ಪರ್ಮಿಷನ್ ಕೊಡಿ ಅಂತ ಅವ್ರು ಬರಲ್ಲಾ. ಅಥವಾ ಪರ್ಮಿಷನ್ ತಗೊಳಿ ಅಂತ ನಾವು ಕೇಳೋದಿಲ್ಲ. ಹೀಗಾಗಿ, ಜಾರಿ ಮಾಡಲು ಸಾಧ್ಯವಾಗುವಂತಹ ಕಾನೂನನ್ನು ಮಾತ್ರ ತರಬೇಕು. ಅದನ್ನು ಬಿಟ್ಟು ಜಾರಿ ಮಾಡಲಾಗದ ಕಾನೂನು ತಂದ್ರೆ ಪುಸ್ತಕದಲ್ಲಿ ಇರಬೇಕು ಅಷ್ಟೇ ಎಂದು ಆರ್‌ಎಸ್‌ಎಸ್‌ಗೆ ನಿರ್ಬಂಧ ಹಾಕುವ ಸರ್ಕಾರದ ಧೋರಣೆಗೆ ರಾಜಣ್ಣ ಪರೋಕ್ಷವಾಗಿ ಬೇಸರ ವ್ಯಕ್ತಪಡಿಸಿದ್ದಾರೆ.
ಲಕ್ನೋ: ಉತ್ತರ ಪ್ರದೇಶದಲ್ಲಿ (Uttar Pradesh) ಈಗ ಮುಸ್ಲಿಮರೇ ಅಕ್ರಮವಾಗಿ ನಿರ್ಮಾಣಗೊಂಡ ಮಸೀದಿಯನ್ನು (Mosque) ಜೆಸಿಬಿಯಿಂದ ಕೆಡವಿದ್ದಾರೆ. ಸಂಭಾಲ್ (Sambhal) ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಯಾ ಬುಜುರ್ಗ್ ಗ್ರಾಮದಲ್ಲಿ ಮುಸ್ಲಿಮರು ಭಾನುವಾರ ಗೌಸುಲ್ಬರಾ ಮಸೀದಿಯನ್ನು ನೆಲಸಮ ಮಾಡಿದ್ದಾರೆ.
ಅನಧಿಕೃತವಾಗಿ ನಿರ್ಮಾಣಗೊಂಡಿದ್ದ ಮಸೀದಿಯನ್ನು ತೆಗೆಯುವಂತೆ ಜಿಲ್ಲಾಡಳಿತ 4 ದಿನಗಳ ಡೆಡ್‌ಲೈನ್ ನೀಡಿತ್ತು. ಈ ಗಡುವು ಮುಗಿಯುತ್ತಿದ್ದಂತೆ ಮುಸ್ಲಿಮರೇ ಮಸೀದಿಯನ್ನು ಕೆಡವಿದ್ದಾರೆ.
Sambhal, Uttar Pradesh: Demolition of a mosque began in Raya Buzurg village after the mosque committee missed the four-day deadline set by authorities. Bulldozers were used following a failed court petition. Complete demolition may take six days to a month. pic.twitter.com/hkdIUvjra5
– ದೇಶದಲ್ಲಿ ಮೂರು ಪಾಕಿಸ್ತಾನಗಳಷ್ಟು ವಕ್ಫ್ ಆಸ್ತಿ ಇದೆ ಎಂದ ಶಾಸಕ
ಚಿಕ್ಕಬಳ್ಳಾಪುರ: ರಾಜ್ಯದಲ್ಲಿ ಉತ್ತರ ಪ್ರದೇಶ ಮಾದರಿಯ (Uttar Pradesh Model) ಆಡಳಿತ ಬರಬೇಕು ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿದ್ರು.
ಖಾಸಗಿ ಕಾರ್ಯಕ್ರಮ ಪ್ರಯುಕ್ತ ಚಿಕ್ಕಬಳ್ಳಾಪುರ ತಾಲೂಕಿನ ಕೌರನಹಳ್ಳಿ ಗ್ರಾಮಕ್ಕೆ ಭೇಟಿ ನೀಡಿದ್ರು. ಇದೆ ವೇಳೆ ಮಾತನಾಡಿದ ಅವರು, ಈದ್ ಮಿಲಾದ್ ಹಬ್ಬದ ವೇಳೆ ದೇಶದ ಯಾವುದೇ ಭಾಗದಲ್ಲೂ ಹಿಂದೂಗಳು ಅಶಾಂತಿ ಉಂಟುಮಾಡಿಲ್ಲ. ಆದ್ರೆ ರಾಜ್ಯದ ಮದ್ದೂರು, ನಾಗಮಂಗಲ ಸೇರಿದಂತೆ ಹಲವು ಪ್ರದೇಶಗಳಲ್ಲಿ ಮುಸ್ಲಿಮರು ಕಲ್ಲು ತೂರಾಟ ನಡೆಸಿದ್ದಾರೆ ಎಂದು ದೂರಿದರು. ಇದನ್ನೂ ಓದಿ: 4 ವರ್ಷದಿಂದ ಗೋಕರ್ಣ ಮಹಾಬಲೇಶ್ವರ ದೇವರಿಗಿಲ್ಲ ಭಕ್ತರಿಂದ ವಿಶೇಷ ಪೂಜೆ
ಇಸ್ಲಾಂ ಧರ್ಮದಲ್ಲಿ ನಿಜವಾದ ಸೋದರತ್ವದ ಮೌಲ್ಯಗಳು ಕಾಣಿಸುತ್ತಿಲ್ಲ. ಈಗ ಕರ್ನಾಟಕದಲ್ಲಿ ಸಾಬ್ರ ಸರ್ಕಾರವೇ ಆಡಳಿತ ನಡೆಸುತ್ತಿದೆ. ನಮ್ಮ ಮುಖ್ಯಮಂತ್ರಿ ದಸರಾ ವೇಳೆ ಚಾಮುಂಡೇಶ್ವರಿಯ ಕುಂಕುಮ ಹಚ್ಚಿಕೊಳ್ಳುವುದಿಲ್ಲ, ಆದರೆ ಮುಸ್ಲಿಂ ಕಾರ್ಯಕ್ರಮಗಳಲ್ಲಿ ಟೋಪಿ ಧರಿಸಿ ಸಂತೋಷ ವ್ಯಕ್ತಪಡಿಸುತ್ತಾರೆ ಎಂದು ಟೀಕಿಸಿದರು. ಇದನ್ನೂ ಓದಿ: ಹಸುವಿನ ಬಾಲಕ್ಕೆ ಬೆಂಕಿ ಹಚ್ಚಿ ವಿಕೃತಿ – ಬಾಲಕನಿಗೆ ಥಳಿಸಿ ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು
2028ರಲ್ಲಿ ಸನಾತನ ಧರ್ಮ ರಕ್ಷಣೆ ಮಾಡುವ ಶಕ್ತಿಯೇ ಅಧಿಕಾರಕ್ಕೆ ಬರಬೇಕು, ಹಿಂದೂಗಳ ದೇವಾಲಯಗಳು, ಕುಂಕುಮ ಮತ್ತು ಸಂಸ್ಕೃತಿಯ ರಕ್ಷಣೆ ಅಗತ್ಯವಾಗಿದೆ. ಉತ್ತರ ಪ್ರದೇಶದ ಯೋಗಿ ಸರ್ಕಾರದಂತೆ ಕರ್ನಾಟಕದಲ್ಲೂ ಜಾರಿಗೆ ಬರಬೇಕು, ಇನ್ನೂ ನನಗೂ ಒಂದು ಅವಕಾಶ ಕೊಡಿ ಮಾದರಿ ಆಡಳಿತ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಆಗುವ ಬಯಕೆ ವ್ಯಕ್ತಪಡಿಸಿದ್ರು.
ಧಾರವಾಡ: ಕನ್ನಡದ ಜಯಪ್ರಿಯ ಯೂಟ್ಯೂಬರ್ ಕ್ವಾಜಾ aಬಂದೇನ್‌ವಾಜಾ ಮಹಮದ್ ಹನೀಫ್ ಶಿರಹಟ್ಟಿ ಅಲಿಯಾಸ್ ಮುಕಳೆಪ್ಪ (Youtuber Mukaleppa) ವಿರುದ್ಧ ಬಜರಂಗದಳ ಕಾರ್ಯಕರ್ತರು ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಲವ್ ಜಿಹಾದ್ ಆರೋಪ ಮಾಡಿರುವ ಕಾರ್ಯಕರ್ತರು, ಮುಕಳೆಪ್ಪ ಸುಳ್ಳು ದಾಖಲೆ ನೀಡಿ ಹಿಂದೂ ಯುವತಿಯನ್ನ ಮದುವೆಯಾಗಿದ್ದಾನೆ ಎಂದು ಆರೋಪಿಸಿದ್ದಾರೆ.
ಮುಕಳೆಪ್ಪ ಮೂಲತಃ ಇಸ್ಲಾಂ (Islam) ಧರ್ಮಕ್ಕೆ ಸೇರಿದವನಾಗಿದ್ದು, ನಕಲಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ವಿವಾಹವಾಗಿದ್ದಾನೆ. ಈ ಬಗ್ಗೆ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲಿ ರಿಜಿಸ್ಟರ್ ಮಾಡಿಕೊಳ್ಳುವ ಮೂಲಕ ಮುಕಳೆಪ್ಪ ವಿವಾಹವಾಗಿದ್ದಾನೆ ಎಂದು ದೂರಿನಲ್ಲಿ ಬಜರಂಗದಳ ಕಾರ್ಯಕರ್ತರು (Bajrang Dal Workers) ಆರೋಪಿಸಿದ್ದಾರೆ. ಇದನ್ನೂ ಓದಿ: ಪತ್ನಿಗೆ ಅಕ್ರಮ ಸಂಬಂಧ ಶಂಕೆ – ಊಟಕ್ಕೆ ವಿಷ ಹಾಕಿ ಕೊಂದು ನಾಪತ್ತೆಯಾಗಿದ್ದಾಳೆಂದು ದೂರು ಕೊಟ್ಟ ಪತಿ
ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ವಿಡಿಯೋ
ಮುಕಳೆಪ್ಪ ಹಿಂದೂ ಯುವತಿಯರನ್ನೇ ಟಾರ್ಗೆಟ್ ಮಾಡಿ ಅವರ ಜೊತೆ ವೀಡಿಯೋ ಮಾಡುತ್ತಾನೆ. ಶಾರ್ಟ್ ವೀಡಿಯೋದಲ್ಲಿ ಹಿಂದೂ ಯುವತಿಯರು ಹಾಗೂ ಧರ್ಮಕ್ಕೆ ಅವಮಾನ ಮಾಡುವ ರೀತಿಯಲ್ಲಿ ವೀಡಿಯೋ ಮಾಡುತ್ತಾನೆ. ಕಳೆದ ಜೂನ್ 5 ರಂದು ಖೊಟ್ಟಿ ದಾಖಲೆ ಕೊಟ್ಟು ಹಿಂದೂ ಯುವತಿಯನ್ನ ಈತ ವಿವಾಹವಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳುವಂತೆ ಧಾರವಾಡ ಗ್ರಾಮೀಣ ಠಾಣೆಗೆ (Dharwad Rural Police Station) ನೀಡಿದ ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಸದ್ಯಕ್ಕಂತೂ ಮುಕಳೆಪ್ಪನ ವಿರುದ್ಧ ಧಾರವಾಡ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಬಜರಂಗದಳ ಕಾರ್ಯಕರ್ತರು ದೂರು ಕೊಟ್ಟಿದ್ದು, ಇನ್ನೂ ಎಫ್ಐಆರ್ ದಾಖಲಾಗಿಲ್ಲ. ಪೊಲೀಸರು ಈ ಬಗ್ಗೆ ವಿಚಾರಣೆ ನಡೆಸುತ್ತಿದ್ದಾರೆ. ಹಿಂದೂ ಯುವತಿಯರನ್ನೇ ವೀಡಿಯೋದಲ್ಲಿ ಹಾಕಿಕೊಂಡು ಹಿಂದೂ ಧರ್ಮದ ಹಾಗೂ ಹಿಂದೂ ಆಚರಣೆಗಳನ್ನೇ ಟಾರ್ಗೆಟ್ ಮಾಡಿ ಮುಕಳೆಪ್ಪ ವೀಡಿಯೋಗಳನ್ನು ಮಾಡುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಬಜರಂಗದಳ ಕಾರ್ಯಕರ್ತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಕ್ಯಾಬಿನೆಟ್‌ನಲ್ಲಿ ಗೆರಿಲ್ಲಾ ಮಾದರಿ ಪೊಲಿಟಿಕಲ್ ಆಟ್ಯಾಕ್ – ಸಿಎಂ ಸೇರಿ ಹಲವರಿಗೆ ಶಾಕ್ ಕೊಟ್ಟ ಸಚಿವರ ಗುಂಪು
– ಮೆರವಣಿಗೆಯಲ್ಲಿ ಭಾಗವಹಿಸಿದವರಿಗೆ ಮುಸ್ಲಿಮರಿಂದ ತಂಪು ಪಾನೀಯ ವಿತರಣೆ
ಬೆಂಗಳೂರು: ನಗರದಲ್ಲಿ ಗಣೇಶ ಉತ್ಸವದಲ್ಲಿ ಮೆರವಣಿಗೆ ಉದ್ದಕ್ಕೂ ಹೂ ಹಾಕಿ ಮುಸ್ಲಿಮರು ಭಾವೈಕ್ಯತೆ ಮೆರೆದಿದ್ದಾರೆ.
ಕೆ.ಆರ್ ಪುರಂನ ದೇವಸಂದ್ರದಲ್ಲಿ ವಿನಾಯಕ ಗೆಳೆಯರ ಬಳಗದಿಂದ ಗಣಪತಿ ಉತ್ಸವದ ಮೆರವಣಿಗೆ ಇತ್ತು. ಈ ವೇಳೆ ಏರಿಯಾದ ಮುಸ್ಲಿಮರು ಗಣೇಶನ ಮೆರವಣಿಗೆ ಉದ್ದಕ್ಕೂ ಹೂ ಹಾಕಿ ಸಂಭ್ರಮಿಸಿದ್ದಾರೆ. ಅಲ್ಲದೇ, ಮೆರವಣಿಗೆಯಲ್ಲಿ ಭಾಗವಹಿಸಿದ್ದವರಿಗೆ ತಂಪು ಪಾನೀಯ ವಿತರಣೆ ಮಾಡಿದ್ದಾರೆ. ಇದನ್ನೂ ಓದಿ: ಮದ್ದೂರಲ್ಲಿ ಪ್ರಚೋದನಕಾರಿ ಭಾಷಣ – ಬಿಜೆಪಿ ಶಾಸಕ ಯತ್ನಾಳ್ ವಿರುದ್ಧ ಎಫ್‌ಐಆರ್
ಮದ್ದೂರಿನಲ್ಲಿ ಗಣೇಶ ಉತ್ಸವದ ವೇಳೆ ನಡೆದ ಘಟನೆಗೆ ಕೆಆರ್ ಪುರಂ ಮುಸ್ಲಿಮರು ಖಂಡನೆ ವ್ಯಕ್ತಪಡಿಸಿದ್ದಾರೆ. ಅಂತಹ ಘಟನೆಗಳು ಮರುಕಳಿಸಬಾರದು. ಹಿಂದೂ-ಮುಸ್ಲಿಮರು ಭಾವೈಕ್ಯತೆಯಿಂದ ಇರಬೇಕು ಎಂಬ ಸಂದೇಶವನ್ನು ರವಾನಿಸಿದ್ದಾರೆ.
– ವಕ್ಫ್ ಸದಸ್ಯರಾಗಲು 5 ವರ್ಷ ಇಸ್ಲಾಂ ಧರ್ಮ ಪಾಲಿಸಿರಬೇಕೆಂಬ ಷರತ್ತಿಗೆ ತಡೆ
– ವಕ್ಫ್ ಮಂಡಳಿಯಲ್ಲಿ ಮುಸ್ಲಿಂ ಸಮುದಾಯದವರೇ ಬಹುಸಂಖ್ಯಾತರಿರಬೇಕು
ನವದೆಹಲಿ: ವಕ್ಫ್ (ತಿದ್ದುಪಡಿ) ಕಾಯ್ದೆಯ ಕೆಲವೊಂದು ನಿಬಂಧನೆಗಳಿಗೆ ಸುಪ್ರೀಂ ಕೋರ್ಟ್ (Supreme Court) ಇಂದು ತಡೆ ನೀಡಿದೆ. ಕೆಲ ಅಂಶಗಳ ಬದಲಾವಣೆಗೆ ಸೂಚಿಸಿರುವ ಕೋರ್ಟ್, ಸಂಪೂರ್ಣವಾಗಿ ಕಾಯ್ದೆಗೆ ತಡೆ ನೀಡಲು ಸಾರಾಸಗಟಾಗಿ ನಿರಾಕರಿಸಿದೆ.
ವಕ್ಫ್ ಕಾಯ್ದೆಯ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿಗಳನ್ನು ಸಲ್ಲಿಸಲಾಗಿತ್ತು. ಆ ಅರ್ಜಿಗಳಲ್ಲಿ, ವಕ್ಫ್ ತಿದ್ದುಪಡಿ ಕಾಯ್ದೆಯನ್ನು (Waqf Amendment Act) ಕೇಂದ್ರ ಸರ್ಕಾರ ತೀವ್ರ ವಿರೋಧದ ನಡುವೆಯೂ ಜಾರಿಗೊಳಿಸಿದೆ. ಹಾಗಾಗಿ, ತಿದ್ದುಪಡಿ ಕಾಯ್ದೆಗೆ ತಡೆಯಾಜ್ಞೆ ನೀಡಬೇಕೆಂದು ಮನವಿ ಸಲ್ಲಿಸಲಾಗಿತ್ತು. ಆ ಎಲ್ಲಾ ಅರ್ಜಿಗಳ ವಿಚಾರಣೆಯನ್ನು ನಡೆಸಿದ ಸುಪ್ರೀಂ ಕೋರ್ಟ್, ಸಂಪೂರ್ಣ ಕಾಯ್ದೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ, ಕಾನೂನಿನ ಕೆಲವು ನಿಬಂಧನೆಗಳಿಗೆ ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ಮತ್ತು ನ್ಯಾಯಮೂರ್ತಿ ಎ.ಜಿ ಮಸಿಹ್ ಇದ್ದ ಪೀಠವು ಮಧ್ಯಂತರ ಆದೇಶ ಹೊರಡಿಸಿದೆ.
ವಕ್ಫ್ ಕಾಯ್ದೆ ತಿದ್ದುಪಡಿ ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ಸರ್ಕಾರದ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದ್ರೆ, ಮೂರು ವಿಚಾರಗಳಿಗೆ ಅರ್ಜಿದಾರರು ತಡೆಕೋರಿ ಸಲ್ಲಿಸಿದ್ದ ಅರ್ಜಿದಾರರ ಪರ ಹಿರಿಯ ವಕೀಲ ಕಪಿಲ್ ಸಿಬಲ್ ವಾದ ಮಂಡಿಸಿದ್ದರು. ಇದನ್ನೂ ಓದಿ: ವಕ್ಫ್ ಫೈಟ್: ಏನಿದು ವಿವಾದ?- ಹೊಸ ತಿದ್ದುಪಡಿ ಮಸೂದೆಯಿಂದ ಆಗುವ ಬದಲಾವಣೆ ಏನು?
ಯಾವುದೇ ಒಬ್ಬ ವ್ಯಕ್ತಿ ವಕ್ಫ್ ಮಂಡಳಿಯ (Waqf Board) ಸದಸ್ಯರಾಗಲು ಅಥವಾ ವಕ್ಫ್ ಮಂಡಳಿಗಳಿಗೆ ಭೂಮಿ ದಾನ ಕೊಡಲು ಕನಿಷ್ಠ 5 ವರ್ಷ ಇಸ್ಲಾಂ ಧರ್ಮ ಅನುಸರಿಸಬೇಕೆಂಬ ಷರತ್ತು ವಿಧಿಸಲಾಗಿತ್ತು. ಇದಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. ಈ ಅಂಶದ ಬಗ್ಗೆ ರಾಜ್ಯ ಸರ್ಕಾರಗಳು ಹೊಸ ನಿಯಮಗಳನ್ನು ರೂಪಿಸುವವರೆಗೂ ತಡೆ ನೀಡಬೇಕು ಎಂದು ನ್ಯಾಯಪೀಠ ಸ್ಪಷ್ಟಪಡಿಸಿದೆ.
ಮಧ್ಯಂತರ ಆದೇಶದಲ್ಲಿ ಯಾವುದಕ್ಕೆ ತಡೆ!?
ತಕರಾರು-1
ಜಿಲ್ಲಾಧಿಕಾರಿಗೆ ಅಥವಾ ಸರ್ಕಾರ ನಿಯೋಜಿಸಿದ ಅಧಿಕಾರಿಗೆ ಆಸ್ತಿಯನ್ನು ವಕ್ಫ್ ಆಗಿ ಗುರುತಿಸುವ ಅಧಿಕಾರ ನೀಡುವ ನಿಬಂಧನೆ
ಕೋರ್ಟ್ ಸಲಹೆ; ಕಾರ್ಯನಿರ್ವಾಹಕ ಅಧಿಕಾರಿಯು ವೈಯಕ್ತಿಕ ನಾಗರಿಕರ ಹಕ್ಕುಗಳನ್ನು ನಿರ್ಣಯಿಸಲು ಅನುಮತಿಸಲಾಗುವುದಿಲ್ಲ. ಇದು ಅಧಿಕಾರಗಳ ಪ್ರತ್ಯೇಕತೆ ಉಲ್ಲಂಘಿಸುತ್ತದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ. ವಕ್ಫ್ ಆಸ್ತಿಯು ಸರ್ಕಾರಿ ಆಸ್ತಿಯನ್ನು ಅತಿಕ್ರಮಣ ಮಾಡಿದೆಯೇ ಎಂಬ ವಿವಾದ ನಿರ್ಧರಿಸಲು ಸರ್ಕಾರದ ನಿಯೋಜಿತ ಅಧಿಕಾರಿಗೆ ಅವಕಾಶ ನೀಡುವ ನಿಬಂಧನೆ ತಡೆಹಿಡಿಯಲಾಗಿದೆ. ನ್ಯಾಯಾಧೀಕರಣ ಒಂದು ವಿಷಯದ ಬಗ್ಗೆ ಅಂತಿಮ ತೀರ್ಪು ಅಥವಾ ನಿರ್ಧಾರ ನೀಡುವವರೆಗೆ, ಆ ವಿಷಯಕ್ಕೆ ಸಂಬಂಧಿಸಿದಂತೆ ಯಾವುದೇ 3ನೇ ವ್ಯಕ್ತಿ ಯಾವುದೇ ಹಕ್ಕುಗಳನ್ನು ಸ್ಥಾಪಿಸಲು ಅಥವಾ ದಾವೆ ಹೂಡಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ತಕರಾರು-2
ವಕ್ಫ್ ತಿದ್ದುಪಡಿ ಕಾಯ್ದೆಯಲ್ಲಿ, ಯಾವ ವ್ಯಕ್ತಿಯು ಕನಿಷ್ಟ 5 ವರ್ಷದಿಂದ ಇಸ್ಲಾಂ ಧರ್ಮ ಪಾಲಿಸುತ್ತಿದ್ದಾನೋ ಆ ವ್ಯಕ್ತಿ ಮಾತ್ರ ವಕ್ಫ್ ಮಂಡಳಿಗಳಿಗೆ ಭೂಮಿ ದಾನ ಕೊಡಲು ಅರ್ಹ ಎಂಬ ಷರತ್ತು
ಕೋರ್ಟ್ ಸಲಹೆ: ಈ ಷರತ್ತಿಗೆ ಸದ್ಯಕ್ಕೆ ತಡೆ ನೀಡಲು ಸುಪ್ರೀಂ ಕೋರ್ಟ್ ಒಪ್ಪಿದೆ. ಈ ಷರತ್ತು ಬಗ್ಗೆ ರಾಜ್ಯ ಸರ್ಕಾರಗಳು ಹೊಸ ನಿಯಮಗಳನ್ನು ರೂಪಿಸುವವರೆಗೂ ತಡೆ ನೀಡಬೇಕು ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ.
ತಕರಾರು-3
ವಕ್ಫ್ ಮಂಡಳಿಗಳಿಗೆ ಮುಸ್ಲಿಮೇತರ ಸದಸ್ಯರ ನಾಮನಿರ್ದೇಶನಕ್ಕೆ ಅವಕಾಶ ನೀಡುವ ನಿಬಂಧನೆಗೆ ತಕರಾರು
ಕೋರ್ಟ್ ಸಲಹೆ: ಕೋರ್ಟ್ ಈ ನಿಬಂಧನೆಗೆ ತಡೆ ನೀಡಿಲ್ಲ. ಆದರೂ, ಸಾಧ್ಯವಾದಷ್ಟು ಮಟ್ಟಿಗೆ, ಮಂಡಳಿಯ ಪದನಿಮಿತ್ತ ಸದಸ್ಯರು ಮುಸ್ಲಿಂ ವ್ಯಕ್ತಿಯಾಗಿರಬೇಕು ಎಂದು ಕೋರ್ಟ್ ಹೇಳಿದೆ. ಕೇಂದ್ರ ವಕ್ಫ್ ಮಂಡಳಿಯಲ್ಲಿ 4 ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರು ಇರಬಾರದು, ರಾಜ್ಯ ವಕ್ಫ್ ಮಂಡಳಿ 3 ಕ್ಕಿಂತ ಹೆಚ್ಚು ಮುಸ್ಲಿಮೇತರ ಸದಸ್ಯರನ್ನು ಒಳಗೊಂಡಿರಬಾರದು. ಸಾಧ್ಯವಾದಷ್ಟು ಮಟ್ಟಿಗೆ ಮಂಡಳಿಯ ಸಿಇಒ ಮುಸ್ಲಿಮರಾಗಿರಬೇಕು ಎಂದು ಅಭಿಪ್ರಾಯಪಟ್ಟಿದೆಯಲ್ಲದೇ ವಕ್ಫ್ ಕಾಯ್ದೆಯ ಸಿಂಧುತ್ವದ ಬಗ್ಗೆ ತನ್ನ ಆದೇಶವು ಅಂತಿಮ ಅಭಿಪ್ರಾಯವಲ್ಲ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ತಕರಾರು-4
ಎಲ್ಲ ವಕ್ಫ್ ಆಸ್ತಿಗಳನ್ನು ಕಾಯ್ದೆಯಡಿ ನೋಂದಣಿ ಕಡ್ಡಾಯ ನಿಬಂಧನೆ
ಕೋರ್ಟ್ ಸಲಹೆ: ಈ ನಿಬಂಧನೆಯಲ್ಲಿ ಕೋರ್ಟ್ ಹಸ್ತಕ್ಷೇಪ ಮಾಡಿಲ್ಲ. ಇದು ಹೊಸ ನಿಯಮ ಅಲ್ಲ ಎಂದು ಕೋರ್ಟ್ ಹೇಳಿದೆ. ಏಕೆಂದರೆ, ಈ ಷರತ್ತು 1995 ಮತ್ತು 2013ರ ಹಿಂದಿನ ಕಾಯ್ದೆಗಳಲ್ಲಿಯೂ ಇತ್ತು. ಆದರೂ, ಕೋರ್ಟ್ ನೋಂದಣಿಗೆ ಸಮಯ ಮಿತಿಯನ್ನು ವಿಸ್ತರಿಸಿದೆ.
