Tag: Muzrai Temple

  • ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

    ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ – ಕೋರ್ಟ್ ಮೊರೆಹೋದ ಆಡಳಿತ ಮಂಡಳಿ

    ಬೆಂಗಳೂರು: ನಗರದ ಸುಪ್ರಸಿದ್ಧ ಗಾಳಿ ಆಂಜನೇಯಸ್ವಾಮಿ ದೇವಾಲಯ (Gali Anjaneya Temple) ಮುಜರಾಯಿ ಇಲಾಖೆ (Muzrai Department) ಸುಪರ್ದಿಗೆ ಬಂದಿದೆ. ದೇವಾಲಯದ ಆಡಳಿತವನ್ನು ಸರ್ಕಾರ ತನ್ನ ಅಧೀನಕ್ಕೆ ಪಡೆದಿದ್ದು, ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳು ಇನ್ಮುಂದೆ ದೇವಾಲಯದ ಉಸ್ತುವಾರಿಯ ನಡೆಸಿಕೊಂಡು ಹೋಗಲಿದೆ. ದೇವಾಲಯದ ಆಡಳಿತ ಮಂಡಳಿ ಈಗ ಬೇರೆ ದಾರಿ ಕಾಣದೇ ಸರ್ಕಾರದ ನಿರ್ಧಾರದ ವಿರುದ್ಧ ಕೋರ್ಟ್ ಮೊರೆಹೋಗಲು ಸಜ್ಜಾಗಿದೆ..

    ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಾಲಯದ ನಿರ್ವಹಣೆಗೆ ಕಾರ್ಯಪಾಲಕ ಅಧಿಕಾರಿಯನ್ನು ನೇಮಕ ಮಾಡಿದೆ. ಇಓ ನಾರಾಯಣಸ್ವಾಮಿ ಅಧಿಕಾರ ವಹಿಸಿಕೊಂಡು ದೇವಾಲಯದ ಅಧಿಕಾರ ಪಡೆದುಕೊಂಡಿದ್ದಾರೆ. ಸರ್ಕಾರದ ಈ ನಿರ್ಧಾರವನ್ನು ದೇವಾಲಯದ ಆಡಳಿತ ಮಂಡಳಿ ಖಂಡಿಸಿದೆ. ನಮ್ಮ ಪೂರ್ವಿಕರಿಂದ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯತ್ವ ದೊರತಿದ್ದು, ಇಷ್ಟು ವರ್ಷ ದೇವಸ್ಥಾನದ ಅಭಿವೃದ್ಧಿಗಾಗಿ ಶ್ರಮಿಸಿದ ನಮಗೆ ಅನ್ಯಾಯವಾಗಿದೆ ಎಂದು ಗ್ರಾಮಸ್ಥರು ಮತ್ತು ಟ್ರಸ್ಟಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ. ಇದನ್ನೂ ಓದಿ: ಪ್ರಾಣಿ ಪ್ರಿಯರಿಗೆ ಟಿಕೆಟ್ ದರ ಏರಿಕೆ ಶಾಕ್ – ಬನ್ನೇರುಘಟ್ಟ ಜೈವಿಕ ಉದ್ಯಾನ ಟಿಕೆಟ್ ದರ 20% ಏರಿಕೆ

    ಈಗಾಗಲೇ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನದ ಸಂಪೂರ್ಣ ಆಡಳಿತವನ್ನ ತನ್ನ ಅಧೀನಕ್ಕೆ ತೆಗೆದುಕೊಂಡಿದೆ. ಸೋಮವಾರ ಹೈಕೋರ್ಟ್‌ನಲ್ಲಿ (High Court) ಅರ್ಜಿ ಹಾಕಿ ಸರ್ಕಾರದ ವಿರುದ್ಧ ಕಾನೂನಿನ ಹೋರಾಟ ಮಾಡಲು ಟ್ರಸ್ಟಿಗಳು ಸಜ್ಜಾಗಿದ್ದಾರೆ. ಆಡಳಿತ ಮಂಡಳಿಯ ಕಿತ್ತಾಟದ ಮಧ್ಯೆ ಪ್ರತಿನಿತ್ಯ ಸಾವಿರಾರು ಭಕ್ತರು ಗಾಳಿ ಆಂಜನೇಯನ ದರ್ಶನ ಪಡೆಯುತ್ತಾರೆ. ಭಕ್ತರಿಗೆ ಮತ್ತು ಅಲ್ಲಿನ ಪುರೋಹಿತ ವರ್ಗಕ್ಕೆ ಯಾವುದೇ ಸಮಸ್ಯೆ ಆಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿದೆ. ಇದನ್ನೂ ಓದಿ: ಮಂತ್ರಾಲಯ | ಸ್ನಾನಘಟ್ಟದ ಬಳಿ ಈಜಲು ಹೋಗಿದ್ದ ಮೂವರು ಯುವಕರು ನಾಪತ್ತೆ

  • ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣ: ರಾಮಲಿಂಗಾರೆಡ್ಡಿ

    ಒಂದು ವರ್ಷದ ಒಳಗೆ ಮುಜರಾಯಿ ದೇವಾಲಯಗಳ ಆಸ್ತಿ ಇಂಡೀಕರಣ: ರಾಮಲಿಂಗಾರೆಡ್ಡಿ

    ಬೆಂಗಳೂರು : ಮುಜರಾಯಿ ದೇವಾಲಯಗಳಲ್ಲಿ (Muzrai Temple) ಬಾಕಿ ಇರುವ ಆಸ್ತಿ ಇಂಡೀಕರಣವನ್ನು ಇನ್ನೊಂದು ವರ್ಷದಲ್ಲಿ ಪೂರ್ಣ ಮಾಡುವುದಾಗಿ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಭರವಸೆ ನೀಡಿದ್ದಾರೆ.

    ವಿಧಾನ ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಕಾಂಗ್ರೆಸ್ ಸದಸ್ಯ ಅಬ್ದುಲ್ ಜಬ್ಬರ್ ಈ ಬಗ್ಗೆ ಪ್ರಶ್ನೆ ಕೇಳಿದರು. ಇದನ್ನೂ ಓದಿ: ಚಲನಚಿತ್ರೋತ್ಸವಕ್ಕೆ ಎಲ್ಲರಿಗೂ ಆಹ್ವಾನ ಹೋಗಿದೆ: ಸಾಧು ಕೋಕಿಲ

     

    ಇದಕ್ಕೆ ಉತ್ತರ ನೀಡಿದ ಸಚಿವ ರಾಮಲಿಂಗಾರೆಡ್ಡಿ,ಮುಜರಾಯಿ ದೇವಾಲಯಗಳ ಆಸ್ತಿ ರಕ್ಷಣೆ ಮತ್ತು ಇಂಡೀಕರಣ ಮಾಡುವ ಪ್ರಕ್ರಿಯೆ ಶುರುವಾಗಿದೆ. 2023 ಮತ್ತು 2024 ರಲ್ಲಿ 11,498 ಎಕರೆ ಆಸ್ತಿಯನ್ನ ದೇವಾಲಯಗಳ (Temple) ಹೆಸರಿಗೆ ಪಹಣಿ ಇಂಡೀಕರಿಸಲಾಗಿದೆ. ಸುಮಾರು 15,413 ಎಕರೆ ಆಸ್ತಿಯನ್ನು ದೇವಾಲಯಗಳನ್ನು ದೇವಾಲಯಗಳ ಹೆಸರಿಗೆ ಇಂಡೀಕರಣ ಮಾಡಲಾಗಿದೆ ಎಂದು ತಿಳಿಸಿದರು.

    ಇನ್ನೂ 20 ಸಾವಿರ ಎಕರೆ ದೇವಾಲಯಗಳ ಜಾಗ ಇಂಡೀಕರಣ ಮಾಡಬೇಕು.ಈಗಾಗಲೇ ಪ್ರಕ್ರಿಯೆ ಶುರುವಾಗಿದೆ‌. ಇನ್ನೊಂದು ವರ್ಷದಲ್ಲಿ ಬಾಕಿ ಇರೋ ಎಲ್ಲಾ ದೇವಾಲಯಗಳ ಆಸ್ತಿ ಇಂಡೀಕರಣ ಮಾಡುತ್ತೇವೆ ಅಂತ ಭರವಸೆ ನೀಡಿದರು.

