Tag: Murugesh nirani

  • ವಿಜಯೇಂದ್ರ ಸಿಎಂ ಆಗಲಿ, ಅದ್ರಲ್ಲಿ ತಪ್ಪೇನು: ಮುರುಗೇಶ್ ನಿರಾಣಿ

    ವಿಜಯೇಂದ್ರ ಸಿಎಂ ಆಗಲಿ, ಅದ್ರಲ್ಲಿ ತಪ್ಪೇನು: ಮುರುಗೇಶ್ ನಿರಾಣಿ

    ವಿಜಯಪುರ: ವಿಜಯೇಂದ್ರ ಸಿಎಂ ಆಗಲಿ. ಸಿಎಂ ಮಗ ಸಿಎಂ ಆದರೆ ತಪ್ಪೇನು ಎಂದು ಸಚಿವ ಮುರುಗೇಶ್ ನಿರಾಣಿ ಅಭಿಪ್ರಾಯಪಟ್ಟರು.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಜಯೇಂದ್ರಗೆ ನಾಯಕನಾಗುವ ಎಲ್ಲಾ ಕ್ವಾಲಿಟಿ ಇವೆ. ಏನೇ ಜವಾಬ್ದಾರಿ ನೀಡುವುದು ಹೈಕಮಾಂಡ್‍ಗೆ ಬಿಟ್ಟಿದ್ದು. ಯಾರ ಹಣೆ ಬರಹದಲ್ಲಿ ಏನು ಬರೆದಿದೆಯೋ ಗೊತ್ತಿಲ್ಲ ಎಂದರು.

    ನಮ್ಮ ರಾಜ್ಯದಲ್ಲಿದ್ದವರು ಪ್ರಧಾನಿಯಾದವರ ಮಗನೂ ಮುಖ್ಯಮಂತ್ರಿ ಆಗಿದ್ದಾರೆ. ಅದೇ ರೀತಿ ಮುಖ್ಯಮಂತ್ರಿ ಮಗ ಮುಖ್ಯಮಂತ್ರಿ ಆದ್ರೆ ಏನ್ ತಪ್ಪಿದೆ. ಅದನ್ನು ನಿರ್ಧಾರ ಮಾಡುವವರು ರಾಜ್ಯ, ರಾಷ್ಟ್ರ ನಾಯಕರಿದ್ದಾರೆ. ಎಲ್ಲಾ ಕ್ವಾಲಿಟಿಗಳು ವಿಜಯೇಂದ್ರಗೆ ಇದೆ ಎನ್ನುವುದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ಮೇಕೆದಾಟು ವ್ಯಾಜ್ಯ – ಸುಪ್ರೀಂಕೋರ್ಟ್‍ಗೆ ತಮಿಳುನಾಡು ಅಫಿಡೆವಿಟ್

    ಬಿಎಸ್‍ವೈ ಬಗ್ಗೆ ಕಾಂಗ್ರೆಸ್ ಮಾತನಾಡಿರುವುದು ಸರಿಯಿಲ್ಲ. ಕಾಂಗ್ರೆಸ್ ಮೊದಲು ಅವರ ಪಕ್ಷ ಸರಿ ಮಾಡಿಕೊಳ್ಳಲಿ. ಯಡಿಯೂರಪ್ಪ ನಮ್ಮ ಪಕ್ಷದ ಮುಖಂಡರು. ಹಾಗೇ ಬಿಜೆಪಿಯಿಂದ ಒಂದು ಕುಟುಂಬದಲ್ಲಿ ಮೂವರಿಗೆ ಸೀಟ್ ನೀಡಿದ್ದು, ದೇಶದ ಇತಿಹಾಸದಲ್ಲೇ ಇಲ್ಲ. ಇದು ಎಲ್ಲರಿಗೂ ಗೊತ್ತಿದೆ. ವಿಜಯೇಂದ್ರ ಹೆಚ್ಚಿನ ಕೆಲಸ ಮಾಡಲಿ, ಬೆಳೆಯಲಿ ಎನ್ನುವುದು ಇದೆ. ಮುಂದೆ ಯಡಿಯೂರಪ್ಪ, ಸಂಘ ಪರಿವಾರ, ಹಿರಿಯರ ಆಶೀರ್ವಾದ, ಮಾರ್ಗದರ್ಶನದಿಂದ ಎತ್ತರಕ್ಕೆ ಬೆಳೆಯುತ್ತಾನೆ ಎಂದು ಅಭಿಮತ ವ್ಯಕ್ತಪಡಿಸಿದರು. ಇದನ್ನೂ ಓದಿ: ನಾಳೆಯಿಂದ ಪಿಯುಸಿ ತರಗತಿಗಳು ಪ್ರಾರಂಭ- ಹಿಜಬ್ ನಿಷೇಧ

  • ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದ್ರೆ ರಾಜೀನಾಮೆ ಕೊಟ್ತೇನೆ: ನಿರಾಣಿ

    ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧಿಸಿದ್ರೆ ರಾಜೀನಾಮೆ ಕೊಟ್ತೇನೆ: ನಿರಾಣಿ

    ಬೆಳಗಾವಿ: ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಚುನಾವಣೆಗೆ ಸ್ಪರ್ಧೆ ಮಾಡಿದರೆ ಅವತ್ತೆ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ ಎಂದು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

    ನಗರದಲ್ಲಿ ಕುಟುಂಬ ರಾಜಕಾರಣದ ಬಗ್ಗೆ ಮೋದಿ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ನಮ್ಮ ಕುಟುಂಬದಿಂದ ಮೂರನೇ ವ್ಯಕ್ತಿ ಸ್ಪರ್ಧಿಸಿದರೆ ಅವತ್ತೆ ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ. ಮೊದಲಿಂದಲೂ ನಾವು ಇಬ್ಬರು ರಾಜಕಾರಣದಲ್ಲಿ ಇದ್ದೇವೆ. ನಿರಾಣಿ ಕುಟುಂಬದ ಮೂರನೇಯರು ರಾಜಕೀಯಕ್ಕೆ ಬರ್ತಿಲ್ಲ. ಇದು ನೂರಕ್ಕೆ ನೂರರಷ್ಟು ಸತ್ಯವಾಗಿದ್ದು, ನಿರಾಣಿ ಕುಟುಂಬದ ಮೂರನೇ ವ್ಯಕ್ತಿಯ ಸ್ಪರ್ಧೆ ಮಾಧ್ಯಮಗಳ ಸೃಷ್ಟಿಯಾಗಿದೆ ಎಂದರು. ಇದನ್ನೂ ಓದಿ: ರೋಹಿತ್ ಚಕ್ರತೀರ್ಥ ಸಮಿತಿಯಿಂದ ಪಿಯುಸಿ ಪಠ್ಯ ಪರಿಷ್ಕರಣೆ ಮುಕ್ತಾಯ

