Tag: mysore university

  • ಎಸ್‌ಎಂ ಕೃಷ್ಣಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

    ಎಸ್‌ಎಂ ಕೃಷ್ಣಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪ್ರದಾನ

    ಮೈಸೂರು: ಮಾಜಿ ಮುಖ್ಯಮಂತ್ರಿ ಎಸ್‌ಎಂ ಕೃಷ್ಣ(SM Krishna) ಅವರಿಗೆ ಮೈಸೂರು ವಿಶ್ವವಿದ್ಯಾನಿಲಯ (Mysore University) ತನ್ನ 104ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರದಾನ ಮಾಡಿದೆ.

    ಸುದರ್ಶನ ನರಸಿಂಹ ಕ್ಷೇತ್ರದ ಪೀಠಾಧಿಪತಿ ಭಾಷ್ಯಂ ಸ್ವಾಮೀಜಿ ಹಾಗೂ ಬೆಂಗಳೂರಿನ ಗೋಕುಲ ಶಿಕ್ಷಣ ಪ್ರತಿಷ್ಠಾನದ ಉಪಾಧ್ಯಕ್ಷ ಎಂ.ಆರ್.ಸೀತಾರಾಮ್​ ಅವರಿಗೆ ಮೈಸೂರು ವಿವಿಯಿಂದ ಗೌರವ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಯಿತು. ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಗೌರವ ಡಾಕ್ಟರೇಟ್‌ ಪದವಿಯನ್ನು ಪ್ರದಾನ ಮಾಡಿದರು.  ಇದನ್ನೂ ಓದಿ: ಬೆಂಗಳೂರಿನಲ್ಲಿ ಕುಡಿಯುವ ನೀರಿನ ಸಮಸ್ಯೆ – ಪ್ರತೀ ಕ್ಷೇತ್ರಕ್ಕೆ ತಲಾ 10 ಕೋಟಿ ಬಿಡುಗಡೆ: ಡಿಕೆಶಿ

    ಘಟಿಕೋತ್ಸವದಲ್ಲಿ 32,249 ವಿದ್ಯಾರ್ಥಿಗಳಿಗೆ ವಿವಿಧ ಪದವಿಗಳನ್ನು ಪ್ರದಾನ ಮಾಡಲಾಯಿತು. ವಿವಿಧ ವಿಷಯಗಳಲ್ಲಿ 100ಕ್ಕೂ ಹೆಚ್ಚು ಮಂದಿ ವಿದ್ಯಾರ್ಥಿಗಳಿಗೆ ಪಿಹೆಚ್​ಡಿ ಪದವಿ ಪ್ರದಾನ ಮಾಡಲಾಯಿತು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ ಸ್ಫೋಟ ಸಿಲ್ಲಿ ಪ್ರಕರಣ: ಶರಣ ಪ್ರಕಾಶ್‌ ಪಾಟೀಲ್

    ಘಟಿಕೋತ್ಸವದಲ್ಲಿ 436 ಪದಕಗಳು, 266 ಬಹುಮಾನಗಳನ್ನು 252 ಮಂದಿ ವಿದ್ಯಾರ್ಥಿಗಳಿಗೆ ಪ್ರದಾನ ಮಾಡಲಾಗುವುದು. ಇದರ ಜೊತೆಗೆ 6,144 ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ಪದವಿ ಪ್ರದಾನ ಮಾಡಲಾಗುವುದು ಹಾಗೂ 26,009 ಮಂದಿ ವಿದ್ಯಾರ್ಥಿಗಳಿಗೆ ಸ್ನಾತಕ ಪದವಿ ಪ್ರದಾನ ಮಾಡಲಾಗುವುದು ಎಂದು ಕುಲಪತಿ ಪ್ರೊ.ಎನ್.ಕೆ. ಲೋಕನಾಥ್ ಮಾಹಿತಿ ನೀಡಿದ್ದರು.

  • ಡಾ.ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್ : ಫೋಟೋ ವೈರಲ್

    ಡಾ.ರಾಜ್ ಕುಮಾರ್ ಮತ್ತು ಡಾ.ಪುನೀತ್ ರಾಜ್ ಕುಮಾರ್ : ಫೋಟೋ ವೈರಲ್

    ಇಂದು ಮೈಸೂರಿನ ವಿಶ್ವವಿದ್ಯಾಲಯದ 102ನೇ ವಾರ್ಷಿಕೋತ್ಸವ ಘಟಿಕೋತ್ಸವದಲ್ಲಿ ನಟ ನಟ ಪುನೀತ್ ರಾಜ್ ಕುಮಾರ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದೇ ವಿಶ್ವ ವಿದ್ಯಾಲಯವು 1976ರಲ್ಲಿ ಡಾ.ರಾಜ್ ಕುಮಾರ್ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಿತ್ತು. ಈ ಸಂದರ್ಭದಲ್ಲಿ ಡಾ.ರಾಜ್ ಕುಮಾರ್ ಗೌರವ ಡಾಕ್ಟರೇಟ್ ಪಡೆದ ಫೋಟೋ ಮತ್ತು ಇಂದು ಪುನೀತ್ ಅವರ ಪರವಾಗಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೌರವ ಡಾಕ್ಟರೇಟ್ ಪಡೆದ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.

