Tag: Muslim Traders

  • ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ – ಕುಡುಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ?

    ಕರಾವಳಿಯಲ್ಲಿ ಮತ್ತೆ ಧರ್ಮ ದಂಗಲ್ – ಕುಡುಪು ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧ?

    ಮಂಗಳೂರು: ಬಿಜೆಪಿ (BJP) ಆಡಳಿತದ ಸಮಯದಲ್ಲಿ ಆರಂಭವಾಗಿದ್ದ ಧರ್ಮ ದಂಗಲ್ ಕಾಂಗ್ರೆಸ್ (Congress) ಅವಧಿಯಲ್ಲೂ ಮುಂದುವರಿದಂತೆ ಕಾಣ್ತಿದೆ. ಸರ್ಕಾರ ಬಂದ್ರೆ ಅಲ್ಪಸಂಖ್ಯಾತರ ಹಿತ ಕಾಪಾಡುವ ಭರವಸೆ ನೀಡಿದ ಕಾಂಗ್ರೆಸ್ ವ್ಯಾಪಾರಿಗಳ ಹಿತ ಕಾಯುವಲ್ಲಿ ವಿಫಲವಾಗಿದೆ ಎಂಬುದು ಇದರಿಂದ ಗೊತ್ತಾಗುತ್ತಿದೆ. ಜಾತ್ರೆಗಳು ಆರಂಭವಾಗುತ್ತಿದ್ದಂತೆ ಕರಾವಳಿಯಲ್ಲಿ (Karavali) ಮತ್ತೆ ಮುಸ್ಲಿಂ ವ್ಯಾಪಾರಿಗಳಿಗೆ (Muslim Traders) ಬಹಿಷ್ಕಾರ ಹಾಕಲಾಗಿದೆ.

    ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ರಾಜ್ಯದ ಹಲವೆಡೆ ವ್ಯಾಪಾರ ಧರ್ಮ ದಂಗಲ್ ಜೋರಾಗಿಯೇ ನಡೆದಿತ್ತು. ಪ್ರಮುಖವಾಗಿ ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ನಿರ್ಬಂಧ ಹೇರಲಾಗಿತ್ತು. ಉಡುಪಿಯಲ್ಲಿ ಆರಂಭವಾಗಿದ್ದ ಧರ್ಮ ದಂಗಲ್ ಇಡೀ ರಾಜ್ಯಕ್ಕೆ ವ್ಯಾಪಿಸಿತ್ತು. ಇದೀಗ ಡಿಸೆಂಬರ್ 14ರಂದು ನಡೆಯುವ ಮಂಗಳೂರಿನ ಕುಡುಪು ಶ್ರೀಅನಂತಪದ್ಮನಾಭ (Kudupu Shree Anantha Padmanabha Temple) ಕ್ಷೇತ್ರದ ಚಂಪಾ ಷಷ್ಠಿ ಮಹೋತ್ಸವದಲ್ಲೂ ಅನ್ಯ ಧರ್ಮೀಯರ ವ್ಯಾಪಾರಕ್ಕೆ ನಿರ್ಬಂಧ ಹೇರಬೇಕೆಂಬ ಆರೋಪ ಕೇಳಿಬಂದಿದೆ.

    ಕುಡುಪು ಶ್ರೀ ಅನಂತ ಪದ್ಮನಾಭ ದೇವಸ್ಥಾನ ಮುಜರಾಯಿ ಇಲಾಖೆಗೆ ಸೇರಿರೋದ್ರಿಂದ ಇಲಾಖೆಯ ಸುತ್ತೋಲೆಯಂತೆ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ. ಹೀಗಾಗಿ ಕ್ಷೇತ್ರದ ಆಡಳಿತ ಮಂಡಳಿ ಈ ಬಾರಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಕೊಟ್ಟಿಲ್ಲ. ಕ್ಷೇತ್ರದ ಈ ನಿರ್ಧಾರವನ್ನು ಹಿಂದೂಪರ ಸಂಘಟನೆಗಳು ಸ್ವಾಗತಿಸಿದೆ. ದೇವಸ್ಥಾನದ ಸುತ್ತಮುತ್ತ ಇರುವ ಜಾಗವೆಲ್ಲಾ ಕ್ಷೇತ್ರದ್ದು, ಜೊತೆಗೆ ಮುಂದೆ ಇರೋ ರಸ್ತೆಯೂ ದೇವಸ್ಥಾನದ ರಥಬೀದಿ. ಹೀಗಾಗಿ ಈ ಜಾಗದಲ್ಲಿ ಬಿಟ್ಟು ಬೇರೆ ಜಾಗದಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡೋದಕ್ಕೆ ನಮ್ಮ ಆಕ್ಷೇಪ ಇಲ್ಲ ಎಂದು ಹಿಂದೂ ಸಂಘಟನೆಗಳು ಸ್ಪಷ್ಟಪಡಿಸಿದೆ.

    ಸುಮಾರು 50, 60 ವರ್ಷಗಳಿಂದ ಕುಡುಪು ಕ್ಷೇತ್ರದಲ್ಲಿ ನಡೆಯೋ ಜಾತ್ರೆಯಲ್ಲಿ ಸರ್ವ ಧರ್ಮೀಯರೂ ವ್ಯಾಪಾರ ನಡೆಸೋ ಮೂಲಕ ಸೌಹಾರ್ಧವಾಗಿ ನಡೆಯುತ್ತಿತ್ತು. ಕಳೆದ ವರ್ಷ ಧರ್ಮದಂಗಲ್ ಜೋರಾಗಿದ್ದ ಕಾರಣ ಅನ್ಯ ಮತೀಯರು ಇಲ್ಲಿ ವ್ಯಾಪಾರಕ್ಕೆ ಮುಂದಾಗಿರಲಿಲ್ಲ. ಆದ್ರೆ ಈ ಬಾರಿ ಕಾಂಗ್ರೆಸ್ ಸರ್ಕಾರವಿದ್ದರೂ ಹಿಂದೂ ಸಂಘಟನೆಗಳು ಮತ್ತೆ ಅಪಸ್ವರ ಎತ್ತಿವೆ.

