Tag: Muslim League

  • ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ ಮುದ್ರೆ ಹೊಂದಿದೆ, ಎಡಪಂಥೀಯರ ಪ್ರಾಬಲ್ಯವಿದೆ – ಮೋದಿ ಆರೋಪ

    ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿ ಮುಸ್ಲಿಂ ಲೀಗ್‌ ಮುದ್ರೆ ಹೊಂದಿದೆ, ಎಡಪಂಥೀಯರ ಪ್ರಾಬಲ್ಯವಿದೆ – ಮೋದಿ ಆರೋಪ

    ನವದೆಹಲಿ: ಕಾಂಗ್ರೆಸ್‌ ಬಿಡುಗಡೆ ಮಾಡಿರುವ ಪ್ರಣಾಳಿಕೆಯು ಮುಸ್ಲಿಂ ಲೀಗ್‌ನ (Muslim League) ಮುದ್ರೆಯನ್ನು ಹೊಂದಿದೆ, ಅದರಲ್ಲಿ ಎಡಪಂಥೀಯರ ಪ್ರಾಬಲ್ಯ ಕಾಣುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ (Narendra Modi) ಆರೋಪಿಸಿದ್ದಾರೆ.

    ಸಹರಾನ್‌ಪುರದಲ್ಲಿ ಚುನಾವಣಾ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್‌ ಪ್ರಣಾಳಿಕೆಯು (Congress Manifesto) ಸ್ವಾತಂತ್ರ್ಯದ ಸಮಯದಲ್ಲಿ ಮುಸ್ಲಿಂ ಲೀಗ್‌ನಲ್ಲಿ ಪ್ರಚಲಿತದಲ್ಲಿದ್ದ ಚಿಂತನೆಗಳನ್ನೇ ಪ್ರತಿಬಿಂಬಿಸುತ್ತದೆ. ಪ್ರಣಾಳಿಕೆಯು ಸಂಪೂರ್ಣವಾಗಿ ಮುಸ್ಲಿಂ ಲೀಗ್‌ನ ಮುದ್ರೆ ಹೊಂದಿದೆ ಮತ್ತು ಪ್ರಣಾಳಿಕೆಯ ಉಳಿದ ಭಾಗವು ಎಡಪಂಥೀಯರ ಪ್ರಾಬಲ್ಯ ಹೊಂದಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ದೇಶಾದ್ಯಂತ ಜಾತಿಗಣತಿ, ಯುವಕರಿಗೆ ಉದ್ಯೋಗದ ಜೊತೆ 1 ಲಕ್ಷ ವೇತನ – ಕಾಂಗ್ರೆಸ್‌ ಚುನಾವಣಾ ಪ್ರಣಾಳಿಕೆ ಬಿಡುಗಡೆ

    ಕಾಂಗ್ರೆಸ್ ತನ್ನ ಆಡಳಿತದ ಅವಧಿಯಲ್ಲಿ ಕಮಿಷನ್ ಗಳಿಸುವುದರ ಮೇಲೆ ಕೇಂದ್ರೀಕೃತವಾಗಿತ್ತು. I.N.D.I.A ಮೈತ್ರಿಕೂಟವೂ ಅಧಿಕಾರಕ್ಕೆ ಬಂದ ನಂತರ ಕಮಿಷನ್ ಗಳಿಸುವ ಗುರಿ ಹೊಂದಿದೆ. ಆದರೆ NDA ಮತ್ತು ಮೋದಿ ಸರ್ಕಾರವು ಮಿಷನ್‌ನಲ್ಲಿದೆ. ಬಿಜೆಪಿ 370ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವುದನ್ನು ತಡೆಯಲು ಪ್ರತಿಪಕ್ಷಗಳು ಹೋರಾಡುತ್ತಿವೆ. ಸಮಾಜವಾದಿ ಪಕ್ಷವು ಪ್ರತಿ ಗಂಟೆಗೆ ಅಭ್ಯರ್ಥಿಗಳನ್ನು ಬದಲಾಯಿಸುತ್ತಿದೆ. ಮತ್ತೊಂದು ಕಡೆ ಕಾಂಗ್ರೆಸ್‌ನಲ್ಲಿ (Congress) ಅಭ್ಯರ್ಥಿಗಳೇ ಸಿಗುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.

    ಕಾಂಗ್ರೆಸ್ ತನ್ನ ಭದ್ರಕೋಟೆ ಎಂದು ಪರಿಗಣಿಸಲಾದ ಕ್ಷೇತ್ರಗಳಲ್ಲಿಯೂ ಅಭ್ಯರ್ಥಿಗಳನ್ನು ನಿಲ್ಲಿಸುವ ಧೈರ್ಯ ಮಾಡುತ್ತಿಲ್ಲ. I.N.D.I.A ಒಕ್ಕೂಟವು ಅಸ್ಥಿರತೆ ಮತ್ತು ಅನಿಶ್ಚಿತತೆಗೆ ಸಮಾನಾರ್ಥಕವಾಗಿದೆ ಮತ್ತು ದೇಶದ ಜನರು ಅದನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಶಕ್ತಿ ವಿರುದ್ಧ ಹೋರಾಡುವ ಬಗ್ಗೆ ವಿರೋಧ ಪಕ್ಷಗಳ ಒಕ್ಕೂಟ ಮಾತನಾಡುತ್ತಿರುವುದು ದೇಶದ ದೌರ್ಭಾಗ್ಯ. ಶಕ್ತಿಯನ್ನು ಆರಾಧಿಸುವುದು ನಮ್ಮ ನೈಸರ್ಗಿಕ ಆಧ್ಯಾತ್ಮಿಕ ಜೀವನದ ಒಂದು ಭಾಗವಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಇವಿಎಂನಲ್ಲೇ ಚುನಾವಣೆ, ಸ್ಲಿಪ್‌ ಮತದಾರನ ಕೈಗೆ ಸಿಗಬೇಕು : ಕಾಂಗ್ರೆಸ್‌ ಪ್ರಣಾಳಿಕೆ

    ಏಪ್ರಿಲ್ 19 ರಂದು ಲೋಕಸಭಾ ಚುನಾವಣೆಯ ಮೊದಲ ಹಂತದಲ್ಲಿ ಉತ್ತರ ಪ್ರದೇಶದ 8 ಲೋಕಸಭಾ ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಸಹರಾನ್‌ಪುರ್, ಕೈರಾನಾ, ಮುಜಾಫರ್‌ನಗರ, ಬಿಜ್ನೋರ್, ನಗೀನಾ, ಮೊರಾದಾಬಾದ್, ರಾಂಪುರ್ ಮತ್ತು ಪಿಲಿಭಿತ್ ನಲ್ಲಿ ಚುನಾವಣೆ ನಡೆಯಲಿದೆ. ಇದನ್ನೂ ಓದಿ: ಬೆಳಗ್ಗೆದ್ದು ಸೆಲ್‌ ಕ್ಲೀನ್‌, ಯೋಗ ನಂತ್ರ 2 ಪೀಸ್‌ ಬ್ರೆಡ್-‌ ಜೈಲಲ್ಲಿರೋ ಕೇಜ್ರಿವಾಲ್‌ ದಿನಚರಿ ಹೇಗಿದೆ?

