ಇದೀಗ ಮೈಸೂರು ರಸ್ತೆಯ (Mysuru Road) ಕರೆಕಲ್ಲು ಆಂಜನೇಯ ದೇವಾಲಯದ ಜಾಗದಲ್ಲಿ 40 ವರ್ಷಗಳಿಂದ ಅನಧಿಕೃತವಾಗಿದ್ದ ಕೆಲವು ಅಂಗಡಿಗಳಿಗೆ ಬೀಗ ಹಾಕಿ, ಜಪ್ತಿ ಮಾಡಿದ್ದು, ವಾಸಕ್ಕೆ ಯೋಗ್ಯವಿಲ್ಲ ಎಂದು ಸ್ಪಷ್ಟನೆ ನೀಡಿದೆ.
– ಸೇವಾಶುಲ್ಕ ಹೆಚ್ಚಳ ಸರ್ಕಾರದ ತೀರ್ಮಾನವಲ್ಲ, ಆಡಳಿತ ಮಂಡಳಿ ನಿರ್ಧಾರವೆಂದ ಸಚಿವ
ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ (Muzrai Department) ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದ್ದು, ಇನ್ಮೇಲೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ.
ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ (Temples) ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನ, ಆಗಮ ಪಂಡಿತರ ಪರಿಶೀಲನೆ ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲವೆಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಸೆ.22 ರಿಂದ ಜಾತಿ ಜನಗಣತಿ ಆರಂಭ – ಸರ್ಕಾರದಿಂದ ಅಧಿಕೃತ ಆದೇಶ ಜಾರಿ
ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ? ಬೆಂಗಳೂರು ನಗರ
* ಯೋಗ ನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ
* ನಂದಿ ತೀರ್ಥ ದೇವಾಲಯ, ಮಲ್ಲೇಶ್ವರಂ
* ಮಹಾಗಣಪತಿ ದೇವಾಲಯ, ಮಲ್ಲೇಶ್ವರಂ
ಚಿಕ್ಕಬಳ್ಳಾಪುರ
* ವಿಧುರಾಶ್ವಥ ನಾರಾಯಣ ಸ್ವಾಮಿ ದೇವಾಲಯ
* ವೆಂಕಟರಮಣ ದೇವಾಲಯ, ತಲಕಾಯ ಬೆಟ್ಟ
ದಕ್ಷಿಣ ಕನ್ನಡ
* ಮಹಾಲಿಂಗೇಶ್ವರ ದೇವಾಲಯ, ಪುತ್ತೂರು
* ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
* ಸೌತಡ್ಕ ಮಹಾಗಣಪತಿ ದೇವಾಲಯ
* ಸೂರ್ಯನಾರಾಯಣ ಸ್ವಾಮಿ ದೇವಾಲಯ, ಮರೋಳಿ
ಇನ್ನೂ ನಾಗಾರಾಧನೆ, ದೈವರಾಧನೆಗೆ ಹೆಸರಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ 2010ರಲ್ಲಿ ಸೇವಾಶುಲ್ಕ ಏರಿಕೆ ಮಾಡಲಾಗಿತ್ತು. 15 ವರ್ಷಗಳ ನಂತರ ಇದೀಗ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸೇವೆಗೆ ಈ ಹಿಂದೆ ಇದ್ದ ದರ 400 ರೂಪಾಯಿ, ಪರಿಷ್ಕೃತ ದರ 500 ರೂ.ಗೆ ಏರಿಕೆಯಾಗಿದೆ. ನಾಗಪ್ರತಿಷ್ಠೆಗೆ ಈ ಹಿಂದೆ ಇದ್ದ ದರ 400 ರೂಪಾಯಿ. ಆದರೆ ಧಾರ್ಮಿಕ ದತ್ತಿ ಇಲಾಖೆ ಪರಿಷ್ಕೃತ ದರ 500 ರೂಪಾಯಿ ಹೆಚ್ಚಿಸಿದೆ. ಹೀಗೆ ಉಳಿದ ಸೇವೆಗಳಲ್ಲೂ ಭಾರೀ ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್ ಮುಕಳೆಪ್ಪ ವಿರುದ್ಧ ದೂರು
ಬೆಂಗಳೂರು: ರಾಜ್ಯದ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡುವಾಗ ಕನ್ನಡದಲ್ಲಿ ಶ್ಲೋಕ ಹೇಳಬೇಕು, ಹೀಗಾಗಿ ಕನ್ನಡ ಶ್ಲೋಕ ಕಲಿಯಲು ಸೂಚನೆ ಕೊಡೋದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದರು.
ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ಪ್ರಶ್ನೆ ಕೇಳಿದರು. ನಮ್ಮ ಮುಜರಾಯಿ ದೇವಾಲಯಗಳಲ್ಲಿ ಪೂಜೆ ಮಾಡುವಾಗ ಶ್ಲೋಕಗಳನ್ನು ಸಂಸ್ಕೃತದಲ್ಲಿ ಹೇಳುತ್ತಿದ್ದಾರೆ. ತಮಿಳುನಾಡು ರಾಜ್ಯದಲ್ಲಿ ತಮಿಳಿನಲ್ಲಿ ಶ್ಲೋಕ ಹೇಳುತ್ತಾರೆ. ಅದೇ ರೀತಿ ಕರ್ನಾಟಕದ ದೇವಾಲಯಗಳಲ್ಲೂ ಕನ್ನಡದಲ್ಲಿ ಶ್ಲೋಕ ಹೇಳುವಂತೆ ಕ್ರಮ ಆಗಬೇಕು. ಹಿರೇಮಗಳೂರು ಕಣ್ಣನ್ ಅವರು ಕನ್ನಡದಲ್ಲಿ ಶ್ಲೋಕ ಹೇಳ್ತಾರೆ. ಅದರಂತೆ ಕನ್ನಡದಲ್ಲಿ ಶ್ಲೋಕ ಹೇಳುವಂತೆ ಕ್ರಮ ಆಗಬೇಕು ಎಂದರು.ಇದನ್ನೂ ಓದಿ: 2047ಕ್ಕೆ ವಾರ್ಷಿಕ 500 ದಶಲಕ್ಷ ಟನ್ ಉಕ್ಕು ಉತ್ಪಾದನೆ ಗುರಿ: ಹೆಚ್‌ಡಿಕೆ
ದೇವಾಲಯಗಳಲ್ಲಿ ಸ್ವಚ್ಛತೆ ಸರಿಯಾಗಿ ನಿರ್ವಹಣೆ ಆಗುತ್ತಿಲ್ಲ. ತಿರುಪತಿ ಮಾದರಿಯಲ್ಲಿ ನಮ್ಮ ದೇವಾಲಯಗಳಲ್ಲಿ ಸ್ವಚ್ಛತೆ ನಿರ್ವಹಣೆಗೆ ಕ್ರಮವಹಿಸಬೇಕು. ನಮ್ಮ ದೇವಾಲಯಗಳಲ್ಲಿ ಸ್ವಚ್ಛತೆ ಸರಿಯಾಗಿ ಆಗಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಸಚಿವ ರಾಮಲಿಂಗಾರೆಡ್ಡಿ ಅವರು ಉತ್ತರ ನೀಡಿ, ಆಗಮ ಶಿಕ್ಷಣದಲ್ಲಿ ಅನೇಕ ವರ್ಷಗಳಿಂದ ಸರ್ಟಿಫಿಕೇಟ್ ಕೊಟ್ಟಿರಲಿಲ್ಲ. ಈಗ ನಾವು ಕೊಡ್ತಿದ್ದೇವೆ. ಕನ್ನಡದಲ್ಲಿ ಶ್ಲೋಕ ಅಭ್ಯಾಸ ಮಾಡಲು ಸೂಚನೆ ಕೊಡ್ತೀವಿ ಎಂದರು. ದೇವಾಲಯಗಳಲ್ಲಿ ಆ.15ರಿಂದ ಪ್ಲಾಸ್ಟಿಕ್ ನಿಷೇಧ ಮಾಡಲಾಗುತ್ತಿದೆ. ದೇವಾಲಯಗಳಲ್ಲಿ ಪ್ಲಾಸ್ಟಿಕ್ ನಿಷೇಧದ ಜೊತೆಗೆ ಸ್ವಚ್ಛತೆಗೂ ಸೂಚನೆ ಕೊಡ್ತೀವಿ ಎಂದು ಹೇಳಿದರು.ಇದನ್ನೂ ಓದಿ: ಧರ್ಮಸ್ಥಳ ವಿಚಾರದಲ್ಲಿ ವರಸೆ ಬದಲಿಸಿದ ಸಿಎಂ – ಜೋಶಿ ಆರೋಪ
ಮುಜರಾಯಿ ಇಲಾಖೆ (Muzrai Department) ಆಯುಕ್ತ ವೆಂಕಟೇಶ್ ಅವರು `ಪಬ್ಲಿಕ್ ಟಿವಿ’ ಜೊತೆ ಮಾತನಾಡಿ, ಗಾಳಿ ಆಂಜನೇಯ ದೇವಸ್ಥಾನದ ಯಂತ್ರ, ಪ್ರಸಾದವನ್ನು ಆನ್‌ಲೈನ್ ಮೂಲಕ ರಾಜ್ಯದ ಮೂಲೆ ಮೂಲೆಗೂ ತಲುಪಿಸಲು ಮುಜರಾಯಿ ಇಲಾಖೆ ನಿರ್ಧರಿಸಿದೆ. ಜೊತೆಗೆ ಹೋಮ, ಹವನ ಮಾಡಿಸಲು ಶೀಘ್ರದಲ್ಲೇ ಆನ್‌ಲೈನ್ ಬುಕ್ಕಿಂಗ್ ಸೇವೆಯನ್ನು ಆರಂಭಿಸಲು ಮುಂದಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ದೇಗುಲ ಮುಜರಾಯಿ ವ್ಯಾಪ್ತಿಗೆ ಸೇರಿದ ಬಳಿಕ ಭಕ್ತರ ಸಂಖ್ಯೆಯಲ್ಲಿ ಹೆಚ್ಚಾಗಿದೆ. ಅಲ್ಲದೇ ಪೂಜಾದರ, ಹೋಮ, ಹವನ, ಪ್ರಸಾದ ದರದಲ್ಲಿ ಯಾವುದೇ ವ್ಯತ್ಯಾಸ ಇಲ್ಲ. ಹೀಗಾಗಿ ಆನ್‌ಲೈನ್ ಮೂಲಕ ಎಲ್ಲಾ ಸೇವೆಗಳನ್ನು ಭಕ್ತರಿಗೆ ಸಿಗುವಂತೆ ಮಾಡಲು ಮುಜರಾಯಿ ಇಲಾಖೆ ಮುಂದಾಗಿದೆ ಎಂದಿದ್ದಾರೆ.ಇದನ್ನೂ ಓದಿ: ಪ್ರಣಬ್ ಮೊಹಂತಿ ಕೇಂದ್ರ ಸೇವೆಗೆ ಹೋದ್ರೆ ಎಸ್‌ಐಟಿ ಮುಖ್ಯಸ್ಥರ ಬದಲಾವಣೆ – ಸಿಎಂ
ಅಮರಾವತಿ: ತಿರುಪತಿಗೆ (Tirupati) ತೆರಳುವ ಕರ್ನಾಟಕದ (Karnataka) ಭಕ್ತರಿಗೆ ಮುಜರಾಯಿ ಇಲಾಖೆ (Muzrai Department) ಗುಡ್ ನ್ಯೂಸ್ ನೀಡಿದೆ. ತಿರುಮಲದಲ್ಲಿ ನಿರ್ಮಿಸಿರುವ ಕಲ್ಯಾಣ ಮಂಟಪ ಇಂದಿನಿಂದ ಸೇವೆಗೆ ಸಿದ್ಧವಾಗಿದೆ. ತಿರುಮಲ ಕಲ್ಯಾಣ ಮಂಟಪದಲ್ಲಿ ಕರ್ನಾಟಕದ ಜೋಡಿಯ ಮೊದಲ ಮದುವೆ (Marriage) ಆಗುತ್ತಿದೆ. ಈಗಾಗಲೇ ಎಂಟು ಮದುವೆಗಳು ಬುಕ್ ಆಗಿವೆ.
ಮುಜರಾಯಿ ಇಲಾಖೆಯಿಂದ ತಿರುಪತಿಗೆ ತೆರಳುವ ಕರ್ನಾಟಕ ರಾಜ್ಯದ ಭಕ್ತರಿಗೆ ಸಿಹಿ ಸುದ್ದಿ ಸಿಕ್ಕಿದೆ. ಕಳೆದ ತಿಂಗಳು ತಿರುಮಲದಲ್ಲಿ ರಾಜ್ಯ ಮುಜರಾಯಿ ಇಲಾಖೆ ಕಲ್ಯಾಣ ಮಂಟಪ ಉದ್ಘಾಟನೆ ಮಾಡಿತ್ತು. ಈಗ ಈ ಕಲ್ಯಾಣ ಮಂಟಪದಲ್ಲಿ ಮೊದಲ ಮದುವೆ ಇಂದು ನಡೆಯುತ್ತಿದೆ. ಕರ್ನಾಟಕ ರಾಜ್ಯದ ಜೋಡಿಗಳ ಮೊದಲ ಮದುವೆ ನಡೆಯುತ್ತಿದ್ದು. ತಿರುಮಲ ಕಲ್ಯಾಣ ಮಂಟಪದಲ್ಲಿ ಮದುವೆಗಾಗಿ ರಾಜ್ಯದ ವಿವಿಧ ಜಿಲ್ಲೆಯ 8 ಜೋಡಿ ಮದುವೆಗೆ ಬುಕ್ಕಿಂಗ್ ಮಾಡಿದ್ದಾರೆ. ಇದನ್ನೂ ಓದಿ: ಕುಡಿದ ಮತ್ತಿನಲ್ಲಿ ತಾಯಿಗೆ ಬೆಂಕಿ – ಶವದ ಪಕ್ಕವೇ ಮಲಗಿದ್ದ ಪುತ್ರ ಅರೆಸ್ಟ್
ಇನ್ನೂ ನೂತನವಾಗಿ ಇರುವ ಕಲ್ಯಾಣ ಮಂಟಪದಲ್ಲಿ 36 ಕೊಠಡಿಗಳು ಇದ್ದು, 500 ಆಸನದ ವ್ಯವಸ್ಥೆ ಇದೆ. ಒಂದು ಮದುವೆಗೆ ಜಿಎಸ್‌ಟಿ ಸೇರಿಸಿ ಮೂರುವರೆ ಲಕ್ಷ ರೂ. ಆಗಲಿದೆ. ಸದ್ಯಕ್ಕೆ ಕಲ್ಯಾಣ ಮಂಟಪಕ್ಕೆ ತೆರಳಿ ಬುಕ್ಕಿಂಗ್ ಮಾಡುತ್ತಿದ್ದು, ಶೀಘ್ರದಲ್ಲೇ ಆನ್‌ಲೈನ್ ವ್ಯವಸ್ಥೆ ಕೂಡ ಜಾರಿ ಮಾಡಲಿದ್ದಾರೆ. ಇದನ್ನೂ ಓದಿ: ಖಾಸಗಿ ಅಂಬುಲೆನ್ಸ್‌ಗಳಿಗೆ ಶಾಕ್ ಕೊಟ್ಟ ಸರ್ಕಾರ- KPME ನಡಿ ಲೈಸೆನ್ಸ್ ಕಡ್ಡಾಯ
