Tag: Mysuru University

  • ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್‌ ಚಂದ್ರ ಗುರು ನಿಧನ

    ಮೈಸೂರು ವಿವಿ ನಿವೃತ್ತ ಪ್ರಾಧ್ಯಾಪಕ, ಪ್ರಗತಿಪರ ಚಿಂತಕ ಮಹೇಶ್‌ ಚಂದ್ರ ಗುರು ನಿಧನ

    ಮೈಸೂರು: ಪ್ರಗತಿಪರ ಚಿಂತಕ, ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ.ಮಹೇಶ್‌ ಚಂದ್ರ ಗುರು (68) ಹೃದಯಘಾತದಿಂದ ನಿಧನರಾಗಿದ್ದಾರೆ.

    ಕಳೆದ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ‌ ಪ್ರೊ.ಮಹೇಶ್ ಚಂದ್ರ ಗುರು (Prof Mahesh Chandra Guru) ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇಂದು ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.  ಇದನ್ನೂ ಓದಿ: MUDA Scam| ಸಿಎಂ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿಗೆ `ಸುಪ್ರೀಂ ತೀರ್ಪು’ ಆಧಾರ – ರಾಜ್ಯಪಾಲರ ಆದೇಶದಲ್ಲಿ ಏನಿದೆ?

    ಹೈದರಾಬಾದ್‌ನಲ್ಲಿ ಸಾರ್ವಜನಿಕ ಸಂಪರ್ಕಾಧಿಕಾರಿಯಾಗಿ ವೃತ್ತಿ ಜೀವನ ಆರಂಭಿಸಿದ ಮಹೇಶ್‌ ಚಂದ್ರ ಗುರು ನಂತರ ಮಂಗಳೂರು ವಿಶ್ವವಿದ್ಯಾಲಯದಲ್ಲಿ (Mangalore University) ಜರ್ನಲಿಸಂ ಪ್ರಾಧ್ಯಾಪಕರಾಗಿ ಸೇವೆ ಸಲ್ಲಿಸಿದರು. ನಂತರ ಮೈಸೂರು ವಿವಿಗೆ (Mysuru University) ವರ್ಗಾವಣೆಗೊಂಡು 2019ರಲ್ಲಿ ಸೇವೆಯಿಂದ ನಿವೃತ್ತರಾದರು.

    ನಿವೃತ್ತಿ ಬಳಿಕ ಪ್ರಗತಿಪರ ಚಳವಳಿಗಳಲ್ಲಿ ಗಣನೀಯವಾಗಿ ಗುರುತಿಸಿಕೊಂಡಿದ್ದ ಪ್ರೊ.ಮಹೇಶ್‌ ಚಂದ್ರ ಗುರು ಅವರು ಎಡಪಂಥೀಯ ವಾದವನ್ನು ಪ್ರತಿಪಾದಿಸುತ್ತಿದ್ದರು.

     

  • ಗ್ಯಾಂಗ್‍ರೇಪ್ ಕೇಸ್ ಬೆನ್ನಲ್ಲೇ ಮೈಸೂರು ವಿವಿಯಿಂದ ವಿವಾದಾತ್ಮಕ ಆದೇಶ

    ಗ್ಯಾಂಗ್‍ರೇಪ್ ಕೇಸ್ ಬೆನ್ನಲ್ಲೇ ಮೈಸೂರು ವಿವಿಯಿಂದ ವಿವಾದಾತ್ಮಕ ಆದೇಶ

    ಮೈಸೂರು: ಗ್ಯಾಂಗ್ ರೇಪ್ ಪ್ರಕರಣದ ಬೆನ್ನಲ್ಲೇ ಮೈಸೂರು ವಿವಿ ಹೊರಡಿಸಿರುವ ಆದೇಶ ವಿವಾದಕ್ಕೀಡಾಗಿದೆ.

    ಸಂಜೆ 6:30ರ ನಂತರ ಮಾನಸಗಂಗೋತ್ರಿ ಆವರಣ, ಕುಕ್ಕರಹಳ್ಳಿಕೆರೆ ಪ್ರದೇಶದಲ್ಲಿ ಹೆಣ್ಣು ಮಕ್ಕಳ ಪ್ರವೇಶಕ್ಕೆ ನಿರ್ಬಂಧ ಹೇರಿ ವಿವಿ ಕುಲಸಚಿವರು ಸುತ್ತೋಲೆ ಹೊರಡಿಸಿದ್ದಾರೆ.

    ಸಂಜೆ 6:30ರ ನಂತರ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು, ಕೂರುವುದನ್ನು ನಿಷೇಧಿಸಲಾಗಿದೆ. ಸುರಕ್ಷತೆ, ಮುನ್ನೆಚ್ಚರಿಕೆ ದೃಷ್ಟಿಯಿಂದ ಈ ಕ್ರಮ ತೆಗೆದುಕೊಳ್ಳಲಾಗಿದೆ. ಇದನ್ನೂ ಓದಿ: ಮೈಸೂರು ಪ್ರಕರಣದ ಬಗ್ಗೆ ಸುಳಿವು ಸಿಕ್ಕಿದ್ದರೂ, ಈ ಪರಿಸ್ಥಿತಿಯಲ್ಲಿ ಹೇಳಲು ಸಾಧ್ಯವಿಲ್ಲ: ಪ್ರವೀಣ್ ಸೂದ್ 

    ಭದ್ರತಾ ಸಿಬ್ಬಂದಿ ಸಂಜೆ 6 ರಿಂದ 9ರವರೆಗೆ ಗಸ್ತು ತಿರುಗಲೂ ವ್ಯವಸ್ಥೆ ಮಾಡಲಾಗಿದೆ. ಪೊಲೀಸ್ ಇಲಾಖೆಯ ಮೌಖಿಕ ನಿರ್ದೇಶನದ ಮೇರೆಗೆ ಆದೇಶ ಹೊರಡಿಸಿದ್ದೇವೆ ಎಂದು ವಿವಿ ಹೇಳಿದೆ.

