Tag: Muslim Family

  • ಮಥುರಾದಲ್ಲಿ ಮುಸ್ಲಿಂ ಕುಟುಂಬದ 8 ಮಂದಿ ಹಿಂದೂ ಧರ್ಮಕ್ಕೆ ಮತಾಂತರ

    ಮಥುರಾದಲ್ಲಿ ಮುಸ್ಲಿಂ ಕುಟುಂಬದ 8 ಮಂದಿ ಹಿಂದೂ ಧರ್ಮಕ್ಕೆ ಮತಾಂತರ

    ಲಕ್ನೋ: ಮಥುರಾದ (Mathura) ಜಮುನಾಪರ್ ಪ್ರದೇಶದ ಮುಸ್ಲಿಂ ಕುಟುಂಬದ (Muslim Family) ಎಂಟು ಸದಸ್ಯರು ವೃಂದಾವನದ ಆಶ್ರಮದಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಹಿಂದೂ ಧರ್ಮಕ್ಕೆ (Hinduism) ಮತಾಂತರ ಆಗಿದ್ದಾರೆ.

    ಮುಸ್ಲಿಂ ಕುಟುಂಬ ಸದಸ್ಯರು ಕೇಸರಿ ಬಣ್ಣದ ವಸ್ತ್ರಗಳನ್ನು ಧರಿಸಿದ್ದರು. ಪುರೋಹಿತರ ಸಮ್ಮುಖದಲ್ಲಿ ಕುಟುಂಬವು ಒಂದು ಗಂಟೆಗೂ ಹೆಚ್ಚು ಕಾಲ ಹವನ-ಯಜ್ಞ ಆಚರಣೆಯನ್ನು ಮಾಡಿತು. ಇದನ್ನೂ ಓದಿ: ಚಾರ್‌ಧಾಮ್ ಯಾತ್ರೆಗೆ ಚಾಲನೆ – ಶಾಸ್ತ್ರೋಕ್ತವಾಗಿ ಕೇದಾರನಾಥ ಧಾಮದ ಬಾಗಿಲು ಓಪನ್

    ಕುಟುಂಬದ ಯಜಮಾನ ಜಾಕೀರ್‌ ಎಂಬಾತ ಜಗದೀಶ್‌ ಎಂದು ಹೆಸರು ಬದಲಾಯಿಸಿಕೊಂಡರು. ‘ತಮ್ಮ ಮೂಲ ಗುರುತು ಹಿಂದೂ ಎಂಬ ನಂಬಿಕೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ನಮ್ಮ ಪೂರ್ವಜರು ಮೊಘಲರ ಯುಗದವರೆಗೂ ಹಿಂದೂಗಳಾಗಿದ್ದರು. ಬಳಿಕ ಒತ್ತಡದಿಂದಾಗಿ ಇಸ್ಲಾಂಗೆ ಮತಾಂತರಗೊಂಡರು. ನಾನು ಕಾಳಿ ದೇವಿಯನ್ನು ಪೂಜಿಸುತ್ತೇನೆ ಎಂದು ತಿಳಿಸಿದ್ದಾರೆ.

    ಹಿಂದೂ ಧರ್ಮಕ್ಕೆ ಮರಳುವ ಆಲೋಚನೆ ಕಳೆದ ಮೂರು ವರ್ಷಗಳಿಂದ ಕುಟುಂಬದ ಮನಸ್ಸಿನಲ್ಲಿತ್ತು. ‘ಹಿಂದೂ ಧರ್ಮಕ್ಕೆ ಮತಾಂತರಗೊಳ್ಳುವಂತೆ ನಮಗೆ ಯಾರೂ ಒತ್ತಡ ಹಾಕಿಲ್ಲ. ಯಾರ ಪ್ರಚೋದನೆಯೂ ಇಲ್ಲ. ಹಿಂದೂ ಧರ್ಮದ ನಂಬಿಕೆಯೊಂದಿಗೆ ಈ ಹೆಜ್ಜೆ ಇಟ್ಟಿದ್ದೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಸೋನಿಯಾ, ರಾಹುಲ್‌ ಗಾಂಧಿಗೆ ದೆಹಲಿ ಕೋರ್ಟ್‌ ನೋಟಿಸ್‌

    ವೃಂದಾವನದ ಶ್ರೀ ಜಿ ವಾಟಿಕಾ ಕಾಲೋನಿಯಲ್ಲಿರುವ ಭಾಗವತ್ ಧಾಮ ಆಶ್ರಮದಲ್ಲಿ ಮತಾಂತರ ನಡೆಯಿತು. ಬಲಪಂಥೀಯ ಹಿಂದೂ ಸಂಘಟನೆಯಾದ ಹಿಂದೂ ಯುವ ವಾಹಿನಿ ಇದಕ್ಕೆ ನೆರವು ನೀಡಿತು. ಜಗದೀಶ್ ಜೊತೆಗೆ, ಅವರ ಪತ್ನಿ, ಪುತ್ರರು, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಎಲ್ಲರೂ ಸಮಾರಂಭದಲ್ಲಿ ಭಾಗವಹಿಸಿದ್ದರು.

  • ವಿಧಾನಸೌಧದ ಮುಂದೆ ಹೈಡ್ರಾಮ; ಸೀಮೆ ಎಣ್ಣೆ ಸುರಿದುಕೊಂಡು ಮುಸ್ಲಿಂ ಕುಟುಂಬ ಆತ್ಮಹತ್ಯೆಗೆ ಯತ್ನ

    ವಿಧಾನಸೌಧದ ಮುಂದೆ ಹೈಡ್ರಾಮ; ಸೀಮೆ ಎಣ್ಣೆ ಸುರಿದುಕೊಂಡು ಮುಸ್ಲಿಂ ಕುಟುಂಬ ಆತ್ಮಹತ್ಯೆಗೆ ಯತ್ನ

    – ಸಚಿವ ಜಮೀರ್ ನಮೆ ನ್ಯಾಯ ಕೊಡಿಸಿಲ್ಲ – ನೊಂದ ದಂಪತಿ ಆರೋಪ

    ಬೆಂಗಳೂರು: ವಿಧಾನಸೌಧದ (Vidhana Soudha) ಮುಂಭಾಗದಲ್ಲೇ ಮುಸ್ಲಿಂ ಕುಟುಂಬವೊಂದು (Muslim family) ಸೀಮೆ ಎಣ್ಣೆ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಗರದಲ್ಲಿ ನಡೆದಿದೆ.

