Tag: Murugesh nirani

  • ನಾನು ನನ್ನ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ: ನಿರಾಣಿ

    ನಾನು ನನ್ನ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ: ನಿರಾಣಿ

    – ಸಿಎಂ ಯಾರಾಗ್ತಾರೆ ಗೊತ್ತಿಲ್ಲ

    ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ ಬೆನ್ನಲ್ಲೇ ದೆಹಲಿಗೆ ತೆರಳಿದ್ದ ಮಾಜಿ ಸಚಿವ ಮುರುಗೇಶ್ ನಿರಾಣಿ ಬೆಂಗಳೂರಿಗೆ ವಾಪಸ್ ಆಗಿದ್ದು, ನಾನು ನನ್ನ ವೈಯಕ್ತಿಕ ಕೆಲಸಕ್ಕೆ ದೆಹಲಿಗೆ ಹೋಗಿದ್ದೆ ಎಂದು ಹೇಳಿದ್ದಾರೆ.

    ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ನಿರಾಣಿ, ಮಾಧ್ಯಮದಲ್ಲಿ ಬರುತ್ತಿರೋ ವಿಷಯ ಸತ್ಯಕ್ಕೆ ದೂರವಾದದ್ದು. ಆರ್.ಎಸ್.ಎಸ್ ಜೊತೆಗೆ ಕಳೆದ 30 ವರ್ಷದಿಂದ ಸಂಬಂಧ ಇದೆ. ಸ್ವಯಂ ಸೇವಕನಾಗಿ ಕೆಲಸ ಮಾಡುತ್ತಾ ಇದ್ದೇನೆ. ಹೈಕಮಾಂಡ್‍ಗೆ ಒಂದೂವರೆ ಸಾವಿರ ಕೋಟಿ ರೂಪಾಯಿ ಹಣ ಕೊಟ್ಟು ಮುರಗೇಶ್ ನಿರಾಣಿ ಸಿಎಂ ಆಗ್ತಾರೆ ಎನ್ನುವ ವಿಚಾರ ಸುಳ್ಳು. ನಾನೊಬ್ಬ ರೈತನ ಮಗ. ಕಾರ್ಮಿಕರಿಗೆ ಸಂಬಳ ಕೊಟ್ಟುಕೊಂಡು ಬಂದಿದ್ದೇನೆ. ಹೊರತು ಬೇರೆ ಯಾರಿಗೂ ಹಣ ಕೊಟ್ಟಿಲ್ಲ. ಬಿಜೆಪಿಯಲ್ಲಿ ಹಣ ತೆಗೆದುಕೊಳ್ಳುವ, ಕೊಡುವ ಸಂಸ್ಕೃತಿ ಇಲ್ಲ ಎಂದರು. ಇದನ್ನೂ ಓದಿ: ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಸಾಧ್ಯತೆ – ಬೆಲ್ಲದ್, ನಿರಾಣಿ ಮಧ್ಯೆ ಭಾರೀ ಪೈಪೋಟಿ

    ನಾನು ನನ್ನ ವೈಯಕ್ತಿಕ ಕೆಲಸಕ್ಕೆ ಹೋಗಿದ್ದೆ. ಯಾರ ಅಪಾಯಿಂಟ್ಮೆಂಟ್ ಕೂಡ ಪಡೆದಿರಲಿಲ್ಲ. ನನ್ನ ಸಿಎಂ ಮಾಡುವಂತೆ ಯಾರ ಬಳಿ ಲಾಬಿ ಮಾಡಿಲ್ಲ. ಬಿಜೆಪಿಯಲ್ಲಿ ಆ ಪ್ರವೃತ್ತಿ ಇಲ್ಲ. ಸಾವಿರಾರು ಕೋಟಿ ಕೊಟ್ಟು ಸಿಎಂ ಅಗೋದೆಲ್ಲಾ ಸುಳ್ಳು ಅದೆಲ್ಲಾ ಸತ್ಯಕ್ಕೆ ದೂರವಾದ ವಿಷಯ. ವಿಜಯೇಂದ್ರಗೆ ಫ್ಲವರ್ ಕೊಡುವ ಫೋಟೋ ವೈರಲ್ ಆಗಿದೆ. ಅದು ಅವರು ಉಪಾಧ್ಯಕ್ಷ ಆಗಿರುವಾಗ ಕೊಡುತ್ತಿರೋ ಫ್ಲವರ್. ಸಿಎಂ ಯಾರು ಅಗುತ್ತಾರೆ ಅನ್ನೋದು ಗೊತ್ತಿಲ್ಲ. ಧರ್ಮೇಂದ್ರ ಪ್ರಧಾನ್ ನೇತೃತ್ವದಲ್ಲಿ ನಿಯೋಗ ಬರುತ್ತೆ ನಾಳೆ. ಅವರು ಬಿಎಸ್‍ವೈ ಸೇರಿದಂತೆ ಶಾಸಕರ ಒಲವು ನೋಡಿಕೊಂಡು ಸಿಎಂ ಆಯ್ಕೆ ಮಾಡುತ್ತಾರೆ ಎಂದರು.

  • ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಸಾಧ್ಯತೆ – ಬೆಲ್ಲದ್, ನಿರಾಣಿ ಮಧ್ಯೆ ಭಾರೀ ಪೈಪೋಟಿ

    ಲಿಂಗಾಯತ ಸಮುದಾಯಕ್ಕೆ ಸಿಎಂ ಸ್ಥಾನ ಸಾಧ್ಯತೆ – ಬೆಲ್ಲದ್, ನಿರಾಣಿ ಮಧ್ಯೆ ಭಾರೀ ಪೈಪೋಟಿ

    – ಪ್ರಹ್ಲಾದ್ ಜೋಶಿಗೆ ಖುಲಾಯಿಸುತ್ತಾ ಲಕ್..?

    ಬೆಂಗಳೂರು: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ರಾಜೀನಾಮೆ ನೀಡಿದ್ದು, ಇದೀಗ ಬಿಎಸ್‍ವೈ ಉತ್ತರಾಧಿಕಾರಿ ಯಾರಾಗಬಹುದು ಎಂಬ ಪ್ರಶ್ನೆಗೆ ಇನ್ನೂ ಉತ್ತರ ಸಿಕ್ಕಿಲ್ಲ. ಬೇರೆ ರಾಜ್ಯಗಳಲ್ಲಿ ಮಾಡಿದಂತೆ ಇಲ್ಲಿಯೂ ಜಾತಿ ಚೌಕಟ್ಟು ಮೀರುತ್ತಾ..? ಅಥವಾ ಪ್ರಯೋಗ ಮಾಡಿದ್ರೆ ಕೈಸುಟ್ಟುಕೊಳ್ಳಬಹುದು ಎಂಬ ಭೀತಿಯಲ್ಲಿ ಲಿಂಗಾಯತ ಸಮುದಾಯದ ನಾಯಕರೊಬ್ಬರಿಗೆ ಹೈಕಮಾಂಡ್ ಮಣೆ ಹಾಕುತ್ತಾ ಎಂಬ ಪ್ರಶ್ನೆ ಎದ್ದಿದೆ. ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ, ಅಮಿತ್ ಶಾ, ಪ್ರಹ್ಲಾದ್ ಜೋಶಿ, ರಾಜನಾಥ್ ಸಿಂಗ್, ಜೆಪಿ ನಡ್ಡಾ ಮಹತ್ವದ ಸಭೆ ನಡೆಸಿದ್ರು.

