Tag: Mysuru Murder

  • ಯುವಬ್ರಿಗೇಡ್‌ ಕಾರ್ಯಕರ್ತನ ಹತ್ಯೆ ಕೇಸ್ – ಸತ್ಯ ಶೋಧನೆಗಿಳಿದಿದ್ದ ಬಿಜೆಪಿಗೆ ಶಾಕ್!

    ಯುವಬ್ರಿಗೇಡ್‌ ಕಾರ್ಯಕರ್ತನ ಹತ್ಯೆ ಕೇಸ್ – ಸತ್ಯ ಶೋಧನೆಗಿಳಿದಿದ್ದ ಬಿಜೆಪಿಗೆ ಶಾಕ್!

    – ಕೊಲೆ ಪ್ರಕರಣದ 4ನೇ ಆರೋಪಿ ನಗರಪಾಲಿಕೆ ಬಿಜೆಪಿ ಸದಸ್ಯೆಯ ಸಹೋದರ ಅನ್ನೋದು ಬಹಿರಂಗ

    ಮೈಸೂರು: ಯುವ ಬ್ರಿಗೇಡ್ ಕಾರ್ಯಕರ್ತನ (Yuva Brigade Activist Murder) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸತ್ಯಶೋಧನೆಗೆ ಇಳಿದಿದ್ದ ಬಿಜೆಪಿಗೆ (BJP) ಆರಂಭದಲ್ಲೇ ಶಾಕ್ ಎದುರಾಗಿದೆ. ಕೊಲೆ ಪ್ರಕರಣದ ನಾಲ್ಕನೇ ಆರೋಪಿಯು ನಗರ ಪಾಲಿಕೆಯ ಬಿಜೆಪಿ ಸದಸ್ಯೆಯೊಬ್ಬರ ಸಹೋದರ ಎಂಬುದು ತಿಳಿದುಬಂದಿದೆ.

    ಹನುಮ ಜಯಂತಿ ಸಂದರ್ಭದಲ್ಲಿ ನಡೆದ ಗಲಾಟೆಯಲ್ಲಿ ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ್ ನಿವಾಸಕ್ಕೆ ಇಂದು ಬಿಜೆಪಿ ತಂಡ ಭೇಟಿ ನೀಡಿತು. ಅಷ್ಟೇ ಅಲ್ಲ, ಸತ್ಯಶೋಧನೆಗಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ತಂಡವೊಂದನ್ನು ರಚಿಸಿತ್ತು. ಇದನ್ನೂ ಓದಿ: ಯುವಬ್ರಿಗೇಡ್ ಕಾರ್ಯಕರ್ತನ ಕೊಲೆ ಪ್ರಕರಣ – 6 ಜನರ ಮೇಲೆ ಎಫ್‌ಐಆರ್, ಇಬ್ಬರು ಅರೆಸ್ಟ್

    ಸತ್ಯ ಶೋಧನೆಗಿಳಿದ ಬಿಜೆಪಿಗೆ ಆರಂಭದಲ್ಲೇ ಶಾಕ್ ಎದುರಾಗಿದೆ. ಪ್ರಕರಣದ ಆರೋಪಿಯೊಬ್ಬ ಮೈಸೂರು ಮಹಾನಗರ ಪಾಲಿಕೆ ಬಿಜೆಪಿ ಸದಸ್ಯೆಯೊಬ್ಬರ ಸಹೋದರ ಎಂಬ ಸತ್ಯ ಬಹಿರಂಗವಾಗಿದೆ. ಪ್ರ‍್ರಕರಣದ ನಾಲ್ಕನೇ ಆರೋಪಿ ಶಂಕರ್ ಅಲಿಯಾಸ್ ತುಪ್ಪಾ ಮೈಸೂರು ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯೆಯ ಸಹೋದರ.

    ಪ್ರಕರಣದ ಎ1 ಆರೋಪಿ ಮಣಿಕಂಠ, ಸಂದೇಶ-ಎ2, ಅನಿಲ್-ಎ3, ಶಂಕರ್ ಅಲಿಯಾಸ್ ತುಪ್ಪಾ-ಎ4, ಮಂಜು-ಎ5, ಹ್ಯಾರಿಸ್-ಎ6 ಆರೋಪಿಗಳಾಗಿದ್ದಾರೆ. ಪ್ರಕರಣದ ಆರೋಪಿಯ ವಿಚಾರ ತಿಳಿದ ಬಿಜೆಪಿಗೆ ಅಡಕತ್ತರಿಯಲ್ಲಿ ಸಿಲುಕಿದಂತಾಗಿದೆ. ಇದೀಗ ಸತ್ಯ ಶೋಧನೆಗಿಳಿದ ಬಿಜೆಪಿ ತಂಡದ ಸದಸ್ಯರು ಮೈಸೂರಿಗೆ ಬರುತ್ತಾರಾ ಎಂಬುದು ಕುತೂಹಲ ಮೂಡಿಸಿದೆ. ಇದನ್ನೂ ಓದಿ: ಪುನೀತ್ ಫೋಟೋ ತೆಗೆಸಿದ್ದೇ ಯುವಬ್ರಿಗೇಡ್ ಕಾರ್ಯಕರ್ತನ ಕೊಲೆಗೆ ಕಾರಣವೇ? – ಮೃತನ ಪತ್ನಿ ಹೇಳಿದ್ದೇನು?

    ವೇಣುಗೋಪಾಲ್ ನಿವಾಸಕ್ಕೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಸಂಸದ ಪ್ರತಾಪ್‌ಸಿಂಹ, ಶಾಸಕ ಶ್ರೀವತ್ಸ, ಮಾಜಿ ಸಚಿವ ಸಿ.ಎನ್. ಅಶ್ವಥ್ ನಾರಾಯಣ್, ಮಾಜಿ ಶಾಸಕರಾದ ಎನ್. ಮಹೇಶ್, ಪ್ರೀತಮ್ ಗೌಡ ಹಾಗೂ ತಂಡದ ಇತರ ಸದಸ್ಯರಾದ ಅರಣ್ಯ ವಸತಿ ಮತ್ತು ವಿಹಾರ ನಿಗಮ ಮಾಜಿ ಅಧ್ಯಕ್ಷ ಅಪ್ಪಣ್ಣ, ಪರಿಷತ್ ಮಾಜಿ ಸದಸ್ಯ ಪ್ರೊ. ಮಲ್ಲಿಕಾರ್ಜುನ, ಬಿಜೆಪಿ ಸದಸ್ಯರಾದ ವೈ.ವಿ. ರವಿಶಂಕರ್, ಮಂಗಳಾ ಸೋಮಶೇಖರ್ ಭೇಟಿ ನೀಡಲಿದ್ದಾರೆ.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರು ಆರೋಪಿಗಳನ್ನು ಬಂಧಿಸಲಾಗಿದೆ. ಸೋಮವಾರ ಪ್ರಕರಣದ A1 ಮತ್ತು A2 ಆರೋಪಿಗಳಾದ ಮಣಿಕಂಠ ಅಲಿಯಾಸ್ ಕೊಳೆ ಮಣಿ, ಸಂದೇಶ್‌ನನ್ನು ಪೊಲೀಸರು ಬಂಧಿಸಿದ್ದರು. ಇಂದು ನಾಲ್ವರನ್ನು ಬಂಧಿಸಿದ್ದಾರೆ. A3 ಅನಿಲ್, A4 ಶಂಕರ್ ಅಲಿಯಾಸ್ ತುಪ್ಪ, A5 ಮಂಜು ಹಾಗೂ A6 ಹ್ಯಾರಿಸ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪ್ರಕರಣದಲ್ಲಿ ಮತ್ತಷ್ಟು ಆರೋಪಿಗಳಿಗಾಗಿ ಬಲೆ ಬೀಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಕೋಪದಲ್ಲಿ ಅಜ್ಜಿ ಕೊಂದು, ಕೊರಿಯನ್ ವೆಬ್ ಸೀರಿಸ್‌ನಂತೆ ಹೆಣ ಸುಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ

    ಕೋಪದಲ್ಲಿ ಅಜ್ಜಿ ಕೊಂದು, ಕೊರಿಯನ್ ವೆಬ್ ಸೀರಿಸ್‌ನಂತೆ ಹೆಣ ಸುಡಲು ಹೋಗಿ ಪೊಲೀಸರಿಗೆ ಸಿಕ್ಕಿಬಿದ್ದ

    ಮೈಸೂರು: ಕೋಪದಿಂದ ತಳ್ಳಿ ಅಜ್ಜಿಯನ್ನು ಕೊಂದ ಮೊಮ್ಮಗ ಕೊರಿಯನ್ ವೆಬ್ ಸೀರಿಸ್ ನೋಡಿ ಹೆಣ ಸುಟ್ಟು ಬಚಾವಾಗಲು ಯತ್ನಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

    ಮೈಸೂರಿನ ಗಾಯತ್ರಿಪುರಂ ನಿವಾಸಿ ಸುಲೋಚನ (75) ಮೃತ ಅಜ್ಜಿ. ಸುಪ್ರೀತ್ (23) ಅಜ್ಜಿ ಕೊಂದ ಮೊಮ್ಮಗ.

    ಹೆಣವನ್ನು ಪ್ಯಾಕ್ ಮಾಡಿ ಕಾರಿನಲ್ಲಿಟ್ಟುಕೊಂಡು ದಿನವಿಡೀ ಓಡಾಡಿದ್ದಾನೆ. ಅಜ್ಜಿ ಹೆಣ ಕಾರಿನಲ್ಲೇ ಇಟ್ಟುಕೊಂಡು ಮಿಸ್ಸಿಂಗ್ ಕಂಪ್ಲೆಂಟ್ ನೀಡಿದ್ದ. ನಂತರ ಮಾತಿನ ವರಸೆ ಬದಲಿಸಿ ಕಡೆಗೆ ಪೊಲೀಸರ ಮುಂದೆ ಸಿಕ್ಕಿಬಿದ್ದಿದ್ದಾನೆ. ಕೆಆರ್‌ಎಸ್ ಹಿನ್ನೀರಿನಲ್ಲಿ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಸಿಕ್ಕ ಪ್ರಕರಣ ಭೇದಿಸಿದ ಮೈಸೂರು ಪೊಲೀಸರಿಗೆ, ಸ್ವಂತ ಅಜ್ಜಿಯನ್ನು ಮೊಮ್ಮಗನೇ ಹತ್ಯೆ ಮಾಡಿರುವ ಬೆಚ್ಚಿಬೀಳಿಸುವ ಸಂಗತಿ ಬೆಳಕಿಗೆ ಬಂದಿದೆ.

    ಗುರುತು ಸಿಗದಂತೆ ಸುಟ್ಟ ಸ್ಥಿತಿಯಲ್ಲಿ ಮಹಿಳೆಯ ಶವ ಪತ್ತೆಯಾಗಿತ್ತು. ಮೇ 28 ರಂದು ಮನೆಯಲ್ಲಿ ಹೊಡೆದು ನಂತರ ದಿಂಬಿನಿಂದ ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಯುವಕ. ಮೃತದೇಹದ ತಲೆ ಕೂದಲು ಹಾಗೂ ಕನ್ನಡಕದಿಂದ ಮೈಸೂರು ದಕ್ಷಿಣ ಠಾಣೆ ಪೊಲೀಸರು ತನಿಖೆ ನಡೆಸಿದ್ದರು.

    ನಜರ್‌ಬಾದ್ ಠಾಣೆಯಲ್ಲಿ ದಾಖಲಾಗಿದ್ದ ಮಿಸ್ಸಿಂಗ್ ಕಂಪ್ಲೆಂಟ್ ಜೊತೆಗೆ ಸಾಮ್ಯತೆ ಕಂಡ ಪೊಲೀಸರು ಆರೋಪಿ ಸುಪ್ರೀತ್‌ನನ್ನು ವಿಚಾರಣೆಗೆ ಒಳಪಡಿಸಿದಾಗ, ಅಜ್ಜಿ ಸುಲೋಚನ ಬೈಯುತ್ತಿದ್ದರು. ಹಾಗಾಗಿ ಹತ್ಯೆ ಮಾಡಿದೆ ಎಂದು ಹೇಳಿಕೆ ನೀಡಿದ್ದಾನೆ. ಅಜ್ಜಿಯನ್ನು ಹತ್ಯೆ ಮಾಡಿದ ಬಳಿಕ ಶವವನ್ನು ಪ್ಲಾಸ್ಟಿಕ್ ಚೀಲದಲ್ಲಿ ಸುತ್ತಿ, ರಟ್ಟಿನ ಬಾಕ್ಸ್‌ನಲ್ಲಿ ಹಾಕಿದ್ದ. ಕಾರಿನಲ್ಲಿ ಕೆಆರ್‌ಎಸ್ ಹಿನ್ನೀರು ಪ್ರದೇಶಕ್ಕೆ ಕೊಂಡೊಯ್ದು ಗುಂಡಿಯಲ್ಲಿ ಹಾಕಿ ಶವವನ್ನು ಸುಟ್ಟು ಹಾಕಿದ್ದಾನೆ. ಈ ಸಂಬಂಧ ಮೈಸೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ರಚಿಸಿದ್ದ ತನಿಖಾ ತಂಡ ಒಂದು ವಾರದಲ್ಲಿ ಪ್ರಕರಣ ಭೇದಿಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ.