ಬಾಗಲಕೋಟೆ: ಅಂಜುಮಾನ್ ಮಸೀದಿ (Anjuman Mosque) ಮೌಲಾನಾ ಮೇಲೆ ನಾಲ್ವರು ಯುವಕರಿಂದ ಹಲ್ಲೆ ನಡೆಸಿರುವ ಆರೋಪ ಬಾಗಲಕೋಟೆಯಲ್ಲಿ (Bagalakote) ಕೇಳಿಬಂದಿದೆ.
ಬಾಗಲಕೋಟೆಯ ನವನಗರದ (Navanagara Police) ಸೆಕ್ಟರ್ ನಂ.4 ರಲ್ಲಿ ಘಟನೆ ನಡೆದಿದ್ದು, ಮೌಲಾನಾ ಮೇಲಿನ ಹಲ್ಲೆ ಖಂಡಿರಿ ನೂರಾರು ಮುಸ್ಲಿಂ ಮುಖಂಡರು ರಾತ್ರೋ ರಾತ್ರಿ ಪ್ರತಿಭಟನೆ ನಡೆಸಿದ್ದಾರೆ. ನವನಗರ ಪೊಲೀಸ್ ಠಾಣೆಮುಂದೆ ಜಮಾಯಿಸಿದ ನೂರಾರು ಮುಸ್ಲಿಂ ಮುಖಂಡರು ಕಾರ್ತಿಕ್, ಗಣೇಶ್, ಶಿವು ಹಾಗೂ ಆದಿತ್ಯ ಎಂಬ ಯುವಕರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದಾರೆ.
ಈ ಬೆನ್ನಲ್ಲೇ ನಾಲ್ವರು ಆರೋಪಿಗಳ (Accused) ಪೈಕಿ ಆರೋಪಿ ಕಾರ್ತಿಕ್ ಹಾಗೂ ಪ್ರೀತಮ್ ನನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮತ್ತಿಬ್ಬರು ಆರೋಪಿಗಳಿಗಾಗಿ ಶೋಧ ಮುಂದುವರಿಸಿದ್ದಾರೆ. ಸದ್ಯ ನವನಗರ ಪೊಲೀಸ್ ಠಾಣೆ ಬಳಿ ಉದ್ವಿಗ್ನ ವಾತಾವರಣ ಉಂಟಾಗಿದ್ದು, ಪ್ರತಿಭಟನಾ ನಿರತರನ್ನ ಪೊಲೀಸರು ಚದುರಿಸಿದ್ದಾರೆ.
ಹುಬ್ಬಳ್ಳಿ: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿಂದು ಮುಸ್ಲಿಂ ಧರ್ಮ ಗುರುಗಳ (Muslim Religious Leader) ಸಮಾವೇಶ ನಡೆಯಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಸಮಾವೇಶದ ಉದ್ಘಾಟನೆ ನೆರವೇರಿಸಲಿದ್ದಾರೆ.
ರಾಜ್ಯದಿಂದ ಮಾತ್ರವಲ್ಲದೇ ಮಹಾರಾಷ್ಟ, ತಮಿಳನಾಡು, ತೆಲಂಗಾಣ (Telangana), ಆಂಧ್ರಪ್ರದೇಶ ಭಾಗಗಳಿಂದ 200ಕ್ಕೂ ಅಧಿಕ ಮುಸ್ಲಿಂ ಧರ್ಮಗುರುಗಳು ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಮುಖ್ಯಮಂತ್ರಿಗಳು ಸಮಾವೇಶ ಉದ್ಘಾಟನೆ ನೆರವೇರಿಸಲಿದ್ದು, ಸ್ಥಳೀಯ ಸಚಿವರು ಪಾಲ್ಗೊಳ್ಳಲಿದ್ದಾರೆ. ಇದನ್ನೂ ಓದಿ: ಲೋಕ ಸಮರದಲ್ಲಿ ಬಿಜೆಪಿ-ಜೆಡಿಎಸ್ ಒಂದಾಗಿ ಕಾಂಗ್ರೆಸ್ಸನ್ನು ಧೂಳಿಪಟ ಮಾಡ್ತೇವೆ: ವಿಜಯೇಂದ್ರ
ಹುಬ್ಬಳ್ಳಿಯ ಹೊರವಲಯದ ಭಾಷಾಪೀರ್ ದರ್ಗಾ ಬಳಿ ಸಮಾವೇಶ ನಡೆಯಲಿದೆ. ದೇಶದಲ್ಲಿ ಧರ್ಮದ ವಿಚಾರದಲ್ಲಿ ಹೆಚ್ಚುತ್ತಿರುವ ವಿವಾದಗಳು, ಜನಾಂಗಿಯ ವೈಷ್ಯಮ್ಯದ ಕುರಿತಾಗಿ ಚರ್ಚೆಗಳು ನಡೆಯಲಿದ್ದು, ಶಾಂತಿ-ಸೌಹಾರ್ದತೆ ನೆಲೆಸುವ ನಿರ್ಣಯಗಳನ್ನು ಸಮಾವೇಶದಲ್ಲಿ ಕೈಗೊಳ್ಳಲಾಗುತ್ತದೆ ಎಂದು ಸಮಾವೇಶ ಆಯೋಜಕರು ತಿಳಿಸಿದ್ದಾರೆ.
ಭೋಪಾಲ್/ಮುಂಬೈ: ಬಾಲಿವುಡ್ ನಟ ಶಾರೂಕ್ ಖಾನ್ (Shah Rukh Khan), ದೀಪಿಕಾ ಪಡುಕೋಣೆ ಅಭಿನಯದ ಪಠಾಣ್ ಚಿತ್ರದ ವಿರುದ್ಧ ಹಿಂದೂ ಸಂಘಟನೆಗಳ (Hindu organisations) ಆಕ್ರೋಶದ ಜ್ವಾಲೆ ಹೆಚ್ಚಾಗ್ತಿದ್ದಂತೆ, ಮಧ್ಯಪ್ರದೇಶದ ಉಲೇಮಾ ಮಂಡಳಿಯ ಅಧ್ಯಕ್ಷ ಸೈಯದ್ ಅನಸ್ ಅಲಿ ಅವರು `ಪಠಾಣ್’ (Pathan) ಹೆಸರು ಬಳಕೆಗೆ ಆಕ್ಷೇಪಿಸಿದ್ದಾರೆ.
ಮುಸ್ಲಿಮರಲ್ಲಿ ಪಠಾಣ್ (Pathan) ಸಮುದಾಯವಿದ್ದು, ಇದು ಸಮುದಾಯ ಮಾತ್ರವಲ್ಲ, ಇಡೀ ಮುಸ್ಲಿಂ ಸಮುದಾಯಕ್ಕೆ (Muslim Community) ಮಾಡಿದ ಅವಮಾನವಾಗಿದೆ. ದೀಪಿಕಾ ಅಸಭ್ಯ ನೃತ್ಯ ಸಿನಿಮಾವನ್ನೇ ನೋಡದಂತೆ ಮಾಡಿದೆ. ಕೂಡಲೇ ಸಿನಿಮಾದ ಶೀರ್ಷಿಕೆ ಬದಲಿಸಬೇಕು. ಇಲ್ಲದಿದ್ದರೇ ಮಧ್ಯಪ್ರದೇಶ (Madhya Pradesh) ಮಾತ್ರವಲ್ಲ ಇಡೀ ದೇಶದಲ್ಲಿ ಎಲ್ಲೂ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಕೆ ಕೊಟ್ಟಿದ್ದಾರೆ. ಇದನ್ನೂ ಓದಿ: ಕೇಸರಿ ಬಿಕಿನಿಗೆ ನೆಟ್ಟಿಗರು ಗರಂ: ಬೈಕಾಟ್ ಪಠಾಣ್ ಟ್ರೆಂಡ್
ಕೇಸರಿ ಬಿಕಿನಿ (Saffron Bikini) ಬಣ್ಣವನ್ನು ಬದಲಾಯಿಸಿ, ಇಲ್ಲವೇ ಪರಿಣಾಮ ಎದುರಿಸಿ ಅಂತಾ ಮಹಾರಾಷ್ಟ್ರ ಬಿಜೆಪಿ ಶಾಸಕ ರಾಮ್ ಕದಂ ಎಚ್ಚರಿಸಿದ್ದಾರೆ. ನಿಮ್ಮ ಮಗಳ ಜೊತೆ ಕೂತು `ಬೇಷರಂ ರಂಗ್’ ಹಾಡನ್ನು ನೀವು ನೋಡ್ತೀರಾ? ಯಾಕೆ ಹಿಂದೂ ಧರ್ಮವನ್ನೇ ಗುರಿಯಾಗಿಸಲಾಗ್ತಿದೆ? ಅಂತಾ ಮಧ್ಯಪ್ರದೇಶದ ಸ್ಪೀಕರ್ ಗಿರೀಶ್ ಗೌತಮ್ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ದೀಪಿಕಾ ಪಡುಕೋಣೆ ಆಯ್ತು, ಈಗ ಕಂಗನಾ ರಣಾವತ್‌ಗೂ ಕೇಸರಿ ಕಂಟಕ
ಶಾರೂಖ್ ಖಾನ್ ಮಾತ್ರ ತಮ್ಮ ನಿಲುವಿಗೆ ಬದ್ಧವಾಗಿದ್ದಾರೆ. ಸಂಕುಚಿತ ಮನಸ್ಥಿತಿಯವರು ಸೋಷಿಯಲ್ ಮೀಡಿಯಾದಲ್ಲಿ ಅಪಪ್ರಚಾರ, ಋಣಾತ್ಮಕತೆಯನ್ನೇ ಹರಡುತ್ತಿದ್ದಾರೆ ಅಂದಿದ್ದಾರೆ.
