Tag: muzrai department

  • ಎಲ್ಲರ ಚಿತ್ತ ಬಜೆಟ್‌ನತ್ತ – ಮುಜರಾಯಿ ಇಲಾಖೆಗೆ ಸಿಗುತ್ತಾ ಭರಪೂರ ಅನುದಾನ?

    ಎಲ್ಲರ ಚಿತ್ತ ಬಜೆಟ್‌ನತ್ತ – ಮುಜರಾಯಿ ಇಲಾಖೆಗೆ ಸಿಗುತ್ತಾ ಭರಪೂರ ಅನುದಾನ?

    ಬೆಂಗಳೂರು: ಇಂದು ಸಿಎಂ ಸಿದ್ದರಾಮಯ್ಯ (Siddaramaiah) ದಾಖಲೆಯ 16ನೇ ಬಜೆಟ್ (Karnataka Budget) ಮಂಡಿಸುತ್ತಿದ್ದು, ಎಲ್ಲರ ಚಿತ್ತ ಬಜೆಟ್‌ನತ್ತ ತಿರುಗಿದೆ.

    ಈ ಬಾರಿ ಸಿಎಂ 4 ಲಕ್ಷ ಕೋಟಿಯ ಬಜೆಟ್ ಮಂಡಿಸುವ ಸಾಧ್ಯತೆಯಿದ್ದು, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಬಜೆಟ್‌ನಲ್ಲಿ ಮುಜರಾಯಿ ಇಲಾಖೆಗೆ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ರಾಹುಕಾಲ ಆರಂಭಕ್ಕೂ ಮೊದಲು ಬಜೆಟ್‌ ಮಂಡಿಸಲಿದ್ದಾರೆ ಸಿದ್ದರಾಮಯ್ಯ

    ರಾಮಲಿಂಗಾ ರೆಡ್ಡಿ ಬೇಡಿಕೆಗಳೇನು?
    ಬೆಂಗಳೂರಿನ ಕೆ.ಆರ್ ಸರ್ಕಲ್‌ನಲ್ಲಿ ನಿರ್ಮಿಸುತ್ತಿರುವ ಧಾರ್ಮಿಕ ಸೌಧ ಕಾಮಗಾರಿಗೆ 25 ಕೋಟಿ ರೂ. ಒದಗಿಸಲು ಮನವಿ ಮಾಡಲಾಗಿದೆ. ಮೆಜೆಸ್ಟಿಕ್‌ನ ಕೆಂಪೇಗೌಡ ವೃತ್ತದಲ್ಲಿ ಬಂಡಿಶೇಷಮ್ಮ ವಿದ್ಯಾರ್ಥಿ ನಿಲಯ ಹಾಗೂ ಸಂಕೀರ್ಣ ನಿರ್ಮಿಸಿ ವಿದ್ಯಾರ್ಥಿಗಳಿಗೆ ಉಚಿತವಾಗಿ ನೀಡಲು ಚಿಂತಿಸಲಾಗಿದೆ. ರಾಜ್ಯದಿಂದ ವೈಷ್ಣೋದೇವಿ ಯಾತ್ರೆ ಕೈಗೊಳ್ಳುವ ಯಾತ್ರಾರ್ಥಿಗಳಿಗೆ ಸರ್ಕಾರದಿಂದ ತಲಾ 5,000 ಸಹಾಯಧನ ಒದಗಿಸಲು 1 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಆಕ್ಸ್‌ಫರ್ಡ್‌ ವಿವಿ ಬ್ಲಾಗ್‌ನಲ್ಲಿ ಕರ್ನಾಟಕ ಮಾದರಿ ಶ್ಲಾಘನೆ – ರಾಜ್ಯಪಾಲರ ಭಾಷಣದ ಅಸಲಿಯತ್ತನ್ನು ಬಯಲು ಮಾಡಿದ ಅಶೋಕ್‌

    ಕರ್ನಾಟಕ ದೇವಾಲಯಗಳ ಅಭಿವೃದ್ಧಿ ನಿಗಮ ಸ್ಥಾಪಿಸಲು ಅನುದಾನ ಬಿಡುಗಡೆ ಮಾಡುವಂತೆ ರಾಮಲಿಂಗಾ ರೆಡ್ಡಿ ಆಗ್ರಹಿಸಿದ್ದಾರೆ. ದೇವಾಲಯ ಹಾಗೂ ಹೊರರಾಜ್ಯ ಛತ್ರಗಳಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯ ಒದಗಿಸಲು ಅನುದಾನ ಬಿಡುಗಡೆಗೆ ಕೋರಿಕೆ ಸಲ್ಲಿಸಿದ್ದು, ದೇವಾಲಯಗಳ ಪ್ರಸಾದವನ್ನು ಮನೆಮನೆಗೆ ಆನ್‌ಲೈನ್‌ನಲ್ಲಿ ತಲುಪಿಸುವ ಯೋಜನೆ ಮಾಡಲಾಗಿದೆ. ಮೇಲುಕೋಟೆ ಚೆಲುವ ನಾರಾಯಣಸ್ವಾಮಿ ದೇವಾಲಯದಲ್ಲಿ ಧ್ವನಿ ಹಾಗೂ ಬೆಳಕಿನ ಲೇಸರ್ ಶೋ ಹಾಗೂ ಭೂ ವರಹಾ ಯೋಜನೆಗಾಗಿ ಅಂದರೇ ದೇವಾಲಯಗಳ ಸ್ಥಿರಾಸ್ತಿ ದಾಖಲೀಕರಿಸಲು ಅನುದಾನ ಬಿಡುಗಡೆ ಮಾಡಲು ಕೋರಲಾಗಿದೆ. ಇದನ್ನೂ ಓದಿ: ಶ್ರೀಕೃಷ್ಣನ ಪೂಜಾಧಿಕಾರ ಶಿರೂರು ಮಠಕ್ಕೆ- ಅಕ್ಕಿ ಮುಹೂರ್ತದಲ್ಲಿ ಒಂದಾದ ಅಷ್ಟಮಠ

    ಇನ್ನು ಕೆಎಸ್‌ಆರ್‌ಟಿಸಿ ಸಹಯೋಗದೊಂದಿಗೆ ರಿಯಾಯಿತಿ ದರದಲ್ಲಿ ಕರ್ನಾಟಕ ಧಾರ್ಮಿಕ ಪ್ರವಾಸ ಯೋಜನೆಗೆ ಅನುದಾನದ ಅವಶ್ಯಕತೆ ಇದೆ. ರಾಜ್ಯದ ಸಿ ವರ್ಗದ ದೇವಾಲಯಗಳಿಗೆ ದಿವ್ಯಕಿರಣ, ಗುಡಿ ಸಂಪರ್ಕ ಹಾಗೂ ಗುಡಿ ಜಲ ಯೋಜನೆಗಳ ಅನುಷ್ಟಾನಕ್ಕೆ ಕೋರಿಕೆ ಸಲ್ಲಿಸಲಾಗಿದೆ. ವಾರ್ಷಿಕವಾಗಿ ಕನಿಷ್ಟ ತಸ್ತೀಕ್ ಮೊತ್ತ ಹೆಚ್ಚಿಸಲು ಅನುದಾನ ನೀಡುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಾಗಲಕೋಟೆ ಡಿಸಿ ಕಚೇರಿ ಎದುರು ಹಾವು ಪ್ರತ್ಯಕ್ಷ – ಹೌಹಾರಿದ ನೌಕರರು

  • ತಸ್ತಿಕ್ ಹಣ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಮುಂದೆ ಬೇಡಿಕೆ ಇಟ್ಟ ರಾಮಲಿಂಗಾ ರೆಡ್ಡಿ

    ತಸ್ತಿಕ್ ಹಣ ಹೆಚ್ಚಳಕ್ಕೆ ಸಿಎಂ ಸಿದ್ದರಾಮಯ್ಯ ಮುಂದೆ ಬೇಡಿಕೆ ಇಟ್ಟ ರಾಮಲಿಂಗಾ ರೆಡ್ಡಿ

    ಬೆಂಗಳೂರು: ಮುಜರಾಯಿ ಇಲಾಖೆಯ (Muzrai Department) ‘ಸಿ’ ವರ್ಗದ ದೇವಾಲಯಗಳಿಗೆ ಹೆಚ್ಚು ಅನುದಾನ ನೀಡಬೇಕು. ಜೊತೆಗೆ ತಸ್ತಿಕ್ ಹಣ ಹೆಚ್ಚಳ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿರೋದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ.

    ಸಿಎಂ ಜೊತೆ ಬಜೆಟ್ ಪೂರ್ವ ಸಭೆ ನಡೆಸಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮುಜರಾಯಿ ಇಲಾಖೆ ಮತ್ತು ಸಾರಿಗೆ ಇಲಾಖೆಗೆ ಸಂಬಂಧಿಸಿದಂತೆ ಹಲವು ಬೇಡಿಕೆ ಇಟ್ಟಿದ್ದೇನೆ. ತಸ್ತಿಕ್ ಹಣ ಹೆಚ್ಚು ಮಾಡಲು ಸಿಎಂಗೆ ಬೇಡಿಕೆ ಇಟ್ಟಿದ್ದೇವೆ. ಮುಜರಾಯಿ ಇಲಾಖೆಗೆ ಹೆಚ್ಚು ಅನುದಾನ ನೀಡಬೇಕು. ‘ಸಿ’ ವರ್ಗದ ದೇವಸ್ಥಾನಗಳಿಗೆ ಹೆಚ್ಚು ಅನುದಾನ ಬಿಡುಗಡೆ ಮಾಡಬೇಕು. ಕಾಶಿಯಲ್ಲಿ ಇದ್ದ ಕಟ್ಟಡ ಬಿದ್ದು ಹೋಗಿದೆ. ಹೊಸ ಕಟ್ಟಡ ನಿರ್ಮಾಣ ಮಾಡಲು ಅನುದಾನ ನೀಡಬೇಕು ಎಂದು ಮನವಿ ಮಾಡಿದ್ದೇನೆ ಎಂದು ತಿಳಿಸಿದರು. ಇದನ್ನೂ ಓದಿ: ಆನೇಕಲ್ | ಸಿಲಿಂಡರ್ ಬ್ಲಾಸ್ಟ್ – ಸ್ಫೋಟದ ತೀವ್ರತೆಗೆ ಮನೆ ಛಾವಣಿಯೇ ಚಿಂದಿ

    ಸಾರಿಗೆ ಇಲಾಖೆ ಸಂಬಂಧ ಹೊಸದಾಗಿ 3,500 ಬಸ್ ಖರೀದಿ ಅವಶ್ಯಕತೆ ಇದೆ. 15 ವರ್ಷ ಓಡಿರೋ ಬಸ್ ಬದಲಾವಣೆ ಮಾಡಬೇಕು. ಹೀಗಾಗಿ ಹಣ ಕೊಡಬೇಕು. ವಾಯುವ್ಯ ಕರ್ನಾಟಕಕ್ಕೆ ಹೆಚ್ಚು ಆದ್ಯತೆ ಕೊಡಬೇಕು. ಬಿಜೆಪಿ ಅವಧಿಯಲ್ಲಿ ಇದ್ದ ಸಾಲಗಳನ್ನು ತೀರಿಸಲು ಸಹಾಯ ಮಾಡಿ ಎಂದು ಸಿಎಂಗೆ ಮನವಿ ಮಾಡಿದ್ದೇವೆ. ಸಿಎಂ ಕೂಡಾ ಇದಕ್ಕೆ ಪಾಸಿಟಿವ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಅವರ ಮನಸಿನಲ್ಲೂ ಕೊಡಬೇಕು ಅಂತ ಇದೆ. ಏನಾಗುತ್ತೋ ನೋಡೋಣ ಎಂದರು. ಇದನ್ನೂ ಓದಿ: ಆನಂದ್‌ ಸಿಂಗ್‌ ವಿರುದ್ಧ ಅಕ್ರಮ ಗಣಿಗಾರಿಕೆ ಕೇಸ್‌ – ಫೆ.24ಕ್ಕೆ ಅಂತಿಮ ತೀರ್ಪು ಪ್ರಕಟ

  • ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಿಗೆ ಫೆನ್ಸಿಂಗ್ – ಒತ್ತುವರಿ ಆಗಿದ್ರೆ ಕೋರ್ಟ್ ಮೂಲಕ ತೆರವು

    ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳಿಗೆ ಫೆನ್ಸಿಂಗ್ – ಒತ್ತುವರಿ ಆಗಿದ್ರೆ ಕೋರ್ಟ್ ಮೂಲಕ ತೆರವು

    ಬೆಂಗಳೂರು: ವಕ್ಫ್ ಆಸ್ತಿ ವಿವಾದದ ಬಳಿಕ ಮುಜರಾಯಿ ಇಲಾಖೆ (Muzrai Department) ತಮ್ಮ ದೇವಸ್ಥಾನಗಳ (Temple) ಆಸ್ತಿ ರಕ್ಷಣೆಗೆ ಮುಂದಾಗಿದೆ. ಬೆಂಗಳೂರಿನಲ್ಲಿ (Bengaluru) ಇರುವ ಮುಜರಾಯಿ ಇಲಾಖೆ ದೇವಸ್ಥಾನಗಳ ಆಸ್ತಿ ಸರ್ವೆ ಮಾಡಿ ಫೆನ್ಸಿಂಗ್ ಹಾಕಲು ಸಿದ್ಧತೆ ನಡೆದಿದೆ. ಶೀಘ್ರದಲ್ಲೇ ಸರ್ವೆ ಆರಂಭಿಸಿ ಒತ್ತುವರಿ ಆಗಿದ್ದರೆ ತೆರವು ಮಾಡಲು ಮುಂದಾಗಿದೆ.