    ಈ ಬಗ್ಗೆ, ಪಬ್ಲಿಕ್ ಟಿವಿ ಜೊತೆ ಮಾತನಾಡಿದ ವಿವಿ ಕುಲಪತಿ ಪ್ರೊ. ಹೇಮಂತ್ ಕುಮಾರ್, ಒಂಟಿಯಾಗಿ ಹೆಣ್ಣುಮಕ್ಕಳು ತಿರುಗಬಾರದು ಅಂತ ಎಚ್ಚರಿಕೆ ವಹಿಸಿದ್ದೇವೆ. ಜೊತೆಗೆ, ಪೊಲೀಸ್ ಇಲಾಖೆಯಿಂದ ಮೌಖಿಕವಾಗಿ ಆದೇಶ ಬಂದಿದೆ. ಹಾಗಾಗಿ, ಕ್ರಮ ತೆಗೆದುಕೊಂಡಿದ್ದೇವೆ. ಆದೇಶವನ್ನು ಪುನರ್ ವಿಮರ್ಶೆ ಮಾಡುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಗ್ಯಾಂಗ್‍ರೇಪ್ ಪ್ರಕರಣದ ಸಂತ್ರಸ್ತೆ ತನಿಖೆಗೆ ಸ್ಪಂದಿಸುತ್ತಿಲ್ಲ: ಎಸ್‍ಟಿಎಸ್ ಆರೋಪ

  • ಮೈಸೂರು ವಿವಿ ಪ್ರಾಧ್ಯಾಪಕನಿಂದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

    ಮೈಸೂರು ವಿವಿ ಪ್ರಾಧ್ಯಾಪಕನಿಂದ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ

    ಮೈಸೂರು: ಪ್ರಾಧ್ಯಾಪಕನೇ ಸಂಶೋಧನಾ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಕೇಳಿ ಬಂದಿದ್ದು, ಕಾಮುಕ ಪ್ರಾಧ್ಯಾಪಕ ಪತ್ನಿ ಎದುರು ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾನೆ.

    ಈ ಮೂಲಕ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಮತ್ತೊಂದು ಕಾಮಕಾಂಡ ಬಯಲಾಗಿದ್ದು, ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೋ.ರಾಮಚಂದ್ರ ವಿರುದ್ಧ ಆರೋಪ ಕೇಳಿ ಬಂದಿದೆ. ಸಂತ್ರಸ್ತೆ ಜಯಲಕ್ಷ್ಮಿಪುರಂ ಠಾಣೆಯಲ್ಲಿ ದೂರು ದಾಖಲಿಸಿದ್ದಾಳೆ. ಇದನ್ನೂ ಓದಿ: ಫೋನ್‍ನಲ್ಲಿ ಪರಿಚಯವಾಗಿ ಪ್ರೀತಿಸಿ ಮದುವೆ – ವರ್ಷ ಆಗುವುದರೊಳಗೆ ಯುವತಿ ಆತ್ಮಹತ್ಯೆ!

    ಸಂತ್ರಸ್ತೆ ರಾಮಚಂದ್ರ ಬಳಿ ಪಿಎಚ್ ಡಿ ಮಾರ್ಗದರ್ಶನ ಪಡೆಯುತ್ತಿದ್ದಳು. ಹೀಗಾಗಿ ರಾಮಚಂದ್ರ ವಿದ್ಯಾರ್ಥಿನಿಯನ್ನು ಮನೆಗೆ ಕರೆಸಿಕೊಂಡಿದ್ದ, ಈ ವೇಳೆ ಸಂತ್ರಸ್ತೆ ಕೂಗಾಟ, ಚೀರಾಟ ನಡೆಸಿದ್ದಾಳೆ. ಇದೇ ಸಂದರ್ಭದಲ್ಲಿ ಪ್ರಾಧ್ಯಾಪಕ ರಾಮಚಂದ್ರ ಪತ್ನಿ ಲೋಲಾಕ್ಷಿ ಮನೆಗೆ ಎಂಟ್ರಿ ಕೊಟ್ಟಿದ್ದಾರೆ. ಬಳಿಕ ಸಂತ್ರಸ್ತ ಯುವತಿ ಹಾಗೂ ಪತಿಯನ್ನು ಠಾಣೆಗೆ ಕರೆತಂದಿದ್ದಾರೆ.

    ರಾಮಚಂದ್ರ ಪತ್ನಿ ಲೋಲಾಕ್ಷಿ ಕೂಡ ವಿವಿಯಲ್ಲಿ ಪ್ರಾಧ್ಯಾಪಕಿಯಾಗಿದ್ದು, ಇದೀಗ ಪೊಲೀಸರು ಆರೋಪಿ ರಾಮಚಂದ್ರ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.

  • ಮಾನಸಗಂಗೋತ್ರಿ ನಮಗೆ ಸದಾ ಸ್ಪೂರ್ತಿ ಆಗಬೇಕು – ಪ್ರಧಾನಿ ಮೋದಿ

    ಮಾನಸಗಂಗೋತ್ರಿ ನಮಗೆ ಸದಾ ಸ್ಪೂರ್ತಿ ಆಗಬೇಕು – ಪ್ರಧಾನಿ ಮೋದಿ

    ಮೈಸೂರು:  ಕುವೆಂಪು ಅವರು ಮೈಸೂರು ವಿಶ್ವವಿದ್ಯಾನಿಲಯದ ಕ್ಯಾಂಪಸ್‌ಗೆ  ಮಾನಸಗಂಗೋತ್ರಿ ಎಂದು ಹೆಸರಿಟ್ಟಿದ್ದಾರೆ. ಇದು ನಮಗೆ ಸದಾ ಸ್ಪೂರ್ತಿ ಆಗಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

    ಇಂದು ಪ್ರತಿಷ್ಠಿತ ಮೈಸೂರು ವಿವಿಯ 100 ನೇ ಘಟಿಕೋತ್ಸವ ನಡೆಯಿತು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಘಟಿಕೋತ್ಸವ ಉದ್ದೇಶಿಸಿ ವರ್ಚುಯಲ್ ಭಾಷಣ ಮಾಡಿದರು.

    ಕನ್ನಡದಲ್ಲಿ ಭಾಷಣ ಆರಂಭಿಸಿದ ಪ್ರಧಾನಿ ಮೋದಿ, ಪದವಿ ಪಡೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನೆಗಳು ತಿಳಿಸಿದರು. ಕನ್ನಡ ಸಾಹಿತ್ಯ ಸಂಸ್ಕೃತಿ ಬಗ್ಗೆ ತಮ್ಮ ಭಾಷಣದಲ್ಲಿ ಉಲ್ಲೇಖಿಸಿದರು. ನಾಲ್ವಡಿ ಕೃಷ್ಣರಾಜ ಒಡೆಯರ್ ದೂರದೃಷ್ಟಿ ನಮ್ಮೆಲ್ಲರಿಗೂ ಮಾದರಿಯಾಗಬೇಕು.ನಾಲ್ವಡಿ ಮತ್ತು ವಿಶ್ವೇಶ್ವರಯ್ಯರ ಕನಸಿನ ಫಲ ಮೈಸೂರು ವಿಶ್ವವಿದ್ಯಾನಿಲಯ ಎಂದರು.

    ಗೊರೂರು ರಾಮಸ್ವಾಮಿ ಅಯ್ಯಂಗಾರ್ ಶಿಕ್ಷಣವೇ ಜೀವನದ ಬೆಳಕು ಅಂದಿದ್ದಾರೆ. ಶಿಕ್ಷಣ ಪ್ರತೀ ವ್ಯಕ್ತಿಯ ಜೀವನದ ಮಹತ್ವಪೂರ್ಣ ಅಂಶ ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಈ ದೃಷ್ಟಿಯಿಂದ ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ರಚಿಸಿದ್ದೇವೆ. ಇದು ದೇಶದ ಶೈಕ್ಷಣಿಕ ಕ್ಷೇತ್ರಕ್ಕೆ ದಿಕ್ಸೂಚಿಯಾಗಲಿದೆ. ಶೈಕ್ಷಣಿಕ ಪ್ರಗತಿ ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುತ್ತೆ. ಮೈಸೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಮಾಡಲಿದೆ. ಇದೇ ರೀತಿಯಾಗಿ ದೇಶದ ಎಲ್ಲಾ ವಿವಿಗಳೂ‌ ಇದಕ್ಕೆ ಸಹಕಾರ ನೀಡಬೇಕು ಎಂದು ಹೇಳಿದರು.

    ದೇಶದ ಉನ್ನತ ಶಿಕ್ಷಣ ಪುರುಷ ಪ್ರಧಾನವಾಗಿತ್ತು. ಆದರೆ ಈಗ ಕಾಲ ಬದಲಾಗಿದೆ. ಪದವಿ, ಸ್ನಾತಕೋತ್ತರ ಪದವಿ ಪಡೆಯುತ್ತಿರುವ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಿದೆ. ಆರು ವರ್ಷಗಳ ಹಿಂದೆ ಐಐಟಿಯಲ್ಲಿ ಶೇ.8 ರಷ್ಟು ವಿದ್ಯಾರ್ಥಿನಿಯರು ಇದ್ದರು. ಈಗ ಆ ಸಂಖ್ಯೆ ಶೇ.20ಕ್ಕೆ ಏರಿದೆ ಎಂದರು.

    ನಾವೆಲ್ಲ ಕೋವಿಡ್ ಸಂಕಷ್ಟ ಮೀರಿ ಆತ್ಮನಿರ್ಭರ ಭಾರತ ನಿರ್ಮಾಣ ಮಾಡಬೇಕಿದೆ. ಈಗಾಗಲೇ ಹಲವಾರು ಸ್ಟಾರ್ಟಪ್ ಗಳು ಶುರುವಾಗಿವೆ‌. ವಿಮಾನಯಾನ, ಮಾಹಿತಿ ತಂತ್ರಜ್ಞಾನ ಸೇರಿದಂತೆ ಮಹತ್ವದ ಕ್ಷೇತ್ರಗಳಲ್ಲಿ ವಿದ್ಯಾರ್ಥಿಗಳು ಇನ್ನಷ್ಟು ತೊಡಗಿಸಿಕೊಳ್ಳಬೇಕಿದೆ. ಸ್ಟಾಟರ್ಪ್ ಗಳು ವ್ಯಕ್ತಿಯ ಉನ್ನತಿಯ ಜೊತೆಗೆ ದೇಶವನ್ನು ಉನ್ನತಿಗೆ ತೆಗೆದು ಕೊಂಡು ಹೋಗುತ್ತದೆ ಎಂಬುದನ್ನು ಯುವ ಜನರು ಮನಗಾಣಬೇಕು ಎಂದು ಹೇಳಿದರು.

  • ಚೀನಾದಿಂದ ಸದ್ಯಕ್ಕೆ ವಾಪಸ್ ಆಗದಂತೆ ಮೈಸೂರು ವಿದ್ಯಾರ್ಥಿಗಳಿಗೆ ಸೂಚನೆ

    ಚೀನಾದಿಂದ ಸದ್ಯಕ್ಕೆ ವಾಪಸ್ ಆಗದಂತೆ ಮೈಸೂರು ವಿದ್ಯಾರ್ಥಿಗಳಿಗೆ ಸೂಚನೆ

    ಮೈಸೂರು: ವಿಶ್ವದಾದ್ಯಂತ ಕೊರೊನಾ ವೈರಸ್ ಭೀತಿ ಹಿನ್ನಲೆಯಲ್ಲಿ ಮೈಸೂರಿನಲ್ಲೂ ಕರೋನಾ ವೈರಸ್ ಭೀತಿ ಎದುರಾಗಿದೆ. ಮೈಸೂರು ವಿವಿಯಲ್ಲಿ ಓದುತ್ತಿರುವ 18 ಚೀನಾ ವಿದ್ಯಾರ್ಥಿಗಳಿಗೆ ಸದ್ಯಕ್ಕೆ ಮೈಸೂರಿಗೆ ವಾಪಸ್ ಬಾರದಂತೆ ಸೂಚನೆ ನೀಡಲಾಗಿದೆ.

    ಸದ್ಯ ರಜೆ ಮೇಲೆ 18 ಚೀನಾ ದೇಶದ ವಿದ್ಯಾರ್ಥಿಗಳು ಚೀನಾಕ್ಕೆ ತೆರಳಿದ್ದಾರೆ. ಮೈಸೂರು ವಿವಿಯಲ್ಲಿ ಚೀನಾ ದೇಶದ ಒಟ್ಟು 120 ವಿದ್ಯಾರ್ಥಿಗಳು ಓದುತ್ತಿದ್ದಾರೆ. ಕಂಪ್ಯೂಟರ್ ಸೈನ್ಸ್ ವಿಭಾಗದ ಬಿ.ಟೆಕ್, ಎಂ.ಎಸ್. ಪ್ರೋಗ್ರಾಮಿಂಗ್‍ನ ಇನ್ಫಾರ್ಮೇಷನ್ ಟೆಕ್ನಾಲಜಿ, ಸಾಫ್ಟ್ ವೇರ್ ಎಂಜಿನಿಯರಿಂಗ್ ವಿಭಾಗಗಳಲ್ಲಿ ಅಧ್ಯಾಯನ ನಡೆಸುತ್ತಿದ್ದಾರೆ.