ಈ ಮಧ್ಯೆ, ನಟಿ ಕಂಗನಾಗೂ (Kangana Ranaut) ವಿವಾದ ತಾಕಿದೆ. `ಲಾಕಪ್’ ಪೋಸ್ಟರ್‌ನಲ್ಲಿ ಕೇಸರಿ ಬಣ್ಣದ ಮೇಲೆ ಕಂಗನಾ ಬೂಟು ಇಟ್ಟಿದ್ದು, ಈಗ ಇದರ ವಿರುದ್ಧ ಪ್ರತಿಭಟನೆ ನಡೆಸಲ್ವಾ ಅಂತಾ ನೆಟ್ಟಿಗರು ಕಾಲೆಳೆದಿದ್ದಾರೆ.
Live Tv
[brid partner=56869869 player=32851 video=960834 autoplay=true]
ಬೆಂಗಳೂರು: ಕೊರೊನಾ ವೈರಸ್ ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಸರ್ಕಾರ ಸಾಮೂಹಿಕ ಪ್ರಾರ್ಥನೆ, ಸಭೆ, ಸಮಾರಂಭಗಳನ್ನು ನಡೆಸದಂತೆ ಆದೇಶ ಹೊರಡಿಸಿದೆ. ಇಂತಹ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಮುಖಂಡ, ವಿಧಾನ ಪರಿಷತ್ ಸದಸ್ಯ ಸಿಎಂ ಇಬ್ರಾಹಿಂ ಸಾಮೂಹಿಕ ಪಾರ್ಥನೆಗೆ ಅವಕಾಶ ಕೋರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.
ರಂಜಾನ್ ಹಿನ್ನೆಲೆಯಲ್ಲಿ ಮೇ 24 ಮತ್ತು 25ರಂದು ವಿಶೇಷ ಪ್ರಾರ್ಥನೆ ಮಾಡಬೇಕಾಗುತ್ತದೆ. ಹೀಗಾಗಿ ಇಡೀ ಮುಸ್ಲಿಂ ಸಮುದಾಯದ ಪರವಾಗಿ ನಾನು ನಿಮ್ಮಲ್ಲಿ ಮನವಿ ಮಾಡಿಕೊಳ್ಳುತ್ತೇನೆ. ರಂಜಾನ್ ದಿನ ಈದ್ಗಾ ಮೈದಾನದಲ್ಲಿ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಂಡು ಬೆಳಗ್ಗಿನಿಂದ ಮಧ್ಯಾಹ್ನ 1 ಗಂಟೆ ವರೆಗೆ ಪ್ರಾರ್ಥನೆಗೆ ಅವಕಾಶ ನೀಡಬೇಕು ಎಂದು ಸಿಎಂ ಇಬ್ರಾಹಿಂ ಪತ್ರದಲ್ಲಿ ತಿಳಿಸಿದ್ದಾರೆ.
ಸಿಎಂ ಇಬ್ರಾಹಿಂ ಅವರ ಪತ್ರಕ್ಕೆ ಕಾಂಗ್ರೆಸ್‍ನ ಮುಸ್ಲಿಂ ನಾಯಕರಿಂದಲೇ ಭಾರೀ ವಿರೋಧ ವ್ಯಕ್ತವಾಗಿದೆ. ಅಷ್ಟೇ ಅಲ್ಲದೆ ಪತ್ರ ಬರೆದಿದ್ದನ್ನ ವಾಪಸ್ ಪಡೆಯಲು ಸೂಚಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ದೂರು ನೀಡಿದ್ದಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿದೆ.