    ಸಹೋದರ ಸಂಗಮೇಶ ನಿರಾಣಿ ಕಳೆದ 4 ವರ್ಷದಿಂದ ಜಮಖಂಡಿಯಲ್ಲಿ ಸಭೆ ಸಮಾರಂಭ ಮಾಡಿಲ್ಲ. ನನಗೆ ಈ ರೀತಿಯ ಬ್ಲೆಮ್ ಬರಬಾರದು ಎಂದು ಜಮಖಂಡಿ ಮಾಜಿ ಶಾಸಕರ ಅನುಮತಿ ಪಡೆದು ಹೋಗುತ್ತಿರುವೆ. ನಾನು ನನ್ನ ಸಹೋದರ ಹನುಮಂತ ನಿರಾಣಿ ಹೊರತುಪಡಿಸಿ ನಮ್ಮ ಮನೆಯಲ್ಲಿ ಯಾರು ಚುನಾವಣೆಗೆ ಸ್ಪರ್ಧೆ ಮಾಡುವುದಿಲ್ಲ. ಒಂದು ವೇಳೆ ಯಾರಾದರೂ ನನ್ನ ಮಾತು ಕೇಳದೇ ನಮ್ಮ ಕುಟುಂಬದವರು ರಾಜಕೀಯಕ್ಕೆ ಎಂಟ್ರಿಯಾದರೆ ಅವತ್ತೇ ನಾನು ರಾಜೀನಾಮೆ ಕೊಟ್ಟು ಮನೆಯಲ್ಲಿ ಇರುತ್ತೇನೆ ಎಂದರು. ಇದನ್ನೂ ಓದಿ: ಕಾಂಗ್ರೆಸ್‌ಗೆ ಬ್ರಿಜೇಶ್‌ ಕಾಳಪ್ಪ ರಾಜೀನಾಮೆ

    ಪ್ರಧಾನಮಂತ್ರಿ ಹೇಳಿದ್ದನ್ನ ನಾನು ಪಾಲಿಸುತ್ತೇನೆ. ಮೊದಲಿನಿಂದಲೂ ಇಬ್ಬರಿಗೆ ಟಿಕೆಟ್ ಕೊಟ್ಟಿದ್ದಾರೆ ನಾವು ಮುಂದುವರಿಯುತ್ತೇವೆ. ನೂರಕ್ಕೆ ನೂರರಷ್ಟು ಮೂರನೆಯವರು ರಾಜಕೀಯಕ್ಕೆ ಬರುವುದಿಲ್ಲ. ಇದರಲ್ಲಿ ಯಾವುದೇ ಸಂಶಯವೇ ಬೇಡಾ. ನಾವು ಸ್ಪರ್ಧೆ ಮಾಡುವುದಿಲ್ಲ ಅಂದ್ಮೇಲೆ ಮತ್ತೊಬ್ಬರ ಬಗ್ಗೆ ನಾನು ಮಾತನಾಡುವುದಿಲ್ಲ. ಮನಾವು ಜಮಖಂಡಿ ಆಗಲಿ, ರಾಮದುರ್ಗ ಆಗಲಿ ಅಲ್ಲಿ ಕಾಲಿಟ್ಟಿಲ್ಲ ಎಂದು ಹೇಳಿದರು.

  • ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಮುರುಗೇಶ್ ನಿರಾಣಿ

    ರಾಜ್ಯದಲ್ಲಿ 5 ಲಕ್ಷ ಕೋಟಿ ಬಂಡವಾಳ ಹೂಡಿಕೆ ನಿರೀಕ್ಷೆ: ಮುರುಗೇಶ್ ನಿರಾಣಿ

    ಬೆಂಗಳೂರು: ಮುಂಬರುವ ನವೆಂಬರ್ ತಿಂಗಳಿನಲ್ಲಿ ನಡೆಯಲಿರುವ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ 5 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ವಿಶ್ವಾಸ ವ್ಯಕ್ತಪಡಿಸಿದರು.

    ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಪಾಲ್ಗೊಂಡು ಬೆಂಗಳೂರಿಗೆ ಆಗಮಿಸಿದ ಅವರು, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಈಗಾಗಲೇ ನಿಗದಿಯಾಗಿರುಂತೆ ನವೆಂಬರ್ 2ರಿಂದ 4ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶ ನಡೆಯಲಿದೆ. ವಿಶ್ವದ ಮುಂಚೂಣಿಯಲ್ಲಿರುವ ಅನೇಕ ಉದ್ಯಮಿಗಳು ರಾಜ್ಯದಲ್ಲಿ ಬಂಡವಾಳ ಹೂಡಲು ಆಸಕ್ತಿ ತೋರಿದ್ದಾರೆ. ಅಂದಾಜು 5 ಲಕ್ಷ ಕೋಟಿ ರೂ. ಹೂಡಿಕೆಯಾಗುವ ನಿರೀಕ್ಷೆಯಿದೆ ಎಂದು ಹೇಳಿದರು.

    ದಾವೋಸ್‍ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ನಾನು ವಿಶ್ವದ ಪ್ರಮುಖ ಉದ್ಯಮಿಗಳನ್ನು ಭೇಟಿಯಾಗಿ ಬಂಡವಾಳ ಹೂಡಿಕೆ ಸಂಬಂಧ ಮಾತುಕತೆ ನಡೆಸಿದ್ದೇವೆ ಇದೊಂದು ಯಶಸ್ವಿ ಪ್ರವಾಸ ಎಂದು ಬಣ್ಣಿಸಿದರು. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್- ವಿಕ್ಟೋರಿಯಾ ಆಸ್ಪತ್ರೆಯ ಸಿ ಬ್ಲಾಕ್ ಮುಂಭಾಗ ವಿದ್ಯುತ್ ಭಾಗ್ಯ

    ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಲು ಮುಂಚೂಣಿಯಲ್ಲಿರುವ ಉದ್ಯಮಿಗಳು ಆಸಕ್ತಿ ತೋರಿದ್ದಾರೆ. ಇಲ್ಲಿನ ಆಹ್ಲಾದಕರ ವಾತಾವರಣ, ಉದ್ಯಮಿಗಳ ಪರವಾಗಿರುವ ಸರ್ಕಾರ, ಕೈಗಾರಿಕಾ ಸ್ನೇಹಿ ನೀತಿಗಳು, ಉದ್ಯಮಿಗಳಿಗೆ ಬೇಕಾಗಿರುವ ರಸ್ತೆ, ನೀರು, ವಿದ್ಯುತ್ ಸೇರಿದಂತೆ ವಿಶ್ವದರ್ಜೆಯ ಮೂಲಭೂತ ಸೌಕರ್ಯಗಳು ರಾಜ್ಯದಲ್ಲಿ ಸಿಗುವುದರಿಂದ ಉದ್ಯಮಿಗಳು ಮುಂದೆ ಬಂದಿದ್ದಾರೆ ಎಂದು ತಿಳಿಸಿದರು.

    ದೊಡ್ಡ ಮಟ್ಟದ ಬಂಡವಾಳ ಹೂಡಿಕೆಯಾದರೆ ಕೈಗಾರಿಕೆಗಳು ಹೆಚ್ಚು ಹೆಚ್ಚು ಸ್ಥಾಪನೆಯಾಗಲಿವೆ. ಇದರಿಂದ ಸ್ಥಳೀಯರಿಗೆ ಉದ್ಯೋಗ ಅವಕಾಶಗಳು ಲಭಿಸಲಿವೆ. ಜೊತೆಗೆ ನಿರುದ್ಯೋಗವು ನಿವಾರಣೆಯಾಗಲಿದೆ ಎಂದು ಅಭಿಪ್ರಾಯಪಟ್ಟರು. ಇದನ್ನೂ ಓದಿ: ಮಂಕಿಪಾಕ್ಸ್ ಆತಂಕ – ಬೆಂಗಳೂರಿನಲ್ಲಿ ಹೈ ಅಲರ್ಟ್

    ನಾಲ್ಕು ದಿನ ನಾವು ವಿವಿಧ ಕೈಗಾರಿಕೋದ್ಯಮಿಗಳನ್ನು ಭೇಟಿಯಾಗಿದ್ದೇವೆ. ಬಂಡವಾಳ ಹೂಡಿಕೆ ಮಾಡುವಂತೆ ನಾವು ಮುಂದಿಟ್ಟ ಪ್ರಸ್ತಾವನೆಗೆ ಅನೇಕ ಉದ್ಯಮಿಗಳು ಒಪ್ಪಿಗೆ ಸೂಚಿಸಿದ್ದಾರೆ. ಅಂದಾಜು ಒಂದು ಲಕ್ಷ ಕೋಟಿ ರೂ. ಬಂಡವಾಳ ರಾಜ್ಯದಲ್ಲಿ ಹೂಡಿಕೆಯಾಗಲಿದೆ. ಬಂಡವಾಳ ಹೂಡಿಕೆಯಾಗುವುದರಿಂದ ರಾಜ್ಯದ ಜಿಡಿಪಿ ದರವು ಏರಿಕೆಯಾಗಲಿದೆ ಎಂದರು.

    ನವೆಂಬರ್‌ನಲ್ಲಿ ನಡೆಯಲಿರುವ ಹೂಡಿಕೆದಾರರ ಸಮಾವೇಶಕ್ಕೆ ಖ್ಯಾತ ಉದ್ಯಮಿಗಳು ಆಗಮಿಸುತ್ತೇವೆ ಎಂದು ಭರವಸೆ ಕೊಟ್ಟಿದ್ದಾರೆ. ಕರ್ನಾಟಕ ಕೈಗಾರಿಕಾ ವಲಯದಲ್ಲಿ ಸಾಧಿಸಿರುವ ಪ್ರಗತಿಯ ಚಿತ್ರಣವನ್ನು ತೆರೆದಿಟ್ಟಿದ್ದೇವೆ. ಬಹುತೇಕರು ನಮ್ಮ ರಾಜ್ಯದ ಬಗ್ಗೆ ವಿಶೇಷವಾದ ಆಸಕ್ತಿಯನ್ನು ತೋರಿದ್ದಾರೆ. ಇನ್ನು ಕೆಲವೇ ವರ್ಷಗಳಲ್ಲಿ ರಾಜ್ಯದ ಚಿತ್ರಣವೇ ಬದಲಾಗಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

  • ಸಿಲಿಕಾನ್ ಸಿಟಿ ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಐಕಿಯ ಸ್ಟೋರ್

    ಸಿಲಿಕಾನ್ ಸಿಟಿ ಬೆಂಗ್ಳೂರಲ್ಲಿ ತಲೆ ಎತ್ತಲಿದೆ ಐಕಿಯ ಸ್ಟೋರ್

    ಬರ್ನ್: ದಾವೋಸ್ ನಲ್ಲಿ ನಡೆಯುತ್ತಿರುವ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಇಂಗ್ಕಾ ಗ್ರೂಪ್ (ಐಕಿಯ) ಸಿಇಒ ಜೆಸ್ಪರ್ ಬ್ರಾಡಿನ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕರ್ನಾಟಕದಲ್ಲಿ ಐಕಿಯ ಸ್ಟೋರ್ ತೆರೆಯುತ್ತಿರುವ ಹಿನ್ನೆಲೆಯಲ್ಲಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು.

    ಜೂನ್ ತಿಂಗಳಲ್ಲಿ ಬೆಂಗಳೂರಿನ ನಾಗಸಂದ್ರದಲ್ಲಿ ಐಕಿಯ ಸ್ಟೋರ್ ತೆರೆಯಲಿದ್ದು, ಇದರ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಜೆಸ್ಪರ್ ಬ್ರಾಡಿನ್ ಅವರು ಸಿಎಂ ಬೊಮ್ಮಾಯಿ ಅವರನ್ನು ಆಹ್ವಾನಿಸಿದರು. ಇದನ್ನೂ ಓದಿ: ದಾವೋಸ್‌ನಲ್ಲೂ ಆಪರೇಷನ್ ಕಮಲದ ಸದ್ದು- ಸಿಎಂಗೆ ನೀವು ಸ್ಟೇಬಲ್ ಇದ್ದೀರಾ ಎಂದ ಮಿತ್ತಲ್

    Davos 2

    ಐಕಿಯದ ಭಾರತೀಯ ಕೇಂದ್ರ ಕಚೇರಿ ಬೆಂಗಳೂರಿನಲ್ಲಿದ್ದು ಪೀಠೋಪಕರಣಗಳ ತಯಾರಿಕೆಯ ಸಂದರ್ಭದಲ್ಲಿ ಬಿದಿರು ಮತ್ತಿತರ ಸ್ಥಳೀಯ ವಸ್ತುಗಳ ವ್ಯಾಪಕ ಬಳಕೆಯ ಕುರಿತು ಸಹ ಚರ್ಚಿಸಲಾಯಿತು. ಇದನ್ನೂ ಓದಿ: ಲುಲು ಗ್ರೂಪ್‍ನೊಂದಿಗೆ 2,000 ಕೋಟಿ ರೂ. ಹೂಡಿಕೆ ಒಪ್ಪಂದ – ಪ್ರತಿಷ್ಠಿತ ಕಂಪನಿಗಳೊಂದಿಗೆ ಬೊಮ್ಮಾಯಿ ಚರ್ಚೆ

    INKGA 3

    ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಐಟಿ ಬಿಟಿ, ಉನ್ನತ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ, ಕೈಗಾರಿಕಾ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ.ಇ.ವಿ.ರಮಣ ರೆಡ್ಡಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ಪ್ರಸಾದ್, ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಉಪಸ್ಥಿತರಿದ್ದರು.

  • ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ

    ಆ್ಯಸಿಡ್ ದಾಳಿಗೆ ತುತ್ತಾದ ಯುವತಿಯ ಚಿಕಿತ್ಸೆಗೆ 1 ಲಕ್ಷ ರೂ. ಪರಿಹಾರ ಘೋಷಿಸಿದ ಮುರುಗೇಶ್ ನಿರಾಣಿ

    ಬೆಂಗಳೂರು: ದುಷ್ಟರ್ಮಿಯೊಬ್ಬನಿಂದ ಆ್ಯಸಿಡ್ ದಾಳಿಗೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸಂತ್ರಸ್ಥೆ ಯುವತಿಯ ವೈದ್ಯಕೀಯ ವೆಚ್ಚಕ್ಕೆ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್ ನಿರಾಣಿ ವೈಯಕ್ತಿಕವಾಗಿ 1 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಮೊದಲ ಹಂತದಲ್ಲಿ ಯುವತಿಯ ವೈದ್ಯಕೀಯ ವೆಚ್ಚಕ್ಕೆ 1 ಲಕ್ಷ ರೂ. ಪರಿಹಾರವನ್ನು ವೈಯಕ್ತಿಕವಾಗಿ ನೀಡಲಾಗುವುದು. ಅಗತ್ಯವಿದ್ದರೆ ಮುಂದಿನ ದಿನಗಳಲ್ಲಿ ಅವರ ಕುಟುಂಬ ವರ್ಗದವರಿಗೆ ಆರ್ಥಿಕ ನೆರವು ನೀಡುವ ಆಶ್ವಾಸನೆಯನ್ನು ನಿರಾಣಿ ನೀಡಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿ ಮಾಡಿದವರಿಗೆ ಮರಣ ದಂಡನೆ ನೀಡಿ: ಬಾಲಕಿ ಆಕ್ರೋಶ

    ಆ್ಯಸಿಡ್ ದಾಳಿಗೆ ಒಳಗಾದ ಯುವತಿಯ ಕುಟುಂಬದವರು ಆರ್ಥಿಕವಾಗಿ ತುಂಬಾ ಸಂಕಷ್ಟದಲ್ಲಿದ್ದಾರೆ ಎಂಬುದನ್ನು ತಿಳಿದು ತುಂಬಾ ಬೇಸರವಾಯಿತು. ಹೀಗಾಗಿ ವೈದ್ಯಕೀಯ ನೆರವಿಗೆ ವೈಯುಕ್ತಿಕವಾಗಿ ನೆರವು ನೀಡುತ್ತಿದ್ದೇನೆ. ಅತಿ ಶೀಘ್ರದಲ್ಲೇ ಕುಟುಂಬದವರಿಗೆ ಚೆಕ್ ನೀಡಲಾಗುವುದು. ಸರ್ಕಾರದಿಂದಲೂ ನೆರವು ಕೊಡಿಸಲು ಎಲ್ಲಾ ರೀತಿಯಲ್ಲೂ ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಆಶ್ವಾಸನೆ ನೀಡಿದ್ದಾರೆ. ಇದನ್ನೂ ಓದಿ: ಆ್ಯಸಿಡ್ ದಾಳಿಗೆ ಒಳಗಾದ ಯುವತಿಗೆ ಸಹಾಯಹಸ್ತ

    ಯಾವುದೇ ನಾಗರಿಕ ಸಮಾಜದಲ್ಲಿ ಇಂತಹ ಅಮಾನವೀಯ ಘಟನೆಯನ್ನು ಸಹಿಸಲು ಸಾಧ್ಯವೇ ಇಲ್ಲ. ಇದೊಂದು ಅತ್ಯಂತ ಹೇಯ ಕೃತ್ಯ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸಬಾರದು ಎಂದರೆ ಈ ದುಷ್ಕತ್ಯ ಎಸಗುವವರಿಗೆ ಕಠಿಣವಾದ ಕಾನೂನು ಕ್ರಮ ಜರುಗಿಸಬೇಕು. ಇದರಿಂದ ಮುಂದಿನವರಿಗೂ ಎಚ್ಚರಿಕೆಯ ಪಾಠವಾಗಲಿದೆ. ರಾಜ್ಯ ಸರ್ಕಾರ ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ್ದು ಎಷ್ಟು ಸಾಧ್ಯವೋ ಅದಷ್ಟು ಬೇಗ ಆರೋಪಿಯನ್ನು ಬಂಧಿಸಲಾಗುವುದು. ತಪ್ಪಿತಸ್ಥರು ಯಾರೇ ಇದ್ದರೂ ಸರ್ಕಾರ ಖಂಡಿತವಾಗಿಯೂ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳಿದೆ ಎಂದು ಎಚ್ಚರಿಸಿದ್ದಾರೆ.

  • ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿ

    ಯಾವುದೇ ಕಾರಣಕ್ಕೂ ಈಶ್ವರಪ್ಪ ರಾಜೀನಾಮೆ ಕೊಡಬಾರದು: ಸಚಿವ ನಿರಾಣಿ

    ಬೆಳಗಾವಿ: ಯಾವುದೇ ಕಾರಣಕ್ಕೂ ಈಶ್ವರಪ್ಪನವರು ರಾಜೀನಾಮೆ ಕೊಡಬಾರದು ಎಂದು ಹೇಳುವ ಮೂಲಕ ಸಚಿವ ಈಶ್ವರಪ್ಪ ಪರ‌ ಸಚಿವ ಮುರುಗೇಶ್ ನಿರಾಣಿ ಬ್ಯಾಟಿಂಗ್ ಮಾಡಿದ್ದಾರೆ.

    ESHWARAPPA

    ನಗರದಲ್ಲಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಕೇಸ್‌ನಲ್ಲಿ ಸಚಿವ ಈಶ್ವರಪ್ಪ ಮೇಲೆ ಬಂದಿರೋ ಆರೋಪ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕಾಂಗ್ರೆಸ್‌ನವರು ಈಶ್ವರಪ್ಪ ಅವರ ಮೇಲೆ ಮಾಡುತ್ತಿರುವ ಆರೋಪ ಸತ್ಯಕ್ಕೆ ದೂರವಾದದ್ದು. ಟೆಂಡರ್‌ಗೆ ಅದರದೇ ಆದ ಪ್ರಕ್ರಿಯೆ ಇದೆ. ಜಾಹೀರಾತು ನೀಡುವುದು, ಸರ್ಕಾರ ಆರ್ಡರ್ ಮಾಡೋದು ಹೀಗೆ ಹಲವು ಪ್ರಕ್ರಿಯೆಗಳಿವೆ. ಈ ಕೇಸ್‌ನಲ್ಲಿ ಇದ್ಯಾವುದೂ ನಡೆದೇ ಇಲ್ಲ. ಕಾಂಗ್ರೆಸ್‌ನವರು ಈಶ್ವರಪ್ಪ ಮೇಲೆ ಮಾಡುತ್ತಿರುವ ಆಪಾದನೆ ರಾಜಕೀಯ ಪ್ರೇರಿತವಾಗಿದೆ. ಯಾವುದೇ ಕಾರಣಕ್ಕೂ ಈಶ್ವರಪ್ಪನವರು ರಾಜೀನಾಮೆ ಕೊಡಬಾರದು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಕ್ಷಕ್ಕೆ ಮುಜುಗರ ತರಿಸಲ್ಲ, ರಾಜೀನಾಮೆ ಕೊಡ್ತೀನಿ: ಈಶ್ವರಪ್ಪ

    ಸಚಿವ ಈಶ್ವರಪ್ಪ ವಿರುದ್ಧ ಯಾವುದೇ ಸಾಕ್ಷಿ ಇಲ್ಲದೇ ಆಪಾದನೆ ಮಾಡುವುದು ಸರಿಯಲ್ಲ. ಯಾರೋ ಒಬ್ಬರು ಬಂದು ಆಪಾದನೆ ಮಾಡಿದ ತಕ್ಷಣ ಈ ರೀತಿ ಲಿಂಕ್ ಮಾಡೋದು ಸರಿಯಲ್ಲ. ಸಂತೋಷ್ ನಮ್ಮ ಕಾರ್ಯಕರ್ತ ಇರಬಹುದು. ಸಾಕಷ್ಟು ಜನ ಇರ್ತಾರೆ. ಆದರೆ ಇಷ್ಟು ಹಣ ಕೊಡುವುದಿತ್ತು ಅಂತ ಹೇಳುವುದು ಸರಿಯಲ್ಲ. ತನಿಖೆ ವೇಳೆ ಸತ್ಯಾಸತ್ಯತೆ ತಿಳಿಯುತ್ತದೆ. ಪೊಲೀಸರು ತನಿಖೆ ಮಾಡಿ ರಿಪೋರ್ಟ್ ಸಲ್ಲಿಸುತ್ತಾರೆ. ತನಿಖೆ ವೇಳೆ ಸತ್ಯಾಸತ್ಯತೆ ಗೊತ್ತಾಗುತ್ತದೆ. ನ್ಯಾಯಾಲಯದ ಮುಂದೆ ಯಾರೂ ದೊಡ್ಡವರಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.

  • ಕಿತ್ತೂರು ಚೆನ್ನಮ್ಮಳ ನಾಡಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ: ನಿರಾಣಿ

    ಕಿತ್ತೂರು ಚೆನ್ನಮ್ಮಳ ನಾಡಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣ: ನಿರಾಣಿ

    ಬೆಳಗಾವಿ: ಕಿತ್ತೂರು ಚೆನ್ನಮ್ಮಳ ನಾಡಿನಲ್ಲಿ ಬೃಹತ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಈಗಾಗಲೇ ರೂಪರೇಷಗಳನ್ನು ಹಾಕಿಕೊಳ್ಳಲಾಗಿದ್ದು, ಈ ಯೋಜನೆಯಿಂದ ಈ ಭಾಗದ ಅಭಿವೃದ್ಧಿಗೆ ಅನುಕೂಲವಾಗಲಿದೆ ಎಂದು ಬೃಹತ್ ಮತ್ತು ಮದ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಹೇಳಿದರು.

    ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಮತ್ತು ಹುಬ್ಬಳ್ಳಿ ಡೋಮ್ಯಾಸ್ಟಿಕ್ ಏರ್ ಪೋರ್ಟ್ ಮಾಡಿಕೊಂಡು ಕಿತ್ತೂರಿನಲ್ಲಿಯೂ ಒಂದು ಏರ್ ಪೋರ್ಟ್ ಅನ್ನು ನಿರ್ಮಿಸುವುದಾಗಿ ಮುಂಬರುವ ದಿನಗಳಲ್ಲಿ ಕಾರ್ಯ ನಡೆಯಲಿದೆ. ಈಗಾಗಲೇ ಖಾಸಗಿ ಬಂಡವಾಳ ಹೂಡಿಕೆದಾರರೊಂದಿಗೆ ಚರ್ಚಿಸಲಾಗಿದೆ. ಶೀಘ್ರದಲ್ಲಿ ವಿಮಾನ ನಿಲ್ದಾಣವಾಗಲಿದೆ ಎಂದು ಆಶ್ವಾಸನೆ ನೀಡಿದರು. ಇದನ್ನೂ ಓದಿ: ಮಾವಿನಹಣ್ಣಿನ ಮಾರ್ಕೆಟ್ ನಮ್ಮದಾಗಬೇಕು – ಹಾಸನದಲ್ಲಿ ಹೊಸ ಅಭಿಯಾನ

    ಉತ್ತರ ಕರ್ನಾಟಕದಲ್ಲಿ ಅಭಿವೃದ್ಧಿ ಹೊಂದಲು ಮೂಲಭೂತ ಸೌಕರ್ಯ ಬೇಕು. ಕಾರವಾರ ವಿಮಾನ ನಿಲ್ದಾಣ ಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸುವ ಕೆಲಸ ಮಾಡಲಾಗುತ್ತದೆ. ಅದರಂತೆ, ಕಿತ್ತೂರಿನಲ್ಲಿಯೂ ಒಂದು ವಿಮಾನ ನಿಲ್ದಾಣ ಮಾಡುವ ಖಾಸಗಿ ಕಂಪನಿಯವರು ಅವರು ಸಹ ಸಹಮತ ನೀಡಿದ್ದಾರೆ. ಶೀಘ್ರದಲ್ಲಿಯೇ ಕಿತ್ತೂರಿನಲ್ಲಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಾಗಲಿದೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ಮಂಡ್ಯ ವಿದ್ಯಾರ್ಥಿನಿಗೆ ನಗದು ಬಹುಮಾನ – ಹಲಾಲ್ ವಿರುದ್ಧ ಅಭಿಯಾನ: ಎರಡಕ್ಕೂ ನಂಟೇನು?

  • ಹೀಗೆ ಮಾಡಿದ್ರೆ ಮುಂದಿನ ಜನಾಂಗಕ್ಕೆ ಕಾಂಗ್ರೆಸ್ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ: ಮುರುಗೇಶ್ ನಿರಾಣಿ

    ಹೀಗೆ ಮಾಡಿದ್ರೆ ಮುಂದಿನ ಜನಾಂಗಕ್ಕೆ ಕಾಂಗ್ರೆಸ್ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ: ಮುರುಗೇಶ್ ನಿರಾಣಿ

    ಬೆಳಗಾವಿ: ಕಾಂಗ್ರೆಸ್ ಹೀಗೆ ಮಾಡಿದರೆ ಮುಂದಿನ ಜನಾಂಗಕ್ಕೆ ಕಾಂಗ್ರೆಸ್ ಇದೆಯೋ, ಇಲ್ಲವೋ ಗೊತ್ತಾಗುವುದಿಲ್ಲ ಎಂದು ಸಚಿವ ಮುರುಗೇಶ ನಿರಾಣಿ ಹೇಳಿದ್ದಾರೆ.

    ಮುಸ್ಲಿಮರ ಆರ್ಥಿಕ ಬಹಿಷ್ಕಾರ ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಇದರಲ್ಲಿ ಭಾಗವಹಿಸಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಆಗಿ ನಮ್ಮ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರುತ್ತೇವೆ. ಹಿಂದೂ ಸಂಘಟನೆಗಳು ಆರ್ಥಿಕ ಬಹಿಷ್ಕಾರ ಮಾಡುತ್ತಿರುವ ಬಗ್ಗೆ ಮಾಧ್ಯಮದಲ್ಲಿ ನೋಡಿರುವೆ. ನೂರರಷ್ಟು ಶಾಂತಿ ಕಾಪಾಡುವ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ನಮ್ಮ ಗೃಹ ಸಚಿವರು ಸಶಕ್ತರಾಗಿದ್ದಾರೆ ಎಂದರು. ಇದನ್ನೂ ಓದಿ:  ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ, ನಮ್ಮ ತಾತನ ಆಸ್ತಿಯಲ್ಲ; ಮುರುಗೇಶ್ ನಿರಾಣಿ

    ಹಿಜಬ್, ಹಲಾಲ್ ವಿಚಾರ ಮುಂದಿಟ್ಟು ಬೆಲೆ ಏರಿಕೆ ಬಗ್ಗೆ ಮಾತನಾಡುತ್ತಿಲ್ಲ ಎಂಬ ಕಾಂಗ್ರೆಸ್ ಆರೋಪ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‍ನವರ ಆರೋಪ ಸತ್ಯಕ್ಕೆ ದೂರವಾದದ್ದು, ಅವರದ್ದು ಬರೀ ಆಪಾದನೆ ಮಾಡುವ ಕೆಲಸವಷ್ಟೇ. ಇದರ ಜೊತೆಗೆ ಕೆಲವೊಂದು ಪಬ್ಲಿಕ್‍ಗೆ ತೊಂದರೆ ಆಗುವ ಜಾಗ ಇರುತ್ತವೆ. ಕೆಲವು ಕಡೆ ಸ್ಕೂಲ್, ಕಾಲೇಜು, ಆಸ್ಪತ್ರೆಗಳು ಇರುತ್ತವೆ. ಇಲ್ಲಿ ಹಿಂದೂಗಳು ಭಜನೆ ಮಾಡುವುದು, ಮುಸ್ಲಿಮರು ಮೈಕ್ ಹಚ್ಚುವುದು ಆಗಬಾರದು. ಎಲ್ಲಿ ತೊಂದರೆ ಆಗುವುದಿಲ್ಲ, ಅಲ್ಲಿ ಹಚ್ಚಿಕೊಳ್ಳಲು ಕೋರ್ಟ್ ಅವಕಾಶ ಮಾಡಿಕೊಟ್ಟಿದೆ. ಅಲ್ಲಿ ಯಾವುದೇ ರೀತಿ ತೊಂದರೆ ಆಗುವುದಿಲ್ಲ ಎಂದು ತಿಳಿಸಿದರು. ಇದನ್ನೂ ಓದಿ: ವಿವಾದಿತ ಸಮಾಧಿಯನ್ನ ಶಾಂತಿಯುತವಾಗಿ ಸ್ಥಳಾಂತರಿಸಿದ ಕ್ರೈಸ್ತ ಸಮುದಾಯ