    ಇಲ್ಲಿನ ಜೆಜೆಆರ್ ನಗರದ ನಿವಾಸಿ ಶಾಯಿಸ್ತಾ ಬಾನು (48) ಹಾಗೂ ಮೊಹಮದ್ ಮುನಾಯಿದ್ ಉಲ್ಲಾ ದಂಪತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ತಲೆ ಮೇಲೆ ಸೀಮೆ ಎಣ್ಣೆ ಸುರಿದುಕೊಂಡು ಭಾರೀ ಹೈಡ್ರಾಮಾ ಸೃಷ್ಟಿಸಿದ್ದಾರೆ. ಈ ವೇಳೆ ಪೊಲೀಸರು ಹಾಗೂ ದಂಪತಿಗಳ ನಡುವೆ ತಳ್ಳಾಟ, ನೂಕಾಟವೂ ನಡೆದಿದೆ. ಕೊನೆಗೆ ಇನ್ಸ್‌ಪೆಕ್ಟರ್‌ ಕುಮಾರಸ್ವಾಮಿ ಆತ್ಮಹತ್ಯೆಗೆ ಯತ್ನಿಸಿದ ದಂತಪತಿಗಳನ್ನ ತಡೆದಿದ್ದಾರೆ. ಇದನ್ನೂ ಓದಿ: ವಿವಾದಾತ್ಮಕ ಹೇಳಿಕೆ ನೀಡಬೇಡಿ, ವಿಪಕ್ಷಗಳ ಗಿಮಿಕ್‍ಗೆ ಸಿಲುಕಿಕೊಳ್ಳಬೇಡಿ: ಮೋದಿ ಸಲಹೆ

    ಆರೋಪ ಏನು?
    ಆತ್ಮಹತ್ಯೆಗೆ ಯತ್ನಿಸಿದ ಶಾಯಿಸ್ತಾ ದಂಪತಿಗೆ ಸೇರಿದ 3 ಕೋಟಿ ರೂ. ಬಿಲ್ಡಿಂಗ್ ಅನ್ನು ಕೇವಲ 1.41 ಕೋಟಿ ರೂ.ಗೆ ಹರಾಜು ಹಾಕಿದ್ದಾರೆ. ನಮಗೆ ನ್ಯಾಯ ಕೊಡಿಸಬೇಕು. ಕಳೆದ ಎರಡು ವರ್ಷಗಳಿಂದ ಸಚಿವ ಜಮೀರ್ ಅಹ್ಮದ್ ಖಾನ್ (zameer ahmed khan) ಅವರ ಮನೆಗೆ ಅಲೆಯುತ್ತಿದ್ದೇವೆ. ನಮಗೆ ಜಮೀರ್ ಅವರು ನ್ಯಾಯ ಕೊಡಿಸಿಲ್ಲ ಎಂದು ದಂಪತಿ ಆರೋಪಿಸಿದ್ದಾರೆ. ಇದನ್ನೂ ಓದಿ: ಮೈಲುಗಲ್ಲು ಸಾಧಿಸುವತ್ತ ಹಿಟ್‌ಮ್ಯಾನ್ – ಕೊಹ್ಲಿಯನ್ನ ಹಿಂದಿಕ್ಕಿ ನಂ.1 ಪಟ್ಟಕ್ಕೇರುತ್ತಾರಾ ರೋಹಿತ್‌?

    ಕಾರಣ ಏನು?
    2016ರಲ್ಲಿ ಶುಂಠಿ ಬೆಳೆಯಲು ಬೆಂಗಳೂರು ಕೋ ಆಪರೇಟೀವ್ ಬ್ಯಾಂಕ್ ನಿಂದ 50 ಲಕ್ಷ ರೂ. ಸಾಲ ಪಡೆದುಕೊಂಡಿದ್ದೆವು. ಅಂದಿನಿಂದ ಈ ವರೆಗೆ ಬಡ್ಡಿ ಸೇರಿ 90 ಲಕ್ಷ ರೂ. ಮರುಪಾವತಿಸಿದ್ದೇವೆ. ಆರ್ಥಿಕ ಸಮಸ್ಯೆಯಾಗುತ್ತಿದ್ದ ಕಾರಣ ಬಡ್ಡಿ ದರ ಕಡಿಮೆ ಮಾಡಿಸಿಕೊಡುವಂತೆ ಸಚಿವ ಜಮೀರ್ ಅಹ್ಮರ್ ಅವರ ಬಳಿ ಹೋಗಿದ್ದೆವು. ಆದ್ರೆ ಯಾವುದೇ ಪ್ರಯೋಜನವಾಗಿಲ್ಲ. ಕೊನೆಗೆ ಬ್ಯಾಂಕ್‌ನಿಂದ ನಮಗೆ ಸೇರಿದ್ದ 3 ಕೋಟಿ ರೂ. ಮೌಲ್ಯದ ಬಿಲ್ಡಿಂಗ್ ಅನ್ನು 1.41 ಕೋಟಿ ರೂ.ಗಳಿಗೆ ಹರಾಜು ಹಾಕಿದ್ದಾರೆ. ನಮಗೆ ನ್ಯಾಯ ಕೊಡಿಸಿ ಎಂದು ಶಾಯಿಸ್ತಾ ದಂಪತಿ ಪ್ರತಿಭಟಿಸಿದ್ದಾರೆ.

  • ಕೋಮು ಸಂಘರ್ಷದ ಮಧ್ಯೆ ಸಾಮರಸ್ಯ ಮೆರೆದ ಮುಸ್ಲಿಂ ಕುಟುಂಬ – ಗಣೇಶ ಪ್ರತಿಷ್ಠಾಪಿಸಿ ಹಬ್ಬ ಆಚರಣೆ

    ಕೋಮು ಸಂಘರ್ಷದ ಮಧ್ಯೆ ಸಾಮರಸ್ಯ ಮೆರೆದ ಮುಸ್ಲಿಂ ಕುಟುಂಬ – ಗಣೇಶ ಪ್ರತಿಷ್ಠಾಪಿಸಿ ಹಬ್ಬ ಆಚರಣೆ

    ಲಕ್ನೋ: ಕೋಮು ಸಂಘರ್ಷದ ನಡುವೆ ಮುಸ್ಲಿಂ ಕುಟುಂಬವೊಂದು ಸಾಮರಸ್ಯವನ್ನು ಮೆರೆದಿದೆ. ಗಣೇಶ ಹಬ್ಬದ ಹಿನ್ನೆಲೆ ಅಲಿಘರ್‌ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು 7 ದಿನಗಳ ಕಾಲ ಮನೆಯಲ್ಲಿ ಗಣಪತಿಯನ್ನು ಕೂರಿಸಿ ಹಬ್ಬ ಆಚರಿಸಿದ್ದಾರೆ.

    ರೋರವಾರ ಪೊಲೀಸ್ ವೃತ್ತದ ಎಡಿಎ ಕಾಲೋನಿ ನಿವಾಸಿ ರೂಬಿ ಆಸಿಫ್ ಖಾನ್ ಎಂಬವರು ತಮ್ಮ ಮನೆಗೆ ಗಣೇಶ ಮೂರ್ತಿಯನ್ನು ತಂದು ಸಕಲ ವಿಧಿ ವಿಧಾನಗಳೊಂದಿಗೆ ಗಣೇಶನನ್ನು ಪ್ರತಿಷ್ಠಾಪಿಸಿದ್ದಾರೆ. ಇದನ್ನೂ ಓದಿ: ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ – ಹುಬ್ಬಳ್ಳಿಯಲ್ಲಿ ಕಿಂಗ್‌ಪಿನ್‌ ಅರೆಸ್ಟ್!

