Tag: N.S.Boseraju

  • ರಾಜ್ಯದಲ್ಲಿ ಸಿಎಂ ಬದಲಾವಣೆ ಅನ್ನೋದು ಬಿಜೆಪಿ ಸೃಷ್ಟಿ: ಬೋಸರಾಜು

    ರಾಜ್ಯದಲ್ಲಿ ಸಿಎಂ ಬದಲಾವಣೆ ಅನ್ನೋದು ಬಿಜೆಪಿ ಸೃಷ್ಟಿ: ಬೋಸರಾಜು

    ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಅನ್ನೋದು ಬಿಜೆಪಿಯವರ (BJP) ಸೃಷ್ಟಿ ಎಂದು ಸಚಿವ ಬೋಸರಾಜು (Boseraju) ಕಿಡಿಕಾರಿದ್ದಾರೆ.

    ಸಿಎಂ ಸ್ಥಾನ ಬದಲಾವಣೆ ಆಗುತ್ತೆ ಎಂದು ವಿಪಕ್ಷ ನಾಯಕರು ಹೇಳಿಕೆ ನೀಡಿದ್ದ ವಿಚಾರಕ್ಕೆ ಅವರು ಪ್ರತಿಕ್ರಿಯಿಸಿದರು. ಸಿಎಂ ಬದಲಾವಣೆ ವಿಚಾರ ಸರ್ಕಾರ ಬಂದಾಗಿಂದ ನಡೆಯುತ್ತಿದೆ. ಇದನ್ನು ಯಾರು ಮಾಡ್ತಿದ್ದಾರೆ? ಬಿಜೆಪಿಯವರು ಮಾಡ್ತಿದ್ದಾರೆ. ಸರ್ಕಾರವನ್ನ ವೀಕ್ ಮಾಡಬೇಕು, ಸಿಎಂ, ಡಿಸಿಎಂ ನಡುವೆ ಮನಸ್ತಾಪ ತಂದಿಡಬೇಕು ಎಂದು ಬಿಜೆಪಿಯವರು ಮಾಡ್ತಿದ್ದಾರೆ. ಬಿಜೆಪಿ, ಜೆಡಿಸ್ (JDS) ಸೇರಿ ಸರ್ಕಾರ ದುರ್ಬಲಗೊಳಿಸಲು ಇದನ್ನು ಮಾಡ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಕಾನೂನು, ಕಾಯ್ದೆ ಪ್ರಕಾರವೇ ಗ್ಯಾರಂಟಿಗೆ ಎಸ್‌ಸಿಎಸ್‌ಪಿ-ಟಿಎಸ್‌ಪಿ ಹಣ ಬಳಕೆ: ಮಹದೇವಪ್ಪ

    ಬಿ.ವೈ‌.ವಿಜಯೇಂದ್ರ (B.Y Vijayendra) ರಾಜ್ಯಾಧ್ಯಕ್ಷರಾಗಿಂದ ಎಷ್ಟು ಬಾರಿ ಹೇಳಿದ್ದಾರೆ. ಸಿಎಂ ಬದಲಾವಣೆ ಆಗುತ್ತೆ ಅಂತ? ವಿಪಕ್ಷ ನಾಯಕ ಆರ್.ಅಶೋಕ್ ಎಷ್ಟು ಬಾರಿ ಮಾತಾಡಿದ್ದಾರೆ? ರಾಜ್ಯಮಟ್ಟದ ನಾಯಕರಾಗಿರೋರು ಜವಾಬ್ದಾರಿಯುತವಾಗಿ ಮಾತಾಡಬೇಕು. ಅದನ್ನು ಬಿಟ್ಟು ದಿನಾಂಕ ಹೇಳುತ್ತಿದ್ದಾರೆ. ಜನರ ಇದನ್ನು ಎಲ್ಲರೂ ಗಮನಿಸುತ್ತಾರೆ. ನಾವು ಲೋಕಸಭೆ ಚುನಾವಣೆಯಲ್ಲಿ ಎಲ್ಲ ಸ್ಥಾನ ಗೆಲ್ಲಬೇಕು ಅಂದುಕೊಂಡಿದ್ದೆವು. ಈ ಬಾರಿ ಹೆಚ್ಚು ಸ್ಥಾನ ಗೆದ್ದಿದ್ದೇವೆ. ಬೊಮ್ಮಾಯಿ ಮಗ, ಕುಮಾರಸ್ವಾಮಿ ಮಗ ಉಪ ಚುನಾವಣೆಯಲ್ಲಿ ಸೋತಿದ್ದಾರೆ. ನಮಗೆ ಮೂರು ಸ್ಥಾನ ಉಪ ಚುನಾವಣೆ ಗೆಲುವಾಗಿದೆ. ಇದನ್ನ ಸಹಿಸಿಕೊಳ್ಳದೇ ಹತಾಶೆಯಿಂದ ಮಾತನಾಡುತ್ತಿದ್ದಾರೆ. ಅವರಲ್ಲಿ ಎಷ್ಟು ಬಣಗಳಿವೆ. ಅವರದ್ದೇ ಮೂರು ಬಾಗಿಲು ಆಗಿದೆ. ಅಧ್ಯಕ್ಷರ ಬದಲಾವಣೆ ವಿಚಾರ ತಾರಕಕ್ಕೇರಿದೆ ಎಂದಿದ್ದಾರೆ.