ಅರ್ಜಿದಾರರು ಯಾರು?
ಎಐಎಂಐಎಂ ಸಂಸದ ಅಸಾದುದ್ದೀನ್ ಓವೈಸಿ, ದೆಹಲಿ ಎಎಪಿ ಶಾಸಕ ಅಮಾನತುಲ್ಲಾ ಖಾನ್, ನಾಗರಿಕ ಹಕ್ಕುಗಳ ರಕ್ಷಣಾ ಸಂಘ, ಜಮಾತ್ ಉಲೇಮಾ-ಇ-ಹಿಂದ್ ಅಧ್ಯಕ್ಷ ಅರ್ಷದ್ ಮದನಿ, ಸಮಸ್ತ ಕೇರಳ ಜಮಿಯತ್ ಉಲೇಮಾ, ಅಂಜುಮ್ ಕದರಿ, ತೈಯಬ್ ಖಾನ್ ಸಲ್ಮಾನಿ, ಮೊಹಮ್ಮದ್ ಶಫಿ, ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ, ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್, ಆಲ್ ಇಂಡಿಯಾ ಮುಸ್ಲಿಂ ಪರ್ಸನಲ್ ಲಾ ಬೋರ್ಡ್, ಆರ್‌ಜೆಡಿ ಸಂಸದ ಮನೋಜ್ ಕುಮಾರ್ ಝಾ, ಎಸ್‌ಪಿ ಸಂಸದ ಜಿಯಾ ಉರ್ ರೆಹಮಾನ್, ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ, ಡಿಎಂಕೆ ಇತರರು.
ಕಾಯ್ದೆ ಬೆಂಬಲಿಸಿ ಸುಪ್ರೀಂಕೋರ್ಟ್‌ಗೆ ಹೋದವರು ಯಾರು?
ಬಿಜೆಪಿ ಸರ್ಕಾರಗಳಿರುವ ಅಸ್ಸಾಂ, ರಾಜಸ್ಥಾನ, ಛತ್ತೀಸ್‌ಗಢ, ಉತ್ತರಾಖಂಡ, ಹರಿಯಾಣ ಮತ್ತು ಮಹಾರಾಷ್ಟ್ರ ಸರ್ಕಾರಗಳು. ಕೇರಳ ರಾಜ್ಯ ಸರ್ಕಾರ ಕೂಡ ತಿದ್ದುಪಡಿ ಕಾಯ್ದೆಯನ್ನು ಬೆಂಬಲಿಸಿ ಮಧ್ಯಂತರ ಅರ್ಜಿಯನ್ನು ಸಲ್ಲಿಸಿತ್ತು.
ಗದಗ: ನಮ್ಮ ದೇಶದಲ್ಲಿ ಹುಟ್ಟಿ, ನಮ್ಮದೇ ಅನ್ನ ತಿಂದು, ಸೌಲಭ್ಯಗಳನ್ನು ಪಡೆದು ಪಾಕಿಸ್ತಾನ ಜಿಂದಾಬಾದ್ ಅಂದ್ರೆ ಅಂತಹವರ ಮನೆಗೆ ನುಗ್ಗಿ ಹೊಡೆಯುತ್ತೇವೆ ಎಂದು ಶ್ರೀರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ (Pramod Muthalik) ಕಿಡಿಕಾರಿದ್ದಾರೆ.
ಗಜೇಂದ್ರಗಡ (Gajendragada) ಪಟ್ಟಣದಲ್ಲಿ ಏರ್ಪಡಿಸಿದ್ದ ಹಿಂದೂ ಮಹಾ ಗಣೇಶ ಉತ್ಸವ ಧರ್ಮ ಸಭೆ ಕಾರ್ಯಕ್ರಮದಲ್ಲಿ ಭಾಷಣ ಮಾಡಿದ ಅವರು, ಹಿಂದೂ ವಿರೋಧಿಗಳು, ದ್ರೋಹಿಗಳು ಯಾರಿದ್ದಾರೆ. ನಮ್ಮ ದೇಶದಲ್ಲಿ ಹುಟ್ಟಿ, ಅನ್ನ ತಿಂದು, ನಮ್ಮ ದೇಶದ ಸೌಲಭ್ಯ ಪಡೆದು ಪಾಕಿಸ್ತಾನ ಜಿಂದಾಬಾದ್ ಅನ್ನುವ ಹರಾಮ್ ಕೋರ್ ಇದ್ದಾರೆ. ಅಂತವರ ವಿರುದ್ಧ ಹೋರಾಟ ನಮ್ಮದು ಎಂದಿದ್ದಾರೆ. ಇದನ್ನೂ ಓದಿ: ಕೇಂದ್ರದಲ್ಲಿ ನಮ್ಮ ಸರ್ಕಾರ ಇದ್ದಿದ್ರೆ ಭಾರತ-ಪಾಕ್ ಮ್ಯಾಚ್ ರದ್ದು ಮಾಡಿಸ್ತಿದ್ವಿ: ಪ್ರದೀಪ್ ಈಶ್ವರ್
