವಿಚಾರಣೆ ಬುಧವಾರಕ್ಕೆ ಮುಂದೂಡಿಕೆಯಾಗಿದೆ. ಮುನಿರತ್ನ ಪ್ರಕರಣಗಳನ್ನು ಎಸ್‌ಐಟಿಗೆ ವಹಿಸಿರೋದನ್ನು ಗೃಹ ಸಚಿವ ಪರಮೇಶ್ವರ್ ಸಮರ್ಥನೆ ಮಾಡಿಕೊಂಡಿದ್ದಾರೆ.
ಮುನಿರತ್ನ ವಿಚಾರದಲ್ಲಿ ಸರ್ಕಾರ ಪೂರ್ವಾಗ್ರಹಪೀಡಿತವಾಗಿದೆ. ಅವರನ್ನು ರಾಜಕೀಯವಾಗಿ ಮುಗಿಸಲು ಸಂಚು ಮಾಡಿದೆ ಎಂದು ಬಿಜೆಪಿ ಪರಿಷತ್ ಸದಸ್ಯ ಸಿಟಿ ರವಿ ಆರೋಪಿಸಿದ್ದಾರೆ.
ಬೆಂಗಳೂರು: ಬಿಜೆಪಿ ರಾಜ್ಯ ಕೋರ್ ಕಮಿಟಿ ಸಭೆಯಲ್ಲಿ ಮುಂಬರುವ ಉಪಚುನಾವಣೆಗೆ ಸಂಬಂಧಿಸಿ ವಿಸ್ತೃತವಾಗಿ ಚರ್ಚೆ ನಡೆಸಿದ್ದೇವೆ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ (C T Ravi) ತಿಳಿಸಿದರು.
ಅಭ್ಯರ್ಥಿ ಸಂಬಂಧಿಸಿ ಎನ್‌ಡಿಎ (NDA) ಮಿತ್ರ ಪಕ್ಷವಾದ ಜೆಡಿಎಸ್ (JDS) ಮತ್ತು ನಮ್ಮ ಕೇಂದ್ರೀಯ ನಾಯಕರ ಜೊತೆ ಸಮಾಲೋಚನೆ ಮಾಡಿ, ನಿರ್ಣಯಿಸಲು ಕೋರ್ ಕಮಿಟಿ ನಿರ್ಧರಿಸಿದೆ. ಈ ಹಿಂದೆ ಶ್ರೀನಿವಾಸ ಪೂಜಾರಿಯವರು ಚುನಾಯಿತರಾಗಿದ್ದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಅ.21ರಂದು ನಡೆಯಲಿದೆ. ಆ ಉಪಚುನಾವಣೆಗೆ ಸಂಬಂಧಿಸಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಹೋಗಿ ಅಪೇಕ್ಷಿತರ ವರದಿ ಹಾಗೂ 2 ಜಿಲ್ಲೆಗಳ ಪ್ರಮುಖರ ಅಭಿಪ್ರಾಯ ಸಂಗ್ರಹಿಸಿದ್ದರು. ಕೇಂದ್ರೀಯ ನಾಯಕತ್ವದ ಜೊತೆ ಚರ್ಚೆ ಮಾಡಿ ನಿರ್ಣಯ ತೆಗೆದುಕೊಳ್ಳುವ ಅಧಿಕಾರವನ್ನು ರಾಜ್ಯಾಧ್ಯಕ್ಷರಿಗೆ ಕೊಡಲಾಗಿದೆ ಎಂದು ತಿಳಿಸಿದರು.
ಪ್ರಚಲಿತ ರಾಜಕೀಯ ವಿದ್ಯಮಾನಗಳ ಕುರಿತು ಕೂಡ ಚರ್ಚಿಸಲಾಗಿದೆ. ಈ ಸರ್ಕಾರದ ಮೇಲೆ ನಿರಂತರವಾಗಿ ಬರುತ್ತಿರುವ ಆಧಾರಸಹಿತವಾದ ಭ್ರಷ್ಟಾಚಾರದ ಆರೋಪಗಳು, ಅದರ ವಿರುದ್ಧ ಇನ್ನಷ್ಟು ಜನಾಂದೋಲನ ರೂಪಿಸುವ ಕುರಿತು ಚರ್ಚೆ ಮಾಡಿದ್ದೇವೆ. ಈ ಸರ್ಕಾರದ ಹಿಂದೂ ವಿರೋಧಿ ನೀತಿ, ಗಣೇಶೋತ್ಸವದ ಮೇಲೆ ನಿರ್ಬಂಧ ಹೇರುತ್ತಿರುವುದು, ಗಣೇಶೋತ್ಸವ ಮೆರವಣಿಗೆಯಲ್ಲಿ ಪಾಲ್ಗೊಳ್ಳದಂತೆ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ ವೇದಿಕೆ, ಬಜರಂಗದಳದ ಮುಖಂಡರ ಮೇಲೆ ದಿಗ್ಬಂಧನವನ್ನು ಹಾಕುತ್ತಿರುವುದು, ಓಲೈಕೆಯ ರಾಜಕಾರಣ ಕುರಿತು ಚರ್ಚಿಸಿದ್ದೇವೆ. ಈ ಸಂಬಂಧ ಪರಿವಾರ ಸಂಘಟನೆಗಳ ಪ್ರಮುಖರ ಜೊತೆ ಸಮಾಲೋಚನೆ ನಡೆಸಿ ಹೋರಾಟ ನಡೆಸುವ ಚಿಂತನೆ ಪಕ್ಷದ ಕೋರ್ ಕಮಿಟಿ ಸಭೆಯಲ್ಲಿ ನಡೆದಿದೆ ಎಂದು ಹೇಳಿದರು.
ರಾಜಕಾರಣದಿಂದಲೇ ಬದಿಗೆ ಸರಿಸಬೇಕೆಂದು ಸಂಚು:
ನಮ್ಮ ಶಾಸಕ ಮುನಿರತ್ನ ಅವರ ಮೇಲೆ ಎಸ್‌ಐಟಿ (SIT) ರಚನೆ ಮಾಡಿದ್ದಾರೆ. ಇಂಥದ್ದೇ ಆಪಾದನೆಗಳು ಕಾಂಗ್ರೆಸ್ ಶಾಸಕರ ಮೇಲೆ ಬಂದಾಗ ಅವರಿಗೆ ಒಂದು ನೀತಿ, ಬಿಜೆಪಿ ಶಾಸಕರಿಗೆ ಮತ್ತೊಂದು ನೀತಿಯನ್ನು ಅನುಸರಿಸಲಾಗುತ್ತಿದೆ. ಈ ಸರ್ಕಾರ ಪೂರ್ವಗ್ರಹ ಪೀಡಿತವಾಗಿ ದ್ವೇಷದ ರಾಜಕಾರಣ ಮಾಡುತ್ತಿದೆ. ಸತ್ಯಾಸತ್ಯತೆ ತನಿಖೆ ನಡೆಸುವುದು ಬೇರೆ. ಪೂರ್ವಗ್ರಹ, ರಾಜಕೀಯ ದ್ವೇಷದಿಂದ ರಾಜಕಾರಣದಿಂದಲೇ ಸರಿಸಬೇಕೆಂದು ನಡೆಸುವ ಸಂಚು ಬೇರೆ. ಈ ಸರ್ಕಾರವು ರಾಜಕಾರಣದಿಂದಲೇ ಬದಿಗೆ ಸರಿಸಬೇಕೆಂದು ಸಂಚು ನಡೆಸುವುದು ವ್ಯಕ್ತವಾಗಿದೆ. ಪ್ರಜಾಪ್ರಭುತ್ವ, ಸಂವಿಧಾನ ಎಂದು ಮಾತನಾಡುವ ಇವರು ಸರ್ವಾಧಿಕಾರಿ, ಸಂವಿಧಾನ ಬಾಹಿರವಾಗಿ ದ್ವೇಷದ ನಡೆಯನ್ನು ತೋರುವ ಬಗ್ಗೆ ಚರ್ಚಿಸಿದ್ದೇವೆ ಎಂದು ತಿಳಿಸಿದರು.
ಅರ್ಧಸತ್ಯವನ್ನಷ್ಟೇ ಹೇಳಿದ ಸಿಎಂ:
ಸಿಎಂ (CM Siddaramaiah) ತುಂಗಭದ್ರಾ ನದಿಗೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಪತ್ರಕರ್ತರು ಕೇಳಿದ ಪ್ರಶ್ನೆಗೆ ರೀಡೂ ನಾನು ಮಾಡಿದ್ದೇನ್ರಿ. ಅದು ಸುಪ್ರೀಂಕೋರ್ಟ್ (Supreme Court) ಆದೇಶ ಎಂದಿದ್ದಾರೆ. ಸಿಎಂ ಅರ್ಧಸತ್ಯವನ್ನಷ್ಟೇ ಹೇಳಿದ್ದಾರೆ. ಸುಪ್ರೀಂಕೋರ್ಟ್ ಕೊಟ್ಟ ಆದೇಶಕ್ಕೆ ವ್ಯತಿರಿಕ್ತವಾಗಿ ನಡೆದುಕೊಂಡಿದ್ದೀರಿ. ಭ್ರಷ್ಟಾಚಾರ ನಡೆಸಿದ ಆರೋಪದ ಮೇಲೆಯೇ ಅದರ ತನಿಖೆಗೆ ಕೆಂಪಣ್ಣ ಆಯೋಗವನ್ನು ನೀವು ರಚಿಸಿದ್ದೀರಿ. ಬಂಡು ರಾಮಸ್ವಾಮಿ ಪ್ರಕರಣದಲ್ಲಿ 2010ರಲ್ಲಿ ತೀರ್ಪು ಕೊಡಲಾಗಿತ್ತು. 4 ವರ್ಷ ವರದಿಯನ್ನೂ ಕೊಡದೇ ಈಗ ನೀವು ಬೇಕಾಬಿಟ್ಟಿ 880 ಎಕರೆಗೂ ಹೆಚ್ಚು ಡಿನೋಟಿಫಿಕೇಶನ್ ಮಾಡಿದ್ದೀರಿ ಎಂದು ಆಕ್ಷೇಪಿಸಿದರು.