    ಈ ಬಗ್ಗೆ ಮಾಧ್ಯಮದವರೊಂದಿಗೆ ಮಾತನಾಡಿದ ಮಹಿಳೆ, ನೀರಿನಲ್ಲಿ ಮುಳುಗಿಸುವ ಮುನ್ನ 7 ದಿನಗಳ ಕಾಲ ಗಣೇಶನ ಮೂರ್ತಿಯನ್ನು ಇಟ್ಟಿರುತ್ತೇವೆ. ನಾನು ಮತ್ತು ನನ್ನ ಕುಟುಂಬಸ್ಥರು ಪ್ರತಿದಿನ ಪೂಜೆ ಮಾಡಿ, ದೇವರಿಗೆ ಮೋದಕವನ್ನು ನೈವೇದ್ಯೆ ಮಾಡಿ ಇಡುತ್ತೇವೆ. ನನಗೆ ಗಣೇಶನ ಮೇಲೆ ಅಪಾರವಾದ ನಂಬಿಕೆ ಇದೆ. ಅಲ್ಲದೇ ಗಣೇಶ ಕೂರಿಸಲು ನನ್ನ ಮನೆಯವರು ವಿರೋಧ ವ್ಯಕ್ತಪಡಿಸಲಿಲ್ಲ. ನಾನು ಮತ್ತು ನನ್ನ ಕುಟುಂಬ ಎಲ್ಲಾ ಹಬ್ಬಗಳನ್ನು ಧರ್ಮದ ಭೇದವಿಲ್ಲದೆ ಆಚರಿಸುತ್ತೇವೆ. ನನ್ನ ಪತಿ ಆಸಿಫ್ ಖಾನ್ ಅವರು ಕೂಡ ನನ್ನ ನಂಬಿಕೆಯನ್ನು ಬೆಂಬಲಿಸುತ್ತಾರೆ ಮತ್ತು ಇಡೀ ಕುಟುಂಬ ಹಬ್ಬವನ್ನು ಆಚರಿಸುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮನವಿ ಸಲ್ಲಿಸಲು ಬಂದ ಮಹಿಳೆಗೆ ಗದರಿದ ಅರವಿಂದ ಲಿಂಬಾವಳಿ

    ಗಣೇಶ ಚತುರ್ಥಿ ಹಿಂದೂ ಪಂಚಾಂಗದ ಪ್ರಕಾರ ತಿಂಗಳ ಭಾದ್ರಪದದ ನಾಲ್ಕನೇ ದಿನದಂದು ಪ್ರಾರಂಭವಾಗುತ್ತದೆ. ಮಹಾರಾಷ್ಟ್ರ, ಪಶ್ಚಿಮ ಮತ್ತು ದಕ್ಷಿಣ ಭಾರತದ ಹಲವೆಡೆ ಗಣೇಶನ ಆಶೀರ್ವಾದವನ್ನು ಪಡೆಯಲು ಲಕ್ಷಾಂತರ ಭಕ್ತರು ಒಟ್ಟಿಗೆ ಸೇರಿ ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಾರೆ.

    Live Tv
    [brid partner=56869869 player=32851 video=960834 autoplay=true]

  • ಮೊಮ್ಮಗನಿಗೆ ಶ್ರೀಕೃಷ್ಣನ ವೇಷ ಹಾಕಿ ಮುಸ್ಲಿಂ ಕುಟುಂಬದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಮೊಮ್ಮಗನಿಗೆ ಶ್ರೀಕೃಷ್ಣನ ವೇಷ ಹಾಕಿ ಮುಸ್ಲಿಂ ಕುಟುಂಬದಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆ

    ಬೆಳಗಾವಿ: ನಾಡಿನಾದ್ಯಂತ ಶ್ರೀಕೃಷ್ಣನ ಜನ್ಮಾಷ್ಟಮಿ ಹಿನ್ನೆಲೆ ಬೆಳಗಾವಿ ಸದಾಶಿವ ನಗರದಲ್ಲಿ ಮುಸ್ಲಿಂ ಕುಟುಂಬವೊಂದು ಹಿಂದೂ-ಮುಸ್ಲಿಂ ಎಂಬ ಬೇಧ-ಭಾವ ಮಾಡದೇ ತಮ್ಮ ಮುದ್ದಿನ ಮೊಮ್ಮಗನಿಗೆ ಕೃಷ್ಣನ ವೇಷಭೂಷಣ ಹಾಕಿ ಹಿಂದೂ-ಮುಸ್ಲಿಂ ಭಾಯಿ ಭಾಯಿ ಎನ್ನುವ ಸಂದೇಶವನ್ನು ರವಾನಿಸಿದ್ದಾರೆ.

    ಸದಾಶಿವ ನಗರದ ದಸ್ತಗೀರ್ ಮೊಕಾಶಿ ಎಂಬುವವರು ತಮ್ಮ ಮುದ್ದಿನ ಮೊಮ್ಮಗ ಅದ್ನಾನ್‍ ಆಸೀಪ್ ಮೊಕಾಶಿಗೆ ಕೃಷ್ಣನ ವೇಷಭೂಷಣ ಹಾಕಿ ಶ್ರೀಕೃಷ್ಣ ಜನ್ಮಾಷ್ಟಮಿ ಆಚರಿಸಿದ್ದಾರೆ. ಶ್ರೀಕೃಷ್ಣನಂತೆ ಪೋಷಾಕು ಹಾಕಿ ಮಗುವಿನ ಕೈಗೆ ಕೊಳಲು ನೀಡಿ ಕೃಷ್ಣನ ಜನ್ಮಾಷ್ಟಮಿ ಆಚರಣೆ ಮಾಡಿದ್ದಾರೆ. ಶ್ರೀಕೃಷ್ಣನ ವೇಷಧರಿಸಿದ ಅದ್ವಾನ್ ಆಸೀಪ್ ಮೊಕಾಶಿ ನಗರದ ಲವ್ ಡೇಲ್  ಶಾಲೆಯಲ್ಲಿ ನಡೆದ ಕೃಷ್ಣನ ಪೋಷಾಕು ಸ್ಪರ್ಧೆಯಲ್ಲಿ ಭಾಗವಹಿಸಿ ಎಲ್ಲರ ಗಮನ ಸೆಳೆದಿದ್ದಾನೆ. ಮುಸ್ಲಿಂ ಕುಟುಂಬದ ಸಾಮರಸ್ಯದ ಮನಸ್ಥಿತಿಗೆ ನಾಡಿನೆಲ್ಲೆಡೆ ಮೆಚ್ಚುಗೆ ವ್ಯಕ್ತವಾಗಿದೆ. ಇದನ್ನೂ ಓದಿ: ಅಪ್ಪು ಸಮಾಧಿಗೆ ಭೇಟಿ ನೀಡಿ ಪುಷ್ಪ ನಮನ ಸಲ್ಲಿಸಿದ ನಟ ವಿಜಯ್ ದೇವರಕೊಂಡ