    ಮುಜರಾಯಿ ಇಲಾಖೆಗೆ ಸೇರಿದ ದೇವಸ್ಥಾನ ಹಾಗೂ ದೇವಸ್ಥಾನಕ್ಕೆ ಸೇರಿದ್ದ ಜಾತ್ರಾ ಗದ್ದೆಯಲ್ಲಿ ಅನ್ಯ ಧರ್ಮೀಯರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ನಿಜ. ಆದ್ರೆ ದೇವಸ್ಥಾನದ ಜಾತ್ರಾ ವ್ಯಾಪಾರ ಸರ್ಕಾರಿ ಜಮೀನಿನಲ್ಲಿ ಅಥವಾ ಸಾರ್ವಜನಿಕ ಸ್ಥಳದಲ್ಲಿ ಆಗೋದಾದ್ರೆ ಈ ಕಾನೂನು ಅನ್ವಯ ಆಗೋದಿಲ್ಲ. ಈ ಧರ್ಮ ದಂಗಲ್ ಮತ್ತೆ ತಾರಕಕ್ಕೇರುತ್ತಾ? ಅನ್ನೋದನ್ನು ಕಾದು ನೋಡಬೇಕಿದೆ.

  • ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರದ ಬ್ಯಾನರ್ ಹಾಕಿದ ಹಿಂದೂ ಸಂಘಟನೆ

    ಕದ್ರಿ ಮಂಜುನಾಥ ದೇವಸ್ಥಾನದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರದ ಬ್ಯಾನರ್ ಹಾಕಿದ ಹಿಂದೂ ಸಂಘಟನೆ

    ಮಂಗಳೂರು: ಕರಾವಳಿಯಲ್ಲಿ ಇದೀಗ ಎಲ್ಲೆಡೆ ಜಾತ್ರೆಯ ಸಂಭ್ರಮ. ದೇವಸ್ಥಾನ, ದೈವಸ್ಥಾನಗಳ ವಾರ್ಷಿಕ ಜಾತ್ರೋತ್ಸವದ ಸಡಗರ. ಈ ನಡುವೆ ಪ್ರತೀ ಜಾತ್ರೆಯಲ್ಲೂ ಮುಸ್ಲಿಂ ವ್ಯಾಪಾರಿಗಳಿಗೆ (Muslim Traders) ಬಹಿಷ್ಕಾರ (Boycott) ಹಾಕಲಾಗುತ್ತಿದೆ.

    ಹಿಂದೂಗಳ ಪುಣ್ಯಕ್ಷೇತ್ರಗಳಲ್ಲಿ ಅನ್ಯ ಧರ್ಮೀಯರು ವ್ಯಾಪಾರ ಮಾಡಬಾರದೆಂದು ವಿಶ್ವ ಹಿಂದೂ ಪರಿಷತ್, ಭಜರಂಗದಳ ಎಲ್ಲೆಡೆ ಬ್ಯಾನರ್‌ಗಳನ್ನು ಹಾಕಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ ಹಾಕುತ್ತಿದ್ದಾರೆ. ಈ ವರ್ಷವೂ ಹಲವೆಡೆ ಈ ಅಭಿಯಾನ ನಡೆದಿದ್ದು, ಜ.19ರಂದು ಮಂಗಳೂರು ನಗರದ ಕದ್ರಿ ಶ್ರೀಮಂಜುನಾಥ ದೇವಸ್ಥಾನದ ಜಾತ್ರೆಯಲ್ಲೂ ಬ್ಯಾನರ್ (Banner) ಕಾಣಿಸಿಕೊಂಡಿದೆ. ಇದನ್ನೂ ಓದಿ: ಹಿಂದಿನ ಸರ್ಕಾರದಿಂದ ನಿರ್ಲಕ್ಷ್ಯ, ನಾವು ಬಂಜಾರ ಸಮುದಾಯದವರಿಗೆ ಹಕ್ಕು ಕೊಟ್ಟಿದ್ದೇವೆ: ಮೋದಿ

    ಜ.21 ರವರೆಗೆ ನಡೆಯಲಿರುವ ಕದ್ರಿ ದೇವಸ್ಥಾನದ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡದಂತೆ ವಿಎಚ್‍ಪಿ-ಭಜರಂಗದಳ ಬ್ಯಾನರ್ ಹಾಕಿದೆ. ಅದರಲ್ಲಿ ಕುಕ್ಕರ್ ಬಾಂಬ್ ಸ್ಫೋಟವನ್ನೂ ಉಲ್ಲೇಖ ಮಾಡಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟದ ಆರೋಪಿ ಮೊದಲು ಟಾರ್ಗೆಟ್ ಮಾಡಿದ್ದೇ ಕದ್ರಿ ಮಂಜುನಾಥ ದೇವಸ್ಥಾನವನ್ನು. ಅಂತಹ ಮನಸ್ಥಿತಿ ಉಳ್ಳವರಿಗೆ ಹಾಗೂ ವಿಗ್ರಹಾರಾಧನೆ ಹರಾಂ ಎಂದು ನಂಬಿರುವ ಯಾರಿಗೂ ಈ ಜಾತ್ರೆಯಲ್ಲಿ ವ್ಯಾಪಾರಕ್ಕೆ ಅವಕಾಶವಿಲ್ಲ. ಸನಾತನ ಧರ್ಮದ ಆಚರಣೆ ಹಾಗೂ ನಂಬಿಕೆಯಲ್ಲಿ ವಿಶ್ವಾಸವುಳ್ಳ ಹಿಂದೂ ವ್ಯಾಪಾರಿಗಳಿಗೆ ಮಾತ್ರ ಅವಕಾಶ ಎಂದು ಬ್ಯಾನರ್ ಹಾಕಲಾಗಿದೆ. ಈ ಬ್ಯಾನರ್ ಹಾಕಿರೋದನ್ನು ಹಿಂದೂ ಸಂಘಟನೆಗಳು ಸಮರ್ಥಿಸಿಕೊಂಡಿದೆ. ಇದನ್ನೂ ಓದಿ: ಮುಂದಿನ 10 ವರ್ಷ ನೀರಾವರಿ ದಶಕ – ಬೊಮ್ಮಾಯಿ ಘೋಷಣೆ

    ಈ ದೇವಸ್ಥಾನದ ಜಾತ್ರಾ ಸಂದರ್ಭದಲ್ಲಿ ಹಲವು ವರ್ಷಗಳಿಂದಲೂ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರ ಮಾಡುತ್ತಿದ್ದರು. ಆದ್ರೆ ಈ ಬಾರಿ ಎಲ್ಲೆಡೆ ಬಹಿಷ್ಕಾರಗಳು ಆರಂಭಗೊಂಡಿದ್ದರಿಂದ ಮುಸ್ಲಿಂ ವ್ಯಾಪಾರಿಗಳು ವ್ಯಾಪಾರಕ್ಕೆ ಬಂದಿಲ್ಲ. ಒಂದೆರಡು ಮಂದಿ ಮುಸ್ಲಿಂ ವ್ಯಾಪಾರಿಗಳು ಜಾತ್ರೆಯಲ್ಲಿ ವ್ಯಾಪಾರ ನಡೆಸಲು ಬಂದಿದ್ದು, ಅವರನ್ನು ಹಿಂದೂ ಸಂಘಟನೆಗಳು ಮನವೊಲಿಸಿ ವಾಪಸ್ ಕಳುಹಿಸಿದ್ದಾರೆ. ಈ ಕ್ಷೇತ್ರ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ದೇವಸ್ಥಾನವಾಗಿರೋದ್ರಿಂದ ಕ್ಷೇತ್ರದ ಆಡಳಿತ ಮಂಡಳಿಯೂ ಈ ಬ್ಯಾನರ್ ಅಳವಡಿಕೆಗೆ ಸಮ್ಮತಿ ಸೂಚಿಸಿಲ್ಲ. ಹೀಗಾಗಿ ಶಾಂತಿ ಸುವ್ಯವಸ್ಥೆ ಕಾಪಾಡೋ ನಿಟ್ಟಿನಲ್ಲಿ ಪೊಲೀಸರು ಬ್ಯಾನರ್‌ಅನ್ನು ತೆರವುಗೊಳಿಸಿದ್ದಾರೆ.

    ಇಂದು ಬೆಳಗ್ಗೆ ಬ್ಯಾನರ್ ಹಾಕಿದ್ದ ಬಗ್ಗೆ ಪೊಲೀಸರ ಗಮನಕ್ಕೆ ಬಂದಿದ್ದು, ತಕ್ಷಣ ತೆರವುಗೊಳಿಸಿದ್ದಾರೆ. ಎರಡು ದಿನಗಳ ಕಾಲ ಜಾತ್ರೆ ಇರೋದ್ರಿಂದ ಆ ವೇಳೆ ಮುಸ್ಲಿಂ ವ್ಯಾಪಾರಿಗಳು ಬಂದ್ರೂ ಅವರನ್ನು ಮನವೊಲಿಸಿ ವಾಪಸ್ ಕಳುಹಿಸಲು ಹಿಂದೂ ಸಂಘಟನೆಯ ಕಾರ್ಯಕರ್ತರು ಮುಂದಾಗಿದ್ದಾರೆ. ಒಟ್ಟಿನಲ್ಲಿ ಕರಾವಳಿಯಲ್ಲಿನ ಜಾತ್ರೆಗಳಲ್ಲಿ ಸಾಮರಸ್ಯದೊಂದಿಗೆ ಎಲ್ಲರೂ ವ್ಯಾಪಾರ ನಡೆಸುತ್ತಿದ್ದು ಮುಂದಿನ ದಿನದಲ್ಲಿ ಹಿಂದೂ ಧಾರ್ಮಿಕ ಕ್ಷೇತ್ರಗಳಲ್ಲಿ ಮುಸ್ಲಿಂ ವರ್ತಕರ ವ್ಯಾಪಾರ ಸಂಪೂರ್ಣ ನಿಲ್ಲುವ ಸಾಧ್ಯತೆ ಇದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕರಾವಳಿಯಲ್ಲಿ ಧರ್ಮದಂಗಲ್: ದೇವಸ್ಥಾನದ ಉತ್ಸವ, ಕಂಬಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ

    ಕರಾವಳಿಯಲ್ಲಿ ಧರ್ಮದಂಗಲ್: ದೇವಸ್ಥಾನದ ಉತ್ಸವ, ಕಂಬಳ ಜಾತ್ರೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಬಹಿಷ್ಕಾರ

    ಉಡುಪಿ: ಕರಾವಳಿ ಜಿಲ್ಲೆ ಉಡುಪಿಯಲ್ಲಿ (Udupi) ಮತ್ತೆ ಧರ್ಮ ದಂಗಲ್ ಶುರುವಾಗಿದೆ. ಹಿಜಬ್ (Hijab) ನಿಂದ ಆರಂಭವಾಗಿದ್ದ ಜಟಾಪಟಿ ಕೊಂಚ ತಣ್ಣಗಾಗಿತ್ತು. ಇದೀಗ ಮತ್ತೆ ಜಾತ್ರೆ ಉತ್ಸವ ಆರಂಭವಾಗುತ್ತಿದ್ದಂತೆ ವ್ಯಾಪಾರ ನಿರಾಕರಣೆಗೆ ಕರೆ ನೀಡಲಾಗಿದೆ. ಇದಕ್ಕೆ ಕಾರಣ ಮಂಗಳೂರಿನಲ್ಲಿ ಕಳೆದ ತಿಂಗಳು ನಡೆದ ಕುಕ್ಕರ್ ಬಾಂಬ್ ಸ್ಫೋಟ (Mangaluru Bomb Blast Case) ಪ್ರಕರಣ ಕಾರಣವಾಗಿದೆ.

    ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ ಹಿಜಬ್ ಹೋರಾಟದ (Hijab Controversy) ನಂತರ ಧರ್ಮ ದಂಗಲ್ ಆರಂಭವಾಗಿತ್ತು. ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಸ್ಥಾನಗಳಲ್ಲಿ ಮಸ್ಲಿಂ ಸಮುದಾಯದ ವ್ಯಾಪಾರಿಗಳಿಗೆ ಅವಕಾಶ ಮಾಡಿಕೊಡಬಾರದು ಎಂಬ ಅಸಹಕಾರ ಧೋರಣೆ ಕಳೆದ ವರ್ಷ ನಡೆದಿತ್ತು. 2-3 ತಿಂಗಳ ಜಟಾಪಟಿಯ ನಂತರ ಕೆಲವು ಉತ್ಸವ ಜಾತ್ರೆಗಳಲ್ಲಿ ಮುಸಲ್ಮಾನ ವ್ಯಾಪಾರಿಗಳು (Muslim Traders) ವ್ಯವಹಾರ ನಡೆಸಿದ್ದರು. ಇದೀಗ ಮತ್ತೆ ವೈಮನಸ್ಸಿಗೆ ಕಾರಣವಾಗಿದ್ದು ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ. ಇದನ್ನೂ ಓದಿ: ಹಿರೇಕೊಡಗಲಿ ಗ್ರಾಮದ ಅಭಿಮಾನಿ ಮನೆಗೆ ಧ್ರುವ ಸರ್ಜಾ ಅಚ್ಚರಿಯ ಭೇಟಿ

    ಕೋಟೇಶ್ವರ ಕೋಟಿಲಿಂಗೇಶ್ವರ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ನಡೆಯುವ ಜಾತ್ರೆ ಮತ್ತು ಉತ್ಸವದ ವ್ಯಾಪಾರಕ್ಕೆ ಈ ಬಾರಿ ತಡೆಯೊಡ್ಡಲಾಗಿದೆ. ಕೋಟ್ಯಂತರ ರೂಪಾಯಿ ವ್ಯವಹಾರ ಕೈ ತಪ್ಪಲಿದೆ. ಶಂಕಿತ ಉಗ್ರ ಶಾರಿಕ್ (Shariq) ನಿಂದ ಸಂಭವಿಸಿದ ಕುಕ್ಕರ್ ಬಾಂಬ್ ಸ್ಫೋಟದ ಬೆಳವಣಿಗೆಯಿಂದ ಕರಾವಳಿಯಲ್ಲಿ ಹಿಂದೂ ಮುಸ್ಲಿಮರ ನಡುವೆ ಬಿರುಕು ಜಾಸ್ತಿಯಾಗಿದೆ. ಉಡುಪಿ ಜಿಲ್ಲೆಯ ಬಹುತೇಕ ದೇವಸ್ಥಾನಗಳಲ್ಲಿ ವ್ಯಾಪಾರ ನಿರಾಕರಣೆ, ಚಳುವಳಿ ಮಾದರಿಯಲ್ಲಿ ನಡೆಯುತ್ತಿದೆ. ಇದನ್ನೂ ಓದಿ: ಸಂಗೀತ ವಿದ್ವಾನ್ ಎಂ.ನಾರಾಯಣಗೆ ಕದ್ರಿ ಸಂಗೀತ ಸೌರಭ 2022 ಜೀವಮಾನ ಶ್ರೇಷ್ಠ ರಾಷ್ಟ್ರ ಪ್ರಶಸ್ತಿ

    ವಿಶ್ವ ಹಿಂದೂ ಪರಿಷತ್ (VHP), ಭಜರಂಗದಳ (Bajrang Dal), ಹಿಂದೂ ಜಾಗರಣ ವೇದಿಕೆ ಶ್ರೀರಾಮ ಸೇನೆ (SriRam Sena) ತಮ್ಮ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ ಮುಸ್ಲಿಮರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಪತ್ರದ ಮುಖೇನ ಮನವಿ ಸಲ್ಲಿಸುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟರ್ ಮೂಲಕ ಸಂದೇಶಗಳನ್ನು ಹರಿ ಬಿಡಲಾಗುತ್ತಿದೆ. ಎರಡು ದಿನಗಳ ಉಪ್ಪುಂದ ದುರ್ಗಾಪರಮೇಶ್ವರಿ ದೇವಸ್ಥಾನದ ಜಾತ್ರೆಯಲ್ಲಿ ಆಡಳಿತ ಮಂಡಳಿಯೇ ಈ ತೀರ್ಮಾನವನ್ನು ಮಾಡಿದೆ.

    ಧಾರ್ಮಿಕ ದತ್ತಿ ಇಲಾಖೆಗೆ ಸಂಬಂಧಪಟ್ಟ ದೇವಸ್ಥಾನಗಳ ವ್ಯಾಪ್ತಿಯಲ್ಲಿ ಆಡಳಿತ ಮಂಡಳಿಗೆ ಹಿಂದೂ ಸಂಘಟನೆಗಳು ಮನವಿ ಕೊಡುತ್ತಿವೆ. ಕಂಬಳ ದೈವಾರಾಧನೆ ದೇವಸ್ಥಾನದ ವಾರ್ಷಿಕೋತ್ಸವ ಸಂದರ್ಭ ಅನ್ಯಧರ್ಮಿಯರ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂಬ ಕೂಗೂ ಜೋರಾಗುತ್ತಿದೆ.

