ಬೆಂಗಳೂರು: ರಾಜ್ಯದ 5 ವಲಯಗಳಲ್ಲಿ ಕೈಗಾರಿಕಾ ಟೌನ್‍ಶಿಪ್‍ಗಳನ್ನು ಸ್ಥಾಪನೆ ಮಾಡುವ ಮೂಲಕ ಕೈಗಾರಿಕೆಗಳನ್ನು ಎರಡನೇ ಹಂತದ ನಗರಗಳಿಗೂ ವಿಸ್ತರಿಸಲು ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಬೃಹತ್ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ವಿಧಾನ ಪರಿಷತ್ತಿನಲ್ಲಿ ತಿಳಿಸಿದರು.
ಬೆಂಗಳೂರು ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಲು ಮುಂದೆ ಬರುವ ಹೂಡಿಕೆದಾರರಿಗೆ ಸೌಲಭ್ಯಗಳು ಮತ್ತು ರಿಯಾಯ್ತಿಗಳನ್ನು ನೀಡುವುದನ್ನು ಕಡಿಮೆ ಮಾಡಿದ್ದು, ರಾಜ್ಯದ 2ನೇ ಹಂತದ ನಗರಗಳಾದ ತುಮಕೂರು, ಕಲಬುರಗಿ, ಬೆಳಗಾವಿ ಸೇರಿದಂತೆ ವಿವಿಧ ನಗರಗಳಲ್ಲಿ ಹೂಡಿಕೆ ಮಾಡಲು ಮುಂದೆ ಬರುವವರಿಗೆ ಸರ್ಕಾರದಿಂದ ಎಲ್ಲ ರೀತಿಯ ಸಹಾಯ, ನೆರವು, ರಿಯಾಯ್ತಿ ನೀಡಲು ಉದ್ದೇಶಿಸಲಾಗಿದೆ ಎಂದರು.
ಕನ್ನಡಿಗರಿಗೆ ಆದ್ಯತೆ
ಹೊಸ ಕೈಗಾರಿಕಾ ನೀತಿ-2020-25ರ ಅನ್ವಯ ರಿಯಾಯ್ತಿ ಹಾಗೂ ಉತ್ತೇಜನ ಪಡೆಯಲು ಕೈಗಾರಿಕಾ ಘಟಕಗಳು ಡಿ ವೃಂದದಲ್ಲಿ ಶೇ.100 ರಷ್ಟು ಹಾಗೂ ಘಟಕದಲ್ಲಿ ಒಟ್ಟಾರೆ ಶೇ. 70 ರಷ್ಟು ಕನ್ನಡಿಗರಿಗೆ ಉದ್ಯೋಗ ನೀಡಬೇಕು ಎಂಬ ಷರತ್ತು ವಿಧಿಸಲಾಗಿದೆ. ಡಾ. ಸರೋಜಿನಿ ಮಹಿಷಿ ವರದಿಯನ್ವಯ ರಾಜ್ಯದ ಕೈಗಾರಿಕೆಗಳಲ್ಲಿ ಶೇ.85ರಷ್ಟು ಉದ್ಯೋಗವನ್ನು ಕನ್ನಡಿಗರಿಗೆ ನೀಡಬೇಕು. ಇದರಲ್ಲಿ ಯಾವುದೇ ಲೋಪವಾಗಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ನುಡಿದರು. ಇದನ್ನೂ ಓದಿ: ನನ್ನ ದಾರಿ ತಪ್ಪಿಸಲು ಈಶ್ವರಪ್ಪ ಜಗಳ ಮಾಡುಬೇಕು ಅಂತಾ ಬರ್ತಾರೆ: ಸಿದ್ದರಾಮಯ್ಯ ಹಾಸ್ಯ ಚಟಾಕಿ
ಬೆಂಗಳೂರು: ಕೋಲಾರದಲ್ಲಿರುವ ಬಿಇಎಂಎಲ್ (ಬೆಮೆಲ್) ಕಾರ್ಖಾನೆಯನ್ನು ಖಾಸಗಿಯವರಿಗೆ ಹಸ್ತಾಂತರಿಸುವುದಿಲ್ಲ. ಇದು ಕೇಂದ್ರ ಸರ್ಕಾರದ ಅಧೀನದಲ್ಲಿದ್ದು ಈ ಬಗ್ಗೆ ವದಂತಿಗಳಿಗೆ ಕಿವಿಗೊಡಬಾರದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ ಮನವಿ ಮಾಡಿದರು.
ಜೆಡಿಎಸ್ ಸದಸ್ಯ ಗೋವಿಂದರಾಜು ಅವರ ಪ್ರಶ್ನೆಗೆ ವಿಧಾನಪರಿಷತ್‍ನಲ್ಲಿ ಮಂಗಳವಾರ ಉತ್ತರಿಸಿದ ಸಚಿವ ನಿರಾಣಿ, ಬೆಮೆಲ್ ಕಾರ್ಖಾನೆ 16 ಸಾವಿರ ಎಕರೆ ಜಾಗದಲ್ಲಿ 12,500 ಎಕರೆ ಖಾತೆ ಆಗಿದೆ. 3,500 ಎಕರೆಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ರಾಜ್ಯ ಸರ್ಕಾರಕ್ಕೆ ಬಿಟ್ಟು ಕೊಡಲು ನಿರ್ಧರಿಸಿದೆ. ಮತ್ತೊಮ್ಮೆ ಆ ಭಾಗದಲ್ಲಿ ಡ್ರೋಣ್ ಸರ್ವೆ ನಡೆಸಲಾಗಿದ್ದು, ಎರಡು ದಿನಗಳಲ್ಲಿ ಕೇಂದ್ರ ಸಚಿವರಿಗೆ ವರದಿಯನ್ನು ಸಲ್ಲಿಸಲಾಗುತ್ತದೆ. ಇದೇ ಮಾರ್ಚ್ 10 ರಂದು ದೆಹಲಿಗೆ ತೆರಳಿ ಗಣಿ ಸಚಿವರ ಜತೆ ಚರ್ಚೆ ಮಾಡಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಸದನದಲ್ಲಿ ಸದ್ದು ಮಾಡಿದ ರೈತ ಮಹಿಳೆ ವಿಷ ಕುಡಿದ ಪ್ರಕರಣ
ಬಿಇಎಂಎಲ್‍ನಲ್ಲಿ 1,149 ಎಕರೆ ಭೂಮಿ ಇದೆ. ಈ ಮೊದಲು ಕೈಗಾರಿಕಾ ಪ್ರದೇಶ ಅಭಿವೃದ್ಧಿ ಪ್ರಕಾರ 979 ಎಕರೆಯನ್ನು ಬೆಮೆಲ್‍ಗೆ ನೀಡಿದ್ದು, ಅದು ಬಳಕೆಯಾಗದೆ ತಟಸ್ಥವಾಗಿರುವುದರಿಂದ ಹಿಂಪಡೆದು ಅಲ್ಲಿ ಖಾಸಗಿ ಕೈಗಾರಿಕೆಗಳ ಸ್ಥಾಪನೆಗೆ ಅವಕಾಶ ಮಾಡಿಕೊಡಲಾಗುವುದು. ಕೈಗಾರಿಕಾ ನಿವೇಶನಗಳ ಹಂಚಿಕೆಯಲ್ಲಿ ಎಸ್ಸಿ-ಎಸ್ಟಿಗಳಿಗೆ ಮತ್ತು ಆರ್ಥಿಕವಾಗಿ ಹಿಂದುಳಿದ ಸಮುದಾಯಗಳಿಗೆ ಆದ್ಯತೆ ನೀಡಲಾಗುವುದು ಎಂದು ನಿರಾಣಿ ಭರವಸೆ ನೀಡಿದರು.
ಕಾರ್ಖಾನೆಯಲ್ಲಿರುವ ಹೆಚ್ಚುವರಿ ಭೂಮಿಯನ್ನು ಹಿಂಪಡೆಯಲಾಗುತ್ತದೆ. ಕೇಂದ್ರ ಸರ್ಕಾರದ ಸಂಸದೀಯ ಆರ್ಥಿಕ ಸಮಿತಿ 2016ರಲ್ಲಿ ನಿರ್ಣಯ ತೆಗೆದುಕೊಂಡು ಸರ್ಕಾರಿ ಸ್ವಾಮ್ಯದ ಕಾರ್ಖಾನೆಗಳಿಂದ ಬಂಡವಾಳ ಹಿಂತೆಗೆತಕ್ಕೆ ತೀರ್ಮಾನಿಸಿದೆ. ಹೀಗಾಗಿ ಹಂತ ಹಂತವಾಗಿ ಸರ್ಕಾರಿ ಬಂಡವಾಳವನ್ನು ವಾಪಸ್ ತೆಗೆಯಲಾಗುವುದು. ಬೆಮೆಲ್‍ನಲ್ಲಿ ಪ್ರಸ್ತುತ ಶೇ.47ರಷ್ಟು ಬಂಡವಾಳ ಇದೆ. ಅದನ್ನು ಸದ್ಯಕ್ಕೆ ಮುಂದುವರಿಸಲಾಗುತ್ತದೆ ಎಂದರು.
ಕಾರ್ಖಾನೆಗಳ ಬಳಿಯೇ ಜನವಸತಿ ಪ್ರದೇಶಗಳಿಗೆ ಉಪನಗರಗಳನ್ನು ನಿರ್ಮಿಸಲು ಸರ್ಕಾರ ಅನುಕೂಲ ಕಲ್ಪಿಸಿಕೊಡುತ್ತಿದೆ. ಅಭಿವೃದ್ಧಿಪಡಿಸಿದ ಭೂಮಿಯಲ್ಲಿ ಶೇ.85ರಷ್ಟನ್ನು ಕೈಗಾರಿಕೆಗಳಿಗೆ, ಉಳಿದ ಪ್ರದೇಶದಲ್ಲಿ ಜನ ವಸತಿ ನಿರ್ಮಿಸಿ ವಾಕ್ ಟು ವರ್ಕ್ ಕಲ್ಪನೆಯನ್ನು ಜಾರಿಗೆ ತರಲಾಗುವುದು ಎಂದರು. ಇದನ್ನೂ ಓದಿ: ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ
ಬೆಂಗಳೂರು: ರಾಜ್ಯದಲ್ಲಿ ಸ್ಥಾಪನೆ ಆಗುವ ಯಾವುದೇ ಕೈಗಾರಿಕೆಗಳಲ್ಲಿ 80% ಉದ್ಯೋಗ ಕನ್ನಡಿಗರಿಗೇ ನೀಡಬೇಕು. ಇಲ್ಲದೆ ಹೋದರೆ ಅಂತ ಕೈಗಾರಿಕೆಗಳ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಬೃಹತ್ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ಎಚ್ಚರಿಕೆ ನೀಡಿದರು.
ವಿಧಾನಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್‌ನ ಮಂಜೇಗೌಡ ವಿಷಯ ಪ್ರಸ್ತಾಪ ಮಾಡಿದರು. ಸರ್ಕಾರ ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಹೆಚ್ಚು ಕೈಗಾರಿಕೆ ಸ್ಥಾಪನೆ ಮಾಡಬೇಕು. ಈ ಭಾಗದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದೆ. ಈಗಿರುವ ಕೈಗಾರಿಕೆಗಳಲ್ಲಿ ಕನ್ನಡಿಗರಿಗೆ ಉದ್ಯೋಗ ಸಿಗುತ್ತಿಲ್ಲ. ಎರಡು ಜಿಲ್ಲೆಗಳಲ್ಲಿ ಮೂಲಭೂತ ಸೌಕರ್ಯಗಳು ಇವೆ. ಹೀಗಾಗಿ ಕೈಗಾರಿಕೆಗಳನ್ನು ಹೆಚ್ಚು ಸ್ಥಾಪನೆ ಮಾಡಬೇಕು ಎಂದು ಒತ್ತಾಯ ಮಾಡಿದರು.
ಇದಕ್ಕೆ ಉತ್ತರ ನೀಡಿದ ಸಚಿವ ಮುರುಗೇಶ್ ನಿರಾಣಿ, ಈಗಾಗಲೇ ಒನ್ ಡಿಸ್ಟ್ರಿಕ್ಟ್ ಒನ್ ಇಂಡಸ್ಟ್ರಿ ಅನ್ನೋ ಯೋಜನೆ ಇಲಾಖೆಯಲ್ಲಿ ಜಾರಿ ಮಾಡಲಾಗಿದೆ. ಪ್ರತಿ ಜಿಲ್ಲೆಯಲ್ಲಿ ಒಂದು ಇಂಡಸ್ಟ್ರಿ ಆದರೂ ಇರಬೇಕು ಎನ್ನುವುದು ಇದರ ಉದ್ದೇಶವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ:ಬಿಜೆಪಿಯದ್ದು ಸಬ್ ಕಾ ವಿಕಾಸ್ ನಹೀ ಹೇ, ಸಬ್ ಕಾ ಸರ್ವ ನಾಶ್ ಹೇ: ಸಿದ್ದರಾಮಯ್ಯ
ಹಳೆ ಮೈಸೂರು ಭಾಗದಲ್ಲಿ ಹೆಚ್ಚು ಕೈಗಾರಿಕೆ ಸ್ಥಾಪನೆಗೂ ಇಲಾಖೆ ಕ್ರಮವಹಿಸುತ್ತಿದೆ. ಟಯರ್ 2 ಸಿಟಿಗಳಲ್ಲಿ ಕೈಗಾರಿಕೆ ಸ್ಥಾಪನೆಗೆ ಮುಂದೆ ಬಂದರೆ ಅನೇಕ ಸವಲತ್ತುಗಳನ್ನು ನೀಡಲಾಗುತ್ತದೆ. ಯಾರಾದ್ರು ಕೈಗಾರಿಕೆ ಪ್ರಾರಂಭಕ್ಕೆ ಮುಂದೆ ಬಂದರೆ ಅನುಮತಿ ನೀಡುವ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದರು.
ವಿಜಯಪುರ: ಸ್ವಪಕ್ಷದವರ ವಿರುದ್ಧವೇ ಮಾತನಾಡುವ ಮೂಲಕ ಸದಾ ಸುದ್ದಿಯಲ್ಲಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ್, ಈಗ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಹೊಸ ಬಾಂಬ್ ಸಿಡಿಸಿದ್ದಾರೆ.
ಕಳೆದ ವಿಧಾನಸಭಾ ಚುನಾವಣೆಯಲ್ಲಿ ನನ್ನನ್ನು ಸೋಲಿಸಲು ಸಚಿವ ಮುರುಗೇಶ್ ನಿರಾಣಿ ಎರಡು ಕೋಟಿ ಖರ್ಚು ಮಾಡಿದ್ದಾರೆ. ಮಾಜಿ ಸಚಿವ ಎಸ್.ಕೆ.ಬೆಳ್ಳುಬ್ಬಿಯನ್ನು ನಗರ ಕ್ಷೇತ್ರದಿಂದ ನಿಲ್ಲಿಸಿ ಎರಡು ಕೋಟಿ ಹಣ ನೀಡಿದ್ದಾರೆ ಎಂದು ತಿಳಿಸಿದ್ದಾರೆ.
ನಗರದಲ್ಲಿ 20 ಸಾವಿರ ಗಾಣಿಗೇರ ಮತದಾರರು ಇದ್ದಾರೆ. ಅದಕ್ಕಾಗಿ ಬೆಳ್ಳುಬ್ಬಿಯನ್ನು ನಿಲ್ಲಿಸಿ ಯತ್ನಾಳ್ ಸೋಲಿಸಲು ಪ್ರಯತ್ನಿಸಿದ್ದರು. ಆದರೆ ಬೆಳ್ಳುಬ್ಬಿಗೆ ಗಾಣಿಗೇರ ಸಮಾಜದವರೇ ಮತ ನೀಡಲಿಲ್ಲ. ಎಲ್ಲರೂ ನನಗೆ ಮತದಾನ ಮಾಡಿದರು ಎಂದು ನಿರಾಣಿ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಾಜಿ MLA ಪುತ್ರನಿಗೆ ಸಪೋರ್ಟ್ ಆರೋಪ – CPI ಸಸ್ಪೆಂಡ್
ಬಿ.ಎಸ್.ಯಡಿಯೂರಪ್ಪ ಅವರ ಆಡಳಿತದ ಬಗ್ಗೆ ಮೊದಲ ದನಿ ಎತ್ತಿದ ಸ್ವಪಕ್ಷೀಯದವರು ಯತ್ನಾಳ್. ಯಡಿಯೂರಪ್ಪ ಬದಲಿಗೆ ಅವರ ಮಗ ಬಿ.ವೈ.ವಿಜಯೇಂದ್ರ ಆಡಳಿತ ನಡೆಸುತ್ತಿದ್ದಾರೆ. ಶೀಘ್ರವೇ ಸಿಎಂ ಬದಲಾವಣೆ ಆಗಲಿದೆ ಎಂದು ಭವಿಷ್ಯ ನುಡಿದಿದ್ದರು. ಅವರ ಮಾತಿನಂತೆಯೇ ಬಿಎಸ್‌ವೈ ಸಿಎಂ ಸ್ಥಾನದಿಂದ ಕೆಳಗಿಳಿದರು.
ಬಾಗಲಕೋಟೆ: ಗುಜರಾತ್‍ನ ಮಾಜಿ ಮುಖ್ಯಮಂತ್ರಿ ಹಾಗೂ ಉತ್ತರ ಪ್ರದೇಶ ರಾಜ್ಯದ ರಾಜ್ಯಪಾಲೆಯಾಗಿರುವ ಆನಂದಿಬೆನ್ ಪಟೇಲ್ (Anandiben Patel) ನಿನ್ನೆ ರಾತ್ರಿ ಬಾಗಲಕೋಟೆ ಜಿಲ್ಲೆಗೆ ಆಗಮಿಸಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ಆರ್.ನಿರಾಣಿ (Murugesh Nirani) ಅವರ ಸಕ್ಕರೆ ಕಾರ್ಖಾನೆ ವೀಕ್ಷಿಸಿದ್ಧಾರೆ.
ಬಾಗಲಕೋಟೆ (Bagalkote) ಜಿಲ್ಲೆಯ ಮುಧೋಳ ನಗರಕ್ಕೆ ಆಗಮಿಸಿರುವ ಆನಂದಿಬೆನ್ ಪಟೇಲ್ ಅವರನ್ನು ಮುರುಗೇಶ್ ಆರ್.ನಿರಾಣಿ ಸ್ವಾಗತಿಸಿದರು. ಕೆಲಹೊತ್ತು ಸಚಿವ ನಿರಾಣಿ ಅವ್ರ ನಿವಾಸದಲ್ಲಿ ವಿಶ್ರಾಂತಿ ಪಡೆದ ಆನಂದಿಬೆನ್ ಅವರು ನಂತರ ಸಚಿವ ಮುರಗೇಶ್ ನಿರಾಣಿ ಒಡೆತನದ ಎಂ.ಆರ್.ಎನ್ ಸಮೂಹ ಸಂಸ್ಥೆ ಕಾರ್ಖಾನೆಯನ್ನು ವೀಕ್ಷಿಸಿದ್ದಾರೆ. ಇದನ್ನೂ ಓದಿ:ಉಕ್ರೇನ್‍ನಿಂದ ಜೀವ ಉಳಿಸಿಕೊಂಡು ಬಂದಿರೋ ವಿದ್ಯಾರ್ಥಿಗಳಿಗೆ ಹೊಸ ಟೆನ್ಶನ್!
ಕಾರ್ಖಾನೆಯ ಸಿಬ್ಬಂದಿ ಜೊತೆ ಚರ್ಚೆ ನಡೆಸಿದ್ದಾರೆ. ಇದೇ ಸಂದರ್ಭದಲ್ಲಿ ಸಚಿವ ಮುರುಗೇಶ್ ನಿರಾಣಿ, ಸಂಗಮೇಶ್ ನಿರಾಣಿ, ವಿಜಯ್ ನಿರಾಣಿ, ನಿರಾಣಿ ಸಕ್ಕರೆ ಕಾರ್ಖಾನೆಯ ಆಡಳಿತ ಮಂಡಳಿಯ ಅಧಿಕಾರಿ ವರ್ಗದವರು ಇದ್ದರು. ಇಂದು ಮುರಗೇಶ್ ನಿರಾಣಿ ಒಡೆತನದ ತೇಜಸ್ ಅಂತರಾಷ್ಟ್ರೀಯ ಶಾಲೆಯ ಅಂಗಸಂಸ್ಥೆಗಳ ಉದ್ಘಾಟನೆ ಮಾಡಲಿರುವ ರಾಜ್ಯಪಾಲರಾದ ಆನಂದಿಬೆನ್ ಅವರು, ನಂತರ ಬಾದಾಮಿ ತಾಲೂಕಿನಲ್ಲಿರುವ ನಿರಾಣಿ ಸಮೂಹಸಂಸ್ಥೆಯ ಕೇದಾರನಾಥ ಸಕ್ಕರೆ ಕಾರ್ಖಾನೆಗೆ ಭೇಟಿ ನೀಡಿ, ಬಾದಾಮಿಯ ಐತಿಹಾಸಿಕ ಬನಶಂಕರಿ ದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ದೇವಿಯ ಆಶಿರ್ವಾದ ಪಡೆಯಲಿದ್ದಾರೆ.
ಬೆಂಗಳೂರು: ಕರ್ನಾಟಕದಲ್ಲಿ ಹೆಚ್ಚಿನ ಹೂಡಿಕೆ ಮಾಡಲು ತೈವಾನ್ ಕಂಪನಿಗಳನ್ನು ಆಹ್ವಾನಿಸಿದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಸರ್ಕಾರದಿಂದ ಎಲ್ಲಾ ಬೆಂಬಲ ಮತ್ತು ಸಹಕಾರ ನೀಡುವುದಾಗಿ ಭರವಸೆ ನೀಡಿದರು.
ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಗುರುವಾರ ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ರಾಯಭಾರಿ ಬಾಶುವಾನ್ ನೇತೃತ್ವದ ನಿಯೋಗವನ್ನು ಭೇಟಿ ಮಾಡಿದ ಅವರು, ಹೂಡಿಕೆಗೆ ಕರ್ನಾಟಕ ಸೂಕ್ತ ಸ್ಥಳ ಹೇಗೆ ಮತ್ತು ಅದಕ್ಕಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳೇನು ಎಂಬುದನ್ನು ಮನವರಿಕೆ ಮಾಡಿಕೊಟ್ಟರು.
ಎರಡು ದಿನಗಳ ಕರ್ನಾಟಕ ಪ್ರವಾಸದಲ್ಲಿರುವ ತೈಪೆ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ಉನ್ನತ ಮಟ್ಟದ ನಿಯೋಗವು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರನ್ನು ಭೇಟಿ ಮಾಡಿ ಹೂಡಿಕೆ ಅವಕಾಶಗಳ ಕುರಿತು ಮಾತುಕತೆ ನಡೆಸಿದೆ.
ಕರ್ನಾಟಕ ಮತ್ತು ತೈವಾನ್ ನಡುವೆ ಹಲವು ಸಾಮ್ಯತೆಗಳಿದ್ದು, ಇಎಸ್‍ಡಿಎಂ, ಎಲೆಕ್ಟ್ರಿಕ್ ವೆಹಿಕಲ್ಸ್, ಆಟೋ ಮತ್ತು ಆಟೋ ಕಾಂಪೊನೆಂಟ್ಸ್, ಹೆಲ್ತ್‍ಕೇರ್, ಇಂಜಿನಿಯರಿಂಗ್ ಮತ್ತು ಮೆಷಿನ್ ಟೂಲ್ ಮುಂತಾದ ಪ್ರಮುಖ ಉದ್ಯಮಗಳಲ್ಲಿ ಮುಂಚೂಣಿ ಸಾಧಿಸಿವೆ ಎಂದರು.
ವಿಸ್ಟ್ರಾನ್ ಕಾರ್ಪೋರೇಶನ್, ಮೀಡಿಯಾಟೆಕ್, ಡೆಲ್ಟಾ ಎಲೆಕ್ಟ್ರಾನಿಕ್ಸ್ ಮತ್ತು ಡಿ-ಲಿಂಕ್ ಸೇರಿದಂತೆ ಪ್ರಮುಖ ತೈವಾನಿ ಕಂಪನಿಗಳಿಗೆ ಕರ್ನಾಟಕ ನೆಲೆಯಾಗಿದೆ. ಇತರ ತೈವಾನ್ ಕಂಪನಿಗಳೂ ನಮ್ಮ ರಾಜ್ಯದಲ್ಲಿ ಹೂಡಿಕೆ ಮಾಡಬಹುದು, ಅದಕ್ಕೆ ಅಗತ್ಯ ಸೌಲಭ್ಯ ಒದಗಿಸಲಾಗುವುದು ಎಂದು ವಿವರಿಸಿದರು.
ಕೈಗಾರಿಕೆಗಳನ್ನು ಉತ್ತೇಜಿಸುವ ಉದ್ದೇಶದಿಂದ ರಾಜ್ಯ ಸರ್ಕಾರ ರೂಪಿಸಿರುವ ನೀತಿಗಳು ಹಾಗೂ ಕೈಗೊಂಡಿರುವ ವಿವಿಧ ಉಪಕ್ರಮಗಳ ಬಗ್ಗೆ ಸಚಿವರು ಮಾಹಿತಿ ನೀಡಿದರು.
ನೂತನ ಕೈಗಾರಿಕಾ ನೀತಿ ಹಾಗೂ ಕೈಗಾರಿಕಾ ಸೌಲಭ್ಯ ತಿದ್ದುಪಡಿ ಅಧಿನಿಯಮದಲ್ಲಿನ ತಿದ್ದುಪಡಿಗಳಿಂದ ನಮ್ಮ ರಾಜ್ಯ ಉದ್ಯಮ ಸ್ನೇಹಿ ರಾಜ್ಯಗಳ ಪಟ್ಟಿಯಲ್ಲಿ ಅತ್ಯಂತ ಪ್ರಮುಖ ಸ್ಥಾನ ಪಡೆದುಕೊಂಡಿದೆ. ಭೂ ಸುಧಾರಣೆ ಕಾಯಿದೆ ತಿದ್ದುಪಡಿ, ಅಫಿಡವಿಟ್ ಬೇಸ್ಡ್ ಕ್ಲಿಯರೆನ್ಸ್ (ಎಬಿಸಿ) ಯೋಜನೆ ಇತ್ಯಾದಿ ಕ್ರಮಗಳಿಂದ ರಾಜ್ಯದಲ್ಲಿ ಉದ್ಯಮಸ್ನೇಹಿ ವಾತಾವರಣ ಸೃಷ್ಟಿಯಾಗಿದ್ದು, ಹೂಡಿಕೆಯ ಪ್ರಸ್ತಾಪಗಳು ವೃದ್ಧಿಸಿವೆ ಎಂದು ಹೇಳಿದರು.
ತೈವಾನ್ ಹೂಡಿಕೆದಾರರಿಗೆ ಕೈಗಾರಿಕೆ ಇಲಾಖೆಯಿಂದ ಎಲ್ಲಾ ಸಹಕಾರ ನೀಡಲಾಗುವುದು. ಸರ್ಕಾರದ ಹಲವು ಸುಧಾರಣಾ ಕ್ರಮಗಳಿಂದಾಗಿ ಕರ್ನಾಟಕವು ದೇಶದ ಆಕರ್ಷಕ ಹೂಡಿಕೆ ತಾಣವಾಗಿ ಹೊರಹೊಮ್ಮಿದೆ. ಹಣಕಾಸು ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಶೇ. 45ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕಾಭಿವೃದ್ದಿ ಆಯುಕ್ತರಾದ ಗುಂಜನ್ ಕೃಷ್ಣ ತಿಳಿಸಿದರು. ಇದನ್ನೂ ಓದಿ:ಚಿತ್ರದುರ್ಗದಲ್ಲಿ ಹೊಸ ಮೆಡಿಕಲ್ ಕಾಲೇಜು ಸ್ಥಾಪನೆಗೆ ಗ್ರೀನ್ ಸಿಗ್ನಲ್: ಡಾ.ಕೆ ಸುಧಾಕರ್
ತೈವಾನ್ ಮೂಲದ ಉದ್ಯಮಗಳಿಗೆ ಅನುಕೂಲ ಕಲ್ಪಿಸಿರುವ ಕರ್ನಾಟಕ ಸರ್ಕಾರಕ್ಕೆ ಬಾಶುವಾನ್ ಕೃತಜ್ಞತೆ ವ್ಯಕ್ತಪಡಿಸಿದರು. ತೈವಾನ್ ದೇಶದ ಆರ್ಥಿಕ ಮತ್ತು ಸಾಂಸ್ಕೃತಿಕ ಕೇಂದ್ರದ ದಕ್ಷಿಣ – ಚೆನ್ನೈನ ಮಹಾನಿರ್ದೇಶಕ ಬೆನ್ ವಾಂಗ್ ಹಾಗೂ ಕೇಂದ್ರದ ಸಿಬ್ಬಂದಿ, ಇನ್ವೆಸ್ಟ್ ಇಂಡಿಯಾ ಫೊರಂನ ಪ್ರಾದೇಶಿಕ ಮುಖ್ಯಸ್ಥೆ ಸಾಯಿ ಸುಧಾ, ತೈವಾನ್ ಡೆಸ್ಕ್ ಲೀಡ್ ಅಜು ಆಂಟೋನಿ, ಕೈಗಾರಿಕಾಭಿವೃದ್ಧಿ ಆಯುಕ್ತೆ ಗುಂಜನ್ ಕೃಷ್ಣ, ಕೆಐಎಡಿಬಿ ಸಿಇಓ ಡಾ.ಎನ್ ಶಿವಶಂಕರ್, ಕರ್ನಾಟಕ ಉದ್ಯೋಗ ಮಿತ್ರದ ವ್ಯವಸ್ಥಾಪಕ ನಿರ್ದೇಶಕ ದೊಡ್ಡಬಸವರಾಜು ಉಪಸ್ಥಿತರಿದ್ದರು. ಇದನ್ನೂ ಓದಿ:ಈಶ್ವರಪ್ಪ ರಾಜೀನಾಮೆಗೆ ಆಗ್ರಹ – ವಿಧಾನಸಭೆಯಲ್ಲಿ ಕಾಂಗ್ರೆಸ್ ಅಹೋರಾತ್ರಿ ಧರಣಿ!
ಸಿಡಿಸಿ ಮಾಸ್ಟರ್ ಪ್ಲ್ಯಾನ್: ಬೆಂಗಳೂರಿನಲ್ಲಿ ಕೈಗಾರಿಕಾ ಪಾರ್ಕ್ ಅಭಿವೃದ್ಧಿಪಡಿಸಲು ಮುಂದಾಗಿರುವ ತೈವಾನ್ ಮೂಲದ ಸೆಂಚುರಿ ಡೆವಲಪ್‍ಮೆಂಟ್ ಕಾರ್ಪೋರೇಷನ್ (ಸಿಡಿಸಿ), ಈ ಸಂಬಂಧ ಮಾಸ್ಟರ್ ಪ್ಲ್ಯಾನ್ ಅಂತಿಮಗೊಳಿಸಿದೆ. ದೇವನಹಳ್ಳಿಯ ಏರೋಸ್ಪೇಸ್ ಪಾರ್ಕ್ ಬಳಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯಿಂದ 70 ಎಕರೆ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿದ್ದು, ಅಲ್ಲಿ ತೈವಾನ್‍ನ 100 ಕಂಪನಿಗಳಿಗೆ ಸ್ಥಳಾವಕಾಶ ಕಲ್ಪಿಸಲಿದೆ. ಟಿಇಎಂಐಸಿಓ ಮೋಟಾರ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಈಗಾಗಲೇ ಪಾರ್ಕ್‍ನಲ್ಲಿ ಕಾರ್ಖಾನೆ ನಿರ್ಮಾಣ ಕಾರ್ಯ ಪ್ರಾರಂಭಿಸಿದೆ.
-ವಿಧಾನಪರಿಷತ್‍ನಲ್ಲಿ ಬೃಹತ್ ಮತ್ತು ಕೈಗಾರಿಕೆ ಸಚಿವ ನಿರಾಣಿ ಘೋಷಣೆ -2022ರ ನ.2ರಿಂದ 4ವರೆಗೆ ಜಾಗತಿಕ ಹೂಡಿಕೆದಾರರ ಸಮಾವೇಶ -ವಿದೇಶಿ ನೇರ ಬಂಡವಾಳ ಹೂಡಿಕೆ ಆಕರ್ಷಣೆಯಲ್ಲಿ ಕರ್ನಾಟಕ ಮೊದಲ ಸ್ಥಾನ -ಎನ್‍ಜಿಇಎಫ್ ಆಸ್ತಿ ಪರಭಾರೆ ಇಲ್ಲ
ಬೆಂಗಳೂರು: ಬೆಂಗಳೂರಿನ ಆಚೆಗೂ ಕೈಗಾರಿಕಾ ಪ್ರದೇಶಗಳನ್ನು ವಿಸ್ತರಿಸುವ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಎಂಟು ಜಿಲ್ಲೆಗಳಲ್ಲಿ ಹೊಸ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಘೋಷಿಸಿದರು.
ಮಂಗಳವಾರ ವಿಧಾನಪರಿಷತ್‍ನಲ್ಲಿ ಜೆಡಿಎಸ್ ಸದಸ್ಯ ರಮೇಶ್‍ಗೌಡ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, 2022-23ರಲ್ಲಿ ಕೈಗಾರಿಕಾ ಪ್ರದೇಶಗಳನ್ನು ಅಭಿವೃದ್ಧಿಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಹೇಳಿದರು. ಇದರಲ್ಲಿ ಪ್ರಮುಖವಾಗಿ ರಾಮನಗರದ ಹಾರೋಹಳ್ಳಿ 5ನೇ ಹಂತ, ಚಿಕ್ಕಬಳ್ಳಾಪುರದ ಗೌರಿಬಿದನೂರು 3ನೇ ಹಂತ, ತುಮಕೂರಿನ ಮಧುಗಿರಿ ಕೈಗಾರಿಕಾ ಪ್ರದೇಶ, ಕೋಲಾರದ ಜಕ್ಕಸಂದ್ರ 2ನೇ ಹಂತ, ಮಂಡ್ಯದ ಕುದುರೆಗುಂಡಿ ಕೈಗಾರಿಕಾ ಪ್ರದೇಶ, ಹಾಸನದ ಅರಸೀಕೆರೆ ಕೈಗಾರಿಕಾ ಪ್ರದೇಶ, ಹಾಸನ ಮತ್ತು ಯಾದಗಿರಿಯ ಕಡೇಚೂರು 2ನೇ ಹಂತ, ಓಬಳಾಪುರ ಕೈಗಾರಿಕಾ ಪ್ರದೇಶವನ್ನು ಅಭಿವೃದ್ಧಿಪಡಿಸಲಿದೆ ಎಂದು ಹೇಳಿದರು.
ಜೆಡಿಎಸ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಅವರ ಮತ್ತೊಂದು ಪ್ರಶ್ನೆಗೆ ಉತ್ತರಿಸಿದ ಸಚಿವ ನಿರಾಣಿಯವರು, ರಾಜ್ಯದಲ್ಲಿ ಜಾಗತಿಕ ಹೂಡಿಕೆದಾರರ ಸಮಾವೇಶವನ್ನು ನವೆಂಬರ್ 2 ರಿಂದ 4, 2022 ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಸಲು ನಿರ್ಧರಿಸಲಾಗಿದೆ ಎಂದು ಪ್ರಕಟಿಸಿದರು.
ಕರ್ನಾಟಕವು ಈವರೆಗೆ ಒಟ್ಟು 1,02,866 ಕೋಟಿ ರೂ. ಹೂಡಿಕೆಗಳನ್ನು ಆಕರ್ಷಿಸಿದೆ. 2021ರ ಹಣಕಾಸು ವರ್ಷದ ಏಪ್ರಿಲ್-ಸೆಪ್ಟೆಂಬರ್ ಅವಧಿಯಲ್ಲಿ ಶೇ. 46ರಷ್ಟು ವಿದೇಶಿ ಬಂಡವಾಳ ಹೂಡಿಕೆಯನ್ನು ಆಕರ್ಷಿಸಿ ಇಡೀ ದೇಶದಲ್ಲಿಯೇ ಕರ್ನಾಟಕ ಮೊದಲ ಸ್ಥಾನದಲ್ಲಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಬೆಂಗಳೂರು ನಗರ, ಮುಂಬೈ, ಗುಜರಾತ್ ಸೇರಿದಂತೆ ವಿವಿಧ ಭಾಗಗಳಲ್ಲಿ ಮೈಸೂರ್ ಲ್ಯಾಂಪ್ ಲಿಮಿಟೆಡ್‍ಗೆ 249.10 ಕೋಟಿ ಆಸ್ತಿಯಿದ್ದು, ಎನ್‍ಜಿಇಎಫ್ ಲಿ.,ನ ನೂರಾರು ಕೋಟಿ ರೂ. ಮೌಲ್ಯದ ಆಸ್ತಿ ಇದೆ. ಆದರೆ, ಇದನ್ನು ಪರಭಾರೆ ಮಾಡುವ ಯಾವುದೇ ಉದ್ದೇಶ ಸರ್ಕಾರಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಮೈಸೂರು ಲ್ಯಾಂಪ್ಸ್‌ಗೆ ನಗರದ ಮಲ್ಲೇಶ್ವರಂನ ಪಶ್ಚಿಮ ಹಳೇ ತುಮಕೂರು ರಸ್ತೆಯಲ್ಲಿ 21 ಎಕರೆ 6.73 ಗುಂಟೆ ಭೂಮಿ ಮತ್ತು ಕಟ್ಟಡಗಳಿವೆ. ರಾಜ್‍ಮಹಲ್ ವಿಲಾಸ್ ಬಡಾವಣೆಯ 2ನೇ ಹಂತದಲ್ಲಿ ಎಚ್‍ಐಜಿ ಬಂಗಲೆ 307 ಚದರ.ಮೀ ವಿಸ್ತೀರ್ಣವಿದೆ. ಅದೇ ಜಾಗದಲ್ಲಿ 309 ಚದರ ಮೀಟರ್ ಮತ್ತೊಂದು ನಿವೇಶನವಿದೆ ಎಂದರು. ಇದನ್ನೂ ಓದಿ:ಈಶಾನ್ಯ ಭಾರತದವರ ಜೀವನ ಶೈಲಿಯ ಮೇಲೆ ಬಿಜೆಪಿ ಹಸ್ತಕ್ಷೇಪ: ಪ್ರಿಯಾಂಕಾ ಗಾಂಧಿ
ಮುಂಬೈನ ಪೊರ್ಲಿ ಪ್ರದೇಶದ ಟಿವಿ ಇಂಡಸ್ಟ್ರಿಯಲ್ ಎಸ್ಟೇಟ್‍ನಲ್ಲಿ 79 ಚದರ ಅಡಿ ಕಟ್ಟಡವಿದೆ. ಅಹಮದಾಬಾದ್‍ನಗರದ ನವರಂಗ್ ವೃತ್ತದಲ್ಲಿ ಜಿಟಿ ಅಸೋಸಿಯೇಷನ್ ಸಮುಚ್ಚಯದ 8ನೆ ಹಂತಸ್ತಿನಲ್ಲಿ 1043 ಚದರ ಅಡಿ ಕಟ್ಟಡ, ನೆಲಮಹಡಿಯಲ್ಲಿ 300 ಅಡಿ ಜಾಗ ಇದೆ. ಈ ಸ್ಥಿರಾಸ್ತಿಗಳ ಒಟ್ಟು ಮೌಲ್ಯ 249.10 ಕೋಟಿ ಎಂದು ಅಂದಾಜಿಸಲಾಗಿದೆ ಎಂದರು.
ಎನ್‍ಜಿಇಎಫ್‍ನ ಸಂಸ್ಥೆಗೆ ಬೆಂಗಳೂರಿನ ಕೆಆರ್‌ಪುರಂ ತಾಲೂಕಿನ ಬಯ್ಯಪ್ಪನಹಳ್ಳಿ ಮತ್ತು ಬೆನ್ನಿಗಾನಹಳ್ಳಿ ಗ್ರಾಮಗಳಲ್ಲಿ 119.60 ಎಕರೆ ಜಮೀನು ಇದ್ದು ಇದರಲ್ಲಿ 105 ಎಕರೆ ಕಾಂಪೌಂಡ್‍ನೊಳಗೆ ಉಳಿದ ಜಮೀನು ಕಾಂಪೌಂಡ್‍ನ ಹೊರಗೆ ಇದೆ. ಇದನ್ನು ಖಚಿತಪಡಿಸಿಕೊಳ್ಳಲು ಭೂಮಾಪನ ಕಂದಾಯ ವ್ಯವಸ್ಥೆ ಹಾಗೂ ಭೂ ದಾಖಲೆ ಇಲಾಖೆಗಳನ್ನು ಕೋರಲಾಗಿದೆ. ಕಚ್ಚಾ ಮಾಲಾಗಿ ಉಪಯೋಗಿಸುತ್ತಿದ್ದ 14.57 ಕೆಜಿ ಬೆಳ್ಳಿ , 5.5 ಕೆಜಿ ಮಿಶ್ರ ಲೋಹದ ಚರಾಸ್ತಿ ಸಹ ಇದೆ ಎಂದು ವಿವರಿಸಿದರು. ಇದನ್ನೂ ಓದಿ:ಯುವಕರಿಗೆ ಉದ್ಯೋಗ, ಬಡವರಿಗೆ 1 ಕೆಜಿ ಉಚಿತ ತುಪ್ಪ: ಅಖಿಲೇಶ್ ಯಾದವ್ ಭರವಸೆ
ಮೈಸೂರು ಲ್ಯಾಂಪ್ಸ್ ಜಾಗದಲ್ಲಿ ಬೆಂಗಳೂರಿನ ಇತಿಹಾಸ, ರಾಜ್ಯದ ಆಹಾರ ಪದ್ದತಿ ಸೇರಿದಂತೆ ಹಲವಾರು ಐತಿಹಾಸಿಕ ಯೋಜನೆಗಳನ್ನು ಜಾರಿಗೊಳಿಸಲು “ಬೆಂಗಳೂರು ಬೆಳಕು” ಎಂಬ ಕಾರ್ಯಕ್ರಮ ರೂಪಿಸಲಾಗಿದೆ. ಈ ಜಾಗದ ಹಸರೀಕರಣ ಹಾಗೂ ವಿವಿಧ ಯೋಜನೆಗಳಿಗಾಗಿ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ 7 ಮಂದಿ ಐಎಎಸ್ ಅಕಾರಿಗಳು, 5 ಖಾಸಗಿ ವ್ಯಕ್ತಿಗಳನ್ನು ಒಳಗೊಂಡ ಟ್ರಸ್ಟ್ ರಚಿಸಲಾಗಿದೆ. ಯಾವುದೇ ಕಾರಣಕ್ಕೂ ಜಾಗವನ್ನು ಪರಭಾರೆ ಮಾಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಬೆಳಗಾವಿ: ಪಂಚಮಸಾಲಿ ಸಮುದಾಯದಲ್ಲಿ ಒಳಜಗಳ ತೀವ್ರಗೊಂಡಿದೆ. ಬೆಳಗಾವಿಯಲ್ಲಿ ಜಯಮೃತ್ಯುಂಜಯ ಶ್ರೀಗಳ ನೇತೃತ್ವದಲ್ಲಿ ನಡೆದ ಪಂಚಮಸಾಲಿ ಸಮುದಾಯದ ರಾಜ್ಯ ಕಾರ್ಯಕಾರಿಣಿಯಲ್ಲಿ ಮೂರನೇ ಪೀಠ ಬೆಂಬಲಿಸುತ್ತಿರುವ ಸಚಿವ ನಿರಾಣಿ ನಡೆಗೆ ಆಕ್ರೋಶ ವ್ಯಕ್ತವಾಗಿದೆ.
ಬೆಳಗಾವಿಯಲ್ಲಿ ನಡೆದ ಪಂಚಮಸಾಲಿ ಸಮುದಾಯದ ರಾಜ್ಯ ಕಾರ್ಯಕಾರಿಣಿ ಸಭೆ ಮುಕ್ತಾಯದ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಶ್ರೀಗಳು, ನಿರಾಣಿ ಈ ಹಿಂದೆ ಶ್ರೀಪೀಠಕ್ಕೆ ತಂದುಕೊಟ್ಟಿದ್ದ ವಸ್ತುಗಳನ್ನು ಅವರ ಮನೆಗೆ ಮರಳಿಸಲು ತೀರ್ಮಾನಿಸಲಾಗಿದೆ. ಜಯ ಮೃತ್ಯುಂಜಯ ಸ್ವಾಮೀಜಿ ನಮ್ಮ ಋಣದಲ್ಲಿದ್ದಾರೆ ಎಂದು ಪ್ರಚಾರ ಮಾಡಲಾಗುತ್ತಿದೆ. ಇದರಿಂದ ನಮಗೆ ನೋವಾಗಿದೆ. ನಾವು ವ್ಯಕ್ತಿಯ ಋಣದಲ್ಲಿರಲು ಬಯಸಲ್ಲ. ಸಮಾಜದ ಋಣದಲ್ಲಿ ಬಯಸುತ್ತೇವೆ ಎಂದು ಸ್ವಾಮೀಜಿ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ 15 ದಿನ ಟೋಯಿಂಗ್ ಸ್ಥಗಿತ: ಆರಗ ಜ್ಞಾನೇಂದ್ರ
ಸಾಮಾಜಿಕ ಜಾಲತಾಣಗಳಲ್ಲಿ ಕೆಲವು ಅಪಪ್ರಚಾರ ಆಗುತ್ತಿದೆ. ಶ್ರೀ ಪೀಠಕ್ಕೆ ಎಲ್ಲರೂ ದಾನ ಧರ್ಮ ಕೊಟ್ಟಿದ್ದಾರೆ. ಅವರ ಹೆಸರಲ್ಲಿ ಪದೇ ಪದೇ ನಮ್ಮ ಋಣದಲ್ಲಿದ್ದಾರೆ ಅಂತಾ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚಾರ ಮಾಡಲಾಗುತ್ತಿದೆ. ಹೀಗಾಗಿ ಮುರುಗೇಶ್ ನಿರಾಣಿ ಹೆಸರಲ್ಲಿ ಶ್ರೀ ಪೀಠಕ್ಕೆ ಕೊಟ್ಟಂತ ವಸ್ತುಗಳನ್ನು ಅವರ ಮನೆಗೆ ಕೊಡಲು ನಿರ್ಣಯ ಮಾಡಲಾಗಿದೆ. ಪಂಚಮಸಾಲಿ ಸಮಾಜಕ್ಕೆ ರಾಜ್ಯ ಸರ್ಕಾರದ 2A ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಒತ್ತಾಯಿಸಲಾಗುವುದು. ಕಳೆದ ಒಂದು ವರ್ಷದಿಂದ ನಿರಂತರವಾಗಿ ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದರು.
ರಾಜ್ಯ ಕಾರ್ಯಕಾರಣಿ ಸಭೆಯಲ್ಲಿ ಮಹತ್ವದ ಮೂರು ನಿರ್ಣಯ ಕೈಗೊಂಡಿದ್ದೇವೆ. ಬಜೆಟ್ ಮುನ್ನ ಮೀಸಲಾತಿ ನೀಡೋದಾಗಿ ಸಿಎಂ ಭರವಸೆ ಕೊಟ್ಟಿದ್ದರು. ಕೊಟ್ಟ ಮಾತಿನಂತೆ ಬಜೆಟ್ ಅಧಿವೇಶನದೊಳಗೆ ಮೀಸಲಾತಿ ನೀಡಲು ಆಗ್ರಹ ಮಾಡಿದರು. ಸಮಾಜ ಒಡೆಯುತ್ತಿರುವ ಕುತಂತ್ರಿಗಳನ್ನು ನಿರ್ಲಕ್ಷಿಸುವುದು ಮತ್ತು ಮುರುಗೇಶ್ ನಿರಾಣಿ ಹೆಸರಲ್ಲಿ ಶ್ರೀಪೀಠಕ್ಕೆ ಕೊಟ್ಟಂತಹ ವಸ್ತುಗಳನ್ನು ಅವರ ಮನೆಗೆ ವಾಪಸ್ ಕೊಡಲು ನಿರ್ಣಯ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಸುಧಾಕರ್ ಏನು ಸಿಎಂಗಿಂತ ದೊಡ್ಡವರಾ? ಬಿಜೆಪಿ ಶಾಸಕ ಕಿಡಿ
ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ನಮಗೆ ಮೀಸಲಾತಿ ಕೊಡಬೇಕು ಅನ್ನೋ ಮನಸ್ಸಿದೆ. ಸಿಎಂ ಅವರು ಹೇಳಿದಂತೆ ಬಜೆಟ್ ಒಳಗಾಗಿ ಮೀಸಲಾತಿ ಕೊಡಬೇಕು. ವಿಳಂಬ ಆಗುತ್ತಿದೆ ಅನಿಸುತ್ತಿದೆ. ಕೊನೆಯದಾಗಿ ಹೋರಾಟ ಮಾಡುತ್ತೇವೆ. ಮೀಸಲಾತಿ ಒಡೆಯುವ ಕುತಂತ್ರ ಮಾಡುವ ವ್ಯಕ್ತಿಗಳನ್ನು ನಿರ್ಲಕ್ಷಿಸುತ್ತೇವೆ. ನನಗೆ ಮುಖ್ಯ ಇರುವುದು ಮಠ. ಮೀಸಲಾತಿ ಮಠ ಕಟ್ಟುವುದಿಲ್ಲ. ಪಂಚಮಸಾಲಿ ಮೂರನೇ ಪೀಠ, ನಾಲ್ಕನೇ ಪೀಠಕ್ಕೆ ಸ್ವಾಗತನೂ ಇಲ್ಲ ವಿರೋಧನೂ ಮಾಡಲ್ಲ ಎಂದು ಸ್ವಾಮೀಜಿ ಹೇಳಿದರು.
ದಾವಣಗೆರೆ: ಮೂರನೇ ಪೀಠದ ನಿರ್ಮಾಣಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದರು. ನಾವು ಸಹಕಾರ ಕೊಡುತ್ತೇವೆ. ನಮ್ಮ ಸಮಾಜಕ್ಕೆ ಪ್ರತಿ ಜಿಲ್ಲೆಗೆ ಪೀಠಗಳ ಭಯವಿಲ್ಲ. ಪೀಠಗಳು ಹೆಚ್ಚಾದರೆ ನಮ್ಮ ಪೀಠಕ್ಕೆ ಬರುವ ಭಕ್ತರ ಸಂಖ್ಯೆ ಕಡಿಮೆಯಾಗುತ್ತದೆ ಎನ್ನುವ ಭೀತಿ ಇಲ್ಲ ಎಂದು ಪರೋಕ್ಷವಾಗಿ ಕೂಡಲಸಂಗಮ ಜಯಮೃತ್ಯುಂಜಯ ಶ್ರೀ ವಿರುದ್ಧ ಹರಿಹರ ಪಂಚಮಸಾಲಿ ಪೀಠದ ಶ್ವಾಸಗುರು ವಚನಾನಂದ ಸ್ವಾಮೀಜಿ ಕಿಡಿಕಾರಿದರು.
ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಪಂಚಮಸಾಲಿ ಪೀಠದಲ್ಲಿ ಮಾತನಾಡಿದ ಅವರು, ಹರಿಹರದ ಪಂಚಮಸಾಲಿ ಪೀಠ 20 ವರ್ಷಗಳಿಂದ ಸಂಘಟನೆ ಮಾಡಿಕೊಂಡು ಬಂದಿದೆ. ವೀರಶೈವ ಪಂಚಮಸಾಲಿ ಒಕ್ಕೂಟ ಈಗಾಗಲೇ ಇದೆ. ಪಂಚಮಸಾಲಿ ಸಮಾಜದವರು ಮತಾಂತರ ಆಗುತ್ತಿದ್ದಾರೆ. ಧಾರ್ಮಿಕವಾಗಿ ಸಂಘಟನೆಯಾಗಬೇಕು ಎಂದು ಸಂಘಟನೆ ಮಾಡಿಕೊಂಡಿದ್ದಾರೆ. ಮೂರನೇ ಪೀಠದ ಗೊಂದಲಗಳ ಬಗ್ಗೆ ಕೆಲವರು ಮಾತನಾಡುತ್ತಿದ್ದಾರೆ ಎಂದು ವಿರೋಧ ವ್ಯಕ್ತಪಡಿಸಿದರು. ಇದನ್ನೂ ಓದಿ: ಸತ್ಯೇಂದ್ರ ಜೈನ್‍ರನ್ನು ಬಂಧಿಸಲು ಇಡಿ ಯೋಜನೆ ರೂಪಿಸುತ್ತಿದೆ: ಕೇಜ್ರಿವಾಲ್
ಮೂರನೇ ಪೀಠದ ಒಕ್ಕೂಟದ ಅಧ್ಯಕ್ಷರು ಕೂಡ ನಮ್ಮ ಪೀಠಕ್ಕೆ ಬಂದಿದ್ದರು. ಅವರೆಲ್ಲರೂ ಹೇಳಿದ್ದು, ಪಂಚಮಸಾಲಿ ಸಮಾಜದ ಮೂಲ ಪೀಠ ಎಂದರೆ ಅದು ಹರಿಹರದ ಪಂಚಮಸಾಲಿ ಪೀಠ ಎಂದು. ಮೂರನೇ ಪೀಠದ ನಿರ್ಮಾಣಕ್ಕೆ ನಿಮ್ಮ ಸಹಕಾರ ಬೇಕು ಎಂದು ಕೇಳಿದ್ದರು. ನಾವು ಸಹಕಾರ ಕೊಡುತ್ತೇವೆ ಎಂದು ವಿವರಿಸಿದರು.
ಪೀಠಗಳು ಹೆಚ್ಚಾದರೆ ನಮ್ಮ ಸಮಾಜ ಹೆಚ್ಚು ಸಂಘಟನೆಯಾಗುತ್ತದೆ. ಅಯಾ ಭಾಗದಲ್ಲಿ ನಮ್ಮ ಸ್ವಾಮಿಗಳು ಇದ್ದರೆ ಜನರು ಸಂಘಟಕರಾಗುತ್ತಾರೆ. ಅವರು ಕೇಳಿದ್ದಕ್ಕೆ ನಮ್ಮ ಸಂಪೂರ್ಣ ಬೆಂಬಲವನ್ನು ನೀಡಿದ್ದೇವೆ. ಅಲ್ಲದೆ ಮುರುಗೇಶ್ ನಿರಾಣಿ ಅವರನ್ನು ಪೀಠಕ್ಕಾಗಿ ಉಪಯೋಗಿಸಿಕೊಂಡಿದ್ದಾರೆ ಎಂದು ಶ್ರೀ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.
ಮುರುಗೇಶ್ ನಿರಾಣಿ ಅವರು ತಮ್ಮ ಸ್ವಾರ್ಥಕ್ಕಾಗಿ ಪೀಠಗಳನ್ನು ಬಳಸಿಲ್ಲ. ನಮ್ಮ ಸಮಾಜದ ನಾಲ್ಕು ಸಾವಿರಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದ್ದಾರೆ. ಸುಖಾಸುಮ್ಮನೆ ನಿರಾಣಿ ಅವರ ಮೇಲೆ ಆರೋಪ ಸರಿಯಲ್ಲ ಎಂದು ನಿರಾಣಿ ಪರ ಬ್ಯಾಟಿಂಗ್ ಬೀಸಿದರು. ಇದನ್ನೂ ಓದಿ: ಖಾಸಗಿ ಬಸ್ ಮಾಲೀಕ ನಾಪತ್ತೆ- ಸೇತುವೆ ಬಳಿ ಕಾರು, ಫೋನ್ ಪತ್ತೆ
ಪಾದಯಾತ್ರೆ ಹೋರಾಟ ಮಾಡಿದ್ದೀವಿ ಅಂತ ಪದೇ ಪದೇ ನಾವು ಹೇಳಿಲ್ಲ. ಸಮಾಜಕ್ಕೋಸ್ಕರ ಹೋರಾಟ ಮಾಡುವುದು ಅವರ ಕರ್ತವ್ಯ. ಆದರೆ ಅದನ್ನೇ ಹೇಳಿಕೊಳ್ಳುತ್ತಾ ಹೋಗುವುದಲ್ಲ. ನಾವು ಈಗಾಗಲೇ ಮೀಸಲಾತಿ ಬಗ್ಗೆ ನ್ಯಾಯಬದ್ಧವಾಗಿ ಹೋರಾಟ ಮಾಡುತ್ತಿದ್ದೇವೆ ಎಂದ ಆಕ್ರೋಶ ವ್ಯಕ್ತಪಡಿಸಿದರು.
ಬೆಂಗಳೂರು: ಪಂಚಮಸಾಲಿ ಸಮುದಾಯದಲ್ಲಿ ಮತ್ತೆ ಒಡಕುಂಟಾಗಿದೆ. ಮೊನ್ನೆ ಮೊನ್ನೆಯಷ್ಟೇ ಪಂಚಮಸಾಲಿ ಮೂರನೇ ಪೀಠದ ಸ್ಥಾಪನೆಯನ್ನು ಬೆಂಬಲಿಸಿದ್ದ ಸಚಿವ ಮುರುಗೇಶ್ ನಿರಾಣಿ ವಿರುದ್ಧ ಕೂಡಲಸಂಗಮ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ವಾಗ್ದಾಳಿ ನಡೆಸಿದ್ದಾರೆ.
ನಿರಾಣಿಯವರು ಸಮಾಜ ಒಡೆಯುವ ಕೆಲಸ ಮಾಡುತ್ತಿದ್ದಾರೆ. ನೀವು ಎಂಎಲ್‍ಎ ಆಗಬೇಕಾ, ಸಿಎಂ ಆಗಬೇಕಾ, ಜಿಲ್ಲೆಗೊಂದು, ತಾಲೂಕಿಗೊಂದು, ಗ್ರಾಮ ಪಂಚಾಯತ್‍ಗೊಂದು ಪೀಠ ಮಾಡಿಕೊಳ್ಳಿ. ಆದ್ರೆ ನಿಮ್ಮ ಸ್ವಾರ್ಥಕ್ಕೆ ಸಮಾಜವನ್ನು ಬಳಸಿಕೊಳ್ಳಬೇಡಿ ಅಂತ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಅವರು ಯಾವ ಪೀಠ ಆದ್ರೂ ಮಾಡಿಕೊಳ್ಳಲಿ. ನಮ್ಮದೇನು ಅಭ್ಯಂತರ ಇಲ್ಲ. ನಾವು ಮೂರನೇ ಪೀಠಕ್ಕೆ ಹೆದರಲ್ಲ ಎಂದು ಸ್ವಾಮೀಜಿ ಕಿಡಿಕಾರಿದ್ದಾರೆ. ಇದನ್ನೂ ಓದಿ: ಬೆಂಗ್ಳೂರಲ್ಲಿ ಕೊರೊನಾ ಇಳಿಕೆ 17,266 ಕೇಸ್ – ಒಟ್ಟು 42,470 ಪಾಸಿಟಿವ್, 26 ಸಾವು
ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ ಕೂಡ ನಿರಾಣಿ ವಿರುದ್ಧ ಸಿಟ್ಟಾಗಿದ್ದಾರೆ. ಸಿಎಂ ಆಗ್ಲಿಕ್ಕೆ ನಿರಾಣಿ ಪ್ರಯತ್ನ ಮಾಡ್ತಿದ್ದಾರೆ. ಆದ್ರೆ ಅವರ ಸಚಿವ ಸ್ಥಾನವೇ ಉಳಿಯಲ್ಲ. ಇನ್ನೆಲ್ಲಿ ಸಿಎಂ ಆಗ್ತಾರೆ ಎಂದು ವ್ಯಂಗ್ಯ ಮಾಡಿದ್ದಾರೆ. ಇದಕ್ಕೆ ನಿರಾಣಿ ಸಹ ತಿರುಗೇಟು ನೀಡಿದ್ದಾರೆ. ಪಂಚಮಸಾಲಿ ಸಮುದಾಯ ದೊಡ್ಡದಿದೆ. ಮೂರನೇ ಪೀಠ ಆದರೆ ತಪ್ಪೇನು ಅಂತಾ ಕೇಳಿದ್ದಾರೆ. ಮೂರನೇ ಪೀಠದ ಅವಶ್ಯಕತೆಯನ್ನು ನಿರ್ಧರಿಸೋದು ಸಮಾಜದ ಜನ. ನಾನಲ್ಲ, ಸ್ವಾಮೀಜಿಗಳು ಆಪಾದನೆ ಬಿಟ್ಟು ಅವರೇ ಮುಂದೆ ನಿಂತು ಪೀಠ ರಚನೆಯ ಜವಾಬ್ದಾರಿ ತಗೆದುಕೊಳ್ಳಬೇಕು. ನಾನು ಯಾವತ್ತಾದ್ರೂ ಸಿಎಂ ಆಗ್ತೀನಿ ಅಂತ ಹೇಳಿದ್ದೀನಾ? ಸ್ವಾಮೀಜಿಗಳಿಗೆ ತಪ್ಪು ಕಲ್ಪನೆ ಉಂಟಾಗಿದ್ದು, ಸಮಯ ನಿಗದಿ ಮಾಡಿದ್ರೆ ನಾನೇ ಅವರನ್ನು ಭೇಟಿ ಆಗಿ ಮಾತನಾಡುತ್ತೇನೆ ಎಂದಿದ್ದಾರೆ. ಮೊದ್ಲು ಜನ್ರಿಗೆ ಆದಾಯ ಬರುವಂತೆ ಮಾಡಿ, ಆಮೇಲೆ ದರ ಏರಿಕೆ ಮಾಡಿ: ಡಿಕೆಶಿ