Tag: muslims

  • ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವ್ಯಾಪಾರಿಗಳಿಗೆ ನಿಷೇಧ: ನಿಯಮ ಏನಿದೆ?

    ಹಿಂದೂ ಜಾತ್ರೆಗಳಲ್ಲಿ ಮುಸ್ಲಿಮ್‌ ವ್ಯಾಪಾರಿಗಳಿಗೆ ನಿಷೇಧ: ನಿಯಮ ಏನಿದೆ?

    ಬೆಂಗಳೂರು: ಹಿಜಬ್ ಕುರಿತಂತೆ ಹೈಕೋರ್ಟ್‌ ತೀರ್ಪು ವಿರೋಧಿಸಿದವರಿಗೆ ಬಹಿಷ್ಕಾರದ ಬಿಸಿ ತಾಗಿದೆ. ಹಿಂದೂ ದೇವರ ಜಾತ್ರೆಗಳಲ್ಲಿ ಮುಸ್ಲಿಮ್ ವ್ಯಾಪಾರಿಗಳಿಗೆ ಅವಕಾಶ ನೀಡದಿರುವ ಮಟ್ಟಕ್ಕೆ ಪರಿಸ್ಥಿತಿ ಬಿಗಡಾಯಿಸಿದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆರಂಭವಾದ ಈ ಬಹಿಷ್ಕಾರದ ಬಿಸಿ ಈಗ ನಿಧಾನವಾಗಿ ರಾಜ್ಯದೆಲ್ಲೆಡೆ ವ್ಯಾಪಿಸತೊಡಗಿದೆ.

    ಮುಸ್ಲಿಮ್ ಸಂಘಟನೆಗಳು ಬಂದ್ ನಡೆಸಿದ್ದಕ್ಕೆ ವಿರುದ್ಧವಾಗಿ, ಮುಸ್ಲಿಮ್ ವ್ಯಾಪಾರಿಗಳನ್ನು ಬಹಿಷ್ಕರಿಸಲು ಹಿಂದೂ ಸಂಘಟನೆಗಳು ಕರೆ ನೀಡಿವೆ. ಒಂದು ದಿನ ಬಂದ್‌ ಮಾಡುವುದಲ್ಲ ಸುಪ್ರೀಂಕೋರ್ಟ್ ತೀರ್ಪು ಬರುವ ತನಕ ಅವರು ಬಂದ್ ಮಾಡಲಿ ಎನ್ನುತ್ತಿದ್ದಾರೆ. ಮೊನ್ನೆ ಬಂದ್‌ ಮಾಡಿದ ಸಮಯದಲ್ಲಿ ಮುಸ್ಲಿಂ ಕಾಂಪ್ಲೆಕ್ಸ್‌ನಲ್ಲಿದ್ದ ಹಿಂದೂ ಜನರ ಅಂಗಡಿಗಳನ್ನು ಬಲವಂತವಾಗಿ ಬಂದ್‌ ಮಾಡಿಸಿದ್ದಾರೆ. ಈ ರೀತಿ ಬಲವಂತದ ಬಂದ್‌ ಮಾಡಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿವೆ.

    ಹಿಂದೂ ಸಂಘಟನೆಗಳ ಒತ್ತಡಕ್ಕೆ ಮಣಿದ ಉಡುಪಿಯ ಕಾಪುವಿನ ಮೂರು ಮಾರಿಗುಡಿ ಆಡಳಿತ ಮಂಡಳಿ, ಜಾತ್ರೆಗೆ ಅಂಗಡಿ ಹಾಕಲು ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಿಲ್ಲ. ಇದೀಗ ಇದು ಸರಿಯಲ್ಲ ಎಂದ ಸಿದ್ದರಾಮಯ್ಯ ವಿರುದ್ಧವೂ ಹಿಂದೂಪರ ಸಂಘಟನೆಗಳು ಆಕ್ರೋಶ ಹೊರಹಾಕಿವೆ. ಮುಸಲ್ಮಾನರು ಬಹಿಷ್ಕಾರ ಹಾಕಿದಾಗ ಸಿದ್ದರಾಮಯ್ಯ ಬಾಯಿ ತೆರೆದಿರಲಿಲ್ಲ ಏಕೆ ಎಂದು ಪ್ರಶ್ನಿಸಿವೆ. ಇದನ್ನೂ ಓದಿ: ಎಚ್ಚೆತ್ತುಕೊಳ್ಳದಿದ್ದರೆ ನಮಗೂ ಕಾಶ್ಮೀರಿ ಪಂಡಿತರದ್ದೇ ಪರಿಸ್ಥಿತಿ ಬರಬಹುದು – ಪೇಜಾವರ ಶ್ರೀ ಎಚ್ಚರಿಕೆ

    ಹಿಜಬ್ ಮತ್ತಿತರ ಗೊಂದಲದ ವಿಚಾರದಲ್ಲಿ ನಾವು ಇಲ್ಲ. ದಯವಿಟ್ಟು ನಮಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ ಎಂದು ಮುಸ್ಲಿಮ್ ವ್ಯಾಪಾರಿಗಳು ಮನವಿ ಮಾಡಿಕೊಂಡಿದ್ದಾರೆ. ಕಳೆದ ವರ್ಷದ ಅಕ್ಟೋಬರ್ ತಿಂಗಳಲ್ಲಿ ಗಂಗೊಳ್ಳಿಯಲ್ಲಾದ ಗೋಹತ್ಯೆ ವಿರೋಧಿ ಪ್ರತಿಭಟನೆ ಬಳಿಕ ಮುಸ್ಲಿಮರು, ಹಿಂದೂ ಮಹಿಳೆಯರಿಂದ ಮೀನು ಖರೀದಿ ನಿಲ್ಲಿಸಿದ್ದರು. ಅಲ್ಲಿಂದ ಶುರುವಾದ ಕೋಮು ರಾಜಕೀಯ ಈಗ ಇಲ್ಲಿಗೆ ಬಂದು ನಿಂತಿದೆ.

    ದಕ್ಷಿಣ ಕನ್ನಡದ ಮಂಗಳಾದೇವಿ, ಬಪ್ಪನಾಡು ದುರ್ಗಾಪರಮೇಶ್ವರಿ ದೇವಸ್ಥಾನಗಳ ಜಾತ್ರೋತ್ಸವಗಳಲ್ಲೂ ಹಿಂದೂಯೇತರ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂಬ ತೀರ್ಮಾನಕ್ಕೆ ಬರಲಾಗಿದೆ. ದೇವಸ್ಥಾನಗಳ ಮುಂಭಾಗ ಬ್ಯಾನರ್ ಸಹ ಅಳವಡಿಕೆ ಮಾಡಲಾಗಿದೆ. ಇದನ್ನೂ ಓದಿ: ಜಾತ್ರೆ ಉತ್ಸವ ನಂಬಿರುವ ನಮಗೆ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಿ: ಆರಿಫ್

    ನಿಯಮ ಏನಿದೆ?
    ಮುಸ್ಲಿಮರಿಗೆ ಅಂಗಡಿ ಹಾಕಲು ಅವಕಾಶ ನಿರಾಕರಿಸುತ್ತಿರುವ ದೇಗುಲದ ಆಡಳಿತ ಮಂಡಳಿಗಳು, 2002ರಲ್ಲಿ ರೂಪಿಸಲಾದ ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಯ ನಿಯಮವನ್ನೇ ಅಸ್ತ್ರವನ್ನಾಗಿ ಮಾಡಿಕೊಂಡಿವೆ. ಧಾರ್ಮಿಕ ದತ್ತಿ ಇಲಾಖೆಯ ನಿಯಮಾವಳಿ ಪುಸ್ತಕದ ಪುಟ ಸಂಖ್ಯೆ 446ರಲ್ಲಿರುವ 12 ನಿಯಮದಲ್ಲಿ, ಸಂಸ್ಥೆಯ ಸಮೀಪದ ಜಮೀನು ಕಟ್ಟಡ ಮತ್ತು ನಿವೇಶನಗಳೂ ಸೇರಿದಂತೆ ಯಾವುದೇ ಸವತ್ತನ್ನು ಹಿಂದೂಗಳಲ್ಲದವರಿಗೆ ಗುತ್ತಿಗೆ ನೀಡತಕ್ಕದಲ್ಲ ಎಂದು ಉಲ್ಲೇಖಿಸಲಾಗಿದೆ.

    ಇದೀಗ ಇದೇ ನಿಯಮವನ್ನು ನಾವು ಜಾರಿ ಮಾಡಿದ್ದೇವೆ ಎಂದು ಕಾಪು ಮಾರಿಗುಡಿ ಆಡಳಿತ ಮಂಡಳಿ ಹೇಳುತ್ತಿದೆ. ಹಿಂದೂ ಸಂಘಟನೆಗಳಿಗೂ ಈ ನಿಯಮವನ್ನು ಮುಂದಿಟ್ಟುಕೊಂಡು ದೇವಾಲಯದ ಆಡಳಿತ ಮಂಡಳಿ ಜೊತೆ ಮಾತುಕತೆ ನಡೆಸಿ ಹಿಂದೂಯೇತರ ವ್ಯಕ್ತಿಗಳಿಗೆ ಅನುಮತಿ ನೀಡದಂತೆ ಮನವಿ ಮಾಡುತ್ತಿದೆ.

    ಈ ನಿಯಮ ಜಾರಿಯಾಗಿದ್ದು 2002ರಲ್ಲಿ. ಈ ವೇಳೆ ರಾಜ್ಯದಲ್ಲಿ ಅಸ್ತಿತ್ವದಲ್ಲಿ ಇದ್ದಿದ್ದು ಎಸ್‍ಎಂ ಕೃಷ್ಣ ನೇತೃತ್ವದ ಕಾಂಗ್ರೆಸ್ ಸರ್ಕಾರ. ಇಂದು ಅದೇ ಕಾಂಗ್ರೆಸ್ಸಿಗರು ಇದು ಸರಿಯಲ್ಲ ಎನ್ನುತ್ತಿದ್ದಾರೆ.

    ಹಿಜಬ್‌ ವಿವಾದ ಸೃಷ್ಟಿಯಾಗುವರೆಗೂ ಈ ನಿಯಮ ಇದೆ ಎನ್ನುವದು ಬಹುತೇಕ ಮಂದಿಗೆ ತಿಳಿದಿರಲಿಲ್ಲ. ಅಷ್ಟೇ ಅಲ್ಲದೇ ಕರಾವಳಿ ಭಾಗದಲ್ಲಿ ಹಿಂದೂ ದೇವಾಲಯಗಳಲ್ಲಿ ಇಲ್ಲಿಯವರೆಗೂ ಮುಸ್ಲಿಮ್‌ ವ್ಯಾಪಾರಿಗಳು ಅಂಗಡಿಗಳನ್ನು ತೆರೆಯುತ್ತಿದ್ದರು. ಆದರೆ ಹಿಜಬ್‌ ವಿವಾದ, ಕರ್ನಾಟಕ ಬಂದ್‌ ಬಳಿ ಈ ನಿಯಮ ಮುನ್ನೆಲೆಗೆ ಬಂದಿದೆ.

  • ಅಲ್ಪಸಂಖ್ಯಾತರನ್ನು ರಕ್ಷಿಸುವುದು ಮುಸ್ಲಿಮರ ಕರ್ತವ್ಯ: ಅಸ್ಸಾಂ ಸಿಎಂ

    ಅಲ್ಪಸಂಖ್ಯಾತರನ್ನು ರಕ್ಷಿಸುವುದು ಮುಸ್ಲಿಮರ ಕರ್ತವ್ಯ: ಅಸ್ಸಾಂ ಸಿಎಂ

    ಡಿಸ್ಪುರ್:  ಅಸ್ಸಾಂನ ಜನಸಂಖ್ಯೆಯಲ್ಲಿ ಶೇ.35 ರಷ್ಟು ಮುಸ್ಲಿಮರಿದ್ದು, ಇನ್ನು ಮುಂದೆ ಅವರನ್ನು ಅಲ್ಪಸಂಖ್ಯಾತರು ಎಂದು ಪರಿಗಣಿಸಲಾಗುವುದಿಲ್ಲ ಎಂದು ಎಂದು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ತಿಳಿಸಿದರು.

    ಅಸ್ಸಾಂ ವಿಧಾನಸಭೆಯ ಬಜೆಟ್ ಅಧಿವೇಶನದಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆ ಮಾಡುತ್ತಿರುವಾಗ ಶರ್ಮಾ ಅವರು, ಮುಸ್ಲಿಂ ಸಮುದಾಯದ ಜನರು ವಿರೋಧ ಪಕ್ಷದ ನಾಯಕರು, ಶಾಸಕರು, ಸಮಾನ ಅವಕಾಶ ಮತ್ತು ಅಧಿಕಾರವನ್ನು ಹೊಂದಿದ್ದಾರೆ. ಅದನ್ನು ಖಚಿತಪಡಿಸಿಕೊಳ್ಳುವುದು ಅವರ ಕರ್ತವ್ಯವಾಗಿದೆ ಎಂದು ಮಾತನ್ನು ಆರಂಭಿಸಿದರು. ಇದನ್ನೂ ಓದಿ: ದಿ ಕಾಶ್ಮೀರ್ ಫೈಲ್ಸ್’ ಸಿನಿಮಾ ವೀಕ್ಷಿಸಲು ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ: ಅಸ್ಸಾಂ ಸಿಎಂ

    ಅಧಿಕಾರವು ಜವಾಬ್ದಾರಿಯೊಂದಿಗೆ ಬರುತ್ತೆ. ಮುಸ್ಲಿಮರು ಅಸ್ಸಾಂನ ಜನಸಂಖ್ಯೆ ಶೇ.35 ರಷ್ಟಿದ್ದಾರೆ. ಇಲ್ಲಿನ ಅಲ್ಪಸಂಖ್ಯಾತರನ್ನು ರಕ್ಷಿಸುವುದು ಅವರ ಕರ್ತವ್ಯ. ಅಸ್ಸಾಮಿಗರು ಭಯದಲ್ಲಿದ್ದಾರೆ. ತಮ್ಮ ಸಂಸ್ಕೃತಿ ಮತ್ತು ನಾಗರಿಕತೆ ರಕ್ಷಣೆಯಾಗುತ್ತ ಎಂಬ ಭಯವಿದೆ. ಸಾಮರಸ್ಯ ಎರಡು ಧರ್ಮಗಳ ನಡುವೆ ತುಂಬಾ ಮುಖ್ಯ. ಸಂಕರಿ ಸಂಸ್ಕೃತಿ, ಸತ್ರಿಯಾ ಸಂಸ್ಕೃತಿ ರಕ್ಷಣೆ ಬಗ್ಗೆ ಮುಸ್ಲಿಮರು ಮಾತನಾಡಲಿ. ಆಗ ಎಲ್ಲರ ನಡುವೆ ಸೌಹಾರ್ದತೆ ಇರುತ್ತದೆ. ಹತ್ತು ವರ್ಷಗಳ ಹಿಂದೆ, ನಾವು ಅಲ್ಪಸಂಖ್ಯಾತರಾಗಿರಲಿಲ್ಲ ಆದರೆ ಈಗ ನಾವಿದ್ದೇವೆ ಎಂದು ತಿಳಿಸಿದರು.

    ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಅಸ್ಸಾಂ ಜನರೊಂದಿಗೆ ಸಮೀಕರಿಸಿ ಮಾತನಾಡಿದ ಅವರು, ಅಸ್ಸಾಮಿಗಳು ಕಾಶ್ಮೀರಿ ಪಂಡಿತರಂತೆಯೇ ಅದೇ ಭವಿಷ್ಯವನ್ನು ಎದುರಿಸುತ್ತಾರೆಯೇ ಎಂದು ಜನರು ನನ್ನನ್ನು ಕೇಳುತ್ತಾರೆ. ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾದಲ್ಲಿ ತೋರಿಸಿದಂತೆ ಎಲ್ಲಿ ನಮ್ಮ ಪರಿಸ್ಥಿತಿಯಾಗುತ್ತೆ ಎಂದು ಕೆಲವರು ಭಯಪಟ್ಟುಕೊಂಡಿದ್ದಾರೆ. ಈ ಭಯವನ್ನು ಹೋಗಲಾಡಿಸುವುದು ಮುಸ್ಲಿಮರ ಕರ್ತವ್ಯ. ಮುಸ್ಲಿಮರು ಬಹುಸಂಖ್ಯಾತರಂತೆ ವರ್ತಿಸಬೇಕು ಮತ್ತು ಇಲ್ಲಿ ಕಾಶ್ಮೀರದ ರೀತಿ ಪುನರಾವರ್ತನೆಯಾಗುವುದಿಲ್ಲ ಎಂಬ ಭರವಸೆಯನ್ನು ನೀಡಬೇಕು ಎಂದು ಮನವಿ ಮಾಡಿಕೊಂಡರು. ಇದನ್ನೂ ಓದಿ: ಹಿಜಬ್ ಪರ ವಾದಿಗಳ ಬೆದರಿಕೆಗೆ ಸರ್ಕಾರ ಮಣಿಯದು: ಅಶ್ವತ್ಥನಾರಾಯಣ

  • ಹಿಜಬ್ ನೆಪವೊಡ್ಡಿ  ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗ್ತಿದೆ: ಮುಫ್ತಿ

    ಹಿಜಬ್ ನೆಪವೊಡ್ಡಿ ಮುಸ್ಲಿಂ ಹೆಣ್ಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗ್ತಿದೆ: ಮುಫ್ತಿ

    ಬೆಂಗಳೂರು: ಬೇಟಿ ಬಚಾವೋ, ಬೇಟಿ ಪಡಾವೋ ಎನ್ನುವುದು ಭ್ರಮಾತ್ಮಕ ಘೋಷಣೆಯಾಗಿ ಉಳಿದಿದೆ. ಹಿಜಬ್ ನೆಪವೊಡ್ಡಿ ಮುಸ್ಲಿಂ ಹೆಣ್ಣುಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗುತ್ತಿದೆ ಎಂದು ಕರಾವಳಿಯಲ್ಲಿ ಎದ್ದಿರುವ ಹಿಜಬ್ ವಿವಾದಕ್ಕೆ ಜಮ್ಮುಕಾಶ್ಮೀರದ ಮಾಜಿ ಸಿಎಂ ಮೆಹಬೂಬಾ ಮುಫ್ತಿ ಟ್ವಿಟ್ಟರ್‌ನಲ್ಲಿ ಟ್ವೀಟ್ ಮಾಡಿ ಕಿಡಿಕಾರಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?:
    ಭಾರತದಲ್ಲಿ ಭೇಟಿ ಬಚಾವೋ, ಭೇಟಿ ಪಡಾವೋ ಎನ್ನುವುದು ಭ್ರಮಾತ್ಮಕ ಘೋಷಣೆಯಾಗಿ ಉಳಿದಿದೆ. ಹಿಜಬ್ ನೆಪವೊಡ್ಡಿ ಮುಸ್ಲಿಮ್ ಹೆಣ್ಮಕ್ಕಳ ಶಿಕ್ಷಣಕ್ಕೆ ತಡೆ ಒಡ್ಡಲಾಗುತ್ತಿದೆ. ಗಾಂಧಿ ಭಾರತವನ್ನು ಗೋಡ್ಸೆ ಭಾರತವನ್ನಾಗಿ ಪರಿವರ್ತಿಸುವ ಕೆಲಸ ಆಗುತ್ತಿದೆ ಎಂದು ಬರೆದುಕೊಂಡು ಹಿಜಬ್ ವಿವಾದದ ವೀಡಿಯೋ ಒಂದನ್ನು ಮೆಹಬೂಬಾ ಮುಫ್ತಿ ಪೋಸ್ಟ್ ಮಾಡಿದ್ದಾರೆ. ಇದನ್ನೂ ಓದಿ: ಹಿಜಬ್ ವಿವಾದ- ಹೈಕೋರ್ಟ್ ತೀರ್ಪಿನ ನಂತರ ಕ್ರಮ: ಬಿಸಿ ನಾಗೇಶ್

     

    ಇತ್ತ ಕರಾವಳಿಯಲ್ಲಿ ಹಿಜಬ್ ವಿವಾದ ತೀವ್ರ ಸ್ವರೂಪ ಪಡೆದಿದೆ. ಕಳೆದೊಂದು ತಿಂಗಳಿಂದ ಈ ವಿವಾದ ಹೆಚ್ಚಾಗುತ್ತಿದ್ದರೂ, ರಾಜ್ಯ ಸರ್ಕಾರ ಮಾತ್ರ ಈವರೆಗೂ ಖಡಕ್ ನಿಲುವು ತಳೆದಂತೆ ಕಂಡುಬರ್ತಿಲ್ಲ. ಉಡುಪಿ ಕಾಲೇಜಿನ ಆಡಳಿತ ಮಂಡಳಿ, ಸಮವಸ್ತ್ರ ಎಂದರೇನು ಎಂದು ಪ್ರಶ್ನೆ ಕೇಳಿ ಪತ್ರ ಬರೆದು ಪಿಯು ಬೋರ್ಡ್ ನಿಂದ ಉತ್ತರ ಬಯಸಿದೆ. ಈ ಬಗ್ಗೆ ಉತ್ತರಿಸಿದ ಪಿಯು ಬೋರ್ಡ್ ಈ ಬಗ್ಗೆ ಸರ್ಕಾರ ಸಮಿತಿಯೊಂದನ್ನು ರಚಿಸಿ ತೀರ್ಮಾನ ಕೈಗೊಳ್ಳಲಿದೆ. ಅಲ್ಲಿಯವರೆಗೆ ಹಿಜಬ್ ತೊಟ್ಟು ಕಾಲೇಜಿಗೆ ಬರಲು ಅವಕಾಶ ಇಲ್ಲ. ಯಥಾಸ್ಥಿತಿ ಕಾಪಾಡಿ ಎಂದು ಹೇಳಿದೆ. ಪಿಯು ಬೋರ್ಡ್ ಈ ಉತ್ತರ ನೀಡಿ ಎರಡು ವಾರ ಕಳೆದಿದೆ. ಆದ್ರೆ ಈವರೆಗೂ ಸಮಿತಿ ರಚನೆ ಆಗಿಲ್ಲ. ಈ ನಡುವೆ  ಹಿಜಬ್ ವಿವಾದದ ಪ್ರಕರಣವು ಹೈಕೋಟ್‍ನಲ್ಲಿದೆ. ತೀರ್ಪು ಬಂದ ಬಳಿಕ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.  ಇದನ್ನೂ ಓದಿ: ನಿಮಗೆ ಪ್ರವೇಶವಿಲ್ಲ – ಹಿಜಬ್ ಧರಿಸಿದ್ದ ವಿದ್ಯಾರ್ಥಿನಿಯರನ್ನು ಗೇಟ್‍ನಲ್ಲೇ ತಡೆದ ಪ್ರಿನ್ಸಿಪಾಲ್

  • ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರುವುದಿಲ್ಲ:  ಓವೈಸಿ

    ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರುವುದಿಲ್ಲ:  ಓವೈಸಿ

    ಲಕ್ನೋ: ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರಲು ಸಾಧ್ಯವಿಲ್ಲ ಎಂದು ಆಲ್ ಇಂಡಿಯಾ ಮಜ್ಲಿಸ್-ಇ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಸಂಸದ ಅಸಾದುದ್ದೀನ್ ಓವೈಸಿ ಹೇಳಿದ್ದಾರೆ.

    ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೂ ಕೆಲವೇ ತಿಂಗಳಷ್ಟೇ ಬಾಕಿಯಿದ್ದು, ಎಲ್ಲಾ ರಾಜಕೀಯ ಪಕ್ಷಗಳು ರ‍್ಯಾಲಿ ವೇಳೆ ವಾಕ್ಚಾತುರ್ಯ, ಯೋಜನೆಗಳ ಬಗ್ಗೆ ಮತ್ತು ಪ್ರತಿಸ್ಪರ್ಧಿಗಳನ್ನು ಕೆಣಕುವ ಮೂಲಕ ಮತದಾರರನ್ನು ತಮ್ಮ ಸೆಳೆಯಲು ಪ್ರಯತ್ನಿಸುತ್ತಿವೆ. ಇದನ್ನೂ ಓದಿ: 18ನೇ ವಯಸ್ಸಿಗೆ ಪ್ರಧಾನಿಯನ್ನೇ ಆಯ್ಕೆ ಮಾಡುವ ಹೆಣ್ಣಿಗೆ ಬಾಳ ಸಂಗಾತಿ ಹೊಂದುವ ಹಕ್ಕು ಯಾಕಿಲ್ಲ: ಓವೈಸಿ ಪ್ರಶ್ನೆ

     

    ಈ ಮಧ್ಯೆ ಅಸಾದುದ್ದೀನ್ ಓವೈಸಿ ಅವರು ಸಹ ಉತ್ತರ ಪ್ರದೇಶದ ವಿವಿಧ ಭಾಗಗಳಲ್ಲಿ ಭರ್ಜರಿ ಪ್ರಚಾರ ನಡೆಸುತ್ತಿದ್ದಾರೆ. ಅಲ್ಲದೇ ರಾಜ್ಯದಲ್ಲಿ ಮುಸ್ಲಿಮರಿಗೆ ತಮ್ಮದೇ ಆದ ರಾಜಕೀಯ ಶಕ್ತಿಬೇಕಾಗಿದೆ. ನಾಯಕತ್ವವನ್ನು ಗೌರವಿಸಬೇಕು ಮತ್ತು ತಾರತಮ್ಯ ಮಾಡಬಾರದು ಎಂದು ಸ್ಪಷ್ಟವಾದ ಸಂದೇಶವನ್ನು ರವಾನಿಸಿದ್ದಾರೆ.

    ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಬಿಜೆಪಿ ಆಡಳಿತದಲ್ಲಿ ಮುಸ್ಲಿಮರು ಎಂದಿಗೂ ಸುರಕ್ಷಿತರಾಗಿರಲು ಸಾಧ್ಯವಿಲ್ಲ. ಬಿಜೆಪಿಯ ಕಾರಣದಿಂದಾಗಿ ಮುಸ್ಲಿಮರನ್ನು ಅನುಮಾನದಿಂದ ನೋಡಲಾಗುತ್ತದೆ. ಬಿಜೆಪಿಯು ಮುಸ್ಲಿಂ ಸಮುದಾಯದ ವ್ಯವಹಾರಗಳನ್ನು ನಾಶಪಡಿಸುತ್ತಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಎಲ್ಲಿದೆ. ಜ್ಞಾನವಾಪಿ ಮಸೀದಿ ಮತ್ತು ಅಜ್ಮೀರ್ ದರ್ಗಾವನ್ನು ಸರ್ಕಾರ ಏಕೆ ಅಭಿವೃದ್ಧಿಪಡಿಸುತ್ತಿಲ್ಲ? ಎಂದು ಪ್ರಶ್ನಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಹೆಣ್ಣುಮಕ್ಕಳ ವಿವಾಹದ ವಯಸ್ಸು 18ರಿಂದ 21ಕ್ಕೆ ಏರಿಕೆ – ಕೇಂದ್ರ ಸಂಪುಟ ಅನುಮೋದನೆ

    ಈ ಮುನ್ನ ಉತ್ತರ ಪ್ರದೇಶದ ಮೀರತ್‍ನ ಸಾರ್ವಜನಿಕ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು, ಮುಸ್ಲಿಮರು ಯಾವಾಗ ಎಚ್ಚುತ್ತುಕೊಳ್ಳುತ್ತೀರಾ ಎಂದು ನಾನು ನಿಮ್ಮೆಲ್ಲರನ್ನು ಕೇಳಲು ಬಯಸುತ್ತೇನೆ. ಉತ್ತರ ಪ್ರದೇಶದಲ್ಲಿರುವ ಶೇಕಡ 19ರಷ್ಟು ಮುಸ್ಲಿಮರಿಗೆ ಗೌರವ, ನಮ್ಮ ಯುವಕರಿಗೆ ಶಿಕ್ಷಣ, ಸಮಾನ ಭಾಗವಹಿಸುವಿಕೆ ಮತ್ತು ಅವಕಾಶಗಳನ್ನು ಪಡೆಯಲು ತಮ್ಮದೇ ಆದ ರಾಜಕೀಯ ಶಕ್ತಿ, ನಾಯಕತ್ವಬೇಕು ಎಂದು ನಾನು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತಿದ್ದೇನೆ ಎಂದು ಹೇಳಿದ್ದರು.

  • ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ – ಬಿಜೆಪಿ ನಾಯಕನ ವಿರುದ್ಧ FIR

    ಮುಸ್ಲಿಂ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ – ಬಿಜೆಪಿ ನಾಯಕನ ವಿರುದ್ಧ FIR

    ಶ್ರೀನಗರ: ಕಾಶ್ಮೀರಿ ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಡಿ ಬಿಜೆಪಿ ಹಿರಿಯ ನಾಯಕ ಮತ್ತು ಮಾಜಿ ಎಂಎಲ್‍ಸಿ ವಿಕ್ರಮ್ ರಾಂಧವಾ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಪೊಲೀಸರು ಎಫ್‍ಐಆರ್ ದಾಖಲಿಸಿದ್ದಾರೆ.

    ವಿಕ್ರಮ್ ರಾಂಧವಾ ಅವರು ಮುಸ್ಲಿಮರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ವೀಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ವೀಡಿಯೋ ವೈರಲ್ ಆದ ಬಳಿಕ ವಕೀಲ ಮುಜಾಫರ್ ಅಲಿ ಶಾ ಅವರ ಲಿಖಿತ ದೂರಿನ ಆಧಾರದ ಮೇಲೆ ಬಹು ಕೋಟೆ ಪೊಲೀಸ್ ಠಾಣೆಯಲ್ಲಿ ವಿಕ್ರಂ ರಾಂಧವಾ ವಿರುದ್ಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಸಿಎಂ ತವರು ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆ – ಕಾಂಗ್ರೆಸ್‌ ಮುನ್ನಡೆ

    ಟಿ-20 ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ತಂಡ ಜಯಗಳಿಸಿದ ನಂತರ ಕಾಶ್ಮೀರದ ಹಲವು ಭಾಗಗಳಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಹೀಗಾಗಿ ಈ ಕುರಿತಂತೆ ವಿಕ್ರಮ್ ರಾಂಧವ ಅವರು ಕಾಮೆಂಟ್ ಮಾಡಿದ್ದರು. ಇದನ್ನೂ ಓದಿ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್‌ ದೇಶ್‌ಮುಖ್‌ ಅರೆಸ್ಟ್‌

    ಇದೀಗ ವಿಕ್ರಮ್ ರಾಂಧವ ಅವರ ವಿರುದ್ಧ ಐಪಿಸಿ ಸೆಕ್ಷನ್ 295-ಎ (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವ ಉದ್ದೇಶದಿಂದ) ಮತ್ತು 505 (ಸಾರ್ವಜನಿಕ ಕಿಡಿಗೇಡಿತನಕ್ಕೆ ಕೇಡಿಗೆ ಕಾರಣವಾಗುವ ಹೇಳಿಕೆ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ.

    ಬಿಜೆಪಿಯ ಜಮ್ಮು-ಕಾಶ್ಮೀರ ಘಟಕವು ವಿಕ್ರಮ್ ರಾಂಧವಾ ಅವರಿಗೆ ಶೋಕಾಸ್ ನೋಟಿಸ್ ನೀಡಿದ್ದು, ಈ ಕುರಿತಂತೆ ಪಕ್ಷದ ಮುಖ್ಯಸ್ಥ ರವೀಂದರ್ ರೈನಾ ಅವರು, ಎಲ್ಲಾ ನಂಬಿಕೆಗಳನ್ನು ಗೌರವಿಸುವ ಪಕ್ಷದ ಮೂಲ ತತ್ವಗಳಿಗೆ ವಿಕ್ರಮ್ ರಾಂಧವಾ ಅವರ ಹೇಳಿಕೆ ವಿರುದ್ಧವಾಗಿವೆ. ವೀಡಿಯೋ ಪಕ್ಷದ ಗಮನಕ್ಕೆ ಬಂದಿದ್ದು, ಅಂತಹ ಭಾಷೆಯನ್ನು ಸಹಿಸಲಾಗದ ಕಾರಣ ಶಿಸ್ತು ಸಮಿತಿಯು ತಕ್ಷಣವೇ ಅವರಿಗೆ ಶೋಕಾಸ್ ನೋಟಿಸ್ ನೀಡಿದೆ. ಇದನ್ನೂ ಓದಿ: ಅಶ್ಲೀಲ ಸಿನಿಮಾಗಳ ವಿವಾದದ ಬಳಿಕ ಟ್ವಿಟ್ಟರ್, ಇನ್‍ಸ್ಟಾ ಡಿಲೀಟ್ ಮಾಡಿದ ರಾಜ್ ಕುಂದ್ರಾ

    ಶೋಕಾಸ್ ನೋಟಿಸ್‍ನಲ್ಲಿ ವಿಕ್ರಮ್ ರಾಂಧವಾ ಅವರು ನೀಡಿರುವ ಹೇಳಿಕೆಗಳಿಗೆ 48 ಗಂಟೆಗಳ ಒಳಗೆ ವಿವರಣೆ ನೀಡುವಂತೆ ತಿಳಿಸಲಾಗಿದ್ದು, “ನೀವು ನಿರ್ದಿಷ್ಟ ಸಮುದಾಯದ ವಿರುದ್ಧ ಸಂಪೂರ್ಣ ಅಜಾಗರೂಕ ಮತ್ತು ದ್ವೇಷವನ್ನು ಉತ್ತೇಜಿಸುವ ಟೀಕೆಗಳನ್ನು ಮಾಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದು ಪಕ್ಷಕ್ಕೆ ಸ್ವೀಕಾರಾರ್ಹವಲ್ಲ. ಇದು ಪಕ್ಷಕ್ಕೆ ಅಪಖ್ಯಾತಿ ಮತ್ತು ಮುಜುಗರವನ್ನುಂಟು ಮಾಡಿದೆ” ಹೀಗಾಗಿ ವಿಕ್ರಮ್ ರಾಂಧವಾ ಅವರು ಸಾರ್ವಜನಿಕವಾಗಿ ಕ್ಷಮೆಯಾಚಿಸುವಂತೆ ನೋಟಿಸ್‍ನಲ್ಲಿ ತಿಳಿಸಲಾಗಿದೆ.

     

  • ವಲಸಿಗ ಮುಸ್ಲಿಮರು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕು – ಅಸ್ಸಾಂ ಸಿಎಂ

    ವಲಸಿಗ ಮುಸ್ಲಿಮರು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕು – ಅಸ್ಸಾಂ ಸಿಎಂ

    ದಿಸ್ಪುರ: ವಲಸಿಗ ಅಲ್ಪಸಂಖ್ಯಾತರು ಕುಟುಂಬ ಯೋಜನೆ ನೀತಿಯನ್ನು ಅಳವಡಿಸಿಕೊಳ್ಳಬೇಕೆಂದು ಅಸ್ಸಾಂ ಮುಖ್ಯಮಂತ್ರಿ ಹಿಮಾಂತ ಬಿಸ್ವಾ ಶರ್ಮಾ ಸಲಹೆ ನೀಡಿದ್ದಾರೆ.

    ಅಸ್ಸಾಂ ಸರ್ಕಾರಕ್ಕೆ 1 ತಿಂಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜನಸಂಖ್ಯೆ ಹೆಚ್ಚಳದಿಂದಾಗಿ ಅಲ್ಪಸಂಖ್ಯಾತರಲ್ಲಿ ಬಡತನ ಹೆಚ್ಚಾಗುತ್ತಿದೆ. ಹೀಗಾಗಿ ಬಡತನವನ್ನು ಕಡಿಮೆ ಮಾಡಲು ಸಮುದಾಯದ ಜನ ಮುಂದೆ ಬರಬೇಕು. ಈ ನಿಟ್ಟಿನಲ್ಲಿ ಸರ್ಕಾರಕ್ಕೆ ಬೆಂಬಲ ನೀಡಬೇಕು ಎಂದು ಮನವಿ ಮಾಡಿದ್ದಾರೆ.

    ನಾವು ಈಗಾಗಲೇ ಕಳೆದ ವಿಧಾನಸಭೆ ಅಧಿವೇಶನದಲ್ಲಿ ಜನಸಂಖ್ಯಾ ನೀತಿಯನ್ನು ಜಾರಿಗೆ ತಂದಿದ್ದೇವೆ. ಜನಸಂಖ್ಯೆಯ ಹೊರೆಯನ್ನು ಕಡಿಮೆ ಮಾಡಲು ನಾವು ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯದೊಂದಿಗೆ ಕೆಲಸ ಮಾಡಲು ಬಯಸುತ್ತೇವೆ ಎಂದು ಅವರು ಹೇಳಿದರು.

    ನಮ್ಮ ಸರ್ಕಾರ ಸಮುದಾಯದ ಮಹಿಳೆಯರಿಗೆ ಶಿಕ್ಷಣ ನೀಡುವ ನಿಟ್ಟಿನಲ್ಲಿ ಕೆಲಸ ಮಾಡುತ್ತದೆ ಇದರಿಂದ ಸಮಸ್ಯೆಯನ್ನು ಪರಿಣಾಮಕಾರಿಯಾಗಿ ನಿಭಾಯಿಸಬಹುದು ಎಂದು ಶರ್ಮಾ ಹೇಳಿದರು. ಇದನ್ನೂ ಓದಿ: ಅಸ್ಸಾಂನಲ್ಲಿ ಮದರಸಾ, ಸಂಸ್ಕೃತ ಶಾಲೆಗಳು ಬಂದ್

    ನಾವು ಜನಸಂಖ್ಯೆಯನ್ನು ನಿಯಂತ್ರಿಸಿದರೆ ಹಲವಾರು ಸಾಮಾಜಿಕ ಸಮಸ್ಯೆಗಳನ್ನು ಪರಿಹರಿಸಬಹುದು ಎಂದು ಅವರು ಅಭಿಪ್ರಾಯಪಟ್ಟರು.

  • ಹಿಂದೂ ಮಹಿಳೆಯ ಶವವನ್ನು ಹೊತ್ತು ಅಂತ್ಯಸಂಸ್ಕಾರ ಮಾಡಿದ ಮುಸ್ಲಿಮರು

    ಹಿಂದೂ ಮಹಿಳೆಯ ಶವವನ್ನು ಹೊತ್ತು ಅಂತ್ಯಸಂಸ್ಕಾರ ಮಾಡಿದ ಮುಸ್ಲಿಮರು

    ಶ್ರೀನಗರ: ಕೋಮು ಸೌಹಾರ್ದತೆಗೆ ಸಾಕ್ಷಿ ಎಂಬಂತೆ ಮುಸ್ಲಿಂ ಸಮುದಾಯದ ಮಂದಿ, ಹಿಂದೂ ಪಂಡಿತ ಸಮುದಾಯ ಮಹಿಳೆಯ ಅಂತ್ಯಕ್ರಿಯಲ್ಲಿ ಭಾಗವಹಿಸಿರುವ ಘಟನೆ ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ನಡೆದಿದೆ.

    ಮೋತಿಲಾಲ್ ಕೌಲ್ ಎಂಬವರ ಪತ್ನಿ ರಾಣಿಕೌಲ್(65) ಶನಿವಾರ ಮೃತಪಟ್ಟಿದ್ದಾರೆ. ಮಹಿಳೆಯ ಅಂತ್ಯಕ್ರಿಯೆಗೆ ಆಕೆಯ ಸಂಬಂಧಿಕರು ದೆಹಲಿಯಿಂದ ಬರಬೇಕಾದ್ದರಿಂದ ಒಂದು ದಿನ ತಡವಾಗಿ ಮಹಿಳೆಯ ಅಂತ್ಯಕ್ರಿಯೆಯನ್ನು ನಡೆಸಬೇಕಾಯಿತು.

    ಸುಮಾರು 600 ಮುಸ್ಲಿಂ ಸಮುದಾಯದವರ ಮನೆಯ ಮಧ್ಯೆ ಮೋತಿಲಾಲ್ ಕೌಲ್ ಮನೆ ಇದ್ದು, ಭಾನುವಾರ ಅಲ್ಲಿನ ಸ್ಥಳೀಯ ಮುಸ್ಲಿಮರು ಮಹಿಳೆಯ ಅಂತ್ಯಕ್ರಿಯೆಗೆ ಸಹಾಯವನ್ನು ಮಾಡಿದ್ದಾರೆ. ಮಹಿಳೆಯ ದೇಹವನ್ನು ದಹಿಸಲು ಮರವನ್ನು ಸಂಗ್ರಹಿಸಿ, ಶವವನ್ನು ಸ್ಮಶಾನದವರೆಗೆ ಹೆಗಲ ಮೇಲೆ ಹೊತ್ತುಕೊಂಡು ಹೋಗಿದ್ದಾರೆ. ಅಲ್ಲದೆ ಪಂಡಿತರ ಪದ್ದತಿಗೆ ಅನುಗುಣವಾಗಿ ಕೊನೆಯ ಅಂತಿಮ ವಿಧಿ ವಿಧಾನವನ್ನು ಮಾಡಿದ್ದಾರೆ.

    ಕಾಶ್ಮೀರದ ಬಾರಾಮುಲ್ಲಾದಲ್ಲಿ ಪಂಡಿತ್ ಸಮುದಾಯದ ಮಹಿಳೆಯ ಅಂತಿಮ ವಿಧಿವಿಧಾನ ಮಾಡಿದ ಮುಸ್ಲಿಮರ ವೀಡಿಯೋ ವೈರಲ್ ಆಗುತ್ತಿದೆ.

  • ಜ.22 ರಂದು ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರು ಬಂದ್‌ – ಬೇಡಿಕೆಗಳು ಏನು?

    ಜ.22 ರಂದು ಮುಸ್ಲಿಂ ಸಂಘಟನೆಗಳಿಂದ ಬೆಂಗಳೂರು ಬಂದ್‌ – ಬೇಡಿಕೆಗಳು ಏನು?

    ಬೆಂಗಳೂರು : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜ.22 ರಂದು ಶಾಂತಿಯುತ ಬೆಂಗಳೂರು ಬಂದ್‌ಗೆ ಕರೆ ನೀಡಿವೆ.

    ಈ ಬಂದ್‌ಗೆ 22 ಕ್ಕೂ ಹೆಚ್ಚು ಮುಸ್ಲಿಂ ಸಂಘಟನೆಗಳು ಬೆಂಬಲ ವ್ಯಕ್ತಪಡಿಸಿವೆ. ಬಂದ್ ಬಗ್ಗೆ ಕರ್ನಾಟಕ ಮುಸ್ಲಿಂ ಸಂಘಟನೆಗಳ ಒಕ್ಕೂಟಗಳ ಸಮನ್ವಯಕಾರ ಮಸೂದ್ ಅಬ್ದುಲ್ ಖಾದರ್ ಪ್ರತಿಕ್ರಿಯಿಸಿ, ಈ ಬಂದ್ ಶಾಂತಿಯುತವಾಗಿ ಇರಲಿದೆ. ಯಾವುದೇ ರೀತಿ ಗುಂಪು ಮಾಡಿ ಪ್ರತಿಭಟನೆ ಇರುವುದಿಲ್ಲ. ‌ ಸ್ವಯಂಪ್ರೇರಿತವಾಗಿ ಬೆಂಗಳೂರಿನಲ್ಲಿ ಇರುವ ಮುಸ್ಲಿಮರು ಶುಕ್ರವಾರ ಉದ್ಯಮಗಳನ್ನು ಬಂದ್‌ ಮಾಡಿ ಮನೆಯಲ್ಲಿರಬೇಕು. ಬೆಳಗ್ಗೆಯಿಂದ ಸಂಜೆ 5 ಗಂಟೆಯವರೆಗೂ ಮುಸ್ಲಿಮರ ಎಲ್ಲಾ ಅಂಗಡಿಗಳು ಬಂದ್‌ ಆಗಲಿದೆ ಎಂದು ತಿಳಿಸಿದರು.

    ಬೇಡಿಕೆಗಳು ಏನು?
    – ದೇವರಜೀವನಹಳ್ಳಿ(ಡಿಜೆಹಳ್ಳಿ) ಮತ್ತು ಕಾಡುಗೊಂಡನ ಹಳ್ಳಿ(ಕೆಜಿ ಹಳ್ಳಿ) ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆ ಸಂಬಂಧ ಬಂಧನಕ್ಕೆ ಒಳಗಾಗಿರುವ ಅಮಾಯಕರನ್ನು ಕೂಡಲೇ ಬಿಡುಗಡೆ ಮಾಡಬೇಕು.

    – ಲವ್ ಜಿಹಾದ್ ವಿರುದ್ಧ ಮತ್ತು ಕೃಷಿ ವಿರೋಧಿ‌ ಕಾಯ್ದೆಗಳನ್ನು ರದ್ದುಗೊಳಿಸಬೇಕು.

    – ಈಗಾಗಲೇ ಕೆಜೆಹಳ್ಳಿ ಮತ್ತು ಡಿಜೆಹಳ್ಳಿ ಕೇಸ್ ಸಂಬಂಧ ಎಸ್‌ಡಿಪಿಐ ಮುಖಂಡ ಮುಜಾಮ್ಮಿಲ್ ಪಾಷಾ ಸೇರಿದಂತೆ 421 ಜನರನ್ನ ಬಂಧಿಸಲಾಗಿದ್ದು ಬಿಡುಗಡೆ ಮಾಡುವಂತೆ ಒತ್ತಾಯ.

    – ಗೋ ಹತ್ಯೆ ಕಾಯ್ದೆಯನ್ನು ವಾಪಸ್‌ ಪಡೆಯಬೇಕು.

  • ಬಿಬಿಎಂಪಿ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರು ನಾಮಕರಣ ವಿರೋಧಿಸಿ ಹೆಗಡೆಯಿಂದ ಆಯುಕ್ತರಿಗೆ ಪತ್ರ

    ಬಿಬಿಎಂಪಿ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರು ನಾಮಕರಣ ವಿರೋಧಿಸಿ ಹೆಗಡೆಯಿಂದ ಆಯುಕ್ತರಿಗೆ ಪತ್ರ

    ಕಾರವಾರ: ಬೆಂಗಳೂರು ಮಹಾನಗರ ಪಾಲಿಕೆಯ ಪಾದರಾಯನಪುರದ ವಾರ್ಡ್‌ನಲ್ಲಿರುವ ರಸ್ತೆಗಳಿಗೆ ಕೇವಲ ಮುಸ್ಲಿಮರ ಹೆಸರನ್ನು ನಾಮಕರಣ ಮಾಡುವುದುನ್ನು ವಿರೋಧಿಸಿ ಉತ್ತರ ಕನ್ನಡ ಜಿಲ್ಲೆಯ ಸಂಸದ ಅನಂತಕುಮಾರ್ ಹೆಗಡೆ ಪಾಲಿಕೆಯ ಆಯುಕ್ತರಿಗೆ ಪತ್ರ ಬರೆದು ವಿರೋಧ ವ್ಯಕ್ತಪಡಿಸಿದ್ದಾರೆ.

    ಪಾದರಾಯನಪುರದ ವಾರ್ಡ್‌ ಸಂಖ್ಯೆ 135 ರಲ್ಲಿ ಬರುವ ಅಡ್ಡ ರಸ್ತೆಗಳಿಗೆ ಸಮಾಜ ಸೇವಕರ ಹೆಸರು ಇಡಲು ತೀರ್ಮಾನಿಸಿತ್ತು. ಈ ಸಂಬಂಧ ಪತ್ರಿಕಾ ಪ್ರಕಟಣೆ ಸಹ ನೀಡಿತ್ತು. ಈ ಸಂಬಂಧ ಕೇವಲ ಮುಸಲ್ಮಾನರ ಹೆಸರನ್ನು ಶಿಫಾರಸ್ಸು ಮಾಡಿದ್ದು ಸರಿಯಲ್ಲ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

    ಪತ್ರದಲ್ಲಿ ಏನಿದೆ?
    ಸಮಾಜ ಸೇವಕರ ಹೆಸರಿನಲ್ಲಿ ಕೇವಲ ಮುಸಲ್ಮಾನರ ಹೆಸರು ಮಾತ್ರ ಶಿಫಾರಸ್ಸು ಮಾಡಲಾಗಿದೆ. ಸಮಾಜ ಸೇವಕರ ಹೆಸರಿನಲ್ಲಿ ಕೋಮು ವೈಭವೀಕರಣ ಮಾಡುವುದು ಸರಿಯಲ್ಲ. ಬೆಂಗಳೂರು ಮಹಾನಗರ ಪಾಲಿಕೆಯ ಈ ನಿರ್ಧಾರದಿಂದ ಸಮಾಜದಲ್ಲಿ ಕೋಮು ಸಾಮರಸ್ಯಕ್ಕೆ ಧಕ್ಕೆಯಾಗುತ್ತದೆ.

    ಬಹುಸಂಖ್ಯಾತ ಹಿಂದೂಗಳ ಬಾಹ್ಯವುಳ್ಳ ನಗರಸಭೆ, ಪಟ್ಟಣ ಪಂಚಾಯತ್, ಪುರಸಭೆಗಳು ಇದೇ ನಿರ್ಧಾರವನ್ನು ತೆಗೆದುಕೊಂಡರೆ ಪರಿಸ್ಥಿತಿ ಊಹಿಸಲೂ ಸಾಧ್ಯವಿಲ್ಲ. ಒಂದು ಕೋಮಿನ ತುಷ್ಟೀಕರಣ ಮಾಡಲು ಈ ರೀತಿ ಕ್ರಮ ಸರಿಯಲ್ಲ. ಬಿಬಿಎಂಪಿ ಈ ನಿರ್ಣಯ ಬೇಜವಬ್ದಾರಿಯ ಪರಮಾವಧಿ. ರಸ್ತೆಗಳಿಗೆ ಸ್ವಾತಂತ್ರಕ್ಕಾಗಿ ಹೋರಾಡಿದ ಹೋರಾಟಗಾರರು, ರಾಷ್ಟ್ರಕಂಡ ಮಹಾನ್ ನಾಯಕರು ಹಾಗೂ ಸೈನಿಕರ ಹೆಸರು ಇಡಬೇಕು. ಇದರಿಂದ ಪಾದರಾಯನಪುರ ಹೆಸರಿಗೂ ಗೌರವ ದೊರಕಿದಂತಾಗುತ್ತದೆ.

  • ಪಾಕ್‍ನಲ್ಲಿ ಮತ್ತೆ ದೇವಾಲಯ ಧ್ವಂಸ- 600 ಹಿಂದೂ ಕುಟುಂಬಗಳ ಮೇಲೆ ದಾಳಿಗೆ ಯತ್ನ

    ಪಾಕ್‍ನಲ್ಲಿ ಮತ್ತೆ ದೇವಾಲಯ ಧ್ವಂಸ- 600 ಹಿಂದೂ ಕುಟುಂಬಗಳ ಮೇಲೆ ದಾಳಿಗೆ ಯತ್ನ

    ನವದೆಹಲಿ: ಪಾಕಿಸ್ತಾನದಲ್ಲಿ ಮತ್ತೆ ಹಿಂದೂ ದೇವಸ್ಥಾನವನ್ನು ಧ್ವಂಸ ಮಾಡಲಾಗಿದ್ದು, ಉದ್ರಿಕ್ತ ಗುಂಪು ದೇವಸ್ಥಾನದ ಮೇಲೆ ದಾಳಿ ಮಾಡಿ ಧ್ವಂಸ ಮಾಡಿದೆ.

    ಪಾಕಿಸ್ತಾನದ ಸಿಂಧ್ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, ದೇವಸ್ಥಾನ ಧ್ವಂಸಗೊಳಿಸಿದ್ದು ಮಾತ್ರವಲ್ಲದೆ 300ಕ್ಕೂ ಹೆಚ್ಚು ಹಿಂದೂ ಕುಟುಂಬಗಳ ಮೇಲೆ ದಾಳಿಗೆ ಯತ್ನಿಸಿದ್ದಾರೆ. ಶತಮಾನಗಳಷ್ಟು ಹಳೆಯದಾದ ಪ್ರದೇಶಕ್ಕೆ ತೆರಳುವುದನ್ನು ನಿಲ್ಲಿಸಿದರು. ಶೀತಲ್ ದಾಸ್ ಕಾಂಪೌಂಡ್ ನಲ್ಲಿ ಭಾನುವಾರ ಘಟನೆ ನಡೆದಿದ್ದು, 300ಕ್ಕೂ ಹೆಚ್ಚು ಹಿಂದೂ ಹಾಗೂ 30 ಮುಸ್ಲಿಂ ಕುಟುಂಬಗಳು ವಾಸಿಸುತ್ತಿವೆ. ಇಲ್ಲಿನ ನಿವಾಸಿಗಳ ಪ್ರಕಾರ, ಹಿಂದೂ ಕುಟುಂಬಗಳ ಮೇಲೆ ದಾಳಿ ಮಾಡುವ ಉದ್ದೇಶದಿಂದ ನೂರಾರು ಮಂದಿ ಕಾಂಪೌಂಡ್ ಬಳಿ ಜಮಾಯಿಸಿದ್ದರು ಎಂದು ತಿಳಿಸಿದ್ದಾರೆ.

    ಈ ಸಂದರ್ಭದಲ್ಲಿ ಕಾಂಪೌಂಡ್ ಆಸುಪಾಸಿನಲ್ಲಿರುವ ಮುಸ್ಲಿಂ ಕುಟುಂಬದವರು ತಕ್ಷಣವೇ ಆಗಮಿಸಿ ಗೇಟ್ ಬಳಿ ಬಂದು ಗುಂಪನ್ನು ತಡೆದಿದ್ದಾರೆ.

    60 ಹಿಂದೂ ಕುಟುಂಬಗಳ ಸ್ಥಳಾಂತರ:
    ಘಟನೆ ಬಗ್ಗೆ ಮಾಹಿತಿ ನೀಡುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಆಗಮಿಸಿದರು ಎಂದು ಇಲ್ಲಿನ ಹಿಂದೂ ವ್ಯಕ್ತಿ ತಿಳಿಸಿದ್ದಾರೆ. ಅಲ್ಲದೆ ಮುಸ್ಲಿಂ ಗುಂಪೊಂದು ಹಿಂಗೂ ಕುಟುಂಬಗಳು ವಾಸವಿರುವ ಕಾಂಪೌಂಡ್ ಮೇಲೆ ದಾಳಿ ನಡೆಸಲು ಮುಂದಾಗಿತ್ತು. ಪೊಲೀಸರು ಅದನ್ನು ತಡೆದರು. ದೇವಸ್ಥಾನದಲ್ಲಿ ಮೂರು ವಿಗ್ರಹಗಳನ್ನು ನಾಶ ಮಾಡಿದ್ದಾರೆ ಎಂದು ಅಲ್ಲಿನ ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ.

    ಹಿಂದೂ ಸಮುದಾಯದವರ ಮೇಲೆ ಅಲ್ಲಿನ ಸ್ಥಳೀಯ ಮುಸ್ಲಿಂ ಗುಂಪು ದಾಳಿ ನಡೆಸಲು ಮುಂದಾಗಿತ್ತು ಎಂದು ಪೊಲೀಸ್ ಅಧಿಕಾರಿಗಳು ಸ್ಥಳೀಯ ಮಾಧ್ಯಮಗಳಿಗೆ ತಿಳಿಸಿದ್ದಾರೆ.

    ಸಿಂಧ್ ಪ್ರದೇಶದಲ್ಲಿ ಮೂರನೇ ದಾಳಿ
    ಮುಸ್ಲಿಂ ಕುಟುಂಬಗಳು ತಡೆಯದಿದ್ದರೆ ದಾಳಿಯನ್ನು ಎದುರಿಸುವುದು ತುಂಬಾ ಕಷ್ಟವಿತ್ತು ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ಬಳಿಕ 60ಕ್ಕೂ ಹೆಚ್ಚು ಹಿಂದೂ ಕುಟುಂಬಗಳನ್ನು ನಗರದ ವಿವಿಧ ಪ್ರದೇಶಗಳಿಗೆ ಸ್ಥಳಾಂತರಿಸಿದ್ದಾರೆ. ಪಾಕಿಸ್ತಾನದಲ್ಲಿನ 22 ಕೋಟಿ ಜನ ಸಂಖ್ಯೆ ಪೈಕಿ ಮುಸ್ಲಿಮರು ಬಹುಸಂಖ್ಯಾತರಾಗಿದ್ದು, ಹಿಂದೂಗಳು ಕೇವಲ ಶೇ.2ರಷ್ಟು ಇದ್ದಾರೆ. ಇದರಲ್ಲಿ ಬಹುತೇಕರು ಸಿಂಧ್ ಪ್ರಾಂತ್ಯದಲ್ಲೇ ಜೀವನ ಕಟ್ಟಿಕೊಂಡಿದ್ದಾರೆ. ಸಿಂಧ್ ನಲ್ಲಿ ಹಿಂದೂ ದೇವಸ್ಥಾನಗಳ ಮೇಲೆ ನಡೆಯುತ್ತಿರುವ ಮೂರನೇ ದಾಳಿ ಇದಾಗಿದೆ.

    ಹಿಂದೂಗಳ ಮೇಲಿನ ಇಂತಹ ದಾಳಿಗಳು ಅಲ್ಪಸಂಖ್ಯಾತರ ರಕ್ಷಣೆ ಕುರಿತು ಪಾಕಿಸ್ತಾನದ ಕ್ರಮವನ್ನು ಬಹಿರಂಗಪಡಿಸುತ್ತವೆ. ಇಲ್ಲಿನ ಮುಸ್ಲಿಮರು ಹಿಂದೂಗಳ ಮೇಲೆ ನಿರಂತರವಾಗಿ ಆಕ್ರಮಣ ಮಾಡುತ್ತಿದ್ದಾರೆ.