    ಕಾಂಗ್ರೆಸ್‌ ಪ್ರಣಾಳಿಕೆಯಲ್ಲಿರುವ ಪ್ರಮುಖ ಅಂಶಗಳು
    – ದೇಶಾದ್ಯಂತ ಜಾತಿ ಗಣತಿ, ಹಿರಿಯ ನಾಗರಿಕರಿಗೆ ಸಾರ್ವಜನಿಕ ಸಾರಿಗೆ (ರೈಲು ಮತ್ತು ರಸ್ತೆ) ಯಲ್ಲಿ ರಿಯಾಯಿತಿ ದರದಲ್ಲಿ ಪ್ರಯಾಣ ಮರುಜಾರಿ
    – ಜಿಲ್ಲೆಗೊಂದು ಸರ್ಕಾರಿ ಮೆಡಿಕಲ್‌ ಕಾಲೇಜು/ಆಸ್ಪತ್ರೆ
    – ಆಶಾ,ಅಂಗನವಾಡಿ, ಬಿಸಿಯೂಟ ಕಾರ್ಯಕರ್ತೆಯರ ಕೇಂದ್ರದ ಪಾಲು ದ್ವಿಗುಣ
    – 2500ಕ್ಕಿಂತ ಜನಸಂಖ್ಯೆ ಜಾಸ್ತಿ ಇರುವ ಹಳ್ಳಿಗಳಲ್ಲಿ ಎರಡನೇ ಆಶಾ ಕಾರ್ಯಕರ್ತೆ ನೇಮಕ
    – 12ನೇ ತರಗತಿಯವರೆಗೆ ಮಧ್ಯಾಹ್ನದ ಬಿಸಿಯೂಟ
    – ರಾಜ್ಯಗಳ ಜೊತೆ ಚರ್ಚಿಸಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಬದಲಾವಣೆ
    – ಪಬ್ಲಿಕ್ ಶಾಲೆಗಳಲ್ಲಿ ಸ್ಪೆಷಲ್‌ ಫೀಸ್ ಗಳು ರದ್ದು
    – ಶಿಕ್ಷಕರನ್ನು ಶಿಕ್ಷಣೇತರ ಚಟುವಟಿಕೆಗಳಿಗೆ ಬಳಸಲ್ಲ
    – ಕೇಂದ್ರೀಯ ವಿದ್ಯಾಲಯ, ನವೋದಯ ವಿದ್ಯಾಲಯಗಳ ಸಂಖ್ಯೆ ರಾಜ್ಯಗಳ ಜೊತೆ ಚರ್ಚಿಸಿ ಹೆಚ್ಚಳ
    – ಪ್ರತಿ ತಾಲೂಕಿನಲ್ಲಿ ಸರ್ಕಾರಿ ಕಮ್ಯುನಿಟಿ ಕಾಲೇಜು (ಹಾಸ್ಪಿಟಾಲಿಟಿ, ಪ್ರವಾಸೋದ್ಯಮ, ಡಿಜಿಟಲ್ ಮಾರ್ಕೆಟಿಂಗ್ ಕೋರ್ಸ್ ಇತ್ಯಾದಿ ಕಲಿಕೆ)
    – 9 ರಿಂದ 12ನೇ ತರಗತಿಯ ಮಕ್ಕಳಿಗೆ ಮೊಬೈಲ್ ಫೋನ್ (ಶಾಲೆ, ಕಾಲೇಜು ಕ್ಯಾಂಪಸ್‌ನಲ್ಲಿ ಉಚಿತ ಅನ್ ಲಿಮಿಟೆಡ್ ಇಂಟರ್‌ನೆಟ್)
    – 21 ವರ್ಷದೊಳಗಿನ ಕ್ರೀಡಾ ಪ್ರತಿಭೆಗಳಿಗೆ ಪ್ರತಿ ತಿಂಗಳು 10 ಸಾವಿರ ರೂ.ಗಳ ಕ್ರೀಡಾ ಸ್ಕಾಲರ್ ಶಿಪ್
    – ಮಹಾಲಕ್ಷ್ಮಿ ಯೋಜನೆಯಡಿ ಬಡ ಮಹಿಳೆಯರಿಗೆ ವರ್ಷಕ್ಕೆ 1 ಲಕ್ಷ ರೂ.
    – ಕುಟುಂಬದ ಹಿರಿಯ ಮಹಿಳೆಯ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆ
    – ಮಹಿಳೆಯರು ಇಲ್ಲದಿದ್ದರೆ ಕುಟುಂಬದ ಅತಿ ಹಿರಿಯ ವ್ಯಕ್ತಿಯ ಖಾತೆಗೆ ಹಣ ವರ್ಗಾವಣೆ
    – ವಿವಿಧ ಹಂತಗಳಲ್ಲಿ ಮಹಾಲಕ್ಷ್ಮಿ ಯೋಜನೆ ಜಾರಿ. ಬಡತನ ನಿರ್ಮೂಲನೆಗೆ ಸಹಾಯವಾಗಿದೆಯಾ ಎಂದು ಕಾಲಕಾಲಕ್ಕೆ ಯೋಜನೆಯ ಅವಲೋಕನ
    – ಮಹಿಳಾ ಮೀಸಲಾತಿ 2025ರಲ್ಲಿ ನಡೆಯುವ ವಿಧಾನಸಭೆ ಚುನಾವಣೆಯಲ್ಲೇ ಜಾರಿ
    – 2025ರಿಂದ ಕೇಂದ್ರ ಸರ್ಕಾರದ ಉದ್ಯೋಗದಲ್ಲಿ ಮಹಿಳೆಯರಿಗೆ ಶೇ.50 ಮೀಸಲಾತಿ ಜಾರಿ
    – ಒಂದು ದೇಶ, ಒಂದು ಚುನಾವಣೆ ತಿರಸ್ಕಾರ
    – ಇವಿಎಂ ಮೂಲಕವೇ ಮತದಾನ ನಡೆಯಬೇಕು. ಆದರೆ ಬ್ಯಾಲಟ್ ಪೇಪರ್ ನಲ್ಲಿ ಪಾರದರ್ಶಕತೆ. ಮತದಾರನೇ ತನ್ನ ಕೈಯಾರೆ ಇವಿಎಂ ಮತದಾನದ ಬಳಿಕ ಯಂತ್ರವು ನೀಡುವ ವೋಟರ್ ಸ್ಲಿಪ್ ವಿವಿಪ್ಯಾಟ್ ಯೂನಿಟ್ ಗೆ ಹಾಕಲು ವ್ಯವಸ್ಥೆ. ಎಲೆಕ್ಟ್ರಾನಿಕ್ ವೋಟ್ ಮತ್ತು ವಿವಿಪ್ಯಾಟ್ ಸ್ಲಿಪ್ ಟ್ಯಾಲಿ ಆಗಲೇಬೇಕು.
    – ಶಾಸಕ ಅಥವಾ ಸಂಸದ ಪಕ್ಷ ಬದಲಾಯಿಸಿದರೆ (ಗೆದ್ದ ಪಕ್ಷ ಬಿಟ್ಟು ಬೇರೆ ಪಕ್ಷಕ್ಕೆ ಹೋದರೆ) ಆಟೋಮ್ಯಾಟಿಕ್ ಆಗಿ ಶಾಸಕ ಅಥವಾ ಸಂಸದನ ಸ್ಥಾನ ಅನರ್ಹತೆ. ಇದಕ್ಕಾಗಿ 10ನೇ ಶೆಡ್ಯೂಲ್‌ಗೆ ತಿದ್ದುಪಡಿ.

  • ‘ದಿ ಕೇರಳ ಸ್ಟೋರಿ’ ಮಾಹಿತಿ ಸಾಬೀತು ಮಾಡಿದರೆ 1 ಕೋಟಿ ಬಹುಮಾನ ಘೋಷಣೆ

    ‘ದಿ ಕೇರಳ ಸ್ಟೋರಿ’ ಮಾಹಿತಿ ಸಾಬೀತು ಮಾಡಿದರೆ 1 ಕೋಟಿ ಬಹುಮಾನ ಘೋಷಣೆ

    ಳೆದ ಎರಡು ವಾರಗಳಿಂದ ‘ದಿ ಕೇರಳ ಸ್ಟೋರಿ’ (The Kerala Story) ಸಿನಿಮಾದ ಬಗ್ಗೆ ಸಾಕಷ್ಟು ಪರ ವಿರೋಧದ ಮಾತು ಕೇಳಿ ಬರುತ್ತಿದೆ. ಈ ಸಿನಿಮಾದಲ್ಲಿರುವುದು ಸತ್ಯ ಎಂದು ಚಿತ್ರತಂಡ ಹೇಳಿಕೊಂಡರೆ, ಅದು ಕಪೋಕಲ್ಪಿತ ಕಥೆ ಎಂದು ಹಲವರು ವಾದಿಸುತ್ತಿದ್ದಾರೆ. ಈ ಸಿನಿಮಾ ಪ್ರದರ್ಶನಕ್ಕೆ ತಡೆಕೋರಿ ಸುಪ್ರೀಂ ಕೋರ್ಟ್ (Supreme Court) ಮೆಟ್ಟಿಲು ಕೂಡ ಏರಲಾಗಿತ್ತು. ಆದರೆ, ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಳ್ಳಲು ಸುಪ್ರೀಂ ನಿರಾಕರಿಸಿತ್ತು. ಹೈಕೋರ್ಟ್ ಗೆ ಹೋಗಲು ಸೂಚನೆ ನೀಡಿತ್ತು. ಇಷ್ಟೆಲ್ಲ ಬೆಳವಣಿಗೆ ಮಧ್ಯಯೇ ಮತ್ತೊಂದು ಸವಾಲು ಘೋಷಣೆ ಆಗಿದೆ.

    ಈ ಸಿನಿಮಾದಲ್ಲಿಯ ಮಾಹಿತಿಯು ನಿಜ ಅಂತ ಸಾಬೀತು ಪಡಿಸಿದರೆ ಒಂದು ಕೋಟಿ ರೂಪಾಯಿ ಬಹುಮಾನ (Prize)ಕೊಡುವುದಾಗಿ ಮುಸ್ಲಿಂ ಯೂತ್ ಲೀಗ್ ಕೇರಳ ರಾಜ್ಯ ಕಮಿಟಿಯು ಘೋಷಿಸಿದೆ. ಸಿನಿಮಾದಲ್ಲಿ ಸುಳ್ಳುಗಳ ಸರಮಾಲೆಯೇ ಇದೆ. ಅವರು ಹೇಳುತ್ತಿರುವುದು ನಿಜ ಎಂದು ಸಾಬೀತು ಪಡಿಸಲಿ ಎಂದು ಹೇಳಿಕೆ ನೀಡಿದೆ. ಇದನ್ನೂ ಓದಿ:ಎಲೆಕ್ಷನ್ ರಿಸಲ್ಟ್ ದಿನವೇ ರಾಘವ್ ಚಡ್ಡಾ- ಪರಿಣಿತಿ ಚೋಪ್ರಾ ಎಂಗೇಜ್‌ಮೆಂಟ್

    ಕಾಂಗ್ರೆಸ್ ಜೊತೆಗೆ ಡೆಮಾಕ್ರೆಟಿಕ್ ಯೂತ್ ಫೆಡರೇಷನ್ ಆಫ್ ಇಂಡಿಯಾ (DYFI) ಕೂಡ ವಿರೋಧವನ್ನು ವ್ಯಕ್ತ ಪಡಿಸಿದ್ದು, ಸಂಘ ಪರಿವಾರದವರು ಸೇರಿಕೊಂಡು, ಒಂದು ಸಮುದಾಯದ ವಿರುದ್ಧ ಕೆಟ್ಟ ಅಭಿಪ್ರಾಯ ಹುಟ್ಟುವಂತೆ ಈ ಸಿನಿಮಾವನ್ನು ತೋರಿಸಲು ಹೊರಟಿದ್ದಾರೆ. ಇದು ಕೇರಳ ರಾಜ್ಯಕ್ಕೂ ಅಪಮಾನ ಮಾಡುವಂತಹ ಚಿತ್ರ. ಹಾಗಾಗಿ ಕೂಡಲೇ ಬಿಡುಗಡೆಯನ್ನು ತಡೆಯಬೇಕು ಎಂದು ಮನವಿ ಮಾಡಿವೆ.

    ನಾಲ್ಕು ದಿನಗಳ ಹಿಂದೆಯಷ್ಟೇ ಚಿತ್ರದ ಟ್ರೈಲರ್ ರಿಲೀಸ್ ಆಗಿದ್ದು ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಲವ್ ಜಿಹಾದ್ ಸುತ್ತಾ ಹೆಣೆದಿರುವ ಕಥಾ ಹಂದರ ಬಿಜೆಪಿಗೆ ಚುನಾವಣೆ ಅಸ್ತ್ರವಾಗಲಿದೆ ಎನ್ನುವುದು ಸಿನಿ ಪಂಡಿತರ ಲೆಕ್ಕಾಚಾರ. ಮೇ 05 ರಂದು ದೇಶದಾದ್ಯಂತ ಈ ಸಿನಿಮಾ ರಿಲೀಸ್ ಆಗುತ್ತಿದ್ದು, ಅದಕ್ಕೂ ಮುನ್ನ ಹಲವು ಕಡೆ ವಿಶೇಷ ಪ್ರದರ್ಶನವನ್ನೂ ಆಯೋಜಿಸಲಾಗಿದೆ.

  • RSS ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖಾದರ್‌ಗೆ ಎಚ್ಚರಿಕೆ

    RSS ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಖಾದರ್‌ಗೆ ಎಚ್ಚರಿಕೆ

    ತಿರುವನಂತರಪುರಂ: ಕೇರಳದ ಕೋಝಿಕ್ಕೋಡ್ ಜಿಲ್ಲೆಯಲ್ಲಿ ಆರ್‌ಎಸ್‍ಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಲ್ಲಿ ಭಾಷಣ ಮಾಡಿದ್ದ ಐಯುಎಂಎಲ್ ಹಿರಿಯ ಮುಖಂಡರಾದ ಮಾಜಿ ಶಾಸಕ ಕೆ.ಎನ್.ಎ. ಖಾದರ್ ಅವರಿಗೆ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ (ಐಯುಎಂಎಲ್) ಎಚ್ಚರಿಕೆ ನೀಡಿದೆ.

    ದಾರ್ಶನಿಕ ಮತ್ತು ಖ್ಯಾತ ವಾಗ್ಮಿಯಾದ ಖಾದರ್ ಅವರನ್ನು ಕೆಲವು ದಿನಗಳ ಹಿಂದೆ ಕೋಝಿಕ್ಕೋಡ್‍ನ ಕೇಸರಿ ಭವನದಲ್ಲಿ ಸ್ನೇಹಬೋಧಿ ಸಾಂಸ್ಕೃತಿಕ ಸಭೆಯಲ್ಲಿ ಗೌರವಿಸಲಾಗಿತ್ತು. ಇದು ಆರ್‌ಎಸ್‍ಎಸ್ ಪ್ರಾಯೋಜಿತ ಕಾರ್ಯಕ್ರಮವಾಗಿ. ಅಲ್ಲಿ ಮಾತನಾಡಿದ್ದ ಖಾದರ್ ಅವರು, ಗುರುವಾಯೂರು ಶ್ರೀಕೃಷ್ಣ ದೇವಸ್ಥಾನವನ್ನು ಪ್ರವೇಶಿಸುವ ಬಯಕೆಯನ್ನು ವ್ಯಕ್ತಪಡಿಸಿದ್ದರು.

    ಉತ್ತರ ಭಾರತದ ಹಲವು ದೇವಾಲಯಗಳಿಗೆ ಭೇಟಿ ನೀಡಿದ್ದೇನೆ. ಆದರೆ ಗುರುವಾಯೂರ್‌ನಲ್ಲಿರುವ ಶ್ರೀಕೃಷ್ಣ ದೇವಾಲಯವನ್ನು ಪ್ರವೇಶಿಸಲು ಸಾಧ್ಯವಾಗಲಿಲ್ಲ ಎಂದು ಅವರು ಆರ್‌ಎಸ್‍ಎಸ್ ಕಾರ್ಯಕ್ರಮದಲ್ಲಿ ತಿಳಿಸಿದ್ದರು. ಇದನ್ನೂ ಓದಿ: ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಜಯಲಲಿತಾ ಸೀರೆ, ಚಪ್ಪಲಿ ಹರಾಜು?

    ಹೀಗಾಗಿ ಪಕ್ಷದ ನಾಯಕತ್ವವು ಖಾದರ್ ಅವರಿಂದ ವಿವರಣೆ ಕೇಳಿತ್ತು. ಖಾದರ್ ನೀಡಿದ ವಿವರಣೆಯ ಬಗ್ಗೆ ಚರ್ಚಿಸಿದ ಪಕ್ಷದ ಹೈಪವರ್ ಕಮಿಟಿಯು ಪಕ್ಷದ ಸಂಪ್ರದಾಯವನ್ನು ಕಡೆಗಣಿಸಿರುವ ಬಗ್ಗೆ ಎಚ್ಚರಿಕೆ ನೀಡಲು ನಿರ್ಧರಿಸಿದೆ ಎಂದು ಲೀಗ್ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಕಬ್ಬಿನ ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಶಾಲಾ ಬಾಲಕಿ ಸಾವು