    ಸಚಿವ ರಾಜಣ್ಣ ಹಾಗೂ ಅನೇಕ ಕಾಂಗ್ರೆಸ್ (Congress) ಕ್ರಾಂತಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಣ್ಣ ಅವರು ಕಾಂಗ್ರೆಸ್ ಬದಲಾವಣೆ ಬಗ್ಗೆ ಹೇಳಿಲ್ಲ. ರಾಜ್ಯ ಕರ್ನಾಟಕದಲ್ಲಿ ಕ್ರಾಂತಿ ಆಗುತ್ತೆ ಎಂದು ಹೇಳಿರೋದು. ಕಾಂಗ್ರೆಸ್‌ನಲ್ಲಿ ಆಗುತ್ತೆ ಅಂತ ಅಲ್ಲ. ಡಿಕೆಶಿ ರಾಮನಗರ ಭಾಗದವರು ಹಾಗಾಗಿ ಇಕ್ಬಾಲ್ ಹುಸೇನ್ ಡಿಕೆಶಿ ಪರ ಮಾತನಾಡಿದ್ದಾರೆ. ಕೆಲವರು ಅವರ ವೈಯಕ್ತಿಕವಾಗಿ ಹೇಳಿಕೆ ನೀಡುತ್ತಾರೆ. ನಮ್ಮ ಪಕ್ಷದ ಹೈಕಮಾಂಡ್ ಯಾರು ಮಾತನಾಡಬಾರದು ಈಗಾಗಲೇ ಹೇಳಿದೆ. ಹೈಕಮಾಂಡ್ ತೀರ್ಮಾನವೇ ಅಂತಿಮ. ಸಿಎಂ, ಡಿಸಿಎಂ ಕೂಡ ಹೈಕಮಾಂಡ್ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಹೇಳಿದ್ದಾರೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ಮಲ್ಲಿಕಾರ್ಜುನ ಖರ್ಗೆಯವರಿಗೆ ಎಲ್ಲಾ ಹುದ್ದೆ ಅನುಭವಿಸುವ ಅರ್ಹತೆ ಇದೆ: ಮಹದೇವಪ್ಪ

  • ರಾಷ್ಟ್ರೀಯ ವಿಜ್ಞಾನ ದಿನಾಚರಣೆ| ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ: ಎನ್‌.ಎಸ್‌ ಭೋಸರಾಜು

    ರಾಷ್ಟ್ರೀಯ ವಿಜ್ಞಾನ ದಿನಾಚರಣೆ| ಶಾಲಾ, ಕಾಲೇಜು, ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿ ಸ್ವೀಕಾರ: ಎನ್‌.ಎಸ್‌ ಭೋಸರಾಜು

    ಬೆಂಗಳೂರು: ಫೆ.28ಕ್ಕೆ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯ (National Science Day) ಅಂಗವಾಗಿ ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲಿ ಮತ್ತು ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಲು ರಾಜ್ಯ ಸರ್ಕಾರದ ವತಿಯಿಂದ ಸುತ್ತೋಲೆ ಹೊರಡಿಸಲಾಗಿದೆ ಎಂದು ಸಚಿವ ಎನ್‌.ಎಸ್‌ ಭೋಸರಾಜು (N.S Boseraju) ತಿಳಿಸಿದ್ದಾರೆ.

    ಈ ಬಗ್ಗೆ ಪತ್ರಿಕಾ ಹೇಳಿಕೆಯನ್ನು ನೀಡಿರುವ ಅವರು, ರಾಷ್ಟ್ರೀಯ ವಿಜ್ಞಾನ ದಿನದ ಅಂಗವಾಗಿ ಬೆಂಗಳೂರು ನಗರದ ಜವಾಹರ ಲಾಲ್‌ ನೆಹರು ತಾರಾಲಯದಲ್ಲಿ (Jawaharlal Nehru Planetarium) ಫೆ. 28 ರಂದು ರಾಜ್ಯ ಮಟ್ಟದ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಅಂದು ಬೆಳಿಗ್ಗೆ 10:30ಕ್ಕೆ ವೈಜ್ಞಾನಿಕ ಮನೋಭಾವನೆ ಮತ್ತು ಮಾನವೀಯ ಮೌಲ್ಯಗಳನ್ನು ಮೈಗೂಡಿಸಿಕೊಳ್ಳುವ ಪ್ರತಿಜ್ಞಾ ವಿಧಿಯನ್ನು ಭೋಧಿಸಲಾಗುವುದು.