ಆ ಪ್ರಕರಣದಲ್ಲಿ ಗ್ರೀನ್ ಬೆಲ್ಟ್ ಇದ್ದರೆ, ಶಿಕ್ಷಣ ಸಂಸ್ಥೆಗಳಿದ್ದರೆ, ಚಾರಿಟೇಬಲ್ ಸಂಸ್ಥೆ ನಡೆಸುತ್ತಿದ್ದರೆ, ಸ್ಮಶಾನ ಇದ್ದರೆ, ನರ್ಸರಿ ಇದ್ದರೆ, ಕಟ್ಟಡಗಳಾಗಿ ಅಭಿವೃದ್ಧಿ ಆಗಿದ್ದರೆ, ಬಿಡಿಎ ಬಡಾವಣೆಗೆ ಸಂಪರ್ಕವೇ ಇಲ್ಲದಿದ್ದರೆ ಅದು ಕೇವಲ 6 ಗ್ರಾಮಕ್ಕೆ ಮಾತ್ರ ಡಿನೋಟಿಫಿಕೇಶನ್ ಪರಿಗಣನೆ ಎಂದು ತಿಳಿಸಿದ್ದಾರೆ.
ಕೆಂಪಾಪುರ, ಶ್ರೀರಾಮಪುರ, ವೆಂಕಟೇಶಪುರ, ನಾಗವಾರ, ಹೆಣ್ಣೂರು ಮತ್ತು ಚಳ್ಳಕೆರೆ ಅದರಡಿ 6 ಗ್ರಾಮಗಳು. ನೀವು ಅದನ್ನು ಬಿಟ್ಟು 16 ಹಳ್ಳಿಗಳಿಗೆ ಸಂಬಂಧಿಸಿದ, ಬಿಡಿಎ ಅಭಿವೃದ್ಧಿಪಡಿಸಿ, ಲೇಔಟ್ ಮಾಡಿ ನಿವೇಶನ ಹಂಚಿದ್ದ ಪ್ರದೇಶವನ್ನೂ ಡಿನೋಟಿಫಿಕೇಶನ್ ಮಾಡಿದ್ದೀರಿ. ನಿವೇಶನಕ್ಕೆ ಹಣ ಕಟ್ಟಿಸಿಕೊಂಡು ಲೀಸ್ ಕಮ್ ಸೇಲ್ ಡೀಡ್ ಮಾಡಿಕೊಂಡು ಆಗಿತ್ತು. ಅದನ್ನೂ ಡಿನೋಟಿಫಿಕೇಶನ್ ಮಾಡಿ ನಿವೇಶನ ಹಂಚಿಕೆದಾರರು ನಿವೇಶನಕ್ಕಾಗಿ ಅಲೆದಾಡುತ್ತಿದ್ದಾರೆ. ಅವರಿಗೆ ಕೆಂಪೇಗೌಡ ಬಡಾವಣೆ, ಬೇರೆ ಬಡಾವಣೆ ತೋರಿಸುತ್ತಿದ್ದೀರಿ. ಅವರು ಅರ್ಕಾವತಿ ಬಡಾವಣೆಗೆ ಹಣ ಕಟ್ಟಿದ್ದರು. ಇದರಲ್ಲಿ ಯಾರ ಹಿತಾಸಕ್ತಿ ರಕ್ಷಿಸಿದ್ದೀರಿ ಎಂದು ಪ್ರಶ್ನಿಸಿದರು.ಇದನ್ನೂ ಓದಿ: ಮುನಿರತ್ನ ವಿರುದ್ಧ ಸರ್ಕಾರ ಪೂರ್ವಾಗ್ರಹಪೀಡಿತ ದ್ವೇಷದ ರಾಜಕಾರಣ ಮಾಡ್ತಿದೆ: ಸಿ.ಟಿ.ರವಿ