ಮಂಡ್ಯ: ಜಿಲ್ಲೆಯ ಜನರ ಜೀವನಾಡಿ ಮೈಶುಗರ್ ಸಕ್ಕರೆ ಕಾರ್ಖಾನೆ(Mysugar) ಪುನಾರಂಭ ಕುರಿತು ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಮತ್ತು ಅಬಕಾರಿ ಸಚಿವ ಕೆ.ಗೋಪಾಲಯ್ಯ(Gopalaiah) ಹೇಳಿದರು.
ಈಗಾಗಲೇ ಕಾರ್ಖಾನೆ ಪ್ರಗತಿ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿ ಮಾಹಿತಿ ಪಡೆಯಲಾಗಿದೆ. ಮೊದಲ ಬಾಯ್ಲರ್ ಈಗಾಗಲೇ ಆರಂಭಗೊಂಡಿದ್ದು, ಎರಡನೇ ಬಾಯ್ಲರ್‌ಗೆ ಇದೇ 19ರಂದು ಚಾಲನೆ ನೀಡಲಾಗುವುದು. ಇದೇ 30ರಿಂದ ರೈತರಿಂದ ಸಂಪೂರ್ಣ ಕಬ್ಬು ಖರೀದಿಸಿ ಅರೆಯುವ ಕೆಲಸ ಮಾಡಲಾಗುವುದು ಎಂದರು.
ಕಬ್ಬು ಖರೀದಿ ತಡವಾದ ಹಿನ್ನೆಲೆಯಲ್ಲಿ ಬೇರೆ ಕಾರ್ಖಾನೆಯವರು ಒಂದು ಈಗಾಗಲೇ ಲಕ್ಷ ಟನ್ ಕಬ್ಬು ಖರೀದಿ ಮಾಡಿದ್ದರೆ, ನಮ್ಮ ಕಾರ್ಖಾನೆಯಿಂದ ಶೇ. ನೂರರಷ್ಟು ಕಬ್ಬು ಖರೀದಿ ಮಾಡಲಾಗುವುದು. ಮಂಡ್ಯ(Mandya) ಜಿಲ್ಲೆಯ ಎಲ್ಲ ತಾಲೂಕಿನ ರೈತರ ಕಬ್ಬು ಖರೀದಿ ಮಾಡಲಾಗುವುದು ಎಂದು ಹೇಳಿದರು.
ಕಾರ್ಖಾನೆ ಆರಂಭ ಕುರಿತು ಮಾತುಕೊಟ್ಟಂತೆ ನಡೆದುಕೊಂಡ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಸೆ.30ರ ನಂತರ ಕಾರ್ಖಾನೆಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಲಾಗುವುದು. ಶಾಶ್ವತವಾಗಿ ಈ ಕಾರ್ಖಾನೆ ನಡೆಯಬೇಕೆನ್ನುವುದು ಸರ್ಕಾರದ ಆಶಯವಾಗಿದೆ ಎಂದರು. ಇದನ್ನೂ ಓದಿ: ಶಕ್ತಿ, ಸ್ಫೂರ್ತಿ ಸದಾ ನಿಮ್ಮೊಂದಿಗಿರಲಿ: ಮೋದಿ ಹುಟ್ಟುಹಬ್ಬಕ್ಕೆ ರಮ್ಯಾ ವಿಶ್
ಈ ಸಂದರ್ಭದಲ್ಲಿ ಕ್ರೀಡಾ ಸಚಿವ ಡಾ.ಕೆ.ಸಿ.ನಾರಾಯಣ ಗೌಡ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಜಯರಾಮ್, ಜಿಲ್ಲಾಧಿಕಾರಿ ಎಸ್.ಅಶ್ವತಿ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ:ಸಾಗರ ರಕ್ಷಣೆ ನಮ್ಮೆಲ್ಲರ ಹೊಣೆ: ಗೆಹ್ಲೋಟ್
Live Tv
[brid partner=56869869 player=32851 video=960834 autoplay=true]
ಮಂಡ್ಯ: ಕನ್ನಂಬಾಡಿ ಕಟ್ಟೆ ಹೇಗೆ ಹಳೆ ಮೈಸೂರು ಭಾಗದ ಜೀವನಾಡಿ, ಹಾಗೆ ಮಂಡ್ಯದ ಜನರಿಗೆ ಮೈ ಶುಗರ್ ಸಕ್ಕರೆ ಕಾರ್ಖಾನೆ ಜೀವನಾಡಿ. ಕಳೆದ ನಾಲ್ಕು ವರ್ಷಗಳಿಂದ ಬಂದ್ ಆಗಿದ್ದ ಈ ಕಾರ್ಖಾನೆ ಇದೀಗ ಮತ್ತೆ ಪುನರಾರಂಭಗೊಂಡಿದೆ. ಈ ಮೂಲಕ ಸಕ್ಕರೆ ನಾಡಿನ ಜನರಿಗೆ ರಾಜ್ಯ ಸರ್ಕಾರ ಗೌರಿ-ಗಣೇಶ ಹಬ್ಬದ ಗಿಫ್ಟ್ ನೀಡಿದೆ.
ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಅಂದ್ರೆ ಅದು ಮಂಡ್ಯದ ಮೈಶುಗರ್ ಕಾರ್ಖಾನೆ. ಒಂದು ಕಾಲದಲ್ಲಿ ಗತವೈಭವಕ್ಕೆ ಕಾರಣವಾಗಿದ್ದ ಈ ಕಾರ್ಖಾನೆ ಕೊಡುವ ದರವೇ ಇಡೀ ರಾಜ್ಯದ ಕಬ್ಬಿನ ದರವನ್ನು ನಿರ್ಧಾರ ಮಾಡ್ತಿತ್ತು. ಅಂತಹ ಇತಿಹಾಸ ಪ್ರಸಿದ್ಧ ಕಾರ್ಖಾನೆ ಅವ್ಯಾಹತ ಭ್ರಷ್ಟಾಚಾರ, ರಾಜಕೀಯ ಹಪಾಹಪಿಗೆ ಸಿಲುಕಿ ನಶಿಸುವ ಹಂತ ತಲುಪಿತ್ತು. ಕಳೆದ ನಾಲ್ಕು ವರ್ಷಗಳಿಂದ ಈ ಕಾರ್ಖಾನೆ ಸಂಪೂರ್ಣ ಸ್ತಬ್ಧವಾಗಿತ್ತು. ಕಾರ್ಖಾನೆ ಸ್ಥಗಿತದಿಂದ ಇಡೀ ಮಂಡ್ಯ ಜಿಲ್ಲೆಯ ಆರ್ಥಿಕ ಸ್ಥಿತಿ ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ರು. ಈ ಕಾರ್ಖಾನೆ ಆರಂಭಕ್ಕೆ ನಿರಂತರವಾಗಿ, ಸಾಕಷ್ಟು ಹೋರಾಟಗಳು ನಡೆದಿದ್ವು. ಕಾಲಕಳೆದಂತೆ ಮೈಶುಗರ್ ವಿಚಾರವಾಗಿ ನಡೆಯುತ್ತಿದ್ದ ಹೋರಾಟಗಳು ಕೂಡ ಕವಲೊಡೆದು ಗೊಂದಲದ ಗೂಡಾಗಿತ್ತು. ಕೆಲವರು ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಆರಂಭಕ್ಕೆ ಪಟ್ಟು ಹಿಡಿದ್ರೆ. ಇನ್ನು ಕೆಲವರು ಖಾಸಗಿಯಾದರೂ ಸರಿ, ಓ ಅಂಡ್ ಎಂ ಆದ್ರೂ ಸರಿ. ಹೇಗಾದ್ರೂ ಆಗ್ಲೀ ಮೊದಲು ಕಾರ್ಖಾನೆ ಆರಂಭವಾಗ್ಲೀ ಅಂತಾ ಒತ್ತಾಯಿಸಿದ್ರು. ಇದು ಸರ್ಕಾರಕ್ಕೂ ತಲೆನೋವಾಗಿ ಪರಿಣಮಿಸಿತ್ತು. ಈ ಹಿಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಪುನರಾರಂಭಿಸುವಂತೆ ಹೇಳಲಾಗಿತ್ತು. ಅದಕ್ಕೆ ಪೂರಕ ಎಂಬಂತೆ ಪುನಾರಂಭವಾಗಿದೆ. ಇದನ್ನೂ ಓದಿ: 4 ವರ್ಷದ ಬಳಿಕ ಆರಂಭವಾಯಿತು ಮೈಶುಗರ್ ಕಾರ್ಖಾನೆ
