Tag: Muzurai Department

  • ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇಗುಲ – 5 ವರ್ಷದ ನಂತ್ರ ಟ್ರಸ್ಟ್‌ಗೆ ವಾಪಸ್: ರಾಮಲಿಂಗಾರೆಡ್ಡಿ

    ಮುಜರಾಯಿ ಸುಪರ್ದಿಗೆ ಗಾಳಿ ಆಂಜನೇಯ ದೇಗುಲ – 5 ವರ್ಷದ ನಂತ್ರ ಟ್ರಸ್ಟ್‌ಗೆ ವಾಪಸ್: ರಾಮಲಿಂಗಾರೆಡ್ಡಿ

    ಬೆಂಗಳೂರು: ನಗರದ ಪ್ರತಿಷ್ಟಿತ ಗಾಳಿ ಆಂಜನೇಯ ದೇಗುಲವನ್ನು ಮುಜುರಾಯಿ ಇಲಾಖೆ (Muzurai Department) ಸುಪರ್ದಿಗೆ ತೆಗೆದುಕೊಂಡ ನಂತರ ದೇವಸ್ಥಾನದ ಆಡಳಿತ ಮಂಡಳಿ ಸಿಡಿದೆದ್ದಿದೆ. ಈ ಬೆನ್ನಲ್ಲೇ ಇದು ತಾತ್ಕಾಲಿಕ, 5 ವರ್ಷದ ನಂತರ ದೇಗುಲವನ್ನು ಟ್ರಸ್ಟ್‌ಗೆ ವಾಪಸ್ ಕೊಡುತ್ತೇವೆ ಎಂದು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ತಿಳಿಸಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗಾಳಿ ಆಂಜನೇಯ ಸ್ವಾಮಿ ದೇಗುಲದಲ್ಲಿ ಹಣ ದುರುಪಯೋಗ ಆಗಿದೆ. ಹೀಗಾಗಿ ಈ ಕ್ರಮ ಆಗಿದೆ. ಇದು ತಾತ್ಕಲಿಕ ಅಷ್ಟೇ. 5 ವರ್ಷದ ಬಳಿಕ ದೇಗುಲವನ್ನು ಮಂಡಳಿಗೆ ವಾಪಸ್ ಕೊಡುತ್ತೇವೆ. ಮುಜರಾಯಿ ಇಲಾಖೆ ಸಲ್ಲಿಸಿದ ವರದಿಯಲ್ಲಿ ಹಣಕಾಸಿನ ಲೆಕ್ಕವಿಲ್ಲ. ಯಾವುದೇ ದೇವಸ್ಥಾನದಲ್ಲಿ ಹಣಕಾಸಿನ ದುರುಪಯೋಗ ಆದರೆ ಅದನ್ನು ವಶಕ್ಕೆ ಪಡೆದುಕೊಳ್ಳುವ ಅಧಿಕಾರ ಸರ್ಕಾರಕ್ಕಿದೆ. ಈ ಹಿಂದೆ ಬಿಜೆಪಿ ಸರ್ಕಾರದ ಅವಧಿಯಲ್ಲಿಯೂ ಸುಮಾರು 10 ದೇವಾಲಯಗಳನ್ನು ವಶಕ್ಕೆ ಪಡೆದುಕೊಂಡಿತ್ತು ಎಂದು ಹೇಳಿದರು.ಇದನ್ನೂ ಓದಿ: ಮುಜರಾಯಿ ಇಲಾಖೆ ಸುಪರ್ದಿಗೆ ಗಾಳಿ ಆಂಜನೇಯ ದೇವಸ್ಥಾನ

    ಗುರುವಾರ ಮುಜರಾಯಿ ಇಲಾಖೆಯು ಐತಿಹಾಸಿಕ ಗಾಳಿ ಆಂಜನೇಯ ಸ್ವಾಮಿ ದೇಗುಲವನ್ನು ತನ್ನ ವಶಕ್ಕೆ ಪಡೆದುಕೊಂಡು ಆದೇಶ ಹೊರಡಿಸಿತ್ತು. ಕಳೆದ ವರ್ಷ ದೇವಸ್ಥಾನದ ಹುಂಡಿ ಹಣ ಎಣಿಸುವಾಗಲೇ ಆಡಳಿತ ಮಂಡಳಿಯ ಸದಸ್ಯರು ಹಣ ಎಗರಿಸಿದ್ದರು. ಹಣ ಎಗರಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಈ ಘಟನೆಯ ಬಗ್ಗೆ ವರದಿ ನೀಡುವಂತೆ ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸೂಚನೆ ನೀಡಿತ್ತು.

