Tag: Murugesh nirani

  • ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ: ಕರ್ನಾಟಕಕ್ಕೆ ‘ಚಿನ್ನ’

    ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ: ಕರ್ನಾಟಕಕ್ಕೆ ‘ಚಿನ್ನ’

    – ಸುಲಲಿತ ವ್ಯವಹಾರಕ್ಕೆ ಒತ್ತು ನೀಡಿ ಸಿಐಎಸ್‌ ವ್ಯವಸ್ಥೆ ಜಾರಿ

    ಬೆಂಗಳೂರು: ಸುಲಲಿತ ವ್ಯವಹಾರಕ್ಕೆ ಆದ್ಯತೆ ನೀಡುವ ರಾಜ್ಯಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿರುವ ಕರ್ನಾಟಕ(Karnataka) ಕೇಂದ್ರೀಕೃತ ಕೈಗಾರಿಕಾ ತಪಾಸಣಾ ವ್ಯವಸ್ಥೆ ಜಾರಿಗಾಗಿ ಸ್ಕಾಚ್‌ ಅವಾರ್ಡ್‌ನಲ್ಲಿ(SKOCH Award) ‘ಚಿನ್ನ’ ಪಡೆದಿದೆ.

    ಸುಲಲಿತ ವ್ಯವಹಾರಕ್ಕೆ ಅಫಿಡವಿಟ್‌ ಬೇಸ್ಡ್‌ ಕ್ಲಿಯರೆನ್ಸ್‌ ಯೋಜನೆ ಜಾರಿಗೊಳಿಸಿರುವ ಕರ್ನಾಟಕ, ಈಸ್‌ ಆಫ್‌ ಡೂಯಿಂಗ್‌ ಬ್ಯುಸಿನೆಸ್‌ ಶ್ರೇಯಾಂಕ ಪಟ್ಟಿಯಲ್ಲಿ “ಟಾಪ್‌ ಅಚೀವರ್” ಆಗಿ ಹೊರಹೊಮ್ಮಿದೆ. ಇದೀಗ, ಕೈಗಾರಿಕೆಗಳಿಗೆ ಕೇಂದ್ರೀಕೃತ ತಪಾಸಣೆ ವ್ಯವಸ್ಥೆ ಜಾರಿಗೊಳಿಸಿರುವ ರಾಜ್ಯ ‘ಸ್ಕಾಚ್‌ ಅವಾರ್ಡ್ಸ್‌’ನಲ್ಲಿ ಚಿನ್ನ ಪಡೆದಿರುವುದು ಸಂತಸದ ವಿಷಯ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಮುರುಗೇಶ ಆರ್. ನಿರಾಣಿ(Murugesh Nirani) ಹರ್ಷ ವ್ಯಕ್ತಪಡಿಸಿದ್ದಾರೆ.

    ಕೈಗಾರಿಕೆಗಳ ಕಾರ್ಯ ನಿರ್ವಹಣೆ ನಿಯಮಗಳ ಪಾಲನೆಗಳ ತಪಾಸಣೆ, ಮೇಲ್ವಿಚಾರಣೆಗಾಗಿ ನಾನಾ ಇಲಾಖೆಗಳು ಪ್ರತ್ಯೇಕವಾಗಿ ತಪಾಸಣಾ ಭೇಟಿ ನೀಡುವುದರಿಂದ ಉಂಟಾಗುವ ಅನಗತ್ಯ ಕಿರಿಕಿರಿ ತಪ್ಪಿಸಲು ಹಾಗೂ ಪಾರದರ್ಶಕ ಪರಿಶೀಲನೆಗಾಗಿ ವಾಣಿಜ್ಯ ಕೈಗಾರಿಕಾ ಇಲಾಖೆಯು ಕೇಂದ್ರೀಕೃತ ಪರಿವೀಕ್ಷಣಾ ವ್ಯವಸ್ಥೆ (ಸೆಂಟ್ರಲ್‌ ಇನ್‌ಸ್ಪೆಕ್ಷನ್‌ ಸಿಸ್ಟೆಮ್‌) ಜಾರಿ ತರಲಾಗಿದೆ ಎಂದರು. ಇದನ್ನೂ ಓದಿ: ಬಂಡೇ ಮಠದ ಶ್ರೀ ಬರೆದಿದ್ದು ಒಟ್ಟು 6 ಪುಟಗಳ ಡೆತ್‍ನೋಟ್ – ಈಗಾಗಲೇ 20 ಮಂದಿಯ ವಿಚಾರಣೆ

    ರಾಜ್ಯದ ಕೈಗಾರಿಕೆಗಳಲ್ಲಿ ನಿಯಮಾವಳಿಗಳ ಪಾಲನೆ, ಕಾರ್ಮಿಕರಿಗೆ ಸಂಬಂಧಪಟ್ಟ ಕಾನೂನುಗಳ ಅನುಷ್ಠಾನ ಮಾಲಿನ್ಯ ನಿಯಂತ್ರಣಕ್ಕೆ ಕೈಗೊಂಡಿರುವ ಕ್ರಮಗಳ ಸ್ಥಿತಿಗತಿ ಇತರೆ ಅಂಶಗಳ ಪರಿಶೀಲನೆಗಾಗಿ ಸಂಬಂಧಪಟ್ಟ ಇಲಾಖೆಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತವೆ. ಮುಖ್ಯವಾಗಿ ಕಾರ್ಮಿಕ ಇಲಾಖೆ, ಕಾರ್ಖಾನೆಗಳು- ಬಾಯ್ಲರ್‌ಗಳು, ಕಾನೂನು ಮಾಪನಶಾಸ್ತ್ರ ಇಲಾಖೆ ಹಾಗೂ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಪರಿಶೀಲನೆ ನಡೆಸುತ್ತವೆ ಎಂದು ಸಚಿವ ನಿರಾಣಿ ತಿಳಿಸಿದರು.

    ಪ್ರತಿಯೊಂದು ಇಲಾಖೆಗಳು ಪ್ರತ್ಯೇಕವಾಗಿ ಭೇಟಿ ನೀಡುವುದರಿಂದ ವರ್ಷವಿಡೀ ತಪಾಸಣೆ ಕಾರ್ಯ ನಡದೇ ಇರುತ್ತದೆ. ಪ್ರತಿ ಇಲಾಖೆಯು ಅಧಿಕಾರಿಗಳು ಭೇಟಿ ನೀಡಿದಾಗ ಮಾಹಿತಿ ಒದಗಿಸುವುದು, ಪ್ರಾಯೋಗಿಕ ಪರಿಶೀಲನೆ ಕಾರ್ಯ ನಡೆಯುವುದರಿಂದ ಕೈಗಾರಿಕೆಗಳಿಗೆ ಕಿರಿಕಿರಿಯಾಗುತ್ತಿದೆ ಎಂಬ ದೂರು ಇತ್ತು. ಇದಕ್ಕೆ ಪರಿಹಾರವಾಗಿ ‘ಕೇಂದ್ರೀಕೃತ ಪರಿವೀಕ್ಷಣಾ ವ್ಯವಸ್ಥೆ’ ರೂಪಿಸಿದ್ದೇವೆ ಎಂದು ಸಚಿವರು ತಿಳಿಸಿದರು.

    ಕೇಂದ್ರ ಸರಕಾರ ಈಸ್‌ ಆಫ್‌ ಡೂಯಿಂಗ್‌ ವ್ಯವಸ್ಥೆಯಡಿ ಕೈಗಾರಿಕೆಗಳ ಸುಗಮ ಕಾರ್ಯ ನಿರ್ವಹಣೆಗೆ ಸೂಕ್ತ ಕ್ರಮ ವಹಿಸುವಂತೆ ನೀಡಿರುವ ನಿರ್ದೇಶದನ್ವಯ ಹೊಸ ಸಿಐಎಸ್‌ ತಂತ್ರಾಂಶ ರೂಪುಗೊಂಡಿದೆ. ಈ ತಂತ್ರಾಂಶದ ಬಳಕೆಯಿಂದ ಕೈಗಾರಿಕೆಗಳ ತಪಾಸಣೆ, ನಿಯಮಗಳ ಪಾಲನೆ ಹಾಗೂ ಗುಣಮಟ್ಟದ ನಿರ್ವಹಣೆಗೆ ಸಹಕಾರಿಯಾಗಲಿದೆ ಎಂದು ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್‌ ಕೃಷ್ಣ ಅವರು ವಿವರಿಸಿದ್ದಾರೆ.

    ಏನಿದು ಸಿಐಎಸ್‌ ವ್ಯವಸ್ಥೆ?
    ಸಿಐಎಸ್‌ ವ್ಯವಸ್ಥೆಯಡಿ ಸಂಬಂಧಪಟ್ಟ ಇಲಾಖೆಗಳು ಪರಸ್ಪರ ಚರ್ಚಿಸಿ ಜಂಟಿ ತಪಾಸಣೆಗೆ ಆದ್ಯತೆ ನೀಡುವುದು. ತಪಾಸಣೆ ಬಗ್ಗೆ ಕೈಗಾರಿಕೆಗಳಿಗೆ ಮೊದಲೇ ಮಾಹಿತಿ ನೀಡದೇ, ಆ ದಿನ ಆಯಾ ಇಲಾಖೆಯು ತನ್ನ ಕಾರ್ಯವ್ಯಾಪ್ತಿಯಲ್ಲಿನ ಅಂಶಗಳ ಪರಿಶೀಲನೆ, ನಿಯಮ ಉಲ್ಲಂಘನೆ, ಲೋಪಗಳ ಪತ್ತೆ ಕಾರ್ಯವನ್ನು ಏಕಕಾಲಕ್ಕೆ ನಡೆಸಲಿದೆ. ತಪಾಸಣಾ ಅಧಿಕಾರಿಯನ್ನು ಗಣಕೀಕೃತ ವ್ಯವಸ್ಥೆ ಆಯ್ಕೆ ಮಾಡುವುದರಿಂದ ಒಬ್ಬರೇ ಅಧಿಕಾರಿ ಎರಡು ಬಾರಿ ಒಂದೇ ಕೈಗಾರಿಕೆಯಲ್ಲಿ ತಪಾಸಣೆ ನಡೆಸಲು ಅವಕಾಶವಿರುವುದಿಲ್ಲ. ಕೈಗಾರಿಕೆಗಳ ಮಾಲೀಕರೊಂದಿಗೆ ಮುಂಚಿತವಾಗಿ ಹಂಚಿಕೊಳ್ಳುವುದಲ್ಲದೇ, ತಪಾಸಣೆ ವರದಿಯನ್ನು ನಿರ್ದಿಷ್ಟ ಸಮಯದೊಳಗೆ ಅಪ್‌ಲೋಡ್ ಮಾಡಲಾಗುತ್ತದೆ ಎಂದು ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡ ಬಸವರಾಜು ಮಾಹಿತಿ ನೀಡಿದರು.