    ಖಾದರ್ ಅವರು ಹೆಚ್ಚು ಜಾಗರೂಕರಾಗಿರಬೇಕು. ಅವರು ಮಾಡುವ ಭಾಷಣಗಳು ಮತ್ತು ಸಾರ್ವಜನಿಕ ಹೇಳಿಕೆಗಳು ಪಕ್ಷದ ನೀತಿಗಳು ಮತ್ತು ಆಚರಣೆಗಳಿಗೆ ಅನುಗುಣವಾಗಿ ಇರುವಂತೆ ನೋಡಿಕೊಳ್ಳಬೇಕು ಎಂದು ಪಕ್ಷವು ಅವರಿಗೆ ಎಚ್ಚರಿಕೆ ನೀಡಿದೆ. ವೆಂಗಾರ ಮಾಜಿ ಶಾಸಕ ಖಾದರ್ 2021ರ ವಿಧಾನಸಭೆ ಚುನಾವಣೆಯಲ್ಲಿ ಗುರುವಾಯೂರಿನಿಂದ ಸೋತಿದ್ದರು.

    Live Tv

  • ರಾಹುಲ್ ಗಾಂಧಿಗೆ ಮುಸ್ಲಿಂ ಲೀಗ್ ವೈರಸ್ ತಗುಲಿದೆ: ಯೋಗಿ ಆದಿತ್ಯನಾಥ್

    ರಾಹುಲ್ ಗಾಂಧಿಗೆ ಮುಸ್ಲಿಂ ಲೀಗ್ ವೈರಸ್ ತಗುಲಿದೆ: ಯೋಗಿ ಆದಿತ್ಯನಾಥ್

    ಲಕ್ನೋ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಮುಸ್ಲಿಂ ಲೀಗ್ ‘ವೈರಸ್’ ತಗುಲಿದ್ದು, ಅವರು ಹೆಚ್ಚು ಕಾಲ ಉಳಿಯುವುದಿಲ್ಲ ಎಂದು ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

    ಟ್ವೀಟ್ ಮೂಲಕ ರಾಹುಲ್ ಗಾಂಧಿ ವಿರುದ್ಧ ಯೋಗಿ ಆದಿತ್ಯನಾಥ್ ವ್ಯಂಗ್ಯವಾಡಿದ್ದು, ಮುಸ್ಲಿಂ ಲೀಗ್ ವೈರಸ್ ಇದ್ದಂತೆ. ಈ ಸೋಂಕು ತಗಲಿದವರು ಯಾರೂ ಉಳಿದಿಲ್ಲ. ಕಾಂಗ್ರೆಸ್‍ಗೆ ಈಗಾಗಲೇ ಮುಸ್ಲಿಂ ಲೀಗ್ ಸೋಂಕು ತಗುಲಿದೆ. ಮುಸ್ಲಿಂ ಲೀಗ್ ವೈರಸ್ ತಗುಲಿದ ರಾಹುಲ್ ಗಾಂಧಿ ಅವರು ಗೆಲುವು ಸಾಧಿಸಿದರೆ ದೇಶದ ಪರಿಸ್ಥಿತಿ ಏನಾಗುತ್ತದೆ. ಈ ವೈರಸ್ ದೇಶಾದ್ಯಂತ ಹರಡುತ್ತದೆ ಎಂದು ದೂರಿದ್ದಾರೆ.

    ‘1857ರ ಸ್ವಾತಂತ್ರ್ಯ ಸಂಗ್ರಾಮದಲ್ಲಿ ದೇಶ ಜನರು ಮಂಗಲ್ ಪಾಂಡೆ ಅವರ ಜೊತೆಗೆ ಸೇರಿ ಬ್ರಿಟಿಷರ ವಿರುದ್ಧ ಹೋರಾಡಿದ್ದರು. ಆದರೆ ಆಗ ಹುಟ್ಟಿಕೊಂಡ ಈ ಮುಸ್ಲಿಂ ಲೀಗ್ ವೈರಸ್ ದೇಶಾದ್ಯಂತ ಹರಡಿ ರಾಷ್ಟ್ರ ವಿಭಜನೆಗೆ ಕಾರಣವಾಯಿತು ಎಂದು ಹೇಳಿದ್ದಾರೆ.

    ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರ ಉಗ್ರರಿಗೆ ಬಿರಿಯಾನಿ ಕೊಡುತ್ತಿತ್ತು. ಆದರೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರವು ಉಗ್ರರಿಗೆ ಬಾಂಬ್, ಬುಲೆಟ್ ತಿನಿಸುತ್ತಿದೆ ಎಂದು ಹೇಳಿದರು.

    ರಾಹುಲ್ ಗಾಂಧಿ ಅವರು ಕೇರಳದ ವಯನಾಡು ಲೋಕಸಭಾ ಕ್ಷೇತ್ರದಲ್ಲಿ ಗುರುವಾರ ನಾಮಪತ್ರ ಸಲ್ಲಿಸಿದ್ದಾರೆ. ಕೇರಳದಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್‍ಗೆ ಮುಸ್ಲಿಂ ಲೀಗ್ ಸಾಂಪ್ರದಾಯಿಕ ಮಿತ್ರ ಪಕ್ಷವಾಗಿದೆ. ಹೀಗಾಗಿ ಮುಸ್ಲಿಂ ಲೀಗ್ ಕಾರ್ಯಕರ್ತರು ರಾಹುಲ್ ಗಾಂಧಿ ನಾಮಪತ್ರದ ದಿನದಂದು ನಡೆದ ಬೃಹತ್ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಜೊತೆಗೆ ತಮ್ಮ ಪಕ್ಷದ ಹಸಿರು ಬಾವುಟಗಳನ್ನು ಹಿಡಿದು ಸಂಭ್ರಮಿಸಿದ್ದರು.

  • ರೋಷನ್ ಬೇಗ್‍ರನ್ನು ಡಿಸಿಎಂ ಮಾಡಿ: ಮುಸ್ಲಿಂ ಸಂಘಟನೆಗಳಿಂದ ಬೇಡಿಕೆ

    ರೋಷನ್ ಬೇಗ್‍ರನ್ನು ಡಿಸಿಎಂ ಮಾಡಿ: ಮುಸ್ಲಿಂ ಸಂಘಟನೆಗಳಿಂದ ಬೇಡಿಕೆ

    ಬೆಂಗಳೂರು: ನಮ್ಮ ಸಮುದಾಯದ ನಾಯಕರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟವು ಒತ್ತಾಯಿಸಿದೆ.

    ಈ ಹಿಂದೆ ವೀರಶೈವ ಸಮಾಜದ ಮುಖಂಡರು ತಮ್ಮ ಸಮಾಜದವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಮತ್ತು 5 ಮಂದಿ ಶಾಸಕರಿಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದರು. ಈ ಬೆನ್ನಲ್ಲೆ, ಶಿವಾಜಿನಗರದ ಶಾಸಕ ಆರ್.ರೋಷನ್ ಬೇಗ್ ಅವರನ್ನು ಉಪಮುಖ್ಯಮಂತ್ರಿ ಮಾಡಬೇಕು ಎಂದು ಮುಸ್ಲಿಂ ಸಂಘಟನೆಗಳ ಒಕ್ಕೂಟದ ಪ್ರಧಾನ ಸಂಚಾಲಕ ಸಮಿಉಲ್ಲಾ ಖಾನ್ ಒತ್ತಾಯಿಸಿದ್ದಾರೆ.

    ರಾಜಕೀಯದಲ್ಲಿ ಮುಸ್ಲಿಮರಿಗೆ ಅನ್ಯಾಯವಾಗುತ್ತಿದೆ. ಹೀಗಾಗಿ, ಕಾಂಗ್ರೆಸ್‍ನಿಂದ ಏಳು ಬಾರಿ ಶಾಸಕರಾಗಿ ಆಯ್ಕೆಯಾಗಿರುವ ರೋಷನ್ ಬೇಗ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದ್ದಾರೆ.