    ಸಿಎಂ ರೇಸ್‍ನಲ್ಲಿ ಯಾರಿದ್ದಾರೆ..?
    ಅರವಿಂದ್ ಬೆಲ್ಲದ್ ಅವರ ಹೆಸರು ಸಿಎಂ ರೇಸ್ ನಲ್ಲಿ ಮುಂಚೂಣಿಯಲ್ಲಿದೆ. ಯಾಕಂದರೆ ಹೊಸ ಹಾಗೂ ಯುವ ಮುಖ, ಕ್ಲೀನ್ ಹ್ಯಾಂಡ್ ಆಗಿದ್ದಾರೆ. ಮೋದಿ ಪಾಲಿನ ನೀಲಿಗಣ್ಣಿನ ಯುವಕ ಬೆಲ್ಲದ್, ಧಾರವಾಡ ಪಶ್ಚಿಮ ಶಾಸಕನ ಪರ ಆರ್‍ಎಸ್‍ಎಸ್ ಒಲವು ಹೊಂದಿದೆ. ಅಲ್ಲದೆ ಇವರು ಪ್ರಬಲ ಪಂಚಮಸಾಲಿ ಸಮುದಾಯದವರಾಗಿದ್ದಾರೆ. ಮುರುಗೇಶ್ ನಿರಾಣಿ ಕೂಡ ಸಿಎಂ ರೇಸ್ ನಲ್ಲಿ ಕೇಳಿ ಬಂದಿದ್ದು, ಸಚಿವ ಹಾಗೂ ಬೀಳಗಿ ಶಾಸಕರಾಗಿದ್ದು, ಆಡಳಿತದ ಅನುಭವ ಹೊಂದಿದ್ದಾರೆ. ಹೈಕಮಾಂಡ್ ನಂಟು, ಅಮಿತ್ ಶಾ ಬೆಂಬಲವಿದ್ದು, ಪ್ರಬಲ ಪಂಚಮಸಾಲಿ ಸಮುದಾಯದವರಾಗಿದ್ದಾರೆ. ಇದನ್ನೂ ಓದಿ:ಕಣ್ಣೀರ ಹಿಂದಿನ ನೋವೇನು..?, ಆ ನೋವು ಕೊಟ್ಟವರಾರೆಂಬುದನ್ನು ಬಿಎಸ್‍ವೈ ಬಹಿರಂಗಪಡಿಸಲಿ: ಡಿಕೆಶಿ

    ಇನ್ನು ಪ್ರಹ್ಲಾದ್ ಜೋಶಿ ಅವರ ಹೆಸರು ಕೂಡ ಸಿಎಂ ರೇಸ್ ನಲ್ಲಿ ಕೇಳಿಬಂದಿದೆ. ಕೇಂದ್ರ ಮಂತ್ರಿ, ಧಾರವಾಡ ಸಂಸದ ಹಾಗೂ ಅನುಭವಿ ರಾಜಕಾರಣಿಯಾಗಿದ್ದು, ಸಂಘದ ಕಟ್ಟಾಳು, ಪಕ್ಷ ನಿಷ್ಠ ಹಾಗೆಯೇ ಮೋದಿ ಆಪ್ತ ಕೂಡ ಹೌದು. ಕ್ಲೀನ್ ಇಮೇಜ್ ಇರುವ ಜೋಶಿ ಅವರು ಚಾಣಾಕ್ಷ ಆಡಳಿತಗಾರರು ಕೂಡ ಆಗಿದ್ದಾರೆ. ಗುಂಪುಗಾರಿಕೆ ಇಲ್ಲ, ಸಂಘಟನಾ ಚತುರರಾಗಿದ್ದಾರೆ. ಎಲ್ಲರ ಲೆಕ್ಕಾಚಾರ ಉಲ್ಟಾ ಮಾಡುವ ಮೋದಿ, ಶಾ ಅಚ್ಚರಿಯ ಮುಖವನ್ನು ಸಿಎಂ ಗಾದಿಗೆ ಏರಿಸುವ ಸಾಧ್ಯತೆಗಳು ಕೂಡ ದಟ್ಟವಾಗಿವೆ.   ಇದನ್ನೂ ಓದಿ: ಯಡಿಯೂರಪ್ಪಾಜಿ ಜೊತೆಯ ನನ್ನ ಪಯಣದ ಅತ್ಯಂತ ಬೇಸರದ ದಿನ: ರೇಣುಕಾಚಾರ್ಯ

    ಒಟ್ಟಿನಲ್ಲಿ ಕಳೆದ ಹಲವು ದಿನಗಳಿಂದ ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡುತ್ತಾರೆ ಎಂಬ ಊಹಾಪೋಹಗಳು ಎದ್ದಿತ್ತು. ಇಂದು ಈ ಊಹಾಪೋಹಗಳಿಗೆ ಇಂದು ತೆರೆಬಿದ್ದಿದ್ದು, ತಮ್ಮ ಎರಡು ವರ್ಷದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಹಾಭಾಷಣ ಮಾಡಿ, ತಾವು ರಾಜೀನಾಮೆ ನೀಡುತ್ತಿರುವುದಾಗಿ ಗದ್ಗದಿತರಾಗಿಯೇ ಘೋಷಣೆ ಮಾಡಿದರು. ಅದರಂತೆ ಮಧ್ಯಾಹ್ನ ರಾಜಭವನದಲ್ಲಿ ರಾಜ್ಯಪಾಲರನ್ನು ಭೇಟಿಯಾಗಿ ತಮ್ಮ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ. ಇದನ್ನೂ ಓದಿ: ನಾನು ರಾಜೀನಾಮೆ ಸಲ್ಲಿಸುತ್ತೇನೆ: ಸಿಎಂ ಯಡಿಯೂರಪ್ಪ

    ರಾಜೀನಾಮೆ ನೀಡಿದ ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಬಿ.ಎಸ್.ಯಡಿಯೂರಪ್ಪ, ಎರಡು ವರ್ಷ ಸಿಎಂ ಆಗಿ ಸೇವೆ ಸಲ್ಲಿಸಲು ಅವಕಾಶ ಮಾಡಿಕೊಟ್ಟ ಕೇಂದ್ರದ ನಾಯರಿಗೆ ಧನ್ಯವಾದ ಸಲ್ಲಿಸುತ್ತೇನೆ. ಪ್ರಧಾನಿ ಮೋದಿ, ಪಕ್ಷದ ಅಧ್ಯಕ್ಷ ನಡ್ಡಾ ಮತ್ತು ಕೇಂದ್ರ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಇನ್ನು ಮುಂದಿನ ಸಿಎಂಗೆ ಯಾರ ಹೆಸರನ್ನು ಸೂಚಿಸಿಲ್ಲ ಮತ್ತು ಸೂಚಿಸಲ್ಲ ಎಂದು ಸ್ಪಷ್ಟಪಡಿಸಿದರು. ಇದೀಗ ರಾಜ್ಯದಲ್ಲಿ ಮುಂದಿನ ಸಿಎಂ ಯಾರು ಎಂಬ ಕುತೂಹಲ ಹುಟ್ಟಿದೆ.

  • ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ- ಇಂದು ರಾತ್ರಿಯೇ ಬೆಂಗ್ಳೂರಿಗೆ ಬಿ.ಎಲ್ ಸಂತೋಷ್

    ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ- ಇಂದು ರಾತ್ರಿಯೇ ಬೆಂಗ್ಳೂರಿಗೆ ಬಿ.ಎಲ್ ಸಂತೋಷ್

    ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ಬಿ.ಎಸ್ ಯಡಿಯೂರಪ್ಪ ಅವರು ರಾಜೀನಾಮೆ ನೀಡುತ್ತಿದ್ದಂತೆಯೇ ರಾಜ್ಯ ರಾಜಕೀಯದಲ್ಲಿ ಭಾರೀ ಬೆಳವಣಿಗೆಗಳು ನಡೆಯುತ್ತಿದೆ. ಈ ಮಧ್ಯೆ ಇಂದು ರಾತ್ರಿಯೇ ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಅವರು ದೆಹಲಿಯಿಂದ ಬೆಂಗಳೂರಿಗೆ ತೆರಳಲಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಹೌದು. ಇಂದು ರಾತ್ರಿ 8:30ರ ವಿಮಾನದ ಮೂಲಕ ಬೆಂಗಳೂರಿಗೆ ಸಂತೋಷ್ ತೆರಳಲಿದ್ದಾರೆ ಎಂದು ಹೇಳಲಾಗುತ್ತಿದೆ. ಪಾರ್ಲಿಮೆಂಟ್ ಬೋರ್ಡ್ ಸದಸ್ಯರಾಗಿರುವ ಸಂತೋಷ್ ಅವರು ಸಭೆಗೂ ಮುನ್ನ ಬೆಂಗಳೂರಿಗೆ ಪ್ರಯಾಣ ಬೆಳೆಸಿದ್ದಾರೆ. ವೀಕ್ಷಕರ ಭೇಟಿಗೂ ಮುನ್ನ ರಾಜ್ಯಕ್ಕೆ ಸಂತೋಷ್ ಭೇಟಿ ನೀಡುವ ಮೂಲಕ ಕುತೂಹಲ ಮೂಡಿಸಿದ್ದಾರೆ. ಇದನ್ನೂ ಓದಿ: ರಾಜೀನಾಮೆಗೂ ಮುನ್ನ ಸರ್ಕಾರಿ ನೌಕರರಿಗೆ ಯಡಿಯೂರಪ್ಪ ಬಂಪರ್ ಗಿಫ್ಟ್

