ಬೆಂಗಳೂರು: ಹಿಜಬ್, ಹಲಾಲ್, ಅಜಾನ್ ಬೆನ್ನೆಲೆ ಇದೀಗ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಹಿಂದೂ ಪರ ಸಂಘಟನೆಗಳು ಅಭಿಯಾನ ಶುರುವಾಗಿದೆ.
ಮೇ 3ರಂದು ಅಕ್ಷಯ ತೃತೀಯ ಹಬ್ಬವಿದ್ದು, ಈ ವಿಶೇಷ ದಿನ ಸಾಮಾನ್ಯವಾಗಿ ಜನರು ಚಿನ್ನ ಖರೀದಿಗೆ ಮುಗಿಬೀಳುತ್ತಾರೆ. ಈ ಹಿನ್ನೆಲೆ ಮುಸ್ಲಿಂ ವ್ಯಾಪಾರಿಗಳ ಬಳಿ ಚಿನ್ನ ಖರೀದಿ ಮಾಡದಂತೆ ಟ್ವಿಟ್ಟರ್‌ನಲ್ಲಿ ಹಿಂದೂ ಪರ ಸಂಘಟನೆಗಳು ಅಭಿಯಾನ ಪ್ರಾರಂಭವಾಗಿದೆ.
ರಾಜ್ಯದಲ್ಲಿ ಸರಿ ಸುಮಾರು ಮೂವತ್ತು ಸಾವಿರ ಚಿನ್ನದಂಗಡಿಗಳಿವೆ. ಅದರಲ್ಲಿ ಶೇಕಡಾ 30 ರಷ್ಟು ಮುಸ್ಲಿಂ ಮಾಲೀಕತ್ವದ ಮಳಿಗೆಗಳಿದ್ದು, ಬಹುತೇಕ ಮುಸ್ಲಿಂ ವ್ಯಾಪಾರಿಗಳು ಕೇರಳ ಮೂಲದ ಮುಸ್ಲಿಂ ವ್ಯಾಪಾರಿಗಳಾಗಿದ್ದಾರೆ. ಕಳೆದ ಎರಡು ವರ್ಷದಿಂದ ಕೊರೊನಾ ಹಿನ್ನೆಲೆ ವ್ಯಾಪಾರ ಡಲ್ ಆಗಿತ್ತು. ಆದರೆ ಈ ವರ್ಷದ ಅಕ್ಷಯ ತೃತೀಯಕ್ಕೆ ಭರ್ಜರಿ ವ್ಯಾಪಾರದ ನಿರೀಕ್ಷೆಯಲ್ಲಿ ಚಿನ್ನದ ಅಂಗಡಿ ಮಾಲೀಕರಿದ್ದಾರೆ. ಇದನ್ನೂ ಓದಿ: ಗೋಡ್ಸೆ ಸಿದ್ಧಾಂತವನ್ನು ಮೋದಿ ಬೆಂಬಲಿಸುತ್ತಿದ್ದಾರೆ: ಕೆಟಿಆರ್
ಅಕ್ಷಯ ತೃತೀಯ ದಿನದಂದೇ ರಾಜ್ಯಾದ್ಯಂತ ಬರೋಬ್ಬರಿ ಒಂದು ಸಾವಿರ ಕೋಟಿ ವ್ಯಾಪಾರವಾಗುಚ ನಿರೀಕ್ಷೆಯನ್ನು ಮಾಲೀಕರು ಹೊಂದಿದ್ದಾರೆ. ಸದ್ಯ ಶುರುವಾಗಿರುವ ಅಭಿಯಾನದಿಂದ ಯಾರಿಗೆ ನಷ್ಟ, ಯಾರಿಗೆ ಲಾಭ ಎನ್ನುವ ಲೆಕ್ಕಾಚಾರ ಆರಂಭವಾಗಿದ್ದು, ಒಂದು ವೇಳೆ ಅಭಿಯಾನ ಸಕ್ಸಸ್ ಆದರೆ, ನೂರಾರು ಕೋಟಿ ವ್ಯಾಪಾರಕ್ಕೆ ಕತ್ತು ಬೀಳಲಿದೆ. ಇನ್ನೂ ಈ ಅಭಿಯಾನಕ್ಕೆ ಹಿಂದೂ ಪರ ಸಂಘಟನೆಗಳು ಸಾಥ್ ನೀಡುತ್ತಾರಾ ಕಾದು ನೋಡಬೇಕಾಗಿದೆ. ಇದನ್ನೂ ಓದಿ:ಪ್ರಧಾನಿ ಮೋದಿಗೆ ದೀನನಾಥ್ ಮಂಗೇಶ್ಕರ್ ಪ್ರಶಸ್ತಿ ಪ್ರದಾನ
ಧಾರವಾಡ: ದೇವಸ್ಥಾನದ ಬಳಿ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕೆಂಬ ಚರ್ಚೆ ಕಳೆದ ಒಂದು ತಿಂಗಳಿನಿಂದ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನವೊಂದರ ಬಳಿ ಹಿಂದೂಯೇತರರು ಮಾರಾಟಮಾಡುತ್ತಿದ್ದ ಕಲ್ಲಂಗಡಿ ಹಾಗೂ ತೆಂಗಿನಕಾಯಿಯನ್ನು ಶ್ರೀರಾಮಸೇನೆ ಕಾರ್ಯಕರ್ತರು ಒಡೆದು ಹಾಕಿರುವ ಘಟನೆ ಧಾರವಾಡದಲ್ಲಿ ನಡೆದಿದೆ.
ಧಾರವಾಡ ಹೊರವಲಯದ ನುಗ್ಗಿಕೇರೆ ಆಂಜನೇಯನ ದೇವಸ್ಥಾನಕ್ಕೆ ಶನಿವಾರ ಸಾವಿರಾರು ಭಕ್ತರು ಬಂದು ದರ್ಶನ ಪಡೆಯುತ್ತಾರೆ. ದೇವಸ್ಥಾನದ ಬಳಿ 4 ಹಿಂದೂಯೇತರ ಅಂಗಡಿಗಳಿದ್ದು, ಕಳೆದ 15 ದಿನಗಳ ಹಿಂದೆ ಶ್ರೀರಾಮ ಸೇನೆಯ ಕಾರ್ಯಕರ್ತರು ದೇವಸ್ಥಾನದ ಬಳಿ ಬಂದು ಪ್ರತಿಭಟನೆ ಮಾಡಿದ್ದರು. ಈ ವೇಳೆ ಹಿಂದೂಯೇತರ ಅಂಗಡಿಗಳನ್ನು ಬಂದ್ ಮಾಡಿಸಬೇಕು ಎಂದು ಮನವಿ ಮಾಡಿದ್ದರು. ಶನಿವಾರ ಹಿಂದೂಯೇತರ ಅಂಗಡಿಗಳು ಮುಚ್ಚದೇ ಇದ್ದಿದ್ದರಿಂದ ಶ್ರೀರಾಮ ಸೇನೆ ಕಾರ್ಯಕರ್ತರು ಸ್ಥಳಕ್ಕೆ ಬಂದು ಅಂಗಡಿಗಳಲ್ಲಿದ್ದ ಕಲ್ಲಂಗಡಿ ಹಣ್ಣು ಹಾಗೂ ತೆಂಗಿನಕಾಯಿಗಳನ್ನು ಒಡೆದು ಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಮುಕ್ತ ಭಾರತ ಮಾಡೋಕೆ ಯಾರಪ್ಪನ ಕೈಯಲ್ಲೂ ಆಗಲ್ಲ: ನಲಪಾಡ್
ಘಟನೆಯಿಂದ ನಷ್ಟ ಅನುಭವಿಸಿದ ಹಿಂದೂಯೇತರ ವ್ಯಾಪಾರಿ ನಬಿಸಾಬ್, ನೋಡ ನೋಡುತ್ತಿದ್ದಂತೆಯೇ ಎಲ್ಲಾ ಒಡೆಯುತ್ತ ಬಂದರು. ಅವರು 8-10 ಜನ ಇದ್ದರು. ನಾನೊಬ್ಬನೇ ಇದ್ದಿದ್ದರಿಂದ ಏನೂ ಮಾಡಲಾಗಲಿಲ್ಲ. 6 ಕ್ವಿಂಟಾಲ್ ಕಲ್ಲಂಗಡಿ ಹಣ್ಣು ತೆಗೆದುಕೊಂಡು ಬಂದಿದ್ದೆ. ಅದರಲ್ಲಿ 1 ಕ್ವಿಂಟಾಲ್ ಮಾತ್ರ ಮಾರಾಟವಾಗಿತ್ತು ಎಂದು ಮರುಗಿದರು.
ನಾನು ಕಳೆದ 15 ವರ್ಷಗಳಿಂದ ವ್ಯಾಪಾರ ಮಾಡುತ್ತಿದ್ದೇನೆ. ಕಳೆದ ವಾರ ಇಲ್ಲಿ ಮುಸ್ಲಿಮರಿಗೆ ಅಂಗಡಿ ಹಾಕಬೇಡಿ ಎಂದಿದ್ದರು. ಮುಂದಿನ ವಾರವೇ ದೇವಸ್ಥಾನದ ಜಾತ್ರೆ ಇತ್ತು. ಜಾತ್ರೆಯ ಬಳಿಕ ಹಿಂದೂಯೇತರ ಅಂಗಡಿಗಳನ್ನು ಇಲ್ಲಿ ಇಡಬೇಕಾ, ಬೆಡವಾ ಎಂದು ನಿರ್ಧಾರ ಆಗಬೇಕಿತ್ತು. ಅಷ್ಟರಲ್ಲಿ ಈ ಗಲಾಟೆ ನಡೆಸಲಾಗಿದೆ. ಮತ್ತೊಂದು ಕಡೆ ದೇವಸ್ಥಾನದ ಆಡಳಿತ ಮಂಡಳಿ ಎಲ್ಲ ಪರ್ಯಾಯಸ್ಥರ ಸಭೆ ಮಾಡಿ, ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ ಎಂದು ತಿಳಿಸಿದರು.
ಘಟನೆ ಬಗ್ಗೆ ಪ್ರತಿಕ್ರಿಯಿಸಿದ ದೇವಸ್ಥಾನದ ಪರ್ಯಾಯಸ್ಥರು, ಶನಿವಾರ ಯಾವಾಗಲೂ ದೇವಸ್ಥಾನಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುತ್ತಾರೆ. ಹೀಗಾಗಿ ಆ ಕಡೆ ಗಲಾಟೆ ನಡೆದಿರುವ ಬಗ್ಗೆ ಲಕ್ಷ್ಯ ಕೊಡಲು ಸಾಧ್ಯವಾಗಲಿಲ್ಲ. ಈ ಬಗ್ಗೆ ಸಭೆ ಮಾಡಿ ಏನಾಗಿದೆ ಎಂದು ಮಾಹಿತಿ ಕೊಡುತ್ತೇನೆ ಎಂದರು. ಇದನ್ನೂ ಓದಿ: ಲವ್ ಜಿಹಾದ್‍ಗೆ ಮುಂದಾದವರ ಮನೆ ಹೊಕ್ಕು ಹೊಡೆಯಬೇಕು: EX MLC ನಾರಾಯಣಸಾ ಭಾಂಡಗೆ
ಕಳೆದ ತಿಂಗಳು ಈ ವಿಚಾರವಾಗಿ ಮನವಿ ಬಂದಿತ್ತು. ನಾನು ಬಂದು ಇನ್ನೂ ಒಂದು ತಿಂಗಳಾಗಲಿಲ್ಲ. ಮನವಿ ಹಾಗೂ ಗಲಾಟೆ ಬಗ್ಗೆ ಸಭೆ ಕರೆದು ನೋಡುತ್ತೇವೆ. ಅಂಗಡಿಗಳಿಗೆ ಅನುಮತಿ ಕೊಡುವುದು ನಾವೆ. ನಾವು ಅವರಿಂದ ಬಾಡಿಗೆ ತೆಗೆದುಕೊಳ್ಳುವುದಿಲ್ಲ. ಬಡವರು ಎಂದು ಅಂಗಡಿ ನಡೆಸಲು ಕೊಟ್ಟಿದ್ದೇವೆ. ಇಲ್ಲಿರುವ ಶೇ.99 ರಷ್ಟು ವ್ಯಾಪಾರಿಗಳು ಹಿಂದೂಗಳು. ಎಲ್ಲರಿಗೂ ಹೊಟ್ಟೆ ಪಾಡಿದೆ. ನಾವು ಎಲ್ಲರಿಗೂ ಸಹಾಯ ಮಾಡುತ್ತೇವೆ ಎಂದರು.
ಉಡುಪಿ: ಹಿಂದೂ ಸಮಾಜ ಬಹಳ ಕಾಲದಿಂದ ನೋವನ್ನು ಉಂಡಿದೆ. ಹಲವಾರು ಅಹಿತಕರ ಘಟನೆಗಳಿಂದ ಹಿಂದೂ ಸಮಾಜ ಬಹಳ ನೋವಿನಲ್ಲಿದೆ. ನಾಲ್ಕು ಮಂದಿ ಧಾರ್ಮಿಕ ಮುಖಂಡರು ಕುಳಿತು ಮಾತನಾಡುವುದರಿಂದ ಸಮಸ್ಯೆ ಬಗೆಹರಿಸಲು ಸಾಧ್ಯವಿಲ್ಲ ಎಂದು ಪೇಜಾವರ ಮಠಾಧೀಶ ವಿಶ್ವ ಪ್ರಸನ್ನ ತೀರ್ಥ ಸ್ವಾಮೀಜಿ ನೇರ ಸಂದೇಶ ರವಾನೆ ಮಾಡಿದ್ದಾರೆ.
ಉಡುಪಿ ಪೇಜಾವರ ಮಠದ ರಾಮ ವಿಠಲ ಸಭಾಭವನದಲ್ಲಿ ಮುಸಲ್ಮಾನ ವರ್ತಕರು, ಮುಸ್ಲಿಂ ಮುಖಂಡರುಗಳು, ಕ್ರೈಸ್ತ ಧರ್ಮಗುರುಗಳು ಪೇಜಾವರ ಶ್ರೀಗಳನ್ನು ಭೇಟಿಯಾಗಿ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಚರ್ಚೆ ಮಾಡಿದರು. ಭೇಟಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸ್ವಾಮೀಜಿ, ತಳಮಟ್ಟದಲ್ಲಿ ಇದಕ್ಕೆ ಪರಿಹಾರ ಆಗಬೇಕಾಗಿದೆ. ನಿರಂತರವಾಗಿ ಅನ್ಯಾಯವಾದಾಗ ಬೇಸರ ನೋವು ಸ್ಫೋಟವಾಗುತ್ತದೆ. ಇದನ್ನೂ ಓದಿ:ವ್ಯಾಪಾರಕ್ಕೆ ಅವಕಾಶ ಕೊಡುವಂತೆ ಪೇಜಾವರ ಶ್ರೀಗಳಿಗೆ ಮುಸ್ಲಿಂ ವರ್ತಕರಿಂದ ಮನವಿ
ಹಿಂದೂ ಸಮಾಜ ನೋವು ಉಂಡು ಉಂಡು ಬೇಸರವಾಗಿ ಇಂದು ಸ್ಫೋಟಗೊಂಡಿದೆ. ಮುಸಲ್ಮಾನರು ಮತ್ತು ಕ್ರೈಸ್ತ ಮುಖಂಡರು ವ್ಯಾಪಾರ ಬಗ್ಗೆ ಮನವಿ ಸಲ್ಲಿಸಿದ್ದಾರೆ. ಸಮಾಜದಲ್ಲಿ ಶಾಂತಿ-ಸಾಮರಸ್ಯ ಸೌಹಾರ್ದ ನೆಮ್ಮದಿ ಅವಶ್ಯವಾಗಿ ಬೇಕು. ಆದರೆ ಅದು ಒಂದು ಗುಂಪಿನಿಂದ ಸಾಮರಸ್ಯ ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ರಾಜಕೀಯ ವಿರೋಧಿಗಳನ್ನು ಹತ್ತಿಕ್ಕಲು ಹಿಂಸಾಚಾರ ಬಳಸೋದು ಹಕ್ಕುಗಳ ಉಲ್ಲಂಘನೆ: ಮೋದಿ
ಈ ಬೆಳವಣಿಗೆಗೆ ಕಾರಣ ಏನು ಎಂಬುದು ಒಂದೇ ವೇದಿಕೆಯಲ್ಲಿ ಕುಳಿತು ಚರ್ಚೆ ಮಾಡಬೇಕು. ಹಿಂದೂ ಸಮಾಜಕ್ಕೆ ನೋವಾಗುವ ಯಾವುದೇ ಘಟನೆಗಳು ನಡೆಯದಿದ್ದರೆ ಸಾಮರಸ್ಯ ಬೆಳೆಯಬಹುದು. ಉಡುಪಿಯ ಗ್ರಾಮವೊಂದರ ವಿಧವೆ ಮಹಿಳೆಯ ಕೊಟ್ಟಿಗೆಯಲ್ಲಿದ್ದ ಎಲ್ಲಾ ಹಸುಗಳನ್ನು ಕಳವು ಮಾಡಲಾಗಿದೆ. ಹಸುಗಳನ್ನು ನಂಬಿ ಜೀವನ ಸಾಗಿಸುತ್ತಿದ್ದ ಆ ಮಹಿಳೆ ಬೀದಿಗೆ ಬೀಳುವ ವಾತಾವರಣ ನಿರ್ಮಾಣವಾಗಿದೆ. ಇಂತಹ ಅನೇಕ ಘಟನೆಗಳು ಸಮಾಜದಲ್ಲಿ ನಡೆದು ನೋವು ಮಡುಗಟ್ಟಿದೆ. ನಾವು ಕೂಡ ಇಂತಹ ಹಲವಾರು ನೋವನ್ನು ಅನುಭವಿಸಿದ್ದೇನೆ. ನಾವು ಶಾಂತಿ ಸಹಬಾಳ್ವೆಯಿಂದ ಇರೋಣ ಎಂದು ಬಾಯಲ್ಲಿ ಹೇಳಿದರೆ ಅದು ಸಾಧ್ಯವಿಲ್ಲ ಎಂದು ಸ್ವಾಮೀಜಿ ಹೇಳಿದರು.
ಸಮಾಜದಲ್ಲಿ ಶಾಂತಿ ಸಹಬಾಳ್ವೆ ನೆಲಸಲು ಯಾರ ಮಧ್ಯಸ್ಥಿಕೆಯ ಬೇಡ. ಯಾರಿಂದ ಅನ್ಯಾಯವಾಗಿದೆ ಅವರು ಸಮಸ್ಯೆ ಸರಿ ಮಾಡಿಕೊಳ್ಳಬೇಕು. ತಪ್ಪು ಮಾಡಿದವರನ್ನು ಆ ಸಮಾಜದಲ್ಲಿ ಶಿಕ್ಷಿಸಲಿ. ಮಾಡಿದ ತಪ್ಪನ್ನು ಆ ಸಮಾಜ ಪ್ರತಿಭಟಿಸಲಿ. ಒಬ್ಬರು ಮಾಡಿದ ಅನ್ಯಾಯ ಇಡೀ ಸಮಾಜಕ್ಕೆ ತಟ್ಟುತ್ತದೆ. ತಪ್ಪಿತಸ್ಥರಿಗೆ ಬೆನ್ನೆಲುಬಾಗಿ ನಿಲ್ಲದಿದ್ದರೆ ಹಿಂದೂ ಸಮಾಜಕ್ಕೆ ನೋವಾಗುವುದಿಲ್ಲ ಎಂದು ಪೇಜಾವರ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಹೇಳಿದರು.
ಬೆಂಗಳೂರು: ಮುಸ್ಲಿಂ ಸಮುದಾಯದ ಅಂಗಡಿಗಳಲ್ಲಿ ವ್ಯಾಪಾರ ಮಾಡಬೇಡಿ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಾತ್ಮಕ ಸಂದೇಶಗಳನ್ನು ಹರಡುತ್ತಿರುವ ಕಿಡಿಗೇಡಿಗಳಿಗೆ ಮುಲಾಜಿಲ್ಲದೆ ಕಡಿವಾಣ ಹಾಕಬೇಕು. ಈ ವಿಷಯದಲ್ಲಿ ಸರ್ಕಾರ ಸುಮ್ಮನಿರಬಾರದು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.
ವಿಧಾನಸೌಧದ ಬಳಿ ಮಂಗಳವಾರ ಮಾಧ್ಯಮಗಳ ಜತೆ ಮಾತನಾಡಿದ ಹೆಚ್‌ಡಿಕೆ ರಾಜ್ಯದಲ್ಲಿ ಇಷ್ಟೆಲ್ಲಾ ಆಗಿದ್ದರೂ ಸರ್ಕಾರ ಯಾವ ಕ್ರಮವನ್ನೂ ಕೈಗೊಂಡಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಎಲ್ಲವನ್ನೂ ನೋಡಿಕೊಂಡು ಕೆಲ ಸಂಘಟನೆಗಳ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಮುಖ್ಯಮಂತ್ರಿಗಳು ಮತ್ತು ಗೃಹ ಮಂತ್ರಿಗಳು ಒಂದು ಸಮುದಾಯಕ್ಕೆ ಮೀಸಲಲ್ಲ. ಆರೂವರೆ ಕೋಟಿ ಕನ್ನಡಿಗರಿಗೆ ಸೇರಿದವರು. ಎಲ್ಲರ ರಕ್ಷಣೆ ಸರ್ಕಾರದ ಹೊಣೆ. ಒಂದು ಸಮುದಾಯವನ್ನು ರಕ್ಷಣೆ ಮಾಡಿಕೊಂಡು ಸರ್ಕಾರ ನಡೆಸಲು ಆಗದು. ಇಂತದ್ದನ್ನು ಕನ್ನಡಿಗರು ಸಹಿಸುವುದಿಲ್ಲ. ಅವರನ್ನು ಕಿತ್ತು ಒಗೆಯುತ್ತಾರೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಮಂಗಳೂರು ವಿವಿ ಕಾರ್ಯಕ್ರಮಕ್ಕೆ ಕಲ್ಲಡ್ಕ ಭಟ್‌ಗೆ ಆಹ್ವಾನ – ಎಸ್‌ಎಫ್‌ಐ ವಿರೋಧ
ನಾನು ವಾಟ್ಸಪ್‌ನಲ್ಲಿ ಬಂದ ಇಂತಹ ಸಂದೇಶಗಳನ್ನು ಗಮನಿಸಿದ್ದೇನೆ. ಇಂತಹ ಕಿಡಿಗೇಡಿ ಸಂದೇಶಗಳನ್ನು ಯಾರು ಹರಡುತ್ತಿದ್ದಾರೆ? ಅವರ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆ ಹಚ್ಚಿ ಮಟ್ಟ ಹಾಕಬೇಕು. ಒಂದು ವೇಳೆ ಶಾಸಕರು, ಸಚಿವರೇ ಇದ್ದರೂ ಅವರನ್ನು ಬಂಧಿಸಬೇಕು ಹಾಗೂ ಅವರಿಗೆ ಜನರೇ ಬಹಿಷ್ಕಾರ ಹಾಕಬೇಕು ಆಗ್ರಹಿಸಿದರು.
ಮುಸ್ಲಿಂ ಸಮುದಾಯದ ವ್ಯಾಪಾರಗಳಿಗೆ ನಿಷೇಧ ಹೇರಬೇಕು ಎನ್ನುವ ಸಂದೇಶದಲ್ಲಿ ಸುಮಾರು 23 ವಿಷಯಗಳ ಬಗ್ಗೆ ಪ್ರೋತ್ಸಾಹ ಕೊಡಬೇಡಿ ಎಂದು ಬರೆಯಲಾಗಿದೆ. ಹಣ್ಣಿನ ವ್ಯಾಪಾರ, ಹೋಟೆಲ್, ಹಾರ್ಡ್ ವೇರ್, ಟ್ರಾವೆಲ್, ಕಿರಾಣಿ ಅಂಗಡಿ, ಟ್ರಾವೆಲ್ ಬುಕಿಂಗ್, ಮುಸ್ಲಿಂ ವೈದ್ಯರ ಬಳಿ ಹೋಗಬೇಡಿ ಎಂದು ಸಂದೇಶ ಸಾರುತ್ತಿದ್ದಾರೆ. ಇದು ಜನರ ತಲೆ ಕೆಡಿಸುವ ಕೆಲಸವಾಗುತ್ತಿದೆ. ಹಿಂದೂಗಳ ಅಂಗಡಿಗಳಿಗೆ ಮಾತ್ರ ಹೋಗಿ ಎಂದು ಸಂದೇಶ ಹರಡುತ್ತಿದ್ದಾರೆ ಎಂದು ಆರೋಪಿಸಿದರು.
ಇವರು ನಮ್ಮ ದೇಶವನ್ನು ಎಲ್ಲಿಗೆ ಒಯ್ಯುತ್ತಿದ್ದಾರೆ? ಸರ್ವ ಜನಾಂಗದ ತೋಟವನ್ನು ಸರ್ವನಾಶ ಮಾಡುತ್ತಿದ್ದಾರೆ. ಇಂತವರನ್ನು ಸುಮ್ಮನೆ ಬಿಡಬಾರದು. ಹಿಂದೂಗಳ ಅಂಗಡಿಗಳಲ್ಲಿ ಮಾತ್ರ ವ್ಯಾಪಾರ ಮಾಡಿ ಎಂದರೆ ಅರ್ಥವೇನು? ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು.
ಕರ್ನಾಟಕದಲ್ಲಿ ಈ ರೀತಿಯ ಪರಿಸ್ಥಿತಿ ಬರಲು ಜೆಡಿಎಸ್ ಅಥವಾ ಕುಮಾರಸ್ವಾಮಿ ಕಾರಣ ಅಲ್ಲ. ಕಾಂಗ್ರೆಸ್ ನೇರ ಕಾರಣ. ಅವರಿಂದಲೇ ಇಂತಹ ಸರ್ಕಾರ ಬಂದಿರುವುದು. ಈ ಕಾಂಗ್ರೆಸ್ ನಾಯಕರ ತೀರ್ಮಾನಗಳು ಮತ್ತು ನಮಗೆ ಕಾಂಗ್ರೆಸ್‌ನವರು ಜೆಡಿಎಸ್‌ಗೆ ಕೊಟ್ಟ ಕಿರುಕುಳ ಇಂತಹ ಪರಿಸ್ಥಿತಿಗೆ ಕಾರಣ. ಈ ನಾಡಿನ ಜನರು ಈ ಪರಿಸ್ಥಿತಿ ಅನುಭವಿಸಲಿಕ್ಕೆ ಒಂದು ಕಡೆ ಕಾಂಗ್ರೆಸ್, ಮತ್ತೊಂದು ಕಡೆ ಬಿಜೆಪಿಯವರೆ ಕಾರಣ ಎಂದು ನೇರ ವಾಗ್ದಾಳಿ ನಡೆಸಿದರು.
ಈ ಕಾರಣಕ್ಕೆ ನಾನು ಹಿಂದು ಸಮುದಾಯದ ಕೆಲ ಯುವಕರಿಗೆ ಕೈ ಮುಗಿದು ಹೇಳುತ್ತೇನೆ, ರಾಜ್ಯ ಹಾಳು ಮಾಡಿಕೊಳ್ಳಬೇಡಿ. ರಾಜಕೀಯಕ್ಕಾಗಿ ಮನಸುಗಳನ್ನು ಕೆಡಿಸುವ ಕಿಡಿಗೇಡಿಗಳ ಮಾತು ಕೇಳಬೇಡಿ. ಯಾರು ಕೂಡ ಇಲ್ಲಿ ಶಾಶ್ವತ ಅಲ್ಲ. ಕರ್ನಾಟಕ ಶಾಂತಿಯ ತೋಟ. ಇದನ್ನು ಹಾಳು ಮಾಡಬೇಡಿ ಎಂದು ಹೆಚ್‌ಡಿಕೆ ಮನವಿ ಮಾಡಿದರು. ಇದನ್ನೂ ಓದಿ: ಉಡುಪಿ ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಯತ್ನ- ಪೊಲೀಸರ ಜೊತೆ ಪ್ರತಿಭಟನಾಕಾರರ ವಾಗ್ವಾದ
ಈದ್ಗಾ ಮೈದಾನ ಉದಾಹರಣೆ:
ಈದ್ಗಾ ಮೈದಾನದ ಹೆಸರಲ್ಲಿ ಹಲವಾರು ಅಮಾಯಕ ಮಕ್ಕಳನ್ನು ಬಲಿ ತಗೊಂಡರು. ದೇವೇಗೌಡರು ಸಿಎಂ ಆಗುವ ತನಕ ಪ್ರತಿವರ್ಷ ಒಬ್ಬರು, ಇಬ್ಬರನ್ನಾದರೂ ಬಲಿ ಆಗುತ್ತಿದ್ದರು. ಅಂತಹ ಸಂದರ್ಭದಲ್ಲಿ ಈದ್ಗಾ ವಿವಾದವನ್ನು ದೇವೇಗೌಡರು ಬಗೆಹರಿಸಿದರು. ಇವತ್ತು ಏನಾಗಿದೆ? ಬಿಜೆಪಿಯವರು ಹೀಗೆಲ್ಲಾ ಮಾಡಲು ಕಾಂಗ್ರೆಸ್ ಪಕ್ಷವೇ ಕಾರಣ. ಇದು ಅನೈತಿಕ ಸರ್ಕಾರ ಎಂದು ಟೀಕೆ ಮಾಡುವ ಇವರು, ಈ ಸರ್ಕಾರ ಬರಲು ಮೂಲ ಕಾರಣರು ಎಂದು ಕಾಂಗ್ರೆಸ್ ಮೇಲೆ ಮಾಜಿ ಮುಖ್ಯಮಂತ್ರಿ ಟೀಕಾಪ್ರಹಾರ ನಡೆಸಿದರು.
ಅರೆಸ್ಟ್ ಮಾಡ್ತಾರೆ:
ರಾಜ್ಯವನ್ನು ಕೆಟ್ಟ ಪರಿಸ್ಥಿತಿಗೆ ತೆಗೆದುಕೊಂಡು ಹೋಗುತ್ತಿದ್ದಾರೆ ಬಿಜೆಪಿಯವರು. ಈ ರಾಜ್ಯದಲ್ಲಿ ಸರ್ಕಾರ ಎನ್ನುವುದು ಇದೆಯಾ? ಏನು ಮಾಡುತ್ತಿದೆ ಸರ್ಕಾರ? ಸಿಎಂ ವಿರುದ್ಧ ಮಾತಾಡಿದ್ದಕ್ಕೆ ಒಬ್ಬನನ್ನು ಅರೆಸ್ಟ್ ಮಾಡಿದ್ದಾರೆ. ಇಂಥ ವಿಚಾರಗಳ ಬಗ್ಗೆ ಪ್ರಚೋದನೆ ಮಾಡುವವರನ್ನು ಕೂಡ ಅರೆಸ್ಟ್ ಮಾಡಿ. ಈ ರೀತಿಯಲ್ಲಿ ಪ್ರಚೋದನೆ ಮಾಡಿದರೆ ಶಾಸಕನೇ ಆಗಿರಲಿ, ಸಚಿವನೇ ಆಗಿರಲಿ ಅವರನ್ನು ಕೂಡ ಅರೆಸ್ಟ್ ಮಾಡಿ ಎಂದು ಆಗ್ರಹಿಸಿದರು.
ಸಮಾಜವನ್ನು ಒಡೆಯುವ ಇವರು ದೇಶ ಉಳಿಸುವವರಲ್ಲ. ದೇಶ ಉಳಿಸುವವರು ಜನರು, ಮುಗ್ಧ ಪ್ರಜೆಗಳು. ನಾನು ಯುವಕರಿಗೆ ಹೇಳುತ್ತೇನೆ, ಯುವಕರು ಇದಕ್ಕೆ ಬಲಿಯಾಗಬಾರದು. ಇದರಿಂದ ನಿಮ್ಮ ಭವಿಷ್ಯ ರೂಪಿಸಲು ಆಗಲ್ಲ. ಹಿಂದು ಯುವಕರಿಗೆ ಕೈ ಮುಗಿದು ಹೇಳುತ್ತೇನೆ. ರಾಜ್ಯವನ್ನು ಹಾಳು ಮಾಡಿಕೊಳ್ಳಬೇಡಿ ಎಂದು ಅವರು ಕಿವಿಮಾತು ಹೇಳಿದರು.
ಎಲ್ಲರೂ ಒಂದಲ್ಲ ಒಂದು ದಿನ ಮಣ್ಣಿಗೆ ಹೋಗುತ್ತಾರೆ. ಕಿಡಿಗೇಡಿಗಳು ಕೂಡ ಮಣ್ಣಿಗೆ ಹೋಗುತ್ತಾರೆ. ಕರ್ನಾಟಕ ರಾಜ್ಯ ಶಾಂತಿಯ ತೋಟ, ಹಾಳು ಮಾಡಬೇಡಿ. ಇಂತಹ ವ್ಯಕ್ತಿಗಳನ್ನು ಕರ್ನಾಟಕದ ಜನರು ಬಹಿಷ್ಕಾರ ಮಾಡಬೇಕು. ಸಮಾಜದಿಂದ ಹೊರ ಹಾಕಬೇಕು. ಇಲ್ಲದಿದ್ದರೆ ಮುಂದೆ ಕರ್ನಾಟಕಕ್ಕೆ ಒಳ್ಳೆಯ ದಿನಗಳು ಬರುವುದಿಲ್ಲ ಎಂದು ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಇಂತಹ ಕೃತ್ಯಗಳು ನಡೆಯುತ್ತಿದ್ದರೆ ಸದನದಲ್ಲಿ ಸಭಾಧ್ಯಕ್ಷರು ಚುನಾವಣೆ ಸುಧಾರಣೆ ಬಗ್ಗೆ ಚರ್ಚೆ ಇಟ್ಟುಕೊಂಡಿದ್ದಾರೆ. ಯಾವ ಪುರುಷಾರ್ಥಕ್ಕೆ ಈ ಚರ್ಚೆ? ನನಗೆ ಈ ಕಲಾಪದಲ್ಲಿ ಭಾಗಿಯಾಗುವ ಉದ್ದೇಶ ಇರಲಿಲ್ಲ. ಆದರೆ ಇಂತಹ ಸಮಾಜಘಾತುಕ ಸಂದೇಶಗಳ ಬಗ್ಗೆ, ಇವುಗಳ ಹಿಂದೆ ಇರುವವರನ್ನು ಹೊರಗೆ ಎಳೆಯಬೇಕು ಎನ್ನುವ ಬಗ್ಗೆ ಮಾತನಾಡಲು ಕಲಾಪಕ್ಕೆ ಬಂದೆ. ಸದನದಲ್ಲಿ ಇಂತಹ ವಿಚಾರ ಚರ್ಚೆ ಆಗಬೇಕು ಎಂದು ಕುಮಾರಸ್ವಾಮಿ ಪ್ರತಿಪಾದಿಸಿದರು.
ಉತ್ತರ ಭಾರತದಲ್ಲಿ ಮತಕ್ಕಾಗಿ ಮಾಡಿದ್ದನ್ನೇ ಇಲ್ಲಿಯೂ ಮಾಡಲು ಹೊರಟಿದ್ದಾರೆ. ಉತ್ತರವೇ ಬೇರೆ, ದಕ್ಷಿಣವೇ ಬೇರೆ. ಉತ್ತರದಲ್ಲಿ ಮೊಘಲರ ಆಡಳಿತ ಇತ್ತು, ಅನೇಕ ದಾಳಿಗಳು ನಡೆದವು. ಆದರೆ ಇಲ್ಲಿನ ಪರಿಸ್ಥಿತಿ ಬೇರೆ. ನಮ್ಮ ರಾಜ್ಯ ನೆಮ್ಮದಿಯ ನಾಡು. ಆದರೂ ಅಶಾಂತಿಯನ್ನು ಹುಟ್ಟು ಹಾಕುವ ಕೃತ್ಯ ನಡೆಯುತ್ತಿದೆ. ಇದು ಖಂಡಿತಾ ಸರಿಯಲ್ಲ ಎಂದು ಒತ್ತಿ ಹೇಳಿದರು.
ಸಮಾಜವನ್ನು ಒಡೆಯುವ ಸಂದೇಶ ಮುಖ್ಯವಲ್ಲ. ಹೊಟ್ಟೆಗೆ ತಿನ್ನಲು ಏನು ಕೊಟ್ಟಿದ್ದಾರೆ, ಹೊಟ್ಟೆಗೆ ತಣ್ಣೀರು ಬಟ್ಟೆ ಅಷ್ಟೇ. ಈ ಸಮಾಜವನ್ನು ವಿಘಟನೆ ಮಾಡುತ್ತಿರುವವರು ಹಿಂದೂ ದೇವಸ್ಥಾನಕ್ಕೆ ದಲಿತರನ್ನು ಪೂಜೆ ಮಾಡಲು ಬಿಡುತ್ತಾರಾ? ದೇವಸ್ಥಾನ ಕಟ್ಟುವವರು ಓಬಿಸಿ, ದಲಿತರು. ದೇವಸ್ಥಾನದ ಒಳಗೆ ಕುಳಿತುಕೊಂಡು ಆಸ್ತಿ ಹೊಡೆಯುವವರು ಇಂತಹ ವಿದ್ರೋಹದ ಕೆಲಸ ಮಾಡುವವರು ಎಂದ ಅವರು, ನಾನೆಂದೂ ಇಷ್ಟು ಕಠಿಣವಾಗಿ ಮಾತಾಡಿಲ್ಲ ಎಂದು ಕುಮಾರಸ್ವಾಮಿ ಹೇಳಿದರು.