    120 ವಿದ್ಯಾರ್ಥಿಗಳ ಪೈಕಿ 18 ವಿದ್ಯಾರ್ಥಿಗಳು ಚೀನಾಗೆ ತೆರಳಿದ್ದು, ಅವರನ್ನು ಸದ್ಯಕ್ಕೆ ಅಲ್ಲಿಂದ ಹಿಂದಿರುಗದಂತೆ ಸೂಚಿಸಲಾಗಿದೆ. ಹೊಸ ವರ್ಷಾಚರಣೆಗೆ ಅಲ್ಲಿಗೆ ವಿದ್ಯಾರ್ಥಿಗಳು ತೆರಳಿದ್ದರು. ಚೀನಾದಲ್ಲಿ ಹೊಸ ವರ್ಷದ ಆಚರಣೆ ಬಹು ದೊಡ್ಡ ಆಚರಣೆ. ಈ ಹಿನ್ನೆಲೆಯಲ್ಲಿ ಮೈಸೂರು ವಿವಿಯಿಂದ ರಜೆ ಮೇಲೆ ಜ.15 ರಂದು ಚೀನಾಗೆ ತೆರಳಿದ್ದರು. ಜ.25 ರಂದು ಚೀನಾದಲ್ಲಿ ಹೊಸ ವರ್ಷಾಚರಣೆ ಇತ್ತು.

    ಇದನ್ನು ಮುಗಿಸಿಕೊಂಡು ಅವರು ಈಗಾಗಲೇ ವಾಪಸ್ ಆಗಬೇಕಿತ್ತು. ಚೀನಾದಲ್ಲಿ ಕಾಣಿಸಿಕೊಂಡ ಕೊರೊನಾ ವೈರಸ್ ಕಾರಣದಿಂದ ಅವರನ್ನು ಸದ್ಯಕ್ಕೆ ಹಿಂದಿರುಗದಂತೆ ಸೂಚಿಸಲಾಗಿದೆ. ಅವರೆಲ್ಲಾ ಚೀನಾದ ಝೂಮೇಡಿಯನ್, ಪ್ರಾವೆನ್ಸಿಸ್‍ನ ಹೊಂಗೈ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು.

  • ಮಾಧ್ಯಮಗಳ ವಿರುದ್ಧ ಪ್ಲೇ ಕಾರ್ಡ್ ಗರ್ಲ್ ರಂಪಾಟ

    ಮಾಧ್ಯಮಗಳ ವಿರುದ್ಧ ಪ್ಲೇ ಕಾರ್ಡ್ ಗರ್ಲ್ ರಂಪಾಟ

    – ಕೋರ್ಟ್ ಆವರಣದಲ್ಲೇ ಮಾಧ್ಯಮಗಳ ವಿರುದ್ಧ ಆಕ್ರೋಶ

    ಮೈಸೂರು: ಮೈಸೂರಿನ ಮಾನಸಗಂಗೋತ್ರಿಯಲ್ಲಿ ನಡೆದ ಪ್ರತಿಭಟನೆ ವೇಳೆ ಫ್ರೀ ಕಾಶ್ಮಿರ್ ಪೋಸ್ಟರ್ ಹಿಡಿದಿದ್ದ ನಳಿನಿ ಮಂಗಳವಾರ ಮೈಸೂರು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಿದ್ದಳು. ಈ ವೇಳೆ ನ್ಯಾಯಾಲಯದ ಹೊರಭಾಗದಲ್ಲಿದ್ದ ಮಾಧ್ಯಮದವರನ್ನು ಕಂಡು ರಂಪಾಟ ನಡೆಸಿದ್ದು, ಮಾಧ್ಯಮದವರನ್ನು ಕಂಡು ಕೆಂಡಾಮಂಡಲವಾಗಿದ್ದಾಳೆ.

    ಮಾಧ್ಯಮಗಳ ಕ್ಯಾಮೆರಾಗಳನ್ನು ನೋಡಿ ನ್ಯಾಯಾಲಯದ ಮುಂಭಾಗ ನಳಿನಿ ತಂದೆ ಮಾರ್ಗ ಬದಲಿಸಿದ್ದಾರೆ. ಈ ವೇಳೆ ತಂದೆ ಮೇಲೆಯೇ ಆಕ್ರೋಶ ಹೊರಹಾಕಿ, ರಸ್ತೆಯಲ್ಲೇ ಕುಳಿತಿದ್ದಾಳೆ. ನಳಿನಿಯನ್ನು ಸಮಾಧಾನ ಮಾಡಲು ತಂದೆ ಬಾಲಕುಮಾರ್ ಮುಂದಾದಾಗ ನಳಿನಿ ನಾವ್ಯಾಕೆ ಮಾಧ್ಯಮದವರ ಮುಂದೆ ಹೋಗಬೇಕು? ಅವರಿಗಾಗಿ ನಾವ್ಯಾಕೆ ದಾರಿ ಬದಲಿಸಬೇಕು ಎಂದು ಕೋಪದಿಂದಲೇ ಹೇಳಿದ್ದಾಳೆ.

    ನಂತರ ಮತ್ತೆ ಕ್ಯಾಮೆರಾಗಳ ಮುಂದೆಯೇ ನಡೆದು ಬಂದು, ನಮಗೆ ಖಾಸಗಿತನ ನೀಡಿ ಎಂದು ಕೂಗಾಡಿದ್ದಾಳೆ. ಇತ್ತೀಚೆಗೆ ಪೊಲೀಸರ ವಿಚಾರಣೆ ಬಳಿಕ ಸಹ ಮಾಧ್ಯಮಗಳ ವಿರುದ್ಧ ಆಕ್ರೋಶಗೊಂಡಿದ್ದ ನಳಿನಿ, ನನ್ನ ಹೇಳಿಕೆಯನ್ನು ಪತ್ರಿಕೆ, ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನನ್ನೂ ಹೇಳುವುದಿಲ್ಲ ಎಂದು ಕಿಡಿಕಾರಿದ್ದಳು.

    ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಹಿಡಿದಿದ್ದ ವಿದ್ಯಾರ್ಥಿನಿಯನ್ನು ಪೊಲೀಸರು ಇತ್ತೀಚೆಗೆ ಸತತ 7 ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು.

