Tag: Mysuru Police

  • ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್

    ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಬ್ರೇಕ್

    ಮೈಸೂರು: ಮಹಿಷ ದಸರಾ, ಚಲೋ ಚಾಮುಂಡಿ ಬೆಟ್ಟ ಕಾರ್ಯಕ್ರಮಗಳಿಗೆ ಪೊಲೀಸ್‌ ಇಲಾಖೆ ಬ್ರೇಕ್‌ ಹಾಕಿದೆ. ಎರಡು ಕಾರ್ಯಕ್ರಮಗಳಿಗೂ ಇಲಾಖೆ ಅನುಮತಿ ನಿರಾಕರಿಸಿದೆ.

    ಇದೇ ತಿಂಗಳ 13 ರಂದು ಮಹಿಷ ದಸರಾ ಆಚರಣೆಗೆ ಮಹಿಷ ದಸರಾ ಆಚರಣಾ ಸಮಿತಿ ಕರೆ ಕೊಟ್ಟಿತ್ತು. ಚಾಮುಂಡಿ ಬೆಟ್ಟಕ್ಕೆ ತೆರಳಿ ಮಹಿಷನ ಪ್ರತಿಮೆಗೆ ಪುಷ್ಪನಮನ ಸಲ್ಲಿಸಿ ಮಹಿಷ ದಸರಾಗೆ ಚಾಲನೆ ನೀಡಲು ನಿರ್ಧರಿಸಿತ್ತು. ಇದನ್ನೂ ಓದಿ: ಮಹಿಷ ದಸರಾ ಆಚರಣೆಗೆ 50 ವರ್ಷ; ಚರ್ಚೆ ಹುಟ್ಟುಹಾಕಿದ ಆಹ್ವಾನ ಪತ್ರಿಕೆ

    ಮಹಿಷ ದಸರಾ ವಿರುದ್ಧ ಸಂಸದ ಪ್ರತಾಪ್‌ ಸಿಂಹ ಕಿಡಿಕಾರಿದ್ದರು. ಮಹಿಷ ದಸರಾ ಆಚರಣೆ ವಿರೋಧಿಸಿ ಅದೇ ದಿನ (ಅ.13) ಚಲೋ ಚಾಮುಂಡಿ ಬೆಟ್ಟ ಹಮ್ಮಿಕೊಳ್ಳಲಾಗಿದೆ. ಪ್ರತಾಪ್‌ ಸಿಂಹ ನೇತೃತ್ವದಲ್ಲಿ ಬಿಜೆಪಿ ಮೈಸೂರಿನಲ್ಲಿ ಈ ಚಲೋ ಚಾಮುಂಡಿ ಬೆಟ್ಟ ಕರೆ ನೀಡಿತ್ತು.

    ಎರಡು ಕಾರ್ಯಕ್ರಮದ ಆಯೋಜಕರು ಪೊಲೀಸ್ ಅನುಮತಿ ಕೇಳಿದ್ದರು. ಮೈಸೂರು ನಗರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎರಡೂ ಕಾರ್ಯಕ್ರಮಗಳಿಗೂ ಪೊಲೀಸ್‌ ಇಲಾಖೆ ಅನುಮತಿ ನಿರಾಕರಿಸಿದೆ. ಇದನ್ನೂ ಓದಿ: ವೀರಪ್ಪನ್‌ ದೇವರು, ಮಲೆ ಮಹದೇಶ್ವರ ದೆವ್ವ ಅಂತಾರೆ: ಪ್ರತಾಪ್ ಸಿಂಹ ಕಿಡಿ

    ಎರಡೂ ಕಾರ್ಯಕ್ರಮಗಳಿಗೆ ಅನುಮತಿ ನೀಡಿಲ್ಲ. ದಸರಾ ಸಂದರ್ಭದಲ್ಲಿ ಮೈಸೂರು ನಗರದ ಶಾಂತಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಕಾರ್ಯಕ್ರಮಗಳಿಗೆ ಅನುಮತಿ ನಿರಾಕರಿಸಲಾಗಿದೆ ಎಂದು ಮೈಸೂರು ನಗರದ ಪೊಲೀಸ್ ಅಯುಕ್ತ ರಮೇಶ್‌ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರೀತಿಸುವಂತೆ ಪೀಡಿಸ್ತಿದ್ದ ಯುವಕ – ಬೇಸತ್ತು ಯುವತಿ ಆತ್ಮಹತ್ಯೆ

    ಪ್ರೀತಿಸುವಂತೆ ಪೀಡಿಸ್ತಿದ್ದ ಯುವಕ – ಬೇಸತ್ತು ಯುವತಿ ಆತ್ಮಹತ್ಯೆ

    ಮೈಸೂರು: ಪ್ರೀತಿಸುವಂತೆ (Love) ಹಿಂದೆ ಬಿದ್ದು ಕಿರುಕುಳ ನೀಡುತ್ತಿದ್ದ ಯುವಕನಿಂದ ಬೇಸತ್ತ ಯುವತಿ ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಇಲವಾಲ ಪೊಲೀಸ್ ಠಾಣಾ (Ilavala Police Station) ವ್ಯಾಪ್ತಿಯ ಗಣಗರಹುಂಡಿ ಗ್ರಾಮದಲ್ಲಿ ನಡೆದಿದೆ.

    ಯುವತಿ ಹರ್ಷಿತಾ (21) ಮೃತ ದುರ್ದೈವಿ. ಅದೇ ಗ್ರಾಮದಲ್ಲಿ ವಾಸವಿದ್ದ ಯುವಕ ಶಿವು ಕಿರುಕುಳಕ್ಕೆ ಬೇಸತ್ತು ಹರ್ಷಿತಾ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಹರ್ಷಿತಾ ಪೋಷಕರು ಆರೋಪಿಸಿದ್ದಾರೆ. ಇದನ್ನೂ ಓದಿ: ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಮದುವೆ ನಿರಾಕರಣೆ- ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿ ದುರ್ಮರಣ

    ಪಿಯುಸಿ ಓದಿದ್ದ ಹರ್ಷಿತಾ ಕಂಪ್ಯೂಟರ್ ಕ್ಲಾಸ್‌ಗೆ ಸೇರಿಕೊಂಡಿದ್ದಳು. ಹರ್ಷಿತಾಳನ್ನು ಲವ್ ಮಾಡುತ್ತಿದ್ದ ಶಿವು ಹಿಂದೆ ಬಿದ್ದು ಪ್ರೀತಿಸುವಂತೆ ಪೀಡಿಸುತ್ತಿದ್ದ. ಶಿವು ಮನವಿಯನ್ನು ಹರ್ಷಿತಾ ತಿರಸ್ಕರಿಸುತ್ತಿದ್ದಳು. ಇದನ್ನೂ ಓದಿ: Odisha Train Tragedy: ದುರಂತಕ್ಕೆ ಸಿಕ್ತು ಅಸಲಿ ಕಾರಣ – ಸುರಕ್ಷತೆಗೆ ಹೊಸ ಟೆಕ್ನಾಲಜಿ ಬಳಸುವ ಪ್ರಯತ್ನ

    ಈ ಮಧ್ಯೆ ಮನೆಯವರು ಹರ್ಷಿತಾಗೆ ಮದುವೆ (Marriage) ನಿಶ್ಚಯ ಮಾಡಿ ಆಷಾಢ ನಂತರ ಮದುವೆ ದಿನಾಂಕ ಗೊತ್ತುಪಡಿಸಲು ನಿರ್ಧರಿಸಿದ್ದರು. ಈ ವಿಷಯ ತಿಳಿದ ನಂತರ ತನ್ನನ್ನು ಮದುವೆಯಾಗುವಂತೆ ಇನ್ನಷ್ಟು ಕಿರುಕುಳ ನೀಡಲು ಪ್ರಾರಂಭಿಸಿದ್ದ. ಶಿವು ಕಿರುಕುಳಕ್ಕೆ ಬೇಸತ್ತ ಹರ್ಷಿತ ಹುಳುಗಳನ್ನ ಸ್ವಚ್ಛಗೊಳಿಸಲು ಇಟ್ಟಿದ್ದ ಮಾತ್ರೆಗಳನ್ನ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ.