    ವಕ್ಫ್ ವಿವಾದ ಜೋರಾಗಿರುವ ಹೊತ್ತಲ್ಲೇ ಮುಜರಾಯಿ ಇಲಾಖೆ ಮಹತ್ವದ ನಿರ್ಧಾರಕ್ಕೆ ಮುಂದಾಗಿದೆ. ಮುಜರಾಯಿ ವ್ಯಾಪ್ತಿಯ ದೇವಸ್ಥಾನಗಳ ಜಾಗ ರಕ್ಷಣೆಗೆ ಮುಂದಾಗಿದೆ. ದೇವಸ್ಥಾನದ ಜಾಗಗಳನ್ನು ಸರ್ವೆ ಮಾಡಲು ಜಾಗಕ್ಕೆ ಬೇಲಿತಂತಿ (Fencing) ಹಾಕಲು ನಿರ್ಧಾರ ಮಾಡಿದೆ. ಶೀಘ್ರದಲ್ಲೇ ಸರ್ವೆ ಆರಂಭ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳು ತಿಳಿಸಿದೆ. ಇದನ್ನೂ ಓದಿ: ರಸ್ತೆ ಅಪಘಾತ: ದರ್ಶನ್‌ ʻಕಾಟೇರʼ ಸಿನಿಮಾದಲ್ಲಿ ನಟಿಸಿದ್ದ ಬಾಲನಟ ರೋಹಿತ್‌ಗೆ ಗಾಯ

    ಬೆಂಗಳೂರಿನಲ್ಲೂ ಸಾವಿರಾರು ಎಕರೆ ಮುಜರಾಯಿ ಜಾಗ ಇದೆ. ಆ ಜಾಗ ಒತ್ತುವರಿ ಆಗಿದೆಯಾ ಎಂದು ಪರಿಶೀಲನೆ ಮಾಡಲಿದ್ದು, ಸರ್ವೆ ಮಾಡಿದಾಗ ಒತ್ತುವರಿ ಆಗಿದ್ದರೆ ಕೂಡಲೇ ಕೋರ್ಟ್ ಮೂಲಕ ತೆರವಿಗೆ ಪರ್ಮಿಷನ್ ತಂದು ತೆರವು ಮಾಡುತ್ತೇವೆ ಎಂದು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಗುಲ್ಮಾರ್ಗ್‌ನಲ್ಲಿ ಈ ಸೀಸನ್ನಿನ ಮೊದಲ ಹಿಮಪಾತ, ಶ್ರೀನಗರದಲ್ಲಿ ಮಳೆ

  • ರಾಜ್ಯದ ಜನತೆಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ – ವೈಷ್ಣೋದೇವಿಗೆ ತೆರಳುವ ಭಕ್ತರಿಗೆ 5,000 ಸಹಾಯಧನ

    ರಾಜ್ಯದ ಜನತೆಗೆ ಮುಜರಾಯಿ ಇಲಾಖೆ ಗುಡ್‌ನ್ಯೂಸ್ – ವೈಷ್ಣೋದೇವಿಗೆ ತೆರಳುವ ಭಕ್ತರಿಗೆ 5,000 ಸಹಾಯಧನ

    ಬೆಂಗಳೂರು: ರಾಜ್ಯದ ಜನತೆಗೆ ಮುಜರಾಯಿ ಇಲಾಖೆ (Muzrai Department) ಗುಡ್‌ನ್ಯೂಸ್ ನೀಡುವುದರ ಜೊತೆಗೆ ಹಲವು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ. ಮುಜರಾಯಿ ಇಲಾಖೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ನೇತೃತ್ವದಲ್ಲಿ ನಡೆದ ಕರ್ನಾಟಕ ರಾಜ್ಯದ ಧಾರ್ಮಿಕ ಪರಿಷತ್ತಿನಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

    ಮಹತ್ವದ ನಿರ್ಧಾರಗಳು ಏನು?
    * ವೈಷ್ಣೋದೇವಿಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸಹಾಯ ಧನ ಘೋಷಣೆ.
    * ವೈಷ್ಣೋದೇವಿಗೆ ಭೇಟಿ ನೀಡುವ ಕರ್ನಾಟಕ ರಾಜ್ಯದ ಯಾತ್ರಾರ್ಥಿಗಳಿಗೆ ತಲಾ 5,000 ರೂ. ಸಹಾಯ ಧನ ನೀಡಲು ತೀರ್ಮಾನ.
    * ಸರ್ಕಾರದ ಬಹುಮಹಡಿಗಳ ಕಟ್ಟಡದ ಎದುರು ಇರುವ ಮುಜರಾಯಿ ಇಲಾಖೆಗೆ ಸೇರಿದ 3/4 ಎಕರೆ ಜಾಗದಲ್ಲಿ 10 ಕೋಟಿ ರೂ. ವೆಚ್ಚದಲ್ಲಿ ಧಾರ್ಮಿಕ ಸೌಧ ನಿರ್ಮಾಣಕ್ಕೆ ನಿರ್ಧಾರ.
    * 120 ವರ್ಷಗಳ ಹಳೆಯದಾದ ಮೈಸೂರಿನ ಸಂಸ್ಕೃತ ಮಹಾರಾಜ ಕಾಲೇಜಿನ ಸಂಸ್ಥೆಯ ಸಂಪೂರ್ಣ ಜೀರ್ಣೋದ್ಧಾರ ಮಾಡಲು ಅಗತ್ಯವಿರುವ ಅನುದಾನ ಬಿಡುಗಡೆ ಮಾಡಲು ತೀರ್ಮಾನ.
    * ಮಕ್ಕಳಿಗೆ ನೀಡುತ್ತಿರುವ ವಿದ್ಯಾ ಸಹಾಯ ಧನಕ್ಕೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಈಗಾಗಲೇ ಮುಕ್ತಾಯವಾಗಿದ್ದು, ಇನ್ನೂ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳಿಗೆ ಅನುಕೂಲವಾಗುವಂತೆ ಡಿಸೆಂಬರ್ 31 ರವರೆಗೂ ಕಾಲಾವಕಾಶ.
    * ಮುಜರಾಯಿ ಇಲಾಖೆಗೆ ಸೇರಿದ ದೇವಾಲಯದ ಆಸ್ತಿಯನ್ನು ಸರ್ವೆ ಮಾಡಿ, ಒತ್ತುವರಿ ತೆರವು ಮಾಡಿ ದಾಖಲೆ ಮಾಡಲು ಹಾಗೂ ಆಸ್ತಿಗಳನ್ನು ರಕ್ಷಿಸಲು ತೀರ್ಮಾನ.
    * ಅವಧಿ ಮುಗಿಯುವ 14 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅವಧಿ ಮುಗಿದ ನಂತರ ಆಡಳಿತಾಧಿಕಾರಿಗಳನ್ನು ನೇಮಕ ಮಾಡಲು, ಅರ್ಜಿ ಸ್ವೀಕಾರವಾಗಿರುವ 28 ದೇವಾಲಯಗಳಿಗೆ ವ್ಯವಸ್ಥಾಪನಾ ಸಮಿತಿ ರಚಿಸಲು, ಅರ್ಜಿ ಸ್ವೀಕಾರವಾಗದೇ ಇರುವ 13 ದೇವಾಲಯಗಳಿಗೆ ಪುನಃ ಅರ್ಜಿ ಕರೆಯಲು ಹಾಗೂ ಬೇಲೂರು ಶ್ರೀ ಚನ್ನಕೇಶವ ದೇವಾಲಯದ ಖಾಲಿ ಇರುವ ವ್ಯವಸ್ಥಾಪನಾ ಸಮಿತಿಗೆ ಸದಸ್ಯರನ್ನು ನೇಮಕ ಮಾಡಲು ತೀರ್ಮಾನಿಸಲಾಗಿದೆ.

  • ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ

    ದೇವಾಲಯಗಳ ಪ್ರಸಾದ ಡೋರ್ ಡೆಲಿವರಿ ಸ್ಕೀಂ ಜಾರಿಗೆ ಮುಂದಾದ ಮುಜರಾಯಿ ಇಲಾಖೆ

    ಬೆಂಗಳೂರು: ರಾಜ್ಯದ ಪ್ರತಿ ದೇವಸ್ಥಾನದ (Temple) ಪ್ರಸಾದವನ್ನು (Prasada) ಭಕ್ತರ ಮನೆ ಬಾಗಿಲಿಗೆ ತಲುಪಿಸಲು ಮುಜರಾಯಿ ಇಲಾಖೆ (Muzrai Department) ಮುಂದಾಗಿದೆ.

    ಮುಜರಾಯಿ ಇಲಾಖೆ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ರಾಜ್ಯದ ಜನರಿಗೆ ಸೇವೆ ನೀಡಲು ಯೋಜನೆ ರೂಪಿಸಿದೆ. ಈಗಾಗಲೇ ಆನ್‍ಲೈನ್ ಸೇವೆ, ಬುಕ್ಕಿಂಗ್ ಸೇವೆ ಜಾರಿಯಾಗಿದೆ. ಇನ್ನೂ ದೇವಾಲಯಗಳ ಪ್ರಸಾದವನ್ನು ಡೋರ್ ಡೆಲಿವರಿ ನೀಡಲು ಯೋಜನೆ ರೂಪಿಸಲಾಗುತ್ತಿದೆ. ಆನ್‍ಲೈನ್‍ನಲ್ಲಿ ಕರ್ನಾಟಕ ರಾಜ್ಯವ್ಯಾಪಿ ಇರುವ ಯಾವುದೇ ದೇವಸ್ಥಾನ ಪ್ರಸಾದವನ್ನು ಆನ್‍ಲೈನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಪ್ರಸಾದ ತಂದು ಕೊಡುವ ಯೋಜನೆ ಶೀಘ್ರದಲ್ಲೇ ಜಾರಿಗೆ ತರಲು ಯೋಜನೆ ರೂಪಿಸಲಾಗುತ್ತಿದೆ.

    ಪ್ರಸಾದ ನೀಡುವ ಯೋಜನೆ ಜಾರಿಗೆ ಅಂಚೆ ಇಲಾಖೆ ಜೊತೆ ಮಾತುಕತೆ ಮಾಡಲಾಗಿದೆ. ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದೆ. ಪ್ರಸಾದದ ದರ ಹಾಗೂ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರ ಫಿಕ್ಸ್ ಮಾಡಲು ಇಲಾಖೆ ಮುಂದಾಗಿದೆ. ಅಧಿಕಾರಿಗಳು ಸಚಿವರ ಜೊತೆ ಚರ್ಚೆ ಮಾಡಿ ಶೀಘ್ರದಲ್ಲೇ ಜಾರಿ ಮಾಡಲಿದ್ದಾರೆ.

    ಮನೆ ಬಾಗಿಲಿಗೆ ದೇವಾಲಯಗಳ ಪ್ರಸಾದ ಯೋಜನೆ ಜಾರಿ ಆದರೆ ಜನ ಮನೆಯಲ್ಲೆ ಕುಳಿತು ತಮ್ಮ ನೆಚ್ಚಿನ ದೇವರ ಪ್ರಸಾದವನ್ನ ಸ್ವೀಕರಿಸಬಹುದು. ಈ ಯೋಜನೆಯ ಮಾನದಂಡಗಳು ಏನಾಗಿರಲಿದೆ ಎಂಬುದನ್ನ ಕಾದು ನೋಡಬೇಕಿದೆ.

  • ಇನ್ಮುಂದೆ ಮಳೆ ಬಂದರೆ ಭಕ್ತಾದಿಗಳಿಗಿಲ್ಲ ಟೆನ್ಷನ್ – ಮುಜರಾಯಿ ವ್ಯಾಪ್ತಿಯ ದೇವಾಲಯಗಳಿಗೆ ಶೆಲ್ಟರ್

    ಇನ್ಮುಂದೆ ಮಳೆ ಬಂದರೆ ಭಕ್ತಾದಿಗಳಿಗಿಲ್ಲ ಟೆನ್ಷನ್ – ಮುಜರಾಯಿ ವ್ಯಾಪ್ತಿಯ ದೇವಾಲಯಗಳಿಗೆ ಶೆಲ್ಟರ್

    ಬೆಂಗಳೂರು: ಈಗಾಗಲೇ ಮಳೆಗಾಲ ಆರಂಭವಾಗಿದೆ. ಬರುವ ತಿಂಗಳಿನಿಂದ ಮುಂಗಾರು ತೀವ್ರಗೊಳ್ಳುವ ನಿರೀಕ್ಷೆ ಇದೆ. ಸಾಮಾನ್ಯವಾಗಿ ಮಳೆಗಾಲದ ಅವಧಿಯಲ್ಲಿ ದೇವಸ್ಥಾನಕ್ಕೆ (Temple) ಬರುವವರ ಸಂಖ್ಯೆ ಕಡಿಮೆಯಾಗುತ್ತದೆ. ಈ ಸಮಸ್ಯೆ ಪರಿಹಾರಕ್ಕೆ ಮುಜರಾಯಿ ಇಲಾಖೆ ಪ್ಲಾನ್ ಮಾಡಿದೆ.

    ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ತಜ್ಞರು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜ್ಯ ಮುಜರಾಯಿ ಇಲಾಖೆಗೆ (Muzrai Department) ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಹೊಸ ಸಲಹೆ ಕೊಟ್ಟಿದ್ದಾರೆ. ಆಷಾಢ ಮುಗಿದು ಶ್ರಾವಣ ಮಾಸ ಆರಂಭವಾದಾಗ ಅಥವಾ ಮಳೆಗಾಲದಲ್ಲಿ ಮಳೆ ಆರ್ಭಟದ ಮಧ್ಯೆ ದೇವಸ್ಥಾನಕ್ಕೆ ಹೋಗೋದು ಹೇಗಪ್ಪಾ ಅನ್ನೋ ತಲೆನೋವು ಭಕ್ತಾದಿಗಳಲ್ಲಿ ಇರುತ್ತದೆ. ಜೊತೆಗೆ ಮಳೆ ಬಂದಾಗ ದೇವಸ್ಥಾನದ ಮುಂದೆ ಗಂಟೆಗಟ್ಟಲೆ ಕ್ಯೂ ನಿಲ್ಲಬೇಕಾದ ಪರಿಸ್ಥಿತಿ ಸಹ ಎದುರಾಗಬಹುದು. ಹೀಗಾಗಿ ಮಳೆಗಾಲದಲ್ಲಿ ದೇವಾಲಯಕ್ಕೆ ಬರುವ ಭಕ್ತಾದಿಗಳ ಸಂಖ್ಯೆ ಕಡಿಮೆಯಾಗುತ್ತದೆ. ಇದನ್ನೂ ಓದಿ: ಟಿ20 ವಿಶ್ವಕಪ್‌; 7 ಪಂದ್ಯಗಳಲ್ಲಿ ಕೇವಲ 75 ರನ್‌, 8ನೇ ಪಂದ್ಯದಲ್ಲಿ ಕಿಂಗ್‌ ಕೊಹ್ಲಿ 76 ರನ್‌

    ಇನ್ನು ಮಳೆಗಾಲದಲ್ಲಿ ಉಂಟಾಗುವ ಇಂತಹ ಸಮಸ್ಯೆ ನಿವಾರಣೆಗೆ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮುಜರಾಯಿ ಇಲಾಖೆಗೆ ದೇವಾಲಯಗಳಲ್ಲಿ ಶೆಲ್ಟರ್ ನಿರ್ಮಾಣಕ್ಕೆ ಸಲಹೆ ನೀಡಿದ್ದಾರೆ. ಅದರಂತೆ ರಾಜ್ಯದ ಮುಜರಾಯಿ ವ್ಯಾಪ್ತಿಯ ಎಲ್ಲಾ ದೇವಾಲಯಗಳ ಮುಂಭಾಗದಲ್ಲಿಯೂ ಶೆಲ್ಟರ್‌ಗಳು ತಲೆಯೆತ್ತಲಿವೆ. ಇದನ್ನೂ ಓದಿ: ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್

    ಈ ಬಗ್ಗೆ ಮಾತನಾಡಿದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ, ಬಿಸಿಲಿನಿಂದ ರಕ್ಷಿಸಲು ಭಕ್ತಾದಿಗಳಿಗೆ ದೇವಾಲಯಗಳಲ್ಲಿ ಶಾಮಿಯಾನ ವ್ಯವಸ್ಥೆ ಮಾಡಿದ್ದೆವು. ಈಗ ಮಳೆಗಾಲದಲ್ಲಿ ಭಕ್ತಾದಿಗಳಿಗಾಗಿ ದೇಗುಲದ ಮುಂಭಾಗದಲ್ಲಿ ಶೆಲ್ಟರ್ ನಿರ್ಮಿಸಲು ಸಲಹೆ ಕೊಟ್ಟಿದ್ದೇನೆ. ಅದರಂತೆ ದೇವಾಲಯದಲ್ಲಿ ಶೆಲ್ಟರ್‌ಗಳು ನಿರ್ಮಾಣವಾಗಲಿವೆ. ಇದರಿಂದ ವಯಸ್ಸಾದ ಹಾಗೂ ಮಕ್ಕಳಿಗೆ ಅನುಕೂಲವಾಗಲಿದೆ. ಮೊದಲನೇ ಹಂತದಲ್ಲಿ ಹೆಚ್ಚು ಮಳೆ ಬರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ದೇವಾಲಯಗಳಲ್ಲಿ ಶೆಲ್ಟರ್ ನಿರ್ಮಿಸಲಾಗುವುದು ಎಂದರು. ಒಟ್ಟಿನಲ್ಲಿ ಮುಜರಾಯಿ ಇಲಾಖೆಯ ಈ ನಿರ್ಧಾರ ಭಕ್ತಾದಿಗಳಿಗೆ ಸಹಾಯವಾಗಲಿದೆ. ಇದನ್ನೂ ಓದಿ: ಟಿ20 ವಿಶ್ವಕಪ್‌ – ಭಾರತದ ಪರ ವಿಶಿಷ್ಟ ದಾಖಲೆ ಬರೆದ ಹಿಟ್‌ಮ್ಯಾನ್‌

  • ಐತಿಹಾಸಿಕ ಬೆಂಗಳೂರು ಕರಗಕ್ಕೆ ನಾಳೆ ಚಾಲನೆ – ಯಾವ್ಯಾವ ದಿನ ಏನು ಕಾರ್ಯಕ್ರಮ?

    ಐತಿಹಾಸಿಕ ಬೆಂಗಳೂರು ಕರಗಕ್ಕೆ ನಾಳೆ ಚಾಲನೆ – ಯಾವ್ಯಾವ ದಿನ ಏನು ಕಾರ್ಯಕ್ರಮ?

    ಬೆಂಗಳೂರು: ಐತಿಹಾಸಿಕ ಬೆಂಗಳೂರು ಕರಗ (Bengaluru Karaga) ಶಕ್ತ್ಯೋತ್ಸವಕ್ಕೆ ಏ.15ರಂದು ಚಾಲನೆ ದೊರೆಯಲಿದೆ.

    ಏ.15ರಿಂದ 23ರ ವರೆಗೆ ಕರಗ ಮಹೋತ್ಸವ ನಡೆಯಲಿದೆ. ಏ.23ರ ಚೈತ್ರ ಪೌರ್ಣಮಿಯಂದು ಕರಗ ಮಹೋತ್ಸವ ಕೊನೆಗೊಳ್ಳಲಿದೆ. ಪ್ರತಿ ವರ್ಷದಂತೆ ಈ ಬಾರಿಯ ಕರಗ ಮಹೋತ್ಸವವನ್ನು ಅದ್ದೂರಿಯಾಗಿ ನೆರವೇರಿಸಲು ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಸಕಲ ಸಿದ್ಧತೆ ಮಾಡಿಕೊಂಡಿದೆ.

    ಈ ಬಾರಿಯೂ ಕರಗವನ್ನು ಕರಗದ ಪೂಜಾರಿ ಎ.ಜ್ಞಾನೇಂದ್ರ ಅವರೇ ಹೊತ್ತು ಸಾಗಲಿದ್ದಾರೆ. ಅವರನ್ನು ಮುಜರಾಯಿ ಇಲಾಖೆ (Muzrai Department) ಮತ್ತು ಧರ್ಮರಾಯ ಸ್ವಾಮಿ ದೇವಾಲಯದ (Shri Dharmaraya Swamy Temple) ಆಡಳಿತ ಮಂಡಳಿ ಆಯ್ಕೆ ಮಾಡಿದೆ. ಈ ಬಾರಿ ಜ್ಞಾನೇಂದ್ರ ಅವರು ಹದಿಮೂರನೇ ಸಲ ಕರಗ ಹೊರುತ್ತಿರುವುದಾಗಿದೆ.

    ಕರಗ ಕಾರ್ಯಕ್ರಮದ ವೇಳಾಪಟ್ಟಿ
    ಏ.15ರ ರಾತ್ರಿ 10ಕ್ಕೆ ರಥೋತ್ಸವ ಧ್ವಜಾರೋಹಣ
    ಏ.16ರಿಂದ 19 ಪ್ರತಿ ದಿನ ವಿಶೇಷ ಪೂಜೆ ಮತ್ತು ಮಂಗಳಾರತಿ
    ಏ.21ಕ್ಕೆ ಹಸಿ ಕರಗ ಆಯೋಜನೆ
    ಏ.23 ರಂದು ಕರಗ ಶಕ್ತ್ಯೋತ್ಸವ ಮತ್ತು ಧರ್ಮರಾಯ ರಥೋತ್ಸವ
    ಏ.24 ರಂದು ದೇವಸ್ಥಾನದಲ್ಲಿ ಗಾವು ಪೂಜೆ
    ಏ.25 ಕ್ಕೆ ಕೊನೆಯ ದಿನದ ವಸಂತೋತ್ಸವ ಧ್ವಜಾರೋಹಣ ನೆರವೇರಲಿದೆ.

  • ರಾತ್ರೋರಾತ್ರಿ ಇತಿಹಾಸ ಪ್ರಸಿದ್ಧ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಭಂಡಾರಮನೆ ಧ್ವಂಸ

    ರಾತ್ರೋರಾತ್ರಿ ಇತಿಹಾಸ ಪ್ರಸಿದ್ಧ ಪಿಲಿಚಾಮುಂಡಿ ದೈವಸ್ಥಾನದ ನಿರ್ಮಾಣ ಹಂತದ ಭಂಡಾರಮನೆ ಧ್ವಂಸ

    ಮಂಗಳೂರು: ಬಣ ಸಂಘರ್ಷದಿಂದ ತುಳುನಾಡಿನ ಪುರಾಣ ಪ್ರಸಿದ್ಧ ಕೊಂಡಾಣ ಕ್ಷೇತ್ರದ ಪಿಲಿಚಾಮುಂಡಿ ದೈವಸ್ಥಾನದ (Pilichamundi Daivasthana) ನಿರ್ಮಾಣ ಹಂತದ ಕಟ್ಟಡವನ್ನು ರಾತ್ರೋರಾತ್ರಿ ಜೆಸಿಬಿ ಮೂಲಕ ಕಿಡಿಗೇಡಿಗಳು ಧ್ವಂಸ ಮಾಡಿದ್ದಾರೆ.

    ಕಿಡಿಗೇಡಿಗಳ ಕೃತ್ಯಕ್ಕೆ ದೈವಸ್ಥಾನದ ನೂತನ ಭಂಡಾರಮನೆ ಸಂಪೂರ್ಣ ಧ್ವಂಸವಾಗಿದೆ. ದೈವಸ್ಥಾನದ ಆಡಳಿತ ಮಂಡಳಿ ವಿವಾದದ ಸಂಘರ್ಷದಲ್ಲಿ ಕಟ್ಟಡ ಧ್ವಂಸವಾಗಿರುವ ಶಂಕೆ ವ್ಯಕ್ತವಾಗಿದೆ. ಎರಡು ಬಣಗಳ ಗುದ್ದಾಟವೇ ಇದಕ್ಕೆ ಕಾರಣ ಎನ್ನಲಾಗುತ್ತಿದೆ. ಇದನ್ನೂ ಓದಿ: ಬೇರೆ ರಾಜ್ಯಗಳಲ್ಲಿ ಬಿಜೆಪಿ ಎಷ್ಟೆಷ್ಟು ಇನ್ವೆಸ್ಟ್‌ಮೆಂಟ್ ಮಾಡಿದೆ ಎಂಬುದನ್ನು ಬಹಿರಂಗ ಪಡಿಸಲಿ – ಸ್ವಪಕ್ಷಕ್ಕೆ ಹೆಬ್ಬಾರ್ ಸವಾಲು

    ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ (Muzrai Department) ಸೇರುವ ಕೊಂಡಾಣ ದೈವಸ್ಥಾನ, ಸದ್ಯ ಕೊಂಡಾಣ ಕ್ಷೇತ್ರಕ್ಕೆ ಸಂಬಂಧಿಸಿದ ಭಂಡಾರಮನೆ ಖಾಸಗಿ ಗುತ್ತಿನ ಮನೆ ಒಡೆತನದಲ್ಲಿದೆ. ಭಂಡಾರ ಮನೆಯಲ್ಲಿ ಕ್ಷೇತ್ರದ ದೈವಗಳ 15 ಕೋಟಿ ರೂ. ಮೌಲ್ಯಕ್ಕೂ ಮೀರಿದ ಬೆಲೆಬಾಳುವ ಒಡವೆಗಳಿವೆ. ಭಂಡಾರಮನೆಯನ್ನು ಮುಜರಾಯಿ ಇಲಾಖೆಗೆ ಸೇರಿಸಲು ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ನಿಕಟಪೂರ್ವ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಯತ್ನಿಸುತ್ತಿದ್ದರು ಎನ್ನಲಾಗಿದೆ. ಇದಕ್ಕೆ ಖಾಸಗಿ ಭಂಡಾರಮನೆಯವರು ಸಮ್ಮತಿ ನೀಡಿರಲಿಲ್ಲ.

    ಈ ಹಿನ್ನಲೆ ಕ್ಷೇತ್ರದ ದೈವಗಳಿಗೆ ಬೇರೆಯೇ ಭಂಡಾರಮನೆ ನಿರ್ಮಾಣಕ್ಕೆ ವ್ಯವಸ್ಥಾಪನಾ ಸಮಿತಿ ಮುಂದಾಗಿತ್ತು. ದೈವಸ್ಥಾನದ ಪಕ್ಕದ ಜಾಗದಲ್ಲಿ ಕಳೆದ ಜ.8 ರಂದು ಆಗಿನ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ನೇತೃತ್ವದಲ್ಲಿ ನೂತನ ಭಂಡಾರ ಮನೆಗೆ ಶಿಲನ್ಯಾಸ ಮಾಡಲಾಗಿತ್ತು. ದಾನಿಗಳ ದೇಣಿಗೆಯಿಂದ ಭಂಡಾರ ಮನೆಯ 80% ಕಾಮಗಾರಿ ಪೂರ್ಣಗೊಂಡಿತ್ತು. ಇದರ ನಡುವೆ ಈಗಿನ ವ್ಯವಸ್ಥಾಪನಾ ಸಮಿತಿಯ ಅಧಿಕಾರ ಅವಧಿ ಮುಗಿದ ಹಿನ್ನೆಲೆ, ಸಮಿತಿ ಅಧ್ಯಕ್ಷ ಕೃಷ್ಣ ಶೆಟ್ಟಿ ತಾಮಾರ್ ಎರಡು ದಿನಗಳ ಹಿಂದಷ್ಟೇ ಅಧಿಕಾರವನ್ನು ಇಲಾಖೆಗೆ ಹಸ್ತಾಂತರಿಸಿದ್ದರು.

    ಕೃಷ್ಣ ಶೆಟ್ಟಿ ಅಧ್ಯಕ್ಷ ಸ್ಥಾನದಿಂದ ಇಳಿಯುತ್ತಿದ್ದಂತೆ ಕಿಡಿಗೇಡಿಗಳು ಜೆಸಿಬಿಯಿಂದ ಏಕಾಏಕಿ ನಿರ್ಮಾಣ ಹಂತದ ಭಂಡಾರ ಮನೆ ನೆಲಸಮ ಮಾಡಿದ್ದಾರೆ. ಘಟನೆ ಬೆನ್ನಲ್ಲೇ ಎರಡು ಬಣಗಳ ನಡುವೆ ಸಂಘರ್ಷ ತಾರಕಕ್ಕೆ ಏರಿದೆ. ನೂರಾರು ವರ್ಷಗಳಿಂದ ಮುತ್ತಣ್ಣ ಶೆಟ್ಟಿ ಕುಟುಂಬಸ್ಥರ ಸುಪರ್ದಿಯಲ್ಲೇ ಇರುವ ಒಡವೆಗಳು, ಕಾರ್ಣಿಕ ದೈವದ ಕೋಟ್ಯಂತರ ರೂ. ಒಡವೆಗಳ ಅಧಿಪತ್ಯಕ್ಕಾಗಿ ಸಂಘರ್ಷ ಶುರುವಾಗಿದೆ. ದೈವಗಳ ಸಮ್ಮುಖದಲ್ಲಿ ಬಗೆಹರಿಯಬೇಕಾದ ವಿವಾದ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

    ಸ್ಥಳಕ್ಕೆ ತಹಶೀಲ್ದಾರ್ ಪುಟ್ಟರಾಜು, ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್, ಎಸಿಪಿ ಧನ್ಯಾ ನಾಯಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ದೈವಸ್ಥಾನದ ಭಕ್ತರ ಜಮಾವಣೆ ಹಿನ್ನೆಲೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಉಳ್ಳಾಲ ಪೊಲೀಸರು ಸೇರಿ ಎರಡು ಪೊಲೀಸ್ ತುಕಡಿ ನಿಯೋಜನೆ ಮಾಡಲಾಗಿದೆ.

    ಈ ಸಂಬಂಧ ಕೋಟೆಕಾರು ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಆನಂದ್ ಉಳ್ಳಾಲ ಪೊಲೀಸ್ (Police) ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಸರ್ಕಾರ ರಾಜೀನಾಮೆ ಕೊಟ್ಟರೆ ಮಾತ್ರ ಜನತೆಗೆ ಶಾಂತಿ, ನೆಮ್ಮದಿಯ ಭರವಸೆ: ಆರ್.ಅಶೋಕ್

  • ಹಂಪಿ ಸ್ಮಾರಕಗಳಿಗೆ ಹಾನಿ – ಮುಜರಾಯಿ ಇಲಾಖೆ ಸಿಬ್ಬಂದಿ ಅಮಾನತು

    ಹಂಪಿ ಸ್ಮಾರಕಗಳಿಗೆ ಹಾನಿ – ಮುಜರಾಯಿ ಇಲಾಖೆ ಸಿಬ್ಬಂದಿ ಅಮಾನತು

    ಬಳ್ಳಾರಿ: ವಿಜಯನಗರ ಜಿಲ್ಲೆಯ ಹೊಸಪೇಟೆಯ ವಿಶ್ವವಿಖ್ಯಾತ ಹಂಪಿಯ (Hampi) ಸ್ಮಾರಕಗಳನ್ನು ಹಾಳು ಮಾಡಿದ ಸಿಬ್ಬಂದಿಯನ್ನು ಮುಜರಾಯಿ ಇಲಾಖೆ (Muzrai Department) ಅಮಾನತು ಮಾಡಿದೆ.

    ಆರು ದಿನಗಳ ಹಿಂದೆ ಹಂಪಿಯ ವಿರೂಪಾಕ್ಷ ದೇವಾಲಯದ (Virupaksha Temple) ಬಲ ಭಾಗದಲ್ಲಿ ದ್ವಾರದಲ್ಲಿ ಡ್ರಿಲ್ ಯಂತ್ರದ (Drill Machine) ಮೂಲಕ ಮೊಳೆ ಹೊಡೆದು ಸ್ಮಾರಕಗಳನ್ನು ಹಾಳು ಮಾಡಲಾಗಿತ್ತು. ಈ ಕುರಿತು ಪಬ್ಲಿಕ್ ಟಿವಿ ವರದಿ ಪ್ರಸಾರ ಮಾಡಿತ್ತು.  ಇದನ್ನೂ ಓದಿ: ಕೊಳಚೆ ಪ್ರದೇಶದಲ್ಲಿ ಮುಕ್ಕಾಲು ಕೆಜಿ ಚಿನ್ನ ಬಚ್ಚಿಟ್ಟಿದ್ದ ಖದೀಮ – 18 ಅರೆಸ್ಟ್ ವಾರೆಂಟ್ ಇದ್ದ ಸೆಲೆಬ್ರಿಟಿ ಮನೆಗಳ್ಳನ ಬಂಧನ

     

    ವರದಿ ಬೆನ್ನಲ್ಲೇ ವಿಜಯನಗರ ಜಿಲ್ಲಾಧಿಕಾರಿ ದಿವಾಕರ ಅವರು ಖುದ್ದು ಸ್ಥಳ ಪರಿಶೀಲನೆ ನಡೆಸಿ ಸೂಕ್ತ ಕಾನೂನು ಕ್ರಮಕ್ಕೆ ಸೂಚನೆ ನೀಡಿದ್ದರು. ಇದನ್ನೂ ಓದಿ: ಅಮ್ಮ ನನ್ನ ಬಗ್ಗೆ ಚಿಂತಿಸಬೇಡ, ಸಮಯಕ್ಕೆ ಸರಿಯಾಗಿ ಊಟ ಮಾಡಿ – ಸುರಂಗದಲ್ಲಿ ಸಿಲುಕಿದ ಕಾರ್ಮಿಕನ ಭಾವುಕ ಸಂದೇಶ

    ದೇವಸ್ಥಾನದ ಬಲಭಾಗದಲ್ಲಿ ಜನರ ಸುಗಮ ಸಂಚಾರಕ್ಕೆ ಬ್ಯಾರಿಕೇಡ್‌ ನಿರ್ಮಾಣ ಮಾಡಲು ಸಿಬ್ಬಂದಿ ಶ್ರೀನಿವಾಸ ಅವರು ಡ್ರಿಲ್‌ ಯಂತ್ರದ ಮೂಲಕ ಕೊರೆದು ಸ್ಮಾರಕವನ್ನು ಹಾಳು ಮಾಡಿದ್ದರು.

    ಹಂಪಿಯಲ್ಲಿ ಯಾವುದೇ ಒಂದು ಅಭಿವೃದ್ಧಿ ಕೆಲಸ ಮಾಡಲು ರಾಜ್ಯ ಪುರಾತತ್ವ ಇಲಾಖೆಯ ಅನುಮತಿ ಪಡೆಯಲೇ ಬೇಕು. ಆದರೆ ಯಾವುದೇ ಅನುಮತಿ ಪಡೆಯದೇ ಸ್ಮಾರಕಕ್ಕೆ ಹಾನಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಎಚ್ಚೆತ್ತ ಇಲಾಖೆ ಶ್ರೀನಿವಾಸ ಅವರನ್ನು ಅಮಾನತು ಮಾಡಿ ಆದೇಶಿಸಿದೆ.

     

  • ಮುಜರಾಯಿ ಇಲಾಖೆ ದೇವಸ್ಥಾನಗಳ ಬಳಿ ತಂಬಾಕು ಉತ್ಪನ್ನ ಮಾರಾಟ ನಿಷೇಧ

    ಮುಜರಾಯಿ ಇಲಾಖೆ ದೇವಸ್ಥಾನಗಳ ಬಳಿ ತಂಬಾಕು ಉತ್ಪನ್ನ ಮಾರಾಟ ನಿಷೇಧ

    ಬೆಂಗಳೂರು: ಮುಜರಾಯಿ ಇಲಾಖೆಯ (Muzrai Department) ದೇವಸ್ಥಾನಗಳ ಸುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು (Tobacco Products) ಮಾರಾಟವನ್ನು ನಿಷೇಧಿಸಿದೆ ಮುಜರಾಯಿ ಇಲಾಖೆ ಆದೇಶ ಪ್ರಕಟಿಸಿದೆ.

    ದೇವಸ್ಥಾನದ ಆಸುಪಾಸು ದೈವಿಕ ಕಳೆ ಇರುವುದರಿಂದ ಭಕ್ತರ ಧಾರ್ಮಿಕತೆಗೆ ಪೂರಕ ವಾತಾವರಣ ಕಲ್ಪಿಸಲು ಹೊಸ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸರ್ಕಾರದ ನಿರ್ಧಾರವನ್ನು ಶ್ಲಾಘಿಸಿ ಕಾಂಗ್ರೆಸ್ (Congress) ಟ್ವೀಟ್ (Tweet) ಮಾಡಿದೆ. ಇದನ್ನೂ ಓದಿ: ಸೆ.21ರಂದು ಸುಪ್ರೀಂಗೆ ಕೆಆರ್‌ಎಸ್ ಚಿತ್ರಣ ಮನವರಿಕೆ ಮಾಡಿ – ಪ್ರತಿಭಟನಾಕಾರರ ಆಕ್ರೋಶ

    ಟ್ವೀಟ್‌ನಲ್ಲಿ ಏನಿದೆ?
    ‘ಧರ್ಮ’ ಎಂದರೆ ಮನುಷ್ಯನಿಗೆ ಆಧ್ಯಾತ್ಮಿಕ ಅನುಭೂತಿ ನೀಡುವ ಮಾರ್ಗ ಮಾತ್ರ. ಆಧ್ಯಾತ್ಮಿಕ ಅನುಭೂತಿಯನ್ನು ನೀಡುವ ದೇವಾಲಯಗಳಲ್ಲಿ ಸ್ವಚ್ಛತೆ, ಪ್ರಶಾಂತತೆ ಇರಬೇಕಾಗುತ್ತದೆ.

    ಮುಜುರಾಯಿ ಇಲಾಖೆಯ ದೇವಾಲಯಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಗುಟ್ಕಾ, ಸಿಗರೇಟು ಸೇರಿದಂತೆ ಯಾವುದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡದಂತೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ಬರೆದುಕೊಂಡಿದೆ. ಇದನ್ನೂ ಓದಿ: CWRC ಆದೇಶ ಪಾಲನೆ ಅಸಾಧ್ಯ, ತಮಿಳುನಾಡಿಗೆ ನೀರು ಬಿಡಲ್ಲ: ಕೇಂದ್ರಕ್ಕೆ ಸಿಎಂ ಪತ್ರ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]