     

  • ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಂದಿನಿ ತುಪ್ಪ ಕಡ್ಡಾಯ: ಮುಜುರಾಯಿ ಇಲಾಖೆ ಆದೇಶ

    ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ನಂದಿನಿ ತುಪ್ಪ ಕಡ್ಡಾಯ: ಮುಜುರಾಯಿ ಇಲಾಖೆ ಆದೇಶ

    ಬೆಂಗಳೂರು: ತಿರುಪತಿ ಲಡ್ಡು (Tirupati Laddu) ವಿವಾದ ಜೋರಾಗುತ್ತಿದ್ದಂತೆ ಕರ್ನಾಟಕ ಸರ್ಕಾರ (Karnataka Government) ಎಚ್ಚೆತ್ತುಕೊಂಡಿದೆ. ರಾಜ್ಯದ ಎಲ್ಲಾ ದೇಗುಲಗಳಲ್ಲಿ ಪ್ರಸಾದ ತಯಾರಿಸಲು ನಂದಿನಿ ತುಪ್ಪವನ್ನೇ (Nandini Ghee) ಬಳಸುವಂತೆ ಮುಜುರಾಯಿ ಇಲಾಖೆ ಆದೇಶ ಹೊರಡಿಸಿದೆ.

    ಕರ್ನಾಟಕ ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ಅಡಿ ಬರುವ ಎಲ್ಲಾ ಅಧಿಸೂಚಿತ ದೇವಾಲಯಗಳಲ್ಲಿ (Muzrai Temple) ಸೇವೆಗಳಿಗೆ, ದೀಪಗಳಿಗೆ ಮತ್ತು ಎಲ್ಲಾ ವಿಧದ ಪ್ರಸಾದ ತಯಾರಿಕೆಗೆ ಹಾಗೂ ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪವನ್ನು ಮಾತ್ರ ಬಳಸಬೇಕು. ದೇವಾಲಯಗಳಲ್ಲಿ ತಯಾರಿಸಲಾಗುವ ಪ್ರಸಾದಗಳಲ್ಲಿ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕೆಂದು ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಆದೇಶದಲ್ಲಿ ಸೂಚಿಸಿದ್ದಾರೆ. ಇದನ್ನೂ ಓದಿ: Tirupati Laddu Row | ಟಿಟಿಡಿ ಲಡ್ಡು ತಯಾರಿಕೆಗೆ ಪ್ರಮಾಣಿಕೃತ ತುಪ್ಪವನ್ನೇ ಬಳಸಲಾಗಿದೆ: ಜಗನ್ ಸ್ಪಷ್ಟನೆ

     

    ಕೆಎಂಎಫ್ (KMF) ಉತ್ಪನ್ನ ನಂದಿನಿ ತುಪ್ಪದ ಗುಣಮಟ್ಟಕ್ಕೆ ಎಲ್ಲರೂ ಉಘೇ ಉಘೇ ಎನ್ನುತ್ತಿದ್ದಾರೆ. ಬಿಡ್‌ ವೇಳೆ ಕಡಿಮೆ ದರಕ್ಕೆ ಗುಣಮಟ್ಟದ ನಂದಿನಿ ತುಪ್ಪ ಪೂರೈಸಲಾಗುವುದಿಲ್ಲ ಎಂದು ಹಿಂದೆ ಸರಿದಿದ್ದನ್ನು ತೆಲುಗುದೇಶಂ ಎಂಎಲ್‌ಸಿ ದೀಪಕ್ ರೆಡ್ಡಿ ನೆನಪಿಸಿಕೊಂಡಿದ್ದಾರೆ. ಇದನ್ನೂ ಓದಿ: ತಿರುಪತಿ ಲಡ್ಡು ವಿವಾದ – ವರದಿ ಕೇಳಿದ ಕೇಂದ್ರ ಸರ್ಕಾರ

    ತಿರುಮಲ ದೇವಸ್ಥಾನದ ಮಾಜಿ ಪ್ರಧಾನ ಅರ್ಚಕ ರಮಣ ದೀಕ್ಷಿತುಲು ಕೂಡ, ನಂದಿನಿ ತುಪ್ಪದ ಗುಣಮಟ್ಟವನ್ನು ಹೊಗಳಿದ್ದಾರೆ. ಕರ್ನಾಟಕದ ನಂದಿನಿ ತುಪ್ಪವನ್ನು ಲಡ್ಡು ತಯಾರಿಯಲ್ಲಿ ಬಳಸಲು ಮತ್ತೆ ನಿರ್ಧರಿಸಿರುವುದು ಒಳ್ಳೆಯ ಸಂಗತಿ ಎಂದಿದ್ದಾರೆ.