    ಅಂದಿನ ಫೋಟೋದಲ್ಲಿ ಡಾ.ರಾಜ್ ಕುಮಾರ್ ಜತೆ ಪಾರ್ವತಮ್ಮ ರಾಜ್ ಕುಮಾರ್ ಇದ್ದಾರೆ. ಇವತ್ತು  ರಾಜ್ಯಪಾಲರಿಂದ ಈ ಗೌರವನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇಂದು ಸ್ವೀಕರಿಸಿದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆದ ಗೌರವ ಡಾಕ್ಟರೇಟ್ ಪ್ರಧಾನ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬ ವರ್ಗದವರು ಹಾಜರಿದ್ದರು. ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

    1976 ರಲ್ಲಿ ಡಾ. ರಾಜಕುಮಾರ್ ಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ಗೌರವ ನೀಡಲಾಗಿತ್ತು. 2022 ರಲ್ಲಿ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಪುನೀತ್ ಅವರ ಸಮಾಜಮುಖಿ ಕೆಲಸಗಳು ಮತ್ತು ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆಯನ್ನು ಆಧರಿಸಿ, ಮೈಸೂರು ವಿವಿ ಈ ಗೌರವನ್ನು ನೀಡಿದೆ. ಈ ಸಂದರ್ಭದಲ್ಲಿ ಪುನೀತ್ ಪತ್ನಿ ಅಶ್ವಿನಿ ಭಾವುಕರಾಗಿಯೇ ಪುನೀತ್ ಪರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಿದರು.

  • ಪಾರ್ವತಮ್ಮ ರಾಜ್ ಕುಮಾರ್-ಪುನೀತ್ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ 2 ಚಿನ್ನದ ಪದಕ

    ಪಾರ್ವತಮ್ಮ ರಾಜ್ ಕುಮಾರ್-ಪುನೀತ್ ಹೆಸರಿನಲ್ಲಿ ಮೈಸೂರು ವಿವಿಯಲ್ಲಿ 2 ಚಿನ್ನದ ಪದಕ

    ಪುನೀತ್ ರಾಜ್ ಕುಮಾರ್ ಹೆಸರಿನಲ್ಲಿ ಪ್ರತಿ ವರ್ಷವೂ ಮೈಸೂರು ವಿಶ್ವವಿದ್ಯಾಲಯದಲ್ಲಿ ಓದಿದ ಪ್ರತಿಭಾವಂತರಿಗೆ 2 ಚಿನ್ನದ ಪದಕವನ್ನು ನೀಡುವುದಾಗಿ ರಾಘವೇಂದ್ರ ರಾಜ್ ಕುಮಾರ್ ಘೋಷಿಸಿದ್ದಾರೆ. ಇಂದು ಮೈಸೂರಿನ ವಿವಿಯಲ್ಲಿ ನಡೆಯುತ್ತಿರುವ 102ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್ ‘ಪುನೀತ್ ಮತ್ತು ಪಾರ್ವತಮ್ಮ ರಾಜ್ ಕುಮಾರ್ ಹೆಸರಿನಲ್ಲಿ ಎರಡು ಚಿನ್ನದ ಪದಕಗಳನ್ನು ನೀಡುವುದಾಗಿ ತಿಳಿಸಿದರು. ಪಾರ್ವತಮ್ಮ ರಾಜಕುಮಾರ್ ಅವರ ಹೆಸರಿನಲ್ಲಿ, ಬ್ಯೂಸಿನೇಸ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಬಂಗಾರದ ಪದಕ ಮತ್ತು ಪುನೀತ್ ರಾಜಕುಮಾರ್  ಹೆಸರಿನಲ್ಲಿ ಲಲಿತಾ ಕಲೆಗಳ ವಿಷಯದಲ್ಲಿ ಬಂಗಾರದ ಪದಕ ನೀಡುವುದಾಗಿ ಅಶ್ವಿನಿ ಪುನೀತ್ ರಾಜಕುಮಾರ್ ಅವರಿಂದ ಘೋಷಣೆ ಆಯಿತು.  ಮುಂದಿನ ವರ್ಷದಿಂದ ಪದಕ ವಿತರಣೆ ಮಾಡಲಾಗುವುದು ಎಂದಿದೆ ಡಾ.ರಾಜ್ ಕುಟುಂಬ.

