Tag: Muslim students

  • ಹಿಜಬ್ ಕುರಿತು ಶೀಘ್ರದಲ್ಲಿ ವಿಚಾರಣೆ – ಸಿಜೆಐ

    ಹಿಜಬ್ ಕುರಿತು ಶೀಘ್ರದಲ್ಲಿ ವಿಚಾರಣೆ – ಸಿಜೆಐ

    ನವದೆಹಲಿ: ಶಾಲಾ-ಕಾಲೇಜುಗಳ ತರಗತಿಗಳಲ್ಲಿ ಹಿಜಬ್ (Hijab) ನಿಷೇಧಿಸಿದ ವಿಚಾರಕ್ಕೆ ಸಂಬಂಧಿಸಿದಂತೆ ತ್ರಿ ಸದಸ್ಯ ಪೀಠ ರಚಿಸಿ ಶೀಘ್ರದಲ್ಲೇ ವಿಚಾರಣೆ ನಡೆಸಲಾಗುವುದು ಎಂದು ಸುಪ್ರೀಂ ಕೋರ್ಟ್ (Supreme Court) ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ (DY Chandrachud) ಭರವಸೆ ನೀಡಿದ್ದಾರೆ.

    Court

    ಪ್ರಕರಣ ವಿಚಾರಣೆ ನಡೆಸುವಂತೆ ಶುಕ್ರವಾರ ಷರಿಯತ್ ಸಮಿತಿ ಪರವಾಗಿ ವಕೀಲರು ಮನವಿ ಮಾಡಿದರು. ಪರೀಕ್ಷೆಗೆ ಐದು ದಿನಗಳಷ್ಟೆ ಬಾಕಿಯಿದೆ. ವಿದ್ಯಾರ್ಥಿನಿಯರು (Muslim Students) ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡಬೇಕು. ಅದಕ್ಕಾಗಿ ಸಲ್ಲಿಸಿರುವ ಮಧ್ಯಂತರ ಅರ್ಜಿಯನ್ನು ಶೀಘ್ರದಲ್ಲೇ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕೇಂದ್ರ ಸರ್ಕಾರದ ಅಧಿಕಾರ ಕಿತ್ತುಕೊಂಡ ಸುಪ್ರೀಂ- ಚುನಾವಣಾ ಆಯುಕ್ತರ ನೇಮಕಕ್ಕೆ ಸಮಿತಿ ರಚನೆ

    ಇದಕ್ಕೆ ಪ್ರತಿಕ್ರಿಯಿಸಿದ ಸಿಜೆಐ ಡಿ.ವೈ ಚಂದ್ರಚೂಡ್, ನೀವೂ ಕೊನೆ ಕ್ಷಣದಲ್ಲಿ ಬಂದು ಮನವಿ ಮಾಡಿದರೆ ಹೇಗೆ ಎಂದು ಪ್ರಶ್ನಿಸಿದರು. ಇದಕ್ಕೆ ಉತ್ತರ ನೀಡಿದ ವಕೀಲರು ಕಳೆದ 10 ದಿನಗಳಲ್ಲಿ ಎರಡು ಬಾರಿ ಈ ಬಗ್ಗೆ ಪ್ರಸ್ತಾಪಿಸಿದೆ. ಅದಾಗ್ಯೂ ನ್ಯಾಯಾಲಯ ಪೀಠವನ್ನು ರಚನೆ ಮಾಡಿಲ್ಲ ಎಂದರು. ಬಳಿಕ ಸಿಜೆಐ ಶೀಘ್ರದಲ್ಲಿ ತ್ರಿ ಸದಸ್ಯ ಪೀಠ ರಚಿಸಿ ವಿಚಾರಣೆ ನಡೆಸುವುದಾಗಿ ಹೇಳಿದರು. ಇದನ್ನೂ ಓದಿ: ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಅಂಬಾನಿ, ಕುಟುಂಬಕ್ಕೆ z+ ಭದ್ರತೆ ನೀಡಿ: ಸುಪ್ರೀಂ

    SUPREME COURT

    ಕಳೆದ ವರ್ಷ ಅಕ್ಟೋಬರ್‌ನಲ್ಲಿ ಸುಪ್ರೀಂ ಕೋರ್ಟ್‌ನ (Supreme Court) ವಿಭಾಗೀಯ ಪೀಠವು, ಹಿಜಬ್ ಧರಿಸುವುದನ್ನ ನಿಷೇಧಿಸಲು ರಾಜ್ಯದ ಸರ್ಕಾರಿ ಕಾಲೇಜುಗಳಿಗೆ ಪರಿಣಾಮಕಾರಿಯಾಗಿ ಅಧಿಕಾರ ನೀಡಿ ಸರ್ಕಾರ ಆದೇಶಿಸಿತ್ತು. ಈ ಆದೇಶ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿ ವಿಭಜಿತ ತೀರ್ಪು ನೀಡಿತ್ತು. ಇದಕ್ಕೂ ಮುನ್ನ ರಾಜ್ಯ ಹೈಕೋರ್ಟ್ (Karnataka Highcourt), ಸರ್ಕಾರದ ನಿರ್ಧಾರ ಪರ ತೀರ್ಪು ನೀಡಿತ್ತು.

  • ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೊಡುವಂತೆ ಪಟ್ಟು ಹಿಡಿದ ವಿದ್ಯಾರ್ಥಿನಿಯರು!

    ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ಕೊಡುವಂತೆ ಪಟ್ಟು ಹಿಡಿದ ವಿದ್ಯಾರ್ಥಿನಿಯರು!

    ಬೆಳಗಾವಿ: ನಗರದ ಲಿಂಗರಾಜ ಕಾಲೇಜಿನಲ್ಲಿ ನಡೆಯುತ್ತಿರುವ ಆಂತರಿಕ ಪರೀಕ್ಷೆಗೆ ಹಿಜಬ್ ಧರಿಸಿ ಪರೀಕ್ಷೆ ಬರೆಯಲು ಅನುಮತಿ ನೀಡುತ್ತಿಲ್ಲ ಎಂದು ಆಗ್ರಹಿಸಿ 40ಕ್ಕೂ ಅಧಿಕ ವಿದ್ಯಾರ್ಥಿನಿಯರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ.

    ಹಿಜಬ್ ನಮ್ಮ ಹಕ್ಕು, ನಮ್ಮ ಧರ್ಮ ಪಾಲನೆ ಜೊತೆಗೆ ಶಿಕ್ಷಣವು ಮುಖ್ಯ. ನಾವು ಭಾರತೀಯರು ಮೊದಲಿನಿಂದಲೂ ಹಿಜಬ್ ಧರಿಸಿಕೊಂಡೇ ಕಾಲೇಜಿಗೆ ತೆರಳಿ ಪರೀಕ್ಷೆ ಬರೆಯುತ್ತಿದ್ದೆವು. ಆದರೆ ಇಂದು ಏಕಾಏಕಿ ಕಾಲೇಜಿನ ಆಡಳಿತ ಮಂಡಳಿ ಹಿಜಬ್ ತೆಗೆದು ಪರೀಕ್ಷೆ ಬರೆಯುವಂತೆ ಹೇಳಿದರು ಎಂದು ವಿದ್ಯಾರ್ಥಿನಿಯರು ಆರೋಪಿಸಿದರು. ಇದನ್ನೂ ಓದಿ: ಇಂಟಲಿಜೆನ್ಸ್ ಈಶ್ವರಪ್ಪ ಹತ್ರ ಇದೆಯಾ..?- ಪ್ರಿಯಾಂಕ್ ಖರ್ಗೆ ಕಿಡಿ

    ಲಿಂಗರಾಜ ಪದವಿ ಮಹಾವಿದ್ಯಾಲಯದಲ್ಲಿ ಯಾವುದೇ ಸಮವಸ್ತ್ರವಿಲ್ಲ. ಆದರೆ ಕಾಲೇಜು ಆಡಳಿತ ಮಂಡಳಿಯವರು ನಮ್ಮ ವಿರುದ್ಧ ನಡೆದುಕೊಳ್ಳುತ್ತಿರುವುದು ನಮ್ಮ ಶಿಕ್ಷಣಕ್ಕೆ ತೊಂದರೆಯಾಗುತ್ತಿದೆ. ಕೂಡಲೇ ಜಿಲ್ಲಾಧಿಕಾರಿಗಳು ಮಧ್ಯಪ್ರವೇಶಿಸಿ ಲಿಂಗರಾಜ ಕಾಲೇಜಿನ ಆಡಳಿತ ಮಂಡಳಿಯರೊಂದಿಗೆ ಮಾತುಕತೆ ನಡೆಸಲಿ. ಹಿಜಬ್ ಧರಿಸಲು ಅನುಮತಿ ನೀಡುವಂತೆ ಸೂಚಿಸುವಂತೆ ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಲಿಂಗರಾಜ ಪದವಿ ಮಹಾವಿದ್ಯಾಲಯದ 40ಕ್ಕೂ ಅಧಿಕ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು. ಇದನ್ನೂ ಓದಿ: 2 ವರ್ಷದ ಹಿಂದೆಯೇ 10 ಲಕ್ಷಕ್ಕೆ ಸುಪಾರಿ ಕೊಟ್ಟಿದ್ದರು: ಮೃತನ ಸಂಬಂಧಿ ಹೇಳಿಕೆ

  • ದಾವಣಗೆರೆಗೆ ಹಿಜಬ್ ವಿವಾದ ಎಂಟ್ರಿ – ಕೇಸರಿ ಶಾಲಿನೊಂದಿಗೆ ವಿದ್ಯಾರ್ಥಿಗಳು ಹಾಜರ್

    ದಾವಣಗೆರೆಗೆ ಹಿಜಬ್ ವಿವಾದ ಎಂಟ್ರಿ – ಕೇಸರಿ ಶಾಲಿನೊಂದಿಗೆ ವಿದ್ಯಾರ್ಥಿಗಳು ಹಾಜರ್

    ದಾವಣಗೆರೆ: ಬೆಣ್ಣೆ ನಗರಿಗೂ ಹಿಜಾಬ್ ವಿವಾದವು ಕಾಲಿಟ್ಟಿದ್ದು, ವಿದ್ಯಾರ್ಥಿಗಳು ಹೊನ್ನಾಳಿ ತಾಲೂಕಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್‍ನಲ್ಲಿ ಕೇಸರಿ ಶಾಲು ಹಾಕಿಕೊಂಡು ಬಂದಿದ್ದಾರೆ.

    ಮುಸ್ಲಿಂ ವಿದ್ಯಾರ್ಥಿಗಳು ಸರ್ಕಾರದ ಆದೇಶವಿದ್ದರೂ ಕೂಡ ಹಿಜಾಬ್ ಧರಿಸಿ ಬಂದಿದ್ದಾರೆ. ತರಗತಿಯಲ್ಲಿ ಬುರ್ಖಾ ಧರಿಸಿ ಬಂದ ಹಿನ್ನಲೆ ನಾವು ಕೂಡ ಕೇಸರಿ ಶಾಲು ಧರಿಸಿ ತರಗತಿಗೆ ಹಾಜರಾಗಿದ್ದೇವೆ ಎಂದು ಹಿಂದೂ ವಿದ್ಯಾರ್ಥಿಗಳು ಹೇಳಿದ್ದಾರೆ.

    ಎಲ್ಲಿವರೆಗೆ ತರಗತಿಯಲ್ಲಿ ಹಿಜಾಬ್ ಇರುತ್ತದೆಯೋ ಅಲ್ಲಿಯವರೆಗೆ ಕೇಸರಿ ಶಾಲು ಧರಿಸಿಯೇ ಹಾಜರಾಗುತ್ತೇವೆ ಎಂದು ಹಿಂದೂ ವಿದ್ಯಾರ್ಥಿಗಳು ಹೇಳಿದರೆ ಹಿಜಬ್ ಧರಿಸಿದ ವಿದ್ಯಾರ್ಥಿನಿಯರು ನಾವು ಹಿಜಬ್ ಬುರ್ಕಾ ಧರಿಸಿಯೇ ಕಾಲೇಜಿಗೆ ಬರುತ್ತೇವೆ. ನಾವು ಸರ್ಕಾರ ಎನೇ ಆದೇಶ ಹೊರಡಿಸಿದರು ಹಿಜಾಬ್ ತೆಗೆಯುವುದಿಲ್ಲ ಪಟ್ಟು ಹಿಡಿದಿದ್ದಾರೆ.

    ಎರಡು ಬಣದ ವಿದ್ಯಾರ್ಥಿಗಳು ಸಮವಸ್ತ್ರ ನೀತಿ ಸಂಹಿತೆಗೆ ಕ್ಯಾರೆ ಎನ್ನುತ್ತಿಲ್ಲ. ವಿದ್ಯಾರ್ಥಿಗಳು ಶಾಲಾ ತರಗತಿಯಲ್ಲಿ ಹಿಜಬ್ ಹಾಗೂ ಕೇಸರಿ ಶಾಲು ಹಾಕಿಕೊಂಡೇ ಕುಳಿತು ಪಾಠ ಕೇಳುತ್ತಿದ್ದು, ಪದವಿ ಕಾಲೇಜಿನಲ್ಲಿ ಯಾವುದೇ ಪ್ರತಿಭಟನೆ ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಇದನ್ನೂ ಓದಿ: ಕೊರೊನಾಗೆ ಗೆಳೆಯ ಮೃತ – ಸ್ನೇಹಿತನ ಮಡದಿಯನ್ನ ಮದುವೆಯಾದ ಯುವಕ 

    ಹಿಜಾಬ್- ಕೇಸರಿ ಶಾಲು ನಡುವಿನ ಗಲಾಟೆ ತೀವ್ರ ಸ್ವರೂಪ ಪಡೆದ ಹಿನ್ನೆಲೆಯಲ್ಲಿ ಕಾಲೇಜ್‍ಗೆ ಶಾಸಕ ರೇಣುಕಾಚಾರ್ಯ ಭೇಟಿ ನೀಡಿದ್ದಾರೆ. ನಾವು ಯಾವುದೇ ಕಾರಣಕ್ಕೂ ಹಿಜಬ್ ತೆಗೆಯಲ್ಲ ಎಂದು ಶಾಸಕರಿಗೆ ಏರುಧ್ವನಿಯಲ್ಲೇ ವಿದ್ಯಾರ್ಥಿನಿಯರ ಉತ್ತರ ನೀಡಿದ್ದಾರೆ.

    ನೀವು ಈ ರೀತಿ ಹಿಜಬ್ ಧರಿಸಿ ಬಂದರೆ ಅವರು ಕೇಸರಿ ಶಾಲು ಧರಿಸುತ್ತಾರೆ. ಇದು ಮತ್ತೆ ಸಂಘರ್ಷಕ್ಕೆ ಕಾರಣವಾಗುತ್ತೆ ಎಂದು ಸಮಾಧಾನ ಮಾಡಲು ಮುಂದಾದಾಗ ಮುಸ್ಲಿಂ ವಿದ್ಯಾರ್ಥಿನಿಯರು ಏನೇ ಆಗಲಿ ನಾವು ಯಾವುದೇ ಕಾರಣಕ್ಕೂ ಹಿಜಬ್ ತೆಗೆಯಲ್ಲ. ಹಿಜಬ್ ಹಾಕಿಕೊಂಡೇ ಕಾಲೇಜಿಗೆ ಬರುತ್ತೇವೆ ಎಂದು ಪಟ್ಟು ಹಿಡಿದು ಕುಳಿತ್ತಿದ್ದಾರೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಗೂ ಕಾಲಿಟ್ಟ ಹಿಜಬ್, ಕೇಸರಿ ಶಾಲು ಫೈಟ್ – ವಿದ್ಯಾರ್ಥಿಗಳನ್ನ ಹೊರಹಾಕಿದ ಕಾಲೇಜು ಸಿಬ್ಬಂದಿ

    ದಾವಣಗೆರೆಯಲ್ಲಿ ತೀವ್ರ ಸ್ವರೂಪದ ಹೋರಾಟಕ್ಕೆ ಕಾರಣವಾದ ಹಿಜಬ್ ವಿವಾದವು ನಗರದ ಜಯದೇವ ಸರ್ಕಲ್‍ನಲ್ಲಿ ಮುಸ್ಲಿಂ ಸಂಘಟನೆಗಳಿಂದ ಬೃಹತ್ ಪ್ರತಿಭಟನೆ ನಡೆದಿದೆ. ಮುಸ್ಲಿಂ ಮಹಿಳಾ ವಿದ್ಯಾರ್ಥಿಗಳಿಂದ ಈ ಪ್ರತಿಭಟನೆ ನಡೆದಿದ್ದು, ನಾವು ಹಿಜಬ್ ನಿಯಮವನ್ನು ಪಾಲಿಸಿಯೇ ಪಾಲಿಸುತ್ತೇವೆ ಎಂದು ಪಟ್ಟು ಹಿಡಿದು ಪ್ರತಿಭಟನೆ ನಡೆಸಿದ್ದಾರೆ.

    ಹಿಂದೂ ಜಾಗರಣಾ ವೇದಿಕೆಯು ತರಗತಿಗಳಲ್ಲಿ ಹಿಜಬ್ ಧರಿಸುವುದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ನಗರದ ಜಯದೇವ ವೃತ್ತದಲ್ಲಿ ಹಿಂದೂ ಜಾಗರಣ ವೇದಿಕೆ ಹಾಗೂ ಹಿಂದೂ ಯುವ ವಾಹಿನಿ ಸಂಘಟನೆಗಳ ಪ್ರತಿಭಟನೆ ನಡೆಸಿದ್ದಾರೆ. ಹಿಜಬ್ ವಿರೋಧಿಸಿ ಸಮವಸ್ತ್ರ ಧರಿಸಿ, ಹಿಂದೂಸ್ತಾನದಲ್ಲಿ ಇರುವುದಾದರೆ ಹಿಂದೂ ಧರ್ಮದವರು ಹೇಳಿದ ಹಾಗೇ ಕೇಳಬೇಕು ಅಂತ ಘೋಷಣೆ ಕೂಗಿದ್ದಾರೆ. ಕಾರ್ಯಕರ್ತರು ಕೇಸರಿ ಶಾಲು ಹಾಕಿಕೊಂಡು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ಹಿನ್ನಲೆ ಜಯದೇವ ವೃತ್ತದಲ್ಲಿ ಭಾರೀ ಪೊಲೀಸ್ ಬಂದೋಬಸ್ತ್ ಮಾಡಲಾಗಿದ್ದು, ಡಿವೈಎಸ್ಪಿ ನರಸಿಂಹ ತಾಮ್ರಧ್ಬಜ, ಸಿಪಿಐ ಗುರುಬಸವರಾಜ್ ನೇತೃತ್ವದಲ್ಲಿ ಪೊಲೀಸ್ ಭದ್ರತೆ ಎರ್ಪಡಿಸಿದ್ದಾರೆ.