Tag: mysuru zoo

  • ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

    ಕಾರಂಜಿ ಕೆರೆಯಲ್ಲಿ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ ನಿರ್ಮಿಸಲು ಮುಂದಾದ ಸರ್ಕಾರ

    -ಮೈಸೂರು ಮೃಗಾಲಯ, ಬನ್ನೇರುಘಟ್ಟ ಝೂ ಪ್ರವೇಶ ಶುಲ್ಕ ಶೇ.20ರಷ್ಟು ಹೆಚ್ಚಳ
    – ಸಫಾರಿ ದರದಲ್ಲಿ ಹೆಚ್ಚಳ ಇಲ್ಲ, ಪ್ರವಾಸಿಗರಿಗೆ ಹೆಚ್ಚಿನ ಸೌಲಭ್ಯ ಕಲ್ಪಿಸಲು ಸೂಚನೆ

    ಮೈಸೂರು: ಜಿಲ್ಲೆಯ ಕಾರಂಜಿ ಕೆರೆಯಲ್ಲಿರುವ ಮತ್ಸ್ಯಾಗಾರ ಬದಲಿಗೆ ಪೆಂಗ್ವಿನ್ ಪಾರ್ಕ್ (Penguin Park) ನಿರ್ಮಿಸಲು ಸರ್ಕಾರ ಮುಂದಾಗಿದ್ದು, ಜೊತೆಗೆ ಮೈಸೂರು ಮೃಗಾಲಯ (Mysuru Zoo), ಬನ್ನೇರುಘಟ್ಟ ಝೂ (Bannerghatta) ಪ್ರವೇಶ ಶುಲ್ಕವನ್ನು ಶೇ.20ರಷ್ಟು ಹೆಚ್ಚಿಸಲು ನಿರ್ಧರಿಸಿದೆ.

    ವಿಕಾಸಸೌಧದಲ್ಲಿಂದು ನಡೆದ ಕರ್ನಾಟಕ ಮೃಗಾಲಯ ಪ್ರಾಧಿಕಾರದ 159ನೇ ಆಡಳಿತ ಮಂಡಳಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಈಶ್ವರ ಬಿ ಖಂಡ್ರೆ ಅವರು, ಮತ್ಸ್ಯಾಗಾರದ ಕಟ್ಟಡದಲ್ಲಿ ಪೆಂಗ್ವಿನ್ ಧಾಮ ಮಾಡುವುದು ಸೂಕ್ತವೆಂದು ತಜ್ಞರು ಅಭಿಪ್ರಾಯಪಟ್ಟಿರುವ ಹಿನ್ನೆಲೆಯಲ್ಲಿ ಕೂಡಲೇ ಪ್ರಸ್ತಾವನೆ ಸಲ್ಲಿಸಲು ಸೂಚಿಸಿದರು.ಇದನ್ನೂ ಓದಿ: ವಡೋದರಾ ಸೇತುವೆ ದುರಂತ – ಸಾವಿನ ಸಂಖ್ಯೆ 17ಕ್ಕೆ ಏರಿಕೆ

    ಮೃಗಾಲಯಗಳಲ್ಲಿ ಆಧುನಿಕ ಸೌಲಭ್ಯ ಕಲ್ಪಿಸಿದರೆ, ಹೊಸ ವನ್ಯಜೀವಿಗಳು ಸೇರ್ಪಡೆಯಾದರೆ ಪ್ರವಾಸಿಗರಿಗೆ ಹೆಚ್ಚಿನ ಆಕರ್ಷಣೆ ಇರುತ್ತದೆ. ಈ ನಿಟ್ಟಿನಲ್ಲಿ ವಿದೇಶಿ ಮೃಗಾಲಯಗಳೊಂದಿಗೆ ವಿನಿಮಯ ಕಾರ್ಯಕ್ರಮಕ್ಕೆ ಕ್ರಮ ವಹಿಸಬೇಕು ಎಂದು ಸೂಚಿಸಿದರು. ಮುಂದಿನ 5 ವರ್ಷಗಳಲ್ಲಿ ಆಯಾ ಮೃಗಾಲಯಗಳು ತಮ್ಮ ಖರ್ಚು, ವೆಚ್ಚವನ್ನು ತಾವೇ ನಿರ್ವಹಿಸಲು ಶಕ್ತವಾಗುವಂತೆ ಮತ್ತು ಆರ್ಥಿಕ ಸ್ವಾವಲಂಬನೆ ಸಾಧಿಸಲು ಅನುವಾಗುವಂತೆ ಯೋಜನೆ ರೂಪಿಸಲು ತಿಳಿಸಿದರು.

    ಗಣಿಬಾಧಿತ ಜಿಲ್ಲೆಗಳಲ್ಲಿರುವ ಮೃಗಾಲಯಗಳ ಅಭಿವೃದ್ಧಿಗೆ ಕೆಎಂಇಆರ್‌ಸಿ ನಿಧಿಯನ್ನು ಬಳಕೆ ಮಾಡಿಕೊಳ್ಳುವಂತೆ ತಿಳಿಸಿದ ಅವರು, ದಾವಣಗೆರೆಯ ಮೃಗಾಲಯ ಅಭಿವೃದ್ಧಿಗೆ 2 ಕೋಟಿ ರೂ. ಬಿಡುಗಡೆಗೆ ಅನುಮೋದನೆ ನೀಡಿದರು. ಬೀದರ್‌ನಲ್ಲಿ 20 ಕೋಟಿ ರೂ. ವೆಚ್ಚದಲ್ಲಿ ಪಕ್ಷಿಧಾಮ, ವಿದೇಶಿ ಹಕ್ಕಿ, ಪಕ್ಷಿಗಳ ವಿಶಿಷ್ಟವಾದ ಪಕ್ಷಿಲೋಕವನ್ನು ನಿರ್ಮಿಸಲು ವಿಸ್ತೃತ ಯೋಜನಾ ವರದಿ ಸಿದ್ಧಪಡಿಸುವಂತೆ ತಿಳಿಸಿದರು. ಜೊತೆಗೆ ಈ ಯೋಜನೆಗೆ 20 ಕೋಟಿ ರೂ.ಗಳನ್ನು ಹಂಚಿಕೆ ಮಾಡಲು ಸೂಚಿಸಿದರು.

    ಇನ್ನೂ ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಬನ್ನೇರುಘಟ್ಟ ಮೃಗಾಲಯದಲ್ಲಿನ ಪಶು, ಪಕ್ಷಿಗಳ ನಿರ್ವಹಣಾ ವೆಚ್ಚ ಮತ್ತು ಸಿಬ್ಬಂದಿ ವೇತನ ಹೆಚ್ಚಳ ಹಿನ್ನೆಲೆಯಲ್ಲಿ ಪ್ರವೇಶ ದರವನ್ನು ಶೇ.50ರಷ್ಟು ಹೆಚ್ಚಿಸಬೇಕೆಂಬ ಪ್ರಾಧಿಕಾರದ ಪ್ರಸ್ತಾವನೆಗೆ ಪ್ರತಿಕ್ರಿಯಿಸಿದರು. ಏಕಾಏಕಿ ಶೇ.50ರಷ್ಟು ಹೆಚ್ಚಳ ಮಾಡುವುದು ಸರಿಯಲ್ಲ. ಶೇ.20ರಷ್ಟು ಮಾತ್ರವೇ ದರ ಹೆಚ್ಚಳ ಮಾಡಿ ಎಂದು ಅನುಮೋದನೆ ನೀಡಿದರು. ಸಫಾರಿ ದರ ಹೆಚ್ಚಿಸದಂತೆ ಸೂಚಿಸಿದರು. ವನ್ಯಜೀವಿ ವೀಕ್ಷಣೆಗೆ ದೇಶ ವಿದೇಶಗಳಿಂದ ಬರುವ ಪ್ರವಾಸಿಗರಿಗೆ ಮೃಗಾಲಯದಲ್ಲಿ ಮತ್ತು ಜೈವಿಕ ಉದ್ಯಾನದಲ್ಲಿ ಶುದ್ಧ ಕುಡಿಯುವ ನೀರು, ವಿಶ್ರಾಂತಿ ಧಾಮ, ಪುರುಷ ಮತ್ತು ಮಹಿಳೆಯರ ಶೌಚಾಲಯದ ಜೊತೆಗೆ ಹೆಚ್ಚಿನ ಸೌಲಭ್ಯ, ಸೌಕರ್ಯಗಳನ್ನು ಒದಗಿಸುವಂತೆ ಮತ್ತು ಸ್ವಚ್ಛತೆ ಕಾಪಾಡುವಂತೆ ಸೂಚಿಸಿದರು. ಯಾವುದೇ ಕಾರಣಕ್ಕೂ ಏಕ ಬಳಕೆ ಪ್ಲಾಸ್ಟಿಕ್ ತ್ಯಾಜ್ಯ ಮೃಗಾಲಯ ಮತ್ತು ಜೈವಿಕ ಉದ್ಯಾನ ಪ್ರವೇಶಿಸದಂತೆ ಕಟ್ಟೆಚ್ಚರ ವಹಿಸಲು ನಿರ್ದೇಶನ ನೀಡಿದರು.

    ಸಭೆಯಲ್ಲಿ ಮುಖ್ಯ ವನ್ಯಜೀವಿ ಪರಿಪಾಲಕರಾದ ಪಿ.ಸಿ.ರೇ,ಅಧಿಕಾರಿಗಳಾದ ಸುನೀಲ್ ಪಾಂವಾರ್, ಸೂರ್ಯಸೇನ್ ಮತ್ತಿತರರು ಪಾಲ್ಗೊಂಡಿದ್ದರು.ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ ಮಾಡುವ ಖಾತೆಗಳು ಕಂಡ್ರೆ ಸೈಬರ್‌ ಸೆಲ್‌ಗೆ ದೂರು ನೀಡಿ – ಸಿಎಂ

  • ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿ ಸೆರೆ – ಚಿಕಿತ್ಸೆಗೆ ಮೈಸೂರಿನ ಮೃಗಾಲಯಕ್ಕೆ ರವಾನೆ

    ಅನಾರೋಗ್ಯದಿಂದ ಬಳಲುತ್ತಿದ್ದ ಹುಲಿ ಸೆರೆ – ಚಿಕಿತ್ಸೆಗೆ ಮೈಸೂರಿನ ಮೃಗಾಲಯಕ್ಕೆ ರವಾನೆ

    ಮಡಿಕೇರಿ: ಅನಾರೋಗ್ಯದಿಂದ ಬಳಲುತ್ತಿದ್ದ 12 ವರ್ಷದ ಗಂಡು ಹುಲಿಯೊಂದನ್ನು (Tiger) ಅರಣ್ಯ ಇಲಾಖೆಯ ಅಧಿಕಾರಿಗಳು ಸೆರೆ ಹಿಡಿದು ಚಿಕಿತ್ಸೆಗಾಗಿ ಮೈಸೂರಿನ ಮೃಗಾಲಯಕ್ಕೆ (Mysuru Zoo) ಕಳುಹಿಸಿದ್ದಾರೆ.

    ವಿರಾಜಪೇಟೆ ತಾಲೂಕಿನ ಮಾಲ್ದಾರೆ ಗ್ರಾಮದಲ್ಲಿ ಹುಲಿ ಮಂಗಳವಾರ ಸೆರೆಯಾಗಿದೆ. ಗ್ರಾಮದ ಅಸ್ತಾನ ಭಾಗದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಹುಲಿಯನ್ನು ಸೆರೆ ಹಿಡಿದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳುಹಿಸಿದ್ದಾರೆ.

    ಸಾಕಾನೆಗಳಾದ ಪ್ರಶಾಂತ, ಸುಗ್ರೀವ, ಶ್ರೀರಾಮ, ಹರ್ಷ, ವಿಕ್ರಂ, ಈಶ್ವರ ಸಹಕಾರದೊಂದಿಗೆ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು. ವನ್ಯಜೀವಿ ವೈದ್ಯಾಧಿಕಾರಿ ಡಾ. ರಮೇಶ್ ಹಾಗೂ ಕುಶಾಲನಗರ ಉಪವಲಯ ಅರಣ್ಯಾಧಿಕಾರಿ ರಂಜನ್ ಹುಲಿಗೆ ಅರಿವಳಿಕೆ ಚುಚ್ಚುಮದ್ದು ಪ್ರಯೋಗಿಸಿದ್ದರು. ಇದನ್ನೂ ಓದಿ: ಭಾರತದೊಂದಿಗೆ ಭಿನ್ನಾಭಿಪ್ರಾಯ ಮರೆತು ನಮ್ಮ ಲಸಿಕೆಯನ್ನು ತರಿಸಿಕೊಳ್ಳಿ: ಚೀನಾಗೆ ಪೂನಾವಾಲಾ ಸಲಹೆ

    ಕೆಲಕಾಲ ಓಡಿದ ಹುಲಿ, ಬಳಿಕ ಅಸ್ತಾನ ಗ್ರಾಮದ ಬಳಿ ನಿತ್ರಾಣಗೊಂಡು ಬಿದ್ದಿತ್ತು. ನಂತರ ಹುಲಿಯನ್ನು ಬಲೆ ಹಾಕಿ ಹಿಡಿಯಲಾಯಿತು. ಹುಲಿಯ ಹಲ್ಲು ಹಾಗೂ ಕಾಲಿನ ಭಾಗದಲ್ಲಿ ಗಾಯಗಳಾಗಿದ್ದು, ಆಹಾರ ಸೇವನೆ ಮಾಡದೇ ಇದ್ದಿದ್ದರಿಂದ ಸಾಕಷ್ಟು ಬಳಲಿತ್ತು. ವನ್ಯಜೀವಿ ವೈದ್ಯಾಧಿಕಾರಿ ಡಾ. ಚಿಟ್ಟಿಯಪ್ಪ ಹಾಗೂ ಡಾ. ರಮೇಶ್ ಹುಲಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಆರೈಕೆಗಾಗಿ ಮೈಸೂರಿನ ಚಾಮರಾಜೇಂದ್ರ ಮೃಗಾಲಯಕ್ಕೆ ಕಳುಹಿಸಿದ್ದಾರೆ. ಇದನ್ನೂ ಓದಿ: ಕೊಪ್ಪಳದಲ್ಲಿ ಕೋಳಿಗಳನ್ನು ಅರೆಸ್ಟ್ ಮಾಡಿದ ಖಾಕಿ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ನನಗೆ ಸಿಎಂ ಆಗೋ ಎಲ್ಲಾ ಅರ್ಹತೆಯಿದೆ: ಉಮೇಶ್ ಕತ್ತಿ

    ಮೈಸೂರು: ನನಗೆ ಸಿಎಂ ಆಗುವ ಎಲ್ಲಾ ಅರ್ಹತೆಯಿದೆ. ಹಣೆ ಬರಹದಲ್ಲಿ ಬರೆದಿದ್ದರೆ ನಾನೂ ಸಿಎಂ ಆಗ್ತೇನೆ ಎಂದು ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ.

    ಮೈಸೂರಿನಲ್ಲಿಂದು ಪ್ರತ್ಯೇಕ ರಾಜ್ಯದ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಅಭಿವೃದ್ಧಿ ದೃಷ್ಟಿಯಿಂದ ನಾನು ಪ್ರತ್ಯೇಕ ರಾಜ್ಯ ಕೇಳುತ್ತಿದ್ದೇನೆ ಹೊರತು ಬೇರೆ ಉದ್ದೇಶ ಇಲ್ಲ ಎಂದು ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿ: ಸೆಪ್ಟೆಂಬರ್‌ವರೆಗೂ ಉಚಿತ ಪಡಿತರ ಯೋಜನೆಯನ್ನು ವಿಸ್ತರಿಸಿದ ದೆಹಲಿ ಸರ್ಕಾರ

    ಇರುವ 224 ಶಾಸಕರಲ್ಲಿ ನಾನೇ ಹಿರಿಯ ಶಾಸಕ. ನನಗೆ ಸಿಎಂ ಆಗಿವ ಎಲ್ಲಾ ಅರ್ಹತೆ ಇದೆ. ನಾನು ಸಿಎಂ ಆಗಬೇಕಾದರೆ ಅಖಂಡ ಕರ್ನಾಟಕದ ಸಿಎಂ ಆಗುತ್ತೇನೆ. ಆದರೆ ಸಿಎಂ ಸ್ಥಾನಕ್ಕಾಗಿ ಪ್ರತ್ಯೇಕ ರಾಜ್ಯ ಕೇಳುತ್ತಿಲ್ಲ. ಪ್ರತ್ಯೇಕ ರಾಜ್ಯವಾದರೂ ನಾವು ಕನ್ನಡಿಗರೇ, ಆಂಧ್ರ, ತೆಲಂಗಾಣ ರೀತಿಯಲ್ಲೇ ನಮ್ಮದೂ ಪ್ರತ್ಯೇಕವಾಗಲಿ ಎಂದು ಬಯಸಿದ್ದೇನೆ ಅಷ್ಟೇ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಆಕೆಯ ಮೇಲೆ ಪದೇ-ಪದೇ ಅತ್ಯಾಚಾರ ಮಾಡಿದ್ರು, ನರಮಾಂಸ ತಿನ್ನುವಂತೆ ಒತ್ತಾಯಿಸಿದ್ರು!

    ನಮ್ಮ ಜನರ ದೃಷ್ಟಿಯಿಂದ ನಾನೇ ಹಿರಿಯನಾಗಿ ಧ್ವನಿ ಎತ್ತಿದ್ದೇನೆ. ಹೈಕಮಾಂಡ್ ಮಟ್ಟದಲ್ಲೂ ಹೊಸ ರಾಜ್ಯಗಳ ರಚನೆ ಬಗ್ಗೆ ಚಿಂತನೆ ನಡೆದಿದೆ ಎಂಬುದು ನನ್ನ ಅನಿಸಿಕೆ. ನಾನು ಮಾತನಾಡಿದರೆ ಆ ವಿಚಾರ ಕೇಂದ್ರದ ಮಟ್ಟಕ್ಕೂ ಹೋಗುತ್ತದೆ. ಆದ್ದರಿಂದಲೇ ಪ್ರತ್ಯೇಕ ರಾಜ್ಯದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು ಹೇಳಿದ್ದಾರೆ.

    bjP

    ಬೆಂಗಳೂರಿನಲ್ಲಿ ಲಾ ಅಂಡ್ ಆರ್ಡರ್ ಎಲ್ಲಿದೆ?
    ಇದೇ ವೇಳೆ ಸ್ವಪಕ್ಷೀಯ ಸರ್ಕಾರದ ಆಡಳಿತವನ್ನೇ ಪ್ರಶ್ನಿಸಿದ ಉಮೇಶ್ ಕತ್ತಿ, ದೊಡ್ಡ ರಾಜ್ಯಗಳಾದಾಗ ಇಂತಹ ಸಮಸ್ಯೆಗಳು ಇದ್ದೇ ಇರುತ್ತವೆ. ಇದೇ ಕಾರಣಕ್ಕೆ ನಾವು ರಾಜ್ಯ ಇಬ್ಬಾಗ ಆಗಬೇಕೆಂದು ಕೇಳುತ್ತಿದ್ದೇನೆ. ಜಲಾಶಯಗಳ ನೀರಿನ ಬಳಕೆ, ಗಡಿ ಸಮಸ್ಯೆಗಳ ನಿವಾರಣೆ ಇದರ ದೃಷ್ಟಿಯಿಂದ ಚಿಕ್ಕ ರಾಜ್ಯಗಳು ಆಗಬೇಕು. ಅತಿ ಹೆಚ್ಚು ಜನಸಂಖ್ಯೆ ಇದ್ದಾಗ ಯಾವ ಸಮಸ್ಯೆಗಳೂ ಬಗೆಹರಿಯುವುದಿಲ್ಲ ಎಂದು ಕುಟುಕಿದ್ದಾರೆ.

    ಪ್ರತಿ ಜಿಲ್ಲೆಗಳಿಗೂ ಮೃಗಾಲಯ?
    ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲೂ ಮೃಗಾಲಯಗಳನ್ನು ಸ್ಥಾಪಿಸುವ ಚಿಂತನೆ ನಡೆಸಿದ್ದೇವೆ. ಇದಕ್ಕಾಗಿ ಎಲ್ಲ ಜಿಲ್ಲೆಗಳಲ್ಲೂ ಸೂಕ್ತ ಸ್ಥಳವನ್ನು ಗುರುತು ಮಾಡುತ್ತಿದ್ದೇವೆ. ರಾಜ್ಯದ ಈ ಪ್ರಸ್ತಾಪವನ್ನು ಕೇಂದ್ರಕ್ಕೆ ಕಳುಹಿಸುತ್ತೇವೆ. ಕೇಂದ್ರದ ಅನುಮತಿ ಬಂದ ಮೇಲೆಯೇ ಈ ಕಾರ್ಯ ಶುರುವಾಗಲಿದೆ ಎಂದು ಮಾಹಿತಿ ನೀಡಿದ್ದಾರೆ.

    Live Tv

  • ಮೈಸೂರು ಮೃಗಾಲಯಕ್ಕೆ ಹ್ಯಾಟ್ರಿಕ್ ಹೀರೋ ಭೇಟಿ

    ಮೈಸೂರು ಮೃಗಾಲಯಕ್ಕೆ ಹ್ಯಾಟ್ರಿಕ್ ಹೀರೋ ಭೇಟಿ

    ಮೈಸೂರು: ಸ್ಯಾಂಡಲ್‍ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಇಂದು ಮೈಸೂರು ಮೃಗಾಲಯಕ್ಕೆ ಭೇಟಿ ನೀಡಿದ್ದಾರೆ.

    ಪತ್ನಿ, ಇಬ್ಬರು ಮಕ್ಕಳು ಹಾಗೂ ಅಳಿಯನ ಜೊತೆ ಭೇಟಿ ನೀಡಿರುವ ಶಿವಣ್ಣ, ಮೃಗಾಲಯದಲ್ಲಿ ಸುತ್ತಾಡಿ ಎಂಜಾಯ್ ಮಾಡಿದ್ದಾರೆ. ಇದೇ ವೇಳೆ ತಾವು ದತ್ತು ಪಡೆದ ಪಾರ್ವತಿ ಆನೆಗೆ ಆಹಾರ ತಿನ್ನಿಸಿ ಖುಷಿಪಟ್ಟಿದ್ದಾರೆ. ಶಿವರಾಜ್ ಕುಮಾರ್ ಅವರು ಮೃಗಾಲಯದ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಇಡೀ ಮೃಗಾಲಯ ಸುತ್ತಾಡಿ ಪ್ರಾಣಿಗಳನ್ನು ಕಂಡು ಶಿವಣ್ಣ ಕುಟುಂಬಸ್ಥರು ಸಂತಸಪಟ್ಟರು.

    ಕಳೆದ ಆಗಸ್ಟ್ ತಿಂಗಳಲ್ಲಿ ಶಿವಣ್ಣ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ `ಪಾರ್ವತಿ’ ಎಂಬ ಹೆಸರಿನ ಆನೆಯನ್ನು 75 ಸಾವಿರ ನೀಡಿ ದತ್ತು ಪಡೆದುಕೊಂಡಿದ್ದರು. ಒಂದು ವರ್ಷದ ಅವಧಿಗೆ ಅಂದರೆ 2020 ಆಗಸ್ಟ್ 19 ರಿಂದ 2021 ಆಗಸ್ಟ್ 19 ರವರೆಗೆ ಈ ಆನೆಯನ್ನು ನಟ ದತ್ತು ಸ್ವೀಕರಿಸಿದ್ದಾರೆ.

    ಈ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೃಗಾಲಯದಿಂದ ಸಾಕಷ್ಟು ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ. ನಟ ಚಿಕ್ಕಣ್ಣ, ದೇವರಾಜ್, ಸೃಜನ್ ಲೋಕೇಶ್ ಸೇರಿ ಕ್ರಿಕೆಟರ್ಸ್ ಹಾಗೂ ಹಲವು ರಾಜಕಾರಣಿಗಳು ಕೂಡ ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ.

  • 75 ಸಾವಿರ ನೀಡಿ ಆನೆ ದತ್ತು ಪಡೆದ ಹ್ಯಾಟ್ರಿಕ್ ಹೀರೋ

    75 ಸಾವಿರ ನೀಡಿ ಆನೆ ದತ್ತು ಪಡೆದ ಹ್ಯಾಟ್ರಿಕ್ ಹೀರೋ

    ಮೈಸೂರು: ಸ್ಯಾಂಡಲ್‍ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅರಮನೆ ನಗರಿಯಲ್ಲಿ ಆನೆಯೊಂದನ್ನು ದತ್ತು ಪಡೆದಿದ್ದಾರೆ.

    ಹೌದು. ಶಿವಣ್ಣ ಅವರು ಮೈಸೂರಿನ ಚಾಮರಾಜೇಂದ್ರ ಮೃಗಾಲಯದ ‘ಪಾರ್ವತಿ’ ಎಂಬ ಹೆಸರಿನ ಆನೆಯನ್ನು 75 ಸಾವಿರ ನೀಡಿ ದತ್ತು ಪಡೆದುಕೊಂಡಿದ್ದಾರೆ. ಒಂದು ವರ್ಷದ ಅವಧಿಗೆ ಅಂದರೆ ಆಗಸ್ಟ್ 19 2020 ರಿಂದ 2021 ಆಗಸ್ಟ್ 19ರವರೆಗೆ ಈ ಆನೆಯನ್ನು ನಟ ದತ್ತು ಸ್ವೀಕರಿಸಿದ್ದಾರೆ.

    ಈ ಮೊದಲು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೃಗಾಲಯದಿಂದ ಸಾಕಷ್ಟು ಪ್ರಾಣಿ-ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ. ನಟ ಚಿಕ್ಕಣ್ಣ, ದೇವರಾಜ್,ಸೃಜನ್ ಲೋಕೇಶ್ ಸೇರಿ ಕ್ರಿಕೆಟರ್ಸ್ ಹಾಗೂ ಹಲವು ರಾಜಕಾರಣಿಗಳೂ ಪ್ರಾಣಿ ಪಕ್ಷಿಗಳನ್ನು ದತ್ತು ಪಡೆದುಕೊಂಡಿದ್ದಾರೆ.

    ಸದ್ಯ ಶಿವಣ್ಣ ಅವರು ಲಾಕ್‍ಡೌನ್ ನಂತರ ಶೂಟಿಂಗ್ ಆರಂಭಿಸಿದ್ದಾರೆ. ಭಜರಂಗಿ 2 ಚಿತ್ರೀಕರಣಕ್ಕೆ ಸೆಂಚುರಿ ಸ್ಟಾರ್ ಬಣ್ಣ ಹಚ್ಚಿದ್ದಾರೆ. ಟೀಂ ಕರ್ನಾಟಕದಲ್ಲಿ ಶೂಟಿಂಗ್ ಶುರು ಮಾಡಿದೆ. ಹರ್ಷ ಸಾರಥ್ಯದಲ್ಲಿ ಜಯಣ್ಣ ನಿರ್ಮಾಣದಲ್ಲಿ ಮೂಡಿ ಬರ್ತಿರುವ ಈ ಚಿತ್ರದ ಚಿತ್ರೀಕರಣಕ್ಕೆ ಮುನ್ನೆಚ್ಚರಿಕಾ ಕ್ರಮಗಳನ್ನ ಪಾಲಿಸಿ ಚಾಲನೆ ಕೊಡಲಾಗಿದೆ.

  • ಮೈಸೂರು ಮೃಗಾಲಯದಲ್ಲಿ ಕೋಬ್ರಾ, ಹುಲಿ ಸಾವು

    ಮೈಸೂರು ಮೃಗಾಲಯದಲ್ಲಿ ಕೋಬ್ರಾ, ಹುಲಿ ಸಾವು

    ಮೈಸೂರು: ಶ್ರೀ ಚಾಮರಾಜೇಂದ್ರ ಝೂಲಾಜಿಕಲ್ ಗಾರ್ಡನ್(ಮೈಸೂರು ಮೃಗಾಲಯ)ನಲ್ಲಿ ಹುಲಿ ಹಾಗೂ ಕಿಂಗ್ ಕೋಬ್ರಾ ಸಾವನ್ನಪ್ಪಿವೆ. ಕಿಂಗ್ ಕೋಬ್ರಾ ಲಿವರ್ ಸಮಸ್ಯೆಯಿಂದ ಮೃತಪಟ್ಟಿದ್ದರೆ, ಹುಲಿ ಹೃದಯಾಘಾತದಿಂದ ಸಾವನ್ನಪ್ಪಿದೆ ಎನ್ನಲಾಗಿದೆ.

    ಈ ಬಗ್ಗೆ ಮೈಸೂರು ಮೃಗಾಲಯ ನಿರ್ದೇಶಕ ಅಜಿತ್ ಕುಲಕರ್ಣಿ ಅಧಿಕೃತವಾಗಿ ಮಾಹಿತಿ ನೀಡಿದ್ದಾರೆ. ಪ್ರಾಣಿಗಳ ವಿನಿಮಯ ಯೋಜನೆಯಡಿ ಮಂಗಳೂರಿನ ಪಿಲಿಕುಳ ಮೃಗಾಲಯದಿಂದ 2 ಹುಲಿ, 2 ಹಾವುಗಳನ್ನ ಮೈಸೂರು ಮೃಗಾಲಯಕ್ಕೆ ತರಿಸಲಾಗಿತ್ತು. ಆದರೆ ಪ್ರಾಣಿಗಳನ್ನು ಆರೋಗ್ಯ ವಿಚಾರಿಸಲು ಪ್ರತ್ಯೇಕವಾಗಿ ಇಡಲಾಗಿತ್ತು. ಫೆ. 29ರ ಬೆಳಗ್ಗೆ ಪೈಥಾನ್ ಹೆಸರಿನ ಕಿಂಗ್ ಕೋಬ್ರಾ ಸಾವನ್ನಪ್ಪಿತ್ತು. ನಂತರ ಅದರ ಮೃತದೇಹವನ್ನ ಪರೀಕ್ಷೆಗೆ ಒಳಪಡಿಸಲಾಯಿತು. ಆಗ ಹಾವು ಲಿವರ್ ಸಮಸ್ಯೆಯಿಂದ ಸಾವನ್ನಪ್ಪಿರುವುದು ಬೆಳಕಿಗೆ ಬಂದಿತ್ತು.

    ಭಾನುವಾರ ಬೆಳಗ್ಗೆ ಒಂದು ಹುಲಿ ಸಹ ಮೃಗಾಲಯದಲ್ಲಿ ಮೃತಪಟ್ಟಿದೆ. ಅದರ ಮೃತದೇಹವನ್ನ ಸಹ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದು ಹೃದಯಾಘಾತದಿಂದ ಸಾವನ್ನಪ್ಪಿರುವುದು ತಿಳಿದು ಬಂದಿದೆ. ಪರೀಕ್ಷೆಗೆ ಒಳಪಡಿಸಿದ ತಕ್ಷಣವೇ ವೈದ್ಯರು ಈ ಬಗ್ಗೆ ತಿಳಿಸಿದ್ದಾರೆ.

    ಪ್ರಾಣಿಗಳು ಮೃತಪಡಲು ಆರೋಗ್ಯ ಸಮಸ್ಯೆಯೇ ಕಾರಣವಾ? ಅಥವಾ ಬೇರೆ ವೈರಸ್ ಇದೆಯಾ? ಬ್ಯಾಕ್ಟೀರಿಯಾ ಇದೇಯ ಎಂಬುದನ್ನ ತಿಳಿಯಬೇಕಿದೆ. ಅದಕ್ಕಾಗಿ ಪ್ರಾಣಿಗಳ ಸ್ಯಾಂಪಲ್ ಲ್ಯಾಬ್ ಗೆ ಕಳುಹಿಸಿದ್ದೇವೆ. ರಿಪೋರ್ಟ್ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳುತ್ತೇವೆ. ಸದ್ಯ ಮೃಗಾಲಯದಲ್ಲಿ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ಮೃಗಾಲಯ ನಿರ್ದೇಶಕರು ಹೇಳಿದ್ದಾರೆ.

  • ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ

    ಮೈಸೂರು ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನ

    ಮೈಸೂರು: ಇಲ್ಲಿನ ಮೃಗಾಲಯಕ್ಕೆ ಹೊಸ ಅತಿಥಿಗಳ ಆಗಮನವಾಗಿದೆ. ನಾಡಹಬ್ಬ ದಸಾರ ಇನ್ನೇನು ಕೆಲ ದಿನಗಳಲ್ಲೇ ಆರಂಭವಾಗಲಿದ್ದು, ಮೃಗಾಲಯ ವೀಕ್ಷಕರಿಗೆ ಹೊಸ ಪ್ರಾಣಿಗಳ ದರ್ಶನವಾಗಲಿದೆ.

    ತಮಿಳುನಾಡಿನಿಂದ ಹೆಬ್ಬಾವು ಮತ್ತು ಮೊಸಳೆಗಳನ್ನು ತಂದು ಮೈಸೂರು ಮೃಗಾಲಯದಲ್ಲಿ ಬಿಡಲಾಗಿದೆ. ನಾಲ್ಕು ಇಂಡಿಯನ್ ರಾಕ್ ಪೈಥಾನ್ ಹಾಗೂ ಐದು ಗಾರಿಯಲ್ ಮೊಸಳೆಗಳ ಆಗಮನವಾಗಿದೆ.

    ಪ್ರಾಣಿ ವಿನಿಮಯ ಯೋಜನೆಯಡಿ ಈ ಹೊಸ ಪ್ರಾಣಿಗಳ ಆಗಮನವಾಗಿದ್ದು, ಆಗಮಿಸಿದ ಎಲ್ಲಾ ಪ್ರಾಣಿಗಳ ಆರೋಗ್ಯ ಸ್ಥಿರವಾಗಿದೆ ಎಂದು ಮೃಗಾಲಯದ ಮೂಲಗಳು ತಿಳಿಸಿವೆ.

    ನಾಡಹಬ್ಬ ದಸರಾ ಉತ್ಸವವನ್ನು ಈ ಬಾರಿಯೂ ಸಾಂಪ್ರದಾಯಿಕ ಮತ್ತು ಹೆಚ್ಚು ಜನಾಕರ್ಷಕವಾಗಿ ಆಚರಿಸಲಾಗುವುದು. ದಸರಾ ಉತ್ಸವ ಸೆಪ್ಟೆಂಬರ್ 21ರಿಂದ 30ರ ವರೆಗೆ ನಡೆಯಲಿದೆ. 21ರಂದು ಬೆಳಗ್ಗೆ 9.15ಕ್ಕೆ ಚಾಮುಂಡಿ ಬೆಟ್ಟದಲ್ಲಿ ಉದ್ಘಾಟನೆ ನೆರವೇರಲಿದೆ. ಜಂಬೂ ಸವಾರಿಯ ದಿನವಾದ 29ರಂದು ಮಧ್ಯಾಹ್ನ 1.15ರಿಂದ 1.43ರೊಳಗೆ ನಂದಿ ಧ್ವಜಕ್ಕೆ ಪೂಜೆ ಮತ್ತು 3.13ರಿಂದ 3.40ರೊಳಗೆ ಅಂಬಾರಿಯಲ್ಲಿನ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

    ನಿತ್ಯೋತ್ಸವ ಕವಿ ನಿಸಾರ್ ಅಹ್ಮದ್ ಅವರಿಗೆ ದಸರಾಗೆ ಆಗಮಿಸಿ ಉದ್ಘಾಟನೆ ನೆರವೇರಿಸುವಂತೆ ಮೈಸೂರು ಜಿಲ್ಲಾಧಿಕಾರಿ ಡಿ.ರಂದೀಪ್ ಈಗಾಗಲೇ ಅಧಿಕೃತ ಆಹ್ವಾನ ನೀಡಿದ್ದಾರೆ.