Tag: Muslim Youth

  • ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ

    ಅಯ್ಯಪ್ಪ ಮಾಲೆ ಧರಿಸಿದ ಮುಸ್ಲಿಂ ಯುವಕ

    ಯಾದಗಿರಿ: ಮುಸ್ಲಿಂ ಯುವಕನೊಬ್ಬ ಅಯ್ಯಪ್ಪ ಮಾಲೆ ಧರಿಸುವ ಮೂಲಕ ಭಾವೈಕ್ಯತೆಯನ್ನು ಎತ್ತಿ ತೋರಿಸಿದ್ದಾರೆ. ನಿಷ್ಠೆ ಮತ್ತು ಶ್ರದ್ಧೆಯಿಂದ ಅಯ್ಯಪ್ಪ ಮಾಲಾಧಾರಿಗಳು ಪಾಲಿಸುವ ನಿಯಮಗಳನ್ನು ಪಾಲಿಸುವುದರ ಮೂಲಕ ಇಡೀ ರಾಷ್ಟ್ರಕ್ಕೆ ಹಿಂದೂ-ಮುಸ್ಲಿಂ ಭಾವೈಕ್ಯತೆಯನ್ನು ಸಾರಿದ್ದಾರೆ.

    ಮಹಾರಾಷ್ಟ್ರ ಮೂಲದ ಯುವಕ ಬಾಬ್ಲು ಅಫಸರ್ ಡಾಂಗೆ ಅಯ್ಯಪ್ಪ ಮಾಲೆ ತೊಟ್ಟ ಮುಸ್ಲಿಂ ಯುವಕ. ಬಾಬ್ಲು ಸದ್ಯ ಯಾದಗಿರಿ ಜಿಲ್ಲೆಯ ಗುರುಮಠಕಲ್‍ನಲ್ಲಿ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದಾರೆ. ಪಟ್ಟಣದಲ್ಲಿ ಹಿಂದೂಗಳ ಜೊತೆ ಹೆಚ್ಚು ಒಡನಾಟ ಹೊಂದಿರುವ ಬಾಬ್ಲುಗೆ ಅಯ್ಯಪ್ಪ ಮಾಲೆ ಧರಿಸಲು ಅವರ ಕಾರು ಮಾಲೀಕ ಪ್ರೇರಣೆ.

    ತಮ್ಮ ಧರ್ಮದ ಅಲ್ಲಾನನ್ನು ಆರಾಧಿಸುವುದರ ಜೊತೆಗೆ ಬಾಬ್ಲು ಅಯ್ಯಪ್ಪನ ಪರಮ ಭಕ್ತ. ಅಲ್ಲಾನ ಜೊತೆ ಹಿಂದೂ ದೇವರ ಆರಾಧನೆ ಮಾಡಿಕೊಂಡು ಬರುತ್ತಿದ್ದಾರೆ. ಬಾಬ್ಲು ಅಫಸರ್ ಇದೇ ಮೊದಲನೇ ಬಾರಿ ಅಯ್ಯಪ್ಪ ಮಾಲಾಧಾರಣೆ ಮಾಡಿದ್ದು, 41 ದಿನಗಳ ಕಾಲ ಮಣಿಕಂಠನ ವ್ರತ ಆಚರಣೆ ಮಾಡಬೇಕಾಗುತ್ತದೆ. ಹೀಗಾಗಿ ಗುರುಮಠಕಲ್ ಪಟ್ಟಣದಲ್ಲಿರುವ ಅಯ್ಯಪ್ಪನ ಮಂದಿರದಲ್ಲಿ ಎಲ್ಲಾ ಮಾಲಾಧಾರಿಗಳ ಜೊತೆಗೆ ಬೆಳಗ್ಗೆ ಮತ್ತು ಸಾಯಂಕಾಲ ವಿಶೇಷ ಪೂಜೆಯ ಮೂಲಕ ಅಯ್ಯಪ್ಪನ ಸ್ಮರಣೆ ಮಾಡುತ್ತಿದ್ದಾರೆ.

  • ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

    ಮುಸ್ಲಿಂ ಯುವಕರ ಬಿಡುಗಡೆ ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್

    ಮಂಡ್ಯ: ಮುಸ್ಲಿಂ ಯುವಕರನ್ನು ಬಂಧನ ಮಾಡಿ, ಜಾಮೀನಿನ ಮೇಲೆ ಬಿಡುಗಡೆಗೊಳಿಸಿರುವುದನ್ನು ಖಂಡಿಸಿ ನಾಳೆ ಹಿಂದೂಪರ ಮತ್ತು ಕನ್ನಡ ಪರ ಸಂಘಟನೆಗಳು ಕೆಆರ್ ಪೇಟೆ ಬಂದ್‍ಗೆ ಕರೆ ನೀಡಿವೆ.

    ಅಕ್ಟೋಬರ್ 27 ರಂದು ಮಂಡ್ಯ ಜಿಲ್ಲೆಯ ಕೆಆರ್ ಪೇಟೆ ತಾಲೂಕಿನ ಆಲಂಬಾಡಿಕಾವಲು ಬಳಿ ಮುಸ್ಲಿಂ ಯುವಕರು ಅನುಮಾನಾಸ್ಪದವಾಗಿ ಪೇರೆಡ್ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ದಾಳಿ ನಡೆಸಿ 16 ಮುಸ್ಲಿಂ ಯುವಕರನ್ನು ಬಂಧಿಸಿದ್ದರು.

    ನಂತರ ಅವರು ಪಿಎಸ್‍ಎಫ್ ಸಂಘಟನೆಯ ಕಾರ್ಯಕರ್ತರು ಎಂದು ತಿಳಿದು ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿತ್ತು. ಇದೀಗ ಇದನ್ನು ಖಂಡಿಸಿ ನಾಳೆ ಕೆಆರ್ ಪೇಟೆ ಬಂದ್‍ಗೆ ಸಂಘಟನೆಗಳು ಕರೆ ನೀಡಿವೆ. ಕೆಆರ್ ಪೇಟೆ ಭಾಗದಲ್ಲಿ ದೇಶ ವಿರೋಧಿ ಚಟುವಟಿಗಳು ನಡೆಯುತ್ತಿವೆ. ಆದರೆ ಪೊಲೀಸರು ಕಣ್ಮುಚ್ಚಿ ಕುಳಿತಿದ್ದು, ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ. ಮೂರು ದಿನಗಳ ಹಿಂದೆ ಬಂಧನ ಮಾಡಿ ಬಿಡುಗಡೆ ಮಾಡಿರುವ ಯುವಕರು ಸಹ ದೇಶ ವಿರೋಧಿ ಚಟುವಟಿಕೆಗಳನ್ನು ನಡೆಸಿದ್ದರು ಎಂದು ಆರೋಪಿಸಿದ್ದಾರೆ.

    ಪೊಲೀಸರು ಯಾರದ್ದೋ ಒತ್ತಡಕ್ಕೆ ಮಣಿದು ಯುವಕರ ಮೇಲೆ ಸಣ್ಣಪುಟ್ಟ ಪ್ರಕರಣಗಳನ್ನು ದಾಖಲಿಸಿ, ನಂತರ ಜಾಮೀನಿನ ಮೇಲೆ ಬಿಡುಗಡೆಗೊಳಿಸಿದ್ದಾರೆ. ಬಿಡುಗಡೆ ಮಾಡಿರುವ ಯುವಕರನ್ನು ಮತ್ತೆ ಬಂಧಿಸಿ, ಕೆಆರ್ ಪೇಟೆ ಭಾಗದಲ್ಲಿ ನಡೆಯುತ್ತಿರುವ ದೇಶ ವಿರೋಧಿ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂದು ಹಿಂದೂ ಪರ ಮತ್ತು ಕನ್ನಡ ಪರ ಸಂಘಟನೆಗಳು ಬಂದ್‍ಗೆ ಕರೆ ನೀಡಿವೆ.

    ಕೆಆರ್ ಪೇಟೆಯನ್ನು ಬಂದ್ ಮಾಡಿ ಬೃಹತ್ ಪ್ರತಿಭಟನೆ ಮಾಡಲು ಈಗಾಗಲೇ ಸಂಘಟನೆಗಳು ನಿರ್ಧರಿಸಿವೆ. ಈ ಪ್ರತಿಭಟನೆಯಲ್ಲಿ ಹಲವು ಮಠಗಳ ಮಠಾಧೀಶರುಗಳು ಪಾಲ್ಗೊಳ್ಳಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ಜರುಗದಂತೆ ಪೊಲೀಸರು ಬಿಗಿ ಪೊಲೀಸ್ ಭದ್ರತೆಯನ್ನು ಏರ್ಪಡಿಸಿದ್ದಾರೆ.

  • ಹಿಂದೂ ಯುವಕ ಮುಸ್ಲಿಂ ಯುವತಿಯರ ಜೊತೆ ಇದ್ದಿದ್ದಕ್ಕೆ ಥಳಿತ!

    ಹಿಂದೂ ಯುವಕ ಮುಸ್ಲಿಂ ಯುವತಿಯರ ಜೊತೆ ಇದ್ದಿದ್ದಕ್ಕೆ ಥಳಿತ!

    – ಮುಸ್ಲಿಂ ಯುವಕರಿಂದ ನೈತಿಕ ಪೊಲೀಸ್ ಗೂಂಡಾಗಿರಿ
    – 20 ಮುಸ್ಲಿಂ ಯುವಕರ ವಿರುದ್ಧ ಎಫ್‍ಐಆರ್ ದಾಖಲು

    ಮಂಡ್ಯ: ಹಿಂದೂ ಯುವಕ ತನ್ನ ಕಾಲೇಜಿನ ಮುಸ್ಲಿಂ ಸ್ನೇಹಿತೆಯರ ಜೊತೆ ಇದ್ದ ಎಂಬ ಕಾರಣಕ್ಕೆ ಮುಸ್ಲಿಂ ಯುವಕರು ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ್ದಾರೆ. ಹಿಂದೂ ಯುವಕನ ಮೇಲೆ ಹಲ್ಲೆ ನಡೆಸಿ, ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ.

    ಮಂಡ್ಯದ ನಾಗಮಂಗಲ ತಾಲೂಕಿನ ನೆಲ್ಲಿಗೆರೆ ಕ್ರಾಸ್ ಬಳಿ ಈ ಘಟನೆ ನಡೆದಿದೆ. ಅ. 9ರಂದು ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ನಾಗಮಂಗಲದ ಪದವಿ ಕಾಲೇಜುವೊಂದರಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಪ್ರಶಾಂತ್ ಮೇಲೆ 20 ಮಂದಿ ಮುಸ್ಲಿಂ ಯುವಕರು ಹಲ್ಲೆ ನಡೆಸಿ, ನೈತಿಕ ಪೊಲೀಸ್‍ಗಿರಿ ಪ್ರದರ್ಶಿಸಿದ್ದಾರೆ. ತನ್ನ ಕಾಲೇಜಿನ ಮುಸ್ಲಿಂ ಯುವಕ-ಯುವತಿಯರ ಜೊತೆ ಪ್ರಶಾಂತ್ ಸ್ನೇಹ ಬೆಳೆಸಿದ್ದನು. ಹೀಗೆ ಅ. 9ರಂದು ಪ್ರಶಾಂತ್ ಓರ್ವ ಹಿಂದೂ ಯುವತಿ ಸೇರಿ ಮೂವರು ಗೆಳತಿಯರ ಜೊತೆ ಒಂದೇ ಕಾರಿನಲ್ಲಿ ತೆರಳುತ್ತಿದ್ದನು. ಅವರಲ್ಲಿ ಇಬ್ಬರು ಮುಸ್ಲಿಂ ಯುವತಿಯರೂ ಇದ್ದರು. ಇದನ್ನು ಕಂಡ ಆರೋಪಿ ಇದ್ರಿಷ್ ಮತ್ತು 20 ಮಂದಿ ಮುಸ್ಲಿಂ ಯುವಕರು ಕಾರನ್ನು ಅಡ್ಡಗಟ್ಟಿ ಹಲ್ಲೆ ನಡೆಸಿದ್ದಾರೆ.

    ಮುಸ್ಲಿಂ ಯುವತಿಯೊಂದಿಗೆ ಯಾಕೆ ಇದ್ದೀಯಾ ಎಂದು ಪ್ರಶಾಂತ್‍ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ. ನಂತರ ಎಲ್ಲರೂ ಸೇರಿಕೊಂಡು ಪ್ರಶಾಂತ್ ಮತ್ತು ಮುಸ್ಲಿಂ ಯವತಿ ಮೇಲೆ ಹಲ್ಲೆ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಹಲ್ಲೆ ಮಾಡುವ ದೃಶ್ಯವನ್ನು ವಿಡಿಯೋ ಕೂಡ ಮಾಡಿಕೊಂಡಿದ್ದಾರೆ. ಬಳಿಕ ಹಿಂದೂ ಯುವಕನಿಗೆ ಹೊಡೆದಿದ್ದೇವೆ ಎಂದು ಸಾಮಾಜಿಕ ಜಾಲತಾಣದಲ್ಲಿ ವಿಡಿಯೋವನ್ನು ಹರಿಬಿಟ್ಟಿದ್ದಾರೆ.

    ವಿಡಿಯೋದಲ್ಲಿ ನಾವೆಲ್ಲ ಸ್ನೇಹಿತರು ನಮ್ಮನ್ನ ಬಿಟ್ಟುಬಿಡಿ ಎಂದು ಪ್ರಶಾಂತ್ ಹಾಗೂ ಯುವತಿ ಬೇಡಿಕೊಳ್ಳುತ್ತಿರುವ ದೃಶ್ಯ ಸೆರೆಯಾಗಿದೆ. ವಿದ್ಯಾರ್ಥಿಗಳು ಎಷ್ಟೇ ಬೇಡಿಕೊಂಡರೂ ಬಿಡದೇ ಆರೋಪಿಗಳು ಹಲ್ಲೆ ನಡೆಸಿದ್ದಾರೆ. ಹೀಗೆ ನೈತಿಕ ಪೋಲಿಸ್ ಗೂಂಡಾಗಿರಿ ನಡೆಸಿರುವ ವಿಡಿಯೋ ವೈರಲ್ ಆದ ಬಳಿಕ ನಾಗಮಂಗಲ ಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಚಾರಣೆ ವೇಳೆ ತಮ್ಮ ಕಾಲೇಜಿನ ಮುಸ್ಲಿಂ ಪ್ರೇಮಿಗಳಿಗೆ ಸಹಾಯ ಮಾಡಲು ಕಾರಿನಲ್ಲಿ ಸ್ನೇಹಿತರೆಲ್ಲ ತೆರಳುತ್ತಿದ್ದೆವು ಈ ವೇಳೆ ಘಟನೆ ನಡೆದಿದೆ ಎಂದು ಪ್ರಶಾಂತ್ ಹಾಗೂ ಮುಸ್ಲಿಂ ಯುವತಿಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

    ಈ ಸಂಬಂಧ ಎಸ್‍ಎಸ್‍ಪಿ ಶೋಭರಾಣಿ ತನಿಖೆ ಕೈಗೊಂಡಿದ್ದು, ಆರೋಪಿ ಇದ್ರಿಷ್ ಸೇರಿ 20 ಜನರ ವಿರುದ್ಧ ಎಫ್‍ಐಆರ್ ದಾಖಲು ಮಾಡಿ, ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ.

    https://www.youtube.com/watch?v=awDAVE6wU1Y

  • ಹಬ್ಬ ಆಚರಿಸಿ ಸಂದೇಶ ಸಾರಿದ ಮುಸ್ಲಿಂ ಯುವಕ

    ಹಬ್ಬ ಆಚರಿಸಿ ಸಂದೇಶ ಸಾರಿದ ಮುಸ್ಲಿಂ ಯುವಕ

    ಚಿಕ್ಕಮಗಳೂರು: ರಾಜ್ಯಾದ್ಯಂತ ದಸರಾ ಸಂಭ್ರಮ. ಹಿಂದೂಗಳಿಗೆ ಶ್ರೇಷ್ಠವಾದ ಹಬ್ಬ. ಎಲ್ಲರೂ ತಮ್ಮ-ತಮ್ಮ ವಾಹನಗಳಿಗೆ ಅಲಂಕರಿಸಿ, ಪೂಜೆ ಮಾಡಿ ಓಡಾಡಿ ಸಂಭ್ರಮಿಸುತ್ತಾರೆ. ಆದರೆ ಚಿಕ್ಕಮಗಳೂರಿನಲ್ಲಿ ಮುಸ್ಲಿಂ ಯುವಕ ಕೂಡ ತನ್ನ ಬಸ್ಸುಗಳಿಗೆ ಹಾಗೂ ವಾಹನಗಳಿಗೆ ಪೂಜೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ.

    ಚಿಕ್ಕಮಗಳೂರಿನ ಎಸ್‍ಎಂಎಸ್ ಬಸ್ ಮಾಲೀಕನಾದ ಸಿರಾಜ್, ಹಿಂದೂಗಳು ನಾಚುವಂತೆ ಆಯುಧ ಪೂಜೆ ಆಚರಿಸಿದ್ದಾರೆ. ಸಿರಾಜ್ ಹಿಂದೂಗಳಂತೆ ತಾನೂ ಹಬ್ಬ ಮಾಡಿ, ಎಲ್ಲರಿಗೂ ಸಿಹಿ ಹಂಚಿ ನಾವೆಲ್ಲಾ ಒಂದೇ ಎಂಬ ಸಂದೇಶ ಸಾರಿದ್ದಾರೆ.

    ಸಿರಾಜ್ ಅವರು ತಮ್ಮ ಆರು ಬಸ್ಸುಗಳನ್ನು ಶುಚಿ ಮಾಡಿ, ನಂತರ ಬಸ್ಸಿಗೆ ಚೆಂಡು ಹೂ, ಬಲೂನ್, ಬಾಳೆ ದಿಂಡು ಹಾಗೂ ಮಾವಿನ ತೋರಣದಿಂದ ಸಿಂಗರಿಸಿದ್ದಾರೆ. ಬಳಿಕ ವಾಹನಗಳಿಗೆ ಅರಿಶಿನ-ಕುಂಕುಮ, ವಿಭೂತಿ ಬಳಿದು ಆರತಿ ಮಾಡಿ ಪೂಜೆ ಮಾಡಿದ್ದಾರೆ.

    ತನ್ನೆಲ್ಲಾ ಬಸ್ಸುಗಳನ್ನು ಅಲಂಕರಿಸಿ ಹಿಂದೂ-ಮುಸ್ಲಿಂ ಎಲ್ಲರನ್ನೂ ಕರೆಸಿ ಪೂಜೆ ಮಾಡಿ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಎಲ್ಲರಿಗೂ ಸಿಹಿ ಹಂಚಿ ಆಯುಧ ಪೂಜೆಯ ಶುಭಾಶಯ ವಿನಿಮಯ ಮಾಡಿಕೊಂಡು, ಹಿಂದೂ-ಮುಸ್ಲಿಂ ಬಾಯಿ-ಬಾಯಿ ಎಂದೂ ಮತ್ತೊಮ್ಮೆ ಸಾಬೀತು ಮಾಡಿದ್ದಾರೆ.

  • ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಮುಸ್ಲಿಂ ಯುವಕನಿಂದ ದೇವಾಲಯದಲ್ಲಿ ದೀರ್ಘ ದಂಡ ನಮಸ್ಕಾರ

    ಕಾಂಗ್ರೆಸ್ ಅಭ್ಯರ್ಥಿ ಗೆಲುವಿಗಾಗಿ ಮುಸ್ಲಿಂ ಯುವಕನಿಂದ ದೇವಾಲಯದಲ್ಲಿ ದೀರ್ಘ ದಂಡ ನಮಸ್ಕಾರ

    ಗದಗ: ಜಿಲ್ಲೆಯ ರೋಣ ಪಟ್ಟಣದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಜಿ.ಎಸ್. ಪಾಟೀಲ್ ಗೆಲುವಿಗಾಗಿ ಮುಸ್ಲಿಂ ಯುವಕನೋರ್ವ ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ.

    ಪಟ್ಟಣದ ರಾಜಾಬಕ್ಷಿ ಬಿಲ್ಲು ಖಾನ್ ಎಂಬವರು ವೀರಭದ್ರೇಶ್ವರ ದೇವಸ್ಥಾನದಿಂದ ದಾವಲ್ ಮಲ್ಲಿಕ್ ದರ್ಗಾದವರೆಗೆ ದೀರ್ಘ ದಂಡ ನಮಸ್ಕಾರ ಹಾಕಿದ್ದಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಸಿದ್ದರಾಮಯ್ಯ ನವರ ನೇತೃತ್ವದಲ್ಲಿ ಮತ್ತೊಮ್ಮೆ ಅಧಿಕಾರಕ್ಕೆ ಬರಬೇಕು ಅಂತಾ ರಾಜಾಭಕ್ಷಿ ಹರಕೆಯನ್ನು ಹೊತ್ತಿದ್ದಾರೆ.

    ಜಿ.ಎಸ್.ಪಾಟೀಲ್ ಈ ಬಾರಿಯೂ ರೋಣದಿಂದ ಚುನಾಯಿತರಾಗಬೇಕು. ಜೊತೆಗೆ ಸಚಿವ ಸಂಪುಟದಲ್ಲಿ ಮಹತ್ವದ ಸಚಿವ ಖಾತೆ ಪಡೆಯಬೇಕು ಎಂದು ಹಿಂದು ಹಾಗೂ ಮುಸ್ಲಿಂ ದೇವರಲ್ಲಿ ರಾಜಾಬಕ್ಷಿ ಹರಕೆ ಹೊತ್ತಿದ್ದಾರೆ.

    ಸುಮಾರು ಒಂದೂವರೆ ಕಿಲೋಮಿಟರ್ ದೂರದವರೆಗೆ ದೀರ್ಘ ದಂಡ ನಮಸ್ಕಾರ ಹಾಕುವ ಮೂಲಕ ಪಕ್ಷದ ನಾಯಕರ ಹಾಗೂ ಕಾರ್ಯಕರ್ತರ ಮೆಚ್ಚುಗೆಗೆ ರಾಜಾಭಕ್ಷಿ ಪಾತ್ರರಾಗಿದ್ದಾರೆ. ಈ ದೀರ್ಘ ದಂಡ ನಮಸ್ಕಾರ ವೇಳೆ ಪಕ್ಷದ ಅನೇಕ ಕಾರ್ಯಕರ್ತರು ಭಾಗವಹಿಸಿದ್ದರು.

  • ರಾಮಮಂದಿರ ನಿರ್ಮಾಣಕ್ಕೆ ಸಿಮೆಂಟ್ ನೀಡಲು ಅಯೋಧ್ಯೆಗೆ ಹೊರಟ ಕೊಪ್ಪಳದ ಮುಸ್ಲಿಂ ಯುವಕ

    ರಾಮಮಂದಿರ ನಿರ್ಮಾಣಕ್ಕೆ ಸಿಮೆಂಟ್ ನೀಡಲು ಅಯೋಧ್ಯೆಗೆ ಹೊರಟ ಕೊಪ್ಪಳದ ಮುಸ್ಲಿಂ ಯುವಕ

    ಕೊಪ್ಪಳ: ಜಿಲ್ಲೆಯ ಮುಸ್ಲಿಂ ಯುವಕರೊಬ್ಬರು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣಕ್ಕೆ ನೈತಿಕ ಬೆಂಬಲ ನೀಡಿದ್ದು, ಸಾಂಕೇತಿಕವಾಗಿ ಒಂದು ಸಿಮೆಂಟ್ ಚೀಲ ನೀಡಲು ಅಯೋಧ್ಯೆಗೆ ಪ್ರಯಾಣ ಬೆಳೆಸುತ್ತಿದ್ದಾರೆ.

    ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ತಳಕಲ್ ಗ್ರಾಮದ ಆಟೋ ಚಾಲಕ ಶಂಶುದ್ದೀನ್ ರಾಮಮಂದಿರ ನಿರ್ಮಾಣಕ್ಕೆ ಸಿಮೆಂಟ್ ನೀಡಲು ಹೊರಟ ಯುವಕ. ಈ ಸಂಬಂಧ ಕೊಪ್ಪಳದಿಂದ ಲಕ್ನೋಗೆ ಪ್ರಯಾಣ ಬೆಳೆಸಿದ್ದಾರೆ. ಶಂಶುದ್ದೀನ್ ಕಳೆದ ಕೆಲ ದಿನಗಳ ಹಿಂದೆ ತನ್ನ ಫೇಸ್‍ಬುಕ್‍ನಲ್ಲಿ ರಾಮಮಂದಿರ ಕಟ್ಟಲು ಒಂದು ಚೀಲ ಸಿಮೆಂಟ್ ಒಯ್ಯುತ್ತಿದ್ದೇನೆ ಎಂದು ಸ್ಟೇಟಸ್ ಹಾಕಿಕೊಂಡಿದ್ದರು. ಈ ವೇಳೆ ಶಂಶುದ್ದೀನ್ ಅವರಿಗೆ ಸಾಕಷ್ಟು ಬೆದರಿಕೆ ಕರೆ ಬಂದಿದ್ದವು ಎನ್ನಲಾಗಿದೆ.

    ವೃತ್ತಿಯಲ್ಲಿ ಆಟೋ ಚಾಲಕರಾಗಿರುವ ಶಂಶುದ್ದೀನ್ ಪ್ರವೃತ್ತಿಯಲ್ಲಿ ಸಿನಿಮಾ ಕಲಾವಿದ. ಬಿಡುಗಡೆ ಹಂತದಲ್ಲಿರುವ ಲಂಬಾಣಿ ಭಾಷೆಯ ಕೋವೆಲ್ ಮತ್ತು ನಟ ಲೂಸ್ ಮಾದ ನಟಿಸಿರುವ ಧೂಳಿಪಟ ಚಿತ್ರದಲ್ಲಿ ಶಂಶುದ್ದೀನ ಖಳನಾಯಕರಾಗಿ ಅಭಿನಯಿಸಿದ್ದಾರೆ. ಶಂಶುದ್ದೀನ್ ಅವರಿಗೆ ಕೊಪ್ಪಳದ ಗವಿಸಿದ್ದೇಶ್ವರ ಮಠದಲ್ಲಿ ಹಿಂದೂ ಪರ ಸಂಘಟನೆ ಮುಖಂಡರು ಸನ್ಮಾನಿಸಿ, ಬೀಳ್ಕೊಟ್ಟಿದ್ದಾರೆ.

    ಕೊಪ್ಪಳದಿಂದ ಅಯೋಧ್ಯೆಗೆ ತೆರಳಿ ಅಲ್ಲಿಯೇ ಸಿಮೆಂಟ್ ನೀಡಲು ಶಂಶುದ್ದೀನ್ ನಿರ್ಧರಿಸಿದ್ದಾರೆ. ಭಾವೈಕ್ಯತೆ ಸಂಕೇತವಾಗಿ ರಾಮ ಮಂದಿರ ನಿರ್ಮಾಣವಾಗಬೇಕು ಎಂದು ಈ ನಿರ್ಧಾರವನ್ನು ಶಂಶುದ್ದೀನ್ ಮಾಡಿದ್ದಾರೆ.