    ಕೂಡಲೇ ಹರ್ಷಿತಾಳನ್ನ ಕೆ.ಆರ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಚಿಕಿತ್ಸೆ ಫಲಕಾರಿಯಾಗದೇ ಹರ್ಷಿತಾ ಮೃತಪಟ್ಟಿದ್ದಾಳೆ. ಮಗಳ ಸಾವಿಗೆ ಶಿವು ಕಾರಣ ಎಂದು ಹರ್ಷಿತಾ ತಂದೆ ವೇಣುಗೋಪಾಲ್ ಇಲವಾಲ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಆರೋಪಿ ಶಿವುಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಹಾಯಧನ ಮಂಜೂರು ಮಾಡಲು 10 ಸಾವಿರ ಲಂಚ – ಮೂವರು ಲೋಕಾಯುಕ್ತ ಬಲೆಗೆ

    ಸಹಾಯಧನ ಮಂಜೂರು ಮಾಡಲು 10 ಸಾವಿರ ಲಂಚ – ಮೂವರು ಲೋಕಾಯುಕ್ತ ಬಲೆಗೆ

    ಮಡಿಕೇರಿ: ಸಹಾಯಧನ ಮಂಜೂರು ಮಾಡಲು 10 ಸಾವಿರ ರೂಪಾಯಿ ಲಂಚ ಪಡೆಯುತ್ತಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ (Ambedkar Development Corporation) ಮೂವರನ್ನು ಲೋಕಾಯುಕ್ತ ಪೊಲೀಸರು (Lokayukta Police) ಬಂಧಿಸಿದ್ದಾರೆ.

    ಮಡಿಕೇರಿ (Madikeri) ನಗರದ ಡಾ.ಬಿ.ಆರ್ ಅಂಬೇಡ್ಕರ್ ಅಭಿವೃದ್ಧಿ ನಿಗಮದ (Ambedkar Development Corporation) ಕಚೇರಿಯಲ್ಲೇ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಜಿಲ್ಲಾ ವ್ಯವಸ್ಥಾಪಕ ಚಂದ್ರಶೇಖರ್, ಕಚೇರಿ ವ್ಯವಸ್ಥಾಪಕಿ ಚೆಲುವಾಂಬ ಹಾಗೂ ಚಾಲಕ ತಿರುಮಲ ಮೂವರನ್ನ ಬಂಧಿಸಲಾಗಿದೆ. ಇದನ್ನೂ ಓದಿ: ಹೆಚ್‌ಡಿಕೆ ಬ್ರಾಹ್ಮಣ ವಿರೋಧಿ ಹೇಳಿಕೆ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್ ಪಾಲಿಗೆ ಬಿಸಿ ತುಪ್ಪ?

    ಮಹಿಳೆಯೊಬ್ಬರು ಕೋಳಿ ಫಾರಂ ನಡೆಸಲು ಸ್ವಉದ್ಯೋಗ ಯೋಜನೆಯಡಿ ಸಾಲ ಪಡೆದಿದ್ದರು. ಮೊದಲ ಕಂತಿನ ಸಹಾಯಧನ ಪಡೆದಿದ್ದರು. 2ನೇ ಕಂತಿನ ಹಣ ಮಂಜೂರು ಮಾಡಲು 10 ಸಾವಿರ ಕೊಡಬೇಕು ಎಂದು ಕೇಳಿದ್ದರು. ಬಳಿಕ ಮಹಿಳೆ ದೂರಿನ ಮೇರೆಗೆ ಕಾರ್ಯಾಚರಣೆ ನಡೆಸಿ ಮೂವರನ್ನೂ ಬಂಧಿಸಲಾಗಿದೆ ಎಂದು ಲೋಕಾಯುಕ್ತ ಮೈಸೂರು (Mysuru) ವಿಭಾಗದ ಎಸ್.ಪಿ.ಸುರೇಶ್ ಬಾಬು ತಿಳಿಸಿದ್ದಾರೆ. ಇದನ್ನೂ ಓದಿ: ಬೆಳಗಾವಿ ಪಾಲಿಕೆ ಮೇಯರ್ ಆಗಿ ಶೋಭಾ ಅವಿರೋಧ ಆಯ್ಕೆ, ರೇಷ್ಮಾ ಉಪಮೇಯರ್

    ಡಿವೈಎಸ್‌ಪಿ ಎಂ.ಎಸ್ ಪವನಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಇನ್‌ಸ್ಪೆಕ್ಟರ್‌ಗಳಾದ ಲೋಕೇಶ್, ರೂಪಶ್ರೀ ಭಾಗವಹಿಸಿದ್ದರು. ಇದು ಒಂದು ತಿಂಗಳಲ್ಲಿ ಮಡಿಕೇರಿಯಲ್ಲಿ ನಡೆದ 3ನೇ ಲೋಕಾಯುಕ್ತ ದಾಳಿಯಾಗಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಎಲ್ಲರ ಜಾತಕ ನನ್ನ ಬಳಿ ಇದೆ ಹುಷಾರ್ – ಪೊಲೀಸರಿಗೇ ಅವಾಜ್ ಬಿಟ್ಟ ಸ್ಯಾಂಟ್ರೋ ರವಿ..!

    ಎಲ್ಲರ ಜಾತಕ ನನ್ನ ಬಳಿ ಇದೆ ಹುಷಾರ್ – ಪೊಲೀಸರಿಗೇ ಅವಾಜ್ ಬಿಟ್ಟ ಸ್ಯಾಂಟ್ರೋ ರವಿ..!

    ಬೆಂಗಳೂರು: ರಾಜ್ಯದಲ್ಲಿ ಭಾರೀ ಸಂಚಲನ ಸೃಷ್ಟಿಸಿ ತಲೆಮರೆಸಿಕೊಂಡಿದ್ದ ಕ್ರಿಮಿನಲ್ ಪ್ರಕರಣಗಳ (Criminal Case) ಆರೋಪಿ ಸ್ಯಾಂಟ್ರೋ ರವಿ (Santro Ravi) ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ. ತನ್ನ ವಿರುದ್ಧ ಎಫ್‌ಐಆರ್ (FIR) ದಾಖಲಾಗ್ತಿದ್ದಂತೆ ಕಾಲ್ಕಿತ್ತಿದ್ದ ಸ್ಯಾಂಟ್ರೋ ರವಿ, ಸಿಕ್ಕಿಬಿದ್ದ ಬಳಿಕ ಪೊಲೀಸರಿಗೆ (Mysuru Police) ಹೇಳಿದ ಒಂದೊಂದೇ ವಿಚಾರಗಳು ರಿವೀಲ್ ಆಗ್ತಿವೆ.

    ಅತ್ಯಾಚಾರ, ಜಾತಿ ನಿಂದನೆ, ವೇಶ್ಯಾವಾಟಿಕೆ ದಂಧೆ ಹಾಗೂ ವರ್ಗಾವಣೆ ಕೇಸ್‌ನಲ್ಲಿ ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿಯನ್ನ ತಡರಾತ್ರಿ ಮೈಸೂರಿಗೆ ಕರೆದೊಯ್ದ ಪೊಲೀಸರು (Police) ಆತನ ವಿರುದ್ಧ ದಾಖಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ತೀವ್ರ ವಿಚಾರಣೆಗೊಳಪಡಿಸಿದ್ದಾರೆ. ಇದನ್ನೂ ಓದಿ: ಎರಡು ವಾರಗಳಲ್ಲಿ 2 ಬಾರಿ ಕೊರೊನಾ ಸೋಂಕಿಗೆ ತುತ್ತಾಗಿ ಆಸ್ಪತ್ರೆ ಸೇರಿದ ಲಲಿತ್ ಮೋದಿ

    ಎಫ್‌ಐಆರ್ ದಾಖಲಾಗ್ತಿದ್ದಂತೆ ಎಲ್ಲ ನನಗೆ ಗೊತ್ತಿರೋ ಪೊಲೀಸರೇ ಏನೂ ಮಾಡೋದಿಲ್ಲ ಅಂದುಕೊಂಡಿದ್ದ ರವಿ, ಕೇಸ್ ಗಂಭೀರತೆ ಪಡೆಯುತ್ತಿದ್ದಂತೆ ತಾನು ಬಳಸ್ತಿದ್ದ ಮೊಬೈಲ್ ಗಳಲ್ಲಿನ ಸಿಮ್ ಹಾಗೂ ತಲೆಯಲ್ಲಿದ್ದ ವಿಗ್ ಕಿತ್ತು ಮನೆಯಲ್ಲೆ ಬಿಸಾಡಿ ಕೊಡಗಿನತ್ತ ಕಾಲ್ಕಿತ್ತಿದ್ದ. ಅಲ್ಲಿನ ಹೋಂ ಸ್ಟೇ ಯಲ್ಲಿ ಎರಡು ದಿನ ಕಾಲ ಕಳೆದಿದ್ದ. ಹಳೆ ಫೋನ್ ನಿಂದ ಕಾಪಿ ಮಾಡಿಕೊಂಡಿದ್ದ ಅತ್ಯಾಪ್ತರಿಗೆ ವಾಟ್ಸಾಪ್ ಕಾಲ್ ಗಳ ಮೂಲಕ ಸಂಪರ್ಕದಲ್ಲಿದ್ದು, ಹೆಬ್ರಿ, ಕೇರಳ, ಪುಣೆ, ಗುಜರಾತ್ ಸುತ್ತಾಡಿದ್ದ ಅನ್ನೋ ಮಾಹಿತಿ ಸಿಕ್ಕಿದೆ.

    ಸತತ ಕಾರ್ಯಾಚರಣೆ ಮೂಲಕ ರವಿಯನ್ನ ಬಂಧಿಸಿ ಕರೆತಂದ ಪೊಲೀಸರಿಗೆ ಮೈಸೂರು ತಲುಪೋವರೆಗೂ ತುಟುಕ್ ಪಿಟಿಕ್ ಅನ್ನದ ರವಿ, ಬಳಿಕ ತನ್ನ ಬಾಲ ಬಿಚ್ಚಲು ಶುರು ಮಾಡಿದ್ದಾನೆ. ಇದನ್ನೂ ಓದಿ: ಗಂಟೆಗೊಮ್ಮೆ ಇನ್ಸುಲಿನ್ ತಗೋತಿದ್ದಾನೆ – ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಮಾಹಿತಿ ನೀಡಿದ ADGP

    ಮೈಸೂರು ತಲುಪುತ್ತಿದ್ದಂತೆ, “ಎಲ್ಲರ ಜಾತಕ ನನ್ನ ಕೈಯಲ್ಲಿದೆ ಹುಷಾರ್. ನನಗೆ ಗೊತ್ತು ಏನ್ ಮಾಡ್ಬೇಕು ಅಂತ” ಎಂದು ಅವಾಜ್ ಬಿಟ್ಟಿದ್ದಾನಂತೆ. ಅದೇನ್ ಜಾತಕ ಇಟ್ಕೊಂಡಿದ್ದಾನೊ ಸ್ಯಾಂಟ್ರೋ ರವಿ ಹೊರಗೆ ಬಿಡಬೇಕು. ಸದ್ಯ ಆತನ ಮಾತಿನಿಂದ ಸೂಕ್ಷ್ಮ ತನಿಖೆಗಿಳಿದ ಪೊಲೀಸರು ಆತನ ಮನೆಯಲ್ಲಿ ಸಿಕ್ಕ ಎರಡು ಫೋನ್ ಗಳ ಪರಿಶೀಲನೆ ನಡೆಸಿ ಮಾಹಿತಿಯನ್ನ ಎಫ್‌ಎಸ್‌ಎಲ್ ಗೆ ರವಾನಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಗಂಟೆಗೊಮ್ಮೆ ಇನ್ಸುಲಿನ್ ತಗೋತಿದ್ದಾನೆ – ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಮಾಹಿತಿ ನೀಡಿದ ADGP

    ಗಂಟೆಗೊಮ್ಮೆ ಇನ್ಸುಲಿನ್ ತಗೋತಿದ್ದಾನೆ – ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಮಾಹಿತಿ ನೀಡಿದ ADGP

    ಮೈಸೂರು: ಕ್ರಿಮಿನಲ್ ಆರೋಪಿ ಸ್ಯಾಂಟ್ರೋ ರವಿಯನ್ನು (Santro Ravi) ರಾಜ್ಯಕ್ಕೆ ಕರೆತಂದಿರುವ ಪೊಲೀಸರು ಶನಿವಾರ ಪ್ರಾಥಮಿಕ ವಿಚಾರಣೆ ನಡೆಸಿದ್ದಾರೆ. ಎಸಿಪಿ ಶಿವಶಂಕರ್ ವಿಜಯನಗರ ಪೊಲೀಸ್ ಠಾಣೆಯಲ್ಲಿ (VijayaNagara Police Station) ಪ್ರಾಥಮಿಕ ತನಿಖೆ ನಡೆಸಿದ್ದಾರೆ.

    ಕಳೆದ ಎರಡು ದಿನಗಳಿಂದ ಮೈಸೂರಿನಲ್ಲೇ ಉಳಿದಿರುವ ಎಡಿಜಿಪಿ (ADGP) ಅಲೋಕ್ ಕುಮಾರ್ (Alok Kumar) ಶನಿವಾರ ವಿಜಯನಗರ ಪೊಲೀಸ್ ಠಾಣೆಗೆ ಆಗಮಿಸಿ ತನಿಖಾಧಿಖಾರಿಗಳಿಂದ ಮಾಹಿತಿ ಪಡೆದಿದ್ದಾರೆ. ಬಳಿಕ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಮುಂದಾಗಿದ್ದಾರೆ. 

    ಪ್ರಾಥಮಿಕ ಮಾಹಿತಿ ಪಡೆದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ವಿಜಯನಗರ ಪೊಲೀಸ್ ಠಾಣೆಯಲ್ಲಿ ದಾಖಲಾದ ಕೇಸ್ ಬಗ್ಗೆ ಮಾತ್ರ ಈಗ ವಿಚಾರಣೆ ನಡೆಯುತ್ತಿದೆ. ಬೇರೆ ಯಾವುದೇ ವಿಚಾರಗಳ ಬಗ್ಗೆಯೂ ಆರೋಪಿಯನ್ನ ನಾವು ಪ್ರಶ್ನಿಸಿಲ್ಲ ಎಂದು ಹೇಳಿದ್ದಾರೆ. ಇದನ್ನೂ ಓದಿ: 15 ಸಿಮ್‌ ಕಾರ್ಡ್‌ ಬದಲಾಯಿಸಿ, ವಿಗ್‌ ತೆಗೆದು, ಮೀಸೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ

    ನಾವು ಪೊಲೀಸ್ ಕಸ್ಟಡಿಗೆ ನೀಡುವಂತೆ ನ್ಯಾಯಾಧೀಶರನ್ನ ಕೇಳ್ತೀವಿ. ಪೊಲೀಸ್ ಕಸ್ಟಡಿಯಲ್ಲಿ ಹೆಚ್ಚಿನ ವಿಚಾರಣೆ ನಡೆಸುತ್ತೇವೆ. ಸ್ಯಾಂಟ್ರೋ ರವಿ 11 ದಿನ ಎಲ್ಲೆಲ್ಲಿ ಓಡಾಡಿದ್ದ? ಯಾರು-ಯಾರು ಸಹಾಯ ಮಾಡಿದ್ದರು? ಇದರ ಬಗ್ಗೆ ಆರಂಭಿಕ ಮಾಹಿತಿ ಪಡೆಯುತ್ತಿದ್ದೇವೆ. ಸ್ಯಾಂಟ್ರೋ ರವಿ ವಿಚಾರಣೆಗೆ ಸ್ಪಂದಿಸುತ್ತಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ

    ಇದೇ ವೇಳೆ ಸ್ಯಾಂಟ್ರೋ ರವಿ ಕಾಯಿಲೆ ಬಗ್ಗೆ ಪ್ರತಿಕ್ರಿಯಿಸಿ, ಸ್ಯಾಂಟ್ರೋ ರವಿಗೆ ಮಧುಮೇಹ (Diabetes) ಕಾಯಿಲೆಯಿದೆ. ಗಂಟೆಗೊಮ್ಮೆ ಇನ್ಸುಲಿನ್ ಪಡೆದುಕೊಳ್ಳುತ್ತಿದ್ದಾನೆ. ಸೂಕ್ತ ಔಷಧಿ ವ್ಯವಸ್ಥೆ ಮಾಡಲು ಸೂಚಿಸಿದ್ದೇನೆ. ಅವನಿಗೆ ಡಯಾಬಿಟಿಕ್ ಬಿಟ್ಟರೆ ಅಂತಹ ಸಮಸ್ಯೆ ಇಂದಂತೆ ಕಾಣ್ತಿಲ್ಲ. ಸ್ಯಾಂಟ್ರೋ ರವಿ ಸೇರಿದಂತೆ ಇನ್ನೂ ನಾಲ್ವರ ವಿಚಾರಣೆ ನಡೆಸುತ್ತಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.

    ಸ್ಯಾಂಟ್ರೋ ರವಿ ಬಂಧಿಸಿದ್ದು ಹೇಗೆ?
    4 ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ 11 ತಂಡಗಳಾಗಿ ಪೊಲೀಸರು ಸ್ಯಾಂಟ್ರೋಗಾಗಿ ಹುಡುಕಾಟ ನಡೆಸಿದ್ದರು. ಆತ ಪದೇ ಪದೇ ಸಿಮ್ ಕಾರ್ಡ್ಗಳನ್ನು ಬದಲಿಸುತ್ತಿದ್ದ. ಒಮ್ಮೆ ಬಳಸಿದ ಸಿಮ್ ಅನ್ನು ಆತ ಮತ್ತೊಮ್ಮೆ ಬಳಸುತ್ತಿರಲಿಲ್ಲ. ಅಷ್ಟೇ ಅಲ್ಲದೇ ಆನ್‌ಲೈನ್ ಖಾತೆಯ ಮೂಲಕ ಎಲ್ಲಿಯೂ ವ್ಯವಹಾರ ನಡೆಸಿರಲಿಲ್ಲ. ಇದರಿಂದ ಪೊಲೀಸರಿಗೆ ಆತನನ್ನು ಪತ್ತೆಹಚ್ಚುವುದು ಸವಾಲಾಗಿತ್ತು. ಗುರುವಾರ ರಾತ್ರಿ ಗುಜರಾತ್‌ನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ರವಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ಶುಕ್ರವಾರ ಮಧ್ಯಾಹ್ನ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಐಪಿಎಸ್ ತಂಡಗಳ ನೇತೃತ್ವದಲ್ಲಿ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿ, ಮೈಸೂರಿಗೆ ಕರೆತಂದಿದ್ದಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • 15 ಸಿಮ್‌ ಕಾರ್ಡ್‌ ಬದಲಾಯಿಸಿ,  ವಿಗ್‌ ತೆಗೆದು, ಮೀಸೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ

    15 ಸಿಮ್‌ ಕಾರ್ಡ್‌ ಬದಲಾಯಿಸಿ, ವಿಗ್‌ ತೆಗೆದು, ಮೀಸೆ ಬೋಳಿಸಿದ್ದ ಸ್ಯಾಟ್ರೋ ರವಿ ಕೊನೆಗೂ ಸಿಕ್ಕಿಬಿದ್ದ

    ಬೆಂಗಳೂರು: ವರ್ಗಾವಣೆ ದಂಧೆಯ ಕಿಂಗ್‌ಪಿನ್, ವೇಶ್ಯಾವಾಟಿಕೆ ದಂಧೆಯ ಮಾಸ್ಟರ್ ಸ್ಯಾಂಟ್ರೋ ರವಿ (Santro Ravi) ಕೊನೆಗೂ ಗುಜರಾತ್‌ನಲ್ಲಿ (Gujarat) ಮೈಸೂರು ಪೊಲೀಸರ (Mysuru Police) ಕೈಗೆ ಸಿಕ್ಕಿಬಿದ್ದಿದ್ದಾನೆ. ಈತನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದ ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಲು ರವಿ ಬರೋಬ್ಬರಿ 15 ಸಿಮ್ ಕಾರ್ಡ್‌ಗಳನ್ನು ಬದಲಿಸಿದ್ದ ಎಂದು ಮೂಲಗಳು ಪಬ್ಲಿಕ್ ಟಿವಿಗೆ ತಿಳಿಸಿವೆ.

    ವರ್ಗಾವಣೆ ದಂಧೆ, ವೇಶ್ಯಾವಾಟಿಕೆಗಳಂತಹ ಹಲವು ಆರೋಪಗಳ ಮೇಲೆ ಸ್ಯಾಂಟ್ರೋ ರವಿ ವಿರುದ್ಧ ಜನವರಿ 4 ರಂದು ಪ್ರಕರಣ ದಾಖಲಾಗಿತ್ತು. ಸಣ್ಣ ಸುಳಿವನ್ನೂ ನೀಡದೇ ರಾಜ್ಯ ಬಿಟ್ಟಿದ್ದ ಸ್ಯಾಂಟ್ರೋ ಹುಡುಕಾಟ ಪೊಲೀಸರಿಗೂ ಸವಾಲಾಗಿತ್ತು. ಸುಮಾರು 7 ರಾಜ್ಯಗಳಲ್ಲಿ ಪೊಲೀಸರು ಆತನಿಗಾಗಿ ಹುಡುಕಾಟ ನಡೆಸಿದ್ದು, ಕೊನೆಗೂ 10 ದಿನಗಳ ನಂತರ ಶುಕ್ರವಾರ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ.

    4 ಐಪಿಎಸ್ ಅಧಿಕಾರಿಗಳ ನೇತೃತ್ವದಲ್ಲಿ 11 ಟೀಂಗಳಾಗಿ ಪೊಲೀಸರು ಸ್ಯಾಂಟ್ರೋಗಾಗಿ ಹುಡುಕಾಟ ನಡೆಸಿದ್ದಾರೆ. ಆತ ಪದೇ ಪದೇ ಸಿಮ್ ಕಾರ್ಡ್‌ಗಳನ್ನು ಬದಲಿಸುತ್ತಿದ್ದ. ಒಮ್ಮೆ ಬಳಸಿದ ಸಿಮ್ ಅನ್ನು ಆತ ಮತ್ತೊಮ್ಮೆ ಬಳಸುತ್ತಿರಲಿಲ್ಲ. ಅಷ್ಟೇ ಅಲ್ಲದೇ ಆನ್‌ಲೈನ್ ಖಾತೆಯ ಮೂಲಕ ಎಲ್ಲಿಯೂ ವ್ಯವಹಾರ ನಡೆಸಿರಲಿಲ್ಲ. ಇದರಿಂದ ಪೊಲೀಸರಿಗೆ ಆತನನ್ನು ಪತ್ತೆಹಚ್ಚುವುದು ಸವಾಲಾಗಿತ್ತು.

    ಗುರುವಾರ ರಾತ್ರಿ ಗುಜರಾತ್‌ನ ಪ್ರತಿಷ್ಠಿತ ಹೋಟೆಲ್ ಒಂದರಲ್ಲಿ ರವಿ ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಪೊಲೀಸರ ತಂಡ ಶುಕ್ರವಾರ ಮಧ್ಯಾಹ್ನ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಬ್ಬರು ಐಪಿಎಸ್ ತಂಡಗಳ ನೇತೃತ್ವದಲ್ಲಿ ಸ್ಯಾಂಟ್ರೋ ರವಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ:  ತಲೆಮರೆಸಿಕೊಂಡಿದ್ದ ಸ್ಯಾಂಟ್ರೋ ರವಿ ಗುಜರಾತ್‌ನಲ್ಲಿ ಬಂಧನ

    ರವಿ ಈ ಹಿಂದೆ ತನ್ನ ಗ್ರಾಹಕರಾಗಿದ್ದವರ ಬಳಿ ಆಶ್ರಯ ಪಡೆದಿದ್ದ. ಆತನಿಗೆ ಪೊಲೀಸ್ ಇಲಾಖೆಯ ಆಳ ಅಗಲದ ಅರಿವಿತ್ತು. ಹೀಗಾಗಿ ಪೊಲೀಸರು ಚಾಪೆ ಕೆಳಗೆ ತೂರಿದರೆ ಆತ ರಂಗೋಲಿ ಕೆಳಗೆ ತೂರುತ್ತಿದ್ದ. ರಾಜ್ಯ ಬಿಟ್ಟವನು ಸೀದಾ ಬಾಂಬೆ ಸೇರಿದ್ದ. ಆ ಬಳಿಕ ಬಾಂಬೆ ದಾಟಿ ಗುಜರಾತ್‌ಗೆ ಎಂಟ್ರಿ ಕೊಟ್ಟಿದ್ದ. ರವಿ ಬಂಧನಕ್ಕಾಗಿ ಪೊಲೀಸರು ರಾಜ್ಯದಲ್ಲಿ ಮಾತ್ರವಲ್ಲದೇ ಅಕ್ಕಪಕ್ಕದ ರಾಜ್ಯಗಳಲ್ಲೂ ಹುಡುಕಾಟ ನಡೆಸುತ್ತಿದ್ದರು. ಆತ ಗುಜರಾತ್‌ನಲ್ಲಿ ಇರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ಶುಕ್ರವಾರ ಮಧ್ಯಾಹ್ನ ಆತನನ್ನು ಅರೆಸ್ಟ್ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಜ.31 ರಿಂದ 66 ದಿನ ಸಂಸತ್ ಬಜೆಟ್ ಅಧಿವೇಶನ – ಪ್ರಹ್ಲಾದ್ ಜೋಶಿ

