ಜೈಪುರ: ಉದಯಪುರದಲ್ಲಿ ಎರಡು ದಿನಗಳ ಹಿಂದೆಯಷ್ಟೇ ಭೀಕರ ಹತ್ಯೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನಗೊಂಡಿದೆ. ಅಲ್ಲದೆ ಕೃತ್ಯ ಎಸಗಿದ ಮುಸ್ಲಿಂ ಮೂಲಭೂತವಾದಿಗಳು ಪ್ರಧಾನಿ ನರೇಂದ್ರ ಮೋದಿ ಅವರನ್ನೂ ಇದೇ ರೀತಿ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಮುಸ್ಲಿಂ ಯುವಕರನ್ನು ಬಂಧಿಸಲಾಗಿತ್ತು.
ಘಟನೆಯಿಂದ ಎಚ್ಚೆತ್ತ ಕೇಂದ್ರ ಸರ್ಕಾರ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ ವಹಿಸಿತ್ತು. ಈ ಬೆನ್ನಲ್ಲೇ ಟೈಲರ್‌ನ ಭೀಕರ ಹತ್ಯೆಗೆ ಬಳಕೆಯಾದ ಆಯುಧ ಸಿದ್ಧಪಡಿಸಿದ ಕಾರ್ಖಾನೆಯನ್ನು ವಶಪಡಿಸಿಕೊಂಡಿರುವುದಾಗಿ ಮಾಹಿತಿ ತಿಳಿದುಬಂದಿದೆ. ಇಷ್ಟಕ್ಕೂ ಹತ್ಯೆಗೆ ಬಳಸಿದ ಆಯುಧ ತಯಾರಾಗಿದ್ದು ಎಲ್ಲಿ? ಹತ್ಯೆಗೂ ಮುನ್ನ ರಿಹರ್ಸಲ್ ನಡೆದಿದ್ದು ಹೇಗೆ? ಎನ್ನುವ ಮಾಹಿತಿಗಳು ಈಗ ಲಭ್ಯವಾಗಿರುವುದಾಗಿ ಮಾಧ್ಯಮಗಳು ವರದಿ ಮಾಡಿವೆ. ಇದನ್ನೂ ಓದಿ: ಅಪಾಯವನ್ನು ಲೆಕ್ಕಿಸದೇ ಡೇಂಜರ್ ಟ್ರಾಕ್ಟರ್ ಗೇಮ್
ಹೇಗಿತ್ತು ರಿಹರ್ಸಲ್?
ಟೈಲರ್ ಹತ್ಯೆಗೆ ಬಳಸಿದ್ದ ಆಯುಧವನ್ನು ಉದಯಪುರದ ಎಸ್‌ಕೆ ಇಂಜಿನಿಯರಿಂಗ್ ವರ್ಕ್ಸ್ ಕಾರ್ಖಾನೆಯಲ್ಲಿ ತಯಾರಿಸಲಾಗಿದೆ. ಘಟನೆಗೂ ಮುನ್ನವೇ ಅದೇ ಕಾರ್ಖಾನೆಯಲ್ಲಿ ಒಂದು ವೀಡಿಯೋವನ್ನೂ ಚಿತ್ರೀಕರಿಸಿದ್ದಾರೆ. ಹಂತಕರು ಹತ್ಯೆ ಮಾಡುವುದಕ್ಕೂ ಮುನ್ನವೇ ಐಸಿಸ್‌ನ ವೀಡಿಯೋಗಳನ್ನು ವೀಕ್ಷಿಸಿದ್ದಾರೆ, ಒಂದು ವೀಡಿಯೋ ಸಹ ಮಾಡಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪತಿಯೊಂದಿಗೆ ವಾಸಿಸಲು 30 ಬಾರಿ ಅವಳಿ ಸಹೋದರಿಯ ಪಾಸ್‍ಪೋರ್ಟ್ ಬಳಕೆ
ಈಗಾಗಲೇ ಈ ಬಗ್ಗೆ ಕೇಂದ್ರೀಯ ತನಿಖಾ ದಳ ತನಿಖೆ ಆರಂಭಿಸಿದ್ದು, ಪಾಕಿಸ್ತಾನದ ನಂಟಿರುವುದು ಕಂಡುಬಂದಿದೆ. ಇಬ್ಬರು ಆರೋಪಿಗಳಲ್ಲಿ ಒಬ್ಬರಾದ ಗೌಸ್ ಮೊಹಮ್ಮದ್ 2014 ರಲ್ಲಿ 45 ದಿನಗಳ ತರಬೇತಿಗಾಗಿ ಕರಾಚಿಗೆ ಹೋಗಿದ್ದ ಎಂದು ತನಿಖಾ ಸಂಸ್ಥೆಗಳು ಹೇಳಿವೆ.
ಭೋಪಾಲ್: ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್(ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಅವರು ರಾಜಸ್ಥಾನದ ಉದಯಪುರ ಜಿಲ್ಲೆಯಲ್ಲಿ ಇಸ್ಲಾಂ ಧರ್ಮವನ್ನು ಅವಮಾನಿಸಿದ ಆರೋಪದ ಮೇಲೆ ಟೈಲರ್ ಹತ್ಯೆ ಮಾಡಿರುವುದನ್ನು ಖಂಡಿಸಿದ್ದಾರೆ.
ಮಧ್ಯಪ್ರದೇಶ ಸ್ಥಳೀಯ ಸಂಸ್ಥೆ ಚುನಾವಣೆಯ ಪ್ರಚಾರದ ಭಾಗವಾಗಿ ಭೋಪಾಲ್‍ನ ಅಶೋಕ ಗಾರ್ಡನ್ ಪ್ರದೇಶದಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಓವೈಸಿ, ನಾನು ಉದಯಪುರ ಘಟನೆಯನ್ನು ಖಂಡಿಸುತ್ತೇನೆ. ಯಾರನ್ನಾದರೂ ಕೊಲ್ಲಲು ಕಾನೂನಿನಲ್ಲಿ ಅವಕಾಶವಿಲ್ಲ. ಯಾರೂ ಇತರರನ್ನು ಕೊಲ್ಲಲು ಸಾಧ್ಯವಿಲ್ಲ. ನಾವು ಕಾನೂನನ್ನು ಕೈಗೆ ತೆಗೆದುಕೊಳ್ಳುವುದಿಲ್ಲ. ಇದೊಂದು ಅಪರಾಧ. ಆದರೆ ನೂಪುರ್ ಶರ್ಮಾ ಅವರನ್ನೂ ಬಂಧಿಸಬೇಕು ಎಂದು ನಾವು ಒತ್ತಾಯಿಸುತ್ತೇವೆ ಎಂದು ಆಗ್ರಹಿಸಿದ್ದಾರೆ. ಇದನ್ನೂ ಓದಿ: ಟೈಲರ್ ಹತ್ಯೆ ಭೀಕರವಾಗಿದೆ, ದಯವಿಟ್ಟು ವೀಕ್ಷಿಸಬೇಡಿ: ರಾಜಸ್ಥಾನ ಪೊಲೀಸರು ಮನವಿ
ಟೈಲರ್ ಹತ್ಯೆಯನ್ನು ಘೋರ ಎಂದು ಬಣ್ಣಿಸಿದ ಅವರು, ಸರ್ಕಾರವು ಆರೋಪಿಗಳ ವಿರುದ್ಧ ಕಠಿಣ ಕ್ರಮವನ್ನು ತೆಗೆದುಕೊಳ್ಳಬೇಕು. ಹಿಂಸಾಚಾರವನ್ನು ವಿರೋಧಿಸುವುದು ಎಐಎಂಐಎಂ ಸ್ಥಿರವಾದ ನಿಲುವು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಮ್ಮ ಭಾಷಣದ ವೇಳೆ ಓವೈಸಿ ಅವರು ಕಾಂಗ್ರೆಸ್ ಮತ್ತು ಬಿಜೆಪಿಯನ್ನು ಟೀಕಿಸಿದ್ದು, ಈ ಘಟನೆಗೆ ಅವರ ಪರಸ್ಪರ ಹಗ್ಗಜಗ್ಗಾಟವೇ ಕಾರಣ ಎಂದು ಆರೋಪಿಸಿದ್ದಾರೆ.
