Tag: muslims

  • ಸಂಸತ್‌ ಭವನ ಪಕ್ಕದ ಮಸೀದಿಯಲ್ಲಿ ಎಸ್ಪಿ ಸಂಸದರೊಟ್ಟಿಗೆ ಅಖಿಲೇಶ್‌ ಯಾದವ್‌ ಸಭೆ – ಕೆರಳಿದ ಬಿಜೆಪಿ

    ಸಂಸತ್‌ ಭವನ ಪಕ್ಕದ ಮಸೀದಿಯಲ್ಲಿ ಎಸ್ಪಿ ಸಂಸದರೊಟ್ಟಿಗೆ ಅಖಿಲೇಶ್‌ ಯಾದವ್‌ ಸಭೆ – ಕೆರಳಿದ ಬಿಜೆಪಿ

    – ಬಿಜೆಪಿ ವಿಭಜನೆ ಮಾಡೋದನ್ನೇ ನೋಡ್ತಿದೆ ಅಂತ ಎಸ್ಪಿ ಮುಖ್ಯಸ್ಥ ತಿರುಗೇಟು
    – ಅಖಿಲೇಶ್‌ ಕ್ಷಮೆಯಾಚಿಸುವಂತೆ ವಕ್ಫ್‌ ಮಂಡಳಿ ಪಟ್ಟು

    ನವದೆಹಲಿ: ಮುಂಗಾರು ಅಧಿವೇಶನ ನಡೆಯುತ್ತಿರುವ ಹೊತ್ತಿನಲ್ಲೇ ಸಮಾಜವಾದಿ ಪಕ್ಷದ (SP) ಮುಖ್ಯಸ್ಥ ಅಖಿಲೇಶ್‌ ಯಾದವ್‌ (Akhilesh Yadav) ಸಂಸತ್‌ ಭವನದ ಪಕ್ಕದ ಮಸೀದಿಯಲ್ಲಿ ಸಭೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.

    ಎಸ್ಪಿ ಸಂಸದರೊಟ್ಟಿಗೆ ಅಖಿಲೇಶ್‌ ಯಾದವ್‌ ಸಭೆ ನಡೆಸಿರುವುದನ್ನು ಬಿಜೆಪಿ (BJP) ತೀವ್ರವಾಗಿ ಖಂಡಿಸಿದೆ. ಮಸೀದಿಯನ್ನು ನಿಮ್ಮ ಸಮಾಜವಾದಿ ಪಕ್ಷದ ಕಚೇರಿಯಾಗಿ ಬದಲಾವಣೆ ಮಾಡ್ಕೊಂಡಿದ್ದೀರಾ? ಅಂತ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾ ಪ್ರಶ್ನಿಸಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ ವೀರರಾಣಿ ಅಬ್ಬಕ್ಕ ಹೆಸರಿನ ಮೆರಿಟೈಮ್ ವಿವಿ ಸ್ಥಾಪನೆಗೆ ಕ್ಯಾ.ಚೌಟ ಮನವಿ

    ಇದಕ್ಕೆ ಇರುಗೇಟು ನೀಡಿರುವ ಅಖಿಲೇಶ್‌ ಯಾದವ್‌, ಮದೀಸಿಗೆ ನನ್ನ ಭೇಟಿಯ ಬಗ್ಗೆ ಬಿಜೆಪಿ ವಿವಾದ ಸೃಷಿಸುತ್ತಿದೆ. ನಮಗೆ ಎಲ್ಲಾ ಧರ್ಮಗಳಲ್ಲಿಯೂ ನಂಬಿಕೆ ಇದೆ. ನಾವು ಒಗ್ಗಟ್ಟಾಗುತ್ತೇವೆ ಅನ್ನೋ ನಂಬಿಕೆ ನಮಗಿದೆ. ಆದ್ರೆ ಬಿಜೆಪಿ ವಿಭಜನೆಯಾಗಿಯೇ ಉಳಿಯಬೇಕೆಂದು ಬಯಸುತ್ತದೆ ಅಂತ ತಿರುಗೇಟು ನೀಡಿದ್ದಾರೆ.

    ಮುಂದುವರಿದು.. ಯಾವುದೇ ಧರ್ಮದಲ್ಲಿ ನಂಬಿಕೆಯಿದ್ದರೆ, ಅದು ಎಲ್ಲರನ್ನೂ ಒಗ್ಗೂಗೂಡಿಸುತ್ತದೆ. ಆದ್ರೆ ಬಿಜೆಪಿ ಜನರ ನಡುವಿನ ಅಂತರವನ್ನೇ ನೋಡಲು ಬಯಸುತ್ತೆ. ಬಿಜೆಪಿಯ ತಂತ್ರಗಳ ಬಗ್ಗೆ ಈಗ ಜನಕ್ಕೆ ಅರ್ಥವಾಗಿದೆ. ʻಧರ್ಮʼ ಅನ್ನೋದನ್ನೇ ಬಿಜೆಪಿ ಅಸ್ತ್ರವಾಗಿ ಮಾಡಿಕೊಂಡಿದೆ ಎಂದು ತಿವಿದಿದ್ದಾರೆ. ಇದನ್ನೂ ಓದಿ: ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆಗಳಲ್ಲಿ ನವಜಾತ ಶಿಶು ಕಳ್ಳತನ ತಡೆಯಲು ಹೊಸ ಕ್ರಮ – ಏನಿದು ಕೋಡ್‌ ಪಿಂಕ್‌?

    ಇನ್ನೂ ಸಮಾಜವಾದಿ ಪಕ್ಷದ ಸಂಸದ ರಾಜೀವ್ ರೈ ಮಾತನಾಡಿ, ನಾವು ಈಗ ದೇವಸ್ಥಾನ ಮತ್ತು ಮಸೀದಿಗೆ ಹೋಗಲು ಬಿಜೆಪಿಯಿಂದ ಲೈಸೆನ್ಸ್‌ ಪಡೆಯಬೇಕೇ? ಅಂತ ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಬಾಹ್ಯಾಕಾಶದಲ್ಲಿ 18 ದಿನ – ಭೂಮಿಯಲ್ಲಿ ಮತ್ತೆ ನಡೆಯುವುದನ್ನ ಕಲಿಯುತ್ತಿದ್ದಾರೆ ಶುಭಾಂಶು ಶುಕ್ಲಾ

    ಮತ್ತೊಂದೆಡೆ ಅಖಿಲೇಶ್‌ ಯಾದವ್‌ ಮಸೀದಿಗೆ ಭೇಟಿ ನೀಡಿದ ವಿಚಾರಕ್ಕೆ ಉತ್ತರಾಖಂಡ್ ವಕ್ಫ್ ಮಂಡಳಿ ಕೂಡ ಅಸಮಾಧಾನ ಹೊರಹಾಕಿದೆ. ಮಸೀದಿಯೊಳಗೆ ನಡೆದ ರಾಜಕೀಯ ಸಭೆಯು ಮುಸ್ಲಿಮರ ಭಾವನೆಗಳಿಗೆ ನೋವುಂಟು ಮಾಡಿದೆ. ಅಖಿಲೇಶ್‌ ಕ್ಷಮೆಯಾಚಿಸಬೇಕೆಂದು ವಕ್ಫ್‌ ಮಂಡಳಿಯ ಅಧ್ಯಕ್ಷ ಶಾದಾಬ್ ಶಮ್ಸ್ ಒತ್ತಾಯಿಸಿದ್ದಾರೆ.

  • ಆರ್ಥಿಕ ನೆರವು, ವಿವಾಹದ ಭರವಸೆ ನೀಡಿ ಹಿಂದೂಗಳನ್ನ ಇಸ್ಲಾಂಗೆ ಮತಾಂತರ – ಮಾಸ್ಟರ್‌ ಮೈಂಡ್‌ ಸೇರಿ ಇಬ್ಬರು ಅರೆಸ್ಟ್‌

    ಆರ್ಥಿಕ ನೆರವು, ವಿವಾಹದ ಭರವಸೆ ನೀಡಿ ಹಿಂದೂಗಳನ್ನ ಇಸ್ಲಾಂಗೆ ಮತಾಂತರ – ಮಾಸ್ಟರ್‌ ಮೈಂಡ್‌ ಸೇರಿ ಇಬ್ಬರು ಅರೆಸ್ಟ್‌

    – ಬಡವರು, ಅಸಹಾಯಕ ಕಾರ್ಮಿಕರು, ವಿಧವೆಯರೇ ಟಾರ್ಗೆಟ್‌

    ಲಕ್ನೋ: ಆರ್ಥಿಕ ನೆರವು, ವಿವಾಹ ಸೇರಿದಂತೆ ಹತ್ತು ಹಲವು ಭರವಸೆಗಳನ್ನ ಹಿಂದೂಗಳನ್ನ ಇಸ್ಲಾಂಗೆ ಮತಾಂತರ ಮಾಡುತ್ತಿದ್ದ ಧಾರ್ಮಿಕ ಮತಾಂತರ ತಂಡದ (Religious Conversion Gang) ಮಾಸ್ಟರ್‌ ಮೈಂಡ್‌ ಮತ್ತು ಆತನ ಸಹಾಯಕನನ್ನ ಉತ್ತರ ಪ್ರದೇಶ ಪೊಲೀಸರ (Uttar Pradesh Police) ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.

    ಜಲಾಲುದ್ದೀನ್ ಅಲಿಯಾಸ್ ಛಂಗೂರ್ ಬಾಬಾ ಮತ್ತು ಸಹಯಾಕ ನೀತು ಅಲಿಯಾಸ್ ನಸ್ರೀನ್ ಬಂಧಿತ ಆರೋಪಿಗಳಾಗಿದ್ದಾರೆ. ಇವರಿಬ್ಬರು ಬಲರಾಂಪುರ ಜಿಲ್ಲೆಯ ಮಧಪುರ ನಿವಾಸಿಗಳೆಂದು ತಿಳಿದುಬಂದಿದೆ. ಇದನ್ನೂ ಓದಿ: ʻಆಪರೇಷನ್ ಸಿಂಧೂರʼ ಯಶಸ್ಸಿನ ಬೆನ್ನಲ್ಲೇ 1 ಲಕ್ಷ ಕೋಟಿ ಮೊತ್ತದ ರಕ್ಷಣಾ ಯೋಜನೆಗಳಿಗೆ ಮೋದಿ ಸರ್ಕಾರ ಅಸ್ತು

    ಜಲಾಲುದ್ದೀನ್ ವಿರುದ್ಧ ಉತ್ತರ ಪ್ರದೇಶ ಕೋರ್ಟ್‌ (UP Court) ಜಾಮೀನು ರಹಿತ ವಾರಂಟ್ ಹೊರಡಿಸಿತ್ತು. ಈ ಬೆನ್ನಲ್ಲೇ ಆತನ ಸುಳಿವು ನೀಡಿದವರಿಗೆ ಯುಪಿ ಪೊಲೀಸರು 50,000 ರೂ. ನಗದು ಬಹುಮಾನ ಘೋಷಿಸಿದ್ದರು ಎಂದು ವರದಿಗಳು ತಿಳಿಸಿವೆ. ಸದ್ಯ ಇಬ್ಬರನ್ನು ಬಂಧಿಸಿರುವ ಪೊಲೀಸರು ಲಕ್ನೋ ಜಿಲ್ಲಾ ಕೇಂದ್ರ ಕಾರಾಗೃಹಕ್ಕೆ ಕಳುಹಿಸಲಾಗಿದೆ.

    ಬಿಎನ್‌ಎಸ್‌ ಹಾಗೂ ಉತ್ತರ ಪ್ರದೇಶ ಕಾನೂನುಬಾಹಿರ ಧಾರ್ಮಿಕ ಮತಾಂತರ ನಿಷೇಧ ಕಾಯ್ದೆ, 2021ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿಗಳು ಹಿಂದೂ ಮತ್ತು ಇತರ ಮುಸ್ಲಿಮೇತರ ಸಮುದಾಯದ ಜನರನ್ನು ಇಸ್ಲಾಂಗೆ ಮತಾಂತರ ಮಾಡಲು ಸಂಘಟಿತವಾಗಿ ಕೆಲಸ ಮಾಡುತ್ತಿದ್ದರು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕಳಪೆ ಹೆಲ್ಮೆಟ್‌ಗೆ ಕೇಂದ್ರ ತಡೆ – BIS ಪ್ರಮಾಣೀಕರಿಸಿದ ISI ಗುರುತಿನ ಹೆಲ್ಮೆಟ್‌ ಕಡ್ಡಾಯ

    ಮುಖ್ಯವಾಗಿ ಬಡವರು, ಅಸಹಾಯಕ ಕಾರ್ಮಿಕರು, ದುರ್ಬಲ ವರ್ಗದವರು ಮತ್ತು ವಿಧವೆಯರಿಗೆ ಪ್ರೋತ್ಸಾಹ ಧನ, ಆರ್ಥಿಕ ನೆರವು ಹಾಗೂ ವಿವಾಹದ ಭರವಸೆ ನೀಡಿ ಮತಾಂತರಗೊಳಿಸುತ್ತಿದ್ದರು. ಅದು ಸಾಧ್ಯವಾಗದೇ ಇದ್ದಾಗ ಬೆದರಿಸಿ ಬಲವಂತವಾಗಿ ಮತಾಂತರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಇದು ಮತಾಂತರದ ಕಾಯ್ದೆಯನ್ನು ಉಲ್ಲಂಘಿಸಿದೆ ಎಂದು ಹೇಳಲಾಗಿದೆ.

    ಇದೇ ಪ್ರಕರಣದಲ್ಲಿ ಕಳೆದ ಏಪ್ರಿಲ್‌ 8ರಂದು ಇಬ್ಬರು ಆರೋಪಿಗಳನ್ನ ಬಂಧಿಸಲಾಗಿತ್ತು. ಉಳಿದ ಇಬ್ಬರನ್ನು ಶನಿವಾರ ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದಲೈಲಾಮಾ ಉತ್ತರಾಧಿಕಾರಿ ಸಂಘರ್ಷ- ದಲೈಲಾಮಾ ಜೊತೆ ಭಾರತದ ಸಂಬಂಧ ಹೇಗಿತ್ತು; ಚೀನಾ ಎಚ್ಚರಿಕೆ ಏನು?

  • ಹುಕ್ಕೇರಿಯಲ್ಲಿ ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ – ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR

    ಹುಕ್ಕೇರಿಯಲ್ಲಿ ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣ – ಶ್ರೀರಾಮಸೇನೆ ಕಾರ್ಯಕರ್ತರ ವಿರುದ್ಧ FIR

    ಬೆಳಗಾವಿ: ಜಿಲ್ಲೆಯ ಹುಕ್ಕೇರಿ (Hukkeri) ತಾಲೂಕಿನ ಇಂಗಳಿ ಗ್ರಾಮದಲ್ಲಿ ಶ್ರೀ ರಾಮಸೇನೆ ಕಾರ್ಯಕರ್ತರನ್ನ ಗಿಡಕ್ಕೆ ಕಟ್ಟಿ ಥಳಿಸಿದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ. ಹಲ್ಲೆಗೊಳಗಾದ ಗೋ ರಕ್ಷಕರು ಹಾಗೂ ಹಲ್ಲೆ ಮಾಡಿದವರ ಇಬ್ಬರ ಮೇಲೂ ಪ್ರಕರಣ ದಾಖಲಿಸಿಕೊಂಡು ಪೊಲೀಸರು (Belagavi Police) ತನಿಖೆ ಆರಂಭಿಸಿದ್ದಾರೆ.

    ಇಂಗಳಿ ಗ್ರಾಮದಲ್ಲಿ ಅಕ್ರಮ ಗೋ ಸಾಗಾಟ ತಡೆಯಲು ಹೋದ ಶ್ರೀರಾಮಸೇನೆ ಕಾರ್ಯಕರ್ತರ (Sri Rama Sena Workers) ಮೇಲಿನ ಹಲ್ಲೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಡೆತ ತಿಂದ ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಎಫ್‌ಐಅರ್ ದಾಖಲಾಗಿದೆ. ಶ್ರೀರಾಮಸೇನೆ ಕಾರ್ಯಕರ್ತರ ಮೇಲೆ ಶಿವಪುತ್ರ ಸನದಿ ಎಂಬುವರು ದೂರು ದಾಖಲಿಸಿದ್ದಾರೆ. ಎಫ್‌ಐಆರ್‌ನಲ್ಲಿ ಮಹಿಳೆಯರ ಮೇಲೆ ಹಲ್ಲೆ ಮಾಡಿದ ಆರೋಪ ದಾಖಲಾಗಿದೆ. ಇದನ್ನೂ ಓದಿ: ಗೋ ರಕ್ಷಣೆ ಮಾಡಲು ಮುಂದಾಗಿದ್ದಕ್ಕೆ ಮರಕ್ಕೆ ಕಟ್ಟಿ ಹಿಂದೂ ಕಾರ್ಯಕರ್ತರ ಮೇಲೆ ಹಲ್ಲೆ

    Sri Rama Sena activists tied to a tree and attacked for trying to protect cows hukkeri

    ಇನ್ನು ಮರಕ್ಕೆ ಕಟ್ಟಿ ಹಾಕಿ ಹೊಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಮೊಟೊ ಪ್ರಕರಣವನ್ನ ಯಮಕನಮರಡಿ ಪೊಲೀಸರು ದಾಖಲಿಸಿಕೊಂಡಿದ್ದಾರೆ. ಶಿವಪುತ್ರ ಸನದಿ, ಬಾಬುಸಾಬ್ ಮುಲ್ತಾನಿ ಮತ್ತು ಇಂಗಳಿ ಗ್ರಾಮದ ಕೆಲವರ ಮೇಲೆ ದೂರು ದಾಖಲಾಗಿದೆ. ಎರಡೂ ಕಡೆ ದೂರುಗಳನ್ನು ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಒಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣಗಳು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ.

    ಕಾರ್ಯಕರ್ತರ ಮೇಲೆ ಹಲ್ಲೆ ಖಂಡಿಸಿದ ಶ್ರೀರಾಮಸೇನೆ ಪ್ರತಿಭಟನೆಗೆ ಕರೆ ನೀಡಿದೆ. ಶ್ರೀರಾಮಸೇನೆ ಮುಖಂಡ ಪ್ರಮೋದ ಮುತಾಲಿಕ್ ನೇತೃತ್ವದಲ್ಲಿ ಜುಲೈ 3ರಂದು ಇಂಗಳಿ ಚಲೋ ಪ್ರತಿಭಟನೆಗೆ ಕರೆ ನೀಡಲಾಗಿದೆ. ಇದನ್ನೂ ಓದಿ: ಶ್ರೀರಾಮಸೇನೆ ಕಾರ್ಯಕರ್ತರು ನೈತಿಕ ಪೊಲೀಸ್‌ಗಿರಿ ಮಾಡಲು ಹೋಗಿದ್ದು ತಪ್ಪು – ಪರಮೇಶ್ವರ್

    ನಾಲ್ವರ ಬಂಧನ
    ಗೋರಕ್ಷಕರ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧ ಬೆಳಗಾವಿ (Belagavi) ಎಸ್‌ಪಿ ಭೀಮಾಶಂಕರ್ ಗುಳೇದ್ ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಶ್ರೀರಾಮಸೇನೆ ಕಾರ್ಯಕರ್ತರೇ ಮೊದಲು ಮನೆಗೆ ನುಗ್ಗಿದ್ದು ಬಳಿಕ ಅವರ ಮೇಲಿನ ಹಲ್ಲೆ ನಡೆದಿದ್ದು ದುರಾದೃಷ್ಟಕರ. ಹಲ್ಲೆ ಕುರಿತು ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಜೂನ್ 28ರಂದು ಗೋ ಶಾಲೆಯಲ್ಲಿ ದನದ ಮಾಲೀಕ ಗೋವು ಬಿಡಿಸಿಕೊಳ್ಳಲು ಹೋಗ್ತಾನೆ. ಆತನನ್ನ ಹಿಂಬಾಲಿಸಿದ ಶ್ರೀರಾಮ ಸೇನೆ ಕಾರ್ಯಕರ್ತರು ವಾಹನದ ಮಾಲೀಕ ಬಾಬು ಸಾಬ್ ಮನೆಗೆ ನುಗ್ಗುತ್ತಾರೆ. ಮನೆಯಲ್ಲಿ ಹೆಣ್ಣು ಮಕ್ಕಳಿರ್ತಾರೆ. ಈ ವೇಳೆ ಮಹಿಳೆಯರು ಕಿರುಚಿಕೊಂಡಾಗ ಪಕ್ಕದ ಜನರು ಬರ್ತಾರೆ. ಬಂದು ಎಲ್ಲರನ್ನೂ ಮರಕ್ಕೆ ಕಟ್ಟಿ ಥಳಿಸಿದ್ದಾರೆ. ಘಟನೆ ಸಂಬಂಧ ಪೊಲೀಸರ ಬಳಿ ಆ ದಿನವೇ ಇಬ್ಬರು ಯಾವುದೇ ತಂಟೆ ತಕರಾರು ಇಲ್ಲ ಅಂತಾ ಬರೆದುಕೊಟ್ಟಿದ್ದಾರೆ ಅಂತ ಹೇಳಿದ್ದಾರೆ. ಇದನ್ನೂ ಓದಿ: ಹಾಸನ ಯುವಜನತೆಯಲ್ಲಿ ಹೃದಯಾಘಾತ – ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ

    ಇನ್ನೂ ಈ ಘೋರ ಪ್ರಕರಣ ಸಂಬಂಧ ಎಫ್‌ಐಆರ್ ದಾಖಲಿಸಿ ನಾಲ್ವರನ್ನು ಬಂಧಿಸಿದ್ದೇವೆ. ನಾಲ್ವರಲ್ಲಿ ಓರ್ವ ಹಿಂದೂ, ಮೂವರು ಮುಸ್ಲಿಮರ ಬಂಧನವಾಗಿದೆ. ಮುಸ್ಲಿಮರು ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿಲ್ಲ. ಎಲ್ಲರೂ ಸೇರಿಕೊಂಡು ಶ್ರೀರಾಮ ಸೇನೆ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ್ದಾರೆ. ಶ್ರೀರಾಮ ಸೇನೆ ಕಾರ್ಯಕರ್ತ ಮಹಾವೀರ್ ಸೊಲ್ಲಾಪುರೆ ಸೇರಿ ಇನ್ನುಳಿದವರ ಮೇಲೆ ಎಫ್‌ಐಆರ್ ದಾಖಲಾಗಿದೆ. ಶಿವಪುತ್ರ ಸನದಿ ಡ್ರೈವರ್‌ನಿಂದ ದೂರು ದಾಖಲಾಗಿದೆ. ಮಹಾವೀರ್‌ಗೆ ಕಲಬುರಗಿಗೆ ಗಡಿ ಪಾರು ಮಾಡಲಾಗಿತ್ತು. ಗಡಿ ಪಾರಾದ ರೌಡಿ ಶೀಟರ್ ಮಹಾವೀರ್ ಇಲ್ಲಿಗ್ಯಾಕೆ ಬಂದಿದ್ದ. ಒಬ್ಬ ರೌಡಿ ಶೀಟರ್‌ಗೆ ಸಂಘಟನೆಯವರು ಯಾಕೆ ಸಪೋರ್ಟ್ ಮಾಡ್ತಿದ್ದಾರೆ. ಇಂತವರ ಪರ ಪ್ರತಿಭಟನೆ ಮಾಡಲು ನಾವು ಅವಕಾಶ ಕೊಡಲ್ಲ ಎಂದು ಎಸ್‌ಪಿ ಶ್ರೀ ರಾಮಸೇನೆ ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಗುತ್ತಿಗೆ ಆಯ್ತು ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಶೇ.15ಕ್ಕೆ ಹೆಚ್ಚಳ

    ಗುತ್ತಿಗೆ ಆಯ್ತು ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಶೇ.15ಕ್ಕೆ ಹೆಚ್ಚಳ

    – ಸಂಪುಟ ಸಭೆಯಲ್ಲಿ ಮಹತ್ವದ ತೀರ್ಮಾನ

    ಬೆಂಗಳೂರು: ಗುತ್ತಿಗೆ ಮೀಸಲಾತಿ ಬಳಿಕ ಈಗ ವಸತಿ ಯೋಜನೆಯಲ್ಲಿ (Housing Project) ಮುಸ್ಲಿಮ್‌ ಮೀಸಲಾತಿ ಹೆಚ್ಚಳಕ್ಕೆ ಕರ್ನಾಟಕ ಸರ್ಕಾರ (Karnataka Government) ಮುದ್ರೆ ಒತ್ತಿದೆ.

    ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಗಳ ಮೀಸಲಾತಿ ಹೆಚ್ಚಳ ಮಾಡಲಾಗಿದೆ. ಈಗಾಗಲೇ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನೀಡಲಾಗಿದ್ದು ಈಗ 15%ಕ್ಕೆ ಮೀಸಲಾತಿ ಹೆಚ್ಚಿಸಲು ಸಂಪುಟ ಅನುಮೋದನೆ ನೀಡಿದೆ.

    ಮೊದಲೇ ನಿಗದಿಯಾಗಿದ್ದ ಕ್ಯಾಬಿನೆಟ್‌ನಲ್ಲಿ ಈ ವಿಷಯದ ಪ್ರಸ್ತಾಪ ಇರಲಿಲ್ಲ. ಆದರೆ ಕ್ಯಾಬಿನೆಟ್ ಹೆಚ್ಚುವರಿ ಅಜೆಂಡಾದಲ್ಲಿ ವಿಷಯ ಸೇರ್ಪಡೆ ಮಾಡಿ ಕ್ಯಾಬಿನೆಟ್ ಒಪ್ಪಿಗೆ ಪಡೆಯುವಲ್ಲಿ ವಸತಿ‌ ಸಚಿವ ಜಮೀರ್ ಅಹಮದ್ (Zameer Ahmed) ಯಶಸ್ವಿಯಾಗಿದ್ದಾರೆ.

    ಮೀಸಲಾತಿ ಹೆಚ್ಚಳಕ್ಕೆ ನಿಯಮಾವಳಿಗಳನ್ನು ತಿದ್ದುಪಡಿ ಮಾಡುವ ಅಗತ್ಯ ಇಲ್ಲ, ಸಂಪುಟದ ತೀರ್ಮಾನದ ಮೂಲಕ ಸರ್ಕಾರದ ಆದೇಶ ಹೊರಡಿಸಿ ಮೀಸಲಾತಿಯನ್ನು ಹೆಚ್ಚಳ ಮಾಡಬಹುದು.

    ಇನ್ನು ಮುಸ್ಲಿಮ್‌ ವಸತಿ ಮೀಸಲಾತಿ ಹೆಚ್ಚಳವನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ಸಮರ್ಥನೆ ಮಾಡಿಕೊಂಡಿದ್ದಾರೆ. ಸಾಚಾರ್ ಕಮಿಟಿ ವರದಿಯನ್ನೂ ಕೂಡ ಈಗ ಕೇಂದ್ರ ಪರಿಗಣಿಸುತ್ತಿದೆ. ಕೇಂದ್ರದ ಸೂಚನೆಗಳನ್ನು ಗಮನಿಸಿ ಸಾಮಾಜಿಕ ನ್ಯಾಯದ ಪಾಲನೆ ಮಾಡುತ್ತಿದ್ದೇವೆ ಎಂದು ತಿಳಿಸಿದರು.

    ಇದು ಎಲ್ಲಾ ಅಲ್ಪಸಂಖ್ಯಾತರಿಗೂ ಅನ್ವಯವಾಗಲಿದೆ. ಮುಸ್ಲಿಮ್‌, ಜೈನರು, ಕ್ರಿಶ್ಚಿಯನ್ ಎಲ್ಲರೂ ಕೂಡ ಇದರಲ್ಲಿ ಒಳಗೊಳ್ಳುತ್ತಾರೆ. ಇದಕ್ಕೆ ಬೇಕಾದ ಹಲವು ಅಧ್ಯಯನ ವರದಿಗಳೂ ಕೂಡ ಇವೆ ಅಂತಾ ಸ್ಪಷ್ಟಪಡಿಸಿದರು. ‌ ಬಡವರಿಗೆ ಮನೆ ಮಾಡಿಕೊಡುವುದರಲ್ಲಿ ರಾಜಕೀಯ ವಾಸನೆ ಹುಡುಕುವವರಿಗೆ ನಾವು ಉತ್ತರ ಕೊಡಲ್ಲ. ವಸತಿ ಹೀನರಿಗೆ ಹೆಚ್ಚಿನ ಸೌಲಭ್ಯಗಳನ್ನು ಕೊಡಬೇಕು ಎಂಬುದು ಸರ್ಕಾರದ ಉದ್ದೇಶ ಅಂತಾ ತಿರುಗೇಟು ನೀಡಿದರು.

     

    ರಾಜ್ಯದಲ್ಲಿ ಇರುವ ವಸತಿ ಯೋಜನೆಗಳು
    ಡಾ.ಬಿ.ಆರ್.ಅಂಬೇಡ್ಕರ್ ನಿವಾಸ್ ಯೋಜನೆ (ಎಸ್ ಸಿ, ಎಸ್ ಟಿ‌ ಸಮುದಾಯಗಳಿಗೆ ಮಾತ್ರ)
    ಪ್ರಧಾನ ಮಂತ್ರಿ ಆವಾಸ್ ಯೋಜನೆ
    ವಾಜಪೇಯಿ ನಗರ ವಸತಿ ಯೋಜನೆ
    ದೇವರಾಜ ಅರಸು‌ ವಸತಿ ಯೋಜನೆ
    ಬಸವ ವಸತಿ ಯೋಜನೆ

    ವಸತಿ ಇಲಾಖೆಯಲ್ಲಿರುವ ಮೂರು ನಿಗಮಗಳು
    ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ
    ಕರ್ನಾಟಕ ಗೃಹ ಮಂಡಳಿ
    ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ

  • ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಹೆಚ್ಚಳ!

    ಗುತ್ತಿಗೆ ಆಯ್ತು, ಈಗ ವಸತಿ ಯೋಜನೆಯಲ್ಲೂ ಮುಸ್ಲಿಮ್‌ ಮೀಸಲಾತಿ ಹೆಚ್ಚಳ!

    – ಇಂದಿನ ಕ್ಯಾಬಿನೆಟ್‌ ಸಭೆಯಲ್ಲಿ ಅಂತಿಮ ನಿರ್ಧಾರ

    ಬೆಂಗಳೂರು: ಗುತ್ತಿಗೆಯಲ್ಲಿ ಮೀಸಲಾತಿ (Reservation) ನೀಡಿದ ಬಳಿಕ ಈಗ ವಸತಿ ಯೋಜನೆಯಲ್ಲೂ (Housing project) ಮುಸ್ಲಿಮರ (Muslims) ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಮುಂದಾಗಿದೆ.

    ಹೌದು. ತಮ್ಮ ಸಮುದಾಯಕ್ಕೆ ವಸತಿ ಯೋಜನೆಯಲ್ಲೂ ಮೀಸಲಾತಿಯನ್ನು ಹೆಚ್ಚಿಸುವಂತೆ ವಸತಿ ಇಲಾಖೆ ಸಚಿವ ಜಮೀರ್ ಅಹಮದ್ (Zameer Ahmed) ಸರ್ಕಾರದ ಮುಂದೆ ಪ್ರಸ್ತಾಪ ಇಟ್ಟಿದ್ದಾರೆ.

    ಇಂದು ನಡೆಯಲಿರುವ ಕ್ಯಾಬಿನೆಟ್‌ ಸಭೆಯಲ್ಲಿ (Cabinet) ಈ ವಿಷಯನ್ನು ಜಮೀರ್‌ ಅಹಮದ್‌ ತೆಗೆದುಕೊಂಡು ಬಂದಿದ್ದು ಇಂದು ಚರ್ಚೆಯಾಗಲಿದೆ.

    ರಾಜ್ಯಾದ್ಯಂತ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ವಸತಿ ಇಲಾಖೆಯಿಂದ ಅನುಷ್ಠಾನಗೊಳಿಸಲಾಗುವ ವಿವಿಧ ವಸತಿ ಯೋಜನೆಯಡಿ ನಿಗದಿಪಡಿಸುವ ಗುರಿಯಲ್ಲಿ ಅಲ್ಪಸಂಖ್ಯಾತರಿಗೆ 10% ಮೀಸಲಾತಿ ನಿಗದಿಯಾಗಿದೆ. ಈ ಮೀಸಲಾತಿಯನ್ನು 15% ಏರಿಕೆ ಮಾಡುವ ಸಂಬಂಧ ಕ್ಯಾಬಿನೆಟ್‌ನಲ್ಲಿ ಚರ್ಚೆ ನಡೆಸಿ  ಇಂದು ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದೆ.  ಇದನ್ನೂ ಓದಿ: ಕರ್ನಾಟಕಕ್ಕೆ ಹೆಚ್‌ಡಿಕೆ, ಜೋಶಿ ಕೊಡುಗೆ ಏನು? ಚರ್ಚೆಗೆ ಬರಲಿ: ಪ್ರದೀಪ್ ಈಶ್ವರ್ ಪಂಥಾಹ್ವಾನ

    ಗುತ್ತಿಗೆಯಲ್ಲೂ ಮೀಸಲಾತಿ
    ಗುತ್ತಿಗೆ ಮೀಸಲಾತಿಯು ಈವರೆಗೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಪ್ರವರ್ಗ 1ರವರೆಗೆ ಅನ್ವಯವಾಗುತ್ತಿತ್ತು. ಈ ಸೌಲಭ್ಯವನ್ನು ಮುಸ್ಲಿಮರಿಗೆ (ಪ್ರವರ್ಗ 2–ಬಿ) ವಿಸ್ತರಿಸುವ ನಿರ್ಧಾರವನ್ನು ರಾಜ್ಯ ಸರ್ಕಾರ ಕೈಗೊಂಡಿತ್ತು. ಇದನ್ನೂ ಓದಿ: ಗೃಹ ಲಕ್ಷ್ಮಿ ಹಣ ಮೇ ತಿಂಗಳದ್ದು ಮಾತ್ರ ಬಾಕಿಯಿದೆ: ಹೆಬ್ಬಾಳ್ಕರ್

    ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಮಾರ್ಚ್‌ 7ರಂದು ಮಂಡಿಸಿದ ಬಜೆಟ್‌ನಲ್ಲಿ ಮೀಸಲಾತಿ ನೀಡುವ ಬಗ್ಗೆ ಘೋಷಣೆ ಮಾಡಿದ್ದರು. ವಿಪಕ್ಷಗಳ ವಿರೋಧದ ಮಧ್ಯೆ ಸರ್ಕಾರ ಬಜೆಟ್‌ ಅಧಿವೇಶನದಲ್ಲಿ ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ (ಕೆಟಿಪಿಪಿ) ಕಾಯ್ದೆಗೆ ತಿದ್ದುಪಡಿ ತರುವ ಮಸೂದೆಗೆ ಒಪ್ಪಿಗೆ ನೀಡಿತ್ತು.

    ಮಸೂದೆ ಕಾಯ್ದೆಯಾಗಿ ಜಾರಿಯಾದರೆ 2 ಕೋಟಿ ರೂ. ವೆಚ್ಚದ ಕಾಮಗಾರಿಗಳು, 1 ಕೋಟಿ ರೂ.ವರೆಗಿನ ಸರಕು ಮತ್ತು ಸೇವೆಗಳ ಪೂರೈಕೆಯ ಟೆಂಡರ್‌ನಲ್ಲಿ ಮುಸ್ಲಿಮರಿಗೆ 4% ಮೀಸಲಾತಿ ಸಿಗಲಿದೆ. ರಾಜ್ಯ ಸರ್ಕಾರ ಕಳುಹಿಸಿದ್ದ ಈ ಮಸೂದೆಯನ್ನು ರಾಜ್ಯಪಾಲ ಥಾವರ್‌ ಸಿಂಗ್‌ ಗೆಹ್ಲೋಟ್‌ (Thawar Chand Gehlot) ಅವರು ರಾಷ್ಟ್ರಪತಿಗಳಿಗೆ ಕಳುಹಿಸಿದ್ದಾರೆ.

  • ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

    ದೇಶಾದ್ಯಂತ ಬಕ್ರೀದ್‌ ಆಚರಣೆ ಸಂಭ್ರಮ; ಜಮ್ಮು-ಕಾಶ್ಮೀರದಲ್ಲಿ ಶಾಂತಿಯುತವಾಗಿ ಪ್ರಾರ್ಥನೆ ಸಲ್ಲಿಕೆ

    – ಆಪರೇಷನ್‌ ಸಿಂಧೂರ ಕಾರ್ಯಾಚರಣೆ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಹಬ್ಬ

    ಶ್ರೀನಗರ: ದೇಶಾದ್ಯಂತ ಮುಸ್ಲಿಂ (Muslims) ಬಾಂಧವರಿಂದು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ ಸಂಕೇತಿಸುವ ಪವಿತ್ರ ಬಕ್ರೀದ್‌ (Eid Al Adha) ಹಬ್ಬ ಆಚರಿಸುತ್ತಿದ್ದಾರೆ.

    ಜಮ್ಮು ಮತ್ತು ಕಾಶ್ಮೀರ, ಉತ್ತರ ಪ್ರದೇಶದ ಸಂಭಾಲ್‌, ಪಾಟ್ನಾದ ಗಾಂಧಿ ಮೈದಾನ, ನವದೆಹಲಿ, ಬೆಂಗಳೂರು ಸೇರಿದಂತೆ ವಿವಿಧೆಡೆ ಶಾಂತಿಯುವಾಗಿ ನಮಾಜ್‌ ಮಾಡುವ ಮೂಲಕ ಬಕ್ರೀದ್‌ ಹಬ್ಬ ಆಚರಿಸುತ್ತಿದ್ದಾರೆ. ವಿಶೇಷವೆಂದರೆ ಕೆಲ ದಿನಗಳ ಹಿಂದೆಯಷ್ಟೇ ಪಹಲ್ಗಾಮ್‌ ಭಯೋತ್ಪಾದಕ ದಾಳಿ ಬಳಿಕ ಸಂಘರ್ಷಪೀಡಿತವಾಗಿದ್ದ ಜಮ್ಮು-ಕಾಶ್ಮೀರದ ಪಾಲ್ಪೋರಾ (Sonwar) ಸೋನ್ವಾರ್‌ನ ಬಾಲಕಿಯರ ಪ್ರೌಢಶಾಲೆಯಲ್ಲಿ ಶಾಂತಿಯುತವಾಗಿ ಮುಸ್ಲಿಂ ಬಾಂಧವರು ಪ್ರಾರ್ಥನೆ ಸಲ್ಲಿಸಿದ್ದಾರೆ.

    ಬಕ್ರೀದ್‌ ಹಿನ್ನೆಲೆ ಏನು?
    ಪುಣ್ಯ ಸಂಪಾದಿರುವ ರಂಜಾನ್ ತಿಂಗಳ ಉಪವಾಸದ ಬಳಿಕ ‘ಈದ್ ಉಲ್ ಫಿತ್ರ್’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ‘ಬಕ್ರೀದ್’ನ ಮುಖ್ಯ ಆಶಯ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಎರಡೂವರೆ ಸಾವಿರ ವರ್ಷಗಳ ಹಿಂದೆ ಹುಟ್ಟಿದ್ದರು ಎಂದು ಮುಸ್ಲಿಂ ಬಾಂಧವರ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖವಾಗಿದೆ. ಇದನ್ನೂ ಓದಿ: ತ್ಯಾಗದ ಪ್ರತೀಕ ʻಬಕ್ರೀದ್‌ʼ

    ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್‌ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ. ಇದನ್ನೂ ಓದಿ: ಈಗ ನಾನು ಇದ್ದಿದ್ರೆ ಕೆ.ಎಲ್‌.ರಾಹುಲ್‌ನ ಆರ್‌ಸಿಬಿಗೆ ಖರೀದಿ ಮಾಡ್ತಿದ್ದೆ: ವಿಜಯ್‌ ಮಲ್ಯ

    ಮನೆ ಮನೆಗಳಲ್ಲಿ ಹಬ್ಬದೂಟ:
    ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ. ಇದನ್ನೂ ಓದಿ: Stampede Case | ಡಿಸಿ ನೇತೃತ್ವದ ತನಿಖೆ ಚುರುಕು – 25ಕ್ಕೂ ಹೆಚ್ಚು ಗಾಯಾಳುಗಳಿಗೆ ನೋಟಿಸ್, ಜೂ.11ಕ್ಕೆ ವಿಚಾರಣೆ

    ಜಾನುವಾರು ಬಲಿ ನೀಡುವ ಆಚರಣೆ:
    ಜಾನುವಾರುಗಳನ್ನು ಬಲಿ ಕೊಡುವುದು ಸಹ ‘ಬಕ್ರೀದ್’ನ ಪ್ರಮುಖ ಆಚರಣೆಯಾಗಿದೆ. ಪ್ರವಾದಿ ಇಬ್ರಾಹಿಂ ಅವರ ಜೀವನದಲ್ಲಿ ನಡೆದಿದ್ದ ಘಟನೆಯೊಂದರ ನೆನಪಿನಲ್ಲಿ ಜಾನುವಾರು ಬಲಿ ನೀಡಲಾಗುತ್ತದೆ. ಇದಕ್ಕೆ ಒಂದು ಹಿನ್ನೆಲೆಯೂ ಇದೆ.

    ಅಲ್ಲಾಹುನ ಆದೇಶದಂತೆ ಇಬ್ರಾಹಿಂ, ತಮ್ಮ ಪುತ್ರ ಇಸ್ಮಾಯಿಲ್ ಅವರನ್ನು ಬಲಿಯರ್ಪಿಸಲು ಮುಂದಾಗುವರು. ತಮ್ಮ ಮಗನನ್ನೇ ಬಲಿ ನೀಡಲು ಸಿದ್ಧವಾಗಿದ್ದ ಇಬ್ರಾಹಿಂ ಅವರ ಭಕ್ತಿಯನ್ನು ಅಲ್ಲಾಹನು ಮೆಚ್ಚಿ ಪುತ್ರನ ಬದಲು ಒಂದು ಟಗರನ್ನು ಬಲಿಯರ್ಪಿಸುವಂತೆ ಸೂಚಿಸುತ್ತಾರೆ. ಇದು ತಮ್ಮ ಧರ್ಮಗ್ರಂಥಗಳಲ್ಲೂ ಉಲ್ಲೇಖವಾಗಿದೆ ಎಂದು ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.

    ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಜಾನುವಾರು ಬಲಿ ಅರ್ಪಿಸಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಪ್ರಾಣಿಬಲಿ ನೀಡಬೇಕು. ಪ್ರಾಣಿಯಿಂದ ಲಭಿಸಿದ ಮಾಂಸವನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚಬೇಕು.

    ಹಜ್ ಯಾತ್ರೆ:
    ಸೌದಿ ಅರೇಬಿಯಾದ ಮಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುವ ಸಮಯದಲ್ಲೇ ಈ ಹಬ್ಬ ಆಚರಿಸಲಾಗುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ 9ರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ. ಪುಣ್ಯ ಸಂಪಾದಿಸುವ ರಂಜಾನ್ ಮಾಸದಲ್ಲೂ ಮುಸ್ಲಿಂ ಬಾಂಧವರು ಮಕ್ಕಾ, ಮದೀನಕ್ಕೆ ಭೇಟಿ ನೀಡುತ್ತಾರೆ.

  • ತ್ಯಾಗದ ಪ್ರತೀಕ ʻಬಕ್ರೀದ್‌ʼ

    ತ್ಯಾಗದ ಪ್ರತೀಕ ʻಬಕ್ರೀದ್‌ʼ

    ಮುಸ್ಲಿಂ ಬಾಂಧವರು ಪ್ರವಾದಿ ಇಬ್ರಾಹಿಂ ಅವರ ತ್ಯಾಗ-ಬಲಿದಾನ, ಅಚಲ ದೈವ ಭಕ್ತಿ ಹಾಗೂ ಅವರ ಪುತ್ರ ಹಜರತ್‌ ಇಸ್ಮಾಯಿಲ್‌ ಅವರ ದೈಬ ಭಕ್ತಿಯನ್ನು ಸಂಕೇತಿಸುವ ಹಬ್ಬವೇ ‘ಈದುಲ್ ಅದ್‌ಹಾʼ. ಭಾರತದಲ್ಲಿ ಈ ಹಬ್ಬವನ್ನು ಮುಸ್ಲಿಂ (Muslims) ಬಾಂಧವರ ಪವಿತ್ರ ಬಕ್ರೀದ್‌ (Bakrid Festival) ಎಂದು ಆಚರಿಸುತ್ತಾರೆ. ಈ ಬಾರಿ ಜೂನ್‌ 07 ರಂದು (ಇಂದು) ದೇಶದಾದ್ಯಂತ ಮುಸ್ಲಿಮರು ಹಬ್ಬವನ್ನು ಸಂಭ್ರಮದಿಂದ ಆಚರಿಸುತ್ತಿದ್ದಾರೆ.

    ಪುಣ್ಯ ಸಂಪಾದಿರುವ ರಂಜಾನ್‌ (Ramdhan) ತಿಂಗಳ ಉಪವಾಸದ ಬಳಿಕ ‘ಈದ್‌ ಉಲ್‌ ಫಿತ್ರ್‌’ ಹಬ್ಬ ಆಚರಿಸುವುದಾದರೆ, ಇಸ್ಲಾಮಿಕ್ ಕ್ಯಾಲೆಂಡರಿನ ‘ದುಲ್ ಹಜ್’ ತಿಂಗಳ 10ರಂದು ಬಕ್ರೀದ್‌ ಆಚರಣೆ ನಡೆಯುತ್ತದೆ. 4 ಸಾವಿರ ವರ್ಷಗಳಿಗೂ ಹಿಂದೆ ಹುಟ್ಟಿದ್ದ ಪ್ರವಾದಿ ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸುವುದು ‘ಬಕ್ರೀದ್‌’ನ ಮುಖ್ಯ ಆಶಯ. ಇಬ್ರಾಹಿಂ ಅವರು ಪ್ರವಾದಿ ಮುಹಮ್ಮದ್ ಅವರಿಗಿಂತ ಎರಡೂವರೆ ಸಾವಿರ ವರ್ಷಗಳ ಹಿಂದೆ ಹುಟ್ಟಿದ್ದರು ಎಂದು ಮುಸ್ಲಿಂ ಬಾಂಧವರ ಪವಿತ್ರ ಗ್ರಂಥಗಳಲ್ಲಿ ಉಲ್ಲೇಖವಾಗಿದೆ.

    ramzan

    ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವುದು, ಸೋದರತ್ವ ಬೆಳೆಸಿಕೊಳ್ಳುವುದು, ಅಲ್ಲಾಹುವಿಗಾಗಿ ಯಾವುದೇ ತ್ಯಾಗಕ್ಕೂ ಸಿದ್ಧರಾಗಬೇಕು ಎಂಬ ಸಂದೇಶವನ್ನು ಈ ಹಬ್ಬ ಸಾರುತ್ತದೆ. ಈ ದಿನ ಮಸೀದಿಗಳಲ್ಲಿ ಸಾಮೂಹಿಕ ಈದ್ ನಮಾಜ್ ಇರುತ್ತದೆ. ಮಕ್ಕಳು, ಹಿರಿಯರು ಹೊಸ ಉಡುಗೆ ತೊಟ್ಟು ಪ್ರಾರ್ಥನೆಯಲ್ಲಿ ಪಾಲ್ಗೊಳ್ಳುವರು. ನಮಾಜ್‌ಗೂ ಮುನ್ನ ಕೆಲ ಹೊತ್ತು ‘ತಕ್ಷೀರ್’ ಮೊಳಗಿಸಲಾಗುತ್ತದೆ.

    ಮನೆ ಮನೆಗಳಲ್ಲಿ ಹಬ್ಬದೂಟ:
    ಮನೆಗಳಲ್ಲಿ ಹಬ್ಬದ ಊಟ, ವಿಶೇಷ ಖಾದ್ಯಗಳನ್ನು ತಯಾರಿಸುವರು. ಗೆಳೆಯರು, ಬಂಧುಗಳನ್ನು ಆಹ್ವಾನಿಸಿ ಜೊತೆಯಾಗಿ ಊಟ ಮಾಡಿ, ಸಂಭ್ರಮ ಹಂಚಿಕೊಳ್ಳುವರು. ಹಬ್ಬದ ದಿನ ದಾನವಾಗಿ ದೊರೆಯುವ ಮಾಂಸ, ಹಣ, ದಿನಸಿ ಸಾಮಗ್ರಿಗಳಿಂದ ಎಷ್ಟೋ ಬಡಕುಟುಂಬಗಳಿಗೂ ಹಬ್ಬದ ಸಂಭ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ಕಲ್ಪಿಸುತ್ತದೆ.

    ಜಾನುವಾರು ಬಲಿ ನೀಡುವ ಆಚರಣೆ:
    ಜಾನುವಾರುಗಳನ್ನು ಬಲಿ ಕೊಡುವುದು ಸಹ ‘ಬಕ್ರೀದ್‌’ನ ಪ್ರಮುಖ ಆಚರಣೆಯಾಗಿದೆ. ಪ್ರವಾದಿ ಇಬ್ರಾಹಿಂ ಅವರ ಜೀವನದಲ್ಲಿ ನಡೆದಿದ್ದ ಘಟನೆಯೊಂದರ ನೆನಪಿನಲ್ಲಿ ಜಾನುವಾರು ಬಲಿ ನೀಡಲಾಗುತ್ತದೆ. ಇದಕ್ಕೆ ಒಂದು ಹಿನ್ನೆಲೆಯೂ ಇದೆ.

    Bakrid

    ಅಲ್ಲಾಹುನ ಆದೇಶದಂತೆ ಇಬ್ರಾಹಿಂ, ತಮ್ಮ ಪುತ್ರ ಇಸ್ಮಾಯಿಲ್ ಅವರನ್ನು ಬಲಿಯರ್ಪಿಸಲು ಮುಂದಾಗುವರು. ತಮ್ಮ ಮಗನನ್ನೇ ಬಲಿ ನೀಡಲು ಸಿದ್ಧವಾಗಿದ್ದ ಇಬ್ರಾಹಿಂ ಅವರ ಭಕ್ತಿಯನ್ನು ಅಲ್ಲಾಹನು ಮೆಚ್ಚಿ ಪುತ್ರನ ಬದಲು ಒಂದು ಟಗರನ್ನು ಬಲಿಯರ್ಪಿಸುವಂತೆ ಸೂಚಿಸುತ್ತಾರೆ. ಇದು ತಮ್ಮ ಧರ್ಮಗ್ರಂಥಗಳಲ್ಲೂ ಉಲ್ಲೇಖವಾಗಿದೆ ಎಂದು ಮುಸ್ಲಿಂ ಧರ್ಮಗುರುಗಳು ಹೇಳಿದ್ದಾರೆ.

    ಇಬ್ರಾಹಿಂ ಅವರ ತ್ಯಾಗವನ್ನು ನೆನಪಿಸಲು ಹಬ್ಬದ ದಿನ ಜಾನುವಾರು ಬಲಿ ಅರ್ಪಿಸಲಾಗುತ್ತದೆ. ಆರ್ಥಿಕವಾಗಿ ಸಬಲರಾಗಿರುವ ಎಲ್ಲರೂ ಪ್ರಾಣಿಬಲಿ ನೀಡಬೇಕು. ಪ್ರಾಣಿಯಿಂದ ಲಭಿಸಿದ ಮಾಂಸವನ್ನು ಸಮನಾಗಿ ಮೂರು ಪಾಲು ಮಾಡಬೇಕು. ಅದರಲ್ಲಿ ಒಂದು ಭಾಗವನ್ನು ಸ್ವತಃ ಬಳಸಿಕೊಳ್ಳಬಹುದು. ಇನ್ನೆರಡು ಪಾಲುಗಳನ್ನು ಸಂಬಂಧಿಕರು ಹಾಗೂ ಬಡವರಿಗೆ ಹಂಚಬೇಕು.

    Bakrid

    ಹಜ್ ಯಾತ್ರೆ:
    ಸೌದಿ ಅರೇಬಿಯಾದ ಮಕ್ಕಾದಲ್ಲಿ ಪವಿತ್ರ ಹಜ್ ಯಾತ್ರೆ ನಡೆಯುವ ಸಮಯದಲ್ಲೇ ಈ ಹಬ್ಬ ಆಚರಿಸಲಾಗುತ್ತದೆ. ಜೀವನದಲ್ಲಿ ಒಂದು ಬಾರಿಯಾದರೂ ಹಜ್ ಯಾತ್ರೆ ಕೈಗೊಳ್ಳಬೇಕು ಎಂದು ಇಸ್ಲಾಂ ಹೇಳುತ್ತದೆ. ಹಜ್‌ನ ಧಾರ್ಮಿಕ ವಿಧಿ-ವಿಧಾನಗಳು ಈ ಹಬ್ಬದೊಂದಿಗೆ ಮುಕ್ತಾಯಗೊಳ್ಳುತ್ತದೆ. ಬಕ್ರೀದ್ ಮುನ್ನಾದಿನ ಅಥವಾ ‘ದುಲ್ ಹಜ್’ ತಿಂಗಳ 9ರಂದು ಹಜ್ ಯಾತ್ರಿಕರು ಮಕ್ಕಾ ನಗರದ ಅರಫಾತ್ ಎಂಬ ಬೆಟ್ಟದ ಬಳಿ ಸೇರುತ್ತಾರೆ. ಈ ಯಾತ್ರಿಕರಿಗೆ ಬೆಂಬಲ ನೀಡಲು ವಿಶ್ವದಾದ್ಯಂತ ಮುಸ್ಲಿಮರು ಈ ದಿನ ಉಪವಾಸವಿರುತ್ತಾರೆ. ಪುಣ್ಯ ಸಂಪಾದಿಸುವ ರಂಜಾನ್‌ ಮಾಸದಲ್ಲೂ ಮುಸ್ಲಿಂ ಬಾಂಧವರು ಮಕ್ಕಾ, ಮದೀನಕ್ಕೆ ಭೇಟಿ ನೀಡುತ್ತಾರೆ.

  • ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರಿಗೆ 36 ಜನರ ಲಿಸ್ಟ್‌ ರೆಡಿ – ಪೊಲೀಸರಿಂದ ಕಾನೂನು ಪ್ರಕ್ರಿಯೆ ಶುರು!

    ದಕ್ಷಿಣ ಕನ್ನಡ ಜಿಲ್ಲೆಯಿಂದ ಗಡಿಪಾರಿಗೆ 36 ಜನರ ಲಿಸ್ಟ್‌ ರೆಡಿ – ಪೊಲೀಸರಿಂದ ಕಾನೂನು ಪ್ರಕ್ರಿಯೆ ಶುರು!

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯಲ್ಲಿ ಹಿಂದೂ ಮುಖಂಡರು ಹಾಗೂ ಕಾರ್ಯಕರ್ತರ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ ಬಿಜೆಪಿ ಮುಖಂಡ ಅರುಣ್‌ ಕುಮಾರ್‌ ಪುತ್ತಿಲ ಸೇರಿದಂತೆ ಒಟ್ಟು 36 ಜನರ ಗಡಿಪಾರಿಗೆ ಪೊಲೀಸ್‌ ಇಲಾಖೆ ಕಾನೂನು ಪ್ರಕ್ರಿಯೆ ಶುರು ಮಾಡಿದೆ.

    ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ವಿಟ್ಲ, ಸುಳ್ಯ, ಬೆಳ್ಳಾರೆ, ಬೆಳ್ತಂಗಡಿ, ಪುಂಜಾಲಕಟ್ಟೆ, ಕಡಬ, ಉಪ್ಪಿನಂಗಡಿ ಠಾಣಾ ವ್ಯಾಪ್ತಿಯಲ್ಲಿನ 15 ಜನ ಮುಸ್ಲಿಮರು ಸೇರಿದಂತೆ ಒಟ್ಟು 36 ಜನರನ್ನ ಗಡಿಪಾರು ಮಾಡಲು ಪೊಲೀಸ್‌ ಇಲಾಖೆ ಮುಂದಾಗಿದೆ. ಭರತ್ ಕುಮ್ಡೇಲು, ಮಹೇಶ್ ಶೆಟ್ಟಿ ತಿಮರೋಡಿ ಕೂಡ ಗಡಿಪಾರು ಲಿಸ್ಟ್‌ನಲ್ಲಿದ್ದಾರೆ. ಇದನ್ನೂ ಓದಿ: ರಾಕೇಶ್‌ ಪೂಜಾರಿ ನಿವಾಸಕ್ಕೆ ರಿಷಬ್‌ ಶೆಟ್ಟಿ ದಂಪತಿ ಭೇಟಿ – ತಾಯಿ, ತಂಗಿಗೆ ಸಾಂತ್ವನ ಹೇಳಿದ ನಟ

    ಸಾಲು ಸಾಲು ಹತ್ಯೆಗಳಿಂದ ಪ್ರಕ್ಷುಬ್ಧಗೊಂಡಿದ್ದ ದಕ್ಷಿಣ ಕನ್ನಡದಲ್ಲೀಗ.. ಆಪರೇಷನ್ ಶಾಂತಿ ಶುರುವಾಗಿದೆ. ಮಂಗಳೂರಿನಲ್ಲಿ ಕಳೆದ ವಾರ ಮುಸ್ಲಿಂ ಯುವಕ ಅಬ್ದುಲ್ ರಹಿಮಾನ್ ಹತ್ಯೆ ಬಳಿಕ ದಕ್ಷಿಣ ಕನ್ನಡ ಸ್ವಲ್ಪಮಟ್ಟಿಗೆ ಉದ್ವಿಗ್ನಗೊಂಡಿತ್ತು. ಬೆನ್ನಲ್ಲೇ ಮಂಗಳೂರು ಕಮಿಷನರ್, ದಕ್ಷಿಣ ಕನ್ನಡ ಎಸ್‌ಪಿಯನ್ನು ಸರ್ಕಾರ ಬದಲಿಸಿತ್ತು. ಇದೀಗ ಆರೋಪಿಗಳಿಗೆ ಸಹಕರಿಸುವ, ಆಶ್ರಯ ನೀಡುವ ಎಲ್ಲರನ್ನೂ ನಾವು ಆರೋಪಿಗಳೇ ಎಂದು ಪರಿಗಣಿಸುತ್ತೇವೆ ಅಂತ ಇಬ್ಬರೂ ಎಚ್ಚರಿಕೆ ಕೊಟ್ಟಿದ್ದರು. ಇದನ್ನೂ ಓದಿ:  ಕಲ್ಲಡ್ಕ ಪ್ರಭಾಕರ್ ಭಟ್ ಸೇರಿ 15 ಜನರ ವಿರುದ್ಧ ಎಫ್‌ಐಆರ್; ಕೇಸ್ ವಾಪಸ್ ಪಡೆಯಲು ಬಿಜೆಪಿ ಒತ್ತಾಯ

    ಬೆನ್ನಲ್ಲೇ ಶಾಂತಿ ಕದಡುವವರ ವಿರುದ್ಧ ಎಫ್‌ಐಆರ್‌ಗಳು ದಾಖಲಾಗ್ತಿವೆ. ಆದರೆ, ಕಾಂಗ್ರೆಸ್ ಸರ್ಕಾರ ಬಿಜೆಪಿ ಶಾಸಕರು, ಹಿಂದೂ ಕಾರ್ಯಕರ್ತರನ್ನು ಟಾರ್ಗೆಟ್ ಮಾಡ್ತಿದೆ ಅನ್ನೋ ಆರೋಪ ಜೋರಾಗಿದೆ. ದಕ್ಷಿಣ ಕನ್ನಡ, ತುಮಕೂರು ಹಾಗೂ ಹುಬ್ಬಳ್ಳಿಯಲ್ಲಿ ಸರ್ಕಾರ ನಡೆ ದ್ವೇಷ ರಾಜಕೀಯ ಅಂತ ಬಿಜೆಪಿ ಕೆಂಡಕಾರಿದೆ. ಇದನ್ನೂ ಓದಿ: ಶಾಲೆಗಳ ಸಹಯೋಗದಲ್ಲಿ ಬೆಂಗಳೂರು ಹವಾಮಾನ ಕಾರ್ಯಯೋಜನೆ ಕ್ಲಬ್‌ಗಳ ರಚನೆ: ಡಿ.ಕೆ ಶಿವಕುಮಾರ್

  • ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

    ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ | ಮತ್ತಿಬ್ಬರು ಆರೋಪಿಗಳು ಅರೆಸ್ಟ್‌ – ಹತ್ಯೆಗೆ ಕಾರಣವೇ ಇನ್ನೂ ಸಸ್ಪೆನ್ಸ್!‌

    – 5 ವಿಶೇಷ ತಂಡ ರಚನೆ, ಪೊಲೀಸರ ತನಿಖೆ ಚುರುಕು

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದಲ್ಲಿ ನಡೆದ ರಹಿಮಾನ್ ಹತ್ಯೆ (Abdul Rahiman Murder Case) ಪ್ರಕರಣದಲ್ಲಿ ಒಟ್ಟು ಐವರು ಆರೋಪಿಗಳ ಬಂಧನವಾಗಿದೆ. ದ್ವೇಷದ ಹಿನ್ನೆಲೆ ಹತ್ಯೆ ನಡೆದಿದೆ ಅನ್ನೋದು ತನಿಖೆಯಿಂದ ಗೊತ್ತಾಗಿದ್ರೂ, ಹತ್ಯೆ ನಡೆದಿರೋ ನಿಖರ ಕಾರಣ ಏನು ಅನ್ನೋ ಬಗ್ಗೆ ತನಿಖೆ ಮುಂದುವರಿದಿದೆ.

    Abdul Rahim Murder 1

    ಬಂಟ್ವಾಳದ ಕುರಿಯಾಳ ನಿವಾಸಿ ದೀಪಕ್ (21), ಅಮ್ಮುಂಜೆ ನಿವಾಸಿ ಪೃಥ್ವಿರಾಜ್ (21), ಅಮ್ಮುಂಜೆ ನಿವಾಸಿ ಚಿಂತನ್ (19), ಸುಮಿತ್, ರವಿರಾಜ್ ಬಂಧಿತ ಆರೋಪಿಗಳು. ಹಳೇ ದ್ವೇಷದ ಹಿನ್ನೆಲೆ ಈ ಹತ್ಯೆ ನಡೆಸಿದ್ದಾರೆ ಅನ್ನೋದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಆದ್ರೆ ನಿಖರ ಕಾರಣ ಇನ್ನೂನಿಗೂಢವಾಗಿಯೇ ಉಳಿದಿದೆ. ಪೂರ್ವದ್ವೇಷದ ಹತ್ಯೆಯೋ, ಕೋಮುದ್ವೇಷದ ಹತ್ಯೆಯೋ, ಸುಹಾಸ್ ಶೆಟ್ಟಿ ಹತ್ಯೆಗೆ ಪ್ರತಿಕಾರದ ಹತ್ಯೆಯೋ ಅನ್ನೋದು ಖಚಿತಗೊಂಡಿಲ್ಲ. ಬಂಟ್ವಾಳ ಡಿವೈಎಸ್‌ಪಿ ವಿಜಯ್ ಪ್ರಸಾದ್ ನೇತೃತ್ವದಲ್ಲಿ 5 ವಿಶೇಷ ತಂಡಗಳನ್ನ ಮಾಡಿ ತನಿಖೆ ನಡೆಸುತ್ತಿದ್ದು ಎಲ್ಲಾ ಆಯಾಮಗಳಲ್ಲೂ ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಮಂಗಳೂರಲ್ಲಿ ಸಾಲು ಸಾಲು ಹತ್ಯೆ ಬೆನ್ನಲ್ಲೇ ಇಬ್ಬರು ಐಪಿಎಸ್‌ ಅಧಿಕಾರಿಗಳ ಎತ್ತಂಗಡಿ

    1 ತಿಂಗಳಲ್ಲಿ ಮೂವರ ಹತ್ಯೆ:
    ರಹಿಮಾನ್ ಹತ್ಯೆ ಯಾವ ಕಾರಣಕ್ಕಾಗಿ ನಡೆದಿದೆ ಅನ್ನೋದು ಸ್ಪಷ್ಟವಾಗದಿದ್ದರೂ ಇದು ಸುಹಾಸ್ ಶೆಟ್ಟಿ ಹತ್ಯೆಗೆ ರಿವೇಂಜ್ ಎಂದು ಎಲ್ಲೆಡೆ ಸುದ್ದಿಯಾಗಿದೆ. ಇನ್ನೊಂದೆಡೆ ಇದು ಬೇರೆಯೇ ದ್ವೇಷದಿಂದ ನಡೆದ ಹತ್ಯೆ ಅನ್ನೋ ಮಾತು ಹರಿದಾಡುತ್ತಿದೆ. ಇದಕ್ಕೆಲ್ಲ ಪೊಲೀಸ್ ತನಿಖೆಯೇ ಉತ್ತರ ನೀಡಬೇಕಿದೆ. ಈ ನಡುವೆ ಕಳೆದ ಒಂದು ತಿಂಗಳಲ್ಲಿ ಅಂದ್ರೆ ಎಪ್ರಿಲ್ 27 ರಿಂದ ಮೇ 27ರ ವರೆಗೆ ಬರೋಬ್ಬರಿ ಮೂವರ ಹತ್ಯೆಯಾಗಿದೆ. ಮೇ 27ಕ್ಕೆ ಕುಡುಪುನಲ್ಲಿ ಅಶ್ರಫ್ ಎಂಬ ಯುವಕನನ್ನು ಹಿಂದೂ ಯುವಕರು ಗುಂಪು ಹತ್ಯೆ ನಡೆಸಿದ್ದರು. ಇದಾದ ನಾಲ್ಕೇ ದಿನದಲ್ಲಿ ಅಂದ್ರೆ ಮೇ 1 ರಂದು ಬಜ್ಪೆಯಲ್ಲಿ ಸುಹಾಸ್ ಶೆಟ್ಟಿಯನ್ನು ಮುಸ್ಲಿಂ ಯುವಕರ ಗುಂಪು ಹತ್ಯೆ ಮಾಡಿತ್ತು. ಇದಾದ ಬಳಿಕ ಮೇ 27 ರಂದು ಬಂಟ್ವಾಳದ ಕುರಿಯಾಳ ಈರಾಕೋಡಿ ಎಂಬಲ್ಲಿ ಅಬ್ದುಲ್ ರಹಿಮಾನ್‌ನನ್ನ ಹಿಂದೂ ಯುವಕರು ಹತ್ಯೆ ನಡೆಸಿದ್ದಾರೆ. ಇದನ್ನೂ ಓದಿ: ಅಬ್ದುಲ್‌ ರಹಿಮಾನ್‌ ಹತ್ಯೆ ಕೇಸ್‌ – ಮೂವರು ಆರೋಪಿಗಳ ಬಂಧನ

    Abdul Rahim

    ಹೀಗಾಗಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಹಿಂದೂ-ಮುಸ್ಲಿಮರು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದ್ದರು. ರಹಿಮಾನ್ ಹತ್ಯೆಯ ಬಳಿಕವಂತು ಜಿಲ್ಲೆಯ ಕಾಂಗ್ರೆಸಿಗರು, ಮುಸ್ಲಿಮರು ಸೇರಿ ಎಲ್ಲರೂ ರಾಜ್ಯ ಸರ್ಕಾರದ ವೈಫಲ್ಯದ ವಿರುದ್ಧ ಕಿಡಿಕಾರಿದ್ದರು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಕಂಟ್ರೋಲ್ ಮಾಡಲಾಗದ ಇಬ್ಬರು ಐಪಿಎಸ್ ಅಧಿಕಾರಿಗಳನ್ನ ಏಕಕಾಲದಲ್ಲಿ ವರ್ಗಾವಣೆ ಮಾಡಿದೆ. ಮಂಗಳೂರು ಪೊಲೀಸ್ ಕಮೀಷನರ್ ಅನುಪಮ್ ಅಗರ್ವಾಲ್ ರನ್ನ ಎತ್ತಂಗಡಿ ಮಾಡಿ ನೂತನ ಕಮೀಷನರ್ ಆಗಿ ಖಡಕ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿಯವರನ್ನ ನೇಮಕ ಮಾಡಿದೆ. ಇದನ್ನೂ ಓದಿ: ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ

  • ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ

    ಮುಸ್ಲಿಂ ಯುವಕರ ಜೀವಕ್ಕೆ ಬೆಲೆಯೇ ಇಲ್ಲ, ಪೂರ್ವನಿಯೋಜಿತವಾಗಿ ಕೊಲೆ: ರಿಯಾಜ್ ಕಡಂಬು ಆಕ್ರೋಶ

    – ಮುಸಲ್ಮಾನ ವ್ಯಕ್ತಿ ಪ್ರಚೋದನಕಾರಿ ಭಾಷಣ ಮಾಡಿದ್ರೆ, ಭಯೋತ್ಪಾದಕನ ರೀತಿಯಲ್ಲಿ ಬಂಧನ
    – ಮೃತನ ಕುಟುಂಬಕ್ಕೆ ಸರ್ಕಾರ 50 ಲಕ್ಷ ರೂ. ಪರಿಹಾರ ನೀಡ್ಬೇಕು

    ಮಂಗಳೂರು: ಪ್ರಚೋದನಕಾರಿ ಭಾಷಣ ಮಾಡಿದ್ರೆ ಬಂಧನ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ ಅಂತ ಹೇಳ್ತಾರೆ. ಆದರೆ ಮುಸಲ್ಮಾನ ವ್ಯಕ್ತಿ ಮಾಡಿದ್ರೆ ಭಯೋತ್ಪಾದಕನ ರೀತಿಯಲ್ಲಿ ಬಂಧನ ಮಾಡ್ತಾರೆ. ಆದರೆ ಸಂಘ ಪರಿವಾರದ ವ್ಯಕ್ತಿ ಮಾಡಿದರೆ ಯಾವುದೇ ಕ್ರಮ ಇಲ್ಲ ಎಂದು ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ರಿಯಾಜ್ ಕಡಂಬು (Riyaz Kadambu) ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಮಂಗಳೂರಿನಲ್ಲಿ (Mangaluru) ಮಾತನಾಡಿದ ಅವರು, ಅಮಾಯಕ ಮುಸ್ಲಿಂ ಯುವಕ ಅಬ್ದುಲ್ ರಹಿಮಾನ್ (Abdul Rahiman) ಹತ್ಯೆ ನಡೆದಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ ಮೂರು ಕೊಲೆಗಳಾಗಿದೆ. ಜಿಲ್ಲೆಯಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣ ಆಗಿದೆ. ಕುಡುಪುವಿನಲ್ಲಿ ಅಮಾಯಕ ಅಶ್ರಫ್‌ನನ್ನ ಗುಂಪು ಹತ್ಯೆ ಮಾಡಿದರು. ಆ ಬಳಿಕ ರೌಡಿಶೀಟರ್ ಸುಹಾಸ್ ಶೆಟ್ಟಿ ಕೊಲೆ ಬಳಿಕ ಪ್ರಚೋದನೆ ಹೆಚ್ಚಾಯಿತು ಎಂದು ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ರಾಜಕಾರಣಿಗಳೊಂದಿಗೆ ವೇದಿಕೆ ಹಂಚಿಕೊಂಡ ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್

    ಆ ಬಳಿಕ ಕೆಲ ಬಿಜೆಪಿ, ಭಜರಂಗದಳದ ದ್ವೇಷ ಭಾಷಣಕಾರರು ಮುಸ್ಲಿಂ ಸಮುದಾಯವನ್ನು ಗುರಿ ಮಾಡಿದರು. ರೌಡಿಶೀಟರ್ ಕೊಲೆಗೆ ಪ್ರತೀಕಾರವಾಗಿ ಮನೆಗೆ ನುಗ್ಗಿ ಕೊಚ್ಚಿ ಹಾಕ್ತೇವೆ ಎಂದರು. ಭರತ್ ಕುಮ್ಡೇಲು, ಶರಣ್ ಪಂಪ್‌ವೆಲ್ ಹೇಳಿಕೆ ನೀಡಲು ಆರಂಭ ಮಾಡಿದರು. ಕಾಂಗ್ರೆಸ್ ಆಡಳಿತದಲ್ಲೂ ಇಂತಹ ಘಟನೆಗಳು ನಡೀತಾ ಇದೆ. ನಾವು ಇಲ್ಲಿನ ಪೊಲೀಸ್ ಅಧಿಕಾರಿಗಳಿಗೆ ಇದರ ಗಂಭೀರತೆ ಬಗ್ಗೆ ಹೇಳ್ತಾ ಇದ್ದೆವು. ಇಲ್ಲಿ ಅಘೋಷಿತ ಕರ್ಪ್ಯೂ, ಭಯದ ವಾತಾವರಣ ಇದೆ ಎಂದಿದ್ದೇವೆ. ಆದರೆ ಪೊಲೀಸರು ಕಾಟಾಚಾರಕ್ಕೆ ಎಫ್‌ಐಆರ್ ಮಾಡಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಮಳೆ ನೀರು ಸರಾಗವಾಗಿ ಹರಿಯಲು ಅಡ್ಡವಿರುವ ಕಟ್ಟಡ ತೆರವಿಗೆ ಸೂಚನೆ: ಡಿಕೆಶಿ

    ಎಫ್‌ಐಆರ್ ಆದ ನಂತರ ದ್ವೇಷ ಭಾಷಣಕಾರರ ಬಂಧನ ಆಗಿಲ್ಲ. ಬಂಧನ ಮಾಡಿದ್ರೂ ಜಾಮೀನಿನ ಮೇಲೆ ಬಂದು ರಾಜಾರೋಷವಾಗಿ ಮಾತನಾಡ್ತಾ ಇದ್ದಾರೆ. ಜಿಲ್ಲೆಯಲ್ಲಿ 7 ಗಂಟೆಗೆ ಬಂದ್ ಆಗ್ತದೆ ಎಂದು ಡಿಸಿಎಂ ಹೇಳ್ತಾರೆ. ಆದರೆ ಅದನ್ನು ಪರಿಹಾರ ಮಾಡುವ ಕೆಲಸ ಸರ್ಕಾರ ಮಾಡುತ್ತಿಲ್ಲ. ಅಮಾಯಕ ಯುವಕ ಅಬ್ದುಲ್ ರಹಿಮಾನ್‌ನನ್ನ ಪೂರ್ವ ನಿಯೋಜಿತವಾಗಿ ಹತ್ಯೆ ಮಾಡಲಾಗಿದೆ. ಅತ್ಯಂತ ಭೀಕರವಾಗಿ ಕೊಚ್ಚಿ ರಹಿಮಾನ್ ಕೊಲೆ ಮಾಡಲಾಗಿದೆ ಎಂದಿದ್ದಾರೆ.

    ಜಿಲ್ಲೆಯಲ್ಲಿ ಪ್ರಚೋದನಕಾರಿ ಹೇಳಿಕೆ, ದ್ವೇಷ ಭಾಷಣ ಹೆಚ್ಚಾಗ್ತಿದೆ. ಇವರಿಗೆ ಒಬ್ಬ ಮುಸಲ್ಮಾನನ ಕೊಲೆ ಆಗಬೇಕಿತ್ತು. ಅದನ್ನ ಮಾಡಿದ್ದಾರೆ. ಕೊಲೆ ಆದಾಗ ಗೃಹ ಸಚಿವರು ಬಂದು ಸಭೆ ಮಾಡಿ ಭರವಸೆ ಕೊಟ್ಟು ಹೋಗ್ತಾರೆ. ಇದು ಈ ಸರ್ಕಾರದ ಸಂಪೂರ್ಣ ವೈಫಲ್ಯ. ಮುಸ್ಲಿಂ ಯುವಕರ ಜೀವಕ್ಕೆ ಬೆಲೆ ಇಲ್ಲದಾಗಿದೆ. ಪ್ರಚೋದನಕಾರಿ ಭಾಷಣ ಮಾಡಿದ್ರೆ ಬಂಧನ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ ಅಂತ ಹೇಳ್ತಾರೆ. ಮುಸಲ್ಮಾನ ವ್ಯಕ್ತಿ ಮಾಡಿದ್ರೆ ಭಯೋತ್ಪಾದಕನ ರೀತಿಯಲ್ಲಿ ಬಂಧನ ಮಾಡ್ತಾರೆ. ಆದರೆ ಸಂಘ ಪರಿವಾರದ ವ್ಯಕ್ತಿ ಮಾಡಿದರೆ ಯಾವುದೇ ಕ್ರಮ ಇಲ್ಲ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಸರ್ಕಾರಕ್ಕೆ ಭಾರೀ ಹಿನ್ನಡೆ – ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್‌ ಕೇಸ್‌ ಹಿಂದಕ್ಕೆ ಪಡೆದ ಆದೇಶವೇ ರದ್ದು

    ಶರಣ್ ಪಂಪ್‌ವೆಲ್‌ನನ್ನ ನಾಟಕ ಮಾಡಲು ಬಂಧನ ಮಾಡಿದ್ದಾರೆ. ದುರ್ಬಲ ಸೆಕ್ಷನ್ ಹಾಕಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ. ಕದ್ರಿ ಪೊಲೀಸ್ ಠಾಣೆ ಎದುರು ಹಿಂದೂ ಕಾರ್ಯಕರ್ತರು ಜಮೆ ಆದಾಗ ಪೊಲೀಸರು ಯಾಕೆ ತಡೆಯಲಿಲ್ಲ. ಇವರ ಬಂದೂಕಿನಲ್ಲಿ ಗುಂಡು ಇರಲಿಲ್ವಾ ಅಥವಾ ಕೈಯ್ಯಲ್ಲಿ ಲಾಠಿ ಇರಲಿಲ್ವಾ? ಜಿಲ್ಲೆಯ ಕಾನೂನು ಸುವ್ಯವಸ್ಥೆ ಸರಿ ಮಾಡಲು ಇಲ್ಲಿನ ಅಧಿಕಾರಿಗಳ ಬದಲಾವಣೆ ಆಗಬೇಕು. ಹತ್ಯೆ ಪ್ರಕರಣ ವಿಶೇಷ ತನಿಖಾ ದಳದ ಮೂಲಕ ಪ್ರೊಬೆಷನರಿ ಐಪಿಎಸ್ ಅಧಿಕಾರಿ ಮೂಲಕ ತನಿಖೆ ಆಗಲಿ ಇಲ್ಲಿನ ಎಲ್ಲಾ ಹತ್ಯೆಗಳ ಬಗ್ಗೆ ನ್ಯಾಯಾಂಗ ತನಿಖೆ ಆಗಲಿ ಎಂದು ಆಗ್ರಹಿಸಿದ್ದಾರೆ.

    ರಹಿಮಾನ್ ಒಬ್ಬ ಶ್ರಮ ಜೀವಿ. ಅಂತವರನ್ನ ಕೊಲ್ಲುವುದಾ ಇವರ ವೀರತ್ವ? ಫಾಜಿಲ್ ಕೊಲೆಯಾದಗಲೂ ಒಬ್ಬ ಅಮಾಯಕನ ಕೊಲೆ ಮಾಡಿದ್ರು ಇದನ್ನ ವೀರತ್ವ ಅಂತ ಹೇಳಲ್ಲ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇದೇ ರೀತಿ ಆದರೆ ಜಿಲ್ಲೆಯ ಭವಿಷ್ಯ ಹಾಳಾಗುತ್ತದೆ ಎಂದಿದ್ದಾರೆ. ಇದನ್ನೂ ಓದಿ: ನೀರಾವರಿ ಇಲಾಖೆಯಲ್ಲಿ ಹೆಚ್ಚು ಎಂಜಿನಿಯರ್‌ಗಳಿಲ್ಲ: ಸಿಎಸ್‌ಗೆ ಖಾರವಾದ ಪತ್ರ ಬರೆದಿದ್ದಕ್ಕೆ ಡಿಕೆಶಿ ಸಮರ್ಥನೆ

    ಬಂಟ್ವಾಳದ ಅಬ್ದುಲ್ ರಹಿಮಾನ್ ಬರ್ಬರ ಹತ್ಯೆಯನ್ನು ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ವೈಯಕ್ತಿಕ ದ್ವೇಷದ ಹತ್ಯೆ ಅಂತ ಬೇಜವಾಬ್ದಾರಿ ಹೇಳಿಕೆ ಕೊಡ್ತಾರೆ. ಸಂಘ ಪರಿವಾರದ ಐಟಿ ಸೆಲ್ ಪೋಸ್ಟ್ ನೋಡಿ ದಿನೇಶ್ ಗುಂಡೂರಾವ್ ಈ ರೀತಿ ಹೇಳಿಕೆ ಕೊಡ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬಹಿರಂಗವಾಗಿ ಕ್ಷಮೆ ಕೇಳದಿದ್ರೆ ಕಮಲ್ ಸಿನಿಮಾ ರಿಲೀಸ್ ಮಾಡೋಕೆ ಅವಕಾಶ ಕೊಡಲ್ಲ: ಸಾರಾ ಗೋವಿಂದು

    ಈ ವಿಚಾರದಲ್ಲಿ ಸಿಎಂ ಪ್ರತಿಕ್ರಿಯೆ ನೀಡಿಲ್ಲ. ಡಿಜಿಪಿ ಯಾಕೆ ಈವರೆಗೆ ಜಿಲ್ಲೆಗೆ ಭೇಟಿ ಕೊಟ್ಟಿಲ್ಲ. ಕೊಲೆ ಮಾಡ್ತೇವೆ ಎನ್ನುವ ಭಾಷಣಕಾರರ ಬಂಧನ ಯಾಕೆ ಆಗುತ್ತಿಲ್ಲ. ಇಲ್ಲಿ ಮುಸ್ಲಿಂ ಸಮುದಾಯ ಮತ್ತು ಸಂಘ ಪರಿವಾರಕ್ಕೆ ಒಂದು ನೀತಿ. ಮುಸ್ಲಿಂ ಶಾಸಕರು ಈ ಹತ್ಯೆ ಬಗ್ಗೆ ಒಂದೇ ಒಂದು ಮಾತು ಆಡ್ತಿಲ್ಲ. ಯು.ಟಿ.ಖಾದರ್ ವಿದೇಶದಲ್ಲಿ ಕೂತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಕಾರಿನ ಮೇಲೆ ಮಳೆ ನೀರು ಹಾರಿಸಿದ್ದಕ್ಕೆ ಹಲ್ಲೆ – ಬೆರಳು ಕಚ್ಚಿ ವಿಕೃತಿ ಮೆರೆದ ಮಾಲೀಕ

    ಈ ಕೊಲೆಯನ್ನ ಸಂಘ ಪರಿವಾರ ಮತ್ತು ಬಿಜೆಪಿ ಮಾಡಿದೆ. ಈ ಕೊಲೆ ಮಾಡಿದ ಕುಟುಂಬದ ಜೊತೆ ಸರ್ಕಾರ ನಿಲ್ಲಬೇಕಿದೆ. ಅವರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರವನ್ನು ಸರ್ಕಾರ ಘೋಷಣೆ ಮಾಡಬೇಕು. ಆಸ್ಪತ್ರೆ ಸೇರಿದ ಯುವಕನ ಚಿಕಿತ್ಸಾ ವೆಚ್ಚ ಸರ್ಕಾರ ಭರಿಸಿ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.