ಮಂಡ್ಯ: 60 ವರ್ಷಗಳಿಂದ ಸರ್ಕಾರಿ ಸ್ಮಶಾನವಾಗಿದ್ದ (Graveyard) ಜಾಗವನ್ನು ಮುಸ್ಲಿಂ ಮಕಾನ್ ಮಾಡಿದ ಹಿನ್ನೆಲೆ ಗ್ರಾಮಸ್ಥರು ಬೀದಿಗಿಳಿದು ಪ್ರತಿಭಟನೆ ನಡೆಸಿರುವ ಘಟನೆ ಮಂಡ್ಯದ (Mandya) ಹೊಸಬೂದನೂರು (Hosabudanur) ಗ್ರಾಮದಲ್ಲಿ ನಡೆದಿದೆ.
ಮಂಡ್ಯದ ಹೊಸಬೂದನೂರು ಗ್ರಾಮದಲ್ಲಿ ಕಳೆದ 1963ರಿಂದ 2017ರವರೆಗೆ ಸರ್ವೇ ನಂಬರ್ 313ರಲ್ಲಿ 1 ಎಕರೆ 13 ಗುಂಟೆ ಜಾಗದಲ್ಲಿ ಹಿಂದೂಗಳಿಗಾಗಿ ಸ್ಮಶಾನ ಇತ್ತು. ಆದರೆ 2017ರ ಬಳಿಕ ವಕ್ಫ್ ಬೋರ್ಡ್ ಆಸ್ತಿ ಇದಾಗಿದ್ದು, ಈ ಜಾಗ ಇದೀಗ ಮುಸ್ಲಿಂ ಸಮುದಾಯದ ಮಕಾನ್ (ಸ್ಮಶಾನ) ಆಗಿದೆ. ಇದನ್ನೂ ಓದಿ: ಕೊಪ್ಪಳ | KPCC ಕಾರ್ಮಿಕ ವಿಭಾಗದ ಕಾರ್ಯದರ್ಶಿ ಮೇಲೆ ಹಲ್ಲೆ – ಪಿಎಸ್‌ಐ ಸಸ್ಪೆಂಡ್
ವಿಶೇಷ ಅಂದ್ರೆ ಈ ಊರಿನಲ್ಲಿ ಒಂದೇ ಒಂದು ಮುಸ್ಲಿಂ ಸಮುದಾಯದವರ ಮನೆ ಇಲ್ಲ. ಹೀಗಿರುವಾಗ ಮುಸ್ಲಿಂ ಸಮುದಾಯಕ್ಕೆ ಹಿಂದೂ ಸ್ಮಶಾನವನ್ನು ಬಿಟ್ಟುಕೊಡಲಾಗಿದೆ. ಇದೀಗ ಈ ಊರಿನಲ್ಲಿ ಹಿಂದೂಗಳು ಸಾವನ್ನಪ್ಪಿದರೆ ಹೂಳಲು ಸ್ಮಶಾನ ಇಲ್ಲದಂತೆ ಆಗಿದೆ. ಈ ಬಗ್ಗೆ ಸಚಿವರಿಗೆ, ಜಿಲ್ಲಾಡಳಿತಕ್ಕೆ, ಶಾಸಕರಿಗೆ ಹೇಳಿದ ವೇಳೆ ಇರುವ ಜಾಗದಲ್ಲಿ 24 ಗುಂಟೆ ಜಾಗವನ್ನು ಹಿಂದೂಗಳ ಸ್ಮಶಾನಕ್ಕಾಗಿ ಬಿಟ್ಟುಕೊಡಲಾಗಿತ್ತು. ಇದನ್ನೂ ಓದಿ: ಅಮೆರಿಕದ ರಹಸ್ಯ ದಾಖಲೆಗಳ ಸಂಗ್ರಹ ಆರೋಪ – ಭಾರತ ಮೂಲದ ವಿದೇಶಾಂಗ ನೀತಿ ತಜ್ಞ ಆಶ್ಲೇ ಟೆಲ್ಲಿಸ್ ಅರೆಸ್ಟ್
ಇದೀಗ ಮತ್ತೆ ಆ ಜಾಗದಲ್ಲಿ ಅಂತ್ಯ ಸಂಸ್ಕಾರಕ್ಕೆ ತಡೆ ಹಿಡಿಯಲಾಗಿದೆ. ಜೊತೆಗೆ ಗ್ರಾಮ ಪಂಚಾಯ್ತಿಯಿಂದ ಸ್ಮಶಾನ ಅಭಿವೃದ್ಧಿಗೆ ತಹಶೀಲ್ದಾರ್ ತಡೆ ನೀಡಿದ್ದಾರೆ. ಹೀಗಾಗಿ ಇದೀಗ ಹೊಸಬೂದನೂರು ಗ್ರಾಮಸ್ಥರು ಬೀದಿಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಈಗ ಮುಸ್ಲಿಂ ಮಕಾನ್ ಮಾಡಿರುವ ಹಿಂದೂ ಸ್ಮಶಾನವನ್ನು ವಾಪಸ್ ಹಿಂದೂಗಳಿಗೆ ನೀಡಬೇಕೆಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಚಿತ್ರದುರ್ಗ ಡಿಡಿಪಿಐ ಕಚೇರಿಯಲ್ಲೇ ಸಿಬ್ಬಂದಿಯಿಂದ ಎಣ್ಣೆ ಪಾರ್ಟಿ – ವೀಡಿಯೋ ವೈರಲ್
ಬೆಂಗಳೂರು: ಹಿಂದೂ ಆಗಲಿ, ಮುಸ್ಲಿಂ (Hindu Or Muslims) ಆಗಲಿ ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ರೆ ಪೊಲೀಸರು ಕ್ರಮ ತೆಗೆದುಕೊಳ್ತಾರೆ. ಮದ್ದೂರಿನಲ್ಲಿ ಎಂಎಲ್‌ಸಿ ಸಿಟಿ ರವಿ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಪ್ರಚೋದನಕಾರಿ ಭಾಷಣ ಮಾಡಿದ್ರು ಅಂತ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ (G Parameshwar) ತಿಳಿಸಿದ್ರು.
ಬೆಂಗಳೂರಿನಲ್ಲಿ (Bengaluru) ಮಾತಾಡಿದ ಪರಮೇಶ್ವರ್, ಇಬ್ಬರ ವಿರುದ್ಧ ಎಫ್‌ಐಆರ್ ದಾಖಲಾಗಿರೋದನ್ನ ಸಮರ್ಥಿಸಿಕೊಂಡರು. ಮದ್ದೂರು ಘಟನೆಯ ವಿಚಾರದಲ್ಲಿ ನಾವು ಮೊದಲಿಂದ ಹೇಳುತ್ತಿದ್ದೇವೆ. ಇದರಲ್ಲಿ ರಾಜಕೀಯ ಮಾಡಬೇಡಿ. ಪೊಲೀಸರಿಗೆ ಬಿಡಿ. ಕಲ್ಲು ಹೊಡೆದವರನ್ನು ಹಿಡಿದು, ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಮುಸಲ್ಮಾನ ಆಗಿರಲಿ, ಹಿಂದೂ ಆಗಿರಲಿ, ಮತ್ತೊಬ್ಬ ಆಗಿರಲಿ, ಯಾರೇ ಕಾನೂನು ವಿರುದ್ಧವಾಗಿ ನಡೆದುಕೊಂಡಿದ್ದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಈ ವಿಚಾರವನ್ನು ಪೊಲೀಸರಿಗೆ ಬಿಟ್ಟುಬಿಡಬೇಕು. ಅದೆಲ್ಲ ಬಿಟ್ಟು, ಇವರು ಹೋಗಿ ಪ್ರಚೋದನಾಕಾರಿಯಾಗಿ ಭಾಷಣ ಮಾಡಿ, ಮತ್ತೆ ಜನರನ್ನೆಲ್ಲ ಒಕ್ಕಲೆಬ್ಬಿಸುವುದು ಸರಿಯಲ್ಲ ಎಂದು ಹೇಳಿದರು. ಇದನ್ನೂ ಓದಿ: ಸಿಎಂ ನಿವಾಸದ ಮುಂದೆ ಹೊತ್ತಿ ಉರಿದ ಕಾರು – ಕೂದಲೆಳೆ ಅಂತರದಲ್ಲಿ ಚಾಲಕ ಪಾರು
ಬಿಜೆಪಿಯವ್ರು ವೀರಾವೇಷದಲ್ಲಿ ಮಾತಾಡಿ, ಬಳಸಬಾರದ ಪದಗಳನ್ನು ಬಳಸುವುದರಿಂದ ಏನು ಸಾಧನೆ ಮಾಡುತ್ತಾರೆ? ಅವರು ರಾಜಕೀಯ ಕಾರಣಕ್ಕಾಗಿ ಇದೆಲ್ಲ ಮಾಡುತ್ತಿದ್ದಾರೆ ಅನ್ನೋದು ಸ್ಪಷ್ಟವಾಗಿ ಕಾಣುತ್ತಿದೆ. ಯಾರು ಕಾನೂನಿಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೋ, ಅಂಥವರ ವಿರುದ್ಧ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ ಎಂದು ಪರಮೇಶ್ವರ್ ಹೇಳಿದ್ದಾರೆ. ಇದನ್ನೂ ಓದಿ: ನೇಪಾಳದ ಪ್ರಧಾನಿ ರೇಸ್‌ನಲ್ಲಿ ಬೆಂಗ್ಳೂರು ನಂಟಿನ ಬಲೇನ್ ಶಾ ಹೆಸರು ಮುನ್ನಲೆಗೆ
ಎಎಸ್ಪಿ ವರ್ಗಾವಣೆಗೆ ಸಮರ್ಥನೆ
ಇನ್ನೂ ಮದ್ದೂರು ಗಲಾಟೆ ಹಿನ್ನೆಲೆಯಲ್ಲಿ ಎಎಸ್‌ಪಿ ತಿಮ್ಮಯ್ಯ ವರ್ಗಾವಣೆ ಮಾಡಿದ್ದನ್ನು ಗೃಹ ಸಚಿವರು ಸಮರ್ಥಿಸಿಕೊಂಡರು. ಮದ್ದೂರಿನಲ್ಲಿ ಭದ್ರತಾ ಲೋಪ ಕಂಡುಬಂದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಹಿರಿಯ ಅಧಿಕಾರಿಗಳು ಎಎಸ್‌ಪಿ ವರ್ಗಾವಣೆ ಮಾಡಿದ್ದಾರೆ. ಆಂತರಿಕವಾಗಿ ಎಲ್ಲಿ ಲೋಪ ಕಂಡಿದೆ, ಅದಕ್ಕೆ ಕ್ರಮ ತೆಗೆದುಕೊಳ್ಳಬೇಕಲ್ಲವೇ? ಒಬ್ಬ ಇನ್‌ಸ್ಪೆಕ್ಟರ್ ಆಗಿರಬಹುದು, ಸಬ್ ಇನ್‌ಸ್ಪೆಕ್ಟರ್ ಆಗಿರಬಹುದು, ಅವರ ಕರ್ತವ್ಯ ಲೋಪ ಕಂಡು ಬಂದಾಗ ಇಲಾಖೆಯಿಂದ ಕ್ರಮ ತೆಗೆದುಕೊಳ್ಳುತ್ತಾರೆ. ಇದರಲ್ಲೂ ಲೋಪ ಕಂಡುಬಂದಿದ್ದು ಆಂತರಿಕವಾಗಿ ಇಲಾಖೆಯಿಂದ ಕ್ರಮ ವಹಿಸಲಾಗಿದೆ ಎಂದು ತಿಳಿಸಿದರು.
ಚಿಕ್ಕಮಗಳೂರು: ನನ್ನ ರಕ್ತ ಬೆರಕೆಯಲ್ಲ, ಪ್ಯೂರ್ ಹಿಂದುತ್ವ ಅಂತ ವಿಧಾನ ಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಹೇಳಿದ್ದಾರೆ.
ಮಂಡ್ಯದ (Mandya) ಮದ್ದೂರಿನ ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆ ಎನ್ನುವ ಆರೋಪದ ಮೇಲೆ ಸಿ.ಟಿ ರವಿ ವಿರುದ್ಧ ಸ್ವಯಂಪ್ರೇರಿತ ಕೇಸ್ ದಾಖಲಾಗಿದೆ. ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ ರಕ್ತ ಪ್ಯೂರ್ ಹಿಂದುತ್ವ ಬೆರಕೆ ಅಲ್ಲ ಎಂದು ತಿರುಗೇಟು ನೀಡಿದ್ದಾರೆ.
ಮಿಸ್ಟರ್ ಮಂಜುನಾಥ್, ರಾತ್ರಿ 10 ರಿಂದ ಬೆಳಗ್ಗೆ 6ರ ವರೆಗೆ ಧ್ವನಿವರ್ಧಕ ಬಳಸುವಂತಿಲ್ಲ, ಸುಪ್ರೀಂ ಕೋರ್ಟ್ ಆದೇಶವಿದೆ. ನನ್ನ ಮೇಲೆ ಕೇಸ್ ಹಾಕಿ ನಿಯತ್ ತೋರ್ಸೋದಲ್ಲ. ನಾಳೆ ನೀನು ಮದ್ದೂರು ವ್ಯಾಪ್ತಿಯಲ್ಲಿ ಸುಮೋಟೋ ಕೇಸ್ ಹಾಕಬೇಕು. ಯಾರ‍್ಯಾರು ಬೆಳಗ್ಗೆ 5ಕ್ಕೆ ಕೂಗ್ತಾರೆ, ಅವರ ಮೇಲೆ ಕೇಸ್ ಹಾಕಿ ಖಾಕಿ ಬಟ್ಟೆಗೆ ನಿಯತ್ ಇದೆ ಅಂತ ತೋರ್ಸು ಅಂತ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಮದ್ದೂರಿನಲ್ಲಿ ಪ್ರಚೋದನಕಾರಿ ಭಾಷಣ – ಸಿ.ಟಿ ರವಿ ವಿರುದ್ಧ ಕೇಸ್ ದಾಖಲು
ಕೇಸ್ ನನಗೆ ಹೊಸದಲ್ಲ, ಕೇಸಿಗೆ ಹೆದರುವ ಜಾಯಮಾನದವನೂ ನಾನಲ್ಲ. ನೀವು ಕಲ್ಲು ಹೊಡೆದು, ತೊಡೆ ತಟ್ಟಿ, ಪೆಟ್ರೋಲ್ ಬಾಂಬ್ ಹಾಕಿದ್ರೆ, ಸಹಿಸುವ ಕಾಲ ಮುಗಿದಿದೆ ಎಂದಿದ್ದೆ. ಕ್ರಿಯೆಗೆ ತಕ್ಕ ಪ್ರತಿಕ್ರಿಯೆ ಎಂದು ಹೇಳಿದ್ದೆ, ಪ್ರೀತಿಗೆ ಪ್ರೀತಿ-ಕಲ್ಲಿಗೆ ಕಲ್ಲು ಎಂದಿದ್ದೆ. ನನ್ನ ಹೇಳಿಕೆಗೆ ಇಂದಿಗೂ ನಾನು ಬದ್ಧ. ಶಿವನ ನೆಲದಲ್ಲಿ ಅಲ್ಲಾ ಒಬ್ಬನೇ ಅಂತ ಅಂದ್ರೆ ಉಳಿದ ದೇವರ ಅಸ್ತಿತ್ವ ಏನು? ಅಂತ ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ
ಸಿ.ಟಿ ರವಿ ವಿರುದ್ಧ ಪ್ರಕರಣ ದಾಖಲಾಗಿದ್ದೇಕೆ?
ಮದ್ದೂರಿನಲ್ಲಿ (Maddur) ಗಣೇಶ ಮೆರವಣಿಗೆ ವೇಳೆ ನಡೆದಿದ್ದ ಕಲ್ಲು ತೂರಾಟದ ಬಳಿಕ ಬುಧವಾರ (ಸೆ.10) ಸಾಮೂಹಿಕ ಗಣೇಶ ವಿಸರ್ಜನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ವೇದಿಕೆಯಲ್ಲಿ ಸಿ.ಟಿ.ರವಿ ಭಾಷಣ ಮಾಡಿದ್ದರು. ಭಾಷಣದ ವೇಳೆ ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಮದ್ದೂರು ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಮಂಜುನಾಥ್ ಅವರ ದೂರಿನನ್ವಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮೂರು ದಿನಗಳ ಬಳಿಕ ಸಹಜ ಸ್ಥಿತಿಯತ್ತ ಮದ್ದೂರು
ಕೋಲಾರ: ಬಿಜೆಪಿಯವರಿಗೆ ಹಿಂದೂ-ಮುಸ್ಲಿಂ ಅನ್ನೋ ವಿಚಾರ ಬಿಟ್ರೆ ಇನ್ನೇನಿದೆ? ಪಹಲ್ಗಾಮ್ (Pahalgam Attack) ಆಗಿ ಎಷ್ಟು ದಿನ ಆಗಿದೆ? ಈ ಮಧ್ಯೆ ಇಂಡಿಯಾ ಪಾಕಿಸ್ತಾನ ಮ್ಯಾಚ್ (India-Pakistan Match) ಯಾಕೆ ಬೇಕಾಗಿತ್ತು ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ (Santosh Lad) ಕೇಂದ್ರ ಬಿಜೆಪಿಗೆ ಟಾಂಗ್ ನೀಡಿದ್ದಾರೆ.
ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿನಿಮಾದವರು ಬೇಡ, ಸಿಂಧೂ ನದಿ ನೀರು ಕೊಡಲ್ಲ ಅಂತಾರೆ, ಕ್ರಿಕೆಟ್ ಮಾತ್ರ ಆಡಿಸುತ್ತಾರೆ. ಪಾಕಿಸ್ತಾನದ ಜೊತೆಗೆ ಇಂಡಿಯಾ ಕ್ರಿಕೆಟ್ ಆಡಬಹುದಾ ಎಂದು ಪ್ರಶ್ನಿಸಿದರು. ಇನ್ನೂ ಮೋದಿ ಗ್ರೇಟೆಸ್ಟ್ ಪ್ರೈಮ್ ಮಿನಿಸ್ಟರ್ ಎಂದು ಸಾಬೀತು ಮಾಡಲು ಹೊರಟಿದ್ದಾರೆ. ಬಿಜೆಪಿಯ ಪಿಎಂ ಮೋದಿ, ಅಡ್ವಾನಿ, ವಾಜಪೇಯಿ ಪಾಕಿಸ್ತಾನಕ್ಕೆ ಹೋಗಿದ್ದು, ಅಲ್ಲದೇ ಪಾಕಿಸ್ತಾನಕ್ಕೆ ಬಸ್ ಬಿಟ್ಟಿದ್ದು ಅವರೆ. ಹಾಗಾಗಿ ಎಲ್ಲವೂ ಮಾಡಿದ್ದು ಬಿಜೆಪಿಯವರೆ ಎಂದು ಕಿಡಿಕಾರಿದರು. ಇದನ್ನೂ ಓದಿ: Asia Cup 2025 | ಅಬ್ಬರಿಸಲು ʻಯಂಗ್ ಇಂಡಿಯಾʼ ರೆಡಿ – ಪ್ರಾಕ್ಟೀಸ್ ಸೆಷನ್‌ನಲ್ಲೇ 30 ಸಿಕ್ಸರ್ ಸಿಡಿಸಿದ ಶರ್ಮಾ
83 ಸಾವಿರ ಕೋಟಿ ಅಭಿವೃದ್ಧಿಗೆ, 60 ಸಾವಿರ ಕೋಟಿ ಗ್ಯಾರಂಟಿಗಳಿಗೆ ಕೊಡುತ್ತಿದ್ದೇವೆ. ಬಿಜೆಪಿಯವರು ಗ್ಯಾರಂಟಿ ಕೊಡದೆ ಅಭಿವೃದ್ಧಿಗೆ ಮಾತ್ರ ಅಷ್ಟು ಹಣ ಮೀಸಲಿಟ್ಟಿದ್ದರು, ಉಳಿದ ಹಣ ಎಲ್ಲಿ ಹೋಯ್ತು? ಆಗ ರಾಜ್ಯ ದಿವಾಳಿಯಾಗಿಲ್ವಾ? ದೇಶ ಆರ್ಥಿಕ ಸಂಕಷ್ಟದಲ್ಲಿದೆ, ಆದ್ರೆ ರಾಜ್ಯ ಸುಧಾರಿಸಿದೆ. ಜಿಎಸ್‌ಟಿ ಸೇರಿ ಎಲ್ಲದರಲ್ಲೂ ರಾಜ್ಯ ಮುಂದಿದೆ. ಗುಜರಾತ್ ಮಾಡೆಲ್ ಅಂತಾರೆ ಎಲ್ಲಾಗಿದೆ ಮಾಡೆಲ್? ಗಿಫ್ಟ್ ಸಿಟಿ ಅಂತ ಮಾಡಿ ಮೋದಿ ಅವರು ಎಲ್ಲಿ ಅಭಿವೃದ್ಧಿ ಮಾಡಿದ್ದಾರೆ? ಸಾಕಷ್ಟು ಬಾರಿ ಸಿಎಂ ಆಗಿದ್ದವರು ಏನು ಮಾಡಿದ್ದಾರೆ ಎಂದು ಪ್ರಶ್ನೆಗಳ ಸುರಿಮಳೆಗೈದರು. ಇದನ್ನೂ ಓದಿ: 14 ವರ್ಷದ ಬಾಲಕಿ ಮೇಲೆ ಅತ್ಯಾಚಾರ – ನಿಪ್ಪಾಣಿ ವ್ಯಕ್ತಿಗೆ 30 ವರ್ಷ ಜೈಲು ಶಿಕ್ಷೆ
ಖೇಲೋ ಇಂಡಿಯಾ ಅನ್ನೋ ದೊಡ್ಡ ಕಾರ್ಯಕ್ರಮ 426 ಕೋಟಿ ಗುಜರಾತ್‌ಗೆ ಮಾತ್ರ ಹೋಗುತ್ತೆ, ಎಲ್ಲಿ ಎಷ್ಟು ಮೆಡಲ್ ಬಂದಿದೆ? ಈ ಮೊದಲು ಕಡಿಮೆ ಇತ್ತು, ಈಗಲೂ ಕಡಿಮೆ ಇದೆ. ಗುಜರಾತ್ ಯಾಕೆ ಇಂದಿಗೂ ಮಾಡೆಲ್ ಆಗಿಲ್ಲ? ನಮ್ಮ ರಾಜ್ಯದಲ್ಲಿ ಎಂಜಿನಿಯರಿಂಗ್ ಕಾಲೇಜು, ಸಿಎಸ್ಟಿ, ಎಫ್‌ಡಿಎ ಸೇರಿ ನಾವು ಅಭಿವೃದ್ಧಿಯಲ್ಲಿದ್ದೇವೆ, ಆದ್ರೆ ದೇಶವೆ ಹಿಂದುಳಿದಿದೆ. ಅಭಿವೃದ್ಧಿ ಮಾಡುತ್ತಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ʻಬೆಂಕಿಯ ಬಲೆʼಯಲ್ಲಿ ನೇಪಾಳ – ಕನ್ನಡಿಗರ ರಕ್ಷಣೆಗೆ ತಂಡ ರಚಿಸಿದ ರಾಜ್ಯ ಸರ್ಕಾರ
ಇನ್ನು ಮದ್ದೂರು ಕಲ್ಲು ತೂರಾಟ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಹಿಂದೂ ಮುಸ್ಲಿಂ ಗಲಾಟೆ ಬಿಟ್ರೆ ಬಿಜೆಪಿ ಏನೂ ಮಾಡುತ್ತಿಲ್ಲ. ಕಲ್ಲು ತೂರಾಟ ಮಾಡಿದವರಿಗೆ ಕಾನೂನು ಪ್ರಕಾರ ಶಿಕ್ಷೆಯಾಗಬೇಕು. ಹಿಂದೂ ಎನ್ನುವವರು ಮೊದಲಿಗೆ ಅಂತರ್ಜಾತಿ ವಿವಾಹ ಮಾಡಿಸಲಿ, ಹಿಂದೂ ಮಾತ್ರ ಎನ್ನುವವರು ಹೀಗೆ ಮಾಡಿ. ಅವರ ಆಸ್ತಿಗಳನ್ನ ಬಡವರಿಗೆ ಕೊಡಿ. ನಾವೆಲ್ಲಾ ಹಿಂದು ನಾವೆಲ್ಲಾ ಒಂದು ಎನ್ನುವವರು ಮೊದಲು ಸಣ್ಣ ಜಾತಿಗಳವರೊಂದಿಗೆ ಮದುವೆ ಮಾಡಿಸಿ ಮಾದರಿಯಾಗಲಿ ಎಂದು ಸವಾಲೆಸೆದರು. ಇದನ್ನೂ ಓದಿ: ಮಂಗಳೂರು | ಬೈಕಂಪಾಡಿಯಲ್ಲಿ ಅಗ್ನಿ ಅವಘಡ – ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ
ಬಿಜೆಪಿ ನಾಯಕರ ಮಕ್ಕಳು ಯಾವ ಪ್ರತಿಭಟನೆಗೆ, ಯಾವ ಹೋರಾಟಕ್ಕೆ ಬಂದಿದ್ದಾರೆ? ಬರಲ್ಲ, ಅಲ್ಲಿ ಹೋರಾಟ ಮಾಡೋದು, ಗಾಯಗಳಾಗೋದು ಎಲ್ಲವೂ ಬಡವರ ಮಕ್ಕಳಿಗೆ. ಇನ್ನೂ ಬಿಜೆಪಿಯವರು ಏನು ಮಾಡಿದ್ದಾರೆ? ಶಕ್ತಿ ಪೀಠಗಳು ಹೆಚ್ಚಾಗಿ ಮಾಡಿರುವುದು ಕಾಂಗ್ರೆಸ್‌ನವರು ಎಂದರು. ಇದನ್ನೂ ಓದಿ: ಸಂಡೂರಿನ ನಾರಿಹಳ್ಳದಲ್ಲಿ ಅಪರೂಪದ ಮ್ಯಾಂಗನೀಸ್ ಶಿಲಾ ಶಾಸನ ಪತ್ತೆ
ಇನ್ನೂ ಭದ್ರಾವತಿ ಶಾಸಕ ಸಂಗಮೇಶ್ ಮುಂದಿನ ಜನ್ಮದಲ್ಲಿ ಮಸ್ಲಿಂ ಆಗಿ ಹುಟ್ಟುತ್ತೇನೆ ಎಂಬ ಹೇಳಿಕೆ ಬಗ್ಗೆ ಮಾತನಾಡಿ, ದೇವೇಗೌಡ್ರು ಈ ಹಿಂದೆ ನಾನು ಮುಂದಿನ ಜನ್ಮದಲ್ಲಿ ಮುಸ್ಲಿಂ ಆಗಿ ಹುಟ್ಟಬೇಕು ಎಂದಿದ್ದರು. ಅವರ ಬಗ್ಗೆ ನನಗೆ ಗೌರವ ಇದೆ. ಆದ್ರೆ ನಮ್ಮ ಶಾಸಕರು ಮಾತ್ರ ಹಾಗೆ ಮಾತನಾಡಬಾರದ? ನಾವು ಮಾತನಾಡಿದ್ರೆ ಓಲೈಕೆನಾ ಎಂದು ಪ್ರಶ್ನಿಸಿದರು. ಇದನ್ನೂ ಓದಿ: ರಾಜ್ಯ ಸರ್ಕಾರ ಹಿಂದೂಗಳನ್ನ ಯಾವ ಸ್ಥಿತಿಗೆ ತಳ್ಳಿರಬಹುದು? – ವಿಜಯೇಂದ್ರ ಆತಂಕ
ಇನ್ನೂ ಧರ್ಮಸ್ಥಳಕ್ಕೆ ತೆಲುಗು ನಟ, ಆಂಧ್ರ ಡಿಸಿಎಂ ಪವನ್ ಕಲ್ಯಾಣ್ ಬರುವ ವಿಚಾರವಾಗಿ ಮಾತನಾಡಿದ ಅವರು, ಅಷ್ಟೇ ಬಿಜೆಪಿಯಲ್ಲಿ ಹಿಂದೂ ಅನ್ನೋ ವಿಚಾರ ಬಿಟ್ರೆ ಇನ್ನೇನಿದೆ? ಏನಕ್ಕೆ ಬರ್ತಾರೆ ಬಂದು ಏನು ಮಾಡ್ತಾರೆ? ಧರ್ಮ ರಕ್ಷಣೆ ಅಂತಾರೆ, ಇಷ್ಟೇ ಅವರ ಸಾಧನೆ ಎಂದು ವ್ಯಂಗ್ಯವಾಡಿದರು. ಇದನ್ನೂ ಓದಿ: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ – ಸೆ.12ರ ನಂತರ ಮದ್ದೂರಿಗೆ ಹೆಚ್‌ಡಿಕೆ
ಶಿವಮೊಗ್ಗ: ಮುಂದಿನ ಜನ್ಮದಲ್ಲಿ ಹುಟ್ಟಿದ್ರೆ ಮುಸ್ಲಿಂ (Muslim) ಆಗಿಯೇ ಹುಟ್ಟಬೇಕು ಎನ್ನುವ ಮೂಲಕ ಭದ್ರಾವತಿ ಕಾಂಗ್ರೆಸ್ ಶಾಸಕ ಬಿ.ಕೆ ಸಂಗಮೇಶ್ (BK Sangamesh) ತಮ್ಮ ಇಸ್ಲಾಂ ಬಗೆಗಿನ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ (Shivamogga) ಸೋಮವಾರ ನಡೆದ ಈದ್‌ಮಿಲಾದ್ (Eid Milad) ಮೆರವಣಿಗೆ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನನ್ನು ಜನರು 4 ಬಾರಿ ಗೆಲ್ಲಿಸಿದ್ದಾರೆ. ನಾನು ಎಂದಿಗೂ ನಿಮ್ಮ ಮನೆಮಗನಾಗಿರುತ್ತೇನೆ. ಮುಂದಿನ ಜನ್ಮ ಅಂತ ಇದ್ರೆ ನಾನು ಮುಸ್ಲಿಂ ಆಗಿಯೇ ಹುಟ್ಟಬೇಕು ಎಂದಿದ್ದಾರೆ. ಇದನ್ನೂ ಓದಿ: ಭದ್ರಾವತಿ ಈದ್ ಮೆರವಣಿಗೆಯಲ್ಲಿ ಪಾಕ್ ಪರ ಘೋಷಣೆ
ಕೊಪ್ಪಳ: ಹಿಂದೂ- ಮುಸ್ಲಿಮರ (Hindu Muslims) ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ (Koppala Police Station) ಎಫ್‌ಐಆರ್ ದಾಖಲಾಗಿದೆ.
ಅನ್ಯಕೋಮಿನ ಯುವಕನಿಂದ ಆಗಸ್ಟ್ 3 ರಂದು ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಕೊಲೆ ಆಗಿತ್ತು. ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಲು ಆ.10ರಂದು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನ (Muslims Womens) ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ ತರೋದಾಗಿ ಹೇಳಿದ್ದರು. ಈ ಮೂಲಕ ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಹೇಳಿಕೆ ನೀಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: ಅಗ್ನಿ 5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ
ಈ ಹಿನ್ನೆಲೆ ಕೊಪ್ಪಳದ ಕುವೆಂಪು ನಗರದ ನಿವಾಸಿ ಅಬ್ದುಲ್ ಕಲಾಂ ದೂರು ನೀಡಿದ್ದು ಯತ್ನಾಳ್ ಹೇಳಿಕೆಯಿಂದ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ. ಮುಸ್ಲಿಂ ಮಹಿಳೆಯರನ್ನ ಕೀಳಾಗಿ, ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೇ ಅವರನ್ನು ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಾಲ್ಯವಿವಾಹ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್
ಅಬ್ದುಲ್ ರಜಾಕ್‌ಗೆ ಹಿಂಬರಹ
ಇದೇ ವಿಚಾರವಾಗಿ ಶಾಸಕ ಬಸನಗೌಡ ಯತ್ನಾಳ್ ವಿರುದ್ಧ ದೂರು ನೀಡಲು ಬೆಂಗಳೂರಿನ ಅಬ್ದುಲ್ ರಜಾಕ್ ಇಂದು ಕೊಪ್ಪಳಕ್ಕೆ ಬಂದಿದ್ದರು. ಜೊತೆಗೆ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ, ಪೊಲೀಸರು, ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ನೀಡಿದ ದೂರು ಆಧರಿಸಿ, ಎಫ್ಐಆರ್ ಮಾಡಲಾಗಿದೆ. ಏನಾದರೂ ಹೇಳಿಕೆ ಇದ್ದರೇ ಅದೇ ಆರೋಪ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಹಿಂಬರಹ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್ ಸುಂಕಕ್ಕೆ ವಿನಾಯಿತಿಗೆ ಮನವಿ
ಬಳ್ಳಾರಿ: ಹಿಂದೂ, ಮುಸ್ಲಿಂ (Hindu Muslim) ಪರಸ್ಪರ ಭಾವೈಕ್ಯತೆಯಿಂದ ರಾಷ್ಟ್ರೀಯ ಏಕತೆಯನ್ನು ಸಾರಲು ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಹಳ್ಳಿ ಗ್ರಾಮದ ಸರ್ಕಾರಿ ಉರ್ದು ಪ್ರಾಥಮಿಕ ಶಾಲೆಯಲ್ಲಿ ಅದ್ದೂರಿ ಶ್ರೀಕೃಷ್ಣ ಜನ್ಮಾಷ್ಟಮಿ (Shri Krishna Janmashtami) ಆಚರಣೆ ಮಾಡಿದ್ದಾರೆ.
ಕೋಮು ಸೌಹಾರ್ದತೆಯಿಂದ ಇಂತಹ ಕಾರ್ಯಕ್ರಮಗಳನ್ನು ಶಾಲೆಗಳಲ್ಲಿ ಹಮ್ಮಿಕೊಂಡು ರಾಷ್ಟ್ರೀಯ ಏಕತೆ ಮೂಡಿಸುವ ಜೊತೆಗೆ ಪರಸ್ಪರ ಭಾವೈಕ್ಯತೆಯಿಂದ ದೇಶದ ಪ್ರಗತಿಯ ಸಾಧಿಸುವ ದೃಷ್ಟಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಲಾಗಿದೆ. ಮುಸ್ಲಿಮ್ (Muslim) ಕುಟುಂಬದ ಮಕ್ಕಳು ಕೃಷ್ಣ ರಾಧೆಯರ (Krishna and Radha) ವೇಷ ತೊಟ್ಟು ಸಂಭ್ರಮಿಸುವ ಮೂಲಕ ಭಾವೈಕ್ಯತೆ ಸಾರಿದರು.
ಶಿಕ್ಷಕ ರವಿಕುಮಾರ ಸಕ್ರಹಳ್ಳಿ ಮಾತನಾಡಿ ರಾಷ್ಟ್ರೀಯ ಏಕತೆ, ಕೋಮು ಸೌಹಾರ್ದತೆ, ಭಾವೈಕ್ಯತೆಯನ್ನು ಮೂಡಿಸಲು ಪಾಲಕರ ಸಹಕಾರದಿಂದ ಉರ್ದು ಶಾಲೆಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮ ಸಡಗರದಿಂದ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. 160 ಮಕ್ಕಳು ಓದುವ ಈ ಶಾಲೆಯಲ್ಲಿ ಗಣೇಶ ಹಬ್ಬ ರಕ್ಷಾ ಬಂಧನ ಶ್ರೀ ಕೃಷ್ಣ ಜನ್ಮಾಷ್ಟಮಿ, ಹಲವಾರು ಸಾಧಕರ ಜಯಂತಿಗಳು ಮುಂತಾದ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಸಡಗರದಿಂದ ಆಚರಿಸುತ್ತೇವೆ ಎಂದರು. ಇದನ್ನೂಓದಿ: ಎಸ್‌ಐಟಿ ಮಧ್ಯಂತರ ವರದಿ ಬಿಡುಗಡೆ ಮಾಡ್ಬೇಕು, ಇಲ್ಲದಿದ್ರೆ ಸದನದಲ್ಲಿ ಹೋರಾಟ: ಆರ್.ಅಶೋಕ್
ಮುಸ್ಲಿಂ ಮಕ್ಕಳೇ ಹೆಚ್ಚಿನ ಸಂಖ್ಯೆಯಲ್ಲಿರುವ ಉರ್ದು ಶಾಲೆಯಲ್ಲಿ ನೂರಕ್ಕೂ ಅಧಿಕ ಮಕ್ಕಳು ಕೃಷ್ಣ ಮತ್ತು ರಾಧೆಯರ ವೇಷಭೂಷಣ ಧರಿಸಿ ಭಾವೈಕ್ಯತೆ ಸಾಧಿಸಲು ಮುಂದಾಗಿದ್ದು ವಿಶೇಷವಾಗಿತ್ತು.
– ವಿವಿ ವಿದ್ಯಾರ್ಥಿಗಳು, ಹಿಂದುಪರ ಸಂಘಟನೆಗಳ ಆಕ್ರೋಶ – ಗೋರಿ ತೆರವುಗೊಳಿಸದಿದ್ದರೆ, ಆಗಸ್ಟ್ 10 ರಂದು ನೆಲಸಮ ಮಾಡುತ್ತೇವೆ
ಕಲಬುರಗಿ: ಕಡಗಂಚಿ ಬಳಿ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ (Kalaburagi Central University) ಕ್ಯಾಂಪಸ್ಸಿನಲ್ಲಿ ಅನಧಿಕೃತವಾಗಿ ಮುಸ್ಲಿಂ ಸಮುದಾಯದ (Muslim Community) ಗೋರಿ (ಮಜರ್) ನಿರ್ಮಾಣ ಮಾಡಿದ್ದು ಈಗ ವಿವಾದಕ್ಕೆ ಕಾರಣವಾಗಿದೆ.
ಕಡಗಂಚಿಯ ಬಳಿ 600 ಎಕರೆ ಪ್ರದೇಶದಲ್ಲಿ ಹರಡಿರುವ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಮುಸ್ಲಿಂ ಸಮುದಾಯದ ಎರಡು ಗೋರಿ (ಮಜರ್) ನಿರ್ಮಾಣ ಮಾಡಲಾಗಿದ್ದು, ಅನಧಿಕೃತವಾಗಿ ಮೂರನೇ ಮಜರ್‌ಗೆ (Mazar) ಸಿದ್ದತೆಗಳು ನಡೆದಿವೆ ಎಂಬ ಆರೋಪ ಕೇಳಿಬಂದಿದೆ. ರಾತ್ರೋ ರಾತ್ರಿ ವಿವಿಯ ಕ್ಯಾಂಪಸ್ಸಿನಲ್ಲಿ ಬಂದು ಗೋರಿಯ ಸುತ್ತಮುತ್ತಲೂ ಕಲ್ಲಿನ ಕಾಂಪೌಂಡ್ ನಿರ್ಮಾಣ ಮಾಡಲಾಗಿದೆ.
ಈಗಾಗಲೇ ಕೇಂದ್ರಿಯ ವಿವಿಯ ಕ್ಯಾಂಪಸ್ಸಿನಲ್ಲಿ ಎರಡು ಗೋರಿಗಳು ಪತ್ತೆಯಾಗಿದ್ದು, ಗೋರಿಗಳಿಗೆ ಮುಸ್ಲಿಂ ಸಮುದಾಯ ವಿದ್ಯುತ್ ವ್ಯವಸ್ಥೆ ಕೂಡ ಕಲ್ಪಿಸಿಕೊಂಡಿದೆ. ಅನಧಿಕೃತ ವಿದ್ಯುತ್ ಬಳಸಿಕೊಂಡು, ಗೋರಿಯ ಸುತ್ತಮುತ್ತ ಕಾಂಪೌಂಡ್ ನಿರ್ಮಾಣ ಮಾಡಿದ್ದನ್ನು ಕಂಡಿರುವ ವಿವಿಯ ವಿದ್ಯಾರ್ಥಿಗಳು, ಹಿಂದುಪರ ಸಂಘಟನೆಗಳು ತೀವ್ರ ಆಕ್ರೋಶ ಹೊರಹಾಕಿದ್ದು, ಅನಧಿಕೃತ ಗೋರಿ ನಿರ್ಮಾಣದ ಸ್ಥಳದಲ್ಲಿನ ವಿದ್ಯುತ್ ವ್ಯವಸ್ಥೆಯನ್ನು ಇದೀಗ ವಿವಿಯ ಆಡಳಿತ ಮಂಡಳಿ ಕಡಿತಗೊಳಿಸಿದೆ. ಇದನ್ನೂ ಓದಿ: ಪತಿಯನ್ನು ಪತ್ನಿಯೇ ನದಿಗೆ ತಳ್ಳಿದ ಕೇಸ್‌ಗೆ ಟ್ವಿಸ್ಟ್; ಬಾಲ್ಯವಿವಾಹ ಕೇಸಲ್ಲಿ ನಾಪತ್ತೆಯಾಗಿದ್ದ ಗಂಡ ಅರೆಸ್ಟ್
ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಈ ರೀತಿ ಅನಧಿಕೃತ ಗೋರಿಗಳ ನಿರ್ಮಾಣ ಮಾಡಿರುವ ಕುರಿತು ನಮಗೆ ಯಾವುದೇ ರೀತಿಯ ಮಾಹಿತಿ ಇಲ್ಲ ಎಂದು ವಿಶ್ವವಿದ್ಯಾಲಯದ ಉಪಕಲಪತಿಗಳು ತಿಳಿಸಿದ್ದಾರೆ.
ಈ ಕುರಿತು ಮಾತನಾಡಿದ ಶ್ರೀರಾಮ ಸೇನೆಯ ರಾಷ್ಟ್ರೀಯ ಗೌರವಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿ, ಕರ್ನಾಟಕ ಕೇಂದ್ರೀಯ ವಿವಿಯಲ್ಲಿ ಹಲವು ಬೆಳವಣಿಗೆ ಕಂಡುಬರುತ್ತಿವೆ. 600 ಎಕ್ರೆ ವಿವಿಯಲ್ಲಿ ಆಗಿಂದಾಗ ಕೆಲವು ದುರ್ಘಟನೆ ನಡೆದಿದ್ದು. ಇದರ ಮುಂದುವರೆದ ಭಾಗವಾಗಿ ಇಂದು ಕ್ಯಾಂಪಸ್ಸಿನಲ್ಲಿ ಅನಧಿಕೃತವಾಗಿ ಮುಸ್ಲಿಮರು ಗೋರಿಗಳ ನಿರ್ಮಾಣ ಮಾಡುತ್ತಿರುವುದು ನಮಗೆ ತಿಳಿದುಬಂದಿದೆ. ಈಗಾಗಲೇ ಯಾರ ಅನುಮತಿಯೂ ಇಲ್ಲದೆ 10-15 ಅಡಿ ಎತ್ತರದಲ್ಲಿ ಅನಧಿಕೃತ ಮಜರ್ ನಿರ್ಮಾಣ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಧರ್ಮಸ್ಥಳದಲ್ಲಿ ಅಸ್ಥಿ ಉತ್ಖನನ; ಗುಂಡಿ 6ರಲ್ಲಿ ಸಿಕ್ಕ ಮೂಳೆ 40 ವರ್ಷ ಹಳೆಯದ್ದು
ಶೈಕ್ಷಣಿಕ ಕೇಂದ್ರವಾದ ಕರ್ನಾಟಕ ಕೇಂದ್ರೀಯ ವಿಶ್ವವಿದ್ಯಾಲಯದ ಕ್ಯಾಂಪಸ್ಸಿನಲ್ಲಿ ಅನಧಿಕೃತವಾಗಿ ಗೋರಿ ನಿರ್ಮಾಣ ಮಾಡುವ ಮೂಲಕ ಅಲ್ಲಿ ನಮಾಜ್ ಕೂಡ ಮಾಡಲಾಗುತ್ತಿದೆ ಎಂಬ ಮಾಹಿತಿಯೂ ಬಂದಿದೆ. ಅಲ್ಲಿಯ ಮುಸ್ಲಿಮರು, ವಿವಿಯ ಅಸಿಸ್ಟೆಂಟ್ ಪ್ರೊಫೆಸರ್ ಅಬ್ದುಲ್ ಮಜರ್ ಇವರ ಕುಮ್ಮಕ್ಕಿನಿಂದ ಹಾಗೂ ಕೆಲ ಮುಸ್ಲಿಂ ವಿದ್ಯಾರ್ಥಿಗಳು, ಹೊರಗಿನ ಹಳ್ಳಿಯ ಮುಸ್ಲಿಮರ ನೇತೃತ್ವದಲ್ಲಿ ಅನಧಿಕೃತ ದರ್ಗಾ ನಿರ್ಮಾಣ ಮಾಡುತ್ತಿದ್ದಾರೆ ಎಂದು ಹೇಳಿದರು.
ಆ.10ರ ಒಳಗೆ ನೆಲಸಮ ಮಾಡಿ:
ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಶಾಲೆಯೊಂದರಲ್ಲಿ ಅನಧಿಕೃತ ಗೋರಿಯೊಂದನ್ನು ಇಟ್ಟಿದ್ದರು. ನಾರಾಯಣಪುರ ಬಸವಸಾಗರ ಅಣೆಕಟ್ಟಿನಲ್ಲಿ ಅನಧಿಕೃತ ಗೋರಿ ನಿರ್ಮಾಣ ಮಾಡಿದ್ದು ಇಲ್ಲಿಯವರೆಗೆ ತೆಗೆದಿಲ್ಲ. ಅದೇ ಮಾದರಿಯಲ್ಲಿ ವಿವಿಯ ಕ್ಯಾಂಪಸ್ಸಿನಲ್ಲಿ ಗೋರಿ ನಿರ್ಮಾಣ ಮಾಡಿದ್ದಾರೆ. ಕೂಡಲೇ, ಜಿಲ್ಲಾಡಳಿತ ಎಚ್ಚೆತ್ತು ವಿವಿಯಲ್ಲಿ ನಿರ್ಮಾಣ ಮಾಡಲಾದ ಗೋರಿಯನ್ನು ನೆಲಸಮ ಮಾಡಬೇಕು. ಇಲ್ಲದಿದ್ದರೆ ಆ.10 ರಂದು ವಿವಿಯಲ್ಲಿನ ಅನಧಿಕೃತ ಗೋರಿಯನ್ನು ನೆಲಸಮ ಗೊಳಿಸಲಾಗುವುದು ಎಂದು ಹಿಂದೂ ಸಂಘಟನೆಗಳು ತಿಳಿಸಿವೆ.
ಬೆಳಗಾವಿ: ಶಾಲಾ ಮುಖ್ಯ ಶಿಕ್ಷಕ (School Head Master) ಮುಸ್ಲಿಂ ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸಬೇಕು ಎಂದು ಶಾಲೆಯ ಆವರಣದಲ್ಲಿದ್ದ ಮಕ್ಕಳು ಕುಡಿಯುವ ನೀರಿನ ಟ್ಯಾಂಕ್‌ಗೆ ಅಪ್ರಾಪ್ತ ಮಗುವಿನ ಕಡೆಯಿಂದಲೇ ವಿಷ ಪ್ರಾಷಣ ಮಾಡಿಸಿದ ಘಟನೆ ಬೆಳಗಾವಿ (Belagavi) ಜಿಲ್ಲೆಯ ಸವದತ್ತಿ (Savadatti) ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ಹೂಲಿಕಟ್ಟಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 41 ಮಕ್ಕಳು ವ್ಯಾಸಾಂಗ ಮಾಡುತ್ತಿದ್ದು, ಮುಖ್ಯ ಶಿಕ್ಷಕ ಸುಲೇಮಾನ್ ಗೋರಿನಾಯಕ್ ಹಾಗೂ ಮತ್ತೋರ್ವ ಮೇಷ್ಟ್ರು ಕೆಲಸ ಮಾಡುತ್ತಿದ್ದಾರೆ. ಸುಲೇಮಾನ್ ಗೋರಿನಾಯಕ್ ಕಳೆದ 13 ವರ್ಷಗಳಿಂದ ಒಂದೇ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದ ಎಂಬ ಕಾರಣ ಹಾಗೂ ಆತ ಮುಸ್ಲಿಂ ಸಮುದಾಯಕ್ಕೆ ಸೇರಿದವ ಎಂಬ ಕಾರಣಕ್ಕೆ ಆತನನ್ನು ಶಾಲೆಯಿಂದ ಎತ್ತಂಗಡಿ ಮಾಡಿಸಬೇಕು ಎಂದು ಸಾಗರ್ ಪಾಟೀಲ್ ಪ್ಲಾನ್ ಮಾಡಿ ಕೃಷ್ಣಾ ಪಾಟೀಲ್ ಎಂಬಾತನನ್ನು ಬ್ಲಾಕ್ ಮೇಲ್ ಮಾಡಿ ಮನವಳ್ಳಿಯಿಂದ ಕೀಟನಾಶಕ ತರಿಸಿ ಮಾಜಾ ಬಾಟಲ್‌ನಲ್ಲಿ ವಿಷ ಬೆರೆಸಿ ಅಪ್ರಾಪ್ತ ಮಗುವನ್ನು ಬಳಸಿಕೊಂಡು ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿದ್ದರು. ಇದನ್ನೂ ಓದಿ: ಕಲಬುರಗಿ ಕರ್ನಾಟಕ ಕೇಂದ್ರಿಯ ವಿವಿ ವಿದ್ಯಾರ್ಥಿನಿ ಕೆನ್ನೆಗೆ ಮುತ್ತಿಟ್ಟ ಕ್ಯಾಂಟೀನ್ ಓನರ್
ಕೃಷ್ಣಾ ಮಾದರ್ ಅದೇ ಗ್ರಾಮದ ಅನ್ಯ ಜಾತಿಯ ಯುವತಿಯನ್ನು ಪ್ರೀತಿಸುತ್ತಿದ್ದ. ತಾನು ಹೇಳಿದ ಕೆಲಸವನ್ನು ಮಾಡದಿದ್ದರೆ ನೀನು ಅನ್ಯಜಾತಿಯ ಹುಡುಗಿಯ ಪ್ರೀತಿಸುತ್ತಿರುವ ವಿಚಾರವನ್ನು ಊರಿಗೆಲ್ಲ ಪುಕಾರು ಮಾಡುತ್ತೇನೆ ಎಂದು ಬ್ಲಾಕ್ ಮೇಲ್ ಮಾಡಿದ್ದ. ಹೀಗಾಗಿ ಕೃಷ್ಣಾ ಮಾದರ್ ತನ್ನ ಸ್ನೇಹಿತ ನಾಗನಗೌಡ ಪಾಟೀಲ್ ಜೊತೆ ಸೇರಿ ಕೃತ್ಯ ಮಾಡಲು ಸಜ್ಜಾಗುತ್ತಾರೆ. ಮುನವಳ್ಳಿಯಿಂದ ವಿಷ ತೆಗೆದುಕೊಂಡು ಬಂದು ಅದೇ ಶಾಲೆಯ ಮಗುವಿಗೆ 500 ರೂಪಾಯಿ ದುಡ್ಡು ನೀಡಿ ಅದೂ ಅಲ್ಲದೆ ತಿನ್ನಲು ಕುರ್ಕುರೆ ಹಾಗೂ ಚಾಕಲೇಟ್ ನೀಡಿ ನೀರಿನ ಟ್ಯಾಂಕ್‌ಗೆ ಹಾಕುವಂತೆ ಹೇಳಿದ್ದರು. ಕೃಷ್ಣಾ ಮಾದರ್ ಹಾಗೂ ನಾಗನಗೌಡ ಹೇಳಿದಂತೆ ಆ ಅಪ್ರಾಪ್ತ ಮಗು ನೀರಿನ ಟ್ಯಾಂಕ್‌ಗೆ ವಿಷ ಬೆರೆಸಿತ್ತು. ಇದನ್ನೂ ಓದಿ: ಭಾರತದ ಮೇಲೆ ಅಮೆರಿಕ 25% ಟ್ಯಾರಿಫ್ – ‘ಸ್ವದೇಶಿ’ ವಸ್ತು ಖರೀದಿಸಿ: ಮೋದಿ ಕರೆ
ವಿಷ ಬೆರೆಸಿದ ನಂತರ ಮಕ್ಕಳು ಅದೇ ನೀರು ಕುಡಿದು ಜುಲೈ 14 ರಂದು ಅಸ್ವಸ್ಥರಾಗಿದ್ದರು. ಅಸ್ವಸ್ಥರಾದ 11 ಮಕ್ಕಳನ್ನು ಕೂಡಲೇ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದ್ದು, ಸದ್ಯ ಮಕ್ಕಳು ಚೇತರಿಸಿಕೊಂಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಾಗರ್ ಪಾಟೀಲ್, ಕೃಷ್ಣಾ ಮಾದರ್, ಹಾಗೂ ನಾಗನಗೌಡ ಪಾಟೀಲ್‌ರನ್ನು ಬಂಧಿಸಿದ್ದಾರೆ. ಈ ಕುರಿತು ಸವದತ್ತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಮಾಧ್ಯಮಗಳಿಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ್ ಗುಳೇದ ಮಾಹಿತಿ ನೀಡಿದರು. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ – ಎರಡು ಮಕ್ಕಳಿಗೆ ವಿಷವುಣಿಸಿ ಪತಿ ಆತ್ಮಹತ್ಯೆ
ಚಂಢೀಗಡ: ವ್ಯಕ್ತಿಯೊಬ್ಬ 10 ವರ್ಷಗಳ ಕಾಲ ಜೊತೆಗಿದ್ದ ಪ್ರೇಯಸಿಯನ್ನು ಆಕೆ ಮುಸ್ಲಿಂ ಎಂಬ ಕಾರಣಕ್ಕೆ ಹತ್ಯೆ ಮಾಡಿದ ಘಟನೆ ಹರಿಯಾಣದ (Haryana) ಫರಿದಾಬಾದ್‌ನಲ್ಲಿ ನಡೆದಿದೆ.
ಹತ್ಯೆಯಾದ ಯುವತಿಯನ್ನು ಶಿಬ್ಬಾ (33) ಎಂದು ಗುರುತಿಸಲಾಗಿದೆ. ಕೊಲೆ ಆರೋಪಿಯನ್ನು ಹರಿಯಾಣ ಮೂಲದ ಆಕೆಯ ಗೆಳೆಯ ದೀಪಕ್ ಎಂದು ಗುರುತಿಸಲಾಗಿದೆ. ಧಾರ್ಮಿಕ ಭಿನ್ನಾಭಿಪ್ರಾಯ ಮತ್ತು ಮದುವೆಯಾಗಲು ಒತ್ತಡ ಹೇರಿದ್ದಕ್ಕೆ ಕೊಲೆ ಮಾಡಿದ್ದಾಗಿ ಆತ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ದೆಹಲಿ (Delhi) ಮೂಲದ ಬದರ್ಪುರದ ಮೋಹನ್ ಬಾಬಾ ನಗರದ ನಿವಾಸಿ ಶಿಬ್ಬಾ ಖಾಸಗಿ ಬ್ಯಾಂಕಿನಲ್ಲಿ ವಿಮಾ ಸಲಹೆಗಾರರಾಗಿ ಕೆಲಸ ಮಾಡುತ್ತಿದ್ದರು. ಆಕೆ ಜು.24ರ ಬೆಳಿಗ್ಗೆ, ತಾನು ಎಂದಿನಂತೆ ಕಚೇರಿಗೆ ಹೋಗುತ್ತಿರುವುದಾಗಿ ತನ್ನ ಕುಟುಂಬಕ್ಕೆ ತಿಳಿಸಿ ಹೋಗಿದ್ದಳು. ತಾಯಿಗೆ ಮಧ್ಯಾಹ್ನ ಕರೆ ಮಾಡಿ ಮಾತಾಡಿದ್ದಳು. ಆದರೆ ರಾತ್ರಿಯ ಹೊತ್ತಿಗೆ, ಅವಳು ಮನೆಗೆ ವಾಪಸ್ ಆಗಿರಲಿಲ್ಲ. ಫೋನ್ ಸಹ ಸ್ವಿಚ್ ಆಫ್ ಆಗಿತ್ತು.
ಆ ದಿನ ಶಿಬ್ಬಾ ಒಬ್ಬ ವ್ಯಕ್ತಿಯೊಂದಿಗೆ ಹೊಟೆಲ್‌ಗೆ ತೆರಳಿರುವುದು ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಪರಿಶೀಲಿಸಿದಾಗ ಆತ ದೀಪಕ್ ಎಂದು ಗುರುತಿಸಲಾಗಿತ್ತು. ಆ ಸಂಜೆ ಅವನು ಒಬ್ಬಂಟಿಯಾಗಿ ಹೋಟೆಲ್‌ನಿಂದ ಹೋಗುತ್ತಿರುವುದು ಸಹ ಸಿಸಿಟಿವಿಯಲ್ಲಿ ಸೆರೆಯಾಗಿತ್ತು. ದೀಪಕ್ ಮೊಬೈಲ್ ಫೋನ್ ಮೂಲಕ ಆತನ ಸ್ಥಳವನ್ನು ಪತ್ತೆಹಚ್ಚಿದ ಪೊಲೀಸರು, ಆತನನ್ನು ದೆಹಲಿಯ ನಿಜಾಮುದ್ದೀನ್ ಪ್ರದೇಶದಲ್ಲಿ ಬಂಧಿಸಿದ್ದಾರೆ. ಪ್ರಕರಣವನ್ನು ಕ್ರೈಂ ಬ್ರಾಂಚ್‌ಗೆ ಹಸ್ತಾಂತರಿಸಿದ್ದಾರೆ. ಆರೋಪಿಯನ್ನು ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಲಾಗಿದೆ.
ವಿಚಾರಣೆಯ ಸಮಯದಲ್ಲಿ ಮಹಿಳೆ ಮದುವೆಗೆ ಒತ್ತಡ ಹೇರುತ್ತಿದ್ದ ಕಾರಣ ಕತ್ತುಹಿಸುಕಿ ಆಕೆಯನ್ನು ಕೊಂದಿದ್ದಾಗಿ ಒಪ್ಪಿಕೊಂಡಿದ್ದಾನೆ. ಅಲ್ಲದೇ, ಆಕೆ ಮುಸ್ಲಿಂ ಆಗಿರುವುದರಿಂದ ಸಂಬಂಧವನ್ನು ಮುಂದುವರಿಸಲು ಇಷ್ಟವಿರಲಿಲ್ಲ ಎಂದು ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.