“ಜನ ಪ್ರತಿನಿಧಿಗಳಾಗಿ ಜವಾಬ್ದಾರಿ ಸ್ಥಾನದಲ್ಲಿರುವವರೇ ನಿಯಮವನ್ನ ಮೀರಿ ಪ್ರಾರ್ಥನೆಗೆ ಅವಕಾಶ ಮಾಡಿಕೊಡಿ ಎಂದು ಪತ್ರ ಬರೆದಿದ್ದು ಸರಿಯಲ್ಲ. ಮೊದಲೇ ತಬ್ಲಿಘಿ ಸಮಸ್ಯೆಯಿಂದ ಸಮುದಾಯದ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿದೆ. ಈಗ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೊಡಿ ಅಂತ ಪತ್ರ ಬರೆದು ಇನ್ನೊಂದು ವಿವಾದ ಮೈಮೇಲೆ ಎಳೆದುಕೊಂಡಿದ್ದು ಸರಿಯಲ್ಲ” ಎಂದು ಮುಸ್ಲಿಂ ನಾಯಕರು ಸಿಎಂ ಇಬ್ರಾಹಿಂ ವಿರುದ್ಧ ಕಿಡಿಕಾರಿದ್ದಾರೆ ಎಂಬ ಮಾತುಗಳು ಕೇಳಿ ಬಂದಿವೆ.
“ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ದೇವಸ್ಥಾನ, ಚರ್ಚ್, ಮಸೀದಿಗಳೆಲ್ಲಾ ಮುಚ್ಚಿರುವಾಗ ಸಾಮೂಹಿಕ ಪ್ರಾರ್ಥನೆಗೆ ಅವಕಾಶ ಕೊಡಿ ಎಂದು ಪತ್ರ ಬರೆದಿದ್ದು ಸರಿಯಲ್ಲ. ಧಾರ್ಮಿಕ ನಾಯಕರು ಯಾರಾದರು ಕೇಳಿದ್ದರೆ ಅಥವಾ ಪತ್ರ ಬರೆದಿದ್ದರೆ ಬೇರೆ ಮಾತು. ಒಬ್ಬ ರಾಜಕೀಯ ನಾಯಕನಾಗಿ ಹೀಗೆ ಪತ್ರ ಬರೆದು ವಿವಾದ ಮಾಡಿಕೊಂಡಿದ್ದಾರೆ. ಬಿಜೆಪಿಯವರ ಕೈಗೆ ಇವರೇ ವಿವಾದದ ಅಸ್ತ್ರ ಕೊಟ್ಟಿದ್ದಾರೆ” ಎಂದು ಮುಸ್ಲಿಂ ನಾಯಕರು ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ.
ದಾವಣಗೆರೆ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದಾವಣಗೆರೆ ಮುಸ್ಲಿಂ ಮುಖಂಡರು ಅಜಾದ್ ನಗರ ಪೊಲೀಸ್ ಠಾಣೆಯ ಮುಂಭಾಗ ಜಮಾಯಿಸಿದ್ದರು. ಅಲ್ಲದೆ ನಮಾಜ್ ಮಾಡಿ ಪ್ರತಿಭಟನೆ ಮಾಡಿದರು. ಆಗ ಪ್ರತಿಭಟನಾಕಾರರನ್ನು ಮನವೊಲಿಸುವ ಎಸ್‍ಪಿ ಹಾಗೂ ಜಿಲ್ಲಾಧಿಕಾರಿಗಳು ರಾಷ್ಟ್ರಗೀತೆಯನ್ನು ಹಾಡಿ ಮುಸ್ಲಿಂ ಮುಖಂಡರನ್ನು ಮನವೊಲಿಸಿದ್ದಾರೆ.
