Tag: Murugesh nirani

  • KGF ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಮುರುಗೇಶ್‌ ನಿರಾಣಿ

    KGF ನ ಬಿಇಎಂಎಲ್ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್: ಮುರುಗೇಶ್‌ ನಿರಾಣಿ

    ಬೆಳಗಾವಿ: ಕೆಜಿಎಫ್‌ನ (KGF) ಬಿಇಎಂಎಲ್ (BEML) ಸಂಸ್ಥೆ ಬಳಕೆ ಮಾಡದ 967 ಎಕರೆ ಜಾಗದಲ್ಲಿ ಕೈಗಾರಿಕೆ ಟೌನ್ ಶಿಪ್ (Industrial Township) ಮಾಡುವ ಕುರಿತು ಕೇಂದ್ರ ಕಲ್ಲಿದ್ದಲು ಹಾಗೂ ಗಣಿ ಸಚಿವರಿಗೆ ಪ್ರಸ್ತಾವನೆ ಸಲ್ಲಿಸಿದ್ದೇನೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ (Murugesh Nirani) ವಿಧಾನಪರಿಷತ್ತಿಗೆ ತಿಳಿಸಿದರು.

    ಸದಸ್ಯ ಗೋವಿಂದರಾಜು ಪರವಾಗಿ ಕೆ.ಎ.ತಿಪ್ಪೇಸ್ವಾಮಿ ಅವರು ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕೆಜಿಎಫ್  (KGF) ತಾಲೂಕಿನ ಬಂಗಾರದ ಗಣಿ ಗ್ರಾಮದಲ್ಲಿ ರಾಜ್ಯ ಸರ್ಕಾರವು BEML ಕಾರ್ಖಾನೆ ಸ್ಥಾಪಿಸಲು ಸುಮಾರು 1870.30 ಎಕರೆ ಜಮೀನು ಉದ್ದೇಶಿತ ಸಂಸ್ಥೆಗೆ ಜಮೀನು ಉಪಯೋಗಿಸಿಕೊಂಡು ಬಾಕಿ ಉಳಿದಿರುವ 971.33 ಎಕರೆ ಜಮೀನನ್ನು ಕರ್ನಾಟಕ ಭೂ ಮಂಜುರಾತಿ ಅನ್ವಯ ಎಲ್ಲಾ ಋಣ ಭಾರದಿಂದ ಮುಕ್ತಗೊಳಿಸಿ ಕಂದಾಯ ಇಲಾಖೆಗೆ ವಶಪಡಿಸಿಕೊಳ್ಳಲು ಕೋಲಾರ (Kolara) ಜಿಲ್ಲಾಧಿಕಾರಿಗಳು ಆದೇಶ ನೀಡಿದ್ದಾರೆ ಎಂದು ನಿರಾಣಿ ಹೇಳಿದರು.

    ಕೆಜಿಎಫ್‍ನಲ್ಲಿನ (KGF) 13 ಸಾವಿರ ಎಕರೆ ಜಮೀನನ್ನು ಚಿನ್ನದ ಗಣಿಗಾರಿಕೆಗಾಗಿ ಕೇಂದ್ರ ಸರ್ಕಾರಕ್ಕೆ ಹಸ್ತಾಂತರ ಮಾಡಲಾಗಿತ್ತು. ಈಗ ಗಣಿ ಕಾರ್ಯನಿರ್ವಹಣೆ ಮಾಡುತ್ತಿಲ್ಲ. ಹೆಚ್ಚುವರಿಯಾಗಿ ಉಳಿದಿರುವ ಭೂಮಿಯನ್ನು ವಾಪಾಸ್ ಪಡೆದುಕೊಳ್ಳಲು ಕೇಂದ್ರ ಸರ್ಕಾರದ ಜೊತೆ ಸಂವಹನ ನಡೆಸಲಾಗಿತ್ತು. ಆರಂಭದಲ್ಲಿ 3,500 ಎಕರೆಯನ್ನು ಮರಳಿಕೊಡುತ್ತೇವೆ ಎಂದು ಕೇಂದ್ರ ತಿಳಿಸಿತ್ತು. ಅದಕ್ಕೆ ಪೂರಕವಾಗಿ ಸ್ಪಷ್ಟವಾದ ಚಕ್ಕುಬಂದಿ ತಿಳಿಸಲು ಸೂಚಿಸಲಾಗಿತ್ತು. ರಾಜ್ಯ ಸರ್ಕಾರ ಸರ್ವೇ ನಡೆಸಿದಾಗ ಬಹಳಷ್ಟು ಭೂಮಿ ಒತ್ತುವರಿಯಾಗಿರುವುದು ಕಂಡುಬಂದಿತು ಎಂದು ಸಚಿವ ನಿರಾಣಿ ಹೇಳಿದರು.

    ಕೆಲವರು ಅಲ್ಲಿ ಮನೆಗಳನ್ನು ನಿರ್ಮಿಸಿರೋದನ್ನ ಜಿಲ್ಲಾಧಿಕಾರಿ ಗುರುತಿಸಿದ್ದಾರೆ. ಸರ್ವೇ ವರದಿಯನ್ನು ಕೇಂದ್ರಕ್ಕೆ ಕಳುಹಿಸಿದಾಗ ಅಲ್ಲಿನ ಸಮಿತಿ ಚರ್ಚೆ ನಡೆಸಿ, ಕೇವಲ 3,500 ಎಕರೆಯನ್ನಷ್ಟೇ ಅಲ್ಲ ಪೂರ್ತಿ ಭೂಮಿಯನ್ನು ವಾಪಾಸ್ ನೀಡುತ್ತೇವೆ. ಸಾಲದ ಹೊಣೆಗಾರಿಕೆಯೊಂದಿಗೆ ಭೂಮಿಯನ್ನು ವಾಪಾಸ್ ತೆಗೆದುಕೊಳ್ಳಿ ಎಂದು ಕೇಂದ್ರ ಸರ್ಕಾರ ತಿಳಿಸಿದೆ ಎಂದು ನಿರಾಣಿ ಹೇಳಿದರು. ಇದನ್ನೂ ಓದಿ: ನನಗೆ ನಿದ್ದೆಯಿಲ್ಲ, ಆರೋಗ್ಯದಲ್ಲಿ ಸಮಸ್ಯೆ ಇದೆ: ಹೆಚ್‌ಡಿಕೆ

    ಭೂಮಿಯ ಮೌಲ್ಯಕ್ಕಿಂತ ಸಾಲವೇ ಹೆಚ್ಚಿದೆ. ಅದಕ್ಕಾಗಿ ಒಮ್ಮೆಲೇ ಎಲ್ಲಾಭೂಮಿ ಬೇಡ. ಮೊದಲ ಹಂತದಲ್ಲಿ 3,500 ಎಕರೆ ಮಾತ್ರ ನೀಡಿ. ನಂತರ 2ನೇ ಹಂತದಲ್ಲಿ ಉಳಿದ ಭೂಮಿ ಪಡೆದುಕೊಳ್ಳುತ್ತೇವೆ ಎಂದು ರಾಜ್ಯ ಸರ್ಕಾರ ಸಲಹೆ ನೀಡಿದೆ. ಈ ಸಂವಹನದ ನಂತರ ಕೇಂದ್ರದಿಂದ ಪ್ರತಿಕ್ರಿಯೆ ಬಂದಿಲ್ಲ ಎಂದು ನಿರಾಣಿ ಸ್ಪಷ್ಟ ಪಡಿಸಿದರು. ಇದನ್ನೂ ಓದಿ: ಮದುವೆ ಅನ್ನೋದು ಒಂದು ಜವಾಬ್ದಾರಿ: ಎರಡನೇ ಮದುವೆ ಬಗ್ಗೆ ನಟಿ ಅಪೂರ್ವ ಮಾತು

    ಬೆಮೆಲ್‍ನಲ್ಲಿ ಹೆಚ್ಚುವರಿಯಾಗಿ 967 ಎರಕೆ ಭೂಮಿ ಕಂದಾಯ ಇಲಾಖೆ ಅಧೀನದಲ್ಲಿದೆ. ಅದನ್ನು ವಾಪಾಸ್ ಪಡೆದು ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಸರ್ಕಾರ ಸಿದ್ಧವಿದೆ. ಆದರೆ ಕಂದಾಯ ಇಲಾಖೆಯಿಂದ ಈವರೆಗೂ ಭೂಮಿ ಹಸ್ತಾಂತರವಾಗಿಲ್ಲ. ಭೂಮಿ ನಮ್ಮ ಇಲಾಖೆಗೆ ಬರುತ್ತಿದ್ದಂತೆ ಕೈಗಾರಿಕೆಗಳಿಗೆ ಹಂಚಿಕೆ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ನಿರಾಣಿ ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ನಿರಾಣಿ ನನ್ನ ಮುಂದೆ ಬಚ್ಚಾ, ಇಂತವರನ್ನ ಸಿಎಂ ಮಾಡಿದ್ರೆ ವಿಧಾನಸೌಧಕ್ಕೆ ಅವಮಾನ: ಯತ್ನಾಳ್

    ನಿರಾಣಿ ನನ್ನ ಮುಂದೆ ಬಚ್ಚಾ, ಇಂತವರನ್ನ ಸಿಎಂ ಮಾಡಿದ್ರೆ ವಿಧಾನಸೌಧಕ್ಕೆ ಅವಮಾನ: ಯತ್ನಾಳ್

    ಬೆಳಗಾವಿ: ಮುರುಗೇಶ್ ನಿರಾಣಿ (Murugesh Nirani) ನನ್ನ ಮುಂದೆ ಬಚ್ಚಾ, ಇಂತಹವರನ್ನು ಸಿಎಂ ಮಾಡಿದರೆ ವಿಧಾನಸೌಧಕ್ಕೆ ಅವಮಾನಕರ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ತಿಳಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷ ಕಟ್ಟುವಾಗ ನಿರಾಣಿ ಎಲ್ಲಿದ್ದರು? ನಮ್ಮ ಮನೆಗೆ ಟಿಕೆಟ್ ಕೇಳಿಕೊಂಡು ಬರುತ್ತಿದ್ದರು. ಈಗ ಬಹಳ ಮಾತನಾಡುತ್ತಾರೆ. ಅವರು ಹಿಂದೂ ದೇವತೆಗಳ ಬಗ್ಗೆ ಒಂದು ಆಡಿಯೋ ಬಿಟ್ಟಿದ್ದರು. ಅವರು ನಮಗೀಗ ಹಿಂದೂ ಸ್ವಾಮೀಜಿ ಬಗ್ಗೆ ಮಾತಾಡಬೇಡಿ ಎನ್ನುತ್ತಾರೆ. ಇಂತಹವರನ್ನು ಸಿಎಂ ಮಾಡಿದರೆ ವಿಧಾನಸೌಧಕ್ಕೆ ಅವಮಾನಕರ. ಮರ್ಯಾದೆ ಇರಲ್ಲ ಎಂದು ಮುರುಗೇಶ್ ನಿರಾಣಿ ವಿರುದ್ಧ ವಾಗ್ದಾಳಿ ನಡೆಸಿದರು.