ಸಚಿವ ಸಂಪುಟ ಸಭೆ ನಿರ್ಣಯದಂತೆ ಹಾಗೂ ಸರ್ಕಾರದ ಭರವಸೆಯಂತೆ ಮೈಶುಗರ್ ಕಾರ್ಖಾನೆ ಪುನರಾರಂಭಕ್ಕೆ ಇದೀಗ ಮುನ್ನುಡಿ ಬರೆಯಲಾಗಿದೆ. ಕಳೆದ ತಿಂಗಳು ಬಾಯ್ಲರ್‌ಗೆ ಬೆಂಕಿ ಹಾಕುವ ಮೂಲಕ ಕಾರ್ಖಾನೆ ಪ್ರಾರಂಭಕ್ಕೆ ಆರಂಭಿಕ ಹೆಜ್ಜೆ ಹಾಕಲಾಗಿತ್ತು. ಇದೀಗ ಕಾರ್ಖಾನೆಯಲ್ಲಿ ಕಬ್ಬಿನ ಕ್ರಷರ್ ಮಿಷನ್‍ಗೆ ಪೂಜೆ ಸಲ್ಲಿಸಿ ಪ್ರಾರಂಭಗೊಳಿಸಲಾಗಿದೆ. ಇನ್ನೂ ಸೆ.10ಕ್ಕೆ ಸಿಎಂ ಬಸವರಾಜ ಬೊಮ್ಮಯಿ ಅವರು ಆಗಮಿಸಲಿದ್ದು, ಮೈಶುಗರ್ ಆರಂಭದ ಬಗ್ಗೆ ಬಿಜೆಪಿ ಸರ್ಕಾರ ಕಾರ್ಯ ಕ್ಷಮತೆಯ ಬಗ್ಗೆ ನಡೆಯುವ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಮೈಶುಗರ್ ಪುನರಾಂಭದ ಮೂಲಕ ಈ ಬಾರಿಯ ಗೌರಿ-ಗಣೇಶ ಹಬ್ಬದ ಉಡುಗೊರೆಯನ್ನು ಮಂಡ್ಯದ ಜನರಿಗೆ ರಾಜ್ಯ ಸರ್ಕಾರ ನೀಡಲು ನಿರ್ಧರಿಸಿದೆ.
ಕಾರ್ಖಾನೆ ಪುನರಾರಂಭಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿತ್ತು. 20 ಕೋಟಿ ರೂ. ವೆಚ್ಚದಲ್ಲಿ ಕಾರ್ಖಾನೆಯ ಯಂತ್ರೋಪಕರಣಗಳನ್ನು ದುರಸ್ತಿ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 4 ಲಕ್ಷ ಟನ್ ಕಬ್ಬು ನುರಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಸರ್ಕಾರದ ಈ ನಿರ್ಧಾರ ರೈತರಲ್ಲಿ ಮಂದಹಾಸ ಮೂಡಿಸಿದ್ದು, ಎಷ್ಟೋತ್ತಿಗೆ ಫ್ಯಾಕ್ಟರಿ ಚಿಲುಮೆಯಲ್ಲಿ ಹೊಗೆ ನೋಡಬಹುದು ಎಂದು ಕಾತುರದಲ್ಲಿ ಇದ್ದಾರೆ. ಸರ್ಕಾರ ಈ ಕಾರ್ಖಾನೆಯ ಬಾಗಿಲು ಮತ್ತೆ ಮುಚ್ಚದಂತೆ ನೋಡಿಕೊಳ್ಳಬೇಕಾಗಿದೆ. ಮೈ ಶುಗರ್ ಕೇವಲ ರೈತರಿಗೆ ಮಾತ್ರವಲ್ಲ ಮಂಡ್ಯದ ಜನರ ಭಾವನಾತ್ಮಕ ಸಂಬಂಧವಾಗಿದೆ. ಹೀಗಾಗಿ ಕಾರ್ಖಾನೆಯ ಅಭಿವೃದ್ಧಿಗೆ ಸರ್ಕಾರ ಶ್ರಮಿಸಬೇಕೆಂದು ರೈತರು ಆಗ್ರಹಿಸುತ್ತಿದ್ದಾರೆ. ಅಲ್ಲದೇ ಸಂಸದೆ ಸುಮಲತಾ ಅಂಬರೀಶ್ ಅವರು ಕಾರ್ಖಾನೆಯ ಪುನಾರಂಭಕ್ಕೆ ಹರ್ಷ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಆಗಸ್ಟ್ ಜಿಎಸ್‌ಟಿ ಶೇ.28 ಏರಿಕೆ – 1.43 ಲಕ್ಷ ಕೋಟಿ ರೂ.ನಲ್ಲಿ ಯಾವ ರಾಜ್ಯದ ಪಾಲು ಎಷ್ಟು?
ಒಟ್ಟಾರೆ ನಾಲ್ಕು ವರ್ಷಗಳ ಕಾಲ ಮೈ ಶುಗರ್ ಕಾರ್ಖಾನೆಗೆ ಹಿಡಿದಿದ್ದ ಗ್ರಹಣ ಇದೀಗ ಅಂತ್ಯಗೊಂಡಿದೆ. ಸರ್ಕಾರ ಸಕ್ಕರೆ ನಾಡಿನ ಜನರಿಗೆ ಗೌರಿ-ಗಣೇಶ ಹಬ್ಬದ ಪ್ರಯುಕ್ತ ನೀಡಿರುವ ಈ ಬಂಪರ್ ಉಡುಗೊರೆಯಿಂದ ರೈತರ ಮುಖದಲ್ಲಿ ಮಂದಹಾಸ ಮೂಡಿದೆ.
Live Tv
[brid partner=56869869 player=32851 video=960834 autoplay=true]
ಮಂಡ್ಯ: ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಮಂಡ್ಯದ ಮೈಶುಗರ್ 4 ವರ್ಷದ ಬಳಿಕ ಆರಂಭವಾಗಿದೆ. ಸಚಿವ ಸಂಪುಟ ಸಭೆ ನಿರ್ಣಯದಂತೆ ಹಾಗೂ ಸರ್ಕಾರದ ಭರವಸೆಯಂತೆ ಮೈಶುಗರ್ ಕಾರ್ಖಾನೆ ಪುನರಾರಂಭಕ್ಕೆ ಇಂದು ಮುನ್ನುಡಿ ಬರೆಯಲಾಯಿತು.
ಸಂಪ್ರದಾಯದಂತೆ ಪೂಜೆ, ಗಣಪತಿ ಹೋಮದ ಮೂಲಕ ಕಾರ್ಖಾನೆ ಬಾಯ್ಲರ್‍ಗೆ ಅಗ್ನಿ ಸ್ಪರ್ಶ ಮಾಡಲಾಯಿತು. ಇದಕ್ಕಾಗಿ ಕಾರ್ಖಾನೆಯನ್ನು ಶುದ್ಧಿ ಮಾಡಿ, ಹೂವು, ತಳಿರು-ತೋರಣ ಕಟ್ಟಿ, ನವ ವಧುವಿನಂತೆ ಸಿಂಗಾರ ಮಾಡಲಾಗಿತ್ತು. ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣ ಗೌಡ, ಸಂಸದೆ ಸುಮಲತಾ, ಜಿಲ್ಲಾಡಳಿತದ ಅಧಿಕಾರಿಗಳು, ರೈತರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳು, ನೌಕರರು ಭಾಗಿಯಾಗಿದ್ದರು.
ಬಂದ್ ಆಗಿದ್ದು ಯಾಕೆ?
