Tag: Muruga Shree

  • ಮುರುಘಾ ಶ್ರೀಗಳ ಬಂಧನ ಪ್ರಕರಣ – ಸರ್ಕಾರ ಕಾನೂನಾತ್ಮಕವಾಗಿ ತನಿಖೆ ಮಾಡಲಿ: ಕುಮಾರಸ್ವಾಮಿ

    ಮುರುಘಾ ಶ್ರೀಗಳ ಬಂಧನ ಪ್ರಕರಣ – ಸರ್ಕಾರ ಕಾನೂನಾತ್ಮಕವಾಗಿ ತನಿಖೆ ಮಾಡಲಿ: ಕುಮಾರಸ್ವಾಮಿ

    ಬೆಂಗಳೂರು: ಮುರುಘಾ ಶ್ರೀಗಳ ಬಂಧನ ವಿಚಾರದಲ್ಲಿ ಸರ್ಕಾರ ಜವಾಬ್ದಾರಿಯುತವಾಗಿ ಕಾನೂನಾತ್ಮಕವಾಗಿ ತೀರ್ಮಾನ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.

    ಶ್ರೀಗಳ ಬಂಧನ ವಿಚಾರಕ್ಕೆ ಜೆಪಿ ಭವನದಲ್ಲಿ ಮಾತನಾಡಿದ ಅವರು, ಶ್ರೀಗಳ ಬಂಧನದ ಬಗ್ಗೆ ನಾನು ಚರ್ಚೆ ಮಾಡದೇ ಇರುವುದು ಸೂಕ್ತ. ಇದೊಂದು ಸೂಕ್ಷ್ಮ ವಿಚಾರ. ಸರ್ಕಾರ ಜವಾಬ್ದಾರಿಯುತವಾಗಿ ಏನೇನು ತೀರ್ಮಾನ ಮಾಡಬೇಕೋ ಮಾಡಲಿ ಅಂತ ಸಲಹೆ ಕೊಟ್ಟರು. ಇದನ್ನೂ ಓದಿ: ಲೋಕಕಲ್ಯಾಣಕ್ಕಾಗಿ 220 ಕಿ.ಮೀ. ಉರುಳು ಸೇವೆ ಮಾಡಿದ ಪಂಡರಪುರದ ವಿಠ್ಠಲನ ಭಕ್ತ

    ಈ ರೀತಿಯ ಘಟನೆ ನಡೆಯಬಾರದಿತ್ತು ಎನ್ನುವುದು ನನ್ನ ಅಭಿಪ್ರಾಯ. ಇವೆಲ್ಲಾ ತುಂಬಾ ಸೂಕ್ಷ್ಮ ವಿಚಾರ. ಮೊದಲೇ ನಮ್ಮ ರಾಜ್ಯ ಭಾವನಾತ್ಮಕ, ಆಚಾರ ವಿಚಾರಗಳನ್ನು ಇಟ್ಟುಕೊಂಡಿದೆ. ಇಂತಹ ವಿಚಾರಗಳಲ್ಲಿ ನಾವು ಚರ್ಚೆ ಮಾಡದೇ ಇರುವುದೇ ಸೂಕ್ತ ಎಂದರು. ಇದನ್ನೂ ಓದಿ: ಪೈಲಟ್‍ಗಳ ಮುಷ್ಕರದಿಂದ ವಿಮಾನ ಸಂಚಾರ ರದ್ದು – ದೆಹಲಿ ವಿಮಾನ ನಿಲ್ದಾಣದಲ್ಲಿ ಜನಜಂಗುಳಿ

    ಸರ್ಕಾರದ ಮಟ್ಟದಲ್ಲಿ ಏನು ತನಿಖೆ ಮಾಡಬೇಕೋ ಅದನ್ನು ಮಾಡಲಿ. ತನಿಖೆ ವಿಳಂಬ ವಿಚಾರ ಸರ್ಕಾರಕ್ಕೆ ಸಂಬಂಧಿಸಿದ್ದು, ನಾನು ಈಗ ಬಗ್ಗೆ ಹೆಚ್ಚು ಚರ್ಚೆ ಮಾಡುವುದಿಲ್ಲ ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀಗಳಿಗೆ ಎದೆ ನೋವು – ಆಸ್ಪತ್ರೆಗೆ ದಾಖಲು

    ಮುರುಘಾ ಶ್ರೀಗಳಿಗೆ ಎದೆ ನೋವು – ಆಸ್ಪತ್ರೆಗೆ ದಾಖಲು

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಪ್ರಕರಣದಡಿ ಬಧನಕ್ಕೊಳಗಾಗಿರುವ ಮುರುಘಾ ಶ್ರೀಗಳಿಗೆ ಎದೆ ನೋವು ಕಾಣಿಸಿಕೊಂಡಿದೆ. ಈ ಹಿನ್ನೆಲೆ ಅವರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಮುರುಘಾ ಶ್ರೀಗಳಿಗೆ ಬಿಪಿ ಹಾಗೂ ಸ್ಯಾಚುರೇಷನ್ ವ್ಯತ್ಯಾಸವಾಗಿರುವುದಾಗಿ ವರದಿಯಾಗಿದ್ದು, ವೈದ್ಯರು ಮೇಲಿಂದ ಮೇಲೆ ಇಸಿಜಿ ಹಾಗೂ ಎಕೋ ಪರೀಕ್ಷೆ ನಡೆಸುತ್ತಿದ್ದಾರೆ. ಅವರಿಗೆ ಎದೆ ನೋವು ಕಂಡುಬಂದಿರುವ ಹಿನ್ನೆಲೆ ಜಿಲ್ಲಾಆಸ್ಪತ್ರೆಯತ್ತ ಜನರ ದಂಡು ಹರಿದಿದೆ. ತಂಡೋಪತಂಡವಾಗಿ ಹರಿದು ಬರುತ್ತಿರುವ ಜನರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಆಸ್ಪತ್ರೆಯೆಡೆಗೆ ಭಕ್ತಾದಿಗಳ ದಂಡು ಹರಿದು ಬರುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ಇದನ್ನೂ ಓದಿ: ಮುರುಘಾ ಶರಣರ ಬಂಧನ- ಬಿಕೋ ಎನ್ನುತ್ತಿದೆ ಮಠದ ಆವರಣ

    ವೈದ್ಯರು ಈ ಮೊದಲೇ ಮುರುಘಾ ಶ್ರೀಗಳಿಗೆ ಎದೆನೋವು ಬಂದರೆ ತಕ್ಷಣ ಆಸ್ಪತ್ರೆಗೆ ದಾಖಲಿಸಲು ಸೂಚನೆ ನೀಡಿದ್ದರು. ಇಂದು ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ ಪೊಲೀಸರು ಮುರುಘಾ ಶ್ರೀ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಇದನ್ನೂ ಓದಿ: ಪೋಕ್ಸೊ ಪ್ರಕರಣ – ಮುರುಘಾ ಶ್ರೀಗೆ 14 ದಿನ ನ್ಯಾಯಾಂಗ ಬಂಧನ

    ಶ್ರೀಗಳಿಗೆ ಎಮ್‌ಆರ್‌ಐ ಸ್ಕ್ಯಾನ್ ಪರೀಕ್ಷೆ ಪೂರ್ಣಗೊಂಡಿದ್ದು, ಇದೀಗ ವೈದ್ಯರ ತಂಡ  ಅವರನ್ನು ವ್ಹೀಲ್ ಚೇರ್ ನಲ್ಲಿ ಸಿಟಿ ಸ್ಕ್ಯಾನ್ ಗೆ ಕರೆದೊಯದದಿರುವುದಾಗಿ ವರದಿಯಾಗಿದೆ. ಮುರುಘಾ ಶ್ರೀ ಗಳಿಗೆ ಉಸಿರಾಟದ ತೊಂದರೆಯೂ ಕಂಡುಬಂದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಅವರನ್ನು ಬೆಂಗಳೂರಿನ ಆಸ್ಪತ್ರೆಗೆ ದಾಖಲಿಸುವ ಸಾಧ್ಯತೆಗಳಿವೆ.