    ಇದೀಗ ಮುಜರಾಯಿ ಇಲಾಖೆ ರಾಜ್ಯ ಸರ್ಕಾರಕ್ಕೆ ವರದಿ ನೀಡಿದೆ. ವರದಿಯಲ್ಲಿ ಗಾಳಿ ಆಂಜನೇಯ ಸ್ವಾಮಿ ದೇವಸ್ಥಾನವನ್ನು ಮುಜರಾಯಿ ಇಲಾಖೆಗೆ ವರ್ಗಾವಣೆಗೆ ಶಿಫಾರಸು ಮಾಡಿತ್ತು. ಇದನ್ನು ಒಪ್ಪಿದ ಸರ್ಕಾರ 1997ರ 42 ಮತ್ತು 43ರನ್ವಯ ಘೋಷಿತ ಸಂಸ್ಥೆ ಅಂತ ಘೋಷಣೆ ಮಾಡಿತ್ತು. ಈ ಆದೇಶದ ಬೆನ್ನಲ್ಲೇ ದೇವಸ್ಥಾನದ ಟ್ರಸ್ಟಿಗಳು ಸರ್ಕಾರದ ವಿರುದ್ಧ ಸಿಡಿದೆದ್ದಿದ್ದರು.

    ದೇವಸ್ಥಾನವನ್ನು ಸರ್ಕಾರ ಸುಪರ್ದಿಗೆ ತೆಗೆದುಕೊಂಡಿದ್ದು ಸರಿಯಲ್ಲ ಎಂದು ಹೇಳಿ ದೇವಸ್ಥಾನದ ಆಡಳಿತ ಮಂಡಳಿ 12 ಗಂಟೆಗೆ ತುರ್ತು ಸಭೆ ಕರೆದಿತ್ತು. ಸಭೆ ಬಳಿಕ ನಾವು ಕಾನೂನು ಹೋರಾಟ ಮಾಡುವ ಸಾಧ್ಯತೆಯಿದೆ ಎಂದು ಎಚ್ಚರಿಸಿತ್ತು.ಇದನ್ನೂ ಓದಿ: ಟೆನ್ನಿಸ್‌ ತಾರೆಯ ಕೊಲೆಗೆ ಸ್ಫೋಟಕ ಟ್ವಿಸ್ಟ್‌ – ಮ್ಯೂಸಿಕ್‌ ಆಲ್ಬಂಗೆ ಸಿಟ್ಟಾಗಿ ಮಗಳ ಹತ್ಯೆ?

  • ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ರೌಡಿಶೀಟರ್ ನೇಮಕ – ನಾನು ಶಿಫಾರಸು ಪತ್ರ ಕೊಟ್ಟಿಲ್ಲ: ದಿನೇಶ್ ಗುಂಡೂರಾವ್

    ಕುಕ್ಕೆ ಸುಬ್ರಹ್ಮಣ್ಯ ಅಧ್ಯಕ್ಷನಾಗಿ ರೌಡಿಶೀಟರ್ ನೇಮಕ – ನಾನು ಶಿಫಾರಸು ಪತ್ರ ಕೊಟ್ಟಿಲ್ಲ: ದಿನೇಶ್ ಗುಂಡೂರಾವ್

    ಬೆಂಗಳೂರು: ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ರೌಡಿಶೀಟರ್‌ನನ್ನು ನೇಮಕ ಮಾಡಲು ನಾನು ಶಿಫಾರಸು ಪತ್ರ ಕೊಟ್ಟಿಲ್ಲ ಎಂದು ದಕ್ಷಿಣ ಕನ್ನಡ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao) ತಿಳಿಸಿದರು.ಇದನ್ನೂ ಓದಿ: ಸಮಗ್ರ ಅಭಿವೃದ್ಧಿಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಸ್ಥಾಪನೆ: ದಿನೇಶ್ ಗುಂಡೂರಾವ್

    ಕುಕ್ಕೆ ಸುಬ್ರಹ್ಮಣ್ಯ ದೇವಾಲಯಕ್ಕೆ ರೌಡಿಶೀಟರ್‌ನನ್ನು ಅಧ್ಯಕ್ಷನಾಗಿ ನೇಮಕ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಚುನಾವಣೆ ಮಾಡಿಕೊಂಡು ಆಯ್ಕೆ ಮಾಡಿಕೊಂಡಿದ್ದಾರೆ. ನಾನು ಯಾವುದೇ ಶಿಫಾರಸು ಪತ್ರ ಕೊಟ್ಟಿಲ್ಲ. ಆಯ್ಕೆ ಆಗಿರುವ ಬಗ್ಗೆ ಪರಿಶೀಲನೆ ಮಾಡುತ್ತೇನೆ. ಸ್ಥಳೀಯ ಮುಖಂಡರ ಅಭಿಪ್ರಾಯದ ಮೇರೆಗೆ ಆಯ್ಕೆ ಆಗಿದೆ. ಈಗ ಆಗಿರುವುದು ಒಳ್ಳೆಯ ಬೆಳವಣಿಗೆ ಅಲ್ಲ ಎಂದು ಹೇಳಿದರು.

    ಈಗ ಅಧ್ಯಕ್ಷರ ಬದಲಾವಣೆ ಆಗುವುದು ಕಷ್ಟ. ಒಂದು ಬಾರಿ ಚುನಾವಣೆ ಆದ ಮೇಲೆ ಸ್ಥಾನದಿಂದ ಕೆಳಗಿಳಿಸಲು ಆಗುವುದಿಲ್ಲ. ಆದರೂ ಕೂಡ ಈ ಬಗ್ಗೆ ಮುಜರಾಯಿ ಇಲಾಖೆ ಸಚಿವರ ಜೊತೆ ಮಾತನಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.ಇದನ್ನೂ ಓದಿ: ಜೈಶಂಕರ್, ಜೆ.ಪಿ ನಡ್ಡಾ ಸೇರಿ 25 ಪ್ರಮುಖರಿಗೆ ಭದ್ರತೆ ಹೆಚ್ಚಳ

  • ಅರ್ಚಕರಿಗೆ ಸೇರಬೇಕಿದ್ದ ಹಣ ಅಧಿಕಾರಿಗಳ ಕುಟುಂಬಕ್ಕೆ – ಮುಜರಾಯಿ ಇಲಾಖೆಯ 1.87 ಕೋಟಿ ಗುಳುಂ

    ಅರ್ಚಕರಿಗೆ ಸೇರಬೇಕಿದ್ದ ಹಣ ಅಧಿಕಾರಿಗಳ ಕುಟುಂಬಕ್ಕೆ – ಮುಜರಾಯಿ ಇಲಾಖೆಯ 1.87 ಕೋಟಿ ಗುಳುಂ

    ರಾಯಚೂರು: ಜಿಲ್ಲೆಯ ಲಿಂಗಸುಗೂರಿನ ಕಂದಾಯ ಇಲಾಖೆಯ ಅಧಿಕಾರಿಗಳಿಂದ ಮುಜರಾಯಿ ಇಲಾಖೆಯಲ್ಲಿನ (Muzurai Department) ಕೋಟ್ಯಾಂತರ ರೂಪಾಯಿ ಲೂಟಿ ನಡೆದಿರುವುದು ಬೆಳಕಿಗೆ ಬಂದಿದೆ.