ನಗರದ ಅಜಾದ್ ನಗರ ಪೊಲೀಸ್ ಠಾಣೆಗೆ ಮುಸ್ಲಿಂ ಸಂಘಟನೆ ಹಾಗೂ ಮುಖಂಡರು ಪೌರತ್ವ ತಿದ್ದುಪಡಿ ಕಾಯ್ದೆ ವಿಚಾರವಾಗಿ ಪ್ರತಿಭಟನಾ ರ‍್ಯಾಲಿ ಹಮ್ಮಿಕೊಳ್ಳಲು ಅನುಮತಿಯನ್ನು ಪಡೆಯಲು ಬಂದಿದ್ದರು. ಜಿಲ್ಲಾದ್ಯಂತ 144 ಸೆಕ್ಷನ್ ಜಾರಿ ಇರುವ ಹಿನ್ನೆಲೆ ಯಾವುದೇ ಕಾರಣಕ್ಕೂ ಪ್ರತಿಭಟನಾ ರ‍್ಯಾಲಿಗೆ ಅನುಮತಿ ನೀಡಲಾಗುವುದಿಲ್ಲ ಎಂದು ಪೊಲೀಸರು ಹೇಳಿದರು. ಇದನ್ನು ವಿರೋಧಿಸಿ ಠಾಣೆಯ ಮುಂಭಾಗ ನೂರಾರು ಮುಸ್ಲಿಂ ಬಾಂಧವರು ಆಗಮಿಸಿ ರ‍್ಯಾಲಿಗೆ ಅನುಮತಿ ನೀಡಬೇಕೆಂದು ಪಟ್ಟು ಹಿಡಿದರು. ಅಲ್ಲದೆ ಠಾಣೆಯ ಮುಂದೆಯೇ ನಮಾಜ್ ಮಾಡಲು ಮುಂದಾದರು. ಆಗ ಪೊಲೀಸರು ಅವರಿಗೆ ಚಾಪೆಗಳನ್ನು ನೀಡಿ ನಮಾಜ್ ಮಾಡಲು ಸಹಕರಿದರು. ಇದನ್ನೂ ಓದಿ: ಪ್ರತಿಭಟನಾಕಾರರನ್ನು ಸಮಾಧಾನ ಮಾಡಲು ರಾಷ್ಟ್ರಗೀತೆ ಹಾಡಿದ ಡಿಸಿಪಿ: ವಿಡಿಯೋ
ನಮಾಜ್ ಬಳಿಕ ಎಸ್.ಪಿ ಹನುಮಂತರಾಯ ಅವರು ಮುಸ್ಲಿಂ ಮುಖಂಡರನ್ನು ಮನವೊಲಿಸಲು ಪ್ರಯತ್ನಿಸಿದರು. ಜಿಲ್ಲಾಧಿಕಾರಿಗಳೇ ಇಲ್ಲಿಗೆ ಬಂದು ನಿಮ್ಮ ಮನವಿಯನ್ನು ಸ್ವೀಕರಿಸುತ್ತಾರೆ ಎಂದು ಸಮಾಧಾನ ಪಡಿಸಲು ಮುಂದಾದರು. ಅದನ್ನು ಕೇಳದ ಮುಸ್ಲಿಂ ಮುಖಂಡರು ಅನುಮತಿಗಾಗಿ ಪಟ್ಟು ಹಿಡಿದು ಸ್ಥಳಕ್ಕೆ ಆಗಮಿಸಿದ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿಯವರನ್ನು ಕೂಡ ಸುತ್ತುವರೆದರು.
ಆದ್ದರಿಂದ ಮುಸ್ಲಿಂ ಮುಖಂಡರ ಮನವಿಯನ್ನು ಜಿಲ್ಲಾಧಿಕಾರಿಗಳು ಹಾಗೂ ಎಸ್‍ಪಿ ಅವರು ಸ್ವಿಕರಿಸಿದ್ದು, ಪ್ರತಿಭಟನಾಕಾರರನ್ನು ಸಮಾಧಾನ ಮಾಡಲು ಜಿಲ್ಲಾಧಿಕಾರಿ ಹಾಗೂ ಎಸ್‍ಪಿ ಅವರು ರಾಷ್ಟ್ರಗೀತೆ ಹಾಡಿ ಮನವೊಲಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮಡಿಕೇರಿ: ವಿಚಿತ್ರವಾಗಿ ಕೂದಲು ಕತ್ತರಿಸಿದ್ದಕ್ಕೆ ಮುಸ್ಲಿಂ ಮುಖಂಡರು ಕೊಡಗಿನ ಯುವಕನಿಗೆ ದಂಡ ಹಾಕಿದ್ದಾರೆ.
ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕಿನ ಬೇಟೋಳಿ ಅಂಚೆ ಗುಂಡಿಕೆರೆ ಗ್ರಾಮದ ‘ಶಾಫಿ ಮುಸ್ಲಿಂ ಜಮಾಯತ್’ ಕೆಲವು ತಿಂಗಳಿಂದ ಗ್ರಾಮದ ಯುವಕರಿಗೆ ‘ಪರಿವರ್ತನೆಯ ಪಾಠ’ ಮಾಡುತ್ತಿದೆ. ಗ್ರಾಮದ ಬಹುತೇಕ ಯುವಕರಲ್ಲಿ ಶಿಸ್ತು ತಂದ ಹೆಗ್ಗಳಿಕೆಗೆ ಪಾತ್ರವಾಗಿದೆ.
ಈ ಶಾಲೆಯ ಮೂವರು ವಿದ್ಯಾರ್ಥಿಗಳಿಗೆ ಎಚ್ಚರಿಕೆ ನೀಡಿದ್ದಾರೆ. ಹೊರ ರಾಜ್ಯದಲ್ಲಿ ಕೆಲಸ ಮಾಡುತ್ತಿದ್ದ ನಿಜಾಂ ಎಂಬ ಯುವಕ ವಿಚಿತ್ರವಾಗಿ ಕೇಶ ವಿನ್ಯಾಸ ಮಾಡಿಸಿಕೊಂಡು ಗ್ರಾಮದಲ್ಲಿ ಓಡಾಡುತ್ತಿದ್ದ. ಅದನ್ನು ಗಮನಿಸಿದ ಜಮಾಯತ್ ಸದಸ್ಯರು, ಆ ಯುವಕ ಹಾಗೂ ಅವರ ಪೋಷಕರನ್ನು ಕರೆಸಿ ಬುದ್ಧಿಮಾತು ಹೇಳಿದ್ದರು. ಅದಕ್ಕೂ ಕ್ಯಾರೆ ಎನ್ನದಿದ್ದಾಗ ದಂಡ ಪ್ರಯೋಗದ ಅಸ್ತ್ರ ಬಳಸಿದ್ದರು.
ಜೂನ್ 21ರಂದು ದಂಡದ ಆದೇಶ ಹೊರಡಿಸಿದ್ದು, ಅದರಲ್ಲಿ `ನೀವು ಜಮಾಯತ್‍ನ ಸದಸ್ಯರಾಗಿದ್ದು ನಮ್ಮ ತೀರ್ಮಾನದ ವಿರುದ್ಧವಾಗಿ ತಲೆ ಕೂದಲು ಬೆಳೆಸಿರುವ ಕಾರಣಕ್ಕೆ 5,000 ದಂಡ ವಿಧಿಸಲಾಗಿದೆ. ದಂಡ ಪಾವತಿಸದಿದ್ದಲ್ಲಿ ಮುಂದಿನ ಕ್ರಮ ಕೈಗೊಳ್ಳಲಾಗುವುದು’ ಎಂದು ಪತ್ರದಲ್ಲಿ ಎಚ್ಚರಿಕೆ ನೀಡಲಾಗಿತ್ತು.
ಪತ್ರದಿಂದ ಹೆದರಿದ ನಿಜಾಂ ಸೇರಿದಂತೆ ಮೂವರು ಯುವಕರು ಭಾನುವಾರ ನಡೆದ ಆಡಳಿತ ಮಂಡಳಿ ಸಭೆಯ ಸ್ಥಳಕ್ಕೆ ಕೂದಲು ತೆಗೆಸಿ ಶಿಸ್ತಿನಿಂದ ಬಂದಿದ್ದರು ಎಂದು ಜಮಾಯತ್ ಸದಸ್ಯರು ತಿಳಿಸಿದರು. ಗುಂಡಿಗೆರೆ ಜಿಲ್ಲೆಯಲ್ಲಿ ಮಾದರಿ ಗ್ರಾಮ. ಎಲ್ಲ ಧರ್ಮದ ಜನರೂ ಇಲ್ಲಿ ನೆಲೆಸಿದ್ದಾರೆ. ಸೌಹಾರ್ದ ಮೂಡಿಸುವ ಉದ್ದೇಶದಿಂದ ಕೆಲವು ನಿಯಮಗಳನ್ನು ಪಾಲಿಸಲಾಗುತ್ತಿದೆ. ಅದಕ್ಕೆ ತಕ್ಕ ಪ್ರತಿಫಲವೂ ಸಿಕ್ಕಿದೆ. ಮಾದರಿ ಜಮಾಯತ್ ಆಗಿಯೂ ರೂಪುಗೊಂಡಿದೆ.