    ಸ್ಕಾಚ್‌ ಅವಾರ್ಡ್‌
    ಸ್ಟೇಟ್‌ ಆಫ್‌ ಗವರ್ನನ್ಸ್‌’ ಎಂಬ ಪರಿಕಲ್ಪನೆಯಡಿ ನಡೆದ 83ನೇ ಸ್ಕಾಚ್‌ ಶೃಂಗಸಭೆಯಲ್ಲಿ ಸುಲಲಿತ ವ್ಯವಹಾರಗಳ ವಿಭಾಗದಲ್ಲಿ ಕರ್ನಾಟಕಕ್ಕೆ ಅಗ್ರಮಾನ್ಯ ಪ್ರಶಸ್ತಿ ಘೋಷಿಸಲಾಗಿದೆ. ಕಾರ್ಯಕ್ಷಮತೆಯ ಆಧಾರದ ಮೇಲೆ ರಾಜ್ಯಗಳು, ಇಲಾಖೆಗಳು, ಜಿಲ್ಲೆಗಳು ಮತ್ತು ಪುರಸಭೆಗಳನ್ನು ಶ್ರೇಣೀಕರಿಸಿ ಪ್ರತಿವರ್ಷ ಶ್ರೇಯಾಂಕವನ್ನು ಬಿಡುಗಡೆ ಮಾಡಲಾಗುತ್ತದೆ.

    Live Tv
    [brid partner=56869869 player=32851 video=960834 autoplay=true]

  • ಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ಆಂಧ್ರ, ತೆಲಂಗಾಣ ಉದ್ಯಮಿಗಳಿಗೆ ಸಚಿವ ನಿರಾಣಿ ಕರೆ

    ಬನ್ನಿ, ಕರ್ನಾಟಕದಲ್ಲಿ ಬಂಡವಾಳ ಹೂಡಿ: ಆಂಧ್ರ, ತೆಲಂಗಾಣ ಉದ್ಯಮಿಗಳಿಗೆ ಸಚಿವ ನಿರಾಣಿ ಕರೆ

    – ಹೈದರಾಬಾದ್ ರೋಡ್ ಶೋ ಯಶಸ್ವಿ
    – 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯ ನಿರೀಕ್ಷೆ

    ಹೈದರಾಬಾದ್: ನವೆಂಬರ್ 2ರಿಂದ 4ರ ವರೆಗೆ ಬೆಂಗಳೂರಿನಲ್ಲಿ (Bengaluru) ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದ ಭಾಗವಾಗಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ಆರ್. ನಿರಾಣಿ (Murugesh Nirani) ಅವರು ಹೈದರಾಬಾದ್‌ನಲ್ಲಿ ಶುಕ್ರವಾರ ನಡೆಸಿದ ರೋಡ್‌ಶೋ (Roadshow) ಯಶಸ್ವಿಯಾಗಿದೆ.

    ಹೈದರಾಬಾದ್‌ನ (Hyderabad) ಖಾಸಗಿ ಹೋಟೆಲ್‌ನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಮಾತನಾಡಿದ ಸಚಿವ ನಿರಾಣಿ, ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಪೂರ್ವಭಾಗವಾಗಿ ದೆಹಲಿಯಲ್ಲಿ ಚಾಲನೆ ನೀಡಿದ ದೇಶೀಯ ರೋಡ್ ಶೋ ಯಶಸ್ವಿಯಾಗಿದೆ. ಅದೇ ರೀತಿ, ಹೈದರಾಬಾದ್ ರೋಡ್ ಶೋ ವೇಳೆ ಉದ್ಯಮಿಗಳ ಜತೆ ಇಂದು ನಡೆಸಿದ ಮಾತುಕತೆ ಫಲಪ್ರದವಾಗಿದೆ ಎಂದಿದ್ದಾರೆ.

    ರಾಜ್ಯದಲ್ಲಿ ಹೂಡಿಕೆಗೆ ಇರುವ ಅವಕಾಶಗಳು ನಮ್ಮ ಕೈಗಾರಿಕಾ ನೀತಿ ಕುರಿತು ಆಂಧ್ರ (Andhra Pradesh) ಹಾಗೂ ತೆಲಂಗಾಣದ (Telangana) ಉದ್ಯಮಿಗಳಿಗೆ ಮಾಹಿತಿ ನೀಡಲಾಗಿದೆ. ರಾಜ್ಯದಲ್ಲಿ ಬಂಡವಾಳ ಹೂಡಲು ಹಾಗೂ ಉದ್ಯಮ ವಿಸ್ತರಣೆಗೆ ಹಲವು ಕಂಪನಿಗಳ ಮುಖ್ಯಸ್ಥರು ಒಲವು ತೋರಿದ್ದಾರೆ ಎಂದು ಸಚಿವ ನಿರಾಣಿ ಹೇಳಿದರು.

    ಜಾಗತಿ ಹೂಡಿಕೆದಾರರ ಸಮಾವೇಶದ ಅಂತಾರಾಷ್ಟ್ರೀಯ ರೋಡ್‌ಶೋನ ಭಾಗವಾಗಿ ಜಪಾನ್, ದಕ್ಷಿಣ ಕೊರಿಯಾ, ಅಮೆರಿಕ ಹಾಗೂ ಯೂರೋಪ್‌ಗೆ ಭೇಟಿ ನೀಡಲಾಗಿದೆ. ಈ ದೇಶಗಳಿಂದ ದೊಡ್ಡ ಮಟ್ಟದ ವಿದೇಶಿ ಬಂಡವಾಳ ಹರಿದು ಬರುವ ನಿರೀಕ್ಷೆ ಇದೆ. ದೇಶೀಯ ರೋಡ್ ಶೋ ಮುಂಬೈಯಲ್ಲಿ ಮುಕ್ತವಾಗಲಿದೆ ಎಂದು ಅವರು ತಿಳಿಸಿದರು.

    ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ 5,000ಕ್ಕೂ ಹೆಚ್ಚು ಗಣ್ಯರು ಭಾಗವಹಿಸುವ ನಿರೀಕ್ಷೆ ಇದೆ. 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆ ಇದ್ದು, ಇದರಿಂದ 5 ಲಕ್ಷ ಜನರಿಗೆ ಉದ್ಯೋಗ ದೊರೆಯಲಿದೆ. ಜಾಗತಿಕ ಹೂಡಿಕೆದಾರರ ಸಮಾವೇಶ ‘ಬಿಲ್ಡ್ ಫಾರ್ ದಿ ವರ್ಲ್ಡ್’ ಎಂಬ ಪರಿಕಲ್ಪನೆಯಡಿ ಅನಾವರಣಗೊಳ್ಳುತ್ತಿದೆ. ಅತ್ಯುತ್ತಮ ಕೈಗಾರಿಕಾ ಪರಿಸರ ವ್ಯವಸ್ಥೆ ಹೊಂದಿರುವ ಕರ್ನಾಟಕ, ಜಾಗತಿಕ ಹೂಡಿಕೆದಾರರ ನೆಚ್ಚಿನ ತಾಣ ಎಂದರು.

    ನಮ್ಮ ಸರ್ಕಾರದ ಹಲವು ಸುಧಾರಣಾ ಕ್ರಮಗಳ ಪರಿಣಾಮವಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. 2021ರ ಜುಲೈನಿಂದೀಚೆಗೆ ಬರೋಬ್ಬರಿ 3 ಲಕ್ಷ ಕೋಟಿ ರೂ.ಗೂ ಹೆಚ್ಚು ಹೂಡಿಕೆ ಪ್ರಸ್ತಾವನೆಗಳು ರಾಜ್ಯಕ್ಕೆ ಬಂದಿವೆ. ದೇಶದ ಒಟ್ಟಾರೆ ವಿದೇಶಿ ಹೂಡಿಕೆಯಲ್ಲಿ ರಾಜ್ಯದ ಪಾಲು ಶೇ.38 ರಷ್ಟು ಇದೆ. ಬರೋಬ್ಬರಿ 22 ಶತಕೋಟಿ ಡಾಲರ್ ವಿದೇಶಿ ನೇರ ಹೂಡಿಕೆ ರಾಜ್ಯಕ್ಕೆ ಹರಿದು ಬಂದಿದೆ ಎಂದು ಅವರು ವಿವರಿಸಿದರು. ಇದನ್ನೂ ಓದಿ: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆಗೆ ಕೋವ್ಯಾಕ್ಸಿನ್ ಉತ್ಪಾದಕ ಭಾರತ್ ಬಯೋಟೆಕ್ ಒಲವು

    ಸುಲಲಿತ ವ್ಯವಹಾರಕ್ಕೆ ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ ಯೋಜನೆಯ ಜಾರಿಗೊಳಿಸಿರುವ ಕರ್ನಾಟಕ, ಈಸ್ ಆಫ್ ಡೂಯಿಂಗ್ ಬಿಸಿನೆಸ್‌ಗೆ ಶ್ರೇಯಾಂಕ ಪಟ್ಟಿಯಲ್ಲಿ ‘ಟಾಪ್ ಅಚೀವರ್’ ಆಗಿ ಹೊರಹೊಮ್ಮಿದೆ. ಜೊತೆಗೆ, ಹೂಡಿಕೆದಾರರಿಗೆ ಭೂ ಹಂಚಿಕೆಗೆ ಅನುಕೂಲವಾಗುವಂತೆ ‘ಈಸ್ ಆಫ್ ಲ್ಯಾಂಡ್ ಅಲಾಟ್‌ಮೆಂಟ್’ ಕ್ರಮ ಜಾರಿಗೊಳಿಸಲಾಗಿದೆ ಎಂದರು.

    ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ಭೂ ಹಂಚಿಕೆಗೆ ಅನುಕೂಲವಾಗುವಂತೆ ರಾಜ್ಯದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಹೆಚ್ಚುವರಿಯಾಗಿ 50 ಸಾವಿರ ಎಕರೆ ಭೂ ಸ್ವಾಧೀನ ಪಡಿಸಿಕೊಳ್ಳಲಾಗುತ್ತಿದೆ. ಬೆಂಗಳೂರಿನಲ್ಲಿ 20 ಸಾವಿರ ಮತ್ತು ಇತರ ಜಿಲ್ಲೆಗಳಲ್ಲಿ 30 ಸಾವಿರ ಎಕರೆ ಭೂಮಿ ಸ್ವಾಧೀನಕ್ಕೆ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.

    ಸಂಭಾವ್ಯ ಹೂಡಿಕೆದಾರರೊಂದಿಗೆ ಚರ್ಚೆ:
    ಹೈದರಾಬಾದ್ ರೋಡ್‌ಶೋನಲ್ಲಿ ಭಾರತ್ ಬಯೋಟೆಕ್, ವಿಮತ ಲ್ಯಾಬ್ಸ್, ಲೌರಸ್ ಲ್ಯಾಬ್ಸ್, ಪೆಂಟಗನ್ ರಗ್ಗಡ್ ಸಿಸ್ಟಮ್, ವೈಬ್ರೆಂಟ್ ಎನರ್ಜಿ ಸೇರಿದಂತೆ ಹಲವು ಕಂಪನಿಗಳ ಪ್ರತಿನಿಧಿಗಳ ಜತೆ ಮಾತುಕತೆ ನಡೆಸಲಾಗಿದೆ ಎಂದು ನಿರಾಣಿ ತಿಳಿಸಿದರು. ಇದನ್ನೂ ಓದಿ: ಭೂತಾನ್‍ನಿಂದ 17 ಸಾವಿರ ಟನ್ ಅಡಿಕೆ ಆಮದಿಗೆ ಮುಂದಾದ ಕೇಂದ್ರ – ರೈತರಿಂದ ವಿರೋಧ

    ವೈನ್ ಮತ್ತು ಆಹಾರ ಮೇಳ:
    ಈ ಸಮಾವೇಶ ಬಂಡವಾಳ ಹೂಡಿಕೆಗಷ್ಟೇ ಸೀಮಿತವಾಗಿಲ್ಲ. ಕರ್ನಾಟಕದ ಸಾಂಸ್ಕೃತಿಕ ಲೋಕ ಅಲ್ಲಿ ಅನಾವರಣಗೊಳ್ಳಲ್ಲಿದೆ. ವೈನ್ ಮತ್ತು ಆಹಾರ ಮೇಳದಲ್ಲಿ ಕರ್ನಾಟಕದ ವಿಶೇಷ ಖಾದ್ಯಗಳನ್ನು ಸವಿಯಬಹುದು ಎಂದು ಸಚಿವರು ಹೇಳಿದರು.

    ಅಸೋಚಾಮ್ ತೆಲಂಗಾಣ ರಾಜ್ಯ ಅಭಿವೃದ್ಧಿ ಮಂಡಳಿ ಅಧ್ಯಕ್ಷ ರವಿ ಕುಮಾರ್ ರೆಡ್ಡಿ, ಅಸೋಚಾಮ್ ಪ್ರಧಾನ ಕಾರ್ಯದರ್ಶಿ ಪೂಜಾ ಅಹ್ಲುವಾಲಿಯಾ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ ಇಲಾಖೆ ಡಾ.ಇ.ವಿ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ ಹಾಗೂ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಬಾದಾಮಿಯಲ್ಲಿ ITC ಪಂಚತಾರಾ ಹೋಟೆಲ್ ಸ್ಥಾಪನೆಗೆ ಸಚಿವ ನಿರಾಣಿ ಸಲಹೆ

    ಬಾದಾಮಿಯಲ್ಲಿ ITC ಪಂಚತಾರಾ ಹೋಟೆಲ್ ಸ್ಥಾಪನೆಗೆ ಸಚಿವ ನಿರಾಣಿ ಸಲಹೆ

    ನವದೆಹಲಿ: ಐತಿಹಾಸಿಕ ಪ್ರವಾಸಿ ತಾಣ ಬಾದಾಮಿಯಲ್ಲಿ (Badami) ಪಂಚತಾರಾ ಹೋಟೆಲ್ (Hotel Panchatara) ಸ್ಥಾಪಿಸುವಂತೆ ಐಟಿಸಿ ಮುಖ್ಯಸ್ಥರಿಗೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ ಆರ್.ನಿರಾಣಿ (Murugesh Nirani) ಸಲಹೆ ನೀಡಿದರು.

    ಜಾಗತಿಕ ಹೂಡಿಕೆದಾರ (Industry Conference) ಸಮಾವೇಶದ ರೋಡ್‌ಶೋ ಭಾಗವಾಗಿ ದೆಹಲಿಯಲ್ಲಿಂದು ನಡೆದ ಸಭೆಯಲ್ಲಿ, ಐಟಿಸಿಯ (ITC) ಸಿಎಂಡಿ ಸಂಜೀವ್ ಪುರಿ, ಕಂಪನಿಯ ಉಪಾಧ್ಯಕ್ಷ ಅನಿಲ್ ರಜಪುತ್ ಅವರನ್ನು ಸಚಿವರು ಭೇಟಿಯಾಗಿ ಮಾತುಕತೆ ನಡೆಸಿದರು. ಇದನ್ನೂ ಓದಿ: ಪುಟಿನ್ ಕನಸಿನ ಸೇತುವೆ ಧ್ವಂಸಗೊಳಿಸಿದ್ದಕ್ಕೆ ಕೆರಳಿದ ರಷ್ಯಾ – ಉಕ್ರೇನ್ ಮೇಲೆ ಮತ್ತಷ್ಟು ತೀವ್ರ ದಾಳಿ

    ಬಾದಾಮಿ, ಐಹೊಳೆ ಮತ್ತು ಪಟ್ಟದಕಲ್ಲು ರಾಜ್ಯದ ಪ್ರಮುಖ ಪ್ರವಾಸಿ ತಾಣಗಳಾಗಿದ್ದು, ಈ ಭಾಗದಲ್ಲಿ ಪಂಚತಾರಾ ಹೋಟೆಲ್ ಸ್ಥಾಪಿಸಿದರೆ ಪ್ರವಾಸಿಗರಿಗೆ ಅನುಕೂಲವಾಗಲಿದೆ ಎಂದು ಹೇಳಿದ್ದಾರೆ. ಆದರೆ ಹೋಟೆಲ್ (Hotel) ಸ್ಥಾಪನೆಯ ಸಾಧ್ಯತೆ ಬಗ್ಗೆ ಪರಿಶೀಲಿಸಿ, ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಐಟಿಸಿ ಮುಖ್ಯಸ್ಥ ಸಂಜೀವ್ ಪುರಿ ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಶಿಕ್ಷಕರ ನೇಮಕಾತಿ ಹಗರಣ- ಮತ್ತೋರ್ವ ಟಿಎಂಸಿ ಶಾಸಕ ಬಂಧನ

    ಕರ್ನಾಟಕದಲ್ಲಿ ಹೂಡಿಕೆ ಹಾಗೂ ಉದ್ಯಮ ವಿಸ್ತರಣೆಗೆ ಇರುವ ಅವಕಾಶಗಳ ಮಾಹಿತಿ ನೀಡಿದ ಸಚಿವರು, ನವೆಂಬರ್ 2 ರಿಂದ 4ರ ವರೆಗೆ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಹೂಡಿಕೆದಾರರ ಸಮಾವೇಶಕ್ಕೆ ಔಪಚಾರಿಕವಾಗಿ ಆಹ್ವಾನಿಸಿದರು.

    ಸಭೆಯಲ್ಲಿ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ವಾಣಿಜ್ಯ ಮತ್ತು ಕೈಗಾರಿಕೆ (Industry) ಇಲಾಖೆ ರಮಣರೆಡ್ಡಿ, ಕೈಗಾರಿಕಾಭಿವೃದ್ಧಿ ಆಯುಕ್ತರಾದ ಗುಂಜನ್ ಕೃಷ್ಣ, ಐಕೆಎಫ್ ಮಂಡಳಿ ಸದಸ್ಯರು, ಎಫ್‌ಕೆಸಿಸಿ ಅಧ್ಯಕ್ಷ ಉಲ್ಲಾಸ್ ಕಾಮತ್ ಹಾಗೂ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    Live Tv
    [brid partner=56869869 player=32851 video=960834 autoplay=true]

  • PFI ನಿಷೇಧ- ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಸಚಿವ ನಿರಾಣಿ

    PFI ನಿಷೇಧ- ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಸಚಿವ ನಿರಾಣಿ

    ಬೆಂಗಳೂರು: ದೇಶದ ಆಂತರಿಕ ಭದ್ರತೆಗೆ ಸವಾಲೊಡ್ಡಿ, ಸಾರ್ವಜನಿಕರ ಶಾಂತಿಗೆ ಭಂಗ, ಕಾನೂನು ಬಾಹಿರ ಚಟುವಟಿಕೆಗೆ ಸಂಚು ರೂಪಿಸಿದ್ದ ಪಿಎಫ್‍ಐ ಹಾಗೂ ಅದರ ಅಂಗ ಸಂಸ್ಥೆಗಳನ್ನು ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕೇಂದ್ರ ಸರ್ಕಾರ (Central Government) ನಿರ್ಧಾರ ಒಂದು ಐತಿಹಾಸಿಕ ಕ್ರಮವಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ (Murugesh Nirani) ಪ್ರಶಂಸಿದ್ದಾರೆ.

    ಕೇಂದ್ರ ಸರ್ಕಾರ ಬಲವಾದ ಸಾಕ್ಷ್ಯಾಧಾರ ಗಳನ್ನು ಸಂಗ್ರಹಿಸಿ, ದೇಶದ ಏಕತೆ ಹಾಗೂ ಸಮಗ್ರತೆಯನ್ನು ಕಾಪಾಡುವ ನಿಟ್ಟಿನಲ್ಲಿ, ನಿಷೇಧ ಕ್ರಮ ಕೈಗೊಂಡಿದೆ. ಇದಕ್ಕಾಗಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ (Narendra Modi) ಹಾಗೂ ಕೇಂದ್ರದ ಗೃಹ ಸಚಿವರಾದ ಅಮಿತ್ ಶಾ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ನಿರಾಣಿ ತಿಳಿಸಿದ್ದಾರೆ. ಇದನ್ನೂ ಓದಿ: ಸಂಪೂರ್ಣ ನಿಷೇಧವಾಗುತ್ತಾ PFI – ಕೇಂದ್ರ ಸರ್ಕಾರದ ಮುಂದಿನ ಪ್ಲ್ಯಾನ್ ಏನು?

    ಈ ಸಂಘಟನೆಗೆ ನಿಷೇಧ ಹೇರಬೇಕು ಎಂಬುದು ದಶಕಗಳ ಬೇಡಿಕೆಯಾಗಿತ್ತು. ಎಲ್ಲಿಯ ತನಕ ದೇಶದಲ್ಲಿ ಮೋದಿ ಅವರಂತಹ ಬಲಿಷ್ಟ ನಾಯಕ ಅಧಿಕಾರದಲ್ಲಿ ಇರುತ್ತಾರೋ ಅಲ್ಲಿಯ ತನಕ ಭಯೋತ್ಪಾದನೆ, ಭಯೋತ್ಪಾದಕರು, ಮೂಲಭೂತವಾದಿಗಳು ಸೇರಿದಂತೆ ಸಮಾಜಘಾತುಕ ಶಕ್ತಿಗಳಿಗೆ ದೇಶದಲ್ಲಿ ಉಳಿಗಾಲ ಇರುವುದಿಲ್ಲ ಎಂಬ ಸಂದೇಶ ರವಾನೆಯಾಗಿದೆ ಎಂದು ನಿರಾಣಿ ಅವರು ಎಚ್ಚರಿಸಿದ್ದಾರೆ.

    ನಿಷೇಧದ ಸುತ್ತ ಯಾವ ರಾಜಕೀಯ ಪಕ್ಷವೂ ತುಷ್ಠೀಕರಣದ ಮತ್ತು ತಕ್ಷಣದ ರಾಜಕೀಯ ಲಾಭ ಪಡೆದುಕೊಳ್ಳುವ ರಾಜಕಾರಣ ಮಾಡಬಾರದು ಎಂದು ಸಚಿವರು ಮನವಿ ಮಾಡಿದ್ದಾರೆ. ಇದನ್ನೂ ಓದಿ: ಕರ್ನಾಟಕ ಸೇರಿ 6 ರಾಜ್ಯಗಳಲ್ಲಿ ರೆಡ್ ಅಲರ್ಟ್ – ಗುಪ್ತಚರ ಇಲಾಖೆ ಸೂಚನೆ ಏನು?

    Live Tv
    [brid partner=56869869 player=32851 video=960834 autoplay=true]

  • ಎರಡು ವರ್ಷಗಳಿಂದ ನನ್ನ ಫೈಲನ್ನೇ ಅಧಿಕಾರಿಗಳು ಕ್ಲಿಯರ್ ಮಾಡಿಲ್ಲ: ಮುರುಗೇಶ್ ನಿರಾಣಿ ಅಸಹಾಯಕತೆ

    ಎರಡು ವರ್ಷಗಳಿಂದ ನನ್ನ ಫೈಲನ್ನೇ ಅಧಿಕಾರಿಗಳು ಕ್ಲಿಯರ್ ಮಾಡಿಲ್ಲ: ಮುರುಗೇಶ್ ನಿರಾಣಿ ಅಸಹಾಯಕತೆ

    ಬೆಂಗಳೂರು: ವಿಧಾನ ಪರಿಷತ್ (Vidhana Parishad) ನಲ್ಲಿಂದು ಸಚಿವರೇ, ನನ್ನ ಕೆಲಸ ಆಗುತ್ತಿಲ್ಲ. ಅಧಿಕಾರಿಗಳು ನನ್ನ ಫೈಲ್ ಕ್ಲಿಯರ್ ಮಾಡಿಲ್ಲ ಅಂತ ಅಸಹಾಯಕತೆ ತೋಡಿಕೊಂಡ ಘಟನೆ ನಡೆಯಿತು.

    ಮಂಡ್ಯದ ಪಾಂಡವಪುರ ಸಕ್ಕರೆ ಕಾರ್ಖಾನೆ (Sugar Factory) ಗುತ್ತಿಗೆ ಒಡಂಬಡಿಕೆ ಕಡತ ವಿಲೇವಾರಿ ಎರಡು ವರ್ಷವಾದರೂ ಆಗಿಲ್ಲ. ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ (Pankaj Kumar Pandey) ತಡೆ ಹಿಡಿದಿದ್ದಾರೆ ಎಂದು ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ (Murugesh Nirani) ಸದನದಲ್ಲೇ ನೇರ ಆರೋಪ ಮಾಡಿದರು. ಇದು ಸದನದಲ್ಲಿ ಗದ್ದಲಕ್ಕೆ ಕಾರಣವಾಯ್ತು.

    ಈ ಕುರಿತು ಚರ್ಚೆಗೆ ಅವಕಾಶ ನೀಡುವಂತೆ ಪ್ರತಿಪಕ್ಷ ಸದಸ್ಯರು ಪಟ್ಟುಹಿಡಿದರು. ಆದರೆ ಇದಕ್ಕೆ ಅವಕಾಶ ನಿರಾಕರಿಸಿದ ಸಭಾಪತಿ (Speaker) ನೋಟಿಸ್ ನೀಡಿ ನಂತರ ಚರ್ಚೆಗೆ ಅವಕಾಶ ಕಲ್ಪಿಸುವುದಾಗಿ ರೂಲಿಂಗ್ ನೀಡಿದರು.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ (BJP) ಸದಸ್ಯ ಸುನೀಲ್ ವಲ್ಯಾಪುರೆ ಪ್ರಶ್ನೆಗೆ ಉತ್ತರಿಸಿದ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ, ಸಕ್ಕರೆ ಕಾರ್ಖಾನೆಗಳಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಎಥನಾಲ್ ಉತ್ಪಾದನೆಗೆ ಹೆಚ್ಚಿನ ಉತ್ತೇಜನ ನೀಡುತ್ತಿದೆ. ಎಥೆನಾಲ್ ಉತ್ಪಾದನೆ ನಮ್ಮ ಇಲಾಖೆ ವ್ಯಾಪ್ತಿಗೆ ಬರಲಿದೆ ಆದರೆ ಮಾರಾಟ ಅಬಕಾರಿ ಇಲಾಖೆ (Excise Department) ಗೆ ಬರಲಿದೆ. ಸಮಸ್ಯೆ ಇದ್ದರೆ ನಮ್ಮ ಅಬಕಾರಿ ಇಲಾಖೆ ನಡುವೆ ಸಭೆ ನಡೆಸಲಾಗುತ್ತದೆ. ರೈತರಿಗೆ ಹಣ ಪಾವತಿ ವಿಳಂತ ತಪ್ಪಿಸುವ ಕೆಲಸ ಮಾಡಲಾಗುತ್ತದೆ ಎಂದರು.

    ಈ ವೇಳೆ ಮಾತನಾಡಿದ ಬಿಜೆಪಿ ಸದಸ್ಯ ಲಕ್ಮಣ ಸವದಿ, ಮೂರು ತಿಂಗಳಾದರೂ ಕಡತ ವಿಲೇವಾರಿ ಆಗಲ್ಲ ಎಂದು ಅಧಿಕಾರಿಗಳ ಧೋರಣೆಗೆ ಆಕ್ಷೇಪಿಸಿ ಇದನ್ನು ಸರಿಪಡಿಸುವಂತೆ ಮನವಿ ಮಾಡಿದರು. ಸವದಿ ಹೇಳಿಕೆ ಸಮರ್ಥಿಸಿಕೊಂಡ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಪಾಂಡವಪುರ ಸಕ್ಕರೆ ಕಾರ್ಖಾನೆಯನ್ನು ನಾನು ಲೀಸ್ ಗೆ ತೆಗೆದುಕೊಂಡಿದ್ದೇನೆ. ಆದರೆ ನಮಗೆ ಒಪ್ಪಂದ ಮಾಡಿಕೊಡುತ್ತಿಲ್ಲ ಎಂದು ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ ಹೆಸರು ಉಲ್ಲೇಖಿಸಿ ಅವರು ಇಲ್ಲೇ ಇದ್ದಾರೆ ಎಂದು ನೇರ ಆರೋಪ ಮಾಡಿದರು.

    ನಾನು 40 ವರ್ಷ ರಾಜಕೀಯ ಜೀವನದಲ್ಲಿದ್ದೇನೆ. ನನಗೇ ಹೀಗಾಗಿದೆ ಎಂದು ಕಡತ ವಿಲೇವಾರಿ ವಿಳಂಬ ಕುರಿತು ತಮ್ಮ ಸ್ವಂತ ಅನುಭವವನ್ನು ಪ್ರಸ್ತಾಪಿಸಿದರು. ಯಾವುದೇ ಪತ್ರಗಳಿಲ್ಲದೇ ನಾನು ಈಗಾಗಲೇ 50 ಕೋಟಿ ಹೂಡಿಕೆ ಮಾಡಿದ್ದೇನೆ ಎಂದರು. ನಿರಾಣಿ ಹೇಳಿಕೆ ನಂತರ ಸರ್ಕಾರ (Government) ದ ವಿರುದ್ಧ ಪ್ರತಿಪಕ್ಷ ಸದಸ್ಯರು ಮುಗಿಬಿದ್ದರು. ಮಂತ್ರಿಗಳಿಗೇ ಹೀಗಾದರೆ ಜನರ ಕಥೆಯೇನು? ಸಚಿವರು ಅಧಿಕಾರಿ ಹೆಸರೇಳಿದ್ದಾರೆ ಅವರು ಮಾತನಾಡಲು ಅವಕಾಶ ನೀಡಿ ಎಂದರು.

    ಪ್ರತಿಪಕ್ಷದ ಸಚೇತಕ ಪ್ರಕಾಶ್ ರಾಥೋಡ್ ಮಾತನಾಡಿ, ಒಬ್ಬ ಮಂತ್ರಿ ಒಬ್ಬ ಅಧಿಕಾರಿ ಹೆಸರೇಳಿ ಎರಡು ವರ್ಷ ಕಡತ ವಿಲೇವಾರಿ ಮಾಡಿಲ್ಲ ಎಂದಿದ್ದಾರೆ. ಈ ವಿಚಾರದಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು. ಇದಕ್ಕೆ ಸಮಂಜಸ ಉತ್ತರ ನೀಡಬೇಕು ಎಂದರು. ಇದಕ್ಕೆ ಸಭಾಪತಿಗಳು ಅವಕಾಶ ನೀಡದ ಹಿನ್ನೆಲೆಯಲ್ಲಿ ಸದನ (Session) ದಲ್ಲಿ ಗದ್ದಲದ ವಾತಾವರಣ ಸೃಷ್ಟಿಯಾಯಿತು. ಇದನ್ನೂ ಓದಿ; ರಾಜ್ಯದಲ್ಲಿ ಯಾವುದೇ ಕಾರಣಕ್ಕೂ APMC ಕಾಯ್ದೆ ರದ್ದು ಮಾಡೋದಿಲ್ಲ- ಎಸ್.ಟಿ ಸೋಮಶೇಖರ್

    ಈ ವೇಳೆ ಮಾತನಾಡಿದ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ, ನೋಟಿಸ್ (Notice) ನೀಡಿ ಚರ್ಚೆಗೆ ಅವಕಾಶ ನೀಡುತ್ತೇನೆ ಎಂದರು. ಇದಕ್ಕೆ ಪ್ರತಿಪಕ್ಷ ಸದಸ್ಯರ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷ ಸದಸ್ಯರ ನಡುವೆ ಮಾತಿನ ಚಕಮಕಿ ನಡೆಯಿತು. ಪ್ರತಿಪಕ್ಷದ ಉಪ ನಾಯಕ ಗೋವಿಂದರಾಜು ಮಾತನಾಡಿ, ನಿರಾಣಿ ಸದನದಲ್ಲೇ ಹೇಳಿಕೆ ನೀಡಿದ್ದಾರೆ. ಸರ್ಕಾರದ ಭಾಗವಾಗಿಯೇ ಈ ರೀತಿ ಹೇಳಿಕೆ ನೀಡಿದ್ದರಿಂದ ಚರ್ಚೆಗೆ ಅವಕಾಶ ನೀಡಿ ರೂಲಿಂಗ್ ನೀಡಬೇಕು ಎಂದು ಆಗ್ರಹಿಸಿದರು.

    ಪ್ರತಿಪಕ್ಷದ ಬೇಡಿಕೆ ವಿರೋಧಿಸಿದ ಸಭಾನಾಯಕ ಕೋಟಾ ಶ್ರೀನಿವಾಸ ಪೂಜಾರಿ (Kota Srinivas Poojary), ಸದಸ್ಯರ ಪ್ರಶ್ನೆಗೆ ಸಚಿವರು ಉತ್ತರ ನೀಡಿದ್ದಾರೆ. ಈ ವೇಳೆ ಕಡತ ವಿಳಂಬಕ್ಕೆ ನಿರಾಣಿ ಉದಾಹರಣೆ ನೀಡಿದ್ದಾರೆ. ಹಿಂದೆಲ್ಲಾ ಹೀಗಾಗಿತ್ತು ಮುಂದೆ ಹೀಗಾಗದಂತೆ ನೋಡಿಕೊಳ್ಳುತ್ತೇವೆ ಎನ್ನುವುದು ಅವರ ಹೇಳಿಕೆಯ ತಾತ್ಪರ್ಯ ಎಂದರು. ಕೋಟಾ ಶ್ರೀನಿವಾಸ ಪೂಜಾರಿ ಹೇಳಿಕೆಗೆ ಪ್ರತಿಪಕ್ಷ ಸದಸ್ಯರು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಜಾರಿ: ಎಸ್.ಟಿ.ಸೋಮಶೇಖರ್

    ಈ ವೇಳೆ ಮಧ್ಯಪ್ರವೇಶ ಮಾಡಿದ ಬಿಜೆಪಿ ಸದಸ್ಯ ಲಕ್ಷ್ಮಣ ಸವದಿ, ಕಾರ್ಯಾಂಗ, ಶಾಸಕಾಂಗ ಅನೇಕ ವರ್ಷಗಳಿಂದ ಬಂದ ವ್ಯವಸ್ಥೆ. ಇದರಲ್ಲಿ ಆಗುವ ವ್ಯತ್ಯಾಸಗಳಿಂದ ಕೆಲವೊಮ್ಮೆ ಘಟನೆಗಳು ಹೊರ ಬರಲಿವೆ. ಮನಸ್ಸಿಗೆ ಘಾಸಿಯಾದಾಗ ಇಂತಹ ಮಾತು ಸಚಿವರಿಂದ ಹೊರಬಂದಿದೆ. ಇದನ್ನು ದೊಡ್ಡದು ಮಾಡಬೇಡಿ ಎಂದು ಮನವಿ ಮಾಡಿದರು. ಜೆಡಿಎಸ್ ಸದಸ್ಯ ಭೋಜೇಗೌಡ ಮಾತನಾಡಿ ಸಚಿವರು ಸತ್ಯ ಹೇಳಿದ್ದಾರೆ. ಸಚಿವರೊಬ್ಬರನ್ನೇ ಯಾಕೆ ಹೊಣೆ ಮಾಡಬೇಕು. ಚರ್ಚೆಗೆ ಅವಕಾಶ ನೀಡಿ ಎಂದರು.

    ನಂತರ ನಿರಾಣಿ ಹೇಳಿಕೆ ಕುರಿತು ಸ್ಪಷ್ಟೀಕರಣ ನೀಡಿದ ಸಕ್ಕರೆ ಸಚಿವ ಶಂಕರಪಾಟೀಲ್ ಮುನೇನಕೊಪ್ಪ (Shankar Patil Munenakoppa) ,ತಮ್ಮ ನೋವಿನ ಸಂಗತಿಯನ್ನು ನಿರಾಣಿ ಹೇಳಿದ್ದಾರೆ. ಪಾಂಡವಪುರ,ಶ್ರೀರಾಮು ಮತ್ತು ಮಲೈ ಶುಗರ್ ಕಾರ್ಖಾನೆಗಳ ಪುನಶ್ಚೇತನ ಸರ್ಕಾರಕ್ಕೆ ಸವಾಲಾಗಿದೆ. ಪಾಂಡವಪುರ ಕಾರ್ಖಾನೆಯನ್ನು ನಿರಾಣಿ ಗ್ರೂಪ್ ಟೆಂಡರ್ ಮೂಲಕ ಪಡೆದುಕೊಂಡಿದೆ. ಅವರು ಸ್ಟಾಂಪ್ ಎಕ್ಸೆಂಪಕ್ಷನ್ ಕೇಳಿದ್ದಾರೆ. ಈ ವಿಚಾರದಲ್ಲಿ ವಿಳಂಬವಾಗಿದೆ. ಇದರ ನೀತಿ ನಿಯಮದಲ್ಲಿ ವಿಳಂಬವಾಗಿದೆ.ಹಣಕಾಸು ಇಲಾಖೆ ಸಲಹೆ ಪಡೆದು ಸಂಪುಟದಲ್ಲಿ ಇಟ್ಟು ಸಿಎಂ (Chief Minister) ಈ ಸಮಸ್ಯೆ ಪರಿಹರಿಸಲಿದ್ದಾರೆ. ಯಾವುದೇ ಅಧಿಕಾರಿ ಆದರೂ ಸರ್ಕಾರದ ನಿಯಮ ಪಾಲಿಸಬೇಕು ಎಂದರು.

    ಸಚಿವರ ಉತ್ತರಕ್ಕೆ ತೃಪ್ತರಾಗದ ಪ್ರತಿಪಕ್ಷ ಸದಸ್ಯರು ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದರು. ಆದರೆ ಪ್ರತಿಪಕ್ಷ ಸದಸ್ಯರ ಬೇಡಿಕೆ ತಳ್ಳಿಹಾಕಿದ ಸಭಾಪತಿ ರಘುನಾಥ್ ರಾವ್ ಮಲ್ಕಾಪುರೆ ಇದು ಪ್ರಶ್ನೋತ್ತರ ಕಲಾಪ ಇಲ್ಲಿ ಚರ್ಚೆಗೆ ಅವಕಾಶ ನೀಡುವುದಿಲ್ಲ. ಬೇರೆ ರೂಪದಲ್ಲಿ ಚರ್ಚೆಗೆ ನೋಟಿಸ್ ನೀಡಿ ಅದಕ್ಕೆ ಅವಕಾಶ ನೀಡಲಾಗುತ್ತದೆ ಎಂದು ರೂಲಿಂಗ್ ನೀಡಿದರು ಗಲಾಟೆಗೆ ಅಂತ್ಯ ಹಾಡಿದರು.

    Live Tv
    [brid partner=56869869 player=32851 video=960834 autoplay=true]

  • ಗುರುಲಿಂಗಸ್ವಾಮಿ ಹೋಳಿಮಠ ನಿಧನಕ್ಕೆ ಮುರುಗೇಶ್ ನಿರಾಣಿ ಸಂತಾಪ

    ಗುರುಲಿಂಗಸ್ವಾಮಿ ಹೋಳಿಮಠ ನಿಧನಕ್ಕೆ ಮುರುಗೇಶ್ ನಿರಾಣಿ ಸಂತಾಪ

    ಬೆಂಗಳೂರು: ಮುಖ್ಯಮಂತ್ರಿಗಳ ಮಾಧ್ಯಮ ಸಮನ್ವಯಧಿಕಾರಿ ಗುರುಲಿಂಗಸ್ವಾಮಿ ಹೋಳಿಮಠ ಅವರ ಹಠತ್ ನಿಧನಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಕಂಬನಿ ಮಿಡಿದಿದ್ದಾರೆ.

    ಕಳೆದ ಹಲವಾರು ವರ್ಷಗಳಿಂದ ಆತ್ಮೀಯರಾಗಿದ್ದ ಅವರು ಚಿಕ್ಕವಯಸ್ಸಿನಲ್ಲೇ ವಿವಿಧ ಪತ್ರಿಕೆಗಳು ಹಾಗೂ ಸುದ್ದಿ ವಾಹಿನಿಗಳಲ್ಲಿ ಕೆಲಸ ಮಾಡಿ ಮಾಧ್ಯಮದಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದರು ಎಂದು ಹೇಳಿದ್ದಾರೆ. ಇದನ್ನೂ ಓದಿ: ಸಿಎಂ ಬೊಮ್ಮಾಯಿ‌ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ನಿಧನ

    ನನ್ನ ಅತ್ಮೀಯ ಪತ್ರಕತರಲ್ಲಿ ಒಬ್ಬಬರಾಗಿದ್ದ ಅವರು ನಿಷ್ಪಕ್ಷಪಾತ ಹಾಗೂ ವಸ್ತುನಿಷ್ಠ ಸುದ್ದಿಗಳಿಗೆ ಹೆಚ್ಚು ಒತ್ತು ಕೊಡುತ್ತಿದ್ದರು. ಒಬ್ಬ ಕ್ರಿಯಾಶೀಲ ಪತ್ರಕರ್ತರಾಗಿದ್ದ ಅವರ ಹಠಾತ್ ನಿಧನ ಆಘಾತ ತಂದಿದೆ ಎಂದು ಕಂಬನಿ ಮಿಡಿದಿದ್ದಾರೆ. ಮೃತರ ಆತ್ಮಕ್ಕೆ ಭಗವಂತನು ಸದ್ಗತಿ ನೀಡಿ, ಪತ್ನಿ, ಮಕ್ಕಳು ಹಾಗೂ ಕುಟುಂಬ ವರ್ಗದವರಿಗೆ ದುಃಖಭರಿಸುವ ಶಕ್ತಿಯನ್ನು ಕೊಡಲಿ ಎಂದು ನಿರಾಣಿಯವರು ಪ್ರಾರ್ಥಿಸಿದ್ದಾರೆ. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ಇಲ್ಲದ ಕಾಲೇಜಿನಿಂದ ಟಿಸಿ ಪಡೆದ ವಿದ್ಯಾರ್ಥಿನಿಯರು

    Live Tv
    [brid partner=56869869 player=32851 video=960834 autoplay=true]

  • ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಜಮೀನು ಭೂಸ್ವಾಧೀನ: ಸಚಿವ ನಿರಾಣಿ

    ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಜಮೀನು ಭೂಸ್ವಾಧೀನ: ಸಚಿವ ನಿರಾಣಿ

    ಕಲಬುರಗಿ: ಜಿಲ್ಲೆಯಲ್ಲಿ ಕೈಗಾರಿಕೆಗಳು ಒಂದೇ ಕಡೆ ಇರುವಂತೆ ಕೈಗಾರಿಕೆ ಹಬ್ ಮಾಡಲು ಕಲಬುರಗಿ ವಿಮಾನ ನಿಲ್ದಾಣ ಬಳಿ 1,000 ಎಕರೆ ಭೂಮಿ ಭೂಸ್ವಾಧೀನಪಡಿಸಿಕೊಳ್ಳಲು ನಿರ್ಧರಿಸಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಮುರುಗೇಶ ನಿರಾಣಿ ಹೇಳಿದರು.

    ಕಲಬುರಗಿ ನಗರದ ಪೊಲೀಸ್ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯೋತ್ಸವದ ನಿಮಿತ್ತ ರಾಷ್ಟ್ರಧ್ವಜಾರೋಹಣ ಮಾಡಿ, ಪರೇಡ್ ಕಮಾಂಡರ್‌ ಡಿ.ಎ.ಆರ್ ಮೀಸಲು ಪಡೆಯ ಆರ್.ಪಿ.ಐ ಹಣಮಂತ ನಾಯಕ ಮತ್ತು ಸಹಾಯಕ ಪರೇಡ್ ಕಮಾಂಡರ್‌ ಆರ್.ಎಸ್.ಐ. ದುರ್ಗಾಸಿಂಹ ನೇತೃತ್ವದ ವಿವಿಧ 11 ತುಕಡಿಗಳಿಂದ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.

    ರಾಜ್ಯದಲ್ಲಿ ಉದ್ಯೋಗ ಸೃಜನೆಗೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದ್ದು, ಇದಕ್ಕಾಗಿ ಉದ್ಯಮ ಸ್ನೇಹಿ ಕೈಗಾರಿಕಾ ನೀತಿ ಜಾರಿಗೊಳಿಸಲಾಗಿದೆ. ನೇರ ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಕಳೆದ ವರ್ಷದ ಮೊದಲನೇ ತ್ರೈಮಾಸಿಕದಲ್ಲಿ ದೇಶದಲ್ಲಿನ ಒಟ್ಟು ಪಾಲಿನಲ್ಲಿ ಶೇ.42 ರಷ್ಟು ಕರ್ನಾಟಕಕ್ಕೆ ಲಭಿಸಿದೆ ಎಂದರು.

    ದಾವೋಸ್ ಆರ್ಥಿಕ ಶೃಂಗ ಫಲಪ್ರದವಾಗಿದ್ದು, ಮುಂದಿನ 3-4 ತಿಂಗಳಿನಲ್ಲಿ 1 ಲಕ್ಷ ಕೋಟಿ ರೂ. ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಇದಲ್ಲದೆ ಬರುವ ನವೆಂಬರ್ 2 ರಿಂದ 4ರ ವರೆಗೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವಿಶ್ವ ಬಂಡವಾಳದಾರರ ಸಮಾವೇಶ ಆಯೋಜಿಸಿದ್ದು, 5 ಲಕ್ಷ ಕೋಟಿ ಹೂಡಿಕೆ ನಿರೀಕ್ಷೆ ಹೊಂದಿದ್ದೇವೆ. ಇದಕ್ಕಾಗಿ ಜಪಾನ್, ದಕ್ಷಿಣ ಕೋರಿಯಾ ದೇಶದಲ್ಲಿ ಈಗಾಗಲೇ ರೋಡ್ ಶೋ ಮಾಡಿ ಬಂಡವಾಳ ಹೂಡಿಕೆಗೆ ರಾಜ್ಯದಲ್ಲಿನ ಕೈಗಾರಿಕೆ ಸ್ನೇಹಿ ವಾತಾವರಣದ ಬಗ್ಗೆ ಪ್ರತಿಷ್ಠಿತ ಕಂಪನಿಗಳಿಗೆ ಮನವರಿಕೆ ಮಾಡಿ ಆಹ್ವಾನ ನೀಡಿದ್ದೇವೆ ಎಂದು ಸಚಿವ ಡಾ.ಮುರುಗೇಶ ನಿರಾಣಿ ತಿಳಿಸಿದರು.

    ಸ್ವಾತಂತ್ರ್ಯದ ಅಮೃತ ಮಹೋತ್ಸವ ಈ ಸಂದರ್ಭದಲ್ಲಿ ಸ್ವಾತಂತ್ರ್ಯಕ್ಕಾಗಿ ಹೋರಾಡಿ ತ್ಯಾಗ, ಬಲಿದಾನ ನೀಡಿದ ಮಹಾನ್ ಪುರುಷರನ್ನು ತಮ್ಮ ಭಾಷಣದಲ್ಲಿ ಸ್ಮರಿಸಿದ ಸಚಿವರು ದೇಶಭಕ್ತಿ ಹೆಚ್ಚಿಸಲು ಕರೆ ನೀಡಿದ ಹರ್ ಘರ್ ತಿರಂಗಾ ಅಭಿಯಾನದಡಿ ಕಳೆದ ಮೂರು ದಿನಗಳಿಂದ ಜಿಲ್ಲೆಯ ಪ್ರತಿ ಮನೆ-ಮನೆಗಳ ಮೇಲೆ, ಸರ್ಕಾರಿ ಕಚೇರಿ, ಶಾಲಾ-ಕಾಲೇಜು, ಪಂಚಾಯತಿ, ಅಂಗನವಾಡಿ ಕಟ್ಟಡಗಳ ಮೇಲೆ ರಾಷ್ಟ್ರಧ್ವಜಾರೋಹಣ ಮಾಡುವ ಮೂಲಕ ಜಿಲ್ಲೆಯ ಜನತೆ ಅತೀ ಉತ್ಸಾಹದಿಂದ ಈ ಅಭಿಯಾನದಲ್ಲಿ ಭಾಗಿಯಾಗಿ ಯಶಸ್ವಿಗೊಳಿಸಿದ್ದಾರೆ. ಇದಕ್ಕಾಗಿ ಅಭಿನಂದನೆ ಸಲ್ಲಿಸುವೆ ಎಂದರು. ಇದನ್ನೂ ಓದಿ: ರಾಷ್ಟ್ರದ ಉನ್ನತಿಯಲ್ಲಿ ಪ್ರಧಾನಿ ಮೋದಿಯವರ ಕೊಡುಗೆ ಅನನ್ಯ: ಬಾಲಚಂದ್ರ ಜಾರಕಿಹೊಳಿ

    ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗೆ ರಾಜ್ಯ ಸರ್ಕಾರ ಬದ್ಧವಾಗಿದ್ದು, ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಡಿ.ಬಿ.ಗೆ ದಾಖಲೆ ಪ್ರಮಾಣದಲ್ಲಿ 3,000 ಕೋಟಿ ರೂ. ಅನುದಾನ ನೀಡಲಾಗಿದೆ. ಇಡೀ ದೇಶ ಸ್ವಾತಂತ್ರ್ಯ ಪಡೆದರು. ಕಲ್ಯಾಣ ಕರ್ನಾಟಕ ಮಾತ್ರ ಒಂದು ವರ್ಷ ಒಂದು ತಿಂಗಳ ತಡವಾಗಿ ಸ್ವಾತಂತ್ರ್ಯದ ರುಚಿ ಕಂಡಿದೆ. ಹೀಗಾಗಿ ಇದೇ ಸೆಪ್ಟೆಂಬರ್ 17 ರಂದು ಕಲಬುರಗಿ ಸೇರಿದಂತೆ ಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳಲ್ಲಿ ವಿಜೃಂಭಣೆಯಿಂದ ಕಲ್ಯಾಣ ಕರ್ನಾಟಕ ಅಮೃತ ಮಹೋತ್ಸವ ನಡೆಸಲು ಉದ್ದೇಶಿಸಿದೆ ಎಂದರು.

    ಜಿಲ್ಲೆಯಲ್ಲಿ ಇತ್ತೀಚಿನ ಅತಿವೃಷ್ಠಿಯಿಂದ 1860ಕ್ಕೂ ಹೆಚ್ಚಿನ ಮನೆಗಳಿಗೆ ನೀರು ನುಗ್ಗಿದ್ದು, ಈ ಪೈಕಿ 1400ಕ್ಕೂ ಹೆಚ್ಚಿನ ಫಲಾನುಭವಿಗಳಿಗೆ 10 ಸಾವಿರ ರೂ. ತಕ್ಷಣ ಪರಿಹಾರ ನೀಡಲಾಗಿದೆ. ಮಳೆಯಿಂದ ಜೀವ ಕಳೆದುಕೊಂಡ 6 ಮೃತರ ಅವಲಂಭಿತರಿಗೆ ತಲಾ 5 ಲಕ್ಷ ರೂ. ಪರಿಹಾರ ವಿತರಿಸಿದೆ. ಜಿಲ್ಲೆಯಲ್ಲಿ 1 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶ ಬೆಳೆ ಹಾನಿ ಅಂದಾಜಿಸಿದ್ದು, ಜಂಟಿ ಸಮೀಕ್ಷೆ ಮಾಡಲಾಗುತ್ತಿದೆ. ನೆರೆ ಹಾವಳಿ ಪರಿಹಾರಕ್ಕೆ ಡಿ.ಸಿ. ಖಾತೆಯಲ್ಲಿ 41 ಕೋಟಿ ರೂ. ಹಣ ಇದೆ. ಹೀಗಾಗಿ ನೆರೆ ಹಾವಳಿ ಪರಿಹಾರಕ್ಕೆ ಅನುದಾನದ ಕೊರತೆಯಿಲ್ಲ ಎಂದು ಭರವಸೆ ನೀಡಿದರು.

    ಸ್ಪಂದನ ಕಲಬುರಗಿಗೆ ಮೆಚ್ಚುಗೆ: ಸಾರ್ವಜನಿಕರ ಕುಂದುಕೊರತೆಗಳನ್ನು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಮಕ್ಷಮ ಆಲಿಸುವ, ವಿವಿಧ ಸೌಲಭ್ಯಗಳನ್ನು ವಿತರಿಸುವ ಹಾಗೂ ಸರ್ಕಾರಿ ಯೋಜನೆಗಳ ಬಗ್ಗೆ ಮಾಹಿತಿ ಒದಗಿಸುವ ಸ್ಪಂದನ ಕಲಬುರಗಿ ಎಂಬ ವಿನೂತನ ಕಾರ್ಯಕ್ರಮ ಕಲಬುರಗಿ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಜಿಲ್ಲೆಯಲ್ಲಿ ಪ್ರಾರಂಭಿಸಿದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಸಚಿವರು ಇದನ್ನು ಜಿಲ್ಲಾ ಪಂಚಾಯತಿ ಕ್ಷೇತ್ರಕ್ಕೂ ವಿಸ್ತರಣೆಗೆ ಸಲಹೆ ನೀಡಿದರು. ಇದನ್ನೂ ಓದಿ: ಸ್ವಾತಂತ್ರ‍್ಯ ದಿನದಂದೇ ರೈತರ ಪ್ರತಿಭಟನೆ – ದರದರನೆ ಎಳೆದೊಯ್ದ ಪೊಲೀಸರು

    Live Tv

    [brid partner=56869869 player=32851 video=960834 autoplay=true]

  • 411 ಕೋಟಿ ರೂ. ಅನವಾಲ ಏತ ನೀರಾವರಿ ಯೋಜನೆಗೆ ಸಂಪುಟ ಅನುಮೋದನೆ

    411 ಕೋಟಿ ರೂ. ಅನವಾಲ ಏತ ನೀರಾವರಿ ಯೋಜನೆಗೆ ಸಂಪುಟ ಅನುಮೋದನೆ

    – ಕ್ಷೇತ್ರದ ಜನತೆಯ ದಶಕಗಳ ಕನಸು ನನಸು ಮಾಡಿದ ನಿರಾಣಿ
    – 65,000 ಎಕರೆ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ

    ಬೆಂಗಳೂರು: ಬಾಗಲಕೋಟೆ ಜಿಲ್ಲೆ ಬೀಳಗಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿರುವ ಘಟಪ್ರಭಾ ಯೋಜನೆಯಡಿ 411.10 ಕೋಟಿ ರೂ. ಮೊತ್ತದ ಅನವಾಲ ಏತ ನೀರಾವರಿ ಯೋಜನೆಗೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ತೀರ್ಮಾನವನ್ನು ತೆಗೆದುಕೊಳ್ಳಲಾಗಿದೆ.

    ಘಟಪ್ರಭಾ ಯೋಜನೆಯಡಿ, ಅನವಾಲ ಏತ ನೀರಾವರಿಯಲ್ಲಿ 3.64 ಟಿಎಂಸಿ ನೀರಿನ ಅವಶ್ಯಕತೆಯಾಗಿದ್ದು, ಇದರ ಅನುಷ್ಠಾನದಿಂದ ಸಾವಿರಾರು ರೈತರಿಗೆ ನೀರಾವರಿ ಸೌಲಭ್ಯ ಸಿಗಲಿದೆ ಎಂದು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮನವರಿಕೆ ಮಾಡಿಕೊಟ್ಟಿದ್ದರು.

    ನಿರಾಣಿ ಮನವಿಗೆ ಸ್ಪಂದನೆ:
    ಈ ನೀರಾವರಿ ಯೋಜನೆ ಕ್ಷೇತ್ರದ ಜನತೆಯ ಬಹು ದಿನಗಳ ಬೇಡಿಕೆಯಾಗಿದ್ದು, ನನ್ನ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನೀರಾವರಿ ಸಚಿವ ಗೋವಿಂದ ಕಾರಜೋಳ ಅವರಿಗೆ ಹೃತ್ಪೂರ್ವಕ ಧನ್ಯವಾದ ಅರ್ಪಿಸಲು ಬಯಸುತ್ತೇನೆ ಎಂದು ನಿರಾಣಿ ಹೇಳಿದ್ದಾರೆ.

    ಡಾ. ನಂಜುಂಡಪ್ಪ ವರದಿಯ ಪ್ರಕಾರ ಬಾಗಲಕೋಟೆ ಜಿಲ್ಲೆಯ ಬೀಳಗಿ ವಿಧಾನಸಭಾ ಕ್ಷೇತ್ರವು ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕವಾಗಿ ಅತ್ಯಂತ ಹಿಂದುಳಿದ ಪ್ರದೇಶವಾಗಿದ್ದು, ಕೃಷ್ಣಾ ನದಿಯ ಹಿನ್ನೀರಿನಲ್ಲಿ ಅತಿ ಹೆಚ್ಚು ಜಮೀನು ಹಾಗೂ ಗ್ರಾಮಗಳನ್ನು ಕಳೆದುಕೊಂಡ ಮುಳುಗಡೆ ಪ್ರದೇಶವಾಗಿರುತ್ತದೆ. ಹೀಗಾಗಿ ಅನವಾಲ ಏತ ನೀರಾವರಿ ಯೋಜನೆಗೆ ಅನುಮೋದನೆ ನೀಡಬೇಕೆಂದು ಸಚಿವ ನಿರಾಣಿ ಮನವಿ ಮಾಡಿದ್ದರು. ಇದನ್ನೂ ಓದಿ: ರಾಜ್ಯದಲ್ಲಿಂದು 2 ಸಾವಿರ ಮಂದಿಗೆ ಕೊರೊನಾ – ಎರಡೇ ದಿನಗಳಲ್ಲಿ 11 ಜೀವ ಬಲಿ

    ಈ ಯೋಜನೆಯಡಿ ಘಟಪ್ರಭಾ ಬಲದಂಡೆ ಮುಖ್ಯ ಕಾಲುವೆಯು 199 ಕಿ.ಮೀ ಇದ್ದು, ಇದರಡಿ 16,9129 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶವನ್ನು ಹೊಂದಿದೆ. ಬಲದಂಡೆ ಮುಖ್ಯ ಕಾಲುವೆಯು 148 ಕಿ.ಮೀ ನಿಂದ 199 ಕಿ.ಮೀ ವರೆಗೆ ನೀರು ತಲುಪದ ಕಾರಣ ಸುಮಾರು 24,750.00 ಹೆಕ್ಟೇರ್ ಜಮೀನು ನೀರಾವರಿ ಸೌಲಭ್ಯ ವಂಚಿತವಾಗಿವೆ. ಈ ಯೋಜನೆಗೆ 3.64 ಟಿಎಂಸಿ ನೀರಿನ ಅವಶ್ಯಕತೆ ಇರುತ್ತದೆ ಎಂದು ಸಿಎಂಗೆ ಬರೆದ ಪತ್ರದಲ್ಲಿ ಸಚಿವ ನಿರಾಣಿ ಉಲ್ಲೇಖಿಸಿದ್ದರು.

    ಯೋಜನೆ ವಿವರ:
    ಈ ಯೋಜನೆಯಿಂದ ಬೀಳಗಿ ಮತ್ತು ಬಾದಾಮಿ ವಿಧಾನಸಭಾ ಕ್ಷೇತ್ರದ 24,750 ಹೆಕ್ಟೇರ್ ಪೈಕಿ ಸುಮಾರು 14,525.43 ಹೆಕ್ಟೇರ್ ಅಚ್ಚುಕಟ್ಟು ಪ್ರದೇಶಕ್ಕೆ ನೀರಾವರಿ ಸೌಲಭ್ಯ ಲಭಿಸಲಿದೆ. ಬಾಗಲಕೋಟೆ ತಾಲೂಕಿನಲ್ಲಿ ಬರುವ ದೇವನಾಳು ಗ್ರಾಮದ ಹತ್ತಿರ ಅನವಾಲ ಏತ ನೀರಾವರಿ ಯೋಜನೆ ಕಾರ್ಯಾರಂಭವಾಗಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ಏನ್ ಬಿಚ್ಚಿಡುತ್ತಾರೋ ಬಿಚ್ಚಿಡಲಿ: ಸುಧಾಕರ್ ತಿರುಗೇಟು

    ಕಳೆದ ವರ್ಷ ಜುಲೈ 6ರಂದು ನಡೆದ 84ನೇ ಅಂದಾಜು ಪರಿಶೀಲನಾ ಸಮಿತಿ ಸಭೆಯಲ್ಲಿ ಸಚಿವ ನಿರಾಣಿ ಅವರು ಅಂದಿನ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆಯನ್ನು ಮಂಡಿಸಿದ್ದರು. ಮಂಡಳಿಯ ಕೆಲವೊಂದು ಅಂಶಗಳನ್ನು ಅಳವಡಿಸಿಕೊಳ್ಳುವ ಷರತ್ತಿಗೊಳಪಡಿಸಿ ಅನುಮೋದನೆ ಪಡೆಯಲು ಶಿಫಾರಸು ಮಾಡಲಾಗಿತ್ತು.

    2022ರ ಜನವರಿ 22 ರಂದು ನಡೆದ ಕರ್ನಾಟಕ ನೀರಾವರಿ ನಿಗಮ ನಿಯಮಿತದ ನಿರ್ದೇಶಕರ ಮಂಡಳಿಯ 97ನೇ ಸಭೆಯಲ್ಲಿ 411.10 ಕೋಟಿ ರೂ. ಮೊತ್ತದ ಸದರಿ ಯೋಜನೆಯು ಎರಡು ಹಂತಗಳಲ್ಲಿ ಕೈಗೊಳ್ಳಲು ಅನುಮೋದನೆ ನೀಡಿತ್ತು. ಅನವಾಲ ಏತ ನೀರಾವರಿ ಯೋಜನೆಗಳ ಕಾಮಗಾರಿಗಳನ್ನು ಎರಡು ಹಂತಗಳಲ್ಲಿ ಕೈಗೊಳ್ಳುವಂತೆ ಸೂಚಿಸಿ, ಇದಕ್ಕೆ ಆಡಳಿತಾತ್ಮಕವಾಗಿ ಅನುಮೋದನೆ ನೀಡುವಂತೆ ಸರ್ಕಾರಕ್ಕೆ ಶಿಫಾರಸು ಮಾಡಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ ಕನ್ನಡ ಬಳಗಕ್ಕೆ ನಿರಾಣಿ ಆಹ್ವಾನ

    ಜಾಗತಿಕ ಹೂಡಿಕೆದಾರರ ಸಮಾವೇಶ: ಟೋಕಿಯೋ ಕನ್ನಡ ಬಳಗಕ್ಕೆ ನಿರಾಣಿ ಆಹ್ವಾನ

    ಟೋಕಿಯೋ: ನವೆಂಬರ್‌ನಲ್ಲಿ ಬೆಂಗಳೂರಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶಕ್ಕೆ ಸಂಬಂಧಿಸಿದಂತೆ ಸಿದ್ಧತೆ ಚುರುಕುಗೊಳಿಸಿರುವ ಬೃಹತ್‌ ಮತ್ತು ಮಧ್ಯಮ ಕೈಗಾರಿಕೆ ಸಚಿವ ಡಾ.ಮುರುಗೇಶ್‌ ಆರ್‌. ನಿರಾಣಿ ಅವರು ಜಪಾನ್‌ಗೆ ಭೇಟಿ ನೀಡಿದ್ದಾರೆ.

    ಜಾಗತಿಕ ಹೂಡಿಕೆದಾರರ ಸಮಾವೇಶದ ಹಿನ್ನೆಲೆಯಲ್ಲಿ ಉದ್ಯಮಿಗಳೊಂದಿಗೆ ಸಮಾಲೋಚನೆ ನಡೆಸಲು ಸಚಿವ ನಿರಾಣಿ ನೇತೃತ್ವದ ನಿಯೋಗ ಜಪಾನ್‌ ಪ್ರವಾಸ ಕೈಗೊಂಡಿದ್ದು, ಈ ಸಂದರ್ಭದಲ್ಲಿ ಟೋಕಿಯೋ ಕನ್ನಡ ಬಳಗ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು. ಅಲ್ಲದೆ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಹ್ವಾನ ನೀಡಿದರು. ಇದನ್ನೂ ಓದಿ: ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್‌ ಶಾ ಬಳಿ ನೆರೆ ಪರಿಹಾರ ಕೇಳಲಿಲ್ಲವೇಕೆ – BJP ಸರ್ಕಾರಕ್ಕೆ ಕಾಂಗ್ರೆಸ್‌ ಪ್ರಶ್ನೆ

    ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕ ಮತ್ತು ಜಪಾನ್ ನಡುವಿನ ಔದ್ಯಮಿಕ ಸಂಬಂಧ ಉತ್ತಮವಾಗಿದೆ. ವಿಶೇಷವಾಗಿ ಜಪಾನ್‌ಗೆ ಸಂಬಂಧಿಸಿದಂತೆ, ತುಮಕೂರಿನ ವಸಂತನರಸಪುರದಲ್ಲಿ ಜಪಾನೀಸ್‌ ಕೈಗಾರಿಕಾ ಟೌನ್‌ಶಿಪ್ ಸ್ಥಾಪಿಸಲಾಗಿದೆ. ಅದಕ್ಕಾಗಿ 519.55 ಎಕರೆ ಭೂಮಿ ಮೀಸಲಿಡಲಾಗಿದ್ದು, ಮೂಲ ಸೌಲಭ್ಯಗಳನ್ನು ಕಲ್ಪಿಸಲಾಗಿದೆ. ಜಪಾನಿನ ಕಂಪನಿಗಳಿಂದ ನೇರ ಹೂಡಿಕೆಗೆ ಎಲ್ಲಾ ರೀತಿಯ ಸಹಕಾರ ಒದಗಿಸಲಾಗುವುದು ಎಂದು ನಿರಾಣಿ ಭರವಸೆ ನೀಡಿದರು.

    ಹೆಚ್ಚಿನ ಆರ್ಥಿಕ ಪ್ರಗತಿ ಸಾಧಿಸುವ ಉದ್ದೇಶದಿಂದ ಎಲ್ಲಾ ಕ್ಷೇತ್ರಗಳಲ್ಲಿ ವಿದೇಶಿ ಕಂಪನಿಗಳ ನೇರ ಹೂಡಿಕೆಯನ್ನು ರಾಜ್ಯ ಸರ್ಕಾರ ಉತ್ತೇಜಿಸುತ್ತದೆ. ಅತಿ ಹೆಚ್ಚು ವಿದೇಶಿ ನೇರ ಬಂಡವಾಳ ಆಕರ್ಷಿಸಿರುವ ರಾಜ್ಯಗಳ ಸಾಲಿನಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದ್ದು, ದೇಶದ ಒಟ್ಟಾರೆ ವಿದೇಶಿ ನೇರ ಹೂಡಿಕೆಯಲ್ಲಿ ನಮ್ಮ ರಾಜ್ಯದ ಪಾಲು ಶೇ.38 ಎಂದು ಅವರು ವಿವರಿಸಿದರು.

    ಪ್ರಧಾನಿ ನರೇಂದ್ರ ಮೋದಿ ಅವರ ದೂರದೃಷ್ಟಿಯ ಫಲವಾಗಿ ಭಾರತ ಇಂದು ಜಾಗತಿಕ ಮಟ್ಟದಲ್ಲಿ ಸ್ಪರ್ಧೆ ಒಡ್ಡುವ ಮಟ್ಟಕ್ಕೇರಿದೆ. ದಾವೋಸ್‌ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗ ಸಭೆ ಫಲಪ್ರದವಾಗಿದ್ದು, ಬಂಡವಾಳ ಹೂಡಿಕೆ ಆಕರ್ಷಿಸುವಲ್ಲಿ ಕರ್ನಾಟಕ ಯಶಸ್ವಿಯಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಕಳೆದ 3-4 ತಿಂಗಳಿಂದೀಚೆಗೆ ಬರೋಬ್ಬರಿ 1 ಲಕ್ಷ ಕೋಟಿ ರೂಪಾಯಿ ಮೊತ್ತದ ಒಪ್ಪಂದಗಳಿಗೆ ಸಹಿ ಮಾಡಲಾಗಿದೆ. ಇದು ರಾಜ್ಯದ ಮೇಲೆ ದೊಡ್ಡ ದೊಡ್ಡ ಕಂಪನಿಗಳು ಇಟ್ಟಿರುವ ನಂಬಿಕೆ ಮತ್ತು ವಿಶ್ವಾಸಕ್ಕೆ ಸಾಕ್ಷಿ ಎಂದು ಹೇಳಿದರು. ಇದನ್ನೂ ಓದಿ: ರಾಜ್ಯದ ಮುಖ್ಯಮಂತ್ರಿ ಸುಳ್ಳು ಹೇಳಲ್ಲ ಎಂದು ಅಂದುಕೊಂಡಿದ್ದೇವೆ: ಯು.ಟಿ ಖಾದರ್

    ಈ ಸಂದರ್ಭದಲ್ಲಿ ಮಾತನಾಡಿದ ಟೋಕಿಯೊ ಕನ್ನಡ ಬಳಗದ ಗಣೇಶ್‌ ಕೃಷ್ಣಯ್ಯ, ಟೋಕಿಯೋ ಕನ್ನಡ ಬಳಗದಲ್ಲಿ 1,000ಕ್ಕೂ ಹೆಚ್ಚು ಸದಸ್ಯರಿದ್ದು, ಜಪಾನಿನ ಅಭಿವೃದ್ಧಿಗೆ ನೀಡಿರುವ ಕೊಡುಗೆಯನ್ನು ಪರಿಗಿಣಿಸಿ ಹಲವು ಕನ್ನಡಿಗರು ಇಲ್ಲಿನ ಸರ್ಕಾರದ ಗೌರವಕ್ಕೆ ಪಾತ್ರರಾಗಿದ್ದಾರೆ. ಕನ್ನಡ ಬಳಗ ಆಯೋಜಿಸುವ ಯುಗಾದಿ ಉತ್ಸವದಲ್ಲಿ ಜಪಾನ್‌ ನಾಗರಿಕರು ಪಾಲ್ಗೊಂಡು ಸಂಭ್ರಮಿಸುತ್ತಾರೆ ಎಂದರು.

    ಕಾರ್ಯಕ್ರಮದಲ್ಲಿ ಭಾರತೀಯ ರಾಯಭಾರ ಕಚೇರಿಯ ಉಪ ಮುಖ್ಯಸ್ಥ ಮಯಾಂಕ್ ಜೋಶಿ ಮತ್ತು ಭಾರತೀಯ ರಾಯಭಾರಿ ಕಚೇರಿಯ ಮೊದಲ ಕಾರ್ಯದರ್ಶಿ ಮನೋಜ್ ಸಿಂಗ್ ನೇಗಿ ಹಾಗೂ ಕನ್ನಡ ಬಳಗದ ಸದಸ್ಯರು ಉಪಸ್ಥಿತರಿದ್ದರು.

    ಜಪಾನ್ ಕನ್ನಡಿಗರ ಹರ್ಷೋದ್ಘಾರ
    ಟೋಕಿಯೋ ಕನ್ನಡ ಬಳಗದೊಂದಿಗಿನ ಸಭೆಯಲ್ಲಿ ‘ಎಲ್ಲಾದರು ಇರು ಎಂತಾದರು ಇರು; ಎಂದೆಂದಿಗು ನೀ ಕನ್ನಡವಾಗಿರು’…..ಎಂಬ ಕವಿವಾಣಿಯೊಂದಿಗೆ ಸಚಿವರು ಭಾಷಣ ಆರಂಭಿಸಿದಾಗ ಸಭೆಯಲ್ಲಿ ಹರ್ಷೋದ್ಘಾರ ಕೇಳಿಬಂತು. ಇದನ್ನೂ ಓದಿ: ಮಹದಾಯಿ ವಿಷಯದಲ್ಲಿ ಮತ್ತೆ ಗೋವಾ ಕ್ಯಾತೆ – ಕರ್ನಾಟಕದ ವಿರುದ್ಧ ತುರ್ತು ತನಿಖೆಗೆ ಶಾಸಕ ಮನವಿ

    Live Tv
    [brid partner=56869869 player=32851 video=960834 autoplay=true]

  • ಭೂಸ್ವಾಧೀನ ಮಾಡಿಕೊಂಡ ಜಮೀನು ಮಾರುಕಟ್ಟೆ ದರದಲ್ಲಿ ಖರೀದಿಸಲು ರೈತರರಿಂದ ಸಚಿವ ಮುರುಗೇಶ್ ನಿರಾಣಿಗೆ ಒತ್ತಾಯ

    ಭೂಸ್ವಾಧೀನ ಮಾಡಿಕೊಂಡ ಜಮೀನು ಮಾರುಕಟ್ಟೆ ದರದಲ್ಲಿ ಖರೀದಿಸಲು ರೈತರರಿಂದ ಸಚಿವ ಮುರುಗೇಶ್ ನಿರಾಣಿಗೆ ಒತ್ತಾಯ

    ಬೆಂಗಳೂರು: ಕೈಗಾರಿಕಾ ಉದ್ದೇಶಗಳಿಗೆ ಭೂಸ್ವಾಧೀನ ಮಾಡಿಕೊಂಡಿರುವ ಜಮೀನನ್ನು ಮಾರುಕಟ್ಟೆ ದರದಲ್ಲಿ ಖರೀದಿ ಮಾಡಬೇಕು ಎಂದು ಸಾವಿರಾರು ರೈತರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ಅವರಿಗೆ ಮನವಿ ಮಾಡಿಕೊಂಡಿದ್ದಾರೆ. ಗುರುವಾರ ದೇವನಹಳ್ಳಿಯ ಸಾವಿರಾರು ರೈತರ ನಿಯೋಗವು ಮುಖಂಡ ಪ್ರಕಾಶ್ ನೇತೃತ್ವದಲ್ಲಿ ಕರ್ನಾಟಕ ಉದ್ಯೋಗ ಮಿತ್ರ ಕಚೇರಿ ಬಳಿ ತಮ್ಮ ಜಮೀನನ್ನು ಖರೀದಿ ಮಾಡುವಂತೆ ಪ್ರತಿಭಟನೆ ನಡೆಸಲು ಮುಂದಾದರು.

    ಇದಕ್ಕೆ ತಕ್ಷಣವೇ ಸ್ಪಂದಿಸಿ ರೈತ ನಿಯೋಗವನ್ನು ಖುದ್ದು ಭೇಟಿ ಮಾಡಿದ ಸಚಿವ ನಿರಾಣಿ ಅವರು, ಕೈಗಾರಿಕಾ ಉದ್ದೇಶಗಳಿಗಾಗಿ ಭೂಸ್ವಾಧೀನ ಮಾಡಿಕೊಂಡಿರುವ ಜಮೀನನ್ನು ಸರ್ಕಾರ ಯೋಗ್ಯ ಬೆಲೆಯಲ್ಲಿ ಖರೀದಿಸಲು ಸಿದ್ದವಿದೆ. ನಿಮಗೆ ಅನ್ಯಾಯವಾಗಲು ಅವಕಾಶ ಕೊಡುವುದಿಲ್ಲ ಎಂದು ನಿಯೋಗಕ್ಕೆ ಆಶ್ವಾಸನೆ ನೀಡಿದರು.

    ನಾವು ನಮ್ಮ ಜಮೀನು ಬಿಟ್ಟುಕೊಡಲು ಸಿದ್ದರಿದ್ದೇವೆ. ಬೆರಳಿಣಿಕೆಯ ರೈತರು ಮಾತ್ರ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಮಾರುಕಟ್ಟೆ ದರದಂತೆ ಜಮೀನನ್ನು ಖರೀದಿ ಮಾಡುವಂತೆ ಸಚಿವರಿಗೆ ಮನವರಿಕೆ ಮಾಡಿಕೊಟ್ಟರು. ಇದನ್ನೂ ಓದಿ: ಮೋದಿಗೆ ನಾಯಿ ಸಾವು ಬರುತ್ತೆ ಎಂದಿದ್ದ ಕಾಂಗ್ರೆಸ್ ಮುಖಂಡ ಶೇಖ್ ಹುಸೇನ್ ಬಂಧನ

    ದೇವನಹಳ್ಳಿಯಲ್ಲಿ 4 ಸಾವಿರ ಎಕರೆ ಜಮೀನು ಕೈಗಾರಿಕೆಗಳ ಸ್ಥಾಪನೆಗೆ ಮೀಸಲಿಡಲಾಗಿತ್ತು. ಇದರಲ್ಲಿ ಹಾರ್ಡ್‍ವೇರ್, ಏರೋಸ್ಪೇಸ್ ಸೇರಿದಂತೆ ವಿವಿಧ ರೀತಿಯ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿದ್ದೇವೆ, ಜಮೀನು ನೀಡಿದ ರೈತರಿಗೆ ಯೋಗ್ಯವಾದ ಬೆಲೆ ಕೊಡಬೇಕು ಎಂಬುದರಲ್ಲಿ ಎರಡು ಮಾತಿಲ್ಲ. ಅದೇ ರೀತಿ ಸ್ಥಳೀಯರಿಗೆ ಉದ್ಯೋಗ ಕೊಡಲು ನಾವು ಬದ್ಧರಾಗಿದ್ದೇವೆ. ಎಲ್ಲೆಲ್ಲಿ ಈ ರೀತಿಯ ಸಮಸ್ಯೆಗಳಿವೆಯೋ ಅಲ್ಲಿ ಸಂಬಂಧಪಟ್ಟ ರೈತ ಮುಖಂಡರ ಜೊತೆ ನಾನೇ ಖುದ್ದು ಮಾತುಕತೆ ನಡೆಸಿ ಸಮಸ್ಯೆಯನ್ನು ಇತ್ಯರ್ಥಪಡಿಸುತ್ತೇನೆ. ಯಾವುದೇ ಕಾರಣಕ್ಕೂ ಜಮೀನು ನೀಡಿದ ರೈತರು ಆತಂಕಕ್ಕೆ ಒಳಗಾಗಬಾರದು. ನಿಮ್ಮ ಹಿತಾಸಕ್ತಿಯನ್ನು ಕಾಪಾಡಲು ನಾವು ಬದ್ಧವಾಗಿದ್ದೇವೆ ಎಂದು ನಿರಾಣಿ ಅವರು ರೈತ ನಿಯೋಗಕ್ಕೆ ಆಭಯ ನೀಡಿದರು.

    ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವ ನಿರಾಣಿ, ಅವರು,ಆರ್ಥಿಕವಾಗಿ ಹಿಂದುಳಿದ ಸಮುದಾಯ(ಇಡಬ್ಲ್ಯುಎಸ್) ದವರು ಕೈಗಾರಿಕೆಗಳನ್ನು ಸ್ಥಾಪಿಸಲು ಮುಂದೆ ಬಂದರೆ 2 ಎಕರೆವರೆಗೂ ಜಮೀನನ್ನು ರಿಯಾಯಿತಿ ದರದಲ್ಲಿ ನೀಡಲು ಹಾಲಿ ಇರುವ ಕಾಯ್ದೆಗೆ ತಿದ್ದುಪಡಿ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.

    ಈಗಾಗಲೇ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರು ಕೈಗಾರಿಕೆಗಳನ್ನು ಪ್ರಾರಂಭಿಸಿದರೆ ಅಂತಹವರಿಗೆ ಸರ್ಕಾರದ ವತಿಯಿಂದ ಶೇ. 75ರಷ್ಟು ರಿಯಾಯಿತಿ ನೀಡಿ ಜಮೀನು ನೀಡಲಾಗುತ್ತದೆ. ಉಳಿದ ಶೇ. 25 ರಷ್ಟು ಹಣವನ್ನು ಹಂತ ಹಂತವಾಗಿ ಕಟ್ಟಲು ಅನುವು ಮಾಡಿಕೊಡಲಾಗಿದೆ ಎಂದು ಹೇಳಿದರು.

    Live Tv