ಒಟ್ಟಾರೆ ತಿರುಪತಿಗೆ ತೆರಳೋ ಕರ್ನಾಟಕ ಭಕ್ತರು ತಿರುಪತಿಯಲ್ಲೆ ಮದುವೆ ಮಾಡಬೇಕು ಎಂಬ ಇಚ್ಛೆ ಇದ್ದರೆ ಮುಜರಾಯಿ ಇಲಾಖೆ ಅವಕಾಶ ಕಲ್ಪಿಸಿದೆ. ಬುಕ್ಕಿಂಗ್ ಮಾಡಿ ತಿರುಮಲದಲ್ಲಿ ಮದುವೆ ಆಗಬಹುದು. ಇದನ್ನೂ ಓದಿ: ಸೇನಾ ವಾಹನದ ಮೇಲೆ ಬಿದ್ದ ಬಂಡೆ – ಇಬ್ಬರು ಯೋಧರು ಸಾವು
ಬೆಂಗಳೂರು/ಬೆಳಗಾವಿ: ಸವದತ್ತಿ ರೇಣುಕಾ ಯಲ್ಲಮ್ಮನ (Savadatti Renuka Yellamma) ಗುಡ್ಡಕ್ಕೆ ಹೊಸ ಕಳೆ ನೀಡುವ ನಿಟ್ಟಿನಲ್ಲಿ ಅದರ ಕಾಮಗಾರಿಗಾಗಿ ಸರ್ಕಾರ 215 ಕೋಟಿ ರೂ. ಅನುಮೋದನೆ ನೀಡಿದೆ.
ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ, ದೇವಾಲಯದ ಅಭಿವೃದ್ಧಿಗೆ ಸಿದ್ಧಪಡಿಸಿದ `ಮಾಸ್ಟರ್ ಪ್ಲ್ಯಾನ್’ಗೆ ಅನುಮೋದಿನೆ ನೀಡಿದೆ. ಜೊತೆಗೆ ಅದರ ಕಾಮಗಾರಿಗಾಗಿ 215.25 ಕೋಟಿ ರೂ. ಅನುಮೋದನೆ ನೀಡಿದೆ. ಹೀಗಾಗಿ ಮುಂದಿನ ಎರಡು ವರ್ಷಗಳಲ್ಲಿ ರೇಣುಕಾ ಯಲ್ಲಮ್ಮ ದೇವಾಲಯದ ಚಿತ್ರಣವೇ ಸಂಪೂರ್ಣ ಬದಲಾಗಲಿದೆ.
ಈ ಕುರಿತು ಮುಜರಾಯಿ ಸಚಿವ (Muzrai) ರಾಮಲಿಂಗಾರೆಡ್ಡಿ ಮಾತನಾಡಿ, ರೇಣುಕಾ ಯಲ್ಲಮ್ಮ ಪ್ರಾಧಿಕಾರ ಮತ್ತು ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಸಹಯೋಗದಲ್ಲಿ ದೇವಾಲಯದ ಅಭಿವೃದ್ಧಿ ಮಾಡಲಾಗುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯಲ್ಲಿ ವೈವಿಧ್ಯಮಯ ಕಾಮಗಾರಿ ಕೈಗೆತ್ತಿಕೊಳ್ಳಲಿದ್ದು, ತಿರುಪತಿ ಮಾದರಿಯಲ್ಲಿ 14 ಕಾಮಗಾರಿಗಳು ನಡೆಯಲಿವೆ. ಮುಂದಿನ ಮೂರು-ನಾಲ್ಕು ತಿಂಗಳಲ್ಲಿ ಟೆಂಡರ್ ಕಾರ್ಯ ಪೂರ್ಣಗೊಳ್ಳುವುದು. ಅನ್ನ ದಾಸೋಹ ಭವನ ಸೇರಿದಂತೆ ಒಟ್ಟು 14 ಕಾಮಗಾರಿಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.ಇದನ್ನೂ ಓದಿ: ಧಾರವಾಡ | ವಿಚಾರಣೆ ವೇಳೆ ಪೊಲೀಸರ ಮೇಲೆ ಹಲ್ಲೆಗೆ ಯತ್ನ – ಕಳ್ಳರಿಬ್ಬರ ಕಾಲಿಗೆ ಗುಂಡೇಟು
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು (Gali Anjaneya Temple) ಮುಜರಾಯಿ ಇಲಾಖೆ (Muzrai Department) ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿದೆ.
ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು. ಇದನ್ನೂ ಓದಿ: ಕಪಿಲ್ ಶರ್ಮಾ ಕೆಫೆ ಮೇಲೆ ಖಲಿಸ್ತಾನಿ ಭಯೋತ್ಪಾದಕರಿಂದ ಗುಂಡಿನ ದಾಳಿ
ಇದೀಗ ಮುಜರಾಯಿ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸು ಮಾಡಲಾಗಿದೆ. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಅಂತ ಘೋಷಣೆ ಮಾಡಿದೆ. ಇದನ್ನೂ ಓದಿ: ರೀಲ್ಸ್ ಚಟ – ಟೆನ್ನಿಸ್ ಆಟಗಾರ್ತಿ ಮಗಳನ್ನು ಗುಂಡಿಕ್ಕಿ ಕೊಂದ ತಂದೆ
– ಆ.15 ರಿಂದ ನಿಷೇಧ ಜಾರಿ – 2 ತಿಂಗಳ ಒಳಗಡೆ ಪ್ಲಾಸ್ಟಿಕ್ ಪದಾರ್ಥಗಳನ್ನು ಖಾಲಿ ಮಾಡಬೇಕು
ಬೆಂಗಳೂರು: ಆಗಸ್ಟ್ 15ರಿಂದ ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ (Muzrai Department) ನೀರಿನ ಬಾಟಲ್ ಸೇರಿದಂತೆ ಎಲ್ಲಾ ಬಗೆಯ ಪ್ಲಾಸ್ಟಿಕ್ (Plastic) ಬಳಕೆಯನ್ನು ನಿಷೇಧ ಮಾಡಲಾಗುತ್ತದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.
ವಿಕಾಸಸೌಧದಲ್ಲಿ ಮುಜರಾಯಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಆಗಸ್ಟ್ 15 ರಿಂದ ಪ್ಲಾಸ್ಟಿಕ್ ಮುಕ್ತ ದೇವಾಲಯ (Plastic Free Temple) ಪ್ರಾರಂಭ ಮಾಡುತ್ತಿದ್ದೇವೆ. ದೇವಾಲಯಗಳಲ್ಲಿ ಯಾವುದೇ ಕಾರಣಕ್ಕೂ ಪ್ಲಾಸ್ಟಿಕ್ ಬಳಕೆ ಮಾಡಬಾರದು ಎಂದು ಸೂಚಿಸಿದರು.
ಸಭೆಯ ಹೈಲೈಟ್ಸ್ ಏನು?
ಮುಜರಾಯಿ ವ್ಯಾಪ್ತಿಯ ದೇವಾಲಯಗಳ ಮಾಹಿತಿಯನ್ನು 3 ತಿಂಗಳ ಒಳಗೆ ಕೊಡಬೇಕು. 3 ತಿಂಗಳ ಒಳಗೆ ಬಾಕಿ ಇರುವ 20 ಸಾವಿರ ಎಕರೆ ದೇವಾಲಯ ಜಮೀನು ಇಂಡೀಕರಣ ಆಗಬೇಕು.
ಗ್ರಾಮಾಂತರ ಮತ್ತು ನಗರ ಭಾಗದಲ್ಲಿ ಇರುವ ಮುಜರಾಯಿ ದೇವಾಲಯಗಳ ಆಸ್ತಿಗಳನ್ನ ಪ್ರತ್ಯೇಕ ಸರ್ವೆ ಮಾಡಬೇಕು. ದೇವಸ್ಥಾನ ಹೆಸರಿನಲ್ಲಿ ಖಾತೆ, ಆಸ್ತಿ ಪತ್ರ ದಾಖಲೆಗಳು ಸರಿಯಾಗಿ ಇರದಿದ್ದರೆ ಎಲ್ಲಾ ದೇವಾಲಯದ ಜಾಗ 3 ತಿಂಗಳ ಒಳಗಡೆ ಸರ್ವೆ ಮಾಡಿ ನೋಟಿಫಿಕೇಶನ್ ಮಾಡಲು ಸೂಚನೆ. ಇದನ್ನೂ ಓದಿ: Indore Couple | ಹನಿಮೂನ್ ಮರ್ಡರ್: ‘ರಾಜಾ’ಗೆ ‘ರಾಜ್’ ಮುಹೂರ್ತ!
ಅರ್ಚಕರಿಗೆ ತಸ್ತೀಕ್ ನೇರ ವರ್ಗಾವಣೆ(DBT) ಮೂಲಕ ನೀಡಲು ಕ್ರಮ. ಈಗ 25 ಸಾವಿರ ಅರ್ಚಕರ ಪೈಕಿ 14 ಸಾವಿರ ಅರ್ಚಕರು ಮಾಹಿತಿ ಕೊಟ್ಟಿದ್ದಾರೆ. ಉಳಿದವರು ಬೇಗ ಮಾಹಿತಿ ಕೊಟ್ಟರೆ ಅವರಿಗೂ DBT ಮೂಲಕ ತಸ್ತೀಕ್ ನೀಡಲು ಕ್ರಮ.
31 ಜಿಲ್ಲೆಗಳಲ್ಲಿ ಧಾರ್ಮಿಕ ಪರಿಷತ್ ರಚನೆಗೆ ಕ್ರಮಕ್ಕೆ ಸೂಚನೆ ನೀಡಲಾಗಿದೆ. 8 ಜಿಲ್ಲೆಯಲ್ಲಿ ಮಾತ್ರ ಧಾರ್ಮಿಕ ಪರಿಷತ್ ರಚನೆಯಾಗಿದ್ದು ಉಳಿದ ಕಡೆ ಶೀಘ್ರವೇ ಮಾಡಬೇಕು.
ಬೇರೆ ಬೇರೆ ರಾಜ್ಯದಲ್ಲಿ ಇರೋ ಮುಜರಾಯಿ ಇಲಾಖೆ ವಸತಿ ಭವನಗಳಲ್ಲಿ 3 ಸ್ಟಾರ್ ಸೌಲಭ್ಯ ಗಳನ್ನು ನೀಡಲು ನಿರ್ಧಾರ. ತಿರುಪತಿ, ತುಳಿಜಾಪುರ, ಪಂಡರಾಪುರ, ಸೇರಿ ಹಲವು ಕಡೆ ಭವನಗಳನ್ನು ನಿರ್ಮಾಣಕ್ಕೆ ಅಗತ್ಯ ಕ್ರಮ ತೆಗೆದುಕೊಳ್ಳುವುದು.
ಬೇರೆ ರಾಜ್ಯದಲ್ಲಿ ಇರುವ ಭವನಗಳ ರೂಮ್ ಬುಕ್ಕಿಂಗ್ ಅನ್ನು ಆನ್‌ಲೈನ್ ಮೂಲಕ ಜಾರಿ ಮಾಡಲು ವ್ಯವಸ್ಥೆ ರೂಪಿಸಲು ಸೂಚನೆ.
ಹೊಸ ಪ್ರಾಧಿಕಾರಗಳ ಸಮಗ್ರ ಯೋಜನೆಗೆ ಕ್ರಮವಹಿಸಲಾಗಿದೆ. ಹುಲಿಗೆಮ್ಮ, ಮಲೆ ಮಹದೇಶ್ವರ, ಘಾಟಿ ಸುಬ್ರಮಣ್ಯ, ರೇಣುಕಾ ಎಲ್ಲಮ್ಮ, ಚಾಮುಂಡೇಶ್ವರಿ ದೇವಾಲಯ ಅಭಿವೃದ್ಧಿ ಪ್ರಾಧಿಕಾರ ಮಾಸ್ಟರ್ ಪ್ಲ್ಯಾನ್ ಮಾಡಲು ನಿರ್ಧಾರ.
ಚಾಮುಂಡೇಶ್ವರಿ ಬೆಟ್ಟದಲ್ಲಿ ಒತ್ತುವರಿ ಆಗಿದ್ದ 11 ಎಕರೆ ಜಾಗವನ್ನು ತೆರವು ಮಾಡಲಾಗಿದೆ. ಉಳಿದ ಜಾಗ ತೆರವುಗೊಳಿಸಲು ಸೂಚನೆ.
ಬೆಂಗಳೂರು: ಮುಜರಾಯಿ ಇಲಾಖೆ (Muzrai Department) ರಾಜ್ಯದ ಜನರಿಗೆ ಸಿಹಿ ಸುದ್ದಿ ನೀಡಿದ್ದು, ಇ-ಪ್ರಸಾದ (E-Prasad) ಸೇವೆ ಮೂಲಕ ರಾಜ್ಯದ 400 ದೇಗುಲಗಳ ಪ್ರಸಾದ 15 ದಿನಗಳಲ್ಲಿ ಮನೆ ಬಾಗಿಲಿಗೆ ಬರಲಿದೆ.
ಈಗಾಗಲೇ ಧನುರ್ಮಾಸ ಮುಗಿದಿದ್ದು, ಗೃಹಪ್ರವೇಶ, ನಾಮಕರಣ ಸೇರಿದಂತೆ ಮದುವೆ ಸೀಜನ್ ಆರಂಭವಾಗಿದೆ. ಇಂತಹ ಶುಭ ಸಂದರ್ಭದಲ್ಲಿ ದೂರದ ಊರುಗಳಲ್ಲಿರುವ ದೇವಸ್ಥಾನಕ್ಕೆ ಹೋಗಿ ಪ್ರಸಾದ ತರುವುದು ಕಷ್ಟವಾಗುತ್ತದೆ. ಹೀಗಾಗಿ ಈ ಸಮಸ್ಯೆಯನ್ನು ಬಗೆಹರಿಸಲು ಮುಜರಾಯಿ ಸಿಹಿ ಸುದ್ದಿ ನೀಡಿದ್ದು, ಮನೆ ಬಾಗಿಲಿಗೆ ದೇವರ ಪ್ರಸಾದ ತಲುಪಲಿದೆ.ಇದನ್ನೂ ಓದಿ: ಮಾ.17ಕ್ಕೆ ಪುನೀತ್ ಹುಟ್ಟುಹಬ್ಬ – ‘ಅಪ್ಪು’ ಸಿನಿಮಾ ರೀ-ರಿಲೀಸ್
ಇತ್ತೀಚಿನ ದಿನಗಳಲ್ಲಿ ದೂರದ ದೇವಸ್ಥಾನಗಳಿಗೆ ಹೋಗಿ, ಜನರ ದಟ್ಟಣೆಯ ನಡುವೆ ದೇವರ ದರ್ಶನ ಪಡೆಯುವುದು ಕಷ್ಟ. ಈ ಹಿನ್ನೆಲೆ ದೇವಸ್ಥಾನಕ್ಕೆ ತೆರಳಿ ಪ್ರಸಾದ ಪಡೆಯಲು ಕಷ್ಟವಾಗುವ ಹಿನ್ನೆಲೆ ಭಕ್ತರ ಅನುಕೂಲಕ್ಕಾಗಿ ಮುಜರಾಯಿ ಇಲಾಖೆ ಹೊಸ ಪ್ರಯೋಗ ನಡೆಸಿದೆ. ಈ ಮೂಲಕ ರಾಜ್ಯದ ಪ್ರಮುಖ 10 ದೇವಾಲಯಗಳ ಪ್ರಸಾದ ಆನ್‌ಲೈನ್‌ನಲ್ಲಿ ಮನೆ ಬಾಗಿಲಿಗೆ ತಲುಪಿಸುವ ಪ್ರಯೋಗ ಆರಂಭಿಸಿತ್ತು. ಈ ಇ-ಪ್ರಸಾದ ಸೇವೆಗೆ ಭಕ್ತಾದಿಗಳಿಂದ ಉತ್ತಮ ರೆಸ್ಪಾನ್ಸ್ ಸಿಕ್ಕಿದೆ.
ಇದುವರೆಗೂ ಅಂದಾಜು 25 ಸಾವಿರ ಭಕ್ತಾದಿಗಳು ಇ-ಪ್ರಸಾದ ಪಡೆದಿದ್ದಾರೆ. ಹೀಗಾಗಿ ಮುಂದಿನ 15 ದಿನಗಳಲ್ಲಿ ರಾಜ್ಯದ 400 ದೇವಾಲಯಗಳಲ್ಲಿ ಇ-ಪ್ರಸಾದ ಸೇವೆ ಆರಂಭಿಸುವ ಯೋಜನೆಯನ್ನು ಮುಜರಾಯಿ ಇಲಾಖೆ ಹಾಕಿಕೊಂಡಿದೆ.
ಇ-ಪ್ರಸಾದದ ಅನುಕೂಲಗಳು:
ವೃದ್ಧರು ಮನೆಯಲ್ಲೇ ಕುಳಿತು ತಮಗಿಷ್ಟವಾದ ದೇವಸ್ಥಾನದ ಪ್ರಸಾದ ತರಿಸಿಕೊಳ್ಳಬಹುದು.
ವಿಶೇಷಚೇತನರು, ಅಂಧರು ಹೀಗೆ ಹಲವರಿಗೆ ಈ ಸೇವೆ ತುಂಬಾ ಉಪಯೋಗವಾಗಲಿದೆ.
ವಿಶೇಷ ದಿನಗಳಲ್ಲಿ ದೇವಸ್ಥಾನಗಳಲ್ಲಿ ಜನದಟ್ಟಣೆ ಹೆಚ್ಚಾಗಿರುತ್ತದೆ.
ಭಕ್ತರು ದೇವಸ್ಥಾನಕ್ಕೆ ಹೋದರೂ ಪ್ರಸಾದ ಸ್ವೀಕರಿಸುವುದು ಕಷ್ಟವಾಗುತ್ತದೆ
-ರಾಜ್ಯದ 400 ಸೇರಿ ಹೊರರಾಜ್ಯದ 3,500 ದೇವಾಲಯಗಳ ಮಾಹಿತಿ ಲಭ್ಯ
ಬೆಂಗಳೂರು: ರಾಜ್ಯ ಹಾಗೂ ಬೇರೆ ರಾಜ್ಯಗಳ ದೇವಾಲಯಕ್ಕೆ ತೆರಳುವವರಿಗೆ ಮುಜರಾಯಿ ಇಲಾಖೆ (Muzrai Department) ಗುಡ್‌ನ್ಯೂಸ್ ನೀಡಿದ್ದು, ಇನ್ಮುಂದೆ ದೇಗುಲದ ರೂಮ್‌ಗಳ ಮಾಹಿತಿ ವೈಬ್‌ಸೈಟ್‌ನಲ್ಲಿ ಲಭ್ಯವಾಗಲಿದೆ.
ಹೌದು, ಸಾಮಾನ್ಯವಾಗಿ ಹಬ್ಬ, ಹರಿದಿನದಂದು ಬಹುತೇಕ ಜನ ದೇವಾಲಯಗಳಿಗೆ ತೆರಳುತ್ತಾರೆ. ಈ ವೇಳೆ ದೇವಸ್ಥಾನಗಳ ಜೊತೆಗೆ ಅಲ್ಲಿನ ರೂಮ್‌ಗಳು ಕೂಡ ತುಂಬಾ ರಷ್ ಇರುತ್ತವೆ. ಈ ಸಮಯದಲ್ಲಿ ಉಳಿದುಕೊಳ್ಳಲು ಭಕ್ತಾದಿಗಳು ಪರದಾಡುತ್ತಾರೆ ಜೊತೆಗೆ ದುಪ್ಪಟ್ಟು ಹಣ ಕೊಟ್ಟು ರೂಮ್ ಮಾಡಲೇಬೇಕಾದ ಅನಿವಾರ್ಯತೆ ಎದುರಾಗುತ್ತದೆ. ಇದಕ್ಕೆಲ್ಲಾ ಬ್ರೇಕ್ ಹಾಕುವ ನಿಟ್ಟಿನಲ್ಲಿ, ರಾಜ್ಯ ಹಾಗೂ ಹೊರರಾಜ್ಯದ ದೇಗುಲಕ್ಕೆ ಹೋಗುವ ಭಕ್ತಾದಿಗಳಿಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ ನೀಡಿದೆ.ಇದನ್ನೂ ಓದಿ: ದಿನ ಭವಿಷ್ಯ 13-03-2025
ಈ ಬಾರಿಯ ಕರ್ನಾಟಕ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯನವರು ವಿವಿಧ ಕ್ಷೇತ್ರಗಳಿಗೆ ಹಣ ಮಂಜೂರು ಮಾಡಿದ್ದಾರೆ. ಅದರಂತೆ ಮುಜರಾಯಿ ಹಾಗೂ ಧಾರ್ಮಿಕ ಧತ್ತಿ ಇಲಾಖೆಗೆ ಸಂಬಂಧಿಸಿದಂತೆ ಹೊಸ ಯೋಜನೆಗಳನ್ನು ಘೋಷಿಸಿದೆ. ಅದರಲ್ಲಿ ರಾಜ್ಯದ ಭಕ್ತಾದಿಗಳಿಗೆ ಅನುಕೂಲವಾಗಲು ಕರ್ನಾಟಕ ದೇವಾಲಯಗಳ ವಸತಿ ಕೋಶವನ್ನು ನೀಡಲು ಧಾರ್ಮಿಕ ಧತ್ತಿ ಇಲಾಖೆ ಮುಂದಾಗಿದೆ. ಈ ಕೋಶದಂತೆ ವೆಬ್‌ಸೈಟ್‌ನಲ್ಲಿ ರಾಜ್ಯದ 400 ದೇವಾಲಯದ ಹಾಗೂ ಹೊರರಾಜ್ಯದ ಛತ್ರಗಳ ಅಂದಾಜು 3,500 ರೂಮ್‌ಗಳ ಬುಕ್ಕಿಂಗ್ ಮಾಹಿತಿ ಆನ್‌ಲೈನ್‌ನಲ್ಲಿ ಲಭ್ಯವಾಗಲಿದೆ.
ಇನ್ನೂ ಕರ್ನಾಟಕ ಟೆಂಪಲ್ಸ್ ಅಕಾಮಡೇಷನ್ ಡಾಟ್ ಕಾಮ್ (https://karnatakatemplesaccommodation.com) ವೆಬ್‌ಸೈಟ್‌ನಲ್ಲಿ ಭಕ್ತಾದಿಗಳು ದೇವಾಲಯದ ರೂಮ್‌ಗಳನ್ನು ಬುಕ್ ಮಾಡಬಹುದಾಗಿದೆ. ಈ ವೆಬ್‌ಸೈಟ್ ಕ್ಲಿಕ್ ಮಾಡಿದರೆ ದೇವಾಲಯದ ರೂಮ್‌ಗಳ ಮಾಹಿತಿ ದೊರೆಯಲಿದೆ. ಈಗಾಗಲೇ ಈ ವೆಬ್‌ಸೈಟ್‌ನಲ್ಲಿ ಕೆಲ ದೇವಾಲಯಗಳ ರೂಮ್‌ಗಳ ಮಾಹಿತಿ ಲಭ್ಯವಿದೆ. ಕೇವಲ ರಾಜ್ಯ ಮಾತ್ರವಲ್ಲ ಹೊರರಾಜ್ಯಗಳಾದ ತಿರುಪತಿ, ಶ್ರೀಶೈಲ, ಮಂತ್ರಾಲಯ ಸೇರಿದಂತೆ ರಾಜ್ಯದ ಮುಜರಾಯಿ ಛತ್ರಗಳಿರುವ ಕಡೆ ಬುಕ್ ಮಾಡಬಹುದಾಗಿದೆ. ಇದರಿಂದ ದೇವಾಲಯಗಳ ಆದಾಯ ಹೆಚ್ಚಳವಾಗಲಿದೆ.