ಪಾಕಿಸ್ತಾನ ಜಿಂದಾಬಾದ್ ಅನ್ನುವ ಕಿಡಿಗೇಡಿ ಗೂಂಡಾ ಮುಸ್ಲಿಮರಿಗೆ ಹೇಳ್ತೇನೆ. ನಿಮಗೆ ಪಾಕಿಸ್ತಾನದ (Pakistan) ಬಗ್ಗೆ ಪ್ರೀತಿ ಇದ್ರೆ. ಬಾಗಿಲು ಓಪನ್ ಇದೆ, ನಾವೇ ಟಿಕೆಟ್ ಕೊಟ್ಟು ಕಳುಹಿಸುತ್ತೇವೆ ಅಲ್ಲಿಗೆ ಓಡಿ. ಪಾಕಿಸ್ತಾನ ಭಿಕಾರಿಯಾಗಿದೆ. ನಮ್ಮ ದೇಶದಲ್ಲಿ ಹುಟ್ಟಿ, ನಮ್ಮದೇ ಅನ್ನ ತಿಂದು, ಸೌಲಭ್ಯಗಳನ್ನು ಪಡೆದು, ಪಾಕಿಸ್ತಾನ ಜಿಂದಾಬಾದ್ ಅಂದ್ರೆ ಮನೆ ನುಗ್ಗಿ ಹೊಡೆಯುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಪಹಲ್ಗಾಮ್ ಹತ್ಯಾಕಾಂಡದ ಬಳಿಕ ಪಾಕ್ ಹೇಳಿಕೆ ಗಮನಿಸಬೇಕು, ಪಂದ್ಯ ನಡೆಸಬಾರದಿತ್ತು: ಬೊಮ್ಮಾಯಿ ಬೇಸರ
ಹಿಂದೂ ಸಮಾಜ ಶಾಂತವಾಗಿ ಸಮಾಧಾನದಿಂದ ಇದೆ. ಅಣ್ಣ, ತಮ್ಮಂದಿರ ಹಾಗೆ ಬದುಕಬೇಕು ಅಂತ 78 ವರ್ಷದಿಂದ ಸಹನೆಯಿಂದ ಇದ್ದೇವೆ. ಈ ದೇಶವನ್ನು ಇಸ್ಲಾಂ, ಕ್ರಿಶ್ಚಿಯನ್ ಹಾಗೂ ಕಮ್ಯೂನಿಸ್ಟ್ ಮಾಡಲು ಹೊರಟಿದ್ದಾರೆ. ಗಜಾನನ ಉತ್ಸವ ಮೂಲಕ ಹಿಂದೂ ಸಂಘಟನೆಗಳು ಒಂದಾಗಬೇಕಿದೆ. ಮದ್ದೂರಿನ ಗಣೇಶ ಮೆರವಣಿಗೆ ವೇಳೆ ಕಲ್ಲು ಎಸೆಯುತ್ತಾರೆ. ಎಷ್ಟು ಸೊಕ್ಕು ನಿಮಗೆ ಈ ದೇಶದ ಅನ್ನ ತಿಂದು ಗಣೇಶ ಉತ್ಸವ ಮೇಲೆ ಕಲ್ಲು ಎಸೆಯುತ್ತೀರಾ? ಒಂದು ವರ್ಷದ ಹಿಂದೆ ನಾಗಮಂಗಲ ಸೇರಿದಂತೆ ಅನೇಕ ಕಡೆ ಗಲಾಟೆಗಳಾಗಿವೆ. ಹಿಂದೂ ಹಬ್ಬಗಳ ಮೇಲೆಯೇ ಕಲ್ಲು, ಕಟ್ಟಿಗೆ, ಪೆಟ್ರೋಲ್, ತಲ್ವಾರ್ ತೆಗೆದುಕೊಂಡು ಹಲ್ಲೆ ಮಾಡ್ತಾರೆ ಎಂದು ಕಿಡಿಕಾರಿದ್ದಾರೆ.
ಇಷ್ಟು ದಿನ ಶಾಂತಿ, ಶಾಂತಿ ಅಂತ ಗಾಂಧೀಜಿ ರೀತಿ ಭಜನೆ ಮಾಡ್ತಾ ಕೂತಿದ್ದೆವು. ಇನ್ನು ಹಾಗಿಲ್ಲ, ಕ್ರಾಂತಿ ಒಂದೇ. ಇನ್ಮುಂದೆ ಭಗತ್ ಸಿಂಗ್, ಚಂದ್ರಶೇಖರ್ ಆಜಾದ್, ವೀರ ಸಾವರ್ಕರ್, ಶಿವಾಜಿ ಮಹಾರಾಜ್ ಕ್ರಾಂತಿ ನಡೆಯುತ್ತದೆ. ನಮ್ಮ ದೇಶ, ನಮ್ಮ ಧರ್ಮ, ನಮ್ಮ ಮೆರವಣಿಗೆ, ಉತ್ಸವ ಮೇಲೆ ಕಲ್ಲು ಎಸೆದ್ರೆ, ಇನ್ಮುಂದೆ ಮನವಿ, ಬಂದ್‌ಗೆ ಕರೆ, ಧರಣಿ ಇದ್ಯಾವುದು ಇಲ್ಲ. ಯಾರೇ ಆದ್ರೂ ಗಣೇಶ ವಿಸರ್ಜನೆ ವೇಳೆ ಕಲ್ಲು ಎಸೆದ್ರೆ, ಹಿಂದೂ ದೇವಸ್ಥಾನ, ಹಿಂದೂ ಹುಡುಗಿಯರ ಅಪಹರಣ ಮಾಡಲು ಪ್ರಯತ್ನ ಮಾಡಿದ್ರೆ, ಅವರಿಗೆ ಸರಿಯಾಗಿ ಉತ್ತರ ಕೊಡುವ ಕಾಲ ಬಂದಿದೆ ಎಂದು ಹೇಳಿದ್ದಾರೆ.
ಇನ್ಮುಂದೆ ಹಿಂದೂ ಸಮಾಜ ಅಳುವಂತಿಲ್ಲ. ಹಿಂದೂಗಳು ಓಡಿ ಹೋಗುವಂತಿಲ್ಲ. ನಾವು ಓಡಿದ್ದು, ಸಾಯುವುದು ಸಾಕಾಗಿದೆ. ಕಾಶ್ಮೀರ, ಅಸ್ಸಾಂ, ಕೇರಳದಿಂದ ಓಡಿ ಹೋಗ್ತಿದ್ದೆವು. ಇನ್ಮುಂದೆ ಎಲ್ಲಿಗೆ ಓಡಿ ಹೋಗಲ್ಲ ಎಂದು ಉದ್ರೇಕದ ಮಾತುಗಳನ್ನಾಡಿದ್ದಾರೆ.
ಹಾವೇರಿ: ತಾಲೂಕಿನ ನೆಗಳೂರು ಗ್ರಾಮದಲ್ಲಿ ಈದ್ ಮಿಲಾದ್ ಹಬ್ಬವನ್ನ ಭಾವೈಕ್ಯತೆಯಿಂದ ಆಚರಿಸಲಾಯಿತು. ಈದ್ ಮಿಲಾದ್ ಹಬ್ಬದ ಮೆರವಣಿಗೆ ವೇಳೆ ಮುಸ್ಲಿಂ ಬಾಂಧವರು ಗಣೇಶನಿಗೆ ಪೂಜೆ ಸಲ್ಲಿಸಿದರು.