ನಡೆದಿದ್ದೇನು?
ಬಿಜೆಪಿ ನಾಯಕಿ ನೂಪುರ್ ಶರ್ಮಾ ಅವರು ಮುಸ್ಲಿಂ ಪ್ರವಾದಿ ಮೊಹಮ್ಮದ್ ಬಗ್ಗೆ ಅವಹೇಳನಕಾರಿ ಹೇಳಿಕೆ ಕೊಟ್ಟಿದ್ದರು. ಈ ಹಿನ್ನೆಲೆ ಹಲವು ಮುಸ್ಲಿಂ ಸಮುದಾಯದವರು ಆಕೆಯನ್ನು ವಿರೋಧಿಸಿ ಶಿಸ್ತು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದ್ದರು. ಓವೈಸಿ ಅವರು ಸಹ ನೂಪುರ್ ಶರ್ಮಾ ವಿರುದ್ಧ ಧ್ವನಿ ಎತ್ತಿದ್ದರು. ಆದರೆ ಇತ್ತೀಚೆಗೆ ಹಿಂದೂ-ಮುಸ್ಲಿಂ ಜಗಳ, ಪ್ರತಿಭಟನೆಗಳು ಹಿಂಸಾಚಾರದ ರೂಪವನ್ನು ಪಡೆಯುತ್ತಿದೆ.
ಟೈಲರ್ ಬರ್ಬರ ಹತ್ಯೆ
ಮೃತ ಟೈಲರ್ ಕನ್ಹಯ್ಯಾ ಲಾಲ್ ಅವರು ಉದಯಪುರದ ಜನನಿಬಿಡ ಮಾರುಕಟ್ಟೆಯಲ್ಲಿ ತಮ್ಮ ಅಂಗಡಿಯಲ್ಲಿದ್ದರು. ಕನ್ಹಯ್ಯ ನೂಪರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದ. ಇದರಿಂದ ಕೋಪಗೊಂಡ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಟೈಲರ್‌ನನ್ನು ಬರ್ಬರವಾಗಿ ಶಿರಚ್ಛೇದ ಮಾಡಿದ ವೀಡಿಯೋವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಮಂಗಳವಾರ ಮಧ್ಯಾಹ್ನ 2:30ರ ವೇಳೆಗೆ ಈ ಘಟನೆ ನಡೆದಿತ್ತು. ಸಂಜೆ ವೇಳೆಗೆ ಇಬ್ಬರೂ ಆರೋಪಿಗಳನ್ನು ರಾಜಾಸ್ಥಾನದಲ್ಲಿ ಬಂಧಿಸಲಾಗಿದೆ. ಇದನ್ನೂ ಓದಿ: ಟೈಲರ್ ಶಿರಚ್ಛೇದನ ಮಾಡಿದ ಮುಸ್ಲಿಂ ಯುವಕರು ಕೆಲವೇ ಗಂಟೆಗಳಲ್ಲಿ ಅರೆಸ್ಟ್
ವೀಡಿಯೋದಲ್ಲಿ ಏನಿದೆ?
ನಾನು ರಿಯಾಜ್ ಅಹ್ಮದ್. ಇವನು ನನ್ನಣ್ಣ ಮೊಹಮ್ಮದ್. ಉದಯಪುರದಲ್ಲಿರುವ ಮಾಲ್ಡಾಸ್ ಸ್ಟ್ರೀಟ್‍ನಲ್ಲಿರುವ ಹಿಂದೂ ವ್ಯಕ್ತಿಯ ತಲೆಯನ್ನು ಕತ್ತರಿಸಿದ್ದೇವೆ. ನಾವು ಬದುಕುತ್ತಿದ್ದೇವೆ ಪ್ರವಾದಿ ಸಲುವಾಗಿ. ಪ್ರವಾದಿಗಾಗಿ ಜೀವ ಬಿಡಲು ಸಿದ್ಧ. ಏಯ್ ನರೇಂದ್ರ ಮೋದಿ ಬೆಂಕಿ ಹಬ್ಬಿಸಿದ್ದು ನೀನು. ಅದನ್ನು ಆರಿಸುತ್ತೇವೆ ನಾವು. ನಾನು ಜೀವಂತವಿದ್ದರೆ ಈ ನನ್ನ ಕತ್ತಿ ನಿನ್ನ ಕುತ್ತಿಗೆ ತಲುಪಿ, ನಿನ್ನನ್ನು ಸಂಹಾರ ಮಾಡುತ್ತೇನೆ.
ಜೈಪುರ: ನೀವು ತುಂಬಾ ಕೊಲೆಗಳನ್ನು ಮಾಡುತ್ತೀರಿ, ಪ್ರವಾದಿಗಾಗಿ ಒಂದು ಕೊಲೆಯನ್ನು ಏಕೆ ಮಾಡಬಾರದು? ಎಂದು ಮುಸ್ಲಿಂ ಮೂಲಭೂತವಾದಿ ರಿಯಾಜ್ ಮೊಹಮ್ಮದ್ ಅಕ್ತಾರಿ ಉದಯಪುರ ಹತ್ಯೆಗೆ ಪ್ರಚೋದನೆ ನೀಡಿದ್ದ ವೀಡಿಯೋ ಈಗ ಜಾಲತಾಣದಲ್ಲಿ ವೈರಲ್ ಆಗಿದೆ.
ಉದಯಪುರದಲ್ಲಿ ಟೈಲರ್‌ನನ್ನು ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಶಿರಚ್ಛೇದನ ಮಾಡಿ ಹತ್ಯೆಗೈದಿದ್ದರು. ಹತ್ಯೆಗೆ ಪ್ರಚೋದನೆ ನೀಡಿದ್ದ ಮತ್ತೊಬ್ಬ ಮುಸ್ಲಿಂ ಮೂಲಭೂತವಾದಿಯ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದೆ. ಆರೋಪಿಗಳು ರಾಜಾಸ್ಥಾನದಲ್ಲಿ ಬಂಧನವಾಗುವುದಕ್ಕೆ ಕೆಲವೇ ಕ್ಷಣಗಳಿಗೂ ಮುನ್ನವೇ ಜೂನ್ 17ರಂದೇ ಮಾಡಿದ್ದ 2:20 ನಿಮಿಷದ ವೀಡಿಯೋ ವೈರಲ್ ಆಗಿದೆ. ಇದನ್ನೂ ಓದಿ: ರಾಷ್ಟ್ರಪತಿ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ ರೈತ
ವೀಡಿಯೋನಲ್ಲಿ ವ್ಯಕ್ತಿಯೊಬ್ಬ ಪ್ರವಾದಿ ವಿರೋಧಿಗಳ ಹತ್ಯೆಗೆ ಪ್ರಚೋದನೆ ನೀಡುವ ಜೊತೆಗೆ ರಾಜಾಸ್ಥಾನ ಸರ್ಕಾರಕ್ಕೂ ಪರೋಕ್ಷವಾಗಿ ಸವಾಲು ಹಾಕಿದ್ದಾನೆ.
ವೀಡಿಯೋ ನಲ್ಲಿ ಏನಿದೆ?
ನಾನು ನನ್ನ ಮುಸ್ಲಿಂ ಬಂಧುಗಳಿಗೆ ಮತ್ತೊಂದು ಸಂದೇಶ ನೀಡಲು ಬಯಸುತ್ತೇನೆ. ಎಲ್ಲರಿಗೂ ನನ್ನ ಕುಟುಂಬ ಏನಾಗುತ್ತದೆ? ಪರಿವಾರಕ್ಕೆ ಏನಾಗುತ್ತದೆ? ಎನ್ನುವ ಚಿಂತೆ ಇರುತ್ತದೆ. ನನಗೂ ಒಂದು ಕುಟುಂಬವಿದೆ, ಕೆಲಸವಿದೆ. ಅದರ ಚಿಂತೆ ಬಿಟ್ಟುಬಿಡಿ. ನೀವು ಎಷ್ಟೋ ಕೊಲೆಗಳನ್ನು ಮಾಡುತ್ತೀರಿ ಪ್ರವಾದಿಗಾಗಿ ಏಕೆ ಒಂದು ಕೊಲೆಯನ್ನು ಮಾಡಬಾರದು? ಹೆದರಬೇಡಿ, ನಮಗೆ ಅಲ್ಹಾನ ಆಶ್ರಯವಿದೆ. ಹೆಚ್ಚೆಂದರೆ ಜೈಲಿಗೆ ಹಾಕುತ್ತಾರೆ. ಇದನ್ನೂ ಓದಿ: ರಿಲಯನ್ಸ್ ಜಿಯೋ ನಿರ್ದೇಶಕ ಸ್ಥಾನದಿಂದ ಕೆಳಗಿಳಿದ ಮುಖೇಶ್ ಅಂಬಾನಿ – ಮಗ ಆಕಾಶ್‌ಗೆ ಪಟ್ಟ
ಉದಯಪುರದಲ್ಲಿ ದೊಡ್ಡದೊಡ್ಡ ದಾದಾಗಳಿಗೆ ನಾನೊಂದು ಸವಾಲು ಹಾಕುತ್ತೇನೆ. ನನ್ನಂಥವರನ್ನು ಕೊಲ್ಲಬೇಕು, ನಮ್ಮ ಆಸ್ತಿಗಳನ್ನು ಜಪ್ತಿ ಮಾಡಬೇಕು ಅನ್ನೋರು ಗಟ್ಸ್ ಇದ್ದರೆ ಮಾಡಲಿ, ಇಲ್ಲವಾದರೆ ಬಳೆಗಳನ್ನು ತೊಟ್ಟುಕೊಳ್ಳಲಿ ಎಂದು ಸವಾಲು ಹಾಕಿದ್ದಾನೆ.
ಜೈಪುರ: ಉದಯಪುರದಲ್ಲಿ ಟೈಲರ್‌ನನ್ನು ಬರ್ಬರವಾಗಿ ಹತ್ಯೆಗೈದ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರನ್ನು ವೀಡಿಯೋ ವೈರಲ್ ಆದ ಕೆಲವೇ ಗಂಟೆಗಳಲ್ಲಿ ರಾಜಸ್ಥಾನದ ರಾಜ್‌ಸಮಂದ್ ಪ್ರದೇಶದಲ್ಲಿ ಬಂಧಿಸಲಾಗಿದೆ.
ನೂಪರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಟೈಲರ್ ಒಬ್ಬರನ್ನು ಬರ್ಬರವಾಗಿ ಶಿರಚ್ಛೇದ ಮಾಡಿದ ವೀಡಿಯೋವನ್ನು ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಮಧ್ಯಾಹ್ನ 2:30ರ ವೇಳೆಗೆ ಈ ಘಟನೆ ನಡೆದಿತ್ತು. ಸಂಜೆ ವೇಳೆಗೆ ಇಬ್ಬರೂ ಆರೋಪಿಗಳನ್ನು ರಾಜಾಸ್ಥಾನದಲ್ಲಿ ಬಂಧಿಸಲಾಗಿದೆ.
ಆರೋಪಿಗಳ ವಿರುದ್ಧ ಶೀಘ್ರವೇ ತನಿಖೆ ನಡೆಸಿ, ಕಠಿಣ ಶಿಕ್ಷೆಗೆ ಗುರಿಪಡಿಸುವುದಾಗಿ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಹೇಳಿದ್ದಾರೆ.
It's a sad & shameful incident. There's tense atmosphere in the nation today. Why don't PM & Amit Shah ji address the nation? There is tension among people. PM should address the public&say that such violence won't be tolerated & appeal for peace: Rajasthan CM on Udaipur murder pic.twitter.com/rkX0VRJPk0
ಇಂಟರ್‌ನೆಟ್ ಸೇವೆ ಸ್ಥಗಿತ: ಟೈಲರ್ ಶಿರಚ್ಛೇದನ ವೀಡಿಯೋ ಜಾಲತಾಣದಲ್ಲಿ ಹರಿದಾಡುತ್ತಿದ್ದಂತೆ ಹಿಂದೂ ಸಂಘಟನೆಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ದಾಖಲಿಸಿವೆ. ಪರಿಸ್ಥಿತಿ ಕೈ ಮೀರುತ್ತಿದ್ದು, ಈ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ ಉದಯಪುರದಲ್ಲಿ ಇಂಟರ್‌ನೆಟ್ ಸೇವೆಯನ್ನು ಸ್ಥಗಿತಗೊಳಿಸಿದೆ.
ವೀಡಿಯೋದಲ್ಲಿ ಏನಿದೆ?
ನಾನು ರಿಯಾಜ್ ಅಹ್ಮದ್.. ಇವನು ನನ್ನಣ್ಣ ಮೊಹಮ್ಮದ್. ಉದಯಪುರದಲ್ಲಿರುವ ಮಾಲ್ಡಾಸ್ ಸ್ಟ್ರೀಟ್‍ನಲ್ಲಿರುವ ಹಿಂದೂ ವ್ಯಕ್ತಿಯ ತಲೆಯನ್ನು ಕತ್ತರಿಸಿದ್ದೇವೆ. ನಾವು ಬದುಕುತ್ತಿದ್ದೇವೆ ಪ್ರವಾದಿ ಸಲುವಾಗಿ. ಪ್ರವಾದಿಗಾಗಿ ಜೀವ ಬಿಡಲು ಸಿದ್ದ. ಏಯ್ ನರೇಂದ್ರ ಮೋದಿ ಬೆಂಕಿ ಹಬ್ಬಿಸಿದ್ದು ನೀನು. ಅದನ್ನುಆರಿಸುತ್ತೇವೆ ನಾವು. ನಾನು ಜೀವಂತವಿದ್ದರೆ ಈ ನನ್ನ ಕತ್ತಿ ನಿನ್ನ ಕುತ್ತಿಗೆ ತಲುಪಿ, ನಿನ್ನನ್ನು ಸಂಹಾರ ಮಾಡುತ್ತೇನೆ.
ಜೈಪುರ: ನೂಪರ್ ಶರ್ಮಾಗೆ ಬೆಂಬಲ ವ್ಯಕ್ತಪಡಿಸಿ ವಾಟ್ಸಪ್ ಸ್ಟೇಟಸ್ ಹಾಕಿದ್ದಕ್ಕೆ ಇಬ್ಬರು ಮುಸ್ಲಿಂ ಮೂಲಭೂತವಾದಿ ಯುವಕರು ಟೈಲರ್ ಒಬ್ಬರನ್ನು ಬರ್ಬರವಾಗಿ ಶಿರಚ್ಛೇದ ಮಾಡಿದ ಘಟನೆ ರಾಜಸ್ಥಾನದ ಮಾಲ್ಡಾದಲ್ಲಿ ನಡೆದಿದೆ.
ಮಧ್ಯಾಹ್ನ 2:30ರ ವೇಳೆಗೆ ಈ ಘಟನೆ ನಡೆದಿದ್ದು ಮಾಲ್ಡಾದಲ್ಲಿ ಈಗ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ ಆರಂಭವಾಗಿದೆ. ವರ್ತಕರು ಅಂಗಡಿಗಳನ್ನು ಮುಚ್ಚಿದ್ದು ಪ್ರತಿಭಟನಾಕಾರರು ಹಂತಕರನ್ನು ಬಂಧಿಸುವಂತೆ ಆಗ್ರಹಿಸಿದ್ದಾರೆ.
It's a sad & shameful incident. There's tense atmosphere in the nation today. Why don't PM & Amit Shah ji address the nation? There is tension among people. PM should address the public&say that such violence won't be tolerated & appeal for peace: Rajasthan CM on Udaipur murder pic.twitter.com/rkX0VRJPk0
ನಡೆದಿದ್ದು ಏನು?
ಇಬ್ಬರು ಯುವಕರು ಟೈಲರ್ ಕನ್ನಯ್ಯಲಾಲ್ ಅಂಗಡಿಗೆ ಬಂದಿದ್ದಾರೆ. ಕನ್ನಯ್ಯ ಲಾಲ್ ಅಳತೆ ತೆಗೆಯುವ ಸಂದರ್ಭದಲ್ಲಿ ಇವರು ದಾಳಿ ಮಾಡಿ ಹತ್ಯೆ ಮಾಡಿದ್ದಾರೆ.
ಈ ಇಬ್ಬರು ದಾಳಿ ಮಾಡುತ್ತಿರುವ ವೀಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಟ್ಟಿದ್ದಾರೆ. ಅಷ್ಟೇ ಅಲ್ಲದೇ ನೂಪುರ್ ಶರ್ಮಾಗೆ ಬೆಂಬಲ ವ್ಯಕ್ತ ಪಡಿಸಿ ನಾವು ಈ ಕೆಲಸ ಮಾಡಿದ್ದೇವೆ. ಪ್ರಧಾನಿ ಮೋದಿಯನ್ನು ಹತ್ಯೆ ಮಾಡುತ್ತೇವೆ ಎಂದು ಚಾಕು ಹಿಡಿದು ವೀಡಿಯೋದಲ್ಲಿ ಬೆದರಿಕೆ ಒಡ್ಡಿದ್ದಾರೆ.
ವೀಡಿಯೋದಲ್ಲಿ ಏನಿದೆ?
ನಾನು ರಿಯಾಜ್ ಅಹ್ಮದ್.. ಇವನು ನನ್ನಣ್ಣ ಮೊಹಮ್ಮದ್. ಉದಯಪುರದಲ್ಲಿರುವ ಮಾಲ್ಡಾಸ್ ಸ್ಟ್ರೀಟ್‍ನಲ್ಲಿರುವ ಹಿಂದೂ ವ್ಯಕ್ತಿಯ ತಲೆಯನ್ನು ಕತ್ತರಿಸಿದ್ದೇವೆ. ನಾವು ಬದುಕುತ್ತಿದ್ದೇವೆ ಪ್ರವಾದಿ ಸಲುವಾಗಿ. ಪ್ರವಾದಿಗಾಗಿ ಜೀವ ಬಿಡಲು ಸಿದ್ದ. ಏಯ್ ನರೇಂದ್ರ ಮೋದಿ ಬೆಂಕಿ ಹಬ್ಬಿಸಿದ್ದು ನೀನು. ಅದನ್ನುಆರಿಸುತ್ತೇವೆ ನಾವು. ನಾನು ಜೀವಂತವಿದ್ದರೆ ಈ ನನ್ನ ಕತ್ತಿ ನಿನ್ನ ಕುತ್ತಿಗೆ ತಲುಪಿ, ನಿನ್ನನ್ನು ಸಂಹಾರ ಮಾಡುತ್ತೇನೆ.
ಆರೋಪಿಗಳು ಉದಯ್‌ಪುರ ಮೂಲದವರಾಗಿದ್ದಾರೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ. ಶೀಘ್ರವೇ ಆರೋಪಿಗಳನ್ನು ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ನವದೆಹಲಿ: ಪ್ರವಾದಿ ಮೊಹಮ್ಮದ್ ಪೈಗಂಬರ್ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿ ರಾಷ್ಟ್ರೀಯ ವಕ್ತಾರೆ ನೂಪುರ್ ಶರ್ಮಾ, ನವೀನ್ ಜಿಂದಾಲ್ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ದೇಶಾದ್ಯಂತ ಇಂದು ಬೃಹತ್ ಪ್ರತಿಭಟನೆ ನಡೆಯಿತು.
ಶುಕ್ರವಾರದ ಪ್ರಾರ್ಥನೆಯ ನಂತರ ದೆಹಲಿಯ ಜಾಮಾ ಮಸೀದಿ ಹೊರಗೆ ಪ್ರತಿಭಟನೆ ನಡೆದಿದೆ. ಅದರ ಬೆನ್ನಲ್ಲೇ ಕಾಶ್ಮೀರ, ಉತ್ತರ ಪ್ರದೇಶ, ತೆಲಂಗಾಣ, ಆಂಧ್ರಪ್ರದೇಶ, ಪಶ್ಚಿಮ ಬಂಗಾಳ, ಉತ್ತಾರಖಂಡ, ಮಹಾರಾಷ್ಟ್ರ ಸೇರಿದಂತೆ ಹಲವು ರಾಜ್ಯಗಳಲ್ಲಿ ಸಾಮೂಹಿಕ ಪ್ರತಿಭಟನೆಗಳು ನಡೆದವು. ಇದನ್ನೂ ಓದಿ: ಕೋಮು ದ್ವೇಷಭಾಷಣ – ಓವೈಸಿ, ನೂಪುರ್ ಶರ್ಮಾ ವಿರುದ್ಧ FIR
ನವಿ ಮುಂಬೈನಲ್ಲಿ ಬುರ್ಕಾ ಧರಿಸಿ ಬೀದಿಗಿಳಿದು ಮಹಿಳೆಯರ ಪ್ರತಿಭಟನೆ ನಡೆಸಿದರು. ದೆಹಲಿಯ ಮಂದಿರ್ ಮಾರ್ಗ್ ಪೊಲೀಸ್ ಠಾಣೆಯಲ್ಲಿ ಎಂಐಎಂ ಕಾರ್ಯಕರ್ತರು ನಮಾಜ್ ಮಾಡಿ ವಿಶೇಷ ರೀತಿಯಲ್ಲಿ ಪ್ರತಿಭಟಿಸಿದರು.
ಜಮ್ಮು-ಕಾಶ್ಮೀರದಲ್ಲಿ ಹಲವೆಡೆ ಭಾರಿ ಪ್ರತಿಭಟನೆ ನಡೆಯಿತು. ಇದರಿಂದ ಜಮ್ಮುವಿನ ಭದರ್ವಾ ಹಾಗೂ ಕಿಶ್ತ್‌ವಾರ್ ಕೆಲವು ಭಾಗಗಳಲ್ಲಿ ಪರಿಸ್ಥಿತಿ ನಿಯಂತ್ರಣಕ್ಕೆ ಕರ್ಫ್ಯೂ ವಿಧಿಸಲಾಗಿದೆ.
30 ಮಂದಿ ಅರೆಸ್ಟ್
ಸಾರ್ವಜನಿಕ ಸ್ಥಳಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಕೋಮು ಭಾವನೆ ಕೆರಳಿಸಿದ ಆರೋಪದ ಮೇಲೆ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಬಂಧನ ಖಂಡಿಸಿ ಪಕ್ಷದ ಕಾರ್ಯಕರ್ತರು ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಅಧಿಕಾರಿಗಳ ಆದೇಶ ಧಿಕ್ಕರಿಸಿ ಪ್ರತಿಭಟನೆ ನಡೆಸಿದ ಆರೋಪದ ಮೇಲೆ 33 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ಶ್ರೀನಗರ: ಮುಸ್ಲಿಮರಿಗೆ ಯಾರು ಹೆಚ್ಚು ತೊಂದರೆ ಕೊಡ್ತಾರೆ ಎಂಬುದನ್ನು ನೋಡಲು ದೇಶದ ಮುಖ್ಯಮಂತ್ರಿಗಳು ಪೈಪೋಟಿಗೆ ಬಿದ್ದಿದ್ದಾರೆ ಎಂದು ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ(ಪಿಡಿಪಿ) ಮುಖ್ಯಸ್ಥೆ ಹಾಗೂ ಜಮ್ಮು ಮತ್ತು ಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ವಾಗ್ದಾಳಿ ನಡೆಸಿದ್ದಾರೆ.
ಮುಸ್ಲಿಮರಿಗೆ ಯಾರು ಹೆಚ್ಚು ತೊಂದರೆ ಕೊಡ್ತಾರೆ ಎಂಬುದನ್ನು ನೋಡಲು ಸಿಎಂಗಳು ಪರಸ್ಪರ ಪೈಪೋಟಿ ನಡೆಸುತ್ತಿದ್ದಾರೆ. ಹಾಗಾಗಿಯೇ ಮಂದಿರ, ಮಸೀದಿಗಳ ವಿಚಾರಗಳನ್ನು ಎತ್ತಲಾಗುತ್ತಿದೆ. ಗುಜರಾತ್ ಮತ್ತು ಉತ್ತರ ಪ್ರದೇಶಗಳಲ್ಲಿ ಮುಸ್ಲಿಮರು ಪ್ರತಿಕ್ರಿಯಿಸುವಂತೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಜ್ಞಾನವಾಪಿ ಮಸೀದಿ ವಿವಾದ – ಜಿಲ್ಲಾ ನ್ಯಾಯಾಲಯದಿಂದ ನಾಳೆ ಮಹತ್ವದ ಆದೇಶ
ಬ್ರಿಟಿಷರಂತೆ ಬಿಜೆಪಿ: ಬ್ರಿಟಿಷರು ಹಿಂದೂಗಳನ್ನು ಮುಸ್ಲಿಮರ ವಿರುದ್ಧ ಎತ್ತಿಕಟ್ಟುತ್ತಿದ್ದರು. ಬಿಜೆಪಿಯೂ ಈಗ ಅದನ್ನೇ ಮಾಡುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಮೌನವಾಗಿ ನೋಡುತ್ತಿದ್ದಾರೆ. ಅವರ ಪಕ್ಷವು ಮಾಡುತ್ತಿರುವುದೇ ಸರಿ ಎಂದು ಭಾವಿಸುತ್ತಿದ್ದಾರೆ ಎಂದು ಕುಟುಕಿದ್ದಾರೆ.
ಉತ್ತರಪ್ರದೇಶ: ದೇಶದಲ್ಲಿ ಧರ್ಮ ದಂಗಲ್ ದಿನಕ್ಕೊಂದು ತಿರುವು ಪಡೆದುಕೊಳ್ಳುತ್ತಿದೆ. ಹಿಜಬ್, ಹಲಾಲ್ ವಿರೋಧಿ ಅಭಿಯಾನದಿಂದ ಶುರುವಾದ ಸಂಘರ್ಷ ಈಗ ಧಾರ್ಮಿಕ ಕಟ್ಟಡಗಳ ವ್ಯಾಪ್ತಿಗೆ ಬಂದು ನಿಂತಿದೆ. ಭಾರತದ ಐತಿಹಾಸಿಕ ದೇವಾಲಯಗಳನ್ನು ನಾಶಗೊಳಿಸಿ ಅದರ ಮೇಲೆ ಮಸೀದಿ ನಿರ್ಮಿಸಲಾಗಿದೆ ಎಂದು ಅನೇಕ ಕಡೆಗಳಲ್ಲಿ ಹಿಂದೂಪರ ಸಂಘಟನೆಗಳು ಕೋರ್ಟ್ ಮೆಟ್ಟಿಲೇರಿವೆ. ಈಗ ಅಂತಹದ್ದೇ ಮತ್ತೊಂದು ಪ್ರಕರಣ ಉತ್ತರ ಪ್ರದೇಶದಲ್ಲಿ ನಡೆದಿದೆ.
ಭಗವಾನ್ ಶ್ರೀಕೃಷ್ಣನ ಜನ್ಮಸ್ಥಳ ಎಂದು ನಂಬಲಾದ ಸ್ಥಳದಲ್ಲಿ ಇರುವ ಶಾಹಿ ಈದ್ಗಾ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುವುದಕ್ಕೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿ ವಕೀಲರು ಮತ್ತು ಕಾನೂನು ವಿದ್ಯಾರ್ಥಿಗಳ ಗುಂಪು ಮಥುರಾದ ನ್ಯಾಯಾಲಯದಲ್ಲಿ ಮನವಿ ಸಲ್ಲಿಸಿದೆ. ಇದನ್ನೂ ಓದಿ: ಜ್ಞಾನವಾಪಿ ಮಾಹಿತಿ ಲೀಕ್ – ಚಿತ್ರೀಕರಣದಲ್ಲಿ ಭಾಗಿಯಾಗಿದ್ದ ಅಧಿಕಾರಿ ವಜಾ
ಕತ್ರಾ ಕೇಶವ್ ದೇವ್ ದೇವಸ್ಥಾನದ 13.37 ಎಕರೆ ಆವರಣದಲ್ಲಿ ದೇವರ ಜನ್ಮಸ್ಥಳದಲ್ಲಿ ನಿರ್ಮಿಸಲಾಗಿದೆ ಎಂದು ಮುಸ್ಲಿಮರು ಪ್ರತಿಪಾದಿಸಿದ ಮಸೀದಿಯನ್ನು ತೆರವುಗೊಳಿಸುವಂತೆ ಕೋರಿ ವಿವಿಧ ಹಿಂದೂ ಗುಂಪುಗಳು ಮಥುರಾ ನ್ಯಾಯಾಲಯಗಳಲ್ಲಿ ಈ ಹಿಂದೆ ಹತ್ತು ಪ್ರತ್ಯೇಕ ಅರ್ಜಿಗಳನ್ನು ಸಲ್ಲಿಸಿದ್ದವು.
ಹಿಂದೂ ಸಮುದಾಯದ ಬಹುಪಾಲು ಜನರು ಮಸೀದಿ ಇರುವ ಸ್ಥಳದಲ್ಲಿ ಶ್ರೀಕೃಷ್ಣ ಜನಿಸಿದ್ದರೆಂದು ನಂಬುತ್ತಾರೆ ಎಂದು ಮನವಿಯಲ್ಲಿ ಉಲ್ಲೇಖಿಸಲಾಗಿದೆ. ಅರ್ಜಿದಾರರಲ್ಲಿ ಒಬ್ಬರಾದ ವಕೀಲ ಶೈಲೇಂದ್ರ ಸಿಂಗ್, ಒಂದು ಕಾಲದಲ್ಲಿ ದೇವಾಲಯವಿದ್ದ ಸ್ಥಳದಲ್ಲಿ ಮಸೀದಿಯನ್ನು ನಿರ್ಮಿಸಲಾಗಿದೆ ಎಂದು ಪ್ರತಿಪಾದಿಸಿದ್ದಾರೆ. ಇದನ್ನೂ ಓದಿ: ಶಿವಲಿಂಗ ಪತ್ತೆಯಾದ ಜಾಗವನ್ನು ರಕ್ಷಿಸಿ: ಸುಪ್ರೀಂ ಕೋರ್ಟ್
ಹಿಂದೂ ದೇವಾಲಯದ ಅವಶೇಷಗಳ ಮೇಲೆ ಮಸೀದಿ ನಿರ್ಮಿಸಲಾಗಿದೆ. ಇದರ ಸಂರಚನೆ ದೇವಾಲಯವನ್ನೇ ಹೋಲುತ್ತದೆ ಎಂದು ಅರ್ಜಿದಾರರು ತಿಳಿಸಿದ್ದಾರೆ.
ಮೈಸೂರು: ಕೇವಲ ಮುಸ್ಲಿಮರನ್ನೇ ಯಾಕೆ ಟಾರ್ಗೆಟ್ ಮಾಡುತ್ತಿದ್ದೀರಾ. ಒಂದು ಧರ್ಮ, ಒಂದು ಜಾತಿಯನ್ನು ಟಾರ್ಗೆಟ್ ಮಾಡಬೇಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
ಬಿಬಿಎಂಪಿ ವ್ಯಾಪ್ತಿಯಲ್ಲಿ ಮುಸ್ಲಿಮರ ಮಟನ್ ಸ್ಟಾಲ್, ಕಸಾಯಿಖಾನೆ ಮುಚ್ಚಲು ನೋಟಿಸ್ ಕೊಟ್ಟಿರುವ ವಿಚಾರವಾಗಿ ಮೈಸೂರಿನ ಟಿ. ನರಸೀಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇವಲ ಮುಸ್ಲಿಮರನ್ನೇ ಯಾಕೆ ಟಾರ್ಗೆಟ್ ಮಾಡುತ್ತೀರಾ. ಒಂದು ಧರ್ಮ, ಒಂದು ಜಾತಿ ಟಾರ್ಗೆಟ್ ಮಾಡಬೇಡಿ. ಎಲ್ಲರ ಮೇಲೂ ಕಾನೂನು ಕ್ರಮ ಕೈಗೊಳ್ಳುವಂತಿದ್ದರೆ ಮಾಡಿ. ಕಾನೂನು ಎಲ್ಲರಿಗೂ ಒಂದೇ. ರಾಜಕೀಯ ಲಾಭಕ್ಕಾಗಿ ಒಂದು ಧರ್ಮವನ್ನ ಟಾರ್ಗೆಟ್ ಮಾಡಬೇಡಿ. ಮುಸ್ಲಿಂ, ಕ್ರಿಶ್ಚಿಯನ್, ಹಿಂದೂ ಯಾರೇ ತಪ್ಪು ಮಾಡಿದರೂ ಕ್ರಮ ತೆಗೆದುಕೊಳ್ಳಿ. ಒಂದು ವರ್ಗವನ್ನು ಟಾರ್ಗೆಟ್ ಮಾಡಿದರೆ ಮತ ಧ್ರುವೀಕರಣ ಆಗುತ್ತದೆ ಎಂಬ ಭ್ರಮೆಯಲ್ಲಿ ಬಿಜೆಪಿ ಇದೆ. ಅದು ಅಸಾಧ್ಯ. ಈಗಾಗಲೇ ಅವರಿಗೆ ತಿರುಗುಬಾಣ ಆಗಿದೆ ಎಂದು ಹೇಳಿದರು.
ಬಿಜೆಪಿಯಿಂದ ಒಲೈಕೆ: ಸಂವಿಧಾನ 15 ಭಾಷೆಗಳಿಗೆ ಅಧಿಕೃತ ಭಾಷೆ ಎಂಬ ಮಾನ್ಯತೆ ನೀಡಿದೆ. ಹಿಂದಿ ಕೂಡ ಒಂದು ಭಾಷೆ. ಹಿಂದಿ ರಾಷ್ಟ್ರ ಭಾಷೆ ಅಂತ ಎಲ್ಲಿಯೂ ಹೇಳಿಲ್ಲ. ಅಮಿತ್ ಶಾ ಅವರು ಹಿಂದಿಯನ್ನು ಸಂಪರ್ಕ ಭಾಷೆಯಾಗಿ ಬಳಸಬೇಕು ಅಂದಿರುವ ಕಾರಣಕ್ಕಾಗಿ ಬಿಜೆಪಿಯವರು ಓಲೈಕೆ ಮಾಡುತ್ತಿದ್ದಾರೆ ಎಂದರು.
ಸಿದ್ದರಾಮಯ್ಯ ಸೋನಿಯಾ ಗಾಂಧಿ ಗುಲಾಮ ಎಂಬ ಸಿ.ಟಿ. ರವಿ ಹೇಳಿಕೆ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಪ್ರಜಾಪ್ರಭುತ್ವದಲ್ಲಿ ಯಾರು ಯಾರಿಗೂ ಗುಲಾಮರಲ್ಲ. ಅಮಿತ್ ಶಾ ಓಲೈಸಿ ಮಾತನಾಡಿದ್ದಕ್ಕೆ ಸಿಟಿ.ರವಿಯನ್ನು ಗುಲಾಮ ಎಂದಿದ್ದು. ಸೋನಿಯಾ ಗಾಂಧಿ ಹಿಂದಿ ರಾಷ್ಟ್ರೀಯ ಭಾಷೆ ಅಂದಿದ್ದಾರಾ? ರಾಹುಲ್ ಗಾಂಧಿ ಆ ರೀತಿ ಮಾತನಾಡಿದ್ದಾರಾ? ಪ್ರಜಾಪ್ರಭುತ್ವದಲ್ಲಿ ಯಾರಿಗೆ ಯಾರೂ ಗುಲಾಮರಲ್ಲ ಎಂದು ಕಿಡಿಕಾರಿದರು. ಇದನ್ನೂ ಓದಿ: ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ
ಭ್ರಷ್ಟಾಚಾರದ ಬಗ್ಗೆ ಮಾತನಾಡಲು ಕಾಂಗ್ರೆಸ್‍ಗೆ ನೈತಿಕತೆ ಇಲ್ಲ ಎಂಬ ಸಚಿವ ಆರ್. ಅಶೋಕ್ ಹೇಳಿಕೆ ವಿಚಾರವಾಗಿ ಟೀಕಿಸಿದ ಅವರು, ನಮ್ಮ ಸರ್ಕಾರ ಇದ್ದಾಗ ಅಶೋಕ್ ಏನು ಮಾಡುತ್ತಿದ್ದರು. ಆಗ ಬಿಜೆಪಿ ಪ್ರತಿಪಕ್ಷದಲ್ಲಿತ್ತು. ಆಗ ಯಾಕೆ ಭ್ರಷ್ಟಾಚಾರದ ಬಗ್ಗೆ ಮಾತನಾಡಲಿಲ್ಲ. ಆಗ ಅಶೋಕ ತಮ್ನ ಬಾಯಿಗೆ ಕಡುಬು ಹಾಕಿಕೊಂಡಿದ್ದರಾ ಎಂದು ಪ್ರಶ್ನಿಸಿದರು.
ಸುಮ್ಮನೇ ಏನೇನೋ ಮಾತನಾಡುವುದಲ್ಲ. ನಮ್ಮ ಕಾಲದಲ್ಲೂ ಪಿಎಸ್‍ಐ ನೇಮಕಾತಿ ಆಯಿತು. ಬೇರೆ, ಬೇರೆ ನೇಮಕಾತಿಗಳಾದವು. ಆಗೆಲ್ಲ ಇಂತಹ ಭ್ರಷ್ಟಾಚಾರ ನಡೆದಿತ್ತಾ? ಬಿಜೆಪಿಯವರು ಅಧಿಕಾರಕ್ಕೆ ಬಂದ ಮೇಲೆ ಭ್ರಷ್ಟಾಚಾರ, ಅಕ್ರಮಗಳು ಹೆಚ್ಚಾಗಿವೆ. ಪಿಎಸ್‍ಐ ಮರು ಪರೀಕ್ಷೆ ನಡೆಸುವ ಸರ್ಕಾರದ ನಿರ್ಧಾರಕ್ಕೆ ಬೆಂಬಲ ಇದೆ. ಪರೀಕ್ಷೆಯಲ್ಲಿ ಯಾರು ಅಕ್ರಮ ಮಾಡಿದ್ದಾರೆ, ಯಾರು ಸರಿಯಾಗಿ ಬರೆದಿದ್ದಾರೆ ಗೊತ್ತಾಗಲ್ಲ. ತನಿಖೆ ಮುಂದುವರಿದು 20 ಜನರ ಬಂಧನ ಆಗಿದೆ. ಹೀಗಾಗಿ ಮರು ಪರೀಕ್ಷೆ ಮಾಡುವುದು ಸರಿ ಇದೆ. ಆದರೆ ಈಗ ಪರೀಕ್ಷೆ ಬರೆದಿರುವ ಯಾರ ಬಳಿಯೂ ಪರಿಕ್ಷಾ ಶುಲ್ಕ ಪಡೆಯಬಾರದು. ಬಿಜೆಪಿ ದುರಾಡಳಿತದಿಂದ ಇಂತಹ ಘಟನೆಗಳು ಮರುಕಳಿಸುತ್ತಿವೆ. ಗೃಹ ಸಚಿವ ಆರಗ ಜ್ಞಾನೇಂದ್ರ ಒಂದು ಕ್ಷಣವೂ ಪದವಿಯಲ್ಲಿ ಮುಂದುವರಿಯಬಾರದು. ಮುಖ್ಯಮಂತ್ರಿ ಇದರ ಬಗ್ಗೆ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ವಾಗ್ದಾಳಿ ನಡೆಸಿದರು.
ದಿವ್ಯಾ ಬಂಧನವಾದ ಕೂಡಲೇ ಎಕ್ಸಾಂ ರದ್ದು: ಬಂಧಿತೆ ದಿವ್ಯಾ ಸತ್ಯ ಹೇಳಲೇಬೇಕಲ್ಲವೇ. ಬೇರೆ ಯಾರ್ಯಾರು ಅಕ್ರಮದ ಹಿಂದೆ ಇದ್ದಾರೆ, ಯಾರಿಂದ ಪ್ರಶ್ನೆ ಪತ್ರಿಕೆ ಲೀಕ್ ಆಯಿತು ಎಲ್ಲಾ ಗೊತ್ತಾಗಬೇಕಲ್ಲವೇ? ಅದಕ್ಕೆ ತನಿಖೆ ಆಗಲೇಬೇಕು ಎಂದು ತಿಳಿಸಿದರು. ಇದನ್ನೂ ಓದಿ: ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ: ಅಸಾದುದ್ದೀನ್ ಓವೈಸಿ
ಪ್ರಿಯಾಂಕ ಖರ್ಗೆಗೆ ನೋಟೀಸ್ ನೀಡುವ ಅಗತ್ಯವಿರಲಿಲ್ಲ. ನಿಮ್ಮ ಬಳಿ ಏನ್ ದಾಖಲೆ ಇದೆ ಅದನ್ನು ಕೊಡಿ ಅಂತ ಕೇಳಬಹುದಿತ್ತು. ಪ್ರಕರಣ ಸಂಬಂಧ ತನಿಖಾಧಿಕಾರಿಗಳು ಸಾಕ್ಷ್ಯ ಸಂಗ್ರಹಿಸಬೇಕು. ಅದನ್ನು ಬಿಟ್ಟು ನೋಟೀಸ್ ಯಾಕೆ ಕೊಡಬೇಕು ಆಕ್ರೋಶ ಹೊರಹಾಕಿದರು.
ಹಳೇ ಮೈಸೂರು ಭಾಗದ ಮೇಲೆ ಬಿಜೆಪಿ ಕಣ್ಣು: ಪಶ್ಚಿಮ ಬಂಗಾಳದ ಮೇಲೂ ಇದೇ ರೀತಿ ನಿರೀಕ್ಷೆ ಇಟ್ಟುಕೊಂಡಿದ್ದರು, ಆದರೆ ಏನಾಯಿತು? ಇಲ್ಲೂ ಅದೇ ರೀತಿ ಆಗಲಿದೆ. ನನಗೆ ಕ್ಷೇತ್ರ ಇಲ್ಲ ಅಂತಲ್ಲ. ಬಾದಾಮಿ ಇಲ್ವಾ? ಅಲ್ಲಿಂದಲೇ ಮತ್ತೆ ಸ್ಪರ್ಧಿಸಿದರೂ ಸ್ಪರ್ಧಿಸಬಹುದು. ಸುಮಾರು 20 ಕ್ಷೇತ್ರಗಳಲ್ಲಿ ಜನ ಕರೆಯುತ್ತಿದ್ದಾರೆ. ವರುಣ, ಚಾಮುಂಡೇಶ್ವರಿ, ಹುಣಸೂರು, ಹೆಬ್ಬಾಳ, ಚಾಮರಾಜಪೇಟೆ, ಕೋಲಾರ ಎಲ್ಲ ಕಡೆ ಕರೆಯುತ್ತಿದ್ದಾರೆ. ಚುನಾವಣೆಗೆ ತುಂಬಾ ದಿನ ಇದೆ. ಹತ್ತಿರ ಬಂದಾಗ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.
ಹೈದರಾಬಾದ್: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಶುಕ್ರವಾರ ಹೈದರಾಬಾದ್‍ನಲ್ಲಿ ಭಾವನಾತ್ಮಕ ಭಾಷಣದಲ್ಲಿ, ಬಿಜೆಪಿ ಮುಸ್ಲಿಮರ ವಿರುದ್ಧ ಯುದ್ಧ ನಡೆಸುತ್ತಿದೆ ಮತ್ತು ಸಮುದಾಯದ ವಿರುದ್ಧ ದ್ವೇಷವನ್ನು ಸೃಷ್ಟಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಜಮಾತ್-ಉಲ್-ವಿದಾ (ರಂಜಾನ್ ಕೊನೆಯ ಶುಕ್ರವಾರ) ಸಂದರ್ಭದಲ್ಲಿ ಮೆಕ್ಕಾ ಮಸೀದಿಯಲ್ಲಿ ‘ಜಲ್ಸೆ ಯಾಮ್-ಉಲ್-ಕುರಾನ್’ ಉದ್ದೇಶಿಸಿ ಮಾತನಾಡಿದ ಅವರು, ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರವು ದ್ವೇಷದ ಘಟನೆಗಳಿಂದ ದೇಶವನ್ನು ದುರ್ಬಲಗೊಳಿಸುತ್ತಿದೆ ಎಂದು ದೂರಿದ್ದಾರೆ. ಇದನ್ನೂ ಓದಿ: ಬಡ ಮುಸ್ಲಿಮರ ಮೇಲೆ ಬಿಜೆಪಿ ಸಮರ ಸಾರಿದೆ: ಓವೈಸಿ ಕಿಡಿ
ಬಿಜೆಪಿ ಮುಸ್ಲಿಮರ ಮೇಲೆ ತುಂಬಾ ಒತ್ತಡ ಹೇರಲು ಬಯಸುತ್ತದೆ. ಅಂತಿಮವಾಗಿ ಮುಸ್ಲಿಮರ ಕೈಯಲ್ಲಿ ಶಸ್ತ್ರಾಸ್ತ್ರಗಳನ್ನು ಹಿಡಿಸಲು, ಅವರನ್ನು ನೋಯಿಸಲು ಬಯಸುತ್ತದೆ ಎಂದು ಟೀಕಿಸಿದ್ದಾರೆ.
ಬಿಜೆಪಿ ನಮ್ಮ ದೇಶದಲ್ಲಿ ಮುಸ್ಲಿಮರ ವಿರುದ್ಧ ದ್ವೇಷದ ಬಿರುಗಾಳಿಯನ್ನು ಸೃಷ್ಟಿಸಿದೆ. ಮುಸ್ಲಿಮರು ತಾಳ್ಮೆ ಮತ್ತು ಧೈರ್ಯವನ್ನು ಕಳೆದುಕೊಳ್ಳುವುದಿಲ್ಲ. ಸಂವಿಧಾನದೊಳಗೆ ಉಳಿಯುವ ಮೂಲಕ ಈ ದಬ್ಬಾಳಿಕೆಯ ವಿರುದ್ಧ ಹೋರಾಡುತ್ತೇವೆ ಎಂದಿದ್ದಾರೆ. ಇದನ್ನೂ ಓದಿ: ಈ ಸರ್ಕಾರಕ್ಕೆ ಹಿಂಸಾಚಾರ ಬೇಕಾಗಿದೆ: ಅಸಾದುದ್ದೀನ್ ಓವೈಸಿ
ಈ ದ್ವೇಷವನ್ನು ನಿಲ್ಲಿಸುವಂತೆ ನಾವು ಪ್ರಧಾನಿಯನ್ನು ಕೇಳಲು ಬಯಸುತ್ತೇವೆ. ಇದು ದೇಶವನ್ನು ದುರ್ಬಲಗೊಳಿಸುತ್ತಿದೆ. ನಿಮ್ಮ ಪಕ್ಷ ಮತ್ತು ಸರ್ಕಾರವು ಭಾರತೀಯ ಮುಸ್ಲಿಮರ ವಿರುದ್ಧ ಯುದ್ಧ ಘೋಷಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬುಲ್ಡೋಜರ್ ವಿವಾದದ ಬಗ್ಗೆ ಮಾತನಾಡಿ, ಮಧ್ಯಪ್ರದೇಶದ ಖಾರ್ಗೋನ್ ನಗರ ಮತ್ತು ಸೆಂಧ್ವಾದಲ್ಲಿ ಮುಸ್ಲಿಮರ ಮನೆಗಳನ್ನು ನೆಲಸಮ ಮಾಡಲಾಗಿದೆ. ಮುಸ್ಲಿಮರನ್ನು ಬಹಿಷ್ಕರಿಸಲು ಕರೆ ನೀಡಲಾಗಿದೆ. ಅವರ ಅಂಗಡಿಗಳಿಂದ ಖರೀದಿಸಬೇಡಿ ಅಂತಾ ಮುಸ್ಲಿಂ ವರ್ತಕರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ಇತ್ತೀಚೆಗೆ ಹರಿಯಾಣದಲ್ಲಿ, ಮುಸ್ಲಿಂ ವೃದ್ಧರೊಬ್ಬರ ಗಡ್ಡವನ್ನು ಹಿಡಿದು ಥಳಿಸಲಾಗಿದೆ. ಅದೇ ರೀತಿ ಹಸುವನ್ನು ಕೊಂದಿದ್ದಾನೆ ಎಂದು ಆರೋಪಿಸಿ ಮತ್ತೊಬ್ಬನನ್ನು ಮನೆಯಿಂದ ಕರೆದೊಯ್ದು ಥಳಿಸಿದ್ದಾರೆ ಎಂದು ಮುಸ್ಲಿಮರ ಮೇಲಿನ ದೌರ್ಜನ್ಯಕ್ಕೆ ಬೇಸರ ವ್ಯಕ್ತಪಡಿಸಿದ್ದಾರೆ.
ನಮ್ಮ ದೇಶದಲ್ಲಿ ಅನೇಕ ಘಟನೆಗಳು ನಡೆಯುತ್ತಿವೆ ಎಂದು ನಮಗೆ ತಿಳಿದಿದೆ. ಈ ಸಂಬಂಧ ನನಗೆ ಅನೇಕ ಕರೆಗಳು ಬರುತ್ತಿವೆ. ಜನರು ನನಗೆ ಹೇಳುತ್ತಾರೆ, ಅಸಾದುದ್ದೀನ್ ಅವರೇ ನಮ್ಮ ಮನೆಗಳು ಮತ್ತು ಅಂಗಡಿಗಳನ್ನು ಕೆಡವಲಾಗುತ್ತಿದೆ. ನಾವು ನಾಶವಾಗುತ್ತಿದ್ದೇವೆ ಅಂತ ಹೇಳಿ ಅಳಲು ತೊಡಿಕೊಳ್ಳುತ್ತಿದ್ದಾರೆ. ಅದಕ್ಕೆ ನಾನು ಪ್ರತಿಕ್ರಿಯಿಸಿ, ಭಯಪಡುವ ಅಗತ್ಯವಿಲ್ಲ, ಧೈರ್ಯದಿಂದಿರಿ. ಮುಸ್ಲಿಮರು ಭರವಸೆ ಮತ್ತು ಧೈರ್ಯವನ್ನು ಕಳೆದುಕೊಳ್ಳಬೇಡಿ ಎಂದು ತಿಳಿಸಿದ್ದೇನೆ ಎಂದು ಮಾತನಾಡಿದ್ದಾರೆ.