ರಾಜ್ಯದ ಏಕೈಕ ಸಕ್ಕರೆ ಕಾರ್ಖಾನೆ ಅಂದರೆ ಅದು ಮಂಡ್ಯದ ಮೈಶುಗರ್ ಕಾರ್ಖಾನೆ. ಒಂದು ಕಾಲದಲ್ಲಿ ಗತವೈಭವಕ್ಕೆ ಕಾರಣವಾಗಿದ್ದ ಈ ಕಾರ್ಖಾನೆ ಕೊಡುವ ದರವೇ ಇಡೀ ರಾಜ್ಯದ ಕಬ್ಬಿನ ದರವನ್ನು ನಿರ್ಧಾರ ಮಾಡುತ್ತಿತ್ತು. ಅಂತಹ ಇತಿಹಾಸ ಪ್ರಸಿದ್ಧ ಕಾರ್ಖಾನೆ ಅವ್ಯಾಹತ ಭ್ರಷ್ಟಾಚಾರ, ರಾಜಕೀಯ ಹಪಾಹಪಿಗೆ ನಶಿಸುವ ಹಂತ ತಲುಪಿತ್ತು. ಕಳೆದ ನಾಲ್ಕು ವರ್ಷಗಳಿಂದ ಈ ಕಾರ್ಖಾನೆ ಸಂಪೂರ್ಣ ಸ್ಥಬ್ಧವಾಗಿತ್ತು. ಇದನ್ನೂ ಓದಿ: ಪ್ರವೀಣ್ ಹತ್ಯೆಗೈದ ಆರೋಪಿಗಳ ಬಂಧನ- ಪೊಲೀಸ್ ಇಲಾಖೆಗೆ ಕುಟುಂಬಸ್ಥರು ಧನ್ಯವಾದ
ಕಾರ್ಖಾನೆ ಸ್ಥಗಿತದಿಂದ ಇಡೀ ಮಂಡ್ಯ ಜಿಲ್ಲೆಯ ಆರ್ಥಿಕ ಸ್ಥಿತಿ ಮತ್ತು ರೈತರು ಸಂಕಷ್ಟಕ್ಕೆ ಸಿಲುಕಿದ್ದರು. ಈ ಕಾರ್ಖಾನೆ ಆರಂಭಕ್ಕೆ ನಿರಂತರವಾಗಿ, ಸಾಕಷ್ಟು ಹೋರಾಟಗಳು ನಡೆದಿದ್ವು. ಕಾಲಕಳೆದಂತೆ ಮೈಶುಗರ್ ವಿಚಾರವಾಗಿ ನಡೆಯುತ್ತಿದ್ದ ಹೋರಾಟಗಳು ಕೂಡ ಕವಲೊಡೆದು ಗೊಂದಲದ ಗೂಡಾಗಿತ್ತು. ಕೆಲವರು ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಆರಂಭಕ್ಕೆ ಪಟ್ಟು ಹಿಡಿದಿದ್ದರೆ, ಮತ್ತೆ ಕೆಲವರು ಖಾಸಗಿಯಾದರೂ ಸರಿ, ಓ ಅಂಡ್ ಎಂ ಆದರೂ ಸರಿ. ಹೇಗಾದರೂ ಆಗಲಿ ಮೊದಲು ಕಾರ್ಖಾನೆ ಆರಂಭವಾಗಲಿ ಅಂತ ಒತ್ತಾಯಿಸಿದ್ದರು. ಇದು ಸರ್ಕಾರಕ್ಕೂ ತಲೆ ನೋವಾಗಿ ಪರಿಣಮಿಸಿತ್ತು. ಈ ಹಿಂದಿನ ಸಿಎಂ ಆಗಿದ್ದ ಯಡಿಯೂರಪ್ಪ ಸಚಿವ ಸಂಪುಟ ಸಭೆಯಲ್ಲಿ ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಪುನರಾರಂಭಿಸುವ ನಿರ್ಧಾರ ಮಾಡಿದ್ದರು.