    ಇತ್ತ ಮಾಜಿ ಸಚಿವ ಮುರುಗೇಶ್ ನಿರಾಣಿ ಕೂಡ ಇಂದು ರಾತ್ರಿ ಬೆಂಗಳೂರಿಗೆ ವಾಪಸ್ ತೆರಳುತ್ತಿದ್ದಾರೆ. ರಾತ್ರಿ 8:30 ರ ವಿಸ್ತಾರ ವಿಮಾನದ ಮೂಲಕ ಬೆಂಗಳೂರಿಗೆ ಹೋಗಲಿದ್ದಾರೆ. ಅಮಿತ್ ಶಾ ಭೇಟಿಗಾಗಿ ಬಂದಿದ್ದರು. ಆದರೆ ನಾಳೆ ರಾಜ್ಯಕ್ಕೆ ವೀಕ್ಷಕರ ಆಗಮನ ಹಿನ್ನೆಲೆಯಲ್ಲಿ ಇದೀಗ ಅಮಿತ್ ಶಾ ಅವರನ್ನು ಭೇಟಿಯಾಗದೇ ನಿರಾಣಿ ವಾಪಸ್ಸಾಗುತ್ತಿದ್ದಾರೆ. ಇದನ್ನೂ ಓದಿ: ಯಡಿಯೂರಪ್ಪ ಇಲ್ಲದ ಬಿಜೆಪಿ ನಾಶವಾಗುತ್ತೆ- ಬೂಕನಕೆರೆಯಲ್ಲಿ ಬಿಎಸ್‍ವೈ ಅಭಿಮಾನಿ ಕಣ್ಣೀರು

    ಈ ಹಿಂದೆ ರಾಜ್ಯ ಉಸ್ತುವಾರಿಯಾಗಿದ್ದ ಧರ್ಮೇಂದ್ರ ಪ್ರಧಾನ್ ಅವರು ಇದೀಗ ವೀಕ್ಷಕರಾಗಿ ಆಯ್ಕೆಯಾಗಿದ್ದಾರೆ. ಧರ್ಮೆಂದ್ರ ಪ್ರಧಾನ್ ಗೆ ಕರ್ನಾಟಕಕ್ಕೆ ತೆರಳಲು ಹೈಕಮಾಂಡ್ ಸೂಚನೆ ನೀಡಿದೆ. ಅದರಂತೆ ರಾಜ್ಯಕ್ಕೆ ಭೇಟಿ ಕೊಡಲಿರುವ ಪ್ರಧಾನ್ ಅವರು ಬೆಂಗಳೂರಿನಲ್ಲಿ ಶಾಸಕಾಂಗ ಸಭೆ ನಡೆಸಲಿದ್ದಾರೆ. ಮುಂದಿನ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕಸರತ್ತು ಆರಂಭವಾಗಿದ್ದು, ನಾಳೆ ರಾಜ್ಯಕ್ಕೆ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕೂಡ ರಾಜ್ಯಕ್ಕೆ ಭೇಟಿ ನಿಡಲಿದ್ದಾರೆ.

  • ಶೀಘ್ರ ಕಲಬುರಗಿಗೆ ಇಸ್ರೇಲ್ ಕಾನ್ಸುಲೇಟ್ ಜನರಲ್ ನೇತೃತ್ವದ ತಂಡ: ನಿರಾಣಿ

    ಶೀಘ್ರ ಕಲಬುರಗಿಗೆ ಇಸ್ರೇಲ್ ಕಾನ್ಸುಲೇಟ್ ಜನರಲ್ ನೇತೃತ್ವದ ತಂಡ: ನಿರಾಣಿ

    ಕಲಬುರಗಿ: ಜಿಲ್ಲೆಯಲ್ಲಿ ಇಸ್ರೇಲ್ ಮಾದರಿಯ ಕೃಷಿ ಬಳಕೆ ನಿಟ್ಟಿನಲ್ಲಿ ಇಸ್ರೇಲ್‍ನ ದಕ್ಷಿಣ ಭಾರತದ ಕಾನ್ಸುಲೇಟ್ ಜನರಲ್ ಜೊನಾಥನ್ ಜಡ್ಕಾ ಅವರನ್ನು ಸಂಪರ್ಕಿಸಿದ್ದು, ಶೀಘ್ರದಲ್ಲೇ ಅವರ ನೇತೃತ್ವದ ತಂಡ ಕಲಬುರಗಿಗೆ ಬಂದು ಅಧ್ಯಯನ ಮಾಡಲಿದೆ ಎಂದು ಗಣಿ ಮತ್ತು ಭೂ ವಿಜ್ಞಾನ ಹಾಗೂ ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

    ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಳೆಯಿಂದಾಗಿರುವ ಹಾನಿ ಮತ್ತು ಕೈಗೊಂಡ ಪರಿಹಾರ ಕ್ರಮಗಳ ಕುರಿತು ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಲಬುರಗಿ ವಿಶನ್-2050 ಭಾಗವಾಗಿ ಜಿಲ್ಲೆಯ ಮಣ್ಣಿನ ಗುಣಮಟ್ಟ, ಇಲ್ಲಿನ ಹವಾಗುಣ ಮತ್ತು ನೀರಿನ ಲಭ್ಯತೆ ಕುರಿತು ಅಧ್ಯಯನ ಮಾಡಿ ಅಗತ್ಯ ಸಲಹೆ ನೀಡಲು ಕಾನ್ಸುಲೇಟ್ ಜನರಲ್ ಜೊನಾಥನ್ ಜಡ್ಕಾ ಅವರನ್ನು ಸಂಪರ್ಕಿಸಿದಾಗ ಅವರು ಹಿಂದುಳಿದ ಈ ಪ್ರದೇಶಕ್ಕೆ ತಾವೇ ಖುದ್ದಾಗಿ ಬರಲು ಉತ್ಸುಕರಾಗಿದ್ದಾರೆ. ಹೀಗಾಗಿ ಅವರ ಪ್ರವಾಸದ ಸಂದರ್ಭದಲ್ಲಿ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು ಅವರೊಂದಿಗೆ ಇಡೀ ಜಿಲ್ಲೆ ಸಂಚರಿಸಿ ಅಧ್ಯಯನಕ್ಕೆ ಅಗತ್ಯ ಸಹಕಾರ ನೀಡಬೇಕು ಎಂದು ಅಧಿಕಾರಿಗಳಿಗೆ ಸಚಿವ ಮುರುಗೇಶ ನಿರಾಣಿ ನಿರ್ದೇಶಿಸಿದರು.

    ಈ ಮೂಲಕ ಕಲದಯಾಣ ಕರ್ನಾಟಕದ ಕೇಂದ್ರ ಸ್ಥಾನ ಕಲಬುರಗಿಯಿಂದಲೇ ಕೃಷಿಯಲ್ಲಿ ಕ್ರಾಂತಿ ಮಾಡಲು ರಾಜ್ಯ ಸರ್ಕಾರ ಇದೀಗ ಮುಂದಾಗಿದೆ. ಇನ್ನು ಕಲಬುರಗಿ ಜಿಲ್ಲೆಯನ್ನು ತೊಗರಿ ಕಣಜ ಎಂದು ಕರೆಯಲ್ಪಡುತ್ತಿತ್ತು. ಇದರ ಹೆಚ್ಚಿನ ಉತ್ಪಾದನೆಗೂ ಸಹ ಇಸ್ರೇಲ್ ಕೃಷಿ ಪದ್ಧತಿ ಸಹಾಯವಾಗಲಿದೆ ಎಂದಿದ್ದಾರೆ.

  • ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ- ದೆಹಲಿಗೆ ಹಾರಿದ ಸಚಿವ ನಿರಾಣಿ

    ರಾಜ್ಯ ರಾಜಕೀಯದಲ್ಲಿ ದಿಢೀರ್ ಬೆಳವಣಿಗೆ- ದೆಹಲಿಗೆ ಹಾರಿದ ಸಚಿವ ನಿರಾಣಿ

    ಬೆಂಗಳೂರು: ಹೈಕಮಾಂಡ್ ಸಂದೇಶಕ್ಕೂ ಮುನ್ನವೇ ರಾಜ್ಯ ರಾಜಕೀಯದಲ್ಲಿ ಡಿಢೀರ್ ಬೆಳವಣಿಗೆ ನಡೆದಿದ್ದು, ಸಚಿವ ಮುರುಗೇಶ್ ನಿರಾಣಿ ದೆಹಲಿಗೆ ಹಾರಿದ್ದಾರೆ.

    ಇಂದು ಮಧ್ಯಾಹ್ನ 3 ಗಂಟೆ ಸುಮಾರಿಗೆ ನಿರಾಣಿ ದೆಹಲಿ ತಲುಪಲಿದ್ದಾರೆ.  ಈ ಮೂಲಕ ಬಿ.ಎಸ್ ಯಡಿಯೂರಪ್ಪ ನಿರ್ಗಮನದ ಬೆನ್ನಲ್ಲೇ ದೆಹಲಿ ಭೇಟಿ ತೀವ್ರ ಕುತೂಹಲ ಹುಟ್ಟಿಸಿದೆ. ಅಲ್ಲದೆ ಇನ್ನೊಂದೆಡೆ ಹೈಕಮಾಂಡ್ ಬುಲಾವ್ ಕೊಟ್ಟಿದೆಯಾ? ಅಥವಾ ಸ್ವಯಂ ದೆಹಲಿಗೆ ಹೊರಟ್ರಾ ಎಂಬ ಪ್ರಶ್ನೆ ಹುಟ್ಟಿಕೊಂಡಿದೆ.

    ಇತ್ತ ಇಂದು ದೆಹಲಿಗೆ ಬಂದರೂ ರಾಷ್ಟ್ರೀಯ ನಾಯಕರ ಭೇಟಿ ಅನುಮಾನವಿದೆ. ಯಾಕಂದರೆ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಗೋವಾದಲ್ಲಿದ್ದಾರೆ. ಗೃಹ ಸಚಿವ ಅಮಿತ್ ಶಾ ಅವರು ಈಶಾನ್ಯ ರಾಜ್ಯಗಳ ಪ್ರವಾಸದಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಆರ್‍ಎಸ್‍ಎಸ್ ನಾಯಕರ ಭೇಟಿ ಮಾಡುತ್ತಾರಾ..? ಅಥವಾ ತಡರಾತ್ರಿ ಹೈಕಮಾಂಡ್ ನಾಯಕರ ಭೇಟಿ ಮಾಡ್ತಾರಾ ಎಂಬ ಪ್ರಶ್ನೆ ಎದ್ದಿದೆ. ಒಟ್ಟಿನಲ್ಲಿ ಸಚಿವರ ಏಕಾಏಕಿ ದೆಹಲಿ ಭೇಟಿ ತೀವ್ರ ಕುತೂಹ ಹುಟ್ಟಿಸಿದ್ದು, ಕಡೆ ಕ್ಷಣದ ಲಾಬಿಗಿಳಿದ್ರಾ ಅನ್ನೋ ಅನುಮಾನ ಕೂಡ ಎದ್ದಿದೆ. ಇದನ್ನೂ ಓದಿ: ಅಧಿಕಾರ ಸ್ವೀಕರಿಸಿದ ಬಳಿಕ ಹಲವು ಸವಾಲುಗಳನ್ನು ಎದುರಿಸಿದ್ದೇನೆ: ಬಿಎಸ್‍ವೈ ಅಳಲು

    ಈ ಹಿಂದೆ ಸಿಎಂ ರೇಸ್ ನಲ್ಲಿ ಮುರುಗೇಶ್ ನಿರಾಣಿ ಹೆಸರು ಕೇಳಿ ಬಂದಿತ್ತು. ಈ ವೇಳೆ ಪ್ರತಿಕ್ರಿಯಿಸಿದ್ದ ಸಚಿವರು, ನಾನು ಸಿಎಂ ರೇಸ್ ನಲ್ಲಿ ಇಲ್ಲ. ನಾನು ಸಿಎಂ ಆಕಾಂಕ್ಷಿ ಅಲ್ಲ. ಮಾಧ್ಯಮದವರೇ ನನ್ನ ಹೆಸರನ್ನ ಹೇಳುತ್ತಿರುವುದು. ನಾನು ಪಕ್ಷದ ಶಿಸ್ತಿನ ಸಿಪಾಯಿ ಹೈಕಮಾಂಡ್ ನನಗೆ ಕೊಟ್ಟ ಜವಾಬ್ದಾರಿಯನ್ನ ಅಚ್ಚುಕಟ್ಟಾಗಿ ನಿರ್ವಹಿಸಲಿದ್ದೇನೆ. ಅಲ್ಲದೆ ಯಡಿಯೂರಪ್ಪನವರೆ ಮುಂದಿನ ಎರಡು ವರ್ಷ ಸಿಎಂ ಆಗಿ ಮುಂದುವರಿಯುತ್ತಾರೆ ಎಂದು ಹೇಳಿದ್ದರು.

  • ನಿರಾಣಿ ಬೆನ್ನಲ್ಲೇ ಅರವಿಂದ ಬೆಲ್ಲದ್ ವಾರಾಣಸಿ ಭೇಟಿ

    ನಿರಾಣಿ ಬೆನ್ನಲ್ಲೇ ಅರವಿಂದ ಬೆಲ್ಲದ್ ವಾರಾಣಸಿ ಭೇಟಿ

    ಬೆಂಗಳೂರು: ಜುಲೈ 26ಕ್ಕೆ ಬಿ.ಎಸ್ ಯಡಿಯೂರಪ್ಪ ಅವರು ತಮ್ಮ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನಿಡುತ್ತಿದ್ದಾರೆ ಎಂದು ಸುದ್ದಿ ಹೊರಬಿದ್ದ ಬೆನ್ನಲ್ಲೇ ಇದೀಗ ಸಿಎಂ ಆಕಾಂಕ್ಷಿಗಳು ಕ್ಷೇತ್ರ ಭೇಟಿಯಲ್ಲಿ ಬ್ಯುಸಿಯಾಗಿದ್ದಾರೆ.

    ಹೌದು. ಇತ್ತೀಚೆಗಷ್ಟೇ ಗಣಿ ಸಚಿವ ಮುರುಗೇಶ್ ನಿರಾಣಿಯವರು ವಾರಾಣಸಿಗೆ ಹೋಗಿ ಬಂದಿದ್ದರು. ಇದೀಗ ಈ ಬೆನ್ನಲ್ಲೇ ಶಾಸಕ ಅರವಿಂದ್ ಬೆಲ್ಲದ್ ಅವರು ವಾರಾಣಸಿಗೆ ಭೇಟಿ ನೀಡಿದ್ದಾರೆ.