    Live Tv
    [brid partner=56869869 player=32851 video=960834 autoplay=true]

  • ಎಲ್ಲಾ ದೇವಾಲಯಗಳಲ್ಲೂ ಮುಸ್ಲಿಮರ ವ್ಯಾಪಾರ ಬಹಿಷ್ಕಾರ ಮಾಡಬೇಕು – ಪ್ರಮೋದ್ ಮುತಾಲಿಕ್

    ಎಲ್ಲಾ ದೇವಾಲಯಗಳಲ್ಲೂ ಮುಸ್ಲಿಮರ ವ್ಯಾಪಾರ ಬಹಿಷ್ಕಾರ ಮಾಡಬೇಕು – ಪ್ರಮೋದ್ ಮುತಾಲಿಕ್

    ಚಾಮರಾಜನಗರ: ಕರ್ನಾಟಕದ ಎಲ್ಲಾ ದೇವಸ್ಥಾನಗಳಲ್ಲೂ ಮುಸ್ಲಿಮರ ವ್ಯಾಪಾರ ಬಹಿಷ್ಕಾರ ಮಾಡಬೇಕು‌ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಹೇಳಿಕೆ ನೀಡಿದರು.

    ಚಾಮರಾಜನಗರದಲ್ಲಿ (Chamarajanagar) ಆಜಾದ್ ಹಿಂದೂ ಸೇನೆ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದ ಎಲ್ಲಾ ಹಿಂದೂ ದೇವಾಲಯಗಳ ನೂರು ಮೀಟರ್ ಅಂತರದಲ್ಲಿ ಹಿಂದೂಯೇತರರಿಗೆ ಪ್ರವೇಶವಿಲ್ಲ. ವ್ಯಾಪಾರ ಮಾಡಬಾರದು ಎಂಬ ನಿಯಮ ಇದ್ದು, ಇದನ್ನು ಕಟ್ಟುನಿಟ್ಟಾಗಿ ಜಾರಿಗೆ ತರಬೇಕು ಎಂದರು. ಇದನ್ನೂ ಓದಿ: ಶಾರೀಕ್ ಅಲ್ಲ ಘಜನಿಯಿಂದ ಟಿಪ್ಪುವರೆಗಿನ ಎಲ್ಲರೂ ದೇವಸ್ಥಾನದ ಮೇಲೆ ದಾಳಿ ಮಾಡ್ಕೊಂಡೇ ಬಂದಿದ್ದಾರೆ: ಮುತಾಲಿಕ್

    ಕುಕ್ಕೆ ಸುಬ್ರಮಣ್ಯದಲ್ಲಿ ಬೇರೆ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಇಲ್ಲ ಎಂಬ ಬ್ಯಾನರ್‌ ಅಳವಡಿಸಿರುವುದನ್ನು ಸ್ವಾಗತಿಸಿದ ಅವರು, ಇದಕ್ಕೆ ನನ್ನ ಸಂಪೂರ್ಣ ಬೆಂಬಲ ಇದೆ ಎಂದು ತಿಳಿಸಿದರು.

    ನಮ್ಮ ದೇಶದಲ್ಲೇ ಹುಟ್ಟಿ ನಮ್ಮದೇ ಅನ್ನ ತಿಂದು ನಮ್ಮ ದೇವಸ್ಥಾನದಲ್ಲೇ ಬಾಂಬ್ ಇಟ್ಟು ಉಡಾಯಿಸುವ ದುಷ್ಟರ ವಿರುದ್ಧ ನಮ್ಮ ಹೋರಾಟ ನಡೆಯುತ್ತದೆ. ಇಲ್ಲಿಯವರೆಗೆ ಹಿಂದೂ ಸಮಾಜ ಶಾಂತಿಯಿಂದ ವರ್ತಿಸಿದೆ. ಅದನ್ನು ದುರುಪಯೋಗ ಮಾಡಿಕೊಳ್ಳುವ ಕಿಡಿಗೇಡಿ ಮುಸ್ಲಿಂ ಮಾನಸಿಕತೆ ವಿರುದ್ಧವೇ ಈ ವ್ಯಾಪಾರ ಬಹಿಷ್ಕಾರವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಮಂಡ್ಯದಲ್ಲಿ ಅಂಬಿ, ಅಪ್ಪು ಅರಮನೆ – ಅಭಿಮಾನಿಯಿಂದ ನೆಚ್ಚಿನ ನಟರಿಗೆ ಗುಡಿ

    ಯಾರೋ ನಾಲ್ಕು ಜನ ಮಾಡಿದ ಕೃತ್ಯಕ್ಕೆ ಇಡೀ ಮುಸ್ಲಿಂ ಸಮಾಜಕ್ಕೆ ಕೆಟ್ಟ ಹೆಸರು ಬರುತ್ತಿದೆ. ಇದನ್ನು ಮುಸ್ಲಿಂ ಮುಖಂಡರು, ಮುಲ್ಲಾ, ಮೌಲ್ವಿಗಳು ಅರ್ಥ ಮಾಡಿಕೊಳ್ಳಬೇಕು. ನಾವು ಈ ದೇಶದ ಅನ್ನ ತಿನ್ನುತಿದ್ದೇವೆ. ಈ ದೇಶದ ವಿರುದ್ಧವೇ ತಿರುಗಿಬೀಳುವ ಮಾನಸಿಕತೆ ಸರಿ ಅಲ್ಲ ಎಂದು ಅರಿಯಬೇಕು ಎಂದು ಹೇಳಿದರು.

    Live Tv
    [brid partner=56869869 player=32851 video=960834 autoplay=true]

  • ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ – ಬೆಂಬಲ ನೀಡಲು ಮುಸ್ಲಿಂ ವ್ಯಾಪಾರಿಗಳು ನಿರಾಕರಣೆ

    ಜುಲೈ 12ಕ್ಕೆ ಚಾಮರಾಜಪೇಟೆ ಬಂದ್ – ಬೆಂಬಲ ನೀಡಲು ಮುಸ್ಲಿಂ ವ್ಯಾಪಾರಿಗಳು ನಿರಾಕರಣೆ

    ಬೆಂಗಳೂರು: ಈದ್ಗಾ ಮೈದಾನದ ವಿವಾದ ತೀವ್ರಗೊಂಡಿದೆ. ಮಂಗಳವಾರ ಚಾಮರಾಜಪೇಟೆ ಬಂದ್‍ಗೆ ಬೆಂಬಲ ನೀಡಲು ನಿರಾಕರಿಸಿದ್ದಾರೆ

