ಹೌದು. ಜಯಚಾಮರಾಜ ಒಡೆಯರ್ ಸರ್ಕಲ್‍ನಲ್ಲಿರುವ ಒಡೆಯರ್ ಪ್ರತಿಮೆ ಹಾನಿಗೊಳಗಾಗಿದೆ. ನಿನ್ನೆ ಜಂಬೂಸವಾರಿ ವೇಳೆ ಜಂಬೂ ಸವಾರಿ ನೋಡಲು ಜನ ಮುಗಿಬಿದ್ದಿದ್ದಾರೆ. ಈ ವೇಳೆ ನಡೆದ ನೂಕಾಟ-ತಳ್ಳಾಟದಿಂದ ಜಯಚಾಮರಾಜ ಒಡೆಯರ್ ಅಮೃತ ಶಿಲೆಯ ಪ್ರತಿಮೆಗೆ ಹಾನಿಯಾಗಿದೆ. ಇದನ್ನೂ ಓದಿ: ಮಂಗಳೂರಿನಲ್ಲಿ 150 ಮಂದಿಗೆ ತ್ರಿಶೂಲ ಹಂಚಿದ ವಿಹೆಚ್‍ಪಿ!
– ಭಾರೀ ಮಳೆಗೆ ನಾಲ್ವರು ಬಲಿ
– ಮೈಸೂರು ದಸರಾ ಸಂಭ್ರಮಕ್ಕೂ ಮಳೆ ಅಡ್ಡಿ
– 3 ದಿನ ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ಅರಬ್ಬಿ ಸಮುದ್ರದ ಮೇಲ್ಮೈನಲ್ಲಿ ಸುಳಿಗಾಳಿ ಪರಿಣಾಮ ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮಳೆಯಾಗುತ್ತಿದ್ದು, ಹಲವು ಜಿಲ್ಲೆಗಳಲ್ಲಿ ವರುಣನ ಅವಾಂತರ ಸೃಷ್ಟಿಯಾಗಿದೆ. ರಾಜ್ಯದಲ್ಲಿ ನಿನ್ನೆ ಸುರಿದ ಮಳೆಗೆ ನಾಲ್ವರು ಬಲಿಯಾಗಿದ್ದಾರೆ.
ದಾವಣಗೆರೆಯಲ್ಲಿ ಮಳೆಯಿಂದಾಗಿ ಕರೆಂಟ್ ಶಾಕ್‍ಗೆ ಯುವಕ ಬಲಿಯಾಗಿದ್ದಾನೆ. ಯಲ್ಲಮ್ಮನಗರದ ಕುಂದುವಾಡ ರಸ್ತೆಯ ಬಳಿ ಘಟನೆ ಸಂಭವಿಸಿವೆ. ಭರತ್ ಕಾಲೋನಿ ಯುವಕ ಮನೋಜ್ ಮೂತ್ರ ವಿಸರ್ಜನೆಗೆ ಅಂತ ಹೋಗಿದ್ದ ಸಂದರ್ಭದಲ್ಲಿ ವಿದ್ಯುತ್ ಕಂಬ ಗ್ರೌಂಡ್ ಆಗಿದೆ. ಪರಿಣಾಮ ಶಾಕ್ ಹೊಡೆದು ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಬೆಳಗಾವಿ ಜಿಲ್ಲೆಯಲ್ಲಿ ಮಳೆಗೆ ಇಬ್ಬರು ಸಹೋದರರು ಬಲಿಯಾಗಿದ್ದಾರೆ. ತಗಡಿನ ಶೆಡ್ ಕುಸಿದ ಪರಿಣಾಮ ವಿದ್ಯುತ್ ಶಾಕ್ ಹೊಡೆದಿದೆ. ದುರ್ಘಟನೆಯಲ್ಲಿ ಇಬ್ಬರು ಸಹೋದರರು ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಬೆಳಗಾವಿ ತಾಲೂಕಿನ ದೇಸೂರ ಗ್ರಾಮದಲ್ಲಿ ಘಟನೆ ನಡೆದಿದ್ದು, ಬಸವರಾಜ್ ವಡ್ಡರ್, ವೆಂಕಟೇಶ ವಡ್ಡರ್ ಸಾವನ್ನಪ್ಪಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಸಿಡಿಲು ಬಡಿದು 46 ವರ್ಷದ ತಿಪ್ಪೆಸ್ವಾಮಿ ಎಂಬುವರು ಸಾವಿಗೀಡಾಗಿದ್ದಾರೆ.
ರಾಯಚೂರು ತಾಲೂಕಿನ ವಿವಿಧೆಡೆ ಸುರಿದ ಮಳೆಗೆ ಹಳ್ಳ-ಕೊಳ್ಳಗಳು ತುಂಬಿ ಹರಿಯುತ್ತಿವೆ. ಇಡಪನೂರು ಗ್ರಾಮದ ಹಳ್ಳದ ಸೇತುವೆ ಭಾಗಶಃ ಹಾಳಾಗಿವೆ. ಹಳ್ಳ ತುಂಬಿ ಹರಿಯುತ್ತಿದ್ದು ಇಡಪನೂರು – ಪಂಚಮುಖಿ ಮಾರ್ಗ ಬಂದ್ ಆಗಿದೆ. ಹಾಳಾದ ಸೇತುವೆ ಮೇಲೆಯೇ ಜನರು ಜೀವ ಕೈಯಲ್ಲಿ ಹಿಡಿದು ಓಡಾಡುವಂತಾಗಿದೆ. ತಗ್ಗು ಗುಂಡಿಗಳೇ ಇರುವ ಸೇತುವೆ ಮೇಲೆ ಬೈಕ್ ಸವಾರರು ಹರಸಾಹಸ ಪಡ್ತಿದ್ದಾರೆ. ಇನ್ನು ಥಿಯೇಟರ್ ಒಂದಕ್ಕೆ ಮಳೆ ನೀರು ನುಗ್ಗಿ ಜಲಪಾತದಂತೆ ಹರಿಯುತ್ತಿತ್ತು. ಇಡೀ ಥಿಯೇಟರ್ ಮಳೆ ನೀರಿನಿಂದ ಜಲಾವೃತವಾಗಿತ್ತು. ಇದನ್ನೂ ಓದಿ: ಸ್ವಪ್ರತಿಷ್ಠೆಗೋಸ್ಕರ ಬಡ ಮಕ್ಕಳ ಶಿಕ್ಷಣಕ್ಕೆ ಕೊಳ್ಳಿಯಿಟ್ಟ ಬಾಬುರಾವ್ ಚಿಂಚನಸೂರ್
ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಭಾರೀ ಮಳೆಯಿಂದಾಗಿ ನೀರು ಬಸ್ ನಿಲ್ದಾಣಕ್ಕೆ ನುಗ್ಗಿ ಪ್ರಯಾಣಿಕರು ಪರದಾಡುವಂತಾಯ್ತು. ಸತತ 2 ಗಂಟೆಗಳ ಕಾಲ ಸುರಿದ ಮಳೆಯಿಂದಾಗಿ ತಗ್ಗು ಪ್ರದೇಶಗಳು ಜಲಾವೃತವಾದವು. ಇನ್ನು ವಿಶ್ವ ವಿಖ್ಯಾತ ಮೈಸೂರು ದಸರಾ ಸಂಭ್ರಮಕ್ಕೂ ಮಳೆ ಅಡ್ಡಿಯಾಗಿದೆ. ನಿನ್ನೆ ಸಂಜೆ ಅರಮನೆ ಮುಂಭಾಗ ಹಮ್ಮಿಕೊಂಡಿದ್ದ ಸಾಂಸ್ಕøತಿಕ ಕಾರ್ಯಕ್ರಮಕ್ಕೆ ಮಳೆ ಅಡ್ಡಿಯಾಯ್ತು. ವಿವಿಐಪಿ ಆಸನಗಳು, ವೇದಿಕೆ ಎಲ್ಲವೂ ಮಳೆ ನೀರಿನಲ್ಲಿ ತೋಯ್ದು ತೊಪ್ಪೆ ಆಗಿತ್ತು. ಇನ್ನು ಮೈಸೂರಲ್ಲಿ ರಾತ್ರಿಯಾಗ್ತಿದ್ದಂತೆ ವಿದ್ಯುತ್ ದೀಪಾಲಂಕಾರ ನೋಡೋದೇ ಚಂದ. ಆದರೆ ಮಳೆಯಿಂದಾಗಿ ವಿದ್ಯುತ್ ದೀಪಾಲಂಕಾರ ಸ್ಥಗಿತಗೊಳಿಸಲಾಗಿದೆ. ರಾಮಸ್ವಾಮಿ ವೃತ್ತದಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿತ್ತು. ಈ ಹಿನ್ನೆಲೆಯಲ್ಲೂ ಎಚ್ಚೆತ್ತುಕೊಂಡ ಚೆಸ್ಕಾಂ ಲೈಟಿಂಗ್ಸ್ ಆಫ್ ಮಾಡ್ತು. ಇದನ್ನೂ ಓದಿ: ರೈಲಿನಲ್ಲಿ ಮರೆತ 7.31 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಹಿಂದಿರುಗಿಸಿದ ರೈಲ್ವೇ ಭದ್ರತಾ ಪಡೆ
ಕೋಟೆನಾಡು ಚಿತ್ರದುರ್ಗದಲ್ಲಿ ಮಳೆ ಅಬ್ಬರಕ್ಕೆ ಹೊಸದುರ್ಗ ತಾಲೂಕಿನ ಮಾಚೇನಹಳ್ಳಿ ಗ್ರಾಮ ಸರ್ಕಾರಿ ಶಾಲೆ ಜಲಾವೃತವಾಗಿತ್ತು. ಶಾಲೆಯೊಳಗಿನ ಪುಸ್ತಕ, ದಾಖಲೆಗಳು, ಪೀಠೋಪಕರಣ, ಆಟದ ಸಾಮಾಗ್ರಿಗಳು ನೀರುಪಾಲಾದ್ವು. ಗ್ರಾಮಸ್ಥರು, ಮಕ್ಕಳು ಶಾಲೆಗೆ ಧಾವಿಸಿ ಶಾಲಾ ಸಾಮಗ್ರಿಗಳನ್ನು ರಕ್ಷಿಸಿದ್ರು. ಇನ್ನು ಹಾಲುರಾಮೇಶ್ವರದಲ್ಲಿ ಗುಡುಗು-ಸಿಡಿಲು ಸಹಿತ 1 ಗಂಟೆಗೂ ಹೆಚ್ಚು ಕಾಲ ಜೋರು ಮಳೆಯಾಯ್ತು. ಇತ್ತ ಬಾಗಲಕೋಟೆ ಜಿಲ್ಲೆಯಲ್ಲೂ ಧಾರಾಕಾರ ಮಳೆಯಾಗಿದೆ. ಇಳಕಲ್ ತಾಲೂಕಿನ ಬೇಕಮಲದಿನ್ನಿ ಗ್ರಾಮದ ಹಳ್ಳ ತುಂಬಿ ಹರಿದ ಪರಿಣಾಮ ಹುನಗುಂದ-ಕರಡಿ ರಸ್ತೆ ಮಾರ್ಗ ಬಂದ್ ಆಗಿತ್ತು. ಹಳ್ಳದ ನೀರಿನಲ್ಲಿ ಬಸ್ ಸಿಲುಕಿ ಪ್ರಯಾಣಿಕರು ಪರದಾಡುವಂತಾಯ್ತು. ಟ್ರ್ಯಾಕ್ಟರ್ ಮೂಲಕ ಬಸ್ ಹೊರಗೆಳೆಯಲು ಹರಸಾಹಸಪಡುವಂತಾಯ್ತು.
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆತಿದೆ. ಇಂದು ಬೆಳಗ್ಗೆ 8.26ರ ತುಲಾ ಲಗ್ನದ ಶುಭ ಮುಹೂರ್ತದಲ್ಲಿ ಹಿರಿಯ ನಾಯಕರಾದ, ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚಾನೆ ಮಾಡುವ ಮೂಲಕ ದಸರಾಗೆ ಚಾಲನೆ ನೀಡಿದರು.
ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ, ಪತ್ನಿ ಚನ್ನಮ್ಮ ಬೊಮ್ಮಾಯಿ, ಸಚಿವರಾದ ಎಸ್.ಟಿ.ಸೋಮಶೇಖರ್, ಆರ್.ಅಶೋಕ್, ಬಿ.ಸಿ.ಪಾಟೀಲ್, ಶಿವರಾಂ ಹೆಬ್ಬಾರ್, ಸುನೀಲ್ ಕುಮಾರ್, ನಾರಾಯಣ ಗೌಡ, ಭೈರತಿ ಬಸವರಾಜು, ಶಶಿಕಲಾ ಜೊಲ್ಲೆ, ಶಾಸಕರಾದ ಜಿಟಿಡಿ, ರಾಮದಾಸ್, ನಾಗೇಂದ್ರ, ಬೆಲ್ಲದ್, ತನ್ವೀರ್ ಸೇಠ್, ಎಚ್.ವಿಶ್ವನಾಥ್, ಸಂಸದ ಪ್ರತಾಪ್ ಸಿಂಹ, ಡಾ.ಸುಧಾಕರ್, ಡಿಸಿ, ಪೊಲೀಸ್ ಆಯುಕ್ತರು ಸೇರಿ ನಿಗಮ ಮಂಡಳಿ ಅಧ್ಯಕ್ಷರ ಸಹಿತ ಹಲವರು ಉಪಸ್ಥಿತರಿದ್ದರು.
ಕೊರೋನಾ ಕಾರಣ ಉದ್ಘಾಟನಾ ಸಮಾರಂಭದಲ್ಲಿ 100 ಮಂದಿಗಷ್ಟೇ ಅವಕಾಶ ಕಲ್ಪಿಸಲಾಗಿದೆ. ಜನ ಸಾಮಾನ್ಯರಿಗೆ ವೀಕ್ಷಣೆ ಮಾಡಲು ವಚ್ರ್ಯುವಲ್ ಮುಖಾಂತರ ವ್ಯವಸ್ಥೆ ಮಾಡಲಾಗಿದೆ. ಇಂದು ಸಂಜೆ 6 ಗಂಟೆಗೆ ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಸಿಎಂ ಚಾಲನೆ ನೀಡಲಿದ್ದಾರೆ. ಇಂದಿನಿಂದ ಒಟ್ಟು 9 ದಿನಗಳ ಕಾಲ ಅರಮನೆ ಮುಂಭಾಗ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಅಕ್ಟೋಬರ್ 15ರಂದು ಜಂಬೂ ಸವಾರಿ ಮೆರವಣಿಗೆ ಮೂಲಕ ದಸರಾ ಮಹೋತ್ಸವಕ್ಕೆ ತೆರೆ ಬೀಳಲಿದೆ. ಇದನ್ನೂ ಓದಿ: ಕೊರೊನಾ ನಡುವೆ ಸಾವಿರಾರು ಬೆಂಬಲಿಗರೊಂದಿಗೆ ಎಂಎಲ್‍ಸಿ ಅದ್ದೂರಿ ಹುಟ್ಟುಹಬ್ಬ
ಇಂದು ಮುಂಜಾನೆಯಿಂದಲೇ ಅಂಬಾ ವಿಲಾಸ ಅರಮನೆಯಲ್ಲಿ ಖಾಸಗಿ ದರ್ಬಾರ್ ಆರಂಭವಾಗಿದೆ. ಗತಕಾಲದ ವೈಭವ ಮರುಕಳಿಸಿದೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸಿಂಹಾಸನರೋಹಣ ಮಾಡಿ ದರ್ಬಾರ್ ನಡೆಸಲಿದ್ದಾರೆ. ಆದರೆ ಖಾಸಗಿ ದರ್ಬಾರ್ ನೋಡಲು ಈ ಬಾರಿಯೂ ಯಾರಿಗೂ ಅವಕಾಶ ನೀಡಿಲ್ಲ. 7ನೇ ಬಾರಿಗೆ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜ ಪೋಷಾಕು ಧರಿಸಿ ಪ್ರವೇಶಿಸುತ್ತಿದ್ದಂತೆ ದರ್ಬಾರಿಗಳು ಬಹು ಪರಾಕ್ ಕೂಗಲಿದ್ದಾರೆ.
ನಾಡಿನ ಸಮಸ್ತ ಜನತಗೆ ದಸರಾ ಹಬ್ಬದ ಹಾರ್ದಿಕ ಶುಭಾಶಯಗಳು. ನಾಡ ಹಬ್ಬ ದಸರಾವನ್ನು ಉದ್ಘಾಟಿಸುವ ಮುನ್ನ ಕೃಷ್ಣರಾಜ ಸಾಗರ ಡ್ಯಾಮ್ ಬಳಿ ಇಂದು ದಂಪತಿ ಸಮೇತವಾಗಿ ತಾಯಿ ಕಾವೇರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು.#Dasara2021pic.twitter.com/qXNq5XbyZ1
ಸಂಪ್ರದಾಯದಂತೆ ಸಿಂಹಾಸನಕ್ಕೆ ಪೂಜೆ, ನವಗ್ರಹ ಪೂಜೆ ಸೇರಿ ವಿವಿಧ ಪೂಜೆಗಳನ್ನು ನೆರವೇರಿಸಿ ಸಿಂಹಾಸನರೂಢರಾಗಲಿದ್ದಾರೆ. ಇದಾದ ನಂತರ ಅರಮನೆಯ ದೇವಸ್ಥಾನಗಳು ಚಾಮುಂಡಿಬೆಟ್ಟ ಬೆಟ್ಟ ಸೇರಿದಂತೆ ಹಲವು ದೇವಸ್ಥಾನಗಳಿಂದ ತಂದಿದ್ದ ಪ್ರಸಾದ ಸೇವನೆ ಮಾಡಲಾಗುತ್ತೆ. ಮಂಗಳ ಸ್ನಾನ ನೆರವೇರಿಸಿ ಚಾಮುಂಡೇಶ್ವರಿಗೆ ಪೂಜೆ ಸಲ್ಲಿಸಿ ಯದುವೀರ್ ಅವರಿಗೆ ಕಂಕಣ ಧಾರಣೆ ಮಾಡಲಾಗುತ್ತದೆ. ಇದಾದ ಬಳಿಕ ಆರಮನೆಗೆ ಪಟ್ಟದ ಆನೆ, ಕುದರೆ, ಹಸುವನ್ನು ಕರೆಸಿ ಪೂಜೆ ಸಲ್ಲಿಸಲಾಗುತ್ತೆ. ಒಟ್ಟಾರೆ ಈ ಬಾರಿ ಅರಮನೆಯಲ್ಲಿ 10 ದಿನಗಳ ಕಾಲ ಸರಳವಾಗಿ ದಸರಾ ದರ್ಬಾರ್ ನಡೆಯಲಿದೆ.
ಮೈಸೂರು: ಕೋವಿಡ್ ನಿಯಮಗಳನ್ನು ಗಮನದಲ್ಲಿಟ್ಟುಕೊಂಡು ಸರಳ ಮತ್ತು ಸಾಂಪ್ರದಾಯಿಕ ದಸರಾ ಆಚರಣೆ ಮಾಡಲಾಗುವುದು. ಧಾರ್ಮಿಕ, ಸಾಂಸ್ಕೃತಿಕ ಚಟುವಟಿಕೆಗಳನ್ನು ಗಟ್ಟಿಗೊಳಿಸುವ ನಿಟ್ಟಿನಲ್ಲಿ ಹೆಚ್ಚು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಕಲಾವಿದರಿಗೆ ಹೆಚ್ಚು ಅವಕಾಶ ನೀಡುವಂತೆ ಸಹಕಾರ ಸಚಿವರು ಹಾಗೂ ಮೈಸೂರು ಮತ್ತು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು ಹೇಳಿದರು.
ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಆಯೋಜನೆ ಕುರಿತಂತೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾತನಾಡಿದ ಸಚಿವರು, ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಅನುದಾನ ಕಡಿತ ಮಾಡಬೇಡಿ. ಪ್ರತಿನಿತ್ಯ ಸಂಜೆ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿ ಎಂದರು.
ಅ.7ರಿಂದ 13ರವರೆಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಸಂಜೆ 6 ರಿಂದ 9ರವರೆಗೆ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮೈಸೂರು ನಗರದ ಎಲ್ಲಾ ಪ್ರವೇಶದ್ವಾರಗಳಲ್ಲಿ ದೀಪಾಲಂಕಾರ ಮಾಡಲಾಗುವುದು ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಅ.6ರಂದು ಸಂಜೆ 6 ಗಂಟೆಗೆ ದೀಪಾಲಂಕಾರಗಳ ಉದ್ಘಾಟನೆಯಾಗಲಿ. ಅಂದು ಮಾನ್ಯ ಮುಖ್ಯಮಂತ್ರಿಗಳು ಆಗಮಿಸಲಿದ್ದು ದೀಪಾಲಂಕಾರಗಳನ್ನು ವೀಕ್ಷಿಸಲಿದ್ದಾರೆ. ರಾತ್ರಿ 10 ಗಂಟೆಯವರೆಗೆ ದೀಪಾಲಂಕಾರ ಇರಲಿ ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದರು. ಸಭೆಗೆ ಆಗಮಿಸಿದ ಇಂಧನ ಸಚಿವ ಸುನೀಲ್ ಕುಮಾರ್ ಅವರಿಗೆ ಸಚಿವ ಸೋಮಶೇಖರ್ ಅವರು ಧನ್ಯವಾದ ತಿಳಿಸಿದರು. ಸಭೆಯಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೇಳಾಪಟ್ಟಿಯ ಪೋಸ್ಟರ್ ಅನ್ನು ಬಿಡುಗಡೆ ಮಾಡಲಾಯಿತು.
ಸಭೆಯಲ್ಲಿ ಶಾಸಕ ಹರ್ಷವರ್ಧನ್, ಸಂಸದ ಪ್ರತಾಪ್ ಸಿಂಹ, ಮೂಡಾ ಅಧ್ಯಕ್ಷ ರಾಜೀವ್, ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್, ನಗರ ಪೊಲೀಸ್ ಆಯುಕ್ತ ಡಾ.ಚಂದ್ರಗುಪ್ತ, ಜಿಲ್ಲಾ ಪಂಚಾಯತ್ ಸಿಇಒ ಎ.ಎಂ.ಯೋಗೀಶ್, ಸಚಿವರ ವಿಶೇಷ ಕರ್ತವ್ಯಾಧಿಕಾರಿ ದಿನೇಶ್ ಗೂಳಿಗೌಡ ಸೇರಿದಂತೆ ನಾನಾ ಅಧಿಕಾರಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ನಟ ನಿನಾಸಂ ಸತೀಶ್‍ಗೆ ಮಾತೃ ವಿಯೋಗ
ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಆಮಂತ್ರಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಧನ್ಯವಾದ ತಿಳಿಸಿದ್ದಾರೆ.
ಈ ಸಂಬಂಧ ಪತ್ರ ಬರೆದಿರುವ ಎಸ್‍ಎಂಕೆ, ಯದುವಂಶದ ಮಹಾರಾಜರುಗಳು ನಾಡಿನ ಸಾಂಸ್ಕೃತಿಕ ಹಿರಿಮೆಯನ್ನು ವಿಶ್ವಕ್ಕೆ ಪಸರಿಸಲು ಆ ಮೂಲಕ ನಾಡಿನ ಹಿರಿಮೆಯನ್ನು ಎತ್ತಿ ಹಿಡಿಯಲು ಪ್ರಾರಂಭಿಸಿದ ದಸರಾ ಸರಿಸುಮಾರು 400 ವರ್ಷಗಳನ್ನು ಕಳೆದರೂ ತನ್ನ ವೈಭವವನ್ನು ಕಳೆದುಕೊಂಡಿಲ್ಲ. ಇದನ್ನೂ ಓದಿ: ದಸರಾ ಉದ್ಘಾಟನೆಗೆ ಎಸ್‍ಎಂಕೆ ಸರಿಯಾದ ಆಯ್ಕೆ – ಸಿಎಂಗೆ ಪ್ರತಾಪ್ ಸಿಂಹ ಅಭಿನಂದನೆ
ಪ್ರಥಮವಾಗಿ ವಿಜಯನಗರದ ಸಾಮ್ರಾಟ ಕೃಷ್ಣದೇವರಾಯರ ಕಾಲದಲ್ಲಿ ಪ್ರಾರಂಭಗೊಂಡ ದಸರಾ ಶ್ರೀ ರಾಜ ಒಡೆಯರ್‍ರವರ ಕಾಲದಲ್ಲಿ ಮೈಸೂರು ಸಾಮ್ರಾಜ್ಯಕ್ಕೆ ವಿಸ್ತರಿಸಿ ಇಂದಿಗೂ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಅನಾವರಣಗೊಳಿಸುತ್ತಿದೆ. ರಾಜಪ್ರಭುತ್ವದ ನಂತರ ಬಂದ ಪ್ರಜಾ ಸರ್ಕಾರಗಳು ದಸರಾ ಆಚರಣೆಗೆ ಕಿಂಚಿತ್ತೂ ಚ್ಯುತಿ ಬರದ ಹಾಗೆ ಆಚರಿಸುತ್ತ ಬಂದಿರುವುದು ನಾಡಿನ ಹಿರಿಮೆಯನ್ನು ಎತ್ತಿ ಹಿಡಿದಿದೆ. ಇದನ್ನೂ ಓದಿ: ದಸರಾ ಉದ್ಘಾಟನೆಯನ್ನು ರಾಜಕೀಕರಣಗೊಳಿಸುವುದು ಕೆಟ್ಟ ಸಂಪ್ರದಾಯ – ಆಪ್ ವಿರೋಧ
Chief Minister BS Yediyurappa inaugurated Dasara Procession at Mysuru Palace on Tuesday . -KPN ### Dasara Procession in Mysuru
ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‍ರವರ ದೂರ ದೃಷ್ಟಿಯಿಂದ ಪ್ರತಿಷ್ಠಾಪನೆಗೊಂಡ ರೈತಾಪಿ ವರ್ಗವೆ ಆರ್ಥಿಕವಾಗಿರುವ ಮಂಡ್ಯ ಜಿಲ್ಲೆಯಿಂದ ಬಂದ ನಾನು ಈ ಬಾರಿ ದಸರಾ ಉದ್ಘಾಟಿಸುತ್ತಿರುವುದು ನನ್ನ ಬಾಳಿನ ಸುದೈವ. ತಾಯಿ ಚಾಮುಂಡೇಶ್ವರಿ ಮನುಕುಲಕ್ಕೆ ಬಂದಿರುವ ಕೊರೋನಾ ಮಹಾ ಮಾರಿಯಿಂದ ಮುಕ್ತಿಗೊಳಿಸಿ ನಾಡು ತಮ್ಮ ನೇತೃತ್ವದಲ್ಲಿ ಮತ್ತೆ ಅಭಿವೃದ್ಧಿಯೆಡೆಗೆ ಮುನ್ನಡೆಯಲಿ ಎಂದು ಎಸ್.ಎಂ.ಕೃಷ್ಣ ಆಶಿಸಿದ್ದಾರೆ. ಹಾಗೂ ದಸರಾ ಉದ್ಘಾಟನೆಗೆ ಅವಕಾಶ ನೀಡಿದ್ದಕ್ಕೆ ಮುಖ್ಯಮಂತ್ರಿಗಳಿಗೆ ಧನ್ಯವಾದ ತಿಳಿಸಿದ್ದಾರೆ.