    ಮುರುಗೇಶ್ ನಿರಾಣಿ ಮಂತ್ರಿ ಹೇಗಾದ ಏನೆಲ್ಲಾ ಪ್ರಲಾಪ ಮಾಡಿದ ಎಲ್ಲಾ ಗೊತ್ತಿದೆ. ಹೆಚ್ಚು ಮಾತಾಡಿದರೆ ಎಲ್ಲಾ ಬಿಡುಗಡೆ ಮಾಡಬೇಕಾಗುತ್ತದೆ ಎಂದು ಏಕವಚನದಲ್ಲೇ ಕಿಡಿಕಾರಿದ ಅವರು, ನಾನು ಕೇಂದ್ರದ ಮಂತ್ರಿ ಆದಾಗ ಯಡಿಯೂರಪ್ಪ ಪಾತ್ರ ಏನು ಇಲ್ಲ. ಯಡಿಯೂರಪ್ಪ ಅವರಿಗೆ ಪುನರ್ ಜನ್ಮ ಆಗಿದ್ದು, ನಾನು ಮಂತ್ರಿ ಆದ ಮೇಲೆ ಎಂದು ಹೇಳಿದರು.

    ಪಂಚಮಸಾಲಿ ಸಮೂದಾಯಕ್ಕೆ 2/ಎ ಮೀಸಲಾತಿ ನೀಡುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಈಗಲೂ ಸರ್ಕಾರದ ಮೇಲೆ ವಿಶ್ವಾಸ ಇದೆ. ನಾಳೆ ಮೀಸಲಾತಿ ಪ್ರಕಟ ಆಗುತ್ತದೆ, ಯಾವುದೇ ಸಂಶಯ ಇಲ್ಲ ಎಂದ ಅವರು, ನಾಳೆ ಶಕ್ತಿಪ್ರದರ್ಶನ ಆಗುವುದಿದೆ, ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಹಲಾಲ್ ಬಿಲ್ ವಿಚಾರವಾಗಿ ಮಾತನಾಡಿದ ಅವರು, ಹಲಾಲ್ ಭಾರತದಲ್ಲಿ ಬ್ಯಾನ್ ಆಗಬೇಕು. ಅದು ನಮ್ಮ ದೇಶದ ಸಂಸ್ಕೃತಿ ಅಲ್ಲ. ಬೊಮ್ಮಾಯಿ ಅವರು ಒಂದು ಹೆಜ್ಜೆ ಹಿಂದಿಟ್ಟು ಮುಂದೆ ಜಿಗಿತಾರೆ. ಅವರು ಒಂದು ಹೆಜ್ಜೆ ಹಿಂದಿಟ್ಟಿದ್ದಾರೆ ಎಂದರೆ ನಿರ್ಣಯ ಆದಂಗೆ ಎಂದರು. ಇದನ್ನೂ ಓದಿ: ಗಡಿ ವಿವಾದ- ಅಮಿತ್ ಶಾ ಸೂಚನೆಗೂ ಕ್ಯಾರೇ ಎನ್ನದ ಮಹಾರಾಷ್ಟ್ರದ NCP ಶಾಸಕರು

    ಪ್ರತಾಪ್ ಸಿಂಹ ಹೇಳಿಕೆ ವಿಚಾರವಾಗಿ ಮಾತನಾಡಿ, ಹೆಚ್ಚು ವಿಶ್ವವಿದ್ಯಾಲಯ ಏನಕ್ಕೆ ಮಾಡುತ್ತಾರೆ ಎನ್ನುವುದೇ ಅರ್ಥ ಆಗುತ್ತಿಲ್ಲ. ವೈಸ್ ಚಾನ್ಸಿಲರ್ ಮಾಡಿ ಹಣ ತೆಗೆದುಕೊಳ್ಳುವುದು ಬಿಲ್ಡಿಂಗ್ ಕಟ್ಟೋದು, ಕಂಪ್ಯೂಟರ್ ತೆಗೆದುಕೊಳ್ಳುವುದು ಮಾಡುತ್ತಾರೆ ಎಂದು ಹೇಳಿದರು.

    ಇದರ ಹಣ ಎಲ್ಲರಿಗೂ ಹೋಗುತ್ತಿದೆ. ಕುಲಪತಿ ಹುದ್ದೆ ಹಾಗೇ ಆಗಿದೆ. ಇದ್ದ ವಿಶ್ವವಿದ್ಯಾಲಯವನ್ನು ಅಭಿವೃದ್ಧಿ ಮಾಡುವುದು ಬಿಟ್ಟು ಈ ರೀತಿ ಮಾಡುತ್ತಿದ್ದಾರೆ. ಇರುವ ವಿಶ್ವವಿದ್ಯಾಲಯಗಳನ್ನ ಹೆಚ್ಚು ಅಭಿವೃದ್ಧಿಗೊಳಿಸಿ, ಜಿಲ್ಲೆಗೊಂದು ವಿಶ್ವವಿದ್ಯಾಲಯ ಬೇಡ, ಕ್ವಾಲಿಟಿ ಎಜುಕೇಶನ್ ಕೊಡಿ ಎಂದು ಸಲಹೆ ನೀಡಿದರು. ಇದನ್ನೂ ಓದಿ: ಎಂಜಿನಿಯರ್ ಕಾಲೇಜು ವಿದ್ಯಾರ್ಥಿಗಳ ನಡುವೆ ಮಾರಾಮಾರಿ – ಲಾಠಿ ಬೀಸಿ ನಿಯಂತ್ರಿಸಿದ ಪೊಲೀಸರು

    Live Tv
    [brid partner=56869869 player=32851 video=960834 autoplay=true]

  • ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

    ಜಿಲ್ಲಾ ಕೇಂದ್ರಗಳಲ್ಲಿ ಉದ್ಯಮಿಯಾಗು-ಉದ್ಯೋಗ ನೀಡು ಕಾರ್ಯಾಗಾರ: ಸಚಿವ ನಿರಾಣಿ

    ಬೆಳಗಾವಿ: ಯುವಕರು ಸ್ವಯಂ ಉದ್ಯೋಗದಾತರಾಗಲು ನಡೆಸುತ್ತಿರುವ ಉದ್ಯಮಿಯಾಗ—ಉದ್ಯೋಗ ನೀಡು ಕಾರ್ಯಾಗಾರ ವಿಶೇಷ ಕಾರ್ಯಕ್ರಮವೂ ಮುಂದುವರಿಯಲಿದ್ದು, ಆಯಾ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಡಾ.ಮುರುಗೇಶ್ ನಿರಾಣಿ (Murugesh Nirani) ತಿಳಿಸಿದ್ದಾರೆ.

    ಮಂಗಳವಾರ ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಡಿ.ಎಸ್.ಅರುಣ್ (D.S.Arun) ಅವರ ಪ್ರಶ್ನೆಗೆ ಉತ್ತರಿಸಿದ ಅವರು, ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ಇನ್ನೂ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಲಾಗುತ್ತದೆ. ಅದಕ್ಕಾಗಿ ಪ್ರತಿ ಜಿಲ್ಲೆಯ 3-4 ಕೇಂದ್ರಗಳಲ್ಲಿ ಒಂದು ದಿನದ ಕಾರ್ಯಕ್ರಮ ಆಯೋಜಿಸಲಾಗುತ್ತದೆ ಎಂದು ಹೇಳಿದರು. ಇದನ್ನೂ ಓದಿ: ಬಂಡವಾಳ ಹೂಡಿಕೆ ಸಮಾವೇಶದಿಂದ 6 ಲಕ್ಷ ಹುದ್ದೆ ಸೃಷ್ಟಿ: ಮುರುಗೇಶ್ ನಿರಾಣಿ

    ವಿದ್ಯಾರ್ಥಿಗಳು ಉದ್ಯೋಗ ಹುಡುಕುವ ಬದಲು ಉದ್ಯಮ ಸ್ಥಾಪಿಸಿ ಉದ್ಯೋಗ ಕೊಡುವಂತಾಗಬೇಕು ಎನ್ನುವ ಉದ್ದೇಶದಿಂದ ಕಾರ್ಯಾಗಾರವನ್ನು ನಡೆಸಿ, ಅವಕಾಶಗಳ ಬಗ್ಗೆ ಮತ್ತು ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಕುರಿತು ತಿಳಿಸಲಾಗುತ್ತಿದೆ. ಇದರಲ್ಲಿ 50 ಸಾವಿರ ಮಂದಿ ಭಾಗಿಯಾಗುವ ನಿರೀಕ್ಷೆ ಇದೆ. ನಂತರ 40-50 ತಾಸಿನ ಆನ್‌ಲೈನ್‌ ಕಾರ್ಯಕ್ರಮಕ್ಕೆ ನೋಂದಣಿ ಮಾಡಿಸಲಾಗುತ್ತದೆ ಎಂದ ಅವರು, ಮುಂದಿನ ದಿನಗಳಲ್ಲಿ ಈ ಕಾರ್ಯಕ್ರಮ ಮುಂದುವರಿಯಲಿದೆ ಎಂದು ವಿವರಿಸಿದರು.

    ಇನ್ವೆಸ್ಟ್ ಕರ್ನಾಟಕ ಕುರಿತು
    ಇನ್ವೆಸ್ಟ್ ಕರ್ನಾಟಕದಿಂದ ಎಷ್ಟು ಬಂಡವಾಳ ಬಂದಿದೆ. ಅದರಿಂದ ಆದ ಲಾಭದ ಬಗ್ಗೆ ಪ್ರಶ್ನೆ ಮಾಡಲಾಯಿತು. ಇದಕ್ಕೆ ಉತ್ತರಿಸಿದ ಸಚಿವರು, ನವೆಂಬರ್ 2 ರಿಂದ 4 ರವರೆಗೆ ಮೂರು ದಿನಗಳ ಕಾಲ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಬಗ್ಗೆ ವಿವಿಧ ಯೋಜನೆಗಳನ್ನು ಕುರಿತು ಒಪ್ಪಂದ ಮಾಡಿಕೊಳ್ಳಲಾಗಿದೆ. ಮೂರು ದಿನಗಳ ಕಾಲ ನಡೆದ ಈ ಸಮಾವೇಶದಲ್ಲಿ ಜಪಾನ್, ಫ್ರಾನ್ಸ್, ಇಂಗ್ಲೆಂಡ್, ಜರ್ಮನಿ, ಆಸ್ಟ್ರೇಲಿಯಾ, ದಕ್ಷಿಣ ಕೊರಿಯಾ ಹಾಗೂ ನೆದರ್ಲೆಂಡ್ ಸೇರಿದಂತೆ ಹಲವು ದೇಶಗಳ 15,000 ಪ್ರತಿನಿಧಿಗಳು ಹಾಗೂ ಸುಪ್ರಸಿದ್ಧ ಕಂಪನಿಯ ಸಿಇಓ ಹಾಗೂ ಅಧಿಕಾರಿಗಳು ಪಾಲ್ಗೊಂಡಿದ್ದರು ಎಂದು ಸಚಿವರು ಸಭೆಗೆ ಉತ್ತರಿಸಿದರು. ಇದನ್ನೂ ಓದಿ: CBI ದಾಳಿ – ಡಿಕೆಶಿ ಬೆನ್ನಿಗೆ ನಿಂತ ಲಕ್ಷ್ಮೀ ಹೆಬ್ಬಾಳ್ಕರ್

    ಇನ್ವೆಸ್ಟ್ ಕರ್ನಾಟಕದಲ್ಲಿ ಪ್ರಮುಖವಾಗಿ 57 ಒಪ್ಪಂದಕ್ಕೆ ಸಹಿ ಹಾಕಲಾಗಿದೆ ಎಂದು ಸಚಿವರು ಉತ್ತರಿಸಿದರು. ಸಕ್ಕರೆ ಕಾರ್ಖಾನೆಗಳ ಮಾಲೀಕರು ಕಬ್ಬು ತೂಕ ಮಾಡುವಾಗ ಮೋಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ ವಿರೋಧ ಪಕ್ಷಗಳ ಸದಸ್ಯರಿಗೆ ಸಚಿವ ನಿರಾಣಿ, ಎಥೆನಾಲ್ ಹಾಗೂ ಸಕ್ಕರೆ ಉತ್ಪಾದನೆ ಬೆಲೆ, ಆದಾಯಲ್ಲಿ ಅಲ್ಪಸ್ವಲ್ಪ ಬದಲಾವಣೆ ಇದೆ. ಹಾಗೇ ಕಬ್ಬು ತೂಕದಲ್ಲಿ ಯಾವುದೇ ಮೋಸ ಆಗುತ್ತಿಲ್ಲ. ಏಕೆಂದರೆ ಬೆಳೆಗಾರರು ಖಾಸಗಿಯಾಗಿಯೂ ತೂಕ ಮಾಡಿಸುತ್ತಾರೆ. ಹಾಗಾಗಿ ಟನ್‌ಗಟ್ಟಲೇ ಮೋಸ ಆಗುವುದಿಲ್ಲ ಎಂದು ಸದನಕ್ಕೆ ತಿಳಿಸಿದರು.

    Live Tv
    [brid partner=56869869 player=32851 video=960834 autoplay=true]

  • ಬಂಡವಾಳ ಹೂಡಿಕೆ ಸಮಾವೇಶದಿಂದ 6 ಲಕ್ಷ ಹುದ್ದೆ ಸೃಷ್ಟಿ: ಮುರುಗೇಶ್ ನಿರಾಣಿ

    ಬಂಡವಾಳ ಹೂಡಿಕೆ ಸಮಾವೇಶದಿಂದ 6 ಲಕ್ಷ ಹುದ್ದೆ ಸೃಷ್ಟಿ: ಮುರುಗೇಶ್ ನಿರಾಣಿ

    ಬೆಳಗಾವಿ: ನವೆಂಬರ್‌ನಲ್ಲಿ ನಡೆದ ಬಂಡವಾಳ ಸಮಾವೇಶದಿಂದ ರಾಜ್ಯದಲ್ಲಿ 6 ಲಕ್ಷ ಉದ್ಯೋಗ ಸೃಷ್ಟಿಯಾಗಲಿದೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ (Murugesh Nirani) ಭರವಸೆ ನೀಡಿದರು.

    ವಿಧಾನ ಪರಿಷತ್ (Vidhan Parishad) ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಕಾಂಗ್ರೆಸ್ (Congress) ಯುಬಿ ವೆಂಕಟೇಶ್‌, ನಾಗರಾಜ್ ಯಾದವ್, ಮಂಜುನಾಥ್ ಭಂಡಾರಿ ಪ್ರಶ್ನೆ ಕೇಳಿದರು.

    ಬಂಡವಾಳ ಹೂಡಿಕೆ ಸಮಾವೇಶದಿಂದ ಯಾವುದೇ ಅನುಕೂಲ ಆಗುತ್ತಿಲ್ಲ. ಸಮಾವೇಶ ಮಾಡಲು 75 ಕೋಟಿ ಖರ್ಚು ಮಾಡಲಾಗಿದೆ. ಕಳೆದ ಜಿಮ್‌ನ ಬಂಡವಾಳದಲ್ಲಿ 14% ಮಾತ್ರ ಬಂಡವಾಳ ಬಂದಿದೆ. ಹಾಗಾದ್ರೆ ಈ ಬಂಡವಾಳ ಹೂಡಿಕೆ ಸಮಾವೇಶದ ಲಾಭವೇನು. ಸುಮ್ಮನೆ ಸಮಾವೇಶಕ್ಕೆ ಹಣ ಖರ್ಚಾಗಿದೆ ಅಷ್ಟೆ‌. ಬೆಂಗಳೂರು ಬಿಟ್ಟು ಹೊರಗೆ ಬಂಡವಾಳ ಹೂಡಿಕೆ ಆಗಿಲ್ಲ ಯಾಕೆ? ಕೇವಲ ಎನರ್ಜಿ ಸೆಕ್ಟರ್‌ಗೆ ಮಾತ್ರ ಅವಕಾಶ ಕೊಡಲಾಗಿದೆ. ಸರ್ಕಾರ ಹೇಳಿದ ಹಾಗೆ ಉದ್ಯೋಗ ಸೃಷ್ಟಿ ಆಗಲ್ಲ ಎಂದು ಕಿಡಿಕಾರಿದರು.

    ಇದಕ್ಕೆ ಸಚಿವ ನಿರಾಣಿ ಉತ್ತರ ನೀಡಿದರು. ನವೆಂಬರ್‌ನಲ್ಲಿ ನಡೆದ ಬಂಡವಾಳ ಹೂಡಿಕೆ ಸಮಾವೇಶದಲ್ಲಿ 9,81,784 ಕೋಟಿ ಹೂಡಿಕೆ ಆಗಿದೆ. ಸಮಾವೇಶದಲ್ಲಿ 15 ಸಾವಿರ ಪ್ರತಿನಿಧಿಗಳು ಭಾಗವಹಿಸಿದ್ದರು. ಜಪಾನ್, ಜರ್ಮನ್, ಫ್ರಾನ್ಸ್, ಆಸ್ಟ್ರೇಲಿಯಾ, ದಕ್ಷಿಣ ಕೊರಿಯಾ, ನೆದರ್ಲೆಂಡ್ ದೇಶಗಳ ನಿಯೋಗ ಬಂದಿತ್ತು. 2012ರಲ್ಲಿ ನಮಗೆ 1 ಸಾವಿರ ಎಕರೆ ಟಾಟಾಗೆ ಅವರಿಗೆ ಕೊಡಲು ಆಗದೇ ಟಾಟಾ ಗುಜರಾತ್‌ಗೆ ಹೋಯ್ತು. 2012ರಲ್ಲಿ 1 ಲಕ್ಷ ಎಕರೆ ರೈತರಿಂದ ಭೂಮಿ ಸ್ವಾಧೀನ ಮಾಡಿಕೊಂಡೆವು. 2013ರಲ್ಲಿ ಸಿದ್ದರಾಮಯ್ಯ ಸರ್ಕಾರ ನಾವು ವಶಪಡಿಸಿಕೊಂಡಿಸಿದ್ದ 1 ಲಕ್ಷ ಎಕರೆಯನ್ನು ಡೀನೋಟಿಫೈ ಮಾಡಿದರು. ಇದರಿಂದ ಭೂಮಿ ನಮಗೆ ಸಮಸ್ಯೆ ಆಯ್ತು ಎಂದರು. ಇದನ್ನೂ ಓದಿ: ರಮೇಶ್ ಜಾರಕಿಹೊಳಿ, ಈಶ್ವರಪ್ಪ ನನ್ನ ಸಂಪರ್ಕದಲ್ಲಿದ್ದಾರೆ: ಬೊಮ್ಮಾಯಿ

    2012ರಲ್ಲಿ ಸುಮಾರು 2 ಸಾವಿರ ಕೋಟಿ ಬಂಡವಾಳ ಇನ್ವೆಸ್ಟ್ ಆಗಿತ್ತು. ಅದರ ಬಡ್ಡಿಯಲ್ಲಿ ನಾವು ಸಮಾವೇಶ ಮಾಡಿದ್ದೇವೆ. ಈ ಬಾರಿಯ ಸಮಾವೇಶದಿಂದ 6 ಲಕ್ಷ ಉದ್ಯೋಗ ಸೃಷ್ಟಿ ಆಗಲಿದೆ. 75% ಬಂಡವಾಳ ಹೂಡಿಕೆ ಆಗೋಕೆ ಸರ್ಕಾರ ಕ್ರಮವಹಿಸಲಾಗಿದೆ. ಬಂಡವಾಳ ಹೂಡಿಕೆ ಸಮಾವೇಶಕ್ಕೆ ಬೇರೆ ರಾಜ್ಯಕ್ಕೆ ಹೋಲಿಸಿದರೆ ನಮ್ಮ ರಾಜ್ಯದಲ್ಲಿ ಕಡಿಮೆ ಹಣ ಖರ್ಚು ಮಾಡಿದ್ದೇವೆ. ಬೆಂಗಳೂರು ಬಿಟ್ಟು ಬೇರೆ ನಗರದಲ್ಲೂ ಬಂಡಾಯ ಹೂಡಿಕೆಗೆ ಕ್ರಮವಹಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ನನ್ನನ್ನು ಆದಷ್ಟು ಬೇಗ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳಲಿ: ಈಶ್ವರಪ್ಪ ಭಾವುಕ ಮಾತು

    Live Tv
    [brid partner=56869869 player=32851 video=960834 autoplay=true]

  • ಬಾದಾಮಿ ಕ್ಷೇತ್ರದಲ್ಲೇ ಸಿದ್ದರಾಮಯ್ಯಗೆ ಬಹಿಷ್ಕಾರ..!

    ಬಾದಾಮಿ ಕ್ಷೇತ್ರದಲ್ಲೇ ಸಿದ್ದರಾಮಯ್ಯಗೆ ಬಹಿಷ್ಕಾರ..!

    ಬಾಗಲಕೋಟೆ: ಬಾದಾಮಿಯಲ್ಲಿ ರೈತರ (Farmers) ಹೋರಾಟಕ್ಕೆ ಬೆಂಬಲ ನೀಡುತ್ತಿಲ್ಲ ಹಾಗೂ ರೈತರ ಪರ ದನಿ ಎತ್ತುತ್ತಿಲ್ಲ ಎಂಬ ಕಾರಣದಿಂದ ವಿಪಕ್ಷ ನಾಯಕ ಹಾಗೂ ಬಾದಾಮಿ (Badami) ಶಾಸಕ ಸಿದ್ದರಾಮಯ್ಯ (Siddaramaiah) ಅವರ ವಿರುದ್ಧ ಸ್ವಕ್ಷೇತ್ರದಲ್ಲೇ ಬಹಿಷ್ಕಾರದ ಕೂಗು ಕೇಳಿಬಂದಿದೆ.

    ವಿಮಾನ ನಿಲ್ದಾಣಕ್ಕಾಗಿ ರೈತರಿಂದ ಕೃಷಿ ಭೂಮಿ (Farmers Land) ಸ್ವಾಧೀನಪಡಿಸಿಕೊಳ್ಳಲಾಗುತ್ತಿದೆ. ಅನೇಕ ದಿನಗಳಿಂದ ರೈತರು ಹೋರಾಟ ನಡೆಸುತ್ತಿದ್ದರೂ ಸಿದ್ದರಾಮಯ್ಯ ತಿರುಗಿನೋಡಿಲ್ಲವೆಂದು ಹೇಳಿ ಬಾದಾಮಿಯ ಹಲಕುರ್ಕಿ ಗ್ರಾಮದ ಜನ ಬಹಿಷ್ಕಾರ (Boycott Siddaramaiah) ಹಾಕಲು ನಿರ್ಧರಿಸಿದ್ದಾರೆ. ಇದನ್ನೂ ಓದಿ: ಪತ್ನಿಯನ್ನ ಗೆಳೆಯರೊಂದಿಗೆ ಮಲಗಿಸಿ ವೀಡಿಯೋ ಚಿತ್ರೀಕರಣ- ಬೆಂಗ್ಳೂರಲ್ಲೊಬ್ಬ ಸೈಕೋಪಾತ್ ಪತಿ!

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಎರಡು ದಿನಗಳ ಪ್ರವಾಸದ ಹಿನ್ನೆಲೆಯಲ್ಲಿ ಬಹಿಷ್ಕಾರ ಹಾಕಲು ಹಲಕುರ್ಕಿ ಗ್ರಾಮದ ಜನ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಹೆಣ್ಣು ಮಗುವಿನ ತಂದೆಯಾದ ಸಮೀರ್ ಆಚಾರ್ಯ: ತುಳಜಾ ಭವಾನಿ ಬಂದ್ಳು ಎಂದ ದಂಪತಿ

    ಗ್ರಾಮದ 2 ಸಾವಿರ ಎಕರೆ ಭೂಪ್ರದೇಶವನ್ನು ವಿಮಾನ ನಿಲ್ದಾಣ ನಿರ್ಮಾಣಕ್ಕಾಗಿ ಕೆಐಎಡಿಬಿಯಿಂದ (KIADB) ಸ್ವಾಧೀನಪಡಿಸಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಇದರ ವಿರುದ್ಧ ರೈತರು 80 ದಿನಗಳಿಂದ ಪ್ರತಿಭಟನೆ ಮಾಡ್ತಿದ್ದಾರೆ. ಆದರೂ ಸಿದ್ದರಾಮಯ್ಯ ಅವರು ಗ್ರಾಮದ ರೈತರ ಪರವಾಗಿ ದನಿ ಎತ್ತಿಲ್ಲ. ಸದನದಲ್ಲೂ ಇದರ ಬಗ್ಗೆ ವಿರೋಧ ವ್ಯಕ್ತಪಡಿಸಿಲ್ಲ. ಆದ್ದರಿಂದ ಹಲಕುರ್ಕಿ ಗ್ರಾಪಂ ವ್ಯಾಪ್ತಿಯ ಚಿಕ್ಕಮುಚ್ಚಳಗುಡ್ಡ ಗ್ರಾಮದಲ್ಲಿ ಇದೇ ಡಿ.12ರಂದು ಬಿಸಿಎಂ ಹಾಸ್ಟೆಲ್ ಕಟ್ಟಡ ಉದ್ಘಾಟನಾ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅವರಿಗೆ ಬಹಿಷ್ಕಾರ ಹಾಕಬೇಕು ಎಂದು ಗ್ರಾಮಸ್ಥರು ನಿರ್ಧರಿಸಿದ್ದಾರೆ.

    ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಇಲ್ಲಿ ವಿಮಾನ ನಿಲ್ದಾಣ ಸ್ಥಾಪನೆಗೆ ಪ್ಲ್ಯಾನ್‌ ಮಾಡಿದ್ದಾರೆ. ಅದಕ್ಕೆ ವಿರೋಧ ವ್ಯಕ್ತಪಡಿಸಿರುವ ರೈತರು ವಿಮಾನ ನಿಲ್ದಾಣಕ್ಕಾಗಿ ಫಲವತ್ತಾದ ಕೃಷಿ ಭೂಮಿಯನ್ನು ಕೊಡುವುದಿಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಆದರೂ ಈಗಾಗಲೇ ಕೆಐಎಡಿಬಿಯಿಂದ ರೈತರಿಗೆ ನೊಟೀಸ್ ನೀಡಲಾಗಿದೆ.

    Live Tv
    [brid partner=56869869 player=32851 video=960834 autoplay=true]

  • ಕರ್ನಾಟಕ ಚುನಾವಣೆ ಮೇಲೂ ಪರಿಣಾಮ ಬೀರಲಿದೆ ಗುಜರಾತ್ ಫಲಿತಾಂಶ: ನಿರಾಣಿ

    ಕರ್ನಾಟಕ ಚುನಾವಣೆ ಮೇಲೂ ಪರಿಣಾಮ ಬೀರಲಿದೆ ಗುಜರಾತ್ ಫಲಿತಾಂಶ: ನಿರಾಣಿ

    ಬೆಂಗಳೂರು: ಹಿಂದಿನ ಎಲ್ಲ ದಾಖಲೆಗಳನ್ನು ಮುರಿದು ಸತತ 7ನೇ ಬಾರಿಗೆ ಗುಜರಾತ್‍ (Gujarat Election Result) ನಲ್ಲಿ ಬಿಜೆಪಿ ಅಭೂತಪೂರ್ವ ಗೆಲುವು ಸಾಧಿಸಿರುವುದಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್.ಆರ್ ನಿರಾಣಿ (Murugesh Nirani) ಅವರು ಸಂತಸ ವ್ಯಕ್ತಪಡಿಸಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ ಜನಪ್ರಿಯತೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ (JP Nadda) ಅವರ ಸಂಘಟನಾ ಚಾತುರ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರ ತಂತ್ರಗಾರಿಕೆ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಅವರ ಸರಳತೆ ಹಾಗೂ ಕಾರ್ಯಕರ್ತರ ಪರಿಶ್ರಮದಿಂದ ಇಷ್ಟು ದೊಡ್ಡ ಮಟ್ಟದಲ್ಲಿ ಗೆಲುವಿಗೆ ಕಾರಣವಾಗಿದೆ ಎಂದು ನಿರಾಣಿ ವಿಶ್ಲೇಷಿಸಿದ್ದಾರೆ.

    ವಿಶ್ವ ನಾಯಕ ನರೇಂದ್ರ ಮೋದಿ (Narendra Modi) ಅವರ ಜನಪ್ರಿಯತೆಗೆ ಗುಜರಾತ್ ವಿಧಾನಸಭಾ ಚುನಾವಣೆ ಫಲಿತಾಂಶವೇ ಸಾಕ್ಷಿ. ಸ್ವಚ್ಛ, ಪಾರದರ್ಶಕ ಹಾಗೂ ಸರ್ವರ ವಿಕಾಸವೇ ಪಕ್ಷದ ಗೆಲುವಿಗೆ ಕಾರಣವಾಗಿದೆ ಎಂದಿದ್ದಾರೆ. ಒಂದು ರಾಜ್ಯದಲ್ಲಿ ಸತತವಾಗಿ 7ನೇ ಬಾರಿ ಅಧಿಕಾರಕ್ಕೆ ಬರುವುದೆಂದರೆ ಸಾಮಾನ್ಯ ಮಾತಲ್ಲ. ಅಲ್ಲಿನ ಜನತೆ ಪಕ್ಷ ಮತ್ತು ನಾಯಕತ್ವದ ಮೇಲೆ ನಂಬಿಕೆ ಇಟ್ಟು ಹಿಂದಿನ ದಾಖಲೆಗಳನ್ನು ಮುರಿದು ಇಷ್ಟು ದೊಡ್ಡ ಮಟ್ಟದಲ್ಲಿ ಜನಾದೇಶ ನೀಡಿರುವುದು ನಿಜಕ್ಕೂ ಶ್ಲಾಘನೀಯ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

    ಯಾರು ಏನೇ ಹೇಳಲಿ ಗುಜರಾತ್ ಫಲಿತಾಂಶ ಕರ್ನಾಟಕದ ಮೇಲೆ ಖಂಡಿತವಾಗಿ ಪರಿಣಾಮ ಬೀರಲಿದೆ. ಇಲ್ಲಿನ ಮತದಾರರು ಕೂಡ ಪ್ರಬುದ್ಧರಾಗಿದ್ದು, ಮುಂದಿನ ಚುನಾವಣೆಯಲ್ಲಿ ನಮ್ಮ ಪಕ್ಷವನ್ನು ಕೈ ಹಿಡಿಯಲಿದ್ದಾರೆ ಎಂದು ನಿರಾಣಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಗುಜರಾತ್‌ ಚುನಾವಣೆ – ಕಾಂಗ್ರೆಸ್‌ ಹೀನಾಯ ಸೋಲಿಗೆ ಕಾರಣ ಏನು?

    ಕೇಂದ್ರ ಮತ್ತು ರಾಜ್ಯದಲ್ಲೂ ಡಬ್ಬಲ್ ಇಂಜಿನ್ ಸರ್ಕಾರ ಅಧಿಕಾರದಲ್ಲಿರುವುದರಿಂದ ಅಭಿವೃದ್ಧಿ ವೇಗ ಮತ್ತು ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಸಹಾಯವಾಗಲಿದೆ. ಹೀಗಾಗಿ 2023ರ ವಿಧಾನಸಭೆ ಚುನಾವಣೆಯಲ್ಲಿ ರಾಜ್ಯದಲ್ಲೂ 100ಕ್ಕೆ ನೂರರಷ್ಟು ಫಲಿತಾಂಶ ಬರಲಿದೆ ಎಂದು ನಿರಾಣಿ ಅವರು ಭವಿಷ್ಯ ನುಡಿದಿದ್ದಾರೆ.

    ಪ್ರಧಾನಿ ನರೇಂದ್ರ ಮೋದಿ ಅವರ ಜನಪ್ರಿಯತೆ ಮುಖ್ಯಮಂತ್ರಿ ಬೊಮ್ಮಾಯಿ ಅವರ ಸರಳತೆ, ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ (B. S Yediyurappa) ಅವರ ದಕ್ಷ ನಾಯಕತ್ವ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಅವರ ಸಂಘಟನೆ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರ ನಿರ್ದೇಶನ, ಕೇಂದ್ರ ಮತ್ತು ರಾಜ್ಯ ನಾಯಕರ ಮಾರ್ಗದರ್ಶನ ಮತ್ತು ಸಂಘ ಪರಿವಾರದ ನಾಯಕರ ಸಲಹೆಯಂತೆ ಪಕ್ಷವನ್ನು ಮುನ್ನಡೆಸಲಿದ್ದೇವೆ ಎಂದು ನಿರಾಣಿ ತಿಳಿಸಿದ್ದಾರೆ.

    ಹಿಮಾಚಲಪ್ರದೇಶ (Himachal Pradesh Election Result) ದಲ್ಲಿ ಕಳೆದ ಕೆಲವು ವರ್ಷಗಳಿಂದ ಅಲ್ಲಿ ಒಂದು ಬಾರಿ ಆಡಳಿತ ನಡೆಸಿದ ಪಕ್ಷ ಮತ್ತೊಮ್ಮೆ ಅಧಿಕಾರಕ್ಕೆ ಬರುವುದಿಲ್ಲ. ನಾವು ಅಲ್ಲಿಯೂ ಕೂಡ ಅಧಿಕಾರಕ್ಕೆ ಬರಬಹುದೆಂಬ ವಿಶ್ವಾಸ ಇಟ್ಟುಕೊಂಡಿದ್ದೆವು. ನಮಗೆ ಏಕೆ ಹಿನ್ನಡೆಯಾಗಿದೆ ಎಂಬುದರ ಕುರಿತು ಆತ್ಮಾವಲೋಕನ ಮಾಡಿಕೊಳ್ಳುವುದಾಗಿ ಸಚಿವ ನಿರಾಣಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಜಿಮ್ ಒಪ್ಪಂದ ಮುಂದಿನ 5 ವರ್ಷದೊಳಗೆ ಶೇ. 75 ರಷ್ಟು ಅನುಷ್ಠಾನ: ಮುರುಗೇಶ್ ನಿರಾಣಿ

    ಜಿಮ್ ಒಪ್ಪಂದ ಮುಂದಿನ 5 ವರ್ಷದೊಳಗೆ ಶೇ. 75 ರಷ್ಟು ಅನುಷ್ಠಾನ: ಮುರುಗೇಶ್ ನಿರಾಣಿ

    – ವೈಭವೀಕರಣ ಇಲ್ಲವೇ ತೋರ್ಪಡೆಗಾಗಿ ಒಪ್ಪಂದ ಮಾಡಿಕೊಂಡಿಲ್ಲ
    – ಹಿಂದಿನ ಸರ್ಕಾರದ ನೀತಿಯಿಂದಾಗಿ ಯೋಜನೆಗಳ ಅನುಷ್ಠಾನ ವಿಳಂಬ
    – ಪ್ರಮಾಣ ಪತ್ರ ಆಧಾರಿತ ತಿಳುವಳಿ ಮಾಡಿಕೊಂಡಿರುವವರ ಜೊತೆ ಒಪ್ಪಂದ
    – 59 ಯೋಜನೆ, 20,627.88 ಕೋಟಿ ಬಂಡವಾಳ ಹೂಡಿಕೆ, 80,764 ಜನರಿಗೆ ಉದ್ಯೋಗ

    ಬೆಂಗಳೂರು: ನವೆಂಬರ್ ತಿಂಗಳಿನಲ್ಲಿ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ (Global Investors Meet) ಮಾಡಿಕೊಂಡಿರುವ ಒಪ್ಪಂದಗಳು ಮುಂದಿನ 5 ವರ್ಷಗಳಲ್ಲಿ ಶೇ. 75ರಷ್ಟು ಅನುಷ್ಠಾನಕ್ಕೆ ಬರಲಿದ್ದು, ಯಾವುದೇ ರೀತಿಯ ಅನುಮಾನ ಬೇಡ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ (Murugesh Nirani) ಭರವಸೆ ನೀಡಿದರು.

    ಮಂಗಳವಾರ ಬೆಂಗಳೂರು (Bengaluru) ಪ್ರೆಸ್ ಕ್ಲಬ್ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, ನಾವು ಕೇವಲ ವೈಭವೀಕರಣ ಮಾಡಿಕೊಳ್ಳಲು ಅಥವಾ ಬಂಡವಾಳ ಹೆಚ್ಚಿಸಿಕೊಳ್ಳಲು ಇಲ್ಲವೇ ಅಂಕಿ-ಸಂಖಿಗಳನ್ನು ತೋರಿಸಿಕೊಳ್ಳಲು ಒಪ್ಪಂದ ಮಾಡಿಕೊಂಡಿಲ್ಲ. ಯೋಜನೆಗಳನ್ನು ರಾಜ್ಯದಲ್ಲಿ ಪ್ರಾರಂಭಿಸುವವರಿಗೆ ಮಾತ್ರ ಅನುಮೋದನೆ ನೀಡಿದ್ದೇವೆ. ಇನ್ನು 5 ವರ್ಷದೊಳಗೆ ಶೇ. 75ರಷ್ಟು ಎಂಒಯು ಅನುಷ್ಠಾನಕ್ಕೆ ಬರಲಿವೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು.

    ನವೆಂಬರ್ ತಿಂಗಳಲ್ಲಿ ನಡೆದ ಹೂಡಿಕೆದಾರರ ಸಮಾವೇಶದಲ್ಲಿ ಸುಮಾರು 9.81 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗಿವೆ. ಉದ್ದಿಮೆಗಳಿಗೆ ಬೇಕಾದ ನೀರು, ಭೂಮಿ, ವಿದ್ಯುತ್, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಲು ಈಗಾಗಲೇ ಸಂಬಂಧಪಟ್ಟ ಇಲಾಖೆಗಳ ಜೊತೆ ಸಮನ್ವಯ ಸಮಿತಿಯನ್ನು ರಚಿಸಿದ್ದೇವೆ. ಇದು ನಮ್ಮ ನಿರೀಕ್ಷೆಗೂ ಮೀರಿ ಅನುಷ್ಠಾನವಾಗುತ್ತದೆ ಎಂದು ಸಂತಸವನ್ನು ವ್ಯಕ್ತಪಡಿಸಿದರು.

    ರಾಜ್ಯದಲ್ಲಿ 2 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಲು ಉದ್ಯಮಿಗಳು ಮುಂದೆ ಬಂದಿದ್ದರೂ ನಾವು ಅವರ ಜೊತೆ ಎಂಒಯು ಮಾಡಿಕೊಂಡಿಲ್ಲ. ಈಗಾಗಲೇ ಮಾಡಿಕೊಂಡಿರುವ ತಿಳುವಳಿಕೆ ಒಪ್ಪಂದ ಪತ್ರಕ್ಕೆ (ಎಂಒಯು) ಆದ್ಯತೆ ಕೊಡುತ್ತೇವೆ. ಕೇವಲ ಅಂಕಿ-ಸಂಖ್ಯೆಗಳನ್ನು ಹೆಚ್ಚಿಸಲು ಒಪ್ಪಂದ ಮಾಡಿಕೊಳ್ಳುವ ಪ್ರವೃತ್ತಿ ನಮ್ಮಲ್ಲಿ ಇಲ್ಲ ಎಂದು ಸ್ಪಷ್ಟಪಡಿಸಿದರು.

    ಪ್ರಮಾಣ ಪತ್ರ ಆಧಾರಿತ ತಿಳುವಳಿ ಮಾಡಿಕೊಂಡಿರುವವರ ಜೊತೆ ಒಪ್ಪಂದ ಮಾಡಿಕೊಂಡಿದ್ದೇವೆ. ಅಂದರೆ ಯಾರು ನಮ್ಮ ರಾಜ್ಯದಲ್ಲಿ ಖಚಿತವಾಗಿ ಹೂಡಿಕೆ ಮಾಡಿ ಉದ್ಯಮಗಳನ್ನು ಆರಂಭಿಸುತ್ತಾರೋ ಅಂತಹವರಿಗೆ ಮಾತ್ರ ಆದ್ಯತೆ ಕೊಟ್ಟಿದ್ದೇವೆ. ಹಿಂದಿನ ಸರ್ಕಾರಗಳ ಕೆಲವು ತಪ್ಪುಗಳಿಂದಾಗಿ ಯೋಜನೆಗಳು ಅನುಷ್ಠಾನವಾಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

    ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಶೇ. 90ರಷ್ಟು ಟಯರ್-2 ಮತ್ತು 3 ನಗರಗಳಲ್ಲಿ ಹೂಡಿಕೆಯಾಗಿವೆ. 2 ಮತ್ತು 3ನೇ ಹಂತದ ನಗರಗಳಲ್ಲಿ ಬಂಡವಾಳ ಹೂಡಿಕೆಗೆ ಗಮನಹರಿಸಿದ್ದೇವೆ ಎಂದರು.

    ಕೈಗಾರಿಕಾ ಉದ್ದೇಶಗಳಿಗೆ ನಾವು ಯಾವುದೇ ಒಬ್ಬೇ ಒಬ್ಬ ರೈತರಿಂದಲೂ ಬಲವಂತವಾಗಿ ಜಮೀನನ್ನು ಭೂಸ್ವಾಧೀನ ಮಾಡಿಕೊಳ್ಳುತ್ತಿಲ್ಲ. ಸ್ವಯಂಪ್ರೇರಿತರಾಗಿ ಯಾರು ಜಮೀನು ಕೊಡಲು ಬರುತ್ತಾರೋ ಅಂತಹವರಿಗೆ ಮಾತ್ರ ಸ್ವಾಧೀನ ಪಡಿಸಿಕೊಳ್ಳುತ್ತಿದ್ದೇವೆ. ಕೃಷಿ ಯೋಗ್ಯ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳುವುದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸ್ಪಷ್ಟಪಡಿಸಿದರು.

    ಕೆಲವು ಕಡೆ ರೈತರು ಸ್ವಯಂಪ್ರೇರಿತರಾಗಿ ಬಂದು ತಮ್ಮ ಜಮೀನನ್ನು ಮಾರುಕಟ್ಟೆ ದರದಂತೆ ಖರೀದಿ ಮಾಡಬೇಕೆಂದು ಮನವಿ ಮಾಡಿದ್ದಾರೆ. ಕೆಲವು ಕಡೆ ಜಮೀನೇ ಇಲ್ಲದ ರೈತರು ಪ್ರತಿಭಟನೆ ನಡೆಸುತ್ತಾರೆ. ಇದರ ಹಿಂದೆ ರಾಜಕೀಯ ಉದ್ದೇಶವೂ ಇದೆ. ರಾಜ್ಯದಲ್ಲಿ ಇದುವರೆಗೂ ನಾವು ಕೈಗಾರಿಕೆಗಳಿಗೆ ಕೇವಲ ಶೇ. 0.61 ಭೂಮಿಯನ್ನು ಮಾತ್ರ ಬಳಸಿಕೊಂಡಿದ್ದೇವೆ ಎಂದು ಅಂಕಿ ಸಂಖ್ಯೆಗಳನ್ನು ವಿವರಿಸಿದರು.

    ಉದ್ಯೋಗ ಸೃಷ್ಟಿ: ಮಂಗಳವಾರ ಕರ್ನಾಟಕ ಉದ್ಯೋಗ ಮಿತ್ರದಲ್ಲಿ ನಡೆದ 136ನೇ ರಾಜ್ಯಮಟ್ಟದ ಏಕಗವಾಕ್ಷಿ ಅನುಮೋದನಾ ಸಮಿತಿ ಸಭೆಯಲ್ಲಿ 59 ಯೋಜನೆಗಳಿಂದ 20,627.88 ಕೋಟಿ ರೂ. ಬಂಡವಾಳ ಹೂಡಿಕೆಯಾಗಿದ್ದು, ಇದರಿಂದ 80,764 ಜನರಿಗೆ ಉದ್ಯೋಗಾವಕಾಶ ಲಭಿಸಲಿವೆ. 50 ಕೋಟಿಗೂ ರೂ. ಹೆಚ್ಚು ಬಂಡವಾಳ ಹೂಡಿಕೆಯ 7 ಪ್ರಮುಖ ಬೃಹತ್ ಮತ್ತು ಮದ್ಯಮ ಯೋಜನೆಗಳಿಗೆ ಅನುಮೋದನೆ ನೀಡಿದ್ದು, 852.06 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 3,560 ಜನರಿಗೆ ಉದ್ಯೋಗ ಅವಕಾಶ ಲಭಿಸಲಿದೆ ಎಂದು ತಿಳಿಸಿದರು.

    15 ಕೋಟಿ ರೂ. 50 ಕೋಟಿ ರೂ.ಯೊಳಗಿನ 48 ಹೊಸ ಯೋಜನೆಗಳಿಗೆ ಸಮಿತಿಯು ಅನುಮೋದನೆ ನೀಡಿದ್ದು, ಒಟ್ಟು 923.9 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ 4,444 ಜನರಿಗೆ ಉದ್ಯೋಗಗಳು ಸಿಗಲಿವೆ. ಹೆಚ್ಚುವರಿ ಬಂಡವಾಳ ಹೂಡಿಕೆಯ ನಾಲ್ಕು ಯೋಜನೆಗಳಿಂದ 852.73 ಕೋಟಿ ರೂ. ಬಂಡವಾಳ ಹೂಡಿಕೆಯಾಗಿ ಅಂದಾಜು 1,460 ಜನರಿಗೆ ಉದ್ಯೋಗ ಅವಕಾಶ ಸಿಗಲಿವೆ ಎಂದು ವಿವರಿಸಿದರು.

    ಎಥನಾಲ್ ಬಳಕೆಗೆ ಹೆಚ್ಚು ಒತ್ತು: ರಾಜ್ಯದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಹೊರೆಯನ್ನು ತಗ್ಗಿಸಿ ಎಥನಾಲ್ ಬಳಕೆಗೆ ಹೆಚ್ಚು ಒತ್ತು ಕೊಟ್ಟಿದ್ದೇವೆ. ಇದರಿಂದ ಪರಿಸರ ಮತ್ತು ನಾಗರಿಕ ಸಮಾಜದ ಮೇಲೆ ಉಂಟಾಗುತ್ತಿದ್ದ ದುಷ್ಪರಿಣಾಮಗಳು ಕಡಿಮೆ ಆಗಲಿವೆ ಎಂದು ನಿರಾಣಿ ಅವರು ತಿಳಿಸಿದರು.

    ಈಗಾಗಲೇ ಡೀಸೆಲ್ ಇಂಜಿನ್ ವಾಹನಗಳ ಅಮದನ್ನು ಬಂದ್ ಮಾಡಲಾಗಿದೆ. ವಾಹನಗಳನ್ನು ಬಯೋ ಫ್ಯೂಲ್ ಅಂದರೆ ಸ್ಥಳೀಯವಾಗಿ ದೊರೆಯುವ ಎಥನಾಳ ತೈಲದಿಂದ ವಾಹನಗಳನ್ನು ಚಾಲನೆ ಮಾಡಲು ಒತ್ತು ನೀಡಲಾಗುವುದು ಎಂದರು.

    ಆಮದನ್ನು ಕಡಿಮೆ ಮಾಡಿ ರಫ್ತು ಹೆಚ್ಚಿಸಲು ಒತ್ತು ನೀಡುತ್ತಿದ್ದು ಮೇಕ್ ಇನ್ ಇಂಡಿಯಾಗೆ ಅನುವು ಮಾಡಿ ಕೊಡುವುದರಿಂದ ರಾಜ್ಯ ಇಡೀ ಪ್ರಪಂಚದಲ್ಲಿ ಬಲಿಷ್ಠವಾಗಿ ಹೊರ ಹಿಮ್ಮಲಿದೆ ಎಂದು ಹೇಳಲು ಹರ್ಷಿಸುತ್ತೇನೆ. ಸರ್. ಎಂ. ವಿಶ್ವೇಶ್ವರಯ್ಯ ಅವರ ಕನಸನ್ನು ಸಾಕಾರ ಮಾಡುವತ್ತ ನಮ್ಮ ಸರ್ಕಾರ ಸಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಹಳ್ಳಿಹಕ್ಕಿ ಮರಳಿ ಗೂಡು ಸೇರುತ್ತಾ? ನಿನ್ನೆ ಖರ್ಗೆ, ಇವತ್ತು ಸಿದ್ದು ಭೇಟಿಯ ಗುಟ್ಟೇನು?

    ಎಲ್ಲರಿಗೂ ಮೀಸಲಾತಿ ಸಿಗಲಿ : ಪಂಚಮಸಾಲಿ ಸಮುದಾಯಕ್ಕೆ ಮೀಸಲಾತಿ ನೀಡುವ ಸಂಬಂಧ ಸರ್ಕಾರ ಸಕಾರಾತ್ಮಕವಾದ ನಿರ್ಧಾರಗಳನ್ನು ತೆಗೆದುಕೊಂಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಹಿಂದುಳಿದ ವರ್ಗಗಳ ಆಯೋಗ ನೀಡುವ ವರದಿ ಮೇಲೆ ಮುಂದಿನ ಕ್ರಮವನ್ನು ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ.

    ಪಂಚಮಸಾಲಿ ಸಮುದಾಯದ ಜೊತೆಗೆ ವೀರಶೈವ, ಲಿಂಗಾಯತ ಸಮುದಾಯದಲ್ಲಿರುವ ಸಣ್ಣ ಸಣ್ಣ ಸಮುದಾಯಕ್ಕೂ ಮೀಸಲಾತಿ ಸಿಗಬೇಕೆಂಬುದು ನಮ್ಮ ಆಶಯ. ಈಗಲೂ ನಮ್ಮ ಸಮುದಾಯದಲ್ಲಿ ಕೆಲವರಿಗೆ ಸೂಕ್ತವಾದ ಸಂವಿಧಾನ ಬದ್ಧ ಸ್ಥಾನಮಾನಗಳು ಸಿಕ್ಕಿಲ್ಲ. ನನ್ನ ಪ್ರಕಾರ ಸಮಸ್ತ ವೀರಶೈವ ಸಮುದಾಯಕ್ಕೆ ಮೀಸಲಾತಿ ಅಗತ್ಯ ಎಂದು ನಿರಾಣಿ ಅಭಿಪ್ರಾಯಪಟ್ಟರು. ಹಿಂದುಳಿದ ವರ್ಗಗಳ ಆಯೋಗ ವರದಿ ಕೊಟ್ಟ ತಕ್ಷಣ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಒಂದೇ ವರ್ಷದಲ್ಲಿ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಭಾರೀ ಏರಿಕೆ!