    ಕಾಂಗ್ರೆಸ್ ಪಕ್ಷಕ್ಕೆ ವಿರೋಧ ಪಕ್ಷದಲ್ಲಿ ಇರುವಷ್ಟು ಸೀಟ್ ಲೋಕಸಭೆಯಲ್ಲಿ ಬಂದಿಲ್ಲ. ಇದೇ ಮಾಡಿಕೊಂಡು ಹೋದರೆ ಲೆಕ್ಕ ಇಲ್ಲದಂತೆ ಆಗುತ್ತದೆ. ಯುಪಿಎ ಚುನಾವಣೆಯಲ್ಲಿ 400 ಸೀಟ್‍ನಲ್ಲಿ ಕಾಂಗ್ರೆಸ್‍ಗೆ ನಾಲ್ಕು ಸೀಟ್ ಬರಲಿಲ್ಲ. ಹೀಗೆ ಹೋದರೆ ಮುಂದಿನ ಜನಾಂಗಕ್ಕೆ ಕಾಂಗ್ರೆಸ್ ಇದೆಯೋ ಇಲ್ಲವೋ ಗೊತ್ತಾಗುವುದಿಲ್ಲ ಎಂದು ವಾಗ್ದಾಳಿ ನಡೆಸಿದರು.

     

  • ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ, ನಮ್ಮ ತಾತನ ಆಸ್ತಿಯಲ್ಲ; ಮುರುಗೇಶ್ ನಿರಾಣಿ

    ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ, ನಮ್ಮ ತಾತನ ಆಸ್ತಿಯಲ್ಲ; ಮುರುಗೇಶ್ ನಿರಾಣಿ

    ಬೆಳಗಾವಿ: ಸಂಪುಟದಿಂದ ಮುರುಗೇಶ್ ನಿರಾಣಿ ಅವರನ್ನ ಕೈಬಿಡ್ತಾರೆ ಎಂಬ ಪ್ರಶ್ನೆಗೆ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ ಸಚಿವ ಮುರುಗೇಶ್ ನಿರಾಣಿ , ಮಂತ್ರಿ ಆಗ್ಲಿ, ಎಂಎಲ್‍ಎ ಆಗ್ಲಿ ನಮ್ಮ ತಾತನ ಆಸ್ತಿಯಲ್ಲ ಎಂದು ಹೇಳಿದ್ದಾರೆ.

    ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ಮುಖ್ಯಮಂತ್ರಿ ಪರಮಾಧಿಕಾರವಾಗಿದ್ದು, ನಮ್ಮ ರಾಜ್ಯದ ನಾಯಕರು, ರಾಷ್ಟ್ರೀಯ ವರಿಷ್ಠರು ಸೇರಿ ಮುಂದಿನ ದಿನಗಳಲ್ಲಿ ನಿರ್ಧಾರ ಮಾಡುತ್ತಾರೆ. ಮಂತ್ರಿ ಆಗಲಿ, ಎಂಎಲ್‍ಎ ಆಗಲಿ, ಇದು ನಮ್ಮ ತಾತ ಆಸ್ತಿಯಲ್ಲ. ನಾನು ಪಕ್ಷದ ನಿಷ್ಠಾವಂತ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ. 30ವರ್ಷದಿಂದ ಬಿಜೆಪಿ ಪಕ್ಷದ ಕಾರ್ಯಕರ್ತ ಆಗಿರುವೆ. ನಾಳೆ ಮಂತ್ರಿ ಕೊಟ್ಟರು ಇದರಲ್ಲಿ ಇರ್ತೇವಿ. ಎಂಎಲ್‍ಎ ಟಿಕೆಟ್ ಕೊಡದಿದ್ದರು ನಾವು ಈ ಪಕ್ಷದಲ್ಲಿ ಇರುತ್ತೇವೆ. ನಾನು ಪಕ್ಷದ ಸಕ್ರಿಯ ಸದಸ್ಯನಾಗಿ ಮುಂದೆ ಬರುವಂತವರಿಗೆ ಮಾರ್ಗದರ್ಶನ ಮಾಡುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ವಿವಾದಿತ ಸಮಾಧಿಯನ್ನ ಶಾಂತಿಯುತವಾಗಿ ಸ್ಥಳಾಂತರಿಸಿದ ಕ್ರೈಸ್ತ ಸಮುದಾಯ

    ಸಚಿವ ಸಂಪುಟ ವಿಚಾರ ಹೊರಗಡೆ ಚರ್ಚೆ ಆಗ್ತಿಲ್ಲ. ಅದು ಮುಖ್ಯಮಂತ್ರಿ ಪರಮಾಧಿಕಾರವಿದೆ. ಈ ಬಗ್ಗೆ ಸಿಎಂ ಪಕ್ಷದ ವರಿಷ್ಠರೊಂದಿಗೆ ಚರ್ಚೆ ಮಾಡಿ ಇತ್ಯರ್ಥ ಮಾಡುತ್ತಾರೆ. 2023ರಲ್ಲಿ ಕರ್ನಾಟಕದಲ್ಲಿ ಮತ್ತೆ ಬಿಜೆಪಿ ಸರ್ಕಾರ ರಚನೆ ಮಾಡಬೇಕು. 150 ಸೀಟ್ ಗೆಲ್ಲಿಸುವ ನಿಟ್ಟಿನಲ್ಲಿ ಸ್ಟ್ಯಾಟರ್ಜಿ ಮಾಡುತ್ತಿದ್ದಾರೆ. ದಕ್ಷಿಣ ಭಾರತದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ತಂತ್ರ ಮಾಡಿದ್ದಾರೆ. ಹೀಗಾಗಿ ಸಂಪುಟದಿಂದ ಯಾರನ್ನ ಬಿಡುಬೇಕು. ಸಂಪುಟಕ್ಕೆ ಯಾರನ್ನ ತೆಗೆದುಕೊಳ್ಳಬೇಕು. ಯಾರನ್ನ ಸಂಪುಟದಲ್ಲಿ ಉಳಿಸಿ ಕೊಳ್ಳಬೇಕೆನ್ನುವುದನ್ನ ರಾಷ್ಟ್ರೀಯ ನಾಯಕರು ತೀರ್ಮಾನ ಮಾಡುತ್ತಾರೆ ಎಂದಿದ್ದಾರೆ. ಇದನ್ನೂ ಓದಿ: ಮಾಜಿ ಸಚಿವ ಅನಿಲ್ ದೇಶಮುಖ್‍ರನ್ನು ಸಿಬಿಐ ವಶಕ್ಕೆ

    ಮುಸ್ಲಿಂರಿಗೆ ಆರ್ಥಿಕ ಬಹಿಷ್ಕಾರ ವಿಚಾರಕ್ಕೆ, ನಮ್ಮ ರಾಜ್ಯ ಮತ್ತು ರಾಷ್ಟ್ರೀಯ ನಾಯಕರು ಇದರಲ್ಲಿ ಭಾಗವಹಿಸಿಲ್ಲ. ಈ ವಿಚಾರದ ಬಗ್ಗೆ ಚರ್ಚೆ ಆಗಿ ನಮ್ಮ ನಾಯಕರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಿರ್ತೇವೆ. ಹಿಂದೂ ಸಂಘಟನೆಗಳು ಆರ್ಥಿಕ ಬಹಿಷ್ಕಾರ ಮಾಡುತ್ತಿರುವ ಬಗ್ಗೆ ಮಾಧ್ಯಮದಲ್ಲಿ ನೋಡಿರುವೆ. ನೂರರಷ್ಟು ಶಾಂತಿ ಕಾಪಾಡುವ ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ನಮ್ಮ ಗೃಹ ಸಚಿವರು ಸಶಕ್ತರು ಇದ್ದಾರೆ ಎಂದರು.

  • ಕೆಐಎಡಿಬಿ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಬೇಡ ಎಂದವರಿಗೆ ಅಭಿವೃದ್ಧಿಪಡಿಸಿದ ಭೂಮಿ: ನಿರಾಣಿ

    ಕೆಐಎಡಿಬಿ ವಶಪಡಿಸಿಕೊಂಡ ಜಮೀನಿಗೆ ಪರಿಹಾರ ಬೇಡ ಎಂದವರಿಗೆ ಅಭಿವೃದ್ಧಿಪಡಿಸಿದ ಭೂಮಿ: ನಿರಾಣಿ

    – ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸ್ಥಾಪಿಸಿದ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶ
    – ಪರ್ಯಾಯ ಭೂಮಿ ನೀಡುವ ವ್ಯವಸ್ಥೆ ದೇಶದಲ್ಲಿ ಬೇರೆಲ್ಲಿಯೂ ಜಾರಿಯಲ್ಲಿಲ್ಲ

    ಬೆಂಗಳೂರು: ಕೆಐಡಿಬಿಯಿಂದ ಸ್ವಾಧೀನಪಡಿಸಿಕೊಂಡ ಜಮೀನಿಗೆ ರೈತರು ನಗದು ಪರಿಹಾರ ಪಡೆಯದೇ ಇದ್ದಲ್ಲಿ, ಅಭಿವೃದ್ಧಿಪಡಿಸಿದ ನಿವೇಶನದಲ್ಲಿ ಪ್ರತಿ ಎಕರೆಗೆ 10,781 ಚ.ಅಡಿ ಜಾಗವನ್ನು ಫಲಾನುಭವಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ತಿಳಿಸಿದರು.

    ವಿಧಾನಪರಿಷತ್‌ನಲ್ಲಿ ಕಾಂಗ್ರೆಸ್ ಸದಸ್ಯ ಸಲೀಂ ಅಹಮ್ಮದ್ ಅವರ ಪ್ರಶ್ನೆಗೆ ಉತ್ತರಿಸಿದ ನಿರಾಣಿ, ಈ ಮೊದಲು ಪ್ರತಿ ಎಕರೆಗೆ 9,500 ಚ.ಅಡಿ ಅಭಿವೃದ್ಧಿಪಡಿಸಿದ ಜಾಗವನ್ನು ಭೂ ಮಾಲೀಕರಿಗೆ ನೀಡಲಾಗುತ್ತಿತ್ತು. ಈಗ ಎಕೆರೆಗೆ 10,781 ಚ.ಅಡಿ ಜಾಗವನ್ನು ನೀಡಲು ನಿರ್ಧರಿಸಲಾಗಿದೆ ಎಂದರು. ಇದನ್ನೂ ಓದಿ: ತೃತೀಯ ಲಿಂಗಿಗಳಿಗೆ ಸೌಲಭ್ಯ ಕಲ್ಪಿಸಲು ಸಮಿತಿ ರಚನೆ: ಹಾಲಪ್ಪ ಆಚಾರ್

    ಜಮೀನು ಕಳೆದುಕೊಂಡ ಕುಟುಂಬದ ಸದಸ್ಯರಲ್ಲಿ ಶೈಕ್ಷಣಿಕ ಅರ್ಹತೆಗೆ ಅನುಗುಣವಾಗಿ ಸ್ಥಾಪಿಸಿದ ಕೈಗಾರಿಕೆಗಳಲ್ಲಿ ಉದ್ಯೋಗ ಅವಕಾಶಗಳನ್ನು ಕಲ್ಪಿಸಲಾಗುತ್ತದೆ. ಭೂಮಿಯ ಬದಲಾಗಿ ಪರ್ಯಾಯ ಭೂಮಿ ನೀಡುವ ವ್ಯವಸ್ಥೆ ದೇಶದಲ್ಲಿ ಎಲ್ಲಿಯೂ ಜಾರಿಯಲ್ಲಿಲ್ಲ ಎಂದು ಉಪ ಪ್ರಶ್ನೆಯೊಂದಕ್ಕೆ ನಿರಾಣಿ ಪ್ರತಿಕ್ರಿಯಿಸಿದರು. ಇದನ್ನೂ ಓದಿ: ಮಂಗಳೂರಿನ ದೇವಸ್ಥಾನಗಳ ಜಾತ್ರೋತ್ಸವದಲ್ಲಿ ಮುಸ್ಲಿಮರಿಗೆ ಆರ್ಥಿಕ ಬಹಿಷ್ಕಾರ

    ರಾಜ್ಯದಲ್ಲಿ 83,058 ಎಕರೆಯನ್ನು ಕೈಗಾರಿಕಾ ಪ್ರದೇಶಕ್ಕಾಗಿ, 79,017 ಎಕರೆಯನ್ನು ಏಕಘಟಕ ಸಂಕೀರ್ಣದಡಿ ಒಟ್ಟು 1,62,000 ಎಕರೆಯನ್ನು ಕೆಐಎಡಿಬಿ ವಿವಿಧ ಜಿಲ್ಲೆಗಳಲ್ಲಿ ಸ್ವಾಧೀನಪಡಿಸಿಕೊಂಡಿದೆ ಎಂದು ತಿಳಿಸಿದರು.