    ಹಲವು ಜಾತಿ-ಧರ್ಮಗಳ ವೈವಿಧ್ಯಮಯ ರಾಷ್ಟ್ರ ಭಾರತ. ಐಕ್ಯತೆಯಲ್ಲಿ ವಿಶೇಷತೆ ಕಾಣುವ ದೇಶದಲ್ಲಿ ಬೆಳಗಾವಿಯ ಮುಸ್ಲಿಂ ಕುಟುಂಬ ಭಾವೈಕ್ಯ ಸಂದೇಶ ಸಾರಿದೆ. ಇತ್ತೀಚಿನ ದಿನಗಳಲ್ಲಿ ಧರ್ಮ-ಧರ್ಮಗಳ ನಡುವೆ ಒಡಕು ಕಾಣುತ್ತಿದೆ. ಸಾಮರಸ್ಯವನ್ನು ಹದಗೆಡಿಸುತ್ತಿರುವ ಕೆಲಸಗಳೂ ನಡೆಯುತ್ತಿವೆ. ಜಾತಿ-ಜಾತಿಗಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಆಗುತ್ತಿದೆ. ಇದಕ್ಕೆ ತದ್ವಿರುದ್ಧವಾಗಿರುವ ಬೆಳಗಾವಿಯ ಈ ಮುಸ್ಲಿಂ ಕುಟುಂಬ ರಾಮ್ ರಹೀಮ್ ಎಲ್ಲರೂ ಒಂದೇ ಎಂಬ ಸಂದೇಶ ನೀಡಿದೆ. ಇದನ್ನೂ ಓದಿ: ಮಹಾತ್ಮಾ ಗಾಂಧಿ ಕೊಂದವರು, ನನ್ನನ್ನ ಬಿಡ್ತಾರಾ: ಸಿದ್ದರಾಮಯ್ಯ

    ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ದಸ್ತಗೀರ್ ಸಾಬ್ ಮೊಕಾಶಿ ಅವರು, ನಮ್ಮ ದೇಶದಲ್ಲಿ ಹಿಂದೂ ಮುಸ್ಲಿಂ ಎಲ್ಲರೂ ಭಾವೈಕ್ಯತೆಯಿಂದ ಇರುವ ರಾಷ್ಟ್ರವಾಗಿದೆ. ಗೋಕುಲಾಷ್ಟಮಿ ನಿಮಿತ್ತ ಮೊಮ್ಮಗನಿಗೆ ಕೃಷ್ಣನ ವೇಷಭೂಷಣ ತೊಡಿಸಿದ್ದೇವೆ. ರಾಮನವಮಿ ಸೇರಿದಂತೆ ಎಲ್ಲಾ ಹಬ್ಬಗಳಲ್ಲಿ ನಾವು ಭಾಗಿಯಾಗುತ್ತೇವೆ. ಹಿಂದೂ, ಮುಸ್ಲಿಂ ಎಂಬ ಭೇದಭಾವ ಏನೂ ಇಲ್ಲ. ರಾಮ್ ರಹೀಮ್ ಎಲ್ಲರೂ ಒಂದೇ ಎಂದು ದಸ್ತಗೀರ್ ಸಾಬ್ ಮೊಕಾಶಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ

    ವಿಶ್ವದ ಅತಿ ದೊಡ್ಡ ಹಿಂದೂ ದೇವಾಲಯ ನಿರ್ಮಾಣಕ್ಕೆ ಭೂಮಿ ದಾನ ಮಾಡಿದ ಮುಸ್ಲಿಂ ಕುಟುಂಬ

    ಪಾಟ್ನಾ: ದೇಶದಲ್ಲಿ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿ ಬಿಹಾರದ ಮುಸ್ಲಿಂ ಕುಟುಂಬವೊಂದು ರಾಜ್ಯದ ಪೂರ್ವ ಚಂಪಾರಣ್ ಜಿಲ್ಲೆಯ ಕೈತ್ವಾಲಿಯಾ ಪ್ರದೇಶದಲ್ಲಿ ವಿಶ್ವದ ಅತಿದೊಡ್ಡ ಹಿಂದೂ ದೇವಾಲಯ – ವಿರಾಟ್ ರಾಮಾಯಣ ಮಂದಿರ ನಿರ್ಮಾಣಕ್ಕಾಗಿ 2.5 ಕೋಟಿ ರೂ. ಮೌಲ್ಯದ ಭೂಮಿಯನ್ನು ದಾನ ಮಾಡಿದೆ.

    ಈ ಯೋಜನೆಯನ್ನು ಪಾಟ್ನಾ ಮೂಲದ ಮಹಾವೀರ ಮಂದಿರ ಟ್ರಸ್ಟ್‌ನ ಮುಖ್ಯಸ್ಥ ಆಚಾರ್ಯ ಕಿಶೋರ್ ಕುನಾಲ್ ಕೈಗೆತ್ತಿಕೊಂಡಿದ್ದು, ಭೂಮಿಯನ್ನು ದಾನ ಮಾಡಿರುವ ಇಶ್ತಿಯಾಕ್ ಅಹ್ಮದ್ ಖಾನ್ ಅವರು ಗುವಾಹಟಿ ಮೂಲದ ಪೂರ್ವ ಚಂಪಾರಣ್‍ನಲ್ಲಿ ಉದ್ಯಮಿಯಾಗಿದ್ದಾರೆ. ಇತ್ತೀಚೆಗಷ್ಟೇ ಕೇಶರಿಯಾ ಉಪವಿಭಾಗದ (ಪೂರ್ವ ಚನ್‍ಂಪಾರಣ್) ರಿಜಿಸ್ಟಾರ್ ಆಫಿಸ್‍ನಲ್ಲಿ ದೇವಾಲಯದ ನಿರ್ಮಾಣಕ್ಕಾಗಿ ತಮ್ಮ ಕುಟುಂಬಕ್ಕೆ ಸೇರಿದ ಭೂಮಿಯನ್ನು ದಾನ ಮಾಡಲು ಇದಕ್ಕೆ ಸಂಬಂಧಿಸಿದ ಎಲ್ಲಾ ಔಪಚಾರಿಕತೆಗಳನ್ನು ಪೂರ್ಣಗೊಳಿಸಿದರು ಎಂದು ಮಾಜಿ ಭಾರತೀಯ ಪೊಲೀಸ್ ಸೇವೆ ಅಧಿಕಾರಿ ಕುನಾಲ್ ತಿಳಿಸಿದ್ದಾರೆ. ಇದನ್ನೂ ಓದಿ:  2ನೇ ಬಾರಿಗೆ ಗೋವಾ ಸಿಎಂ ಆಗಿ ಪ್ರಮೋದ್ ಸಾವಂತ್ ಆಯ್ಕೆ

    ಈ ವಿಚಾರವಾಗಿ ಮಾತನಾಡಿದ ಆಚಾರ್ಯ ಕಿಶೋರ್ ಕುನಾಲ್ ಅವರು, ಇಶ್ತಿಯಾಕ್ ಅಹ್ಮದ್ ಖಾನ್ ಮತ್ತು ಅವರ ಕುಟುಂಬದವರ ಈ ದೇಣಿಗೆ ಎರಡು ಸಮುದಾಯಗಳ ನಡುವಿನ ಸಾಮಾಜಿಕ ಸಾಮರಸ್ಯ ಮತ್ತು ಸಹೋದರತ್ವಕ್ಕೆ ಉತ್ತಮ ಉದಾಹರಣೆಯಾಗಿದೆ. ಮುಸ್ಲಿಮರ ಸಹಾಯವಿಲ್ಲದಿದ್ದರೆ ಈ ಕನಸಿನ ಯೋಜನೆ ಸಾಕಾರಗೊಳ್ಳುವುದು ಕಷ್ಟವಾಗುತ್ತಿತ್ತು ಎಂದಿದ್ದಾರೆ.

