Tag: Muslim Womens

  • ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಹೇಳಿಕೆ – ಶಾಸಕ ಯತ್ನಾಳ್‌ ವಿರುದ್ಧ FIR

    ಮುಸ್ಲಿಂ ಯುವತಿಯರನ್ನ ಮದ್ವೆಯಾದ್ರೆ 5 ಲಕ್ಷ ರೂ. ಹೇಳಿಕೆ – ಶಾಸಕ ಯತ್ನಾಳ್‌ ವಿರುದ್ಧ FIR

    ಕೊಪ್ಪಳ: ಹಿಂದೂ- ಮುಸ್ಲಿಮರ (Hindu Muslims) ನಡುವೆ ಸೌಹಾರ್ದಕ್ಕೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ವಿರುದ್ಧ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ (Koppala Police Station) ಎಫ್‌ಐಆರ್‌ ದಾಖಲಾಗಿದೆ.

    ಅನ್ಯಕೋಮಿನ ಯುವಕನಿಂದ ಆಗಸ್ಟ್‌ 3 ರಂದು ಕೊಪ್ಪಳದ ಕುರುಬರ ಓಣಿಯ ಗವಿಸಿದ್ದಪ್ಪ ನಾಯಕ ಕೊಲೆ ಆಗಿತ್ತು. ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಲು ಆ.10ರಂದು ಕೊಪ್ಪಳಕ್ಕೆ ಬಂದಿದ್ದ ಯತ್ನಾಳ್‌ ಹಿಂದೂ ಯುವಕರು ಮುಸ್ಲಿಂ ಯುವತಿಯರನ್ನ (Muslims Womens) ಮದುವೆಯಾದರೆ 5 ಲಕ್ಷ ರೂ. ಕೊಡುವ ಕಾರ್ಯಕ್ರಮ ತರೋದಾಗಿ ಹೇಳಿದ್ದರು. ಈ ಮೂಲಕ ಕೊಲೆ ಮಾಡುವ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾರವಿದೆ ಎಂದು ಹೇಳಿಕೆ ನೀಡಿದ್ದರು. ಇದು ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಇದನ್ನೂ ಓದಿ: ಅಗ್ನಿ 5 ಖಂಡಾಂತರ ಕ್ಷಿಪಣಿ ಪರೀಕ್ಷೆ ಯಶಸ್ವಿ

    ಈ ಹಿನ್ನೆಲೆ ಕೊಪ್ಪಳದ ಕುವೆಂಪು ನಗರದ ನಿವಾಸಿ ಅಬ್ದುಲ್‌ ಕಲಾಂ ದೂರು ನೀಡಿದ್ದು ಯತ್ನಾಳ್‌ ಹೇಳಿಕೆಯಿಂದ ಎರಡು ಧರ್ಮಗಳ ನಡುವೆ ದ್ವೇಷ ಬೆಳೆಯುವಂತಾಗಿದೆ. ಮುಸ್ಲಿಂ ಮಹಿಳೆಯರನ್ನ ಕೀಳಾಗಿ, ಕೆಟ್ಟ ಮನಸ್ಥಿತಿಯಿಂದ ನೋಡುವುದಲ್ಲದೇ ಅವರನ್ನು ಅವಮಾನ ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನ ಪರಿಷತ್‌ನಲ್ಲಿ ಬಾಲ್ಯವಿವಾಹ, ದೇವದಾಸಿ ಪದ್ಧತಿ ನಿಷೇಧ ಕಾಯ್ದೆ ಪಾಸ್

    ಅಬ್ದುಲ್ ರಜಾಕ್‌ಗೆ ಹಿಂಬರಹ
    ಇದೇ ವಿಚಾರವಾಗಿ ಶಾಸಕ ಬಸನಗೌಡ ಯತ್ನಾಳ್‌ ವಿರುದ್ಧ ದೂರು ನೀಡಲು ಬೆಂಗಳೂರಿನ ಅಬ್ದುಲ್ ರಜಾಕ್ ಇಂದು ಕೊಪ್ಪಳಕ್ಕೆ ಬಂದಿದ್ದರು. ಜೊತೆಗೆ ಯತ್ನಾಳ್ ವಿರುದ್ಧ ಕೊಪ್ಪಳ ನಗರ ಠಾಣೆಯಲ್ಲಿ ದೂರು ನೀಡಿದ್ದಾರೆ. ಆದರೆ, ಪೊಲೀಸರು, ಈಗಾಗಲೇ ಈ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರು ನೀಡಿದ ದೂರು ಆಧರಿಸಿ, ಎಫ್ಐಆರ್ ಮಾಡಲಾಗಿದೆ. ಏನಾದರೂ ಹೇಳಿಕೆ ಇದ್ದರೇ ಅದೇ ಆರೋಪ ಪಟ್ಟಿಯಲ್ಲಿ ಸೇರಿಸಲಾಗುವುದು ಎಂದು ಹಿಂಬರಹ ನೀಡಿದ್ದಾರೆ ಎಂದು ತಿಳಿದುಬಂದಿದೆ. ‌ಇದನ್ನೂ ಓದಿ:  ಇಮ್ಯೂನೋಥೆರಪಿಗೆ ಬಳಸುವ ಔಷಧ & ರೇಡಿಯೋಥೆರಪಿ ಉಪಕರಣಗಳ ಮೇಲಿನ ಕಸ್ಟಮ್ಸ್‌ ಸುಂಕಕ್ಕೆ ವಿನಾಯಿತಿಗೆ ಮನವಿ

  • ಬುರ್ಖಾಧಾರಿ ಮಹಿಳಾ ಮತದಾರರ ವಿಶೇಷ ತಪಾಸಣೆಗೆ ಒತ್ತಾಯ – ಬಿಜೆಪಿ ಮನವಿಗೆ ಓವೈಸಿ ಕೆಂಡಾಮಂಡಲ

    ಬುರ್ಖಾಧಾರಿ ಮಹಿಳಾ ಮತದಾರರ ವಿಶೇಷ ತಪಾಸಣೆಗೆ ಒತ್ತಾಯ – ಬಿಜೆಪಿ ಮನವಿಗೆ ಓವೈಸಿ ಕೆಂಡಾಮಂಡಲ

    ಹೈದರಾಬಾದ್‌: ಬಿಜೆಪಿಯು ಮುಸ್ಲಿಂ ಮಹಿಳೆಯರನ್ನ ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ಎಂದು ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (AIMIM) ಅಧ್ಯಕ್ಷ ಅಸಾದುದ್ದೀನ್ ಓವೈಸಿ (Asaduddin Owaisi) ಕಿಡಿ ಕಾರಿದ್ದಾರೆ.

    ಬುಧವಾರ ಸಾರ್ವಜನಿಕ ಸಮಾರಂಭವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಮುಸ್ಲಿಂ ಮಹಿಳೆಯರನ್ನ (Muslim Womens) ಗುರಿಯಾಗಿಸಿಕೊಂಡು ಮತದಾನ ಪ್ರಕ್ರಿಯೆಯಲ್ಲಿ ಅಡೆತಡೆ ಸೃಷ್ಟಿಸುತ್ತಿದೆ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಕಾಂಬೋಡಿಯಾದಲ್ಲಿ ಮೋಸದ ಉದ್ಯೋಗ ಜಾಲಕ್ಕೆ ಸಿಲುಕಿದ್ದ 60 ಮಂದಿ ಭಾರತೀಯರ ರಕ್ಷಣೆ