    ಮುಜರಾಯಿ ದೇವಸ್ಥಾನಗಳ ಅರ್ಚಕರಿಗೆ ಸೇರಬೇಕಾದ 1,87,86,561 ರೂ. ಹಣ ಲೂಟಿಯಾಗಿದೆ. ಲಿಂಗಸುಗೂರು (Lingasuguru) ಕೆನರಾ ಬ್ಯಾಂಕ್ ಸಿಬ್ಬಂದಿಯೊಂದಿಗೆ ಶಾಮೀಲಾಗಿ ಸರ್ಕಾರದ ಹಣವನ್ನು ಅಧಿಕಾರಿಗಳು ಕುಟುಂಬಸ್ಥರು ಹಾಗೂ ಬೇರೆ ಬೇರೆ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ.ಇದನ್ನೂ ಓದಿ: ಮುಡಾ ಕೇಸ್‌, ಸಿಎಂಗೆ ಕ್ಲೀನ್‌ ಚಿಟ್‌ – 11,200 ಪುಟಗಳ ತನಿಖಾ ವರದಿ ಸಲ್ಲಿಕೆ

    ನಕಲಿ ದಾಖಲೆಗಳನ್ನು ಸೃಷ್ಟಿಸಿ, ಮುಜರಾಯಿ ಖಾತೆಯ ಹಣ ಲಪಟಾಯಿಸಿದ್ದು, ಕಚೇರಿಯ ಐವರು ಅಧಿಕಾರಿಗಳಿಂದ ಹಣ ದುರ್ಬಳಕೆಯಾಗಿದೆ ಎಂಬ ಆರೋಪ ಕೇಳಿಬಂದಿದೆ. ಜೊತೆಗೆ ದ್ವಿತೀಯ ದರ್ಜೆ ಸಹಾಯಕನ ಮೇಲೆ ಆರೋಪ ಹೊರಿಸಿ ಕೈ ತೊಳೆದುಕೊಳ್ಳಲು ಸಂಚು ನಡೆದಿಸಿದ್ದರು ಎನ್ನಲಾಗಿದೆ. ಎಸ್‌ಡಿಎ ಯಲ್ಲಪ್ಪನಿಂದ ತನ್ನ ಪತ್ನಿ, ಮಗ, ಮಗಳು, ಟೆಕ್ಸಟೈಲ್ ಹಾಗೂ ಕಿರಾಣಿ ಅಂಗಡಿಗಳಿಗೆ ಹಣ ವರ್ಗಾವಣೆಯಾಗಿದೆ.

    ಸದ್ಯ ಹಗರಣ ಕುರಿತು ಲಿಂಗಸುಗೂರು ಪೊಲೀಸ್ ಠಾಣೆಯಲ್ಲಿ ಲಿಂಗಸುಗೂರು ತಹಶೀಲ್ದಾರ್ ಶಂಶಾಲಂ ಅವರು ಎಸ್‌ಡಿಎ ಯಲ್ಲಪ್ಪ, ಕೆನರಾ ಬ್ಯಾಂಕ್ ಮ್ಯಾನೇಜರ್ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಅಕ್ರಮದಲ್ಲಿ ಭಾಗಿಯಾಗಿರುವ ಎಲ್ಲಾ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ.ಇದನ್ನೂ ಓದಿ: ಮದರಸಾದಲ್ಲಿ ಪ್ರಾಂಶುಪಾಲೆಯ ತಮ್ಮನಿಂದ ಬಾಲಕಿಯರ ಮೇಲೆ ಹಲ್ಲೆ

  • ಭಕ್ತರು ದೇವರ ಹುಂಡಿಗೆ ಹಾಕಿದ್ದ ಹಣ ಪತ್ನಿ ಖಾತೆಗೆ – ಮುಜರಾಯಿ ಇಲಾಖೆಯ 60 ಲಕ್ಷಕ್ಕೆ ಕನ್ನ

    ಭಕ್ತರು ದೇವರ ಹುಂಡಿಗೆ ಹಾಕಿದ್ದ ಹಣ ಪತ್ನಿ ಖಾತೆಗೆ – ಮುಜರಾಯಿ ಇಲಾಖೆಯ 60 ಲಕ್ಷಕ್ಕೆ ಕನ್ನ

    – ಸರ್ಕಾರಿ ದುಡ್ಡಲ್ಲಿ ಮೋಜು ಮಸ್ತಿ ಮಾಡಿ ಜೈಲುಪಾಲು

    ಚಿಕ್ಕಬಳ್ಳಾಪುರ: ಭಕ್ತರು ದೇವರ ಹುಂಡಿಗೆ ಹಾಕಿದ್ದ ಮುಜರಾಯಿ ಇಲಾಖೆಯ (Muzrai Department) ಖಾತೆಯಲ್ಲಿದ್ದ ಲಕ್ಷಾಂತರ ರೂಪಾಯಿ ಹಣವನ್ನು ಸರ್ಕಾರಿ ಅಧಿಕಾರಿಯೋರ್ವ ಹೆಂಡತಿ ಖಾತೆಗೆ ಹಾಕಿಕೊಂಡು ಮೋಜು ಮಸ್ತಿ ಮಾಡಿ, ಮನೆ ಸಹ ಕಟ್ಟಿಸಿಕೊಂಡ ಶಾಕಿಂಗ್ ವಿಚಾರ ಬೆಳಕಿಗೆ ಬಂದಿದೆ.


    ಹೌದು, ಮುಜರಾಯಿ ಖಾತೆಯಲ್ಲಿನ ಹಣವನ್ನು ಹೆಂಡತಿ ಸೇರಿ ಇತರರ ಖಾತೆಗಳಿಗೆ ಹಾಕಿಕೊಂಡು ಮೋಜು, ಮಸ್ತಿ ಮಾಡಿದ್ದಾನೆ. ಹೇಮಂತ್ ಕುಮಾರ್, ಬೆಂಗಳೂರು ಗ್ರಾಮಾಂತರ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ರೆವೆನ್ಯೂ ಇನ್ಸ್ಪೆಕ್ಟರ್ ಆಗಿದ್ದ. ಸಾಸಲು ಹೋಬಳಿಗೆ ಬರುವ ಮೊದಲು ಮುಜರಾಯಿ ಇಲಾಖೆಯಲ್ಲಿ ಹೇಮಂತ್ ಕುಮಾರ್ ಕೇಸ್ ವರ್ಕರ್ ಆಗಿ ಕೆಲಸ ಮಾಡುತ್ತಿದ್ದ. ಹೀಗಾಗಿ ಇಲಾಖೆಯ ಬಗ್ಗೆ ಹೆಚ್ಚು ಮಾಹಿತಿ ತಿಳಿದುಕೊಂಡಿದ್ದ. 2023ರಿಂದ ಇಲ್ಲಿಯವರೆಗೆ ಇಬ್ಬರು ತಹಶೀಲ್ದಾರ್, ಓರ್ವ ಕೇಸ್ ವರ್ಕರ್ ಸಹಿ ಮತ್ತು ಸೀಲ್ ನಕಲಿ ಮಾಡಿ ಸುಮಾರು 60 ಲಕ್ಷ ರೂ. ಹಣವನ್ನ ಸ್ವಂತ ಖಾತೆಗಳಿಗೆ ವರ್ಗಾಯಿಸಿಕೊಂಡಿದ್ದಾನೆ.ಇದನ್ನೂ ಓದಿ: ದಿನ ಭವಿಷ್ಯ 20-02-2025

    ರೆವೆನ್ಯೂ ಇನ್ಸ್ಪೆಕ್ಟರ್ ಆಗಿ ವರ್ಗಾವಣೆಯಾಗಿದ್ದರೂ ಮುಜರಾಯಿ ಇಲಾಖೆಯ ಚೆಕ್ ಬುಕ್‌ಗಳನ್ನು ಇಲಾಖೆಗೆ ನೀಡದೇ ತನ್ನ ಬಳಿಯೇ ಉಳಿಸಿಕೊಂಡಿದ್ದ. ಅಧಿಕಾರಿಗಳು ಕೇಳಿದಾಗ ಅವರಿಗೆ ಕೊಟ್ಟಿದ್ದೇನೆ, ಇವರಿಗೆ ಕೊಟ್ಟಿದ್ದೇನೆ ಎಂದು ಮರೆಮಾಚಿ, ಹಣ ಡ್ರಾ ಮಾಡಿಕೊಂಡಿದ್ದಾನೆ. ಹಂತ-ಹಂತವಾಗಿ ಎರಡು ಮೂರು ವರ್ಷದಿಂದ ಬರೋಬ್ಬರಿ 60 ಲಕ್ಷಕ್ಕೂ ಹೆಚ್ಚು ಹಣವನ್ನು ಹೆಂಡತಿ ಸೇರಿ ಇತರರ ಖಾತೆಗಳಿಗೆ ವರ್ಗಾವಣೆ ಮಾಡಿಕೊಂಡಿದ್ದಾನೆ.

    ತಹಶೀಲ್ದಾರ್ ಇಲಾಖೆ ಖಾತೆಯಲ್ಲಿನ ಹಣ ತಾಳೆ ಮಾಡುವಾಗ ಅನುಮಾನ ಬಂದು ಪರಿಶೀಲನೆ ನಡೆಸಿ, ದೊಡ್ಡಬಳ್ಳಾಪುರ ನಗರ ಪೊಲೀಸರಿಗೆ ದೂರು ನೀಡಿದ್ದು ಆರೋಪಿಯನ್ನು ಬಂಧಿಸಲಾಗಿದೆ. ತನಿಖೆ ವೇಳೆ ಆ ಹಣದಲ್ಲಿ ಮನೆಯನ್ನ ಕಟ್ಟಿಕೊಂಡಿದ್ದೇನೆ ಎಂದು ಬಾಯ್ಬಿಟ್ಟಿದ್ದಾನೆ.

    ಸದ್ಯ ಪ್ರಕರಣ ಬೆಳಕಿಗೆ ಬಂದ ನಂತರ ಗಂಡ ಲೂಟಿ ಮಾಡಿದ್ದ 60 ಲಕ್ಷ ರೂ. ಹಣವನ್ನ ಹೆಂಡತಿ ಮರಳಿ ಮುಜರಾಯಿ ಇಲಾಖೆಯ ಖಾತೆಗಳಿಗೆ ವಾಪಸ್ ಹಾಕಿದ್ದಾಳೆ. ಇನ್ನೂ ಆರ್‌ಐ ಹೇಮಂತ್ ಕುಮಾರ್‌ನನ್ನ ಸೇವೆಯಿಂದ ಅಮಾನತು ಮಾಡಿ, ಇಲಾಖಾ ವಿಚಾರಣೆಗೆ ಒಳಪಡಿಸಲಾಗಿದೆ. ದೊಡ್ಡಬಳ್ಳಾಪುರ ನಗರ ಪೊಲೀಸರು ಹೇಮಂತ್ ಕುಮಾರ್‌ನನ್ನ ಪರಪ್ಪನ ಆಗ್ರಹಾರ ಜೈಲಿಗಟ್ಟಿದ್ದಾರೆ.ಇದನ್ನೂ ಓದಿ: ರಾಜ್ಯದ ಹವಾಮಾನ ವರದಿ 20-02-2025

     

  • ಅರ್ಚಕರ ದಿನಭತ್ಯೆಗೂ ಲಂಚ ಕೊಡ್ಬೇಕು – ದೇವಸ್ಥಾನಗಳ ಜೀರ್ಣೋದ್ಧಾರದ ದುಡ್ಡು ಗುಳುಂ!

    ಅರ್ಚಕರ ದಿನಭತ್ಯೆಗೂ ಲಂಚ ಕೊಡ್ಬೇಕು – ದೇವಸ್ಥಾನಗಳ ಜೀರ್ಣೋದ್ಧಾರದ ದುಡ್ಡು ಗುಳುಂ!

    ಬೆಂಗಳೂರು: ನಗರದಲ್ಲಿ ಅನೇಕ ಪುರಾತನ ದೇವಾಲಯಗಳಿವೆ. ಅವುಗಳಲ್ಲಿ ಕೆಲವು ದೇವಾಯಲಗಳನ್ನ ರಾಜ್ಯ ಸರ್ಕಾರವೇ ನಿರ್ವಹಣೆ ಮಾಡುತ್ತಿದೆ. ಆದರೆ ಲಕ್ಷಾಂತರ ರೂಪಾಯಿಗಳ ಅನುದಾನ ಪಡೆದು ಅಭಿವೃದ್ಧಿ ಹೆಸರಲ್ಲಿ ಸರ್ಕಾರಕ್ಕೆ ದತ್ತಿ ಇಲಾಖೆ ಮೋಸ ಮಾಡುತ್ತಿದೆ.

    ಧಾರ್ಮಿಕ ದತ್ತಿ ಇಲಾಖೆಯಡಿ ಕೆಲಸ ಮಾಡೋ ಪೂಜಾರಿ, ತಮ್ಮ ದಿನಭತ್ಯೆ ಪಡೆಯೋಕೂ ಇಲ್ಲಿ ಲಂಚ ಕೊಡಬೇಕು. ಎಷ್ಟು ರಾಜಾರೋಷವಾಗಿ ಅಂದ್ರೆ ನನ್ನ ಮೇಲೆ ಬಂಡವಾಳ ಹಾಕಿ ಅಂತಾ ಬೆಂಗಳೂರಿನ ಉತ್ತರ ವಿಭಾಗದ ಶಿರಸ್ತೇದಾರ್ ಕೇಳುತ್ತಾರೆ. ಜೊತೆಗೆ ಲೇಡಿ ಕ್ಲರ್ಕ್ ಕೂಡಾ 50 ಸಾವಿರ ರೂ. ಕೊಟ್ಟು ಬಿಡಿ, ಎಲ್ಲವನ್ನು ಮಾಡಿಕೊಡ್ತಿವಿ ಅಂತಾ ಬಾಯಿಬಿಟ್ಟು ಕೇಳುತ್ತಾರೆ.

    ಬಳೇಪೇಟೆಯ ಕಾಶಿ ವಿಶ್ವನಾಥ ದೇವಸ್ಥಾನದ ಪೂಜಾರಿ ಮನೆ ಅಭಿವೃದ್ಧಿಗೆ ಇಲಾಖೆಯಿಂದ 3 ಲಕ್ಷ ರೂ. ಮಂಜೂರಾಗಿ ವರ್ಷ ಕಳೆದಿದೆ. ಇದೇ ಬಳೇಪೇಟೆಯಲ್ಲಿರುವ ವೆಂಕಟೇಶ್ವರ ದೇವಾಲಯದ ಪಾಕಶಾಲೆಗೆ ಬರೋಬ್ಬರಿ 7 ಲಕ್ಷ ರೂಪಾಯಿ ಮಂಜೂರಾಗಿದೆ. ಆದ್ರೇ ಪಾಕಶಾಲೆ ಮಾತ್ರ ಇವತ್ತೋ ನಾಳೆನೋ ಬೀಳೋ ಸ್ಥಿತಿಯಲ್ಲಿದೆ.

    ಇನ್ನು ಮಲ್ಲೇಶ್ವರಂನಲ್ಲಿರುವ ಇತಿಹಾಸ ಪ್ರಸಿದ್ಧ ವೇಣುಗೋಪಾಲ ದೇವಾಲಯದಲ್ಲಿ ಭದ್ರತಾ ಸಿಬ್ಬಂದಿಯ ಕೊಠಡಿಗೆ 3 ಲಕ್ಷ ರೂ. ಮಂಜೂರಾಗಿದೆ. ಆದರೆ ಈ ಹಣ ಅಧಿಕಾರಿಗಳ ಹೊಟ್ಟೆ ಸೇರಿದೆ. ಅಷ್ಟೇ ಅಲ್ಲ ಲಕ್ಷ್ಮೀನರಸಿಂಹ ದೇವಾಲಯದ ಚಪ್ಪಲಿ ಸ್ಟ್ಯಾಂಡ್‍ಗೆ 2 ಲಕ್ಷದ 77 ಸಾವಿರ ರೂಪಾಯಿ ಅನುದಾನ ಬಿಡುಗಡೆಯಾಗಿದೆ. ಆದರೆ ಅಲ್ಲಿ ಚಪ್ಪಲಿ ಸ್ಟ್ಯಾಂಡ್ ಸಹ ಇಲ್ಲ.

     

    ಸರ್ಕಾರ ದೇವಸ್ಥಾನಗಳ ಅಭಿವೃದ್ಧಿಗಾಗಿ ಲಕ್ಷಾಂತರ ರೂಪಾಯಿ ಅನುದಾನ ಬಿಡುಗಡೆ ಮಾಡುತ್ತಿದೆ. ಆದರೆ ಅನುದಾನ ಮಾತ್ರ ಸಮರ್ಪಕವಾಗಿ ಬಳಕೆ ಆಗುತ್ತಿಲ್ಲ. ಹೀಗಾಗಿ ತಪ್ಪಿಸ್ಥತರ ವಿರುದ್ಧ ಸರಿಯಾದ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.