Tag: Mysuru Bengaluru Expressway

  • ಎಕ್ಸ್‌ಪ್ರೆಸ್‌ವೇಯಲ್ಲಿ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ನುಗ್ಗಿದ ಟ್ರಕ್ – ತಪ್ಪಿದ ಭಾರೀ ಅನಾಹುತ

    ಎಕ್ಸ್‌ಪ್ರೆಸ್‌ವೇಯಲ್ಲಿ ನಿಯಂತ್ರಣ ತಪ್ಪಿ ಪಕ್ಕದ ರಸ್ತೆಗೆ ನುಗ್ಗಿದ ಟ್ರಕ್ – ತಪ್ಪಿದ ಭಾರೀ ಅನಾಹುತ

    ರಾಮನಗರ: ಟ್ರಕ್ (Truck) ಒಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ದಾಟಿ ಪಕ್ಕದ ರಸ್ತೆಗಳಲ್ಲಿ ಚಲಿಸಿದ ಘಟನೆ ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ (Mysuru Bengaluru Expressway) ನಡೆದಿದೆ.

    ಮೈಸೂರು ಕಡೆಯಿಂದ ಬೆಂಗಳೂರಿನತ್ತ ವೇಗವಾಗಿ ಲಾರಿ ಚಲಿಸುತ್ತಿತ್ತು. ಈ ವೇಳೆ ಚನ್ನಪಟ್ಟಣ ತಾಲೂಕಿನ ಸಂಕಲಗೆರೆ ಗೇಟ್ ಸಮೀಪ ಡಿವೈಡರ್ ದಾಟಿ ಪಕ್ಕದ ರಸ್ತೆಗೆ ನುಗ್ಗಿದೆ. ಈ ಸಮಯದಲ್ಲಿ ಹೆದ್ದಾರಿಯಲ್ಲಿ ಯಾವುದೇ ವಾಹನ ಸಂಚರಿಸದ ಪರಿಣಾಮ ಯಾವುದೇ ಅಪಘಾತ ಸಂಭವಿಸಿಲ್ಲ. ಇದರಿಂದ ಭೀಕರ ಅಪಘಾತವೊಂದು ತಪ್ಪಿದಂತಾಗಿದೆ. ಟ್ರಕ್ ನಿಯಂತ್ರಣ ಕಳೆದುಕೊಂಡು ರಸ್ತೆಗೆ ನುಗ್ಗಿದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ: ಧರ್ಮಕ್ಕಾಗಿಯೇ ನನ್ನ ಗಂಡನ ಕೊಲೆ ಆಗಿದೆ: ಯುವಬ್ರಿಗೇಡ್ ಕಾರ್ಯಕರ್ತನ ಪತ್ನಿ ಆರೋಪ

    ಮೈಸೂರು – ಬೆಂಗಳೂರು ಹೆದ್ದಾರಿಯಲ್ಲಿ 6 ತಿಂಗಳಲ್ಲಿ 512 ಅಪಘಾತಗಳಾಗಿವೆ. ಅದರಲ್ಲಿ ಇಲ್ಲಿಯ ವರೆಗೂ 123 ಜನ ಮೃತಪಟ್ಟಿದ್ದಾರೆ. 575 ಜನರಿಗೆ ತೀವ್ರ ಗಾಯಗಳಾಗಿವೆ. ಹೆದ್ದಾರಿಯಲ್ಲಿ ಅಪಘಾತಗಳನ್ನು ತಡೆಯಲು ಪೊಲೀಸರು ವಾಹನಗಳ ವೇಗಕ್ಕೆ ಮಿತಿ ನಿಗದಿ ಪಡಿಸಿದ್ದಾರೆ. ಅಲ್ಲದೇ ವಿವಿಧ ಕ್ರಮಗಳನ್ನು ಕೈಗೊಂಡು ಅಪಘಾತಗಳ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಇದನ್ನೂ ಓದಿ: 15 ದಿನದಲ್ಲಿ 30 ಜನರು ಸಸ್ಪೆಂಡ್: ಮುನಿರತ್ನ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Mysuru Bengaluru Expressway ಪ್ರಯಾಣಕ್ಕೆ ಸ್ಪೀಡ್ ಲಿಮಿಟ್ – 100 ಕಿಮೀ ವೇಗ ದಾಟಿದ್ರೆ ಫೈನ್!

    Mysuru Bengaluru Expressway ಪ್ರಯಾಣಕ್ಕೆ ಸ್ಪೀಡ್ ಲಿಮಿಟ್ – 100 ಕಿಮೀ ವೇಗ ದಾಟಿದ್ರೆ ಫೈನ್!

    ಬೆಂಗಳೂರು: ಎಕ್ಸ್‌ಪ್ರೆಸ್‌ವೇನಲ್ಲಿ ವೇಗದ ಮಿತಿಯನ್ನು ಅಳವಡಿಸಿ ಎಡಿಜಿಪಿ ಅಲೋಕ್ ಕುಮಾರ್ ಆದೇಶಿಸಿದ್ದಾರೆ. ಸ್ಪೀಡ್ ಲಿಮಿಟ್ 100 ಕಿಮೀಗೆ ಸೀಮಿತಗೊಳಿಸಿದ್ದು, ಈ ಬಗ್ಗೆ ಅವರು ಟ್ವಿಟ್ಟರ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

    ರಸ್ತೆ ವಾಹನ ಸಂಚಾರಕ್ಕೆ ಮುಕ್ತಗೊಂಡ ಬಳಿಕ ನೂರಾರು ಅಪಘಾತಗಳಿಂದ ಸಾಕಷ್ಟು ಸಾವುನೋವುಗಳು ಸಂಭವಿಸಿವೆ. ಈ ಬಗ್ಗೆ ರಸ್ತೆ ಪರಿಶೀಲನೆ ನಡೆಸಿದ್ದ ಎಡಿಜಿಪಿ, ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿ ಕೈಗೊಳ್ಳಬಹುದಾದ ಕ್ರಮಗಳನ್ನು ಪಟ್ಟಿ ಮಾಡಿದ್ದರು. ಇದೀಗ ರಸ್ತೆಯಲ್ಲಿ ವೇಗ ಮಿತಿಯ ಬೋರ್ಡ್‍ಗಳನ್ನು ಅಳವಡಿಸಲಾಗಿದೆ. ಅಲ್ಲದೇ ರಾಮನಗರ ಜಿಲ್ಲೆಯಲ್ಲಿ ಸ್ಪೀಡ್ ರೆಡಾರ್ ಗನ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ. ಇದನ್ನೂ ಓದಿ: ಯುಪಿಯಲ್ಲಿ ಮುಂದುವರೆದ ಬುಲ್ಡೋಜರ್ ಅಸ್ತ್ರ – ಲವ್ ಜಿಹಾದ್ ಆರೋಪಿ ಮನೆ ಉಡೀಸ್

    ವೇಗ ಮಿತಿ ದಾಟಿದರೆ 1000 ರೂ. ದಂಡ ಹಾಗೂ ಡಿಎಲ್ ರದ್ದುಪಡಿಸುವ ಕಠಿಣ ಕ್ರಮಕ್ಕೆ ಪೊಲೀಸರು ಮುಂದಾಗಿದ್ದಾರೆ. ನಿಯಮ ಉಲ್ಲಂಘನೆಯ ಫೋಟೊ ಹಾಗೂ ನೋಟಿಸ್ ನೀಡಿ ದಂಡ ವಸೂಲಿ ಮಾಡಲಾಗುತ್ತಿದೆ. ಈ ನಿರ್ಧಾರಕ್ಕೆ ಕೆಲವರು ಮೆಚ್ಚುಗೆ ವ್ಯಕ್ತಪಡಿಸಿದರೆ, ಇನ್ನೂ ಕೆಲವರು ಟೀಕಿಸಿ ಕಾಮೆಂಟ್ ಮಾಡಿದ್ದಾರೆ. ಇದನ್ನೂ ಓದಿ: Bengaluru Mysuru Expressway- ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧಿಸಿ: ಮರಿತಿಬ್ಬೇಗೌಡ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bengaluru Mysuru Expressway- ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧಿಸಿ: ಮರಿತಿಬ್ಬೇಗೌಡ

    Bengaluru Mysuru Expressway- ದ್ವಿಚಕ್ರ, ತ್ರಿಚಕ್ರ ವಾಹನ ನಿಷೇಧಿಸಿ: ಮರಿತಿಬ್ಬೇಗೌಡ

    ಬೆಂಗಳೂರು: ವಿಧಾನ ಪರಿಷತ್ ಕಲಾಪದಲ್ಲಿ ಬೆಂಗಳೂರು – ಮೈಸೂರು ದಶಪಥ ರಸ್ತೆ (Mysuru Bengaluru Expressway) ಅಪಘಾತ ವಿಚಾರ ಸದ್ದು ಮಾಡಿದೆ. ಹೆದ್ದಾರಿಯಲ್ಲಿ ಬೈಕ್ ಹಾಗೂ ತ್ರಿಚಕ್ರ ವಾಹನಗಳ ಓಡಾಟ ನಿಷೇಧ ಮಾಡುವಂತೆ ಪರಿಷತ್ ಕಲಾಪದ ಪ್ರಶ್ನೋತ್ತರ ಅವಧಿಯಲ್ಲಿ ಜೆಡಿಎಸ್ ನಾಯಕ ಮರಿತಿಬ್ಬೇಗೌಡ (Marithibbe Gowda) ಒತ್ತಾಯಿಸಿದ್ದಾರೆ.

    ದಶಪಥ ರಸ್ತೆ ಸಾವಿನ ಹೆದ್ದಾರಿಯಾಗಿದೆ. 6 ತಿಂಗಳಲ್ಲಿ 512 ಅಪಘಾತಗಳಾಗಿವೆ. ಅದರಲ್ಲಿ ಇಲ್ಲಿಯ ವರೆಗೂ 123 ಜನ ಮೃತಪಟ್ಟಿದ್ದಾರೆ. 575 ಜನರಿಗೆ ತೀವ್ರ ಗಾಯಗಳಾಗಿವೆ. ಅಪಘಾತದಲ್ಲಿ ಅನೇಕ ಪ್ರಾಣಿಗಳು ಸತ್ತಿವೆ. ಈ ಹೆದ್ದಾರಿಯಲ್ಲಿ ಫೆನ್ಸಿಂಗ್ ಸರಿಯಾಗಿ ಆಗಿಲ್ಲ. ಮೇಲ್ಸೇತುವೆ ಮಳೆ ಬಂದರೆ ಸೋರುತ್ತಿದೆ. ಹೆದ್ದಾರಿ ಕೆಲಸ ಇನ್ನು 30% ಬಾಕಿ ಇದೆ. ಮದ್ದೂರು ಬಳಿ ಈಗ ಟೋಲ್ ಸಂಗ್ರಹ ಮಾಡುತ್ತಿದ್ದಾರೆ. ಆದರೆ ಸುರಕ್ಷಿತ ಕ್ರಮಗಳು ಸರಿಯಾಗಿ ಇಲ್ಲ ಎಂದಿದ್ದಾರೆ. ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆ – ಪರಿಷತ್‍ನಲ್ಲಿ ಕಾಂಗ್ರೆಸ್, ಬಿಜೆಪಿ ಜಟಾಪಟಿ

    ಹೆದ್ದಾರಿಯಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಇಲ್ಲ. ಅಪಘಾತವಾದರೆ ಅಂಬುಲೆನ್ಸ್ ವ್ಯವಸ್ಥೆ ಇಲ್ಲ. ಈ ಬಗ್ಗೆ ರಾಜ್ಯ ಸರ್ಕಾರ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಈ ಕೂಡಲೇ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಇದರ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದಿದ್ದಾರೆ.

    ಇದಕ್ಕೆ ಉತ್ತರ ನೀಡಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೋಳಿ, ಇದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (National Highways Authority) ವ್ಯಾಪ್ತಿಗೆ ಬರುತ್ತದೆ. ಈಗಾಗಲೇ ಕೇಂದ್ರದ ಮಂತ್ರಿಗಳಿಗೆ ಮನವರಿಕೆ ಮಾಡಲಾಗಿದೆ. ಇಲಾಖೆ ಪ್ರಧಾನ ಕಾರ್ಯದರ್ಶಿಗಳು, ಪೊಲೀಸ್ ಅಧಿಕಾರಿಗಳು ಸಭೆ ಮಾಡಿ ಕ್ರಮಗಳನ್ನು ಸೂಚಿಸಿದ್ದಾರೆ. ಇದನ್ನು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಗಮನಕ್ಕೆ ತಂದು ಸರಿ ಮಾಡಿಸುವ ಕೆಲಸ ಮಾಡಲಾಗುತ್ತದೆ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಶಕ್ತಿ ಯೋಜನೆಯಿಂದ ಆಟೋದವರಿಗೆ ಸಮಸ್ಯೆಯಾದ್ರೆ ಸರ್ಕಾರ ಪರಿಹಾರ ನೀಡಲಿದೆ – ರಾಮಲಿಂಗಾರೆಡ್ಡಿ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ ; ಮೂವರು ಯುವಕರು ಸಾವು

    ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಭೀಕರ ಅಪಘಾತ ; ಮೂವರು ಯುವಕರು ಸಾವು

    ರಾಮನಗರ: ಮೈಸೂರು – ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ (Mysuru Bengaluru Expressway) ಭೀಕರ ಅಪಘಾತ (Accident) ಸಂಭವಿಸಿ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ ಘಟನೆ ನಡೆದಿದೆ.

    ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯಲ್ಲಿ ಅಪಘಾತಗಳಿಗೆ ಬ್ರೇಕ್ ಇಲ್ಲದಂತಾಗಿದೆ. ನಿತ್ಯ ಒಂದಲ್ಲ ಒಂದು ಅಪಘಾತಗಳು ಸಂಭವಿಸುತ್ತಲೇ ಇವೆ. ಸೋಮವಾರ ರಾಮನಗರ (Ramanagara) ತಾಲೂಕಿನ ಜಯಪುರ ಗೇಟ್ ಬಳಿ ರಸ್ತೆ ಅಪಘಾತ ಸಂಭವಿಸಿ ಮೂವರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಪ್ರತಾಪ್ ಸಿಂಹ ಮುಂದೆ ಯಾವ ಸ್ಟಾರ್ ಪ್ರಚಾರಕರೂ ಇಲ್ಲ: ಸಿದ್ದರಾಮಯ್ಯಗೆ ಪ್ರತಾಪ್ ಸಿಂಹ ಟಾಂಗ್

    ಬೆಂಗಳೂರಿನಿಂದ (Bengaluru) ಮೈಸೂರಿಗೆ (Mysuru) ಮೂವರು ಯುವಕರು ಒಂದು ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಟ್ಟು ನಿಂತಿದ್ದ ಕಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದಾರೆ. ಡಿಕ್ಕಿ ಹೊಡೆದು ಕೆಳಗೆ ಬಿದ್ದ ಯುವಕರ ಮೇಲೆ ವೇಗವಾಗಿ ಬಂದ ಮತ್ತೊಂದು ಕಾರು ಕೂಡಾ ಡಿಕ್ಕಿ ಹೊಡೆದಿದೆ. ಈ ವೇಳೆ ಗಂಭೀರವಾಗಿ ಗಾಯಗೊಂಡಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಘಟನೆಗೆ ಸಂಬಂಧಿಸಿ ರಾಮನಗರ ಸಂಚಾರಿ ಠಾಣಾ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ‌. ಇದನ್ನೂ ಓದಿ: ಸುಧಾಕರ್ ಒಂದು ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿದ್ದಾರೆ: ಜಮೀರ್

  • ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಟೋಲ್ ಶುಲ್ಕ ಹೆಚ್ಚಳ ನಿರ್ಧಾರ ಕೈಬಿಟ್ಟ ಹೆದ್ದಾರಿ ಪ್ರಾಧಿಕಾರ

    ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್‌ವೇ ಟೋಲ್ ಶುಲ್ಕ ಹೆಚ್ಚಳ ನಿರ್ಧಾರ ಕೈಬಿಟ್ಟ ಹೆದ್ದಾರಿ ಪ್ರಾಧಿಕಾರ

    ರಾಮನಗರ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯ (Mysuru Bengaluru Expressway) ಟೋಲ್ ದರ ಹೆಚ್ಚಳಕ್ಕೆ ತೀವ್ರ ವಿರೋಧ ಎದುರಾದ ಬಳಿಕ ಹೆದ್ದಾರಿ ಪ್ರಾಧಿಕಾರ (Highway Authority) ತನ್ನ ಆದೇಶವನ್ನು ವಾಪಸ್ ಪಡೆದಿದೆ. ಟೋಲ್ ಪ್ರಾರಂಭವಾದ 17 ದಿನಗಳಲ್ಲಿ ದರ ಹೆಚ್ಚಳಕ್ಕೆ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಈ ಹಿನ್ನೆಲೆಯಲ್ಲಿ ದರ ಏರಿಕೆಯನ್ನು ಅಧಿಕಾರಿಗಳು ಮುಂದೂಡಿ ಮರು ಆದೇಶ ಹೊರಡಿಸಿದ್ದಾರೆ.

    ದಶಪಥ ಹೆದ್ದಾರಿಯ ಟೋಲ್ ಸಂಗ್ರಹ ಆರಂಭವಾಗಿ ಕೇವಲ 17ದಿನಗಳು ಕಳೆದಿವೆ. ಈ ನಡುವೆಯೇ ರಾಷ್ಟ್ರೀಯ ಹೆದ್ದಾರಿ ಶುಲ್ಕ ನಿಯಮ 2008ರ ಅನ್ವಯ ಎಕ್ಸ್‌ಪ್ರೆಸ್‌ವೇ ಟೋಲ್ ದರವನ್ನೂ ಹೆದ್ದಾರಿ ಪ್ರಾಧಿಕಾರ ಹೆಚ್ಚಳಕ್ಕೆ ಆದೇಶ ಹೊರಡಿಸಿತ್ತು. ಶನಿವಾರ ಮುಂಜಾನೆಯಿಂದ ಹೆಚ್ಚುವರಿ ಶುಲ್ಕ ವಸೂಲಿ ಆರಂಭಿಸಿದ್ದ ಟೋಲ್ ಸಿಬ್ಬಂದಿ ವಿರುದ್ಧ ಸಾರ್ವಜನಿಕರು ಆಕ್ರೋಶ ಸಹ ಹೊರ ಹಾಕಿದ್ದರು. ಈ ಹಿನ್ನೆಲೆಯಲ್ಲಿ ಹಿಂದಿನ ದರ ಮುಂದುವರೆಸುವಂತೆ ಮರು ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ಮಂಡ್ಯ ಜಿಲ್ಲೆಯ 6 ಕ್ಷೇತ್ರಗಳಲ್ಲಿ 3 ಪಕ್ಷಗಳಿಂದ ಒಕ್ಕಲಿಗರೇ ಅಭ್ಯರ್ಥಿಗಳು

    ನಿರ್ಧಾರ ಕೈಬಿಟ್ಟ ಮೇಲೂ ಆದೇಶ ತಲುಪಿಲ್ಲ ಎಂದು ಕೆಲಕಾಲ ಶೇಷಗಿರಿಹಳ್ಳಿ (Sheshagiri Halli toll) ಟೋಲ್ ಹಾಗೂ ಕಣಮಿಣಕಿ ಟೋಲ್ (Kaniminike toll) ಸಿಬ್ಬಂದಿ ಹೆಚ್ಚುವರಿ ಶುಲ್ಕ ವಸೂಲಿ ಮಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ವರದಿಯಾದ ಮೇಲೆ ಹಳೇ ದರ ವಸೂಲಿ ಮಾಡಲು ಸಿಬ್ಬಂದಿ ಮುಂದಾದರು. ಈ ವೇಳೆ ಕೆಲ ವಾಹನ ಸವಾರರು ಟೋಲ್ ಸಿಬ್ಬಂದಿ ಜೊತೆ ವಾಗ್ವಾದ ನಡೆಸಿದ್ದಾರೆ. ಇದನ್ನೂ ಓದಿ: ಸಂಜಯ್ ರಾವತ್‍ಗೆ ಕ್ರಿಮಿನಲ್ ಲಾರೆನ್ಸ್ ಬಿಷ್ಣೋಯ್‍ನಿಂದ ಕೊಲೆ ಬೆದರಿಕೆ

  • ಬೆಂಗಳೂರು – ಮೈಸೂರು ಹೆದ್ದಾರಿ ಯಾರಿಗೆ ಉಪಯೋಗ : ಹೆಚ್‍ಡಿಕೆ ಕಿಡಿ

    ಬೆಂಗಳೂರು – ಮೈಸೂರು ಹೆದ್ದಾರಿ ಯಾರಿಗೆ ಉಪಯೋಗ : ಹೆಚ್‍ಡಿಕೆ ಕಿಡಿ

    ಬೆಂಗಳೂರು: ಮೈಸೂರು – ಬೆಂಗಳೂರು ದಶಪಥ ಹೆದ್ದಾರಿ (Mysuru Bengaluru Expressway) ಯಾರಿಗೆ ಉಪಯೋಗ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಕಿಡಿಕಾರಿದರು.

    ಭಾನುವಾರ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು ಮಂಡ್ಯದಲ್ಲಿ (Mandya) ಪ್ರಧಾನಿ ನರೇಂದ್ರ ಮೋದಿ ಅವರು ಲೋಕಾರ್ಪಣೆಗೊಳಿಸಿದರು. ಈ ಹಿನ್ನೆಲೆಯಲ್ಲಿ ಸರಣಿ ಟ್ವೀಟ್ ಮಾಡಿರುವ ಹೆಚ್‍ಡಿಕೆ ವಾಗ್ದಾಳಿ ನಡೆಸಿದರು.

    ಟ್ವೀಟ್‍ನಲ್ಲಿ ಏನಿದೆ?: ಇದು ಅತ್ಯಂತ ಮುಖ್ಯ ವಿಷಯ. ಬೆಂಗಳೂರು-ಮೈಸೂರು ನಗರಗಳ ನಡುವೆ ನಿರ್ಮಿಸಿರುವ ದಶಪಥ ಹೆದ್ದಾರಿ ಯಾರಿಗೆ ಉಪಯೋಗ? ಹಣ ಮಾಡಲು ಯಾರಿಗೆ ರಹದಾರಿ? ಎನ್ನುವುದು ನನ್ನ ಪ್ರಶ್ನೆ. ರಾಮನಗರ (Ramanagara), ಮಂಡ್ಯ ಜಿಲ್ಲೆಗಳ ಜನರಿಗೆ, ಅದರಲ್ಲೂ ಬೆಂಗಳೂರು-ಮೈಸೂರು ನಡುವೆ ಆ ಹೆದ್ದಾರಿ ಉದ್ದಕ್ಕೂ ಜೀವಿಸುತ್ತಿರುವ ಜನರಿಗೆ ಇದರಿಂದ ನಯಾಪೈಸೆ ಉಪಯೋಗ ಇದೆಯಾ? ಇಲ್ಲ.

    ಸ್ಥಳೀಯರಿಗೆ ದಶಪಥದಿಂದ ಉಪಯೋಗ ಇದೆಯಾ ಎಂದು ಇನ್ನೂ ಒಳಹೊಕ್ಕು ಲೆಕ್ಕ ಹಾಕಿದರೆ, ಉತ್ತರ ದೊಡ್ಡ ಸೊನ್ನೆ. ಕೇವಲ ಬೆಂಗಳೂರಿನಿಂದ ಮೈಸೂರಿಗೆ ಶರವೇಗದಲ್ಲಿ ನೇರವಾಗಿ ಸಂಚರಿಸುವವರಿಗೆ ಮಾತ್ರ ಲಾಭ. ಹಾಗಾದರೆ, ರಾಮನಗರ, ಚನ್ನಪಟ್ಟಣ, ಮದ್ದೂರು, ಶ್ರೀರಂಗಪಟ್ಟಣದವರಿಗೆ ಉಪಯೋಗ ಇದೆಯಾ? ಎಳ್ಳಷ್ಟೂ ಇಲ್ಲ. ಈ ಸತ್ಯವನ್ನು ನಾವೆಲ್ಲರೂ ಅರಿಯಬೇಕಿದೆ.

    ಕೆಲವರ ಪಾಲಿಗೆ ದೊಡ್ಡ ಎಟಿಎಂ ಆಗಿಬಿಟ್ಟ ಮೈಸೂರು-ಬೆಂಗಳೂರು ಎಕ್ಸ್‌ಪ್ರೆಸ್ ಹೆದ್ದಾರಿಯ ಅಸಲಿ ಅಂಶಗಳನ್ನು ಪಟ್ಟಿ ಮಾಡಿದರೆ ಕನ್ನಡಿಗರಿಗೆ ನಿರಾಶೆ, ನೋವು, ಹತಾಶೆ ಖಂಡಿತಾ. ಹಾಗಾದರೆ ಕೆಳಗಿನ ಅಂಶಗಳನ್ನು ಗಮನಿಸೋಣ.

    ಈ ದಶಪಥ ಹೆದ್ದಾರಿಯ ಮಾರಣಾಂತಿಕ ಹೊಡೆತ ಮೊದಲು ಬಿದ್ದಿರುವುದು ಮಂಡ್ಯ ಜಿಲ್ಲೆಯ ಜನರಿಗೆ. ಆರ್ಥಿಕವಾಗಿ, ಸಾಮಾಜಿಕವಾಗಿ ಈ ಜಿಲ್ಲೆಯನ್ನು ಮುಗಿಸುವುದೇ ದಶಪಥ ಹೆದ್ದಾರಿಯ ದುರುದ್ದೇಶವಾ? ಜಿಲ್ಲೆಯ ಆರ್ಥಿಕ ಸರಪಳಿಗೆ ಕುಣಿಕೆ ಬಿಗಿಯುವುದೇ ಇದರ ಒಳ ಉದ್ದೇಶವಾ? ಎನ್ನುವುದು ನನ್ನ ಅನುಮಾನ.

    ಮಧ್ಯಮ, ಸಣ್ಣ ಗಾತ್ರದ ಹೊಟೆಲ್, ಸಣ್ಣ-ಅತಿಸಣ್ಣ ಉದ್ದಿಮೆ, ಕಬ್ಬುಬೆಲ್ಲ, ಪೆಟ್ರೋಲ್ ಬಂಕ್ ಸೇರಿ ಅಗತ್ಯ ವಸ್ತುಗಳ ಸುಮಾರು 2,600ಕ್ಕೂ ಹೆಚ್ಚು ಸ್ಥಳೀಯ ಉದ್ಯಮ ನೆಲಕಚ್ಚಿವೆ. ಎಳನೀರು ವ್ಯಾಪಾರಕ್ಕೆ ಎಳ್ಳುನೀರು ಬಿಡಲಾಗಿದೆ. 6,000ಕ್ಕೂ ಹೆಚ್ಚು ಜನರ ಜೀವನೋಪಾಯಕ್ಕೆ ಹೊಡೆತ ಬಿದ್ದು, ಅವರ ಬದುಕಿನ ಮೇಲೆ ಹೆದ್ದಾರಿ ಹೆಮ್ಮಾರಿ ಬಂದು ಕೂತಿದೆ.

    ಮಂಡ್ಯ, ರಾಮನಗರ ಜಿಲ್ಲೆಗಳ ಜನರ ಜೀವನಾಡಿಯೇ ಆಗಿದ್ದ ಹಳೆಯ ಹೆದ್ದಾರಿ ಲಕ್ಷಾಂತರ ಜನರ ಜೀವನಕ್ಕೆ ದಾರಿ ಆಗಿತ್ತು. ಹೊಸ ಹೆದ್ದಾರಿ ಕೆಲವರಿಗೆ ಹಣದ ದಾರಿಯಷ್ಟೆ. ಜನರ ಜೀವನೋಪಾಯದ ಸರಪಳಿಯನ್ನು ಎಕ್ಸ್‌ಪ್ರೆಸ್ ಹೆದ್ದಾರಿ ಬಲಿ ತೆಗೆದುಕೊಂಡಿದೆ. ಅವರ ವೈಯಕ್ತಿಕ ಬದುಕಿಗೆ, ಆರ್ಥಿಕ ಶಕ್ತಿಗೆ ದೊಡ್ಡ ಹೊಡೆತ ಬಿದ್ದಿದೆ. ಇದು ಸತ್ಯ.

    ಹಳೆಯ ಹೆದ್ದಾರಿ ಜೊತೆ ಹಾಸು ಹೊಕ್ಕಾಗಿದ್ದ ಜನರು, ಈಗ ತಮ್ಮ ಊರುಗಳಿಗೆ ತೆರಳಲು ಕನಿಷ್ಠ 10ರಿಂದ 25 ಕಿ.ಮೀ. ಸುತ್ತಿ ಬರಬೇಕಿದೆ. ಸ್ಥಳೀಯರಿಗೆ ಸುತ್ತುವ ಶಿಕ್ಷೆ ಯಾಕೆ? ಭೂಮಿ ಕಳೆದುಕೊಂಡ ಪುಣ್ಯಕ್ಕೆ ಅವರು ಬಳಸಿ ಬಳಿಸಿ ಬಸವಳಿದು ತಮ್ಮ ಹಳ್ಳಿಗಳಿಗೆ ಬರಬೇಕಾ? ಇದು ಯಾವ ಸೀಮೆಯ ನ್ಯಾಯ? ದಶಪಥ ಕಲ್ಪಿಸಿದ ದೌರ್ಭಾಗ್ಯ ಇದು.

    ಬದುಕು ಕಸಿದುಕೊಂಡ ದಶಪಥ ಉದ್ಘಾಟಿಸಿದ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ಮಂಡ್ಯ ಸೇರಿ ಹೆದ್ದಾರಿ ಉದ್ದಕ್ಕೂ ಜನರ ಆಕ್ರೋಶ ಅಸ್ಫೋಟಗೊಂಡಿದೆ. ಕಪ್ಪುಪಟ್ಟಿ ಪ್ರದರ್ಶನ ಮಾಡಲು ಹೊರಟಿದ್ದಾರೆ. ಅದು ಬೇಡ ಎಂದು ವಿನಂತಿಸುತ್ತೇನೆ. ನ್ಯಾಯ ಕೇಳೋಣ, ಹಕ್ಕು ಪ್ರತಿಪಾದಿಸೋಣ. ಅವರಿಗೆ ಅಗೌರವ ತೋರಿಸುವುದು ಬೇಡ.

    ಜನರಿಗೂ ಸಿಟ್ಟಿದೆ, ಅದು ಸಹಜ. ದ್ವಿಚಕ್ರ ವಾಹನಗಳಿಗೆ ಹೆದ್ದಾರಿಯಲ್ಲಿ ಸಂಚರಿಸಲು ಅವಕಾಶ ನಿರಾಕರಿಸಿದ್ದು ಏಕೆ? ಇದು ಅವೈಜ್ಞಾನಿಕ ಮತ್ತು ಅಕ್ಷಮ್ಯ. ಷಟ್ಪಥದ (ಆರು ಪಥ) ಮುಖ್ಯ ಕಾರಿಡಾರಿನಲ್ಲಿ ಕೊನೆಯ ಪಕ್ಷ ಎರಡನ್ನಾದರೂ ದ್ವಿಚಕ್ರ ವಾಹನಗಳಿಗೆ ಮೀಸಲಿಡಬಾರದೇಕೆ? ಇದೇನು ಬಿಟ್ಟಿ ಉಪಕಾರವೇ? ಅಲ್ಲ, ಆ ಜನರ ಹಕ್ಕು.

    30 ವರ್ಷ ಕಾಲ ಈ ಹೆದ್ದಾರಿಯಲ್ಲಿ ಸಂಚರಿಸುವ ಜನರು ಟೋಲ್ ಕಟ್ಟುತ್ತಾರೆ. ಸಂಗ್ರಹವಾಗುವ ಶುಲ್ಕದ ಮೂಲಕವೇ ರಸ್ತೆ ನಿರ್ಮಾಣದ ಖರ್ಚನ್ನು ಜನರೇ ಭರಿಸುತ್ತಾರೆ. ಗುತ್ತಿಗೆದಾರರ ಜೇಬಿಗೆ ಬಹುದೊಡ್ಡ ಗಂಟು ಸೇರಲಿದೆ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದಿಂದ ಈ ಯೋಜನೆಗೆ ಬಿಡಿಗಾಸು ಬಂದಿಲ್ಲ. ದಶಪಥದ ಒಳಲೆಕ್ಕಗಳ ಸತ್ಯ ಜನರಿಗೆ ಗೊತ್ತಾಗಬೇಕಿದೆ.

    ಕನ್ನಡಿಗರಿಗೆ ಕಣ್ಣಿಗೆ ಮಂಕುಬೂದಿ ಎರಚಿ, ಈ ಸತ್ಯವನ್ನು ಮರೆಮಾಚಿ, ತಾವೇ ಈ ರಸ್ತೆ ನಿರ್ಮಾಣಕ್ಕೆ ಕಾರಣ ಎಂದು ಬಿಜೆಪಿಗರು ರಣರಣ ಬೊಬ್ಬೆ ಹೊಡೆಯುತ್ತಿರುವುದು ದಶಪಥ ಹೆದ್ದಾರಿ ಹೆಸರಿನಲ್ಲಿ ಮಾಡುತ್ತಿರುವ ಮಹಾದ್ರೋಹವಾಗಿದೆ. ಈ ಎಕ್ಸ್‌ಪ್ರೆಸ್ ಹೆದ್ದಾರಿಯ ನಿಜವಾದ ಹಕ್ಕುದಾರರಾದ ರಾಮನಗರ, ಮಂಡ್ಯ ಜನರನ್ನು ಪರಾವಲಂಬಿಗಳನ್ನಾಗಿ ಮಾಡಿದ್ದಲ್ಲದೆ, ಭೂಮಿ ಕಳೆದುಕೊಂಡ ಬಡರೈತರು ಹೆದ್ದಾರಿ ಬದಿ ನಿಂತು ಭಿಕ್ಷೆ ಬೇಡುವಂಥ ದುಃಸ್ಥಿತಿಯನ್ನು ಕೇಂದ್ರ ಸರ್ಕಾರ ಸೃಷ್ಟಿಸಿದೆ.

    ದಶಪಥ ಹೆದ್ದಾರಿ ಕಸಿದುಕೊಂಡ ಬದುಕಿಗೆ ಉತ್ತರದಾಯಿ ಯಾರು? ಅವರ ಜೀವನೋಪಾಯಕ್ಕೆ ಪರ್ಯಾಯ ದಾರಿ ಯಾವುದು? ಪ್ರಧಾನಮಂತ್ರಿಗಳು ಈ ಬಗ್ಗೆ ಜನರಿಗೆ ವಿಶ್ವಾಸ ತುಂಬಬೇಕು. ರೋಡ್ ಶೋ ಮಾಡುವುದಕ್ಕಿಂತ ತುರ್ತಾಗಿ ಮಾಡಬೇಕಿರುವುದು ಇದನ್ನು. ಅಬ್ಬರ, ಅರ್ಭಟದಲ್ಲಿ ಜನರ ಬದುಕು ಅವನತಿ ಆಗಬಾರದು ಎನ್ನುವುದು ನನ್ನ ಕಳಕಳಿ ಎಂದು ಟ್ವೀಟ್‍ನಲ್ಲಿ ತಿಳಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

    ಕರ್ನಾಟಕ ಅತಿ ಹೆಚ್ಚು ತೆರಿಗೆ ಕಟ್ಟುವ ರಾಜ್ಯ! ಕರ್ನಾಟಕ ಕೇಂದ್ರದಿಂದ ಅತಿಹೆಚ್ಚು ನಿರ್ಲಕ್ಷ್ಯಕ್ಕೆ ಒಳಗಾದ ರಾಜ್ಯ!! ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ, ಈ ನೀತಿಯ ಕೆನ್ನಾಲಿಗೆಗೆ ಸಿಕ್ಕಿ ಕನ್ನಡಿಗರು ಬೇಯುತ್ತಿದ್ದಾರೆ. ಹೆದ್ದಾರಿ ಕನ್ನಡಿಗರದು, ಅದನ್ನು ಬಳಸುವ ಹಕ್ಕು ಕನ್ನಡಿಗರದು. ಕನ್ನಡಿಗರಿಗೆ ನ್ಯಾಯ ಬೇಕು. ಇದನ್ನೂ ಓದಿ: ಕಾಂಗ್ರೆಸ್ ನನ್ನ ಸಮಾಧಿ ಮಾಡುವ ಕನಸು ಕಾಣುತ್ತಿದೆ: ಮೋದಿ ವಾಗ್ದಾಳಿ

  • ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

    ಬೆಂಗಳೂರು – ಮೈಸೂರು ದಶಪಥ ಹೆದ್ದಾರಿ ಲೋಕಾರ್ಪಣೆಗೊಳಿಸಿದ ಮೋದಿ

    ಮಂಡ್ಯ: ಬಹುನೀರೀಕ್ಷಿತ ಬೆಂಗಳೂರು – ಮೈಸೂರು ದಶಪಥ ಹೆದ್ದಾರಿಯನ್ನು (Mysuru Bengaluru Expressway) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಮಂಡ್ಯದಲ್ಲಿ (Mandya) ಭಾನುವಾರ ಲೋಕಾರ್ಪಣೆಗೊಳಿಸಿದರು.

    ಬೆಂಗಳೂರು ಟು ಮೈಸೂರು ಸುಗಮ ಸಂಚಾರಕ್ಕಾಗಿ ನಿರ್ಮಾಣ ಆಗಿರುವ 118 ಕಿ.ಮೀ ಉದ್ದದ ಬೆಂಗಳೂರು – ಮೈಸೂರು ದಶಪಥ ರಾಷ್ಟ್ರೀಯ ಹೆದ್ದಾರಿ ಲೋಕಾರ್ಪಣೆ ಆಗಿದೆ. 11 ಸಾವಿರ ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಿರುವ ಎಕ್ಸ್‌ಪ್ರೆಸ್ ಹೈವೇಯನ್ನು ಮಂಡ್ಯ ಬಳಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದರು. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗೆಜ್ಜಲಗೆರೆ ಕಾಲೋನಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ ಲೋಕಾರ್ಪಣೆ ಮತ್ತು ವಿವಿಧ ಯೋಜನೆಗಳಿಗೆ ಶಂಕುಸ್ಥಾಪನೆ ಮಾಡಿದರು. ಇದನ್ನೂ ಓದಿ: ದಶಪಥ ಹೆದ್ದಾರಿ ಲೋಕಾರ್ಪಣೆ – ಜನರಿಗೆ ಸಿದ್ಧವಾಗ್ತಿದೆ 60 ಕ್ವಿಂಟಲ್ ಬಾತ್, 25 ಕ್ವಿಂಟಲ್ ಮೊಸರನ್ನ

     ಈ ವೇಳೆ ಸಿಎಂ ಬೊಮ್ಮಾಯಿ, ಕೇಂದ್ರ ಸಚಿವರಾದ ಜೋಶಿ, ನಿತಿನ್‌ ಗಡ್ಕರಿ, ಸಂಸದರಾದ ಸುಮಲತಾ, ಪ್ರತಾಪ್​ ಸಿಂಹ, ಸಚಿವರಾದ ಕೆ.ಗೋಪಾಲಯ್ಯ, ಕೆ.ಸಿ.ನಾರಾಯಣಗೌಡ ಸೇರಿ ಹಲವರು ಭಾಗಿಯಾದರು. 1.8 ಕಿಲೋಮೀಟರ್ ರೋಡ್ ಶೋ ನಡೆಸಿದ ಬಳಿಕ ಹೆದ್ದಾರಿ ಉದ್ಘಾಟಿಸಿದರು. ಇದನ್ನೂ ಓದಿ:  ಮಂಡ್ಯದಲ್ಲಿ ಮೋದಿ ರೋಡ್ ಶೋ – ಸ್ವಾಗತಿಸಲು ನಿಂತಿದ್ದ ಅಭಿಮಾನಿಗಳಿಗೆ ಪ್ರಧಾನಿ ಪುಷ್ಪಾರ್ಚನೆ

  • ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು: ಪ್ರತಾಪ್ ಸಿಂಹಗೆ ಸಿದ್ದು ಟಾಂಗ್

    ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು: ಪ್ರತಾಪ್ ಸಿಂಹಗೆ ಸಿದ್ದು ಟಾಂಗ್

    ಮೈಸೂರು: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ (Mysuru-Bengaluru Expressway) ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು ಎಂದು ಸಂಸದ ಪ್ರತಾಪ್ ಸಿಂಹಗೆ (Pratap Simha) ಮಾಜಿ ಸಿಎಂ ಸಿದ್ದರಾಮಯ್ಯ ಟಾಂಗ್ ಕೊಟ್ಟರು.

    ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ (Siddaramaiah), ಮಾರ್ಚ್ 9ರಂದು ಬೆಂಗಳೂರು-ಮೈಸೂರು ಹೆದ್ದಾರಿ ಪರಿಶೀಲನೆ ನಡೆಸುತ್ತೇನೆ. ಆ ರಸ್ತೆಯ ಕ್ರೆಡಿಟ್ ನಮ್ಮ ಸರ್ಕಾರಕ್ಕೇ ಸಲ್ಲಬೇಕು. ಪ್ರತಾಪ್ ಸಿಂಹ ಅವರದ್ದಾಗಲಿ, ಬಿಜೆಪಿ (BJP) ಸರ್ಕಾರದ್ದಾಗಲಿ ಯಾವುದೇ ಪಾತ್ರ ಇಲ್ಲ. ಪ್ರತಾಪ್ ಸಿಂಹ ಅವರ ಲೋಕಸಭಾ ವ್ಯಾಪ್ತಿಗೆ ಕೆಲವು ಕಿಲೋಮೀಟರ್ ರಸ್ತೆ ಮಾತ್ರ ಸೇರುತ್ತದೆ. ಆದರೂ ನಮ್ಮದು ಎಂದು ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಹೆಚ್.ಸಿ.ಮಹದೇವಪ್ಪನವರಿಗೆ (H.C Mahadevappa) ಈ ರಸ್ತೆಯ ಎಲ್ಲಾ ಮಾಹಿತಿಯೂ ಗೊತ್ತಿದೆ. ಮಹದೇವಪ್ಪನವರು ಮುಂದೆ ನಿಂತು ಈ ರಸ್ತೆಯನ್ನು ಮಾಡಿಸಿದರು ಎಂದರು. ಇದನ್ನೂ ಓದಿ: ಯಡಿಯೂರಪ್ಪರನ್ನು ಸಿಎಂ ಮಾಡಿದ್ದು ನಾನೇ: ಜನಾರ್ದನ ರೆಡ್ಡಿ

    ಮಾಡಾಳ್ ವಿರೂಪಾಕ್ಷಪ್ಪ (Madal Virupakshappa) ಪ್ರಕರಣ ಕುರಿತು ಮಾತನಾಡಿ, ಅವರನ್ನು ಸರ್ಕಾರವೇ ರಕ್ಷಣೆ ಮಾಡುತ್ತಿದೆ. ವಿರೂಪಾಕ್ಷಪ್ಪನವರು ಎಲ್ಲಿದ್ದಾರೆ ಎಂಬುವುದು ಸರ್ಕಾರಕ್ಕೆ ಗೊತ್ತಿದೆ. ವಿರೂಪಾಕ್ಷಪ್ಪ ತಮ್ಮ ಮನೆಯಲ್ಲಿಯೇ ಓಡಾಡಿಕೊಂಡಿದ್ದಾರೆ. ಅವರನ್ನು ಬಂಧಿಸದೆ ಇವರು ನಾಟಕ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಇದನ್ನೂ ಓದಿ: ಶೂಟಿಂಗ್ ವೇಳೆ ಅವಘಡ: ಅಮಿತಾಭ್ ಬಚ್ಚನ್ ಗೆ ಗಂಭೀರ ಗಾಯ

    ವಿರೂಪಾಕ್ಷಪ್ಪನವರು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಡಲು ಬಂದಾಗಲೇ ಅವರನ್ನು ಯಾಕೆ ಬಂಧಿಸಲಿಲ್ಲ? ಈಗ ಲುಕ್‌ಔಟ್ ನೋಟಿಸ್ ಹೆಸರಿನಲ್ಲಿ ಜನರ ಗಮನ ಬೇರೆಡೆ ಸೆಳೆಯುತ್ತಿದ್ದಾರೆ ಅಷ್ಟೇ. ಭ್ರಷ್ಟಾಚಾರದ ಆರೋಪಕ್ಕೆ ಮಿಸ್ಟರ್ ಬೊಮ್ಮಾಯಿ (Basavaraj Bommai) ಅವರು ಸಾಕ್ಷಿ ಕೇಳುತ್ತಿದ್ದರು. ಈಗ ವಿರೂಪಾಕ್ಷಪ್ಪನವರು ರೆಡ್‌ಹ್ಯಾಂಡ್ ಆಗಿ ಸಿಕ್ಕಿ ಬಿದ್ದಿದ್ದಾರೆ. ಆದರೆ ಇವರು ಏನು ಕ್ರಮ ತೆಗೆದುಕೊಂಡಿದ್ದಾರೆ? ಇವರಿಗೆ ಮುಜುಗರ ಆಗಿದೆ. ಆದರೂ ಇವರು ನಮಗೆ ಮುಜುಗರ ಇಲ್ಲಾ ಎಂದು ಹೇಳುತ್ತಿದ್ದಾರೆ. ಅಪ್ಪ ಅಧ್ಯಕ್ಷ ಆಗಿದ್ದ ಕಾರಣಕ್ಕೆ ಮಗನಿಗೆ ಲಂಚ ಕೊಡಲು ಬಂದಿದ್ದರು. ಹೀಗಾಗಿ ಅಪ್ಪನೇ ಮೊದಲ ಆರೋಪಿ. ಇವರನ್ನು ಮೊದಲು ಬಂಧಿಸಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ವರದಕ್ಷಿಣೆ ಕಿರುಕುಳ – ಶಾಲಾ ಕೊಠಡಿಯಲ್ಲೇ ವಿಷ ಸೇವಿಸಿ ಶಿಕ್ಷಕಿ ಆತ್ಮಹತ್ಯೆ

    ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನಾನು ಲೋಕಾಯುಕ್ತ ಬಂದ್ ಮಾಡಲಿಲ್ಲ. ನಾನು ಲೋಕಾಯುಕ್ತ ಬಂದ್ ಮಾಡಿದ್ದರೆ ಇವತ್ತೇ ರಾಜೀನಾಮೆ ಕೊಡುತ್ತೇನೆ. ನಾವು ಭ್ರಷ್ಟಾಚಾರ ನಿಗ್ರಹಕ್ಕೆ ಎಸಿಬಿ ರಚನೆ ಮಾಡಿದ್ದೆವು ಅಷ್ಟೇ. ನಾವು ಲೋಕಾಯುಕ್ತದ ಯಾವ ಅಧಿಕಾರವನ್ನೂ ಕಿತ್ತುಕೊಂಡಿಲ್ಲ. ನಮ್ಮ ಕಾಲದಲ್ಲೂ ಲೋಕಾಯುಕ್ತ ಇತ್ತು. ಎಲ್ಲಾ ಸತ್ಯ ಗೊತ್ತಿದ್ದರೂ ಬೊಮ್ಮಾಯಿ ಸುಳ್ಳು ಹೇಳುತ್ತಿದ್ದಾರೆ ಎಂದು ಹರಿಹಾಯ್ದರು. ಇದನ್ನೂ ಓದಿ: ಹೇಗೆ ಬಲಿ ಹಾಕಬೇಕೆಂದು ಗೊತ್ತಿದೆ – ಟ್ರಾನ್ಸ್‌ಫಾರ್ಮರ್ ಬದಲಿಸದ ಅಧಿಕಾರಿಗೆ ಹೆಚ್.ಡಿ.ರೇವಣ್ಣ ಕ್ಲಾಸ್

