Tag: Musuru

  • ವರ್ಗಾವಣೆ ಮಾಡಿದರೂ ಜಾಗ ಖಾಲಿ ಮಾಡದ ಮುಕ್ತ ವಿವಿ ಹಣಕಾಸು ಅಧಿಕಾರಿ!

    ವರ್ಗಾವಣೆ ಮಾಡಿದರೂ ಜಾಗ ಖಾಲಿ ಮಾಡದ ಮುಕ್ತ ವಿವಿ ಹಣಕಾಸು ಅಧಿಕಾರಿ!

    ಮೈಸೂರು: ರಾಜ್ಯ ಮುಕ್ತ ವಿವಿಯ (Open University) ಹಣಕಾಸು ಅಧಿಕಾರಿ (Finance Officer) ಮೂರು ಬಾರಿ ವರ್ಗಾವಣೆಯಾದರೂ (Transfer) ಸರ್ಕಾರದ ಆದೇಶಕ್ಕೆ ಡೋಂಟ್ ಕೇರ್ ಎನ್ನುತ್ತಾ ಇದ್ದ ಜಾಗದಲ್ಲೇ ಕುಳಿತಿದ್ದಾರೆ.

    ರಾಜ್ಯ ಮುಕ್ತ ವಿವಿಯಲ್ಲಿ ಹಣಕಾಸು ಅಧಿಕಾರಿ ಖಾದರ್ ಪಾಷಾರನ್ನು ಆ ಸ್ಥಾನದಿಂದ ವರ್ಗಾವಣೆ ಮಾಡಿ ತಿಂಗಳು ಕಳೆದರೂ ಪಾಷಾ ಮುಕ್ತ ವಿವಿ ಬಿಟ್ಟು ಹೋಗುತ್ತಿಲ್ಲ. ಮುಕ್ತ ವಿವಿಯಿಂದ ಮಂಡ್ಯದ ಮೈ ಶುಗರ್ ಕಂಪನಿ ಲಿಮಿಟೆಡ್ ಹಣಕಾಸು ಅಧಿಕಾರಿಯಾಗಿ ಜುಲೈ 26ರಂದು ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ. ಇದನ್ನೂ ಓದಿ: ಚೈತ್ರಾ ಗ್ಯಾಂಗ್ ಮಾದರಿಯಲ್ಲೇ ಮತ್ತೊಂದು ಪ್ರಕರಣ – ಬಿಜೆಪಿ ಟಿಕೆಟ್ ಕೊಡಿಸುವುದಾಗಿ ಲಕ್ಷ ಲಕ್ಷ ವಂಚನೆ

    ಆದರೂ ಸರ್ಕಾರದ ಆದೇಶಕ್ಕೆ ಖಾದರ್ ಪಾಷಾ ಡೋಂಟ್ ಕೇರ್ ಅಂದಿದ್ದಾರೆ. ಹೀಗಾಗಿ ಸರ್ಕಾರ ಸೆ.7ರಂದು ಖಾದರ್ ಪಾಷಾಗೆ ತಿಳುವಳಿಕೆ ಪತ್ರ ಕಳುಹಿಸಿದೆ. ವರ್ಗಾವಣೆ ಮಾಡಿರುವ ಸ್ಥಳದಲ್ಲಿ ಕರ್ತವ್ಯಕ್ಕೆ ಹಾಜರಾಗಿಲ್ಲ. ಈ ಕೂಡಲೇ ಸೂಚಿಸಿರುವ ಸ್ಥಳಕ್ಕೆ ಹಣಕಾಸು ಅಧಿಕಾರಿಯಾಗಿ ಹಾಜರಾಗಿ ಸಿಟಿಸಿ ಪತ್ರವನ್ನು ಕಚೇರಿಗೆ ಸಲ್ಲಿಸಿ ಎಂದು ಕರ್ನಾಟಕ ರಾಜ್ಯ ಲೆಕ್ಕ ಪರಿಶೋಧಕ ಪ್ರಧಾನ ನಿರ್ದೇಶಕರು ಪತ್ರದಲ್ಲಿ ಸೂಚಿಸಿದ್ದಾರೆ. ಇದನ್ನೂ ಓದಿ: ಚೈತ್ರಾ ಗೆಳೆಯ ಶ್ರೀಕಾಂತ್‌ ವಿರುದ್ಧದ ಕೇಸ್‌ಗೆ ಮತ್ತೊಂದು ಸೆಕ್ಷನ್‌ ದಾಖಲು

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಬಲಿ!

    ಕಾಡಾನೆ ತುಳಿತಕ್ಕೆ ಕೂಲಿ ಕಾರ್ಮಿಕ ಬಲಿ!

    ಮೈಸೂರು: ಕಾಡಾನೆಯೊಂದು ಕೆಲಸದಲ್ಲಿ ತೊಡಗಿದ್ದ ಕೂಲಿ ಕಾರ್ಮಿಕನನ್ನು ಕಾಲಿನಿಂದ ತುಳಿದು ಸಾಯಿಸಿದ ಘಟನೆ ಎಚ್.ಡಿ.ಕೋಟೆಯ ಹೈರಿಗೆ-ಮಾದಾಪುರ ಸಮೀಪದಲ್ಲಿ ನಡೆದಿದೆ.

    ರಾಯಚೂರಿನ ಕಕ್ಕೇರಿ ಮೂಲದ ಹನುಮಂತಪ್ಪ(50) ಮೃತ ದುರ್ದೈವಿ. ನಾಲೆ ಕೆಲಸಕ್ಕಾಗಿ ಮೈಸೂರಿಗೆ 8 ಮಂದಿ ಕೂಲಿ ಕಾರ್ಮಿಕರು ಬಂದಿದ್ದರು. ಅವರಲ್ಲಿ ಹನುಮಂತಪ್ಪ ಕೂಡ ಒಬ್ಬರು. ಬೇರೆ ಊರಿನಿಂದ ಜೀವನ ನಡೆಸಲು ಕೆಲಸಕ್ಕೆಂದು ಬಂದ ಹನುಮಂತಪ್ಪ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ಇಂದು ಮುಂಜಾನೆ ಕಾರ್ಮಿಕರೆಲ್ಲ ನಾಲೆ ಕೆಲಸದಲ್ಲಿ ತೊಡಗಿದ್ದ ವೇಳೆ ಕಾಡಾನೆ ಏಕಾಏಕಿ ದಾಳಿ ನಡೆಸಿ ಕಾಲಿನಿಂದ ಕಾರ್ಮಿಕನನ್ನು ತುಳಿದಿದೆ. ಪರಿಣಾಮ ಸ್ಥಳದಲ್ಲೇ ಹನುಮಂತಪ್ಪ ಸಾವನ್ನಪ್ಪಿದ್ದಾರೆ.

    ಶುಕ್ರವಾರ ರಾತ್ರಿ ಹೈರಿಗೆ-ಮಾದಾಪುರ ಸಮೀಪದ ಜಮೀನಿಗೆ ಕಾಡಾನೆಗಳು ನುಗ್ಗಿದ್ದವು. ಈ ವೇಳೆ ರೈತರು ಆನೆಯನ್ನ ಓಡಿಸಲು ಮುಂದಾಗಿದ್ದು, ಜಮೀನಿಂದ ನಾಲೆಯತ್ತ ಬಂದ ಕಾಡಾನೆ ಕಾರ್ಮಿಕನ ಮೇಲೆ ದಾಳಿ ಮಾಡಿ ಬಲಿ ಪಡೆದಿದೆ.

    ಇದೀಗ ಮೃತ ವ್ಯಕ್ತಿಯ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.