ಸರ್ವಧರ್ಮ ಮಹಾ ಗಣಪತಿ ದೇವರಿಗೆ ಪೂಜೆ ಸಲ್ಲಿಸಿದ ಮುಸ್ಲಿಂ ಭಾಂದವರು, ನಾವೆಲ್ಲರೂ ಒಂದೇ ಎನ್ನುವ ಸಂದೇಶ ಸಾರಿದ್ದಾರೆ. ಹಿಂದೂ-ಮುಸ್ಲಿಂ ಬಾಂಧವರೆಲ್ಲ ಸೇರಿ ಗಣಪನಿಗೆ ಪೂಜೆ ಸಲ್ಲಿಸಿ ಮಾರ್ಲಾಪಣೆ ಮಾಡಿದರು. ನಂತರ ಗ್ರಾಮದ ಪ್ರಮುಖ ಬೀದಿಯಲ್ಲಿ ಈದ್ ಮಿಲಾದ್ ಹಬ್ಬ ಮೆರವಣಿಗೆ ಮಾಡಿ ಅರ್ಥಪೂರ್ಣವಾಗಿ ಆಚರಿಸಿದರು.
ಪ್ರತಿ ವರ್ಷ ಗ್ರಾಮದಲ್ಲಿ ಸರ್ವಧರ್ಮ ಆಶಯದೊಂದಿಗೆ ಗಣೇಶ ಮೂರ್ತಿಯನ್ನು ಪ್ರತಿಷ್ಟಾಪನೆ ಮಾಡಲಾಗುತ್ತದೆ. ವಿವಿಧ ಧರ್ಮದ ಜನರೂ ಭಾಗವಹಿಸಿ ಪೂಜೆ ಸಲ್ಲಿಸುತ್ತಾರೆ. ಮುಸ್ಲಿಮರು ಸಹ ಪ್ರಾರ್ಥನೆ ಸಲ್ಲಿಸಿ ಪೂಜೆಯನ್ನ ಮಾಡುತ್ತಾರೆ.
ಕೊಪ್ಪಳ: ಮುಸ್ಲಿಂ ಯುವತಿಯರನ್ನ (Muslim Girls) ಮದ್ವೆಯಾದ್ರೆ 5 ಲಕ್ಷ ರೂ. ಕೊಡುವ ಅಭಿಯಾನ ಆರಂಭಿಸುತ್ತೇವೆ. ಈ ಮೂಲಕ ಹಿಂದೂಗಳನ್ನ ಕೊಲೆ ಮಾಡುವ ಮನಸ್ಥಿತಿಯುಳ್ಳ ಮುಸ್ಲಿಮರಿಗೆ ಉತ್ತರ ನೀಡಬೇಕಿದೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಹೇಳಿದ್ದಾರೆ.
ಕೊಪ್ಪಳ ನಗರದ (Koppala City) ಕುರುಬರ ಓಣಿಯಲ್ಲಿನ ಕೊಲೆಯಾದ ಗವಿಸಿದ್ದಪ್ಪ ಮನೆಗೆ ಭೇಟಿ ನೀಡಿದ ನಂತರ ಮಾಧ್ಯಮ ಗಳೊಂದಿಗೆ ಅವರು ಮಾತನಾಡಿದರು.
ಮಸೀದಿ ಮುಂದೆಯೇ ಗವಿಸಿದ್ದಪ್ಪ ನಾಯಕ ಕೊಲೆಯಾಗಿದೆ. ಕೊಲೆ ಮಾಡುವಾಗ ತಡೆಯುವ ಕೆಲಸ ಅಲ್ಲಿದ್ದವರು ಮಾಡಿಲ್ಲ. ಕೊಲೆ ಮಾಡಿದ ಆರೋಪಿ ರೀಲ್ಸ್‌ನಲ್ಲಿ ಮಚ್ಚು ತೋರಿಸಿದ್ದಾನೆ. ಈಗ ಪೊಲೀಸರು ನಾಲ್ಕು ಜನರನ್ನು ಬಂಧಿಸಿದ್ದಾರೆ. ಆ ಹುಡುಗಿಯನ್ನೂ ಅರೆಸ್ಟ್ ಮಾಡಬೇಕು. ಮಚ್ಚು ಹಿಡಿದು ಓಡಾಡುವವರಿಗೆ ಸರ್ಕಾರ ಬೆಂಬಲ ನೀಡುತ್ತದೆ. ಲವ್ ಜಿಹಾದ್ ಮಾಡಿದಾಗ ಸರ್ಕಾರ ಅಲ್ಪಸಂಖ್ಯಾತರಿಗೆ ರಕ್ಷಣೆ ಕೊಡುತ್ತದೆ. ಸರ್ಕಾರ ಮುಸ್ಲಿಂರಿಗೆ ಮಾತ್ರ ರಕ್ಷಣೆ ನೀಡುತ್ತದೆ. ಈ ಸರ್ಕಾರದಲ್ಲಿ ಹಿಂದೂಗಳಿಗೆ ರಕ್ಷಣೆ ಇಲ್ಲ. ಅಧಿವೇಶನದಲ್ಲಿ ಈ ಕುರಿತು ಪ್ರಶ್ನಿಸುತ್ತೇನೆ. ಆ.11ರ ಪ್ರತಿಭಟನೆಗೆ ಎಲ್ಲರೂ ಸಹಕರಿಸಬೇಕು. ಇದೇ ನೆಪದಲ್ಲಿ ಗಣೇಶ ಹಬ್ಬಕ್ಕೆ ಅಡ್ಡಿ ಪಡಿಸಬಾರದು ಎಂದು ಆಗ್ರಹಿಸಿದರು.
ಮುಸ್ಲಿಮರು ಅಪರಾಧಿಗಳಲ್ಲ ಎಂದು ಬಿಂಬಿಸದಂತೆ ಪೊಲೀಸರಿಗೆ ಒತ್ತಡವಿದೆ. ಡ್ರಗ್ಸ್ ಗಾಂಜಾದ ಬಗ್ಗೆ ಗೃಹ ಸಚಿವರು ಉಡೊ ಮಾತನಾಡುತ್ತಾರೆ. ಸದ್ಯ ರಾಜ್ಯದಲ್ಲಿ ಸಾಬರ ಸರ್ಕಾವಿದೆ. ಸಿಎಂ ಸಿದ್ದರಾಮಯ್ಯ ಮುಸ್ಲಿಮರಿಗೆ ಏನಾದರೂ ತೊಂದರೆಯಾದ್ರೆ ಮಾತ್ರ ಪ್ರತಿಕ್ರಿಯಿಸುತ್ತಾರೆ. ಜಿಲ್ಲಾ ಉಸ್ತುವಾರಿ ಸಚಿವರು ಕೇವಲ ಸಾಂತ್ವಾನ ಹೇಳಿದ್ರೆ ಸಾಲದು. ಕುಟುಂಬದ ನೆರವಿಗೆ ಬರಬೇಕು ಎಂದು ವಾಗ್ದಾಳಿ ಮಾಡಿದರು.
ಬೆಂಗಳೂರು: ಇನ್ಮುಂದೆ ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50,000 ರೂಪಾಯಿ ಸಹಾಯಧನ ಕೊಡ್ತೇವೆ ಅಂತ ಸಚಿವ ಜಮೀರ್ ಅಹ್ಮದ್ (Zameer Ahmed Khan) ತಿಳಿಸಿದರು.
ಬೆಂಗಳೂರಿನಲ್ಲಿಂದು (Bengaluru) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರ ಸಾಮೂಹಿಕ ವಿವಾಹಕ್ಕೆ 50 ಸಾವಿರ ಕೊಡುತ್ತೇವೆ. ಸಿಎಂ ಸಿದ್ದರಾಮಯ್ಯ (Siddaramaiah) ಬಜೆಟ್‌ನಲ್ಲಿ ಘೋಷಣೆ ಮಾಡಿದ್ದರು, ಅದು ಆದೇಶ ಆಗಿದೆ ಎಂದು ಹೇಳಿದರು. ಇದನ್ನೂ ಓದಿ: ಭಾರತ ಕೊಟ್ಟ ತಿರುಗೇಟಿಗೆ ಸರಿಯಾಗಿ ಉತ್ತರ ನೀಡದೇ ನುಣುಚಿದ ಟ್ರಂಪ್
ಮುಂದುವರಿದು.. ಮೌಲಾನಾ ಅಬ್ದುಲ್ ಕಲಾಂ ಸ್ಕೂಲ್ ಸೇರಿದಂತೆ ಪ್ರತಿಭಾನ್ವಿತರಿಗೆ ಸಹಾಯ ಮಾಡುತ್ತೇವೆ. ಇಲಾಖೆ ವತಿಯಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಧನ ಸಹಾಯ ಮಾಡುತ್ತಿದ್ದೇವೆ. 214 ವಿದ್ಯಾರ್ಥಿಗಳಿಗೆ ವೈಯಕ್ತಿಕವಾಗಿ ಲ್ಯಾಪ್ ಟಾಪ್ ಕೊಡುತ್ತಿದ್ದೇನೆ. ಸಾಮೂಹಿಕ ವಿವಾಹ ಮಾಡವುದು ಬಡವರು, ಹೀಗಾಗಿ ಅಲ್ಪಸಂಖ್ಯಾತರಲ್ಲಿ ಸಾಮೂಹಿಕ ವಿವಾಹ ಮಾಡುವವರಿಗೂ ಸಹಾಯ ಮಾಡುತ್ತೇವೆ ಎಂದು ತಿಳಿಸಿ ಸಹಾಯ ಮಾಡುತ್ತೇವೆಂದು ಮಾಹಿತಿ ನೀಡಿದರು. ಇದನ್ನೂ ಓದಿ: ಭಾರತದಂತಹ ಬಲಿಷ್ಠ ಮಿತ್ರ ರಾಷ್ಟ್ರದೊಂದಿಗೆ ಸಂಬಂಧವನ್ನ ಹದಗೆಡಿಸಬೇಡಿ – ಟ್ರಂಪ್‌ಗೆ ತಿವಿದ ನಿಕ್ಕಿ ಹ್ಯಾಲಿ
ಮದರಸಾದಿಂದ 200 ಜನರ ಆಯ್ಕೆ
ಇನ್ನೂ ಮದರಸಾಗಳಲ್ಲಿ ಕನ್ನಡ ಕಲಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಅವರು, ಮಸೀದಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ವಿಗಳಿಗೂ ಕನ್ನಡ ಬೋಧನೆಯನ್ನ ಮಾಡಲಾಗುವುದು. ಮದರಸಾಗಳಿಂದ 200 ಜನರನ್ನ ಆಯ್ಕೆ ಮಾಡಿದ್ದೇವೆ. 3 ತಿಂಗಳ ಒಳಗೆ ಅವರಿಗೆ ಕನ್ನಡ ಕಲಿಸುತ್ತೇವೆ. ಕನ್ನಡ ರಾಜ್ಯ ನಮ್ಮದು ಕನ್ನಡ ಬರಬೇಕು, ಎಲ್ಲ ಮಸೀದಿ ಗುರುಗಳಿಗೂ ಕನ್ನಡ ಕಲಿಸುತ್ತೇವೆ ಎಂದು ತಿಳಿಸಿದರು. ಇದನ್ನೂ ಓದಿ: ರಾಮನಗರ | ಇನ್‌ಸ್ಟಾದಲ್ಲಿ ಪರಿಚಯವಾದ ಅಪ್ರಾಪ್ತೆಯನ್ನ ಗರ್ಭಿಣಿ ಮಾಡಿದ್ದ ಕಾಮುಕ ಅರೆಸ್ಟ್
2 ಸಾವಿರ ಮದರಸಾಗಳಲ್ಲಿ ಕನ್ನಡ ಕಲಿಕೆ
ಮುಂದಿನ ದಿನಗಳಲ್ಲಿ ರಾಜ್ಯದಲ್ಲಿರುವ 2 ಸಾವಿರ ಮದರಸಾಗಳಲ್ಲಿ ಕನ್ನಡ ಕಲಿಕೆಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮುಂದಾಗಿದ್ದು, ಇದಕ್ಕೆ ಅಲ್ಪಸಂಖ್ಯಾತರ ಆಯೋಗ ಸಂಪೂರ್ಣ ಸಹಕಾರ ನೀಡಲಿದೆ ಎಂದು ಸೋಮವಾರ ಅಲ್ಪಸಂಖ್ಯಾತ ಆಯೋಗದ ಅಧ್ಯಕ್ಷ ಯು. ನಿಸಾರ್ ಅಹಮದ್ ಹೇಳಿದರು. ಅಲ್ಲದೇ, ಈ ಕುರಿತಾದ ಪಠ್ಯಕ್ರಮವನ್ನ ಅಲ್ಪಸಂಖ್ಯಾತರ ಆಯೋಗವು ಪ್ರಾಧಿಕಾರದ ಸಲಹೆಯಂತೆ ಮುದ್ರಿಸಲು ಕ್ರಮವಹಿಸಲಿದೆ ಎಂದರು.