    ಎಸಿಬಿ ರದ್ದು ಮಾಡುತ್ತೇವೆ ಎಂದು ಬಿಜೆಪಿ ಪ್ರಣಾಳಿಕೆಯಲ್ಲಿ ಹೇಳಿತ್ತು. ಆದರೆ ಎಸಿಬಿ ರದ್ದು ಮಾಡಿದ್ದು ನ್ಯಾಯಾಲಯವೇ ಹೊರತು ಬಿಜೆಪಿ ಸರ್ಕಾರವಲ್ಲ. ಬಿಜೆಪಿಯವರಿಗೆ ಸುಳ್ಳು ಹೇಳುವುದು ಚಟ. ಸುಳ್ಳೇ ಬಿಜೆಪಿಯವರ ಮನೆದೇವರು. ಹೀಗಾಗಿ ಲೋಕಾಯುಕ್ತ ವಿಚಾರದಲ್ಲಿ ಬಿಜೆಪಿಯವರು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ ಎಂದು ಕಿಡಿ ಕಾರಿದರು. ಇದನ್ನೂ ಓದಿ: ಪಂಚರತ್ನ ಪ್ರಚಾರದ ವೇಳೆ ಜೆಡಿಎಸ್ ವಾಹನದ ಮೇಲೆ ಕಲ್ಲುತೂರಾಟ – ಚಾಲಕನಿಗೆ ಗಾಯ

  • ದಶಪಥ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಆರೋಪ – ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು

    ದಶಪಥ ಹೆದ್ದಾರಿ ಅವೈಜ್ಞಾನಿಕ ಕಾಮಗಾರಿ ಆರೋಪ – ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು

    ರಾಮನಗರ: ಸುಗಮ ಸಂಚಾರಕ್ಕೆ ಅನುಕೂಲವಾಗಬೇಕಿದ್ದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ ವೇ (Mysuru Bengaluru Expressway) ಈಗ ಓವರ್ ಸ್ಪೀಡ್ ಸೇರಿದಂತೆ ಇನ್ನಿತರ ಕಾರಣಗಳಿಂದಾಗಿ ಅಪಘಾತಗಳ (Accidents) ಹಾಟ್‌ಸ್ಪಾಟ್ ಆಗಿ ಪರಿಣಮಿಸಿದೆ.

    ಸೆಪ್ಟೆಂಬರ್ ಮೊದಲ ವಾರದಿಂದ ಎಕ್ಸ್‌ಪ್ರೆಸ್‌ ವೇ ಮೊದಲ ಹಂತದ ರಸ್ತೆಯಲ್ಲಿ ವಾಹನಗಳು ಸಂಚರಿಸಲು ಆರಂಭಿಸಿದ್ದು, ಅಪಘಾತ ಪ್ರಕರಣಗಳು (Road Accident) ಹೆಚ್ಚಾಗುತ್ತಿವೆ. ರಾಮನಗರದಿಂದ ಚನ್ನಪಟ್ಟಣದ ಬೈರಾಪಟ್ಟಣದವರೆಗೂ ಬೈಪಾಸ್ ನಿರ್ಮಿಸಲಾಗಿದೆ. ಇದರ ಪಕ್ಕದಲ್ಲಿನ ಸರ್ವಿಸ್ ರಸ್ತೆಯಲ್ಲಿಯೇ ಅತೀ ಹೆಚ್ಚಿನ ಅಪಘಾತಗಳು ನಡೆದಿವೆ. ಇಲ್ಲಿ ಸರಿಯಾದ ಎಂಟ್ರಿ ಹಾಗೂ ಎಕ್ಸಿಟ್‌ಗಳನ್ನು ನೀಡದಿರುವ ಕಾರಣ ಸರ್ವಿಸ್ ರಸ್ತೆಗಳಲ್ಲಿಯೂ ಓವರ್‌ಸ್ಪೀಡ್ ಸರ್ವೇ ಸಾಮಾನ್ಯವಾಗಿದೆ. ಇದನ್ನೂ ಓದಿ: ಇಡೀ ಶೋ ಬುಕ್ ಮಾಡಿ, ಫ್ಯಾಮಿಲಿ ಸಮೇತ ಕಾಂತಾರ ನೋಡಿದ ದಾವಣಗೆರೆ ಪೊಲೀಸರು

    ಹೀಗಾಗಿ ರಾಮನಗರ ಸಂಚಾರ ಪೊಲೀಸ್ ಠಾಣೆ (Traffic Police) ವ್ಯಾಪ್ತಿಯಲ್ಲಿನ ಬೈಪಾಸ್‌ನಲ್ಲಿಯೇ 6 ಮಂದಿ ಮೃತಪಟ್ಟಿದ್ದು, 8 ಮಂದಿ ಗಾಯಗೊಂಡಿದ್ದಾರೆ. ಇಂದು ಕೂಡಾ ರಾಮನಗರದಿಂದ ಮಾಗಡಿ ಕಡೆಗೆ ಹೋಗುತ್ತಿದ್ದ ಕುಮಾರ್ ಎಂಬಾತನಿಗೆ ಬೆಂಗಳೂರಿನಿಂದ ಮೈಸೂರು ಕಡೆಗೆ ಸರ್ವೀಸ್ ರಸ್ತೆಯಲ್ಲಿ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಎರಡು ಕಾಲುಗಳು ತುಂಡಾಗಿವೆ. ಕೂಡಲೇ ಗಾಯಾಳುವನ್ನು ಬೆಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. ನಿರಂತರ ಅಪಘಾತದಿಂದ ರೊಚ್ಚಿಗೆದ್ದ ಗ್ರಾಮಸ್ಥರು ಕೆಂಪೇಗೌಡನ ದೊಡ್ಡಿ ಬಳಿ ದಶಪಥ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯ, ಡಿಕೆಶಿ ಮೊದಲು ತಮ್ಮ ಮನೆ ಸರಿಮಾಡಿಕೊಳ್ಳಲಿ – ಕರಂದ್ಲಾಜೆ

    ಸರ್ವೀಸ್ ರಸ್ತೆಯಲ್ಲಿ ರೋಡ್ ಹಂಪ್ ಹಾಕದೇ ಇರುವುದು ಇದಕ್ಕೆ ಕಾರಣವಾಗಿದೆ. ಕೂಡಲೇ ಡಿಬಿಎಲ್ ಕಂಪನಿಯವರು ಸ್ಥಳಕ್ಕೆ ಬರುವಂತೆ ಆಗ್ರಹಿಸಿದ್ದಾರೆ. ಗ್ರಾಮಸ್ಥರ ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ಸುಮಾರು 2 ಕಿ.ಮೀ ನಷ್ಟು ಟ್ರಾಫಿಕ್ ಜಾಮ್ ಉಂಟಾಗಿದೆ. ಸ್ಥಳಕ್ಕೆ ಬಂದ ರಾಮನಗರ ಗ್ರಾಮಾಂತರ ಪೊಲೀಸರು ಗ್ರಾಮಸ್ಥರ ಮನವೊಲಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಸಮಸ್ಯೆಗೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]