ಕಾರ್ಖಾನೆ ಪುನರಾರಂಭಕ್ಕೆ ಸರ್ಕಾರ ಅನುದಾನ ಬಿಡುಗಡೆ ಮಾಡಿತ್ತು. 20 ಕೋಟಿ ವೆಚ್ಚದಲ್ಲಿ ಕಾರ್ಖಾನೆಯ ಯಂತ್ರೋಪಕರಣಗಳನ್ನು ದುರಸ್ತಿ ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ 4 ಲಕ್ಷ ಟನ್ ಕಬ್ಬು ನುರಿಸಲು ಪ್ಲಾನ್ ಮಾಡಿಕೊಳ್ಳಲಾಗಿದೆ. ಇನ್ನು 10 ದಿನದೊಳಗೆ ಪ್ರಾಯೋಗಿಕವಾಗಿ ಕಬ್ಬು ನುರಿಸುವ ಕಾರ್ಯ ಆರಂಭಿಸಲಾಗುತ್ತದೆ. ಸಣ್ಣಪುಟ್ಟ ತಾಂತ್ರಿಕ ದೋಷ ಸರಿಪಡಿಸಿಕೊಂಡು 15-20 ದಿನಗಳಲ್ಲಿ ಸಿಎಂ ಮೂಲಕವೇ ಅಧಿಕೃತವಾಗಿ ಕಾರ್ಖಾನೆ ಕಬ್ಬು ನುರಿಸುವ ಕಾರ್ಯಕ್ಕೆ ಚಾಲನೆ ಕೊಟ್ಟು ಪುನರಾರಂಭ ಮಾಡಲಾಗುತ್ತದೆ ಅಂತ ಸಚಿವರು ಭರವಸೆ ನೀಡಿದ್ದರು. ಇದನ್ನೂ ಓದಿ: ಉಜ್ಜಯಿನಿ ಮಹಾಕಾಳೇಶ್ವರ ಮಂದಿರದಲ್ಲಿ ಸಂಸದ ತೇಜಸ್ವಿ ಸೂರ್ಯ ಬೆಂಬಲಿಗರ ಗಲಾಟೆ
ಮೈಶುಗರ್ ಕಾರ್ಖಾನೆಯಲ್ಲಿ ನಡೆದ ಪೂಜೆಯಿಂದ ಜಿಲ್ಲೆಯ ಜನಪ್ರತಿನಿಧಿಗಳು, ರೈತರಲ್ಲಿ ಸಂತಸ ಮನೆ ಮಾಡಿದೆ. ಹೇಗಾದರೂ ಮಾಡಿ ಕಾರ್ಖಾನೆ ಆರಂಭಕ್ಕೆ ನಡೆಸಿದ್ದ ಹೋರಾಟಕ್ಕೆ ಜಯ ಸಿಕ್ಕಿದೆ. ಇದಕ್ಕೆ ಸಹಕಾರ ನೀಡಿದ ಎಲ್ಲರಿಗೂ ಋಣಿಯಾರುತ್ತೇನೆ. ನಾನು ಸಂಸದೆಯಾಗಿ 3 ವರ್ಷ ಆದರೂ, ಇಂದಿನ ಸಂತಸದ ದಿನ ಯಾವತ್ತೂ ಇಲ್ಲ ಅಂತಾ ಸಂಸದೆ ಸುಮಲತಾ ಅಂಬರೀಶ್ ಹೇಳಿದರೆ, ರೈತ ನಾಯಕಿ ಸುನಂದ ಜಯರಾಂ ಮಾತ್ರ ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ನಡೆಸುವಂತೆ ಸರ್ಕಾರವನ್ನು ಒತ್ತಾಯಿಸಿದ್ದೆವು. ಸರ್ಕಾರ ಕೊಟ್ಟ ಭರವಸೆಯಂತೆ ಕಾರ್ಖಾನೆ ಆರಂಭಕ್ಕೆ ಮುಂದಾಗಿದೆ. ಸರ್ಕಾರಿ ಸ್ವಾಮ್ಯದಲ್ಲೇ ಕಾರ್ಖಾನೆ ಪುನರಾರಂಭಿಸಿರುವುದು ಸ್ವಾಗತಾರ್ಹ. ಸರ್ಕಾರದ ನಿರ್ಧಾರಕ್ಕೆ ಅಭಿನಂದಿಸುತ್ತೇವೆ ಅಂತಾ ಸಂತಸ ವ್ಯಕ್ತಪಡಿಸಿದರು. ಮಂಡ್ಯ ಜನರ ಬಹು ದಿನಗಳ ಕನಸು ಈಡೇರುವ ಕಾಲಕ್ಕೆ ಕ್ಷಣಗಣನೆ ಆರಂಭವಾಗಿದೆ
Live Tv
[brid partner=56869869 player=32851 video=960834 autoplay=true]
ಮಂಡ್ಯ: ಕಳೆದ ನಾಲ್ಕು ವರ್ಷಗಳಿಂದ ಸ್ಥಗಿತವಾಗಿದ್ದ ಸರ್ಕಾರಿ ಸ್ವಾಮ್ಯದ ಏಕೈಕ ಸಕ್ಕರೆ ಕಾರ್ಖಾನೆ ಮಂಡ್ಯದ ಮೈ ಶುಗರ್ ಇಂದಿನಿಂದ ಕಾರ್ಯಾಚರಣೆ ನಡೆಸಲಿದೆ.
2017-18 ನೇ ಸಾಲಿನಲ್ಲಿ ಬಾಯ್ಲರ್, ಟರ್ಬೈನ್ ಸಮಸ್ಯೆ ಸೇರಿದಂತೆ ನೂರಾರು ಕೋಟಿ ರೂಪಾಯಿ ಸಾಲದ ಹೊಣೆಗಾರಿಕೆಯಿಂದ ನಷ್ಟಕ್ಕೆ ಸಿಲುಕಿ ಕಾರ್ಖಾನೆ ಬಂದ್ ಆಗಿತ್ತು. ಇದಾದ ಬಳಿಕ ಸರ್ಕಾರ ಖಾಸಗಿಯವರಿಗೆ ನೀಡಲು ಮುಂದಾಗಿತ್ತು. ಆದರೆ ರೈತರ ಪ್ರತಿಭಟನೆಯಿಂದ ಈ ನಿರ್ಧಾರ ಕೈ ಬಿಟ್ಟಿತು. ಇದನ್ನೂ ಓದಿ: ಮೋದಿ ಗೆದ್ದಿರೋದು 2024ರಲ್ಲಿ ಅಲ್ಲ, ಮೈತ್ರಿ ಮುರಿದ ಬಳಿಕ ಸಿಎಂ ನಿತೀಶ್ ವಾಗ್ದಾಳಿ
ಈಗ ಸರ್ಕಾರ ಮೈ ಶುಗರ್ ಕಾರ್ಖಾನೆಯನ್ನು ಪುನಶ್ಚೇತನಗೊಳಿಸಿ ಸರ್ಕಾರಿ ಸ್ವಾಮ್ಯದಲ್ಲೇ ನಡೆಸಲು ನಿರ್ಧಾರ ಮಾಡಿದೆ. ಈ ಇಂದು ಮೈ ಶುಗರ್ ಕಾರ್ಖಾನೆಯ ಬಾಯ್ಲರ್‌ಗೆ ಸಚಿವರಾದ ಗೋಪಾಲಯ್ಯ, ಶಂಕರ್ ಪಾಟೀಲ್ ಹಾಗೂ ನಾರಾಯಣಗೌಡ ಅಗ್ನಿ ಸ್ಪರ್ಶ ಮಾಡುವ ಮೂಲಕ ನಾಲ್ಕು ವರ್ಷಗಳ ಬಳಿಕ ಮೈ ಶುಗರ್ ಆರಂಭಕ್ಕೆ ಚಾಲನೆ ನೀಡಲಿದ್ದಾರೆ.
ಮೈ ಶುಗರ್ ಕಾರ್ಖಾನೆಯ ಪುನಾರಂಭದ ಸುದ್ದಿ ಕೇಳಿರುವ ಮಂಡ್ಯದ ರೈತರ ಮುಖದಲ್ಲಿ ಸಂತಸ ಮನೆ ಮಾಡಿದೆ.
Live Tv
[brid partner=56869869 player=32851 video=960834 autoplay=true]