    ಗುಜರಾತ್‌ನಲ್ಲಿ ರವಿಯನ್ನು ಬಂಧಿಸಿರುವ ಮೈಸೂರು ಪೊಲೀಸರು ಶನಿವಾರ ಮುಂಜಾನೆ ಕಾರ್ನಾಟಕಕ್ಕೆ ಕರೆತರುವ ಸಾಧ್ಯತೆಯಿದೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಮೈಸೂರು ಗ್ಯಾಂಗ್‍ರೇಪ್‍ನ 6ನೇ ಕಾಮುಕನ ಅರೆಸ್ಟ್ – ಆರೋಪಿಗಳ ಮಂಪರು ಪರೀಕ್ಷೆಗೆ ಚಿಂತನೆ

    ಮೈಸೂರು ಗ್ಯಾಂಗ್‍ರೇಪ್‍ನ 6ನೇ ಕಾಮುಕನ ಅರೆಸ್ಟ್ – ಆರೋಪಿಗಳ ಮಂಪರು ಪರೀಕ್ಷೆಗೆ ಚಿಂತನೆ

    ಮೈಸೂರು: ರಾಜ್ಯವನ್ನು ಬೆಚ್ಚಿಬೀಳಿಸಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣದ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ತಮಿಳುನಾಡಿನಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಧ್ಯರಾತ್ರಿ ಬಂಧಿಸಲಾಗಿದೆ. ಈವರೆಗೆ ಪ್ರಕರಣದ 6 ಕಾಮುಕರು ಅಂದರ್ ಆಗಿದ್ದಾರೆ. ಇನ್ನೋರ್ವನಿಗಾಗಿ ಶೋಧ ಮುಂದುವರಿದಿದೆ.

    ಆರೋಪಿಗಳ ಮಂಪರು ಪರೀಕ್ಷೆಗೆ ಪೊಲೀಸರು ಚಿಂತನೆ ನಡೆಸಿದ್ದಾರೆ. ವೈಜ್ಞಾನಿಕ ಸಾಕ್ಷ್ಯ ಸಂಗ್ರಹಕ್ಕೆ ನ್ಯಾಯಾಲಯದಿಂದ ಅನುಮತಿ ಪಡೆಯುವ ಸಾಧ್ಯತೆ ಇದೆ. ಮುಂಬೈಗೆ ತೆರಳಿರುವ ಸಂತ್ರಸ್ತೆಯಿಂದ ತನಿಖೆಗೆ ಸಹಕಾರ ಸಿಗ್ತಿಲ್ಲ. ಸಂತ್ರಸ್ತೆ ಪೋಷಕರೂ ಕೂಡ ಸಂಪರ್ಕಕ್ಕೆ ಸಿಗ್ತಿಲ್ಲ. ಹಾಗಂತ ಒತ್ತಡ ಹಾಕೋದು ಸರಿಯಲ್ಲ. ತನಿಖೆ ನಡೆಸಿ ಆರೋಪಿಗಳಿಗೆ ಶಿಕ್ಷೆ ಕೊಡಿಸ್ತೇವೆ ಅಂತ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ಅತ್ಯಾಚಾರ ಪ್ರಕರಣದಲ್ಲಿ ಮೈಸೂರು ಪೊಲೀಸರ ತಲೆದಂಡ ಇಲ್ಲ ಅಂತ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಸ್ಪಷ್ಟಪಡಿಸಿದ್ರು. ಈ ಮಧ್ಯೆ ನಾಳೆ ಕೃತ್ಯ ನಡೆದ ಸ್ಥಳಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಭೇಟಿ ನೀಡಲಿದ್ದಾರೆ.

    ಈ ನಟೋರಿಯಸ್‍ಗಳು ಮೈಸೂರಿನ ಜನನಿಬಿಡ ಸ್ಥಳಗಳಲ್ಲಿ ಹಿಂದೆಯೂ ರಾಬರಿ, ಸರಗಳ್ಳತನ ಸೇರಿದಂತೆ ಇನ್ನಿತರ ಪ್ರಕರಣಗಳನ್ನು ನಡೆಸಿದ್ದು, ಹಣ, ಚಿನ್ನಾಭರಣಗಳನ್ನು ಕಳೆದುಕೊಂಡವರು ಮರ್ಯಾದೆಗೆ ಅಂಜಿ ದೂರು ನೀಡುತ್ತಿರಲಿಲ್ಲ. ಆರೋಪಿಗಳು ಅದನ್ನೆ ಪ್ಲಸ್ ಪಾಯಿಂಟ್ ಮಾಡಿಕೊಂಡು ಇಂತಹ ಪ್ರಕರಣಗಳಲ್ಲಿ ಭಾಗಿಯಾಗುತ್ತಿದ್ದರು ಎಂಬ ಸಂಗತಿ ವಿಚಾರಣೆಯ ವೇಳೆ ತಿಳಿದುಬಂದಿದೆ. ಇದನ್ನೂ ಓದಿ: ಜೇಬಿನಲ್ಲೇ ಸದಾ ಕಾಂಡೋಮ್ ಇಟ್ಕೊಂಡು ತಿರುಗಾಡುತ್ತಿದ್ದ ಕಾಮುಕ

    ತಮಿಳುನಾಡಿನಿಂದ ಮೈಸೂರಿಗೆ ತರಕಾರಿ, ಬಾಳೆಕಾಯಿ ಗಾಡಿಗಳ ಜೊತೆ ಬರುತ್ತಿದ್ದ ಇವರು ಕೂಲಿ ಕೆಲಸಗಳನ್ನು ಮಾಡುತ್ತಿದ್ದರು. ಕೆಲಸ ಮುಗಿದ ನಂತರ ಮೈಸೂರಿನ ನಿರ್ಜನ ಪ್ರದೇಶಗಳು ಹಾಗೂ ಚಾಮುಂಡಿಬೆಟ್ಟದ ತಪ್ಪಲಿಗೆ ಸಂಜೆಯ ವೇಳೆ ಹೋಗುತ್ತಾರೆ. ಈ ಸಂದರ್ಭದಲ್ಲಿ ಒಂಟಿಯಾಗಿ ಬರುತ್ತಿದ್ದವರನ್ನು ಹೆದರಿಸಿ ಅವರ ಬಳಿ ಇರುತ್ತಿದ್ದ ಚಿನ್ನ, ಹಣ, ಮೊಬೈಲ್‍ಗಳನ್ನು ಕಸಿದುಕೊಂಡು ಕಳುಹಿಸುತ್ತಿದ್ದರು. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್ – ಆರೋಪಿ ಮೇಲಿದೆ 10 ಕೇಸ್‍ಗಳು

  • ಮೈಸೂರು ಕೇಸ್‍ಲ್ಲಿ ಪೊಲೀಸರ ಪಾಲಿಗೆ ಬೆಳಕಾಗಿದ್ದೇ ಬಸ್ ಟಿಕೆಟ್ ಕೊಟ್ಟ ಸುಳಿವು, ಆ ಮೊಬೈಲ್ ನಂಬರ್!

    ಮೈಸೂರು ಕೇಸ್‍ಲ್ಲಿ ಪೊಲೀಸರ ಪಾಲಿಗೆ ಬೆಳಕಾಗಿದ್ದೇ ಬಸ್ ಟಿಕೆಟ್ ಕೊಟ್ಟ ಸುಳಿವು, ಆ ಮೊಬೈಲ್ ನಂಬರ್!

    – ಕೆ.ಪಿ.ನಾಗರಾಜ್

    ಮೈಸೂರು: ಮೈಸೂರಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣದ ಕಿರಾತಕರನ್ನು ಪೊಲೀಸರು ಕೊನೆಗೂ ಹೆಡೆಮುರಿ ಕಟ್ಟಿ ಜೈಲಿಗಟ್ಟಿದ್ದಾರೆ. ರಾಜ್ಯ ಪೊಲೀಸ್ ಇಲಾಖೆಗೆ ಸವಾಲಾಗಿದ್ದ ಈ ಪ್ರಕರಣದ ಸ್ಥಳದಲ್ಲಿ ಸಿಕ್ಕ ಒಂದೇ ಒಂದು ಬಸ್ ಟಿಕೆಟ್ ಹಿಡಿದು ಹೊರಟ ಪೊಲೀಸರು ಆ ಗ್ಯಾಂಗನ್ನು ಬಂಧಿಸಿದ್ದಾರೆ. ಗ್ಯಾಂಗ್ ರೇಪ್ ಪ್ರಕರಣದಲ್ಲಿ ಪೊಲೀಸ್ ಇನ್ವೆಸ್ಟಿಗೇಷನ್ ಹೇಗಿತ್ತು ಎಂಬ ರೋಚಕ ಕತೆ ನಿಮ್ಮ ಪಬ್ಲಿಕ್ ಟಿವಿಯಲ್ಲಿ ನೋಡಿ.