    ಘಟಿಕೋತ್ಸವದಲ್ಲಿ ಮಾತನಾಡಿದ ರಾಘವೇಂದ್ರ ರಾಜ್ ಕುಮಾರ್, ಜೀವನ ಒಂದು ಚಕ್ರ ಇದ್ದಂತೆ. ನಮ್ಮ ತಂದೆಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಕೊಟ್ಟಿದ್ರು. ಇಂದು ನನ್ನ ತಮ್ಮನಿಗೂ ಇದೇ ವಿವಿಯಲ್ಲಿ ಗೌರವ ಡಾಕ್ಟರೇಟ್ ಸಿಕ್ಕಿದೆ. ನನಗೆ ಇದು ವೇದಿಕೆ ರೀತಿ ಕಾಣುಸ್ತಿಲ್ಲ. ಸರಸ್ವತಿಯ ಮಂದಿರ ತರ ಕಾಣ್ತಿದೆ. ನಿಮ್ಮ ಕೆಲಸವನ್ನ ಶ್ರದ್ದೆಯಿಂದ ಮಾಡಿದ್ರೆ ಪ್ರಶಸ್ತಿಗಳು ಹುಡುಕಿ ಬರುತ್ತವೇ ಅಂತ ಪುನೀತ್ ಯಾವಾಗಲೂ ಹೇಳ್ತಿದ್ದ. ಹೂವಿನಿಂದ ನಾರು ಸ್ವರ್ಗ ಸೇರಿದಂತೆ ನನ್ನ ತಮ್ಮನಿಂದ ನಾನು ಸ್ವರ್ಗ ನೋಡುತ್ತಿದ್ದೇನೆ. ಈ ಗೌರವ ಡಾಕ್ಟರೇಟ್‌ ನಮ್ಮ ಕುಟುಂಬದ ಜವಾಬ್ದಾರಿಯನ್ನ ಹೆಚ್ಚಿಸಿದೆ. ಅಶ್ವಿನಿ ಮಾರ್ಗದರ್ಶನದಲ್ಲಿ ನಾವೆಲ್ಲರೂ ಸಾಮಾಜಿಕ ಸೇವೆ ಮುಂದುವರೆಸುತ್ತೇವೆ ಎಂದು ನುಡಿದರು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

    ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೊದಲಿಗೆ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಇದನ್ನೂ ಓದಿ : ಪುನೀತ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ನಂತರ ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಬಾಲ್ಯ, ಅವರು ಅಭಿನಯಿಸಿದ ಹಲವು ಚಿತ್ರಗಳ ತುಣುಕು ಪ್ರದರ್ಶಿಸಲಾಯಿತು. ಪುನೀತ್ ರಾಜ್‍ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ವೇಳೆ ಅವರು ಕೆಲಕಾಲ ಭಾವುಕಗೊಂಡರು. ಈ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿವಿ ನೀಡಿತ್ತು ಎಂಬುದು ಸ್ಮರಣೀಯ. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆಯುತ್ತಿರುವ ಗೌರವ ಡಾಕ್ಟರೇಟ್ ಪ್ರಧಾನ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬ ವರ್ಗದವರು ಹಾಜರಿದ್ದರು. ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

  • ಪುನೀತ್ ಗೆ ಮರಣೋತ್ತರ ಡಾಕ್ಟರೇಟ್ : ಕಾರ್ಯಕ್ರಮದ ಸಂಪೂರ್ಣ ವಿವರ

    ಪುನೀತ್ ಗೆ ಮರಣೋತ್ತರ ಡಾಕ್ಟರೇಟ್ : ಕಾರ್ಯಕ್ರಮದ ಸಂಪೂರ್ಣ ವಿವರ

    ರ್ನಾಟಕ ರತ್ನ ಪುನೀತ್ ರಾಜ್‌ ಕುಮಾರ್( ಮರಣೋತ್ತರ) ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಹಾಗೂ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ  ಮೈಸೂರು ವಿಶ್ವವಿದ್ಯಾನಿಲಯದ 102ನೇ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಯಿತು. ಇದನ್ನೂ ಓದಿ : ಕನ್ನಡದ ಹುಡುಗನ ಚಿತ್ರಕ್ಕೆ ಹನ್ಸಿಕಾ ಮೊಟ್ವಾನಿ ಹೀರೋಯಿನ್

    ಮಂಗಳವಾರ ಕ್ರಾಫರ್ಡ್ ಹಾಲ್ ನಲ್ಲಿ ನಡೆದ ಘಟಿಕೋತ್ಸವ ಸಮಾರಂಭ ಹಾಗೂ ಪದವಿ ಪ್ರದಾನ ಕಾರ್ಯಕ್ರಮದಲ್ಲಿ ಮೂವರು ಸಾಧಕರಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗೌರವ ಡಾಕ್ಟರೇಟ್ ಪ್ರದಾನ ಮಾಡಿದರು. ಮೊದಲಿಗೆ ಹಿರಿಯ ವಿಜ್ಞಾನಿ ಹಾಗೂ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ ವಿಶ್ರಾಂತ ಮಹಾ ನಿರ್ದೇಶಕ ಡಾ.ವಾಸುದೇವ್ ಕಲ್ಕುಂಟೆ ಅತ್ರೆ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು.