    ಚಾಮರಾಜಪೇಟೆ ಆಟದ ಮೈದಾನ ಮುಸ್ಲಿಮರಿಗೆ ಸೇರಿಲ್ಲ. ಇದು ನಮ್ಮ ಸ್ವತ್ತು ಅಂತ ಸ್ಥಳೀಯರು, ಸಂಘಟನೆಗಳು ಕಿಡಿಕಾರಿವೆ. ಚಾಮರಾಜಪೇಟೆ ಆಟದ ಮೈದಾನ ಉಳಿವಿಗಾಗಿ ಇದೇ 12ಕ್ಕೆ ಅಂದರೆ ಮುಂದಿನ ಮಂಗಳವಾರ ಚಾಮರಾಜಪೇಟೆ ಬಂದ್‍ಗೆ ಕರೆ ಕೊಟ್ಟಿವೆ. ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯ ತನಕ ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರ ಸಂಪೂರ್ಣ ಸ್ಥಬ್ದಗೊಳ್ಳಲಿದೆ. ಆದರೆ, ಇದಕ್ಕೆ ಸೊಪ್ಪು ಹಾಕದ ಮುಸ್ಲಿಂ ವ್ಯಾಪಾರಿಗಳು, ಬಂದ್‍ಗೆ ನಮ್ಮ ಬೆಂಬಲವಿಲ್ಲ. ನಮ್ಮ ಅಂಗಡಿಗಳನ್ನು ಯಾವುದೇ ಕಾರಣಕ್ಕೂ ಮುಚ್ಚಲ್ಲ. ಎಂದಿನಂತೆ ವ್ಯಾಪಾರ ಮಾಡ್ತೇವೆ. ಬಂದ್‍ನಿಂದ ಲಾಸ್ ಆದರೆ ಇವರೇನು ತಂದು ಕೊಡುತ್ತಾರಾ ಅಂತ ಪ್ರಶ್ನೆ ಮಾಡಿದ್ದಾರೆ.  ಇದನ್ನೂ ಓದಿ: ಇಂಡೀಗೋದ ನೂರಾರು ಸಿಬ್ಬಂದಿಗೆ ಒಂದೇ ದಿನ ಅನಾರೋಗ್ಯ – ತನಿಖೆಗೆ ಡಿಜಿಸಿಎ ಸೂಚನೆ

    ಬಿಬಿಎಂಪಿ ಕಮಿಷನರ್ ಇದು ಪಾಲಿಕೆಯ ಸ್ವತ್ತಲ್ಲ ಎಂದಿದ್ದರು. ವಕ್ಫ್‌ಬೋರ್ಡ್‌ ಇದು ನಮ್ಮ ಜಾಗ ಎಂದು ವಾದ ಮಾಡಿತ್ತು. ಹೀಗೆ ಗೊಂದಲದಲ್ಲಿದ್ದ, ಕ್ಷೇತ್ರದ ಜನ, ಭಾನುವಾರ ಈದ್ಗಾ ಮೈದಾನ ಸಮೀಪದ ಜಂಗಮ ಮಂಟಪದಲ್ಲಿ ಸಭೆ ನಡೆಸಿ, ಬಂದ್‍ಗೆ ತೀರ್ಮಾನಿಸಿದ್ದಾರೆ. ಬಂದ್ ದಿನ ಸಿರ್ಸಿ ಸರ್ಕಲ್‍ನಿಂದ ಈದ್ಗಾ ಮೈದಾನದವರೆಗೆ ಬೃಹತ್ ರ್ಯಾಲಿ ಮಾಡಲಿದ್ದಾರೆ. ಆದರೆ ಇದಕ್ಕೆ ಪೊಲೀಸರು ಅವಕಾಶ ನೀಡುವುದು ಅನುಮಾನ ಎನ್ನಲಾಗುತ್ತಿದೆ. ಇದನ್ನೂ ಓದಿ: ಅವರನ್ನು ಸೆರೆಹಿಡಿಯಲು ಬೆಳಗ್ಗೆಯವರೆಗೂ ಕಾದು ಕುಳಿತಿದ್ದೆವು – ಉಗ್ರರನ್ನು ಗ್ರಾಮಸ್ಥರು ಬಂಧಿಸಿದ ಕಥೆ ಓದಿ

    Live Tv
    [brid partner=56869869 player=32851 video=960834 autoplay=true]

  • ಮುಸ್ಲಿಮರು ಈ ದೇಶದ ಪ್ರಜೆಗಳು, ಅವ್ರು ವ್ಯಾಪಾರ ಮಾಡದಂತೆ ಬಹಿಷ್ಕರಿಸುವುದು ಸರಿಯಲ್ಲ: ಎಚ್.ವಿಶ್ವನಾಥ್

    ಮುಸ್ಲಿಮರು ಈ ದೇಶದ ಪ್ರಜೆಗಳು, ಅವ್ರು ವ್ಯಾಪಾರ ಮಾಡದಂತೆ ಬಹಿಷ್ಕರಿಸುವುದು ಸರಿಯಲ್ಲ: ಎಚ್.ವಿಶ್ವನಾಥ್

