Tag: murugha shri

  • ಮುರುಘಾ ಶ್ರೀ ವಿರುದ್ಧ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದ್ದು, ತನಿಖೆ ನಡೀತಿದೆ: ಬೊಮ್ಮಾಯಿ

    ಮುರುಘಾ ಶ್ರೀ ವಿರುದ್ಧ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದ್ದು, ತನಿಖೆ ನಡೀತಿದೆ: ಬೊಮ್ಮಾಯಿ

    ಬೆಂಗಳೂರು: ಚಿತ್ರದುರ್ಗದ ಮುರುಘಾಶ್ರೀಗಳ ವಿರುದ್ಧ ಪೋಕ್ಸೋ ಅಡಿ ಒಂದು ಕೇಸ್ ದಾಖಲಾಗಿದೆ. ಅಲ್ಲದೆ ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದೆ. ಈ ಎರಡೂ ಕೇಸ್ ಗಳನ್ನೂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

     

    ಮುರುಘಾರಾಜೇಂದ್ರ ಶ್ರೀಗಳ ವಿರುದ್ಧ ಪೋಕ್ಸೋ ದೂರು ದಾಖಲು ವಿಚಾರ ಸಂಬಂಧ ಪ್ರತಿಕ್ರಿಯಿಸಿದ ಅವರು, ಪ್ರಕರಣದ ತನಿಖೆ ನಡೆಯುತ್ತಿದೆ. ತನಿಖೆ ದೃಷ್ಟಿಯಿಂದ ಈ ಹಂತದಲ್ಲಿ ಮಾತಾಡೋದು ಸೂಕ್ತ ಅಲ್ಲ. ಪೊಲೀಸರು ತನಿಖೆ ಮಾಡ್ತಿದ್ದಾರೆ, ಸತ್ಯ ಹೊರಗೆ ಬರುತ್ತದೆ ಎಂದು ಹೇಳಿದ್ದಾರೆ.

    ಪೋಕ್ಸೋ ಅಡಿ ಒಂದು ಕೇಸ್ ದಾಖಲಾಗಿದೆ. ಕಿಡ್ನಾಪ್ ಕೇಸ್ ಕೂಡಾ ದಾಖಲಾಗಿದೆ. ಎರಡೂ ಕೇಸ್ ಗಳ ಕುರಿತು ಸಂಬಂಧಪಟ್ಟ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಸಿಎಂ ತಿಳಿಸಿದರು. ಇದನ್ನೂ ಓದಿ: ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ- ಬೆಳಗ್ಗಿನ ಜಾವದವರೆಗೂ ನಡೆದ ರಾಜಿ ಸಂಧಾನ ಸಭೆ

    ಇತ್ತ ತಮ್ಮ ಮೇಲೆ ಆರೋಪ ಕೇಳಿಬರುತ್ತಿದ್ದಂತೆಯೇ ನಿನ್ನೆಯಿಂದ ಮುರುಘಾ ಶ್ರೀಗಳು ಹೊರಗೆ ಬಾರದೇ ಮಠದ ಒಳಗಡೆಯೇ ಕೂತಿದ್ದರು. ಇಂದು ಮಠದ ಆವರಣದಲ್ಲಿರುವ ಶಾಂತವೀರ ಮುರುಗಿ ಶ್ರೀಗಳ ಗದ್ದಿಗೆಗೆ ತೆರಳಿ ದರ್ಶನ ಪಡೆದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ- ಬೆಳಗ್ಗಿನ ಜಾವದವರೆಗೂ ನಡೆದ ರಾಜಿ ಸಂಧಾನ ಸಭೆ

    ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣ- ಬೆಳಗ್ಗಿನ ಜಾವದವರೆಗೂ ನಡೆದ ರಾಜಿ ಸಂಧಾನ ಸಭೆ

    ಚಿತ್ರದುರ್ಗ: ಇಲ್ಲಿನ ಮುರುಘಾಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಬೆಳಗ್ಗಿನ ಜಾವದವರೆಗೂ ರಾಜಿ ಸಂಧಾನ ಸಭೆ ನಡೆದಿದೆ.

    ಚಿತ್ರದುರ್ಗ ಬಳಿಯ ಗ್ರಾಮವೊಂದರಲ್ಲಿ ಸಂಧಾನ ಸಭೆ ನಡೆದಿದ್ದು, ಮುರುಘಾಶ್ರೀ, ಬಸವರಾಜನ್ ನೇರ ಭೇಟಿ ಮಾತುಕತೆ ನಡೆದಿದೆ ಎನ್ನಲಾಗಿದೆ. ಮಠದ ಆಡಳಿತಾಧಿಕಾರಿಯಾಗಿ ಬಸವರಾಜನ್ ಮುಂದುವರಿಕೆಗೆ ಚಿಂತನೆ ನಡೆದಿದೆ. ಈ ಮೂಲಕ ಮುರುಘಾ ಶ್ರೀ, ಬಸವರಾಜನ್ ನಡುವಿನ ಸಂಧಾನ ಯಶಸ್ವಿಯಾಗಿದೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಅಪ್ರಾಪ್ತೆಯರಿಗೆ ಮೆಡಿಕಲ್ ಟೆಸ್ಟ್

    ಸಂಧಾನ ಸಭೆಯಲ್ಲಿ ಮಠಾಧೀಶರು, ಮುಖಂಡರು ಭಾಗಯಾಗಿದ್ದರು. ಇತ್ತ ತಮ್ಮ ಮೇಲಿನ ಲೈಂಗಿಕ ಆರೋಪದ ಬಗ್ಗೆ ಶ್ರೀಗಳು ಮಾತಾಡಿದ್ದು, ನಮ್ಮ ಪಕ್ಕದಲ್ಲೇ ಇದ್ದು ಹೋದವರೇ ಪಿತೂರಿ, ಒಳಸಂಚು ಮಾಡಿದ್ದಾರೆ. ಯಾವ ಸಮಸ್ಯೆ, ಆರೋಪ ಶಾಶ್ವತ ಅಲ್ಲ. ಇದು ಮುರುಘಾ ಶರಣರ ಅಭಿಮಾನವನ್ನು ಎಬ್ಬಿಸುವ ಕೆಲಸವಾಗಿದೆ. ಮೇಲೆಕ್ಕೆ ಹೋದಂತೆಲ್ಲ ಆಪತ್ತುಗಳು, ಕಿರುಕುಳಗಳು ಇರ್ತಾವೆ ಎಂದಿದ್ದಾರೆ. ಅಲ್ಲದೇ ನಾವು ಸಂಧಾನನಕ್ಕೂ ಸಿದ್ಧ, ಸಮರಕ್ಕೂ ಬದ್ಧ. ಸಂಧಾನ ಮತ್ತು ಸಮರ. 2 ಆಯ್ಕೆಗಳು ಇವೆ ಅಂತ ಮುರುಘಾಶ್ರೀಗಳು ಹೇಳಿದ್ದರು.

    ಪ್ರಕರಣ ಸಂಬಂಧ ಇಂದು ಸಿಡಬ್ಲ್ಯೂಸಿಯಲ್ಲಿ ಬಾಲಕಿಯರ ಹೇಳಿಕೆ ದಾಖಲು ಮಾಡಲಾಗುತ್ತದೆ. ಸಿಡಬ್ಲ್ಯೂಸಿಯಲ್ಲಿ ಅಧಿಕಾರಿಗಳು ಕೌನ್ಸಿಲಿಂಗ್ ಮಾಡಲಿದ್ದಾರೆ. ಸದ್ಯ ಸಂತ್ರಸ್ತೆಯರ ಹೇಳಿಕೆ ಮೇಲೆ ಮುರುಘಾಶ್ರೀಗಳ ಭವಿಷ್ಯ ನಿಂತಿದ್ದು, ಇದೀಗ ಸಂತ್ರಸ್ತೆಯರು ಚಿತ್ರದುರ್ಗದ ಬಾಲಮಂದಿರದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಅಪ್ರಾಪ್ತೆಯರಿಗೆ ಮೆಡಿಕಲ್ ಟೆಸ್ಟ್

    ಮುರುಘಾ ಶ್ರೀ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ – ಇಂದು ಅಪ್ರಾಪ್ತೆಯರಿಗೆ ಮೆಡಿಕಲ್ ಟೆಸ್ಟ್

    ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮುರುಘಾ ಶರಣರು ಈಗ ಬಂಧನದ ಭೀತಿಯನ್ನು ಎದುರಿಸುವಂತಾಗಿದೆ. ಮಠದಲ್ಲಿ ಓದುತ್ತಿದ್ದ ಬಾಲಕಿಯರನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಬಾಲಕಿಯಯರು ದೂರು ನೀಡಿದ್ದು, ಈಗ ಪೋಕ್ಸೋ ಪ್ರಕರಣದ ಮೇಲೆ ಬಂಧನವಾಗುವ ಸಾಧ್ಯತೆ ಇದೆ.

    ಈಗಾಗಲೇ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರನ್ನು ಹಾಗೂ ಮುರುಘಾ ಶ್ರೀಗಳನ್ನು ಒಳಪಡಿಸುವ ಸಾಧ್ಯತೆ ಇದೆ. ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಕೇಳಿ ಬಂದಿದೆ. ಮೈಸೂರಿನಲ್ಲಿ ಒಡನಾಡಿ ಸಂಸ್ಥೆಯ ಬಳಿ ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ದೂರು ದಾಖಲಾಗಿದೆ. ಪ್ರಕರಣ ಚಿತ್ರದುರ್ಗದ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದೆ.

    ಸಂತ್ರಸ್ತೆಯರನ್ನು ಮೈಸೂರಿನಿಂದ ಚಿತ್ರದುರ್ಗಕ್ಕೆ ಕರೆತಂದು ಸುರಕ್ಷಿತ ಸ್ಥಳದಲ್ಲಿ ಇರಿಸಲಾಗಿದೆ. ಬಾಲಕಿಯರನ್ನು ಸಿಡಬ್ಲ್ಯೂಸಿಯಲ್ಲಿ ಕೌನ್ಸಿಲಿಂಗ್ ಅಧಿಕಾರಿಗಳ ಮುಂದೆ ಹಾಜರು ಪಡಿಸಿ ಘಟನೆಯ ವಿವರವನ್ನು ಪಡೆದುಕೊಳ್ಳಲಾಗುತ್ತದೆ. ಇದನ್ನು ವೀಡಿಯೋ ರೆಕಾರ್ಡ್ ಮಾಡಿಕೊಳ್ಳಲಾಗುತ್ತೆ. ಆ ಬಾಲಕಿಯರ ಹೇಳಿಕೆಯನ್ನು ಆಧರಿಸಿ ಮೆಡಿಕಲ್ ಟೆಸ್ಟ್‍ಗೆ ಒಳಪಡಿಸಲಾಗುತ್ತೆ. ಇದನ್ನೂ ಓದಿ: ಸಂಧಾನಕ್ಕೂ ಸಿದ್ಧ, ಸಮರಕ್ಕೂ ಬದ್ಧ: ಆರೋಪದ ಬಗ್ಗೆ ಮುರುಘಾ ಶ್ರೀ ಮೊದಲ ಮಾತು

    ಸಿಡಬ್ಲ್ಯೂಸಿಯಲ್ಲಿ ದೂರು ನೀಡಿದಂತೆಯೇ ಹೇಳಿಕೆ ನೀಡಿ ಮೆಡಿಕಲ್ ಟೆಸ್ಟ್ ನಲ್ಲಿ ಲೈಂಗಿಕ ದೌರ್ಜನ್ಯ ಎಸಗಿರುವುದು ಸಾಬೀತಾದರೆ ಆರೋಪಿಗಳನ್ನೂ ಕೂಡ ಬಂಧಿಸಿ ಮೆಡಿಕಲ್ ಟೆಸ್ಟ್ ಗೆ ಒಳಪಡಿಸಲಾಗುತ್ತೆ. ಆರೋಪ ಸಾಬೀತಾದರೆ ಜಾಮೀನು ಸಿಗುವುದಿಲ್ಲ. ಪ್ರಕರಣ ಗಂಭೀರವಾಗ್ತಿದ್ದಂತೆ ಒಡನಾಡಿ ಸೇವಾ ಸಂಸ್ಥೆ ನಿರ್ದೇಶಕ ಪರಶುರಾಮ್ ಹೇಳಿಕೆ ನೀಡಿದ್ದು, ಸಂತ್ರಸ್ತ ಬಾಲಕಿಯರಿಗೆ ಎಸ್ಕಾರ್ಟ್ ಭದ್ರತೆ ಒದಗಿಸಲಿದೆ. ವಿಚಾರಣೆ ಮುಗಿದ ಬಳಿಕ ವಾಪಸ್ ಕರೆತಂದು ಒಡನಾಡಿಯಲ್ಲೇ ಪುನರ್ ವಸತಿ ಕಲ್ಪಿಸುತ್ತೇವೆ.

    ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದಂತೆ ಮಠಕ್ಕೆ ಭಕ್ತಾದಿಗಳು, ಜನಪ್ರತಿನಿಧಿಗಳು ವಿವಿಧ ಮಠಾಧೀಶರು ಆಗಮಿಸಿ ಮುರುಘಾ ಶರಣರಿಗೆ ಧೈರ್ಯ ತುಂಬುವ ಕೆಲಸ ಮಾಡಿದರು. ಸದ್ಯ ರಾಜ್ಯದಲ್ಲಿ ಪ್ರಕರಣ ಕಾವು ಪಡೆದುಕೊಂಡಿದ್ದು ಮುಂದೆ ಯಾವ ಹಂತ ತಲುಪಲಿದೆ ಎಂದು ಕಾದು ನೋಡಬೇಕಾಗಿದೆ.

    Live Tv
    [brid partner=56869869 player=32851 video=960834 autoplay=true]