    Live Tv
    [brid partner=56869869 player=32851 video=960834 autoplay=true]

  • ಜೈಲಿನಲ್ಲಿ ರಾತ್ರಿ ಕಳೆದ ಮುರುಘಾ ಶ್ರೀಗಳು

    ಜೈಲಿನಲ್ಲಿ ರಾತ್ರಿ ಕಳೆದ ಮುರುಘಾ ಶ್ರೀಗಳು

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳು ರಾತ್ರಿಯಿಡೀ ನಿದ್ರೆ ಇಲ್ಲದೇ ಜೈಲಿನಲ್ಲಿ ಕಳೆದರು.

    ಗುರುವಾರ ರಾತ್ರಿ ಶ್ರೀಗಳು ನ್ಯಾಯಾಂಗ ಬಂಧನಕ್ಕೊಳಗಾದರು. ನ್ಯಾಯಾಧೀಶರು 14 ದಿನ ನ್ಯಾಯಾಂಗ ಬಂಧನ ವಿಧಿಸಿದ ಹಿನ್ನೆಲೆ ತಡರಾತ್ರಿ ಜೈಲಿಗೆ ಸೇರಿದರು. ಇದೀಗ ತಡರಾತ್ರಿಯಿಂದ ಜೈಲಿನಲ್ಲಿರುವ ಶ್ರೀಗಳು ರಾತ್ರಿಯಿಡೀ ನಿದ್ದೆ ಇಲ್ಲದೇ, ಚಿಂತಾಕ್ರಾಂತರಾಗಿದ್ದರು. ಬೆಳಗ್ಗೆಯಾದ ಕೂಡಲೇ ವಿಶ್ರಾಂತಿ ಮುಗಿಸಿ ಎದ್ದು, ನಂತರ ಧ್ಯಾನದಲ್ಲಿ ಸ್ವಾಮೀಜಿ ನಿರತರಾಗಿದ್ದರು. ಬಳಿಕ ಇತರ ಕೈದಿಗಳಿಗೆ ನೀಡುವಂತೆ ಜೈಲು ಸಿಬ್ಬಂದಿ ಶ್ರೀಗಳಿಗೂ ಸಹ ಚಹಾ ನೀಡಿದರು. ಇದನ್ನೂ ಓದಿ: ಮುರುಘಾಶ್ರೀ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್

    ತಡರಾತ್ರಿ 2:50ರ ಸುಮಾರಿಗೆ ಬಂಧಿತರಾದ ಶ್ರೀಗಳು ಬೆಳಗ್ಗೆ 6 ಗಂಟೆಗೆ ಎದ್ದರು. ನಂತರ ಮುರುಘಾಶ್ರೀಗೆ ಮೆಡಿಸಿನ್ ಮತ್ತು ಟೂತ್ ಪೇಸ್ಟ್, ಬ್ರಶ್ ಅನ್ನು ವಕೀಲರು ನೀಡಿ ಬಂದರು. ಈ ಹಿಂದೆ ಕಾರಾಗೃಹದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಿದ್ದ ಮುರುಘಾಶ್ರೀ ಮಧ್ಯರಾತ್ರಿಯೇ ಬಂಧಿಯಾಗಿರುವ ವಿಚಾರ ತಿಳಿದು ಕಾರಾಗೃಹ ಸಿಬ್ಬಂದಿಯೇ ಶಾಕ್ ಆಗಿದ್ದಾರೆ. ಇದನ್ನೂ ಓದಿ: ಪೋಕ್ಸೊ ಪ್ರಕರಣ – ಮುರುಘಾ ಶ್ರೀಗೆ 14 ದಿನ ನ್ಯಾಯಾಂಗ ಬಂಧನ

    ನ್ಯಾಯಾಂಗ ಬಂಧನ
    ಗುರುವಾರ ತಡರಾತ್ರಿ ಮಠದಿಂದ ಕಾವಿ ಕಳಚಿ ಬಿಳಿ ವಸ್ತ್ರ ಧರಿಸಿ ಶ್ರೀಗಳು ಹೊರಬಂದಿದ್ದರು. ನಂತರ ಅವರನ್ನು ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಯಿತು. ನಸುಕಿನ 2.25ಕ್ಕೆ ಆಸ್ಪತ್ರೆಯಿಂದ ಹೊರಟ ಪೊಲೀಸರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಿದರು. ಶರಣರ ಪರ ಜಾಮೀನು ಕೋರಿ ಸ್ಥಳದಲ್ಲೇ ಅರ್ಜಿ ಸಲ್ಲಿಸಿದರು. ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಸೂಚಿಸಿ, ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಪೋಕ್ಸೊ ಪ್ರಕರಣ – ಮುರುಘಾ ಶ್ರೀಗೆ 14 ದಿನ ನ್ಯಾಯಾಂಗ ಬಂಧನ

    ಪೋಕ್ಸೊ ಪ್ರಕರಣ – ಮುರುಘಾ ಶ್ರೀಗೆ 14 ದಿನ ನ್ಯಾಯಾಂಗ ಬಂಧನ

    ಚಿತ್ರದುರ್ಗ: ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೊ ಪ್ರಕರಣದಡಿ ಬಂಧನಕ್ಕೊಳಗಾಗಿರುವ ಮುರುಘಾ ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

    ಮುರುಘಾ ಶ್ರೀಗಳನ್ನು ನಸುಕಿನಲ್ಲಿ ಪೊಲೀಸರು ಬಂಧನಕ್ಕೊಳಪಡಿಸಿದರು. ನಂತರ ಅವರಿಗೆ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಕೊಡಿಸಲಾಯಿತು. ನಸುಕಿನ 2.25ಕ್ಕೆ ಆಸ್ಪತ್ರೆಯಿಂದ ಹೊರಟ ಪೊಲೀಸರು 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಕೋಮಲಾ ಅವರ ಮುಂದೆ ಹಾಜರುಪಡಿಸಿದರು. ಶರಣರ ಪರ ಜಾಮೀನು ಕೋರಿ ಸ್ಥಳದಲ್ಲೇ ಅರ್ಜಿ ಸಲ್ಲಿಸಿದರು. ಅರ್ಜಿ ತಿರಸ್ಕರಿಸಿದ ನ್ಯಾಯಾಧೀಶರು ಶುಕ್ರವಾರ ನ್ಯಾಯಾಲಯದಲ್ಲಿ ಸಲ್ಲಿಸುವಂತೆ ಸೂಚಿಸಿ, ಶ್ರೀಗಳನ್ನು 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದರು. ಇದನ್ನೂ ಓದಿ: ಮಠದಲ್ಲೇ ಮುರುಘಾಶ್ರೀ ಬಂಧನ

    ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಚಿತ್ರದುರ್ಗದ ಎಸ್‍ಪಿ ಕೆ.ಪರಶುರಾಮ್, ದಸ್ತಗಿರಿ ಮಾಡಿ ವೈದ್ಯಕೀಯ ಪರೀಕ್ಷೆ ನಡೆಸಿ ಶ್ರೀಗಳನ್ನು ನ್ಯಾಯಧೀಶರ ಮುಂದೆ ಹಾಜರು ಪಡಿಸಲಾಗಿತ್ತು. 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಒಬ್ಬ ಆರೋಪಿಯನ್ನು ವಿಚಾರಣೆ ನಡೆಸುತ್ತಿದ್ದೇವೆ. ಉಳಿದವರನ್ನು ಕೂಡ ವಿಚಾರಣೆ ನಡೆಸುತ್ತೇವೆ. ಸಾಕ್ಷ್ಯಾಧಾರ ಕಲೆ ಹಾಕಲು ವಿಳಂಬ ಆಯಿತು. ಆದ್ದರಿಂದ ಬಂಧನವೂ ವಿಳಂಬವಾಯಿತು. ಮುರುಘಾ ಶ್ರೀಗಳು ಸದ್ಯಕ್ಕೆ ಇಲ್ಲೇ ಇರುತ್ತಾರೆ. ಶ್ರೀಗಳ ಆರೋಗ್ಯ ಕುರಿತ ವರದಿಯನ್ನು ವೈದ್ಯರು ನ್ಯಾಯಲಯದ ಮುಂದೆ ನೀಡುತ್ತಾರೆ. ಅದನ್ನು ನೋಡಿ ನ್ಯಾಯಾಧೀಶರು ವಿಚಾರಣೆ ನಡೆಸುತ್ತಾರೆ ಎಂದು ತಿಳಿಸಿದ್ದಾರೆ.

    ಇಂದು ಶ್ರೀಗಳ ಪರ 10 ಗಂಟೆ ನಂತರ ಕೋರ್ಟ್‍ಗೆ ವಕೀಲರು ಜಾಮೀನಿ ಕೋರಿ ಅರ್ಜಿ ಸಲ್ಲಿಸಲಿದ್ದಾರೆ. ಅರೆಸ್ಟ್ ಆದ್ದರಿಂದ ನಿರೀಕ್ಷಣಾ ಜಾಮೀನು ಅರ್ಜಿ ವಜಾ ಆಗಿದೆ. ಈ ನಿಟ್ಟಿನಲ್ಲಿ ರೆಗ್ಯುಲರ್ ಬೇಲ್‍ಗಾಗಿ ಅರ್ಜಿ ಸಲ್ಲಿಸಲಿದ್ದಾರೆ. ಸದ್ಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇವತ್ತು ತನಿಖಾಧಿಕಾರಿಯಿಂದ ಪೊಲೀಸ್ ಕಸ್ಟಡಿಗೆ ಕೇಳಲು ಸಿದ್ಧತೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಶ್ರೀಗಳ ಡೀಟೈಲ್ ವಿಚಾರಣೆ ಅವಶ್ಯಕತೆಯಿದೆ. ಇದನ್ನೂ ಓದಿ: ಮುರುಘಾಶ್ರೀ ಪೋಕ್ಸೊ ಪ್ರಕರಣದಲ್ಲಿ ಸರ್ಕಾರ ಎಂಟ್ರಿ ಕೊಡಲ್ಲ: ಆರ್.ಅಶೋಕ್

    ಸ್ಥಳ ಮಹಜರ್ ಮಾಡಬೇಕು, ಅಲ್ಲದೆ ಆರೋಪಿಯ ಹೇಳಿಕೆ ದಾಖಲಿಸಬೇಕು. ಪೋಕ್ಸೊ ಕೇಸ್‍ನಡಿ ಆರೋಪಿಯ ಕೃತ್ಯದ ಸ್ಥಳ ಸೇರಿದಂತೆ ಕೆಲವು ಸ್ಥಳಗಳ ಮಹಜರು ಅವಶ್ಯಕತೆ ಇದೆ. ಸಾಕ್ಷಿಗಳನ್ನ ಸಂಗ್ರಹಿಸಬೇಕಿದೆ. ಹೀಗಾಗಿ ಶ್ರೀಗಳನ್ನು ಪೊಲೀಸ್ ಕಸ್ಟಡಿಗೆ ನೀಡಬೇಕು ಅಂತಾ ಪೊಲೀಸರು ಕೋರ್ಟ್‍ಗೆ ಅರ್ಜಿ ಸಲ್ಲಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]