Tag: Nada Bomb

  • ಮಂಡ್ಯದಲ್ಲಿ ನಾಡ ಬಾಂಬ್ ಸ್ಫೋಟ – ವಿದ್ಯಾರ್ಥಿಯ ಅಂಗೈ ಛಿದ್ರ

    ಮಂಡ್ಯದಲ್ಲಿ ನಾಡ ಬಾಂಬ್ ಸ್ಫೋಟ – ವಿದ್ಯಾರ್ಥಿಯ ಅಂಗೈ ಛಿದ್ರ

    ಮಂಡ್ಯ: ನಾಡ ಬಾಂಬ್ ಸ್ಫೋಟದಿಂದಾಗಿ ಇಬ್ಬರು ವಿದ್ಯಾರ್ಥಿಗಳು ಗಾಯಗೊಂಡಿದ್ದು, ಓರ್ವನ ಅಂಗೈ ಛಿದ್ರವಾಗಿರುವ ಘಟನೆ ಜಿಲ್ಲೆಯ ನಾಗಮಂಗಲ (Nagamangala) ತಾಲೂಕಿನ ಕಂಬದಹಳ್ಳಿಯ ಆಂಜನೇಯಬೆಟ್ಟದಲ್ಲಿ ಘಟನೆ ನಡೆದಿದೆ.ಇದನ್ನೂ ಓದಿ: Champions Trophy; ಟೀಂ ಇಂಡಿಯಾ ಗೆಲುವಿಗಾಗಿ ಮಹಾ ಕುಂಭದಲ್ಲಿ ವಿಶೇಷ ಪೂಜೆ

    ವಿದ್ಯಾರ್ಥಿಗಳನ್ನು ಹರಿಯಂತ್ ಪಾಟೀಲ್ ಹಾಗೂ ಪಾರ್ಥ ಎಂದು ತಿಳಿಯಲಾಗಿದ್ದು, ಜೈನ ಬಸದಿ ಶಾಲೆಯಲ್ಲಿ ವ್ಯಾಸಾಂಗ ಮಾಡುತ್ತಿದ್ದರು. ಆಂಜನೇಯ ಬೆಟ್ಟದ ದೇವಸ್ಥಾನದ ಸುತ್ತ ಸ್ವಚ್ಛಕಾರ್ಯಕ್ಕಾಗಿ ವಿದ್ಯಾರ್ಥಿಗಳು ತೆರಳಿದ್ದರು. ಈ ವೇಳೆ ವಿದ್ಯಾರ್ಥಿಗಳು ಕಸದ ರಾಶಿಗೆ ಕೈ ಹಾಕಿದ್ದು, ಬಾಂಬ್ ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಓರ್ವನ ಅಂಗೈ ಛಿದ್ರವಾಗಿದ್ದು, ಇನ್ನೋರ್ವನ ಮುಖದ ಭಾಗಕ್ಕೆ ಗಾಯವಾಗಿದೆ.

    ಕಾಡು ಹಂದಿ ಬೇಟೆಗಾಗಿ ನಾಡ ಬಾಂಬ್ ಇಟ್ಟಿರುವ ಶಂಕೆ ವ್ಯಕ್ತವಾಗಿದ್ದು, ಕಿಡಿಗೇಡಿಗಳ ಕೆಲಸದಿಂದ ಅಮಾಯಕ ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಸದ್ಯ ಗಾಯಗೊಂಡ ವಿದ್ಯಾರ್ಥಿಗಳಿನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬಿಂಡಿಗನವಿಲೆ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.ಇದನ್ನೂ ಓದಿ: ಪ್ರೀತಿ ನಿರಾಕರಿಸಿದ್ದಕ್ಕಾಗಿ ಯುವತಿಯ ಕಾರು, ಬೈಕ್‌ಗಳಿಗೆ ಬೆಂಕಿ ಹಚ್ಚಿದ ಪಾಗಲ್ ಪ್ರೇಮಿ

  • ಗ್ರಾಮಸ್ಥರ ನಿದ್ದೆಗೆಡಿಸಿದ ನಾಡಾ ಬಾಂಬ್‍ಗಳು- ಎರಡು ನಾಯಿಗಳು ಬಲಿ

    ಗ್ರಾಮಸ್ಥರ ನಿದ್ದೆಗೆಡಿಸಿದ ನಾಡಾ ಬಾಂಬ್‍ಗಳು- ಎರಡು ನಾಯಿಗಳು ಬಲಿ

    ದಾವಣೆಗೆರೆ: ಕಾಡು ಪ್ರಾಣಿಗಳಿಗಾಗಿ ಇಡುವ ನಾಡ ಬಾಂಬ್‍ನಿಂದಾಗಿ ಗ್ರಾಮದ ರೈತರು ಜಮೀನುಗಳಿಗೆ ಹೋಗಲು ಭಯಪಡುವ ವಾತಾವರಣ ನಿರ್ಮಾಣವಾಗಿದೆ.

    ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ ತಾಲೂಕಿನ ಕಡತಿ ಗ್ರಾಮದ ರೈತರು ಪ್ರತಿ ದಿನ ಆತಂಕದಲ್ಲಿ ಜೀವನ ಸಾಗಿಸುತ್ತಿದ್ದು, ತುಂಗಭದ್ರ ನದಿಗೆ ಹೊಂದಿಕೊಂಡಿರುವ ಈ ಗ್ರಾಮದಲ್ಲಿ ಕಬ್ಬು, ಭತ್ತ, ಜೋಳ ಸೇರಿದಂತೆ ವಿವಿಧ ಬೆಳೆಗಳನ್ನ ಬೆಳೆಯುತ್ತಾರೆ. ಕಾಡು ಪ್ರಾಣಿಗಳಿಂದ ಬೆಳೆಗಳನ್ನು ಉಳಿಸಿಕೊಳ್ಳಲು ಹಾಗೂ ಕಾಡು ಪ್ರಾಣಿಗಳನ್ನು ಬೇಟೆಯಾಡಲು ನಾಡ ಬಾಂಬ್ ಗಳ ಮೊರೆ ಹೋಗಿದ್ದಾರೆ.

    ಹೀಗೆ ಕಾಡು ಪ್ರಾಣಿಗಳ ಕಾಟವನ್ನು ತಪ್ಪಿಸಲು ಇಟ್ಟಿದ್ದ ನಾಡ ಬಾಂಬ್‍ಗಳು ಗ್ರಾಮಸ್ಥರಿಗೆ ಮುಳುವಾಗಿವೆ. ನಾಡ ಬಾಂಬ್ ತಿಂದು ಎರಡು ನಾಯಿಗಳು ಸಾವನ್ನಪ್ಪಿದ್ದು, ಗ್ರಾಮಸ್ಥರಲ್ಲಿ ಆತಂಕ ಮನೆ ಮಾಡಿದೆ. ರೈತರು ರಾತ್ರಿ ವೇಳೆ ಬೆಳೆಗೆ ನೀರು ಹಾಯಿಸಲು ಹೋಗುತ್ತಿದ್ದರು. ಇದೀಗ ನಾಡ ಬಾಂಬ್ ನಿಂದ ಹೊಲಕ್ಕೆ ಹೋಗಲು ಭಯಪಡುವಂತಾಗಿದೆ.

    ಕೆಲ ರೈತರು ಬೆಳೆಗಳನ್ನು ರಕ್ಷಿಸಿಕೊಳ್ಳಲು ನಾಡ ಬಾಂಬ್ ಬಳಸುತ್ತಾರೆ, ಇನ್ನೂ ಕೆಲವರು ಕಾಡು ಪ್ರಾಣಿಗಳನ್ನು ಭೇಟಿಯಾಡಲು ನಾಡ ಬಾಂಬ್ ಬಳಸುತ್ತಾರೆ. ಬಾಂಬ್‍ಗಳನ್ನು ಮಾಂಸದುಂಡೆಯೊಳಗೆ ಇರುವುದರಿಂದ ಕಾಡು ಪ್ರಾಣಿಗಳ ಬದಲಾಗಿ ಸಾಕು ನಾಯಿಗಳು ಸಾಯುತ್ತಿದ್ದು ಗ್ರಾಮಸ್ಥರನ್ನು ಚಿಂತೆಗೀಡು ಮಾಡಿದೆ. ನಾಯಿಗಳು ಸಾವನ್ನಪ್ಪಿದರೆ ಸರಿ ಆದರೆ ಮಕ್ಕಳು ಇದನ್ನು ತುಳಿದರೆ ಏನು ಕಥೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.