    ಮೈಸೂರು: ಮುಸ್ಲಿಮರು ಈ ದೇಶದ ಪ್ರಜೆಗಳು. ಅವರು ವ್ಯಾಪಾರ ಮಾಡದಂತೆ ನಿಷೇಧ ವಿಧಿಸುವುದು ಸರಿಯಲ್ಲ ಎಂದು ವಿಧಾನ ಪರಿಷತ್ ಸದಸ್ಯ ಅಡಗೂರು ಎಚ್.ವಿಶ್ವನಾಥ್ ಹೇಳಿದರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಸ್ಲಿಂ ವರ್ತಕರಿಗೆ ವ್ಯಾಪಾರಕ್ಕೆ ಅವಕಾಶ ನೀಡದೇ ಇರುವುದು ಅಮಾನವೀಯ ನಡೆ. ಮುಸ್ಲಿಮರು ಈ ದೇಶದ ಪ್ರಜೆಗಳು. ಅವರನ್ನು ಅಲ್ಲಿ ವ್ಯಾಪಾರಕ್ಕೆ ಬರಬೇಡಿ, ಇಲ್ಲಿ ಬರಬೇಡಿ ಎಂದು ಹೇಳುವುದು ಸಂವಿಧಾನ ವಿರೋಧಿ ನಿಲುವು. ರಾಜ್ಯ ಸರ್ಕಾರ ತಕ್ಷಣ ಮುಸ್ಲಿಂ ವರ್ತಕರ ನೆರವಿಗೆ ಬರಬೇಕು. ಇಂತಹ ಬಹಿಷ್ಕಾರಗಳು ನಡೆಯದಂತೆ ನೋಡಿಕೊಳ್ಳಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವರ್ತಕರಿಗೆ ವ್ಯಾಪಾರ ನಿಷೇಧ ವಿಚಾರ: ಸಿಡಿದೆದ್ದ ಕರಾವಳಿ ಶಾಸಕರು

    ʻದಿ ಕಾಶ್ಮೀರ್ ಫೈಲ್ಸ್ʼ ಸಿನಿಮಾಗಾಗಿ ʻಜೇಮ್ಸ್ʼ ಸಿನಿಮಾವನ್ನು ಚಿತ್ರಮಂದಿಗಳಿಂದ ತೆಗೆಯುವಂತೆ ಉಂಟಾಗಿರುವ ಒತ್ತಡ ಕುರಿತು ಪ್ರತಿಕ್ರಿಯಿಸಿ, ಅಪ್ಪುಗೆ ಅಭಿಮಾನಿ ಬಳಗ ದೊಡ್ಡದಿದೆ. ಡಾ.ರಾಜ್ ಕುಟುಂಬ ಕರ್ನಾಟದಕ ಸಾಂಸ್ಕೃತಿಕ ರಾಯಭಾರಿ ಕುಟುಂಬ. ಇಂತಹ ಕುಟುಂಬದ ಕುಡಿಯ ಕೊನೆಯ ಚಿತ್ರ ಜೇಮ್ಸ್. ಈ ಚಿತ್ರವನ್ನು ಒತ್ತಾಯ ಪೂರ್ವಕವಾಗಿ ಪ್ರದರ್ಶನ ಕಡಿತ ಮಾಡುವುದು ತಪ್ಪು. ಈ ರೀತಿ ಪ್ರದರ್ಶನ ರದ್ದು ಮಾಡಿದರೆ ಅದು ಕನ್ನಡಿಗರಿಗೆ ಮಾಡಿದ ಅಪಮಾನ. ಇದರ ವಿರುದ್ಧ ಜನ ರೊಚ್ಚಿಗೇಳುತ್ತಾರೆ ಎಂದು ಎಚ್ಚರಿಸಿದರು.

    H. Vishwanath

    ಕಾಶ್ಮೀರ್ ಫೈಲ್ಸ್ ರಕ್ತ ಸಿಕ್ತ ಚರಿತ್ರೆ. ಅದನ್ನು ನೋಡಬೇಕೆನ್ನುವವರು ನೋಡಲಿ. ಅದಕ್ಕೆ ಯಾರ ಅಡ್ಡಿಯೂ ಇಲ್ಲ. ಇನ್ನೊಂದು ಭಾಷೆಯ ಚಿತ್ರಕ್ಕಾಗಿ ಕನ್ನಡದ ಸಿನಿಮಾ ಪ್ರದರ್ಶನ ಸಂಖ್ಯೆ ಕಡಿಮೆ ಮಾಡುವುದು ಸರಿಯಲ್ಲ ಎಂದರು. ಇದನ್ನೂ ಓದಿ: ಮಂಗಳೂರು, ಉಡುಪಿ ಬಳಿಕ ಬೆಂಗಳೂರಿಗೂ ವ್ಯಾಪಿಸಿದ ಧರ್ಮ ಸಂಘರ್ಷ

  • Hijab Row: ಅನ್ಯ ಧರ್ಮೀಯರು ಜಾತ್ರೆಯಲ್ಲಿ ವ್ಯಾಪಾರ ಮಾಡಬಾರದು – ಕಾಪು ಮಾರಿಗುಡಿಗೆ ಪತ್ರ

    Hijab Row: ಅನ್ಯ ಧರ್ಮೀಯರು ಜಾತ್ರೆಯಲ್ಲಿ ವ್ಯಾಪಾರ ಮಾಡಬಾರದು – ಕಾಪು ಮಾರಿಗುಡಿಗೆ ಪತ್ರ

    ಉಡುಪಿ: ಜಿಲ್ಲೆಯಲ್ಲಿ ಆರಂಭಗೊಂಡ ಹಿಜಬ್ ಹೋರಾಟದ ಆಫ್ಟರ್ ಎಫೆಕ್ಟ್ ಒಂದೊಂದಾಗಿ ಹೊರ ಬರುತ್ತಿದೆ. ಉಡುಪಿಯಲ್ಲಿ ತೀರ್ಪು ವಿರೋಧಿಸಿ ಮುಸಲ್ಮಾನ ವ್ಯಾಪಾರಿಗಳು ಒಂದು ದಿನ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದರು. ಇದೀಗ ಮುಂದುವರಿದ ಭಾಗವಾಗಿ ವ್ಯಾಪಾರ ಬಹಿಷ್ಕಾರ ಅಭಿಯಾನ ಶುರುವಾಗಿದೆ.

    ಕಾಪುವಿನ ಇತಿಹಾಸ ಪ್ರಸಿದ್ಧ ಸುಗ್ಗಿ ಮಾರಿ ಪೂಜೆಯಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅಂಗಡಿಗಳನ್ನು ನೀಡದಂತೆ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಮೂರು ಮಾರಿಗುಡಿಗಳ ಆಡಳಿತ ಮಂಡಳಿಗೆ ಶುಕ್ರವಾರ ಮನವಿ ಮಾಡಿದ್ದಾರೆ. ಇದನ್ನೂ ಓದಿ:  ಸಿದ್ರಾಮುಲ್ಲಾ ಖಾನ್ ಆಗಿದ್ರೆ ಕಾಶ್ಮೀರದಲ್ಲಿ ಸಿದ್ದರಾಮಯ್ಯ ಉಳಿದುಕೊಳ್ಳುತ್ತಿದ್ದರು: ಸಿ.ಟಿ.ರವಿ

    ಹಿಂದೂ ಪರ ಸಂಘಟನೆಗಳ ನೂರಾರು ಮಂದಿ ಕಾರ್ಯಕರ್ತರು ಹೊಸ ಮಾರಿಗುಡಿಯ ಮುಂಭಾಗದಲ್ಲಿ ಜಮಾಯಿಸಿ, ಯಾವುದೇ ಕಾರಣಕ್ಕೂ ಮಾರಿಗುಡಿ ಸುತ್ತಲಿನ ಪ್ರದೇಶದಲ್ಲಿ ಹಿಂದೂಯೇತರರಿಗೆ ಅಂಗಡಿಗಳನ್ನು ಹಾಕಲು ಅವಕಾಶ ಮಾಡಿಕೊಡದಂತೆ ಮನವಿ ಮಾಡಿದ್ದಾರೆ. ಹಿಂದೂ ಧಾರ್ಮಿಕ ಕೇಂದ್ರಗಳಲ್ಲಿ ಹಿಂದೂಗಳಿಗೆ ಮಾತ್ರ ವ್ಯಾಪಾರ ಮಾಡಲು ಅವಕಾಶ ಕೊಡಿ ಎಂದು ಒತ್ತಾಯಿಸಿದ್ದಾರೆ.

    ಹಿಜಬ್ ತೀರ್ಪಿನ ನಂತರ ಮುಸಲ್ಮಾನ ವ್ಯಾಪಾರಿಗಳು ರಾಜ್ಯಾದ್ಯಂತ ಒಂದು ದಿನ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ಕೆಲ ಹಿಂದೂಗಳ ಅಂಗಡಿಗಳನ್ನು ಕೂಡ ಮುಚ್ಚಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಹಿಂದೂ ಜಾಗರಣ ವೇದಿಕೆ ಸಾಮಾಜಿಕ ಜಾಲತಾಣದ ಮೂಲಕ ಅಭಿಯಾನ ನಡೆಸಿದ್ದಾರೆ. ಜಾತ್ರೆ-ಉತ್ಸವಗಳಲ್ಲಿ ಮುಸಲ್ಮಾನ ಧರ್ಮದವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಬಾರದು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಭಗವದ್ಗೀತೆ, ಕುರಾನ್, ಬೈಬಲ್ ಯಾವುದನ್ನಾದರೂ ಕಲಿಸಿ: ಸಿದ್ದರಾಮಯ್ಯ

    ಅಭಿಯಾನಕ್ಕೆ ಪೂರಕವಾಗಿ ಸ್ಪಂದಿಸಿದ ಕಾಪು ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿ, ತಮ್ಮ ದೇವಸ್ಥಾನದ ವ್ಯಾಪ್ತಿಯಲ್ಲಿ ಹಿಂದೂಯೇತರರಿಗೆ ಅಂಗಡಿ ಹಾಕಲು ಅವಕಾಶ ನೀಡುವುದಿಲ್ಲ ಎಂದಿದೆ. ಇತಿಹಾಸ ಪ್ರಸಿದ್ಧ ಕಾಪು ಸುಗ್ಗಿ ಮಾರಿಪೂಜೆ ಜಾತ್ರೆಯಲ್ಲಿ ವಿವಿಧೆಡೆಗಳಿಂದ ಲಕ್ಷಾಂತರ ಮಂದಿ ಭಕ್ತಾಧಿಗಳು ಭಾಗವಹಿಸುತ್ತಾರೆ. ನೂರಾರು ಅಂಗಡಿಗಳ ಮೂಲಕ ಕೋಟ್ಯಂತರ ರೂಪಾಯಿ ವ್ಯವಹಾರವೂ ನಡೆಯುತ್ತದೆ. ಹಣ್ಣುಕಾಯಿ ಹೂವು ಮತ್ತು ದೇವಿಗೆ ಬಲಿ ಕೊಡುವ ಕುರಿ ಮತ್ತು ಕೋಳಿ ವ್ಯಾಪಾರ ಕಾಪುವಿನಲ್ಲಿ ಜೋರಾಗಿ ನಡೆಯುತ್ತದೆ. ಸುತ್ತಮುತ್ತಲ ಜಿಲ್ಲೆಗಳಿಂದ ಭಕ್ತರು ಪಾಲ್ಗೊಳ್ಳುತ್ತಾರೆ. ಹಿಜಬ್ ವಿವಾದ, ತೀರ್ಪು ನಂತರ ಸಂಘರ್ಷದ ವಾತಾವರಣ ನಿರ್ಮಾಣವಾಗಿದೆ.

    ಮಾರಿಗುಡಿ ಸುತ್ತಲಿನ ಪ್ರದೇಶದಲ್ಲಿ ಹಿಂದೂಯೇತರರಿಗೆ ಅಂಗಡಿಗಳನ್ನು ಹಾಕಲು ಅವಕಾಶ ಮಾಡಿಕೊಡದಂತೆ ಮನವಿ ಮಾಡಿದ್ದು, ಅದಕ್ಕೆ ಪೂರಕವಾಗಿ ಸ್ಪಂದಿಸಿದ ಹೊಸ ಮಾರಿಗುಡಿ ದೇವಸ್ಥಾನದ ಆಡಳಿತ ಮಂಡಳಿಯು ತಮ್ಮ ದೇವಸ್ಥಾನದ ವ್ಯಾಪ್ತಿಯಲ್ಲಿ ಹಿಂದೂಯೇತರಿಗೆ ಅಂಗಡಿ ಹಾಕಲು ಅವಕಾಶ ನೀಡುವುದಿಲ್ಲ ಎಂದಿದೆ.