ಬೆಂಗಳೂರು: ಮುನಿರತ್ನ (Munirathna) ವಿರುದ್ಧ ಸರ್ಕಾರ ಪೂರ್ವಾಗ್ರಹಪೀಡಿತ, ದ್ವೇಷದ ರಾಜಕಾರಣ ಮಾಡ್ತಿದೆ. ಅವರನ್ನು ರಾಜಕಾರಣದಿಂದಲೇ ಬದಿಗೆ ಸರಿಸಬೇಕೆಂದು ಸಂಚು ನಡೆಸಿದೆ ಎಂದು ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ (C.T Ravi) ಆರೋಪಿಸಿದ್ದಾರೆ.
ಬಿಜೆಪಿ (BJP) ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆ ಬಳಿಕ ಮಾತನಾಡಿದ ಅವರು, ಸರ್ವಾಧಿಕಾರಿ, ದ್ವೇಷಪೂರಿತವಾಗಿ ಸರ್ಕಾರ ನಡೆದುಕೊಳ್ಳುತ್ತಿದೆ. ಈ ಬಗ್ಗೆಯೂ ಕೋರ್ ಕಮಿಟಿ ಗಂಭೀರವಾಗಿ ಚರ್ಚೆ ನಡೆಸಿದೆ. ಸರ್ಕಾರ ಮುನಿರತ್ನ ವಿರುದ್ಧ ತನಿಖೆಗೆ ಮೇಲೆ ಎಸ್ಐಟಿ ರಚನೆ ಮಾಡಿದೆ. ಕಾಂಗ್ರೆಸ್ ನಾಯಕರ ಮೇಲೂ ಈ ರೀತಿ ಆರೋಪಗಳು ಕೇಳಿಬಂದಾಗ ಏನು ಕ್ರಮ ಕೈಗೊಂಡಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಮೈದಾನದ ಗೇಟ್ ಬಿದ್ದು ಮಗು ಸಾವು – ತನಿಖೆ ನಡೆಸುವಂತೆ ಬಿಬಿಎಂಪಿ ಕಮಿಷನರ್‌ಗೆ ಗುಂಡೂರಾವ್ ಸೂಚನೆ
ಕೋರ್ ಕಮಿಟಿಯಲ್ಲಿ ಮೂರು ವಿಧಾನಸಭೆ ಉಪಚುನಾವಣೆಗೆ ಸಂಬಂಧಪಟ್ಟಂತೆ ಚರ್ಚೆ ನಡೆಸಿದ್ದೇವೆ. ಅಭ್ಯರ್ಥಿ ಆಯ್ಕೆಗೆ ಸಂಬಂಧಪಟ್ಟಂತೆ ಜೆಡಿಎಸ್ ಜೊತೆ ಚರ್ಚಿಸಿ ನಿರ್ಣಯ ಮಾಡಲು ಕೋರ್ ಕಮಿಟಿ ತೀರ್ಮಾನಿಸಿದೆ. ಅಲ್ಲದೇ ದಕ್ಷಿಣ ಕನ್ನಡ-ಉಡುಪಿ ಪರಿಷತ್ ಉಪಚುನಾವಣೆಗೆ ಸಂಬಂಧಪಟ್ಟಂತೆ ಅಭ್ಯರ್ಥಿ ಆಯ್ಕೆ ಚರ್ಚೆ ಆಗಿದೆ. ಹೆಸರು ಶಿಫಾರಸ್ಸು ಮಾಡಲು ರಾಜ್ಯಾಧ್ಯಕ್ಷರಿಗೆ ಅಧಿಕಾರ ನೀಡಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಸಭೆಯಲ್ಲಿ ಪ್ರಸಕ್ತ ವಿದ್ಯಮಾನಗಳ ಬಗ್ಗೆಯೂ ಚರ್ಚೆ ಮಾಡಿದ್ದೇವೆ. ಗಣೇಶ ಮೆರವಣಿಗೆ ವೇಳೆ ಆಗುತ್ತಿರುವ ಗಲಾಟೆಗಳು, ಸರ್ಕಾರದ ಹಿಂದೂ ವಿರೋಧಿ ನೀತಿ ಬಗ್ಗೆಯೂ ಚರ್ಚೆ ನಡೆಸಿದ್ದೇವೆ. ವಿಪಕ್ಷಗಳ ಮೇಲೆ ಸರ್ಕಾರ ಸರ್ವಾಧಿಕಾರಿ ಹಾಗೂ ದ್ವೇಷದ ರಾಜಕೀಯದಿಂದ ನಡೆದುಕೊಳ್ಳುತ್ತಿದೆ. ಇದರ ವಿರುದ್ಧ ಜನಾಂದೋಲನ ರೂಪಿಸುವ ಬಗ್ಗೆ ಚರ್ಚೆ ಮಾಡಿದ್ದೇವೆ ಎಂದಿದ್ದಾರೆ. ಇದನ್ನೂ ಓದಿ: MUDA Scam | ಸಿಎಂಗೆ ಬಿಗ್ ಡೇ – ಪ್ರಾಸಿಕ್ಯೂಷನ್ ಭವಿಷ್ಯ ನಾಳೆ ನಿರ್ಧಾರ
ಬೆಂಗಳೂರು: ಮುನಿರತ್ನ ಕೇಸ್‌ನಲ್ಲಿ (Munirathna Case) ಎಸ್‌ಐಟಿ (SIT) ರಚನೆಗೆ ಕಾಂಗ್ರೆಸ್ ನಾಯಕರು ಒತ್ತಾಯ ಮಾಡಿರುವ ಕುರಿತು ನನಗೆ ಮಾಹಿತಿಯಿಲ್ಲ ಎಂದು ಡಿಸಿಎಂ ಡಿಕೆಶಿವಕುಮಾರ್ (DCM DK Shivakumar)ಪ್ರತಿಕ್ರಿಯಿಸಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ (Congress) ನಾಯಕರು ಶಾಸಕ ಮುನಿರತ್ನ ಕೇಸ್‌ನಲ್ಲಿ ಎಸ್‌ಐಟಿ ರಚನೆ ಮಾಡುವಂತೆ ಒತ್ತಾಯ ಮಾಡಿರುವ ಕುರಿತು ನನಗೆ ಮಾಹಿತಿಯಿಲ್ಲ ಎಂದರು.ಇದನ್ನೂ ಓದಿ: ಮಂಡ್ಯದಲ್ಲಿ ಗಣೇಶ ವಿಸರ್ಜನೆ ವೇಳೆ ಚಾಕು ಇರಿತ
ಅಶೋಕ್ ವಿರುದ್ಧವೂ ನಡೆದ ಷಡ್ಯಂತ್ರದ ಬಗ್ಗೆ ನನಗೆ ದಿಗ್ಬ್ರಮೆ ಆಗಿದೆ. ಪ್ರಪಂಚದಲ್ಲಿ ಈ ರೀತಿಯ ಸಂಚು ನಾವು ಕೇಳಿರಲಿಲ್ಲ. ಅಶೋಕ್ ಪ್ರಾರಂಭದ ಮಾತು ನೋಡಿದ್ದೇನೆ. ಎರಡನೇ ಮಾತು ನಾನು ನೋಡಿಲ್ಲ. ಅಶೋಕಣ್ಣ, ಸಿಟಿ ರವಿ ಅಣ್ಣ, ವಿಜಯೇಂದ್ರ ಅಣ್ಣ, ಕುಮಾರಸ್ವಾಮಿ, ಡಾ.ಮಂಜುನಾಥ್ ಮೊದಲು ಮಾತಾಡಲಿ. ಅವರ ಅಭಿಪ್ರಾಯ ಸತ್ಯಾಸತ್ಯತೆ ಏನಿದೆ ಎಂದು ಅವರು ಪರಿಶೀಲನೆ ಮಾಡಿಕೊಂಡು ತಿಳಿಸಲಿ. ಅವರು ಇದಕ್ಕೆ ಉತ್ತರ ಕೊಡಬೇಕು.
ಇದೇ ವೇಳೆ ವಿಜಯೇಂದ್ರ, ಅಶ್ವಥ್ ನಾರಾಯಣ ಹೇಳಿಕೆ ವಿಚಾರವಾಗಿ ಮಾತನಾಡಿದ ಅವರು, ನಮ್ಮದು ಸೇಡಿನ ರಾಜಕೀಯ ಎಂದು ಹೇಳಿಕೆ ನೀಡಿದ್ದರು. ನನ್ನನ್ನು ಅವರು ನೆನಪಿಸಿಕೊಳ್ಳುತ್ತಿರಲಿ. ದಿನಾ ನೆನಪು ಮಾಡಿಕೊಳ್ಳಲಿ. ಇಷ್ಟು ಆದರೂ ಮುನಿರತ್ನ ಅವರನ್ನು ಬಿಜೆಪಿ ಅವರು ಸಮರ್ಥನೆಗೆ ನಿಂತಿರುವುದು ಎಂದು ಜನರಿಗೆ ಅರ್ಥ ಆಗಬೇಕಿದೆ ಎಂದು ಬಿಜೆಪಿ (BJP) ನಾಯಕರ ವಿರುದ್ಧ ಡಿಕೆಶಿವಕುಮಾರ್ ಕಿಡಿಕಾರಿದರು.ಇದನ್ನೂ ಓದಿ: ದರೋಡೆ ಗ್ಯಾಂಗ್ ಜೊತೆ ಕೈಜೋಡಿಸಿ 9 ಲಕ್ಷ ಪಡೆದಿದ್ದ ಪೊಲೀಸ್ – ಹೆಡ್ ಕಾನ್ಸ್‌ಟೇಬಲ್ ಸೇರಿ 7 ಮಂದಿ ಅರೆಸ್ಟ್
ಬೆಂಗಳೂರು: ಶಾಸಕ ಮುನಿರತ್ನ (Munirathna) ತಪ್ಪು ಮಾಡಿದ್ರೆ ಕಾನೂನು ಪ್ರಕಾರ ತನಿಖೆಯಾಗಿ ಶಿಕ್ಷೆ ಆಗಲಿ. ಆದರೆ ಈ ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಟಾರ್ಗೆಟ್ ರಾಜಕೀಯ ಮಾಡ್ತಿದೆ ಎಂದು ಜೆಡಿಎಸ್ (JDS) ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ (Nikhil Kumaraswamy) ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ನಗರದ ಜೆಪಿ ಭವನದಲ್ಲಿ ಮಾತನಾಡಿದ ಅವರು, ಮುನಿರತ್ನ ಕೇಸ್ ವಿಚಾರವಾಗಿ ತನಿಖೆ ಆಗುತ್ತಿದೆ. ತನಿಖೆ ನಡೆಯುವ ಸಮಯದಲ್ಲಿ ಮಾತನಾಡುವುದು ಸರಿಯಲ್ಲ. ತನಿಖೆಯಾಗಲು ಸತ್ಯಾಸತ್ಯತೆ ಹೊರಗೆ ಬರಲಿ. ಕಾನೂನಿಗಿಂತ ಯಾರು ದೊಡ್ಡವರು ಅಲ್ಲ. ನೆಲದ ಕಾನೂನಿಗೆ ಎಲ್ಲರೂ ತಲೆ ಬಾಗಲೇಬೇಕು ಎಂದು ಪ್ರತಿಕ್ರಿಯಿಸಿದರು.ಇದನ್ನೂ ಓದಿ: ತಿರುಪತಿ ಲಡ್ಡು ವಿಚಾರ ತನಿಖೆ ಆಗಲಿ: ಎಂ.ಬಿ ಪಾಟೀಲ್
ಪರಶುರಾಮ್ ಕೇಸ್‌ನ್ನು ಮುಚ್ಚಿ ಹಾಕಲು ಸರ್ಕಾರ ಹೇಗೆ ಪ್ರಯತ್ನ ಮಾಡಿತ್ತು ಎಂದು ಎಲ್ಲರಿಗೂ ಗೊತ್ತಿದೆ. ವಾಲ್ಮೀಕಿ ಹಗರಣ ಕೇಸ್‌ನಲ್ಲಿ ನಾಗೇಂದ್ರ ವಿಚಾರಕ್ಕೆ ಸಂಬಂಧಿಸಿದಂತೆ ಈ ಸರ್ಕಾರ ಹೇಗೆ ತನಿಖೆ ಮಾಡಿತು ಎಂದು ಜಗಜ್ಜಾಹೀರಾಗಿದೆ. ಮುನಿರತ್ನ ವಿಚಾರದಲ್ಲಿ ಎಫ್‌ಎಸ್‌ಎಲ್ ವರದಿ ಬರಬೇಕು. ಅವರ ಧ್ವನಿಯೋ ಅಲ್ಲವೋ ಎಂದು ತಿಳಿಯಬೇಕು. ಮುನಿರತ್ನ ಅವರನ್ನು ತರಾತುರಿಯಲ್ಲಿ ಬಂಧನ ಮಾಡಿದ್ದಾರೆ. ಇದನ್ನು ನೋಡಿದರೆ ರಾಜ್ಯ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡುತ್ತಿದೆ ಎಂದು ಅನ್ನಿಸುತ್ತಿದೆ ಎಂದರು.
ಸರ್ಕಾರ ತಮ್ಮ ತಪ್ಪು ಮುಚ್ಚಿಕೊಳ್ಳಲು ಬೇರೆ ಅವರ ಮೇಲೆ ತಪ್ಪು ಹೊರಿಸುವ ಕೆಲಸ ಮಾಡುತ್ತಿರುವುದು ಜಗಜ್ಜಾಹೀರಾಗಿದೆ. ಸ್ವಾತಂತ್ರ‍್ಯ ಬಂದಾಗಿನಿಂದ ಅನೇಕ ಸರ್ಕಾರಗಳು ಕೆಲಸ ಮಾಡಿವೆ ಆದರೆ ಈ ಸರ್ಕಾರ ಟಾರ್ಗೆಟ್ ರಾಜಕೀಯ ಮಾಡಿಕೊಂಡು, ದ್ವೇಷದ ರಾಜಕೀಯ ಮಾಡಿಕೊಂಡು ಹೊರಟಿದ್ದಾರೆ. ಇದನ್ನು ರಾಜ್ಯದ ಜನರು ಮೆಚ್ಚುವುದಿಲ್ಲ ಎಂದು ಸರ್ಕಾರದ ನಡೆಗೆ ಅಸಮಾಧಾನ ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದಾಗಿನಿಂದ ಜಾತಿ ಆಧಾರದಲ್ಲಿ ರಾಜಕೀಯ ಮಾಡುವ ಪ್ರಯತ್ನ ಮಾಡುತ್ತಿದೆ. ಇಲ್ಲಿ ಒಕ್ಕಲಿಗ ಟ್ಯಾಗ್, ಓಬಿಸಿ ಟ್ಯಾಗ್, ಲಿಂಗಾಯತರ ಟ್ಯಾಗ್, ಮುಸ್ಲಿಂ ಟ್ಯಾಗ್ ಹಾಕಿ ರಾಜಕೀಯ ಮಾಡುವುದು ಸೂಕ್ತ ಅಲ್ಲ. ಯಾವುದೋ ಸಮುದಾಯ ಒಲೈಕೆ ಮಾಡಿಕೊಳ್ಳಲು ಈ ರೀತಿ ಟಾರ್ಗೆಟ್ ರಾಜಕೀಯ ಮಾಡುತ್ತಿದ್ದಾರೆ. ಇವೆಲ್ಲ ಬಿಟ್ಟು ಮೂರು ಮುಕ್ಕಾಲು ವರ್ಷ ಸಮಯ ಇದೆ. ಜನ ಅಧಿಕಾರ ಮಾಡಲು ಅವಕಾಶ ಕೊಟ್ಟಿದ್ದಾರೆ. ಇದರ ಬಗ್ಗೆ ಸರ್ಕಾರ ಗಮನ ಕೊಡಲಿ. ಸರ್ಕಾರ ಬಂದೂ ಇಷ್ಟು ದಿನ ಆದರೂ ಯಾವುದೇ ಅಭಿವೃದ್ಧಿ ಕೆಲಸ ಆಗಿಲ್ಲ. ಈ ಸರ್ಕಾರದ ವಿರುದ್ಧ ಆಡಳಿತ ವಿರೋಧಿ ಅಲೆ ಶುರುವಾಗಿದೆ. ನಾಳೆ ಚುನಾವಣೆ ನಡೆದರೆ ಕಾಂಗ್ರೆಸ್ ಸರ್ಕಾರವನ್ನ ರಾಜ್ಯದ ಜನ ತಿರಸ್ಕಾರ ಮಾಡುತ್ತಾರೆ. ಆ ಮಟ್ಟದ ವಾತಾವರಣ ಸರ್ಕಾರದ ವಿರುದ್ದ ಇದೆ. ಅವರ ತಪ್ಪು ಮುಚ್ಚಿಕೊಳ್ಳಲು ನಿತ್ಯ ಹಗರಣಗಳು, ಅಕ್ರಮಗಳು ನಡೆಯುತ್ತಿವೆ. ನಾವು ವಿರೋಧ ಪಕ್ಷವಾಗಿ ಪ್ರಜಾಪ್ರಭುತ್ವದಲ್ಲಿ ನಮಗೆ ಹಕ್ಕು ಕೊಟ್ಟಿದ್ದಾರೆ. ಅದನ್ನು ಬಯಲಿಗೆ ಎಳೆಯೋದೇ ತಪ್ಪಾ ಎಂದು ಪ್ರಶ್ನೆ ಮಾಡಿದರು.ಇದನ್ನೂ ಓದಿ: ಬಿಬಿಎಂಪಿ ಅಧಿಕಾರಿಗಳು ಹಗಲು-ರಾತ್ರಿ ಗುಂಡಿ ಮುಚ್ಚೋ ಕೆಲಸ ಮಾಡ್ತಿದ್ದಾರೆ: ಡಿಕೆಶಿ
ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ (Munirathna) ಅವರ ವಿರುದ್ಧ ದಾಖಲಾಗಿರುವ ಅತ್ಯಾಚಾರ ಪ್ರಕರಣದ ತನಿಖೆ ನಡೆಸಲು ಎಸ್‌ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಬಿ.ಕೆ ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (SIT) ರಚಿಸಿ ಆದೇಶ ಹೊರಡಿಸಿದೆ. ಇದನ್ನೂ ಓದಿ: ಇಡೀ ರಾಜ್ಯಕ್ಕೆ ಬೆಳಕು ನೀಡುವ ರಾಯಚೂರಿನಲ್ಲೇ ಬೆಳಕಿಲ್ಲ – ಸಾರ್ವಜನಿಕರಿಂದ ತೀವ್ರ ಆಕ್ರೋಶ
ಶುಕ್ರವಾರವಷ್ಟೇ ಬಂಧಿಸಿದ್ದ ಪೊಲೀಸರು:
ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಶುಕ್ರವಾರ ಬಂಧಿಸಿದ್ದರು. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಒಂದು ಪ್ರಕರಣದಲ್ಲಿ ಜಾಮೀನು ಪಡೆದು ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಹೊರಬರುತ್ತಿದ್ದಂತೆ ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚುತ್ತಿರುವ ಹೃದಯಾಘಾತ – 4 ದಿನಗಳಲ್ಲಿ 4 ಸಾವು
ಬೆಂಗಳೂರು: ಮುನಿರತ್ನ (Munirathna) ವಿರುದ್ಧದ ಪ್ರಕರಣಗಳನ್ನ SITಗೆ (ವಿಶೇಷ ತನಿಖಾ ತಂಡ) ವಹಿಸುವಂತೆ ಒಕ್ಕಲಿಗ ಸಚಿವರು, ಶಾಸಕರ ನಿಯೋಗ ಮನವಿ ಸಲ್ಲಿಸಿದೆ. ಕಾವೇರಿ ನಿವಾಸದಲ್ಲಿ ಸಿಎಂ ಸಿದ್ದರಾಮಯ್ಯ ಭೇಟಿಯಾ ಒಕ್ಕಲಿಗ ಸಚಿವರು (Vokkaliga Ministers), ಶಾಸಕರ ನಿಯೋಗ ಮನವಿ ಸಲ್ಲಿಸಿದೆ. ಸಚಿವ ಚಲುವರಾಯಸ್ವಾಮಿ ಸಚಿವ ಕೃಷ್ಣಬೈರೇಗೌಡ, ಸಚಿವ ಸುಧಾಕರ್, ಶಾಸಕ ಶರತ್ ಬಚ್ಚೇಗೌಡ, ಕುಣಿಗಲ್ ರಂಗನಾಥ್ ಸೇರಿ ಹಲವರು ನಿಯೋಗದಲ್ಲಿ ಇದ್ದರು.
ಇದೇ ವೇಳೆ ಮಾಜಿ ಸಿಎಂ ಹೆಚ್‌ಡಿಕೆ (HD Kumaraswamy) ವಿರುದ್ಧವೂ ಎಸ್‌ಐಟಿ ಅಸ್ತ್ರ ಪ್ರಯೋಗಕ್ಕೆ ಪ್ಲ್ಯಾನ್ ಮಾಡಿದ್ದು, ಸಿಎಂ ಭೇಟಿ ವೇಳೆ ಹೆಚ್‌ಡಿಕೆ ವಿರುದ್ಧವೂ ಎಸ್‌ಐಟಿ ತನಿಖೆಗೆ ಒಕ್ಕಲಿಗ ಸಚಿವರು, ಶಾಸಕರ ನಿಯೋಗ ಮನವಿ ಮಾಡಿದೆ. ಸಿಎಂ ಭೇಟಿ ಬಳಿಕ ಮಾತನಾಡಿದ ಸಚಿವ ಚಲುವರಾಯಸ್ವಾಮಿ, ನಿನ್ನೆ ರಾತ್ರಿ ಶಾಸಕರು, ಮುಂಖಂಡರು ಸಭೆ ಮಾಡಿದ್ವಿ. ಮತ್ತೊಂದು ಸಭೆ ಮಾಡಲು ತೀರ್ಮಾನ ಮಾಡಿದ್ದೇವೆ. ಬಿಜೆಪಿ, ಜೆಡಿಎಸ್ ಒಕ್ಕಲಿಗ ನಾಯಕರು ಶಾಸಕ ಮುನಿರತ್ನ ಪರ ನಿಂತಿದ್ದಾರೆ. ಇದು ನಮಗೆ ಬಹಳ ನೋವು ತಂದಿದೆ ಎಂದಿದ್ದಾರೆ. ಇದನ್ನೂ ಓದಿ: ಚಲಿಸುತ್ತಿದ್ದಾಗಲೇ BMTC ಬಸ್ ಚಾಲಕನಿಗೆ ಹೃದಯಾಘಾತ – ಟ್ರಾಫಿಕ್ ಪೊಲೀಸರ ಸಮಯ ಪ್ರಜ್ಞೆಯಿಂದ ಬಚಾವ್!
ಸಮಾಜದ ಪರ ನಿಲ್ಲದೇ ಇರೋದಕ್ಕೆ ನೋವು ತಂದಿದೆ. ಇದನ್ನು ಜನರ ಬಳಿ ತೆಗೆದುಕೊಂಡು ಹೋಗಬೇಕು ಅಂತೇಳಿದ್ರು. ಮುನಿರತ್ನ ವಿರುದ್ಧ ಕೂಡ ಎಸ್‌ಐಟಿ ತನಿಖೆಯಾಗಬೇಕು. ಈ ಬಗ್ಗೆ ಸಿಎಂಗೆ ಮನವಿ ಮಾಡಿದ್ದೇವೆ. ಈಗ ಒಳ್ಳೆಯ ಕೆಲಸಕ್ಕಿಂತ ತನಿಖೆಯಾಗುವುದು ಬಹಳ ಮುಖ್ಯ. ಚುಂಚನಗಿರಿ ಶ್ರೀಗಳ ನೇತೃತ್ವದಲ್ಲಿ ಹೋರಾಟ ಮಾಡಲು ಚಿಂತನೆ ನಡೆಸಿದ್ದೇವೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಹಿಜ್ಬುಲ್ಲಾದ 100 ರಾಕೆಟ್ ಲಾಂಚರ್ ಉಡೀಸ್ – ಪ್ರತೀಕಾರದ ದಾಳಿಗೂ ಮುನ್ನವೇ ಪೆಟ್ಟುಕೊಟ್ಟ ಇಸ್ರೇಲ್
ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡಿದ್ದ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ (Munirathna) ಅವರನ್ನು ಅತ್ಯಾಚಾರ ಪ್ರಕರಣದಲ್ಲಿ ಕಗ್ಗಲಿಪುರ ಪೊಲೀಸರು (kaggalipura Police) ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿ ಕಗ್ಗಲಿಪುರ ಪೊಲೀಸರು ಬಂಧಿಸಿ ಕರೆದೊಯ್ದಿದ್ದು, ಇಂದಿನಿಂದ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಲಿದ್ದಾರೆ. ಜಾತಿನಿಂದನೆ ಪ್ರಕರಣದಲ್ಲಿ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಅದರಂತೆ ಇಂದು (ಶುಕ್ರವಾರ) ಮುನಿರತ್ನ ಅವರು ಜೈಲಿನಿಂದ ಹೊರಬಂದ ತಕ್ಷಣವೇ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಬಡ್ಡಿ ಸಮೇತ ತೀರಿಸದಿದ್ದರೆ ನಾನು ದೇವೇಗೌಡರ ಮಗನೇ ಅಲ್ಲ – ಹೆಚ್.ಡಿ ರೇವಣ್ಣ ಸವಾಲ್
ಮಾಗಡಿ ಡಿವೈಎಸ್ಪಿ ಪ್ರವೀಣ್ ಹಾಗೂ ರಾಮನಗರ ಡಿವೈಎಸ್ಪಿ ದಿನಕರ್ ಶೆಟ್ಟಿ ನೇತೃತ್ವದ ತಂಡ ಬಿಗಿ ಭದ್ರತೆಯಲ್ಲಿ ಶಾಸಕ ಮುನಿರತ್ನ ಅವರನ್ನ ಬಂಧಿಸಿದೆ. 7 ಜೀಪುಗಳು, ಒಂದು ಮೀಸಲು ಪಡೆಯ ವಾಹನ ಭದ್ರತೆಯೊಂದಿಗೆ ಪರಪ್ಪನ ಅಗ್ರಹಾರದಲ್ಲಿ ಬಂಧಿಸಲಾಯಿತು. ಮಾರ್ಗಮಧ್ಯದಲ್ಲೇ ವೈದ್ಯಕೀಯ ತಪಾಸಣೆ ಮುಗಿದ ಬಳಿಕ ಪೊಲೀಸರು ಠಾಣೆಗೆ ಕರೆದೊಯ್ದು ವಿಚಾರಣೆ ನಡೆಸಲಿದ್ದಾರೆ. ವಿಚಾರಣೆ ನಂತರ ಸಂಜೆ ವೇಳೆಗೆ ನ್ಯಾಯಾಧೀಶರ ಮುಂದೆ ಹಾಜರು ಪಡಿಸಲಿದ್ದಾರೆ ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಒಂದು ಇಂದಿರಾ ಕ್ಯಾಂಟೀನ್ ಬಂದ್ – ಅಕ್ರಮ ಚಟುವಟಿಕೆಗಳ ತಾಣವಾದ ಕ್ಯಾಂಟೀನ್
ಏನಿದು ಪ್ರಕರಣ?
ಶಾಸಕ ಮುನಿರತ್ನ ಸೇರಿದಂತೆ ಒಟ್ಟು 7 ಆರೋಪಿಗಳ ವಿರುದ್ಧ ಬುಧವಾರ ಸಂಜೆ ರಾಮನಗರ ಜಿಲ್ಲೆಯ ಕಗ್ಗಲೀಪುರ ಠಾಣೆಯಲ್ಲಿ ಅತ್ಯಾಚಾರ ಕೇಸ್ ದಾಖಲಾಗಿತ್ತು. ಕಗ್ಗಲೀಪುರದ ಖಾಸಗಿ ರೆಸಾರ್ಟ್ನಲ್ಲಿ (Private Resort) ಅತ್ಯಾಚಾರ ನಡೆದಿರುವುದಾಗಿ 40 ವರ್ಷ ವಯಸ್ಸಿನ ಮಹಿಳೆಯೊಬ್ಬರು ದೂರು ದಾಖಲಿಸಿದ್ದರು. ದೂರಿನ ಅನ್ವಯ ಪೊಲೀಸರು Information Technology Act 2000, ಐಪಿಸಿ ಸೆಕ್ಷನ್ 354ಎ, 354ಸಿ, 376, 506, 504, 120(ಬಿ), 149, 384, 406, 308 ಅಡಿಯಲ್ಲಿ ಕೇಸ್ ದಾಖಲಿಸಿದ್ದರು. ಮುನಿರತ್ನ ನಾಯ್ಡು (ಎ1), ವಿಜಯ್ ಕುಮಾರ್ (ಎ2), ಸುಧಾಕರ (ಎ3), ಕಿರಣ್ ಕುಮಾರ್ (ಎ4), ಲೋಹಿತ್ ಗೌಡ (ಎ5), ಮಂಜುನಾಥ (ಎ6), ಲೋಕಿ (ಎ7) ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿತ್ತು. ಇದನ್ನೂ ಓದಿ: ಟ್ರೈನಿ ವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣ – 41 ದಿನಗಳ ಬಳಿಕ ವೈದ್ಯರ ಮುಷ್ಕರ ವಾಪಸ್
ಬೆಂಗಳೂರು: ಜಾತಿನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಜಾಮೀನು ಸಿಕ್ಕಿದೆ.
ಬುಧವಾರ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಎರಡು ಲಕ್ಷ ರೂ. ಬಾಂಡ್, ಇಬ್ಬರು ಶ್ಯೂರಿಟಿ, ಪೊಲೀಸರು ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ.
ಜಾಮೀನು ಸಿಕ್ಕಿದರೂ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮುನಿರತ್ನ ಅವರನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ.
ಬುಧವಾರ ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದ್ದರು. ಇದನ್ನೂ ಓದಿ: ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಅತ್ಯಾಚಾರ ಕೇಸ್ ದಾಖಲು
ಈಗ ಜನಾಂಗಿಯ ನಿಂದನೆ, ಪ್ರಚೋದನೆ ಎಂದೆಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗುವುದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು. ಇಲ್ಲಿ ಚಲುವರಾಜುನೇ ನಿಜವಾದ ಆರೋಪಿ ಎಂದು ವಾದ ಮಂಡಿಸಿದ್ದರು.
ರಾಜಕೀಯ ಕಾರಣಕ್ಕಾಗಿಯೇ ಮುನಿರತ್ನ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈಗಾಗಲೇ ಆರೋಪಿಯ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಆಗಿದೆ. ಸಾಕ್ಷಿದಾರರ ಹೇಳಿಕೆಯೂ ದಾಖಲಾಗಿದೆ. ಈಗ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜಾಮೀನು ನೀಡಬಹುದು ಎಂದು ವಕೀಲರು ಕೋರಿದ್ದರು.
ಬೆಂಗಳೂರು: ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೀತಾ ಇದೆ. ಸಿದ್ದರಾಮಯ್ಯ (CM Siddaramaiah) ಅವರು ಹಿಟ್ಲರ್ ಆಗಿದ್ದಾರೆ. ಸರ್ಕಾರ ನನ್ನ ವಿರುದ್ಧವೂ ಎಫ್‌ಐಆರ್ ದಾಖಲಿಸಿದೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರಿಸ್ತೀವಿ ಎಂದು ನಾಗಮಂಗಲ ಗಲಭೆ ವಿಚಾರವಾಗಿ ಎಫ್‌ಐಆರ್ ದಾಖಲಿಸಿರುವ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ (Shobha Karandlaje) ಕಿಡಿಕಾರಿದ್ದಾರೆ.
ಬಿಜೆಪಿ (BJP) ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಗಮಂಗಲ ಗಲಭೆ ವಿಚಾರವಾಗಿ ನನ್ನ ಮೇಲೆ ಎಫ್‌ಐಆರ್ (FIR) ದಾಖಲಿಸಿದ್ದಾರೆ. ಸರ್ಕಾರ ದ್ವೇಷದ ರಾಜಕೀಯ ಮಾಡುವುದು ಬೇಡ, ಎಫ್‌ಐಆರ್ ಹಾಕಿದೆ, ನಾವು ಎದುರಿಸ್ತೇವೆ. ಪೊಲೀಸರು ನಮ್ಮನ್ನು ಬಂಧಿಸಬಹುದು, ನಾವು ಬಂಧನಕ್ಕೆ ಒಳಗಾಗ್ತೇವೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರಿಸ್ತೀವಿ ಎಂದಿದ್ದಾರೆ.ಇದನ್ನೂ ಓದಿ: ಮೋದಿಯನ್ನ ಹಾವು, ಚೇಳು, ರಾಕ್ಷಸ ಎಂದೆಲ್ಲ ಕರೆದಿದ್ದಾರೆ – ಕೈ ನಾಯಕರ ಆಕ್ಷೇಪಾರ್ಹ ಹೇಳಿಕೆ ಪಟ್ಟಿ ರಿಲೀಸ್
ಬಿಜೆಪಿ ನಾಯಕರ ವಿರುದ್ಧ ಎಫ್‌ಐಆರ್ ದಾಖಲಿಸುವ ಕೆಲಸ ನಿರಂತರವಾಗಿ ನಡೀತಾ ಇದೆ. ಸಿದ್ದರಾಮಯ್ಯ ಅವರು ಹಿಟ್ಲರ್ ಆಗಿದ್ದಾರೆ. ಬಿಜೆಪಿ ನಾಯಕರು, ಕಾರ್ಯಕರ್ತರ ಧ್ವನಿ ಅಡಗಿಸುವ, ಹತ್ತಿಕ್ಕುವ ಕೆಲಸ ಮಾಡ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಐವಾನ್ ಡಿಸೋಜಾ (Ivan D’Souza) ಅವರು ಬಾಂಗ್ಲಾ ಮಾದರಿಯ ಗಲಭೆ ಆಗುತ್ತದೆ ಎಂದಿದ್ದರು. ನಮ್ಮ ಕಾರ್ಯಕರ್ತರು ನಿತ್ಯ ಠಾಣೆಗೆ ಹೋಗ್ತಿದ್ರೂ ಐವಾನ್ ಡಿಸೋಜಾ ವಿರುದ್ಧ ದೂರು ತೆಗೆದುಕೊಳ್ಳಲಿಲ್ಲ. ಎಫ್‌ಐಆರ್ ದಾಖಲು ಮಾಡಿಕೊಳ್ಳಲಿಲ್ಲ. ನಾಗೇಂದ್ರ ವಿರುದ್ಧ ದೂರು ದಾಖಲು ಮಾಡಿಕೊಳ್ಳಲು ಹಿಂಜರಿದಿದ್ದರು. ಎಸ್‌ಐಟಿ ಚಾರ್ಜ್‌ಶೀಟ್‌ನಲ್ಲಿ ನಾಗೇಂದ್ರ ಅವರ ಹೆಸರೇ ಇಲ್ಲ, ಅವರು ಅಪರಾಧಿ ಅಲ್ಲ ಎಂದು ಹೇಳಿದ್ದಾರೆ. ಸಿದ್ದರಾಮಯ್ಯ ಅವರು ಏನು ಮಾಡಲು ಹೊರಟಿದ್ದಾರೆ? ಎಂದು ಆರೋಪಿಸಿದ್ದಾರೆ.
ಗಣಪತಿಯನ್ನೂ ಬಿಡದೇ ಅವಮಾನ ಮಾಡಿದ್ರು:
ನಾಗಮಂಗಲ ಗಲಭೆ ನಡೆಯಿತು, ಗಣಪತಿ ಮೂರ್ತಿ ಮೇಲೆ ಚಪ್ಪಲಿ, ಕಲ್ಲು ತೂರಾಟ ನಡೆಸಿದ್ದರು. ಕೇರಳದಿಂದ ಬಂದವರು ಅಲ್ಲಿ ಗಲಭೆ ಮಾಡಿದ್ದರು ಅಂತೆಲ್ಲಾ ಮಾಹಿತಿ ಬಂದಿದೆ. ಅವರೆಲ್ಲ ಯಾರು? ಯಾಕೆ ಬಂದಿದ್ದರು ಎಂದು ತನಿಖೆ ಮಾಡಿ. ನಾಗಮಂಗಲ ಗಲಭೆಯನ್ನು ಮುಚ್ಚಿ ಹಾಕಲು ಸರ್ಕಾರ ಮುಂದಾಗಿದೆ. ಗಣೇಶನನ್ನೂ ಬಿಡದೇ ಪೊಲೀಸ್ ವ್ಯಾನಿನಲ್ಲಿ ಬಂಧಿಸಿ ಅವಮಾನ ಮಾಡಿದ್ದಾರೆ. ಕೋಲಾರದಲ್ಲಿ ಪ್ಯಾಲೆಸ್ತೀನ್ ಧ್ವಜದ ಪ್ರದರ್ಶನ ಆಯ್ತು. ನಿನ್ನೆ ನಂದಿನಿ ಲೇಔಟ್‌ನಲ್ಲಿ ರಾಷ್ಟ್ರಧ್ವಜದಲ್ಲಿ ಅಶೋಕ ಚಕ್ರದ ಬದಲು ಖಡ್ಗ, ಉರ್ದು ಅಕ್ಷರದಿಂದ ಬರೆದು ಅಪಮಾನ ಆಗಿದೆ. ಇದು ದೇಶದ್ರೋಹತನ, ಈ ಧೈರ್ಯ ಸಮಾಜವಿರೋಧಿಗಳಿಗೆ ಹೇಗೆ ಬಂದಿದೆ ಆಗ್ರಹಿಸಿದರು.
ರಾಜ್ಯದಲ್ಲಿ ಟಿಪ್ಪು, ಔರಂಗಜೇಬನ ವೈಭವೀಕರಣ ಆಯ್ತು, ಯಾರೂ ಕೇಳಲಿಲ್ಲ. ಹನುಮಾನ್ ಚಾಲೀಸಾ ಪಠಣ ಮಾಡಿದರೇ ಹೊಡೀತಾರೆ. ನಾನು, ಅಶೋಕ್ ಏನು ತಪ್ಪು ಮಾಡಿದ್ವಿ? ನಮ್ಮ ವಿರುದ್ಧ ಯಾಕೆ ಎಫ್‌ಐಆರ್ ಹಾಕಿದ್ದೀರಿ? ನಿಮ್ಮ ಬಗ್ಗೆ ಮಾತಾಡಿದ್ದೆ ಎಫ್‌ಐಆರ್ ಹಾಕ್ತೀರಾ? ಯಾವ ಸಂವಿಧಾನ ರಕ್ಷಣೆ ಮಾಡಲು ಹೊರಟಿದ್ದೀರಿ? ನೀವು ನೂರು ಎಫ್‌ಐಆರ್ ಹಾಕಿ, ನಾವು ಹೆದರಿ ಓಡಿ ಹೋಗುವವರಲ್ಲ. ನಿಮ್ಮ ವಕೀಲರು ಹನುಮಾನ್ ಚಾಲೀಸಾ ಕೇಸ್ ಹಾಕಿ, ಕ್ಷಮೆ ಕೇಳಿ ಅಂದಿದ್ದರು. ನಾನು ಕ್ಷಮೆ ಕೇಳಿಲ್ಲ, ಕೇಸ್ ನಡೀತಿದೆ, ಸುಪ್ರೀಂ ಕೋರ್ಟ್‌ಗೆ ಹೋಗಲಿ. ಈಗಲೂ ಎಫ್‌ಐಆರ್ ಹಾಕಿದ್ದೀರಿ, ಜನ ನಿಮಗೆ ತಕ್ಕ ಪಾಠ ಕಲಿಸ್ತಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್‌ನಿಂದ ದ್ವೇಷರಾಜಕಾರಣ:
ದ್ವೇಷದ ರಾಜಕಾರಣ ಮಾಡುತ್ತಿರುವವರು ಕಾಂಗ್ರೆಸ್‌ನವರು (Congress). ಒಂದು ಸಮುದಾಯ ಓಲೈಕೆ ಮಾಡಲು ದ್ವೇಷದ ರಾಜಕಾರಣ ಮಾಡುತ್ತಿದ್ದಾರೆ. ಪೊಲೀಸ್ ಇಲಾಖೆಯನ್ನೂ ದುರ್ಬಳಕೆ ಮಾಡಿಕೊಳ್ತಿದ್ದಾರೆ. ಯಾವುದೋ ಒಂದು ಕಡೆ ಪಾಕ್ ಪರ ಘೋಷಣೆ ಕೂಗಿದ್ದಾರೆ. ರಾಜ್ಯದಲ್ಲೇ ಘೋಷಣೆ ಕೂಗಿದ್ದಾರೆ. ನಾನು ರಾಜ್ಯದಲ್ಲಿ ಕೂಗಿರುವ ವಿಡಿಯೋವನ್ನೇ ಟ್ವೀಟ್‌ನಲ್ಲಿ ಹಾಕಿರುವುದು. ಕರ್ನಾಟಕವನ್ನು ಬಾಂಗ್ಲಾದೇಶ ಮಾಡ್ತೀವಿ ಅನ್ನೋರ ವಿರುದ್ಧ ಕೇಸ್ ಹಾಕಿಲ್ಲ. ಇದ್ಯಾವ ನ್ಯಾಯ? ಘೋಷಣೆ ಕೂಗಿರೋದು ಹೌದು, ಇದರಲ್ಲಿ ಪ್ರಚೋದನೆ ಎಲ್ಲಿ ಬಂತು? ಎಂದರು.ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಜಾಮೀನಿನ ವಾದ-ಪ್ರತಿವಾದ ಮುಕ್ತಾಯ; ಆದೇಶ ಕಾಯ್ದಿರಿಸಿದ ನ್ಯಾಯಾಧೀಶರು
ಮುನಿರತ್ನ ತಪ್ಪು ಮಾಡಿದ್ದರೆ ಕ್ರಮ ಆಗಲಿ:
ಇದೇ ವೇಳೆ ಮುನಿರತ್ನ ಪ್ರಕರಣ ಬಗ್ಗೆ ಮಾತನಾಡಿದ ಅವರು, ತಪ್ಪು ಮಾಡಿದವರಿಗೆ ಶಿಕ್ಷೆ ಆಗುತ್ತೆ. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಅವರು ತಪ್ಪು ಮಾಡಿದ್ದರೆ ಕ್ರಮ ಆಗಲಿ. ನಾವು ತಪ್ಪು ಮಾಡಿದ ಯಾರನ್ನೂ ರಕ್ಷಣೆ ಮಾಡಲ್ಲ. ಆದರೆ ಸರ್ಕಾರ ದ್ವೇಷದ ರಾಜಕೀಯ ಮಾಡುವುದು ಬೇಡ. ಸರ್ಕಾರ ಎಫ್‌ಐಆರ್ ಹಾಕಿದೆ, ನಾವು ಎದುರಿಸ್ತೇವೆ. ಪೊಲೀಸರು ನಮ್ಮನ್ನು ಬಂಧಿಸಬಹುದು, ನಾವು ಬಂಧನಕ್ಕೆ ಒಳಗಾಗ್ತೇವೆ. ನಾವು ಹೋರಾಟ ಮಾಡಿಕೊಂಡು ಬಂದವರು, ಹೋರಾಟ ಮುಂದುವರೆಸ್ತೇವೆ ಎಂದಿದ್ದಾರೆ.
ಬೆಂಗಳೂರು: ಬಿಬಿಎಂಪಿ (BBMP) ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣ ಎದುರಿಸುತ್ತಿರುವ ಬಿಜೆಪಿ ಶಾಸಕ ಮುನಿರತ್ನ (MLA Munirathna) ವಿರುದ್ಧ ಮತ್ತೊಂದು ಕೇಸ್ ದಾಖಲಾಗಿದೆ.
ಜಾತಿ ನಿಂದನೆ ಕೇಸ್ ಭವಿಷ್ಯ ಇಂದು?
ಬಿಬಿಎಂಪಿ ಗುತ್ತಿಗೆದಾರನಿಗೆ ಕಿರುಕುಳ ನೀಡಿ ಜಾತಿ ನಿಂದನೆ ಆರೋಪ ಪ್ರಕರಣದಲ್ಲಿ ಜೈಲು ಪಾಲಾಗಿರುವ ಶಾಸಕ ಮುನಿರತ್ನ ಅವರ ಜಾಮೀನು ಅರ್ಜಿ ಆದೇಶವನ್ನು ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯ ಗುರುವಾರಕ್ಕೆ (ಇಂದು) ಕಾಯ್ದಿರಿಸಿದೆ. ಈ ಪ್ರಕರಣದಲ್ಲಿ ಜೈಲಾಗುತ್ತಾ, ಜಾಮೀನು ಸಿಗುತ್ತಾ ಎಂಬುದು ಇಂದು ನಿರ್ಧಾರವಾಗಲಿದೆ. ಇದನ್ನೂ ಓದಿ: ನನ್ನದು ಅಂಜುವ ಕುಲವಲ್ಲ, ಆಂಜನೇಯನ ಕುಲ – ಎಫ್‌ಐಆರ್ ದಾಖಲಾಗಿದ್ದಕ್ಕೆ ಯತ್ನಾಳ್ ಕಿಡಿ
ಬೆಂಗಳೂರು: ಜಾತಿ ನಿಂದನೆ ಪ್ರಕರಣದಲ್ಲಿ (Atrocity Case) ನ್ಯಾಯಾಂಗ ಬಂಧನದಲ್ಲಿರುವ ಮಾಜಿ ಮಂತ್ರಿ, ಬಿಜೆಪಿ ಶಾಸಕ ಮುನಿರತ್ನ (Munirathna) ಅವರ ಜಾಮೀನು (Bail) ಭವಿಷ್ಯ ಗುರುವಾರ ನಿರ್ಧಾರ ಆಗಲಿದೆ.
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಇಂದು ನಡೆದ ವಿಚಾರಣೆ ವೇಳೆ ಮುನಿರತ್ನ ಜಾಮೀನು ಅರ್ಜಿಗೆ ಎಸ್‌ಪಿಪಿ ಪ್ರದೀಪ್ ಕುಮಾರ್ ಆಕ್ಷೇಪಣೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದರು.
ಈಗ ಜನಾಂಗಿಯ ನಿಂದನೆ, ಪ್ರಚೋದನೆ ಎಂದೆಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗುವುದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು. ಇಲ್ಲಿ ಚಲುವರಾಜುನೇ ನಿಜವಾದ ಆರೋಪಿ ಎಂದು ವಾದ ಮಂಡಿಸಿದರು. ಇದನ್ನೂ ಓದಿ: HSRP ನಂಬರ್ ಪ್ಲೇಟ್ ಅಳವಡಿಕೆ – ನ.20 ರವರೆಗೆ ಅವಧಿ ವಿಸ್ತರಣೆ
ರಾಜಕೀಯ ಕಾರಣಕ್ಕಾಗಿಯೇ ಮುನಿರತ್ನ ಅವರನ್ನು ಈ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈಗಾಗಲೇ ಆರೋಪಿಯ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಆಗಿದೆ. ಸಾಕ್ಷಿದಾರರ ಹೇಳಿಕೆಯೂ ದಾಖಲಾಗಿದೆ. ಈಗ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜಾಮೀನು ನೀಡಬಹುದು ಎಂದು ವಕೀಲರು ಕೋರಿದರು. ನಂತರ ಎಸ್‌ಪಿಪಿ ಪ್ರದೀಪ್ ಕುಮಾರ್ ವಾದ ಮಂಡಿಸಿದರು.
ವಾದ ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಧೀಶರು ಗುರುವಾರಕ್ಕೆ ಆದೇಶವನ್ನು ಕಾಯ್ದಿರಿಸಿದರು. ಇದರ ಮಧ್ಯೆ ತಮ್ಮ ವಿರುದ್ಧದ ಮತ್ತೊಂದು ಪ್ರಕರಣ ಸಂಬಂಧ ಮುನಿರತ್ನ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, ಇದರ ವಿಚಾರಣೆಯೂ ನಡೆಯಿತು. ಇದರ ಆದೇಶವನ್ನೂ ಕೋರ್ಟ್ ಗುರುವಾರಕ್ಕೆ ಕಾಯ್ದಿರಿಸಿದೆ.