    ಸಿಎಂ ನಿರ್ಗಮನಕ್ಕೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯಮಂತ್ರಿ ಆಗಿ ಯಡಿಯೂರಪ್ಪ ಇನ್ನು 6 ದಿನ ಮಾತ್ರ ಇರಲಿದ್ದಾರೆ. ಇತ್ತ ಸಿಎಂ ಹುದ್ದೆ ಆಕಾಂಕ್ಷಿಗಳ ಪಟ್ಟಿಯಲ್ಲಿ ಬೆಲ್ಲದ್ ಹೆಸರು ಕುಡ ಕೇಳಿ ಬಂದಿದೆ. ಹೀಗಾಗಿ ಬೆಲ್ಲದ್ ಕಾಶಿಯಾತ್ರೆ ಕೈಗೊಂಡಿದ್ದಾರೆ. ಒಟ್ಟಿನಲ್ಲಿ ಇದೀಗ ನಿರಾಣಿ ಬಳಿಕ ಬೆಲ್ಲದ್ ‘ಕಾಶಿ’ ಯಾತ್ರೆ ಮಾಡಿರುವುದು ಕುತೂಹಲ ಹುಟ್ಟಿಸಿದೆ. ಇದನ್ನೂ ಓದಿ: ಯಡಿಯೂರಪ್ಪ ಸರ್ಕಾರವನ್ನು ಕೆಳಗಿಳಿಸಿದರೆ ಬಿಜೆಪಿ ಸರ್ವನಾಶ: ಶ್ರೀ ಕಾರದವೀರಬಸವ ಸ್ವಾಮೀಜಿ

    ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಾ ನಿರ್ಗಮನಕ್ಕೆ ವೇದಿಕೆ ಸಜ್ಜಾಗಿದೆ. ಮುಂದಿನ ಸೋಮವಾರದಿಂದ ಇದಕ್ಕೆ ಸಂಬಂಧಿಸಿದ ಪ್ರಕ್ರಿಯೆಗಳು ಶುರುವಾಗೋದು ನಿಶ್ಚಿತವಾಗುತ್ತಿದ್ದಂತೆ ಮಠಾಧೀಶರು ಎಂಟ್ರಿಯಾಗಿದ್ದಾರೆ. 35ಕ್ಕೂ ಹೆಚ್ಚು ಸ್ವಾಮೀಜಿಗಳು ಸಿಎಂ ಭೇಟಿಯಾಗಿ ಯಾವುದೇ ಕಾರಣಕ್ಕೂ ರಾಜೀನಾಮೆ ನೀಡದಂತೆ ಒತ್ತಡ ಹೇರಿದ್ದಾರೆ.

    ಲಿಂಗಾಯತ ಪ್ರಬಲ ನಾಯಕನನ್ನು ಅಧಿಕಾರದಿಂದ ಕೆಳಗಿಳಿಸಿದ್ರೆ, ಪಕ್ಷ ಸರ್ವನಾಶ ಆಗೋದು ಖಚಿತ ಅಂತ ಹೈಕಮಾಂಡ್‍ಗೆ ಎಚ್ಚರಿಕೆಯ ಸಂದೇಶ ರವಾನಿಸಿದ್ದಾರೆ. ಇದರ ನಡುವೆ ಯಡಿಯೂರಪ್ಪ ಪರವಾಗಿ ಒಂದೆರಡು ದಿನಗಳಲ್ಲಿ 500ಕ್ಕೂ ಹೆಚ್ಚು ಮಠಾಧೀಶರು ಬೆಂಗಳೂರಲ್ಲಿ ಸಭೆ ಸೇರಲು ತೀರ್ಮಾನಿಸಿದ್ದಾರೆ.

  • ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ: ಅಲಂ ಪಾಷಾ

    ಸಚಿವ ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ: ಅಲಂ ಪಾಷಾ

    – ರಾಜ್ಯದಲ್ಲಿ ಮತ್ತೆ ಸಿ.ಡಿ ಬಾಂಬ್
    – ಸಿಎಂ ರೇಸ್‍ನಲ್ಲಿರುವ ನಿರಾಣಿ ವಿರುದ್ಧ ಸಿ.ಡಿ ಬಾಂಬ್

    ಬೆಂಗಳೂರು: ರಾಜ್ಯದಲ್ಲಿ ಮತ್ತೆ ‘ಸಿ.ಡಿ’ ಬಾಂಬ್ ಮುನ್ನೆಲೆಗೆ ಬಂದಿದೆ. ಮುಖ್ಯಮಂತ್ರಿ ರೇಸ್ ನಲ್ಲಿರುವ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಈ ಆರೋಪ ಕೇಳಿ ಬಂದಿದೆ. ನಿರಾಣಿ ಬಳಿ ಸುಮಾರು 500 ಸಿ.ಡಿಗಳಿವೆ ಎಂದು ಸಾಮಾಜಿಕ ಹೋರಾಟಗಾರ ಅಲಂ ಪಾಷಾ ಗಂಭೀರ ಆರೋಪ ಮಾಡಿದ್ದಾರೆ.

    ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮುರುಗೇಶ್ ನಿರಾಣಿ ಬಳಿ ಸುಮಾರು 500 ಸಿ.ಡಿಗಳು ಇವೆ. ಯಾರ್ ಯಾರದ್ದು ಬೇಕಾದ್ರೂ ಸಿಡಿ ಇರಬಹುದು. ಇವರಿಗೆ ಈಗ ಆರೂವರೆ ಕೋಟಿ ಜನರ ಬೆಂಬಲ ಸಿಕ್ಕರೆ ಈ ಸಿಡಿಗಳ ಸಂಖ್ಯೆ 50 ಲಕ್ಷ ಆಗಬಹುದು ಎಂದು ಆರೋಪಿಸಿದ್ದಾರೆ.

    ಮುರುಗೇಶ್ ನಿರಾಣಿ ಒಬ್ಬ ಸಿಡಿ ಬಾಬ ಎಂದು ಹೇಳಿರುವ ಆಲಂ ಪಾಷ, ಸಾಕಷ್ಟು ಸೆಕ್ಸ್ ಸಿಡಿಗಳು ಮುರುಗೇಶ್ ನಿರಾಣಿ ಬಳಿ ಇದೆ. ರಾಜಕಾರಣಿ ಮತ್ತು ಪ್ರಮುಖ ನಾಯಕರ ಸೆಕ್ಸ್ ಸಿಡಿಗಳು ನಿರಾಣಿ ಬಳಿ ಇದೆ ಎಂದು ಹೇಳಿದ್ದಾರೆ.

    ಬ್ಯಾಂಕ್ ಆಫ್ ಇಂಡಿಯಾದ ಶಹಾಪುರ ಶಾಖೆಯಲ್ಲಿ ನಕಲಿ ಹೆಸರು ಬಳಸಿ ಸಾಲ ಪಡೆದಿದ್ದಾರೆ. ಸಣ್ಣ ರೈತರ ಹೆಸರಲ್ಲಿ ಬೆಳೆ ಸಾಲವನ್ನು ಪಡೆದು ಬಳಿಕ ಆ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾರೆ. ನಕಲಿ ಹೆಸರು, ಖಾತೆಗಳ ಮೂಲಕ ಶ್ರೀ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮಿಟೆಡ್ನ ಲ್ಲಿ ಹೂಡಿಕೆ ಮಾಡಿದ್ದಾರೆ. ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರಿಗೆ ಸಿಗುವ ಸಾಲವನ್ನು ದುರುಪಯೋಗ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.

    ನಕಲಿ ಆಧಾರ್ ಕಾರ್ಡ್ ಬಳಸಿ ಸಾಲವನ್ನು ಪಡೆದಿದ್ದಾರೆ. ನಿರಾಣಿ ಶುಗರ್ಸ್ ಮೂಲಕ ಕೋಟ್ಯಂತರ ವಂಚನೆ ಮಾಡಿದ್ದಾರೆ. ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮೀಟೆಡ್‍ನಲ್ಲಿ 8 ಸಾವಿರ ಕೋಟಿ ವಂಚನೆ ಮಾಡಿದ್ದಾರೆ ಎಂದು ಅಲಂ ಪಾಷ ಆರೋಪಿಸಿದ್ದಾರೆ.