    ನಂತರ ನಟ ಪುನೀತ್ ರಾಜ್‍ಕುಮಾರ್ ಅವರ ಹೆಸರು ಹೇಳುತ್ತಿದ್ದಂತೆ ಇಡೀ ಸಭಾಂಗಣದಲ್ಲಿ ಚಪ್ಪಾಳೆ ಸದ್ದು ಕೇಳಿ ಬಂತು. ಎಲ್ ಇಡಿ ಸ್ಕ್ರೀನ್ ನಲ್ಲಿ ಪುನೀತ್ ಬಾಲ್ಯ, ಅವರು ಅಭಿನಯಿಸಿದ ಹಲವು ಚಿತ್ರಗಳ ತುಣುಕು ಪ್ರದರ್ಶಿಸಲಾಯಿತು. ಪುನೀತ್ ರಾಜ್‍ ಕುಮಾರ್ ಪರವಾಗಿ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಗೌರವ ಡಾಕ್ಟರೇಟ್ ಸ್ವೀಕರಿಸಿದರು. ಈ ವೇಳೆ ಅವರು ಕೆಲಕಾಲ ಭಾವುಕಗೊಂಡರು. ಈ ಹಿಂದೆ ಪದ್ಮಭೂಷಣ ಡಾ.ರಾಜ್ ಕುಮಾರ್ ಅವರಿಗೆ ಗೌರವ ಡಾಕ್ಟರೇಟ್ ಪದವಿಯನ್ನು 46 ವರ್ಷಗಳ ಹಿಂದೆ ಮೈಸೂರು ವಿವಿ ನೀಡಿತ್ತು ಎಂಬುದು ಸ್ಮರಣೀಯ. ಇದನ್ನೂ ಓದಿ : ಪುನೀತ್ ಅವರಿಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ನಂತರ ಜಾನಪದ ಮಹಾನ್ ಕಲಾವಿದ ಜಾನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಅವರಿಗೂ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ಸಮಾರಂಭದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ರಾಷ್ಟ್ರೀಯ ಮೌಲ್ಯಾಂಕ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕ ಡಾ.ಎಸ್.ಸಿ.ಶರ್ಮ, ಮೈಸೂರು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಜಿ.ಹೇಮಂತ್ ಕುಮಾರ್, ಕುಲಸಚಿವ ಪ್ರೊ.ಆರ್.ಶಿವಪ್ಪ, ಎ.ಪಿ.ಜ್ಞಾನಪ್ರಕಾಶ್ ಸೇರಿದಂತೆ ಇತರರು ಹಾಜರಿದ್ದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    ರಾಘವೇಂದ್ರ ರಾಜ್ ಕುಮಾರ್ ಭಾವುಕ

    ಸಭೆಯ ಕೆಳಗೆ ಕುಳಿತಿದ್ದ ನಟ ರಾಘವೇಂದ್ರ ರಾಜಕುಮಾರ್ ಅಶ್ವಿನಿ ಪುನೀತ್ ರಾಜ್ ಕುಮಾರ್ ಗೆ ಪ್ರಶಸ್ತಿ ನೀಡುವಾಗ ಭಾವುಕರಾದರು. ಇದೇ ವೇಳೆ 15 ಚಿನ್ನದ ಪದಕ ಪಡೆದ ಜಿ.ಎಂ.ಭಾವನ ಅವರನ್ನು ಕರೆದು ರಾಘವೇಂದ್ರ ರಾಜಕುಮಾರ್ ಬೆನ್ನು ತಟ್ಟಿ ಅಭಿನಂದಿಸಿದರು.

  • ಪುನೀತ್‌ಗೆ  ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ಟ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿ 102ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲರಿಂದ ಈ ಗೌರವನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇಂದು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುನೀತ್ ಪತ್ನಿ ಅಶ್ವಿನಿ ಭಾವುಕರಾಗಿಯೇ ಪುನೀತ್ ಪರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಿದರು.

    ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆಯುತ್ತಿರುವ ಗೌರವ ಡಾಕ್ಟರೇಟ್ ಪ್ರಧಾನ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬ ವರ್ಗದವರು ಹಾಜರಿದ್ದರು. ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    1976 ರಲ್ಲಿ ಡಾ. ರಾಜಕುಮಾರ್ ಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ಗೌರವ ನೀಡಲಾಗಿತ್ತು. 2022 ರಲ್ಲಿ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಪುನೀತ್ ಅವರ ಸಮಾಜಮುಖಿ ಕೆಲಸಗಳು ಮತ್ತು ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆಯನ್ನು ಆಧರಿಸಿ, ಮೈಸೂರು ವಿವಿ ಈ ಗೌರವನ್ನು ನೀಡಿದೆ.