    ಬುರ್ಖಾ (Burqas) ಧರಿಸಿರುವ ಮಹಿಳೆಯರನ್ನು ವಿಶೇಷ ತಪಾಸಣೆಗೆ ಒಳಪಡಿಸಬೇಕು ಎಂದು ಬಿಜೆಪಿಯ ದೆಹಲಿ ಘಟಕ ಚುನಾವಣಾ ಆಯೋಗಕ್ಕೆ ತಿಳಿಸಿದೆ. ಇತ್ತೀಚೆಗೆ ತೆಲಂಗಾಣದ ಅಭ್ಯರ್ಥಿ ಕೂಡ ಮತದಾನದ ವೇಳೆ ಮುಸ್ಲಿಂ ಮಹಿಳೆರನ್ನ ಸಾರ್ವಜನಿಕವಾಗಿ ನಿಂದಿಸಿ ಕಿರುಕುಳ ನೀಡಿದ್ದರು. ಅಷ್ಟೇ ಅಲ್ಲ ಪ್ರತಿ ಚುನಾವಣೆಯಲ್ಲೂ ಬಿಜೆಪಿ ಮುಸ್ಲಿಂ ಮಹಿಳೆರಿಗೆ ಕಿರುಕುಳ ನೀಡಲು ಒಂದೊಂದೇ ದಾರಿಯನ್ನು ಕಂಡುಕೊಳ್ಳುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

    ಚುನಾವಣಾ ಆಯೋಗ ಪರಿಶೀಲನೆಯ ನಂತರವೇ ಮತದಾನಕ್ಕೆ ಅವಕಾಶ ಮಾಡಿಕೊಡಲಿದೆ. ಪರಿಶೀಲನೆ ಮಾಡದೇ ಮತದಾನ ಯಾರೂ ಮಾಡುವುದಿಲ್ಲ. ಅದಕ್ಕಾಗಿಯೇ ಚುನಾವಣಾ ಆಯೋಗ ಸ್ಪಷ್ಟ ನಿಬಂಧನೆಗಳನ್ನು ಹೊಂದಿದೆ. ಆದ್ರೆ, ಬಿಜೆಪಿ ವಿಶೇಷ ಬೇಡಿಕೆಯೊಂದಿಗೆ‌ ಮುಸ್ಲಿಂ ಮಹಿಳೆಯರಿಗೆ ಕಿರುಕುಳ ನೀಡುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ರಾಹುಲ್‌ ಗಾಂಧಿಗೆ ಕಸದ ಬುಟ್ಟಿಯ ಬಗ್ಗೆ ಸಾಕಷ್ಟು ಅನುಭವವಿದೆ: ಆಚಾರ್ಯ ಪ್ರಮೋದ್‌ ಕೃಷ್ಣಂ ಮತ್ತೆ ವಾಗ್ದಾಳಿ

    ಮೇ 25ರಂದು 6ನೇ ಹಂತದ ಮತದಾನ:
    ಮೇ 25ರಂದು 6ನೇ ಹಂತದ ಲೋಕಸಭಾ ಚುನಾವಣೆಗೆ ಮತದಾನ ನಡೆಯಲಿದ್ದು, ಒಟ್ಟು 6 ರಾಜ್ಯ ಮತ್ತು 2 ಕೇಂದ್ರಾಡಳಿತ ಪ್ರದೇಶಗಳ 58 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ. ಬುಧವಾರ ಮತದಾನ ನಡೆಯುವ ಮೇಳೆ ಬುರ್ಖಾ ಧರಿಸಿ ಬರುವ ಮಹಿಳಾ ಮತದಾರರನ್ನ ವಿಶೇಷ ತಪಾಸಣೆಗೆ ಒಳಪಡಿಸಬೇಕು ಎಂದು ದೆಹಲಿ ಬಿಜೆಪಿ ನಿಯೋಗವು ಮುಖ್ಯ ಚುನಾವಣಾ ಅಧಿಕಾರಿ (ಸಿಇಒ)ಗಳಿಗೆ ಒತ್ತಾಯಿಸಿತ್ತು.

    ಇತ್ತೀಚೆಗೆ ಹೈದ್ರಾಬಾದ್ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಮತಗಟ್ಟೆಯಲ್ಲಿ ಮುಸ್ಲಿಂ ಮಹಿಳೆಯರ ಮತದಾರರ ಗುರುತಿನ ಚೀಟಿಗಳನ್ನು ಖುದ್ದು ಪರಿಶೀಲಿಸಿದ್ದರು. ಈ ಕುರಿತ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಸದ್ದು ಮಾಡಿದ ಬಳಿಕ ಚುನಾವಣಾಧಿಕಾರಿಗಳು ಪ್ರಕರಣ ದಾಖಲಿಸಿದ್ದರು. ಇದನ್ನೂ ಓದಿ: 2047 ರವರೆಗೆ 24×7 ಕೆಲಸ ಮಾಡಬೇಕೆಂದು ದೇವರು ನನಗೆ ಆದೇಶಿಸಿದ್ದಾನೆ ಎಂದು ನಂಬಿದ್ದೇನೆ: ಮೋದಿ 

  • ಜೈಲು ಸೇರಿರುವ ಮಕ್ಕಳನ್ನ ಬಿಡುಗಡೆ ಮಾಡಿಸುವಂತೆ ಮುಖಂಡರ ಮುಂದೆ ಮುಸ್ಲಿಂ ಮಹಿಳೆಯರ ಕಣ್ಣೀರು

    ಜೈಲು ಸೇರಿರುವ ಮಕ್ಕಳನ್ನ ಬಿಡುಗಡೆ ಮಾಡಿಸುವಂತೆ ಮುಖಂಡರ ಮುಂದೆ ಮುಸ್ಲಿಂ ಮಹಿಳೆಯರ ಕಣ್ಣೀರು

    ಹುಬ್ಬಳ್ಳಿ: ರಂಜಾನ್ (Ramadan Festival) ಪ್ರಾರ್ಥನೆ ನಡೆಯುತ್ತಿದ್ದ ಚೆನ್ನಮ್ಮ ವೃತ್ತದ ಈದ್ಗಾ ಮೈದಾನದಲ್ಲಿ (Eidgah Maidan), ಹಳೇ ಹುಬ್ಬಳ್ಳಿ (Hubballi) ಗಲಭೆಯಲ್ಲಿ ಜೈಲು ಸೇರಿರುವ ತಮ್ಮ ಮಕ್ಕಳನ್ನ ಬಿಡುಗಡೆ ಮಾಡಿಸುವಂತೆ ಮುಸ್ಲಿಂ ಮುಖಂಡರ (Muslim Leaders) ಮುಂದೆ ಮಹಿಳೆಯರು ಕಣ್ಣೀರು ಹಾಕಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

    ನೀವೆಲ್ಲರೂ ಸಂತೋಷದಿಂದ ರಂಜಾನ್ ಮಾಡುತ್ತಿದ್ದೀರಿ. ನಮ್ಮ ಕುಟುಂಬಗಳು ಕಷ್ಟದಲ್ಲಿವೆ ಎಂದು ಅಳಲು ತೋಡಿಕೊಂಡಿದ್ದಾರೆ. ಜೊತೆಗೆ ಮುಸ್ಲಿಂ ಮುಖಂಡರು ನಮ್ಮ ಮಕ್ಕಳಿಗೆ ಜಾಮೀನು ಕೊಡಿಸುವಲ್ಲಿ, ಕಾನೂನು ಹೋರಾಟದಲ್ಲಿ ವಿಫಲರಾಗಿದ್ದಾರೆಂದು ಮಹಿಳೆಯರು ಆಕ್ರೋಶ ಹೊರಹಾಕಿದ್ದಾರೆ. ಮಹಿಳೆಯರ ಆಕ್ರೋಶ ಕಂಡ ಮುಸ್ಲಿಂ ಮುಖಂಡರು ಈದ್ಗಾ ಮೈದಾನದಿಂದ ಕಾಲ್ಕಿತ್ತಿದ್ದಾರೆ.

    ಹಳೇ ಹುಬ್ಬಳ್ಳಿ ಗಲಭೆಯಲ್ಲಿ 149 ಮುಸ್ಲಿಂ ಯುವಕರು ಕಳೆದ ಒಂದು ವರ್ಷದಿಂದ ಸೆರೆವಾಸ ಅನುಭವಿಸುತ್ತಿದ್ದಾರೆ. 149 ಮಂದಿ ಯುವಕರು ಬಳ್ಳಾರಿ, ಕಲಬುರ್ಗಿ ಹಾಗೂ ಮೈಸೂರು ಜೈಲುಗಳಲ್ಲಿ ಇದ್ದಾರೆ. ಇದನ್ನೂ ಓದಿ: ಬಿಜೆಪಿ, ಪಕ್ಷೇತರ ಅಭ್ಯರ್ಥಿ ಬೆಂಬಲಿಗರ ನಡುವೆ ಮಾರಾಮಾರಿ – ಹಲ್ಲೆಯಿಂದ ತಪ್ಪಿಸಿಕೊಳ್ಳ

    ಏಪ್ರಿಲ್ 16 ರಂದು ತಡರಾತ್ರಿ ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಕೋಮುಗಲಭೆಯಲ್ಲಿ ಈ ಯುವಕರನ್ನ ಬಂಧಿಸಲಾಗಿತ್ತು. ಇದನ್ನೂ ಓದಿ: ಪಾಂಡ್ಯ ಪರಾಕ್ರಮದ ಮುಂದೆ ಮಂಡಿಯೂರಿದ ರಾಹುಲ್‌ ಪಡೆ – ಗುಜರಾತ್‌ಗೆ 7 ರನ್‌ಗಳ ರೋಚಕ ಜಯ

  • ಕಾಂಗ್ರೆಸ್, ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿದ್ದ ಮುಸ್ಲಿಂ ಮಹಿಳೆಯರು ರೆಡ್ಡಿ ಪಕ್ಷಕ್ಕೆ ಸೇರ್ಪಡೆ

    ಕಾಂಗ್ರೆಸ್, ಜೆಡಿಎಸ್‌ನಲ್ಲಿ ಗುರುತಿಸಿಕೊಂಡಿದ್ದ ಮುಸ್ಲಿಂ ಮಹಿಳೆಯರು ರೆಡ್ಡಿ ಪಕ್ಷಕ್ಕೆ ಸೇರ್ಪಡೆ

    ಕೊಪ್ಪಳ: ಜೆಡಿಎಸ್ (JDS), ಕಾಂಗ್ರೆಸ್ (Congress) ಪಕ್ಷದಲ್ಲಿ ಗುರುತಿಸಿಕೊಂಡಿದ್ದ ಪ್ರಮುಖ ಮುಸ್ಲಿಂ ಮಹಿಳಾ (Muslim Womens) ಮುಖಂಡರು ಇದೀಗ ಗಾಲಿ ಜನಾರ್ದನ ರೆಡ್ಡಿ (Janardhan Reddy) ಅವರ ನೇತೃತ್ವದ ಕಲ್ಯಾಣ ರಾಜ್ಯ ಪ್ರಗತಿ ಪಕ್ಷ ಸೇರ್ಪಡೆಯಾಗಿ ಅಚ್ಚರಿ ಮೂಡಿಸಿದ್ದಾರೆ.

    ಕೊಪ್ಪಳದ (Koppal) ಸ್ಥಳೀಯ ನಿವಾಸಿಗಳಾದ ಗೌಸಿಯಾ ಬೇಗಂ, ಬಿಲ್ಕಿಸ್ ಬೇಗಂ, ಶಂಷಾದ ಬೇಗಂ ಹಾಗೂ ಲತಾ ಟೈಲರ್ ತಮ್ಮ ನೂರಾರು ಬೆಂಬಲಿಗರೊಂದಿಗೆ ಮೊಹಮ್ಮದ್ ಗೌಸ್ ದಫೇದಾರ್ ನೇತೃತ್ವದಲ್ಲಿ ಗಾಲಿ ಜನಾರ್ದನ ರೆಡ್ಡಿಯವರ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದ (KRP Party) ಕಚೇರಿಯಲ್ಲಿ ಪಕ್ಷ ಸೇರ್ಪಡೆಗೊಂಡಿದ್ದಾರೆ.