    ಇದೇ ವೇಳೆ, ರಾಜ್ಯದ ಎಲ್ಲಾ ಶಾಲಾ – ಕಾಲೇಜುಗಳಲ್ಲೂ ವಿದ್ಯಾರ್ಥಿಗಳಿಗೆ ಹಾಗೂ ಸರ್ಕಾರಿ ಕಚೇರಿಗಳಲ್ಲಿ ಏಕಕಾಲಕ್ಕೆ ಈ ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯಿಂದ ಸುತ್ತೋಲೆಯನ್ನು ಹೊರಡಿಸಲಾಗಿದೆ. ವಿಜ್ಞಾನ ಮತ್ತು ತಂತ್ರಜ್ಞಾನ ಸಮೃದ್ದ ಶಾಂತಿಯುತ, ಪ್ರಗತಿಪರ ಸಮಾಜ ಮತ್ತು ದೇಶ ನಿರ್ಮಾಣದಲ್ಲಿ ಮಹತ್ತರ ಪಾತ್ರ ವಹಿಸಿದೆ. ಸಮಾಜದಲ್ಲಿ ಶಾಂತಿ ಮತ್ತು ಬ್ರಾತೃತ್ವವನ್ನು ಬೆಸೆಯುವ ಹಿನ್ನಲೆಯಲ್ಲಿ ವೈಜ್ಞಾನಿಕ ಮನೋಭಾವದ ನೆಲೆಗಟ್ಟನ್ನು ಸಾರ್ವಜನಿಕರಲ್ಲಿ ಬೆಳೆಸುವುದು ಅತ್ಯಾವಶ್ಯಕವಾಗಿದ್ದು ಭಾರತದ ಸಂವಿಧಾನದ ಮೂಲಭೂತ ಕರ್ತವ್ಯಗಳಲ್ಲಿ ಒಂದಾಗಿದೆ ಎಂದು ತಿಳಿಸಿದ್ದಾರೆ.

    ರಾಷ್ಟ್ರೀಯ ವಿಜ್ಞಾನ ದಿನವನ್ನ ಅರ್ಥಪೂರ್ಣವಾಗಿ ಆಚರಿಸುವ ಉದ್ದೇಶದಿಂದ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯಿಂದ ವಿನೂತನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಅವರು ಮಾಹಿತಿ ಹಂಚಿಕೊಂಡಿದ್ದಾರೆ.

  • ರಾಜ್ಯಕ್ಕೆ ನ್ಯಾಯಯುತವಾಗಿ ದೊರಕಬೇಕಾದ ಅನುದಾನ ಮಂಜೂರು ಮಾಡಿ: ಸಚಿವ ಬೋಸರಾಜು ಆಗ್ರಹ

    ರಾಜ್ಯಕ್ಕೆ ನ್ಯಾಯಯುತವಾಗಿ ದೊರಕಬೇಕಾದ ಅನುದಾನ ಮಂಜೂರು ಮಾಡಿ: ಸಚಿವ ಬೋಸರಾಜು ಆಗ್ರಹ

    ಬೆಂಗಳೂರು: ಪ್ರತಿ ಬಾರಿಯೂ ಕರ್ನಾಟಕ ರಾಜ್ಯಕ್ಕೆ ಮಲತಾಯಿ ಧೋರಣೆ ತೋರಿಸುತ್ತಲೇ ಇರುವ ಕೇಂದ್ರ ಸರ್ಕಾರ, ನಾಳಿನ ಆಯವ್ಯಯದಲ್ಲಿ ರಾಜ್ಯದ ಮೇಲೆ ಕರುಣೆ ತೋರುವಂತಾಗಲಿ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು ಆಗ್ರಹಿಸಿದ್ದಾರೆ.

    ಮಾಧ್ಯಮ ಹೇಳಿಕೆಯನ್ನು ನೀಡಿರುವ ಅವರು, ರಾಜ್ಯ ಸರ್ಕಾರವನ್ನು ಮಲತಾಯಿ ಮಕ್ಕಳಂತೆ ಕೇಂದ್ರದ ಬಿಜೆಪಿ ಸರ್ಕಾರ ನಡೆಸಿಕೊಳ್ಳುತ್ತಿದೆ. ಅತಿಹೆಚ್ಚು ತೆರಿಗೆ ಸಂಗ್ರಹವಾಗುವ ರಾಜ್ಯವಾಗಿದ್ದರೂ ನಮಗೆ ದೊರೆಯುವ ಪಾಲು ಆನೆ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಷ್ಟಾಗಿದೆ. ನಮ್ಮ ಪಾಲಿನ ತೆರಿಗೆಯನ್ನು ಹೆಚ್ಚಿಸುವಂತೆ ಈಗಾಗಲೇ ಹಲವಾರು ಬಾರಿ ಮುಖ್ಯಮಂತ್ರಿಗಳು ಮನವಿ ಸಲ್ಲಿಸಿದ್ದಾರೆ. ಜಲಸಂಪನ್ಮೂಲ, ಆರೋಗ್ಯ ಇಲಾಖೆ, ಗ್ರಾಮೀಣಾಭಿವೃದ್ಧಿ ಇಲಾಖೆ ಸೇರಿದಂತೆ ರಾಜ್ಯದ ಇಲಾಖೆಗಳ ಮೂಲಕ ಹಲವಾರು ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಹಾಗೆಯೇ, ಈಗಾಗಲೇ ವಿವಿಧ ಯೋಜನೆಗಳಿಗೆ ಘೋಷಿಸಲಾಗಿರುವ ಅನುದಾನವನ್ನು ತಕ್ಷಣ ಮಂಜೂರು ಮಾಡಲು ಕ್ರಮ ಕೈಗೊಳ್ಳಬೇಕಾಗಿದೆ ಎಂದಿದ್ದಾರೆ.

    ಕರ್ನಾಟಕ ರಾಜ್ಯದ ಬಹಳಷ್ಟು ಜಿಲ್ಲೆಗಳು ಬರಗಾಲ ನೀರಿನ ಲಭ್ಯತೆ ಕಡಿಮೆಯಿದೆ. ಇಲ್ಲಿ ಅಂತರ್ಜಲ ವೃದ್ಧಿಗೆ ಅನುವು ಮಾಡಿಕೊಡುವಂತಹ ಅಟಲ್‌ ಭೂಜಲ್‌, ಪಿಎಂಕೆಎಸ್‌ವೈ, ಆರ್‌ಆರ್‌ಆರ್‌ ನಂತಹ ಯೋಜನೆಗಳಿಗೆ ಹೆಚ್ಚಿನ ಅನುದಾನ ನೀಡುವ ಮೂಲಕ ಪ್ರೋತ್ಸಾಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

    ಸೈನ್ಸ್‌ ಸಿಟಿ ಸ್ಥಾಪನೆಗೆ ಅಗತ್ಯ ಭೂಮಿಯನ್ನು ನಿಗದಿಗೊಳಿಸಿದ್ದು, ಇದರ ಸ್ಥಾಪನೆಗೆ ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಉಪ ಪ್ರಾದೇಶಿಕ ವಿಜ್ಞಾನ ಕೇಂದ್ರ ಮತ್ತು ತಾರಾಯಲಯಗಳ ಅಭಿವೃದ್ಧಿಗೆ ಸಲ್ಲಿಸಿರುವ ಪ್ರಸ್ತಾವನೆಗಳಿಗೆ ಅನುಮೋದನೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

    ಭಾರತ ಸರ್ಕಾರದ 371 (ಜೆ) ಅಡಿಯಲ್ಲಿ ವಿಶೇಷ ಸ್ಥಾನಮಾನ ಹೊಂದಿರುವ ಹಾಗೂ Aspirational District ಆಗಿರುವ ರಾಯಚೂರು ಜಿಲ್ಲೆಯಲ್ಲಿ ಏಮ್ಸ್‌ ಸ್ಥಾಪನೆ ಮಾಡಬೇಕು ಎನ್ನುವುದು ಬಹುದಿನಗಳ ಬೇಡಿಕೆಯಾಗಿದೆ. ಈಗಾಗಲೇ ಸಿಎಂ ಸಿದ್ದರಾಮಯ್ಯ ಅವರು ಹಲವಾರು ಪತ್ರಗಳನ್ನು ಬರೆದು ಅಗತ್ಯ ಸಹಾಯ ನೀಡುವ ಭರವಸೆಯನ್ನು ನೀಡಿದ್ದಾರೆ. ಏಮ್ಸ್‌ ಸ್ಥಾಪನೆಯ ನಿಟ್ಟಿನಲ್ಲಿ ಘೋಷಣೆ ಮಾಡಬೇಕು ಎನ್ನುವುದು ನಮ್ಮ ಆಗ್ರಹವಾಗಿದೆ ಎಂದು ತಮ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಸಮಸ್ಯೆ ಕೇಳಲು ಬಂದ ಸಚಿವ ಬೋಸರಾಜುಗೆ ಸಂತ್ರಸ್ತರಿಂದ ತರಾಟೆ

    ಸಮಸ್ಯೆ ಕೇಳಲು ಬಂದ ಸಚಿವ ಬೋಸರಾಜುಗೆ ಸಂತ್ರಸ್ತರಿಂದ ತರಾಟೆ

    – ಕುಡಿಯಲು ನೀರಿಲ್ಲ, ವಿದ್ಯುತ್ ಪೂರೈಕೆ ಸರಿಯಾಗಿಲ್ಲ ಎಂದು ಸಂತ್ರಸ್ತರ ಅಳಲು
    – ಜನರು ಕೂಗಾಡುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತ ಸಚಿವರು

    ಕೊಡಗು: ಜಿಲ್ಲೆಯಲ್ಲಿ ಮಳೆಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿದ್ದ ಸಚಿವ ಬೋಸರಾಜು (N.S.Boseraju) ಅವರನ್ನು ಸಂತ್ರಸ್ತ ಜನರು ತರಾಟೆಗೆ ತೆಗೆದುಕೊಂಡ ಘಟನೆ ನಡೆಯಿತು.

    ಸೋಮವಾರಪೇಟೆ ತಾಲ್ಲೂಕಿನ ಜಂಬೂರಿಗೆ ಸಚಿವ ಬೋಸರಾಜು ಹಾಗೂ ಮಡಿಕೇರಿ ಕ್ಷೇತ್ರದ ಶಾಸಕ ಮಂಥರ್ ಗೌಡ ಭೇಟಿ ನೀಡಿದ್ದರು. ಮಳೆಯಿಂದ ಹಾನಿಗೊಳಗಾಗಿರುವ ಸ್ಥಳಗಳಿಗೆ ತೆರಳಿ ವೀಕ್ಷಣೆ ಮಾಡಿದರು. ಇದನ್ನೂ ಓದಿ: ರಾಜಕೀಯ ದ್ವೇಷಕ್ಕಾಗಿ ಸಿಎಂ ಅಧಿಕಾರ ದುರ್ಬಳಕೆ ಮಾಡಿಕೊಳ್ಳಬಾರದು: ಬಸವರಾಜ ಬೊಮ್ಮಾಯಿ

    2018 ರಲ್ಲಿ ಮಹಾ ಮಳೆಯಿಂದ ಆಸ್ತಿಪಾಸ್ತಿ, ಮನೆಗಳನ್ನು ಕಳೆದುಕೊಂಡ ನಮಗೆ ಸರ್ಕಾರ ಮನೆ ನೀಡಿದೆ. ಅದರೆ ಯಾವುದೇ ರೀತಿಯಲ್ಲಿ ಮೂಲಭೂತ ಸೌಕರ್ಯಗಳನ್ನು ಕೊಡದೇ ಏಕಾಏಕಿ ಮನೆಗಳಿಗೆ ಕಳಿಸಿದೆ. ಇವತ್ತು ಇಲ್ಲಿಗೆ ಬಂದು ನೆಮ್ಮದಿಯನ್ನು ಕಳೆದುಕೊಂಡಿದ್ದೀವಿ. ಹಲವಾರು ಬಾರಿ ಶಾಸಕರು, ಜಿಲ್ಲಾಧಿಕಾರಿಗಳಿಗೆ ಇಲ್ಲಿನ ಸಮಸ್ಯೆಯ ಬಗ್ಗೆ ಮನವರಿಕೆ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಕೊಡಗು ಉಸ್ತುವಾರಿ ಸಚಿವ ಬೋಸರಾಜು ಸಂತ್ರಸ್ತರು ತರಟೆಗೆ ತೆಗೆದುಕೊಂಡರು.

    ಕುಡಿಯುವ ನೀರಿಲ್ಲ. ಯುಜಿಡಿ ಬ್ಲಾಕ್ ಆಗಿ ತಿಂಗಳುಗಳಾಗಿವೆ. ವಿದ್ಯುತ್ ಸರಿಯಾಗಿ ಪೂರೈಕೆ ಇಲ್ಲ. ಚರಂಡಿ ವ್ಯವಸ್ಥೆಗಳಿಲ್ಲ. ಎಂಎಲ್‌ಎ, ಜಿಲ್ಲಾಧಿಕಾರಿ ಯಾರಿಗೆ ಹೇಳಿದರೂ ಪ್ರಯೋಜನವಾಗಿಲ್ಲ. ನಮ್ಮ ಸಮಸ್ಯೆ ಯಾರು ಬಗೆಹರಿಸುತ್ತಿಲ್ಲವೆಂದು ಸಚಿವರ ಮುಂದೆ ನೂರಾರು ಜನರು ಆಕ್ರೋಶ ಹೋರಹಾಕಿದರು. ಇದನ್ನೂ ಓದಿ: ರಾಜ್ಯದಲ್ಲಿ ಸಿಎಂ ಸಿದ್ದರಾಮಯ್ಯ ಒಂಟಿ, ದ್ವೇಷದಿಂದ ಬಿಜೆಪಿ ವಿರುದ್ಧ ಹಗರಣ ಆರೋಪ: ಕಾರಜೋಳ ಕಿಡಿ

    ಜನರು ಸಮಸ್ಯೆ ಹೇಳುವಾಗಲೇ, ನಿಮ್ಮ ಸಮಸ್ಯೆ ಬಗ್ಗೆ ಹರಿಸುತ್ತೇವೆ ಎಂದು ಹೇಳಿದ ಬೋಸರಾಜು ಜನರು ಕೂಗಾಡುತ್ತಿದ್ದಂತೆ ಸ್ಥಳದಿಂದ ಕಾಲ್ಕಿತ್ತರು. ಐಗೂರಿಗೆ ಹೋಗಬೇಕೆಂದು ಕಾರು ಹತ್ತಿ ಹೊರಟರು. ಇದರಿಂದಾಗಿ ಜನರು ಇನ್ನಷ್ಟು ಆಕ್ರೋಶ ಹೊರಹಾಕಿದರು.

  • SDMFನಿಂದ 100 ಕೋಟಿ ಬಿಡುಗಡೆ – ಮೊದಲ ಹಂತದಲ್ಲಿ 93 ಕೆರೆಗಳ ಸಂಗ್ರಹಣಾ ಸಾಮರ್ಥ್ಯ ವೃದ್ಧಿ: ಸಚಿವ ಎನ್‌.ಎಸ್‌.ಬೋಸರಾಜು

    SDMFನಿಂದ 100 ಕೋಟಿ ಬಿಡುಗಡೆ – ಮೊದಲ ಹಂತದಲ್ಲಿ 93 ಕೆರೆಗಳ ಸಂಗ್ರಹಣಾ ಸಾಮರ್ಥ್ಯ ವೃದ್ಧಿ: ಸಚಿವ ಎನ್‌.ಎಸ್‌.ಬೋಸರಾಜು

    ಬೆಂಗಳೂರು: ರಾಜ್ಯದ ಕೆರೆಗಳಲ್ಲಿ ಮುಂಗಾರು ಮಳೆಯ ನೀರಿನ ಸಂಗ್ರಹಣಾ ಸಾಮರ್ಥ್ಯವನ್ನ ವೃದ್ಧಿಸುವ ನಿಟ್ಟಿನಲ್ಲಿ SDMFನಿಂದ 100 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಸಣ್ಣ ನೀರಾವರಿ ಇಲಾಖೆಯ ಅಡಿಯಲ್ಲಿ ಮೊದಲ ಹಂತದಲ್ಲಿ 93 ಕೆರೆಗಳನ್ನ ಅಭಿವೃದ್ದಿಪಡಿಸಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್‌.ಎಸ್‌.ಬೋಸರಾಜು (N.S.Boseraju) ತಿಳಿಸಿದರು.

    ಇಂದು ವಿಕಾಸಸೌಧದಲ್ಲಿ ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಅವರು ಮಾತನಾಡಿದರು. 2023 ನೇ ಸಾಲಿನಲ್ಲಿ ತೀವ್ರ ಮಳೆಯ ಕೊರತೆಯಿಂದ ರಾಜ್ಯದಲ್ಲಿ ಉಂಟಾದ ಜಲಕ್ಷಾಮದಿಂದ ಸುಮಾರು 223 ತಾಲ್ಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿತ್ತು. ಈ ಬಾರಿ ಮುಂಗಾರು ಒಳ್ಳೆಯ ರೀತಿಯಲ್ಲಿ ಮಳೆಯನ್ನು ತರುವ ಮುನ್ಸೂಚನೆಯಿದೆ. ಈ ಹಿನ್ನಲೆಯಲ್ಲಿ ರಾಜ್ಯದಲ್ಲಿನ ಕೆರೆಗಳಲ್ಲಿ ನೀರು ಸಂಗ್ರಹಣಾ ಸಾಮರ್ಥ್ಯ ಹೆಚ್ಚಿಸಲು ಹಾಗೂ ನೀರು ಪೋಲಾಗದಂತೆ ತಡೆಯಲು ಸಣ್ಣ ನೀರಾವರಿ ಇಲಾಖೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿತ್ತು. ಇದನ್ನೂ ಓದಿ: ಅಧಿಕಾರ ಸ್ವೀಕರಿಸಿದ ರಾಜ್ಯದ ನಾಲ್ವರು ಕೇಂದ್ರ ಸಚಿವರು

    ಪರಿಶೀಲನೆ ನಡೆಸಿ ಸರ್ಕಾರ SDMFನಿಂದ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ. ಈ ಹಣದಲ್ಲಿ ಕೆರೆಗಳ ಅಭಿವೃದ್ಧಿಪಡಿಸಿ, ಕೆರೆಗಳಲ್ಲಿ ನೀರು ಶೇಖರಣೆ ಮಟ್ಟವನ್ನು ಹೆಚ್ಚಿಸಿ ರೈತರಿಗೆ ಕೃಷಿ, ತೋಟಗಾರಿಕೆ, ಪಶುಸಂಗೋಪನೆ ಚಟುವಟಿಕೆಗಳಿಗೆ ಅನುಕೂಲವಾಗುವಂತೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಕ್ರಿಯಾಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು.

    ಮೊದಲ ಹಂತದಲ್ಲಿ ಸಣ್ಣ ನೀರಾವರಿ ಇಲಾಖೆಯ ವತಿಯಿಂದ 93 ಕೆರೆಗಳ ಅಭಿವೃದ್ಧಿಯನ್ನು ಕೈಗೊಳ್ಳಲಾಗುವುದು. ಈಗಾಗಲೇ 93 ಕೆರೆಗಳನ್ನು ಇಲಾಖೆ ಗುರುತಿಸಿದ್ದು, ಕ್ರಿಯಾಯೋಜನೆ ರೂಪಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಂಡು ಅನುಷ್ಠಾನಗೊಳಿಸಿದಲ್ಲಿ ಮುಂಬರುವ ದಿನಗಳಲ್ಲಿ ರೈತರ ಕೃಷಿ ಚಟುವಟಿಕೆಗಳಿಗೆ ನೀರಿನ ಅಭಾವವನ್ನು ತಡೆಯಲು ಸಹಾಯಕವಾಗಲಿದೆ. ಹಾಗೆಯೇ ಮಳೆ ನೀರು ಕೆರೆಗಳಿಗೆ ಸರಾಗವಾಗಿ ಹರಿದು ನೀರು ಶೇಖರಣೆ ಗರಿಷ್ಠ ಮಟ್ಟದಲ್ಲಿ ಆಗುವಂತೆ ಮಾಡಲು ಕಾರ್ಯಯೋಜನೆಯನ್ನು ಸಿದ್ಧಪಡಿಸಿ ಮುಂದಿನ ದಿನಗಳಲ್ಲಿ ಕಾರ್ಯರೂಪಕ್ಕೆ ತರಲು ಅಧಿಕಾರಿಗಳಿಗೆ ಸಚಿವರು ಸೂಚನೆ ನೀಡಿದರು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ – ನಟ ದರ್ಶನ್ ಸೇರಿ 13 ಆರೋಪಿಗಳು 6 ದಿನ ಪೊಲೀಸ್ ಕಸ್ಟಡಿಗೆ

  • ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲುಗಲ್ಲು: ಸಚಿವ ಭೋಸರಾಜು ಸಂತಸ

    ಚಂದ್ರನ ಅನ್ವೇಷಣೆಯಲ್ಲಿ ಇಸ್ರೋ ಮತ್ತೊಂದು ಮೈಲುಗಲ್ಲು: ಸಚಿವ ಭೋಸರಾಜು ಸಂತಸ

    ಬೆಂಗಳೂರು: ಚಂದ್ರಯಾನ- 3ರ (Chandrayaan-3) ಇಂದಿನ ಯಶಸ್ವಿ ಉಡಾವಣೆಯ ಮೂಲಕ ಚಂದ್ರನ ಅನ್ವೇಷಣೆಯಲ್ಲಿ ವಿಶ್ವದಲ್ಲೇ ಮತ್ತೊಂದು ವಿಶಿಷ್ಟ ಮೈಲುಗಲ್ಲನ್ನು ಇಸ್ರೋ ನೆಟ್ಟಿದೆ ಎಂದು ಸಣ್ಣ ನೀರಾವರಿ ಮತ್ತು ವಿಜ್ಞಾನ ಹಾಗೂ ತಂತ್ರಜ್ಞಾನ ಸಚಿವ ಎನ್.ಎಸ್ ಭೋಸರಾಜು ( N. S. Boseraju) ಹರ್ಷ ವ್ಯಕ್ತಪಡಿಸಿದರು. ಇದನ್ನೂ ಓದಿ: ಅಮೆರಿಕದ 1 ನಿರ್ಧಾರ – ಬಾಹ್ಯಾಕಾಶ ಕ್ಷೇತ್ರದಲ್ಲಿ ಸ್ವಾವಲಂಬಿಯಾದ ಭಾರತ

    ಇಂದು ಚಂದ್ರಯಾನ- 3 ರ ಉಡಾವಣೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಿರಂತರ ಹೊಸ ಆವಿಷ್ಕಾರಗಳು ಮತ್ತು ಸಂಶೋಧನೆಯ ಮೂಲಕ ಬಾಹ್ಯಾಕಾಶ ಪರಿಶೋಧನೆಯಲ್ಲಿ ಭಾರತ ದೇಶ ವಿಶ್ವದಲ್ಲೇ ಮುಂಚೂಣಿ ಸ್ಥಾನ ಹೊಂದುವಲ್ಲಿ ಇಸ್ರೋ ಕೊಡುಗೆ ಅಪಾರ. ಚಂದ್ರಯಾನ- 1 ಮತ್ತು 2 ರ ಯಶಸ್ವಿ ಕಾರ್ಯಾಚರಣೆಗಳಿಂದ ಇಸ್ರೋ ಸಂಸ್ಥೆ ಬಾಹ್ಯಾಕಾಶ ಕ್ಷೇತ್ರದಲ್ಲಿ ದೊಡ್ಡ ಕನಸನ್ನು ಕಾಣಲು ಅನುವು ಮಾಡಿಕೊಟ್ಟಿದೆ. ಇಂದಿನ ಈ ಯಶಸ್ವಿ ಕಾರ್ಯಾಚರಣೆ ವಿಶ್ವದ ಚಂದ್ರನ ಅನ್ವೇಷಣೆಯ ಕ್ಷೇತ್ರದಲ್ಲಿ ವಿಶೇಷ ಮೈಲುಗಲ್ಲನ್ನು ಸಾಧಿಸಿದೆ. ಮುಂದಿನ ದಿನಗಳಲ್ಲಿ ಚಂದ್ರನ ಮಣ್ಣಿನ ಮಾದರಿಗಳನ್ನು ಸಮರ್ಥವಾಗಿ ಮರಳಿ ತರುವ ಮೂಲಕ, ಚಂದ್ರನ ಮೇಲ್ಮೈನ ನಮ್ಮ ತಿಳುವಳಿಕೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ವೈಜ್ಞಾನಿಕ ಪ್ರಯೋಗಗಳನ್ನು ನಡೆಸಲು ಅನುವು ಮಾಡಿ ಕೊಡಲಿದೆ ಎಂದರು.

    ಚಂದ್ರಯಾನ- 3 ರ ಯಶಸ್ಸನ್ನು ಖಾತರಿಪಡಿಸುವ ನಿಟ್ಟಿನಲ್ಲಿ ಇಸ್ರೋ ವಿಜ್ಞಾನಿಗಳು ಕೈಗೊಂಡ ತಾಂತ್ರಿಕ ಪ್ರಗತಿ ಮತ್ತು ಅಂತರರಾಷ್ಟ್ರೀಯ ಸಹಯೋಗಗಳು ಶ್ಲಾಘನೀಯ. ಇಂತಹ ಬದ್ಧತೆ ಮತ್ತು ನಿರಂತರ ಸಾಧನೆ ಭಾರತ ದೇಶವನ್ನು ಬಾಹ್ಯಾಕಾಶ ಕ್ಷೇತ್ರದಲ್ಲಿ ತನ್ನದೇ ಆದ ವಿಶೇಷ ಸ್ಥಾನ ಪಡೆದುಕೊಳ್ಳಲು ಅನುವು ಮಾಡಿದೆ ಎಂದು ಹರ್ಷ ವ್ಯಕ್ತಪಡಿಸಿದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ವಿಧಾನ ಪರಿಷತ್ ಚುನಾವಣೆ – ಜಗದೀಶ್‌ ಶೆಟ್ಟರ್‌ ಸೇರಿ ಕಾಂಗ್ರೆಸ್‌ನ ಮೂವರೂ ಅವಿರೋಧ ಆಯ್ಕೆ

    ವಿಧಾನ ಪರಿಷತ್ ಚುನಾವಣೆ – ಜಗದೀಶ್‌ ಶೆಟ್ಟರ್‌ ಸೇರಿ ಕಾಂಗ್ರೆಸ್‌ನ ಮೂವರೂ ಅವಿರೋಧ ಆಯ್ಕೆ

    ಬೆಂಗಳೂರು: ವಿಧಾನ ಪರಿಷತ್‌ (Vidhan Parishad) ಉಪ ಚುನಾವಣೆಯಲ್ಲಿ ಜಗದೀಶ್‌ ಶೆಟ್ಟರ್‌ (Jagadish Shettar) ಸೇರಿ ಕಾಂಗ್ರೆಸ್‌ನ (Congress) ಮೂರು ಅಭ್ಯರ್ಥಿಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

    ವಿಧಾನ ಪರಿಷತ್‌ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಿದ್ದ ಜಗದೀಶ್ ಶೆಟ್ಟರ್, ತಿಪ್ಪಣ್ಣಪ್ಪ ಕಮಕನೂರ್ (Tippannappa), ಎನ್‌.ಎಸ್. ಬೋಸರಾಜು (N.S.Boseraju) ಅವಿರೋಧವಾಗಿ ಅಯ್ಕೆಯಾಗಿದ್ದಾರೆ. ನಾಮಪತ್ರ ವಾಪಸ್ ಪಡೆಯಲು ಇಂದು ಕೊನೆ ದಿನವಾಗಿತ್ತು. ಕಣದಲ್ಲಿ ಮೂರೇ ಅಭ್ಯರ್ಥಿಗಳು ಇದ್ದ ಕಾರಣ ಮೂವರು ಸಹ ಆಯ್ಕೆಯಾಗಿದ್ದಾರೆ. ಇದನ್ನೂ ಓದಿ: ವಿಧಾನಸಭೆಯಿಂದ ಪರಿಷತ್ ಮೂರು ಸ್ಥಾನಗಳಿಗೆ ಉಪಚುನಾಚಣೆ: ಕಾಂಗ್ರೆಸ್ ಅಭ್ಯರ್ಥಿಗಳ ನಾಮಪತ್ರ ಅಂಗೀಕಾರ

    ಲಕ್ಷ್ಮಣ ಸವದಿ, ಆರ್.ಶಂಕರ್ ಹಾಗೂ ಬಾಬುರಾವ್ ಚಿಂಚನಸೂರ್ ಅವರ ರಾಜೀನಾಮೆಯಿಂದ ತೆರವಾದ ಈ ಮೂರು ಸ್ಥಾನಗಳಿಗೆ ಚುನಾವಣಾ ಆಯೋಗ ಉಪ ಚುನಾವಣೆ ಘೋಷಿಸಿತ್ತು.

    ವಿಧಾನಸಭೆಯಿಂದ ವಿಧಾನ ಪರಿಷತ್‌ಗೆ ನಡೆಯಬೇಕಿದ್ದ ಉಪ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜೂನ್ 20 ಕೊನೆಯ ದಿನವಾಗಿತ್ತು ಮತ್ತು ನಾಮಪತ್ರ ವಾಪಸ್ ಪಡೆಯಲು ಇಂದು(ಜೂನ್ 23) ಕೊನೆಯ ದಿನವಾಗಿತ್ತು. ಕಣದಲ್ಲಿ ಮೂವರೇ ಇದ್ದ ಕಾರಣದಿಂದ ಈ ಮೂವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಿಸಲಾಗಿದೆ. ಇದನ್ನೂ ಓದಿ: ನನಗೆ ರಾಜ್ಯಾಧ್ಯಕ್ಷ ಸ್ಥಾನ ಕೊಡಿ: ಹೈಕಮಾಂಡ್‌ಗೆ ಸೋಮಣ್ಣ ಮನವಿ