  • ಮೈಸೂರು ವಿವಿಯಿಂದ ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್

    ಮೈಸೂರು ವಿವಿಯಿಂದ ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್

    ಮೈಸೂರು: ಪವರ್ ಸ್ಟಾರ್ ಪುನೀತ್ ರಾಜ್‌ಕುಮಾರ್ ಅಗಲಿ 4 ತಿಂಗಳು ಕಳೆದರೂ ಅವರ ನೆನಪು ಕನ್ನಡಿಗರ ಮನದಲ್ಲಿ ಅಮರವಾಗಿ ಉಳಿದಿದೆ. ಇದೀಗ ದಿವಂಗತ ನಟ ಪುನೀತ್ ರಾಜ್‌ಕುಮಾರ್‌ಗೆ ಮರಣೋತ್ತರ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.

    ಮೈಸೂರು ವಿಶ್ವವಿದ್ಯಾಲಯದ ವತಿಯಿಂದ ಅಪ್ಪುಗೆ ಮರಣೋತ್ತರ ಡಾಕ್ಟರೇಟ್ ನೀಡುವುದಾಗಿ ಮೈಸೂರು ವಿಶ್ವವಿದ್ಯಾಲಯ ಕುಲಪತಿ ಪ್ರೊ. ಹೇಮಂತ್ ಕುಮಾರ್ ಘೋಷಿಸಿದ್ದಾರೆ. ಮಾರ್ಚ್ 22ರಂದು ನಡೆಯಲಿರುವ ಮೈಸೂರು ವಿವಿ ಯ 102ನೇ ಘಟಿಕೋತ್ಸವದಲ್ಲಿ ಕನ್ನಡದ ಯುವರತ್ನನಿಗೆ ಗೌರವ ಡಾಕ್ಟರೇಟ್  ನೀಡುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ಐಪಿಎಲ್ 10 ತಂಡಗಳ ಪೈಕಿ 2 ತಂಡಕ್ಕೆ ಕನ್ನಡಿಗರ ನಾಯಕತ್ವ – ಮೂವರು ನೂತನ ನಾಯಕರ ಎಂಟ್ರಿ

    ಪುನೀತ್ ರಾಜ್‌ಕುಮಾರ್‌ರೊಂದಿಗೆ ಒಟ್ಟು ಮೂವರು ಮಹನೀಯರಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಲಾಗಿದೆ. ಹಿರಿಯ ವಿಜ್ಞಾನಿ ಡಾ. ವಿಎಸ್ ಅತ್ರೆ ಹಾಗೂ ಜನಪದ ಗಾಯಕ ಮಳವಳ್ಳಿ ಮಹಾದೇವಸ್ವಾಮಿಗೆ ಗೌರವ ಡಾಕ್ಟರೇಟ್ ನೀಡುವುದಾಗಿ ಘೋಷಿಸಲಾಗಿದೆ. ಇದನ್ನೂ ಓದಿ: ಅಪ್ಪು ಬೇಡವೆಂದ ಸಾಂಗ್ ಮತ್ತೆ ಪ್ರೇಕ್ಷಕರ ಮುಂದೆ – ಯಾವುದು ಈ ಸಾಂಗ್?

    ಈ ಹಿಂದೆ ಪುನೀತ್ ಅಭಿಮಾನಿಗಳು ಅಪ್ಪುಗೆ ಪದ್ಮಶ್ರೀ ಪ್ರಶಸ್ತಿಯನ್ನು ನೀಡಬೇಕಾಗಿ ಸರ್ಕಾರಕ್ಕೆ ಬೇಡಿಕೆ ಇಟ್ಟಿದ್ದರು. ಯುವರತ್ನ ತನ್ನ ಸಾವಿನಲ್ಲೂ ನೇತ್ರದಾನ ಮಾಡಿ ಹಲವರಿಗೆ ದೃಷ್ಟಿ ನೀಡಿದ್ದರು. ಇದೀಗ ಅವರ ಸಾವಿರಾರು ಅಭಿಮಾನಿಗಳು ಅಪ್ಪು ನಡೆದಿರುವ ಹಾದಿಯಲ್ಲಿ ನಡೆದು ನೇತ್ರದಾನಕ್ಕೆ ಮುಂದಾಗಿದ್ದಾರೆ.