    ನಮ್ಮ ಕೇಸಿನಲ್ಲಿ ಮುರುಗೇಶ್ ನಿರಾಣಿ ನನ್ನ ಸಹಿ ಫೋರ್ಜರಿ ಮಾಡಿದ ಆರೋಪ ಎದುರಿಸುತ್ತಿದ್ದಾರೆ. ಹೀಗಿರುವಾಗ ರಾಷ್ಟ್ರೀಕೃತ ಬ್ಯಾಂಕ್ ಗಳಿಂದ ರೈತರಿಗೆ ನೀಡುವ ಸಾಲವನ್ನ ನಿರಾಣಿಯವರು ದುರ್ಬಳಕೆ ಮಾಡಿಕೊಂಡಿದ್ದಾರೆ. ನಿರಾಣಿ ಶುಗರ್ಸ್ ನಲ್ಲಿ ಬಾಯ್ಲರ್ ಬ್ಲಾಸ್ಟ್ ಆಗಿ ನಾಲ್ವರು ಕಾರ್ಮಿಕರು ಸತ್ತರು. ಇದ್ರ ಬಗ್ಗೆ ಏನು ಕ್ರಮ ಆಯ್ತು…? ಇಂತಹವರು ಈ ರಾಜ್ಯದ ಮುಖ್ಯಮಂತ್ರಿಯಾಗಬೇಕಾ ಎಂದು ಪ್ರಶ್ನಿಸಿದ್ದಾರೆ.

    ವಿಜಯ ಸೌಹಾರ್ದ ಕೋ ಕ್ರೆಡಿಟ್ ಸಹಕಾರ ಲಿ. ನಲ್ಲಿ ಸುಮಾರು 8 ಸಾವಿರ ಕೋಟಿ ಅವ್ಯವಹಾರ ನಡೆದಿದೆ. ಇದರಿಂದಾಗಿ ರಾಜ್ಯದ ಬೊಕ್ಕಸಕ್ಕೆ ನಷ್ಟ ಆಗಿದೆ ಎಂದಿದ್ದಾರೆ.

  • ಭಿನ್ನರ ಬ್ಲಾಸ್ಟಿಂಗ್ ಹೇಳಿಕೆಗಳ ಬೆನ್ನಲ್ಲೇ ಬಿಜೆಪಿಯಲ್ಲಿ ಚುರುಕಿನ ಬೆಳವಣಿಗೆ

    ಭಿನ್ನರ ಬ್ಲಾಸ್ಟಿಂಗ್ ಹೇಳಿಕೆಗಳ ಬೆನ್ನಲ್ಲೇ ಬಿಜೆಪಿಯಲ್ಲಿ ಚುರುಕಿನ ಬೆಳವಣಿಗೆ

    ಬೆಂಗಳೂರು: ಭಿನ್ನರ ಬ್ಲಾಸ್ಟಿಂಗ್ ಹೇಳಿಕೆಗಳ ಬೆನ್ನಲ್ಲೇ ಬಿಜೆಪಿಯಲ್ಲಿ ಚುರುಕಿನ ಬೆಳವಣಿಗೆ ನಡುವೆ ಹೈಕಮಾಂಡ್ ಕರೆ ಹಿನ್ನೆಲೆ ಸಚಿವ ಮುರುಗೇಶ್ ನಿರಾಣಿ ದೆಹಲಿ ಪ್ರವಾಸ ಕೈಗೊಂಡಿದ್ದಾರೆ. ಬುಲಾವ್ ಬೆನ್ನಲ್ಲೇ ತಮ್ಮ ಇಂದಿನ ದಾವಣಗೆರೆ, ಕಲಬುರಗಿ, ಬಳ್ಳಾರಿ ಜಿಲ್ಲಾ ಪ್ರವಾಸ ಮೊಟಕುಗೊಳಿಸಿದ ಸಚಿವರು ಬೆಳಗ್ಗೆ 11 ಗಂಟೆಗೆ ದೆಹಲಿ ವಿಮಾನ ಏರಿದ್ದಾರೆ ಎಂದು ಮೂಲಗಳು ತಿಳಿಸಿವೆ.

    ಇಂದು ಬೆಳಗ್ಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರೇ ದೆಹಲಿಗೆ ಬರುವಂತೆ ಸೂಚನೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. ಆದ್ರೆ ದೆಹಲಿ ಪ್ರವಾಸದ ಕುರಿತು ಪ್ರತಿಕ್ರಿಯೆ ನೀಡಿರುವ ಮುರುಗೇಶ್ ನಿರಾಣಿ, ಹೈಕಮಾಂಡ್ ನಿಂದ ಯಾವುದೇ ಸಂದೇಶ ಬಂದಿಲ್ಲ. ವೈಯಕ್ತಿಕ ಕೆಲಸದ ಹಿನ್ನೆಲೆ ದೆಹಲಿಗೆ ಬಂದಿದ್ದು, ಸಂಜೆಯೇ ಬೆಂಗಳೂರಿಗೆ ಮರಳುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದಲ್ಲಿ ಯಡಿಯೂರಪ್ಪ, ವಿಜಯೇಂದ್ರ ಸೇರಿ ಇಬ್ಬರು ಸಿಎಂಗಳು: ಸಲೀಂ ಅಹ್ಮದ್

    ಬೆಂಗಳೂರಿನಿಂದ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಮತ್ತು ಮುರುಗೇಶ್ ನಿರಾಣಿ ಒಂದೇ ವಿಮಾನದಲ್ಲಿ ದೆಹಲಿಗೆ ತೆರಳಿದ್ದಾರೆ. ಆದ್ರೆ ದೆಹಲಿಯಲ್ಲಿ ಇಬ್ಬರೂ ಪ್ರತ್ಯೇಕ ಕಾರ್ ನಲ್ಲಿ ಹೋಗಿದ್ದಾರೆ. ಸಚಿವ ಸುಧಾಕರ್ ಕೇಂದ್ರ ಆರೋಗ್ಯ ಸಚಿವರ ಭೇಟಿಗೆ ದೆಹಲಿಗೆ ತೆರಳಿದ್ದಾರೆ. ಇದನ್ನೂ ಓದಿ: ಹಮಾರ ಕುತ್ತಾ ಹಮಾರ ಗಲ್ಲಿ ಮೇ ಷೇರ್ ತರಹ ಬಿಎಸ್‌ವೈ: ಸಿದ್ದರಾಮಯ್ಯ

  • ಬಳ್ಳಾರಿಯಲ್ಲಿ ತಲೆ ಎತ್ತಲಿದೆ ಸ್ಕೂಲ್ ಆಫ್ ಮೈನಿಂಗ್

    ಬಳ್ಳಾರಿಯಲ್ಲಿ ತಲೆ ಎತ್ತಲಿದೆ ಸ್ಕೂಲ್ ಆಫ್ ಮೈನಿಂಗ್

    – ಮುರುಗೇಶ್ ನಿರಾಣಿ ಅಧಿಕೃತ ಘೋಷಣೆ
    – 50 ಎಕರೆಯಲ್ಲಿ ಆರಂಭವಾಗಲಿರುವ ತರಬೇತಿ ಸಂಸ್ಥೆ

    ತುಮಕೂರು: ಗಣಿಗಾರಿಕೆ ನಿರ್ವಾಹಣೆ, ಮಾಲೀಕರು ಮತ್ತು ಕಾರ್ಮಿಕರಿಗೆ ತರಬೇತಿ, ಹಾಗೂ ಭವಿಷ್ಯದಲ್ಲಿ ಉಂಟಾಗಬಹುದಾದ ಅನಾಹುತಗಳನ್ನು ತಪ್ಪಿಸಲು ಬಳ್ಳಾರಿಯಲ್ಲಿ ‘ಸ್ಕೂಲ್ ಆಫ್ ಮೈನಿಂಗ್’ ಪ್ರಾರಂಭಿಸಲಾಗುವುದು ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ನಿರಾಣಿ ಅವರು ಇಂದಿಲ್ಲಿ ಘೋಷಿಸಿದರು.