    ಕಮಿಷನ್ ಆರೋಪ ರಾಜಕೀಯ ಆರೋಪ ಕುರಿತಾಗಿ ಮಾತನಾಡಿದ ಅವರು, ಇದೊಂದು ಆಧಾರರಹಿತ ಆರೋಪ. ಇದರಲ್ಲಿ ಸತ್ಯಾಂಶ ಇಲ್ಲ ಎಂದು ಪರೋಕ್ಷವಾಗಿ ಪ್ರತಿಪಕ್ಷಗಳ ಆರೋಪಕ್ಕೆ ತಿರುಗೇಟು ನೀಡಿದರು. ಮಾಧ್ಯಮ ಸಂವಾದದಲ್ಲಿ ಪ್ರೆಸ್ ಕ್ಲಬ್ ಅಧ್ಯಕ್ಷರಾದ ಶ್ರೀಧರ್, ಪ್ರಧಾನ ಕರ್ಯದರ್ಶಿ ಬಿ.ಪಿ.ಮಲ್ಲಪ್ಪ , ಖಜಾಂಚಿ ಮೋಹನ್, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಇಲಾಖೆಯ ಆಯುಕ್ತೆ ಗುಂಜನ್ ಕೃಷ್ಣ ಹಾಜರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 9,81,784 ಕೋಟಿ ರೂ. ಹೂಡಿಕೆ ಒಪ್ಪಂದ: ಸಚಿವ ನಿರಾಣಿ

    ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 9,81,784 ಕೋಟಿ ರೂ. ಹೂಡಿಕೆ ಒಪ್ಪಂದ: ಸಚಿವ ನಿರಾಣಿ

    – ಶೇ.90 ರಷ್ಟು ಬಂಡವಾಳ ಹೂಡಿಕೆಗಳು ಬೆಂಗಳೂರಿನ ಆಚೆ ಆಗುತ್ತಿದೆ
    – 6 ಲಕ್ಷಕ್ಕೂ ಹೆಚ್ಚು ಉದ್ಯೋಗ ಸೃಷ್ಟಿ

    ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆ ಸಮಾವೇಶ (Global Investors Meet) ದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ (Murugesh Nirani) ತಿಳಿಸಿದ್ದಾರೆ.

    ಜಾಗತಿಕ ಹೂಡಿಕೆದಾರರ ಸಮಾವೇಶದ ವಿವರಗಳನ್ನು ಹಂಚಿಕೊಳ್ಳಲು ಶನಿವಾರ ನಗರದ ಖಾಸಗಿ ಹೋಟೆಲ್‍ನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಚಿವರು, ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದೆ. ಈ ಪೈಕಿ ಶೇ.90ಕ್ಕೂ ಹೆಚ್ಚು ಯೋಜನೆಗಳು ಬೆಂಗಳೂರಿನ ಆಚೆ ಅನುಷ್ಠಾನಗೊಳ್ಳುತ್ತಿದೆ ಎಂದು ಅವರು ಹೇಳಿದರು.

    ಮೂರು ದಿನಗಳ ಸಮಾವೇಶದಲ್ಲಿ ಒಟ್ಟು 9,81,784 ಕೋಟಿ ರೂ. ಬಂಡವಾಳ ಹೂಡಿಕೆ ಒಪ್ಪಂದವಾಗಿದ್ದು, ಈ ಪೈಕಿ ಲಕ್ಷ ಕೋಟಿ ರೂ. ಮೊತ್ತದ 68 ಯೋಜನೆಗಳಿಗೆ ಈಗಾಗಲೇ ಅನುಮೋದನೆ ನೀಡಲಾಗಿದೆ. 5, 41,369 ಕೋಟಿ ರೂ. ಮೊತ್ತದ 57 ಯೋಜನೆಗಳಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. 1,57,000 ಕೋಟಿ ರೂ. ಮೊತ್ತದ 2 ಯೋಜನೆಗಳನ್ನು ಸಮಾವೇಶದಲ್ಲಿ ಘೋಷಿಸಲಾಗಿದೆ ಎಂದು ಅವರು ವಿವಿರ ನೀಡಿದರು.

    ವಿವಿಧ ಉದ್ಯಮಿಗಳು (Businessman) 2 ಲಕ್ಷ ಕೋಟಿ ರೂ. ಹೂಡಿಕೆ ಮಾಡುವ ಕುರಿತು ಒಪ್ಪಂದ ಪ್ರಸ್ತಾವನೆಗಳೊಂದಿಗೆ ಬಂದಿದ್ದರು. ಆದರೆ ಈ ಯೋಜನೆಗಳಿಗೆ ಭೂಮಿ, ವಿದ್ಯುತ್, ಕಚ್ಚಾ ವಸ್ತುಗಳು, ಸಬ್ಸಿಡಿ ಸೇರಿದಂತೆ ವಿವಿಧ ವಿಷಯಗಳು ಇತ್ಯರ್ಥವಾಗಬೇಕಾಗಿರುವುದರಿಂದ ಒಪ್ಪಂದ ಮಾಡಿಕೊಂಡಿಲ್ಲ. ಮುಂದಿನ ದಿನಗಳಲ್ಲಿ ಈ ಉದ್ಯಮಿಗಳೊಂದಿಗೆ ನಮ್ಮ ಅಧಿಕಾರಿಗಳು ಚರ್ಚಿಸಿ, ಸೂಕ್ತ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ದೇಶದಲ್ಲೇ ಮೊದಲ ಏಥರ್ ಕಂಪೆನಿಯ ಇವಿ ಚಾರ್ಜಿಂಗ್ ವ್ಯವಸ್ಥೆಗೆ ಚಾಲನೆ

    90 ದಿನಗಳೊಳಗೆ ಅನುಮೋದನೆ: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಒಡಂಬಡಿಕೆಗಳನ್ನು ಕಾಲ ಮಿತಿಯೊಳಗೆ ಅನುಷ್ಠಾನ ಮಾಡಲು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಾಗುವುದು. ಹೂಡಿಕೆದಾರರ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳನ್ನು ತೊಂಬತ್ತು ದಿನದೊಳಗೆ ಅನುಮೋದನೆ ನೀಡಲಾಗುವುದು. ಒಡಂಬಡಿಕೆಗಳ ಅನುಷ್ಠಾನಕ್ಕಾಗಿ ಜಿಲ್ಲಾವಾರು ಸಮನ್ವಯ ಸಮಿತಿ ಹಾಗೂ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗುವುದು. ಮುಖ್ಯವಾಗಿ ಈ ಸಮಾವೇಶದಲ್ಲಿ ಆಗಿರುವ ಒಪ್ಪಂದಗಳ ಪೈಕಿ ಅಂದಾಜು ಶೇ.70ರಷ್ಟು ಯೋಜನೆಗಳು ಅನುಷ್ಠಾನಗೊಳ್ಳುವ ವಿಶ್ವಾಸ ಇದೆ ಎಂದು ಅವರು ವಿವರಿಸಿದರು.

    ಬಿಯಾಂಡ್ ಬೆಂಗಳೂರು: ಬೆಂಗಳೂರಿನ ಆಚೆಗೆ ಕೈಗಾರಿಕೆಗಳನ್ನು ವಿಸ್ತರಿಸುವುದು ಈ ಜಾಗತಿಕ ಹೂಡಿಕೆದಾರರ ಸಮಾವೇಶದ ಪ್ರಮುಖ ಉದ್ದೇಶವಾಗಿತ್ತು. ಅದರಂತೆ ಸಮಾವೇಶದಲ್ಲಿ ಆಗಿರುವ ಒಟ್ಟು ಒಪ್ಪಂದಗಳ ಪೈಕಿ ಶೇ.90ರಷ್ಟು ಬೆಂಗಳೂರಿನ ಆಚೆ ಆಗುತ್ತಿದೆ. ಮೈಸೂರು, ಬೆಂಗಳೂರು, ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ಕಲಬುರಗಿ ಸೇರಿದಂತೆ 2 ಮತ್ತು 3ನೇ ಹಂತದ ನಗರಗಳಲ್ಲೂ ಹೂಡಿಕೆ ಮಾಡಲು ಆಸಕ್ತಿ ತೋರಿದ್ದಾರೆ. ಇದೊಂದು ಉತ್ತಮ ಬೆಳವಣಿಗೆ ಎಂದು ಸಚಿವರು ಪ್ರಶಂಸಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯರಿಂದ `ಧ್ಯಾನ’ ಭಂಗ- ಬಿ.ಸಿ ನಾಗೇಶ್ ತೀವ್ರ ವಾಗ್ದಾಳಿ

    ಪತ್ರಿಕಾ ಗೋಷ್ಠಿಯಲ್ಲಿ ವಾಣಿಜ್ಯ ಮತ್ತು ಕೈಗರಿಕಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿನ ಡಾ. ಇ ವಿ ರಮಣ ರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್‌ಪೋರ್ಟ್‌ ನಿರ್ಮಾಣ: ಮುರುಗೇಶ್ ನಿರಾಣಿ

    ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್‌ಪೋರ್ಟ್‌ ನಿರ್ಮಾಣ: ಮುರುಗೇಶ್ ನಿರಾಣಿ

    ಹುಬ್ಬಳ್ಳಿ: ಮುಂದಿನ 18 ತಿಂಗಳಲ್ಲಿ ರಾಜ್ಯದಲ್ಲಿ ಐದು ಏರ್‌ಪೋರ್ಟ್‌ ನಿರ್ಮಾಣ ಮಾಡಲು ನಮ್ಮ ಸರ್ಕಾರ ಮುಂದಾಗಿದ್ದು, ದಾವಣಗೆರೆ, ಬಾಗಲಕೋಟೆ, ಬಾದಾಮಿ, ಕೊಪ್ಪಳ, ರಾಯಚೂರು, ಚಿಕ್ಕಮಗಳೂರಿನಲ್ಲಿ ಏರ್‌ಪೋರ್ಟ್‌ ನಿರ್ಮಾಣ ಆರಂಭಗೊಳ್ಳಲಿದೆ ಎಂದು ಸಚಿವ ಮುರುಗೇಶ್ ನಿರಾಣಿ ಹೇಳಿದ್ದಾರೆ.

    ಹುಬ್ಬಳ್ಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಜಾಗತಿಕ ಸಮಾವೇಶ ಪ್ರಾರಂಭವಾಗಲಿದೆ. ಕಳೆದ ಒಂದು ವರ್ಷದಿಂದ ತಯಾರಿ ಆರಂಭವಾಗಿದೆ. ನವೆಂಬರ್‌ನಲ್ಲಿ ಜಾಗತಿಕ ಸಮಾವೇಶ ನಡೆಯಲಿದೆ. ಕರ್ನಾಟಕಕ್ಕೆ ಅತೀ ಹೆಚ್ಚು ಬಂಡವಾಳ ಬಂದಿದೆ ಇದು ಹೆಮ್ಮೆಯ ವಿಷಯ. ನಾವು ಅನೇಕ ಕಡೆ ಕರ್ನಾಟಕದ ಕೈಗಾರಿಕಾ ನೀತಿ ತಿಳಿಸಿದ್ದೇವೆ. 5 ಲಕ್ಷ ಜನರಿಗೆ ಉದ್ಯೋಗ ಸಿಗುವ ಪ್ರಯತ್ನ ನಾವು ಮಾಡಿದ್ದೇವೆ. ಕರ್ನಾಟಕಕ್ಕೆ ಐದು ಲಕ್ಷ ಕೋಟಿ ರೂ. ಬರಲಿದೆ. ಕೈಗಾರಿಕೆಗಾಗಿ 50 ಸಾವಿರ ಎಕರೆ ಭೂಮಿ ವಶಪಡಿಸಿಕೊಳ್ಳಲಾಗಿದೆ. ಬೆಂಗಳೂರು ಸುತ್ತ ಮುತ್ತ 20 ಸಾವಿರ ಎಕರೆ, ಉಳಿದ ಭಾಗದಲ್ಲಿ ಕೈಗಾರಿಕೆಗಾಗಿ ಭೂಮಿ ವಶಪಡಿಸಿಕೊಳ್ಳಲಾಗಿದೆ. ಸ್ಥಗಿತಗೊಂಡಿರುವ ಕಾರ್ಖಾನೆಗಳನ್ನು ಮತ್ತೆ ಪ್ರಾರಂಭ ಮಾಡಲು ಮುಂದಾಗಿದ್ದೇವೆ. ಆದ್ರೆ ಬೆಂಗಳೂರಲ್ಲಿ ಹೊಸ ಕಾರ್ಖಾನೆ ನಿರ್ಮಾಣಕ್ಕೆ ನಾವು ಸಬ್ಸಿಡಿ ಕೊಡ್ತಿಲ್ಲ. ಬಿಯಾಂಡ್ ಬೆಂಗಳೂರು ಬರುವ ಕಾರ್ಖಾನೆಗಳಿಗೆ ನಾವು ಸೌಲಭ್ಯ ಕೊಡ್ತಿದ್ದೇವೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಹು-ಧಾ ಮಹಾನಗರ ಪಾಲಿಕೆ ಸದಸ್ಯ, ಮೇಯರ್ ಗೌನ್ ಗುದ್ದಾಟ – ‘ಕೈ’ ಸದಸ್ಯರಿಗೆ ಹಿನ್ನಡೆ

    ಹುಬ್ಬಳ್ಳಿಯಲ್ಲಿ ಫಾಸ್ಟ್‌ ಮೂವಿಂಗ್‌ ಕನ್ಸ್ಯೂಮರ್‌ ಗೂಡ್ಸ್‌ (FMCG) ಕಾರ್ಖಾನೆಗೆ ವಿಶೇಷ ರಿಯಾಯಿತಿ ಕೊಟ್ಟಿದ್ದೇವೆ. ಇದರ ಕ್ರೆಡಿಟ್‌ ಹೋಗಬೇಕಿರೋದು ಜಗದೀಶ್ ಶೆಟ್ಟರ್ ಹಾಗೂ ಬಸವರಾಜ ಬೊಮ್ಮಾಯಿಗೆ. ಧಾರವಾಡದ ಮುಮ್ಮಿಗಟ್ಟಿ ಬಳಿ FMCG ನಿರ್ಮಾಣ. ಇದು ದೇಶದಲ್ಲಿ ಮೊದಲ FMCG. ದಿನನಿತ್ಯದ ಬಳಕೆ ವಸ್ತುಗಳ ನಿರ್ಮಾಣ ಮಾಡುವ ಕಾರ್ಖಾನೆ. ಸರ್ಕಾರದಿಂದ ಶೇಕಡಾ 20 ರಷ್ಟು ರಿಯಾಯಿತಿ ಕೊಡಲಾಗಿದೆ. ಕೋವಿಡ್ ಆದ ಮೇಲೆ ಜಾಗತಿಕ ಸಮಾವೇಶ ನಡಿತಿರೋದು ಕರ್ನಾಟಕದಲ್ಲಿ ಮಾತ್ರ. ಜಾಗತಿಕ ಸಮಾವೇಶದಿಂದ ನಮ್ಮ ರಾಜ್ಯಕ್ಕೆ ಒಳ್ಳೆಯದಾಗಲಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ. ಇದನ್ನೂ ಓದಿ: 67ನೇ ಕನ್ನಡ ರಾಜ್ಯೋತ್ಸವ – ಸುವರ್ಣ ಸೌಧದಲ್ಲಿ ಕೋಟಿ ಕಂಠ ಗಾಯನ

    Live Tv
    [brid partner=56869869 player=32851 video=960834 autoplay=true]

  • ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ನಿರಾಣಿ

    ಖರ್ಗೆ ಎಐಸಿಸಿ ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಪರಿಣಾಮ ಬೀರಲ್ಲ: ನಿರಾಣಿ

    ಕಲಬುರಗಿ: ಬಿಜೆಪಿ (BJP) ವತಿಯಿಂದ ಕಲಬುರಗಿಯಲ್ಲಿ ಅ.30ರಂದು ಹಮ್ಮಿಕೊಂಡಿರುವ ರಾಜ್ಯ ಮಟ್ಟದ ಓಬಿಸಿ ಸಮಾವೇಶ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ (Murugesh nirani) ಅವರು ಕಾರ್ಯಕ್ರಮ ನಡೆಯುವ ಸ್ಥಳದ ಪರಿಶೀಲನೆ ನಡೆಸಿದರು.

    ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಾ. ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಎಐಸಿಸಿ ಅಧ್ಯಕ್ಷರಾಗಿರುವುದು ಬಿಜೆಪಿ ಮೇಲೆ ಯಾವುದೇ ಪರಿಣಾಮ ಬೀರಲ್ಲ. ಅವರ ತತ್ವ ಸಿದ್ಧಾಂತವೇ ಬೇರೆ ನಮ್ಮ ತತ್ವ ಸಿದ್ಧಾಂತವೇ ಬೇರೆ ಇದೆ. ಈ ಹಿಂದೆಯೂ ಅವರು ಹಲವು ಹುದ್ದೆಗಳು ಅಲಂಕರಿಸಿದ್ದರು. ಆದರೂ ಯಾವುದೇ ಪರಿಣಾಮ ಬೀರಿಲ್ಲ. ಹೀಗಾಗಿ ರಾಜ್ಯದ ಮೇಲೆ ಝೀರೋ ಎಫೆಕ್ಟ್ ಎಂದು ಹೇಳಿದರು. ಇದನ್ನೂ ಓದಿ: ಖರ್ಗೆ ಎಐಸಿಸಿ ಅಧ್ಯಕ್ಷರಾಗುತ್ತಲೇ ಸ್ಟೇರಿಂಗ್ ಸಮಿತಿ ರಚನೆ – ಕರ್ನಾಟಕದ ಮೂವರಿಗೆ ಸ್ಥಾನ

    ಕಾಂಗ್ರೆಸ್‍ನ ಭಾರತ ಜೋಡೊ ಪಾದಯಾತ್ರೆ (Bharat Jodo Yatre) ಯಿಂದ ಯಾವ ಪ್ರಯೋಜನ ಆಗಿಲ್ಲ. ಕಾಂಗ್ರೆಸ್ (Congress) ನಡಿಗೆ ಬಂದ ಪುಟ್ಟ ಹೋದ ಪುಟ್ಟ ಎಂಬಂತೆ ಆಗಿದೆ ಎಂದು ವ್ಯಂಗ್ಯವಾಡಿದರು. ಪಂಚಮಸಾಲಿ ಮೀಸಲಾತಿ ವಿಚಾರಕ್ಕೆ ಪ್ರತಿಕ್ರಿಸಿ, ನಮ್ಮ ಸರ್ಕಾರ ಎಲ್ಲಾ ವರ್ಗದ ಜನರ ಜೊತೆ ಇರುತ್ತದೆ. ನಮ್ಮ ಎದುರಿಗೆ ಈಗ ಮುಖ್ಯವಾಗಿರುವುದು ಸರ್ಕಾರದ ಸಾಧನೆ ಜನರಿಗೆ ತಲುಪಿಸುವುದು ಎಂದು ಹೇಳಿದರು.

    ಬಿಜೆಪಿ ಪಕ್ಷದ ಹಿಂದುಳಿದ ವರ್ಗಗಳ ಜಾಗೃತಿ ವಿರಾಟ ಸಮಾವೇಶದ ಪೂರ್ವ ಸಿದ್ಧತೆಗಳ ನಡೆಯುತ್ತಿವೆ. 3 ಲಕ್ಷಕ್ಕೂ ಹೆಚ್ಚು ಜನರು ಪಾಲ್ಗೊಳ್ಳುವ ಈ ಕಾರ್ಯಕ್ರಮವು, ಪಕ್ಷಕ್ಕೆ ತಳಮಟ್ಟದಿಂದ ಹೆಚ್ಚು ಬಲವನ್ನು ತುಂಬಲಿದೆ. ಪ್ರಜಾ ಕಲ್ಯಾಣವೇ ನಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ. ಇದನ್ನೂ ಓದಿ: ಒಂದು ಹೊಸ ಪ್ರೇರಣೆ ಖರ್ಗೆಯವರಿಂದ ಸಿಗಲಿದೆ: ಸೋನಿಯಾ ಗಾಂಧಿ

    ಸಮಾವೇಶದಲ್ಲಿ ಮದ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ ಸೇರಿದಂತೆ ಹಲವು ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ ಎಂದರು.

    Live Tv
    [brid partner=56869869 player=32851 video=960834 autoplay=true]