    ಕಾಂಗ್ರೆಸ್, ಬಿಜೆಪಿ ತಲೆ ಬಾಗುವಂತೆ ಮಾಡುತ್ತೇನೆ - ಜನಾರ್ದನ ರೆಡ್ಡಿ ಸವಾಲ್

    ಈ ವೇಳೆ ಗೌಸಿಯಾ ಬೇಗಂ ಮಾತನಾಡಿ, ಗಂಗಾವತಿಯಲ್ಲಿ ಜೆಡಿಎಸ್ (JDS) ಪಕ್ಷವನ್ನ ಬಲಿಷ್ಠವಾಗಿ ಬೆಳೆಸಲು ಸಮರ್ಥ ನಾಯಕರೇ ಇಲ್ಲ. ಹಾಗಾಗಿ ಅಭಿವೃದ್ಧಿಯ ಹರಿಕಾರ, ಬಡವರ ಹಾಗೂ ದೀನ ದಲಿತರ ಆಶಾ ಕಿರಣ ಜನಾರ್ದನ ರೆಡ್ಡಿ ಅವರನ್ನ ಬೆಂಬಲಿಸುತ್ತೇವೆ. ಅವರು ಕೊಟ್ಟ ಜವಾಬ್ದಾರಿ ನಿಭಾಯಿಸಿ ಪಕ್ಷ ಸಂಘಟಿಸುವಲ್ಲಿ ಕೆಲಸ ಮಾಡುತ್ತೇವೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಹಂಪಿ ಉತ್ಸವ: ಗಾಯಕ ಕೈಲಾಶ್‌ ಕೇರ್ ಮೇಲೆ ಬಾಟಲಿ ಎಸೆದ ಕಿಡಿಗೇಡಿಗಳು

    ಕಾಂಗ್ರೆಸ್, ಬಿಜೆಪಿ ತಲೆ ಬಾಗುವಂತೆ ಮಾಡುತ್ತೇನೆ - ಜನಾರ್ದನ ರೆಡ್ಡಿ ಸವಾಲ್

    ಪಕ್ಷ ಸೇರ್ಪಡೆ ನಂತರ ಮಹಿಳಾ ಮುಖಂಡೆ ಬಿಲ್ಕಿಸ್ ಬೇಗಂ ಮಾತನಾಡಿ, ಪ್ರತಿ ಮನೆ ಮನೆಗೂ ಅಲೆದು ಕಾಂಗ್ರೆಸ್ ಪಕ್ಷ ಸಂಘಟಿಸುವಲ್ಲಿ ಮಹಿಳೆಯರ ಪಾತ್ರ ಅಪಾರವಾಗಿತ್ತು. ಆದ್ರೆ ನಮ್ಮನ್ನ ಚುನಾವಣೆಯಲ್ಲಿ ಮಾತ್ರ ಬಳಸಿಕೊಂಡು ನಂತರದ ದಿನಗಳಲ್ಲಿ ಕಡೆಗಣಿಸಿದ್ದಾರೆ. ಅದಕ್ಕಾಗಿ ಈ ಬಾರಿ ರೆಡ್ಡಿ ಅವರ ಪಕ್ಷ ಬೆಂಬಲಿಸುವಂತೆ ಕರೆ ನೀಡಿದ್ದಾರೆ. ಇದನ್ನೂ ಓದಿ: ಕ್ಷತ್ರಿಯ ಸಮುದಾಯದ ಬೇಡಿಕೆಗಳನ್ನು ಈಡೇರಿಸುತ್ತೇವೆ: ಸಿಎಂ ಭರವಸೆ

    ಜೊತೆಗೆ ಪ್ರತಿಯೊಂದು ಮನೆ-ಮನೆಗೆ ಅಲೆದು ಕೆಆರ್‌ಪಿ ಪಕ್ಷ ಸಂಘಟಿಸಿ ಜನಾರ್ದನ ರೆಡ್ಡಿಯವರನ್ನ ಗೆಲ್ಲಿಸುತ್ತೇವೆ. ಈ ಮೂಲಕ ಮಹಿಳೆಯರ ಪಾತ್ರ ಏನೆಂಬುದನ್ನು ಸಾಬೀತು ಮಾಡುತ್ತೇವೆ. ಅದಕ್ಕಾಗಿ ಮುಂದಿನ ದಿನಗಳಲ್ಲಿ ಸಾವಿರಾರು ಮಹಿಳಾ ಮುಖಂಡರು ಕೆಆರ್‌ಪಿ ಪಕ್ಷ ಸೇರ್ಪಡೆಗೊಳ್ಳಲಿದ್ದಾರೆ ಎಂದು ಹೇಳಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k