    ಒಂದೇ ಒಂದು ಬಸ್ ಟಿಕೆಟ್!:
    ಮೈಸೂರಿನಲ್ಲಿ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣ ಮೈಸೂರಿಗೆ ಒಂದು ಕಪ್ಪು ಚುಕ್ಕೆಯಾಗಿತ್ತು. ಮೈಸೂರಿನ ಹೊರವಲಯದ ಲಲಿತಾದ್ರಿಪುರ ಬಡಾವಣೆ ನಿರ್ಜನ ಪ್ರದೇಶದಲ್ಲಿ ಆಗಸ್ಟ್ 24 ರಂದು ಸಂಜೆ ನಡೆದಿದ್ದ ಗ್ಯಾಂಗ್ ರೇಪ್ ಪ್ರಕರಣ ಪೊಲೀಸ್ ಇಲಾಖೆಗೆ ಸವಾಲಾಗಿತ್ತು. ಗ್ಯಾಂಗ್‍ರೇಪ್ ಪ್ರಕರಣದ ಸಂಬಂಧ ಆರೋಪಿಗಳನ್ನ ಬಂಧಿಸಿ ಕಠಿಣ ಶಿಕ್ಷೆ ವಿಧಿಸುವಂತೆ ರಾಜ್ಯಾದ್ಯಂತ ಜನಾಕ್ರೋಶ ಕೂಡ ವ್ಯಕ್ತವಾಗಿತ್ತು. ಮೈಸೂರು ಪೊಲೀಸರು ಕೊನೆಗೂ ಗ್ಯಾಂಗ್ ರೇಪ್ ಪ್ರಕರಣವನ್ನೂ ಭೇದಿಸಿದ್ದಾರೆ. ಅತ್ಯಾಚಾರಕ್ಕೆ ಒಳಗಾಗಿದ್ದ ಸಂತ್ರಸ್ತೆಯ ಹೇಳಿಕೆ ಸಿಗದೆ ತನಿಖೆ ನಡೆಸಲು ಮುಂದಾದ ಪೊಲೀಸರಿಗೆ ಆರಂಭದಲ್ಲಿ ಈ ಪ್ರಕರಣ ಸವಾಲಾಗಿತ್ತು. ಸ್ಥಳ ಪರಿಶೀಲನೆ ಮಾಡಲು ಹೊರಟ ಪೊಲೀಸರಿಗೆ ಆರೋಪಿಗಳು ಸ್ಥಳದಲ್ಲಿ ಬಿಟ್ಟು ಹೋಗಿದ್ದ ಒಂದೇ ಒಂದು ಬಸ್ ಟಿಕೆಟ್ ಸುಳಿವು ನೀಡಿತ್ತು. ಬಸ್ ಟಿಕೆಟ್ ಹಿಡಿದು ಹೊರಟ ಪೊಲೀಸರು ಗ್ಯಾಂಗ್ ರೇಪ್ ಪ್ರಕರಣದ ಕಿರಾತಕರನ್ನು ಪಕ್ಕದ ತಮಿಳುನಾಡಿನಿಂದ ಎಳೆದು ತಂದಿದ್ದಾರೆ.

    ಆಗಸ್ಟ್ 24ರಂದು ನಡೆದ ಅತ್ಯಾಚಾರ ಪ್ರಕರಣದಲ್ಲಿ ಸಂತ್ರಸ್ತೆ ಹಾಗೂ ಆಕೆಯ ಸ್ನೇಹಿತ ಮೈಸೂರಿನ ಆಸ್ಪತ್ರೆಗೆ ಚಿಕಿತ್ಸೆಗಾಗಿ ಬಂದ ಬಳಿಕ ಪ್ರಕರಣ ಬೆಳಕಿಗೆ ಬಂದಿತ್ತು. ಇದೀಗ ಪ್ರಕರಣದ ಐವರು ಆರೋಪಿಗಳನ್ನ ಪೊಲೀಸರು ಬಂಧಿಸಿದ್ದು ಮತ್ತೊಬ್ಬ ಆರೋಪಿಗಾಗಿ ಬಲೆ ಬೀಸಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಆರೋಪಿಗಳಲ್ಲಿ ಓರ್ವ ಮಾವನನ್ನೇ ಕೊಲೆ ಮಾಡಿದವನು!

    ಆ ತಂಡಕ್ಕಿತ್ತು ಕ್ರಿಮಿನಲ್ ಬ್ಯಾಕ್ ಗ್ರೌಂಡ್!:
    ಇನ್ನು ಪೊಲೀಸರು ಬಂಧಿಸಿದ ಐವರು ಆರೋಪಿಗಳು ತಮಿಳುನಾಡಿನಲ್ಲಿ ಅಪರಾಧ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದವರು. ಮೈಸೂರಿನ ಗ್ಯಾಂಗ್ ರೇಪ್ ಪ್ರಕರಣದ ರೂವಾರಿಗಳೇ ಇವರು ಅನ್ನೋದು ಕನ್ಫರ್ಮ್ ಆಗಿದೆ. ಬಂಧಿತ ಆರೋಪಿಗಳು 24 ರಂದು ಮಧ್ಯಾಹ್ನ ತಮಿಳುನಾಡಿನ ತಾಳವಾಡಿಯಿಂದ ಚಾಮರಾಜನಗರಕ್ಕೆ ಕೆಎಸ್‍ಆರ್ ಟಿಸಿ ಬಸ್‍ನಲ್ಲಿ ಬಂದಿದ್ದರು. ಘಟನೆ ನಡೆದ ದಿನವೇ ಮೊದಲ ದಿನವೇ ಸಿಕ್ಕಿದ್ದ ಬಸ್ ಟಿಕೆಟ್ ವಶಕ್ಕೆ ಪಡೆದಿದ್ದ ಪೊಲೀಸರು, ಬಸ್ ಟಿಕೆಟ್ ಆಧಾರದಲ್ಲಿ ಸರಿಸುಮಾರು 5 ಸಾವಿರಕ್ಕೂ ಹೆಚ್ಚು ಮೊಬೈಲ್ ಟವರ್ ಲೊಕೇಷನ್ ಗಳನ್ನು ಟ್ರೇಸ್ ಮಾಡಿದ್ದರು. ಒಂದು ಘಟನೆ ನಡೆದ ಸ್ಥಳ, ತಾಳವಾಡಿಯಿಂದ ಚಾಮರಾಜನಗರಕ್ಕೆ ಬಂದ ಬಸ್ ಟಿಕೆಟ್, ಮೊಬೈಲ್ ಟವರ್ ಲೊಕೇಷನ್ ಹಾಗೂ ಘಟನೆ ನಡೆದ ಸ್ಥಳದ ಟವರ್ ಲೊಕೇಷನ್ ನಲ್ಲಿ ಒಂದು ಮೊಬೈಲ್ ನಂಬರ್ ಆಕ್ಟಿವ್ ಆಗಿದ್ದು ಗೊತ್ತಾಗಿತ್ತು. ಎರಡೂ ಕಡೆಗಳಲ್ಲಿ ಸಿಕ್ಕಿದ್ದು ಒಂದೇ ನಂಬರ್. ಆ ಒಂದೇ ನಂಬರ್ ಜಾಡು ಹಿಡಿದ ಪೊಲೀಸರು ಟೆಕ್ನಿಕಲ್ ಹಾಗೂ ಸೈಂಟಿಫಿಕ್ ಸಾಕ್ಷ್ಯಗಳ ಮೂಲಕ ಪ್ರಕರಣವನ್ನು ಭೇದಿಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಆಗಾಗ ಮೈಸೂರಿಗೆ ಬರ್ತಿದ್ದರು!:
    ಬಂಧಿತ ಆರೋಪಿಗಳು ಕೂಲಿ ಕಾರ್ಮಿಕರು. ಎಲ್ಲರೂ ತಮಿಳುನಾಡಿನ ತಿರುಪೂರಿನವರಾಗಿದ್ರೆ, ಓರ್ವ ಮಾತ್ರ ತಾಳವಾಡಿ ಸಮಿಪದ ಸೂಸೈಪುರಂ ಅನ್ನೋದು ಗೊತ್ತಾಗಿದೆ. ಬಂಧಿತರು ಮೈಸೂರಿಗೆ ಆಗಾಗ ಬಂದು ಹೋಗ್ತಾ ಇದ್ರು. ಮೈಸೂರಿನ ಬಂಡಿಪಾಳ್ಯ ಎಪಿಎಂಸಿಗೆ ತರಕಾರಿ ಕೊಳ್ಳಲು ಬರುವ ಓರ್ವ ಆರೋಪಿ ಡ್ರೈವರ್ ಜೊತೆ ಇನ್ನುಳಿದ ಐವರು ಬರ್ತಾ ಇದ್ರು. ಬಂದು ಹೋಗುವ ವೇಳೆ ಎಲ್ಲರೂ ಮದ್ಯಪಾನ ಮಾಡಿಯೇ ತೆರಳುತ್ತಿದ್ರು. ಇವರೆಲ್ಲರೂ ಹೆದ್ದಾರಿಯ ರಾಬರಿ ಹಂತಕರು ಅನ್ನೋದು ಕೂಡ ಸಾಕಷ್ಟು ಅನುಮಾನ ಪೊಲೀಸರಿಗಿದೆ. ಹೀಗೆ 24ರಂದು ಬಂದ ಆರು ಮಂದಿ ಲಲಿತಾದ್ರಿಪುರ ಸಮೀಪದ ನಿರ್ಜನ ಪ್ರದೇಶಕ್ಕೆ ಬಂದಿದ್ರು. ಇದೇ ವೇಳೆ ಸ್ಥಳಕ್ಕೆ ಬಂದ ಕಾಲೇಜು ವಿದ್ಯಾರ್ಥಿನಿ ಹಾಗೂ ಸ್ನೇಹಿತ ಏಕಾಂತದಲ್ಲಿ ಇರೋದನ್ನ ನೋಡಿಯೇ ಅಟ್ಯಾಕ್ ಮಾಡಿದ್ದಾರೆ. ಯುವತಿ ಸ್ನೇಹಿತನಿಗೆ ಥಳಿಸಿ ಪೊದೆಯೊಳಗೆ ಸಂತ್ರಸ್ತೆಯನ್ನು ಎಳೆದೊಯ್ದು ಅತ್ಯಾಚಾರ ಎಸಗಿದ್ದಾರೆ. ಈ ವೇಳೆ ಯುವಕ ಹಾಗೂ ಸಂತ್ರಸ್ತೆಯಿಂದ 3 ಲಕ್ಷ ರೂಪಾಯಿಗಳನ್ನು ಡಿಮ್ಯಾಂಡ್ ಮಾಡಿದ್ರು. ಈ ವೇಳೆ ಈ ಯತ್ನ ವಿಫಲವಾಗಿ ಸ್ಥಳದಿಂದ ಎಸ್ಕೇಪ್ ಆಗಿದ್ದರು. ಬಂಧಿತರೆಲ್ಲರೂ ಡ್ರೈವರ್, ಕಾರ್ಪೆಂಟರ್, ವೈರಿಂಗ್ ಕೆಲಸ ಮಾಡುವವರಾಗಿದ್ರು. ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ಕೂಡ ಇದ್ದು ಆತನ ಮಾಹಿತಿ ಸಹ ಶೀಘ್ರದಲ್ಲೇ ಸಿಗಲಿದೆ ಎಂದು ಪೊಲೀಸರು ಹೇಳಿದ್ದಾರೆ. ಇದನ್ನೂ ಓದಿ: ಮೈಸೂರು ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳೆಲ್ಲರೂ ಕೂಲಿಕಾರ್ಮಿಕರು!

    ಆರೋಪಿಗಳ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ ಪೊಲೀಸರಿಗೆ ಅಭಿನಂದನೆ ಜೊತೆಗೆ ಐದು ಲಕ್ಷದ ಕ್ಯಾಶ್ ರಿವಾರ್ಡ್ ಕೂಡ ಬಂದಿದೆ. ಪ್ರಕರಣ ನಡೆದ 82 ಗಂಟೆಗಳಲ್ಲಿ ಪ್ರಕರಣ ಬೇಧಿಸಿದ ಮೈಸೂರು ಪೊಲೀಸರಿಗೆ ಸಾರ್ವಜನಿಕರು ಭೇಷ್ ಎನ್ನುತ್ತಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣ- ಆರೋಪಿಗಳನ್ನು ಬಂಧಿಸಿದ ಪೊಲೀಸರ ತಂಡಕ್ಕೆ 5 ಲಕ್ಷ ರೂ. ಬಹುಮಾನ

  • ಮೈಸೂರು ರೇಪ್ ಪ್ರಕರಣ ಬೆನ್ನತ್ತಿದ ಆ ಸೂಪರ್ ಕಾಪ್ಸ್ ಇವರೇ ನೋಡಿ!

    ಮೈಸೂರು ರೇಪ್ ಪ್ರಕರಣ ಬೆನ್ನತ್ತಿದ ಆ ಸೂಪರ್ ಕಾಪ್ಸ್ ಇವರೇ ನೋಡಿ!

    ಮೈಸೂರು: ಇಡೀ ರಾಜ್ಯವನ್ನೇ ತಲ್ಲಣಗೊಳಿಸಿದ್ದ ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಅತ್ಯಾಚಾರ ಪ್ರಕರಣದ ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ.

    ಮೈಸೂರು ಹೊರವಲಯದ ಘಟನೆ ನಡೆದ ಲಲಿತಾದ್ರಿಪುರ ಬಡಾವಣೆ ನಿರ್ಜನ ಪ್ರದೇಶದಲ್ಲಿ ಸಿಕ್ಕಿದ್ದ ವೈಜ್ಞಾನಿಕ ಸಾಕ್ಷ್ಯ ಹಾಗೂ ಟೆಕ್ನಿಕಲ್ ಎವಿಡೆನ್ಸ್ ಮೂಲಕ ಕಾರ್ಯಾಚರಣೆಗಿಳಿದ ಪೊಲೀಸರು ಘಟನೆ ನಡೆದು 82 ಗಂಟೆಗಳಲ್ಲಿ ಐವರನ್ನು ಬಂಧಿಸಿದ್ದಾರೆ. ಇಷ್ಟೆಲ್ಲ ಸಾಧ್ಯವಾಗಿದ್ದು ಮೈಸೂರು ಗ್ರಾಮಾಂತರ ಹಾಗೂ ದಕ್ಷಿಣ ವಲಯ ಪೊಲೀಸರ ಸಾಹಸದಿಂದ. ಈ ಸಾಹಸಕ್ಕೆ ಮುಂದಾಗಿ ಆಪರೇಷನ್ ಸಕ್ಸಸ್ ಮಾಡಿದ ಟೀಂ ಯಾವುದು, ಆ ಸೂಪರ್ ಕಾಪ್‍ಗಳ ವಿವರ ಇಲ್ಲಿದೆ. ಇದನ್ನೂ ಓದಿ: ಬಿಯರ್ ಬಾಟ್ಲಿ, ಬಸ್ ಟಿಕೆಟ್ ಆಧರಿಸಿ ಅತ್ಯಾಚಾರಿಗಳ ಬಂಧನ

    ಘಟನೆ ನಡೆಯುತ್ತಿದ್ದಂತೆ ಪೊಲೀಸರು ಕಾರ್ಯಾಚರಣೆಗೆ ತಂಡ ರಚಿಸಿದ್ದರು. ಈ ತಂಡದಲ್ಲಿ ಎಸಿಪಿ ಶಿವಶಂಕರ್, ಪೊಲೀಸ್ ಇನ್‍ಸ್ಪೆಕ್ಟರ್ ಗಳಾದ ಶ್ರೀಕಾಂತ್, ಮಹಾದೇವಸ್ವಾಮಿ, ಪ್ರಕಾಶ್, ಅಜರುದ್ದೀನ್, ಪೊಲೀಸ್ ಸಬ್ ಇನ್‍ಸ್ಪೆಕ್ಟರ್ ಜಯಪ್ರಕಾಶ್, ಸಹಾಯಕ ಸಬ್ ಇನ್‍ಸ್ಪೆಕ್ಟರ್ ಗಳಾದ ಅನಿಲ್ ಮತ್ತು ಅಲೆಕ್ಸ್, ಹೆಡ್ ಕಾನ್‍ಸ್ಟೇಬಲ್ ರಮೇಶ್, ಕಾಂತರಾಜು ಭಗತ್, ಶರೀಫ್, ಮಹಾದೇವು, ರಾಜು ಹಾಗೂ ಪೊಲೀಸ್ ಕಾನ್‍ಸ್ಟೇಬಲ್ ಜೀವನ್, ಗಿರೀಶ್, ಸಾಗರ್ ಮತ್ತು ಸಿಬ್ಬಂದಿ ಮಂಜುನಾಥ್, ಕಿಶೋರ್ ಹಾಗೂ ಲತೀಫ್ ಆರೋಪಿಗಳನ್ನು ಪತ್ತೆ ಹಚ್ಚುವ ತಂಡದಲ್ಲಿದ್ದರು. ಇದನ್ನೂ ಓದಿ: ದರೋಡೆ ಮಾಡಲು ಹೋಗಿ ಏನೂ ಸಿಗದಿದ್ದಾಗ ಯುವತಿಯ ಅತ್ಯಾಚಾರವೆಸಗಿದ ಕಾಮುಕರು!

  • ರಾಜಕೀಯ ಪ್ರೇರಿತವಾಗಿ ನಡೆದಿದೆ ತನ್ವೀರ್ ಸೇಠ್ ಕೊಲೆ ಯತ್ನ!

    ರಾಜಕೀಯ ಪ್ರೇರಿತವಾಗಿ ನಡೆದಿದೆ ತನ್ವೀರ್ ಸೇಠ್ ಕೊಲೆ ಯತ್ನ!

    ಮೈಸೂರು: ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ ಹೊಸ ತಿರುವು ಪಡೆದುಕೊಂಡಿದ್ದು, ರಾಜಕೀಯ ಪ್ರೇರಿತವಾಗಿ ಈ ಕೊಲೆ ಯತ್ನ ಮಾಡಲಾಗಿದೆ ಎಂಬುದು ತಿಳಿದು ಬಂದಿದೆ.

    ಪೊಲೀಸರ ವಿಚಾರಣೆ ವೇಳೆ ಈ ಮಾಹಿತಿ ಬಹಿರಂಗವಾಗಿದೆ. ಈ ಮೊದಲು ತನ್ವೀರ್ ಅವರ ಕೊಲೆ ಯತ್ನದ ಹಿಂದೆ ಸಂಘಟನೆಯೊಂದರ ಕೈವಾಡ ಇದೆ ಎಂಬ ಮಾಹಿತಿ ಲಭ್ಯವಾಗಿತ್ತು. ಆದರೆ ಈಗ ರಾಜಕೀಯ ಪ್ರೇರಿತವಾಗಿ ಈ ಕೊಲೆ ಯತ್ನ ನಡೆದಿದೆ ಎಂಬುದು ತಿಳಿದಿದೆ. ಈಗಾಗಲೇ ಆರೋಪಿ ಫರಾನ್ ಪಾಷಾನನ್ನು ಬಂಧಿಸಿದ್ದು, ಈ ಪ್ರಕರಣ ಸಂಬಂಧ ಆರು ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಬಗ್ಗೆ ಮತ್ತಷ್ಟು ವಿಚಾರಣೆ ಮುಂದುವರಿದಿದೆ. ಇದನ್ನೂ ಓದಿ:ತನ್ವೀರ್ ಸೇಠ್ ಹತ್ಯೆ ಯತ್ನಕ್ಕೆ ಬಾಲಿವುಡ್ ಸಿನಿಮಾ ಪ್ರೇರಣೆ

    ಪ್ರಕರಣದ ಹಿಂದಿರುವ ವ್ಯಕ್ತಿ ಬಗ್ಗೆ ಪೊಲೀಸರು ಹುಡುಕಾಟ ಆರಂಭಿಸಿದ್ದು, ಕೊಲೆ ಮಾಡಲು ಯತ್ನಿಸುವ ಮೊದಲು ಫರಾನ್ ಸಾಕಷ್ಟು ಪ್ಲಾನ್ ಮಾಡಿಕೊಂಡಿರಲಿಲ್ಲ. ಕೊಲೆ ಮಾಡಬೇಕೆಂದಷ್ಟೆ ನಿರ್ಧಾರ ಮಾಡಿದ್ದನು. ಆದರೆ ಹೇಗೆ? ಯಾವ ರೀತಿ ಕೊಲೆ ಮಾಡಬೇಕು ಎಂಬುದನ್ನು ಪ್ಲಾನ್ ಮಾಡಿರಲಿಲ್ಲ ಎಂಬುದನ್ನು ವಿಚಾರಣೆ ವೇಳೆ ಫರಾನ್ ಬಾಯಿಬಿಟ್ಟಿದ್ದಾನೆ.

    ಭಾನುವಾರ ತನ್ವೀರ್ ಸೇಠ್ ಮೇಲೆ ನಡೆದ ಹಲ್ಲೆ ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡಿರುವ ಮೈಸೂರು ಪೊಲೀಸರು, ಹಲವಾರು ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದಾರೆ. ಈ ವೇಳೆ ಆರೋಪಿ ತನ್ವೀರ್ ಸೇಠ್ ಅವರ ಮೇಲೆ ಹಲ್ಲೆ ಮಾಡುವ ಮುನ್ನಾ ಬಾಲಿವುಡ್ ಸಿನಿಮಾವೊಂದನ್ನು ಐದಾರು ಬಾರಿ ನೋಡಿದ್ದ ಎಂದು ಆತನ ಸ್ನೇಹಿತರು ಹೇಳಿದ್ದರು. ಇದನ್ನೂ ಓದಿ:‘ಗಣ್ಯರನ್ನು ಕೊಲೆ ಮಾಡಿ ಫೇಮಸ್ ಆಗ್ತೀನಿ’ – ಸ್ನೇಹಿತರ ಬಳಿ ಕೊಚ್ಚಿಕೊಂಡಿದ್ದ ಫರಾನ್

    ಆರೋಪಿ ಫರಾನ್ ಪಾಷಾ ತನ್ವೀರ್ ಸೇಠ್ ಅವರ ಹತ್ಯೆಗೆ ಯತ್ನ ಮಾಡುವ ಹಿಂದಿನ ರಾತ್ರಿ ಬಾಲಿವುಡ್‍ನ ‘ವಾಸ್ತವ್’ ಸಿನಿಮಾವನ್ನು ಐದಾರು ಬಾರಿ ನೋಡಿದ್ದ. ಇದು ಬಾಲಿವುಡ್ ನಟ ಸಂಜಯ್ ದತ್ ನಟನೆಯ ಗ್ಯಾಂಗ್ ಸ್ಟಾರ್ ಸಿನಿಮಾವಾಗಿದ್ದು, ಸಿನಿಮಾವನ್ನು ಹಲ್ಲೆ ಮಾಡುವ ಹಿಂದಿನ ರಾತ್ರಿ ಐದಾರು ಬಾರಿ ನೋಡಿದ್ದ ಎಂದು ಆರೋಪಿ ಸ್ನೇಹಿತರು ಪೊಲೀಸರಿಗೆ ಮಾಹಿತಿ ನೀಡಿದ್ದರು. ಅದೇ ಸಿನಿಮಾ ಯಾಕೆ ನೋಡ್ತಿದ್ದೀಯಾ ಎಂದು ಪ್ರಶ್ನಿಸಿದಾಗ ಆ ಸಿನಿಮಾ ಹೀರೋ ಥರ ನಾನು ಆಗಬೇಕು. ನನಗೆ ಇದು ಪ್ರೇರಣೆ ಆಗ್ತಿದೆ ಎಂದು ಫರಾನ್ ಹೇಳಿದ್ದನಂತೆ. ಇದನ್ನೂ ಓದಿ:ತನ್ವೀರ್ ಸೇಠ್ ಕೊಲೆಗೆ ಯತ್ನ – ರಾತ್ರೋರಾತ್ರಿಯೇ ಆರೋಪಿ ಕುಟುಂಬ ಪರಾರಿ

    ಭಾನುವಾರ ರಾತ್ರಿ ತನ್ವೀರ್ ಸೇಠ್ ಮೈಸೂರಿನ ಬನ್ನಿ ಮಂಟಪ ಸಮೀಪದ ಪಾರ್ಟಿ ಹಾಲಿಗೆ ತಮ್ಮ ಆತ್ಮೀಯ ಮಗನ ಮದುವೆಯ ಬೀಗರೂಟಕ್ಕೆ ಆಗಮಿಸಿದ್ದರು. ಈ ವೇಳೆ ಯುವಕ ಫರಾನ್ ಚಾಕುವಿನಿಂದ ಹಲ್ಲೆ ಮಾಡಿದ್ದ. ಅವರ ಕತ್ತಿಗೆ ಭಾಗಕ್ಕೆ ಚಾಕು ಹಾಕಿ ಪರಾರಿಯಾಗುತ್ತಿದ್ದ ಆತನನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದರು. ನಂತರ ತೀವ್ರ ರಕ್ತಸ್ರಾವದಿಂದ ಬಳಲುತ್ತಿದ್ದ ಸೇಠ್ ಅವರನ್ನು ಕೊಲಂಬಿಯಾ ಏಷ್ಯಾ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ವೈದ್ಯರು ತಿಳಿಸಿದ್ದಾರೆ.