Tag: Muzrai temples

  • ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ – ಅ.1ರಿಂದ ಜಾರಿ

    ರಾಜ್ಯದ 9 ಮುಜರಾಯಿ ದೇಗುಲಗಳ ಸೇವಾಶುಲ್ಕ ಏರಿಕೆ – ಅ.1ರಿಂದ ಜಾರಿ

    – ಸೇವಾಶುಲ್ಕ ಹೆಚ್ಚಳ ಸರ್ಕಾರದ ತೀರ್ಮಾನವಲ್ಲ, ಆಡಳಿತ ಮಂಡಳಿ ನಿರ್ಧಾರವೆಂದ ಸಚಿವ

    ಬೆಂಗಳೂರು: ಕರ್ನಾಟಕದ ಮುಜರಾಯಿ ಇಲಾಖೆ (Muzrai Department) ವ್ಯಾಪ್ತಿಯ ಕೆಲ ದೇವಾಲಯಗಳ ಸೇವಾಶುಲ್ಕ ಸದ್ದಿಲ್ಲದೇ ಏರಿಕೆಯಾಗಿದ್ದು, ಇನ್ಮೇಲೆ ದೇವರ ಸೇವೆ ಭಕ್ತಾದಿಗಳ ಜೇಬು ಸುಡಲಿದೆ.

    ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯಡಿ 35 ಸಾವಿರ ದೇವಾಲಯಗಳಿದ್ದು, ಈ ದೇವಾಲಯಗಳ (Temples) ಪೈಕಿ 9 ದೇವಸ್ಥಾನಗಳ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಅಕ್ಟೋಬರ್‌ 1ರಿಂದ ಪರಿಷ್ಕೃತ ದರ ಅನ್ವಯವಾಗಲಿದೆ. ಕಳೆದ 4-5 ವರ್ಷದಿಂದ ಸೇವಾಶುಲ್ಕ ಪರಿಷ್ಕರಣೆ ಮಾಡದ, ಯಾವ ದೇವಾಲಯಗಳು ಸೇವಾಶುಲ್ಕ ‌ಪರಿಷ್ಕರಣೆಗೆ ಮನವಿ ಸಲ್ಲಿಸಿದ್ದವೋ ಆ ದೇವಾಲಯಗಳ ಸೇವಾಶುಲ್ಕವನ್ನ, ಆಗಮ ಪಂಡಿತರ ಪರಿಶೀಲನೆ ‌ನಂತರ 5-10% ವರೆಗೂ ಮುಜರಾಯಿ ಇಲಾಖೆ ಆಯುಕ್ತರು ಏರಿಕೆ ಮಾಡಿದ್ದಾರೆ. ಇದು ದೇವಾಲಯಗಳ ಆಡಳಿತ ಮಂಡಳಿ ತೀರ್ಮಾನವೇ ಹೊರತು ಸರ್ಕಾರದ ನಿರ್ಧಾರವಲ್ಲವೆಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ಇದನ್ನೂ ಓದಿ: ಸೆ.22 ರಿಂದ ಜಾತಿ ಜನಗಣತಿ ಆರಂಭ – ಸರ್ಕಾರದಿಂದ ಅಧಿಕೃತ ಆದೇಶ ಜಾರಿ

    ಯಾವ್ಯಾವ ದೇವಸ್ಥಾನಗಳಲ್ಲಿ ಶುಲ್ಕ ಏರಿಕೆ?
    ಬೆಂಗಳೂರು ನಗರ
    * ಯೋಗ ನರಸಿಂಹಸ್ವಾಮಿ ದೇವಾಲಯ, ಮಲ್ಲೇಶ್ವರಂ
    * ನಂದಿ ತೀರ್ಥ ದೇವಾಲಯ, ಮಲ್ಲೇಶ್ವರಂ
    * ಮಹಾಗಣಪತಿ ದೇವಾಲಯ, ಮಲ್ಲೇಶ್ವರಂ

    ಚಿಕ್ಕಬಳ್ಳಾಪುರ
    * ವಿಧುರಾಶ್ವಥ ನಾರಾಯಣ ಸ್ವಾಮಿ ದೇವಾಲಯ
    * ವೆಂಕಟರಮಣ ದೇವಾಲಯ, ತಲಕಾಯ ಬೆಟ್ಟ

    ದಕ್ಷಿಣ ಕನ್ನಡ
    * ಮಹಾಲಿಂಗೇಶ್ವರ ದೇವಾಲಯ, ಪುತ್ತೂರು
    * ಕುಕ್ಕೆ ಸುಬ್ರಹ್ಮಣ್ಯ ದೇವಾಲಯ
    * ಸೌತಡ್ಕ ಮಹಾಗಣಪತಿ ದೇವಾಲಯ
    * ಸೂರ್ಯನಾರಾಯಣ ಸ್ವಾಮಿ ದೇವಾಲಯ, ಮರೋಳಿ

    ಇನ್ನೂ ನಾಗಾರಾಧನೆ, ದೈವರಾಧನೆಗೆ ಹೆಸರಾದ ಕುಕ್ಕೆ ಸುಬ್ರಹ್ಮಣ್ಯದಲ್ಲಿ 2010ರಲ್ಲಿ ಸೇವಾಶುಲ್ಕ ಏರಿಕೆ ಮಾಡಲಾಗಿತ್ತು. 15 ವರ್ಷಗಳ ನಂತರ ಇದೀಗ ಸೇವಾಶುಲ್ಕ ಏರಿಕೆ ಮಾಡಲಾಗಿದೆ. ಕುಕ್ಕೆಯಲ್ಲಿ ಆಶ್ಲೇಷ ಪೂಜೆ ಸೇವೆಗೆ ಈ ಹಿಂದೆ ಇದ್ದ ದರ 400 ರೂಪಾಯಿ, ಪರಿಷ್ಕೃತ ದರ 500 ರೂ.ಗೆ ಏರಿಕೆಯಾಗಿದೆ. ನಾಗಪ್ರತಿಷ್ಠೆಗೆ ಈ ಹಿಂದೆ ಇದ್ದ ದರ 400 ರೂಪಾಯಿ. ಆದರೆ ಧಾರ್ಮಿಕ ದತ್ತಿ ಇಲಾಖೆ ಪರಿಷ್ಕೃತ ದರ 500 ರೂಪಾಯಿ ಹೆಚ್ಚಿಸಿದೆ. ಹೀಗೆ ಉಳಿದ‌ ಸೇವೆಗಳಲ್ಲೂ‌ ಭಾರೀ‌ ಹೆಚ್ಚಳ ಮಾಡಲಾಗಿದೆ. ಇದನ್ನೂ ಓದಿ: ಧಾರವಾಡ | ನಕಲಿ ದಾಖಲೆ ಸೃಷ್ಟಿಸಿ ಹಿಂದೂ ಯುವತಿ ಜೊತೆ ಮದ್ವೆ – ಯುಟ್ಯೂಬರ್‌ ಮುಕಳೆಪ್ಪ ವಿರುದ್ಧ ದೂರು

  • Mobile Ban – ಇನ್ನು ಮುಂದೆ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಸುವಂತಿಲ್ಲ

    Mobile Ban – ಇನ್ನು ಮುಂದೆ ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್‌ ಬಳಸುವಂತಿಲ್ಲ

    ಬೆಂಗಳೂರು: ಧಾರ್ಮಿಕ ದತ್ತಿ (Muzrai Temples) ವ್ಯಾಪ್ತಿಗೆ ಬರುವ ಎಲ್ಲಾ ದೇವಾಲಯಗಳಲ್ಲಿ (Temple) ಮೊಬೈಲ್ ಫೋನ್ (Mobile Phone) ಬಳಕೆಗೆ ನಿಷೇಧ ಹೇರಲಾಗಿದೆ.

    ತಮಿಳುನಾಡಿನ ಬಳಿಕ ಕರ್ನಾಟಕದ ದೇವಸ್ಥಾನಗಳ (Karnataka Temple) ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಮೊಬೈಲ್ ಫೋನ್ ಬಳಕೆ ನಿಷೇಧದ ಬಗ್ಗೆ ಮೊದಲಿನಿಂದಲೂ ಚರ್ಚೆ ನಡೆಯುತ್ತಿತ್ತು. ಈಗ ಅಧಿಕೃತವಾಗಿ ಮೊಬೈಲ್‌ ಫೋನ್‌ ಬಳಕೆಗೆ ಧಾರ್ಮಿಕ ಮತ್ತು ದತ್ತಿ ಇಲಾಖೆ ನಿಷೇಧ ಹೇರಿ ಆದೇಶ ಪ್ರಕಟಿಸಿದೆ.  ಇದನ್ನೂ ಓದಿ: ರಾಜ್ಯದ ಶ್ರೀಮಂತ ದೇವಸ್ಥಾನಗಳ ಪಟ್ಟಿ ಬಿಡುಗಡೆ – ಯಾವ ದೇವಾಲಯದ ಆದಾಯ, ಖರ್ಚು ಎಷ್ಟು?

    ಆದೇಶದಲ್ಲಿ ಏನಿದೆ?
    ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಫೋನ್ ಬಳಕೆ ಹೆಚ್ಚಾಗುತ್ತಿದೆ. ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಫೋನ್ ಬಳಕೆಯ ಶಬ್ದಗಳಿಂದ ಸಿಬ್ಬಂದಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ಏಕ ಮನಸ್ಸಿನಿಂದ ಧ್ಯಾನ ಪೂಜಾದಿಗಳನ್ನು ನಡೆಸಲು ತೊಂದರೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ದೇವರ ದರ್ಶನಕ್ಕೆ ಬರುವ ಭಕ್ತಾದಿಗಳು ದೇವರ ದರ್ಶನದ ಸಮಯದಲ್ಲಿ ತಮ್ಮ ಮೊಬೈಲ್ ಫೋನ್‌ಗಳನ್ನು ಸ್ವಿಚ್‌ ಆಫ್ ಮಾಡಿ, ದೇವರ ದರ್ಶನ ಮಾಡುವಂತೆ ಸೂಚಿಸಲಾಗಿದೆ.

     
    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದೇವಾಲಯಗಳ ಓಪನ್‍ಗೆ ರಾಜ್ಯ ಸರ್ಕಾರದಿಂದ ಎಂಟು ನಿಯಮ

    ದೇವಾಲಯಗಳ ಓಪನ್‍ಗೆ ರಾಜ್ಯ ಸರ್ಕಾರದಿಂದ ಎಂಟು ನಿಯಮ

    ಬೆಂಗಳೂರು: ಕೊರೊನಾ ಲಾಕ್‍ಡೌನ್ 5.0ನಲ್ಲಿ ಕೇಂದ್ರ ಸರ್ಕಾರವು ದೇವಾಲಯ ತೆರೆಯಲು ಅನುಮತಿ ನೀಡಿದೆ. ಹೀಗಾಗಿ ಜೂನ್ 8ರಿಂದ ದೇವಾಲಯ ತೆರೆಯಲಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಎಂಟು ಸೂತ್ರಗಳನ್ನು ಹೊರಡಿಸಿದೆ.

    ಈ ಕುರಿತು ಪ್ರಕಟಣೆ ಹೊರಡಿಸಿರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಇಲಾಖೆಯು, ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೆಲವು ಮುಂಜಾಗ್ರತಾ ಕ್ರಮಗಳು ಅಗತ್ಯವಾಗಿದೆ. ಸರ್ಕಾರವು ಮುಂಬರುವ ದಿನಗಳಲ್ಲಿ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ದೇವಾಲಯಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆಯಲು ಭಕ್ತರಿಗೆ ಅವಕಾಶ ಕಲ್ಪಿಸಬಹುದು. ಹೀಗಾಗಿ ದೇವಾಲಯಗಳಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಕೊಳ್ಳಬೇಕಿದೆ ಎಂದು ತಿಳಿಸಿದೆ.

    ಎಂಟು ನಿಯಮಗಳು ಏನು?
    1. ನಿತ್ಯ ಸ್ವಚ್ಛತೆ ಜೊತೆಗೆ ಒಳಗೆ-ಹೊರಗೆ ಡಿಸ್ ಇನ್ಫೆಕ್ಟರ್ ಸಿಂಪಡಣೆ ಕಡ್ಡಾಯ.
    2. ಭದ್ರತಾ ಸಿಬ್ಬಂದಿಯನ್ನು ಎರಡು ಪಾಳಿಯಲ್ಲಿ ದೇವಾಲಯದ ಖರ್ಚಿನಲ್ಲೇ ನೇಮಿಸಿ.
    3. ದೇವಾಲಯದ ಎಲ್ಲಾ ಸಿಬ್ಬಂದಿಗೂ ಮಾಸ್ಕ್ ಕಡ್ಡಾಯ, ಒಳಾಂಗಣದಲ್ಲಿ ಅರ್ಚಕರಿಗೆ ಮಾಸ್ಕ್ ವಿನಾಯಿತಿ.
    4. ಥರ್ಮಲ್ ಸ್ಕ್ರೀನಿಂಗ್ ಪರೀಕ್ಷೆ, ಸ್ಯಾನಿಟೈಸರ್ ಹಾಕಿದ ನಂತರವೇ ದೇವಸ್ಥಾನಕ್ಕೆ ಎಂಟ್ರಿ.
    5. ಥರ್ಮಲ್ ಸ್ಕ್ರೀನಿಂಗ್‍ನಲ್ಲಿ ಜ್ವರ ಪತ್ತೆಯಾದರೆ ದೇವಸ್ಥಾನಕ್ಕೆ ನೋ ಎಂಟ್ರಿ.
    6. ಮಾಸ್ಕ್ ಧರಿಸದ ಭಕ್ತಾದಿಗಳಿಗೆ ದೇವಸ್ಥಾನ ಪ್ರವೇಶವಿಲ್ಲ.
    7. ಸಾಮಾಜಿಕ ಅಂತರ ಕಾಪಾಡಲು ಬಾಕ್ಸ್, ಲೈನ್ ರೂಪಿಸುವುದು ಕಡ್ಡಾಯ.
    8. ದೇವಸ್ಥಾನದ ಶೌಚಾಲಯ ಆಗಾಗ ಸ್ವಚ್ಛಗೊಳಿಸಿ, ಅಗತ್ಯ ಡಿಸ್ ಇನ್ಫೆಂಕಟರ್ ಸಿಂಪಡಿಸಬೇಕು.

  • ಆನ್‍ಲೈನ್ ಪೂಜೆ ಮತ್ತಷ್ಟು ದೇಗುಲಗಳಿಗೆ ವಿಸ್ತರಣೆ: ಸಚಿವ ಕೋಟ

    ಆನ್‍ಲೈನ್ ಪೂಜೆ ಮತ್ತಷ್ಟು ದೇಗುಲಗಳಿಗೆ ವಿಸ್ತರಣೆ: ಸಚಿವ ಕೋಟ

    ಉಡುಪಿ: ಮುಜರಾಯಿ ಇಲಾಖೆ ದೇವಸ್ಥಾನಗಳಲ್ಲಿ ಆನ್‍ಲೈನ್ ಪೂಜಾ ಸೇವೆ ಬಗ್ಗೆ ಕೆಲವರ ಆಕ್ಷೇಪ ಇದೆ. ಆನ್‍ಲೈನ್ ಸೇವೆ ಹೊಸ ಯೋಜನೆಯಲ್ಲ. ಈ ಹಿಂದಿನಯೂ ಇತ್ತು. ಈಗ ಮತ್ತಷ್ಟು ದೇವಸ್ಥಾನಗಳನ್ನು ಆನ್‍ಲೈನ್ ಸೇವೆಯ ವ್ಯಾಪ್ತಿಗೆ ಇಲಾಖೆ ತರುತ್ತೇವೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

    ನಗರದಲ್ಲಿ ಮಾತನಾಡಿದ ಸಚಿವರು, ಕೊಲ್ಲೂರು ದೇವಸ್ಥಾನದಲ್ಲಿ ಕಳೆದ ವರ್ಷ ಮೂರು ಸಾವಿರ ಆನ್‍ನೈನ್ ಸೇವೆಗಳು ಬಂದಿವೆ. ಮೈಸೂರು ಚಾಮುಂಡೇಶ್ವರಿಯಲ್ಲಿ ಹೋದ ವರ್ಷ 49.50 ಲಕ್ಷ ರೂ. ಜಮಾ ಆಗಿದೆ. ಲಾಕ್‍ಡೌನ್‍ನಿಂದ ಭಕ್ತರಿಗೆ ದೇವಸ್ಥಾನಕ್ಕೆ ಹೋಗಲು ಸಾಧ್ಯವಾಗುತ್ತಿಲ್ಲ. ಸೇವೆ ಕೊಡಬೇಕೆಂಬ ಹರಕೆ ಹೊತ್ತ ಭಕ್ತರಿಗೆ ಆನ್‍ಲೈನ್ ಸೇವೆಯಿಂದ ಅನುಕೂಲವಾಗಲಿದೆ ಎಂದರು.

    ಭಕ್ತರಿಗೆ ನೆಮ್ಮದಿ ಸಿಗಲಿ ಎಂಬ ಕಾರಣಕ್ಕೆ ಆನ್‍ಲೈನ್ ಆರಂಭಿಸಿದ್ದೇವೆ. ಲಾಕ್ ಡೌನ್ ವರೆಗಾದರೂ ಆನ್ಲೈನ್ ಸೇವೆ ಅಗತ್ಯವಿದೆ. ಭಕ್ತರ ಕೋರಿಕೆ ಹಿನ್ನೆಲೆಯಲ್ಲಿ ಈ ಸೇವೆ ಆರಂಭವಾಗಿದೆ ಹೊರತು ನಾವಲ್ಲ ಮಾಡಿದ್ದು ಎಂದರು.

    ದೇವಸ್ಥಾನಗಳಿಗೆ ಬಾಗಿಲು ಹಾಕಿದೆ ಪೂಜೆ ಆಗುತ್ತಿಲ್ಲ ಎಂದು ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ. ಎಲ್ಲಾ ದೇವಸ್ಥಾನಗಳನ್ನು ಸಾಂಪ್ರದಾಯಿಕ ಪೂಜೆ ನಡೆಯುತ್ತಲೇ ಇದೆ. ತ್ರಿಕಾಲ, ಕಾಲಮಿತಿಯ ಪೂಜೆಗಳು ನಿಂತಿಲ್ಲ. ದೇವಸ್ಥಾನದಲ್ಲೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಅನಿವಾರ್ಯತೆ ಇದೆ. ಹಾಗಾಗಿ ಲಾಕ್‍ಡೌನ್ ಮುಗಿದ ನಂತರವೇ ದೇವಸ್ಥಾನ ತೆರೆಯಲಾಗುತ್ತದೆ ಎಂದು ಹೇಳಿದರು.

  • ದೇವಸ್ಥಾನಗಳಿಗೆ ಹೈಟೆಕ್ ಸ್ಪರ್ಶ, ಇ-ಹುಂಡಿ ವ್ಯವಸ್ಥೆ ಜಾರಿಗೆ ಸರ್ಕಾರ ನಿರ್ಧಾರ

    ದೇವಸ್ಥಾನಗಳಿಗೆ ಹೈಟೆಕ್ ಸ್ಪರ್ಶ, ಇ-ಹುಂಡಿ ವ್ಯವಸ್ಥೆ ಜಾರಿಗೆ ಸರ್ಕಾರ ನಿರ್ಧಾರ

    ಬೆಂಗಳೂರು: ದೇವಸ್ಥಾನಗಳಿಗೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿವ ಬಿಜೆಪಿ ಸರ್ಕಾರವು, ಇ-ಹುಂಡಿ ವ್ಯವಸ್ಥೆ ಜಾರಿಗೆ ತರಲು ನಿರ್ಧಾರ ಕೈಗೊಂಡಿದೆ.

    ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರು, 15 ದಿನಗಳಲ್ಲಿ ರಾಜ್ಯ ಧಾರ್ಮಿಕ ಪರಿಷತ್ ರಚನೆ ಆಗಲಿದೆ. ಜೊತೆಗೆ ರಾಜ್ಯದ 30 ಜಿಲ್ಲೆಗಳಲ್ಲಿ ಜಿಲ್ಲಾಧಿಕಾರಿಗಳ ಉಸ್ತುವಾರಿಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ರಚನೆ ಮಾಡುತ್ತೇವೆ. ಈ ಬೆನ್ನಲ್ಲೇ ಇ-ಹುಂಡಿ ಪ್ರಕ್ರಿಯೆ ಜಾರಿಗೆ ತರುತ್ತಿದ್ದೇವೆ. ಪ್ರಾರಂಭದಲ್ಲಿ 10-15 ದೇವಸ್ಥಾನಗಳಲ್ಲಿ ಇ-ಹುಂಡಿ ಪ್ರಕ್ರಿಯೆ ಜಾರಿ ಬಲಿದೆ ಎಂದು ತಿಳಿಸಿದರು.

    ಜಿಲ್ಲಾ ಪರಿಷತ್ ರಚನೆ ಆದ ಬಳಿಕ ಬಿ ಮತ್ತು ಸಿ ವಲಯದ ದೇವಾಲಯಗಳಿಗೆ ಆಡಳಿತ ಮಂಡಳಿಗಳ ನೇಮಕ ಮಾಡಲಾಗುತ್ತದೆ. ರಾಜ್ಯದಲ್ಲಿ ಇರು ಮುಜರಾಯಿ ದೇವಾಲಯಗಳ ಜಾಗ ಸರ್ವೆ ಮಾಡಲು ರಾಜ್ಯ ಮತ್ತು ಜಿಲ್ಲಾ ಮಟ್ಟದಲ್ಲಿ ಸರ್ವೆ ತಂಡ ರಚನೆ ಮಾಡಲಾಗುವುದು. ಸರ್ವೆ ವೇಳೆ ದೇವಸ್ಥಾನದ ಜಾಗ ಅತಿಕ್ರಮ ಮಾಡಿದ್ದರೆ ವಶಪಡಿಸಿಕೊಳ್ಳುತ್ತೇವೆ ಎಂದು ಸ್ಪಷ್ಟಪಡಿಸಿದರು.

    ಇಷ್ಟು ದಿನ ಲೋಕೋಪಯೋಗಿ ಇಲಾಖೆ ನೇತೃತ್ವದಲ್ಲಿ ನಡೆಯುತ್ತಿದ್ದ ಇಂಜಿನಿಯರಿಂಗ್ ವಿಭಾಗದ ಬದಲಾಗಿ ಇಲಾಖೆಯಿಂದಲೇ ಇಂಜಿನಿಯರಿಂಗ್ ವಿಭಾಗ ಪ್ರಾರಂಭ ಮಾಡಲಾಗುತ್ತೆ. ಇಲಾಖೆಯ ವ್ಯಾಪ್ತಿಗೆ ಬರುವ ಅನುವಂಶಿಕ ದೇವಸ್ಥಾನಗಳಿಗೆ ಕಾರ್ಯನಿರ್ವಾಹಕ ಅಧಿಕಾರಿಗಳನ್ನು ನೇಮಕ ಮಾಡುವುದಕ್ಕೆ ನಿರ್ಧರಿಸಲಾಗಿದೆ. ಎ ವರ್ಗದ 62 ದೇವಾಲಯಗಳಿಗೆ ಆಡಳಿತ ಮಂಡಳಿ ರಚನೆ ಮಾಡುವ ಆದೇಶ ಹೊರಡಿಸಲಾಗಿದೆ. ಇದಲ್ಲದೆ ಇಲಾಖೆಯಲ್ಲಿ ಅಗತ್ಯವಾಗಿ ಖಾಲಿ ಇರುವ ಒಂದು ಸಾವಿರ ಹುದ್ದೆಗಳ ನೇಮಕ ಶೀಘ್ರವೇ ಭರ್ತಿ ಮಾಡಲಾಗುತ್ತದೆ ಎಂದು ಭರವಸೆ ನೀಡಿದರು.

    ಏನಿದು ಇ-ಹುಂಡಿ?
    ಭಕ್ತರು ನೀಡುವ ಕಾಣಿಕೆಯನ್ನು ನೇರವಾಗಿ ಇ-ಹುಂಡಿಗೆ ಹಾಕುವುದು. ಇದರಿಂದಾಗಿ ಕಾಣಿಕೆ ನೀಡುವುದಕ್ಕೆ ಯಾವುದೇ ವ್ಯಕ್ತಿಗಳ ಅವಶ್ಯಕತೆ ಇರುವುದಿಲ್ಲ. ಎಷ್ಟು ಹಣ ಹಾಕಲಾಗಿದೆ, ಹೆಸರು ಸಮೇತ ನಿಮಗೆ ಮಾಹಿತಿ ತಕ್ಷಣಕ್ಕೆ ಲಭ್ಯವಾಗುತ್ತದೆ. ಕಾಣಿಕೆ ಮೊತ್ತದ ವಿವರ ಸ್ಲಿಪ್‍ನಲ್ಲಿ ತಕ್ಷಣವೇ ಲಭ್ಯವಾಗಲಿದೆ. ಯಾವುದೇ ವ್ಯಕ್ತಿ ಕೈಗೆ ಕಾಣಿಕೆ ಕೊಡುವ ಅವಶ್ಯಕತೆ ಇರುವುದಿಲ್ಲ. ಅಷ್ಟೇ ಅಲ್ಲದೆ ಸ್ಲಿಪ್ ಬರೆಸುವ ಗೋಜು ಇರುವುದಿಲ್ಲ. ಭಕ್ತರು ಇ-ಹುಂಡಿಯಲ್ಲಿ ಹಾಕಿದ ಹಣ ನೇರವಾಗಿ ದೇವಸ್ಥಾನ ಬ್ಯಾಂಕ್ ಅಕೌಂಟ್‍ಗೆ ಜಮೆ ಆಗುತ್ತೆ. ಈ ಸೇವೆಗಳನ್ನು ನಿಂತಲ್ಲೆ ಬುಕ್ ಮಾಡಿಸಬಹುದು. ಇ-ಹುಂಡಿಯಲ್ಲಿ ಹಣ ಕಟ್ಟಿ ವಿಶೇಷ ಸೇವೆಗಳನ್ನು ದೇವಸ್ಥಾನಗಳಲ್ಲಿ ಮಾಡಿಸಬಹುದು.

    ಇದೇ ವೇಳೆ ನೆರೆ ಪರಿಹಾರದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಈಗಾಗಲೇ ಕೇಂದ್ರ ತಂಡ ಪರಿಶೀಲನೆ ಮಾಡಿಕೊಂಡು ಹೋಗಿದೆ. ಆದಷ್ಟು ಬೇಗ ಕೇಂದ್ರ ಹೆಚ್ಚು ಅನುದಾನ ನೀಡುವ ನಿರೀಕ್ಷೆ ರಾಜ್ಯ ಸರ್ಕಾರಕ್ಕೆ ಇದೆ. ಆದಷ್ಟು ಬೇಗ ಕೇಂದ್ರದಿಂದ ಅನುದಾನ ಬರುತ್ತದೆ. ಗರಿಷ್ಠ ಪ್ರಮಾಣದಲ್ಲಿ ಅನುದಾನ ರಾಜ್ಯಕ್ಕೆ ಬರಲಿದೆ. ಕೇಂದ್ರ ಸರ್ಕಾರದ ಮೇಲೆ ನಮಗೆ ನಂಬಿಕೆ ಇದೆ ಎಂದು ತಿಳಿಸಿದರು.

    ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರ ಪರ ಬುಧವಾರ ನಡೆದ ಹೋರಾಟದ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು, ಜಾರಿ ನಿರ್ದೇಶನಾಲಯ (ಇಡಿ) ತೆಗೆದುಕೊಂಡ ನಿರ್ಧಾರ ಸರಿ ಇದೆ. ನಮ್ಮ ಬಿಜೆಪಿ ನಾಯಕರು ಯಾರು ಪ್ರತಿಭಟನೆ ಹೋಗಿಲ್ಲ. ಯಾರಾದರು ಹೋಗಿದ್ದರೆ ಅದಕ್ಕೂ ಪಕ್ಷಕ್ಕೂ ಸಂಬಂಧವಿಲ್ಲ. ನನ್ನ ಗಮನಕ್ಕೆ ಬಂದಿರುವಂತೆ ನಮ್ಮ ಪಕ್ಷದ ಯಾವ ನಾಯಕರು ಪ್ರತಿಭಟನೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇಲ್ಲ. ಡಿ.ಕೆ.ಶಿವಕುಮಾರ್ ಅವರ ಬಂಧನದಲ್ಲಿ ಕೇಂದ್ರ ಸರ್ಕಾರ ಯಾವುದೇ ಹಸ್ತಕ್ಷೇಪ ಮಾಡಿಲ್ಲ ಎಂದು ಸ್ಪಷ್ಟನೆ ನೀಡಿದರು.