Tag: N.A Harris

  • ಹ್ಯಾರಿಸ್‍ಗೆ ಸಂಕಷ್ಟ – ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು

    ಹ್ಯಾರಿಸ್‍ಗೆ ಸಂಕಷ್ಟ – ಚುನಾವಣಾ ತಕರಾರು ಅರ್ಜಿ ವಿಚಾರಣೆಗೆ ಹೈಕೋರ್ಟ್ ಅಸ್ತು

    ಬೆಂಗಳೂರು: ತನ್ನ ವಿರುದ್ಧದ ಚುನಾವಣಾ ತಕರಾರು ಅರ್ಜಿಯನ್ನು ವಜಾ ಮಾಡುವಂತೆ ಶಾಸಕ ಎನ್.ಎ ಹ್ಯಾರಿಸ್ (N.A Harris) ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ (High Court) ವಜಾಗೊಳಿಸಿದೆ.

    ಚುನಾವಣೆ ವೇಳೆ ತಪ್ಪು ಪ್ರಮಾಣ ಪತ್ರ ಸಲ್ಲಿಕೆ ಹಿನ್ನಲೆ ಪರಾಜಿತ ಬಿಜೆಪಿ (BJP) ಅಭ್ಯರ್ಥಿ ಶಿವಕುಮಾರ್ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು. ಅರ್ಜಿಯಲ್ಲಿ ಪತ್ನಿಯ ಹೆಸರಲ್ಲಿದ್ದ ಆಸ್ತಿಗಳನ್ನ ಹ್ಯಾರಿಸ್ ಘೋಷಿಸಿಲ್ಲ. ಅಲ್ಲದೇ ತಮ್ಮ ಹೆಸರಲ್ಲಿರುವ ಆಸ್ತಿಗಳ ಕಡಿಮೆ ಮೌಲ್ಯಮಾಪನ ಮಾಹಿತಿ ಸಲ್ಲಿಕೆ ಮಾಡಿದ್ದಾರೆ ಎಂದು ಆರೋಪಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್‍ನ ಏಕಸದಸ್ಯ ಪೀಠ ನಡೆಸುತ್ತಿದೆ. ಇದನ್ನೂ ಓದಿ: ಕೊಲ್ಲೂರು ದೇಗುಲದ ಪಕ್ಕದಲ್ಲೇ ಹೈವೇ ಪ್ರಶ್ನಿಸಿ PIL- ಯಥಾಸ್ಥಿತಿಗೆ ಹೈಕೋರ್ಟ್ ಆದೇಶ

    ಅಸಮರ್ಪಕ ನಾಮಪತ್ರದಿಂದ ಪ್ರತಿಸ್ಪರ್ಧಿಗೆ ಹೇಗೆ ತೊಂದರೆ ಆಗಿದೆ ಎಂದು ವಿವರಿಸಿಲ್ಲ. ಪ್ರತಿಸ್ಪರ್ಧಿ ಸೋಲಿಗೆ ಹೇಗೆ ಕಾರಣವಾಯಿತು ಎಂಬ ನಿಖರ ಅಂಶವನ್ನು ಅರ್ಜಿದಾರರು ಅರ್ಜಿಯಲ್ಲಿ ಉಲ್ಲೇಖಿಸಿಲ್ಲ. ಹೀಗಾಗಿ ಶಿವಕುಮಾರ್ ಸಲ್ಲಿಸಿರುವ ಅರ್ಜಿ ವಜಾ ಮಾಡುವಂತೆ ಹ್ಯಾರಿಸ್ ಕೋರ್ಟ್‍ಗೆ ಮನವಿ ಮಾಡಿದ್ದರು. ಈಗ ಹ್ಯಾರೀಸ್ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನ್ಯಾ.ಸೂರಜ್ ಗೋವಿಂದ್ ರಾಜ್ ಅವರಿದ್ದ ಏಕಸದಸ್ಯ ಪೀಠ ವಜಾಗೊಳಿಸಿದೆ. ಅಲ್ಲದೇ ಪರಾಜಿತ ಅಭ್ಯರ್ಥಿ ಶಿವಕುಮಾರ್ ಸಲ್ಲಿಸಿದ್ದ ಅರ್ಜಿ ವಿಚಾರಣಾ ಯೋಗ್ಯವಾಗಿದೆ ಎಂದು ಅಭಿಪ್ರಾಯಪಟ್ಟ ಕೋರ್ಟ್ ವಿಚಾರಣೆಯನ್ನು ಫೆ.27ಕ್ಕೆ ಮುಂದೂಡಿದೆ.

    ಅರ್ಜಿಯಲ್ಲಿ ಏನಿದೆ?
    2023ರ ಚುನಾವಣೆಯಲ್ಲಿ ಎನ್.ಎ ಹ್ಯಾರಿಸ್ ತಮ್ಮ ಚರ ಮತ್ತು ಸ್ಥಿರಾಸ್ತಿಗಳ ಮಾಹಿತಿಯನ್ನು ಸಮರ್ಪಕವಾಗಿ ಒದಗಿಸಿಲ್ಲ. ಸುಳ್ಳು ಘೋಷಣೆಯ ಪ್ರಮಾಣ ಪತ್ರ ಸಲ್ಲಿಸಿದ್ದಾರೆ. ಚರ ಮತ್ತು ಸ್ಥಿರಾಸ್ತಿಗಳನ್ನು ವಾಸ್ತವಕ್ಕಿಂತಲೂ ಕಡಿಮೆ ಅಂದಾಜಿನಲ್ಲಿ ದಾಖಲಿಸಿದ್ದಾರೆ. ಅಸಮರ್ಪಕ ನಾಮಪತ್ರ ಸ್ವೀಕಾರದ ಕಾರಣದಿಂದಾಗಿ ಅದು ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಿ ನನ್ನ ಸೋಲಿಗೆ ಕಾರಣವಾಗಿದೆ. ಹೀಗಾಗಿ ಹ್ಯಾರಿಸ್ ಅವರನ್ನು ಅನರ್ಹಗೊಳಿಸಿ ನನ್ನನ್ನೇ ವಿಜೇತ ಅಭ್ಯರ್ಥಿ ಎಂದು ಘೋಷಿಸಬೇಕು ಎಂದು ಪರಾಜಿತ ಬಿಜೆಪಿ ಅಭ್ಯರ್ಥಿ ಶಿವಕುಮಾರ್ ಅರ್ಜಿಯಲ್ಲಿ ಮನವಿ ಮಾಡಿದ್ದರು. ಇದನ್ನೂ ಓದಿ: ಚಂಡೀಗಢ ಮೇಯರ್ ಚುನಾವಣೆ: ಎಎಪಿ ಅಭ್ಯರ್ಥಿಗೆ ಗೆಲುವು ಘೋಷಿಸಿದ ಸುಪ್ರೀಂ ಕೋರ್ಟ್

  • ರಾತ್ರೋರಾತ್ರಿ ಎರಡು ಅಂತಸ್ತಿನ ಕಟ್ಟಡ ಕುಸಿತ – ತಪ್ಪಿದ ಭಾರೀ ದುರಂತ

    ರಾತ್ರೋರಾತ್ರಿ ಎರಡು ಅಂತಸ್ತಿನ ಕಟ್ಟಡ ಕುಸಿತ – ತಪ್ಪಿದ ಭಾರೀ ದುರಂತ

    ಬೆಂಗಳೂರು: ರಾತ್ರೋರಾತ್ರಿ ಎರಡು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

    ಬೆಂಗಳೂರಿನ ಆಸ್ಟಿನ್‍ಟೌನ್‍ನಲ್ಲಿ ರಾತ್ರಿ ಎರಡು ಅಂತಸ್ತಿನ ಕಟ್ಟಡ ಏಕಾಏಕಿ ಕುಸಿದು ಬಿದ್ದಿದೆ. ಕಟ್ಟಡ ಕುಸಿದು ಬಿದ್ದ ರಭಸಕ್ಕೆ ಬಿಲ್ಡಿಂಗ್ ಪಕ್ಕದ ಶೀಟ್ ಮನೆಯಲ್ಲಿ ಮಲಗಿದ್ದ ದಂಪತಿಯ ತಲೆಗೆ ಗಂಭೀರವಾಗಿ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

    ಇದು ರಾಜು ಅನ್ನೋರಿಗೆ ಸೇರಿದ ಸುಮಾರು 40 ವರ್ಷದಷ್ಟು ಹಳೆಯದಾದ ಕಟ್ಟಡವಾಗಿದೆ. ಇನ್ನು ಘಟನೆ ನಡೆದ ಸ್ಥಳಕ್ಕೆ ಶಾಸಕ ಎನ್.ಎ ಹ್ಯಾರಿಸ್ ಮತ್ತು ಪುತ್ರ ನಲಪಾಡ್ ಭೇಟಿ ನೀಡಿದ್ದರು. ಕಟ್ಟಡ ಕುಸಿದು ಬಿದ್ದ ದೃಶ್ಯಾವಳಿ ಸಿಸಿಟಿಯಲ್ಲಿ ಸೆರೆಯಾಗಿದ್ದು, ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

    ಈ ಘಟನೆ ಕುರಿತು ವಿವೇಕನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಕಟ್ಟಡದ ಮಾಲೀಕ ರಾಜುರನ್ನು ವಶಕ್ಕೆ ಪಡೆಯಲಾಗಿದೆ.