    ವಿಚಾರಣೆಯಲ್ಲಿ ಒಟ್ಟು 80 ಪ್ರಶ್ನೆ ಕೇಳಲಾಗಿತ್ತು. ಇದರಲ್ಲಿ ಕೆಲವೊಂದು ಪ್ರಶ್ನೆಗಳನ್ನು ಹೊರತುಪಡಿಸಿ ಎಲ್ಲ ಪ್ರಶ್ನೆಗಳಿಗೂ ನಳಿನಿ ಉತ್ತರಿಸಿದ್ದಾಳೆ. ಸದ್ಯಕ್ಕೆ ಮೊದಲ ಹಂತದ ವಿಚಾರಣೆ ಮುಗಿದಿದ್ದು, ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು.

    ವಿಚಾರಣೆ ಬಳಿಕ ಹೊರ ಬಂದ ನಳಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಳು. ನಾನು ನನ್ನ ಹೇಳಿಕೆಯನ್ನು ಪತ್ರಿಕೆ ಹಾಗೂ ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ. ಬೇರೆ ಏನು ಕೇಳಬೇಡಿ. ನಾನು ಏನನ್ನೂ ಹೇಳುವುದಿಲ್ಲ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ. ಮತ್ತೇನು ಹೇಳುವುದಿಲ್ಲ ಎಂದಿದ್ದಳು.

  • ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು

    ಫ್ರೀ ಕಾಶ್ಮೀರ ಪ್ಲೇ ಕಾರ್ಡ್ ಹಿಡಿದ ಯುವತಿ ಪರ ವಕಾಲತ್ತು ವಹಿಸಲ್ಲ- ಮೈಸೂರು ವಕೀಲರು

    ಮೈಸೂರು: ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಮಫಲಕ ಪ್ರದರ್ಶಿದ ನಳಿನಿ ಪರ ನ್ಯಾಯಾಲಯದಲ್ಲಿ ವಕಾಲತ್ತು ವಹಿಸದೇ ಇರಲು ಮೈಸೂರು ವಕೀಲರ ಸಂಘ ನಿರ್ಣಯಿಸಿದೆ.

    ಸಂಘದ ಕಾರ್ಯಕಾರಿ ಸಮಿತಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಪೊಲೀಸರು ರಾಷ್ಟ್ರ ವಿರೋಧಿ ಪ್ರಕರಣ ದಾಖಲಿಸಿಕೊಂಡಿರುವ ಹಿನ್ನೆಲೆಯಲ್ಲಿ ವಕಾಲತ್ತು ವಹಿಸದಂತೆ ವಕೀಲರಿಗೆ ಸೂಚನೆ ನೀಡಲಾಗಿದೆ.

    ಮೈಸೂರು ಜಿಲ್ಲಾ ನ್ಯಾಯಾಲಯದ ಯುವ ವಕೀಲರು ಫ್ರೀ ಕಾಶ್ಮೀರ ನಾಮಫಲಕ ಪ್ರದರ್ಶನ ಪ್ರಕರಣದಲ್ಲಿ ಆರೋಪಿಗಳ ಪರ ವಕಾಲತ್ತು ವಹಿಸಬೇಡಿ. ಈ ಹಿಂದೆ ಸಹ ಇಂತಹ ಪ್ರಕರಣಗಳಲ್ಲಿ ಆರೋಪಿಗಳ ಪರ ಜಿಲ್ಲಾ ನ್ಯಾಯಾಲಯದ ವಕೀಲರು ವಕಾಲತ್ತು ವಹಿಸಿಲ್ಲ. ಶಂಕಿತ ಉಗ್ರರಾದ ಫಹಾದ್ ಮತ್ತು ಅಲಿ ಪ್ರಕರಣದಲ್ಲೂ ವಕಾಲತ್ತು ವಹಿಸಿಲ್ಲ. ಹೀಗಾಗಿ ಈ ಬಾರಿಯೂ ಇದೇ ದಿಟ್ಟ ನಿರ್ಣಯ ಕೈಗೊಳ್ಳಿ. ಈ ಮೂಲಕ ಸಂಘದ ಗೌರವ ಕಾಪಾಡಿ ಎಂದು ಜಿಲ್ಲಾ ವಕೀಲರ ಸಂಘದ ಅಧ್ಯಕ್ಷ ಆನಂದ್ ಕುಮಾರ್ ಗೆ ಮನವಿ ಸಲ್ಲಿಸಿದ್ದರು.

    ಮನವಿಗೆ ಸ್ಪಂದಿಸಿದ ಜಿಲ್ಲಾ ವಕೀಲರ ಸಂಘದ ಕಾರ್ಯಕಾರಿ ಸಮಿತಿ, ಆರೋಪಿ ನಳಿನಿ ಪರ ವಕಾಲತ್ತು ವಹಿಸದಿರುವ ಕುರಿತು ನಿರ್ಣಯ ಕೈಗೊಂಡಿದೆ.

    ಮೈಸೂರಿನ ಮಾನಸಗಂಗೋತ್ರಿ ಕ್ಯಾಂಪಸ್‍ನಲ್ಲಿ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಫ್ರೀ ಕಾಶ್ಮೀರ್ ಪ್ಲೇ ಕಾರ್ಡ್ ಹಿಡಿದಿದ್ದ ವಿದ್ಯಾರ್ಥಿನಿಗೆ ಪೊಲೀಸರು ಇತ್ತೀಚೆಗೆ ಸತತ 7 ಗಂಟೆಗಳ ಕಾಲ ವಿಚಾರಣೆ ಮಾಡಿದ್ದರು.

    ವಿಚಾರಣೆಯಲ್ಲಿ ಒಟ್ಟು 80 ಪ್ರಶ್ನೆ ಕೇಳಲಾಗಿತ್ತು. ಇದರಲ್ಲಿ ಕೆಲವೊಂದು ಪ್ರಶ್ನೆಗಳನ್ನು ಹೊರತುಪಡಿಸಿ ಎಲ್ಲ ಪ್ರಶ್ನೆಗಳಿಗೂ ನಳಿನಿ ಉತ್ತರಿಸಿದ್ದಾಳೆ. ಸದ್ಯಕ್ಕೆ ಮೊದಲ ಹಂತದ ವಿಚಾರಣೆ ಮುಗಿದಿದ್ದು, ಅವಶ್ಯಕತೆ ಇದ್ದರೆ ಮತ್ತೆ ವಿಚಾರಣೆಗೆ ಕರೆಯುತ್ತಾರೆ ಎಂಬ ಮಾಹಿತಿ ಮೂಲಗಳಿಂದ ಲಭ್ಯವಾಗಿತ್ತು.

    ವಿಚಾರಣೆ ಬಳಿಕ ಹೊರ ಬಂದ ನಳಿನಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಳು. ನಾನು ನನ್ನ ಹೇಳಿಕೆಯನ್ನು ಪತ್ರಿಕೆ ಹಾಗೂ ವಿಡಿಯೋ ಮೂಲಕ ಹೇಳಿದ್ದೇನೆ. ಅದನ್ನು ಬಿಟ್ಟು ಬೇರೆ ಏನು ಹೇಳುವುದಿಲ್ಲ. ಬೇರೆ ಏನು ಕೇಳಬೇಡಿ. ನಾನು ಏನನ್ನೂ ಹೇಳುವುದಿಲ್ಲ. ಪೊಲೀಸರ ವಿಚಾರಣೆಗೆ ಸಹಕರಿಸುತ್ತೇನೆ. ಮತ್ತೇನು ಹೇಳುವುದಿಲ್ಲ ಎಂದಿದ್ದಳು.

  • ಮೈಸೂರು ವಿವಿ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಮಾಳವಿಕ ಆಗ್ರಹ

    ಮೈಸೂರು ವಿವಿ ವಿದ್ಯಾರ್ಥಿಗಳ ವಿರುದ್ಧ ಕ್ರಮಕ್ಕೆ ಮಾಳವಿಕ ಆಗ್ರಹ

    ಬೆಂಗಳೂರು: ಮೈಸೂರು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ನಟಿ, ಬಿಜೆಪಿ ವಕ್ತಾರೆ ಮಾಳವಿಕ ಅವಿನಾಶ್ ಆಗ್ರಹಿಸಿದ್ದಾರೆ.

    ಒಂದು ವೀಡಿಯೋ ಟ್ವೀಟ್ ಮಾಡಿರುವ ನಟಿ, ಈ ವಿಡಿಯೋ ಜೆಎನ್‍ಯುದ್ದು ಅಲ್ಲ. ಇದರಲ್ಲಿರುವುದು ನಮ್ಮ ಮೈಸೂರು ಯೂನಿರ್ವಸಿಟಿಯ ವಿದ್ಯಾರ್ಥಿಗಳು. ಈ ಮೂಲಕ ಫ್ರೀ ಕಾಶ್ಮೀರದ ಕೂಗು ಕರ್ನಾಟಕದ ಮಣ್ಣಿಗೂ ಪಸರಿಸಿರುವುದನ್ನು ಕಾಣಬಹುದಾಗಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಿ ಎಂದು ಬರೆದುಕೊಂಡಿದ್ದಾರೆ. ಅಲ್ಲದೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ, ಸಚಿವ ಬಸವರಾಜ್ ಬೊಮ್ಮಾಯಿ ಹಾಗೂ ಸಂಸದ ಪ್ರತಾಪ್ ಸಿಂಹ ಮೊದಲಾದವರಿಗೆ ಟ್ಯಾಗ್ ಮಾಡಿದ್ದಾರೆ.

    ಏನಿದು ಘಟನೆ?:
    ಜೆಎನ್‍ಯು ವಿದ್ಯಾರ್ಥಿಗಳ ಮೇಲೆ ಹಲ್ಲೆ ಖಂಡಿಸಿ ಮೈಸೂರು ವಿವಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನಾ ಮೆರವಣಿಗೆ ವೇಳೆ ಫ್ರೀ ಕಾಶ್ಮೀರ್ ಪೋಸ್ಟರ್ ಗಳು ರಾರಾಜಿಸಿವೆ. ಪ್ರತಿಭಟನೆಯ ಮೂಲ ಉದ್ದೇಶ ಬಿಟ್ಟು ಫ್ರೀ ಕಾಶ್ಮೀರ್ ಬಗ್ಗೆ ವಿದ್ಯಾರ್ಥಿಗಳಿಂದ ಪೋಸ್ಟರ್ ಪ್ರದರ್ಶನದ ಹಿಂದೆ ಯಾರ ಕೈವಾಡವಿದೆ ಎಂಬ ಪ್ರಶ್ನೆ ಎದುರಾಗಿದೆ. ಈ ಮೂಲಕ ಮೈಸೂರು ವಿವಿಯ ವಿದ್ಯಾರ್ಥಿಗಳು ಜೆಎನ್‍ಯು ಮಾದರಿ ಅನುಸರಿಸುವುದಕ್ಕೆ ಮುಂದಾಗಿದ್ದಾರಾ ಎಂಬ ಪ್ರಶ್ನೆ ಕೂಡ ಮೂಡಿಸಿದೆ.

    ಜೆಎನ್‍ಯು ವಿವಿಯ ವಿದ್ಯಾರ್ಥಿಗಳ ಮೇಲಿನ ಖಂಡಿಸಿ ಎಬಿವಿಪಿ ವಿರುದ್ಧ ಪಂಜಿನ ಮೆರವಣಿಗೆ ನಡೆಸಲಾಗಿತ್ತು. ಮೈಸೂರು ವಿಶ್ವವಿದ್ಯಾನಿಲಯ ಸಂಶೋಧಕರ ಸಂಘ, ದಲಿತ ವಿದ್ಯಾರ್ಥಿಗಳ ಒಕ್ಕೂಟ, ಸ್ಟೂಡೆಂಟ್ ಫೆಡರೇಶನ್ ಆಫ್ ಇಂಡಿಯಾ ಬಹುಜನ ವಿದ್ಯಾರ್ಥಿ ಸಂಘದಿಂದ ಈ ಪ್ರತಿಭಟನಾ ಮೆರವಣಿಗೆ ನಡೆದಿತ್ತು. ಎಬಿವಿಪಿ, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಗಿತ್ತು. ಮೈಸೂರು ವಿವಿ ಮಾನಸಗಂಗೋತ್ರಿಯ ಕ್ಲಾಕ್ ಟವರ್ ಬಳಿಯಿಂದ ಕುವೆಂಪು ಪ್ರತಿಮೆವರೆಗೆ ಪಂಜಿನ ಮೆರವಣಿಗೆ ನಡೆದಿತ್ತು.

    ವಿವಿಗೆ ನುಗ್ಗಿ ದಾಂಧಲೆ ನಡೆಸಲಾಗಿದೆ. ಜೆಎನ್‍ಯು ವಿದ್ಯಾರ್ಥಿಗಳಲ್ಲದೇ ಉಪಾಧ್ಯಾಯರ ಮೇಲೂ ಮಾರಣಾಂತಿಕ ಹಲ್ಲೆ ಮಾಡಿದ್ದಾರೆಂದು ಆರೋಪಿಸಿದ್ದರು. ಹೀಗಾಗಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿದ್ದರು. ಈ ಕೂಗಿನ ನಡುವೆ ಫ್ರೀ ಕಾಶ್ಮೀರ ಪೋಸ್ಟರ್‍ಗಳನ್ನು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಪ್ರದರ್ಶಿಸಿರೋದು ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದೆ.

  • ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರಿಡಬೇಕು- ಪ್ರಾಧ್ಯಾಪಕರ ಒತ್ತಾಯ

    ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರಿಡಬೇಕು- ಪ್ರಾಧ್ಯಾಪಕರ ಒತ್ತಾಯ

    ಮೈಸೂರು: ಮೈಸೂರು ವಿಶ್ವವಿದ್ಯಾಲಯಕ್ಕೆ ಮಹಿಷಾಸುರನ ಹೆಸರು ಇಡಬೇಕು. ಮಹಿಷಾಸುರನ ಹೆಸರನ್ನು ಅಜರಾಮರವಾಗಿಸಲು ಮೈಸೂರು ವಿವಿಗೆ ಮರುನಾಮಕರಣ ಮಾಡಬೇಕು ಎಂದು ಮೈಸೂರು ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ. ಮಹೇಶ್ಚಂದ್ರಗುರು ಹೇಳಿದ್ದಾರೆ.

    ಇದೇ ಸಂದರ್ಭದಲ್ಲಿ ನಗರದ ಬೆಂಗಳೂರು-ಮೈಸೂರು ಹೆದ್ದಾರಿಯ ಕೊಲಂಬಿಯಾ ಏಷಿಯಾ ಆಸ್ಪತ್ರೆ ಸಮೀಪದ ವೃತ್ತದಲ್ಲಿ ಮಹಿಷಾಸುರನ ಬೃಹತ್ ಪ್ರತಿಮೆ ನಿರ್ಮಿಸಬೇಕು. ರಾಜ್ಯ ಸರ್ಕಾರ ಮಹಿಷ ಹಬ್ಬಕ್ಕೆ ಹೆಚ್ಚಿನ ಅನುದಾನ ನೀಡಬೇಕು ಎಂದು ಮಹೇಶ್ಚಂದ್ರಗುರು ಆಗ್ರಹಿಸಿದರು.

    ಇಂದು ದಲಿತ ಸಂಘಟನೆಗಳು, ಪ್ರಗತಿಪರ ಒಕ್ಕೂಟ ಮೈಸೂರಿನಲ್ಲಿ ಮಹಿಷಾ ದಸರಾ ಮೆರವಣಿಗೆಯನ್ನು ಆಯೋಜನೆ ಮಾಡಿತ್ತು. ಬೆಳ್ಳಿ ರಥದಲ್ಲಿ ಮಹಿಷಾಸುರನ ಭಾವಚಿತ್ರವಿಟ್ಟು ಮೈಸೂರಿನ ಪುರಭವನದಿಂದ ಚಾಮುಂಡಿಬೆಟ್ಟದ ಮೇಲಿನ ಮಹಿಷಾಸುರನ ಪ್ರತಿಮೆವರೆಗೂ ಮೆರವಣಿಗೆ ಮಾಡಲಾಯಿತು. ಚಾಮುಂಡಿ ದಸರಾಕ್ಕಿಂತಾ ಮಹಿಷಾ ದಸರಾ ಮುಖ್ಯ ಎಂದು ಸಾರುವ ಉದ್ದೇಶದಿಂದ ಈ ಮೆರವಣಿಗೆಯನ್ನು ಕೈಗೊಳ್ಳಲಾಗಿದೆ. ಸಾಹಿತಿ ಕೆ.ಎಸ್. ಭಗವಾನ್, ಮಹೇಶ್ಚಂದ್ರಗುರು ಸೇರಿ ಹಲವರು ಭಾಗಿಯಾಗಿದ್ದಾರೆ.

  • ಮೈಸೂರು ವಿವಿ ಪ್ರಾಧ್ಯಾಪಕನಿಂದಲೇ ಅಶ್ಲೀಲ ವೆಬ್‍ಸೈಟಿಗೆ ವಿದ್ಯಾರ್ಥಿನಿಯರ ಫೋಟೋ ಅಪ್ಲೋಡ್?

    ಮೈಸೂರು ವಿವಿ ಪ್ರಾಧ್ಯಾಪಕನಿಂದಲೇ ಅಶ್ಲೀಲ ವೆಬ್‍ಸೈಟಿಗೆ ವಿದ್ಯಾರ್ಥಿನಿಯರ ಫೋಟೋ ಅಪ್ಲೋಡ್?

    ಮೈಸೂರು: ಮಾನಸ ಗಂಗೋತ್ರಿಯ  ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರ ಭಾವಚಿತ್ರಗಳನ್ನು ಅಶ್ಲೀಲ ವೆಬ್‍ಸೈಟ್‍ಗೆ ಹಾಕಿದ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಈಗ ವಿಶ್ವವಿದ್ಯಾಲಯದ ಪ್ರಾಧ್ಯಾಪಕನ ವಿರುದ್ಧವೇ ವಿದ್ಯಾರ್ಥಿನಿಯರು ಅನುಮಾನ ವ್ಯಕ್ತಪಡಿಸಿ ಕುಲಸಚಿವರಿಗೆ ಪತ್ರ ಬರೆದು ದೂರು ನೀಡಿದ್ದಾರೆ.

    ವಿವಿಯ ಪರಿಸರ ವಿಜ್ಞಾನ ವಿಭಾಗದ ಸ್ನಾತಕೋತ್ತರ ಪದವಿ ವಿದ್ಯಾರ್ಥಿನಿಯರು ತಮ್ಮದೇ ವಿಭಾಗದ ಪ್ರಾಧ್ಯಾಪಕ ಎ.ಜಿ.ದೇವಿಪ್ರಸಾದ್ ವಿರುದ್ಧ ಅನುಮಾನ ವ್ಯಕ್ತಪಡಿಸಿ ವಿಭಾಗದ ಮುಖ್ಯಸ್ಥರಿಗೆ ಮತ್ತು ವಿವಿ ಕುಲಸಚಿವರಿಗೆ ಪತ್ರ ಬರೆದಿದ್ದಾರೆ.

    ದೂರಿನಲ್ಲಿ ಏನಿದೆ?
    ಪ್ರಾಧ್ಯಾಪಕ ಎ.ಜಿ.ದೇವಿಪ್ರಸಾದ್ ನಮ್ಮ ಜತೆ ಅನುಚಿತವಾಗಿ ವರ್ತಿಸುತ್ತಿದ್ದರು. ನಿಮ್ಮನ್ನು ಚಾರಿತ್ರ್ಯಹೀನರು ಎಂಬುದನ್ನು ನಾನು ಸಾಬೀತು ಮಾಡುವೆ. ಇದಕ್ಕಾಗಿ ನಾನು ಯಾವುದೇ ಮಟ್ಟ ತಲುಪಲು ಸಿದ್ಧ ಎಂದು ತರಗತಿಯಲ್ಲೇ ನಮಗೆ ಬೆದರಿಕೆ ಹಾಕಿದ್ದರು. ತರಗತಿಯಲ್ಲಿ ನಡೆದ ಆಂತರಿಕ ಪರೀಕ್ಷೆಯಲ್ಲಿ ನಮಗೆ ಅತೀ ಕಡಿಮೆ ಅಂಕಗಳನ್ನು ನೀಡಿ ಸೇಡು ತೀರಿಸಿಕೊಂಡಿದ್ದರು. ತರಗತಿಯಲ್ಲಿ ಲೈಂಗಿಕ ಹಾಸ್ಯಗಳನ್ನು ಮಾಡುತ್ತಿದ್ದರು. ಈ ಹಾಸ್ಯಗಳಿಂದ ನಾವು ಮುಜುಗರಕ್ಕೆ ಒಳಗಾಗಿದ್ದೇವು. ಅಷ್ಟೇ ಅಲ್ಲದೇ ಅವರು ತನ್ನ ಜೊತೆ ಪ್ರಾಜೆಕ್ಟ್ ಮಾಡುವಂತೆ ನಮ್ಮನ್ನು ಬಲವಂತ ಮಾಡುತ್ತಿದ್ದರು. ಈ ಪ್ರಾಜೆಕ್ಟ್ ಗೆ ನಾವು ಒಪ್ಪದಿದ್ದಕ್ಕೆ ನಮ್ಮ ಮೇಲೆ ಈ ರೀತಿಯ ಸೇಡನ್ನು ತೀರಿಸಿಕೊಂಡಿದ್ದಾರೆ ಎಂದು ಸವಿಸ್ತಾರವಾಗಿ ವಿದ್ಯಾರ್ಥಿನಿಯರು ಪತ್ರದಲ್ಲಿ ದೇವಿಪ್ರಸಾದ್ ವರ್ತನೆಯನ್ನು ಉಲ್ಲೇಖಿಸಿದ್ದಾರೆ.

    ಏನಿದು ಪ್ರಕರಣ?
    ಲೋಕ್ಯಾಟೋ ಎಂಬ ವೇಶ್ಯಾವಾಟಿಕೆಯ ವೆಬ್‍ಸೈಟ್ ನಲ್ಲಿ ಮೈಸೂರು ವಿಶ್ವವಿದ್ಯಾಲಯದ ವಿಜ್ಞಾನ ವಿಭಾಗದ 10 ವಿದ್ಯಾರ್ಥಿನಿಯರ ಫೋಟೋ ಮತ್ತು ಮೊಬೈಲ್ ನಂಬರ್ ಅಪ್ಲೋಡ್ ಮಾಡಲಾಗಿತ್ತು. ಇದರಿಂದಾಗಿ ಈ ವೆಬ್‍ಸೈಟ್ ನೋಡುವ ಕಾಮುಕರು ಈ ನಂಬರ್ ಗಳಿಗೆ ಕರೆ ಮಾಡಿ ಕೆಟ್ಟದಾಗಿ ಮಾತಾಡುತ್ತಿದ್ದರು. ನಮ್ಮ ನಂಬರ್ ಬೇರೆಯವರಿಗೆ ಹೇಗೆ ಸಿಕ್ಕಿತು? ಅದರಲ್ಲೂ ಈ ರೀತಿ ಯಾಕೆ ಕೆಟ್ಟದಾಗಿ ಮಾತಾಡುತ್ತಿದ್ದಾರೆ ಅಂತಾ ವಿದ್ಯಾರ್ಥಿನಿಯರು ಪರಿಶೀಲಿಸಿದಾಗ ಅವರ ಫೋಟೋ ಮತ್ತು ನಂಬರ್ ಅನ್‍ಲೈನ್ ವೇಶ್ಯಾವಾಟಿಕೆಯ ವೆಬ್‍ಸೈಟ್‍ನಲ್ಲಿ ಇರುವುದು ಗಮನಕ್ಕೆ ಬಂದಿತ್ತು. ತಕ್ಷಣ ಈ ವಿಚಾರವನ್ನು ವಿಭಾಗದ ಮುಖ್ಯಸ್ಥರ ಗಮನಕ್ಕೆ ತಂದು ನಂತರ ವಿವಿಯ ಕುಲಸಚಿವರ ಗಮನಕ್ಕೆ ತರಲಾಗಿತ್ತು. ಅವರ ಅನುಮತಿಯಂತೆ ಮೈಸೂರಿನ ಜಯಲಕ್ಷ್ಮೀಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ.

    ಈ ಸುದ್ದಿ ಬೆಳಕಿಗೆ ಬಂದಾಗ ವಿವಿಯ ಒಳಗಡೆ ಇರುವ ವಿದ್ಯಾರ್ಥಿನಿಯರಿಗೆ ಪರಿಚಯ ಇರುವ ವ್ಯಕ್ತಿಗಳೇ ಈ ಕೃತ್ಯ ಎಸಗಿದ್ದಾರೆ ಎನ್ನುವ ಶಂಕೆ ಮೂಡಿತ್ತು. ಈ ಶಂಕೆಗೆ ಪೂರಕ ಎಂಬಂತೆ ವಿದ್ಯಾರ್ಥಿನಿಯರು ಈಗ ಪ್ರಾಧ್ಯಾಪಕನ ವಿರುದ್ಧ ದೂರು ನೀಡಿದ್ದು ತನಿಖೆಯಿಂದ ನಿಜಾಂಶ ಪ್ರಕಟವಾಗಲಿದೆ.