    ಮಹಾವೀರ ಮಂದಿರ ಟ್ರಸ್ಟ್ ಈ ದೇವಸ್ಥಾನ ನಿರ್ಮಾಣಕ್ಕಾಗಿ ಇದುವರೆಗೆ 125 ಎಕರೆ ಭೂಮಿಯನ್ನು ಪಡೆದುಕೊಂಡಿದೆ. ಟ್ರಸ್ಟ್ ಶೀಘ್ರದಲ್ಲೇ ಈ ಪ್ರದೇಶದಲ್ಲಿ ಇನ್ನೂ 25 ಎಕರೆ ಭೂಮಿಯನ್ನು ಪಡೆಯಲಿದೆ. ವಿರಾಟ್ ರಾಮಾಯಣ ಮಂದಿರವು 215 ಅಡಿ ಎತ್ತರವಿರುವ ಕಾಂಬೋಡಿಯಾದ 12ನೇ ಶತಮಾನದ ವಿಶ್ವಪ್ರಸಿದ್ಧ ಅಂಕೋರ್ ವಾಟ್ ಸಂಕೀರ್ಣಕ್ಕಿಂತ ಎತ್ತರವಾಗಿರಲಿದೆ. ಪೂರ್ವ ಚಂಪಾರಣ್‍ನಲ್ಲಿರುವ ಸಂಕೀರ್ಣವು ಎತ್ತರದ ಗೋಪುರಗಳೊಂದಿಗೆ 18 ದೇವಾಲಯಗಳನ್ನು ಒಳಗೊಂಡಿರುತ್ತದೆ ಮತ್ತು ಅಲ್ಲಿನ ಶಿವನ ದೇವಾಲಯವು ವಿಶ್ವದ ಅತಿದೊಡ್ಡ ಶಿವಲಿಂಗವನ್ನು ಹೊಂದಿರುತ್ತದೆ. ಇದನ್ನೂ ಓದಿ: ರಷ್ಯಾ ಯುದ್ಧವನ್ನು 2ನೇ ಮಹಾಯುದ್ಧಕ್ಕೆ ಹೋಲಿಸಿದ ಝೆಲೆನ್ಸ್ಕಿ

    ದೇವಾಲಯ ನಿರ್ಮಾಣಕ್ಕೆ ಒಟ್ಟು ಸುಮಾರು 500 ಕೋಟಿ ರೂ. ವೆಚ್ಚ ಆಗಲಿದೆ ಎಂದು ಅಂದಾಜಿಸಲಾಗಿದೆ. ನವದೆಹಲಿಯಲ್ಲಿ ನೂತನ ಸಂಸತ್ ಭವನ ನಿರ್ಮಾಣದಲ್ಲಿ ತೊಡಗಿರುವ ತಜ್ಞರಿಂದ ಟ್ರಸ್ಟ್ ಶೀಘ್ರದಲ್ಲೇ ಸಲಹೆ ಪಡೆಯಲಿದೆ.

  • ದೀಪ ಬೆಳಗಿದ ಸಿದ್ದಗಂಗಾ ಶ್ರೀಗಳು- ಮುಸ್ಲಿಂ ಕುಟುಂಬದಿಂದ ದೀಪಾರಾಧನೆ

    ದೀಪ ಬೆಳಗಿದ ಸಿದ್ದಗಂಗಾ ಶ್ರೀಗಳು- ಮುಸ್ಲಿಂ ಕುಟುಂಬದಿಂದ ದೀಪಾರಾಧನೆ

    ತುಮಕೂರು: ಪ್ರಧಾನಿ ನರೇಂದ್ರ ಮೋದಿ ಕರೆ ಕೊಟ್ಟಿರುವ ದೀಪಾರಾಧನೆ ಜಿಲ್ಲೆಯಲ್ಲಿ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಮನೆ ಮನೆಗಳಲ್ಲಿ ದೀಪ ಬೆಳಗಿದ ಜನರು ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದ್ದಾರೆ. ತುಮಕೂರ ಜಿಲ್ಲೆಯಾದ್ಯಂತ ಬಹುತೇಕ ಎಲ್ಲರ ಮನೆಗಳಲ್ಲೂ ದೀಪ ಹಚ್ಚಲಾಯಿತು. ದೀಪಾವಳಿಯ ಸಂಭ್ರಮವೇ ಮನೆ ಮಾಡಿತ್ತು.

    ಸಿದ್ದಗಂಗಾ ಮಠಾಧ್ಯಕ್ಷರಾದ ಸಿದ್ದಲಿಂಗ ಶ್ರೀಗಳು ಮಠದಲ್ಲಿ ದೀಪ ಹಚ್ಚಿ ಮಕ್ಕಳೊಂದಿಗೆ ಪ್ರಾರ್ಥನೆ ಸಲ್ಲಿಸಿದರು. ಬಳಿಕ ಭಾರತ್ ಮಾತಾ ಕೀ ಜೈ ಎಂದು ಘೋಷಣೆ ಕೂಗಿದರು.

    ಇನ್ನೊಂದೆಡೆ ತುಮಕೂರು ನಗರದ ಶಿರಾಗೇಟ್‍ನ ಮುಸ್ಲಿಂ ಸಮುದಾಯದ ಕುಟುಂಬಗಳು ಹಣತೆ ಹಚ್ಚಿ ಪ್ರಧಾನಿ ಮೋದಿ ಕರೆಗೆ ಬೆಂಬಲ ಸೂಚಿಸಿದ್ದು ವಿಶೇಷವಾಗಿತ್ತು. ಮುಸ್ಲಿಂ ಸಮುದಾಯದ ಮಕ್ಕಳಾದಿಯಾಗಿ ಎಲ್ಲರೂ ಹಣತೆ ಕೈಯಲ್ಲಿ ಹಿಡಿದು ಕೊರೊನಾ ವಿರುದ್ಧದ ಹೋರಾಟಕ್ಕೆ ಬೆಂಬಲ ಸೂಚಿದರು.

  • ಹಿಂದೂ ಸಂಪ್ರದಾಯದಂತೆ ಮನೆ ಗೃಹಪ್ರವೇಶ ಮಾಡಿದ ಮುಸ್ಲಿಂ ಕುಟುಂಬ

    ಹಿಂದೂ ಸಂಪ್ರದಾಯದಂತೆ ಮನೆ ಗೃಹಪ್ರವೇಶ ಮಾಡಿದ ಮುಸ್ಲಿಂ ಕುಟುಂಬ

    ವಿಜಯಪುರ: ಕಳೆದ ತಿಂಗಳು ನೂತನ ದರ್ಗಾವನ್ನು ಹಿಂದೂ ಧರ್ಮದ ಪ್ರಕಾರ ಪ್ರವೇಶ ಮಾಡಿ ವಿಜಯಪುರದತ್ತ ರಾಜ್ಯದ ಗಮನವನ್ನು ಮುಸ್ಲಿಂ ಬಾಂಧವರು ಸೆಳೆದಿದ್ದರು. ಇದೀಗ ವಿಜಯಪುರದ ಮುಸ್ಲಿಂ ಕುಟುಂಬವೊಂದು ನೂತನ ಮನೆಯ ಗೃಹ ಪ್ರವೇಶವನ್ನು ಹಿಂದೂ ಸಂಸ್ಕೃತಿ ಪ್ರಕಾರ ಮಾಡಿ ಮತ್ತೆ ರಾಜ್ಯದ ಗಮನವನ್ನು ತನ್ನತ್ತ ಸೆಳೆದಿದೆ.

    ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ನಾಗಬೆಟ್ಟ ಗ್ರಾಮದ ಲಾಲಸಾಬ ನದಾಫ್ ಎಂಬುವರುವ ಡಿ.5 ರಂದು ನಾಗರಬೆಟ್ಟ ಗ್ರಾಮದಲ್ಲಿ ತಮ್ಮ ನೂತನ ಮನೆಯ ಗೃಹ ಪ್ರವೇಶವನ್ನು ಹಿಂದೂ ಸಂಸ್ಕೃತಿ ಪ್ರಕಾರ ನೆರವೇರಿಸಿದ್ದಾರೆ. ನವಗ್ರಹ ಹಾಗೂ ಲಕ್ಷ್ಮೀ ಪೂಜೆ ಮಾಡಿ ಗೃಹಪ್ರವೇಶ ಮಾಡಿದ್ದಾರೆ.

    ಲಾಲಸಾಬ ನದಾಫ್ ನಾಗರಬೆಟ್ಟದ ಖಾಸಗಿ ಶಾಲೆಯಲ್ಲಿ ಶಿಕ್ಷಕನಾಗಿದ್ದು, ಹಿಂದು ಧರ್ಮದ ಗೆಳಯರನ್ನ ಹೆಚ್ಚಾಗಿ ಹೊಂದಿದ್ದಾರೆ. ಇನ್ನು ನಾವು ಹಳ್ಳಿ ಜನರಾಗಿದ್ದು ನಾವು ಇಲ್ಲಿ ಎಲ್ಲ ಧರ್ಮದವರು ಒಂದಾಗಿಯೇ ಇರುತ್ತೇವೆ. ನಮ್ಮಲ್ಲಿ ಯಾವುದೆ ಬೇಧ ಭಾವ ಇರಲ್ಲ. ಅಲ್ಲದೆ ಎಲ್ಲ ಧರ್ಮವನ್ನು ಗೌರವಿಸುತ್ತೇವೆ. ಹಲವಾರು ವರ್ಷಗಳಿಂದ ನಮ್ಮ ಕುಟುಂಬ ಮುಸ್ಲಿಂ ಧರ್ಮದೊಂದಿಗೆ ಹಿಂದು ಧರ್ಮವನ್ನು ಪಾಲಿಸುತ್ತ ಬಂದಿದೆ. ಅದೇ ಕಾರಣಕ್ಕೆ ಗೃಹಪ್ರವೇಶದ ವೇಳೆ ಕುರಾನ್ ಪಠಣವನ್ನು ಮಾಡಿ ನವಗೃಹ ಹಾಗೂ ಲಕ್ಷ್ಮೀ ಪೂಜೆ ಮಾಡಿದ್ದೇವೆ ಎಂದು ಹೇಳುತ್ತಾರೆ.

    ಲಾಲಸಾಬ ಕುಟುಂಬದ ಭಾವೈಕ್ಯತೆಯ ಭಾವ ಇತರರಿಗೆ ಮಾದರಿಯಾಗಿದೆ. ಇನ್ನು ಲಾಲಸಾಬ ಅವರ ಈ ಕಾರ್ಯಕ್ಕೆ ಪ್ರಶಂಸೆಗಳ ಮಹಾಪೂರ ಹರಿದು ಬರುತ್ತಿದೆ.

  • ಹನುಮನನ್ನು ಲಗ್ನ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ

    ಹನುಮನನ್ನು ಲಗ್ನ ಪತ್ರಿಕೆಯಲ್ಲಿ ಮುದ್ರಿಸಿ ಭಕ್ತಿ ಮೆರೆದ ಅಯೋಧ್ಯೆಯ ಮುಸ್ಲಿಂ ಕುಟುಂಬ

    ಲಕ್ನೋ: ಹಿಂದೂ, ಮುಸ್ಲಿಂ ಎಂಬ ಭೇದವಿಲ್ಲದೆ ಅಯೋಧ್ಯೆಯಲ್ಲಿ ಶ್ರೀರಾಮನನ್ನು ಆರಾಧಿಸಲಾಗುತ್ತಿದೆ. ಇದಕ್ಕೆ ಅಯೋಧ್ಯೆಯ ಮುಸ್ಲಿಂ ಕುಟುಂಬವೊಂದು ಸಾಕ್ಷಿಯಾಗಿದೆ. ತಮ್ಮ ಮಗ, ಮಗಳ ಮದುವೆ ಆಮಂತ್ರಣ ಪ್ರತಿಕೆಯಲ್ಲಿ ರಾಮನ ಭಂಟ ಹನುಮನ ಚಿತ್ರವನ್ನು ಮುದ್ರಿಸಿ ಕುಟುಂಬ ಭಕ್ತಿ ಮೆರೆದಿದೆ.

    ಹೌದು. ಉತ್ತರ ಪ್ರದೇಶ ಚಾರೇರ ಗ್ರಾಮದ ಮುಸ್ಲಿಂ ಕುಟುಂಬ ಶ್ರೀರಾಮನ ಬಂಟ ಹನುಮನ ಚಿತ್ರವುಳ್ಳ ಕ್ಯಾಲೆಂಡರ್ ಒಂದನ್ನು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ಮುದ್ರಿಸಿದೆ. ಅಷ್ಟೇ ಅಲ್ಲದೆ ಈ ಪತ್ರಿಕೆಯಲ್ಲಿ ಬ್ರಹ್ಮ, ವಿಷ್ಣು, ಶಿವ ಹಾಗೂ ನಾರದರ ಚಿತ್ರವನ್ನೂ ಕೂಡ ಕುಟುಂಬ ಮುದ್ರಿಸಿದೆ. ರಸೂಲಾಬಾದ್‍ನ ಹೋಮಿಯೋಪತಿ ಆಸ್ಪತ್ರೆಯಲ್ಲಿ ವಾರ್ಡ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿರುವ ಮೊಹಮ್ಮದ್ ಮುಬೀನ್ ಅವರು ತಮ್ಮ ಮಗ ಮತ್ತು ಮಗಳು ಲಗ್ನ ಪತ್ರಿಕೆಯಲ್ಲಿ ಹಿಂದೂ ದೇವರ ಚಿತ್ರ ಮುದ್ರಿಸಿದ್ದಾರೆ. ಮುಬೀನ್ ಅವರ ಮಗ ಮೊಹಮದ್ ನಸೀರ್ ಹಾಗೂ ಮಗಳು ಅಮೀನಾ ಬಾನೋ ಅವರ ಮದುವೆ ನಡೆಯಲಿದೆ. ಶುಕ್ರವಾರ ನಸೀರ್ ಮದುವೆಯಾದರೆ, ರವಿವಾರದಂದು ಅಮೀನಾ ಮದುವೆ ನಡೆಯಲಿದೆ. ಹೀಗಾಗಿ ಮುಬೀನ್ ಅವರು ತಮ್ಮ ಮಕ್ಕಳ ಮದುವೆಗೆ ಹಿಂದೂ ದೇವರುಗಳುಳ್ಳ ವಿಶೇಷ ಲಗ್ನ ಪತ್ರಿಕೆ ಮುದ್ರಿಸಿದ್ದಾರೆ.

    ಈ ಬಗ್ಗೆ ಪ್ರತಿಕ್ರಿಯಿಸಿದ ಕುಟುಂಬ, ನಮ್ಮ ಅಲ್ಲಾಹುವಿನ ಮೇಲೆ ನಮಗೆ ಎಷ್ಟು ನಂಬಿಕೆ ಇದೆಯೋ ಅಷ್ಟೇ ನಂಬಿಕೆ ಹಿಂದೂ ದೇವ, ದೇವತೆಯರ ಮೇಲಿದೆ ಎಂದು ಹೇಳಿ ಎಲ್ಲರ ಮನ ಗೆದ್ದಿದ್ದಾರೆ.

    ಮುಬೀನ್ ಅವರು ಈ ಬಗ್ಗೆ ಮಾತನಾಡಿ, ಲಗ್ನ ಪತ್ರಿಕೆ ಮುದ್ರಿಸುವ ವಿಚಾರದಲ್ಲಿ ಯಾರೂ ನನ್ನ ಮೇಲೆ ಒತ್ತಡ ಹೇರಿರಲಿಲ್ಲ. ಕುಟುಂಬ ಸದಸ್ಯರ ಅನುಮತಿ, ಅಭಿಪ್ರಾಯ ಪಡೆದು ನಾನು ಪತ್ರಿಕೆ ಆಯ್ಕೆ ಮಾಡಿದ್ದೇನೆ ಎಂದಿದ್ದಾರೆ.

    ಈಗಾಗಲೇ 700 ಮಂದಿಗೆ ಲಗ್ನ ಪತ್ರಿಕೆ ಹಂಚಿದ್ದೇನೆ. ಹಿಂದೂ ಮಿತ್ರರಿಗೂ ಲಗ್ನ ಪತ್ರಿಕೆ ಹಂಚಿ ಮದುವೆಗೆ ಕರೆದಿದ್ದೇನೆ. ಯಾರೂ ಕೂಡ ಈವರೆಗೆ ಇದಕ್ಕೆ ವಿರೋಧಿಸಿಲ್ಲ. ನನ್ನ ಸಂಬಂಧಿಕರು ಕೂಡ ಇದಕ್ಕೆ ವಿರೋಧ ವ್ಯಕ್ತಪಡಿಸಿಲ್ಲ. ಮಕ್ಕಳು ಕೂಡ ಖುಷಿಯಿಂದ ಲಗ್ನ ಪತ್ರಿಕೆಯನ್ನು ಒಪ್ಪಿದ್ದಾರೆ. ಎಲ್ಲರೂ ಇದು ಒಳ್ಳೆಯ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ ಎಂದು ಖುಷಿಯಿಂದ ಮುಬೀನ್ ಹೇಳಿದ್ದಾರೆ.

    ಹಿಂದೂಗಳು ಮತ್ತು ಮುಸ್ಲಿಮರು ಯಾವಾಗಲೂ ಇಲ್ಲಿ ಪರಿಪೂರ್ಣ ಸಾಮರಸ್ಯದಿಂದ ವಾಸಿಸುತ್ತಿದ್ದಾರೆ. ಈ ಸಾಮರಸ್ಯ ಎರಡು ಸಮುದಾಯಗಳ ನಡುವಿನ ಬಾಂಧವ್ಯವನ್ನು ಬಲಪಡಿಸಿದೆ ಎಂದು ಸ್ಥಳೀಯರೊಬ್ಬರು ಮುಬೀನ್ ಅವರ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

  • ಮದುವೆ ಆಮಂತ್ರಣದಲ್ಲಿ ರಾಮ-ಸೀತೆ: ಸೌಹಾರ್ದ ಮೆರೆದ ಮುಸ್ಲಿಂ ಕುಟುಂಬ

    ಮದುವೆ ಆಮಂತ್ರಣದಲ್ಲಿ ರಾಮ-ಸೀತೆ: ಸೌಹಾರ್ದ ಮೆರೆದ ಮುಸ್ಲಿಂ ಕುಟುಂಬ

    ಲಕ್ನೋ: ಉತ್ತರ ಪ್ರದೇಶದ ಮುಸ್ಲಿಂ ಕುಟುಂಬವೊಂದು ಮದುವೆ ಆಮಂತ್ರಣ ಪತ್ರಿಕೆಯಲ್ಲಿ ರಾಮ-ಸೀತಾ ಚಿತ್ರವನ್ನು ಮುದ್ರಿಸುವ ಮೂಲಕ ಕೋಮು ಸೌಹಾರ್ದತೆ ಮೆರೆದಿದೆ.

    ಷಹಜಹಾನ್ಪರ್ ಜಿಲ್ಲೆಯ ಚಿಲೌವಾ ಹಳ್ಳಿಯ ಮುಸ್ಲಿಂ ಮಹಿಳೆ ಬೇಬಿ ಅವರು ತಮ್ಮ ಮಗಳು ರುಕ್ಷಾರ್ ಮದುವೆಗೆ ಇಂತಹ ವಿಶೇಷ ಆಮಂತ್ರಣ ಪತ್ರಿಕೆ ಮುದ್ರಿಸಿದ್ದು, ಗ್ರಾಮಸ್ಥರಿಗೆ ಹಾಗೂ ಸಂಬಂಧಿಕರಿಗೆ ನೀಡಿದ್ದಾರೆ. ನಮ್ಮ ಗ್ರಾಮದಲ್ಲಿ ಕೋಮು ಸಾಮರಸ್ಯ ಸಾರಲು ನಮ್ಮದೊಂದು ಪುಟ್ಟ ಹೆಜ್ಜೆ ಇಟ್ಟಿದ್ದೇವೆ ಎಂದು ಕುಟುಂಬದವರು ತಿಳಿಸಿದ್ದಾರೆ.

    ನಮ್ಮ ಹಳ್ಳಿಯಲ್ಲಿ ಹಿಂದೂ ಹಾಗೂ ಮುಸ್ಲಿಂ ಕುಟುಂಬಗಳು ಒಟ್ಟಾಗಿ ಬಾಳುತ್ತಿವೆ. ಅವರಲ್ಲಿ ಕೋಮು ಸೌಹಾರ್ದತೆ ತರಬೇಕು ಎನ್ನುವುದು ನಮ್ಮ ಇಚ್ಛೆಯಾಗಿದೆ. ಧರ್ಮದ ಆಧಾರದ ಮೇಲೆ ಯಾರನ್ನೂ ಪ್ರತ್ಯೇಕವಾಗಿ ಕಾಣಬಾರದು. ಹೀಗಾಗಿ ಆಮಂತ್ರಣ ಪತ್ರಿಕೆಯಲ್ಲಿ ರಾಮ-ಸೀತಾ ಚಿತ್ರವನ್ನು ಮುದ್ರಿಸಲಾಗಿದೆ ಎಂದು ಬೇಬಿ ಹೇಳಿದ್ದಾರೆ.

    ಇಲ್ಲಿನ ಪ್ರತಿಯೊಬ್ಬರೂ ಸಹೋದರಿ ರುಕ್ಷಾರ್ ಮದುವೆಯ ಆಮಂತ್ರಣ ಪತ್ರಿಕೆಯನ್ನು ಸಂತೋಷದಿಂದ ಸ್ವೀಕರಿಸಿದ್ದಾರೆ. ಇದು ನಮಗೂ ಖುಷಿ ತಂದಿದೆ ಎಂದು ಮೊಮ್ಮದ್ ಉಮರ್ ಸಂತ ವ್ಯಕ್ತಪಡಿಸಿದ್ದಾರೆ.

    ಈ ವಿಶೇಷ ಮದುವೆ ಆಮಂತ್ರಣವು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಭಾರೀ ಮೆಚ್ಚುಗೆ ವ್ಯಕ್ತವಾಗಿದೆ. ಚಿಲೌವಾ ಹಳ್ಳಿಯು ದೆಹಲಿಯಿಂದ 250 ಕಿ.ಮೀ. ದೂರದಲ್ಲಿದೆ.

  • ಕನಸ್ಸಿನಲ್ಲಿ ಬರುತ್ತಿದ್ದ ರಾಮ: ಹಿಂದೂ ಧರ್ಮಕ್ಕೆ ಮತಾಂತರವಾಯ್ತು ಮುಸ್ಲಿಂ ಕುಟುಂಬ

    ಕನಸ್ಸಿನಲ್ಲಿ ಬರುತ್ತಿದ್ದ ರಾಮ: ಹಿಂದೂ ಧರ್ಮಕ್ಕೆ ಮತಾಂತರವಾಯ್ತು ಮುಸ್ಲಿಂ ಕುಟುಂಬ

    ಸಾಂದರ್ಭಿಕ ಚಿತ್ರ

    ಲಕ್ನೋ: ಕನಸ್ಸಿನಲ್ಲಿ ಪದೇ ಪದೇ ಶ್ರೀರಾಮಚಂದ್ರ ಬರುತ್ತಿದ್ದ ಹಿನ್ನೆಲೆಯಲ್ಲಿ ಮುಸ್ಲಿಂ ಕುಟುಂಬವೊಂದು ಹಿಂದೂ ಧರ್ಮಕ್ಕೆ ಮತಾಂತರಗೊಂಡಿರುವ ಘಟನೆ ಉತ್ತರಪ್ರದೇಶ ಶಾಮ್ಲಿ ಜಿಲ್ಲೆಯಲ್ಲಿ ನಡೆದಿದೆ.

    ಶಾಮ್ಲಿ ಜಿಲ್ಲೆಯ ಸದರ್ ಕೋತ್ವಾಲಿಯ ಹರೇಂದ್ರ ನಗರದ ನಿವಾಸಿ ಶಹಜಾದ್ ಕುಂಟುಬ ಬುಧವಾರ ಶಾಸ್ತ್ರೋಕ್ತವಾಗಿ ಹಿಂದೂ ಧರ್ಮವನ್ನು ಸ್ವೀಕರಿಸಿದೆ. ಇದಾದ ನಂತರ ಶ್ರೀರಾಮನ ದೇವಾಲಯಕ್ಕೆ ಪೂಜೆ ಸಲ್ಲಿಸಿ, ಹಿಂದೂ ಧರ್ಮಕ್ಕೆ ಬದಲಾದ ಬಳಿಕ ಶಹಜಾದ್ ತಮ್ಮ ಹೆಸರನ್ನು ಸಂಜು ಎಂದು ಮರು ನಾಮಕರಣವನ್ನು ಮಾಡಿಕೊಂಡಿದ್ದಾರೆ. ಅಲ್ಲದೇ ಜೈ ಶ್ರೀರಾಮ್ ಎನ್ನುವ ಘೋಷಣೆಯನ್ನು ಕೂಗಿದ್ದಾರೆ.

     

    ಈ ಕುರಿತು ಪ್ರತಿಕ್ರಿಯಿಸಿದ ಅವರು, ನನಗೆ ಬಹಳ ದಿನಗಳಿಂದಲೂ ಕನಸ್ಸಿನಲ್ಲಿ ಶ್ರೀರಾಮಚಂದ್ರ ಕಾಣಿಸಿಕೊಳ್ಳುತ್ತಿದ್ದ. ನೀನು ಹಿಂದೂ ಧರ್ಮವನ್ನು ಸ್ವೀಕರಿಸು ಎಂದು ಪ್ರೇರೇಪಿಸುತ್ತಿದ್ದ. ನನ್ನ ಪೂರ್ವಜರು ಕೂಡ ಹಿಂದೂವಾಗಿದ್ದರು. ಆದರೆ ಅವರನ್ನು ಬಲವಂತವಾಗಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಳಿಸಲಾಗಿತ್ತು. ಹೀಗಾಗಿ ನಾನು ನನ್ನ ಕುಟುಂಬದ ಸಮೇತ ಹಿಂದೂ ಧರ್ಮವನ್ನು ಸ್ವೀಕರಿಸಿಕೊಂಡಿದ್ದೇನೆ. ನನ್ನ ಆರಾಧ್ಯ ದೈವ ಭಗವಾನ್ ಶ್ರೀರಾಮಚಂದ್ರ. ನಾನು ನನ್ನ ಮುಂದಿನ ದಿನಗಳನ್ನು ಹಿಂದೂ ಸಂಪ್ರದಾಯದಂತೆ ಅನುಸರಿಸುತ್ತೇನೆ ಎಂದು ಹೇಳಿದರು.

    ಈ ಬಗ್ಗೆ ಶಾಮ್ಲಿ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿರುವ ಸಂಜು ಅಲಿಯಾಸ್ ಶಹಜಾದ್, ನಾನು ನನ್ನ ಸ್ವ-ಇಚ್ಛೆಯಿಂದ ಹಿಂದೂ ಧರ್ಮವನ್ನು ಸ್ವೀಕರಿಸಿದ್ದೇನೆ. ನನಗೆ ಹಿಂದೂ ಧರ್ಮಕ್ಕೆ ಮರಳಲು ಹಾಗೂ ಹಿಂದೂಗಳಂತೆ ಪೂಜೆ-ಪುನಸ್ಕಾರ ಸಲ್ಲಿಸಲು ಅನುಮತಿ ನೀಡಬೇಕೆಂದು ಕೋರಿಕೊಂಡಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv