Tag: Muruga Math

  • ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾಶ್ರೀ

    ಚಿತ್ರದುರ್ಗ ಮುರುಘಾ ಮಠದ ಆಡಳಿತಾಧಿಕಾರ ಮರಳಿ ಪಡೆದ ಮುರುಘಾಶ್ರೀ

    ಚಿತ್ರದುರ್ಗ: ಪೋಕ್ಸೋ (POCSO) ಕೇಸಲ್ಲಿ ಷರತ್ತುಬದ್ಧ ಜಾಮೀನಿನ ಮೇಲೆ ಬಿಡುಗಡೆಯಾಗಿರುವ ಮುರುಘಾಶ್ರೀ (Muruga Shree) ತಮ್ಮ ಮಠದ (Muth) ಅಧಿಕಾರವನ್ನು ಮರಳಿ ಪಡೆದಿದ್ದಾರೆ.

    ಪೋಕ್ಸೋ ಕೇಸಲ್ಲಿ 2022, ಸೆಪ್ಟೆಂಬರ್ 1ರಂದು ಮುರುಘಾಶ್ರೀ ಬಂಧನವಾಗಿತ್ತು. ಸತತ 14 ತಿಂಗಳು ಸೆರೆಮನೆ ವಾಸ ಅನುಭವಿಸಿದ್ದರು. ಈ ವೇಳೆ ರಾಜ್ಯ ಸರ್ಕಾರ ಮುರುಘಾಮಠದ ಆಡಳಿತ ನಿರ್ವಹಿಸಲು ನಿವೃತ್ತ ಐಎಎಸ್ ಅಧಿಕಾರಿ ವಸ್ತ್ರದ್ ಅವರನ್ನು ಆಡಳಿತಾಧಿಕಾರಿಯಾಗಿ ನೇಮಿಸಿತ್ತು. ಇದನ್ನೂ ಓದಿ: ಆರ್‌ಎಸ್‌ಎಸ್‌ನಲ್ಲಿ ಜಾತಿ ಕೇಳಿ ಒಳಬಿಡುವ ಪದ್ಧತಿಯಿಲ್ಲ: ರಾಜಕುಮಾರ್

    ಈ ನೇಮಕವನ್ನು ಪ್ರಶ್ನಿಸಿ ಮಠದ ಪರ ವಕೀಲರು ಹೈಕೋರ್ಟ್ ಮೊರೆಹೋಗಿದ್ದ ಹಿನ್ನೆಲೆ ಆಡಳಿತಾಧಿಕಾರಿ ನೇಮಕವನ್ನು ಹೈಕೋರ್ಟ್ ರದ್ದುಪಡಿಸಿತ್ತು. ಆಗ ಮಠದ ಪೀಠಾಧಿಪತಿಯಾಗಿದ್ದ ಮುರುಘಾಶ್ರೀ ಜೈಲಲ್ಲಿದ್ದ ಕಾರಣ, ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಿಗೆ ತಾತ್ಕಾಲಿಕವಾಗಿ ಮಠದ ಆಡಳಿತದ ಅಧಿಕಾರ ನೀಡಿತ್ತು. ಇದನ್ನೂ ಓದಿ: ಹೊನಗಾ ಕೈಗಾರಿಕಾ ಪ್ರದೇಶದಲ್ಲಿ ತಿಂಗಳಲ್ಲಿ ಖಾತಾ: ಉದ್ಯಮಿಗಳ ನಿಯೋಗಕ್ಕೆ ಎಂ.ಬಿ.ಪಾಟೀಲ್‌ ಭರವಸೆ

    ಹೀಗಾಗಿ ಈವರೆಗೆ ಚಿತ್ರದುರ್ಗ (Chitradurga) ಪಿಡಿಜೆ ಅವರು ಮಠದ ಆಡಳಿತಾಧಿಕಾರಿ ಆಗಿದ್ದರು. ಆದರೆ ನವೆಂಬರ್ 16ರಂದು ಮುರುಘಾಶ್ರೀ ಜಾಮೀನಿನ ಮೇಲೆ ಬಿಡುಗಡೆಯಾದ ಬೆನ್ನಲ್ಲೇ ಮಠದ ಅಧಿಕಾರಕ್ಕಾಗಿ ಹೈಕೋರ್ಟ್ ಮೊರೆ ಹೋಗಿದ್ದು, ಈ ಬಗ್ಗೆ ವಿಚಾರಣೆ ನಡೆಸಿದ ಹೈಕೋರ್ಟ್ ಅಧಿಕಾರ ಹಸ್ತಾಂತರಿಸುವಂತೆ ಚಿತ್ರದುರ್ಗದ ಪ್ರಿನ್ಸಿಪಲ್ ಡಿಸ್ಟ್ರಿಕ್ಟ್ ಮತ್ತು ಸೆಷನ್ಸ್ ಜಡ್ಜ್‌ಗೆ ಸೂಚಿಸಿದೆ. ಇದನ್ನೂ ಓದಿ: ಅಂಬಾರಿ ಆನೆ ಅರ್ಜುನನ ಸಮಾಧಿಗೆ ರಾಜವಂಶಸ್ಥ ಯದುವೀರ್‌ ಪೂಜೆ

    ಮುರುಘಾಶ್ರೀಗೆ ಮಠದ ಆಡಳಿತಾಧಿಕಾರವನ್ನು ನ್ಯಾಯಾಧೀಶರು ಮರಳಿ ಹಸ್ತಾಂತರಿಸಿದ್ದಾರೆ. ಈ ಕುರಿತ ಪತ್ರಿಕಾ ಹೇಳಿಕೆಯನ್ನು ಮುರುಘಾ ಮಠ ಇಂದು ಬಿಡುಗಡೆ ಮಾಡಿದೆ. ಅಲ್ಲದೇ ಮುರುಘಾಶ್ರೀಗೆ ಹೈಕೋರ್ಟ್ ಷರತ್ತುಬದ್ಧ ಜಾಮೀನು ನೀಡಿರುವ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆ ಪ್ರವೇಶಿಸದೇ ಜಿಲ್ಲೆಯಿಂದ ಹೊರಗಿದ್ದುಕೊಂಡೇ ಮಠದ ಆಡಳಿತ ನಡೆಸಲಿದ್ದಾರೆ ಎಂದು ಮಠದ ಮೂಲಗಳಿಂದ ತಿಳಿದು ಬಂದಿದೆ. ಇದನ್ನೂ ಓದಿ: ಮುರುಡೇಶ್ವರದ ರಂಗು ಹೆಚ್ಚಿಸಿದ ರಾಜ್ಯದ ಅತೀ ದೊಡ್ಡ ಫ್ಲೋಟಿಂಗ್ ಬ್ರಿಡ್ಜ್

  • ಮುರುಘಾ ಮಠದ ಶ್ರೀಗಳ ವಿರುದ್ಧ ಆರೋಪ – ಹೆಚ್‌ಡಿಕೆ ಹೇಳಿದ್ದೇನು?

    ಮುರುಘಾ ಮಠದ ಶ್ರೀಗಳ ವಿರುದ್ಧ ಆರೋಪ – ಹೆಚ್‌ಡಿಕೆ ಹೇಳಿದ್ದೇನು?

    ರಾಮನಗರ: ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದಾರೆ.

    ಚನ್ನಪಟ್ಟಣದಲ್ಲಿಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ಐದಾರು ತಿಂಗಳಿಂದ ಇಂತಹ ಆರೋಪಗಳ ಬಗ್ಗೆ ಚರ್ಚೆಯಾಗುತ್ತಿದೆ. ಈ ವಿಚಾರದ ಬಗ್ಗೆ ಆರಂಭಿಕ ಹಂತದಲ್ಲೇ ಮುಂಜಾಗ್ರತೆ ವಹಿಸಬೇಕು. ಇದರಿಂದ ಧಾರ್ಮಿಕ ಕ್ಷೇತ್ರಗಳ ಮೇಲೆ ಬೇರೆ ರೀತಿಯ ಪರಿಣಾಮ ಬೀರಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ವಿದ್ಯಾರ್ಥಿಸಂಘದ ಚುನಾವಣೆ – ಯುವತಿಯರ ಕಾಲಿಗೆ ಬಿದ್ದು ವೋಟು ಕೇಳಿದ ಯುವಕ

    ಹಿಂದೆ ಹೊಸನಗರದ ಸ್ವಾಮೀಜಿಗಳ ವಿಷಯದಲ್ಲೂ ಇಂತಹದ್ದೇ ಆರೋಪ ಕೇಳಿಬಂದಿತ್ತು. ಈ ವಿಷಯಗಳಿಂದ ನಮ್ಮ ಭಾವನೆ, ಸಂಸ್ಕೃತಿಗೆ ಧಕ್ಕೆ ಆಗಬಾರದು. ಬಲವಂತವಾಗಿ ಇಂತಹ ಘಟನೆಗಳು ಜರುಗಿದ್ರೆ ಸರ್ಕಾರ ಕಾನೂನು ಕ್ರಮ ಜರುಗಿಸಬೇಕು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸೂರ್ಯ ಚಂದ್ರರಿರುವ ತನಕ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಆಗಲಿದೆ: ಲಹರಿ ವೇಲು

    ಮೋದಿಗಿಂತ ಕಡಿಮೆಯಿಲ್ಲ ಅಂತ ತೋರಿಸೋಕೆ ಹೊರಟಿದ್ದಾರೆ:
    ಇದೇ ವೇಳೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ವಿಚಾರದಲ್ಲಿ ಪ್ರತಾಪ್‌ಸಿಂಹ ಫೇಸ್ಬುಕ್ ಲೈವ್ ಕುರಿತು ಮಾತನಾಡಿದ ಅವರು, ಪ್ರತಾಪ್ ಸಿಂಹ ಪ್ರಧಾನಿ ಮೋದಿಗಿಂತ ಕಡಿಮೆ ಇಲ್ಲ ಎಂದು ತೋರಿಸೋಕೆ ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ.

    ಕಾಮಗಾರಿ ಬಗ್ಗೆ ಸರ್ಟಿಫಿಕೇಟ್ ಕೊಡುವ ಕೆಲಸ ಅವರದ್ದಲ್ಲ. ದೇವೇಗೌಡರು ಪ್ರಧಾನಿಯಾದ ಕಾಲದಲ್ಲಿ ಅಸ್ಸಾಂನಲ್ಲಿ ಒಂದು ಬ್ರಿಡ್ಜ್ ಕಟ್ಟಿಸಿದ್ರು. 1997ರಲ್ಲಿ ಬ್ರಿಡ್ಜ್ ಶಂಕುಸ್ಥಾಪನೆ ನೆರವೇರಿಸಿದ್ದರು. ಅದಾದ ಬಳಿಕ ಮೋದಿ ಅವರು ಇತ್ತೀಚೆಗೆ ಒಬ್ಬರೇ ನಡೆದುಕೊಂಡು ಹೋಗಿ ಉದ್ಘಾಟನೆ ಮಾಡಿದ್ರು. ಪ್ರತಾಪ್‌ಸಿಂಹ ಅವರೂ ಹಾಗೆಯೇ ಈ ರಸ್ತೆ ವಿಚಾರವಾಗಿ ಏಕಾಂಗಿಯಾಗಿ ಫೋಟೋ ತೆಗಿಸಿಕೊಳ್ಳುತ್ತಿದ್ದಾರೆ. ನಾನು ನಮ್ಮ ಪ್ರಧಾನ ಮಂತ್ರಿಗಳಿಗಿಂತ ಕಡಿಮೆ ಇಲ್ಲ, ಅವರಿಗಿಂತಲೂ ಕೆಲಸ ಮಾಡ್ತಿದ್ದೀನಿ ಅಂತಾ ತೋರಿಸಲು ಹೊರಟಿರಬಹುದು ಎಂದು ಕುಟುಕಿದ್ದಾರೆ.

    ಚನ್ನಪಟ್ಟಣ ತಾಲ್ಲೂಕಿನಲ್ಲಿ ಮಳೆಹಾನಿ ಪ್ರದೇಶಕ್ಕೆ ಭೇಟಿ ಪರಿಶೀಲಿಸಿದ ಮಾಜಿ ಸಿಎಂ ಹೆಚ್‌ಡಿಕೆ, ತಡರಾತ್ರಿ ಸುರಿದ ಭಾರಿ ಮಳೆಗೆ ಮನೆಗಳು ಜಲಾವೃತವಾಗಿದ್ದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ. ಬಳಿಕ ಸಂತ್ರಸ್ತರ ಅಹವಾಲು ಸ್ವೀಕರಿಸಿ ಕೂಡಲೇ ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

    ಈ ಕುರಿತು ಮಾತನಾಡಿ, ನಿನ್ನೆ ಭಾರೀ ಮಳೆ ಬಂದಿದೆ. ಹಲವಾರು ಕೆರೆ, ಕಟ್ಟೆಗಳು ಒಡೆದು ಕೋಡಿಹರಿದಿವೆ. ನಗರ ಪ್ರದೇಶದಲ್ಲಿಯೂ ದೊಡ್ಡ ಮಟ್ಟದಲ್ಲಿ ಹಾನಿಯಾಗಿದೆ. ಕಳೆದ ಬಾರಿ ಎಪಿಎಂಸಿಗಳಲ್ಲಿ ಮಳೆಯಿಂದಾಗಿ ಅನಾಹುತವಾಗಿತ್ತು. ಅಲ್ಲಿ ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೆ. ಹಾಗಾಗಿ ಈ ಬಾರಿ ಎಪಿಎಂಸಿಗಳಲ್ಲಿ ಅಂತಹದ್ದೇನೂ ಡ್ಯಾಮೇಜ್ ಆಗಿಲ್ಲ. ಆದರೆ ಕೋಡಿ ಹರಿದು ರಸ್ತೆ ಬಿರುಕು ಬಿಟ್ಟಿದೆ. ಲೋಕೋಪಯೋಗಿ ಇಲಾಖೆ ಹಾಗೂ ನಗರ ಸಭೆ ಅಧಿಕಾರಿಗಳಿಗೆ ಶಾಶ್ವತ ಪರಿಹಾರ ಒದಗಿಸಲು ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ರಾಹುಲ್ ಗಾಂಧಿಗೆ ವಿಭೂತಿ ಹಚ್ಚಿ ಮುರುಘಾಶ್ರೀಗಳಿಂದ ಲಿಂಗಧಾರಣೆ

    ರಾಹುಲ್ ಗಾಂಧಿಗೆ ವಿಭೂತಿ ಹಚ್ಚಿ ಮುರುಘಾಶ್ರೀಗಳಿಂದ ಲಿಂಗಧಾರಣೆ

    ಚಿತ್ರದುರ್ಗ: ಕೋಟೆನಾಡು ಚಿತ್ರದುರ್ಗದ ಮುರುಘಾಮಠಕ್ಕೆ ಭೇಟಿ ನೀಡಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಲಿಂಗಧಾರಣೆ ಮಾಡಿ, ವಿಭೂತಿ ಹಚ್ಚಿದ ಮುರುಘಾಶ್ರೀಗಳು ತತ್ವದ ಉಪದೇಶ ಮಾಡಿದರು.

     

    ಸಿದ್ದರಾಮಯ್ಯ ಅವರ 75ನೇ ಜನ್ಮದಿನದ ಪ್ರಯುಕ್ತ ದಾವಣೆಗೆರೆಯಲ್ಲಿ ನಡೆಯುತ್ತಿರುವ ಸಿದ್ದರಾಮೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಹುಬ್ಬಳ್ಳಿಯಿಂದ ಹೊರಟಿದ್ದ ರಾಹುಲ್ ಗಾಂಧಿ ಅವರು ಚಿತ್ರದುರ್ಗದ ಮುರುಘಾಮಠಕ್ಕೆ ಇಂದು ಬೆಳಗ್ಗೆ ಭೇಟಿ ನೀಡಿದ್ದರು. ಈ ವೇಳೆ ಮುರುಘಾಮಠದ ಡಾ.ಶಿವಮೂರ್ತಿ ಮುರುಘಾ ಶರಣರು ಸೇರಿದಂತೆ ವಿವಿಧ ಮಠಾಧೀಶರಿಂದ ಆಶೀರ್ವಾದ ಪಡೆದರು.  ಇದನ್ನೂ ಓದಿ: ಸಿದ್ದರಾಮೋತ್ಸವ : ‘ಮೈಸೂರು ಹುಲಿಯಾ’, ‘ಸೆಲ್ಫ್ ಮೇಡ್ ಸಿದ್ದಣ್ಣ’ ಹಾಡು ರಿಲೀಸ್

    ಮುರುಘಾಮಠಕ್ಕೆ ಆಗಮಿಸಿದ ರಾಹುಲ್ ಗಾಂಧಿ ಅವರು ಮೊದಲಿಗೆ ಬಸವಣ್ಣನ ಭಾವಚಿತ್ರ ಹಾರ ಹಾಕಿ ನಮಸ್ಕರಿಸಿದರು. ನಂತರ ಮಠಾಧೀಶರೊಂದಿಗೆ ಕೊಂಚ ಕಾಲ ಸಂವಾದ ನಡೆಸಿದ ರಾಹುಲ್ ಗಾಂಧಿ ಅವರಿಗೆ ಹಾರ ಹಾಕಿ, ಶಾಲು ಹೊದಿಸಿ, ಬಸವಣ್ಣನವರ ಬಾವಚಿತ್ರ ನೀಡಿ ಸನ್ಮಾನ ಮಾಡಲಾಯಿತು. ಬಳಿಕ ರಾಹುಲ್ ಗಾಂಧಿಗೆ ಲಿಂಗಧಾರಣೆ ಮಾಡಿ, ವಿಭೂತಿ ಹಚ್ಚಿ, ಲಿಂಗ ಪೂಜೆ ತತ್ವದ ಉಪದೇಶ ಮಾಡಿದರು ಮತ್ತು ಲಿಂಗ ಪೂಜೆ ಪಾಲಿಸುವುದಾಗಿ ರಾಹುಲ್ ಗಾಂಧಿ ತಿಳಿಸಿದರು.

    ಈ ವೇಳೆ ರಾಹುಲ್ ಗಾಂಧಿ ಜೊತೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಸುರ್ಜೆವಾಲಾ, ವೇಣುಗೋಪಾಲ, ಕೆಪಿಪಿಸಿ ಕಾರ್ಯಧ್ಯಕ್ಷ ಈಶ್ವರ್ ಖಂಡ್ರೆ ಸಾಥ್ ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿಯ ಜಿಮ್‍ನಲ್ಲಿ ಬಿಗಿ ಭದ್ರತೆಯಲ್ಲಿಯೇ ರಾಹುಲ್ ಗಾಂಧಿ ವರ್ಕೌಟ್

    Live Tv
    [brid partner=56869869 player=32851 video=960834 autoplay=true]

  • ಪುನೀತ್  ರಾಜ್‌ಕುಮಾರ್‌ಗೆ  ‘ಬಸವಶ್ರೀ ಪ್ರಶಸ್ತಿ’ ಘೋಷಣೆ

    ಪುನೀತ್ ರಾಜ್‌ಕುಮಾರ್‌ಗೆ ‘ಬಸವಶ್ರೀ ಪ್ರಶಸ್ತಿ’ ಘೋಷಣೆ

    ಚಿತ್ರದುರ್ಗ: ಮುರುಘಾ ಮಠದಿಂದ ನೀಡುವ, 2021ನೇ ಸಾಲಿನ ಬಸವಶ್ರೀ ಪ್ರಶಸ್ತಿಯನ್ನು ನಟ ಪುನೀತ್ ರಾಜ್‍ಕುಮಾರ್ ಅವರಿಗೆ ನೀಡುವುದಾಗಿ ಡಾ.ಶಿವಮೂರ್ತಿ ಮುರುಘಾ ಶರಣರು ಘೋಷಿಸಿದ್ದಾರೆ.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮೇರುನಟ ಹಾಗು ಮಾನವೀಯ ಮೌಲ್ಯದ ಗುಣಗಳಿಗೆ ಹೆಸರಾಗಿರುವ ನಟ ಅಪ್ಪುಗೆ ಮರಣೋತ್ತರ ‘ಬಸವಶ್ರೀ ಪ್ರಶಸ್ತಿ’ಯನ್ನು ನೀಡಲು ಚಿತ್ರದುರ್ಗದ ಮುರುಘಾ ಮಠ ನಿರ್ಧರಿಸಿದೆ. ರಾಜ್ಯದ ಪ್ರತಿಷ್ಠಿತ ಪ್ರಶಸ್ತಿ ಎನಿಸಿರುವ ಬಸವಶ್ರೀ ಪ್ರಶಸ್ತಿಯು 5 ಲಕ್ಷ ರೂ. ನಗದು ಸೇರಿದಂತೆ ಬಸವಶ್ರೀ ಪ್ರಶಸ್ತಿ ಫಲಕವನ್ನು ಒಳಗೊಂಡಿದೆ. ಈ ಪ್ರಶಸ್ತಿಯನ್ನು ಬರುವ ಬಸವ ಜಯಂತಿ ದಿನ ಪುನೀತ್ ಅವರ ಪತ್ನಿ ಅಶ್ವಿನಿ ಅವರಿಗೆ ಪ್ರದಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ಪರಿಸರ ಸ್ನೇಹಿ ಅರಿವು ಮೂಡಿಸಿದ ಪಬ್ಲಿಕ್ ಹೀರೋ

    ಪ್ರಶಸ್ತಿ ಪ್ರದಾನ ಸಮಾರಂಭ ಚಿತ್ರದುರ್ಗದ ಮುರುಘಾ ಮಠದಲ್ಲಿರುವ ಅನುಭವ ಮಂಟಪದಲ್ಲಿ ನಡೆಯಲಿದೆ. ಪುನೀತ್ ಪತ್ನಿ ಅಶ್ವಿನಿ ಅವರಿಗೆ ಬಸವಶ್ರೀ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಈಗಾಗಲೇ ನಟ ಶಿವರಾಜಕುಮಾರ್ ಅವರೊಂದಿಗೆ ಮಾತುಕತೆ ನಡೆಸಲಾಗಿದ್ದು, ಕಾರ್ಯಕ್ರಮಕ್ಕೆ ಆಹ್ವಾನಿಸಲಾಗಿದೆ.

    ಅಲ್ಲದೇ ನವೆಂಬರ್ 10ರಂದು ಪುನೀತ್ ಮನೆಗೆ ಮುರುಘಾ ಶ್ರೀಗಳು ಭೇಟಿ ನೀಡಿ ನೊಂದ ಕುಟುಂಬಕ್ಕೆ ಸಾಂತ್ವನ ಹೇಳಲು ಮುರುಘಾ ಶರಣರು ನಿರ್ಧರಿಸಿದ್ದಾರೆ. ಪುನೀತ್ ಕುಟುಂಬದವರೊಂದಿಗೆ ಕೋಟೆನಾಡಿನ ಅನೇಕ ಮಠಾಧೀಶರು, ಪುನೀತ್ ಒಡನಾಡಿಗಳು ಭಾಗಿಯಾಗುವರೆಂದು ಶರಣರು ತಿಳಿಸಿದ್ದಾರೆ. ಇದನ್ನೂ ಓದಿ: ದೀಪಾವಳಿ ಗಿಫ್ಟ್ ಅಲ್ಲ, ಪೆಟ್ರೋಲ್, ಡೀಸೆಲ್ ಬೆಲೆ ಇನ್ನೂ ಕಡಿಮೆಯಾಗಬೇಕು: ಸತೀಶ್ ಜಾರಕಿಹೊಳಿ

  • ಚುನಾವಣೆ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕಟೀಲ್

    ಚುನಾವಣೆ ಪ್ರಚಾರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದ ಕಟೀಲ್

    ಧಾರವಾಡ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಧಾರವಾಡದಲ್ಲಿ ಪಾಲಿಕೆ ಚುನಾವಣೆ ಪ್ರಚಾರದ ವೇಳೆ ಕೋವಿಡ್ ನಿಯಮ ಉಲ್ಲಂಘಿಸಿದ್ದಾರೆ.

    ಬಿಜೆಪಿ ಮುಖಂಡರು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಪ್ರಚಾರದ ಅಖಾಡಕ್ಕೆ ಇಳಿದಿದ್ದಾರೆ. ಇಂದು ನಳಿನ್‍ಕುಮಾರ್ ಕಟೀಲ್ ಧಾರವಾಡದ ಹಲವು ವಾರ್ಡ್ ಗಳಲ್ಲಿ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಕಟೀಲ್ ಮತ್ತು ಬಿಜೆಪಿ ಅಭ್ಯರ್ಥಿಗಳು ಪಾದಯಾತ್ರೆ ಮೂಲಕ ಪ್ರಚಾರ ಮಾಡಿದ್ದಾರೆ.ಇದನ್ನೂ ಓದಿ:ಕೇರಳದ 32 ಮಂದಿಗೆ ಸೋಂಕು, ಕೋಲಾರದ ನರ್ಸಿಂಗ್ ಕಾಲೇಜು ವಿರುದ್ಧ ಕಠಿಣ ಕ್ರಮ: ಸುಧಾಕರ್

    ಕೋವಿಡ್ ನಿಯಮದಂತೆ ಪ್ರಚಾರದಲ್ಲಿ ಕೇವಲ 5 ಜನ ಭಾಗವಹಿಸಬೇಕು ಎಂದು ಸೂಚನೆ ಇದ್ದರೂ ನೂರಾರು ಕಾರ್ಯಕರ್ತರ ಜೊತೆಯಲ್ಲಿ ಕಟೀಲ್ ಪ್ರಚಾರ ಕೈಗೊಂಡಿದ್ದಾರೆ. ಈ ಪ್ರಚಾರದಲ್ಲಿ ಕೆಲವು ಬಿಜೆಪಿ ಕಾರ್ಯಕರ್ತರು ಮಾಸ್ಕ್ ಕೂಡಾ ಇಲ್ಲದೆ ಬಂದಿದ್ದರು. ಪ್ರಚಾರಕ್ಕೂ ಮುನ್ನ ಕಟೀಲ್ ಅವರು ಧಾರವಾಡ ಮುರುಘಾಮಠಕ್ಕೆ ಭೇಟಿ ನೀಡಿದ್ದು, ಅವರಿಗೆ ಬಿಜೆಪಿ ಕಾರ್ಯಕರ್ತರು ಆರತಿ ಬೆಳಗುವುದರ ಮೂಲಕ ಸ್ವಾಗತಿಸಿದರು.ಇದನ್ನೂ ಓದಿ:ಒಂದು ವರ್ಷದಿಂದ ಇವರು ಬಾಯಿ ಮುಚ್ಚಿದ್ರು: ಡಿಕೆಶಿ ವಿರುದ್ಧ ಅನಿಲ್ ಬೆನಕೆ ವಾಗ್ದಾಳಿ