    ಸೋಮವಾರ ಇಲ್ಲಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಲಾಖೆಗೆ ಸಂಬಂಧಿಸಿದ ಪ್ರಗತಿ ಪರಿಶೀಲನಾ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

    ದೇಶದಲ್ಲೇ ಎರಡನೇ ಸ್ಕೂಲ್ ಆಫ್ ಮೈನಿಂಗ್ ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಸುಮಾರು 50 ಎಕರೆ ಜಮೀನಿನಲ್ಲಿ ತೆರೆಯಲು ತೀರ್ಮಾನಿಸಲಾಗಿದೆ. ಈಗಾಗಲೇ ವಿಸ್ತೃತ  ಯೋಜನಾ ವರದಿ (ಡಿಪಿಆರ್) ಸಿದ್ದವಾಗಿದೆ ಎಂದರು.

     

    ಸದ್ಯದಲ್ಲೇ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆಯಲಾಗುವುದು. ಇಲಾಖೆಯ ಸಿಬ್ಬಂದಿ, ಗಣಿ ಮಾಲೀಕರು, ಹಾಗೂ ಸಿಬ್ಬಂದಿಗಳಿಗೆ ಅಂತರಾಷ್ಟ್ರೀಯ ಮಟ್ಟದ ತರಬೇತಿಯನ್ನು ನೀಡಲಾಗುವುದು ಎಂದು ತಿಳಿಸಿದರು.

    ಅವೈಜ್ಞಾನಿಕ ಗಣಿಗಾರಿಕೆ ತಡೆಯುವುದು, ಜೊತೆಗೆ ಎಲ್ಲಾ ರೀತಿಯ ಗಣಿಗಾರಿಕೆ ತರಬೇತಿ ಪ್ರಾರಂಭಿಸಲಾಗುವುದು. ಮೈನಿಂಗ್ ಆಪರೇಟಿಂಗ್ ಮತ್ತು ಉದ್ದಿಮೆದಾರರಿಗೆ ವೈಜ್ಞಾನಿಕವಾಗಿ ಗಣಿಗಾರಿಕೆಯನ್ನು ಹೇಗೆ ನಿರ್ವಹಿಬೇಕೆಂದು ತರಬೇತಿ ನೀಡುವುದೇ ಎಂಬು ಇದರ ಮುಖ್ಯ ಉದ್ದೇಶ ಎಂದು ವಿವರಿಸಿದರು.

    ಪ್ರತಿಯೊಂದು ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಹೊಸ ಹೊಸ ಯೋಜನೆಗಳನ್ನು ರೂಪಿಸಲಾಗುತ್ತದೆ. ನಾಲ್ಕು ಕಂದಾಯ ವಿಭಾಗ ಸೇರಿದಂತೆ ಐದು ಕಡೆ ಗಣಿ ಅದಾಲತ್ ಪ್ರಾರಂಭಿಸಲಿದ್ದೇವೆ. ಇದರಿಂದ ಉದ್ದಿಮೆದಾರರು ಇಲಾಖೆ ಇಲಾಖೆಗೆ ಅರ್ಜಿಗಳನ್ನು ಹಿಡಿದುಕೊಂಡು ಅಲೆಯುವುದು ತಪ್ಪುತ್ತದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಬೇರೆ ಬೇರೆಯವರ ಜೊತೆ ಮದ್ವೆಗೆ ಸಿದ್ಧತೆ – ಅವಳಿ ಸಹೋದರಿಯರು ಆತ್ಮಹತ್ಯೆ

    ಏಕಗವಾಕ್ಷಿ ಯೋಜನೆಯನ್ನು ಶೀಘ್ರದಲ್ಲೇ ಅನುಷ್ಠಾನ ಮಾಡಲಾಗುವುದು. ಸಣ್ಣ ಸಣ್ಣ ಉದ್ದಿಮೆದಾರರು ಇಲಾಖೆಯಿಂದ ಇಲಾಖೆಗೆ ಅಲೆಯುವುದನ್ನು ತಪ್ಪಿಸಲು ಇದು ಬಹಳಷ್ಟು ಅನುಕೂಲಕರವಾಗಿದೆ. ಏಕಗವಾಕ್ಷಿ ಯೋಜನೆಯಡಿ ಇಲಾಖೆಗೆ ಸಂಬಂಧಿಸಿದ ಎಲ್ಲ ಸಮಸ್ಯೆಗಳನ್ನು ಸ್ಥಳದಲ್ಲೇ ಇತ್ಯರ್ಥಪಡಿಸಿಕೊಳ್ಳಲಾಗುವುದು ಎಂದು ಸಲಹೆ ಮಾಡಿದರು.

    ಗಣಿಗಾರಿಕೆಯಲ್ಲಿ ಸರಳೀಕರಣ ಮಾಡುವ ಸುದ್ದುದೇಶ ನಮ್ಮ ಮುಂದಿದೆ. ಇಲಾಖೆಯಲ್ಲಿ ಸುಮಾರು 6 ಸಾವಿರ ಅರ್ಜಿಗಳು ಇತ್ಯರ್ಥವಾಗದೆ ಬಾಕಿ ಉಳಿದಿವೆ. 2016ಕ್ಕಿಂತ ಮುಂಚೆ ಅರ್ಜಿ ಸಲ್ಲಿಸಿ ಎಒಸಿ ಪಡೆದವರಿಗೆ ಗಣಿಗಾರಿಕೆಗೆ ಅವಕಾಶ ನೀಡಲು ತೀರ್ಮಾನಿಸಲಾಗಿದೆ ಎಂದು ಹೇಳಿದರು.

    ಉಳಿದಿರುವ ಅರ್ಜಿಗಳನ್ನು ಮುಂದಿನ ಮೂರು ತಿಂಗಳೊಳಗೆ ವಿಲೇವಾರಿ ಮಾಡಲಾಗುವುದು. ರಾಜ್ಯದಲ್ಲಿ ಉದ್ದಿಮೆದಾರ ಸ್ನೇಹಿ ರಾಜ್ಯವನ್ನಾಗಿ ಮಾಡಲು ನಾವು ಶಕ್ತಿ ಮೀರಿ ಪ್ರಯತ್ನ ಮಾಡುತ್ತಿದ್ದೇವೆ ಎಂದರು.

    ರಾಜ್ಯದಲ್ಲಿ ರಫ್ತು ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ಭಾರೀ ನಷ್ಟವಾಗುತ್ತಿದೆ. ಹೀಗಾಗಿ ವಿದೇಶಕ್ಕೆ ಅದಿರನ್ನು ರಪ್ತು ಮಾಡಲು ವಿಧಿಸಲಾಗಿರುವ ನಿಬರ್ಂಧ ತೆರವುಗೊಳಿಸುವಂತೆ ಸುಪ್ರೀಂಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲಾಗುವುದು ಎಂದರು.

    ರಪ್ತು ನಿಷೇಧದಿಂದ ರಾಜ್ಯದ ಬೊಕ್ಕಸಕ್ಕೆ ನಷ್ಟವಾಗುವುದರ ಜೊತೆಗೆ ಕಡಿಮೆ ದರದಲ್ಲಿ ಸರಕು ಖರೀದಿಸಿ ಹೆಚ್ಚಿನ ದರದಲ್ಲಿ ಸ್ಟೀಲ್ ಮಾರಾಟ ಮಾಡಲಾಗುತ್ತದೆ. ಸರಕು ಖರೀದಿಸುವ ರಾಜ್ಯಗಳಲ್ಲಿ ಕಡಿಮೆ ದರದಲ್ಲಿ ಸ್ಟೀಲ್ ಮಾರಾಟ ಮಾಡುತ್ತವೆ. ನಮಗೆ ವಿದೇಶಕ್ಕೆ ಅದಿರನ್ನು ರಫ್ತು ಮಾಡಲು ಅವಕಾಶ ಕೊಟ್ಟರೆ ಹೆಚ್ಚಿನ ಅನುಕೂಲವಾಗಲಿದೆ ಎಂದು ಅಭಿಪ್ರಾಯಪಟ್ಟರು.

    ಗಣಿ ಅಭಿವೃದ್ದಿ ನಿಧಿಯಿಂದ ಮೂರು ವರ್ಷಗಳಲ್ಲಿ ಕೈಗೊಳ್ಳಬಹುದಾದ ಕಾರ್ಯ ಯೋಜನೆಗಳ ಕುರಿತಾಗಿ ನೀಲನಕ್ಷೆಯನ್ನು ರೂಪಿಸಲಾಗಿದೆ. ಸದ್ಯ 32 ಕೋಟಿ ಹಣ ಉಳಿದಿದೆ. ಇದರಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶವಿದೆ. ಕುಡಿಯುವ ನೀರು ಸರ್ಕಾರಿ ಶಾಲೆಗಳ ದತ್ತು ಪಡೆಯುವುದು, ಸಮುದಾಯ ಭವನ ನಿರ್ಮಾಣ, ಮೂಲಭೂತ ಸೌಕರ್ಯಗಳ ಅಭಿವೃದ್ದಿ ಸೇರಿದಂತೆ ಹಲವು ರೀತಿ ಯೋಜನೆಗಳನ್ನು ರೂಪಿಸಬಹುದು. ಈ ಬಗ್ಗೆ ಸಭೆ ಕರೆದು ಜನಪ್ರತಿನಿಧಿಗಳಿಗೆ ಹಂಚಿಕೆ ಮಾಡುವುದಾಗಿ ತಿಳಿಸಿದರು.

    ದೇಶಕ್ಕೆ ಮಾದರಿಯಾಗುವಂತಹ ಮರಳು ನೀತಿಯನ್ನು ಇಲಾಖೆ ಸಿದ್ದಪಡಿಸಿದೆ. ಬೇರೆ ರಾಜ್ಯದವರು ಕರ್ನಾಟಕವನ್ನು ಮಾದರಿಯಾಗಿಟ್ಟುಕೊಂಡು ಅನುಷ್ಠಾನ ಮಾಡುವಂತಹ ನೀತಿ ಇದಾಗಿದೆ. ಸದ್ಯದಲ್ಲೇ ಮುಖ್ಯಮಂತ್ರಿಯವರೊಂದದಿಗೆ ಚರ್ಚಿಸಿ ಶೀಘ್ರದಲ್ಲೇ ಬಿಡುಗಡೆ ಮಾಡುವುದಾಗಿ ತಿಳಿಸಿದರು.

    ರಾಜ್ಯದಲ್ಲಿ ಒಟ್ಟು 350 ಮರಳು ಬ್ಲಾಕ್ ಗಳನ್ನು ಗುರುತಿಸಲಾಗಿದೆ. ಈಗಿರುವ ಮರಳು ನೀತಿಗೆ ತಿದ್ದುಪಡಿ ಮಾಡಿ ನದಿ ಮರಳನ್ನು ಸಂಸ್ಕರಿಸಿ ಗ್ರೇಡ್ ಆಧಾರದಲ್ಲಿ ಮಾರಾಟ ಮಾಡಲು ಯೋಜಿಸಲಾಗಿದೆ ಎಂದರು.

    ಕೆಲವು ಕಡೆ ಡಿಜಿಎಂಎಸ್ ಲೈಸೆನ್ಸ್ ಪಡೆಯದೇ ಕಾರ್ಯನಿರ್ವಹಣೆ ಮಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಹೀಗಾಗಿ 90 ದಿನಗಳೊಗೆ ಅರ್ಜಿ ಸಲ್ಲಿಸಿ ಗಣಿಗಾರಿಕೆ ನಡೆಸಲು ಅವಕಾಶ ಕೊಡಲಾಗುವುದು. ಅವೈಜ್ಞಾನಿಕ ಪೆನಾಲ್ಟಿ ನಿಗದಿಪಡಿಸಲಾಗಿದೆ. ದಂಡ ನಿಗದಿಪಡಿಸುವ ಬಗ್ಗೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

    ಪ್ರತಿಯೊಂದು ಜಿಲ್ಲೆಯಲ್ಲಿ ಉದ್ಯಮದಾರರ ಸಮಸ್ಯೆಗಳಿಗೆ ಸ್ಪಂದಿಸಲು ಹೊಸ ಯೋಜನೆ ರೂಪಿಸಲಾಗುತ್ತಿದೆ. 10 ಕಿಲೋ ಸುತ್ತಮುತ್ತಲಿನಲ್ಲಿರುವ ಗಣಿಗಾರಿಕೆಯನ್ನು ನಿಷೇಧಿಸಲಾಗಿದೆ, 154 ಗಣಿಗಾರಿಕೆಗಳು ನಡೆಯುತ್ತಿವೆ ಎಂದು ಮಾಹಿತಿ ನೀಡಿದರು.

  • ಕೆ.ಆರ್.ಎಸ್ ಡ್ಯಾಮ್‍ನಲ್ಲಿ ಲೀಕೇಜ್ ಇಲ್ಲ:  ಮುರುಗೇಶ್ ನಿರಾಣಿ

    ಕೆ.ಆರ್.ಎಸ್ ಡ್ಯಾಮ್‍ನಲ್ಲಿ ಲೀಕೇಜ್ ಇಲ್ಲ: ಮುರುಗೇಶ್ ನಿರಾಣಿ

    ತುಮಕೂರು: ಕೆ.ಆರ್.ಎಸ್ ಡ್ಯಾಮ್‍ನಲ್ಲಿ ಯಾವುದೇ ಲೀಕೇಜ್ ಇಲ್ಲ, ಈ ಬಗ್ಗೆ ಆತಂಕ ಪಡುವಂತಿಲ್ಲ ಎಂದು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಸಚಿವ ಮುರುಗೇಶ್ ನಿರಾಣಿ ಸ್ಪಷ್ಟಪಡಿಸಿದ್ದಾರೆ.

    ತುಮಕೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪಾಂಡವಪುರ ಪಕ್ಕದಲ್ಲಿ ಬೇಬಿ ಬೆಟ್ಟ ಇದೆ, ಅಲ್ಲಿ 10 ಕಿಮೀ ವ್ಯಾಪ್ತಿಯಲ್ಲಿ ಎಲ್ಲಾ ಗಣಿಗಾರಿಕೆಗಳನ್ನು ಮುಚ್ಚಿಸಲಾಗಿದೆ. ಕೆ.ಆರ್.ಎಸ್. ಸುತ್ತಮುತ್ತಲಿನ ಹತ್ತು ಕಿಲೋಮೀಟರ್ ವ್ಯಾಪ್ತಿಯಲ್ಲಿ ಎಲ್ಲಾ ಮೈನಿಂಗ್ ಅನ್ನು ಬಂದ್ ಮಾಡಿದ್ದೀವಿ. ಕಳೆದ ಮೂರ್ನಾಲ್ಕು ದಿನಗಳಿಂದ ಯಾವುದೇ ಮೈನಿಂಗ್ ನಡೆದಿಲ್ಲ. ಆದರೂ ಈ ಸಂಬಂಧ ತನಿಖೆ ಮಾಡಲಾಗುತ್ತಿದೆ ಎಂದರು. ಇದನ್ನೂ ಓದಿ:  ಹೆಣ್ಣಿನ ಬಗ್ಗೆ ಹೇಗೆ ಮಾತಾಡ್ಬೇಕು ಅಂತ ಮಾಜಿ ಸಿಎಂ ಅರ್ಥ ಮಾಡಿಕೊಳ್ಳಬೇಕು: ಸುಮಲತಾ ಕಿಡಿ

    ಡ್ಯಾಮ್ ನಲ್ಲಿ ಯಾವುದೇ ಲೀಕೇಜ್ ಇಲ್ಲ, ಕೆ.ಆರ್.ಎಸ್ ಬಗ್ಗೆ ಆತಂಕ ಪಡುವಂತಿಲ್ಲ. ಆದರೂ ದೂರದೃಷ್ಟಿಯಿಂದ ಮುಂಜಾಗ್ರತವಾಗಿ ನೋಟಿಸ್ ಕೊಟ್ಟು ಮುಚ್ಚಿಸಲಾಗಿದೆ ಎಂದರು.