  • ನಮ್ಮ ವಿದ್ಯಾರ್ಥಿಗಳನ್ನು ತುರ್ತಾಗಿ ವಾಪಸ್ ಕಳಿಸಿ- ಮೈಸೂರು ವಿವಿಗೆ ಚೀನಾ ಮನವಿ

    ನಮ್ಮ ವಿದ್ಯಾರ್ಥಿಗಳನ್ನು ತುರ್ತಾಗಿ ವಾಪಸ್ ಕಳಿಸಿ- ಮೈಸೂರು ವಿವಿಗೆ ಚೀನಾ ಮನವಿ

    ಮೈಸೂರು: ನಮ್ಮ ವಿದ್ಯಾರ್ಥಿಗಳನ್ನು ತುರ್ತಾಗಿ ಸ್ವದೇಶಕ್ಕೆ ವಾಪಸ್ ಕಳಿಸಿ ಎಂದು ಮೈಸೂರು ವಿಶ್ವವಿದ್ಯಾಲಯಕ್ಕೆ ಚೀನಾ ಮನವಿ ಮಾಡಿಕೊಂಡಿದೆ.

    ಚೀನಾದಿಂದ ಉನ್ನತ ಶಿಕ್ಷಣಕ್ಕಾಗಿ ಮೈಸೂರಿಗೆ ಬಂದಿರುವ ವಿದ್ಯಾರ್ಥಿಗಳನ್ನು ನಮ್ಮ ದೇಶಕ್ಕೆ ವಾಪಸ್ ಕಳುಹಿಸಿ ಎಂದು ಚೀನಾ ಸರ್ಕಾರ ಮೈಸೂರು ವಿವಿಗೆ ಮನವಿ ಮಾಡಿದೆ. ಭಾರತ ಮತ್ತು ಚೀನಾ ಗಡಿಭಾಗದಲ್ಲಿ ಯುದ್ಧದ ವಾತಾವರಣ ಸೃಷ್ಟಿಯಾಗಿರುವುದು ಮತ್ತು ಕೊರೊನಾ ವೈರಸ್ ಪರಿಣಾಮದಿಂದ ಚೀನಾ ಈ ರೀತಿ ಮನವಿ ಮಾಡಿದೆ ಎನ್ನಲಾಗಿದೆ.

    ಚೀನಾ ಸರ್ಕಾರದ ತುರ್ತು ಮನವಿಗೆ ಸ್ಪಂದಿಸಿರುವ ಮೈಸೂರು ವಿವಿ, 10 ದಿನಗಳ ಮುಂಚಿತವಾಗಿಯೇ ಚೀನಾ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಮುಂದಾಗಿದೆ. ಮೈಸೂರು ವಿವಿಯಲ್ಲಿ ಮಾಹಿತಿ ತಂತ್ರಜ್ಞಾನ ವಿಷಯದಲ್ಲಿ 80ಕ್ಕೂ ಹೆಚ್ಚು ಚೀನಾ ವಿದ್ಯಾರ್ಥಿಗಳು ಸ್ನಾತಕೋತ್ತರ ಪದವಿ ವ್ಯಾಸಂಗ ಮಾಡುತ್ತಿದ್ದಾರೆ. ಹೀಗಾಗಿ ಚೀನಾದ ಸ್ನಾತಕೋತ್ತರ ವಿದ್ಯಾರ್ಥಿಗಳ ಪರೀಕ್ಷೆಯನ್ನು 10 ದಿನಗಳ ಕಾಲ ಮುಂಚಿತವಾಗಿ ನಡೆಸಲು ವಿವಿ ನಿರ್ಧಾರ ಮಾಡಿದೆ.

    ಈ ಬಗ್ಗೆ ಮಾಹಿತಿ ನೀಡಿರುವ ಮೈಸೂರು ವಿವಿ ಕುಲಪತಿ ಪ್ರೊ.ಹೇಮಂತ್ ಕುಮಾರ್, ಚೀನಾದ ರಾಯಭಾರಿ ಕಚೇರಿ ಸೂಚನೆ ಮೇರೆಗೆ ಪರೀಕ್ಷೆಗಳನ್ನು 10 ದಿನಗಳ ಮೊದಲೇ ನಡೆಸಲು ತೀರ್ಮಾನ ಮಾಡಿದ್ದೇವೆ. ಜೂನ್ 15ರಂದು ನಿಗಧಿಯಾಗಿದ್ದ ಪರೀಕ್ಷೆಯನ್ನು, ಜೂನ್ 1ಕ್ಕೆ ಆರಂಭ ಮಾಡಿ ಜೂ. 6ಕ್ಕೆ ಮುಕ್ತಾಯಗೊಳಿಸುತ್ತೇವೆ. ಪರೀಕ್ಷೆ ನಂತರ ವಿಶೇಷ ವಿಮಾನದಲ್ಲಿ ವಿದ್ಯಾರ್ಥಿಗಳು ಸ್ವದೇಶಕ್ಕೆ ತೆರಳಲಿದ್ದಾರೆ. ಚೀನಾ ಸರ್ಕಾರವೇ ವಿಮಾನ ವ್ಯವ್ಯಸ್ಥೆ ಮಾಡಲಿದೆ ಎಂದರು.

  • ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಪ್ರಕರಣದ ವರದಿ ಕೇಳಿದ ರಾಜ್ಯಪಾಲರು

    ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಪ್ರಕರಣದ ವರದಿ ಕೇಳಿದ ರಾಜ್ಯಪಾಲರು

    ಮೈಸೂರು: ಫ್ರೀ ಕಾಶ್ಮಿರ ಪ್ಲೇ ಕಾರ್ಡ್ ಪ್ರದರ್ಶನ ಪ್ರಕರಣಕ್ಕೆ ರಾಜ್ಯಪಾಲರ ಭವನ ಕೂಡ ಎಂಟ್ರಿ ಕೊಟ್ಟಿದೆ. ಪ್ರಕರಣದ ಬಗ್ಗೆ ಸವಿಸ್ತಾರ ನೀಡುವಂತೆ ರಾಜ್ಯಪಾಲರು ವಿಶ್ವವಿದ್ಯಾಲಯದ ರಿಜಿಸ್ಟರ್ ಅವರಿಗೆ ಆದೇಶಿಸಿದ್ದಾರೆ. ಪ್ರಕರಣಕ್ಕೆ ಕಾರಣ ಏನು? ಇದಕ್ಕೆ ಹೊಣೆಗಾರರು ಯಾರು ಎಂಬುದನ್ನು ವಿವರವಾಗಿ ವರದಿ ನೀಡುವಂತೆ ಆದೇಶಿಸಿದ್ದಾರೆ.

    ಮೈಸೂರು ವಿಶ್ವವಿದ್ಯಾಲಯದ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ವೇಳೆ ಫ್ರೀ ಕಾಶ್ಮಿರ ಪ್ಲೇ ಕಾರ್ಡ್ ಪ್ರದರ್ಶನ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮೈಸೂರು ವಿಶ್ವವಿದ್ಯಾಲಯದ ರಿಜಿಸ್ಟರ್ ಆರ್.ಶಿವಪ್ಪ ಅವರು ಪ್ರತಿಭಟನಾ ಆಯೋಜಕರಿಗೆ ನೋಟಿಸ್ ಜಾರಿ ಮಾಡಿದ್ದಾರೆ. ಅಷ್ಟೇ ಅಲ್ಲದೆ ಮೈಸೂರು ವಿಶ್ವವಿದ್ಯಾಲಯದಿಂದ ಜಯಲಕ್ಷೀಪುರಂ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರತ್ಯೇಕ ದೂರು ದಾಖಲಾಗಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ಇಂಪ್ಯಾಕ್ಟ್ – ಫ್ರೀ ಕಾಶ್ಮೀರ ಪ್ಲೇಕಾರ್ಡ್ ಪ್ರದರ್ಶಿಸಿದವರ ಮೇಲೆ ದೂರು ದಾಖಲು

    ಮಾನಸ ಗಂಗೋತ್ರಿಯ ಭದ್ರತಾ ಸಿಬ್ಬಂದಿಗೂ ನೋಟಿಸ್ ಜಾರಿಯಾಗಿದೆ. ಅನುಮತಿ ಇಲ್ಲದ ವ್ಯಕ್ತಿಗಳಿಗೆ ಪ್ರತಿಭಟನೆ ನಡೆಸಲು ಹೇಗೆ ಅವಕಾಶ ಕೊಟ್ಟಿದ್ದೀರಿ? ಇದು ಭದ್ರತಾ ಲೋಪ. ಇದಕ್ಕೆ ಕಾರಣ ನೀಡಿ ಎಂದು ನೋಟಿಸ್ ಜಾರಿಯಾಗಿದೆ.

  • ಉತ್ತರ ಪತ್ರಿಕೆ ಮೌಲ್ಯಮೌಪನದಲ್ಲೂ ಮೈಸೂರು ವಿವಿ ಸೋಮಾರಿತನ!

    ಉತ್ತರ ಪತ್ರಿಕೆ ಮೌಲ್ಯಮೌಪನದಲ್ಲೂ ಮೈಸೂರು ವಿವಿ ಸೋಮಾರಿತನ!

    – ವಿದ್ಯಾರ್ಥಿಗಳು ಬರೆದ ಉತ್ತರವನ್ನು ನೋಡದ ಮೌಲ್ಯಮಾಪನಕಾರರು!

    ಮೈಸೂರು: ವಿದ್ಯಾರ್ಥಿಗಳಿಂದ ಅರ್ಜಿ ಸ್ವೀಕರಿಸಿ ಉತ್ತರ ಪತ್ರಿಕೆಯನ್ನು ಸರಿಯಾಗಿ ಮರು ಮೌಲ್ಯಮಾಪನ ಮಾಡದ ಪ್ರಕರಣವೊಂದು ಮೈಸೂರು ವಿಶ್ವವಿದ್ಯಾಲಯದಲ್ಲಿ ಬೆಳಕಿಗೆ ಬಂದಿದ್ದು, ವಿದ್ಯಾರ್ಥಿಗಳ ಆಕ್ರೋಶಕ್ಕೆ ಕಾರಣವಾಗಿದೆ.

    ಅಂಕದಲ್ಲಿ ವ್ಯತ್ಯಾಸ ಕಂಡು ಬಂದಿದ್ದರಿಂದ 1,760 ರೂ. ಪಾವತಿಸಿ, ಮರು ಮೌಲ್ಯಮಾಪನ ಹಾಗೂ ಉತ್ತರ ಪ್ರತಿ ಜೆರಾಕ್ಸ್ ಗಾಗಿ ಅರ್ಜಿ ಸಲ್ಲಿಸಿದ್ದೆ. ಅರ್ಜಿ ಸ್ವೀಕರಿಸಿ, ಮರು ಮೌಲ್ಯಮಾಪನ ಮಾಡಿದ ಬಳಿಕ ಕಳುಹಿಸಲಾದ ಪ್ರತಿಯಲ್ಲಿ ಕೆಲವು ಉತ್ತರಗಳನ್ನು ಮೌಲ್ಯಮಾಪಕರು ನೋಡಿಯೇ ಇಲ್ಲ. ಜೊತೆಗೆ ಅಂಕ ಎಣಿಕೆಯಲ್ಲಿಯೂ ತಪ್ಪಾಗಿದೆ ಎಂದು ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿ ದೂರಿದ್ದಾರೆ.

    ಮೈಸೂರು ವಿವಿ ಪದವಿ ವಿದ್ಯಾರ್ಥಿಗಳು ಮರು ಮೌಲ್ಯಮಾಪನಕ್ಕಾಗಿ ಅರ್ಜಿ ಸಲ್ಲಿಸಲು ಒಂದು ವಿಷಯಕ್ಕೆ 1,100 ರೂ. ಹಾಗೂ ಉತ್ತರ ಪತ್ರಿಕೆಯ ಜೆರಾಕ್ಸ್ ಪ್ರತಿ ಪಡೆಯಲು 660 ರೂ. ಪಾವತಿಸಬೇಕು. ಇಷ್ಟು ದೊಡ್ಡ ಪ್ರಮಾಣದ ಮೊತ್ತವನ್ನು ವಿದ್ಯಾರ್ಥಿಗಳು ಪಾವತಿಸಿದರೂ ಮೌಲ್ಯಮಾಪಕರು ಕೆಲವು ಉತ್ತರಗಳನ್ನೇ ಮೌಲ್ಯ ಮಾಪನ ಮಾಡಿಲ್ಲ. ಮೌಲ್ಯಮಾಪಕರ ಬೇಜಾವಾಬ್ದಾರಿತನ ವಿದ್ಯಾರ್ಥಿಗಳ ಪೋಷಕರ ಜೇಬಿಗೆ ಕತ್ತರಿ ಬೀಳುತ್ತಿದೆ. ಇದರಿಂದಾಗಿ ವಿಶ್ವವಿದ್ಯಾಲಯವು ಮರು ಮೌಲ್ಯಮಾಪನದ ಹೆಸರಿನಲ್ಲಿ ಹಣ ದೋಚುತ್ತಿದೆಯೇ ಎನ್ನುವುದು ಭಾರೀ ಚರ್ಚೆಯಾಗುತ್ತಿದೆ.

    ಮೌಲ್ಯಮಾಪಕರ ಎಡವಟ್ಟಿನಿಂದಾಗಿ ವಿದ್ಯಾರ್ಥಿಗಳು ಪರೀಕ್ಷಾ ಶುಲ್ಕಕಿಂತ ಹೆಚ್ಚಿನ ಹಣವನ್ನು ಮರು ಮೌಲ್ಯಮಾಪನಕ್ಕೆ ಪಾವತಿಸುವಂತಾಗುತ್ತಿದೆ. ಹಣ ಪಾವತಿ ಮಾಡಿದರೂ ಸರಿಯಾಗಿ ಮೌಲ್ಯಮಾಪನ ಮಾಡುತ್ತಿಲ್ಲ. ಹೀಗೆ ಮಾಡುವುದರಿಂದ ವಿಶ್ವವಿದ್ಯಾಲಯದ ಮೌಲ್ಯಮಾಪಕರ ಮೇಲೆ ವಿಶ್ವಾಸ ಕಡಿಮೆಯಾಗುತ್ತದೆ. ದಯವಿಟ್ಟು ನಮ್ಮ ಜೀವನ ಜೊತೆಗೆ ಆಟವಾಡಬೇಡಿ ಎಂದು ವಿದ್ಯಾರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv