Tag: Muslim College

  • ಪ್ರತ್ಯೇಕ ಮುಸ್ಲಿಂ ಕಾಲೇಜಿನ ಅವಶ್ಯಕತೆಯಿಲ್ಲ: ಸಿಎಂ ಇಬ್ರಾಹಿಂ

    ಪ್ರತ್ಯೇಕ ಮುಸ್ಲಿಂ ಕಾಲೇಜಿನ ಅವಶ್ಯಕತೆಯಿಲ್ಲ: ಸಿಎಂ ಇಬ್ರಾಹಿಂ

    ಕಲಬುರಗಿ: ಮುಸ್ಲಿಂ ವಿದ್ಯಾರ್ಥಿಗಳಿಗೆ ವಕ್ಫ್‌ ಬೋರ್ಡ್‌ನಿಂದ ಪ್ರತ್ಯೇಕ ಕಾಲೇಜು ಸ್ಥಾಪನೆ ಮಾಡುವುದು ತಪ್ಪು. ಪ್ರತ್ಯೇಕ ಮುಸ್ಲಿಂ ಕಾಲೇಜಿನ(Muslim College) ಅವಶ್ಯಕತೆ ಇಲ್ಲ ಎಂದು ಜೆಡಿಎಸ್(JDS) ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ(CM Ibrahim) ಅವರು ಅಭಿಪ್ರಾಯಪಟ್ಟರು.

    ನಗರದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ವಕ್ಫ್‌ಬೋರ್ಡ್‌ನಿಂದ(waqf Board) ಕಾಲೇಜು ಮಾಡಬಾರದು ಅಂತೇನಿಲ್ಲ. ಮುಸ್ಲಿಂ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕಾಲೇಜು ಮಾಡುವುದು ಸರಿಯಲ್ಲ. ಎಲ್ಲ ಧರ್ಮದ ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವ ಅಧಿಕಾರವಿದೆ. ಕೇವಲ ಒಂದೇ ಧರ್ಮದ ವಿದ್ಯಾರ್ಥಿಗಳಿಗೆ ಕಾಲೇಜು ಸ್ಥಾಪನೆ ಎಂದರೆ ನಾನೇ ಮೊದಲು ಹೋರಾಟಕ್ಕೆ ಇಳಿಯುತ್ತೇನೆ ಎಂದು ಹೇಳಿದರು. ಇದನ್ನೂ ಓದಿ: ಮುಸ್ಲಿಮರು ಎಲ್ಲ ಹಿಂದೂಗಳನ್ನ ಕೊಲ್ಲಬಹುದಿತ್ತು – ನಿವೃತ್ತ ಜಡ್ಜ್ ವಸಂತ ಮುಳಸಾವಳಗಿ

    bjp - congress

    ನಾನು ಹಿಂದೆ ಮಠದಲ್ಲಿ ಓದಿದ್ದೇನೆ. ಅಲ್ಲಿ ಯಾವುದೇ ರೀತಿಯ ಭೇದ ಬಾವ ಇರಲಿಲ್ಲ. ಆದರೆ ಮುಸ್ಲಿಮರಿಗೆ ಪ್ರತ್ಯೇಕ ಕಾಲೇಜು ವಿಚಾರದ ಮೂಲಕ ಬಿಜೆಪಿಯವರು ವಿನಾಕಾರಣ ವಿವಾದ ಹುಟ್ಟು ಹಾಕುತ್ತಿದ್ದಾರೆ ಎಂದು ಕಿಡಿಕಾರಿದರು.

    ಬಿಜೆಪಿ(BJP) ಹಾಗೂ ಕಾಂಗ್ರೆಸ್‌ನಲ್ಲಿ(Congress) ಪಳಗಿರುವವರು ರೌಡಿಗಳು ಇದ್ದಾರೆ. ರೌಡಿಗಳನ್ನು ಬಿಜೆಪಿ ಅವರು ವೈಭವೀಕರಣ ಮಾಡುತ್ತಿದ್ದಾರೆ. ಇದು ರಾಜ್ಯದ ದುರ್ದೈವದ ಸಂಗತಿ. ಜನತಾದಳಕ್ಕೂ ರೌಡಿಸಂ ಪದಕ್ಕೆ ಸಂಬಂಧವೇ ಇಲ್ಲ ಎಂದು ಇಬ್ರಾಹಿಂ ಹೇಳಿದರು.


    ರೌಡಿಗಳು ರಕ್ಷಣೆಗಾಗಿ ರಾಜಕೀಯ ಪ್ರವೇಶ ಮಾಡುತ್ತಿದ್ದಾರೆ. 40 ರಿಂದ 50 ಕೋಟಿ ಖರ್ಚು ಮಾಡಿ ಚುನಾವಣೆಯಲ್ಲಿ ಗೆಲ್ಲುತ್ತಾರೆ. ಬಳಿಕ ಸೇಫ್ ಆಗಿ ಇರುವುದಕ್ಕೆ ಪ್ರಯತ್ನ ಮಾಡುತ್ತಾರೆ. ರೌಡಿ ಶೀಟ್‌ ಹಾಕಿರುವ ಪೊಲೀಸರೇ ರೌಡಿಗಳಿಗೆ ಸಲ್ಯೂಟ್ ಹೊಡೆಯುವ ಪರಿಸ್ಥಿತಿ ಉಂಟಾಗುತ್ತದೆ. ಅದು ಹೇಗೆ ಸಾಧ್ಯ? ಅದಕ್ಕೆ ಸಮಾಜ ಅವಕಾಶ ಕೊಡಬಾರದು ಎಂದರು.

    Live Tv
    [brid partner=56869869 player=32851 video=960834 autoplay=true]

  • ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಇಲ್ಲ: ಶಶಿಕಲಾ ಜೊಲ್ಲೆ

    ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಇಲ್ಲ: ಶಶಿಕಲಾ ಜೊಲ್ಲೆ

    ಬೆಂಗಳೂರು: ಸರ್ಕಾರದಿಂದ ಪ್ರತ್ಯೇಕವಾಗಿ ಮುಸ್ಲಿಂ ಕಾಲೇಜು(Muslim College) ಪ್ರಾರಂಭ ಮಾಡುವ ಪ್ರಸ್ತಾವನೆ ಇಲ್ಲ ಎಂದು ಅಲ್ಪಸಂಖ್ಯಾತ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ(Shashikala Jolle) ಸ್ಪಷ್ಟಪಡಿಸಿದ್ದಾರೆ.

    ಪ್ರತ್ಯೇಕವಾಗಿ ಮುಸ್ಲಿಂ ಹುಡುಗಿಯರಿಗೆ 10 ಮುಸ್ಲಿಂ ಕಾಲೇಜು ಸ್ಥಾಪನೆ ಮಾಡಲಾಗುತ್ತದೆ ಎಂಬ ವಿಚಾರಕ್ಕೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ ನೀಡಿದ್ದಾರೆ. ಅಲ್ಲದೆ ಕಾಲೇಜು ಸ್ಥಾಪನೆ ಮಾಡುತ್ತೇವೆ ಎಂದು ಹೇಳಿಕೆ ನೀಡಿದ್ದ ವಕ್ಫ್ ಬೋರ್ಡ್ ಅಧ್ಯಕ್ಷರಿಗೆ ಎಚ್ಚರಿಕೆ ಕೊಟ್ಟಿದ್ದಾರೆ.

    ಸರ್ಕಾರದಿಂದ ಪ್ರತ್ಯೇಕ ಮುಸ್ಲಿಂ ಕಾಲೇಜು ಸ್ಥಾಪನೆ ಮಾಡುವುದಿಲ್ಲ. ಪ್ರತ್ಯೇಕ ಕಾಲೇಜು ಪ್ರಾರಂಭ ಮಾಡುವ ಪ್ರಸ್ತಾವ ಸರ್ಕಾರದ ಮುಂದೆ ಇಲ್ಲ. ಸರ್ಕಾರದ ಮುಂದೆ ಕಡತವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿಗೆ ಎಂಟ್ರಿ ಕೊಟ್ಟಿವೆ 4 ಚಿರತೆಗಳು? – ಕೋಡಿಪಾಳ್ಯ ಬಳಿಯ 5 ಶಾಲೆಗಳಿಗೆ ಆತಂಕ

    ಈಗಾಗಲೇ ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗಿದೆ ಎಂಬುದು ಸತ್ಯಕ್ಕೆ ದೂರವಾದ ವಿಷಯ. ವಕ್ಫ್ ಬೋರ್ಡ್ ಅಧ್ಯಕ್ಷ ಹೇಳಿಕೆ ಅವರ ವೈಯಕ್ತಿಕ ಹೇಳಿಕೆ. ವಕ್ಫ್ ಬೋರ್ಡ್ ಅಧ್ಯಕ್ಷರ ಜೊತೆ ಮಾತನಾಡಿದ್ದೇನೆ. ವಿವಾದಕ್ಕೆ ಸ್ಪಷ್ಟನೆ ನೀಡಲು ಸೂಚನೆ ನೀಡಿದ್ದೇನೆ ಎಂದು ಶಶಿಕಲಾ ಜೊಲ್ಲೆ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]